Love Jihad : ಲವ್‌ ಜಿಹಾದ್‌ ಸುಳಿಯಲ್ಲಿ ಬೆಂಗಳೂರು ಟೆಕ್ಕಿ; ಕಾಶ್ಮೀರಿ ಮುಸ್ಲಿಂ ಯುವಕನಿಂದ ರಕ್ಷಿಸಲು ಪೊಲೀಸರ ಮೊರೆ - Vistara News

ಕರ್ನಾಟಕ

Love Jihad : ಲವ್‌ ಜಿಹಾದ್‌ ಸುಳಿಯಲ್ಲಿ ಬೆಂಗಳೂರು ಟೆಕ್ಕಿ; ಕಾಶ್ಮೀರಿ ಮುಸ್ಲಿಂ ಯುವಕನಿಂದ ರಕ್ಷಿಸಲು ಪೊಲೀಸರ ಮೊರೆ

VISTARANEWS.COM


on

Love jihad
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ʻʻನಾನು ಲವ್‌ ಜಿಹಾದ್‌ಗೆ (Love Jihad) ಒಳಗಾಗಿದ್ದೇನೆ. ದಯವಿಟ್ಟು ನನ್ನನ್ನು ಆ ಮುಸ್ಲಿಂ ಯುವಕನಿಂದ ರಕ್ಷಿಸಿʼʼ-ಹೀಗೆಂದು ಬೆಂಗಳೂರಿನ ಮಹಿಳಾ ಟೆಕ್ಕಿಯೊಬ್ಬರು (Woman Software Engineer) ಪೊಲೀಸರ ಮೊರೆ ಹೊಕ್ಕಿದ್ದಾರೆ. ಜಾಲತಾಣ ಎಕ್ಸ್‌ನಲ್ಲಿ (X post) ಪೊಲೀಸರಿಗೆ ಮನವಿ ಮಾಡಿರುವ ಅವರು ನಾನು ನಂಬಿ ಮೋಸ ಹೋಗಿದ್ದೇನೆ. ಈಗ ಅವನು ಬೆದರಿಸುತ್ತಿದ್ದಾನೆ, ನನ್ನನ್ನು ರಕ್ಷಿಸಿ ಎಂದು ಕೇಳಿಕೊಂಡಿದ್ದಾರೆ.

ಎಲೆಕ್ಟ್ರಾನಿಕ್ ಸಿಟಿ ಸಮೀಪದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಈ ಯುವತಿ ಬೆಂಗಳೂರು ಸಿಟಿ ಪೊಲೀಸರು ಮಾತ್ರವಲ್ಲದೆ, ಪ್ರಧಾನಿ ನರೇಂದ್ರ ಮೋದಿ, ರಾಜ್ಯ ಪೊಲೀಸ್‌ ಮಹಾನಿರ್ದೇಶಕರು ಅಷ್ಟೇ ಅಲ್ಲ ಕಾಶ್ಮೀರ ಪೊಲೀಸರ ಬಳಿಯೂ ತಮ್ಮ ನೋವು ಹಂಚಿಕೊಂಡಿದ್ದಾರೆ. ಹೇಗಾದರೂ ಮಾಡಿ ಬಚಾವ್‌ ಮಾಡಿ ಎಂದು ಇನ್ನಷ್ಟು ಮಂದಿಗೆ ಟ್ವೀಟ್‌ ಮಾಡಿರುವುದು ಬೆಳಕಿಗೆ ಬಂದಿದೆ. ಇದು ಆಕೆ ಇರುವ ಸ್ಥಿತಿಯನ್ನು ತೋರಿಸುತ್ತದೆ.

ʻʻನಾನು ಲವ್ ಜಿಹಾದ್‌ಗೆ ಒಳಗಾಗಿದ್ದೇನೆ. ನನ್ನ ಮೇಲೆ ಅತ್ಯಾಚಾರ ನಡೆದಿದೆ. ಬಲವಂತವಾಗಿ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ನಡೆದಿದೆ. ನಾನು ಅಪಾಯದಲ್ಲಿದ್ದೇನೆ. ತುರ್ತಾಗಿ ನನಗೆ ಬೆಂಗಳೂರು ಪೊಲೀಸರ ಸಹಾಯ ಬೇಕಿದೆʼʼ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಬೆಂಗಳೂರು ಪೊಲೀಸರು ಇದಕ್ಕೆ ಪ್ರತಿಕ್ರಿಯೆ ನೀಡಿದ್ದು, ಸಹಾಯಕ್ಕೆ ಸಿದ್ಧ ಎಂದು ಸ್ಪಷ್ಟಪಡಿಸಿದ್ದಾರೆ. ಈ ಟ್ವೀಟ್‌ ಸಂಬಂಧ ಬೆಳ್ಳಂದೂರು ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

ಏನಿದು ಲವ್‌ ಜಿಹಾದ್‌ ಮತ್ತು ಮೋಸದ ಆರೋಪ?

ಯುವತಿ ಮಾಡಿರುವ ಟ್ವೀಟ್‌ಗಳು, ಹೇಳಿಕೊಂಡಿರುವ ವಿಚಾರಗಳ ಒಟ್ಟಾರೆ ತಾತ್ಪರ್ಯ ಏನೆಂದರೆ, ಈ ಯುವತಿ ಮತ್ತು ಕಾಶ್ಮೀರದ ಯುವಕ ಪರಸ್ಪರ ಪರಿಚಯ ಆಗಿದ್ದು ಫೇಸ್‌ ಬುಕ್‌ ಮೂಲಕ. ಮೊದಲು ಪರಸ್ಪರ ಚಾಟ್‌ ಮಾಡುತ್ತಿದ್ದ ಅವರು ಬಳಿಕ ಭೇಟಿಯಾಗಿದ್ದಾರೆ. ಮೊದಲಿದ್ದ ಸ್ನೇಹದ ಗೆರೆ ದಾಟಿ ಪ್ರೇಮಿಸಲು ಆರಂಭಿಸಿದ್ದಾರೆ. ಬಳಿಕ ಅದು ಸಂಬಂಧವಾಗಿ ಮುಂದುವರಿದಿದೆ.

ಮದುವೆಯಾಗುವುದಾಗಿ ನಂಬಿಸಿದ ಕಾಶ್ಮೀರದ ಮುಸ್ಲಿಂ ಯುವಕ ಆಕೆಯ ಜತೆ ದೈಹಿಕ ಸಂಪರ್ಕವನ್ನೂ ನಡೆಸಿದ್ದಾನೆ. ಇದನ್ನೆಲ್ಲ ನಂಬಿದ ಯುವತಿ 2019ರಿಂದಲೇ ಆತನ ಜತೆಗೆ ಲಿವಿಂಗ್‌ ಟುಗೆದರ್‌ ಮಾದರಿಯಲ್ಲಿ ಸಹಜೀವನ ನಡೆಸುತ್ತಿದ್ದಾಳೆ.

ಈ ನಡುವೆ ಆತ ಮದುವೆಯಾಗಬೇಕೆಂದಾದರೆ ಇಸ್ಲಾಂ ಧರ್ಮಕ್ಕೆ ಮತಾಂತರ ಆಗಬೇಕು ಎಂದು ಬಲವಂತ ಮಾಡಿದ್ದಾನೆ. ಯುವತಿಗೆ ಮತಾಂತರವಾಗುವುದು ಇಷ್ಟವಿಲ್ಲದಿದ್ದರೂ ಬೆದರಿಸಿ ಧರ್ಮ ಬದಲಾವಣೆ ಮಾಡಲಾಗಿದೆ.

ಇವರಿಬ್ಬರು ಒಂದೇ ಮನೆಯಲ್ಲಿ ವಾಸವಾಗಿದ್ದರಿಂದ ಅವರ ನಡುವೆ ಹಣಕಾಸಿನ ವ್ಯವಹಾರವೂ ಇತ್ತು ಎನ್ನಲಾಗಿದೆ. ಈ ನಡುವೆ, ಮತಾಂತರವಾದ ಬಳಿಕ ನಾನು ಮದುವೆಯಾಗುವುದಿಲ್ಲ ಎಂದು ಯುವಕ ಹೇಳಿದ್ದಾನೆ. ಆಕೆಯಿಂದ ತಪ್ಪಿಸಿಕೊಳ್ಳುತ್ತಿರುವ ಯುವಕ ಜತೆಗೆ ಪ್ರಾಣ ಬೆದರಿಕೆಯನ್ನೂ ಹಾಕುತ್ತಿದ್ದಾನೆ ಎನ್ನಲಾಗಿದೆ.

ಒಂದು ಕಡೆ ಯುವತಿ ಹಣಕಾಸಿನ ವ್ಯವಹಾರವನ್ನೇ ಪ್ರಧಾನವಾಗಿ ಹೇಳಿದರೆ ಇನ್ನೊಂದು ಕಡೆ ಲವ್‌ ಜಿಹಾದ್‌ಗೆ ಒಳಗಾಗಿದ್ದೇನೆ ಎನ್ನುತ್ತಿದ್ದಾಳೆ.

ಆಕೆ ಮಾಡಿರುವ ಟ್ವೀಟ್‌ಗಳನ್ನು ಹಲವಾರು ಮಂದಿ ರಾಜಕೀಯ ನಾಯಕರಿಗೆ ಟ್ಯಾಗ್‌ ಮಾಡಿದ್ದಾರೆ. ಬೆಂಗಳೂರು ಪೊಲೀಸರು ಆಕೆ ಯಾರು ಎಂದು ಪತ್ತೆ ಹಚ್ಚಲು ಮುಂದಾಗಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕೊಪ್ಪಳ

Road Accident : ಕೊಪ್ಪಳದಲ್ಲಿ ಟಿಪ್ಪರ್‌ ಹರಿದು ಬೈಕ್‌ ಸವಾರ ಸಾವು

Road Accident : ಪ್ರತ್ಯೇಕ ಕಡೆಗಳಲ್ಲಿ ರಸ್ತೆ ಅಪಘಾತಗಳು ನಡೆದಿದ್ದು, ಕೊಪ್ಪಳದಲ್ಲಿ ಲಾರಿ ಹರಿದು ಬೈಕ್‌ ಸವಾರ ಮೃತಪಟ್ಟಿದ್ದಾರೆ. ಮೈಸೂರಿನಲ್ಲಿ ಬಸ್‌ ಹಿಂಬದಿಗೆ ಬೊಲೆರೋ ಡಿಕ್ಕಿ ಹೊಡೆದು, ಕಾರವಾರದಲ್ಲಿ ಅಡ್ಡ ಬಂದ ಜಾನುವಾರು ತಪ್ಪಿಸಲು ಹೋಗಿ ಹೈವೇಯಲ್ಲಿ ಸರಣಿ ಅಪಘಾತ ಸಂಭವಿಸಿದೆ.

VISTARANEWS.COM


on

By

road Accident
Koo

ಕೊಪ್ಪಳ: ಟಿಪ್ಪರ್ ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲೇ (Road Accident) ಮೃತಪಟ್ಟಿದ್ದಾರೆ. ಕೊಪ್ಪಳ ತಾಲೂಕಿನ ಕಾಸನಕಂಡಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ವೇಗವಾಗಿ ಬಂದ ಟಿಪ್ಪರ್ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಹಾರಿದ ಸವಾರ ಟಿಪ್ಪರ್ ವಾಹನದ ವ್ಹೀಲ್‌ಗೆ ಸಿಲುಕಿ ಮೃತಪಟ್ಟಿದ್ದಾರೆ.

ಮೃತನ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಮುನಿರಾಬಾದ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮುನಿರಾಬಾದ್‌ ಪೊಲೀಸ್‌ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಬಸ್‌ ಹಿಂಬದಿಗೆ ಗುದ್ದಿದ ಬೊಲೆರೋ

ಕೆಎಸ್‌ಆರ್‌ಟಿಸಿ ಬಸ್‌ಗೆ ಹಿಂಬದಿಯಿಂದ ಬಂದ ಬೊಲೆರೋ ವಾಹನ ಡಿಕ್ಕಿ ಹೊಡೆದಿದೆ. ಮೈಸೂರಿನ ಆಲನಹಳ್ಳಿ ರಿಂಗ್ ರೋಡ್ ಬಳಿ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್‌ ಅಪಘಾತದಲ್ಲಿ ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲ. ಸ್ವಲ್ಪದರಲ್ಲಿ ಭಾರಿ ಅನಾಹುತ ತಪ್ಪಿದ್ದು, ವಾಹನಗಳ ಮುಂಭಾಗ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

ಅಡ್ಡ ಬಂದ ಜಾನುವಾರು; ಹೈವೇಯಲ್ಲಿ ಸರಣಿ ಅಪಘಾತ

ಉತ್ತರಕನ್ನಡ ಜಿಲ್ಲೆಯ ಕಾರವಾರದ ರಾಷ್ಟ್ರೀಯ ಹೆದ್ದಾರಿ 66ರ ಅರಗಾ ಗ್ರಾಮದ ಬಳಿ ಏಕಾಏಕಿ ಜಾನುವಾರು ಅಡ್ಡ ಬಂದಿದೆ. ಜಾನುವಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಎರಡು ಕಾರು, ಬಸ್ ನಡುವೆ ಸರಣಿ ಅಪಘಾತ ಸಂಭವಿಸಿದೆ. ಅಂಕೋಲಾ ಭಾಗದಿಂದ ಕಾರವಾರದತ್ತ ಆಗಮಿಸುತ್ತಿದ್ದ ಸ್ಕಾರ್ಪಿಯೋ ಕಾರಿಗೆ ದನ ಎದುರಾಗಿದ್ದರಿಂದ ಚಾಲಕ ಸಡನ್‌ ಬ್ರೇಕ್ ಹಾಕಿದ್ದಾನೆ.

ಇದೇ ವೇಳೆ ಹಿಂಬದಿಯಿಂದ ಬರುತ್ತಿದ್ದ ಡಿಸೈರ್ ಕಾರು ಚಾಲಕ ಸಹ ಬ್ರೇಕ್ ಹಾಕಿ ನಿಲ್ಲಿಸಿದ್ದ. ಆದರೆ ಹಿಂದಿನಿಂದ ಬಂದ ಸರ್ಕಾರಿ ಬಸ್ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದಿದೆ. ಬಸ್ ಗುದ್ದಿದ ಪರಿಣಾಮ ಮುಂದಿದ್ದ ಸ್ಕಾರ್ಪಿಯೋಗೆ ಗುದ್ದಿ ಕಾರು ಜಖಂಗೊಂಡಿದೆ. ಇತ್ತ ಬಸ್ ಡಿಕ್ಕಿಯಾದ ಪರಿಣಾಮ ಕಾರೊಂದು ದನಕ್ಕೆ ಗುದ್ದಿದೆ. ಡಿಸೈರ್ ಕಾರಿನಲ್ಲಿದ್ದ ವೃದ್ಧೆಗೆ ಸಣ್ಣಪುಟ್ಟ ಗಾಯವಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾರಿನಲ್ಲಿದ್ದವರನ್ನು ಕೆಳಗಿಳಿಸಿದ ಸ್ಥಳೀಯರು ಗಾಯಾಳುಗಳು ಕಾರವಾರ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಕಾರವಾರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

MUDA site scandal: ಸಿಎಂ ಆಪ್ತ ರಾಕೇಶ್‌ ಪಾಪಣ್ಣಗೆ ಹಂಚಿಕೆಯಾಗಿದ್ದ ಮುಡಾ ಸೈಟ್‌ಗೂ ತಡೆ!

MUDA site scandal: ಈ ಮೊದಲು ನ್ಯಾಯಾಲಯ ಆದೇಶದಂತೆ ರಾಕೇಶ್‌ ಪಾಪಣ್ಣಗೆ ಬದಲಿ ನಿವೇಶನ ಹಂಚಿಕೆ ಆಗಿತ್ತು. ಹಂಚಿಕೆ ವೇಳೆ ತಪ್ಪಾಗಿದೆ ಎಂದು ಗೊತ್ತಾಗಿದೆ. ಈಗ ಅದನ್ನೂ ತಡೆ ಹಿಡಿಯಲಾಗಿದೆ ಎಂದು ಮುಡಾ ಅಧ್ಯಕ್ಷ ಮರಿಗೌಡ ತಿಳಿಸಿದ್ದಾರೆ.

VISTARANEWS.COM


on

MUDA site scandal
Koo

ಮೈಸೂರು: ಮುಡಾ ನಿವೇಶನ ಹಗರಣ (MUDA site scandal) ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಕಾನೂನು ಬಾಹಿರವಾಗಿ ಹಂಚಿಕೆಯಾದ ಸೈಟ್‌ಗಳನ್ನು ಅಮಾನತು ಮಾಡಿ, ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಆದೇಶ ನೀಡಿತ್ತು. ಇದೀಗ ಸಿಎಂ ಆಪ್ತ, ಜಿಪಂ ಮಾಜಿ ಸದಸ್ಯ ರಾಕೇಶ್‌ ಪಾಪಣ್ಣಗೆ ಹಂಚಿಕೆಯಾಗಿದ್ದ ಸೈಟ್‌ ಅನ್ನೂ ತಡೆ ಹಿಡಿದಿರುವುದು ಕಂಡುಬಂದಿದೆ.

ಸಿಎಂ ಆಪ್ತ ರಾಕೇಶ್‌ ಪಾಪಣ್ಣಗೆ ಮುಡಾ ಬದಲಿ ನಿವೇಶನ ಹಂಚಿಕೆ ವಿಚಾರದ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮುಡಾ ಅಧ್ಯಕ್ಷ ಕೆ. ಮರಿಗೌಡ ಪ್ರತಿಕ್ರಿಯಿಸಿ, ನಿವೇಶನ ಹಂಚಿಕೆ ತಡೆ ಹಿಡಿಯಲಾಗಿದೆ. ಈ ಮೊದಲು ನ್ಯಾಯಾಲಯ ಆದೇಶದಂತೆ ಬದಲಿ ನಿವೇಶನ ಹಂಚಿಕೆ ಆಗಿತ್ತು. ಹಂಚಿಕೆ ವೇಳೆ ತಪ್ಪಾಗಿದೆ ಎಂದು ಗೊತ್ತಾಗಿದೆ. ಈಗ ಅದನ್ನೂ ತಡೆ ಹಿಡಿಯಲಾಗಿದೆ ಎಂದು ತಿಳಿಸಿದ್ದಾರೆ.

ಹಿನ್‌ಕಲ್ ಸರ್ವೆ ನಂ.211ರಲ್ಲಿ 3.05 ಗುಂಟೆ ಜಮೀನು ಸಂಬಂಧಿಸಿದ ಪ್ರಕರಣದಲ್ಲಿ 1981ರಲ್ಲಿ ಸ್ವಾದೀನ ಪಡೆದು, 1984ರಲ್ಲಿ ಕೈ ಬಿಡಲಾಗಿತ್ತು. ಅದಕ್ಕೆ 2024ರ ಜೂನ್‌ 12 ರಂದು ಪರಿಹಾರ ಕೊಡಲಾಗಿತ್ತು. 36,753 ಚದರ ಅಡಿ ಪರಿಹಾರ ಕೊಡಲಾಗಿತ್ತು. ಇದಕ್ಕಾಗಿ ವಿಜಯನಗರದ ವಿವಿಧ ಬಡಾವಣೆಗಳಲ್ಲಿ‌ 20 ನಿವೇಶನ ಕೊಟ್ಟು ಆದೇಶ ಮಾಡಲಾಗಿತ್ತು. ಈಗ ಆ ದೇಶಕ್ಕೂ ತಡೆ ಬಿದ್ದಿದೆ ಎಂದು ಹೇಳಿದ್ದಾರೆ.

ಎಂಎಲ್‌ಸಿ ಎಚ್. ವಿಶ್ವನಾಥ್ ಕೂಡ ಮುಡಾದಿಂದ ಬದಲಿ ನಿವೇಶನ ಪಡೆದಿದ್ದಾರೆ. ದೇವನೂರು 3ನೇ ಹಂತದ ಬದಲು ಮುಖ್ಯರಸ್ತೆಯಲ್ಲಿ ವಿಶ್ವನಾಥ್ ಪತ್ನಿ ಶಾಂತಮ್ಮ ಅವರ ಹೆಸರಿನಲ್ಲಿ 2017ರಲ್ಲಿ 60×40 ಅಳತೆಯ ಬದಲಿ ನಿವೇಶನ ಪಡೆದಿದ್ದಾರೆ. ರಾಜಕೀಯವಾಗಿ ದಿವಾಳಿಯಾಗಿರುವ ಅವರು ಈಗ ಕೀಳು ಮಟ್ಟದ ರಾಜಕಾರಣ ಮಾಡುತ್ತಿದ್ದಾರೆ. ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಎಚ್‌.ವಿಶ್ವನಾಥ್‌ಗೂ ಬದಲಿ ನಿವೇಶನ

50-50 ಅನುಪಾತದಲ್ಲಿ ಸಿಎಂ ಕುಟುಂಬ ನಿಯಮಬಾಹಿರ ಸೈಟ್ ಪಡೆದ ಆರೋಪದ ಬಗ್ಗೆ ಶಾಸಕ ಹರೀಶ್‌ಗೌಡ ಪ್ರತಿಕ್ರಿಯಿಸಿ, ಇಡೀ ಪ್ರಕರಣದಲ್ಲಿ ಸಿಎಂ ಹಾಗೂ ಅವರ ಕುಟುಂಬ ಕಾನೂನಾತ್ಮಕವಾಗಿ ಇದೆ. ಇಲ್ಲಿ ಮುಡಾ, ಸಿಎಂ ಕುಟುಂಬಕ್ಕೆ 75 ಸಾವಿರ ಚದರ ಅಡಿ ಜಾಗ ಕೊಡಬೇಕಿತ್ತು. ಆದರೂ ಕೊಟ್ಟಿರುವ 38 ಸಾವಿರ ಚದ ಅಡಿಗೆ ನಮ್ಮ ನಾಯಕರ ತೃಪ್ತಿ ಪಟ್ಟುಕೊಂಡಿದ್ದಾರೆ. ಅಂತಹವರ ಮೇಲೆ ಸುಳ್ಳು ಆರೋಪ ಮಾಡೋದು ಸರಿಯಲ್ಲ. ಇಂತಹ ಆರೋಪ ಮಾಡುತ್ತಿರುವ ಎಚ್‌.ವಿಶ್ವನಾಥ್ ಕೂಡ ದೇವನೂರು ಬಡಾವಣೆಯಲ್ಲಿ ಬದಲಿ ನಿವೇಶನ ಪಡೆದಿದ್ದಾರೆ.
ಅವರ ಪತ್ನಿ ಶಾಂತಮ್ಮ ಹೆಸರಲ್ಲಿ ನಿವೇಶನ ಪಡೆದಿದ್ದರು. ನಿವೇಶನ ಸಂಖ್ಯೆ 2,525ರ ಬದಲಾಗಿ ಹೈವೆ ಬಳಿ ಬರುವ ನಿವೇಶನ ಸಂಖ್ಯೆ 307 ಅನ್ನು ಪಡೆದಿದ್ದಾರೆ. ಅಂತಹವರು ಸಿಎಂ ಬಗ್ಗೆ ಮಾತನಾಡುವಾಗ ಸರಿಯಾಗಿ ಮಾತನಾಡಬೇಕು ಎಂದರು.

ವಿಶ್ವನಾಥ್‌ರಂತಹ ದಿವಾಳಿ ರಾಜಕಾರಣಿ ಇನ್ನೊಬ್ಬ ಇಲ್ಲ. ಇಡೀ ಪ್ರಕರಣದಲ್ಲಿ ಅಕ್ರಮ ಎಸಗಿರುವ ಎಲ್ಲರ ಬಗ್ಗೆಯೂ ತನಿಖೆ ನಡೆಯುತ್ತಿದೆ. ಸದ್ಯದಲ್ಲೇ ಸತ್ಯಾಸತ್ಯತೆ ಹೊರ ಬರಲಿದೆ ಎಂದು ಹೇಳಿದರು.

50:50 ಅನುಪಾತದಲ್ಲಿ ನಿವೇಶನ ಕೊಡಲಿಕ್ಕೆ 2015ರಲ್ಲೇ ಗೆಜೆಟ್ ನೋಟಿಫಿಕೇಶನ್ ಆಗಿದೆ. ಆಗ 60:40 ಅನುಪಾತದಲ್ಲಿ ನೀಡಬೇಕೆಂದು ಆದೇಶ ಇದೆ. ಅದಾದ ಬಳಿಕ 2020ರಲ್ಲಿ 50:50 ಅನುಪಾತದಲ್ಲಿ ನಿವೇಶನ ನೀಡಲಿಕ್ಕೆ ಪ್ರಾಧಿಕಾರ ನಿರ್ಣಯ ಮಾಡಿತು ಎಂದು ತಿಳಿಸಿದರು.

Continue Reading

ಪ್ರಮುಖ ಸುದ್ದಿ

Steel Flyover: ಬೆಂಗಳೂರಿನ ಮೊದಲ ಸ್ಟೀಲ್‌ ಫ್ಲೈಓವರ್‌ ಸೇತುವೆಯಲ್ಲಿ ಬಿರುಕು

Steel Flyover: ಉದ್ಘಾಟನೆಯಾದ ಎರಡನೇ ವರ್ಷದ ಒಳಗೆ ಮೇಲ್ಸೇತುವೆ ಜಾಯಿಂಟ್ ಬಿರುಕು ಬಿಟ್ಟಿದೆ. ಬಿಹಾರದಲ್ಲಿ ಕಂಡುಬರುತ್ತಿರುವ ಸಾಲು ಸಾಲು ಸೇತುವೆಗಳ ಕುಸಿತದ ನಡುವೆ ಈ ಸೇತುವೆಯ ಬಿರುಕು ಆತಂಕ ಮೂಡಿಸಿದೆ. ಪಾಲಿಕೆ ಅಧಿಕಾರಿಗಳ ಕಳಪೆ ಕಾಮಗಾರಿ ಹಾಗೂ ಕಳಪೆ ನಿರ್ವಹಣೆಗೆ ವಾಹನ ಸವಾರರು ಕೆರಳಿ ಕೆಂಡವಾಗಿದ್ದಾರೆ.

VISTARANEWS.COM


on

steel flyover bridge shivananda circle
Koo

ಬೆಂಗಳೂರು: ಮತ್ತೊಮ್ಮೆ ಬಿಬಿಎಂಪಿ (BBMP) ಕಳಪೆ ಕಾಮಗಾರಿ ಬಟಾ ಬಯಲಾಗಿದ್ದು, ಶಿವಾನಂದ ಸರ್ಕಲ್‌ನಲ್ಲಿ (Shivananda Circle) ನಿರ್ಮಿಸಲಾಗಿರುವ ಬೆಂಗಳೂರಿನ (Bangalore) ಚೊಚ್ಚಲ ಸ್ಟೀಲ್ ಫ್ಲೈ ಓವರ್ ಬ್ರಿಡ್ಜ್‌ನ (Steel Flyover Bridge) ಜಾಯಿಂಟ್‌ನಲ್ಲಿ ಬಿರುಕು ಕಾಣಿಸಿಕೊಂಡಿದೆ.

ಲೋಕಾರ್ಪಣೆಗೊಂಡ ಎರಡೇ ವರ್ಷದಲ್ಲಿ ಸ್ಟೀಲ್ ಬ್ರಿಡ್ಜ್ ಬಿರುಕು ಬಿಟ್ಟಿದ್ದು, ಮೇಲೆ ನಿಂತರೆ ನೆಲ ಕಾಣುವಷ್ಟರ ಮಟ್ಟಿಗೆ ಕಂದಕ ಮೇಲ್ಸೇತುವೆಯಲ್ಲಿ ಕಾಣಿಸಿಕೊಂಡಿದೆ. ಶಿವಾನಂದ ಸರ್ಕಲ್‌ನ ಬೆಂಗಳೂರು ಕೆಫೆ ಬಳಿ ಇರುವ ಪಿಲ್ಲರ್ ಮೇಲಿನ ಜಾಯಿಂಟ್ ಕ್ರ್ಯಾಕ್ ಆಗಿದ್ದು, ಇದೀಗ ಈ ಸೇತುವೆಯ ಮೇಲಿನ ಪ್ರಯಾಣ ಅಪಾಯಕ್ಕೆ ಆಹ್ವಾನ ನೀಡುತ್ತಿದೆ.

ಉದ್ಘಾಟನೆಯಾದ ಎರಡನೇ ವರ್ಷದ ಒಳಗೆ ಮೇಲ್ಸೇತುವೆ ಜಾಯಿಂಟ್ ಬಿರುಕು ಬಿಟ್ಟಿದೆ. ಬಿಹಾರದಲ್ಲಿ ಕಂಡುಬರುತ್ತಿರುವ ಸಾಲು ಸಾಲು ಸೇತುವೆಗಳ ಕುಸಿತದ ನಡುವೆ ಈ ಸೇತುವೆಯ ಬಿರುಕು ಆತಂಕ ಮೂಡಿಸಿದೆ. ಪಾಲಿಕೆ ಅಧಿಕಾರಿಗಳ ಕಳಪೆ ಕಾಮಗಾರಿ ಹಾಗೂ ಕಳಪೆ ನಿರ್ವಹಣೆಗೆ ವಾಹನ ಸವಾರರು ಕೆರಳಿ ಕೆಂಡವಾಗಿದ್ದಾರೆ.

500 ಮೀಟರ್ ಉದ್ದದ ಮೇಲ್ಸೇತುವೆ 40 ಕೋಟಿ ವೆಚ್ಚದಲ್ಲಿ ನಿರ್ಮಾಣ ಆಗಿದೆ. 2022ರಲ್ಲಿ ಇದು ಲೋಕಾರ್ಪಣೆಗೊಂಡಿತ್ತು. ಅರ್ಧ ಕಿಲೋಮೀಟರ್ ಉದ್ದದ ಮೇಲ್ಸೇತುವೆಯನ್ನು, ಶಿವಾನಂದ ಸರ್ಕಲ್‌ನ ವಾಹನಗಳ ದಟ್ಟಣೆಯನ್ನು ಕಡಿಮೆಗೊಳಿಸುವ ಉದ್ದೇಶದಿಂದ ನಿರ್ಮಿಸಲಾಗಿದೆ. ಈ ಪ್ರದೇಶದಲ್ಲಿ ಸಿಎಂ ಅಧಿಕೃತ ನಿವಾಸ, ಸಚಿವರ ಮನೆಗಳು ಸೇರಿದಂತೆ ವಿವಿಐಪಿಗಳ ಸಂಚಾರವೂ ಸಾಕಷ್ಟಿದೆ.

ಸೇತುವೆಯು ಪ್ರಯಾಣದ ಸಮಯವನ್ನು ಕಡಿತಗೊಳಿಸುತ್ತದೆ. ಜನನಿಬಿಡ ರೇಸ್ ಕೋರ್ಸ್ ರಸ್ತೆಯಿಂದ ಶೇಷಾದ್ರಿಪುರಂ ರೈಲ್ವೆ ಕೆಳಸೇತುವೆಯನ್ನು ತಲುಪಲು ಮೊದಲಿನ ಇಪ್ಪತ್ತು ನಿಮಿಷಗಳಿಗೆ ಹೋಲಿಸಿದರೆ ಈಗ ಐದು ನಿಮಿಷಗಳಿಗಿಂತ ಕಡಿಮೆ ಸಮಯ ತೆಗೆದುಕೊಳ್ಳುತ್ತದೆ. ಈ ಯೋಜನೆಗೆ 2017ರಲ್ಲಿ ಅಡಿಪಾಯ ಹಾಕಲಾಗಿತ್ತು. ಈ ಉಕ್ಕಿನ ಸೇತುವೆಯ ನಿರ್ಮಾಣವನ್ನು ಪೂರ್ಣಗೊಳಿಸಲು ಬಿಬಿಎಂಪಿ (ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ಐದು ವರ್ಷಗಳನ್ನು ತೆಗೆದುಕೊಂಡಿತು.

ಇಂದಿನಿಂದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸ್ಮಾರ್ಟ್‌ ಟ್ರಾಫಿಕ್‌ ಸಿಸ್ಟಂ

ಬೆಂಗಳೂರು: ವಾಹನ ಸಂಚಾರ ನಿಯಮ ಉಲ್ಲಂಘನೆ ಹಾಗೂ ರಸ್ತೆ ಅಪಘಾತಗಳ ತಡೆಗಾಗಿ ಸಂಚಾರ ಪೊಲೀಸ್‌ ವಿಭಾಗ, ಅತ್ಯಾಧುನಿಕ ತಂತ್ರಜ್ಞಾನ ಬಳಸಿಕೊಳ್ಳುತ್ತಿದೆ. ಇದರ ಭಾಗವಾಗಿ ಇಂದಿನಿಂದ (ಜುಲೈ 1) ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ (Bangalore–Mysore Expressway) ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್‌ (ITMS) ಜಾರಿಯಾಗಲಿದೆ. ಈ ಹೈವೇಯಲ್ಲಿ ಇನ್ನುಮುಂದೆ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಕಡಿವಾಣ ಹಾಕಲು ಪೊಲೀಸರಿಗೆ ನೆರವಾಗಲಿದೆ.

ಜುಲೈ 1ರಿಂದ ಹೆದ್ದಾರಿಯಲ್ಲಿ ಈ ಸ್ಮಾರ್ಟ್‌ ಟ್ರಾಫಿಕ್‌ ಸಿಸ್ಟಂ ಜಾರಿ ಆಗಲಿದೆ. ಈ ಮಾರ್ಗದಲ್ಲಿ ಸಂಚಾರ ನಿಯಮ ಉಲ್ಲಂಘನೆ ದಂಡವನ್ನು ನೇರವಾಗಿ ಫಾಸ್ಟ್ಯಾಗ್‌ ಖಾತೆಯಿಂದಲೇ ಕಡಿತಗೊಳಿಸಲು ಪೊಲೀಸರು ಮುಂದಾಗಿದ್ದಾರೆ. ಕ್ಯಾಮೆರಾಗಳು, ಸ್ಪೀಡ್‌ ಗನ್‌ಗಳು ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ತ್ವರಿತ ಕ್ರಮ ಕೈಗೊಳ್ಳಲು ನೆರವಾಗಲಿವೆ. ಜುಲೈ 1ರಿಂದ ಮೈಸೂರು-ಬೆಂಗಳೂರು ಹೆದ್ದಾರಿಯು ಸಂಪೂರ್ಣವಾಗಿ ಕ್ರಿಯಾತ್ಮಕ ಐಟಿಎಂಎಸ್ ಕಾರಿಡಾರ್ (ITMS Corridor) ಆಗಲಿದೆ ಎಂದು ಕರ್ನಾಟಕ ಸಂಚಾರ ಮತ್ತು ರಸ್ತೆ ಸುರಕ್ಷತೆಯ ಎಡಿಜಿಪಿ ಅಲೋಕ್ ಕುಮಾರ್ ಇತ್ತೀಚೆಗೆ ತಿಳಿಸಿದ್ದರು.

ಐಟಿಎಂಎಸ್ ಅಥವಾ ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್ ಅನ್ನು ಡಿಸೆಂಬರ್ 2022ರಲ್ಲಿ ಬೆಂಗಳೂರಿನಲ್ಲಿ ಚಾಲನೆಗೆ ತರಲಾಯಿತು. ಅದಕ್ಕಾಗಿ 250 ಸ್ವಯಂಚಾಲಿತ ನಂಬರ್ ಪ್ಲೇಟ್ ರೆಕಗ್ನಿಷನ್ (ಎಎನ್‌ಪಿಆರ್) ಕ್ಯಾಮೆರಾಗಳು ಮತ್ತು 80 ರೆಡ್ ಲೈಟ್ ಉಲ್ಲಂಘನೆ ಪತ್ತೆ (ಆರ್‌ಎರ್‌ವಿಡಿ) ಕ್ಯಾಮೆರಾಗಳನ್ನು ನಗರದ 50 ಜಂಕ್ಷನ್ ಗಳಲ್ಲಿ ಅಳವಡಿಸಲಾಗಿದೆ. ಈಗ ಐಟಿಎಂಎಸ್ ಅಡಿಯಲ್ಲಿ ಸ್ವಯಂಚಾಲಿತ ನಂಬರ್ ಪ್ಲೇಟ್ ರೆಕಗ್ನಿಷನ್ ಕ್ಯಾಮೆರಾಗಳನ್ನು ಮೈಸೂರಿನ ಪ್ರಮುಖ ರಸ್ತೆಗಳಲ್ಲಿ 8.5 ಕೋಟಿ ರೂ. ಅಂದರೆ ಮೈಸೂರು ನಗರಕ್ಕೆ ರೂಪಾಯಿ 4 ಕೋಟಿ ಮತ್ತು ಮೈಸೂರು ಜಿಲ್ಲೆಗೆ ರೂ.4.5 ಕೋಟಿ ಅಂದಾಜು ವೆಚ್ಚದಲ್ಲಿ ಅಳವಡಿಸಲಾಗಿದೆ. ಅಲ್ಲದೇ ಜುಲೈ 1ರಿಂದ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ ವಾಹನ ಚಾಲಕರಿಗೆ ಚಲನ್ ನೀಡುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ಮಾಹಿತಿ ನೀಡಿದ್ದರು.

ಅಲ್ಲದೇ ಕ್ಯಾಮೆರಾಗಳನ್ನು ಮೈಸೂರು ಜಿಲ್ಲೆಯ ಹುಣಸೂರು, ಎಚ್ ಡಿ ಕೋಟೆ, ನಂಜನಗೂಡು ಮತ್ತು ಟಿ ನರಸೀಪುರದಂತಹ ಹಲವಾರು ಪ್ರದೇಶಗಳಲ್ಲಿ ಅಳವಡಿಸಲಾಗುವುದು. ಹಾಗಾಗಿ ರೂಲ್ಸ್ ಬ್ರೇಕ್ ಮಾಡಿದ ವಾಹನ ಚಾಲಕರಿಗೆ ಸರಿಯಾದ ಸಮಯಕ್ಕೆ ಎಸ್ ಎಂಎಸ್ ಕಳುಹಿಸಲಾಗುವುದು ಎಂದು ಅವರು ಹೇಳಿದ್ದರು.
ಹೆಚ್ಚುವರಿಯಾಗಿ ಈ ವರ್ಷ ಬೆಂಗಳೂರಿನಿಂದ ಹತ್ತಿರದ ತಾಲೂಕುಗಳು ಮತ್ತು ಜಿಲ್ಲೆಗಳಿಗೆ ಸಂಪರ್ಕಿಸುವ ನಾಲ್ಕು ಪ್ರಮುಖ ಹೆದ್ದಾರಿಗಳಲ್ಲಿ (ತುಮಕೂರು ರಸ್ತೆ, ಕನಕಪುರ ರಸ್ತೆ, ಹೊಸೂರು ರಸ್ತೆ ಮತ್ತು ಹೊಸಕೋಟೆ) ಐಟಿಎಂಎಸ್ ಕ್ಯಾಮೆರಾಗಳನ್ನು ಅಳವಡಿಸಲು ಎಡಿಜಿಪಿ ಪ್ರಸ್ತಾಪಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಐಟಿಎಂಎಸ್ ಕ್ಯಾಮೆರಾಗಳ ಜೊತೆಗೆ ಅವರು ಈ ರಸ್ತೆಗಳಲ್ಲಿ ವೇರಿಯಬಲ್ ಮೆಸೇಜಿಂಗ್ ಚಿಹ್ನೆಗಳನ್ನು ಸೇರಿಸಲು ಯೋಜಿಸುತ್ತಿದ್ದಾರೆ ಎನ್ನಲಾಗಿದೆ. ಈ ಸೈನ್ ಬೋರ್ಡ್ ಗಳು ಸರಿಯಾದ ಸಮಯಕ್ಕೆ ಟ್ರಾಫಿಕ್ ಪರಿಸ್ಥಿತಿಯ ಕುರಿತು ಡಿಜಿಟಲ್ ಸಂದೇಶವನ್ನು ಪ್ರದರ್ಶಿಸುತ್ತದೆ. ಈ ಪ್ರಸ್ತಾವನೆಯನ್ನು ರಾಜ್ಯ ರಸ್ತೆ ಸಾರಿಗೆ ಪ್ರಾಧಿಕಾರವು ಅನುಮೋದಿಸಿದ್ದು, ಜುಲೈನಲ್ಲಿ ಟೆಂಡರ್ ಶುರುವಾಗಲಿದೆ. ಗದಗ ಪಟ್ಟಣದಲ್ಲಿಯೂ ಐಟಿಎಂಎಸ್ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಬಗ್ಗೆ ಜೂನ್ 1ರಂದು ರಾಜ್ಯ ಪೊಲೀಸ್ ನ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗವು ಪ್ರಾದೇಶಿಕ ಎನ್ ಹೆಚ್ಎಐ ಅಧಿಕಾರಿಯೊಂದಿಗೆ ಸಭೆ ನಡೆಸಿತ್ತು. ಹಾಗೇ ಎಡಿಜಿಪಿ ಅವರು ಈ ಬಗ್ಗೆ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ಪತ್ರ ಬರೆಯುವ ಚಿಂತನೆ ಕೂಡ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Bangalore–Mysore Expressway: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಾಳೆಯಿಂದ ಸ್ಮಾರ್ಟ್‌ ಟ್ರಾಫಿಕ್‌ ಸಿಸ್ಟಂ

Continue Reading

ಮಳೆ

Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

Karnataka Rain : ಸತತ ಮಳೆಯಿಂದಾಗಿ ಕರಾವಳಿ ಹಾಗೂ ಮಲೆನಾಡು ಭಾಗದ ಜನರು ಕಂಗಲಾಗಿದ್ದಾರೆ. ಉಡುಪಿಯಲ್ಲಿ ನೆರೆಹಾವಳಿಯಿಂದ ಮಕ್ಕಳು ಶಾಲೆಗೆ ಹೋಗಲು ಆಗದೆ ಪರದಾಡುತ್ತಿದ್ದಾರೆ. ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯ ಮತ್ತೊಂದು ಸೇತುವೆಯೂ ಮುಳುಗಡೆಯಾಗಿದೆ. ಹಿರೇಕೊಳಲೆ ಕೆರೆ ಭರ್ತಿಯಾಗಿದ್ದು, ಗಾಳಿಗೆ ವಿದ್ಯುತ್‌ ತಂತಿ ಮೇಲೆ ಮರ ಬಾಗಿ ಸಮಸ್ಯೆ (Rain Effect) ಸೃಷ್ಟಿಯಾಗಿದೆ.

VISTARANEWS.COM


on

By

Karnataka Rain
Koo

ಉಡುಪಿ: ಉಡುಪಿಯ ಬೈಂದೂರಿನಲ್ಲಿ ಮಳೆಗಾಲದ (Karnataka Rain) ಗೋಳು ಮುಗಿಯುವುದಿಲ್ಲ. ಮಳೆ (Rain News) ಬಂದರೆ ಶಾಲೆಗೆ ರಜೆ ಯಾಕೆ ಎನ್ನುವವರು ಈ ಸುದ್ದಿಯನ್ನು ಓದಲೇಬೇಕು. ಇಲ್ಲಿ ಜೋರಾಗಿ ಮಳೆ ಬಂದರೆ ಮಕ್ಕಳು ಶಾಲೆಗೆ ಗೈರು ಹಾಜರಾತಿಯೇ ಗತಿ. ಯಾಕಂದರೆ ಮಳೆ ಬಂದು ಹೋದ ಮೇಲೆ ನೆರೆಯಿಂದಾಗಿ ಹಳ್ಳ ದಾಟಿಕೊಂಡು ಶಾಲೆಗಳಿಗೆ ಹೋಗಲು ಮಕ್ಕಳು ಪರದಾಡಬೇಕಾಗುತ್ತದೆ.

ಉಡುಪಿಯ ಕುಂದಾಪುರ ತಾಲೂಕಿನ ಆಜ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೆಬ್ಬಾರ್ ತಡಿಯಲ್ಲಿ 25 ಮನೆಗಳಿದ್ದು, ಮಳೆ ಬಂದರೆ ಮನೆಯಲ್ಲೇ ಲಾಕ್‌ ಆಗಬೇಕಾಗುತ್ತದೆ. ಮುಖ್ಯಪೇಟೆ ಸಿದ್ದಾಪುರಕ್ಕೆ ತೆರಳಬೇಕಾದರೂ ಸಂಕಷ್ಟ ಎದುರಾಗುತ್ತದೆ. ನೀರಿನ ಪ್ರಮಾಣ ಇಳಿಕೆ ಅದರಷ್ಟೇ ಹಳ್ಳ ದಾಟಿ ಶಾಲೆಗೆ ಹೋಗಬೇಕಾಗುತ್ತದೆ.

ಇತ್ತ ಬೆಳಗ್ಗೆ ನೀರು ಇಳಿಕೆ ಆದರೆ ಸಂಜೆಗೆ ಏರಿಕೆ ಆಗುವ ಆತಂಕ ಇದೆ. ಹೀಗಾಗಿ ಶಾಲೆಗೆ ಕಳುಹಿಸಲು ಪೋಷಕರು ಮೀನಾಮೇಷ ಎಣಿಸುತ್ತಾರೆ. ಮಳೆ ಬಂದರೆ ರಜೆ ನೀಡಿ ಎನ್ನುತ್ತಿದ್ದಾರೆ. ನೌಕರಿಗೆ ತೆರಳುವವರಿಗೂ ಈ ಹಳ್ಳದ್ದೇ ಸಮಸ್ಯೆ ಇದೆ. ಇದುವರೆಗೂ ಕಿರು ಸೇತುವೆ ನಿರ್ಮಿಸಲು ಸಾಧ್ಯವಾಗಿಲ್ಲ.

ಮಳೆಗೆ ಸೇತುವೆ ಮುಳುಗಡೆ

ಮಹಾರಾಷ್ಟ್ರ ಮತ್ತು ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯ ಮತ್ತೊಂದು ಸೇತುವೆಯೂ ಮುಳುಗಡೆಯಾಗಿದೆ. ದೂದಗಂಗಾ ನದಿಯ ಚಿಕ್ಕೋಡಿ ತಾಲೂಕಿನ ಮಲ್ಲಿಕವಾಡ-ದತ್ತವಾಡ ಸಂಪರ್ಕ ಸೇತುವೆ ಜಲಾವೃತಗೊಂಡಿದೆ. ಮೊದಲೇ ನಾಲ್ಕು ಕೆಳ ಹಂತದ ಸೇತುವೆಗಳು ಮುಳುಗಡೆಯಾಗಿದೆ.

ನಿಪ್ಪಾಣಿ ತಾಲೂಕಿನ ಕುನ್ನೂರ-ಬಾರವಾಡ ಸಂಪರ್ಕಿಸುವ ಸೇತುವೆ ಜಲಾವೃತಗೊಂಡಿದೆ. ವೇದಗಂಗಾ ನದಿಗೆ ಅಡ್ಡಲಾಗಿ ಇರುವ ಕೆಳ ಹಂತದ ಸೇತುವೆ, ದೂದಗಂಗಾ ನದಿಯ ಕಾರದಗಾ-ಬೋಜ್, ಕುನ್ನೂರ-ಭೋಜವಾಡಿ ಸಂಪರ್ಕಿಸುವ ಸೇತುವೆ ಸೇರಿ ಕೃಷ್ಣಾ ನದಿಗೆ ಅಡ್ಡಲಾಗಿರುವ ಮಾಂಜರಿ – ಭಾವನ ಸೌಂದತ್ತಿ ಸೇತುವೆಯೂ ಮುಳುಗಡೆಯಾಗಿದೆ. ಹೀಗಾಗಿ ಪರ್ಯಾಯ ಮಾರ್ಗಗಳ ಮೂಲಕ ಜನರು ಸಂಚಾರಿಸುವಂತಾಗಿದೆ. ಕೃಷ್ಣಾ ನದಿಗೆ ಸುಮಾರು 63 ಸಾವಿರ ಕ್ಯೂಸೆಕ್‌ಗೂ ಹೆಚ್ಚು ನೀರಿನ ಒಳಹರಿವು ಬೀಡಲಾಗಿದೆ. ಹೀಗಾಗಿ ನದಿಗೆ ಇಳಿಯದಂತೆ ಬೆಳಗಾವಿ ಜಿಲ್ಲಾಡಳಿತದಿಂದ ನದಿ ಪಾತ್ರದ ಜನರಿಗೆ ಮನವಿ ಮಾಡಿದೆ.

ಹಿರೇಕೊಳಲೆ ಕೆರೆ ಭರ್ತಿ! ವಿದ್ಯುತ್‌ ತಂತಿ ಮೇಲೆ ಬಾಗಿದ ಮರ

ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಭಾರಿ ಮಳೆಯಿಂದಾಗಿ ಹಿರೇ ಕೊಳಲೆ ಕೆರೆ ತುಂಬುವ ಹಂತಕ್ಕೆ ತಲುಪಿದೆ. ಚಿಕ್ಕಮಗಳೂರು ನಗರಕ್ಕೆ ನೀರು ಪೂರೈಸುವ ಬೃಹತ್ ಕೆರೆ ಇದಾಗಿದ್ದು, ಕೆರೆಗೆ ಬಾರಿ ಪ್ರಮಾಣದ ನೀರು ಹರಿದು ಬರುತ್ತಿದೆ. ಇತ್ತ ವೀಕ್ಷಣಾ ಗೋಪುರ ಸಂಪೂರ್ಣ ಶಿಥಿಲಾವಸ್ಥೆ ತಲುಪಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ವೀಕ್ಷಣ ಗೋಪುರದ ಬಳಿ ಪ್ರವಾಸಗರಿಗೆ ನಿಷೇಧ ಹೇರಲಾಗಿದೆ. ಪೊಲೀಸರು ಗೋಪುರದ ಹಾದಿಗೆ ಅಡ್ಡಲಾಗಿ ಬೇಲಿ ಹಾಕಿದ್ದಾರೆ. ಕೆರೆ ಕೋಡಿ ಬೀಳಲು ಕೇವಲ ಮೂರು ಅಡಿ ಮಾತ್ರ ಬಾಕಿ ಇದೆ.

ಚಿಕ್ಕಮಗಳೂರಿನಲ್ಲಿ ಭಾರಿ ಗಾಳಿ-ಮಳೆಗೆ ಅಡಿಕೆ ಮರಗಳು ರಾಷ್ಟ್ರೀಯ ಹೆದ್ದಾರಿ ಪಕ್ಕದ ವಿದ್ಯುತ್ ತಂತಿಯ ಮೇಲೆ ಬಾಗಿವೆ. ಪರಿಣಾಮ ವಿದ್ಯುತ್ ತಂತಿಗೆ ಹಾನಿಯಾಗಿವೆ. ಮೂಡಿಗೆರೆ ತಾಲೂಕಿನ ಫಲ್ಗುಣಿ ಗ್ರಾಮದ ಬಳಿ ಘಟನೆ ನಡೆದಿದೆ. ಮತ್ತಷ್ಟು ಅಡಿಕೆ ಮರಗಳು ವಿದ್ಯುತ್ ತಂತಿಯ ಮೇಲೆ ಬೀಳುವ ಸಾಧ್ಯತೆ ಇದೆ. ಹೀಗಾಗಿ ಸ್ಥಳೀಯರು ಮೆಸ್ಕಾಂ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
road Accident
ಕೊಪ್ಪಳ30 seconds ago

Road Accident : ಕೊಪ್ಪಳದಲ್ಲಿ ಟಿಪ್ಪರ್‌ ಹರಿದು ಬೈಕ್‌ ಸವಾರ ಸಾವು

Abhishek Sharma
ಪ್ರಮುಖ ಸುದ್ದಿ1 min ago

Abhishek Sharma : ಅಭಿಷೇಕ್​ ಶತಕಕ್ಕೆ ಸಹೋದರಿಯ ಚಪ್ಪಾಳೆ, ವಿಡಿಯೊ ಶೇರ್ ಮಾಡಿದ ಕೋಮಲ್​ ಶರ್ಮಾ

MUDA site scandal
ಕರ್ನಾಟಕ19 mins ago

MUDA site scandal: ಸಿಎಂ ಆಪ್ತ ರಾಕೇಶ್‌ ಪಾಪಣ್ಣಗೆ ಹಂಚಿಕೆಯಾಗಿದ್ದ ಮುಡಾ ಸೈಟ್‌ಗೂ ತಡೆ!

steel flyover bridge shivananda circle
ಪ್ರಮುಖ ಸುದ್ದಿ26 mins ago

Steel Flyover: ಬೆಂಗಳೂರಿನ ಮೊದಲ ಸ್ಟೀಲ್‌ ಫ್ಲೈಓವರ್‌ ಸೇತುವೆಯಲ್ಲಿ ಬಿರುಕು

Gurdaspur attack
ವಿದೇಶ27 mins ago

Gurdaspur Attack: ಗುರುದಾಸಪುರ ಉಗ್ರ ದಾಳಿಯ ರೂವಾರಿ, ಐಎಸ್ಐ ಅಧಿಕಾರಿಯನ್ನು ಕರಾಚಿಯಲ್ಲಿ ಫಿನಿಷ್ ಮಾಡಿದ ‘ಅಪರಿಚಿತರು’!

Karnataka Rain
ಮಳೆ28 mins ago

Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

Haveri accident Shivanna couple helped the money to families
ಸ್ಯಾಂಡಲ್ ವುಡ್37 mins ago

Shiva Rajkumar: ಹಾವೇರಿ ಅಪಘಾತ; ಮೃತಪಟ್ಟ ಕುಟುಂಬಗಳಿಗೆ ಧನ ಸಹಾಯ ಮಾಡಿದ ಶಿವಣ್ಣ ದಂಪತಿ

Mumbai Cricket Association
ಪ್ರಮುಖ ಸುದ್ದಿ42 mins ago

Mumbai Cricket Association : ಮುಂಬೈನಲ್ಲಿ ನಿರ್ಮಾಣವಾಗಲಿದೆ 1 ಲಕ್ಷ ಪ್ರೇಕ್ಷಕರ ಸಾಮರ್ಥ್ಯದ ಕ್ರಿಕೆಟ್​ ಸ್ಟೇಡಿಯಮ್​

Paris Olympics 2024
ದೇಶ56 mins ago

Paris Olympics 2024: ಸರ್ಕಾರಿ, ಖಾಸಗಿ ವಲಯದ ಪಾಲುದಾರಿಕೆಯಿಂದ ಕ್ರೀಡೆಗಳ ಭವಿಷ್ಯ ನಿರ್ಧಾರ: ಪಾರ್ಥ್ ಜಿಂದಾಲ್

gold rate today
ಕರ್ನಾಟಕ60 mins ago

Gold Rate Today: ಬಂಗಾರ ಖರೀದಿಸುವ ಪ್ಲ್ಯಾನ್‌ ಇದೆಯೇ? ಚಿನ್ನದ ದರ ಹೀಗಿದೆ ನೋಡಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ28 mins ago

Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

Karnataka weather Forecast
ಮಳೆ1 hour ago

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜುಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

karnataka weather Forecast
ಮಳೆ18 hours ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ20 hours ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ21 hours ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ1 day ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ2 days ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ2 days ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ2 days ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು2 days ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಟ್ರೆಂಡಿಂಗ್‌