Nalin Kumar Kateel : ನಂಬಿಕೆ, ವಿಶ್ವಾಸ ದ್ರೋಹದ 100 ದಿನದಲ್ಲಿ ನೂರಾರು ತಪ್ಪು; ನಳಿನ್‌ ಕುಮಾರ್‌ ಕಟೀಲ್‌ ವಾಗ್ದಾಳಿ - Vistara News

ಕರ್ನಾಟಕ

Nalin Kumar Kateel : ನಂಬಿಕೆ, ವಿಶ್ವಾಸ ದ್ರೋಹದ 100 ದಿನದಲ್ಲಿ ನೂರಾರು ತಪ್ಪು; ನಳಿನ್‌ ಕುಮಾರ್‌ ಕಟೀಲ್‌ ವಾಗ್ದಾಳಿ

Nalin kumar Kateel : ರಾಜ್ಯ ಸರ್ಕಾರದ ನೂರು ದಿನಗಳು ಎಂದರೆ ನೂರಾರು ತಪ್ಪುಗಳು, ಜನರಿಗೆ ವಿಶ್ವಾಸ ದ್ರೋಹ ಅಷ್ಟೆ ಎಂದಿದ್ದಾರೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌. ಅವರು ಮಾಡಿದ ತಪ್ಪುಗಳ ಪಟ್ಟಿ ಇಲ್ಲಿದೆ.

VISTARANEWS.COM


on

Nalin kumar kateel and other leaders
ಕಾಂಗ್ರೆಸ್ ಸರಕಾರದ 100 ದಿನಗಳ ಆಡಳಿತ ಕುರಿತ ಕಿರು ಹೊತ್ತಗೆಯನ್ನು ಗೋವಿಂದ ಕಾರಜೋಳ, ನಳಿನ್‌ ಕುಮಾರ್‌ ಕಟೀಲ್‌, ಬಸವರಾಜ ಬೊಮ್ಮಾಯಿ ಬಿಡುಗಡೆ ಮಾಡಿದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕರ್ನಾಟಕದಲ್ಲಿ ಸಿದ್ದರಾಮಯ್ಯರವರ (CM Siddaramaiah) ನೇತೃತ್ವದ ಕಾಂಗ್ರೆಸ್ ಸರಕಾರ (Congress Government) ಅಧಿಕಾರಕ್ಕೆ ಬಂದು 100 ದಿನಗಳಾಗಿವೆ (100 days of Government). ಆದರೆ ಈ ನೂರು ದಿನದಲ್ಲಿ ನೂರಾರು ತಪ್ಪುಗಳು (Hundred days and Hundreds of mistakes) ನಡೆದಿವೆ. ಜನರಿಟ್ಟ ನಂಬಿಕೆ, ವಿಶ್ವಾಸಕ್ಕೆ ಈ ಸರಕಾರ ದ್ರೋಹ ಬಗೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ (Nalin kumar kateel) ಅವರು ಟೀಕಿಸಿದರು.

ನಗರದಲ್ಲಿ ಇಂದು ರಾಜ್ಯ ಕಾಂಗ್ರೆಸ್ ಸರಕಾರದ 100 ದಿನಗಳ ಆಡಳಿತ ಕುರಿತ ಕಿರು ಹೊತ್ತಗೆಯನ್ನು ಬಿಡುಗಡೆ ಮಾಡಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿಕಾರಕ್ಕೆ ಬರುವ ಪೂರ್ವದಲ್ಲಿ ಗ್ಯಾರಂಟಿಗಳ ಘೋಷಣೆ ಮಾಡಿತ್ತು. ಭ್ರಷ್ಟಾಚಾರದ ವಿರುದ್ಧ ಪುಂಖಾನುಪುಂಖ ಭಾಷಣ ಮಾಡಿದ್ದರು. ಅಧಿಕಾರಕ್ಕೆ ಬಂದ ಬಳಿಕ 100 ದಿನಗಳಲ್ಲಿ ನೂರಾರು ತಪ್ಪುಗಳನ್ನು ಈ ಸರಕಾರ ಮಾಡಿದೆ ಎಂದು ಆಕ್ಷೇಪಿಸಿದರು. ಗ್ಯಾರಂಟಿ ಯೋಜನೆಗಳಿಗೆ ಮಾನದಂಡಗಳನ್ನು ವಿಧಿಸಿ ಇವತ್ತು ಈ ಸರಕಾರ ಮಾತು ತಪ್ಪಿದೆ ಎಂದು ನುಡಿದರು.

ಬಂಡವಾಳ ಹೂಡಿಕೆ ಇಲ್ಲ, ವಿದ್ಯುತ್‌ ಅಭಾವ

ಇಬ್ಬರು ಸಚಿವರ ವಿರುದ್ಧ ಭ್ರಷ್ಟಾಚಾರದ ಆರೋಪ ಬಂದಾಗ ಅವರ ರಾಜೀನಾಮೆ ಪಡೆಯುವುದರಲ್ಲೂ ವಿಫಲವಾಗಿದೆ. ನಮ್ಮ ಆಡಳಿತ ಇದ್ದಾಗ, ಯಡಿಯೂರಪ್ಪ, ಬೊಮ್ಮಾಯಿಯವರು ಮುಖ್ಯಮಂತ್ರಿ ಆಗಿದ್ದಾಗ ಗರಿಷ್ಠ ಬಂಡವಾಳ ಹೂಡಿಕೆ ಬರುತ್ತಿತ್ತು. ಇವತ್ತು ವಿದ್ಯುತ್ ಅಭಾವ, ಅತಿ ಹೆಚ್ಚು ದರದಿಂದ ಹೂಡಿಕೆದಾರರು ವಾಪಸ್ ಹೋಗುತ್ತಿದ್ದಾರೆ. ಒಂದೆಡೆ ವಿದ್ಯುತ್ ಉಚಿತವೆಂದು ಘೋಷಿಸಿ ಅಘೋಷಿತ ವಿದ್ಯುತ್ ಕಡಿತ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ರೈತರಿಗೆ ಕರೆಂಟಿಲ್ಲ, ಬಿಎಸ್‌ವೈ ಕೊಟ್ಟ 4000 ರೂ. ಕೂಡಾ ಇಲ್ಲ

ರೈತರು ಗಂಟೆಗಟ್ಟಲೆ ಕಾದು ಪಂಪುಗಳನ್ನು ಚಾಲನೆ ಮಾಡುವ ಸ್ಥಿತಿ ಬಂದಿದೆ. ವಿದ್ಯುತ್ ಅಭಾವ ಕಾಡುತ್ತಿದೆ. ಬಜೆಟ್‍ನಲ್ಲಿ ರೈತಪರ ಯೋಜನೆಗಳನ್ನು ಈ ಸರಕಾರ ಘೋಷಿಸಿಲ್ಲ. ರೈತ ಸಮ್ಮಾನ್ ಯೋಜನೆಯಡಿ ಕೇಂದ್ರದ ಮೋದಿಜಿ ಸರಕಾರ 6 ಸಾವಿರ ಮತ್ತು ಯಡಿಯೂರಪ್ಪ- ಬೊಮ್ಮಾಯಿಯವರ ಸರಕಾರಗಳು 4 ಸಾವಿರ ನೀಡುತ್ತಿದ್ದವು. ಆ 4 ಸಾವಿರ ನೀಡುವುದನ್ನು ಈ ಸರಕಾರ ರದ್ದು ಮಾಡಿದೆ ಎಂದು ವಿವರಿಸಿದರು. ಬೊಮ್ಮಾಯಿಯವರ ದೂರದೃಷ್ಟಿಯ ಯೋಜನೆ ರೈತ ವಿದ್ಯಾನಿಧಿಗೆ ಕತ್ತರಿ ಹಾಕಿದ ರೈತ ವಿರೋಧಿ ಸರಕಾರ ರಾಜ್ಯದ್ದು ಎಂದರು.

ಪಂಚಾಯಿತಿಯಿಂದ ಸಿಎಂ ಕಚೇರಿವರೆಗೆ ಭ್ರಷ್ಟಾಚಾರ

ಪಂಚಾಯಿತಿ ಕಚೇರಿಯಿಂದ ಸಿಎಂ ಕಚೇರಿವರೆಗೆ ಭ್ರಷ್ಟಾಚಾರ ಇವತ್ತು ಸದ್ದು ಮಾಡುತ್ತಿದೆ. ಸಿಎಂ ಕಚೇರಿ ಭ್ರಷ್ಟಾಚಾರದ ಬಗ್ಗೆ ಅವರ ಶಾಸಕರೇ ಹೇಳುತ್ತಿದ್ದಾರೆ. ಹಿಂದಿನಿಂದ ಎರಡು ಶಕ್ತಿಗಳು ಮುಖ್ಯಮಂತ್ರಿಗಳನ್ನು ನಿಯಂತ್ರಿಸುವ ಬಗ್ಗೆ ಅವರ ಪಕ್ಷದವರೇ ಹೇಳುತ್ತಾರೆ ಎಂದು ನುಡಿದರು.

ತುರ್ತು ಪರಿಸ್ಥಿತಿ ನೆನಪಿಸುವ ದ್ವೇಷ ರಾಜಕಾರಣ

ಈ ಸರಕಾರವು ದ್ವೇಷದ ರಾಜಕಾರಣ ಮಾಡುತ್ತಿದೆ. ನಮ್ಮ ಸರಕಾರದ ಕಾನೂನುಗಳನ್ನು ರದ್ದು ಮಾಡುವ ಪ್ರಯತ್ನಕ್ಕೆ ಕೈಹಾಕಿದ್ದಾರೆ. ಬೊಮ್ಮಾಯಿಯವರ ಸರಕಾರದ ಯೋಜನೆಗಳನ್ನು ನಿಲ್ಲಿಸುವ ಕೆಲಸ ಮಾಡಿದ್ದಾರೆ. ನಮ್ಮ ಕಾರ್ಯಕರ್ತರ ವಿರುದ್ಧ ಸುಳ್ಳು ಆರೋಪ ಹೊರಿಸಿ ಕೇಸು ದಾಖಲಿಸಿ ಜೈಲಿಗೆ ಹಾಕುವ ಕೆಲಸ ನಡೆದಿದೆ ಎಂದು ಟೀಕಿಸಿದರು.

ಸೋಷಿಯಲ್ ಮೀಡಿಯದಲ್ಲಿ ಬರೆದವರನ್ನು ಜೈಲಿಗೆ ಅಟ್ಟುತ್ತಿದ್ದಾರೆ. ಮಾಧ್ಯಮದವರ ಮೇಲೂ ದಬ್ಬಾಳಿಕೆ ನಡೆದಿದೆ. ಇದು ಹಿಂದಿನ ತುರ್ತು ಪರಿಸ್ಥಿತಿಯನ್ನು ನೆನಪಿಸುವಂತಿದೆ. ಕಾನೂನು- ಸುವ್ಯವಸ್ಥೆ ವಿಚಾರದಲ್ಲೂ ಈ ಸರಕಾರ ಸೋತಿದೆ. ಹತ್ತಾರು ಕೊಲೆ ನಡೆದಿದೆ. ಜೈನ ಮುನಿ ಹತ್ಯೆಯಾಗಿದೆ. ಹಿಂದೂ ಜಾಗರಣ ವೇದಿಕೆ ಪ್ರಮುಖರ ಕೊಲೆಯಾಗಿದೆ. ಉಡುಪಿ ಘಟನೆಯನ್ನು ಕ್ಷುಲ್ಲಕವಾಗಿ ಗೃಹಸಚಿವರು ತೆಗೆದುಕೊಂಡಿದ್ದಾರೆ ಎಂದು ಆರೋಪಿಸಿದರು. ಸರ್ವಾಧಿಕಾರ ಧೋರಣೆಯ ಸರಕಾರ ಇಲ್ಲಿದೆ ಎಂದರು.

ಇದನ್ನೂ ಓದಿ: CM Siddaramaiah : ಕಾಂಗ್ರೆಸ್‌ ಸರ್ಕಾರದ ವಿರುದ್ಧ ಚಾರ್ಜ್‌ಶೀಟ್‌ ತರಲು ಬಿಜೆಪಿಗೆ ನೈತಿಕ ಹಕ್ಕಿಲ್ಲ ಎಂದ ಸಿದ್ದರಾಮಯ್ಯ

ಅಂಗನವಾಡಿ, ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಳದ ಭರವಸೆ ಈಡೇರಿಲ್ಲ ಎಂದು ಹೇಳಿದ ಅವರು, ಸಮರ್ಪಕವಾಗಿ ವೇತನ ನೀಡಲಾಗದ ಸ್ಥಿತಿ ಸರಕಾರದ್ದು ಎಂದು ತಿಳಿಸಿದರು.

ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿವೆ. ಹಿಂದೆ ನೀಡಿದ ಅನುದಾನವನ್ನೂ ಬಿಡುಗಡೆ ಮಾಡುತ್ತಿಲ್ಲ. 3 ತಿಂಗಳುಗಳಲ್ಲಿ ಅಭಿವೃದ್ಧಿ ಕಾರ್ಯಕ್ಕೆ ಅನುದಾನ ಬಿಡುಗಡೆ ಆಗಿಲ್ಲ. ಕೈ ಕೊಟ್ಟ ಯೋಜನೆಗಳು, ಹಳಿ ತಪ್ಪಿದ ಆಡಳಿತದ ಕುರಿತು ಜನರ ಮುಂದೆ ಮಾಹಿತಿ ಕೊಡುತ್ತಿದ್ದೇವೆ ಎಂದು ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಗೋವಿಂದ ಕಾರಜೋಳ, ರಾಜ್ಯ ಮುಖ್ಯ ವಕ್ತಾರ ಎಂ.ಜಿ.ಮಹೇಶ್ ಅವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Pralhad Joshi: ನೇಹಾ, ಅಂಜಲಿ ಹತ್ಯೆ ಪ್ರಕರಣದಲ್ಲಿ ಕೈಗೊಳ್ಳದ ಕ್ರಮ ಚನ್ನಗಿರಿ ಪ್ರಕರಣದಲ್ಲಿ ಏಕೆ ಎಂದ ಪ್ರಲ್ಹಾದ್‌ ಜೋಶಿ

Pralhad Joshi: ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹತ್ಯೆ, ಅಂಜಲಿ ಕೊಲೆ ಪ್ರಕರಣದಲ್ಲಿ ಕೈಗೊಳ್ಳದ ತ್ವರಿತ ಕ್ರಮವನ್ನು ಸಿಎಂ ಸಿದ್ದರಾಮಯ್ಯ ಚನ್ನಗಿರಿ ಪ್ರಕರಣದಲ್ಲಿ ಏಕೆ? ಕೈಗೊಂಡರು ಎಂದು ಪ್ರಶ್ನಿಸಿದ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ತುಷ್ಟೀಕರಣದ ರಾಜಕಾರಣ ಮಾಡುತ್ತಿದ್ದಾರೆ. ಇದರಿಂದ ಅರಾಜಕತೆ ನಿರ್ಮಾಣವಾಗುತ್ತಿದೆ ಎಚ್ಚರವಿರಲಿ ಎಂದು ಅವರು ತಿಳಿಸಿದ್ದಾರೆ.

VISTARANEWS.COM


on

Union Minister Pralhad Joshi latest statement about channagiri case
Koo

ಹುಬ್ಬಳ್ಳಿ: ಚನ್ನಗಿರಿ ಪ್ರಕರಣದಲ್ಲಿ ಡಿವೈಎಸ್ಪಿ, ಸಿಪಿಐ ಅಮಾನತ್ತು ಮಾಡಿ ಪೊಲೀಸರ ನೈತಿಕ ಬಲ ಕುಗ್ಗಿಸಿದ್ದಾರೆ ಸಿಎಂ ಸಿದ್ದರಾಮಯ್ಯ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಕಿಡಿ ಕಾರಿದರು.

ಹುಬ್ಬಳ್ಳಿಯಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಈ ಧೋರಣೆ ನೋಡಿದರೆ ಪೊಲೀಸರು ಠಾಣೆ ಬಿಟ್ಟು ಓಡಿ ಹೋಗಬೇಕು ಎಂಬಂತಿದೆ ಎಂದು ಖಂಡಿಸಿದರು.

ಇದನ್ನೂ ಓದಿ: Pralhad Joshi: ಸಿಎಂ ಪತ್ರ ಬರೆದು ರಾಜಕಾರಣ ಮಾಡಿದರೆ ಪ್ರಜ್ವಲ್ ಪಾಸ್‌ಪೋರ್ಟ್ ರದ್ದಾಗಲ್ಲ: ಪ್ರಲ್ಹಾದ್‌ ಜೋಶಿ

ಮುಸ್ಲಿಂರಷ್ಟೇ ಅಲ್ಲ, ಯಾರೇ ಆದರೂ ಸರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಿ, ವಾಹನ ಜಖಂಗೊಳಿಸಿ ಗಲಭೆ ಎಬ್ಬಿಸುವುದು ಖಂಡನೀಯ. ಆದರೆ, ಈ ಪ್ರಕರಣದಲ್ಲಿ ಸಿಎಂ ಪೊಲೀಸರ ಮೇಲೆ ಕ್ರಮ ಕೈಗೊಂಡಿದ್ದಾರೆ ಎಂದು ಜೋಶಿ ಆಕ್ಷೇಪಿಸಿದರು.

ಅಪರಾಧ ಹಿನ್ನೆಲೆಯಲ್ಲಿ ಪೊಲೀಸರು ವ್ಯಕ್ತಿಯನ್ನು ಕರೆತಂದು ವಿಚಾರಣೆ ನಡೆಸಿದ್ದಾರೆ. ಆ ವೇಳೆ ಆತನಿಗೆ ಆರೋಗ್ಯ ಸಮಸ್ಯೆಯಾಗಿದೆ. ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಸಿಎಂ ಆದೇಶದಂತೆ ಡಿವೈಎಸ್‌ಪಿ ಮತ್ತು ಸಿಪಿಐ ಅಮಾನತ್ತು ಪಡಿಸುವುದು ಯಾವ ನ್ಯಾಯ? ಎಂದು ಪ್ರಶ್ನಿಸಿದರು.

ಇದನ್ನೂ ಓದಿ: Selco India: ಬೆಂಗಳೂರಿನಲ್ಲಿ ಮೇ 27ರಂದು ಅಂತಾರಾಷ್ಟ್ರೀಯ ಸೂರ್ಯಮಿತ್ರ ವಾರ್ಷಿಕ ಪ್ರಶಸ್ತಿ ಪ್ರದಾನ

ನೇಹಾ, ಅಂಜಲಿ ಹತ್ಯೆ ಪ್ರಕರಣದಲ್ಲಿ ಇಲ್ಲದ ತ್ವರಿತ ಕ್ರಮ ಚನ್ನಗಿರಿಯಲ್ಲೇಕೆ?

ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹತ್ಯೆ, ಅಂಜಲಿ ಕೊಲೆ ಪ್ರಕರಣದಲ್ಲಿ ಕೈಗೊಳ್ಳದ ತ್ವರಿತ ಕ್ರಮವನ್ನು ಸಿಎಂ ಸಿದ್ದರಾಮಯ್ಯ ಚನ್ನಗಿರಿ ಪ್ರಕರಣದಲ್ಲಿ ಏಕೆ? ಕೈಗೊಂಡರು ಎಂದು ಪ್ರಶ್ನಿಸಿದ ಸಚಿವರು, ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ತುಷ್ಟೀಕರಣದ ರಾಜಕಾರಣ ಮಾಡುತ್ತಿದ್ದಾರೆ. ಇದರಿಂದ ಅರಾಜಕತೆ ನಿರ್ಮಾಣವಾಗುತ್ತಿದೆ ಎಚ್ಚರವಿರಲಿ ಎಂದು ಜೋಶಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದರು.

Continue Reading

ಉತ್ತರ ಕನ್ನಡ

Uttara Kannada News: ಭಾರತದ ಭವಿಷ್ಯ ಸಣ್ಣ ಸಣ್ಣ ಊರುಗಳಲ್ಲಿದೆ: ಹರಿಪ್ರಕಾಶ್‌ ಕೋಣೆಮನೆ

Uttara Kannada News: ಯಲ್ಲಾಪುರ ಪಟ್ಟಣದ ಗಾಂಧಿ ಕುಟೀರದಲ್ಲಿ ರಂಗಸಹ್ಯಾದ್ರಿ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಶನಿವಾರ ಸಂಜೆ ಜರುಗಿತು.

VISTARANEWS.COM


on

childrens summer camp closing ceremony at yallapur
Koo

ಯಲ್ಲಾಪುರ: ಭಾರತದ ಭವಿಷ್ಯ ಸಣ್ಣ ಸಣ್ಣ ಊರುಗಳಲ್ಲಿದೆ. ಪಟ್ಟಣದ ಸವಲತ್ತುಗಳನ್ನು ನಾವು ಇಲ್ಲಿನ ಮಕ್ಕಳಿಗೆ ನೀಡಿದಾಗ ಮಾತ್ರ ಉತ್ತಮ ಭವಿಷ್ಯ ನಿರ್ಮಿಸಲು ಸಾಧ್ಯ ಎಂದು ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹರಿಪ್ರಕಾಶ್‌ ಕೋಣೆಮನೆ (Uttara Kannada News) ಅಭಿಪ್ರಾಯಪಟ್ಟರು.

ಪಟ್ಟಣದ ಗಾಂಧಿ ಕುಟೀರದಲ್ಲಿ ಶನಿವಾರ ಸಂಜೆ ರಂಗಸಹ್ಯಾದ್ರಿ ಬಳಗದ ವತಿಯಿಂದ ಹಮ್ಮಿಕೊಂಡ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಆಸಕ್ತಿ, ಸಮರ್ಪಣೆ ಹಾಗೂ ಬದ್ಧತೆ ಇಲ್ಲವೆಂದರೆ 17 ವರ್ಷಗಳಿಂದ ಸತತವಾಗಿ ಬೇಸಿಗೆ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಿಕೊಂಡು ಬರಲು ಸಾಧ್ಯವಾಗುತ್ತಿರಲಿಲ್ಲ. ಶಿಬಿರವನ್ನು ನಡೆಸುವುದು ಸವಾಲಿನ ಕೆಲಸ. ಮಕ್ಕಳು ಜೀವನದಲ್ಲಿ ಯಾವ ಉದ್ಯೋಗವನ್ನು ಆರಿಸುತ್ತಾರೆ ಎಂಬುದು ಮುಖ್ಯವಲ್ಲ. ಬದಲಾಗಿ ಕುಟುಂಬದ ಸಂಸ್ಕೃತಿ-ಸಂಸ್ಕಾರವನ್ನು ಉಳಿಸುವ, ಮನೆತನದ ಹಾಗೂ ಊರಿನ ಹೆಸರನ್ನು ಉಳಿಸುವ ಉತ್ತಮ ಪ್ರಜೆಯಾಗಬೇಕು. ಅಂತಹ ಅಭಿವ್ಯಕ್ತಿ ಕಲೆಗಳನ್ನು ಬೆಳೆಸುವ ಚಟುವಟಿಕೆಗಳು ನಮ್ಮ ವ್ಯಕ್ತಿತ್ವವನ್ನು ಅರಳಿಸುತ್ತವೆ. ಆ ಕೆಲಸವನ್ನು ಇಂತಹ ಶಿಬಿರಗಳು ಮಾಡುತ್ತಿವೆ ಎಂದರು.

ಇದನ್ನೂ ಓದಿ: Selco India: ಬೆಂಗಳೂರಿನಲ್ಲಿ ಮೇ 27ರಂದು ಅಂತಾರಾಷ್ಟ್ರೀಯ ಸೂರ್ಯಮಿತ್ರ ವಾರ್ಷಿಕ ಪ್ರಶಸ್ತಿ ಪ್ರದಾನ

ಮಕ್ಕಳಿಗೆ ತಿಳಿವಳಿಕೆ ಬರುವ ಮುನ್ನ ಕೇಳಿದ್ದನ್ನೆಲ್ಲ ಕೊಡಿಸುವ ಮೊದಲು ಹಲವು ಬಾರಿ ಪಾಲಕರು ಯೋಚಿಸಬೇಕು. ಮೊಬೈಲ್ ಬಳಕೆಯಿಂದ ಮನುಷ್ಯ ದೈಹಿಕವಾಗಿ ಹಾಗೂ ಮಾನಸಿಕವಾಗಿ ಅಬಲನಾಗುತ್ತಾನೆ. ತಂತ್ರಜ್ಞಾನ ನಮ್ಮೆಲ್ಲ ಪ್ರತಿಭೆಗಳನ್ನು ಹೊಸಕಿ ಹಾಕುತ್ತಿದೆ. ಭಾರತದ ಭವಿಷ್ಯ ಇಂತಹ ಸಣ್ಣ ಸಣ್ಣ ಊರುಗಳಲ್ಲಿವೆ. ಪಟ್ಟಣದ ಸವಲತ್ತುಗಳನ್ನು ನಾವು ಇಲ್ಲಿನ ಮಕ್ಕಳಿಗೆ ನೀಡಿದಾಗ ಉತ್ತಮ ಭವಿಷ್ಯವನ್ನು ನಿರ್ಮಿಸಲು ಸಾಧ್ಯ. ಯಾವುದೇ ಕೆಲಸ ಮಾಡಲು ಧೈರ್ಯ ಹೊಂದಿದವರು ಜೀವನದಲ್ಲಿ ಬೆಳೆಯುತ್ತಾರೆ. ಜೀವನ ಕೌಶಲ್ಯಗಳನ್ನು ಮಕ್ಕಳಿಗೆ ಕಲಿಸುವ ಅವಶ್ಯಕತೆ ಇದೆ ಎಂದು ಪ್ರತಿಪಾದಿಸಿದರು.

ಈ ಸಂದರ್ಭದಲಿ ಪತ್ರಕರ್ತರಾದ ಟಿ. ಶಂಕರ್ ಭಟ್, ನಾಗರಾಜ ಮದ್ಗುಣಿ, ಪ್ರಮುಖರಾದ ವೆಂಕಟ್ರಮಣ ಭಟ್ ಸಹಸ್ರಳ್ಳಿ ಉಪಸ್ಥಿತರಿದ್ದರು. ರಂಗ ಸಹ್ಯಾದ್ರಿಯ ಅಧ್ಯಕ್ಷ ಡಿ.ಎನ್. ಗಾಂವ್ಕರ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುಬ್ರಾಯ ಭಟ್ ಆನೆಜಡ್ಡಿ ಕಾರ್ಯಕ್ರಮ ನಿರ್ವಹಿಸಿದರು. ಸುಮಂಗಲಾ ಜೋಶಿ ವಂದಿಸಿದರು.

ಇದನ್ನೂ ಓದಿ: Uttara Kannada News: ಕಾರವಾರ ನಗರಸಭೆ ತೆರಿಗೆ ಸಂಗ್ರಹಕ್ಕೆ ವೇಗ: ಡಿಸಿ

ಇದೇ ಸಂದರ್ಭದಲ್ಲಿ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ಶಿಬಿರಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ನಂತರ ಮಕ್ಕಳಿಂದ ವಿವಿಧ ರೀತಿಯ ಮನರಂಜನಾ ಕಾರ್ಯಕ್ರಮಗಳು ಜರುಗಿದವು.

Continue Reading

ಕರ್ನಾಟಕ

Siddaramaiah: ನೀವು 2 ಸಾವಿರ ಕೊಟ್ಟಿದ್ದಕ್ಕೆ ದೇವರ ದರ್ಶನ; ಧರ್ಮಸ್ಥಳದಲ್ಲಿ ಸಿದ್ದರಾಮಯ್ಯಗೆ ಸ್ತ್ರೀಯರ ಮೆಚ್ಚುಗೆ

Siddaramaiah: ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್‌ ಆಗಮನ ಹಿನ್ನೆಲೆಯಲ್ಲಿ ದೇವಸ್ಥಾನ ಪ್ರವೇಶಕ್ಕೆ ಭಕ್ತರಿಗೆ ಅರ್ಧ ಗಂಟೆಯಿಂದ ನಿರ್ಬಂಧವನ್ನು ವಿಧಿಸಲಾಗಿತ್ತು. ಮೊದಲೇ ಸಾಲುಗಟ್ಟಿ ನಿಂತಿದ್ದ ಭಕ್ತರಿಗೆ ಮತ್ತೆ ಕಾಯುವುದು ಶಿಕ್ಷೆಯಾಗಿ ಪರಿಣಮಿಸಿತು. ಸಿಎಂ, ಡಿಸಿಎಂ ಬರಲು ಸಾಕಷ್ಟು ಸಮಯ ಇದ್ದರೂ ಅವಧಿಗೆ ಮುನ್ನವೇ ಭಕ್ತರನ್ನು ತಡೆಯಲಾಗಿತ್ತು. ಕಾದು ಕಾದು ಸುಸ್ತಾಗಿದ್ದ ಭಕ್ತರ ಸಿಟ್ಟು ನೆತ್ತಿಗೇರಿತ್ತು. ರಾಜಕಾರಣಿಗಳ ಕಾರಣದಿಂದಾಗಿ ದೇವರ ದರ್ಶನಕ್ಕೂ ಇಷ್ಟು ಕಾಯಬೇಕಲ್ಲ ಎಂದು ಹಿಡಿಶಾಪ ಹಾಕಿದ್ದು ಕೂಡ ಕಂಡುಬಂತು.

VISTARANEWS.COM


on

Siddaramaiah
Koo

ಮಂಗಳೂರು: ಲೋಕಸಭೆ ಚುನಾವಣೆ ಪ್ರಚಾರದ ಭರಾಟೆ ಮುಗಿದು, ತುಸು ನಿರಾಳರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ (DK Shivakumar) ಅವರು ಶನಿವಾರ (ಮೇ 25) ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ (Dharmasthala) ತೆರಳಿ, ದೇವರ ಆಶೀರ್ವಾದ ಪಡೆದರು. ಅಲ್ಲದೆ, ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರನ್ನೂ ಭೇಟಿಯಾದರು. ಇದೇ ವೇಳೆ, ಗೃಹಲಕ್ಷ್ಮೀ ಯೋಜನೆ ಅಡಿಯಲ್ಲಿ ಗೃಹಿಣಿಯರಿಗೆ ಮಾಸಿಕ 2 ಸಾವಿರ ರೂ. ನೀಡುವ ತೀರ್ಮಾನದ ಕುರಿತು ಸಿದ್ದರಾಮಯ್ಯ ಅವರಿಗೆ ಹಲವು ಹೆಣ್ಣುಮಕ್ಕಳು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಕುರಿತು ಸಿದ್ದರಾಮಯ್ಯ ಅವರೇ ಪೋಸ್ಟ್‌ ಮಾಡಿದ್ದಾರೆ.

ಧರ್ಮಸ್ಥಳ ಭೇಟಿ, ಮಹಿಳೆಯರ ಮೆಚ್ಚುಗೆ ಕುರಿತು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಸಿದ್ದರಾಮಯ್ಯ ಅವರು ಫೋಟೊಗಳ ಸಮೇತ ಪೋಸ್ಟ್‌ ಮಾಡಿದ್ದಾರೆ. “ಇಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದೇವರ ದರ್ಶನಕ್ಕೆ ತೆರಳುವ ಸಂದರ್ಭದಲ್ಲಿ ಕೆಲವು ಮಹಿಳೆಯರು ನಗುಮೊಗದಲ್ಲಿ ನನ್ನ ಬಳಿ ಬಂದು ಗೃಹಲಕ್ಷ್ಮೀ ಯೋಜನೆಯ 2,000 ರೂಪಾಯಿಯಿಂದ ನಾವು ನೆಮ್ಮದಿಯ ಬದುಕು ಕಟ್ಟಿಕೊಂಡಿದ್ದೇವೆ, ನೀವು ಶಕ್ತಿ ಯೋಜನೆ ಜಾರಿ ಮಾಡಿದ್ದರಿಂದ ಇಂದು ನಾವು ದೂರದ ಊರಿನಿಂದ ದೇವರ ದರ್ಶನಕ್ಕೆ ಬರಲು ಅನುಕೂಲ ಆಗಿದೆ, ನಿಮಗೆ ಮಂಜುನಾಥ ಸ್ವಾಮಿ ದೀರ್ಘ ಆಯಸ್ಸು, ಆರೋಗ್ಯ ನೀಡಲಿ, ಬಡವರಿಗೆ ಇನ್ನಷ್ಟು ಅನುಕೂಲ ಆಗುವಂತಹ ಕಾರ್ಯಕ್ರಮಗಳು ನಿಮ್ಮಿಂದ ಜಾರಿಯಾಗಲಿ ಎಂದು ಆಶೀರ್ವದಿಸಿದರು. ಈ ದಿನ ದೇವರ ದರ್ಶನ ಭಾಗ್ಯದ ಜೊತೆಗೆ ಹತ್ತಾರು ತಾಯಂದಿರ ಆಶೀರ್ವಾದ ಪಡೆದ ಧನ್ಯತಾಭಾವ ನನ್ನದು” ಎಂಬುದಾಗಿ ಅವರು ಪೋಸ್ಟ್‌ ಮಾಡಿದ್ದಾರೆ.

ಸಿಎಂಗೆ ಪೂರ್ಣಕುಂಭ ಸ್ವಾಗತ

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುತ್ತಿದ್ದಂತೆ ಅವರಿಗೆ ಧರ್ಮಸ್ಥಳದ ಕ್ಷೇತ್ರದ ವತಿಯಿಂದ ಪೂರ್ಣಕುಂಭ ಸ್ವಾಗತವನ್ನು ಮಾಡಲಾಯಿತು. ಧರ್ಮಸ್ಥಳದ ಪ್ರವೇಶ ದ್ವಾರದಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆಶಿಗೆ ಭವ್ಯ ಸ್ವಾಗತ ಸಿಕ್ಕಿತು. ವಾದ್ಯ ಘೋಷಗಳೊಂದಿಗೆ ಬರಮಾಡಿಕೊಳ್ಳಲಾಯಿತು. ಕ್ಷೇತ್ರದ ಪರವಾಗಿ ಧರ್ಮಸ್ಥಳ ಧರ್ಮದರ್ಶಿಗಳಾದ ಡಾ. ವೀರೇಂದ್ರ ಹೆಗ್ಗಡೆ ಅವರ ಸಹೋದರ ಹರ್ಷೇಂದ್ರ ಹೆಗ್ಗಡೆ ಸ್ವಾಗತಿಸಿದರು.

ವಿಶೇಷ ಪೂಜೆ, ಡಾ. ವೀರೇಂದ್ರ ಹೆಗ್ಗಡೆ ಭೇಟಿ

ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಶ್ರೀಕ್ಷೇತ್ರದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶೀರ್ವಾದವನ್ನು ಪಡೆದುಕೊಂಡರು. ಬಳಿಕ ಕೆಲ ಹೊತ್ತು ಚರ್ಚೆ ನಡೆಸಿದರು.

ಧರ್ಮಸ್ಥಳ ಭೇಟಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್‌, “ಸರ್ಕಾರದ ಶಕ್ತಿ ಯೋಜನೆಯಿಂದ ರಾಜ್ಯದ ಮೂಲೆ ಮೂಲೆಯಿಂದ ಹೆಚ್ಚಿನ ಭಕ್ತರು ಧರ್ಮಸ್ಥಳಕ್ಕೆ ಆಗಮಿಸಿ ಮಂಜುನಾಥನ ದರ್ಶನ ಪಡೆಯುತ್ತಿದ್ದಾರೆ ಎಂದು ಧರ್ಮದರ್ಶಿ ವೀರೇಂದ್ರ ಹೆಗ್ಗಡೆಯವರು ಸಂತೋಷ ಹಂಚಿಕೊಂಡರು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. “ನಾನು ಹಾಗೂ ಮುಖ್ಯಮಂತ್ರಿಗಳು ಮಂಜುನಾಥನ, ಅಣ್ಣಪ್ಪ ಸ್ವಾಮಿ ಹಾಗೂ ಅಮ್ಮನವರ ದರ್ಶನ ಮಾಡಿದ್ದೇವೆ. ರಾಜ್ಯದಲ್ಲಿ ಮುಂಗಾರು ಪ್ರಾರಂಭವಾಗಿದ್ದು, ಉತ್ತಮ ಮಳೆ, ಬೆಳೆಯಾಗಿ ರಾಜ್ಯದ ಜನರು ಶಾಂತಿ, ನೆಮ್ಮದಿಯಿಂದ ಇರಲಿ ಎಂದು ಪ್ರಾರ್ಥಿಸಿದ್ದೇವೆ” ಎಂದು ತಿಳಿಸಿದರು.

ಇದನ್ನೂ ಓದಿ: CM Siddaramaiah: ಸಿದ್ದು, ಡಿಕೆಶಿ ಧರ್ಮಸ್ಥಳ ದೇವಸ್ಥಾನಕ್ಕೆ ಎಂಟ್ರಿ ಕೊಡುತ್ತಿದ್ದಂತೆ ಜೈಶ್ರೀರಾಮ್‌, ಮೋದಿ ಕೀ ಜೈ ಘೋಷಣೆ!

Continue Reading

ಕರ್ನಾಟಕ

Pralhad Joshi: ಸಿಎಂ ಪತ್ರ ಬರೆದು ರಾಜಕಾರಣ ಮಾಡಿದರೆ ಪ್ರಜ್ವಲ್ ಪಾಸ್‌ಪೋರ್ಟ್ ರದ್ದಾಗಲ್ಲ: ಪ್ರಲ್ಹಾದ್‌ ಜೋಶಿ

Pralhad Joshi: ಪ್ರಜ್ವಲ್ ರೇವಣ್ಣ ಅವರನ್ನು ವಿದೇಶಕ್ಕೆ ಹಾರಲು ಬಿಟ್ಟಿದ್ದೇ ರಾಜ್ಯ ಸರ್ಕಾರ. ಈಗ ದುರುದ್ದೇಶದಿಂದ ಕೇಂದ್ರದತ್ತ ಬೆರಳು ತೋರಿಸುತ್ತಿದೆ ಎಂದು ಆರೋಪಿಸಿರುವ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣ ಏಪ್ರಿಲ್ 21 ರಂದೇ ಬೆಳಕಿಗೆ ಬಂದಿದೆ. ಪ್ರಜ್ವಲ್ ಏಪ್ರಿಲ್ 28ಕ್ಕೆ ವಿದೇಶಕ್ಕೆ ಹಾರಿದ್ದಾರೆ. ಅಷ್ಟು ದಿನ ರಾಜ್ಯ ಸರ್ಕಾರ ಏಕೆ ಸುಮ್ಮನಿತ್ತು ಎಂದು ಪ್ರಶ್ನಿಸಿದ್ದಾರೆ.

VISTARANEWS.COM


on

Union Minister Pralhad Joshi statement about Prajwal revanna case
Koo

ಹುಬ್ಬಳ್ಳಿ: ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿಗೆ, ವಿದೇಶಾಂಗ ಸಚಿವರಿಗೆ ಪತ್ರ ಬರೆದು ರಾಜಕಾರಣ ಮಾಡಿದರೆ ಪಾಸ್‌ಪೋರ್ಟ್ ರದ್ದು ಆಗಲ್ಲ. ರದ್ದು ಮಾಡಲು ಪೊಲೀಸ್‌ ಇಲಾಖೆಯಿಂದ ಸೂಕ್ತ ಮನವಿ ಮಾಡಬೇಕಾಗುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಹೇಳಿದರು.

ಹುಬ್ಬಳ್ಳಿಯಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ರಾಜಕಾರಣ ಮಾಡಲೆಂದು ಪತ್ರ ಬರೆದರೆ ಸಾಲದು. ಪೊಲೀಸ್ ಇಲಾಖೆ ಅಧಿಕೃತ ಮಾಹಿತಿ ನೀಡಬೇಕು. ಇಲ್ಲವೇ ಕೋರ್ಟ್ ಆದೇಶ ಇರಬೇಕು ಎಂದು ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದರು.

ಎಸ್‌ಐಟಿ ಈಗ ಮಾಹಿತಿ ನೀಡಿದೆ

ಪ್ರಜ್ವಲ್ ರೇವಣ್ಣ ಪ್ರಕರಣ ಸಂಬಂಧ ಎಸ್‌ಐಟಿ ಈಗ ಕೇಂದ್ರಕ್ಕೆ ಮಾಹಿತಿ ನೀಡಿದೆ. ಪ್ರಕರಣ ಬೆಳಕಿಗೆ ಬಂದು ಒಂದು ತಿಂಗಳ ಬಳಿಕ ಮೇ 21ರಂದು ಕೇಂದ್ರಕ್ಕೆ ಅಧಿಕೃತ ಮಾಹಿತಿ ನೀಡಿದೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: Uttara Kannada News: ಕಾರವಾರ ನಗರಸಭೆ ತೆರಿಗೆ ಸಂಗ್ರಹಕ್ಕೆ ವೇಗ: ಡಿಸಿ

ಕೇಂದ್ರದಿಂದ ಅತ್ಯಂತ ತ್ವರಿತ ಕ್ರಮ

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕೇಂದ್ರ ಅತ್ಯಂತ ತ್ವರಿತ ಕ್ರಮ ಕೈಗೊಂಡಿದೆ. ರಾಜ್ಯ ಸರ್ಕಾರ ಕೇಂದ್ರಕ್ಕೆ ಮಾಹಿತಿ ನೀಡಿದ ಮೇಲೆ 10 ದಿನಗಳ ಸಮಯ ಇರುತ್ತದೆ. ಅದರಂತೆ ಮೇ 21ಕ್ಕೆ ಎಸ್‌ಐಟಿ ಮಾಹಿತಿ ನೀಡುತ್ತಲೇ ಮುಂದಿನ ಕ್ರಮ ಕೈಗೊಂಡಿದೆ. ಮೇ 25ಕ್ಕೆ ಅಂದರೆ ಎರಡೇ ದಿನದಲ್ಲಿ ಆಗಲೇ ಕೇಂದ್ರ ಸರ್ಕಾರ ನೋಟಿಸ್ ಕೊಟ್ಟಿದೆ. ಕಾನೂನು ಪ್ರಕಾರ ಇನ್ನು 8 ದಿನದಲ್ಲಿ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ಜೋಶಿ ಸ್ಪಷ್ಟಪಡಿಸಿದರು.

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ರಾಜಕಾರಣ ಮಾಡುವುದಕ್ಕಿಂತ ಹೆಚ್ಚಾಗಿ ಗಂಭೀರವಾಗಿ ಪರಿಗಣಿಸಬೇಕು. ವಿದೇಶಕ್ಕೆ ಹಾರಿರುವ ಪ್ರಜ್ವಲ್‌ರನ್ನು ಹಿಡಿದು ಕರೆ ತಂದು ಶಿಕ್ಷೆಗೆ ಗುರಿಪಡಿಸಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

ಸಿಎಂ ಪತ್ರ ಬರೆದು ರಾಜಕಾರಣ ಮಾಡೋದಲ್ಲ

ಪಾಸ್‌ಪೋರ್ಟ್ ರದ್ದುಪಡಿಸುವ ವಿಚಾರದಲ್ಲಿ ಮುಖ್ಯಮಂತ್ರಿಯೇ ಅಲ್ಲ ಯಾರೂ ಪ್ರಧಾನಿಗೆ, ವಿದೇಶಾಂಗ ಸಚಿವರಿಗೆ ಪತ್ರ ಬರೆದು ರಾಜಕಾರಣ ಮಾಡೋದು ಅಲ್ಲ. ಕಾನೂನು ಪ್ರಕಾರ ಸಂಬಂಧಪಟ್ಟ ಪೊಲೀಸ್ ಇಲಾಖೆ ನೋಟಿಸ್ ನೀಡಬೇಕು. ಪ್ರಜ್ವಲ್ ತನಿಖೆಗೆ ಲಭ್ಯವಾಗುತ್ತಿಲ್ಲ ಎಂದು ಎಫ್‌ಐಆರ್‌ ಸಮೇತ ಕೇಂದ್ರಕ್ಕೆ ಅಧಿಕೃತ, ನಿರ್ಧಿಷ್ಟ ಮಾಹಿತಿ ನೀಡಬೇಕು ಅಥವಾ ಕೋರ್ಟ್ ಆದೇಶ ಹೊರಡಿಸಬೇಕು. ಇದು ವಕೀಲಿಕಿ ಮಾಡಿದ ಸಿಎಂಗೆ ಗೊತ್ತಿಲ್ಲವೆ ಎಂದು ಜೋಶಿ ಪ್ರಶ್ನಿಸಿದರು.

ವಿದೇಶಕ್ಕೆ ಹಾರಲು ಬಿಟ್ಟಿದ್ದೇ ರಾಜ್ಯ ಸರ್ಕಾರ

ಪ್ರಜ್ವಲ್ ರೇವಣ್ಣ ಅವರನ್ನು ವಿದೇಶಕ್ಕೆ ಹಾರಲು ಬಿಟ್ಟಿದ್ದೇ ರಾಜ್ಯ ಸರ್ಕಾರ. ಈಗ ದುರುದ್ದೇಶದಿಂದ ಕೇಂದ್ರದತ್ತ ಬೆರಳು ತೋರಿಸುತ್ತಿದೆ ಎಂದು ಜೋಶಿ ಆರೋಪಿಸಿದರು.

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಏಪ್ರಿಲ್ 21ರಂದೇ ಬೆಳಕಿಗೆ ಬಂದಿದೆ. ಪ್ರಜ್ವಲ್ ಏಪ್ರಿಲ್ 28ಕ್ಕೆ ವಿದೇಶಕ್ಕೆ ಹಾರಿದ್ದಾರೆ. ಅಷ್ಟು ದಿನ ರಾಜ್ಯ ಸರ್ಕಾರ ಏಕೆ ಸುಮ್ಮನಿತ್ತು? ಆಗಲೇ ಏಕೆ ಬಂಧಿಸಲಿಲ್ಲ? ಈ ಪ್ರಶ್ನೆಗಳಿಗೆ ಇನ್ನುವರೆಗೂ ಸಿಎಂ ಬಳಿ ಉತ್ತರವಿಲ್ಲ ಎಂದು ಜೋಶಿ ಹೇಳಿದರು.

ಕೇಂದ್ರ ರೆಡ್ ಅಲರ್ಟ್ ಘೋಷಿಸುತ್ತಿತ್ತು

ಏಪ್ರಿಲ್ 21, 22ರಂದೇ ರಾಜ್ಯ ಸರ್ಕಾರ ಭಾರತ ಸರ್ಕಾರಕ್ಕೆ ಅಧಿಕೃತ ಮಾಹಿತಿ ಕೊಟ್ಟಿದ್ದರೆ, ಕೇಂದ್ರ ಅಂದೇ ಎಲ್ಲಾ ವಿಮಾನ ನಿಲ್ದಾಣಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡುತ್ತಿತ್ತು. ಪ್ರಜ್ವಲ್ ವಿದೇಶಕ್ಕೆ ಹಾರಲು ಅವಕಾಶ ಕೊಡುತ್ತಿರಲಿಲ್ಲ. ಆದರೆ, ಪ್ರಕರಣ ಬೆಳಕಿಗೆ ಬಂದು ಒಂದು ತಿಂಗಳ ಬಳಿಕ ಕೇಂದ್ರಕ್ಕೆ ಅಧಿಕೃತ ಮಾಹಿತಿ ನೀಡಿದ್ದಾರೆ ಎಂದು ಪ್ರಲ್ಹಾದ ಜೋಶಿ ತಿಳಿಸಿದರು.

ಇದನ್ನೂ ಓದಿ: Fire Accident: ಗೇಮಿಂಗ್‌ ಜೋನ್‌ನಲ್ಲಿ ಅಗ್ನಿ ದುರಂತ; ಮಹಿಳೆಯರು, ಮಕ್ಕಳು ಸೇರಿ 24 ಮಂದಿ ದಾರುಣ ಸಾವು

ಪ್ರಜ್ವಲ್ ರೇವಣ್ಣ ಪ್ರಕರಣ ಗಂಭೀರವಾಗಿದ್ದರೂ ರಾಜ್ಯ ಸರ್ಕಾರ ಅದರಲ್ಲಿ ರಾಜಕಾರಣ ಮಾಡುತ್ತಿದೆ. ಆದರೆ, ಕೇಂದ್ರ ಸರ್ಕಾರ ಕಾನೂನು ಕ್ರಮವನ್ನು ಅನುಸರಿಸುತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು.

Continue Reading
Advertisement
Fire Accident
ಸಂಪಾದಕೀಯ4 hours ago

ವಿಸ್ತಾರ ಸಂಪಾದಕೀಯ: ಗುಜರಾತ್ ಬೆಂಕಿ ದುರಂತ ನಮಗೆ ಎಚ್ಚರಿಕೆಯ ಪಾಠವಾಗಲಿ

election commission
ಪ್ರಮುಖ ಸುದ್ದಿ4 hours ago

Election Commission : ಶೀಘ್ರದಲ್ಲೇ ಜಮ್ಮು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ; ಚುನಾವಣಾ ಆಯೋಗ

Fire Accident
ಪ್ರಮುಖ ಸುದ್ದಿ4 hours ago

Fire Accident: 9 ಮಕ್ಕಳು ಸೇರಿ 27 ಜನರ ಸಾವಿಗೆ ಕಾರಣವಾದ ಗೇಮಿಂಗ್‌ ಜೋನ್‌ಗೆ NOCಯೇ ಇರ್ಲಿಲ್ಲ!

Virat kohli
ಪ್ರಮುಖ ಸುದ್ದಿ5 hours ago

Virat kohli : ಕೊಹ್ಲಿ ಹೆಸರು ಕೂಗಿ ಪಾಕಿಸ್ತಾನ ಬೌಲರ್​​ನನ್ನು ಲೇವಡಿ ಮಾಡಿದ ಅಭಿಮಾನಿಗಳು; ಇಲ್ಲಿದೆ ವಿಡಿಯೊ

Union Minister Pralhad Joshi latest statement about channagiri case
ಕರ್ನಾಟಕ5 hours ago

Pralhad Joshi: ನೇಹಾ, ಅಂಜಲಿ ಹತ್ಯೆ ಪ್ರಕರಣದಲ್ಲಿ ಕೈಗೊಳ್ಳದ ಕ್ರಮ ಚನ್ನಗಿರಿ ಪ್ರಕರಣದಲ್ಲಿ ಏಕೆ ಎಂದ ಪ್ರಲ್ಹಾದ್‌ ಜೋಶಿ

childrens summer camp closing ceremony at yallapur
ಉತ್ತರ ಕನ್ನಡ6 hours ago

Uttara Kannada News: ಭಾರತದ ಭವಿಷ್ಯ ಸಣ್ಣ ಸಣ್ಣ ಊರುಗಳಲ್ಲಿದೆ: ಹರಿಪ್ರಕಾಶ್‌ ಕೋಣೆಮನೆ

Hardik Pandya
ಪ್ರಮುಖ ಸುದ್ದಿ6 hours ago

Hardik Pandya : ಮೊದಲ ಲವ್​ ಬ್ರೇಕ್​ಅಪ್​ ಮಾಡಿಕೊಂಡಿದ್ದ ಪಾಂಡ್ಯ; ಇಲ್ಲಿದೆ ಆರಂಭದ ಪ್ರೇಮ ಕಹಾನಿ!

Siddaramaiah
ಕರ್ನಾಟಕ6 hours ago

Siddaramaiah: ನೀವು 2 ಸಾವಿರ ಕೊಟ್ಟಿದ್ದಕ್ಕೆ ದೇವರ ದರ್ಶನ; ಧರ್ಮಸ್ಥಳದಲ್ಲಿ ಸಿದ್ದರಾಮಯ್ಯಗೆ ಸ್ತ್ರೀಯರ ಮೆಚ್ಚುಗೆ

Shikhar Dhawan
ಪ್ರಮುಖ ಸುದ್ದಿ6 hours ago

Shikhar Dhawan : ಶಿಖರ್ ಧವನ್ ಮಿಥಾಲಿ ರಾಜ್ ಮದುವೆ? ಬಗ್ಗೆ ಮೌನ ಮುರಿದ ಭಾರತದ ಸ್ಟಾರ್

Union Minister Pralhad Joshi statement about Prajwal revanna case
ಕರ್ನಾಟಕ6 hours ago

Pralhad Joshi: ಸಿಎಂ ಪತ್ರ ಬರೆದು ರಾಜಕಾರಣ ಮಾಡಿದರೆ ಪ್ರಜ್ವಲ್ ಪಾಸ್‌ಪೋರ್ಟ್ ರದ್ದಾಗಲ್ಲ: ಪ್ರಲ್ಹಾದ್‌ ಜೋಶಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ12 hours ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ3 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ4 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು5 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು5 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ6 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ7 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ7 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ7 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ಟ್ರೆಂಡಿಂಗ್‌