Actor G Marimuthu: ಇಹಲೋಕ ತ್ಯಜಿಸಿದ ತಮಿಳಿನ ಖ್ಯಾತ ನಟ ನಿರ್ದೇಶಕ ಮಾರಿಮುತ್ತು - Vistara News

South Cinema

Actor G Marimuthu: ಇಹಲೋಕ ತ್ಯಜಿಸಿದ ತಮಿಳಿನ ಖ್ಯಾತ ನಟ ನಿರ್ದೇಶಕ ಮಾರಿಮುತ್ತು

Actor G Marimuthu: ಧಾರಾವಾಹಿ, ಸಿನಿಮಾಗಳಲ್ಲಿ ನಟಿಸುತ್ತಿದ್ದ ಮಾರಿಮುತ್ತು ಅವರು ಹಠಾತ್ ಹೃದಯಾಘಾತದಿಂದ ಮೃತಪಟ್ಟಿದ್ದು, ಚಿತ್ರರಂಗದಲ್ಲಿ ಆಘಾತವನ್ನುಂಟು ಮಾಡಿದೆ.

VISTARANEWS.COM


on

Actor G Marimuthu
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಟ ಹಾಗೂ ನಿರ್ದೇಶಕ ಮಾರಿಮುತ್ತು (Actor G Marimuthu) ಹೃದಯಾಘಾತದಿಂದ ಸೆ.8ರಂದು ನಿಧನರಾಗಿದ್ದಾರೆ. ಅವರಿಗೆ ಕೇವಲ 58 ವರ್ಷ ವಯಸ್ಸಾಗಿತ್ತು. ಸೂಪರ್‌ ಸ್ಟಾರ್‌ ರಜನಿಕಾಂತ್ ಅವರ ಇತ್ತೀಚೆಗೆ ಬಿಡುಗಡೆಯಾದ ʻಜೈಲರ್ʼ ಚಿತ್ರದಲ್ಲಿ ಖಳನಾಯಕ ವಿನಾಯಕ್ ಅವರ ಬಲಗೈ ಬಂಟನಾಗಿ ನಟಿಸಿದ್ದಾರೆ. ಧಾರಾವಾಹಿ, ಸಿನಿಮಾಗಳಲ್ಲಿ ನಟಿಸುತ್ತಿದ್ದ ಮಾರಿಮುತ್ತು ಅವರು ಹಠಾತ್ ಹೃದಯಾಘಾತದಿಂದ ಮೃತಪಟ್ಟಿದ್ದು, ಚಿತ್ರರಂಗದಲ್ಲಿ ಆಘಾತವನ್ನುಂಟು ಮಾಡಿದೆ.

ಮಾರಿಮುತ್ತು ಯಾರು?

1990ರಲ್ಲಿ ಜಿ ಮಾರಿಮುತ್ತು ಅವರು ತಮ್ಮ ಹುಟ್ಟೂರನ್ನು ತೊರೆದು ಚಲನಚಿತ್ರ ನಿರ್ದೇಶಕರಾಗುವ ಕನಸುಗಳೊಂದಿಗೆ ಚೆನ್ನೈಗೆ ಪ್ರಯಾಣ ಬೆಳೆಸಿದರು. ಆರಂಭದಲ್ಲಿ, ಅವರು ಹೋಟೆಲ್‌ಗಳಲ್ಲಿ ಕೆಲಸ ಮಾಡಿ, ಬಳಿಕ ಸಿನಿಮಾ ಕಡೆ ಒಲವು ತೋರಿಸಿದರು. ‘ಅರಣ್ಮನೈ ಕಿಲಿ’ (1993) ಮತ್ತು ‘ಎಲ್ಲಾಮೆ ಎನ್ ರಸತಾನ್’ (1995) ನಂತಹ ಚಲನಚಿತ್ರಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದರು. ಹೆಸರಾಂತ ಚಲನಚಿತ್ರ ನಿರ್ಮಾಪಕರಾದ ಮಣಿರತ್ನಂ, ವಸಂತ್, ಸೀಮಾನ್ ಮತ್ತು ಎಸ್‌ಜೆ ಸೂರ್ಯ ಅವರೊಂದಿಗೆ ಕೆಲಸ ಮಾಡಿದರು. ಸಿಲಂಬರಸನ್ ಅವರ ‘ಮನ್ಮಧನ್’ ​​ನಲ್ಲಿ ಸಹ ನಿರ್ದೇಶಕರಾಗಿ ಕೆಲಸ ಮಾಡಿದರು.

ಇದನ್ನೂ ಓದಿ: Kamal Haasan: ಕಮಲ್ ಹಾಸನ್ ಆಪ್ತ, ತಮಿಳಿನ ಖ್ಯಾತ ಹ್ಯಾಸ ನಟ ಆರ್‌ಎಸ್ ಶಿವಾಜಿ ನಿಧನ

ಮಾರಿಮುತ್ತು ಅವರು 2008ರಲ್ಲಿ ಪ್ರಸನ್ನ ಮತ್ತು ಉದಯತಾರಾ ಅಭಿನಯದ ‘ಕಣ್ಣುಂ ಕಣ್ಣುಂ’ ಚಿತ್ರದ ಮೂಲಕ ನಿರ್ದೇಶಕರಾಗಿ ಪದಾರ್ಪಣೆ ಮಾಡಿದರು. ಮಲಯಾಳಂ ಚಿತ್ರ ‘ಚಾಪ್ಪಾ ಕುರಿಶು’ (2011) ನಿಂದ ಸ್ಫೂರ್ತಿ ಪಡೆದು ‘ಪುಲಿವಾಲ್’ (2014) ಮಾಡಿದರು. ವಿವಿಧ ತಮಿಳು ಚಲನಚಿತ್ರಗಳಲ್ಲಿ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಂಡರು. ಅವರು ಮಿಸ್ಕಿನ್ ಅವರ ‘ಯುದ್ಧಮ್ ಸೇ’ (2011)ನಲ್ಲಿ ತಮ್ಮ ಚೊಚ್ಚಲ ಪ್ರವೇಶ ಮಾಡಿದರು, ಅಲ್ಲಿ ಅವರು ಭ್ರಷ್ಟ ಪೊಲೀಸ್ ಅಧಿಕಾರಿಯ ಪಾತ್ರವನ್ನು ನಿರ್ವಹಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Varalaxmi Sarathkumar: ಪ್ರಧಾನಿ ಮೋದಿಗೆ ಮದುವೆ ಆಮಂತ್ರಣ ನೀಡಿದ ನಟಿ ವರಲಕ್ಷ್ಮಿ

Varalaxmi Sarathkumar: ವರಲಕ್ಷ್ಮಿ ಅವರು ಇತ್ತೀಚೆಗೆ ಪ್ರಶಾಂತ್ ವರ್ಮಾ ಅವರ ತೇಜ ಸಜ್ಜಾ ಅಭಿನಯದ ತೆಲುಗು ಚಿತ್ರ ʻಹನುಮಾನ್ ಚಿತ್ರದಲ್ಲಿʼ ಕಾಣಿಸಿಕೊಂಡಿದ್ದರು. ಧನುಷ್ ಅವರ ಮುಂಬರುವ ತಮಿಳು ಚಿತ್ರ ʻರಾಯನ್‌ʼನಲ್ಲಿ ನಟಿಸಲು ರೆಡಿಯಾಗಿದ್ದಾರೆ. ʻಶಬರಿʼ ಎಂಬ ತೆಲುಗು ಚಿತ್ರದ ಹೊರತಾಗಿ ಮಲಯಾಳಂ ಚಿತ್ರ ʻಕಲರ್ಸ್ʼನಲ್ಲಿಯೂ ಅವರು ಕಾಣಿಸಿಕೊಳ್ಳಲಿದ್ದಾರೆ.

VISTARANEWS.COM


on

Varalaxmi Sarathkumar invite PM Narendra Modi for wedding
Koo

ಬೆಂಗಳೂರು: ತಮಿಳು-ತೆಲುಗು ನಟಿ ವರಲಕ್ಷ್ಮಿ ಶರತ್‌ಕುಮಾರ್ (Varalaxmi Sarathkumar) ಅವರು ತಮ್ಮ ಮದುವೆಯ ಆಮಂತ್ರಣವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೀಡಿದರು. ಭಾವಿ ಪತಿ ನಿಕೋಲಾಯ್ ಜತೆ ವರಲಕ್ಷ್ಮಿ ಅವರು ಪ್ರಧಾನಿ ಮೋದಿ ಅವರೊಂದಿಗೆ ಫೋಟೊಗೆ ಪೋಸ್‌ ಕೊಟ್ಟಿದ್ದಾರೆ. ವರಲಕ್ಷ್ಮಿ ಅವರು ಪ್ರಧಾನಿ ಮೋದಿಯವರೊಂದಿಗಿನ ಭೇಟಿಯ ಸೆಲ್ಫಿ ಸೇರಿದಂತೆ ಹಲವಾರು ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ʻʻನಮ್ಮ ಗೌರವಾನ್ವಿತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಜಿ ಅವರನ್ನು ಭೇಟಿ ಮಾಡಿ ಮದುವೆಗೆ ಆಮಂತ್ರಿಸಿದೆವು. ಅವರನ್ನು ಆಹ್ವಾನಿಸಿದ್ದು ನಮ್ಮ ಭಾಗ್ಯ. ನಿಮ್ಮ ಬ್ಯುಸಿ ಶೆಡ್ಯೂಲ್‌ನ ಹೊರತಾಗಿಯೂ ನಮ್ಮೊಂದಿಗೆ ಸಮಯ ಕಳೆದಿದ್ದೀರಿ. ನಿಜವಾಗಿಯೂ ಗೌರವ ಇದುʼʼಎಂದು ಬರೆದುಕೊಂಡಿದ್ದಾರೆ. ಈ ಮೊದಲು ರಜನಿಕಾಂತ್, ಅವರ ಪತ್ನಿ ಲತಾ ಮತ್ತು ಮಗಳು ಐಶ್ವರ್ಯಾ ರಜನಿಕಾಂತ್ ಅವರನ್ನು ಭೇಟಿಯಾಗಿ ಕರೆಯೋಲೆ ನೀಡಿದ್ದರು.

ವರಲಕ್ಷ್ಮಿ ಶರತ್‌ಕುಮಾರ್ ಜತೆ ತಂದೆ ಶರತ್‌ಕುಮಾರ್, ತಾಯಿ ಮತ್ತು ಸಹೋದರಿ ಸೇರಿ ಇಡೀ ಕುಟುಂಬವೇ ಜತೆಗೆ ಇತ್ತು. ಬಹುಭಾಷಾ ನಟ ಶರತ್‌ಕುಮಾರ್ (Varalaxmi Sarathkumar) ಅವರ ಪುತ್ರಿ ಮತ್ತು ಕನ್ನಡದ ʻಮಾಣಿಕ್ಯʼ ಸಿನಿಮಾದಲ್ಲಿ ಸುದೀಪ್‌ಗೆ ಜೋಡಿಯಾಗಿದ್ದ ನಟಿ ವರಲಕ್ಷ್ಮಿ ಶರತ್‌ಕುಮಾರ್ ಮುಂಬೈ ಮೂಲದ ಉದ್ಯಮಿ ಜತೆಗೆ 38ನೇ ವಯಸ್ಸಿನಲ್ಲಿ ಎಂಗೇಜ್‌ ಆಗಿದ್ದರು. ಮಾರ್ಚ್ 1ರಂದು ಮುಂಬೈನಲ್ಲಿ ತಮ್ಮ ಪ್ರೀತಿಪಾತ್ರರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಜುಲೈ 2ರಂದು ಜೋಡಿ ವಿವಾಹವಾಗಲಿದೆ.

ಇದನ್ನೂ ಓದಿ: Varalaxmi Sarathkumar: ರಜನಿಕಾಂತ್‌ಗೆ ಮದುವೆ ಆಮಂತ್ರಣ ನೀಡಿದ ನಟಿ ವರಲಕ್ಷ್ಮಿ

ವರಲಕ್ಷ್ಮಿ ಮತ್ತು ನಿಕೋಲಾಯ್ ಅವರ ಪ್ರೇಮಕಥೆ!

ನಟ ರಮೇಶ್ ಅವರು ಜೋಡಿಯ ಪ್ರೇಮಕಥೆಯನ್ನು ಬಹಿರಂಗಪಡಿಸಿದ್ದರು. “ನಟಿ ವರಲಕ್ಷ್ಮಿ ಶರತ್‌ಕುಮಾರ್ ಮತ್ತು ಗ್ಯಾಲರಿಸ್ಟ್ ನಿಕೋಲಾಯ್ ಸಚ್‌ದೇವ್ ಅವರು ಮಾರ್ಚ್ 1ರಂದು ಮುಂಬೈನಲ್ಲಿ ಕುಟುಂಬ ಮತ್ತು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು. ಕಳೆದ 14 ವರ್ಷಗಳಿಂದ ಪರಸ್ಪರ ಪರಿಚಿತರಾದ ವರಲಕ್ಷ್ಮಿ ಮತ್ತು ನಿಕೋಲಾಯ್ ತಮ್ಮ ಪೋಷಕರ ಆಶೀರ್ವಾದದೊಂದಿಗೆ ಉಂಗುರಗಳನ್ನು ಬದಲಾಯಿಸಿಕೊಂಡರು. ಈ ವರ್ಷದ ಕೊನೆಯಲ್ಲಿ ಜೋಡಿ ವಿವಾಹವಾಗಲಿದೆʼʼಎಂದು ಬರೆದುಕೊಂಡಿದ್ದರು.

ನಿಶ್ಚಿತಾರ್ಥ ಸಮಾರಂಭದಲ್ಲಿ, ವರಲಕ್ಷ್ಮಿ ರೇಷ್ಮೆ ಸೀರೆಯಲ್ಲಿ ಮಿಂಚುತ್ತಿದ್ದರು. 2020 ರಲ್ಲಿ ವರಲಕ್ಷ್ಮಿ ಅವರು ಸಿನಿಮಾಗಳನ್ನು ತೊರೆದು ಉದ್ಯಮಿಯೊಬ್ಬರನ್ನು ಮದುವೆಯಾಗುತ್ತಿದ್ದಾರೆ ಎಂಬ ವದಂತಿಗಳು ಹಬ್ಬಿತ್ತು. ಇದಾದ ಬಳಿಕ ನಟಿ ವದಂತಿಗಳನ್ನು ತಳ್ಳಿ ಹಾಕಿದ್ದರು.

ಇನ್ನೇನು ಶೀಘ್ರದಲ್ಲಿಯೇ ಈ ಜೋಡಿಯ ಮದುವೆಯ ದಿನಾಂಕವೂ ಘೋಷಣೆ ಆಗಲಿದೆ. ಈ ಮೊದಲು ವರಲಕ್ಷ್ಮಿ ಶರತ್‌ಕುಮಾರ್, ತಮಿಳು ನಟ ವಿಶಾಲ್ ಅವರನ್ನು ಪ್ರೀತಿಸುತ್ತಿದ್ದಾರೆ ಮತ್ತು ಇಬ್ಬರೂ ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎಂಬ ವದಂತಿಗಳು ಕಾಲಿವುಡ್‌ನಲ್ಲಿ ಹರಿದಾಡಿದ್ದವು.

ವರಲಕ್ಷ್ಮಿ ಅವರು ಇತ್ತೀಚೆಗೆ ಪ್ರಶಾಂತ್ ವರ್ಮಾ ಅವರ ತೇಜ ಸಜ್ಜಾ ಅಭಿನಯದ ತೆಲುಗು ಚಿತ್ರ ʻಹನುಮಾನ್ ಚಿತ್ರದಲ್ಲಿʼ ಕಾಣಿಸಿಕೊಂಡಿದ್ದರು. ಧನುಷ್ ಅವರ ಮುಂಬರುವ ತಮಿಳು ಚಿತ್ರ ʻರಾಯನ್‌ʼನಲ್ಲಿ ನಟಿಸಲು ರೆಡಿಯಾಗಿದ್ದಾರೆ. ʻಶಬರಿʼ ಎಂಬ ತೆಲುಗು ಚಿತ್ರದ ಹೊರತಾಗಿ ಮಲಯಾಳಂ ಚಿತ್ರ ʻಕಲರ್ಸ್ʼನಲ್ಲಿಯೂ ಅವರು ಕಾಣಿಸಿಕೊಳ್ಳಲಿದ್ದಾರೆ.

Continue Reading

ಮಾಲಿವುಡ್

Fahadh Faasil: ಮಲಯಾಳಂ ಸ್ಟಾರ್ ಫಹಾದ್ ಫಾಸಿಲ್ ವಿರುದ್ಧ ದೂರು ದಾಖಲು

Fahadh Faasil: ಎರ್ನಾಕುಲಂನ ಅಂಗಮಾಲಿ ತಾಲೂಕು ಆಸ್ಪತ್ರೆಯ ತುರ್ತು ವಿಭಾಗದಲ್ಲಿ ಪೇಯ್ನ್‌ಕಿಲಿ’ ಸಿನಿಮಾ ಚಿತ್ರೀಕರಣ ನಡೆಯುತ್ತಿತ್ತು. ಆಗ ರೋಗಿಗಳಿಗೆ ತೊಂದರೆಯಾಗಿದೆ ಎಂಬ ವರದಿಗಳು ಬಂದ ಹಿನ್ನೆಲೆಯಲ್ಲಿ ಕೇರಳ ರಾಜ್ಯ ಮಾನವ ಹಕ್ಕುಗಳ ಆಯೋಗ ಶುಕ್ರವಾರ ಕ್ರಮ ಕೈಗೊಂಡಿದೆ.

VISTARANEWS.COM


on

Fahadh Faasil in trouble faces Human Rights Commission action
Koo

ಕೇರಳ: ಮಲಯಾಳಂ ಸ್ಟಾರ್ ಫಹಾದ್ ಫಾಸಿಲ್ (Fahadh Faasil: ಮಲಯಾಳಂ ಸ್ಟಾರ್ ಫಹಾದ್ ಫಾಸಿಲ್ ವಿರುದ್ಧ ದೂರು ದಾಖಲು) ತಮ್ಮ ಸಿನಿಮಾಗಳ ಮೂಲಕ ಯಶಸ್ಸಿನಲ್ಲಿ ತೇಲುತ್ತಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ, ಅವರು ನಟ ಮತ್ತು ನಿರ್ಮಾಪಕರಾಗಿ ಗಮನ ಸೆಳೆದಿದ್ದಾರೆ. ಇತ್ತೀಚೆಗೆ ಫಹಾದ್ ನಿರ್ಮಾಣದ ‘ಪೇಯ್ನ್‌ಕಿಲಿ’ ( movie Painkili) ಚಿತ್ರದ ಚಿತ್ರೀಕರಣ ಕೇರಳದ ಆಸ್ಪತ್ರೆಯಲ್ಲಿ ನಡೆದಿತ್ತು. ಆದರೆ ಚಿತ್ರತಂಡ ಅಲ್ಲಿದ್ದವರಿಗೆ ತೊಂದರೆ ಕೊಟ್ಟ ಕಾರಣ ಮಾನವ ಹಕ್ಕುಗಳ ಆಯೋಗ ( Human Rights Commission) ಫಹಾದ್ ವಿರುದ್ಧ ದೂರು ದಾಖಲಿಸಿಕೊಂಡಿದೆ.

ಎರ್ನಾಕುಲಂನ ಅಂಗಮಾಲಿ ತಾಲೂಕು ಆಸ್ಪತ್ರೆಯ ತುರ್ತು ವಿಭಾಗದಲ್ಲಿ ಪೇಯ್ನ್‌ಕಿಲಿ’ ಸಿನಿಮಾ ಚಿತ್ರೀಕರಣ ನಡೆಯುತ್ತಿತ್ತು. ಆಗ ರೋಗಿಗಳಿಗೆ ತೊಂದರೆಯಾಗಿದೆ ಎಂಬ ವರದಿಗಳು ಬಂದ ಹಿನ್ನೆಲೆಯಲ್ಲಿ ಕೇರಳ ರಾಜ್ಯ ಮಾನವ ಹಕ್ಕುಗಳ ಆಯೋಗ ಶುಕ್ರವಾರ ಕ್ರಮ ಕೈಗೊಂಡಿದೆ.

ವರದಿಗಳ ಆಧಾರದ ಮೇಲೆ ಸ್ವಯಂ ಪ್ರಕರಣವನ್ನು ದಾಖಲಿಸಿಕೊಂಡ ಆಯೋಗದ ಸದಸ್ಯೆ ವಿ ಕೆ ಬೀನಾಕುಮಾರಿ, ಏಳು ದಿನಗಳಲ್ಲಿ ವಿವರಣೆ ವರದಿಯನ್ನು ಸಲ್ಲಿಸುವಂತೆ ಎರ್ನಾಕುಲಂ ಜಿಲ್ಲಾ ವೈದ್ಯಾಧಿಕಾರಿ ಮತ್ತು ಅಂಗಮಾಲಿ ತಾಲೂಕು ಆಸ್ಪತ್ರೆ ಅಧೀಕ್ಷಕರಿಗೆ ಸೂಚಿಸಿದರು.

ಇದನ್ನೂ ಓದಿ: Kalki 2898 AD: ಎರಡನೇ ದಿನವೂ ಒಳ್ಳೆಯ ಗಳಿಕೆ ಕಂಡ  ‘ಕಲ್ಕಿ 2898 ಎಡಿ’ ಸಿನಿಮಾ!

ಎರ್ನಾಕುಲಂ ಸ್ಥಳೀಯ ಮಾಧ್ಯಮ ವರದಿಗಳ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಚಿತ್ರೀಕರಣದ ವೇಳೆ ನಟರು ಸೇರಿದಂತೆ ಸುಮಾರು 50 ಮಂದಿ ಹಾಜರಿದ್ದು, ತುರ್ತು ಚಿಕಿತ್ಸಾ ಕೊಠಡಿಯನ್ನೂ ನಿರ್ಲಕ್ಷಿಸಿ ಶೂಟಿಂಗ್ ಹೆಸರಲ್ಲಿ ಚಿತ್ರತಂಡ ಗಲಾಟೆ ಮಾಡಿದೆ, ದೊಡ್ಡ ದೊಡ್ಡ ಲೈಟ್‌ಗಳನ್ನು ಹಾಕಿದ್ದಾರೆ. ತುರ್ತು ಚಿಕಿತ್ಸಾ ಕೊಠಡಿಯಲ್ಲಿ ಕೆಲವು ನಿರ್ಬಂಧಗಳನ್ನು ಹಾಕಿ ಅಲ್ಲಿನ ಸಿಬ್ಬಂದಿ ಹಾಗೂ ರೋಗಿಗಳಿಗೆ ತೊಂದರೆ ಕೊಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ವೈದ್ಯರು ಚಿಕಿತ್ಸೆ ಮುಂದುವರಿಸಿರುವಾಗಲೇ ಚಿತ್ರದ ಶೂಟಿಂಗ್ ನಡೆದಿದೆ ಎಂದು ತಿಳಿದುಬಂದಿದೆ.

ಗಂಭೀರ ಸ್ಥಿತಿಯಲ್ಲಿ ಬಂದ ರೋಗಿಗಳಿಗೆ ತುರ್ತು ಚಿಕಿತ್ಸಾ ವಿಭಾಗಕ್ಕೂ ಬರಲು ಸಾಧ್ಯವಾಗಲಿಲ್ಲ. ಮುಖ್ಯ ಗೇಟ್‌ನಿಂದ ಯಾರನ್ನೂ ಬಿಡಲಿಲ್ಲ. ಚಿತ್ರೀಕರಣದ ಸಮಯದಲ್ಲಿ ಮೌನವಾಗಿರಲು ಸಿಬ್ಬಂದಿಗಳು ರೋಗಿಗಳಿಗೆ ಮತ್ತು ಪಕ್ಕದಲ್ಲಿದ್ದವರಿಗೆ ಚಿತ್ರತಂಡ ಸೂಚಿಸುತ್ತಿದ್ದರು ಎಂದು ವರದಿಯಾಗಿದೆ.

‘ಪೇಯ್ನ್‌ಕಿಲಿ’ ಚಿತ್ರಕ್ಕೆ ಫಹಾದ್ ಫಾಸಿಲ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಹಾಗಾಗಿ ಅವರ ವಿರುದ್ಧವೇ ದೂರು ದಾಖಲಾಗಿದೆ. ಪ್ರಕರಣದ ಬಗ್ಗೆ ಫಹಾದ್ ಫಾಸಿಲ್ ಇನ್ನು ಪ್ರತಿಕ್ರಿಯಿಸಿಲ್ಲ. ಭಾರತೀಯ ಚಿತ್ರರಂಗದಲ್ಲಿ ಬಹುಬೇಡಿಕೆಯ ನಟನಾಗಿ ಅವರು ಗುರುತಿಸಿಕೊಂಡಿದ್ದಾರೆ.

Continue Reading

ಸ್ಯಾಂಡಲ್ ವುಡ್

Actor Darshan: 2024 ಡೇಂಜರಸ್ ಇಯರ್ ಫಾರ್ ಮಿ ಅನ್ನೋದು `ಡೆವಿಲ್‌’ಗೆ ಮೊದಲೇ ಗೊತ್ತಿತ್ತಾ?

Actor Darshan: ನಕಾರಾತ್ಮಕ ಅಂಶಗಳನ್ನ ನಾಶಮಾಡಲು ಸುದರ್ಶನ ಹೋಮ ಮಾಡಿಸಲಾಗುತ್ತೆ, ಶತ್ರುಗಳ ಮೇಲೆ ವಿಜಯ ಪ್ತಾಪ್ತಿಗೆ, ದುಷ್ಟ ಕಣ್ಣಿನಿಂದ ರಕ್ಷಣೆಗೆ ಈ‌ಹೋಮ ಮಾಡಲಾಗುತ್ತದೆ. ಹೀಗಾಗಿ ಡೆವಿಲ್ ಶೂಟಿಂಗ್ ನಲ್ಲೂ ಹೈ ಆಕ್ಷನ್ ಸೀನ್ ಇಡದಂತೆ ಮಿಲನಾ ಪ್ರಕಾಶ್‌ಗೆ ದರ್ಶನ್ ಆಪ್ತರು ಹೇಳಿದ್ದರಂತೆ. ಇಷ್ಟು ಜಾಗ್ರತೆ ವಹಿಸಿದ್ದರೂ ಸಿನಿಮಾ ಮಾಡುವಾಗ ಎಡಗೈಗೆ ಪ್ರ್ಯಾಕ್ಚರ್ ಆಗಿತ್ತು ಎನ್ನಲಾಗಿದೆ.

VISTARANEWS.COM


on

Actor Darshan Suffering From Sade Sati
Koo

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ (Actor Darshan) ಅವರು ನ್ಯಾಯಾಗ ಬಂಧನದಲ್ಲಿದ್ದಾರೆ. ಈಗಾಗಲೇ ದರ್ಶನ್‌ ಅವರಿಗೆ ಜಾಮೀನು ಸಿಗುವುದಂತೂ ಕಷ್ಟಕರ ಎನ್ನಲಾಗುತ್ತಿದೆ. ಇದರ ಜತೆಗೆ ಇದೀಗ ಈ ವರ್ಷ ಅಪಾಯ ಇದೆ ಎನ್ನುವುದು ದರ್ಶನ್​ಗೆ ಮೊದಲೇ ಗೊತ್ತಿತ್ತ ಎನ್ನುವ ಪ್ರಶ್ನೆ ಮೂಡಿದೆ. 13 ವರ್ಷಗಳಿಂದ ದಚ್ಚುಗೆ ಸಾಡೇಸಾತಿ ಕಾಟ ಇತ್ತು ಎನ್ನಲಾಹಿದೆ. ಸಾಡೇಸತಿ ಶುರುವಾದಗಲೂ ಸೆರೆವಾಸ ಅನುಭವಿಸಿದ್ದ ದಾಸ ಇದೀಗ ಸಾಡೇಸತಿ ಮುಗಿಯುವ ಸಮಯದಲ್ಲಿ ದರ್ಶನ್ ಜೈಲು ಪಾಲು ಆಗಿದ್ದಾರೆ ಎನ್ನಲಾಗಿದೆ.

ಎರಡು ತಿಂಗಳ ಹಿಂದೆ ನಟ ದರ್ಶನ್ ಸುದರ್ಶನ ಹೋಮ ಮಾಡಿಸಿದ್ದರು. ಅರೆಸ್ಟ್ ಆಗುವುದಕ್ಕೂ ಮುನ್ನ ಅವರು ಮನೆಯನ್ನು ಹೊಸದಾಗಿ ರಿನೋವೇಷನ್ ಮಾಡಿದ್ದರು. ಹೀಗಾಗಿ, ಅವರು ವಿಶೇಷ ಪೂಜೆ ಇಟ್ಟುಕೊಂಡಿದ್ದರು. ಈ ಕಾರಣದಿಂದಲೇ ವಿಜಯಲಕ್ಷ್ಮಿ ಅವರನ್ನು ಪೊಲೀಸರು ವಿಚಾರಣೆ ನಡೆಸಿದ್ದರು. ಕೊಲೆ ನಡೆದ ಬಳಿಕ ದರ್ಶನ್ ಪೂಜೆಯಲ್ಲಿ ಭಾಗಿ ಆಗಿದ್ದರು.

ನಕಾರಾತ್ಮಕ ಅಂಶಗಳನ್ನ ನಾಶಮಾಡಲು ಸುದರ್ಶನ ಹೋಮ ಮಾಡಿಸಲಾಗುತ್ತೆ, ಶತ್ರುಗಳ ಮೇಲೆ ವಿಜಯ ಪ್ತಾಪ್ತಿಗೆ, ದುಷ್ಟ ಕಣ್ಣಿನಿಂದ ರಕ್ಷಣೆಗೆ ಈ‌ ಹೋಮ ಮಾಡಲಾಗುತ್ತದೆ. ಹೀಗಾಗಿ ಡೆವಿಲ್ ಶೂಟಿಂಗ್ ನಲ್ಲೂ ಹೈ ಆಕ್ಷನ್ ಸೀನ್ ಇಡದಂತೆ ಮಿಲನಾ ಪ್ರಕಾಶ್‌ಗೆ ದರ್ಶನ್ ಆಪ್ತರು ಹೇಳಿದ್ದರಂತೆ. ಇಷ್ಟು ಜಾಗ್ರತೆ ವಹಿಸಿದ್ದರೂ ಸಿನಿಮಾ ಮಾಡುವಾಗ ಎಡಗೈಗೆ ಪ್ರ್ಯಾಕ್ಚರ್ ಆಗಿತ್ತು ಎನ್ನಲಾಗಿದೆ. 2017-18ರಿಂದ ದರ್ಶನ್ ಅವರಿಗೆ ಸಾಡೇ ಸಾತಿ ಇದೆ. ಜೂನ್-ನವೆಂಬರ್ 15ವರೆಗೆ ಅವರು ಮತ್ತಷ್ಟು ತೊಂದರೆ ಅನುಭವಿಸಲಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: Kalki 2898 AD: ʻಕಲ್ಕಿʼ ಸಿನಿಮಾ ಹಾಡಿ ಹೊಗಳಿದ ರಾಕಿಂಗ್‌ ಸ್ಟಾರ್‌ ಯಶ್‌!

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು (Parappana Agrahara) ಸೇರಿರುವ ನಟ ದರ್ಶನ್‌ (Actor Darshan) ಅವರಿಗೆ ಜೈಲಿನ ಮೆನು ಪ್ರಕಾರವೇ ಊಟ ನೀಡಲಾಗುತ್ತಿದೆ. ಅದರಂತೆ, ಶುಕ್ರವಾರ (ಜೂನ್‌ 28) ರಾತ್ರಿ ದರ್ಶನ್‌ ಅವರಿಗೆ ಚಿಕನ್‌ ಸಾಂಬಾರ್‌, ಮುದ್ದೆ ಹಾಗೂ ಅನ್ನವನ್ನು ನೀಡಲಾಗಿದೆ. ಜೈಲಿನ ಅನ್ನ-ಸಾಂಬಾರ್‌ ತಿಂದು ಬಸವಳಿದಿದ್ದ ದರ್ಶನ್‌ ಅವರಿಗೆ ಚಿಕನ್‌ ಸಾಂಬಾರ್‌ ನೀಡಿರುವುದು ತುಸು ಸಮಾಧಾನ ತಂದಿದೆ. ಮುದ್ದೆ, ಚಿಕನ್‌ ಸಾಂಬಾರ್‌ ಸೇವಿಸಿದ ದರ್ಶನ್‌ ತಡವಾಗಿ ನಿದ್ದೆಗೆ ಜಾರಿದರು ಎಂದು ತಿಳಿದುಬಂದಿದೆ.

ಶನಿವಾರ (ಜೂನ್‌ 29) ಬೆಳಗ್ಗೆ 6 ಗಂಟೆಗೆ ಎದ್ದ ದರ್ಶನ್‌, ಕೆಲಹೊತ್ತು ಜೈಲಿನ ಕೊಠಡಿಯಲ್ಲಿಯೇ ವಾಕಿಂಗ್‌ ಮಾಡಿದರು. ಇದರ ಮಧ್ಯೆಯೇ, ಪದೇಪದೆ ಅನಾರೋಗ್ಯದ ನೆಪ ಹೇಳಿ ಜೈಲು ಆಸ್ಪತ್ರೆ ಕಡೆ ಸುಳಿಯುತ್ತಿದ್ದು, ಜೈಲಧಿಕಾರಿಗಳಿಗೆ ನಟ ತಲೆನೋವಾಗಿದ್ದಾರೆ. ಹೊಟ್ಟೆ ನೋವು, ತಲೆನೋವು ಸೇರಿ ಹಲವು ನೆಪಗಳನ್ನು ಹೇಳಿಕೊಂಡು ಅವರು ಆಸ್ಪತ್ರೆಗೆ ಹೋಗುತ್ತಿದ್ದಾರೆ. ಇದರ ಮಧ್ಯೆಯೇ, ನಟ ದರ್ಶನ್‌ ಅವರನ್ನು ನೋಡಲು ಜೈಲಿನಲ್ಲಿರುವ ಕೈದಿಗಳು ಹರಸಾಹಸ ಪಡುತ್ತಿದ್ದಾರೆ ಎಂದು ಕೂಡ ತಿಳಿದುಬಂದಿದೆ.

Continue Reading

ಟಾಲಿವುಡ್

Kalki 2898 AD: ʻಕಲ್ಕಿʼ ಸಿನಿಮಾ ಹಾಡಿ ಹೊಗಳಿದ ರಾಕಿಂಗ್‌ ಸ್ಟಾರ್‌ ಯಶ್‌!

Kalki 2898 AD: ಎಸ್‌ಎಸ್ ರಾಜಮೌಳಿ, ಅವರ ಮಗ ಎಸ್‌ಎಸ್ ಕಾರ್ತಿಕೇಯ ಮತ್ತು ವಿಜಯ್ ದೇವರಕೊಂಡ ಮುಂತಾದವರು ಚಿತ್ರದ ಬಗ್ಗೆ ಈಗಾಗಲೇ ಪ್ರಶಂಸೆ ವ್ಯಕ್ತಪಡಿಸಿದ್ದರು. ಸಿನಿಮಾ ಬಗ್ಗೆ ಪ್ರೇಕ್ಷಕರು ಮಾತ್ರವಲ್ಲ ಅನೇಕ ನಟರುಗಳು ಮೆಚ್ಚುಗೆ ಸೂಚಿಸಿದ್ದಾರೆ. ಇದೀಗ ಯಶ್‌ ಕೂಡ ಸಿನಿಮಾ ಕುರಿತು ಹಾಡಿ ಹೊಗಳಿದ್ದಾರೆ.

VISTARANEWS.COM


on

Kalki 2898 AD Yash calls visually stunning spectacle
Koo

ಬೆಂಗಳೂರು: ವಿಶ್ವದಾದ್ಯಂತ (world) ಅದ್ಧೂರಿಯಾಗಿ ಬಿಡುಗಡೆಯಾದ 2024ರ ಬಹು ನಿರೀಕ್ಷಿತ ಚಿತ್ರ ಕಲ್ಕಿ 2898ಎಡಿ (Kalki 2898 AD) ಭಾರತೀಯ ಚಿತ್ರರಂಗದಲ್ಲಿ (Indian cinema) ಮೂರನೇ ಅತೀ ದೊಡ್ಡ ಓಪನರ್ ಕಂಡ ಸಿನಿಮಾವಾಗಿ ಹೊರಹೊಮ್ಮಿದ್ದು ಮಾತ್ರವಲ್ಲದೇ ಚಿತ್ರದ ಮುಂದಿನ ಸರಣಿ (Kalki 2898 AD 2) ಶೀಘ್ರದಲ್ಲೇ ತೆರೆ ಕಾಣುವ ನಿರೀಕ್ಷೆಯನ್ನು ಮೂಡಿಸಿದೆ. ಸಿನಿಮಾ ಬಗ್ಗೆ ಪ್ರೇಕ್ಷಕರು ಮಾತ್ರವಲ್ಲ ಅನೇಕ ನಟರುಗಳು ಮೆಚ್ಚುಗೆ ಸೂಚಿಸಿದ್ದಾರೆ. ಇದೀಗ ಯಶ್‌ ಕೂಡ ಸಿನಿಮಾ ಕುರಿತು ಹಾಡಿ ಹೊಗಳಿದ್ದಾರೆ.

ಶುಕ್ರವಾರ ಸಿನಿಮಾ ಬಗ್ಗೆ ಯಶ್ ಟ್ವೀಟ್‌ ಮಾಡಿ, “ಕಣ್ಣಿಗೆ ಹಬ್ಬವಾಗುವ ರೀತಿಯಲ್ಲಿ ಸೃಷ್ಟಿಸಿದ ಕಲ್ಕಿ 2898AD ತಂಡಕ್ಕೆ ಅಭಿನಂದನೆಗಳು! ಈ ಚಿತ್ರವು ಹೆಚ್ಚು ಸೃಜನಶೀಲ ಕಥೆಯನ್ನು ಹೇಳಲು ದಾರಿ ಮಾಡಿಕೊಡುತ್ತದೆ. ನಾಗ್‌ ಅಶ್ವಿನ್‌ ಮತ್ತು ನಿರ್ಮಾಣ ಸಂಸ್ಥೆ ವೈಜಯಂತಿ ಮೂವೀಸ್ ಸ್ಫೂರ್ತಿ ನೀಡಿದೆ. ಡಾರ್ಲಿಂಗ್ ಪ್ರಭಾಸ್‌, ಅಮಿತಾಭ್‌, ದೀಪಿಕಾ, ಕಮಲ್‌ ಹಾಸನ್‌ ಹಾಗೇ ಕೆಲವು ಅತಿಥಿ ಪಾತ್ರಗಳನ್ನು ಒಟ್ಟಿಗೆ ನೋಡುವುದು ಒಂದು ಅದ್ಭುತ ಅನುಭವವಾಗಿದೆ. . ಇಂಥಹಾ ಒಂದು ಅದ್ಭುತವಾದ ಸಿನಿಮಾವನ್ನು ಪ್ರೇಕ್ಷಕರ ಎದುರು ತಂದ ಇಡೀ ಚಿತ್ರತಂಡಕ್ಕೆ ಅಭಿನಂದನೆಗಳು, ಈ ಸಿನಿಮಾ ನಿಜಕ್ಕೂ ಬೆಳ್ಳಿತೆರೆಯನ್ನು ಬೆಳಗಿಸುತ್ತಿದೆ’ ಎಂದಿದ್ದಾರೆ.

ಎಸ್‌ಎಸ್ ರಾಜಮೌಳಿ, ಅವರ ಮಗ ಎಸ್‌ಎಸ್ ಕಾರ್ತಿಕೇಯ ಮತ್ತು ವಿಜಯ್ ದೇವರಕೊಂಡ ಮುಂತಾದವರು ಚಿತ್ರದ ಬಗ್ಗೆ ಈಗಾಗಲೇ ಪ್ರಶಂಸೆ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: Kalki 2898 AD: ಎರಡನೇ ದಿನವೂ ಒಳ್ಳೆಯ ಗಳಿಕೆ ಕಂಡ  ‘ಕಲ್ಕಿ 2898 ಎಡಿ’ ಸಿನಿಮಾ!

ಕಲ್ಕಿ 2898ಎಡಿ ದೊಡ್ಡ ಪರದೆಯ ಮೇಲೆ ದಾಖಲೆಯನ್ನೇ ಬರೆದಿದೆ. ಪ್ರಭಾಸ್, ದೀಪಿಕಾ ಪಡುಕೋಣೆ, ಅಮಿತಾಬ್ ಬಚ್ಚನ್ ಮತ್ತು ಕಮಲ್ ಹಾಸನ್ ಸೇರಿದಂತೆ ಬಹುದೊಡ್ಡ ತಾರಾ ಬಳಗವನ್ನೇ ಹೊಂದಿದ್ದು, ಪ್ರೇಕ್ಷಕರಿಂದ ಉತ್ತಮ ವಿಮರ್ಶೆಗಳನ್ನು ಗಳಿಸಿದೆ. ಮಾತ್ರವಲ್ಲದೆ ಇದೀಗ ಚಿತ್ರ ತಂಡ ಪ್ರೇಕ್ಷಕರಿಗೆ ಇನ್ನೊಂದು ಸಿಹಿ ಸುದ್ದಿಯನ್ನೂ ನೀಡಿದೆ.

ಚಿತ್ರದ ಮುಂದುವರಿದ ಭಾಗ ಶೀಘ್ರದಲ್ಲೇ ತೆರೆ ಕಾಣಲಿದೆ ಎಂಬ ಸಂದೇಶದೊಂದಿಗೆ ಕಲ್ಕಿ 2898ಎಡಿ ಚಲನಚಿತ್ರವು ಮುಕ್ತಾಯಗೊಂಡಿರುವುದರಿಂದ 2898ಎಡಿ ಚಿತ್ರ ಭಾಗ 2 ಸಾಕಷ್ಟು ಕುತೂಹಲ ಮೂಡುವಂತೆ ಮಾಡಿದೆ.

ಮಹಾಕಾವ್ಯವನ್ನು ಆಧರಿಸಿದ ಚಿತ್ರವೂ ಸಂಪೂರ್ಣವಾಗಿ ತೆರೆದುಕೊಳ್ಳಲು ಒಂದಕ್ಕಿಂತ ಹೆಚ್ಚು ಕಂತುಗಳ ಅಗತ್ಯವಿದೆ ಎಂದು ನಿರ್ದೇಶಕ ನಾಗ್ ಅಶ್ವಿನ್ ಕೂಡ ದೃಢಪಡಿಸಿದ್ದಾರೆ.

ಕಮಲ್ ಹಾಸನ್ ನಿರ್ವಹಿಸಿರುವ ಅಸಾಧಾರಣ ಪಾತ್ರ ಯಾಸ್ಕಿನ್ ನ ಅಪಾಯಕಾರಿ ಕಾರ್ಯಾಚರಣೆಯೊಂದಿಗೆ ‘ಕಲ್ಕಿ 2898ಎಡಿ ಭಾಗ 2 ಪ್ರಾರಂಭವಾಗುವ ನಿರೀಕ್ಷೆ ಇದೆ. ಚಿತ್ರದ ಮೊದಲ ಭಾಗದಲ್ಲಿ ಕಮಲ್ ಹಾಸನ್ ಅವರ ಚಿಕ್ಕ ಪಾತ್ರವನ್ನು ಮಾತ್ರ ತೋರಿಸಲಾಗಿದೆ. ಅಮಿತಾಬ್ ಬಚ್ಚನ್ ಅಶ್ವತ್ಥಾಮನ ಪಾತ್ರದಲ್ಲಿ, ಪ್ರಭಾಸ್ ಭೈರವ ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಯಾಸ್ಕಿನ್ ಅವರನ್ನು ಹೇಗೆ ಎದುರಿಸಲು ಯೋಜಿಸುತ್ತಾರೆ ಎಂಬುದರ ಸುತ್ತ ಕಥೆ ಕೇಂದ್ರೀಕೃತವಾಗಿದೆ.

ಕಲ್ಕಿ 2898ಎಡಿ ಭಾಗ 2 ಚಿತ್ರ ನಿರ್ಮಾಣಕ್ಕೆ ಮೂರು ವರ್ಷಗಳು ಬೇಕಾಗಬಹುದು ಎಂದು ನಿರೀಕ್ಷಿಸಲಾಗಿದೆ. ಪ್ರಭಾಸ್ ಈ ವಿಭಾಗವನ್ನು ಎರಡು ಭಾಗಗಳಾಗಿ ವಿಂಗಡಿಸುವ ಬಗ್ಗೆ ಸುಳಿವು ನೀಡಿದ್ದಾರೆ. ವಿವಿಧ ಸಂದರ್ಶನಗಳಲ್ಲಿ ತಮ್ಮ ಮುಂದಿನ ಸರಣಿಯ ಬಗ್ಗೆ ಉತ್ಸಾಹವನ್ನು ವ್ಯಕ್ತಪಡಿಸಿದ್ದಾರೆ. ಸುಮಾರು ಮೂರು ವರ್ಷಗಳಲ್ಲಿ ಎರಡನೇ ಕಂತನ್ನು ಅಭಿಮಾನಿಗಳು ಎದುರು ನೋಡಬಹುದು ಎಂದು ನಾಗ್ ಅಶ್ವಿನ್ ಕೂಡ ಖಚಿತಪಡಿಸಿದ್ದಾರೆ.

Continue Reading
Advertisement
Rakshana Vedike
ಕರ್ನಾಟಕ3 mins ago

ಕರ್ನಾಟಕ ತೋಟದಪ್ಪನ ಛತ್ರ ಅಲ್ಲ; ಕನ್ನಡಿಗರಿಗೆ ಉದ್ಯೋಗಕ್ಕೆ ಆಗ್ರಹಿಸಿ ಜು.1ರಂದು ಕರವೇ ಬೃಹತ್‌ ಪ್ರತಿಭಟನೆ!

Heavy Rain
ದೇಶ3 mins ago

Heavy Rain: ಭಾರೀ ಮಳೆಗೆ ಕುಸಿದು ಬಿದ್ದ ರಾಜ್‌ಕೋಟ್‌ ವಿಮಾನ ನಿಲ್ದಾಣ ಹೊರಭಾಗದ ಛಾವಣಿ

Valmiki Corporation Scam
ಕರ್ನಾಟಕ9 mins ago

Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಇನ್ನೂ 10 ಕೋಟಿ‌ ಎಸ್ಐಟಿ ವಶಕ್ಕೆ, ಇದುವರೆಗೆ ರಿಕವರಿ ಆಗಿದ್ದೆಷ್ಟು?

baby Death
ತುಮಕೂರು47 mins ago

Baby Death : ಶವ ಸಾಗಿಸಲು ಹಣವಿಲ್ಲದೇ ರೈಲಿನಲ್ಲೇ ಶಿಶು ಬಿಟ್ಟು ಹೋದ ಪೋಷಕರು

Viral Video
Latest52 mins ago

Viral Video: ನಡುರಸ್ತೆಯಲ್ಲಿ ಬಟ್ಟೆ ಕಳಚಿ ಬೆತ್ತಲೆಯಾಗಿ ನಡೆದ ಮಹಿಳೆ; ಪುರುಷರು ಕಕ್ಕಾಬಿಕ್ಕಿ!

Shabbar Zaidi
ವಿದೇಶ57 mins ago

Shabbar Zaidi: ಮಸೀದಿಗಳ ಧ್ವನಿವರ್ಧಕದ ಬಗ್ಗೆ ಪಾಕಿಸ್ತಾನದಲ್ಲೇ ಕೇಳಿ ಬಂತು ಅಪಸ್ವರ; ಮೊಹಮ್ಮದ್ ಶಬ್ಬರ್ ಜೈದಿ ಹೇಳಿದ್ದೇನು?

Satish Jarkiholi
ಕರ್ನಾಟಕ58 mins ago

Satish Jarkiholi: 2028ಕ್ಕೆ ನಾನೇ ರಾಜ್ಯದ ಸಿಎಂ ಎಂದ ಸತೀಶ್‌ ಜಾರಕಿಹೊಳಿ; ಡಿಕೆಶಿಗೆ ಸಚಿವ ಸೆಡ್ಡು!

Baby Death
Latest59 mins ago

Baby Death : ಆಟವಾಡುತ್ತಿದ್ದ ಮಗುವಿನ ಪಾಲಿಗೆ ಯಮದೂತ ಆದ ಟಿವಿ ಸ್ಟ್ಯಾಂಡ್‌!

Kalaburagi News
ಕರ್ನಾಟಕ60 mins ago

Kalaburagi News: ಮೊರಾರ್ಜಿ ವಸತಿ ಶಾಲೆಯಲ್ಲಿ ಉಪಾಹಾರ ಸೇವಿಸಿ 17 ವಿದ್ಯಾರ್ಥಿನಿಯರು ಅಸ್ವಸ್ಥ

Kidnapping Case
ದೇಶ1 hour ago

Kidnapping Case: ಮಿಠಾಯಿ ತರಲೆಂದು ಮಕ್ಕಳನ್ನು ಬಿಟ್ಟು ಹೋದ ತಂದೆ-ತಾಯಿ; ಕಾರು ಸಮೇತ ಮಕ್ಕಳು ಕಿಡ್ನಾಪ್‌!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ4 hours ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ20 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

ಟ್ರೆಂಡಿಂಗ್‌