ಶಿಂಜೊ ಅಬೆಗೆ ಶೂಟ್‌ ಮಾಡಿದವ ಮಾಜಿ ಯೋಧ; ಹಿಂದಿನಿಂದ ಇಟ್ಟ ಗುರಿ ತಪ್ಪಲಿಲ್ಲ ! - Vistara News

ವಿದೇಶ

ಶಿಂಜೊ ಅಬೆಗೆ ಶೂಟ್‌ ಮಾಡಿದವ ಮಾಜಿ ಯೋಧ; ಹಿಂದಿನಿಂದ ಇಟ್ಟ ಗುರಿ ತಪ್ಪಲಿಲ್ಲ !

ಶಿಂಜೊ ಅಬೆ ಜಪಾನ್‌ ಪ್ರಧಾನಿಯಾಗಿ ಸುದೀರ್ಘ ಅವಧಿಗೆ ಆಡಳಿತ ನಡೆಸಿದ್ದಾರೆ. 2020ರಲ್ಲಿ ಅನಾರೋಗ್ಯದಿಂದಾಗಿ ಹುದ್ದೆಯಿಂದ ಕೆಳಗೆ ಇಳಿದಿದ್ದರು.

VISTARANEWS.COM


on

Japan Shooter
ಮಾಜಿ ಪ್ರಧಾನಿಗೆ ಶೂಟ್‌ ಮಾಡಿದವನನ್ನು ಬಂಧಿಸಿದ ಕ್ಷಣ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಜಪಾನ್‌ ಮಾಜಿ ಪ್ರಧಾನಿ ಶಿಂಜೊ ಅಬೆ ಇಂದು ಬೆಳಗ್ಗೆ ಚುನಾವಣಾ ಪ್ರಚಾರ ಭಾಷಣ ಮಾಡುತ್ತಿದ್ದಾಗ ಗುಂಡೇಟು ಬಿದ್ದು ಅಸ್ವಸ್ಥರಾಗಿದ್ದಾರೆ. ಅಲ್ಲಿನ ಕಾಲಮಾನದ ಪ್ರಕಾರ ಬೆಳಗ್ಗೆ 11.30ರ ಹೊತ್ತಿಗೆ ಅವರು ಜಪಾನ್‌ನ ಪಶ್ಚಿಮದ ನಗರ ನಾರಾದಲ್ಲಿ ಚುನಾವಣಾ ಭಾಷಣ ಮಾಡುತ್ತಿದ್ದಾಗ ಅವರ ಮೇಲೆ ಫೈರಿಂಗ್‌ ಆಗಿದೆ. ಶಂಕಿತ ಆರೋಪಿ ತೆಟ್ಸಾಯ ಯಾಮಗಾಮಿ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.

ಜುಲೈ 10ರಂದು ನಡೆಯಲಿರುವ ಜಪಾನ್‌ ಮೇಲ್ಮನೆ ಚುನಾವಣೆ ನಿಮಿತ್ತ ನಾರಾದಲ್ಲಿ ಅಬೆ ಪ್ರಚಾರ ನಡೆಸುತ್ತಿದ್ದರು. ಆದರೆ ಅವರ ಮೇಲೆ ಏಕಾಏಕಿ ಗುಂಡಿನ ದಾಳಿ ಆಗಿದೆ. ಈ ಗುಂಡಿನ ದಾಳಿ ಆಗಿದ್ದೇಕೆ?, ಸದ್ಯ ಅಬೆ ಪರಿಸ್ಥಿತಿ ಹೇಗಿದೆ ಎಂಬುದರ ಬಗ್ಗೆ ಮಾಹಿತಿ ಇಲ್ಲ. ಆದರೆ ಈಗ ಬಂಧಿತನಾಗಿರುವ ಶಂಕಿತ ಶೂಟರ್‌ ಮತ್ತು ಆತ ಫೈರಿಂಗ್‌ ನಡೆಸಿದ ಸ್ವರೂಪದ ಬಗ್ಗೆ ಇಲ್ಲೊಂದಿಷ್ಟು ಆಸಕ್ತಿದಾಯಕ ವಿವರ ಸಿಕ್ಕಿದೆ.

೧. ಶಂಕಿತ ಶೂಟರ್‌ ತೆಟ್ಸಾಯ ಯಾಮಗಾಮಿ ಮಾಜಿ ಯೋಧ ಎಂದು ಹೇಳಲಾಗಿದೆ. ಈತ ಜಪಾನ್ ಕಡಲ ಸ್ವಯಂ ರಕ್ಷಣಾ ಪಡೆಯಲ್ಲಿ ಕೆಲಸ ಮಾಡುತ್ತಿದ್ದ ಮತ್ತು 2005ರಲ್ಲಿ ಈ ಸ್ವಯಂ ರಕ್ಷಣಾ ಪಡೆಯನ್ನು ತೊರೆದಿದ್ದಾನೆ.
೨. ಶೂಟರ್‌ ಶಿಂಜೊ ಅಬೆಯವರಿಗೆ ಹಿಂದಿನಿಂದ ಗುಂಡು ಹೊಡೆದಿದ್ದಾನೆ. ಅದರಲ್ಲಿ ಒಂದು ಗುಂಡು ಅಬೆಯವರ ಎಡ ಎದೆಯಲ್ಲಿ ಸಿಲುಕಿದ್ದರೆ, ಇನ್ನೊಂದು ಗುಂಡು ಕುತ್ತಿಗೆಗೆ ಬಿದ್ದಿದೆ.
೩. ಮಾಜಿ ಪ್ರಧಾನಿಗೆ ಗುಂಡು ಹಾರಿಸಲು ತೆಟ್ಸಾಯ್‌ ಯಾಮಗಾಮಿ ಬಳಸಿದ್ದು ಒಂದು ಹೋಮ್‌ ಮೇಡ್‌ ಗನ್‌. ಅದನ್ನೂ ಕೂಡ ಪೊಲೀಸರು ವಶಪಡಿಸಿಕೊಂಡಿದ್ದಾರೆ.
೪. ದೇಹಕ್ಕೆ ಗುಂಡು ತಗುಲುತ್ತಿದ್ದಂತೆ ಶಿಂಜೊ ಅಬೆಗೆ ರಕ್ತಸ್ರಾವ ಆಗಿ, ಅವರು ಕೆಳಕ್ಕೆ ಬಿದ್ದಿದ್ದಾರೆ. ಪ್ರಾಥಮಿಕವಾಗಿ ಅವರಿಗೆ ಸಿಪಿಆರ್‌ ಚಿಕಿತ್ಸೆ ನೀಡಿ, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಶಿಂಜೊ ಅಬೆಗೆ ೬೭ವರ್ಷ. ಇವರು ಜಪಾನ್‌ ಲಿಬರಲ್‌ ಡೆಮಾಕ್ರಟಿಕ್‌ ಪಾರ್ಟಿಯ ರಾಜಕಾರಣಿ. ಜಪಾನ್‌ ಪ್ರಧಾನಮಂತ್ರಿ ಹುದ್ದೆಯಲ್ಲಿ ಅತಿ ಹೆಚ್ಚು ಅವಧಿಯವರೆಗೆ ಆಡಳಿತ ನಡೆಸಿದವರು. 2006ರಲ್ಲಿ ಒಂದು ಬಾರಿ ಪ್ರಧಾನಿಯಾಗಿದ್ದರು. ಅದಾದ ಮೇಲೆ 2012ರಿಂದ 2020ರವರೆಗೆ ಪ್ರಧಾನಿಯಾಗಿದ್ದರು. 2020ರಲ್ಲಿ ಅಬೆ ಕರುಳು ಸಂಬಂಧಿ ಕಾಯಿಲೆಯಿಂದ ತೀವ್ರ ಸಮಸ್ಯೆ ಎದುರಿಸಿ, ಅಧಿಕಾರ ಬಿಟ್ಟಿದ್ದರು.

ಇದನ್ನೂ ಓದಿ: ಶಿಂಜೊ ಅಬೆ ಭಾಷಣ ಮಾಡುತ್ತಿದ್ದಾಗಲೇ ಬಿತ್ತು ಗುಂಡೇಟು; ಘಟನಾ ಸ್ಥಳದ ವಿಡಿಯೋ ವೈರಲ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ತಂತ್ರಜ್ಞಾನ

Elon Musk: ಕೆಲವೇ ವರ್ಷಗಳಲ್ಲಿ ಮೊಬೈಲ್‌ ಫೋನೇ ಇರುವುದಿಲ್ಲ; ಬರಲಿದೆ ಹೊಸ ತಂತ್ರಜ್ಞಾನ!

ಮೆದುಳಿನ ಚಿಪ್ ತಂತ್ರಜ್ಞಾನದಲ್ಲಿ ಕಾರ್ಯನಿರ್ವಹಿಸುತ್ತಿರುವ ನ್ಯೂರಾಲಿಂಕ್‌ ಈಗಾಗಲೇ ಮೊದಲ ಮಾನವ ಪ್ರಯೋಗ ನಡೆಸುತ್ತಿದ್ದು, ಎರಡನೇ ಪ್ರಯೋಗಕ್ಕೆ ಮುಂದಾಗಿದೆ. ಈ ನಡುವೆ ನ್ಯೂರಾಲಿಂಕ್‌ನ ಸಿಇಒ ಎಲಾನ್ ಮಸ್ಕ್ (Elon Musk) ಎಕ್ಸ್‌ನಲ್ಲಿ ಮಾಡಿರುವ ಟ್ವಿಟ್ ಸಾಕಷ್ಟು ಮಂದಿಯ ಕುತೂಹಲಕ್ಕೆ ಕಾರಣವಾಗಿದೆ.

VISTARANEWS.COM


on

By

Elon Musk
Koo

ನ್ಯೂರಾಲಿಂಕ್‌ನ (Neuralink) ಮೆದುಳಿನ ಚಿಪ್‌ಗಳು (brain chip) ಭವಿಷ್ಯದಲ್ಲಿ ಫೋನ್‌ಗಳನ್ನು ಬದಲಾಯಿಸಲಿದೆ. ಭವಿಷ್ಯದಲ್ಲಿ ಯಾರೂ ಮೊಬೈಲ್ ಬಳಸೋದಿಲ್ಲ ಎಂದು ನ್ಯೂರಾಲಿಂಕ್‌ನ ಸಿಇಒ ಎಲಾನ್ ಮಸ್ಕ್ (Elon Musk) ಭವಿಷ್ಯ ನುಡಿದಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ (x) ಪೋಸ್ಟ್ ಮಾಡಿರುವ ಅವರು, ಭವಿಷ್ಯದಲ್ಲಿ ಯಾವುದೇ ಫೋನ್‌ಗಳು ಇರುವುದಿಲ್ಲ, ಕೇವಲ ನ್ಯೂರಾಲಿಂಕ್‌ಗಳು ಎಂದು ಹೇಳಿದ್ದಾರೆ.

ಮೆದುಳಿನ ಚಿಪ್ ತಂತ್ರಜ್ಞಾನದಲ್ಲಿ ಕಾರ್ಯನಿರ್ವಹಿಸುತ್ತಿರುವ ನ್ಯೂರಾಲಿಂಕ್‌ ಈಗಾಗಲೇ ಮೊದಲ ಮಾನವ ಪ್ರಯೋಗ ನಡೆಸುತ್ತಿದೆ. 29 ವರ್ಷದ ನೋಲ್ಯಾಂಡ್ ಅರ್ಬಾಗ್ ಎಂಬವರ ಮೇಲೆ ಈ ಪ್ರಯೋಗ ಮಾಡಲಾಗಿದೆ.
ತಮ್ಮ ಹಣೆಯ ಮೇಲೆ ನ್ಯೂರಲ್ ನೆಟ್‌ವರ್ಕ್ ವಿನ್ಯಾಸದೊಂದಿಗೆ ಫೋನ್ ಅನ್ನು ಹಿಡಿದಿರುವ ಮಸ್ಕ್‌ನ ಎಐ ರಚಿತ ಚಿತ್ರವನ್ನು ಇದರೊಂದಿಗೆ ಪೋಸ್ಟ್ ಮಾಡಿದ್ದಾರೆ.


ಇದನ್ನು ನೋಡಿರುವ ಕೆಲವರು ತಮ್ಮ ಸಾಧನಗಳನ್ನು ಆಲೋಚನೆಯಿಂದ ನಿಯಂತ್ರಿಸಲು ನ್ಯೂರಾಲಿಂಕ್ ಇಂಟರ್‌ಫೇಸ್ ಅನ್ನು ಸ್ಥಾಪಿಸುತ್ತಾರೆಯೇ ಎಂದು ಪ್ರಶ್ನಿಸಿದ್ದಾರೆ. ಇನ್ನು ಕೆಲವರು ಹೊಸ ಎಕ್ಸ್ ಫೋನ್ ನಲ್ಲಿ ನಿಯಂತ್ರಿಸಲು ನಿಮ್ಮ ಮೆದುಳಿನಲ್ಲಿ ನ್ಯೂರಾಲಿಂಕ್ ಇಂಟರ್ ಫೇಸ್ ಅನ್ನು ಸ್ಥಾಪಿಸುತ್ತೀರಾ ಎಂದು ಪ್ರಶ್ನಿಸಿದ್ದಾರೆ.

ನ್ಯೂರಾಲಿಂಕ್‌ನ ಮೊದಲ ಬಾರಿಗೆ ಪ್ರಯೋಗಿಸಿರುವ ಮಾನವ ಅರ್ಬಾಗ್ ಎಂಟು ವರ್ಷಗಳ ಹಿಂದೆ ಅಪಘಾತದ ಅನಂತರ ಭುಜದಿಂದ ಕೆಳಕ್ಕೆ ಪಾರ್ಶ್ವವಾಯುವಿಗೆ ಒಳಗಾದರು. ಅವರು ಜನವರಿ 28ರಂದು ಮೆದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಈಗ ಚೇತರಿಸಿಕೊಳ್ಳುತ್ತಿದ್ದಾರೆ. ಅದರ ಬಳಿಕ ನ್ಯೂರಾಲಿಂಕ್ ಬ್ಲಾಗ್‌ಪೋಸ್ಟ್‌ನಲ್ಲಿ ಈ ಕುರಿತು ವಿವರವಾದ ಮಾಹಿತಿಯನ್ನು ಬಹಿರಂಗಪಡಿಸಿತು.

ಮಾರ್ಚ್‌ನಲ್ಲಿ ನ್ಯೂರಾಲಿಂಕ್ ಅರ್ಬಾಗ್‌ನ ಪ್ರಗತಿಯನ್ನು ಪ್ರದರ್ಶಿಸುವ ವಿಡಿಯೋವನ್ನು ಹಂಚಿಕೊಂಡಿದೆ. ಈ ವೀಡಿಯೊದಲ್ಲಿ ನ್ಯೂರಾಲಿಂಕ್‌ನ ಬಿಸಿಐ ಚಿಪ್ ತನ್ನ ಅಂಗವೈಕಲ್ಯವನ್ನು ತಾನು ಇಷ್ಟಪಡುವ ಹೆಚ್ಚಿನ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಹೇಗೆ ಸಹಾಯ ಮಾಡಿದೆ ಎಂದು ಹೇಳಿದ್ದು, ಈಗ ತಾವು ಚೆಸ್ ಆಡುವುದರ ಬಗ್ಗೆ ಅವರು ತಮ್ಮ ಸಂತೋಷ ಹೊರಹಾಕಿದ್ದರು.

ಪ್ರತಿದಿನ ನಾನು ಹೊಸದನ್ನು ಕಲಿಯುತ್ತಿದ್ದೇನೆ ಎಂಬಂತೆ ತೋರುತ್ತದೆ. ಇದನ್ನು ನನಗೆ ಮಾಡಲು ಸಾಧ್ಯವಾಗಿರುವುದು ಅದೃಷ್ಟ ಎಂದು ಅರ್ಬಾಗ್ ಹೇಳಿದ್ದಾರೆ. ಎರಡನೇ ಪ್ರಯೋಗದಲ್ಲಿ ಪಾಲ್ಗೊಳ್ಳುವವರಿಗೆ ಅರ್ಜಿಗಳನ್ನು ಸ್ವೀಕರಿಸಲು ನ್ಯೂರಾಲಿಂಕ್ ಈಗ ಮುಕ್ತವಾಗಿದೆ ಎಂದು ಮಸ್ಕ್ ಇತ್ತೀಚೆಗೆ ಘೋಷಿಸಿದರು.

ನ್ಯೂರಾಲಿಂಕ್ ಪ್ರಯೋಗದಲ್ಲಿ ಎರಡನೇ ವ್ಯಕ್ತಿಯಾಗಿ ಪಾಲ್ಗೊಳ್ಳುವವರಿಗೆ ಅರ್ಜಿಗಳನ್ನು ಸ್ವೀಕರಿಸುತ್ತಿದೆ. ಇದು ನಮ್ಮ ಟೆಲಿಪತಿ ಸೈಬರ್ನೆಟಿಕ್ ಬ್ರೈನ್ ಇಂಪ್ಲಾಂಟ್ ಆಗಿದ್ದು ಅದು ನಿಮ್ಮ ಫೋನ್ ಮತ್ತು ಕಂಪ್ಯೂಟರ್ ಅನ್ನು ಯೋಚಿಸುವ ಮೂಲಕ ನಿಯಂತ್ರಿಸಲು ಅನುವು ಮಾಡಿಕೊಡುತ್ತದೆ.

ಇದನ್ನೂ ಓದಿ: Bajaj CNG Bike: ವಿಶ್ವದ ಮೊದಲ ಸಿಎನ್‌ಜಿ ಬೈಕ್‌; ಬಜಾಜ್‌ನಿಂದ ಜುಲೈ 5ರಂದು ಬಿಡುಗಡೆ

ಅಪಾಯಕಾರಿ ಎಂದಿರುವ ಪ್ರಾಣಿ ಅರೈಕೆ ತಜ್ಞ

ಈ ಬೆಳವಣಿಗೆಯ ನಡುವೆಯೇ ನ್ಯೂರಾಲಿಂಕ್‌ಗೆ ಹಲವು ಸವಾಲುಗಳು ಎದುರಾಗಿದೆ. ನ್ಯೂಯಾರ್ಕ್ ಪೋಸ್ಟ್‌ ವರದಿ ಪ್ರಕಾರ, ಪ್ರಾಣಿಗಳ ಆರೈಕೆ ತಜ್ಞ ಲಿಂಡ್ಸೆ ಶಾರ್ಟ್ ಕಂಪನಿಯ ವಿರುದ್ಧ ಮೊಕದ್ದಮೆ ಹೂಡಿದ್ದಾರೆ. ಪ್ರಾಣಿಗಳಲ್ಲಿ ನ್ಯೂರಾಲಿಂಕ್‌ಗಳನ್ನು ಹಾಕಿ ನೋಡಿಕೊಳ್ಳುವಾಗ ಸರಿಯಾದ ರಕ್ಷಣಾ ಸಾಧನಗಳನ್ನು ಒದಗಿಸಲು ಕಂಪನಿ ವಿಫಲವಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಈ ಪ್ರಾಣಿಗಳಲ್ಲಿ ಕೆಲವು ಅಪಾಯಕಾರಿ ವೈರಸ್ ಅನ್ನು ಹೊತ್ತಿದ್ದು, ಅದು ಗಂಭೀರವಾದ ಮೆದುಳಿನ ಹಾನಿ ಅಥವಾ ಮಾನವರಲ್ಲಿ ಸಾವಿಗೆ ಕಾರಣವಾಗಬಹುದು ಎಂದು ಅವರು ಎಚ್ಚರಿಸಿದ್ದಾರೆ.

Continue Reading

ವಿದೇಶ

Hinduja Family: ಮನೆಗೆಲಸದವರ ಮೇಲೆ ದೌರ್ಜನ್ಯ; ಹಿಂದುಜಾ ಕುಟುಂಬದ ನಾಲ್ವರಿಗೆ 4.5 ವರ್ಷ ಜೈಲು!

Hinduja Family: ಪ್ರಕಾಶ್‌ ಹಿಂದುಜಾ ಹಾಗೂ ಅವರ ಕುಟುಂಬಸ್ಥರು ಮನೆಗೆಲಸದ ಮಹಿಳೆಗೆ ಕಡಿಮೆ ಸಂಬಳ ನೀಡುವುದು, ದಿನಕ್ಕೆ 18 ಗಂಟೆ ಕೆಲಸ ಮಾಡಿಸುವುದು ಸೇರಿ ಹಲವು ರೀತಿಯ ದೌರ್ಜನ್ಯ ಎಸಗಿದ್ದಾರೆ ಎಂಬುದಾಗಿ ಸ್ಟಿಟ್ಜರ್‌ಲ್ಯಾಂಡ್‌ ಕೋರ್ಟ್‌ನಲ್ಲಿ ಸಾಬೀತಾಗಿದೆ. ಹಾಗಾಗಿ, ನ್ಯಾಯಾಲಯವು ಪ್ರಕಾಶ್‌ ಹಿಂದುಜಾ ಸೇರಿ ನಾಲ್ವರಿಗೆ ಜೈಲು ಶಿಕ್ಷೆ ವಿಧಿಸಿದೆ.

VISTARANEWS.COM


on

Hinduja Family
Koo

ಜಿನೀವಾ:‌ ವಿಶ್ವದ ಶ್ರೀಮಂತ ಕುಟುಂಬಗಳಲ್ಲಿ ಒಂದಾದ, ಭಾರತ ಮೂಲದ ಉದ್ಯಮಿ ಪ್ರಕಾಶ್‌ ಹಿಂದುಜಾ (Prakash Hinduja) ಸೇರಿ ಅವರ ಕುಟುಂಬದ (Hinduja Family) ನಾಲ್ವರಿಗೆ ಸ್ವಿಟ್ಜರ್‌ಲ್ಯಾಂಡ್‌ ನ್ಯಾಯಾಲಯವು (Swiss Court) ನಾಲ್ಕೂವರೆ ವರ್ಷ ಜೈಲು ಶಿಕ್ಷೆ ವಿಧಿಸಿದೆ. ಮನೆಯಲ್ಲಿ ಸಾಕಿದ ನಾಯಿಗೆ ವ್ಯಯಿಸುವ ಹಣಕ್ಕಿಂತ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಕಡಿಮೆ ಸಂಬಳ ನೀಡುವುದು, ಅಗತ್ಯಕ್ಕಿಂತ ಹೆಚ್ಚು ದುಡಿಸುವುದು ಸೇರಿ ಹಲವು ರೀತಿಯಲ್ಲಿ ದೌರ್ಜನ್ಯ ಎಸಗಿದ ಕಾರಣ ನಾಲ್ವರಿಗೂ ನ್ಯಾಯಾಲಯವು ನಾಲ್ಕೂವರೆ ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಹಿಂದುಜಾ ಕುಟುಂಬದ ಉದ್ಯಮಿ ಪ್ರಕಾಶ್‌ ಹಿಂದುಜಾ, ಅವರ ಪತ್ನಿ ಕಮಲ್, ಮಗ ಅಜಯ್ ಹಾಗೂ ಸೊಸೆ ನಮ್ರತಾ ಅವರಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಪ್ರಕರಣದಲ್ಲಿ ಐದನೇ ಆರೋಪಿಯಾಗಿದ್ದ, ಹಿಂದುಜಾ ಕುಟುಂಬದ ಮ್ಯಾನೇಜರ್‌ ನಜೀಬ್‌ ಜಿಯಾಜಿಗೆ 18 ತಿಂಗಳು ಜೈಲು ಶಿಕ್ಷೆ ವಿಧಿಸಲಾಗಿದೆ. ಸ್ವಿಟ್ಜರ್‌ಲ್ಯಾಂಡ್‌ನ ಕಾರ್ಮಿಕ ಕಾನೂನು ಉಲ್ಲಂಘನೆ, ಮಾನವ ಕಳ್ಳಸಾಗಣೆ, ಮನೆಗೆಲಸದವರ ಮೇಲೆ ದೌರ್ಜನ್ಯ ಸೇರಿ ಹಲವು ಪ್ರಕರಣಗಳಲ್ಲಿ ನಾಲ್ವರನ್ನೂ ದೋಷಿಗಳು ಎಂದು ಕೋರ್ಟ್‌ ತೀರ್ಪು ನೀಡಿ, ಶಿಕ್ಷೆ ವಿಧಿಸಿದೆ.

ಹಿಂದುಜಾ ಕುಟುಂಬವು ಸ್ವಿಟ್ಜರ್‌ಲ್ಯಾಂಡ್‌ನ ಜಿನೀವಾದಲ್ಲಿರುವ ತಮ್ಮ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಭಾರತೀಯ ಮಹಿಳೆಯೊಬ್ಬಳಿಗೆ ಕಡಿಮೆ ಸಂಬಳ ನೀಡಿದ್ದಾರೆ. ಆಕೆಯನ್ನು ವಾರದಲ್ಲಿ ಏಳು ದಿನಗಳ ಕಾಲ ಹಾಗೂ ಪ್ರತಿದಿನ 18 ಗಂಟೆಕಾಲ ಕೆಲಸ ಮಾಡಿದ್ದಕ್ಕೆ ಕೇವಲ ಏಳು ಸ್ವಿಸ್, ಅಂದರೆ ದಿನಕ್ಕೆ 650 ರೂ. ಸಂಬಳ ನೀಡಿದ್ದಾರೆ. ಆದರೆ ಅವರು ಮನೆಯಲ್ಲಿ ಸಾಕಿದ ನಾಯಿಗೆ ಮಾತ್ರ ವಾರ್ಷಿಕವಾಗಿ 8,584 ಸ್ವಿಸ್ (ಸುಮಾರು 8 ಲಕ್ಷ ರೂ.) ಖರ್ಚು ಮಾಡುತ್ತಾರೆ. ಹಾಗಾಗಿ ಹಿಂದುಜಾ ಕುಟುಂಬದವರು ತಮ್ಮ ಸೇವಕರಿಗಿಂತ ಸಾಕು ನಾಯಿಗಳಿಗೆ ಹೆಚ್ಚು ಖರ್ಚು ಮಾಡುತ್ತಾರೆ ಎಂದು ಮಹಿಳೆಯು ಕೋರ್ಟ್‌ ಮೊರೆ ಹೋಗಿದ್ದರು. ಅವರ ಪರವಾಗಿ ಸ್ವಿಟ್ಜರ್‌ಲ್ಯಾಂಡ್ ನ್ಯಾಯಾಲಯದ ಸರ್ಕಾರಿ ವಕೀಲ ಯವೆಸ್ ಬರ್ಟೋಸಾ ವಾದ ಮಂಡಿಸಿದ್ದರು.

ಅಷ್ಟೇ ಅಲ್ಲದೇ ಹಿಂದುಜಾ ಕುಟುಂಬದವರು ಮನೆ ಕೆಲಸದ ಮಹಿಳೆಯ ಪಾಸ್‌ಪೋರ್ಟ್ ಕಿತ್ತುಕೊಂಡು ಅನುಮತಿಯಿಲ್ಲದೇ ಮನೆಯಿಂದ ಹೊರಬರದಂತೆ ನಿರ್ಬಂಧ ಹೇರಿದೆ. ಕೆಲಸದವರಿಗೆ ರಜೆ ಕೂಡ ನೀಡುತ್ತಿರಲಿಲ್ಲ. ಅಲ್ಲದೇ ಕರೆನ್ಸಿಯಲ್ಲಿ ಸಂಬಳ ನೀಡುತ್ತಿದ್ದ ಕಾರಣ ಅವರಿಗೆ ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಖರ್ಚು ಮಾಡಲು ಹಣವಿರುತ್ತಿರಲಿಲ್ಲ ಎಂದು ವಕೀಲರು ವಾದ ಮಂಡಿಸಿದ್ದರು. ಈಗ ನ್ಯಾಯಾಲಯವು ಜೈಲು ಶಿಕ್ಷೆ ವಿಧಿಸಿದೆ.

ಬ್ರಿಟನ್‌ನಲ್ಲಿ ಹಿಂದುಜಾ ಕುಟುಂಬವೇ ಶ್ರೀಮಂತ ಕುಟುಂಬ

ಕೆಲ ತಿಂಗಳ ಹಿಂದಷ್ಟೇ, ಭಾರತ ಮೂಲದ ಗೋಪಿಚಂದ್‌ ಹಿಂದುಜಾ ಹಾಗೂ ಅವರ ಕುಟುಂಬವು ಬ್ರಿಟನ್‌ನ ಶ್ರೀಮಂತ ಕುಟುಂಬ ಅಥವಾ ಉದ್ಯಮಿ ಎಂಬ ಖ್ಯಾತಿಗೆ ಭಾಜನವಾಗಿದೆ. ಅಷ್ಟೇ ಅಲ್ಲ, ಸತತ ಮೂರನೇ ವರ್ಷವೂ ಹಿಂದುಜಾ ಕುಟುಂಬವೇ ಅತ್ಯಂತ ಶ್ರೀಮಂತ ಎಂಬ ಖ್ಯಾತಿಗೆ ಪಾತ್ರವಾಗಿದೆ.

‘ಸಂಡೇ ಟೈಮ್ಸ್‌ ರಿಚ್‌ ಲಿಸ್ಟ್‌’ ಪಟ್ಟಿ ಬಿಡುಗಡೆ ಮಾಡಿದ್ದು, ಇದರಲ್ಲಿ ಗೋಪಿಚಂದ್‌ ಹಿಂದುಜಾ ಅವರೇ ಬ್ರಿಟನ್‌ನ ಶ್ರೀಮಂತ ಉದ್ಯಮಿ ಎನಿಸಿದ್ದಾರೆ. ಇವರ ಆಸ್ತಿಯ ಒಟ್ಟು ಮೌಲ್ಯವು 37 ಶತಕೋಟಿ ಪೌಂಡ್ಸ್‌ (ಸುಮಾರು 3.9 ಲಕ್ಷ ಕೋಟಿ ರೂ.) ಇದೆ. ಬ್ರಿಟನ್‌ನವರೇ ಆದ ಸರ್‌ ಲೆನಾರ್ಡ್‌ ಬ್ಲಾವಾಟ್ನಿಕ್‌ (29 ಶತಕೋಟಿ ಪೌಂಡ್ಸ್)‌, ಡೇವಿಡ್‌, ಸೈಮನ್‌ ರುಬೇನ್‌ ಮತ್ತು ಕುಟುಂಬ (24.98 ಶತಕೋಟಿ ಪೌಂಡ್ಸ್)‌, ಸರ್‌ ಜಿಮ್‌ ರ‍್ಯಾಟ್‌ಕ್ಲಿಫ್‌ (23 ಶತಕೋಟಿ ಪೌಂಡ್ಸ್)‌ ಆಸ್ತಿಯೊಂದಿಗೆ ನಂತರದ ಸ್ಥಾನದಲ್ಲಿದ್ದಾರೆ.

ಇದನ್ನೂ ಓದಿ: Gopi Hinduja: ನಮ್ಮನ್ನಾಳಿದ ಬ್ರಿಟನ್‌ನಲ್ಲಿ ಭಾರತದ ಉದ್ಯಮಿಯೇ ಅತ್ಯಂತ ಸಿರಿವಂತ; ಯಾರಿವರು?

Continue Reading

ವಿದೇಶ

Sexual Assault Case: ಲೈಂಗಿಕ ದೌರ್ಜನ್ಯ; ಕೋಕಕೋಲಾ ಕಂಪನಿ ಉತ್ತರಾಧಿಕಾರಿಗೆ 7,200 ಕೋಟಿ ರೂ. ದಂಡ!

ಲೈಂಗಿಕ ದೌರ್ಜನ್ಯ ಆರೋಪಿಯಾಗಿರುವ (Sexual Assault Case) ಕೋಕ-ಕೋಲಾ ಕಂಪನಿಯ ಉತ್ತರಾಧಿಕಾರಿ ಅಲ್ಕಿ ಡೇವಿಡ್ ತನ್ನ ಮಾಜಿ ಉದ್ಯೋಗಿಗೆ 900 ಮಿಲಿಯನ್ ಡಾಲರ್ ಪಾವತಿಸಲು ಲಾಸ್ ಏಂಜಲೀಸ್ ನ್ಯಾಯ ಮಂಡಳಿ ತೀರ್ಪು ನೀಡಿದೆ. ಇತಿಹಾಸದಲ್ಲೇ ಇದು ಲೈಂಗಿಕ ಹಾನಿಗಾಗಿ ವಿಧಿಸಲಾದ ಇದುವರೆಗಿನ ಅತಿದೊಡ್ಡ ಪರಿಹಾರ ಮೊತ್ತವಾಗಿದೆ.

VISTARANEWS.COM


on

By

Sexual Assault Case
Koo

ಲಾಸ್ ಏಂಜಲೀಸ್: ಕೋಕ-ಕೋಲಾ (Coca-Cola) ಕಂಪನಿಯ ಉತ್ತರಾಧಿಕಾರಿ ಅಲ್ಕಿ ಡೇವಿಡ್ (Alki David) ವಿರುದ್ಧ ಲೈಂಗಿಕ ದೌರ್ಜನ್ಯ (Sexual Assault Case) ಆರೋಪ ಸಾಬೀತಾಗಿದ್ದು, ಮಾಜಿ ಉದ್ಯೋಗಿಗೆ 900 ಮಿಲಿಯನ್ ಡಾಲರ್ (7,200 ಕೋಟಿ ರೂ.) ಪಾವತಿಸಲು ಲಾಸ್ ಏಂಜಲೀಸ್ (Los Angeles) ನ್ಯಾಯ ಮಂಡಳಿ ತೀರ್ಪು ನೀಡಿದೆ. ಇದು ಇತಿಹಾಸದಲ್ಲಿ ಲೈಂಗಿಕ ಹಾನಿಗಾಗಿ ವಿಧಿಸಲಾದ ಇದುವರೆಗಿನ ಅತಿದೊಡ್ಡ ಪರಿಹಾರ ಮೊತ್ತವಾಗಿದೆ ಎನ್ನಲಾಗಿದೆ.

ವಕೀಲರ ಪ್ರಕಾರ 2016- 2019ರ ನಡುವೆ ಮೂರು ವರ್ಷಗಳ ಕಾಲ ಜೇನ್ ಡೋ ಎಂಬ ಮಹಿಳೆ ಅಲ್ಕಿ ಡೇವಿಡ್ ಅವರಿಂದ ಲೈಂಗಿಕ ದೌರ್ಜನ್ಯ ಮತ್ತು ಕಿರುಕುಳಕ್ಕೆ ಒಳಗಾಗಿದ್ದರು. ಮಾಜಿ ನಿರ್ಮಾಣ ಸಹಾಯಕ ಮಹಿಮ್ ಖಾನ್ 2019ರಲ್ಲಿ ಡೇವಿಡ್ ವಿರುದ್ಧ ದೂರು ನೀಡಿದ್ದು, ಬಳಿಕ ಡೇವಿಡ್‌ಗೆ ಎಚ್ಚರಿಕೆಯನ್ನು ನೀಡಲಾಗಿತ್ತು. ಲೈಂಗಿಕ ದುರ್ವರ್ತನೆಯನ್ನು ಒಳಗೊಂಡ ಹಲವಾರು ಇತರ ಪ್ರಕರಣಗಳಲ್ಲಿ ಡೇವಿಡ್ ತಪ್ಪಿತಸ್ಥರೆಂದು ಕಂಡುಬಂದಿದೆ. ಕಂಪನಿಗಳು ಇವರ ವಿರುದ್ಧ ಸುಮಾರು 70 ಮಿಲಿಯನ್ ಡಾಲರ್‌ನಷ್ಟು ಮೊತ್ತದ ಹಾನಿಯನ್ನು ಪಾವತಿಸಲು ಒತ್ತಾಯಿಸಿವೆ.

ಜೇನ್ ಡೋ ಪ್ರಕರಣ

ಮೂವತ್ತು ವರ್ಷದ ಮಾಡೆಲ್ ಜೇನ್ ಡೋ ಅವರು ಹೊಲೊಗ್ರಾಮ್ ಯುಎಸ್‌ಎನಲ್ಲಿ ಡೇವಿಡ್‌ಗಾಗಿ ಕೆಲಸ ಮಾಡಿದ್ದರು. ಕೆಲಸದ ಆರಂಭದಿಂದಲೂ ಕಚೇರಿಯಲ್ಲಿ ಡೇವಿಡ್‌ನ ವರ್ತನೆಯ ಬಗ್ಗೆ ಜೇನ್ ಡೋ ಬಗ್ಗೆ ಅನುಮಾನವಿತ್ತು. ಯಾಕೆಂದರೆ ಡೇವಿಡ್ ತಮ್ಮ ಇಚ್ಛೆಗೆ ವಿರುದ್ಧವಾಗಿ ಚುಂಬಿಸಿದ್ದಾರೆ ಎಂದು ಮಹಿಳಾ ಸಹೋದ್ಯೋಗಿಯೊಬ್ಬರು ಡೋಗೆ ತಿಳಿಸಿದ್ದರು.

2016ರಲ್ಲಿ ಗ್ರೀಸ್‌ನಲ್ಲಿರುವ ಖಾಸಗಿ ದ್ವೀಪಕ್ಕೆ ವ್ಯಾಪಾರ ಪ್ರವಾಸದಲ್ಲಿದ್ದಾಗ ಡೋ ಗೆ ಡೇವಿಡ್ ಚುಂಬಿಸಲು ಪ್ರಯತ್ನಿಸಿದ್ದರು. ಅದನ್ನು ಡೋ ನಿರಾಕರಿಸಿದ್ದರು. ಬಳಿಕ ಡೇವಿಡ್‌ ಕ್ಷಮೆಯಾಚಿಸಿದ್ದರು.

ಇದನ್ನೂ ಓದಿ: Accident Case : ವಿದ್ಯಾರ್ಥಿನಿಗೆ ಗುದ್ದಿದ ತುತುಕುಡಿ ಎಕ್ಸ್‌ಪ್ರೆಸ್‌ ರೈಲು; ಫುಟ್‌ಪಾತ್ ಏರಿ ಅಂಗಡಿಗೆ ನುಗ್ಗಿದ ಪಿಕಪ್ ವಾಹನ

ಆ ಬಳಿಕ ಆಕೆಯನ್ನು ವಜಾಗೊಳಿಸಲಾಯಿತು. 2018ರವರೆಗೆ ಡೇವಿಡ್‌ನೊಂದಿಗೆ ಸಂವಹನ ನಡೆಸಲಿಲ್ಲ ಎಂದು ದೂರಿನಲ್ಲಿ ಹೇಳಲಾಗಿದೆ. ಅದರ ಅನಂತರ ಡೇವಿಡ್ ತನ್ನ ಗಾಂಜಾ ಉತ್ಪಾದನಾ ಸಂಸ್ಥೆಯಾದ ಸ್ವಿಸ್-ಎಕ್ಸ್‌ಗೆ ಬ್ರಾಂಡ್ ಅಂಬಾಸಿಡರ್ ಆಗಿ ಕೆಲಸ ಮಾಡುವ ಪ್ರಸ್ತಾಪವನ್ನು ಮಾಡಿದರು. ಮಹಿಳೆ ಕೆಲಸವನ್ನು ಒಪ್ಪಿಕೊಂಡ ಅನಂತರ ತನ್ನ ಹೊಟೇಲ್‌ಗೆ ಆಕೆಯನ್ನು ಕರೆಸಿ ಲೈಂಗಿಕ ಕಿರುಕುಳ ನೀಡಿರುವುದಾಗಿ ದೂರಲಾಗಿತ್ತು. ಅಲ್ಲದೇ 2019ರಲ್ಲಿ ಸಣ್ಣ ಕೋಣೆಯಲ್ಲಿ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಹಿಳೆ ದೂರಿದ್ದಾರೆ. ವಾರ್ಷಿಕ ಶ್ರೀಮಂತ ಪಟ್ಟಿಯ ಪ್ರಕಾರ ಡೇವಿಡ್ ಅವರ ಪ್ರಸ್ತುತ 3.7 ಶತಕೋಟಿ ಡಾಲರ್ ಸಂಪತ್ತಿನ ಮಾಲೀಕ ಎನ್ನಲಾಗಿದೆ.

Continue Reading

ದೇಶ

Hardeep Singh Nijjar: ಖಲಿಸ್ತಾನಿ ಉಗ್ರ ನಿಜ್ಜಾರ್‌ಗೆ ಕೆನಡಾ ಸಂಸತ್ತು ಗೌರವ; ಭಾರತ ಆಕ್ರೋಶ

Hardeep Singh Nijjar: ಕೆನಡಾದಲ್ಲಿದ್ದ ಭಾರತದ ಮೋಸ್ಟ್‌ ವಾಂಟೆಡ್‌ ಉಗ್ರ, ಖಲಿಸ್ತಾನಿ ಪರ ಹೋರಾಟಗಾರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಹತನಾಗಿ ಒಂದು ವರ್ಷವಾದ ಹಿನ್ನೆಲೆಯಲ್ಲಿ ಕೆನಡಾ ಸಂಸತ್ತು ಮಂಗಳವಾರ (ಜೂನ್‌ 18) ಹೌಸ್ ಆಫ್ ಕಾಮನ್ಸ್‌ನಲ್ಲಿ ಒಂದು ನಿಮಿಷ ಮೌನ ಆಚರಿಸಿ ಆತನಿಗೆ ಗೌರವ ಸಲ್ಲಿಸಿದೆ. ಕೆನಡಾ ನಿರ್ಧಾರಕ್ಕೆ ಭಾರತ ಈಗ ತೀವ್ರ ಖಂಡನೆ ವ್ಯಕ್ತಪಡಿಸಿದೆ.

VISTARANEWS.COM


on

Hardeep Singh Nijjar
Koo

ನವದೆಹಲಿ: ಖಲಿಸ್ತಾನಿ ಉಗ್ರ, ಖಲಿಸ್ತಾನಿ ಟೈಗರ್ ಫೋರ್ಸ್‌ನ (Khalistani Tiger Force) ಹರ್ದೀಪ್‌ ಸಿಂಗ್‌ ನಿಜ್ಜಾರ್‌ (Hardeep Singh Nijjar) ಹತ್ಯೆಗೀಡಾಗಿ ಒಂದು ವರ್ಷವಾದ ಹಿನ್ನೆಲೆಯಲ್ಲಿ ಕೆನಡಾ ಸರ್ಕಾರವು ಸಂಸತ್‌ನಲ್ಲಿಯೇ ಆತನಿಗೆ ‘ಮೌನಾಚರಣೆ’ ಮೂಲಕ ಗೌರವ ಸಲ್ಲಿಸಿರುವುದನ್ನು ಭಾರತ ಸರ್ಕಾರವು (India) ತೀರ್ವವಾಗಿ ಖಂಡಿಸಿದೆ. ಕೆನಡಾದ (Canada) ಹೌಸ್‌ ಆಫ್‌ ಕಾಮನ್ಸ್‌ನಲ್ಲಿ ಕಳೆದ ಮಂಗಳವಾರ (ಜೂನ್‌ 18) ಎಲ್ಲರೂ ಎದ್ದು ನಿಂತು, ಮೌನಾಚರಣೆ ಮೂಲಕ ನಿಜ್ಜಾರ್‌ಗೆ ಗೌರವ ಸಲ್ಲಿಸಿದ್ದರು. ಇದಕ್ಕೆ ಭಾರತ ಅಸಮಾಧಾನ ವ್ಯಕ್ತಪಡಿಸಿದೆ.

“ತೀವ್ರವಾದಕ್ಕೆ ರಾಜಕೀಯ ವ್ಯವಸ್ಥೆಯಲ್ಲಿ ಜಾಗ ನೀಡುವುದನ್ನು ನಾವು ನಿಶ್ಚಿತವಾಗಿಯೂ ಖಂಡಿಸುತ್ತೇವೆ. ಯಾರು ಹಿಂಸಾಚಾರದ ಪರವಾಗಿದ್ದಾರೋ, ಯಾರು ತೀವ್ರವಾದದಲ್ಲಿ ನಂಬಿಕೆ ಇರಿಸಿದ್ದಾರೋ, ಅಂತಹವರಿಗೆ ರಾಜಕೀಯ ಕ್ಷೇತ್ರದಲ್ಲಿ ಜಾಗ ನೀಡುವುದನ್ನು ಭಾರತ ವಿರೋಧಿಸುತ್ತದೆ. ಇದು ನಮ್ಮ ನಿಲುವಾಗಿದೆ” ಎಂಬುದಾಗಿ ಸುದ್ದಿಗೋಷ್ಠಿಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್‌ ಜೈಸ್ವಾಲ್‌ ತಿಳಿಸಿದ್ದಾರೆ.

ಕಳೆದ ವರ್ಷ ಜೂನ್‌ 18ರಂದು ಕೆನಡಾದ ಸುರ‍್ರೆ ನಗರದಲ್ಲಿ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಅಪರಿಚಿತರ ಗುಂಡಿಗೆ ಬಲಿಯಾಗಿದ್ದ. ಈ ಘಟನೆ ನಡೆದು ಒಂದು ವರ್ಷವಾದ ಹಿನ್ನೆಲೆಯಲ್ಲಿ ಕೆನಡಾ ಸಂಸತ್ತು ಎದ್ದು ನಿಂತು, ಮೌನ ಆಚರಿಸಿತು. ಈ ಬಗ್ಗೆ ಸ್ಪೀಕರ್ ಗ್ರೆಗ್ ಫರ್ಗುಸ್ ಮಾತನಾಡಿ, “ಒಂದು ವರ್ಷದ ಹಿಂದೆ ಸುರ‍್ರೆ ಹತ್ಯೆಗೀಡಾದ ಹರ್ದೀಪ್ ಸಿಂಗ್ ನಿಜ್ಜರ್ ಅವರ ಸ್ಮರಣಾರ್ಥ ಮೌನ ಆಚರಿಸೋಣʼʼ ಎಂದು ಘೋಷಿಸಿದರು. ಅದರಂತೆ ಎಲ್ಲ ಸದಸ್ಯರು ಎದ್ದು ನಿಂತುಕೊಳ್ಳುವುದು ವಿಡಿಯೊದಲ್ಲಿ ಕಂಡು ಬಂದಿದೆ.

ಖಲಿಸ್ತಾನ್‌ ಟೈಗರ್‌ ಫೋರ್ಸ್‌ (KTF) ಉಗ್ರ ಸಂಘಟನೆಯ ಮುಖ್ಯಸ್ಥನಾಗಿದ್ದ ಈತ ಪ್ರತ್ಯೇಕವಾದಿಗಳಿಗೆ ಹೆಚ್ಚಿನ ನೆರವು ಒದಗಿಸುತ್ತಿದ್ದ. ಭಾರತದಲ್ಲಿ ಹಲವು ಉಗ್ರ ಚಟುವಟಿಕೆಗಳ ಹಿಂದೆ ಈತನ ಕೈವಾಡವಿದೆ. ಕೆನಡಾದಲ್ಲೂ ಸಿಖ್‌ ಸಮುದಾಯದವರನ್ನು ಎತ್ತಿ ಕಟ್ಟುತ್ತಿದ್ದ. ಹಾಗಾಗಿ ಈತನು ಸೇರಿ ಸುಮಾರು 40 ಉಗ್ರರನ್ನು ಭಾರತವು ಮೋಸ್ಟ್‌ ವಾಂಟೆಡ್‌ ಉಗ್ರರ ಪಟ್ಟಿಗೆ ಸೇರಿಸಿತ್ತು. ಇದಕ್ಕೂ ಮೊದಲು ಖಲಿಸ್ತಾನಿ ಉಗ್ರ, ಖಲಿಸ್ತಾನ್‌ ನಾಯಕ, ಬಂಧಿತ ಅಮೃತ್‌ಪಾಲ್‌ ಸಿಂಗ್‌ನ ಆಪ್ತ, ಲಂಡನ್‌ನಲ್ಲಿರುವ ಭಾರತದ ಹೈಕಮಿಷನ್‌ ಕಚೇರಿ ಮೇಲೆ ಖಲಿಸ್ತಾನಿಗಳು ದಾಳಿ ನಡೆಸಿದ್ದರ ರೂವಾರಿ ಅವತಾರ್‌ ಸಿಂಗ್‌ ಖಂಡಾ ಲಂಡನ್‌ನಲ್ಲಿ ಮೃತಪಟ್ಟಿದ್ದ. ಅಮೃತ್‌ಪಾಲ್‌ ಸಿಂಗ್‌ ಬಂಧನದ ಬಳಿಕ ಕೆನಡಾದಲ್ಲಿರುವ ಖಲಿಸ್ತಾನಿಗಳು ಇನ್ನಷ್ಟು ತೀವ್ರವಾಗಿ ಉಗ್ರ ಚಟುವಟಿಕೆಗಳಲ್ಲಿ ತೊಡಗಿದ್ದರು.

ಇದನ್ನೂ ಓದಿ: Hardeep Singh Nijjar: ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಹತ್ಯೆಯಾಗಿ ಒಂದು ವರ್ಷ; ಮೌನ ಆಚರಿಸಿ ಗೌರವ ಸಲ್ಲಿಸಿದ ಕೆನಡಾ ಸಂಸತ್ತು

Continue Reading
Advertisement
Gully cricket vibes
ಕ್ರೀಡೆ4 mins ago

Gully Cricket Vibes: ಗಲ್ಲಿ ಕ್ರಿಕೆಟ್​ನಂತೆ ಚೆಂಡು ಹುಡುಕಾಡಿದ ವಿರಾಟ್​ ಕೊಹ್ಲಿ; ವಿಡಿಯೊ ವೈರಲ್​

Share Market Scam
ಕ್ರೈಂ14 mins ago

Share Market Scam: ಮುಖೇಶ್ ಅಂಬಾನಿ ಡೀಪ್ ಫೇಕ್‌! 7 ಲಕ್ಷ ರೂ. ಕಳೆದುಕೊಂಡ ವೈದ್ಯೆ

Tharun Sudhir sonal monteiro will get marriage
ಸಿನಿಮಾ15 mins ago

Tharun Sudhir: ಸೋನಲ್ ಜತೆ `ತರುಣ್ ಸುಧೀರ್‌’ಗೆ ಕೂಡಿಬಂತು ಕಂಕಣಭಾಗ್ಯ?

Rushikonda Palace Issue
ದೇಶ29 mins ago

Rushikonda Palace: 500 ಕೋಟಿಯ ಋಷಿಕೊಂಡ ಅರಮನೆ; 12 ಬೆಡ್‌ರೂಮ್‌, ವಾಶ್‌ರೂಮ್‌ ಒಂದು ಮನೆಯಷ್ಟು!

Sumit Nagal
ಕ್ರೀಡೆ35 mins ago

Paris Olympics 2024: ಅಧಿಕೃತವಾಗಿ ಪ್ಯಾರಿಸ್​ ಒಲಿಂಪಿಕ್ಸ್ ಟಿಕೆಟ್​ ಪಡೆದ ಸುಮಿತ್‌ ನಗಾಲ್‌

Suraj Revanna Case
ಕರ್ನಾಟಕ51 mins ago

Suraj Revanna Case: ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌; ಎಂಎಲ್‌ಸಿ ಸೂರಜ್‌ ರೇವಣ್ಣ ಅರೆಸ್ಟ್‌

Doodle V3 E-Cycle
ಆಟೋಮೊಬೈಲ್59 mins ago

Doodle V3 E-Cycle: ‘ಕಲ್ಕಿ 2898 ಎಡಿ’ನಿಂದ ಪ್ರೇರಿತವಾದ ಇ-ಸೈಕಲ್ ಮಾರುಕಟ್ಟೆಗೆ

Suraj Revanna Case
ಕರ್ನಾಟಕ1 hour ago

Suraj Revanna Case:  ಸಲಿಂಗ ಕಾಮ ಆರೋಪ; ಸಂತ್ರಸ್ತನ ವೈದ್ಯಕೀಯ ಪರೀಕ್ಷೆ ಬಳಿಕ ಇಂದೇ ಅರೆಸ್ಟ್‌ ಆಗ್ತರಾ ಸೂರಜ್‌ ರೇವಣ್ಣ?

Empty Stomach Foods
ಆರೋಗ್ಯ2 hours ago

Empty Stomach Foods: ಬೆಳಗ್ಗೆ ಎದ್ದ ಕೂಡಲೇ ಖಾಲಿ ಹೊಟ್ಟೆಯಲ್ಲಿ ಈ ಆಹಾರಗಳನ್ನು ತಿನ್ನಬೇಡಿ!

karnataka weather Forecast
ಮಳೆ2 hours ago

Karnataka Weather : ಕರಾವಳಿ, ಮಲೆನಾಡಿಗೆ ಗುಡುಗು ಸಹಿತ ಭಾರಿ ಮಳೆ; 9 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ2 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ3 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು6 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು6 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ7 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ7 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ7 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌