Pushpa 2: ʻಪುಷ್ಪ 2ʼ ಸಿನಿಮಾ ದೃಶ್ಯ ಲೀಕ್‌; ಟ್ರಕ್‌ಗಳನ್ನು ನೋಡಿ ದಂಗಾದ ಫ್ಯಾನ್ಸ್‌! - Vistara News

South Cinema

Pushpa 2: ʻಪುಷ್ಪ 2ʼ ಸಿನಿಮಾ ದೃಶ್ಯ ಲೀಕ್‌; ಟ್ರಕ್‌ಗಳನ್ನು ನೋಡಿ ದಂಗಾದ ಫ್ಯಾನ್ಸ್‌!

Pushpa 2: ಒಂದು ಕಡೆ ಫ್ಯಾನ್ಸ್‌ ಈ ವಿಡಿಯೊ ನೋಡಿ ಸಂತಸ ವ್ಯಕ್ತಪಡಿಸಿದರೆ, ಇನ್ನೂ ಕೆಲವರು ಈ ರೀತಿ ಸಿನಿಮಾ ದೃಶ್ಯಗಳು ಲೀಕ್‌ ಆಗುವುದು ಸರಿಯಲ್ಲ ಎಂದು ಅಭಿಪ್ರಾಯಗಳನ್ನು ಕಮೆಂಟ್‌ನಲ್ಲಿ ಹೇಳುತ್ತಿದ್ದಾರೆ.

VISTARANEWS.COM


on

Truck Pushpa sets Leaked Video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಲ್ಲು ಅರ್ಜುನ್ (allu arjun) ಅಭಿನಯದ ಪುಷ್ಪ-2 (Pushpa 2) ಸಿನಿಮಾಗಾಗಿ ಅಲ್ಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಪಡೆದ ನಂತರ ಇನ್ನಷ್ಟು ಕುತೂಹಲ ಮೂಡಿಸುತ್ತಿದೆ. ಇದೀಗ ಪುಷ್ಪ -2 ಸೆಟ್‌ಗಳಿಂದ ವಿಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಚಿತ್ರದಲ್ಲಿ ಅಲ್ಲು ಅರ್ಜುನ್ ಗ್ಯಾಂಗ್‌ಸ್ಟರ್ ಆಗಿ ನಟಿಸಿದ್ದಾರೆ. ಟ್ರಕ್​ಗಳಲ್ಲಿ ರಕ್ತಚಂದನ ಸಾಗಿಸುವ ರೀತಿಯ ವಿಡಿಯೋ ಒಂದು ಇತ್ತೀಚೆಗೆ ವೈರಲ್ ಆಗಿತ್ತು. ಇದನ್ನು ನೋಡಿದ ಅನೇಕರು ಇದು ‘ಪುಷ್ಪ 2’ ಚಿತ್ರದ ಶೂಟಿಂಗ್ ದೃಶ್ಯ ಎನ್ನಲಾಗಿತ್ತು. ಈಗ ನೂರಾರು ಸಂಖ್ಯೆಯಲ್ಲಿ ಟ್ರಕ್​ಗಳು ನಿಂತಿರು ವಿಡಿಯೊ ವೈರಲ್ ಆಗಿದೆ.

ಒಂದು ಕಡೆ ಫ್ಯಾನ್ಸ್‌ ಈ ವಿಡಿಯೊ ನೋಡಿ ಸಂತಸ ವ್ಯಕ್ತಪಡಿಸಿದರೆ, ಇನ್ನೂ ಕೆಲವರು ಈ ರೀತಿ ಸಿನಿಮಾ ದೃಶ್ಯಗಳು ಲೀಕ್‌ ಆಗುವುದು ಸರಿಯಲ್ಲ ಎಂದು ಅಭಿಪ್ರಾಯಗಳನ್ನು ಕಮೆಂಟ್‌ನಲ್ಲಿ ಹೇಳುತ್ತಿದ್ದಾರೆ. ಪುಷ್ಪ’ ಸಿನಿಮಾ ರಿಲೀಸ್ ಆಗಿದ್ದು 2021ರ ಡಿಸೆಂಬರ್​ ತಿಂಗಳಲ್ಲಿ. ಸಿನಿಮಾ ರಿಲೀಸ್ ಆಗಿ ಎರಡು ವರ್ಷ ಕಳೆಯುತ್ತಾ ಬಂದರೂ ‘ಪುಷ್ಪ 2’ ಚಿತ್ರದ ಬಗ್ಗೆ ದೊಡ್ಡ ಮಟ್ಟದ ಅಪ್​ಡೇಟ್​ನ ತಂಡ ನೀಡಿಲ್ಲ. ಸಿನಿಮಾ ರಿಲೀಸ್​ ದಿನಾಂಕ ಕೂಡ ಘೋಷಣೆ ಆಗಿಲ್ಲ. ಇದು ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ. 

ಕೆಲವು ಮೂಲಗಳ ಪ್ರಕಾರ ಸಿನಿಮಾದ ಟಾಕಿ ಭಾಗದ ಚಿತ್ರೀಕರಣ ಪೂರ್ಣಗೊಂಡಿದ್ದು, ಹಾಡುಗಳು ಹಾಗೂ ಕೆಲವು ಪ್ಯಾಚ್ ವರ್ಕ್ ಚಿತ್ರೀಕರಣವಷ್ಟೆ ಬಾಕಿ ಇದೆ ಎನ್ನಲಾಗುತ್ತಿದೆ. ಜತೆಗೆ ಕೆಲ ಫೈಟ್ ಚಿತ್ರೀಕರಣವೂ ಆಗಬೇಕಿದೆ ಎನ್ನಲಾಗುತ್ತಿದೆ. ಇದೇ ಕಾರಣಕ್ಕೆ ರಾಮೋಜಿ ರಾವ್ ಫಿಲ್ಮ್ಂ ಸಿಟಿಯಲ್ಲಿ ಸೆಟ್‌ಗಳನ್ನು ಹಾಕಿ ಸಿನಿಮಾದ ಚಿತ್ರೀಕರಣ ಮಾಡಲಾಗುತ್ತಿದೆ. ಎರಡನೇ ಹಂತದ ಚಿತ್ರೀಕರಣದಲ್ಲಿ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ಫಹಾದ್ ಫಾಸಿಲ್ ಅವರುಗಳ ಜತೆಗೆ ಡಾಲಿ ಧನಂಜಯ್ ಸಹ ಭಾಗಿಯಾಗಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ರಾಮೋಜಿ ರಾವ್ ಫಿಲ್ಮ್ಂ ಸಿಟಿಯಲ್ಲಿ ಚಿತ್ರೀಕರಣ ಮುಗಿದ ಬಳಿಕ ಹೊರಾಂಗಣದಲ್ಲಿ ಕೆಲವು ದೃಶ್ಯಗಳ ಚಿತ್ರೀಕರಣವನ್ನು ಚಿತ್ರತಂಡ ಮಾಡಲಿದೆ. ಆ ನಂತರ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕಾರ್ಯ ಪ್ರಾರಂಭವಾಗಲಿದೆ. ಪುಷ್ಪ ಸಿನಿಮಾವನ್ನು ಸುಕುಮಾರ್ ನಿರ್ದೇಶನ ಮಾಡುತ್ತಿದ್ದಾರೆ. ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣ ಮಾಡಿದ್ದಾರೆ.

ಇದನ್ನೂ ಓದಿ: Pushpa 2 Update: ಪುಷ್ಪ 2 ಸಿನಿಮಾದಿಂದ ಬಂತು ಬಿಗ್‌ ಅಪ್‌ಡೇಟ್‌; ಅಲ್ಲು ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌!

ಕೆಲವು ದಿನಗಳ ಹಿಂದೆ ಫಹಾದ್ ಫಾಸಿಲ್ (Fahadh Faasil) ತಮ್ಮ ಭಾಗದ ಶೂಟಿಂಗ್‌ ಪೂರ್ಣಗೊಂಡಿರುವುದಾಗಿ ಹೇಳಿಕೊಂಡಿದ್ದರು. ʻಭನ್ವರ್ ಸಿಂಗ್ ಶೇಖಾವತ್ʼ ಪಾತ್ರದ ಚಿತ್ರೀಕರಣ ಪೂರ್ಣಗೊಳಿಸಿದೆ ಎಂದು ನಟ ಇನ್‌ಸ್ಟಾದಲ್ಲಿ ಪೋಸ್ಟ್‌ ಹಂಚಿಕೊಂಡಿದ್ದರು. ಚಿತ್ರದ ನಿರ್ಮಾಣ ಸಂಸ್ಥೆಯಾದ ಮೃತ್ರಿ ಮೂವಿ ಮೇಕರ್ಸ್‌ ಚಿತ್ರದ ಕುರಿತು ಈ ಬಗ್ಗೆ ಅಪ್‌ಡೇಟ್ ಹಂಚಿಕೊಂಡಿತ್ತು.

ಪುಷ್ಪ-2 ಸಿನಿಮಾದಲ್ಲಿ ಅಲ್ಲು ಅರ್ಜುನ್‌ಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದು, ಫಹಾದ್ ಫಾಸಿಲ್, ಅನುಸೂಯ, ಸುನಿಲ್ ಮತ್ತು ಇತರರು ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಮೈತ್ರಿ ಮೂವಿ ಮೇಕರ್ಸ್ ಪ್ರೊಡಕ್ಷನ್ ನಡಿ ಮೂಡಿಬರುತ್ತಿರುವ ಪುಷ್ಪ-2 ಸಿನಿಮಾಗೆ ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Niveditha Gowda: ಮಗು ವಿಚಾರಕ್ಕೆ ಮುನಿಸು; ಒಂದೇ ಕಾರಲ್ಲಿ ಬಂದು ಡಿವೋರ್ಸ್‌ ಅರ್ಜಿ ಸಲ್ಲಿಸಿದ ಚಂದನ್‌-ನಿವೇದಿತಾ!

Niveditha Gowda: ನಟಿ ನಿವೇದಿತಾ ಗೌಡ (Niveditha Gowda) ಹಾಗೂ ಸಂಗೀತ ನಿರ್ದೇಶಕ ಚಂದನ್​ ಶೆಟ್ಟಿ ಆಗಾಗ ತಮ್ಮ ಪೋಸ್ಟ್‌ ಹಾಗೂ ರೀಲ್ಸ್‌ ಮೂಲಕ ಸುದ್ದಿಯಾಗುತ್ತಲೇ ಇರುತ್ತಿದ್ದರು. ಹಿಂದೊಮ್ಮೆ ಅಂಡರ್​ ವಾಟರ್​ ಶೂಟ್​ ಮಾಡಿರುವ ಜೋಡಿ ಲಿಪ್‌ ಕಿಸ್‌ ಮಾಡಿದ ರೊಮ್ಯಾಂಟಿಕ್​ ವಿಡಿಯೊ ಶೇರ್‌ ಮಾಡಿಕೊಂಡಿತ್ತು. ಸಾವಿರಾರು ಜನರು ಲೈಕ್​ ಮಾಡಿದ್ದರು. ಕೆಲವರು ಈ ವಿಡಿಯೊಗೆ ಮೆಚ್ಚುಗೆ ಸೂಚಿಸಿದರೆ ಇನ್ನು ಕೆಲವರು ನೆಗೆಟಿವ್​ ಕಮೆಂಟ್​ ಕೂಡ ಮಾಡಿದ್ದರು.

VISTARANEWS.COM


on

Chandan Shetty divorce main Reason children
Koo

ಬೆಂಗಳೂರು: ರ್‍ಯಾಪರ್‌ ಚಂದನ್ ಶೆಟ್ಟಿ (Chandan Shetty) ಮತ್ತು ನಿವೇದಿತಾ ಗೌಡ ದಾಂಪತ್ಯದಲ್ಲಿ ಬಿರುಕು ಉಂಟಾಗಿದ್ದು, ವಿಚ್ಛೇದನ ಕೋರಿ ಬೆಂಗಳೂರು ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಒಂದೇ ಕಾರಿನಲ್ಲಿ ಇಬ್ಬರೂ ಒಟ್ಟಿಗೆ ಬಂದು ಅರ್ಜಿ ಸಲ್ಲಿಸಿ ಖುಷಿಯಾಗಿಯೇ ವಾಪಸ್‌ ಹೊರಟ್ಟಿದ್ದಾರೆ. ಮಗು ವಿಚಾರಕ್ಕೆ ಸಂಬಂಧ ಪಟ್ಟಂತೆ ಡಿವೋರ್ಸ್‌ಗೆ ಮುಂದಾಗಿದೆ ಈ ದಂಪತಿ. ಮಗು ಈಗಲೇ ಬೇಡ ಎಂದು ನಿವೇದಿತಾ ಕೌಟುಂಬಿಕ ನ್ಯಾಯಾಲಯದ ಮಧ್ಯಸ್ಥಿಕೆ ಸಂದರ್ಭದಲ್ಲಿ ಹೇಳಿದ್ದಾರೆ.

ಫ್ಯಾಮಿಲಿ ಕೋರ್ಟ್‌ನಲ್ಲಿ ಜೂನ್ 6ರಂದು ಅರ್ಜಿ ಸಲ್ಲಿಸಿದ್ದರು. ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಅರ್ಜಿ ಸಲ್ಲಿಸಿದ್ದರು. ಮಿಡಿಯೆಟರ್ ಸಂಧಾನಕ್ಕೆ ಕೊನೆಗೂ ದಂಪತಿ ಒಪ್ಪಿಲ್ಲ. ಡಿವೋರ್ಸ್‌ ಪಡೆದುಕೊಂಡರೂ ಜೀವನಾಂಶ ಬೇಡ ಎಂದಿದ್ದಾರೆ ನಿವೇದಿತಾ. ಡಿವೋರ್ಸ್ ಸಿಕ್ಕ ನಂತರ ನಿವೇದಿತಾ ವಿದೇಶಕ್ಕೆ ಹೋಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಚಂದನ್​ ಹಾಗೂ ನಿವೇದಿತಾ ವಿಚ್ಛೇದನ ಅರ್ಜಿ (ಕೇಸ್ ನಂಬರ್-Mc 3388-/2024) ಕೋರ್ಟ್​ ಮುಂದಕ್ಕೆ ಬಂದಿತ್ತು. ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಎಸ್ ಜ್ಯೋತಿ ಶ್ರೀ ಅವರು ಬೆಂಚ್​ ಮುಂದೆ ಈ ಪ್ರಕರಣ ಬಂದಿತ್ತು. ಅರ್ಜಿಯನ್ನು ವಿಚಾರಣೆ ಮಾಡುವ ಮೊದಲು ಕಾನೂನು ಪ್ರಕ್ರಿಯೆಯಂತೆ ಮಿಡಿಯೇಷನ್ ಪ್ರಕ್ರಿಯೆ ಒಳಪಡಬೇಕಾಯಿತು.ಮೀಡಿಯೇಷನ್ ಸೆಂಟರ್​ನಲ್ಲಿ ವಿಚ್ಛೇದನ ನೀಡದಂತೆ ಸಲಹೆ ಕೊಡುತ್ತಾರೆ. ಪರಸ್ಪರ ಒಂದಾಗಿ ಬಾಳಿ ಎಂದು ಸಲಹೆ ನೀಡುತ್ತಾರೆ. ಇಬ್ಬರು ಒಪ್ಪದೇ ಇದ್ದರೆ ನ್ಯಾಯಾಧೀಶರ ಮುಂದೆ ಹಾಜರು ಪಡಿಸುತ್ತಾರೆ. ಬಳಿಕ ನ್ಯಾಯಾಧೀಶರು ನಿರ್ಧಾರದ ಬಗ್ಗೆ ಕೇಳುತ್ತಾರೆ. ಬಳಿಕ ವಿಚ್ಛೇದನಕ್ಕೆ ಒಪ್ಪಿಗೆ ಕೊಡುತ್ತಾರೆ.

ಇದನ್ನೂ ಓದಿ: Niveditha Gowda : ಬೇಡ ನಾವು ಜತೆಯಾಗಿ ಇರಲ್ಲ; ಸಂಧಾನಕ್ಕೆ ಒಪ್ಪದ ಚಂದನ್​- ನಿವೇದಿತಾ

ಜೋಡಿ ಒಟ್ಟಿಗೆ ರೀಲ್ಸ್‌ ಮಾಡಿ ಸಾಕಷ್ಟು ಕ್ರೇಜ್‌ ಪಡೆದುಕೊಂಡಿತ್ತು. ಇತ್ತೀಚೆಗೆ ನಿವೇದಿತಾ ಒಬ್ಬರೇ ರೀಲ್ಸ್‌ ಶೇರ್‌ ಮಾಡಿಕೊಳ್ಳುತ್ತಿದ್ದರು. ಹೀಗಾಗಿ ಅವರ ಫ್ಯಾನ್ಸ್‌ ಜೋಡಿ ಬೇರೆಯಾಗಿದೆ ಎಂದು ಕಮೆಂಟ್‌ ಮಾಡುತ್ತಿದ್ದರು.

ಯುವ ದಸರಾ ಕಾರ್ಯಕ್ರಮದಲ್ಲಿ ಚಂದನ್‌ ಶೆಟ್ಟಿ ಅವರು ನಿವೇದಿತಾ ಗೌಡ ಪ್ರಪೋಸ್‌ ಮಾಡಿದ್ದೂ ವಿವಾದಕ್ಕೆ ಕಾರಣವಾಗಿತ್ತು. ಸಾಕಷ್ಟು ಮಂದಿ ಇದಕ್ಕೆ ಟೀಕೆ ವ್ಯಕ್ತಪಡಿಸಿದ್ದರು. ಬಿಗ್‌ ಬಾಸ್‌ ಐದನೇ ಸೀಸನ್‌ನಲ್ಲಿ ಚಂದನ್‌ ಗೌಡ ಹಾಗೂ ನಿವೇದಿತಾ ಗೌಡ ಮೊದಲ ಬಾರಿಗೆ ಭೇಟಿಯಾಗಿದ್ದರು. ಮೊದಲಿಗೆ ಬಿಗ್‌ಬಾಸ್‌ನಲ್ಲಿ ನಿವೇದಿತಾಳನ್ನು ತನ್ನ ತಂಗಿ ಎಂದೇ ಹೇಳುತ್ತಿದ್ದ ಚಂದನ್‌ ಗೌಡ ಬಳಿಕ ಮದುವೆಯಾಗಿದ್ದರು.

ಇದೇ ವರ್ಷ ಮೇ 12ರಂದು ನಿವೇದಿತಾ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ್ದರು ಚಂದನ್‌. ಆರು ದಿನಗಳ ಹಿಂದೆಯಷ್ಟೇ ʻಕೋಟಿʼ ಸಿನಿಮಾ ಪ್ರಚಾರಕ್ಕೂ ಒಟ್ಟಿಗೆ ಕಾಣಿಸಿಕೊಂಡಿದ್ದರು. ಇದೀಗ ಇಬ್ಬರೂ ಬೇರೆಯಾಗಿದ್ದಾರೆ. ಇದೀಗ ಜೋಡಿಯ ಫ್ಯಾನ್ಸ್‌ ಕಮೆಂಟ್‌ ಮೂಲಕ ಬೇಸರ ಹೊರ ಹಾಕಿದ್ದಾರೆ.

ಟ್ರೋಲಿಗರ ಕೆಂಗಣ್ಣಿಗೆ ಗುರಿಯಾಗಿದ್ದ ಜೋಡಿ!

ನಟಿ ನಿವೇದಿತಾ ಗೌಡ (Niveditha Gowda) ಹಾಗೂ ಸಂಗೀತ ನಿರ್ದೇಶಕ ಚಂದನ್​ ಶೆಟ್ಟಿ ಆಗಾಗ ತಮ್ಮ ಪೋಸ್ಟ್‌ ಹಾಗೂ ರೀಲ್ಸ್‌ ಮೂಲಕ ಸುದ್ದಿಯಾಗುತ್ತಲೇ ಇರುತ್ತಿದ್ದರು. ಹಿಂದೊಮ್ಮೆ ಅಂಡರ್​ ವಾಟರ್​ ಶೂಟ್​ ಮಾಡಿರುವ ಜೋಡಿ ಲಿಪ್‌ ಕಿಸ್‌ ಮಾಡಿದ ರೊಮ್ಯಾಂಟಿಕ್​ ವಿಡಿಯೊ ಶೇರ್‌ ಮಾಡಿಕೊಂಡಿತ್ತು. ಸಾವಿರಾರು ಜನರು ಲೈಕ್​ ಮಾಡಿದ್ದರು. ಕೆಲವರು ಈ ವಿಡಿಯೊಗೆ ಮೆಚ್ಚುಗೆ ಸೂಚಿಸಿದರೆ ಇನ್ನು ಕೆಲವರು ನೆಗೆಟಿವ್​ ಕಮೆಂಟ್​ ಕೂಡ ಮಾಡಿದ್ದರು.

ಬಿಗ್​ ಬಾಸ್​ ಕನ್ನಡ ಸೀಸನ್​ 5’ ರಿಯಾಲಿಟಿ ಶೋನಲ್ಲಿ ನಿವೇದಿತಾ ಗೌಡ ಹಾಗೂ ಚಂದನ್​ ಶೆಟ್ಟಿ ಅವರು ಸ್ಪರ್ಧಿಸಿದ್ದರು. ಅಲ್ಲಿಯೇ ಅವರಿಗೆ ಮೊದಲ ಬಾರಿಗೆ ಪರಿಚಯ ಆಗಿದ್ದು. 2020ರ ಫೆಬ್ರವರಿಯಲ್ಲಿ ಹಸೆಮಣೆ ಏರಿದರು. ಗಾಯಕ ಸಂಗೀತ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಚಂದನ್​ ಶೆಟ್ಟಿ ಅವರು ಸಿನಿಮಾದಲ್ಲಿಯೂ ನಟಿಸಿದ್ದಾರೆ. ಚಂದನ್ ಶೆಟ್ಟಿ ಅವರ ಮೊದಲ ಸಿನಿಮಾದ ಶೀರ್ಷಿಕೆ ‘ಎಲ್ರ ಕಾಲೆಳೆಯುತ್ತೆ ಕಾಲ’.

Continue Reading

ಸ್ಯಾಂಡಲ್ ವುಡ್

Chandan Shetty: ತಂಗಿ ತಂಗಿ ಎಂದೇ ಮದುವೆಯಾಗಿದ್ದ ಚಂದನ್‌! ಇವರ ಬಾಳಲ್ಲಿ ವಿಲನ್‌ ಆಗಿದ್ದು ಯಾರು?

Chandan Shetty: ಯುವ ದಸರಾ ಕಾರ್ಯಕ್ರಮದಲ್ಲಿ ಚಂದನ್‌ ಶೆಟ್ಟಿ ಅವರು ನಿವೇದಿತಾ ಗೌಡ ಪ್ರಪೋಸ್‌ ಮಾಡಿದ್ದೂ ವಿವಾದಕ್ಕೆ ಕಾರಣವಾಗಿತ್ತು. ಸಾಕಷ್ಟು ಮಂದಿ ಇದಕ್ಕೆ ಟೀಕೆ ವ್ಯಕ್ತಪಡಿಸಿದ್ದರು. ಬಿಗ್‌ ಬಾಸ್‌ ಐದನೇ ಸೀಸನ್‌ನಲ್ಲಿ ಚಂದನ್‌ ಗೌಡ ಹಾಗೂ ನಿವೇದಿತಾ ಗೌಡ ಮೊದಲ ಬಾರಿಗೆ ಭೇಟಿಯಾಗಿದ್ದರು. ಮೊದಲಿಗೆ ಬಿಗ್‌ಬಾಸ್‌ನಲ್ಲಿ ನಿವೇದಿತಾಳನ್ನು ತನ್ನ ತಂಗಿ ಎಂದೇ ಹೇಳುತ್ತಿದ್ದ ಚಂದನ್‌ ಗೌಡ ಬಳಿಕ ಮದುವೆಯಾಗಿದ್ದರು.

VISTARANEWS.COM


on

Chandan Shetty divorce main reason social nedia craze
Koo

ಬೆಂಗಳೂರು: ರ್‍ಯಾಪರ್‌ ಚಂದನ್ ಶೆಟ್ಟಿ (Chandan Shetty) ಮತ್ತು ನಿವೇದಿತಾ ಗೌಡ ದಾಂಪತ್ಯದಲ್ಲಿ ಬಿರುಕು ಉಂಟಾಗಿದ್ದು, ವಿಚ್ಛೇದನ ಕೋರಿ ಬೆಂಗಳೂರು ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ

.ಪರಸ್ಪರ ಒಪ್ಪಿಗೆ ಮೇರೆಗೆ ಕಿರುತೆರೆ ದಂಪತಿ ಚಂದನ್ ಶೆಟ್ಟಿ ನಿವೇದಿತಾ ಗೌಡ ವಿಚ್ಛೇದನ ಕೋರಿ ಬೆಂಗಳೂರಿನ ಫ್ಯಾಮಿಲಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ಇನ್ನು ಚೆಂದವಾಗಿದ್ದ ಜೋಡಿ ಬೇರೆಯಾಗಲು ಕಾರಣ ನಿವೇದಿತಾ ಅವರಿಗಿದ್ದ ಸೋಷಿಯಲ್‌ ಮೀಡಿಯಾ ಕ್ರೇಜ್‌ ಎಂದು ಹೇಳಲಾಗುತ್ತಿದೆ. ಸೋಷಿಯಲ್‌ ಮೀಡಿಯಾವೇ ಇಬ್ಬರ ಬದುಕಿನಲ್ಲಿ ವಿಲನ್‌ ಆಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಜೋಡಿ ಒಟ್ಟಿಗೆ ರೀಲ್ಸ್‌ ಮಾಡಿ ಸಾಕಷ್ಟು ಕ್ರೇಜ್‌ ಪಡೆದುಕೊಂಡಿತ್ತು. ಇತ್ತೀಚೆಗೆ ನಿವೇದಿತಾ ಒಬ್ಬರೇ ರೀಲ್ಸ್‌ ಶೇರ್‌ ಮಾಡಿಕೊಳ್ಳುತ್ತಿದ್ದರು. ಹೀಗಾಗಿ ಅವರ ಫ್ಯಾನ್ಸ್‌ ಜೋಡಿ ಬೇರೆಯಾಗಿದೆ ಎಂದು ಕಮೆಂಟ್‌ ಮಾಡುತ್ತಿದ್ದರು.

ಯುವ ದಸರಾ ಕಾರ್ಯಕ್ರಮದಲ್ಲಿ ಚಂದನ್‌ ಶೆಟ್ಟಿ ಅವರು ನಿವೇದಿತಾ ಗೌಡ ಪ್ರಪೋಸ್‌ ಮಾಡಿದ್ದೂ ವಿವಾದಕ್ಕೆ ಕಾರಣವಾಗಿತ್ತು. ಸಾಕಷ್ಟು ಮಂದಿ ಇದಕ್ಕೆ ಟೀಕೆ ವ್ಯಕ್ತಪಡಿಸಿದ್ದರು. ಬಿಗ್‌ ಬಾಸ್‌ ಐದನೇ ಸೀಸನ್‌ನಲ್ಲಿ ಚಂದನ್‌ ಗೌಡ ಹಾಗೂ ನಿವೇದಿತಾ ಗೌಡ ಮೊದಲ ಬಾರಿಗೆ ಭೇಟಿಯಾಗಿದ್ದರು. ಮೊದಲಿಗೆ ಬಿಗ್‌ಬಾಸ್‌ನಲ್ಲಿ ನಿವೇದಿತಾಳನ್ನು ತನ್ನ ತಂಗಿ ಎಂದೇ ಹೇಳುತ್ತಿದ್ದ ಚಂದನ್‌ ಗೌಡ ಬಳಿಕ ಮದುವೆಯಾಗಿದ್ದರು.

ಇದೇ ವರ್ಷ ಮೇ 12 ರಂದು ನಿವೇದಿತಾ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ್ದರು ಚಂದನ್‌. ಆರು ದಿನಗಳ ಹಿಂದೆಯಷ್ಟೇ ʻಕೋಟಿʼ ಸಿನಿಮಾ ಪ್ರಚಾರಕ್ಕೂ ಒಟ್ಟಿಗೆ ಕಾಣಿಸಿಕೊಂಡಿದ್ದರು. ಇದೀಗ ಇಬ್ಬರೂ ಬೇರೆಯಾಗಿದ್ದಾರೆ. ಇದೀಗ ಜೋಡಿಯ ಫ್ಯಾನ್ಸ್‌ ಕಮೆಂಟ್‌ ಮೂಲಕ ಬೇಸರ ಹೊರ ಹಾಕಿದ್ದಾರೆ.

ಟ್ರೋಲಿಗರ ಕೆಂಗಣ್ಣಿಗೆ ಗುರಿಯಾಗಿದ್ದ ಜೋಡಿ!

ನಟಿ ನಿವೇದಿತಾ ಗೌಡ (Niveditha Gowda) ಹಾಗೂ ಸಂಗೀತ ನಿರ್ದೇಶಕ ಚಂದನ್​ ಶೆಟ್ಟಿ ಆಗಾಗ ತಮ್ಮ ಪೋಸ್ಟ್‌ ಹಾಗೂ ರೀಲ್ಸ್‌ ಮೂಲಕ ಸುದ್ದಿಯಾಗುತ್ತಲೇ ಇರುತ್ತಿದ್ದರು. ಹಿಂದೊಮ್ಮೆ ಅಂಡರ್​ ವಾಟರ್​ ಶೂಟ್​ ಮಾಡಿರುವ ಜೋಡಿ ಲಿಪ್‌ ಕಿಸ್‌ ಮಾಡಿದ ರೊಮ್ಯಾಂಟಿಕ್​ ವಿಡಿಯೊ ಶೇರ್‌ ಮಾಡಿಕೊಂಡಿತ್ತು. ಸಾವಿರಾರು ಜನರು ಲೈಕ್​ ಮಾಡಿದ್ದರು. ಕೆಲವರು ಈ ವಿಡಿಯೊಗೆ ಮೆಚ್ಚುಗೆ ಸೂಚಿಸಿದರೆ ಇನ್ನು ಕೆಲವರು ನೆಗೆಟಿವ್​ ಕಮೆಂಟ್​ ಕೂಡ ಮಾಡಿದ್ದರು.

ಬಿಗ್​ ಬಾಸ್​ ಕನ್ನಡ ಸೀಸನ್​ 5’ ರಿಯಾಲಿಟಿ ಶೋನಲ್ಲಿ ನಿವೇದಿತಾ ಗೌಡ ಹಾಗೂ ಚಂದನ್​ ಶೆಟ್ಟಿ ಅವರು ಸ್ಪರ್ಧಿಸಿದ್ದರು. ಅಲ್ಲಿಯೇ ಅವರಿಗೆ ಮೊದಲ ಬಾರಿಗೆ ಪರಿಚಯ ಆಗಿದ್ದು. 2020ರ ಫೆಬ್ರವರಿಯಲ್ಲಿ ಹಸೆಮಣೆ ಏರಿದರು. ಗಾಯಕ ಸಂಗೀತ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಚಂದನ್​ ಶೆಟ್ಟಿ ಅವರು ಸಿನಿಮಾದಲ್ಲಿಯೂ ನಟಿಸಿದ್ದಾರೆ. ಚಂದನ್ ಶೆಟ್ಟಿ ಅವರ ಮೊದಲ ಸಿನಿಮಾದ ಶೀರ್ಷಿಕೆ ‘ಎಲ್ರ ಕಾಲೆಳೆಯುತ್ತೆ ಕಾಲ’.

Continue Reading

ಸ್ಯಾಂಡಲ್ ವುಡ್

Niveditha Gowda: ನಿವೇದಿತಾ- ಚಂದನ್‌ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್‌ ಕೊಟ್ರಾ ಬಾರ್ಬಿ ಡಾಲ್‌?

Niveditha Gowda: ಬಿಗ್​ ಬಾಸ್​ ಕನ್ನಡ ಸೀಸನ್​ 5’ ರಿಯಾಲಿಟಿ ಶೋನಲ್ಲಿ ನಿವೇದಿತಾ ಗೌಡ ಹಾಗೂ ಚಂದನ್​ ಶೆಟ್ಟಿ ಅವರು ಸ್ಪರ್ಧಿಸಿದ್ದರು. ಅಲ್ಲಿಯೇ ಅವರಿಗೆ ಮೊದಲ ಬಾರಿಗೆ ಪರಿಚಯ ಆಗಿದ್ದು. 2020ರ ಫೆಬ್ರವರಿಯಲ್ಲಿ ಹಸೆಮಣೆ ಏರಿದರು. ಇಬ್ಬರೂ ಕೂಡ ಸೋಷಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿದ್ದಾರೆ.

VISTARANEWS.COM


on

Niveditha Gowda chandan shetty divorce
Koo

ಕಿರುತೆರೆ ಬಾರ್ಬಿ ಡಾಲ್‌ ಖ್ಯಾತಿಯ ನಿವೇದಿತಾ ಗೌಡ (Niveditha Gowda) ಹಾಗೂ ಗಾಯಕ ಚಂದನ್‌ ಶೆಟ್ಟಿ ದಂಪತಿ ಡಿವೋರ್ಸ್‌ ಪಡೆದುಕೊಂಡಿದೆ ಎಂದು ವರದಿಯಾಗಿದೆ. ಈ ಬಗ್ಗೆ ದಂಪತಿ ಇನ್ನೂ ಸ್ಪಷ್ಟನೆ ಕೊಟ್ಟಿಲ್ಲ. ಕರಿಯರ್ ದೃಷ್ಟಿಯಿಂದ ಪರಸ್ಪರ ಒಪ್ಪಿಗೆ ಮೂಲಕ ವಿಚ್ಛೇದನ ಪಡೆದುಕೊಳ್ಲುತ್ತಿದ್ದಾರೆ ಎನ್ನಲಾಗಿದೆ. ಇಂದು ಶಾಂತಿನಗರ ಕೋರ್ಟ್ ನಲ್ಲಿ ದಂಪತಿ ವಿಚ್ಛೇದನ ಪಡೆದುಕೊಳ್ಳಲಿದ್ದಾರೆ ಎನ್ನಲಾಗಿದೆ.

ಬಿಗ್​ ಬಾಸ್​ ಕನ್ನಡ ಸೀಸನ್​ 5’ ರಿಯಾಲಿಟಿ ಶೋನಲ್ಲಿ ನಿವೇದಿತಾ ಗೌಡ ಹಾಗೂ ಚಂದನ್​ ಶೆಟ್ಟಿ ಅವರು ಸ್ಪರ್ಧಿಸಿದ್ದರು. ಅಲ್ಲಿಯೇ ಅವರಿಗೆ ಮೊದಲ ಬಾರಿಗೆ ಪರಿಚಯ ಆಗಿದ್ದು.2020ರ ಫೆಬ್ರವರಿಯಲ್ಲಿ ಹಸೆಮಣೆ ಏರಿದ್ದರು.

ಚಂದನ್ ಶೆಟ್ಟಿ ಹಾಗೂ ಪತ್ನಿ ನಿವೇದಿತಾ ಗೌಡ ಆಗಾಗ ಒಟ್ಟಿಗೆ ರೀಲ್ಸ್‌ ಶೇರ್‌ ಮಾಡಿಕೊಳ್ಳುತ್ತಿದ್ದರು.

ಕೆಲವು ರೀಲ್ಸ್‌ಗಳನ್ನು ನೋಡಿ ನೆಟ್ಟಿಗರು ಗರಂ ಆಗುತ್ತಿದ್ದರು. ನೆಟ್ಟಿಗರು ಕಮೆಂಟ್‌ ಮಾಡಿ ʻʻಗಂಡ-ಹೆಂಡತಿ ನಡುವಿನ ರೊಮ್ಯಾನ್ಸ್​ ಖಾಸಗಿಯಾಗಿ ಇರಬೇಕು, ಇದನ್ನೆಲ್ಲ ಸಾರ್ವಜನಿಕವಾಗಿ ಪ್ರದರ್ಶಿಸುವ ಅಗತ್ಯವಿಲ್ಲʼʼ ಎಂದು ಟೀಕೆ ಮಾಡುತ್ತಿದ್ದರು.

Continue Reading

ಟಾಲಿವುಡ್

Posani Krishna Murali: ಟಾಲಿವುಡ್‌ನಲ್ಲಿ ಪೋಸಾನಿ ಕೃಷ್ಣ ಮುರಳಿ ವೃತ್ತಿಜೀವನ ಅಂತ್ಯ?

Posani Krishna Murali: ಪವನ್ ಕಲ್ಯಾಣ್ ಮತ್ತು ಚಿರಂಜೀವಿ ಜತೆ ಪೋಸಾನಿ ನಟಿಸಿದ್ದರೂ ಮೆಗಾ ಸಹೋದರರನ್ನು ಗೌರವಿಸಲೇ ಇಲ್ಲ. ಇತ್ತೀಚಿನವರೆಗೂ, ಆಂಧ್ರಪ್ರದೇಶದಲ್ಲಿ ಚುನಾವಣಾ ಪ್ರಚಾರದ ಸಮಯದಲ್ಲಿ, ಪೋಸಾನಿ ಅವರು ಪವನ್ ಕಲ್ಯಾಣ್ ಅವರನ್ನು ಹೆಚ್ಚು ಟೀಕಿಸುತ್ತಲೇ ಇದ್ದರು. ಜಗನ್ ಅವರು ಪೋಸಾನಿನ ನಂಬಿ ಆಂಧ್ರಪ್ರದೇಶ ಫಿಲ್ಮ್​ ಡೆವಲಪ್​ಮೆಂಟ್​ನಲ್ಲಿ ಪ್ರಮುಖ ಪಾತ್ರ ನೀಡಿದರು. ಆದರೆ, ಪೋಸಾನಿ ಅವರ ಗಮನ ಅಲ್ಲಿರಲೇ ಇಲ್ಲ. ಈಗ ಟಿಡಿಪಿ ಮೈತ್ರಿ ಆಂಧ್ರ ಪ್ರದೇಶದಲ್ಲಿ ಗೆಲುವು ಕಂಡಿದೆ. ಹೀಗಾಗಿ ಈಗ ಪೋಸಾನಿ ಕೃಷ್ಣ ಮುರಳಿ ಅವರ ವೃತ್ತಿಜೀವನ ಅಂತ್ಯವಾಗಿದೆ ಎಂದು ಹೇಳಲಾಗುತ್ತಿದೆ.

VISTARANEWS.COM


on

Posani Krishna Murali End of Career In Tollywood
Koo

ಬೆಂಗಳೂರು: ಪೋಸಾನಿ ಕೃಷ್ಣ ಮುರಳಿ (Posani Krishna Murali) ತೆಲುಗು ಚಿತ್ರರಂಗದ ಜನಪ್ರಿಯ ನಟರಲ್ಲಿ ಒಬ್ಬರು. ಹಾಸ್ಯ ನಟನಾಗಿ, ವಿಲನ್ ಆಗಿ ಗಮನ ಸೆಳೆದಿದ್ದರು. ಚಲನಚಿತ್ರ ನಿರ್ಮಾಪಕರೂ ಆಗಿದ್ದು, ಕೆಲವು ಬ್ಲಾಕ್‌ಬಸ್ಟರ್‌ ಸಿನಿಮಾಗಳನ್ನು ನೀಡಿದ್ದಾರೆ. ಇದೇ ವೇಳೆ ಪೋಸಾನಿ ಕೂಡ ರಾಜಕೀಯಕ್ಕೆ ಎಂಟ್ರಿ ಕೊಟ್ಟು ಕೆಟ್ಟ ಹೆಸರು ಬಂತು.  ಆರಂಭದಲ್ಲಿ ʻಪ್ರಜಾರಾಜ್ಯಂʼ ಪಕ್ಷ ಸೇರಿ ಚುನಾವಣೆಯಲ್ಲಿ ಸೋತಿದ್ದರು. ನಂತರ ಅವರು ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ವೈಎಸ್​ಆರ್​ಸಿಪಿ ಸೇರಿದರು. ಈಗ ನಾರಾ ಚಂದ್ರಬಾಬು ನಾಯ್ಡು, ಪವನ್ ಕಲ್ಯಾಣ್ ಅಧಿಕಾರಕ್ಕೆ ಬಂದಿದ್ದು ಪೋಸಾನಿ ಕೃಷ್ಣ ವೃತ್ತಿ ಜೀವನ ಕೊನೆ ಆಗಲಿದೆ ಎನ್ನಲಾಗುತ್ತಿದೆ.

ಪೋಸಾನಿ ವೈಎಸ್‌ಆರ್‌ಸಿಪಿಗೆ ಕಾಲಿಟ್ಟಾಗಿನಿಂದ ಕೆಟ್ಟ ಹೆಸರು ಗಳಿಸಿದ್ದರು. ನಾರಾ ಚಂದ್ರ ಬಾಬು ನಾಯ್ಡು ಅವರನ್ನು ಪೋಸಾನಿ ಟೀಕಿಸಿದರು ಆದರೆ, ಕಾಲಕ್ರಮೇಣ ಅವಕಾಶ ಸಿಕ್ಕಾಗಲೆಲ್ಲ ಮೆಗಾಸ್ಟಾರ್ ಚಿರಂಜೀವಿ ಅವರು ಟೀಕಿಸಿದರು. ಇದಾದ ಬಳಿಕ ಪೋಸಾನಿ ಕೃಷ್ಣ ಅವರಿಗೆ ಸಿನಿಮಾ ರಂಗದಲ್ಲಿ ಆಫರ್​ಗಳೇ ಇಲ್ಲದಂತೆ ಆಯಿತು. ಆ ಬಳಿಕ ಪೋಸಾನಿ ಕೃಷ್ಣ ಅವರು ಪವನ್ ಕಲ್ಯಾಣ್​ನ ಟೀಕಿಸಲು ಆರಂಭಿಸಿದರು. ಅವರ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದರು.

ಪವನ್ ಕಲ್ಯಾಣ್ ಮತ್ತು ಚಿರಂಜೀವಿ ಜತೆ ಪೋಸಾನಿ ನಟಿಸಿದ್ದರೂ ಮೆಗಾ ಸಹೋದರರನ್ನು ಗೌರವಿಸಲೇ ಇಲ್ಲ. ಇತ್ತೀಚಿನವರೆಗೂ, ಆಂಧ್ರಪ್ರದೇಶದಲ್ಲಿ ಚುನಾವಣಾ ಪ್ರಚಾರದ ಸಮಯದಲ್ಲಿ, ಪೋಸಾನಿ ಅವರು ಪವನ್ ಕಲ್ಯಾಣ್ ಅವರನ್ನು ಹೆಚ್ಚು ಟೀಕಿಸುತ್ತಲೇ ಇದ್ದರು. ಜಗನ್ ಅವರು ಪೋಸಾನಿನ ನಂಬಿ ಆಂಧ್ರಪ್ರದೇಶ ಫಿಲ್ಮ್​ ಡೆವಲಪ್​ಮೆಂಟ್​ನಲ್ಲಿ ಪ್ರಮುಖ ಪಾತ್ರ ನೀಡಿದರು. ಆದರೆ, ಪೋಸಾನಿ ಅವರ ಗಮನ ಅಲ್ಲಿರಲೇ ಇಲ್ಲ. ಈಗ ಟಿಡಿಪಿ ಮೈತ್ರಿ ಆಂಧ್ರ ಪ್ರದೇಶದಲ್ಲಿ ಗೆಲುವು ಕಂಡಿದೆ. ಹೀಗಾಗಿ ಈಗ ಪೋಸಾನಿ ಕೃಷ್ಣ ಮುರಳಿ ಅವರ ವೃತ್ತಿಜೀವನ ಅಂತ್ಯವಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Kannada New Movie: ಹೊಸ ಸಿನಿಮಾಗೆ ಕಥೆ ಬರೆಯಿರಿ: 1 ಲಕ್ಷ ರೂ. ಬಹುಮಾನ ಗೆಲ್ಲಿರಿ!

ಆಂಧ್ರ ಪ್ರದೇಶದ ಚಂದ್ರಬಾಬು ನಾಯ್ಡು (N Chandrababu Naidu) ನೇತೃತ್ವದ ಟಿಡಿಪಿ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ (Nitish Kumar) ನೇತೃತ್ವದ ಜೆಡಿಯು ಈಗಾಗಲೇ ಎನ್‌ಡಿಎ ಸರ್ಕಾರ ರಚನೆಗೆ ಬೆಂಬಲ ವ್ಯಕ್ತಪಡಿಸಿದೆ. ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಚಂದ್ರಬಾಬು ನಾಯ್ಡು (Chandrababu Naidu) ನೇತೃತ್ವದ ತೆಲುಗು ದೇಶಂ ಪಕ್ಷ (TDP) ಭರ್ಜರಿ ಜಯ ದಾಖಲಿಸಿದೆ. ಬಿಜೆಪಿ ಮತ್ತು ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಪಕ್ಷ (JSP) ಜತೆಗೂಡಿ ಎನ್‌ಡಿಎ (NDA) ಬಣದ ಅಡಿಯಲ್ಲಿ ಸ್ಪರ್ಧಿಸಿದ್ದ ಟಿಡಿಪಿ ಸ್ಪಷ್ಟ ಬಹುಮತ ಪಡೆದುಕೊಂಡಿದೆ. ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್ಆರ್ ಕಾಂಗ್ರೆಸ್ ಪಕ್ಷ (YSRCP) ಆಡಳಿತ ವಿರೋಧಿ ಅಲೆಯ ರಭಸಕ್ಕೆ ಸಿಕ್ಕಿ ಕೊಚ್ಚಿ ಹೋಗಿದೆ (AP Election Results 2024).

2019ರ ಚಿತ್ರಣ

2019ರ ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ವೈಎಸ್‌ಆರ್‌ಸಿಪಿ 151 ಸ್ಥಾನಗಳಲ್ಲಿ ಜಯಭೇರಿ ಬಾರಿಸಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದರು. ಆಗ ಆಡಳಿತದಲ್ಲಿದ್ದ ಟಿಡಿಪಿ ಕೇವಲ 23 ಸ್ಥಾನಗಳನ್ನು ಗೆದ್ದು ಮುಖಭಂಗ ಅನುಭವಿಸಿತ್ತು. ಪವನ್‌ ಕಲ್ಯಾಣ್‌ ನೇತೃತ್ವದ ಜೆಎಸ್‌ಪಿ ಒಂದೇ ಒಂದು ಸ್ಥಾನವನ್ನು ಗೆದ್ದಿದ್ದರೆ, ಕಾಂಗ್ರೆಸ್‌ ಹಾಗೂ ಬಿಜೆಪಿಗೆ ಖಾತೆ ತೆರೆದಿರಲಿಲ್ಲ. ಈ ಬಾರಿ ಚಿತ್ರಣ ಸಂಪೂರ್ಣ ಬದಲಾಗಿದೆ. ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರಿಗೆ ತೀವ್ರ ಮುಖಭಂಗವಾಗಿದೆ.

Continue Reading
Advertisement
Shreyas Iyer
ಕ್ರೀಡೆ34 mins ago

Shreyas Iyer : ಬಿಸಿಸಿಐ ಕೇಂದ್ರ ಗುತ್ತಿಗೆ ತಪ್ಪಿದ ಕುರಿತು ಮಾತನಾಡಿದ ಶ್ರೇಯಸ್ ಅಯ್ಯರ್​; ಏನಂದ್ರು ಅವರು?

assault case
ಕ್ರೈಂ41 mins ago

Assault Case: ಹರಿಹರದಲ್ಲಿ ನೈತಿಕ ಪೊಲೀಸ್ ಗಿರಿ; ಯುವಕನನ್ನು ರೂಮ್‌ನಲ್ಲಿ ಹಾಕಿ ಮನಸೋ ಇಚ್ಛೆ ಹಲ್ಲೆ

Narendra Modi
ದೇಶ1 hour ago

Narendra Modi: ಭಾನುವಾರ ಸಂಜೆ 7.15ಕ್ಕೆ ಮೋದಿ ಪ್ರಮಾಣವಚನ‌; ಹಲವು ಸಂಸದರಿಗೂ ಮಂತ್ರಿ ಭಾಗ್ಯ!

Niveditha Gowda
ಸಿನಿಮಾ1 hour ago

Niveditha Gowda : ಇನ್​ಸ್ಟಾಗ್ರಾಮ್​ನಲ್ಲಿ ಚಂದನ್ ಶೆಟ್ಟಿ ಅನ್​ಫಾಲೋ ಮಾಡಿದ ನಿವೇದಿತ ಗೌಡ

UG Neet 2024
ಕರ್ನಾಟಕ1 hour ago

NEET UG 2024: ಯುಜಿ ನೀಟ್: ರೋಲ್ ನಂಬರ್ ದಾಖಲಿಸಲು ಸದ್ಯದಲ್ಲೇ ಅವಕಾಶ

Niveditha Gowda
ಪ್ರಮುಖ ಸುದ್ದಿ2 hours ago

Niveditha Gowda : ಡಿವೋರ್ಸ್​ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡ ನಿವೇದಿತಾ ಗೌಡ, ಅವರ ಇನ್​ಸ್ಟಾಗ್ರಾಮ್ ಸಂದೇಶ ಇಲ್ಲಿದೆ

Hamare Baarah
ಸಿನಿಮಾ2 hours ago

Hamare Baarah: ಮುಸ್ಲಿಂ ಮಹಿಳೆಯರ ಕುರಿತ ಹಮಾರೆ ಬಾರಾ ಸಿನಿಮಾ ರಿಲೀಸ್‌ಗೆ ಕೋರ್ಟ್‌ ಗ್ರೀನ್‌ ಸಿಗ್ನಲ್!

Job News
ಕರ್ನಾಟಕ2 hours ago

Job News: ನಿಗಮ-ಮಂಡಳಿ ನೇಮಕಾತಿ; 684 ಹುದ್ದೆವಾರು ಪರಿಷ್ಕೃತ ಅಂಕಪಟ್ಟಿ ಪ್ರಕಟ

T20 World Cup
ಪ್ರಮುಖ ಸುದ್ದಿ2 hours ago

T20 World Cup : ಭಾರತ ತಂಡಕ್ಕೆ ಎಚ್ಚರಿಕೆ ನೀಡಿದ ಅಮೆರಿಕ ತಂಡ

All achievements in life are easy if there is Guru's grace says Sri Satyatmatirtha Swamiji
ಮೈಸೂರು3 hours ago

Mysore News: ಗುರುಗಳ ಅನುಗ್ರಹವಿದ್ದರೆ ಜೀವನದಲ್ಲಿ ಎಲ್ಲ ಸಾಧನೆಗಳು ಸುಲಭ; ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ4 hours ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ5 hours ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ4 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ4 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ4 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು6 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌