Physical abuse : ಸಿ.ಟಿ ಸ್ಕ್ಯಾನಿಂಗ್‌ ನೆಪದಲ್ಲಿ ವೃದ್ಧೆಯ ಬೆತ್ತಲೆ ಮಾಡಿ ಖಾಸಗಿ ಅಂಗಾಂಗ ಮುಟ್ಟಿದ ಕಾಮುಕ! - Vistara News

ಕರ್ನಾಟಕ

Physical abuse : ಸಿ.ಟಿ ಸ್ಕ್ಯಾನಿಂಗ್‌ ನೆಪದಲ್ಲಿ ವೃದ್ಧೆಯ ಬೆತ್ತಲೆ ಮಾಡಿ ಖಾಸಗಿ ಅಂಗಾಂಗ ಮುಟ್ಟಿದ ಕಾಮುಕ!

Physical abuse : ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧೆಗೆ ಕಾಮುಕ ಸಿಬ್ಬಂದಿ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಬೆಂಗಳೂರಲ್ಲಿ (Bengaluru News) ನಡೆದಿದೆ.

VISTARANEWS.COM


on

physical abuse
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸಿ.ಟಿ ಸ್ಕ್ಯಾನಿಂಗ್‌ (CT scan) ಮಾಡುವ ನೆಪದಲ್ಲಿ ವೃದ್ಧೆಯನ್ನು ಬೆತ್ತಲೆಗೊಳಿಸಿ ಖಾಸಗಿ ಆಸ್ಪತ್ರೆ ಸಿಬ್ಬಂದಿಯೊಬ್ಬ ಲೈಂಗಿಕ ದೌರ್ಜನ್ಯ (Physical abuse) ನಡೆಸಿದ್ದಾನೆ. ಕಾಮುಕ ಸಿಬ್ಬಂದಿ ಅಶೋಕ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಆಗಸ್ಟ್ 3 ರಂದು ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆ ಹೆಬ್ಬಾಳದ ಅಸ್ಟರ್ ಸಿಎಂಐ ಆಸ್ಪತ್ರೆಗೆ (Aster CMI Hospital) ದಾಖಲಾಗಿದ್ದರು. ಆರೋಪಿ ಅಶೋಕ್‌ ಆಗಸ್ಟ್ 4ರ ಬೆಳಗಿನ ಜಾವ 1:30ಕ್ಕೆ ಸಿ.ಟಿ ಸ್ಕ್ಯಾನ್‌ಗೆ ಎಂದು ವೃದ್ದೆಯನ್ನು ಕರೆದುಹೋಗಿದ್ದಾನೆ. ಬಳಿಕ ಸಿ.ಟಿ ಸ್ಕ್ಯಾನ್ ಮೆಷಿನ್‌ ಮೇಲೆ ವೃದ್ಧೆಯನ್ನು ವಿವಸ್ತ್ರಗೊಳಿಸಿ ಮಲಗಿಸಿದ್ದ.

ನಂತರ ವೃದ್ದೆಯ ಖಾಸಗಿ ಅಂಗಾಗಳ ಸ್ಪರ್ಶಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಪೀಡಿಸಿದ್ದಾನೆ ಎಂದು ಸಂತ್ರಸ್ಥೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಸಂತ್ರಸ್ಥೆ ದೂರಿನ ಮೇರೆಗೆ ಎಫ್‌ಐಆರ್‌ ದಾಖಲಾಗಿದ್ದು, ಆರೋಪಿ ಅಶೋಕ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಕೊಡಿಗೇಹಳ್ಳಿ ಠಾಣೆ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ತುಮಕೂರು

Assault Case : ಜಮೀನು ವಿವಾದ; ನೀರಿನಲ್ಲಿ ಮುಳುಗಿಸಿ, ಕುಡುಗೋಲು, ಕಲ್ಲಿನಿಂದ ವ್ಯಕ್ತಿ ಮೇಲೆ ಹಲ್ಲೆ!

Assault Case : ತುಮಕೂರಿನಲ್ಲಿ ಜಮೀನು ವಿವಾದಕ್ಕೆ ಎರಡು ಕುಟುಂಬಗಳ ನಡೆದ ಗಲಾಟೆ ವಿಕೋಪಕ್ಕೆ ತಿರುಗಿದ್ದು, ವ್ಯಕ್ತಿಯನ್ನು ನೀರಿನಲ್ಲಿ ಮುಳುಗಿಸಿ, ಕುಡುಗೋಲು, ಕಲ್ಲಿನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.

VISTARANEWS.COM


on

By

Assault case
Koo

ತುಮಕೂರು: ಜಮೀನು‌ ವಿವಾದ ಹಿನ್ನೆಲೆಯಲ್ಲಿ (Assault Case) ಎರಡು ಕುಟುಂಬಗಳ ನಡುವೆ ಮಾರಾಮಾರಿಯೇ ನಡೆದಿದೆ. ತುಮಕೂರು‌ ಜಿಲ್ಲೆಯ ತುರುವೇಕೆರೆ ತಾಲೂಕಿನ ಸೊಂಡೆಮಾರ್ಗೋನಹಳ್ಳಿಯಲ್ಲಿ ಘಟನೆ ನಡೆದಿದೆ. ಶಶಿಕುಮಾರ್, ಲಕ್ಷ್ಮಣಯ್ಯ ಎಂಬುವವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ನಾಗೇಗೌಡನಪಾಳ್ಯದ ಮಂಜುನಾಥ್ ಎಂಬಾತನ ತಾಯಿ, ಪತ್ನಿ ಹಾಗೂ ಗಂಗಮ್ಮ, ನಾಗಯ್ಯ ಎಂಬುವವರು ಹಲ್ಲೆ ನಡೆಸಿದ್ದಾರೆ.

ಲಕ್ಷ್ಮಣಯ್ಯಗೆ ಸೇರಿದ ಸರ್ವೇ ನಂ.26ರ ಜಮೀನಿನ‌ ವಿಚಾರಕ್ಕೆ ಗಲಾಟೆ ನಡೆದಿದೆ. 1 ಎಕರೆ 10 ಗುಂಟೆಗೆ ಪಹಣಿ ಇದ್ದು, ಸರ್ವೆ ನಂ.26 ರಲ್ಲಿ ಇರುವ 15 ಗುಂಟೆ ಕರಾಬಿನ ವಿಚಾರಕ್ಕೆ ಮಾರಾಮಾರಿ ನಡೆದಿದೆ. ಈಗಾಗಲೇ 15 ಗುಂಟೆ ಕರಾಬು ಜಾಗದಲ್ಲಿ ಲಕ್ಷ್ಮಣಯ್ಯ ಉಳುಮೆ ಮಾಡಿಕೊಂಡಿದ್ದಾರೆ.

15 ಗುಂಟೆ ಕರಾಬು ನಮಗೆ ಸೇರಬೇಕೆಂದು ಪಕ್ಕದ ಜಮೀನಿನ ಮಂಜುನಾಥ ಕುಟುಂಬಸ್ಥರಿಂದ ಲಕ್ಷ್ಮಣಯ್ಯ ಮೇಲೆ ಹಲ್ಲೆ ನಡೆಸಿದ್ದಾರೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಜಗಳಕ್ಕೆ ಬಂದ ಮಂಜುನಾಥ್‌ ಕುಟುಂಬಸ್ಥರು, ಲಕ್ಷ್ಮಣಯ್ಯನನ್ನು ಹಿಡಿದು ನೀರಿನಲ್ಲಿ ಮುಳುಗಿಸಿ, ಕುಡುಗೋಲು ಹಾಗೂ ಕಲ್ಲಿನಿಂದ ಹಲ್ಲೆ ನಡೆಸಿದ್ದಾರೆ.

ಹಲ್ಲೆಯಿಂದ ಲಕ್ಷ್ಮಣಯ್ಯಗೆ ಗಂಭೀರ ಗಾಯಗೊಂಡಿದ್ದು, ತುರುವೇಕೆರೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

ಇದನ್ನೂ ಓದಿ: Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

ದೇವನಹಳ್ಳಿಯ ಶಾಲೆ ಹಿಂಭಾಗ ಶವ ಪತ್ತೆ

ರಾಜಕಾಲುವೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ನಂದಿನಿ ಶಾಲೆ ಹಿಂಭಾಗ ಘಟನೆ ನಡೆದಿದೆ. ರಾಜಕಾಲುವೆಯಲ್ಲಿ ಶವ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ವಿಜಯಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಐದಾರು ದಿನಗಳ ಹಿಂದೆ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಇದು ಕೊಲೆಯೋ ಅಥವಾ ಸಹಜ ಸಾವೋ ಎಂಬುದರ ಕುರಿತು ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

ಧಾರವಾಡದಲ್ಲಿ ತಂದೆಯನ್ನು ಹುಡುಕಿಕೊಡುವಂತೆ ಮಗನ ಅಳಲು

ತಂದೆಯನ್ನು ಹುಡುಕಿಕೊಡುವಂತೆ ಮಗನೊಬ್ಬ ಎಸ್‌ಪಿ ಕಚೇರಿಗೆ ಆಗಮಿಸಿದ್ದಾನೆ. ಧಾರವಾಡ ಜಿಲ್ಲೆಯ ಮಾರಡಗಿ ಗ್ರಾಮದ ದ್ಯಾಮಪ್ಪ ಹಡಪದ ಕಳೆದ ಮೇ 19ರಂದು ಏಕಾಏಕಿ ಕಾಣೆಯಾಗಿದ್ದರಿ. ಕಳೆದ 50 ದಿನಗಳಿಂದ ತಂದೆ ಕಾಣುತ್ತಿಲ್ಲ ಎಂದು ಮಗ ಪ್ರವೀಣ್‌ ಅಳಲು ತೊಡಿಕೊಂಡಿದ್ದಾರೆ. ಧಾರವಾಡ ಎಸ್‌ಪಿ ಕಚೇರಿಗೆ ಆಗಮಿಸಿ ತಂದೆಯನ್ನು ಹುಡುಕಿಕೊಡುವಂತೆ ಪ್ರವೀಣ್ ಮನವಿ ಮಾಡಿದ್ದಾರೆ. ನಮ್ಮ ತಂದೆಗೆ ಏನಾಗಿದೆ ಅಂತಲೇ ಗೊತ್ತಿಲ್ಲ, ಅವರನ್ನ ಹುಡುಕಿಕೊಡಿ ಒತ್ತಾಯಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

DK Shivakumar: ಕುಮಾರಸ್ವಾಮಿ ಒಬ್ಬ ಹುಚ್ಚ, ಚಿಕಿತ್ಸೆ ಪಡೆಯುವುದು ಉತ್ತಮ: ಡಿಸಿಎಂ ಡಿಕೆಶಿ

DK Shivakumar: ಸಿಡಿ ಫ್ಯಾಕ್ಟರಿ ನಂತರ ಈಗ ಮುಡಾ ಫ್ಯಾಕ್ಟರಿ ಹೊರಬರುತ್ತಿದೆ ಎಂಬ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿಕೆ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಪ್ರತಿಕ್ರಿಯೆ ನೀಡಿದ್ದಾರೆ.

VISTARANEWS.COM


on

DK Shivakumar
Koo

ಬೆಂಗಳೂರು: ಕೇಂದ್ರ ಸಚಿವ ಕುಮಾರಸ್ವಾಮಿ ಒಬ್ಬ ಹುಚ್ಚ. ಅವರು ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆಯುವುದು ಉತ್ತಮ. ಮುಡಾ ಹಗರಣ ವಿಚಾರದಲ್ಲಿ ಕುಮಾರಸ್ವಾಮಿ ಮಾಡುತ್ತಿರುವುದು ಆಧಾರರಹಿತ ಆರೋಪ. ಹುಚ್ಚು ಹಿಡಿದಿರುವ ಕಾರಣ ಅವರು ಈ ರೀತಿ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ತೀವ್ರ ವಾಗ್ದಾಳಿ ನಡೆಸಿದರು.

ಮುಡಾ ಹಗರಣ ಹೊರಬರುವಲ್ಲಿ ಡಿಸಿಎಂ ಶಿವಕುಮಾರ್ ಕೈವಾಡವಿದೆ ಎಂಬ ಎಚ್‌ಡಿಕೆ ಆರೋಪದ ಬಗ್ಗೆ ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿ, ಕೆಲವೊಬ್ಬರಿಗೆ ನನ್ನನ್ನು ನೆನಪಿಸಿಕೊಳ್ಳದಿದ್ದರೆ ನಿದ್ದೆಯೂ ಬರುವುದಿಲ್ಲ, ತಲೆಯೂ ಓಡುವುದಿಲ್ಲ. ಅವರು ಬಾಯಿಗೆ ಬಂದಂತೆ ಮಾತಾಡುತ್ತಿರುವುದು ಬಹಳ ಸಂತೋಷದ ವಿಚಾರ ಎಂದು ತಿರುಗೇಟು ನೀಡಿದರು.

ಮಂಡ್ಯದಲ್ಲಿ ತಾವು ಮಾಡುತ್ತಿರುವ ಜನತಾ ದರ್ಶನಕ್ಕೆ ಅಧಿಕಾರಿಗಳು ಹೋಗಬಾರದೆಂದು ರಾಜ್ಯ ಸರ್ಕಾರ ಸೂಚನೆ ನೀಡಿದೆ ಎಂಬ ಕುಮಾರಸ್ವಾಮಿ ಅವರ ಆರೋಪಕ್ಕೆ ಪ್ರತಿಕ್ರಿಯಿಸಿ, ಜನರನ್ನು ಇಟ್ಟುಕೊಂಡು ಜನತಾ ದರ್ಶನ ಮಾಡಲಿ. ಹಳ್ಳಿ, ಹಳ್ಳಿ ತಿರುಗಲಿ, ಯಾರು ಬೇಡ ಎಂದು ಹೇಳಿದ್ದಾರೆ. ಅಧಿಕಾರಿಗಳು ಶಿಷ್ಟಾಚಾರ ಪಾಲಿಸುತ್ತಾರೆ. ಅದರ ಪ್ರಕಾರ ಸಂಸದರನ್ನು ಹೇಗೆ ಸ್ವಾಗತಿಸಬೇಕೋ ಆ ರೀತಿ ಕೆಲಸ ಮಾಡುತ್ತಾರೆ. ನಾವು ದೆಹಲಿಗೆ ತೆರಳಿ ಅಲ್ಲಿನ ಅಧಿಕಾರಿಗಳನ್ನು ಬಳಸಿಕೊಳ್ಳಲು ಆಗುತ್ತದೆಯೇ? ಜನಕ್ಕೆ ಹೋಗಬೇಡಿ ಎಂದು ಹೇಳಲು ಆಗುತ್ತದೆಯೇ? ನನಗೆ ಈ ಆರೋಪದ ವಿಚಾರ ಗೊತ್ತೇ ಇಲ್ಲ. ನನಗೂ ಇದಕ್ಕೂ ಯಾವುದೇ ರೀತಿಯ ಸಂಬಂಧವೂ ಇಲ್ಲ ಎಂದರು.

CM Siddaramaiah: ನಮಗೆ ನಿವೇಶನ ಕೊಟ್ಟಿರುವುದು ತಪ್ಪು ಎಂದರೆ ಪರಿಹಾರ ಕೊಡಲಿ; ಸಿದ್ದರಾಮಯ್ಯ ಸವಾಲು

Cabinet Meeting
Karnataka Cabinet Meeting Important Decisions

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಕುರಿತು ಬಿಜೆಪಿ ಮಾಡುತ್ತಿರುವ ಆರೋಪಗಳು ರಾಜಕೀಯ ಪ್ರೇರಿತ ಆರೋಪಗಳೇ ಹೊರತು ಅಂಕಿಅಂಶಗಳ ಮೇಲೆ ಮಾಡಿರುವ ಆರೋಪಗಳಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದ್ದಾರೆ.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರಿಗೆ ಬೇರೇನೂ ವಿಷಯವಿಲ್ಲ. ಆರ್.ಎಸ್.ಎಸ್ ಹೇಳಿದಂತೆ ಮಾಡುತ್ತಾರೆ. ವಿಷಯವೇ ಇಲ್ಲ. ಮುಡಾ ನಮ್ಮ 3.16 ಎಕರೆ ಜಮೀನಿನಲ್ಲಿ ನಿವೇಶನಗಳನ್ನು ಮಾಡಿ ಹಂಚಿದರೆ ನಾವು ಕೇಳಬಾರದೇ. ಹಾಗಿದ್ದಲ್ಲಿ ಜಮೀನಿನ ಮೌಲ್ಯ 60 ಕೋಟಿ ರೂ. ಗಳನ್ನು ಕೊಟ್ಟುಬಿಡಲಿ. ನಮ್ಮ ಜಮೀನು ಒತ್ತುವರಿ ಮಾಡಿಕೊಂಡಿರುವುದನ್ನು ಅವರೇ ಸಭೆಯಲ್ಲಿ ಒಪ್ಪಿಕೊಂಡಿದ್ದಾರೆ. ಅದಕ್ಕಾಗಿ ನಿವೇಶನಗಳನ್ನು 50:50 ಅನುಪಾತದಲ್ಲಿ ನೀಡಿದ್ದಾರೆ. ಅದಕ್ಕೆ ನಾವು ಒಪ್ಪಿದ್ದೇವೆ. ಇಂಥ ಕಡೆಯೇ ನಿವೇಶನ ಕೊಡಿ ಎಂದು ನಾವು ಕೇಳಿಲ್ಲ ಎಂದು ಹೇಳಿದರು.

ಇದನ್ನೂ ಓದಿ: R Ashok: ಮುಡಾದಲ್ಲಿ ಎಲ್ಲರೂ ಗ್ಯಾಂಗ್‌ ಮಾಡಿಕೊಂಡು ಹಗರಣ ಮಾಡಿದ್ದಾರೆ; ಆರ್‌. ಅಶೋಕ್‌ ಆರೋಪ

ಬಿಜೆಪಿ ಅಧಿಕಾರದಲ್ಲಿತ್ತು

ನಿವೇಶನ ನೀಡಿದಾಗ 2021ನೇ ಇಸವಿಯಲ್ಲಿ ಬಿಜೆಪಿ ಅಧಿಕಾರದಲ್ಲಿತ್ತು. ಅವರೇ ನಿವೇಶನಗಳನ್ನು ಹಂಚಿ ಈಗ ಕಾನೂನುಬಾಹಿರ ಎಂದರೆ ಹೇಗೆ? ವಿಜಯನಗರ 3ನೇ ಅಥವಾ 4ನೇ ಹಂತದಲ್ಲಿ ಕೊಡಿ ಎಂದು ಕೇಳಲಿಲ್ಲ. ನಮಗೆ ಪರ್ಯಾಯವಾಗಿ 50:50 ಅನುಪಾತದಲ್ಲಿ ಕೊಡಲು ಒಪ್ಪಿದಂತೆ ಕೊಡಿ ಎಂದು ಹೇಳಿದ್ದೇವೆ. ಇದು ರಾಜಕೀಯ ಪ್ರೇರಿತ ಆಪಾದನೆ ಎಂದು ತಿಳಿಸಿದರು.

ನಿವೇಶನ ಕೊಟ್ಟಿರುವುದು ತಪ್ಪು ಎಂದರೆ ಪರಿಹಾರ ಕೊಡಲಿ

ಭೂ ಸ್ವಾಧೀನವಾದಲ್ಲಿಯೇ ಜಮೀನು ಕೊಡಬೇಕೆಂಬ ನಿಯಮವಿದೆ ಎಂದು ಪರ್ತಕರ್ತರ ಪ್ರಶ್ನೆಗೆ ಉತ್ತರಿಸಿದ ಸಿಎಂ, ನಾವು ಇಂಥ ಕಡೆಯೇ ನಿವೇಶನ ಕೊಡಿ ಎಂದು ಕೇಳಿಲ್ಲ. ಜಾಗ ಕೊಟ್ಟಿರುವುದು ತಪ್ಪು ಎನ್ನುವುದಾದರೆ ನಮಗೆ ಪರಿಹಾರ ಕೊಡಲಿ. ಅಕ್ಟೋಬರ್ 2023 ರಲ್ಲಿ ಸಚಿವರು 50:50 ಅನುಪಾತದಲ್ಲಿ ಜಮೀನು ಕೊಡುವುದನ್ನು ರದ್ದು ಮಾಡಿ ಎಂದು ಬರೆದಿದ್ದಾರೆ. ಬರೆಯದೇ ಹೋದರೂ ಕೂಡ 62 ಕೋಟಿ ರೂ. ಗಳನ್ನು ಕಾನೂನಿನ ಪ್ರಕಾರ ಕೊಟ್ಟುಬಿಡಲಿ. ನಮಗೆ ಕೊಟ್ಟಿರುವ 14 ನಿವೇಶನಗಳ ಬೆಲೆ ಇದಕ್ಕಿಂತಲೂ ಕಡಿಮೆ ಇದೆ. ಒಂದು ಎಕರೆಗೆ 44 ಸಾವಿರ ಚದರ ಅಡಿಯಾದರೆ ನನಗೆ ಕೊಟ್ಟಿರುವುದು 38.264 ಚದರ ಅಡಿ. ಒಂದು ಎಕರೆಗಿಂತ ಕಡಿಮೆಯಾಗಿದೆ. ಪರಿಹಾರವಾಗಿ ಕೊಟ್ಟಿರುವ ಜಮೀನಿನ ಬೆಲೆ ಎಷ್ಟಿದೆ ಎಂದು ನನಗೆ ತಿಳಿದಿಲ್ಲ. ನನಗೆ 62 ಕೋಟಿ ರೂ. ಕೊಟ್ಟುಬಿಡಲಿ ಎಂದು ಹೇಳಿದರು.

ಇದನ್ನೂ ಓದಿ: Lakshmi Hebbalkar: ಅಂಗನವಾಡಿ ಹೆಸರು ಶೀಘ್ರದಲ್ಲೇ ಬದಲಾವಣೆ! ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸುಳಿವು

ನಗರಾಭಿವೃದ್ಧಿ ಸಚಿವರು ನಿವೇಶನ ಹಂಚಿಕೆಗೆ ಸಂಬಂಧಿಸಿದ ಕಡತವನ್ನು ತೆಗೆದುಕೊಂಡು ಬಂದಿದ್ದಾರೆ ಎಂಬ ಪರ್ತಕರ್ತರ ಪ್ರಶ್ನೆಗೆ ಉತ್ತರಿಸಿ, ಕಡತ ತಂದಿಲ್ಲ ಎಂದು ಈ ವೇಳೆ ಸಿಎಂ ತಿಳಿಸಿದರು.

Continue Reading

ಕರ್ನಾಟಕ

Guarantee Schemes: ಗ್ಯಾರಂಟಿ ಯೋಜನೆಗಳಿಗೆ ದಲಿತರ 14 ಸಾವಿರ ಕೋಟಿ ರೂ. ಕಸಿದು ಕೊಟ್ಟ ಸಿದ್ದರಾಮಯ್ಯ!

Guarantee Schemes: 2024-25ನೇ ಹಣಕಾಸು ವರ್ಷಕ್ಕಾಗಿ ಪರಿಶಿಷ್ಟ ಜಾತಿಗಳ ಉಪ ಯೋಜನೆ ಮತ್ತು ಪಂಗಡದ ಉಪ ಯೋಜನೆಗೆ (ಎಸ್‌ಸಿಎಸ್‌ಪಿ-ಟಿಎಸ್‌ಪಿ) ಮೀಸಲಿಟ್ಟಿದ್ದ 39,171 ಕೋಟಿ ರೂಪಾಯಿ ಅನುದಾನದಲ್ಲಿ 14,282 ಕೋಟಿ ರೂಪಾಯಿಯನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಿದೆ. ಇದು ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ.

VISTARANEWS.COM


on

Guarantee Schemes
Koo

ಬೆಂಗಳೂರು: ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು, ಅವುಗಳನ್ನು ಮುಂದುವರಿಸಲು ಹೆಣಗಾಡುತ್ತಿರುವ ಸಿದ್ದರಾಮಯ್ಯ (Siddaramaiah) ನೇತೃತ್ವದ ಕಾಂಗ್ರೆಸ್‌ ಸರ್ಕಾರವು (Karnataka Government) ಹಲವು ರೀತಿಯಲ್ಲಿ ಸಂಪನ್ಮೂಲ ಕ್ರೋಡೀಕರಣ ಮಾಡುತ್ತಿದೆ. ಗ್ಯಾರಂಟಿ ಯೋಜನೆಗಳಿಗೆ (Guarantee Schemes) ಹಣ ಹೊಂದಿಸಲು ಕೆಲವು ದಿನಗಳ ಹಿಂದಷ್ಟೇ ಪೆಟ್ರೋಲ್ ಹಾಗೂ ಡೀಸೆಲ್‌ ಬೆಲೆಯನ್ನು ಏರಿಕೆ ಮಾಡಿದ್ದ ರಾಜ್ಯ ಸರ್ಕಾರವೀಗ, ದಲಿತರಿಗಾಗಿ ಮೀಸಲಿಟ್ಟಿದ್ದ 14,282 ಕೋಟಿ ರೂಪಾಯಿಯನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಿದೆ.

ಹೌದು, 2024-25ನೇ ಹಣಕಾಸು ವರ್ಷಕ್ಕಾಗಿ ಪರಿಶಿಷ್ಟ ಜಾತಿಗಳ ಉಪ ಯೋಜನೆ ಮತ್ತು ಪಂಗಡದ ಉಪ ಯೋಜನೆಗೆ (ಎಸ್‌ಸಿಎಸ್‌ಪಿ-ಟಿಎಸ್‌ಪಿ) ಮೀಸಲಿಟ್ಟಿದ್ದ 39,171 ಕೋಟಿ ರೂಪಾಯಿ ಅನುದಾನದಲ್ಲಿ 14,282 ಕೋಟಿ ರೂಪಾಯಿಯನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಿದೆ. ಪರಿಶಿಷ್ಟ ಜಾತಿ, ಬುಡಕಟ್ಟು ಸಮುದಾಯದವರ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣವನ್ನು ಉಚಿತ ಯೋಜನೆಗಳಿಗೆ ರಾಜ್ಯ ಸರ್ಕಾರ ವರ್ಗಾಯಿಸಿರುವುದು ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ.

congress 5 Guarantee schemes

ನಿರುದ್ಯೋಗ ಯುವಕ-ಯುವತಿಯರಿಗೆ ಹಣಕಾಸು ನೆರವು ಒದಗಿಸುವ ಯುವ ನಿಧಿ ಯೋಜನೆಗೆ ಎಸ್‌ಸಿಎಸ್‌ಪಿ-ಟಿಎಸ್‌ಪಿಯ ಸುಮಾರು 75 ಕೋಟಿ ರೂಪಾಯಿಗಳನ್ನು ಬಳಸಿಕೊಂಡಿದೆ. ಇನ್ನು, ಅನ್ನಭಾಗ್ಯ ಯೋಜನೆಗೆ 104 ಕೋಟಿ ರೂಪಾಯಿಯನ್ನು ಎಸ್‌ಸಿಎಸ್‌ಪಿ-ಟಿಎಸ್‌ಪಿ ಅನುದಾನದಿಂದಲೇ ಬಳಸಿಕೊಂಡಿದೆ.

ಹೀಗೆ ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿಎಸ್‌ಪಿ-ಟಿಎಸ್‌ಪಿ ಅನುದಾನದ 14,282 ಕೋಟಿ ರೂಪಾಯಿಗಳನ್ನು ವರ್ಗಾವಣೆ ಮಾಡಿದೆ. ಮೂಲಗಳ ಪ್ರಕಾರ, ಎಸ್‌ಸಿ, ಎಸ್‌ಟಿ ಸಮುದಾಯದ ವರ್ಗಗಳ ಗ್ಯಾರಂಟಿ ಫಲಾನುಭವಿಗಳಿಗೆ ಮಾತ್ರ ಹಣ ಮೀಸಲಿರಿಸಲಾಗಿದೆ ಎಂದು ತಿಳಿದುಬಂದಿದೆ.

ಕೆಲ ದಿನಗಳ ಹಿಂದಷ್ಟೇ ರಾಜ್ಯದಲ್ಲಿ ಒಂದು ಲೀಟರ್‌ ಪೆಟ್ರೋಲ್‌ಗೆ 3 ರೂ. ಹಾಗೂ ಡೀಸೆಲ್‌ಗೆ 3.5 ರೂ. ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ವರ್ಷಕ್ಕೆ 3 ಸಾವಿರ ಕೋಟಿ ರೂ. ಹೆಚ್ಚುವರಿ ಆದಾಯ ಬರಲಿದೆ ಎಂದು ತಿಳಿದುಬಂದಿದೆ. ಇದಾದ ಕೆಲವೇ ದಿನಗಳಲ್ಲಿ ನಂದಿನಿ ಹಾಲಿನ ಬೆಲೆಯನ್ನೂ 2 ರೂಪಾಯಿ ಏರಿಕೆ ಮಾಡಿದ್ದು, ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಬಿಜೆಪಿ ನಾಯಕರು ಕೂಡ ರಾಜ್ಯ ಸರ್ಕಾರದ ತೀರ್ಮಾನವನ್ನು ಖಂಡಿಸಿದ ಪ್ರತಿಭಟನೆ ನಡೆಸಿದ್ದಾರೆ.

ಇದನ್ನೂ ಓದಿ: CM Siddaramaiah: ಸಿದ್ದರಾಮಯ್ಯ ಈಗ ಕನ್ನಡ ಮೇಷ್ಟ್ರು; ಶಾಲೆಗೆ ಭೇಟಿ ನೀಡಿ ವ್ಯಾಕರಣ ಪಾಠ ಮಾಡಿದ ಸಿಎಂ!

Continue Reading

ಕರ್ನಾಟಕ

Satish Jarkiholi: ಜನತಾ ದರ್ಶನಕ್ಕೆ ಅಧಿಕಾರಿಗಳು ಗೈರಾಗುವುದು ತಪ್ಪು; ಎಚ್‌ಡಿಕೆ ಪರ ಸಚಿವ ಸತೀಶ್ ಜಾರಕಿಹೊಳಿ ಬ್ಯಾಟಿಂಗ್!

Satish Jarkiholi: ಮಂಡ್ಯದಲ್ಲಿ ಅಧಿಕಾರಿಗಳು ಜನತಾ ದರ್ಶನಕ್ಕೆ ಯಾಕೆ ಹೋಗಿಲ್ಲವೋ ಗೊತ್ತಿಲ್ಲ. ಯಾರು ಆದೇಶ ಮಾಡಿದ್ದಾರೋ ತಿಳಿಯದು ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.

VISTARANEWS.COM


on

Koo

ಬೆಂಗಳೂರು: ಮಂಡ್ಯದಲ್ಲಿ ಜನತಾ ದರ್ಶನಕ್ಕೆ ಅಧಿಕಾರಿಗಳು ಹೋಗದಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ (HD Kumaraswamy) ಅವರು ಶುಕ್ರವಾರ ಬೆಳಗ್ಗೆ ಆರೋಪಿದ್ದರು. ಈ ವಿಚಾರದಲ್ಲಿ ಇದೀಗ ಎಚ್‌ಡಿಕೆ ಪರ ಬ್ಯಾಟ್‌ ಬೀಸಿರುವ ಸಚಿವ ಸತೀಶ್ ಜಾರಕಿಹೊಳಿ (satish jarkiholi) ಅವರು, ಕೇಂದ್ರ ಸಚಿವ ಹಾಗೂ ಸಂಸದರು ಸಭೆ ಕರೆದರೆ ಅಧಿಕಾರಿಗಳು ಹೋಗಬೇಕಾಗುತ್ತದೆ. ಅಧಿಕಾರಿಗಳು ಹೋಗದಿರುವುದು ತಪ್ಪಾಗುತ್ತದೆ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬೆಳಗಾವಿ ಎಂಪಿ ಜಗದೀಶ್ ಶೆಟ್ಟರ್ ಸಭೆ ಕರೆದಾಗ ಡಿಸಿ, ಎಸ್‌ಪಿ ಅಧಿಕಾರಿಗಳು ಹೋಗಿದ್ದರು. ಮಂಡ್ಯದಲ್ಲಿ ಯಾಕೆ ಅಧಿಕಾರಿಗಳು ಹೋಗಿಲ್ಲ ಅಂತ ಗೊತ್ತಿಲ್ಲ. ಯಾರು ಆದೇಶ ಮಾಡಿದ್ದಾರೋ ಗೊತ್ತಿಲ್ಲ. ಸಂಸದರು ಕರೆದ ಸಭೆಗೆ ಅಧಿಕಾರಿಗಳು ಗೈರಾಗುವುದು ತಪ್ಪು ಎಂದು ಅಭಿಪ್ರಾಯ ತಿಳಿಸಿದ್ದಾರೆ.

ಇದನ್ನೂ ಓದಿ | Channaptna By Election: ಚನ್ನಪಟ್ಟಣಕ್ಕೆ ನಾನೇ ಮೈತ್ರಿ ಅಭ್ಯರ್ಥಿ, ಎಚ್‌ಡಿಕೆ ಇದನ್ನು ಘೋಷಿಸಲಿ: ಸಿಪಿ ಯೋಗೇಶ್ವರ್‌

ಎಚ್‌ಡಿಕೆ ಏನು ಹೇಳಿದ್ದರು?

ಮಂಡ್ಯ: ಜನತಾ ದರ್ಶನಕ್ಕೆ ಅಧಿಕಾರಿಗಳು ಹೋಗದಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ನೆನ್ನೆ ಕ್ಯಾಬಿನೆಟ್‌ ಸಭೆಯಲ್ಲಿ ಒಂದು ಸುತ್ತೋಲೆ ಹೊರಡಿದ್ದಾರೆ. ಮುಖ್ಯಮಂತ್ರಿ, ಸಚಿವರಿಗೆಷ್ಟೇ ಜನತಾ ದರ್ಶನಕ್ಕೆ ಅವಕಾಶವಿದೆ ಎಂದಿದ್ದಾರೆ. ಅಧಿಕಾರಿಗಳಿಗೆ ಈಗಾಗಲೇ ಆ ಕುರಿತು ಸೂಚನೆ‌ ಕೊಟ್ಟಿದ್ದಾರೆ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದ್ದರು.

ಈ ಸರ್ಕಾರದವರು ಚುನಾವಣೆಗೆ ಮುಂಚೆ ರಾಮನಗರದಲ್ಲಿ ಹೇಗೆ ನಡೆದುಕೊಂಡರು? ಡಿ.ಕೆ.ಸುರೇಶ್ ಈ ಹಿಂದೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿದರು. ಜನಸ್ಪಂದನ ಹೆಸರಲ್ಲಿ ಅಧಿಕಾರಿಗಳನ್ನು ಹಳ್ಳಿಹಳ್ಳಿ‌ ತಿರುಗಿಸಿದರು. ಉಸ್ತುವಾರಿ ಸಚಿವರು ಮಾಡಬೇಕಾದ ಸಭೆಗಳನ್ನು ಮಾಡಿದರು. ಅದಕ್ಕೆ ಅನುಮತಿ ಕೊಟ್ಟವರು ಯಾರು, ಯಾವ ರೂಲ್ಸ್ ಇತ್ತು ಎಂದು ಪ್ರಶ್ನಿಸಿದ್ದರು.

ಇವತ್ತು ಕೇಂದ್ರದ ಒಬ್ಬ ಮಂತ್ರಿ, ಜನರ ಅಹವಾಲು ಸ್ವೀಕರಿಸಲು ಬಂದಿದ್ದೇನೆ. ಹೊಸ ನಿಯಾಮವಳಿ ಮೂಲಕ ತಡೆಯಲು ಮುಂದಾಗಿದ್ದಾರೆ. ಇದರಿಂದ ಅವರಿಗೆ ಏನು ದೊರಕಲ್ಲ ಎಂದು ಕಿಡಿಕಾರಿದ್ದರು.

ಸಿಎಂ ಕುರ್ಚಿ ಮೇಲೆ ಟವಲ್‌ ಹಾಕಿದವರಿಂದಲೇ ಮುಡಾ ಹಗರಣ ಬಯಲು: ಎಚ್‌ಡಿಕೆ

ಮೈಸೂರು: ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದಲೇ ಮುಡಾ ಹಗರಣ (MUDA Scam) ಬಯಲಿಗೆ ಬಂದಿದೆ. ಇಲ್ಲವಾದರೆ ಇಷ್ಟು ದಿನ ಹೊರಗೆ ಬಾರದ ಹಗರಣ ಈಗ ಬಂದಿದ್ದು ಯಾಕೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಮಂಡ್ಯದಲ್ಲಿ (Mandya News) ಇಂದು ಜನತಾದರ್ಶನ (Janata Darshana) ನಡೆಸಿದ ಎಚ್‌ಡಿಕೆ, ಅದಕ್ಕೂ ಮುನ್ನ ದೇವಾಲಯ ಭೇಟಿ ನೀಡುವ ಸಂದರ್ಭದಲ್ಲಿ ಮಾಧ್ಯಮಗಳ ಮುಂದೆ ಮಾತನಾಡಿದರು. ʼನನ್ನ ಜನತಾ ದರ್ಶನ ಕಾರ್ಯಕ್ರಮ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲʼ ಎಂದು ಗುಡುಗಿದರು.

ಮುಡಾ ಹಗರಣ ಬಯಲು ಹಿಂದೆ, ಸಿಎಂ ಕುರ್ಚಿ ಮೇಲೆ ಟವಲ್ ಹಾಕಿರುವವರ ಪಾತ್ರ ಇದೆ. ಬಿಜೆಪಿಯವರು ಹೋರಾಟ ಮಾಡುತ್ತಿದ್ದಾರೆ ಅಷ್ಟೇ. ಆದರೆ ಹಗರಣ ಆಚೆ ಬರಲು ಕಾಂಗ್ರೆಸ್‌ನವರೇ ಒಳಗಿನಿಂದ ಕುಮ್ಮಕ್ಕು ಕೊಡುತ್ತಿದ್ದಾರೆ. ಈಗ ಸಿಡಿ ಫ್ಯಾಕ್ಟರಿ ಕ್ಲೋಸ್ ಆಗಿದೆ, ಮುಡಾ ವಿಚಾರ ಶುರುವಾಗಿದೆ. ಈ ಬಗ್ಗೆ ನನಗೆ ಮಾಹಿತಿ ಇದೆ. ಸಿಎಂ ಸಿದ್ದರಾಮಯ್ಯ ಪತ್ನಿಗೆ ಆ ಜಾಗ ಹೇಗೆ ಬಂತು ಅಂತಲೂ ನನಗೆ ಗೊತ್ತಿದೆ ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.

ಸಿಎಂ ತಾವು ಕಳೆದುಕೊಂಡ ಸೈಟಿಗೆ 62 ಕೋಟಿ ರೂ. ಪರಿಹಾರ ಕೇಳುತ್ತಿದ್ದಾರೆ. ಇವರಿಗೆ ಬಡವರ ಕಷ್ಟ ಗೊತ್ತಿದೆಯಾ? ಹಾಗೆ ಕೇಳುವ ಸಿಎಂ ಭೂಮಿ ಕಳೆದುಕೊಂಡು ಬೀದಿಯಲ್ಲಿ ನಿಂತಿರುವ ಇತರ ರೈತರಿಗೂ ಹಾಗೇ ಪರಿಹಾರ ಕೊಡಿಸಲಿ. ಕೊಡಿಸ್ತಾರಾ? ಎಂದು ಅವರು ಸವಾಲು ಹಾಕಿದರು.

ನನ್ನ ಜನತಾ ದರ್ಶನ ವಿಚಾರದಲ್ಲಿ ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಜನತಾ ದರ್ಶನದ ಬಗ್ಗೆಯೇ ಸಚಿವ ಸಂಪುಟದ ಸಭೆ ಕರೆದು ಚರ್ಚೆ ಮಾಡಿದ್ದಾರೆ. ನೀವು ಅಧಿಕಾರಿಗಳನ್ನು ಇದರಿಂದ ದೂರು ಇಡಬಹುದು. ಆದರೆ ಜನರನ್ನು ನನ್ನಿಂದ ದೂರ ಮಾಡಲು ಸಾಧ್ಯವಿಲ್ಲ. ಈ ಹಿಂದೆ ಬೆಂಗಳೂರು ಗ್ರಾಮಂತರದ ಸಂಸದರು ಈ ರೀತಿ ಸಭೆ ಮಾಡಿದ್ದಾಗ ಏನು ಮಾಡ್ತಿದ್ರಿ? ಚುನಾವಣೆಗೆ ಬಂದು ಜನ ಸ್ಪಂದನ ಕಾರ್ಯಕ್ರಮ ಮಾಡಿದಾಗ ಎಲ್ಲಿ ಹೋಗಿದ್ರು? ಈಗ ಜನತಾ ದರ್ಶನ ತಪ್ಪಿಸಲು ಸರ್ಕಾರ ಮುಂದಾಗಿದೆ. ಯಾವುದೇ ಕಾರಣಕ್ಕೂ ಜನತಾ ದರ್ಶನ ನಿಲ್ಲಿಸಲು ಸಾಧ್ಯವಿಲ್ಲ ಎಂದು ಅವರು ನುಡಿದರು.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಿಚಾರಣೆ 2 ವಾರ ಮುಂದೂಡಿಕೆ

ಇದಕ್ಕೂ ಮುನ್ನ ಅವರು ಮಂಡ್ಯ ಕಾಳಿಕಾಂಬ ದೇವಾಲಯಕ್ಕೆ ಭೇಟಿ ನೀಡಿದರು. ಅಲ್ಲಿ ದೇವಾಲಯದ ಮುಂದೆ ಬಿಜೆಪಿ ನಾಯಕರು ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಬಿಲ್ವ ಮರಕ್ಕೆ ಕಟ್ಟಿದ್ದ ಗೆಲುವಿನ ಗಂಟು ಬಿಚ್ಚಿ ದೇವಿಗೆ ಪೂಜೆ ಸಲ್ಲಿಸಿದರು. ಚುನಾವಣೆ ವೇಳೆ ಕುಮಾರಸ್ವಾಮಿ ಗೆಲುವಿಗಾಗಿ ಪ್ರಾರ್ಥಿಸಿ ಕಾರ್ಯಕರ್ತರು ಈ ಹರಕೆ ಕಟ್ಟಿದ್ದರು. ಕಾಳಿಕಾಂಬ ದೇವಾಲಯದಲ್ಲಿ ಪೂಜೆ ಸಲ್ಲಿಕೆ ಬಳಿಕ ಅಂಬೇಡ್ಕರ್ ಭವನದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಸಾವಿರಾರು ಮಂದಿ ಮುಂಜಾನೆಯಿಂದಲೇ ಕೇಂದ್ರ ಸಚಿವರ ಜನತಾ ದರ್ಶನಕ್ಕಾಗಿ ಆಗಮಿಸಿದ್ದಾರೆ.

Continue Reading
Advertisement
Neet UG
ದೇಶ5 mins ago

NEET UG: ನೀಟ್‌ ಅಕ್ರಮ: ಪರೀಕ್ಷೆಯನ್ನು ರದ್ದುಗೊಳಿಸುವುದು ಸಮಂಜಸವಲ್ಲ ಎಂದ ಕೇಂದ್ರ

Assault case
ತುಮಕೂರು13 mins ago

Assault Case : ಜಮೀನು ವಿವಾದ; ನೀರಿನಲ್ಲಿ ಮುಳುಗಿಸಿ, ಕುಡುಗೋಲು, ಕಲ್ಲಿನಿಂದ ವ್ಯಕ್ತಿ ಮೇಲೆ ಹಲ್ಲೆ!

Samantha Ruth Prabhu Doctor Calls Health Illiterate
ಟಾಲಿವುಡ್13 mins ago

Samantha Ruth Prabhu: ಸಮಂತಾಗೆ ಜೈಲಿಗೆ ಕಳಿಸಿ ಎಂದ ವೈದ್ಯ ; ನಟಿ ಹೇಳಿದ್ದೇನು?

DK Shivakumar
ಕರ್ನಾಟಕ19 mins ago

DK Shivakumar: ಕುಮಾರಸ್ವಾಮಿ ಒಬ್ಬ ಹುಚ್ಚ, ಚಿಕಿತ್ಸೆ ಪಡೆಯುವುದು ಉತ್ತಮ: ಡಿಸಿಎಂ ಡಿಕೆಶಿ

Team India
ಕ್ರೀಡೆ29 mins ago

Team India: ರೋಹಿತ್​, ಸೂರ್ಯಕುಮಾರ್​, ದುಬೆ, ಜೈಸ್ವಾಲ್​ಗೆ ಸನ್ಮಾನ ಮಾಡಿದ ಸಿಎಂ ಏಕನಾಥ್​ ಶಿಂಧೆ

Guarantee Schemes
ಕರ್ನಾಟಕ29 mins ago

Guarantee Schemes: ಗ್ಯಾರಂಟಿ ಯೋಜನೆಗಳಿಗೆ ದಲಿತರ 14 ಸಾವಿರ ಕೋಟಿ ರೂ. ಕಸಿದು ಕೊಟ್ಟ ಸಿದ್ದರಾಮಯ್ಯ!

T20 World Cup
ಪ್ರಮುಖ ಸುದ್ದಿ29 mins ago

T20 World Cup :​ ವಿಜಯೋತ್ಸವದ ಕ್ಷಣಗಳನ್ನು ಉಲ್ಲೇಖಿಸಿ ಬಿಸಿಸಿಐಗೆ ಕುಟುಕಿದ ಆದಿತ್ಯ ಠಾಕ್ರೆ

Sexual Harassment
Latest40 mins ago

Sexual Harassment: 80 ವರ್ಷದ ಅಜ್ಜಿಯ ಮೇಲೆ ನಿರಂತರ ಅತ್ಯಾಚಾರ; ಮೊಮ್ಮಗನಿಗೆ ಜೀವಾವಧಿ ಶಿಕ್ಷೆ

ಕರ್ನಾಟಕ48 mins ago

Satish Jarkiholi: ಜನತಾ ದರ್ಶನಕ್ಕೆ ಅಧಿಕಾರಿಗಳು ಗೈರಾಗುವುದು ತಪ್ಪು; ಎಚ್‌ಡಿಕೆ ಪರ ಸಚಿವ ಸತೀಶ್ ಜಾರಕಿಹೊಳಿ ಬ್ಯಾಟಿಂಗ್!

Kangana Ranaut Madhavan's Hilarious Reaction To Double-Meaning
ಬಾಲಿವುಡ್48 mins ago

Kangana Ranaut: ನಿಮ್ಮೊಳಗೆ ರಾಷ್ಟ್ರೀಯ ಪ್ರಶಸ್ತಿ ಇದೆಯಾ ಎಂದು ಕಂಗನಾಗೆ ಡಬಲ್‌ ಮೀನಿಂಗ್‌ ಪ್ರಶ್ನೆ;ಬಿದ್ದು ಬಿದ್ದು ನಕ್ಕ ಆರ್ ಮಾಧವನ್!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lovers Fighting
ಚಿಕ್ಕಬಳ್ಳಾಪುರ49 mins ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

karnataka rain
ಮಳೆ3 hours ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Elephant attack in Hassan and Chikmagalur
ಹಾಸನ5 hours ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು6 hours ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು7 hours ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ11 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ23 hours ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ1 day ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

wild animal attack
ಬೆಂಗಳೂರು ಗ್ರಾಮಾಂತರ1 day ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ1 day ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

ಟ್ರೆಂಡಿಂಗ್‌