Lok Sabha Election 2024 : ಸೀಟು ಹಂಚಿಕೆ ಚರ್ಚೆ ಆಗಿಲ್ಲ; ಸುಮಲತಾ ʼಅತಂತ್ರʼದ ಬಗ್ಗೆ ಎಚ್‌ಡಿಕೆ ಹೇಳಿದ್ದೇನು? - Vistara News

ಕರ್ನಾಟಕ

Lok Sabha Election 2024 : ಸೀಟು ಹಂಚಿಕೆ ಚರ್ಚೆ ಆಗಿಲ್ಲ; ಸುಮಲತಾ ʼಅತಂತ್ರʼದ ಬಗ್ಗೆ ಎಚ್‌ಡಿಕೆ ಹೇಳಿದ್ದೇನು?

Lok Sabha Election 2024 : ಬಿಜೆಪಿ ಹಾಗೂ ಜೆಡಿಎಸ್‌ ನಡುವೆ ಮೈತ್ರಿ ಏರ್ಪಟ್ಟಿದೆ. ಇದರ ಅನುಸಾರ ಮಂಡ್ಯ ಸೇರಿದಂತೆ ನಾಲ್ಕು ಲೋಕಸಭಾ ಕ್ಷೇತ್ರಗಳು ದಳ ಪಾಲಾಗಿದೆ. ಹೀಗಾಗಿ ಮಂಡ್ಯದ ಹಾಲಿ ಸಂಸದೆ ಸುಮಲತಾ ಅಂಬರೀಷ್‌ ಅತಂತ್ರರಾಗಲಿದ್ದಾರೆ ಎಂಬ ಚರ್ಚೆ ನಡೆಯುತ್ತಿರುವ ಬೆನ್ನಲ್ಲೆ ಈ ಬಗ್ಗೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಮಾತನಾಡಿದ್ದಾರೆ.

VISTARANEWS.COM


on

HD Kumaraswamy and Sumalatha amabarish infront of Krs Dam
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸದ್ಯ ಕರ್ನಾಟಕ ರಾಜಕೀಯದಲ್ಲಿ (Karnataka Politics) “ಮೈತ್ರಿ” ಬಿರುಗಾಳಿ ಎದ್ದಿದೆ. ಮುಂದಿನ ಲೋಕಸಭಾ ಚುನಾವಣೆಯ (Lok Sabha Election 2024) ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ (BJP-JDS alliance) ಮಾಡಿಕೊಳ್ಳುತ್ತಿದೆ. 4 ಲೋಕಸಭಾ ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಟ್ಟುಕೊಡಲಾಗುವುದು ಎಂಬ ಬಗ್ಗೆ ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ (Former CM BS Yediyurappa) ನೀಡಿದ ಹೇಳಿಕೆ ದೊಡ್ಡ ಸಂಚಲನವನ್ನೇ ಸೃಷ್ಟಿಸಿದೆ. ಈಗ ಇದರ ಬಗ್ಗೆ ಮೂರು ಪಕ್ಷಗಳ ನಾಯಕರು ತಮ್ಮ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇನ್ನು ಮಂಡ್ಯ ಲೋಕಸಭಾ ಕ್ಷೇತ್ರ ಜೆಡಿಎಸ್‌ ಪಾಲಾದರೆ, ಈಗಾಗಲೇ ಬಿಜೆಪಿಯನ್ನು ಬೆಂಬಲಿಸಿರುವ ಸುಮಲತಾ ಅಂಬರೀಷ್‌ (Sumalatha Ambareesh) ಅವರ ಕಥೆ ಏನು? ಅವರು ಅತಂತ್ರವಾಗಲಿದ್ದಾರಾ? ಎಂಬ ಚರ್ಚೆ ಹುಟ್ಟಿಕೊಂಡಿತ್ತು. ಈಗ ಈ ಬಗ್ಗೆ ಮಾಜಿ ಸಿಎಂ, ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ (Former CM HD Kumaraswamy) ಪ್ರತಿಕ್ರಿಯೆ ನೀಡಿದ್ದು, “ಈಗಲೇ ಊಹೆ ಮಾಡಿಕೊಂಡರೆ ಹೇಗೆ?” ಎಂದು ಪ್ರಶ್ನೆ ಮಾಡಿದ್ದಾರೆ.

ಜೆಡಿಎಸ್‌ – ಬಿಜೆಪಿ ಮೈತ್ರಿ ಒಪ್ಪಂದದಂತೆ ಬೆಂಗಳೂರು ಗ್ರಾಮಾಂತರ, ಕೋಲಾರ, ಹಾಸನ ಹಾಗೂ ಮಂಡ್ಯ ಕ್ಷೇತ್ರವನ್ನು ದಳಕ್ಕೆ ಬಿಟ್ಟುಕೊಡಲು ಕೇಂದ್ರ ಸಚಿವ ಅಮಿತ್‌ ಶಾ ಒಪ್ಪಿಕೊಂಡಿದ್ದಾರೆ ಎಂದು ಯಡಿಯೂರಪ್ಪ ಹೇಳಿದ್ದರು. ಹಾಗಾಗಿ ಮಂಡ್ಯ ಜೆಡಿಎಸ್‌ ಪಾಲಾದರೆ, ಹಾಲಿ ಸಂಸದೆಯಾಗಿರುವ ಸುಮಲತಾ ಅಂಬರೀಶ್ ಅವರು ಅತಂತ್ರರಾಗುತ್ತಾರೆ ಎಂಬ ಬಗ್ಗೆ ಚರ್ಚೆ ನಡೆಸಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಸೀಟು ಹಂಚಿಕೆ ಬಗ್ಗೆ ಚರ್ಚೆಯೇ ಆಗಿಲ್ಲ. ಇದೆಲ್ಲವೂ ಪ್ರಾಥಮಿಕ ಹಂತದ ಚರ್ಚೆಯಾಗಿದೆ. ಅವರು ಅತಂತ್ರವಾದರು, ಇವರು ಅತಂತ್ರವಾದರು ಎಂದು ಊಹೆ ಮಾಡಿಕೊಂಡರೇ ಹೇಗೆ? ಎಂದು ಪ್ರಶ್ನೆ ಮಾಡಿದ್ದಾರೆ.

ಮೈತ್ರಿ ಬಗ್ಗೆ ಚರ್ಚೆ ಪ್ರಾಥಮಿಕ ಹಂತದಲ್ಲಿದೆ. ಅದು ಬಿಟ್ಟರೆ ಸೀಟು ಹಂಚಿಕೆ ಬಗ್ಗೆ ಇನ್ನೂ ಚರ್ಚೆ ನಡೆದಿಲ್ಲ. ಮೊದಲು ನಾನು ರಾಜ್ಯದ ಜನರ ಸಮಸ್ಯೆ ಬಗ್ಗೆ ಚರ್ಚೆ ಮಾಡಬೇಕು. ರೈತರು ಸಂಕಷ್ಟದಲ್ಲಿದ್ದಾರೆ. ಅಘೋಷಿತ ಲೋಡ್ ಶೆಡ್ಡಿಂಗ್ ನಡೆಯುತ್ತಿದೆ. ರೈತರ ಬಗ್ಗೆ ನನಗೆ ಚಿಂತೆ – ಚಿಂತನೆ ಇದೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಇದನ್ನೂ ಓದಿ: Road Accident : ಇಬ್ಬರ ಜೀವ ತೆಗೆದ ನಾಯಿ! ಕಾರು ಪಲ್ಟಿಯಾಗಿ ಶಿಕ್ಷಕ ಸಾವು, ಲಾರಿ ಹರಿದು ಮಹಿಳೆ ಮೃತ್ಯು

ಶರಣುಗೌಡರ ನಮ್ಮ ಹುಡುಗ; ಸರಿಪಡಿಸೋಣ

ಬಿಜೆಪಿ- ಜೆಡಿಎಸ್ ಮೈತ್ರಿಗೆ ಸಹಮತವಿಲ್ಲ ಎಂದು ಶಾಸಕ ಶರಣುಗೌಡ ಕಂದಕನೂರು ನೀಡಿರುವ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಅವರ ಭಾವನೆಯನ್ನು ಸರಿಪಡಿಸೋಣ. ಹಿಂದಿನ ಕೆಲವು ಘಟನೆಗಳಿಂದ ಅವರು ಇಂತಹ ಹೇಳಿಕೆಯನ್ನು ನೀಡಿದ್ದಾರೆ. ಅದೆಲ್ಲವನ್ನೂ ಸರಿಪಡಿಸೋಣ. ಶರಣುಗೌಡ ನಮ್ಮನೆ ಹುಡುಗ. ಅವರ ಹೇಳಿಕೆ ಸ್ಫೋಟ ಆಗುವಂಥದ್ದೇನಿಲ್ಲ. ನಮಗೆ ಹಿಂದೆ ಅನ್ಯಾಯ ಆಗಿದೆ ಎಂಬುದನ್ನು ಮನಸ್ಸಿನಲ್ಲಿಟ್ಟುಕೊಂಡು ಹೇಳಿದ್ದಾರೆ. ಯಾರು ಯಾರ ಜತೆ ಕುಳಿತು ಮಾತಾಡಿದ್ದಾರೆ? ಅದು ದೊಡ್ಡ ವಿಷಯವಲ್ಲ, ಎಲ್ಲರೂ ನಮ್ಮ ಮಕ್ಕಳಾಗಿದ್ದು, ನಾವದನ್ನು ಸರಿಪಡಿಸುತ್ತೇವೆ ಎಂದು ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Dengue Cases: ಕಲುಷಿತ ನೀರು ಪೂರೈಕೆಯಾದ್ರೆ ಅಧಿಕಾರಿಗಳೇ ಹೊಣೆ; 15 ದಿನಕ್ಕೊಮ್ಮೆ ಕ್ವಾಲಿಟಿ ಟೆಸ್ಟ್ ಮಾಡಿ ಎಂದ ಸಿಎಂ

Dengue Cases: ಕಲುಷಿತ ನೀರಿನಿಂದ ಯಾವುದೇ ತೊಂದರೆ ಉಂಟಾದರೆ ಸಂಬಂಧಪಟ್ಟ ಅಧಿಕಾರಿಯನ್ನು ನೇರ ಜವಾಬ್ದಾರಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

VISTARANEWS.COM


on

Dengue Cases
Koo

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ (Dengue Cases) ಏರಿಕೆ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಲಾರ್ವಾ ಸಮೀಕ್ಷೆ, ಸೊಳ್ಳೆ ನಿಯಂತ್ರಣದ ಜತೆಗೆ ಮನೆಮನೆಗೆ ತೆರಳಿ ಆರೋಗ್ಯ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿದೆ. ಈ ನಡುವೆ ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸಿರುವ ಸಿಎಂ ಸಿದ್ದರಾಮಯ್ಯ ಅವರು, ಜನರಿಗೆ ಕಲುಷಿತ ನೀರು ಪೂರೈಕೆಯಾಗದಂತೆ ಎಚ್ಚರಿಕೆ ವಹಿಸಬೇಕು. ಪ್ರತಿ 15 ದಿನಗಳಿಗೊಮ್ಮೆ ನೀರಿನ ಮೂಲಗಳಲ್ಲಿ ಕಡ್ಡಾಯವಾಗಿ ಗುಣಮಟ್ಟ ಪರೀಕ್ಷೆ ನಡೆಸಬೇಕು ಎಂದು ಸೂಚನೆ ನೀಡಿದ್ದಾರೆ.

ಕಲುಷಿತ ನೀರಿನಿಂದ ಯಾವುದೇ ತೊಂದರೆ ಉಂಟಾದರೆ ಸಂಬಂಧಪಟ್ಟ ಅಧಿಕಾರಿಯನ್ನು ನೇರ ಜವಾಬ್ದಾರಿ ಮಾಡಲಾಗುವುದು. ತುಕ್ಕು ಹಿಡಿದ ಹಳೆಯ ಪೈಪ್‌ ಬದಲಾವಣೆ ಮಾಡಬೇಕು. ಪ್ರತಿ 15 ದಿನಗಳಿಗೊಮ್ಮೆ ನೀರಿನ ಮೂಲದಲ್ಲಿ ಹಾಗೂ ವಿತರಣಾ ಬಿಂದುವಿನಲ್ಲಿನ ನೀರಿನ ಗುಣಮಟ್ಟವನ್ನು ಪ್ರಯೋಗಾಲಯದಲ್ಲಿ ಕಡ್ಡಾಯವಾಗಿ ಪರೀಕ್ಷೆ ಮಾಡಬೇಕು. ನೀರಿನ ಗುಣಮಟ್ಟ ಪರೀಕ್ಷೆಯಲ್ಲಿ ವಿಫಲವಾದ ಕಡೆಗಳಲ್ಲಿ ಹೊಸ ಮೂಲದಿಂದ ನೀರು ಪೂರೈಕೆ ಮಾಡಬೇಕು ಎಂದು ತಿಳಿಸಿದ್ದಾರೆ.

ಎಲ್ಲಾ ಜಿಲ್ಲೆಗಳಲ್ಲಿ ಆದಷ್ಟು ಬೇಗನೆ ಘನ ತ್ಯಾಜ್ಯ ವಿಲೇವಾರಿ ಘಟಕಗಳನ್ನು ಆರಂಭಿಸಬೇಕು. ಇನ್ನೂ 55 ಕಡೆಗಳಲ್ಲಿ ಘನತ್ಯಾಜ್ಯ ಘಟಕಗಳ ನಿರ್ಮಾಣ ಪ್ರಕ್ರಿಯೆ ನಡೆಯುತ್ತಿದ್ದು, ಆದಷ್ಟು ಬೇಗನೆ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಳಿಸಬೇಕು. ತ್ಯಾಜ್ಯ ನೀರು ಶುದ್ಧೀಕರಣ ಘಟಕ ಕಾರ್ಯಾರಂಭಿಸುವ ಮೂಲಕ ಕೊಳಚೆ ನೀರು ನೇರವಾಗಿ ಕೆರೆಗಳಿಗೆ ಸೇರುವುದನ್ನು ತಪ್ಪಿಸಬೇಕು. ಮೈಸೂರಿನ ದಳವಾಯಿ ಕೆರೆಗೆ ಕೊಳಚೆ ನೀರು ಸೇರುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ | OPS News: ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌; ಅರ್ಹರಿಗೆ ಒಪಿಎಸ್‌, ಪ್ರಸ್ತಾವನೆ ಸಲ್ಲಿಕೆಗೆ ಆದೇಶ

ಬೆಂಗಳೂರಿನ 70 ಕಡೆ ಹೊಸ ಇಂದಿರಾ ಕ್ಯಾಂಟೀನ್‌

ಈಗಾಗಲೇ ಅನುಮತಿ ನೀಡಲಾಗಿರುವ ಹೊಸ ಇಂದಿರಾ ಕ್ಯಾಂಟೀನ್‌ಗಳ ನಿರ್ಮಾಣಕ್ಕೆ ಆದಷ್ಟು ಬೇಗನೆ ಜಾಗ ಗುರುತಿಸಬೇಕು. ಬೆಂಗಳೂರು ನಗರ ವ್ಯಾಪ್ತಿಯಲ್ಲಿ 70 ಸ್ಥಳಗಳಲ್ಲಿ ಹೊಸ ಇಂದಿರಾ ಕ್ಯಾಂಟೀನ್‌ ನಿರ್ಮಿಸಲು ಅನುಮೋದನೆ ನೀಡಲಾಗಿದ್ದು, ಆದಷ್ಟು ಬೇಗನೆ ಸ್ಥಳ ಗುರುತಿಸಬೇಕು. ಹೊಸ ಮೆನು ಟೆಂಡರ್‌ ಪ್ರಕ್ರಿಯೆಯನ್ನು ಆದಷ್ಟು ಬೇಗನೆ ಪೂರ್ಣಗೊಳಿಸಬೇಕು ಎಂದು ಸಿಎಂ ಹೇಳಿದರು.

15ನೇ ಹಣಕಾಸು ಆಯೋಗ

15ನೇ ಹಣಕಾಸು ಆಯೋಗದ ಅನುದಾನದಲ್ಲಿ 33,803 ಕಾಮಗಾರಿಗಳು ಮಂಜೂರಾಗಿದ್ದು, 23,714 ಕಾಮಗಾರಿಗಳು ಪೂರ್ಣಗೊಂಡಿವೆ. ಯೋಜನೆಯಡಿ ಇದುವರೆಗೆ 2799 ಕೋಟಿ ರೂ. ಬಿಡುಗಡೆಯಾಗಿದ್ದು, 1883 ಕೋಟಿ ರೂ. ವೆಚ್ಚವಾಗಿದೆ. ಮುಂದಿನ ಎರಡು ವಾರಗಳ ಒಳಗಾಗಿ ಟೆಂಡರ್‌ ಕರೆದು, ನಿಗದಿತ ಅವಧಿಯ ಒಳಗಾಗಿ ಅನುದಾನವನ್ನು ಪೂರ್ಣವಾಗಿ ಬಳಕೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದರು.

ಆಸ್ತಿ ತೆರಿಗೆ ಬಾಕಿ ವಸೂಲಿ ಮಾಡಿ

ಕಳೆದ ವರ್ಷದ 224 ಕೋಟಿ ರೂ. ಆಸ್ತಿ ತೆರಿಗೆ ವಸೂಲಾತಿಗೆ ಬಾಕಿಯಿದೆ. ಹಳೆ ಬಾಕಿಯನ್ನು ಸಂಪೂರ್ಣವಾಗಿ ವಸೂಲು ಮಾಡಬೇಕು. ಪ್ರಸ್ತುತ ವರ್ಷದ ಜೂನ್‌ ಅಂತ್ಯದವರೆಗೆ 806 ಕೋಟಿ ರೂ. ಆಸ್ತಿ ತೆರಿಗೆ ವಸೂಲು ಮಾಡಲಾಗಿದ್ದು, 1053 ಕೋಟಿ ರೂ. ವಸೂಲಾತಿಗೆ ಬಾಕಿಯಿದೆ. ಜಿಲ್ಲಾಧಿಕಾರಿಗಳು ಅಭಿಯಾನದ ರೀತಿಯಲ್ಲಿ ಆಸ್ತಿ ತೆರಿಗೆ ವಸೂಲಾತಿಯನ್ನು ಕೈಗೊಳ್ಳಬೇಕು ಎಂದರು.

ಎಸ್.ಎಫ್.ಸಿ. ಮುಕ್ತನಿಧಿ ಯೋಜನೆಯಡಿ ಕಲ್ಯಾಣ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಪರಿಶಿಷ್ಟ ಜಾತಿ, ಪಂಗಡದ ಜನರಿಗೆ ಶೇ.24.01 ಅನುದಾನ ಕಡ್ಡಾಯವಾಗಿ ವೆಚ್ಚ ಮಾಡುವುದನ್ನು ಖಾತ್ರಿಪಡಿಸಬೇಕು ಎಂದು ಸಿಎಂ ಸೂಚನೆ ನೀಡಿದರು.

ಲೋಕೋಪಯೋಗಿ ಇಲಾಖೆ

ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಎದುರಾಗುವ ತಾಂತ್ರಿಕ ತೊಂದರೆಗಳನ್ನು ಎರಡು ತಿಂಗಳ ಒಳಗಾಗಿ ಬಗೆಹರಿಸಬೇಕು. ಭೂಸ್ವಾಧೀನ ಪ್ರಕ್ರಿಯೆ ತ್ವರಿತಗೊಳಿಸಬೇಕು. ಇನ್ನಿತರ ತೊಡಕುಗಳನ್ನು ಆದಷ್ಟು ಬೇಗನೆ ನಿವಾರಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಜಮೀನು ಹಸ್ತಾಂತರಿಸಬೇಕು. ಭೂಸ್ವಾಧೀನ ಪ್ರಕ್ರಿಯೆ ಕಾರಣದಿಂದ ಯೋಜನೆ ಅನುಷ್ಠಾನ ವಿಳಂಬವಾಗಬಾರದು. ಆದ್ಯತೆ ಮೇರೆಗೆ ಈ ಕಾರ್ಯವನ್ನು ಕೈಗೆತ್ತಿಕೊಳ್ಳಬೇಕು ಎಂದು ಸಿಎಂ ಹೇಳಿದರು.

ಇದನ್ನೂ ಓದಿ | NEET UG 2024: ನೀಟ್‌ ಅಕ್ರಮ ಮೇಲ್ನೋಟಕ್ಕೆ ಸಾಬೀತು ಎಂದ ಸುಪ್ರೀಂ; ಎನ್‌ಟಿಎ, ಸಿಬಿಐಗೆ ಖಡಕ್ ಸೂಚನೆ!

ಸಣ್ಣ ನೀರಾವರಿ ಇಲಾಖೆ

ರಾಜ್ಯದಲ್ಲಿ ಒಟ್ಟು 40,998 ಕೆರೆಗಳಿದ್ದು, ಇವುಗಳ ಪೈಕಿ 28751 ಕೆರೆಗಳ ಅಳತೆ ಕಾರ್ಯ ಪೂರ್ಣಗೊಳಿಸಲಾಗಿದೆ. 10931 ಕೆರೆಗಳಲ್ಲಿ ಒತ್ತುವರಿಯನ್ನು ಗುರುತಿಸಲಾಗಿದ್ದು, 6065 ಕೆರೆಗಳ ಒತ್ತುವರಿ ತೆರವು ಪೂರ್ಣಗೊಳಿಸಲಾಗಿದೆ. ಇನ್ನೂ 4787 ಕೆರೆಗಳ ಒತ್ತುವರಿ ತೆರವಿಗೆ ಬಾಕಿಯಿದ್ದು, ಆದಷ್ಟು ಬೇಗನೆ ಅಳತೆ ಕಾರ್ಯ ಪೂರ್ಣಗೊಳಿಸಿ ತೆರವು ಕಾರ್ಯ ಪೂರ್ಣಗೊಳಿಸಬೇಕು. ಪದೇ ಪದೇ ಕೆರೆಗಳ ಒತ್ತುವರಿ ಮಾಡುವವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸುವಂತೆ ಸೂಚನೆ ನೀಡಿದರು. ಬೆಂಗಳೂರಿನಲ್ಲಿ ಈಗಾಗಲೇ ಹಲವು ಕೆರೆಗಳು ಕಣ್ಮರೆಯಾಗಿದ್ದು, ಉಳಿದಿರುವ ಕೆರೆಗಳನ್ನು ಉಳಿಸದೇ ಇದ್ದರೆ, ಅಂತರ್ಜಲ ಮಟ್ಟವನ್ನು ಕಾಪಾಡಲು ಸಾಧ್ಯವಿಲ್ಲ ಎಂದರು.

Continue Reading

ಕರ್ನಾಟಕ

OPS News: ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌; ಅರ್ಹರಿಗೆ ಒಪಿಎಸ್‌, ಪ್ರಸ್ತಾವನೆ ಸಲ್ಲಿಕೆಗೆ ಆದೇಶ

OPS News: ಅರ್ಹ ನೌಕರರನ್ನು ಖಚಿತಪಡಿಸಿಕೊಂಡು ಜುಲೈ 31ರೊಳಗೆ ಹಿಂದಿನ ಡಿಫೈನ್ಡ್‌ ಪಿಂಚಣಿ ಯೋಜನೆಗೆ (ಒಪಿಎಸ್‌) ಒಳಪಡಿಸಲು ಶಿಫಾರಸಿನೊಂದಿಗೆ ಇಲಾಖಾ ಮುಖ್ಯಸ್ಥರಿಗೆ ಕ್ರೋಡೀಕೃತ ಪ್ರಸ್ತಾವನೆಯನ್ನು ಸಲ್ಲಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಅರ್ಥಿಕ ಇಲಾಖೆ ಸೂಚಿಸಿದೆ.

VISTARANEWS.COM


on

OPS News
Koo

ಬೆಂಗಳೂರು: ರಾಜ್ಯದಲ್ಲಿ ಹಳೆಯ ಪಿಂಚಣಿ ಯೋಜನೆ (Old Pension Scheme) ಮರು ಜಾರಿ ಮಾಡಬೇಕು ಎಂದು ಹಲವು ವರ್ಷಗಳಿಂದ ಆಗ್ರಹಿಸುತ್ತಾ ಬಂದಿರುವ ಸರ್ಕಾರಿ ನೌಕರರಿಗೆ ಸಿದ್ದರಾಮಯ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. 2006ಕ್ಕೂ ಮುನ್ನ ನೇಮಕಾತಿಯಾದ ನೌಕರರನ್ನು ಹಳೆಯ ಡಿಫೈನ್ಡ್‌ ಪಿಂಚಣಿ ಯೋಜನೆಗೆ(ಒಪಿಎಸ್‌) ಒಳಪಡಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಆರ್ಥಿಕ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಅರುಳ್‌ ಕುಮಾರ್‌ ಸುತ್ತೋಲೆ ಹೊರಡಿಸಿದ್ದಾರೆ. ಅರ್ಹ ನೌಕರರನ್ನು ಖಚಿತಪಡಿಸಿಕೊಂಡು ಜುಲೈ 31ರೊಳಗಾಗಿ ಹಿಂದಿನ ಡಿಫೈನ್ಡ್‌ ಪಿಂಚಣಿ ಯೋಜನೆಗೆ ಒಳಪಡಿಸಲು ಶಿಫಾರಸಿನೊಂದಿಗೆ ಇಲಾಖಾ ಮುಖ್ಯಸ್ಥರಿಗೆ ಕ್ರೋಡೀಕೃತ ಪ್ರಸ್ತಾವನೆಯನ್ನು ಸಲ್ಲಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ.

2006ರ ಏಪ್ರಿಲ್‌ 1ಕ್ಕೂ ಮೊದಲು ರಾಜ್ಯ ಸಿವಿಲ್ ಸೇವೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗಾಗಿ ಹೊರಡಿಸಿದ ನೇಮಕಾತಿ ಅಧಿಸೂಚನೆಗಳ ಮೇರೆಗೆ ಆಯ್ಕೆ ಹೊಂದಿ, 006ರ ಏಪ್ರಿಲ್‌ 1ರಂದು ಅಥವಾ ಆ ದಿನಾಂಕದ ನಂತರ ಸೇವೆಗೆ ಸೇರಿರುವ ಕಾರಣದಿಂದ ನೂತನ ಅಂಶದಾಯಿ ಕೊಡುಗೆ ಯೋಜನೆಯ (ರಾಷ್ಟ್ರೀಯ ಪಿಂಚಣಿ ಯೋಜನೆ-ಎನ್‌ಪಿಎಸ್‌) ವ್ಯಾಪ್ತಿಗೊಳಪಟ್ಟಿರುವ ಸರ್ಕಾರಿ ನೌಕರರನ್ನು ಅವರ ಅಭಿಮತದ ಮೇರೆಗೆ ಕೆಲವು ಷರತ್ತುಗಳಿಗೊಳಪಟ್ಟು ಒಂದು ಬಾರಿಯ ಕ್ರಮವಾಗಿ ಹಿಂದಿನ ಡಿಫೈನ್ಡ್‌ ಪಿಂಚಣಿ ಯೋಜನೆಯ(OPS) ವ್ಯಾಪ್ತಿಗೊಳಪಡಿಸಲು ಒಪ್ಪಿಗೆ ನೀಡಿ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | CM Siddaramaiah: ರಾಜ್ಯದಲ್ಲಿ ಶೇ.80 ಬಿಪಿಎಲ್‌ ಕಾರ್ಡ್‌! ಕಡಿತ ಮಾಡಲು ಸಿಎಂ ಸೂಚನೆ

ಈ ಆದೇಶದನ್ವಯ ನೌಕರರು ತಮ್ಮ ಅಭಿಮತವನ್ನು ಚಲಾಯಿಸಲು ಕೊನೆಯ ದಿನಾಂಕ ಜೂನ್ 30‌ ಆಗಿತ್ತು. ನೌಕರರ ಆಯ್ಕೆಗನುಸಾರ ಅವರು ಹಿಂದಿನ ಡಿಫೈನ್ಡ್‌ ಪಿಂಚಣಿ ಯೋಜನೆಗೊಳಪಡಲು ನಿಗದಿತ ಅರ್ಹತೆಯನ್ನು ಹೊಂದಿರುವುದನ್ನು ಸಕ್ಷಮ ನೇಮಕಾತಿ ಪ್ರಾಧಿಕಾರವು ಖಚಿತಪಡಿಸಿಕೊಂಡು ಜುಲೈ 31ರೊಳಗಾಗಿ ಅಂತಹ ನೌಕರರನ್ನು ಹಿಂದಿನ ಡಿಫೈನ್ಡ್‌ ಪಿಂಚಣಿ ಯೋಜನೆಗೊಳಪಡಿಸಲು ಶಿಫಾರಸಿನೊಂದಿಗೆ ಇಲಾಖಾ ಮುಖ್ಯಸ್ಥರಿಗೆ ಕ್ರೋಡೀಕೃತ ಪ್ರಸ್ತಾವನೆಯನ್ನು ಸಲ್ಲಿಸಬೇಕು ಎಂದು ಎಲ್ಲಾ ಇಲಾಖೆಗಳ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.

ಇಲಾಖಾ ಮುಖ್ಯಸ್ಥರು ತಮ್ಮ ಅಧೀನದ ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಂದ ಸ್ವೀಕೃತವಾದ ಪ್ರಸ್ತಾವನೆಗಳನ್ನು ಪರಿಶೀಲಿಸಿ ಹಿಂದಿನ ಡಿಫೈನ್ಡ್‌ ಪಿಂಚಣಿ ಯೋಜನೆಗೆ ಒಳಪಡಲು ಅರ್ಹ ನೌಕರರ ಪಟ್ಟಿಯನ್ನು ಆಗಸ್ಟ್‌ 31ರೊಳಗೆ ಆರ್ಥಿಕ ಇಲಾಖೆಯ ಅನುಮೋದನೆಗಾಗಿ ಸಲ್ಲಿಸಬೇಕು.

ಇದನ್ನೂ ಓದಿ | CM Siddaramaiah: ಆಗಸ್ಟ್‌ನಲ್ಲಿ ಕಲಬುರಗಿಯಲ್ಲಿ ಸಿಎಂ ಸಿದ್ದರಾಮಯ್ಯ ಜನಸ್ಪಂದನ

ಆದರೆ, ಪ್ರಸ್ತುತ ಕೆಲವು ಇಲಾಖೆಗಳು ನೌಕರರು ಒಪಿಎಸ್‌ಗೆ ಒಳಪಡುತ್ತಾರೆ ಎಂದು ಶಿಫಾರಸು ಮಾಡದೇ, ಕ್ರೋಡೀಕೃತ ಪ್ರಸ್ತಾವನೆಯನ್ನು ಸಲ್ಲಿಸದೇ, ಸ್ವೀಕೃತವಾಗಿರುವ ನೌಕರರ ಮನವಿಗಳನ್ನು ಮತ್ತು ಕೇವಲ ಒಂದು ಶಾಖೆಗೆ ಸಂಬಂಧಿಸಿದ ಪ್ರಸ್ತಾವನೆಗಳನ್ನು ಮಾತ್ರ ಆರ್ಥಿಕ ಇಲಾಖೆಯ ಅಭಿಪ್ರಾಯ ಕೋರುತ್ತಿರುವುದು ಕಂಡುಬಂದಿರುತ್ತದೆ. ಆದ್ದರಿಂದ, 2024ರ ಜ.1ರ ಆದೇಶದನ್ವಯ ಎನ್.ಪಿ.ಎಸ್.ನಿಂದ ಒಪಿಎಸ್‌ಗೆ ಒಳಪಡಲು ಅಭಿಮತ ಸಲ್ಲಿಸಿರುವ ಎಲ್ಲಾ ವೃಂದಗಳ ಅಂದರೆ, ಗ್ರೂಪ್ ಎ, ಬಿ, ಸಿ ಮತ್ತು ಡಿ ಅಧಿಕಾರಿ/ನೌಕರರುಗಳ ಕ್ರೋಡೀಕೃತ ಪ್ರಸ್ತಾವನೆಗಳನ್ನು ಲಗತ್ತಿಸಿರುವ ನಮೂನೆಗಳಲ್ಲಿ ಇಲಾಖಾ ಮುಖ್ಯಸ್ಥರು ದೃಢೀಕರಿಸಿ ಆಗಸ್ಟ್‌ 31ರೊಳಗೆ ಸಲ್ಲಿಸುವಂತೆ ಕೋರಿದ್ದಾರೆ.

Continue Reading

ಬೆಂಗಳೂರು

Ragging Case : ಬೆಂಗಳೂರಲ್ಲಿ ನಿಲ್ಲದ ವ್ಹೀಲಿಂಗ್‌ ಆ್ಯಂಡ್‌ ರ‍್ಯಾಗಿಂಗ್‌ ಹಾವಳಿ; ಮಹಿಳೆ ಹಿಂದೆ ಬಿದ್ದ ಪೋಲಿ ಹುಡುಗರು

Bike Wheeling: ರೋಡ್‌ನಲ್ಲಿ ಭಯಾನಕ ವ್ಹೀಲಿಂಗ್‌ ಮಾಡಿ ರಸ್ತೆಯಲ್ಲಿ ಓಡಾಡುವವರಿಗೆ ಹಾಗೂ ಸಹ ಸವಾರರಿಗೆ ಕಿರಿಕ್‌ ಮಾಡುವುದಲ್ಲದೇ, ಯುವತಿಯೊಬ್ಬಳಿಗೆ ಪುಂಡರು ಕೀಟಲೆ (Ragging Case) ಮಾಡಿದ್ದಾರೆ.

VISTARANEWS.COM


on

By

Ragging case in Bengaluru
Koo

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಪುಂಡರ ಹಾವಳಿ (Ragging Case) ಮಿತಿಮೀರಿದೆ. ಮೀಸೆ ಚಿಗುರದ ಯುವಕರು ಓಡಿಸೋಕ್ಕೆ ಬೈಕ್‌ ಸಿಕ್ಕರೆ ಸಾಕು ರಸ್ತೆಯಲ್ಲಿ ವ್ಹೀಲಿಂಗ್‌ (bike wheeling) ಮಾಡುತ್ತಾ, ಹೆಣ್ಮಕ್ಕಳಿಗೆ ರ‍್ಯಾಗಿಂಗ್‌ ಮಾಡುವುದು ಹೆಚ್ಚಾಗುತ್ತಿದೆ. ಸದ್ಯ ಇಂತಹದ್ದೆ ಘಟನೆಯೊಂದು ನಾಗರಭಾವಿ ಔಟರ್ ರಿಂಗ್ ರೋಡ್ ಬಳಿ ನಡೆದಿದೆ.

ಕುಟುಂಬದವರ ಜತೆ ಹೋಗುತ್ತಿದ್ದ ಮಹಿಳೆಯ ಹಿಂದೆ ಬಿದ್ದ ಕೆಲ ಪೋಲಿ ಹುಡುಗರು, ವ್ಹೀಲಿಂಗ್ ಮಾಡಿ ಭಯ ಪಡಿಸಿದ್ದಲ್ಲದೇ ರ‍್ಯಾಗಿಂಗ್‌ ಮಾಡಿದ್ದಾರೆ. ನಿನ್ನೆ ಭಾನುವಾರ ರಾತ್ರಿ 11.40ರ ಸುಮಾರಿಗೆ ಘಟನೆ ನಡೆದಿದೆ. ನೀತು ಬಳೆಗಾರ್ ಎಂಬಾಕೆ ಪೊಲೀಸರಿಗೆ ದೂರು ನೀಡಿದ್ದಾರೆ.

ನೀತು ಕುಟುಂಬಸ್ಥರ ಜತೆ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಪುಂಡರಿಬ್ಬರು ನಂಬರ್ ಪ್ಲೇಟ್ ಇಲ್ಲದ ಇರುವ ಡ್ಯೂಕ್ ಬೈಕ್‌ನಲ್ಲಿ ಬಂದು ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದಿದ್ದಾರೆ. ಇದನ್ನೂ ಪ್ರಶ್ನೆ ಮಾಡಿದ್ದಕ್ಕೆ ಮಹಿಳೆಯನ್ನು ನಿಂದಿಸಿದ್ದಾರೆ. ಹೀಗಾಗಿ ನೀತು ಫೋಟೋ ಸಮೇತ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

ಜತೆಗೆ ಸೋಶಿಯಲ್‌ ಮೀಡಿಯಾದಲ್ಲಿ ಟ್ಯಾಗ್‌ ಮಾಡಿ ಬೆಂಗಳೂರಿನಲ್ಲಿ ಸಾಮಾನ್ಯ ಜನರಿಗೆ ಸೇಫ್ಟಿ ಇಲ್ಲ. ದಯಮಾಡಿ ಇಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಮನವಿ ಮಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಬಾಲಕನನ್ನು ಥಳಿಸಿದ ಯುವಕರ ಗುಂಪು

ಹುಬ್ಬಳ್ಳಿಯಲ್ಲಿ ಕಿಡಿಗೇಡಿಗಳ ಗುಂಪೊಂದು ಶಾಲಾ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದೆ. ಹುಬ್ಬಳ್ಳಿಯ ವಿಶ್ವೇಶ್ವರ ನಗರದಲ್ಲಿ ಖಾಸಗಿ ಶಾಲೆಯ ವಿದ್ಯಾರ್ಥಿ ಹಿಡಿದ ಐದಾರು ಮಂದಿ ಹಲ್ಲೆ ನಡೆಸಿದ್ದಾರೆ. ಹಲ್ಲೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಶಾಲೆಯ ಪ್ರಾಂಶುಪಾಲರಿಂದ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವಿದ್ಯಾರ್ಥಿನಿ ಜತೆ ಮಾತನಾಡುತ್ತಿದ್ದ ಎಂಬ ಕಾರಣಕ್ಕೆ ಬಾಲಕನ ಮೇಲೆ ಹಲ್ಲೆ ನಡೆಸಲಾಗಿದೆ.
ಘಟನೆ ಸಂಬಂಧಪಟ್ಟಂತೆ ವಿವಿಧ ಕಾಲೇಜುಗಳ ಐವರು ಯುವಕರ ವಿರುದ್ಧ ಪ್ರಕರಣ‌ ದಾಖಲಾಗಿದೆ.

ಇದನ್ನೂ ಓದಿ: Karnataka Rain : ಮಳೆ ಅವಾಂತರ; ಮರ ಬಿದ್ದು ಕಾರು ಜಖಂ, ಕುಸಿದು ಬಿದ್ದ ಪಾವಂಜೆ ಮಹಾಗಣಪತಿ ದೇವಸ್ಥಾನದ ತಡೆಗೋಡೆ

ಕಾಲೇಜು ಯುವತಿಯವರಿಗೆ ಮರ್ಮಾಂಗ ತೋರಿಸಿ ಎಸ್ಕೇಪ್‌ ಆಗಿದ್ದ ದುಷ್ಟ ಅರೆಸ್ಟ್‌

ಬೆಂಗಳೂರು: ಕಾಲೇಜು ಯುವತಿಯರಿಗೆ ಮರ್ಮಾಂಗ ತೋರಿಸುವ ಮೂಲಕ ಅಸಭ್ಯವಾಗಿ ವರ್ತಿಸಿ (Indecent Behaviour) ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ನಗರದ ವಿವಿ ಪುರಂನಲ್ಲಿರುವ ಪ್ರತಿಷ್ಠಿತ ಖಾಸಗಿ ಕಾಲೇಜು ಬಳಿ ನಿಂತಿದ್ದ ಯುವತಿರ ಮುಂದೆ ಕಾಮುಕ ವ್ಯಕ್ತಿಯೊಬ್ಬ ಪ್ಯಾಂಟ್ ಜಿಪ್ ತೆಗೆದು ಮರ್ಮಾಂಗ ತೋರಿಸಿ ಪರಾರಿಯಾಗಿದ್ದ. ಆತನನ್ನು ಇದೀಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರೆಹಮಾನ್ (48) ಆರೋಪಿ. ಕಾಲೇಜು ಮುಂಭಾಗ ನಿಂತಿದ್ದ ಹುಡುಗಿಯರ ಗುಂಪಿನ ಬಳಿ ಸ್ಕೂಟರ್‌ನಲ್ಲಿ ಬಂದ ವ್ಯಕ್ತಿ, ಅಸಭ್ಯವಾಗಿ ವರ್ತಿಸಿದ್ದ. ಆ ದೃಶ್ಯವನ್ನು ಸ್ಥಳೀಯರೊಬ್ಬರು ಮೊಬೈಲ್‌ನಲ್ಲಿ ಚಿತ್ರೀಕರಿಸಿ, ಕ್ರಮ ಕೈಗೊಳ್ಳಲು ಪೊಲೀಸರಿಗೆ ಮನವಿ ಮಾಡಿದ್ದರು. ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಗಮನಿಸಿದ ಪೊಲೀಸರು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಮಳೆ ಅವಾಂತರ; ಮರ ಬಿದ್ದು ಕಾರು ಜಖಂ, ಕುಸಿದು ಬಿದ್ದ ಪಾವಂಜೆ ಮಹಾಗಣಪತಿ ದೇವಸ್ಥಾನದ ತಡೆಗೋಡೆ

Karnataka Rain : ರಾಜ್ಯದಲ್ಲಿ ಮಳೆ ಅವಾಂತರ ಮುಂದುವರಿದ್ದು, ಹಾಸನದಲ್ಲಿ ಕಾರೊಂದರ ಮೇಲೆ ಬೃಹತ್‌ ಗಾತ್ರ ಮರ ಬಿದ್ದು ಜಖಂಗೊಂಡರೆ, ಪಾವಂಜೆ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ತಡೆಗೋಡೆ ಕುಸಿದು ಬಿದ್ದಿದೆ. ಚಿಕ್ಕೋಡಿಯಲ್ಲಿ ಬಾಬಾ ದರ್ಗಾ ಜಲಾವೃತಗೊಂಡಿದೆ.

VISTARANEWS.COM


on

By

Karnataka Rain Effect
Koo

ಹಾಸನ: ಭಾರಿ ಮಳೆ-ಗಾಳಿಗೆ (Karnataka Rain Effect) ಬೃಹತ್ ಗಾತ್ರದ ಮರವೊಂದು (Tree fall) ಧರೆಗುರುಳಿದೆ. ಬಿದ್ದ ರಭಸಕ್ಕೆ ಮನೆಯ ಮುಂದೆ ನಿಲ್ಲಿಸಿದ್ದ ಕಾರು ಸಂಪೂರ್ಣ ಜಖಂಗೊಂಡಿದೆ. ಹಾಸನದ ಕುವೆಂಪುನಗರದಲ್ಲಿ ಘಟನೆ ನಡೆದಿದೆ. ರಾಕೇಶ್ ಎಂಬುವವರು ತಮ್ಮ ಕಾರನ್ನು ಮರದ ಕೆಳಗೆ ನಿಲ್ಲಿಸಿದ್ದರು.

karnataka rain effect

ನೋಡನೋಡುತ್ತಿದ್ದಂತೆ ಮರವು ಕಾರಿನ ಮೇಲೆ ಬಿದ್ದು ಪೂರ್ತಿ ಜಖಂಗೊಂಡಿದೆ. ಅದೃಷ್ಟವಶಾತ್‌ ಕಾರಿನೊಳಗೆ ಯಾರು ಇಲ್ಲದೆ ಇರುವುದರಿಂದ ಅನಾಹುತವೊಂದು ತಪ್ಪಿದೆ. ಸ್ಥಳಕ್ಕೆ ನಗರಸಭೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ, ರಸ್ತೆಗೆ ಅಡ್ಡಲಾಗಿ, ಕಾರಿನ ಮೇಲೆ ಬಿದ್ದಿದ್ದ ಮರವನ್ನು ತೆರವುಗೊಳಿಸಿದರು. ಇತ್ತ ಕೊಪ್ಪಳದಲ್ಲಿ ಕಳೆದ ಒಂದು ವಾರದಿಂದ ಬಿಡುವು ನೀಡಿದ್ದ ಮಳೆರಾಯ, ಸೋಮವಾರ ಮಧ್ಯಾಹ್ನದ ಸುಮಾರು ಅರ್ಧಗಂಟೆಗೂ ಹೆಚ್ಚು ಸಮಯ ಅಬ್ಬರಿಸಿದ್ದ.

ದೇವಸ್ಥಾನ ತಡೆಗೋಡೆ ಕುಸಿತ

ಮಂಗಳೂರಿನಲ್ಲಿ ಭಾರೀ ಮಳೆಗೆ ಮತ್ತೊಂದು ಅವಘಡ ಸಂಭವಿಸಿದೆ. ನಿರಂತರ ಮಳೆಗೆ ಪ್ರಸಿದ್ಧ ಧಾರ್ಮಿಕ ಕ್ಷೇತ್ರದ ತಡೆಗೋಡೆ ಕುಸಿದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಪಾವಂಜೆ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ತಡೆಗೋಡೆ ಬಿದ್ದಿದೆ.

ಭಾರೀ ಗಾಳಿ ಮತ್ತು ಮಳೆಗೆ ತೆಂಗಿನ ಗಿಡದ ಬುಡದ ಮಣ್ಣು ಸಡಿಲಗೊಂಡಿದೆ. ಪರಿಣಾಮ ಕೆಂಪು ಕಲ್ಲಿನ ಐದಾರು ಅಡಿ ಎತ್ತರದ ತಡೆಗೋಡೆ ಕುಸಿದಿದೆ. ಪರಿಣಾಮ ವಿದ್ಯುತ್ ಕಂಬ, ಬಾವಿ ಹಾಗೂ ದೇವಸ್ಥಾನದ ಪಾರ್ಕಿಂಗ್ ಜಾಗಕ್ಕೆ ಹಾನಿಯಾಗಿದೆ. ಯಾವುದೇ ವಾಹನ ಪಾರ್ಕ್ ಮಾಡದ ಹಿನ್ನೆಲೆಯಲ್ಲಿ ಅನಾಹುತ ತಪ್ಪಿದೆ. ಸದ್ಯ ಮಣ್ಣು ತೆಗೆದು ಪ್ಲಾಸ್ಟಿಕ್ ಟರ್ಪಾಲ್ ಹಾಕಿ ಮುನ್ನೆಚ್ಚರಿಕೆ ವಹಿಸಲಾಗಿದೆ.

ಚಿಕ್ಕೋಡಿಯಲ್ಲಿ ಬಾಬಾ ದರ್ಗಾಕ್ಕೆ ನುಗ್ಗಿದ ನೀರು

ಮಹಾರಾಷ್ಟ್ರದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯಲ್ಲಿ ಪ್ರವಾಹ ಭೀತಿ ಶುರುವಾಗಿದೆ. ದೂದಗಂಗಾ ನದಿಯು ಉಕ್ಕಿ ಹರಿದಿದ್ದು, ಯಕ್ಸಂಬಾ ಬಳಿಯ ಮುಲ್ಕಾನಿ ಬಾಬಾ ದರ್ಗಾಕ್ಕೆ ನೀರು ನುಗ್ಗಿ ಜಲಾವೃತಗೊಂಡಿದೆ. ನದಿಯಲ್ಲಿ ಇನ್ನೂ ಆರು ಅಡಿ ನೀರು ಬಂದರೆ ಹಲವು ಗ್ರಾಮಕ್ಕೆ ನೀರು ನುಗ್ಗುವ ಭೀತಿ ಇದೆ.

ಇದನ್ನೂ ಓದಿ: Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

ಹಾಸನದಲ್ಲೂ ಅಬ್ಬರಿಸುತ್ತಿರುವ ಮಳೆ

ಹಾಸನ ಜಿಲ್ಲೆಯ ವಿವಿಧೆಡೆ ಸೋಮವಾರ ಭಾರಿ ಮಳೆಯಾಗಿದೆ. ಮಲೆನಾಡು ಭಾಗವಾದ ಸಕಲೇಶಪುರ, ಆಲೂರು, ಬೇಲೂರಿನಲ್ಲಿ ನಿರಂತರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿತ್ತು. ವಾಹನ ಸವಾರರು, ವಿದ್ಯಾರ್ಥಿಗಳು ಪರದಾಡಿದರು. ಇನ್ನೂ ಚಿಕ್ಕಮಗಳೂರು ಭಾಗದಲ್ಲೂ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಸನದ ಗೊರೂರಿನಲ್ಲಿರುವ ಜೀವನದಿ ಹೇಮಾವತಿ ನದಿಗೆ ಒಳಹರಿವಿನಲ್ಲಿ ಹೆಚ್ಚಳವಾಗಿದೆ.

ಕಾರವಾರದ‌ ಕದ್ರಾ ಜಲಾಶಯದಿಂದ ನೀರು ಬಿಡುಗಡೆ

ಉತ್ತರ ಕನ್ನಡದ ಕಾರವಾರದ‌ ಕದ್ರಾ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗಿದೆ. ವಿದ್ಯುತ್ ಉತ್ಪಾದನೆ ಹಾಗೂ ಕ್ರಸ್ಟ್ ಗೇಟ್ ಸೇರಿ 31,000 ಕ್ಯೂಸೆಕ್ಸ್‌ಗೂ ಅಧಿಕ ನೀರು ಬಿಡುಗಡೆ ಮಾಡಲಾಗಿದೆ. 34.50 ಮೀ ಗರಿಷ್ಠ ಸಾಮರ್ಥ್ಯದ ಕದ್ರಾ ಜಲಾಶಯದಿಂದ 4 ಗೇಟ್‌ಗಳಿಂದ 10,600 ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಲಾಗಿದೆ.

karnataka rain Kadhra dam

ಸದ್ಯ ಜಲಾಶಯದಲ್ಲಿ 31 ಮೀ ನೀರಿನ ಸಂಗ್ರಹ ತಲುಪಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಡಳಿತವು ಜಲಾಶಯದಲ್ಲಿ 30 ಮೀ ನೀರು ಸಂಗ್ರಹಕ್ಕೆ ನಿಗಧಿಪಡಿಸಿದೆ. ಕರಾವಳಿ ಭಾಗದಲ್ಲಿ ಧಾರಾಕಾರ ಮಳೆಯಿಂದ ಜಲಾಶಯದ ಒಳಹರಿವು ಹೆಚ್ಚಿದ್ದು,22,000 ಕ್ಯೂಸೆಕ್ಸ್ ನೀರು ಜಲಾಶಯಕ್ಕೆ ಹರಿದುಬರುತ್ತಿದೆ. ಜಲಾಶಯದಿಂದ ವಿದ್ಯುತ್ ಉತ್ಪಾದಿಸಿ 21,000 ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಲಾಗುತ್ತದೆ. ಮುಂಜಾಗ್ರತಾ ಕ್ರಮವಾಗಿ ನದಿ ಪಾತ್ರದ ನಿವಾಸಿಗಳನ್ನು ಸ್ಥಳಾಂತರಗೊಳಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Viral Video
Latest7 mins ago

Viral Video: ಹೃಷಿಕೇಶದ ಗಂಗಾ ಘಾಟ್‌ನಲ್ಲಿ ಬಿಕಿನಿ ಧರಿಸಿದ ವಿದೇಶಿಯರ ಮೋಜು ಮಸ್ತಿ!

Dengue Cases
ರಾಜಕೀಯ10 mins ago

Dengue Cases: ಕಲುಷಿತ ನೀರು ಪೂರೈಕೆಯಾದ್ರೆ ಅಧಿಕಾರಿಗಳೇ ಹೊಣೆ; 15 ದಿನಕ್ಕೊಮ್ಮೆ ಕ್ವಾಲಿಟಿ ಟೆಸ್ಟ್ ಮಾಡಿ ಎಂದ ಸಿಎಂ

Mahanati Show bindu honnali not selected
ಕಿರುತೆರೆ14 mins ago

Mahanati Show: ಫಿನಾಲೆಗೆ ಆಯ್ಕೆಯಾಗಿಲ್ಲ ದಾವಣಗೆರೆ ಟೀಚರ್; ಕೋಪಗೊಂಡ ನೆಟ್ಟಿಗರು!

PGET 2024 Online application for PGET can be submitted till July 10
ಶಿಕ್ಷಣ35 mins ago

PGET 2024 : ಪಿಜಿಇಟಿಗೆ ಆನ್‌ಲೈನ್ ಅರ್ಜಿ ಸಲ್ಲಿಸಲು ಜುಲೈ 10ರವರೆಗೆ ಅವಕಾಶ

Suryakumar Yadav
ಕ್ರೀಡೆ37 mins ago

Suryakumar Yadav: 8 ವರ್ಷಗಳ ಹಿಂದೆಯೇ ಅದ್ಭುತ ಕ್ಯಾಚ್​ ಹಿಡಿದೆ ಎಂದು ವಿವಾಹ ವಾರ್ಷಿಕೋತ್ಸವ ಆಚರಿಸಿದ ಸೂರ್ಯಕುಮಾರ್

Rahul Gandhi
ದೇಶ43 mins ago

Rahul Gandhi: ಹಿಂದುಗಳಿಗೆ ಅವಮಾನ ಖಂಡಿಸಿ ದೇಗುಲದ ಡೋರ್‌ಮ್ಯಾಟ್‌ಗೆ ರಾಹುಲ್‌ ಗಾಂಧಿ ಫೋಟೊ; ಇಲ್ಲಿದೆ Video

Manvita Kamath Honeymoon in baali
ಸ್ಯಾಂಡಲ್ ವುಡ್49 mins ago

Manvita Kamath: ಪತಿ ಅರುಣ್ ಜತೆ ಬಾಲಿಯಲ್ಲಿ ಸಖತ್‌ ಎಂಜಾಯ್‌ ಮಾಡುತ್ತಿರುವ ಮಾನ್ವಿತಾ ಕಾಮತ್!

NEET UG 2024
ದೇಶ1 hour ago

NEET UG 2024: ನೀಟ್‌ ಅಕ್ರಮ ಮೇಲ್ನೋಟಕ್ಕೆ ಸಾಬೀತು ಎಂದ ಸುಪ್ರೀಂ; ಎನ್‌ಟಿಎ, ಸಿಬಿಐಗೆ ಖಡಕ್ ಸೂಚನೆ!

OPS News
ಕರ್ನಾಟಕ1 hour ago

OPS News: ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌; ಅರ್ಹರಿಗೆ ಒಪಿಎಸ್‌, ಪ್ರಸ್ತಾವನೆ ಸಲ್ಲಿಕೆಗೆ ಆದೇಶ

ಕ್ರೀಡೆ1 hour ago

Paris 2024 Olympics Athletics: ವಿಶ್ವ ರ್‍ಯಾಂಕಿಂಗ್‌ ಆಧಾರದಲ್ಲಿ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಜೆಸ್ವಿನ್‌, ಅಂಕಿತಾ ಧ್ಯಾನಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain Effect
ಮಳೆ2 hours ago

Karnataka Rain : ಮಳೆ ಅವಾಂತರ; ಮರ ಬಿದ್ದು ಕಾರು ಜಖಂ, ಕುಸಿದು ಬಿದ್ದ ಪಾವಂಜೆ ಮಹಾಗಣಪತಿ ದೇವಸ್ಥಾನದ ತಡೆಗೋಡೆ

Karnataka Rain
ಮಳೆ4 hours ago

Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

Karnataka weather Forecast
ಮಳೆ5 hours ago

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

Murder case
ಬೆಂಗಳೂರು6 hours ago

Murder case : ಕುಡಿದ ಅಮಲಿನಲ್ಲಿ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

karnataka weather Forecast
ಮಳೆ21 hours ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ24 hours ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ1 day ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ1 day ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ2 days ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ2 days ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

ಟ್ರೆಂಡಿಂಗ್‌