Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಕಿರಿಕಿರಿ ತಪ್ಪಲ್ಲ! - Vistara News

ಪ್ರಮುಖ ಸುದ್ದಿ

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಕಿರಿಕಿರಿ ತಪ್ಪಲ್ಲ!

Dina Bhavishya : ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷದ
ದ್ವಾದಶಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

dina bhavishya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂದ್ರನು ಸೋಮವಾರವೂ ಸಿಂಹ ರಾಶಿಯಲ್ಲೆ ಇರಲಿದ್ದಾನೆ. ಇದರಿಂದಾಗಿ ವೃಷಭ, ಕಟಕ, ಕನ್ಯಾ, ತುಲಾ, ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಕಟಕ, ಸಿಂಹ, ಕನ್ಯಾ, ತುಲಾ, ಮೀನ ರಾಶಿಯ ಉದ್ಯೋಗಿಗಳಿಗೆ ಕಿರಿಕಿರಿ ಉಂಟಾಗಲಿದೆ. ಮೇಷ ರಾಶಿಯ ಉದ್ಯೋಗಿಗಳಿಗೆ ಬಡ್ತಿ, ವೇತನ ಹೆಚ್ಚಳವಾಗುವ ಸಾಧ್ಯತೆ ಇದೆ. ಕಟಕ ರಾಶಿಯವರು ಅತಿರೇಕದಲ್ಲಿ ಆಡುವ ಯಾವುದೇ ಮಾತುಗಳು ಅಪಾಯ ತರಬಹುದು. ಧನಸ್ಸು ರಾಶಿಯ ವಿವಾಹ ಅಪೇಕ್ಷಿತರಿಗೆ ಕಂಕಣ ಬಲ ಕೂಡಿಬರಲಿದೆ. ಇತರೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (11-09-2023)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷ.
ತಿಥಿ:
ದ್ವಾದಶಿ 23:51 ವಾರ: ಸೋಮವಾರ
ನಕ್ಷತ್ರ: ಪುಷ್ಯಾ 19:5 ಯೋಗ: ಪರಿಘ 24:11
ಕರಣ: ಕೌಳವ 10:38 ಅಮೃತಕಾಲ: 12:50 ಯಿಂದ 02:38 ವರೆಗೆ

ಸೂರ್ಯೋದಯ : 06: 14  ಸೂರ್ಯಾಸ್ತ : 06:45

ರಾಹುಕಾಲ: ಬೆಳಗ್ಗೆ 7.30 ರಿಂದ 9.00
ಗುಳಿಕಕಾಲ: ಬೆಳಗ್ಗೆ 7.30 ರಿಂದ 9.00
ಯಮಗಂಡಕಾಲ:
ಬೆಳಗ್ಗೆ 10.30 ರಿಂದ 12.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಅತಿರೇಕದ ಮಾತುಗಳು ಜಗಳವನ್ನು ಉಂಟುಮಾಡಬಹುದು. ಯಾವುದಾದರೂ ಮೂಲದಿಂದ ಆರ್ಥಿಕ ಲಾಭ ಸಿಗಲಿದೆ. ಉದ್ಯೋಗಿಗಳಿಗೆ ಬಡ್ತಿ, ವೇತನ ಹೆಚ್ಚಳವಾಗುವ ಸಾಧ್ಯತೆ ಇದೆ. ಆರೋಗ್ಯದಲ್ಲಿ ಕೊಂಚ ಮಟ್ಟಿಗೆ ಏರುಪೇರು ಉಂಟಾಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಭಾವನಾತ್ಮಕ ವಿಷಯಗಳಿಂದ ಮಾನಸಿಕ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಕುಟುಂಬದ ಆಪ್ತರಿಂದ ಆಮಂತ್ರಣ ಸಿಗಲಿದೆ. ಆರೋಗ್ಯದ ಕುರಿತು ವಿಶೇಷ ಕಾಳಜಿ ಅವಶ್ಯವಿದೆ. ಉದ್ಯೋಗಿಗಳಿಗೆ ಶುಭಫಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಮಿಥುನ: ಅನಗತ್ಯ ಒತ್ತಡಕ್ಕೆ ಒಳಗಾಗುವುದು ಬೇಡ. ಭರವಸೆಯ ಹೊಸ ಅವಕಾಶಗಳು ಸಿಗುವ ಸಾಧ್ಯತೆ ಇದೆ. ಆರ್ಥಿಕ ಪ್ರಗತಿ ಮಧ್ಯಮವಾಗಿರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ ಸಿಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕಟಕ: ಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಅತಿರೇಕದಲ್ಲಿ ಆಡುವ ಯಾವುದೇ ಮಾತುಗಳು ಅಪಾಯ ತರಬಹುದು. ಉದ್ಯೋಗಿಗಳಿಗೆ ಒತ್ತಡ ಹೆಚ್ಚಾಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಸಿಂಹ: ದಿಢೀರ್‌ ಕೋಪದಿಂದ ಕಾರ್ಯದಲ್ಲಿ ಹಾನಿಯಾಗಲಿದೆ. ಆರ್ಥಿಕ ಪ್ರಗತಿ ಇರಲಿದೆ. ಸಂಬಂಧಿಗಳೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಹೇಳಿಕೆಯ ಮಾತುಗಳು ಕುಟುಂಬದ ವಾತಾವರಣ ಕೆಡಿಸುವುದು ಎಚ್ಚರಿಕೆ ಇರಲಿ. ಸಹದ್ಯೋಗಿಗಳಿಂದ ಕಿರಿಕಿರಿ ಇರಲಿದೆ. ಆರೋಗ್ಯದ ಕಾಳಜಿ ಇರಲಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಕನ್ಯಾ: ಮನರಂಜನೆಗಾಗಿ ಸಮಯ ಕಳೆಯುವ ಸಾಧ್ಯತೆ ಇದೆ. ಆಪ್ತರೊಂದಿಗೆ ಮಾತುಕತೆಯಲ್ಲಿ ತೊಡಗುವಿರಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಪಾಲುದಾರಿಕೆ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಉದ್ಯೋಗಿಗಳಿಗೆ ಕಿರಿಕಿರಿ ಇರಲಿದೆ. ನಂಬಿದ ವ್ಯಕ್ತಿಗಳು ನಿಮಗೆ ಮೋಸ ಮಾಡಬಹುದು. ತಪ್ಪು ತಿಳುವಳಿಕೆ ಉಂಟಾಗುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಸಕಾರಾತ್ಮಕ ಆಲೋಚನೆಗಳಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಆರ್ಥಿಕ ಪ್ರಗತಿ ಸಾಧಾರಣ ಇರಲಿದೆ. ಹಳೆಯ ವಿಚಾರ ಕೆದಕಿ ಮನಸ್ಸಿಗೆ ಘಾಸಿ ಮಾಡಿಕೊಳ್ಳುವುದು ಬೇಡ. ಆರೋಗ್ಯ ಮಧ್ಯಮವಾಗಿರಲಿದೆ. ಉದ್ಯೋಗಿಗಳಿಗೆ ಮಿಶ್ರ ಫಲ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ: ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಸಿಗಲಿದೆ. ಹೂಡಿಕೆ, ವ್ಯಾಪಾರ ವ್ಯವಹಾರಗಳಲ್ಲಿ ಆರ್ಥಿಕ ಪ್ರಗತಿ ಸಿಗಲಿದೆ. ಉದ್ಯೋಗಿಗಳಿಗೆ ಹೊಸ ಭರವಸೆ ಮೂಡಲಿದೆ. ಅಮೂಲ್ಯ ವಸ್ತುಗಳು ಕೈಗೆ ಸಿಗುವುದರಿಂದ ಸಂತಸವಾಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 3

Horoscope Today

ಧನಸ್ಸು: ಭೂಮಿ ಸಂಬಂಧಿ ವ್ಯವಹಾರ, ಹಣಕಾಸು ವ್ಯವಹಾರದಲ್ಲಿ ಲಾಭ ಸಿಗಲಿದೆ. ಪ್ರಯಾಣ ಮಾಡುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಸಹದ್ಯೋಗಿಗಳಿಂದ ಸಹಕಾರ ಸಿಗಲಿದೆ. ವಿವಾಹ ಅಪೇಕ್ಷಿತರಿಗೆ ಕಂಕಣ ಬಲ ಕೂಡಿಬರಲಿದೆ. ಕುಟುಂಬದಲ್ಲಿ ಹೊಸ ಭರವಸೆ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಮಕರ: ಭರವಸೆಯ ಹೊಸ ಜೀವನ ಶುರುವಾಗಲಿದೆ. ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ,ಆರ್ಥಿಕ ಪ್ರಗತಿ ಸಿಗಲಿದೆ. ನೀವು ಮಾಡಿದ ಕೆಲಸ ಕಾರ್ಯಗಳ ಫಲಿತಾಂಶ ಬೇರೆಯವರು ತೆಗೆದುಕೊಂಡು ಪ್ರಶಂಸೆ ಪಡುವ ಸಾಧ್ಯತೆ, ಎಚ್ಚರಿಕೆ ಇರಲಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕುಂಭ: ಬಾಕಿ ಇರುವ ಕೆಲಸ ಕಾರ್ಯಗಳು ಪೂರ್ಣವಾಗಲಿದೆ. ಅವಶ್ಯಕ ವಸ್ತುಗಳ ಖರೀದಿ ಮಾಡಬಹುದು. ಆರ್ಥಿಕ ಲಾಭ ಇರಲಿದೆ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ ಇದ್ದು ಮಾತು ಬೆಳೆಸುವುದು ಬೇಡ. ಸಾಮಾಜಿಕ ಕಾರ್ಯದಲ್ಲಿ ತೊಡಗುವ ಸಾಧ್ಯತೆ ಇದೆ.
ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಇದನ್ನೂ ಓದಿ : ತಾತಯ್ಯ ತತ್ವಾಮೃತಂ: ದೇಹದಲ್ಲಿ ಜೀವ ಇರುವಾಗ ಏನು ಮಾಡಬೇಕು?

Horoscope Today

ಮೀನ: ಹಳೆಯ ನೋವು ಉಲ್ಬಣಗೊಳ್ಳವ ಸಾಧ್ಯತೆ ಇದೆ. ಆರೋಗ್ಯದ ಕಡೆಗೆ ಗಮನ ಇರಲಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಅಗತ್ಯ ವಸ್ತುಗಳ ಖರೀದಿಯಿಂದ ಖರ್ಚು ಹೆಚ್ಚಾಗಲಿದೆ. ಸಂಬಂಧಿಗಳೊಂದಿಗೆ ಮಾತುಕತೆಯಲ್ಲಿ ತೊಡಗುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಾಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಭವಿಷ್ಯ

Dina Bhavishya : ಒತ್ತಡಗಳು ದೂರವಾಗಿ ಹರ್ಷದಿಂದ ಕಾಲ ಕಳೆಯುವಿರಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷದ ದ್ವಾದಶಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಬುಧವಾರವೂ ಮಿಥುನ ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ವೃಷಭ, ಕಟಕ, ಸಿಂಹ, ವೃಶ್ಚಿಕ, ಧನಸ್ಸು, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಹಣಕ್ಕೆ ಸಂಬಂಧಿಸಿದ ಯಾವುದೇ ವಿಷಯ ನ್ಯಾಯಾಲಯ ಪ್ರಕರಣದಲ್ಲಿ ಸಿಲುಕಿಕೊಂಡಿದ್ದರೆ, ನೀವು ಅದರಲ್ಲಿ ವಿಜಯವನ್ನು ಪಡೆಯಬಹುದು. ವೃಷಭ ರಾಶಿಯವರು ಉತ್ಸಾಹದಿಂದ ಕಾಲ ಕಳೆಯುವಿರಿ. ಯಾರಾದರೂ ಆರ್ಥಿಕ ಸಹಾಯವನ್ನು ಕೇಳಬಹುದು. ಕುಟುಂಬ ಸದಸ್ಯರ ಬೆಂಬಲ ಸಿಗಲಿದೆ. ಕಟಕ ರಾಶಿಯವರು ಅನೇಕ ಒತ್ತಡಗಳು ದೂರವಾಗಿ ಹರ್ಷದಿಂದ ಕಾಲ ಕಳೆಯುರಿ. ಸಂಗಾತಿಯೊಂದಿಗೆ ಪ್ರಮುಖ ಯೋಜನೆಗಳ ಕುರಿತು ಚರ್ಚಿಸುವ ಸಾಧ್ಯತೆ ಇದೆ. ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (3-07-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷ.
ತಿಥಿ: ದ್ವಾದಶಿ 07:09 ವಾರ: ಬುಧವಾರ
ನಕ್ಷತ್ರ: ರೋಹಿಣಿ 28:06 ಯೋಗ: ಶೂಲ 09:00
ಕರಣ: ತೈತುಲ 07:09 ಅಮೃತಕಾಲ: ಮಧ್ಯರಾತ್ರಿ 01:00 ರಿಂದ 02:33 ರವರೆಗೆ

ಸೂರ್ಯೋದಯ : 05:58   ಸೂರ್ಯಾಸ್ತ : 06:50

ರಾಹುಕಾಲ: ಮಧ್ಯಾಹ್ನ 12.00 ರಿಂದ 1.30
ಗುಳಿಕಕಾಲ: ಬೆಳಗ್ಗೆ 10.30 ರಿಂದ 12.00

ಯಮಗಂಡಕಾಲ: ಬೆಳಗ್ಗೆ 7.30 ರಿಂದ 9.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ನಿಮ್ಮ ಬಾಲ್ಯದ ನೆನಪುಗಳನ್ನು ಹಂಚಿಕೊಳ್ಳುವಿರಿ. ಅನಗತ್ಯ ಮಾನಸಿಕ ಒತ್ತಡ ತಂದುಕೊಳ್ಳುವುದು ಬೇಡ. ಹಣಕ್ಕೆ ಸಂಬಂಧಿಸಿದ ಯಾವುದೇ ವಿಷಯ ನ್ಯಾಯಾಲಯ ಪ್ರಕರಣದಲ್ಲಿ ಸಿಲುಕಿಕೊಂಡಿದ್ದರೆ, ನೀವು ಅದರಲ್ಲಿ ವಿಜಯವನ್ನು ಪಡೆಯಬಹುದು. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಷಭ: ಉತ್ಸಾಹದಿಂದ ಕಾಲ ಕಳೆಯುವಿರಿ. ಯಾರಾದರೂ ಆರ್ಥಿಕ ಸಹಾಯವನ್ನು ಕೇಳಬಹುದು. ಕುಟುಂಬ ಸದಸ್ಯರ ಬೆಂಬಲ ಸಿಗಲಿದೆ. ಉದ್ಯೋಗಿಗಳಿಗೆ ಮಿಶ್ರ ಫಲ. ಆರೋಗ್ಯ ಪರಿಪೂರ್ಣವಾಗಿರಲಿದೆ. ದಿನದ ಮಟ್ಟಿಗೆ ಖರ್ಚು ಇರಲಿದೆ. ‌ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಿಥುನ: ಅನಾವಶ್ಯಕ ವಿಚಾರಗಳಿಂದ ಮಾನಸಿಕವಾಗಿ ವಿಚಲಿತರಾಗುವುದು ಬೇಡ. ಸಕಾರಾತ್ಮಕವಾಗಿ ಆಲೋಚಿಸಿ ಮತ್ತು ನಿಮ್ಮ ವಿವೇಚನೆಯಲ್ಲಿ ಗಮನಾರ್ಹ ಬದಲಾವಣೆ ಕಾಣುತ್ತದೆ. ಆರೋಗ್ಯ ಮಧ್ಯಮವಾಗಿರಲಿದೆ. ಹಣಕಾಸು ಪ್ರಗತಿ ಉತ್ತಮವಾಗಿರಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಉತ್ತಮ ಫಲ. ಅದೃಷ್ಟ ಸಂಖ್ಯೆ: 8

Horoscope Today

ಕಟಕ: ಅನೇಕ ಒತ್ತಡಗಳು ದೂರವಾಗಿ ಹರ್ಷದಿಂದ ಕಾಲ ಕಳೆಯುರಿ. ಸಂಗಾತಿಯೊಂದಿಗೆ ಪ್ರಮುಖ ಯೋಜನೆಗಳ ಕುರಿತು ಚರ್ಚಿಸುವ ಸಾಧ್ಯತೆ ಇದೆ. ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 3

Horoscope Today

ಸಿಂಹ: ನಕಾರಾತ್ಮಕ ಆಲೋಚನೆಗಳು ಮಾನಸಿಕವಾಗಿ ವಿಚಲಿತರಾಗುವಂತೆ ಮಾಡಬಹುದು. ಕುಲ ದೇವರ ಆರಾಧನೆ, ಕ್ಷೇತ್ರ ದರ್ಶನದಿಂದ ಮಾನಸಿಕ ನೆಮ್ಮದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ಪ್ರಗತಿ ಸಾಧಾರಣವಾಗಿರಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಕನ್ಯಾ: ಕೆಲಸ ಕಾರ್ಯಗಳಲ್ಲಿ ಯಶಸ್ಸು, ಕೀರ್ತಿ ಸಿಗುವುದು. ದಿನದ ಮಟ್ಟಿಗೆ ಖರ್ಚು ಇರಲಿದೆ. ಜವಾಬ್ದಾರಿ ಹೆಚ್ಚಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕುಟುಂಬ ಸದಸ್ಯರ ಬೆಂಬಲ ದೊರೆಯಲಿದೆ. ವಿವಾಹ ಅಪೇಕ್ಷಿತರಿಗೆ ಸುದ್ದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯದ ಕುರಿತು ಹೆಚ್ಚು ಕಾಳಜಿ ವಹಿಸಿ. ಮಾನಸಿಕ ಒತ್ತಡದಿಂದ ದೂರವಿರಲು ಯೋಗ, ಪ್ರಾಣಾಯಾಮ, ಧ್ಯಾನ ಮಾಡಿ. ಆರ್ಥಿಕ ಸಹಾಯದ ಬೇಡಿಕೆ. ಆಪ್ತರೊಂದಿಗೆ ಸಮಯ ಕಳೆಯಲು ಅವಕಾಶ ಸಿಗಲಿದೆ. ಕುಟುಂಬದವರ ಸಹಕಾರ ಸಿಗಲಿದೆ. ಆರೋಗ್ಯ ಮಧ್ಯಮವಾಗಿರಲಿದೆ. ವ್ಯಾಪಾರ ವ್ಯವಹಾರ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ವೃಶ್ಚಿಕ : ಅನಿರೀಕ್ಷಿತ ಪ್ರಯಾಣ ಬೆಳೆಸಬೇಕಾಗಬಹುದು. ದೇಹದ ಆಯಾಸ ಹೆಚ್ಚಾಗುವ ಸಾಧ್ಯತೆ ಇದೆ. ಒತ್ತಡದಿಂದ ಮನಸ್ಸಿನ ಹತೋಟಿ ತಪ್ಪುವ ಸಾಧ್ಯತೆ ಇದೆ. ತಾಳ್ಮೆ ಅವಶ್ಯಕವಾಗಿದೆ. ವ್ಯಾಪಾರ ವ್ಯವಹಾರದಲ್ಲಿ ಇಮ್ಮಡಿ ಲಾಭ ಸಿಗಲಿದೆ. ಆರ್ಥಿಕವಾಗಿ ಬಲಿಷ್ಠವಾಗಿ ಇರುವಿರಿ. ಆದಾಯದ ಮೂಲಗಳು ಹೆಚ್ಚಾಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ಆರೋಗ್ಯದ ಕಡೆಗೆ ಹೆಚ್ಚು ಗಮನ ಇರಲಿ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಕುಟುಂಬದ ಆಪ್ತರೊಂದಿಗೆ ಸಮಯ ಹಂಚಿಕೊಳ್ಳುವಿರಿ. ವಿವಾಹ ಅಪೇಕ್ಷಿತರಿಗೆ ಕಂಕಣಭಾಗ್ಯ ಕೂಡಿ ಬರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಕರ: ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಆಪ್ತರೊಂದಿಗೆ ಸಮಯ ಕಳೆಯವಿರಿ. ಅನೇಕ ಭಿನ್ನಾಭಿಪ್ರಾಯಗಳು ಮಾನಸಿಕ ನೆಮ್ಮದಿಯನ್ನು ಹಾಳು ಮಾಡಬಹುದು, ಮಾನಸಿಕ ಆರೋಗ್ಯಕ್ಕಾಗಿ ದತ್ತಾತ್ರೇಯ ಗುರುಗಳ ಆರಾಧನೆ ಮಾಡಿ. ಆರೋಗ್ಯ ಮಾಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಉತ್ತಮ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕುಂಭ: ಆತ್ಮವಿಶ್ವಾಸದಿಂದ ಮಾಡಿದ ಕಾರ್ಯದಲ್ಲಿ ಯಶಸ್ಸು ಕೀರ್ತಿ ಸಿಗಲಿದೆ. ಅನಾವಶ್ಯಕವಾಗಿ ಒತ್ತಡಕ್ಕೆ ಒಳಗಾಗುವುದು ಬೇಡ. ಆರ್ಥಿಕ ಪ್ರಗತಿ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆಪ್ತರಿಂದ ಉಡುಗೊರೆ ಸಿಗುವುದು. ಕಷ್ಟದಲ್ಲಿ ಇರುವವರಿಗೆ ಸಹಾಯ ಮಾಡುವಿರಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಮೀನ: ದೈಹಿಕ ಆರೋಗ್ಯ ಉತ್ತಮವಾಗಿರಲಿದೆ, ಮಾನಸಿಕ ಆರೋಗ್ಯಕ್ಕೆ ನೀವು ನಡೆದಿರುವ ಘಟನೆ ನೆನಪಿಸಿ ಕೊರಗುವುದು ಬೇಡ. ಸಂಗಾತಿಯ ಮಾತುಗಳು ಅಹಿತಕರ ಎನಿಸಬಹುದು. ಕುಟುಂಬದ ಸದಸ್ಯರ ಅಡ್ಡಿಯ ಕಾರಣದಿಂದ ನಿಮ್ಮ ದಿನ ಸ್ವಲ್ಪ ಏರುಪೇರಾಗಬಹುದು. ಆಪ್ತರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ದೇಶ

Aditya L1: ಲ್ಯಾಗ್ರೇಂಜ್‌ ಪಾಯಿಂಟ್‌ನ ಮೊದಲ ಸುತ್ತು ಪೂರ್ಣಗೊಳಿಸಿದ ಆದಿತ್ಯ ಎಲ್‌ 1; ಇಸ್ರೋಗೆ ಭಾರಿ ಮುನ್ನಡೆ

Aditya L1: ಕಕ್ಷೆಯ ಮೊದಲ ಸುತ್ತು ಪೂರ್ಣಗೊಳಿಸಿರುವ ಕುರಿತು ಇಸ್ರೋ ಮಾಹಿತಿ ನೀಡಿದೆ. “ಆದಿತ್ಯ ಎಲ್‌ 1 ಮಿಷನ್‌ ಎಲ್‌ ಪಾಯಿಂಟ್‌ನ ಮೊದಲ ಸುತ್ತು ಪೂರ್ಣಗೊಳಿಸಿದೆ. ಜನವರಿ 6ರಂದು ಕಕ್ಷೆ ಸೇರಿದ ಇದು 178 ದಿನಗಳ ಬಳಿಕ ಮೊದಲ ಸುತ್ತು ಪೂರ್ಣಗೊಳಿಸಿದೆ.

VISTARANEWS.COM


on

Aditya L1
Koo

ನವದೆಹಲಿ: ಭಾರತದ ಚೊಚ್ಚಲ ಬಾಹ್ಯಾಕಾಶ ಆಧಾರಿತ ಸೌರ ಮಿಷನ್ ಆಗಿರುವ ಆದಿತ್ಯ ಎಲ್‌1 (Aditya L1) ಬಾಹ್ಯಾಕಾಶ ನೌಕೆಯು ಮತ್ತೊಂದು ಇತಿಹಾಸ ಸೃಷ್ಟಿಸಿದೆ. ಸೂರ್ಯ ಮತ್ತು ಭೂಮಿ ನಡುವಿನ ಗುರುತ್ವಾಕರ್ಷಣೆ ನಿಷ್ಕ್ರಿಯವಾಗುವ ‘ಲ್ಯಾಗ್ರೇಂಜ್‌ ಪಾಯಿಂಟ್‌’ನ (L1) ಪ್ರಭಾವಲಯದ (Halo) ಮೊದಲ ಸುತ್ತು ಪೂರ್ಣಗೊಳಿಸಿದೆ. ಇದರೊಂದಿಗೆ ಕಕ್ಷೆ ಸೇರಿದ (ಇದೇ ವರ್ಷದ ಜನವರಿ 6ರಂದು ಕಕ್ಷೆ ಸೇರಿದೆ) 178 ದಿನಗಳ ಬಳಿಕ ಲ್ಯಾಗ್ರೇಂಜ್‌ ಪಾಯಿಂಟ್‌ನ ಮೊದಲ ಸುತ್ತು ಪೂರ್ಣಗೊಳಿಸಿದಂತಾಗಿದೆ.

ಕಕ್ಷೆಯ ಮೊದಲ ಸುತ್ತು ಪೂರ್ಣಗೊಳಿಸಿರುವ ಕುರಿತು ಇಸ್ರೋ ಮಾಹಿತಿ ನೀಡಿದೆ. “ಆದಿತ್ಯ ಎಲ್‌ 1 ಮಿಷನ್‌ ಎಲ್‌ ಪಾಯಿಂಟ್‌ನ ಮೊದಲ ಸುತ್ತು ಪೂರ್ಣಗೊಳಿಸಿದೆ. ಜನವರಿ 6ರಂದು ಕಕ್ಷೆ ಸೇರಿದ ಇದು 178 ದಿನಗಳ ಬಳಿಕ ಮೊದಲ ಸುತ್ತು ಪೂರ್ಣಗೊಳಿಸಿದೆ. ಇದರೊಂದಿಗೆ ಎರಡನೇ ಸುತ್ತಿನತ್ತ ಆದಿತ್ಯ ಎಲ್‌ 1 ಮಿಷನ್‌ ದಾಪುಗಾಲು ಇಟ್ಟಿದೆ” ಎಂಬುದಾಗಿ ಇಸ್ರೋ ತಿಳಿಸಿದೆ. ಇದು ಸೂರ್ಯನ ಕುರಿತು ಅಧ್ಯಯನ ಮಾಡುವಲ್ಲಿ ಇಸ್ರೋಗೆ ಸಿಕ್ಕ ಮಹತ್ವದ ಮುನ್ನಡೆಯಾಗಿದೆ ಎಂದು ಹೇಳಲಾಗುತ್ತಿದೆ.

ಸೆಪ್ಟೆಂಬರ್‌ 2ರಂದು ಆದಿತ್ಯ ಎಲ್‌ 1 ಮಿಷನ್‌ ಉಡಾವಣೆಯಾಗಿದ್ದು, ಸೆಪ್ಟೆಂಬರ್‌ 3ರಂದು ಮೊದಲ ಕಕ್ಷೆ ಬದಲಾವಣೆಯನ್ನು ಯಶಸ್ವಿಯಾಗಿ ಪೂರೈಸಿತು. ಸೆಪ್ಟೆಂಬರ್‌ 5ರಂದು ಎರಡನೇ ಬಾರಿ ಕಕ್ಷೆ ಬದಲಾವಣೆ ಮಾಡಿಕೊಂಡಿತು. ಒಟ್ಟು ಐದು ಬಾರಿ ಕಕ್ಷೆ ಬದಲಾವಣೆ ಮಾಡಿಕೊಂಡ ನಂತರ ಅಧ್ಯಯನ ನಡೆಸಲು ಉದ್ದೇಶಿಸಿರುವ ಲ್ಯಾಂಗ್ರೇಜ್‌ ಪಾಯಿಂಟ್‌ನತ್ತ (L1 Point) ಆದಿತ್ಯ ಎಲ್‌ 1 ಮಿಷನ್‌ ಸಾಗಿದೆ.

ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ಮಿಷನ್‌ ಹೊತ್ತುಕೊಂಡು ಪಿಎಸ್‌ಎಲ್‌ವಿ-ಸಿ 57 (PSLV-C57 ) ರಾಕೆಟ್‌ 2023ರ ಸೆಪ್ಟೆಂಬರ್‌ 2ರಂದು ನಭಕ್ಕೆ ಹಾರಿದೆ. ನಭಕ್ಕೆ ನೆಗೆದ ಕೆಲವೇ ನಿಮಿಷಗಳಲ್ಲಿ ರಾಕೆಟ್‌ನಿಂದ ಆದಿತ್ಯ ಎಲ್‌ 1 ಮಿಷನ್‌ ಬೇರ್ಪಟ್ಟಿದೆ. ಸೂರ್ಯನ ಮೇಲ್ಮೈನಲ್ಲಿ ಮಾತ್ರ ಆದಿತ್ಯ ಎಲ್‌ 1 ಮಿಷನ್‌ ಅಧ್ಯಯನ ನಡೆಸುತ್ತಿದೆ. ಭೂಮಿಯಿಂದ ಸೂರ್ಯನ ದಿಕ್ಕಿನಲ್ಲಿ 15 ಲಕ್ಷ ಕಿಲೋಮೀಟರ್‌ ಸಂಚರಿಸಿ ಅಧ್ಯಯನ ನಡೆಸುತ್ತಿದೆ. ಭೂಮಿಯಿಂದ 15 ಲಕ್ಷ ಕಿಲೊಮೀಟರ್‌ ಅಂದರೆ, ಭೂಮಿಯಿಂದ ಸೂರ್ಯನಿಗಿರುವ ದೂರದಲ್ಲಿ ಶೇ.1ರಷ್ಟು ಮಾತ್ರ ಕ್ರಮಿಸಿದಂತೆ.

ಇದನ್ನೂ ಓದಿ: Pushpak Launch: ‘ಪುಷ್ಪಕ್‌’ ರಾಕೆಟ್ ಹ್ಯಾಟ್ರಿಕ್‌ ಉಡಾವಣೆ ಯಶಸ್ವಿ-ಇಸ್ರೋದಿಂದ ಮಹತ್ವದ ಮೈಲಿಗಲ್ಲು

Continue Reading

ಪ್ರಮುಖ ಸುದ್ದಿ

David Miller : ಸೋಲಿನ ಬೇಸರದಲ್ಲಿ ವಿದಾಯ ಹೇಳಿದರೇ ಮಿಲ್ಲರ್​​; ದಕ್ಷಿಣ ಆಫ್ರಿಕಾ ಆಟಗಾರನ ಪ್ರತಿಕ್ರಿಯೆ ಏನು?

David Miller : ಮೊದಲ ಬಾರಿಗೆ ವಿಶ್ವಕಪ್ ಗೆಲ್ಲುವ ಭರವಸೆ ಭಗ್ನಗೊಂಡಿತ್ತು. ದಕ್ಷಿಣ ಆಫ್ರಿಕಾ ಫೈನಲ್​​ನಲ್ಲಿ ಭಾರತದ ವಿರುದ್ಧ 7 ರನ್​ಗಳ ಸೋಲು ಅನುಭವಿಸಿತ್ತು. ಪಂದ್ಯದ ಅಂತಿಮ ಕ್ಷಣಗಳಲ್ಲಿ ದಕ್ಷಿಣ ಆಫ್ರಿಕಾ ಕೈಚೆಲ್ಲಿತ್ತು. ಅದರಲ್ಲೂ ಡೇವಿಡ್ ಮಿಲ್ಲರ್​​ ಕೊನೇ ಓವರ್​​ನ ಮೊದಲ ಎಸೆತಕ್ಕೆ ಔಟಾಗಿದ್ದರು. ಇದು ಅವರಿಗೆ ಬೇಸರ ಮೂಡಿಸಿತ್ತು.

VISTARANEWS.COM


on

David Miller :
Koo

ಬೆಂಗಳೂರು: ಇತ್ತೀಚೆಗೆ ಮುಕ್ತಾಯಗೊಂಡ ಐಸಿಸಿ ಟಿ 20 ವಿಶ್ವಕಪ್ 2024 ರ ಫೈನಲ್​​ನಲ್ಲಿ ಆಘಾತಕಾರಿ ಸೋಲಿನ ಹಿನ್ನೆಲೆಯಲ್ಲಿ ದಕ್ಷಿಣ ಆಫ್ರಿಕಾದ ಸ್ಟಾರ್ ಆಟಗಾರ ಡೇವಿಡ್ ಮಿಲ್ಲರ್ ಟಿ 20ಯಿಂದ ನಿವೃತ್ತರಾಗುವ ವದಂತಿಗಳು ಬಂದಿದ್ದವು. ಅದಕ್ಕವರು ಪ್ರತಿಕ್ರಿಯೆ ನೀಡಿದ್ದಾರೆ.

ಮೊದಲ ಬಾರಿಗೆ ವಿಶ್ವಕಪ್ ಗೆಲ್ಲುವ ಭರವಸೆ ಭಗ್ನಗೊಂಡಿತ್ತು. ದಕ್ಷಿಣ ಆಫ್ರಿಕಾ ಫೈನಲ್​​ನಲ್ಲಿ ಭಾರತದ ವಿರುದ್ಧ 7 ರನ್​ಗಳ ಸೋಲು ಅನುಭವಿಸಿತ್ತು. ಪಂದ್ಯದ ಅಂತಿಮ ಕ್ಷಣಗಳಲ್ಲಿ ದಕ್ಷಿಣ ಆಫ್ರಿಕಾ ಕೈಚೆಲ್ಲಿತ್ತು. ಅದರಲ್ಲೂ ಡೇವಿಡ್ ಮಿಲ್ಲರ್​​ ಕೊನೇ ಓವರ್​​ನ ಮೊದಲ ಎಸೆತಕ್ಕೆ ಔಟಾಗಿದ್ದರು. ಇದು ಅವರಿಗೆ ಬೇಸರ ಮೂಡಿಸಿತ್ತು.

15ನೇ ಓವರ್​ನಲ್ಲಿ ಅಕ್ಷರ್ ಪಟೇಲ್ ಓವರ್​ಗೆ ಎರಡು ಸಿಕ್ಸರ್ ಹಾಗೂ ನಾಲ್ಕು ಬೌಂಡರಿ ಬಾರಿಸುವ ಮೂಲಕ ಹೆನ್ರಿಚ್​ ಕ್ಲಾಸೆನ್​ ದಕ್ಷಿಣ ಆಫ್ರಿಕಾ ತಂಡಕ್ಕೆ ಗೆಲುವಿನ ಅವಕಾಶ ತಂದುಕೊಟ್ಟಿದ್ದರು. 16ನೇ ಓವರ್ ಮುಗಿದಾಗ ದಕ್ಷಿಣ ಆಫ್ರಿಕಾಕ್ಕೆ ಅಂತಿಮ ನಾಲ್ಕು ಓವರ್​ಗಳಲ್ಲಿ ಕೇವಲ 26 ರನ್​ಗಳನ್ನು ಬಾರಿಸಬೇಕಿತ್ತು.

ಇದನ್ನೂ ಓದಿ: IPL 2025 : ಐಪಿಎಲ್​ ತಂಡಗಳಲ್ಲಿ ಉಳಿಸಿಕೊಳ್ಳುವ ಆಟಗಾರರ ವಿಚಾರದಲ್ಲಿ ಫ್ರಾಂಚೈಸಿಗಳ ನಡುವೆ ಭಿನ್ನಾಭಿಪ್ರಾಯ

ಕ್ಲಾಸೆನ್ 17 ನೇ ಓವರ್​ನ ಮೊದಲ ಎಸೆತದಲ್ಲೇ ಔಟಾದರು. ಈ ವೇಳೆ ತಂಡವನ್ನು ಗುರಿ ಮುಟ್ಟಿಸುವ ಕೆಲಸ ಡೇವಿಡ್ ಮಿಲ್ಲರ್ ಅವರ ಹೆಗಲ ಮೇಲಿತ್ತು. ಅಂತಿಮವಾಗಿ ಅಂತಿಮ ಓವರ್​ನಲ್ಲಿ ಹಾರ್ದಿಕ್ ಪಾಂಡ್ಯ ಅವರನ್ನು ಎದುರಿಸಿದ ಅನುಭವಿ ಬ್ಯಾಟರ್​​ 16 ರನ್​​ಗಳಿಗೆ ಔಟಾದರು. 20ನೇ ಓವರ್​ನ ಮೊದಲ ಎಸೆತದಲ್ಲಿ ಡೇವಿಡ್ ಮಿಲ್ಲರ್ ಪಾಂಡ್ಯ ಅವರ ಲೋ ಫುಲ್ ಟಾಸ್ ಅನ್ನು ನೇರವಾಗಿ ಹೊಡೆದರು. ಸೂರ್ಯಕುಮಾರ್ ಯಾದವ್ ರೋಚಕ ಕ್ಯಾಚ್ ಅನ್ನು ಹಿಡಿದು ಮಿಲ್ಲರ್ ಅವರನ್ನು ಹಿಂದಕ್ಕೆ ಕಳುಹಿಸಿದರು. ಭಾರತವು ಪಂದ್ಯವನ್ನು 7 ರನ್​ಗಳಿಂದ ಗೆದ್ದಿತು. ಒಂದು ಹಂತದಲ್ಲಿ ಗೆಲುವು ದಕ್ಷಿಣ ಆಫ್ರಿಕಾಗೆ ಎಂದು ತೋರುತ್ತಿತ್ತು. ಅಂತಿಮವಾಗಿ ಭಾರತದ ಪರವಾಯಿತು.

ನಿವೃತ್ತಿ ವದಂತಿಗಳ ಬಗ್ಗೆ ಡೇವಿಡ್ ಮಿಲ್ಲರ್ ಹೇಳಿಕೆಯೇನು?

ದಕ್ಷಿಣ ಆಫ್ರಿಕಾ ಸೋಲಿನ ಬಳಿಕ ಡೇವಿಡ್ ಮಿಲ್ಲರ್ ಟಿ20 ಕ್ರಿಕೆಟ್​ಗೆ ವಿದಾಯ ಹೇಳಲಿದ್ದಾರೆ ಎಂಬ ವದಂತಿಗಳು ಹರಿದಾಡಿದವು. 35 ವರ್ಷದ ಆಟಗಾರ ಕ್ರಿಕೆಟ್​​ನ ಕಿರು ಸ್ವರೂಪದಿಂದ ನಿವೃತ್ತರಾಗಿದ್ದಾರೆ ಎಂದು ವದಂತಿಗಳು ತಿಳಿಸಿವೆ. ಆದಾಗ್ಯೂ, ಡೇವಿಡ್ ಮಿಲ್ಲರ್ ಮಂಗಳವಾರ (ಜುಲೈ 2) ಆ ವದಂತಿಗಳನ್ನು ತಳ್ಳಿಹಾಕಿದರು ಮತ್ತು ತಮ್ಮ ರಾಷ್ಟ್ರೀಯ ತಂಡಕ್ಕಾಗಿ ಟಿ 20 ಪಂದ್ಯಗಳನ್ನು ಆಡಲು ಲಭ್ಯವಿರುವುದಾಗಿ ಹೇಳಿದರು.

ಕೆಲವು ವರದಿಗಳ ಹಿನ್ನೆಲೆಯಲ್ಲಿ ಹೇಳುತ್ತಿದ್ದೇನೆ. ನಾನು ಟಿ 20 ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿ ಹೊಂದಿಲ್ಲ. ನಾನು ದಕ್ಷಿಣ ಆಫ್ರಿಕಾ ಪರ ಆಡಲು ಲಭ್ಯವಿದ್ದೇನೆ. ಅತ್ಯುತ್ತಮ ಫಲಿತಾಂಶ ಇನ್ನೂ ಬರಬೇಕಿದೆ ಎಂದು ಡೇವಿಡ್ ಮಿಲ್ಲರ್ ಹೇಳಿದ್ದಾರೆ.

Continue Reading

ದೇಶ

Sudha Murty: ಕರ್ನಾಟಕ ಸೇರಿ ದೇಶದ ಪ್ರವಾಸೋದ್ಯಮಕ್ಕೆ ಒತ್ತು ನೀಡಿ; ರಾಜ್ಯಸಭೆಯಲ್ಲಿ ಸುಧಾಮೂರ್ತಿ ಮೊದಲ ಭಾಷಣ!

Sudha Murty: ಭಾರತದಲ್ಲಿ ಪ್ರವಾಸೋದ್ಯಮಕ್ಕೆ‌ ಇನ್ನಷ್ಟು ಆದ್ಯತೆ ನೀಡಬೇಕು. ದೇಶದಲ್ಲಿ ಅಜಂತಾ, ಎಲ್ಲೋರ, ಬೃಹದೀಶ್ವರ, ತಾಜ್‌ಮಹಲ್‌ ನೋಡಬೇಕು ಎಂಬ ಮಾತಿದೆ. ಆದರೆ, ಭಾರತದಲ್ಲಿ 42 ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿವೆ. ಇನ್ನೂ 57 ತಾಣಗಳು ಪೆಂಡಿಂಗ್‌ ಲಿಸ್ಟ್‌ನಲ್ಲಿವೆ. ಇವುಗಳ ಕುರಿತು ಹೆಚ್ಚಿನ ಆದ್ಯತೆ ನೀಡಬೇಕು ಎಂದು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದರು.

VISTARANEWS.COM


on

Sudha Murty
Koo

ನವದೆಹಲಿ: ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಇನ್ಫೋಸಿಸ್‌ ಪ್ರತಿಷ್ಠಾನದ ಸಂಸ್ಥಾಪಕಿ ಸುಧಾ ಮೂರ್ತಿ (Sudha Murty) ಅವರು ಇದೇ ಮೊದಲ ಬಾರಿಗೆ ರಾಜ್ಯಸಭೆಯಲ್ಲಿ ಭಾಷಣ ಮಾಡಿದರು. “ನಾನು ರಾಜಕಾರಣಿ ಅಲ್ಲ. ನನಗೆ ಹೆಚ್ಚು ಮಾತನಾಡಲು ಬರುವುದಿಲ್ಲ” ಎನ್ನುತ್ತಲೇ ಭಾಷಣ ಆರಂಭಿಸಿದ ಅವರು ಗರ್ಭಕಂಠ ಕ್ಯಾನ್ಸರ್‌ಗೆ (Cervical Cancer) ಲಸಿಕೆ ಹಾಗೂ ಕರ್ನಾಟಕ (Karnataka) ಸೇರಿ ದೇಶದ ಪ್ರವಾಸೋದ್ಯಮದ ಏಳಿಗೆಯ ಕುರಿತು ಸದನದ ಗಮನಕ್ಕೆ ತಂದರು. ಕರ್ನಾಟಕ ಪ್ರವಾಸೋದ್ಯಮದ ಕುರಿತೂ ಅವರು ಹೆಚ್ಚು ಗಮನ ಸೆಳೆದರು.

“ಗರ್ಭಕಂಠದ ಕ್ಯಾನ್ಸರ್‌ ಈಗ ಮಾರಣಾಂತಿಕವಾಗಿದೆ. ಒಬ್ಬ ತಾಯಿ ಮೃತಪಟ್ಟರೆ ಮಕ್ಕಳು ಅನಾಥರಾಗುತ್ತಾರೆ. ಒಬ್ಬ ವ್ಯಕ್ತಿಗೆ ಹೆಂಡತಿ ತೀರಿಕೊಂಡರೆ ಮತ್ತೊಬ್ಬ ಪತ್ನಿ ಸಿಗುತ್ತಾಳೆ. ಆದರೆ, ಮಕ್ಕಳಿಗೆ ತಾಯಿ ತೀರಿಕೊಂಡರೆ, ಜೀವನಪೂರ್ತಿ ಅವರು ಅನಾಥರಾಗುತ್ತಾರೆ. ಹಾಗಾಗಿ, ಗರ್ಭಕಂಠದ ಕ್ಯಾನ್ಸರ್‌ಗೆ ಲಸಿಕೆ ನೀಡುವ ವ್ಯವಸ್ಥೆ ಮಾಡಬೇಕು. ಈಗ ಲಸಿಕೆಗೆ 1,300-1,400 ರೂ. ಆಗುತ್ತದೆ. ಸರ್ಕಾರ ಮಧ್ಯಪ್ರವೇಶಿಸಿದರೆ ಅದನ್ನು 800 ರೂಪಾಯಿಗೆ ಹೆಣ್ಣುಮಕ್ಕಳಿಗೆ ಲಸಿಕೆ ಕೊಡಿಸಬಹುದು” ಎಂದರು. ಆಗ ಸಭಾಧ್ಯಕ್ಷರು, “ಈ ಕುರಿತು ಕೇಂದ್ರ ಆರೋಗ್ಯ ಸಚಿವರಾದ ಜೆ.ಪಿ ನಡ್ಡಾ ಅವರ ಗಮನಕ್ಕೆ ತನ್ನಿ” ಎಂದರು.

ಪ್ರವಾಸೋದ್ಯಮದ ಕುರಿತು ಹೇಳಿದ್ದಿಷ್ಟು…

“ಭಾರತದಲ್ಲಿ ಪ್ರವಾಸೋದ್ಯಮಕ್ಕೆ‌ ಇನ್ನಷ್ಟು ಆದ್ಯತೆ ನೀಡಬೇಕು. ದೇಶದಲ್ಲಿ ಅಜಂತಾ, ಎಲ್ಲೋರ, ಬೃಹದೀಶ್ವರ, ತಾಜ್‌ಮಹಲ್‌ ನೋಡಬೇಕು ಎಂಬ ಮಾತಿದೆ. ಆದರೆ, ಭಾರತದಲ್ಲಿ 42 ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿವೆ. ಇನ್ನೂ 57 ತಾಣಗಳು ಪೆಂಡಿಂಗ್‌ ಲಿಸ್ಟ್‌ನಲ್ಲಿವೆ. ಇವುಗಳ ಕುರಿತು ಹೆಚ್ಚಿನ ಆದ್ಯತೆ ನೀಡಬೇಕು. ಕರ್ನಾಟಕದ ಶ್ರವಣಬೆಳಗೋಳದಲ್ಲಿರುವ ಬಾಹುಬಲಿಯ ಮೂರ್ತಿ, ಮಧ್ಯಪ್ರದೇಶದ ಮಾಂಡು, ದೇಶದ ಗುಹೆಗಳು, ಬಾದಾಮಿ, ಐಹೊಳೆ, ಲಿಂಗರಾಜ ದೇವಾಲಯಗಳು ದೇಶದ ಸಂಸ್ಕೃತಿಯ ತಾಣಗಳಾಗಿವೆ. ಇವುಗಳನ್ನು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸಬೇಕು” ಎಂದರು.

“ತ್ರಿಪುರದಲ್ಲಿರುವ ಉನಾಕೋಟಿ, ಮಿಜೋರಾಂನಲ್ಲಿ ನೈಸರ್ಗಿಕ ಸೇತುವೆಗಳಿವೆ. ಇವುಗಳನ್ನು ನೋಡಲು ವಿದೇಶಕ್ಕೆ ಹೋಗುವವರಿದ್ದಾರೆ. ತಂಜಾವೂರಿನ ಬೃಹದೇಶ್ವರ ದೇವಾಲಯ, ಶ್ರೀರಂಗಂ, ಕಾಶ್ಮೀರದಲ್ಲಿರುವ ಮೊಘಲ್‌ ಗಾರ್ಡನ್‌ಗಳು ಜಗತ್ತಿನ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಇಲ್ಲ. ಇವುಗಳನ್ನು ಪಟ್ಟಿಗೆ ಸೇರಿಸುವುದರಿಂದ ಆ ಸ್ಥಳಗಳಿಗೆ ಜನರನ್ನು ಸೆಳೆಯಲು ಪ್ಯಾಕೇಜ್‌ಗಳನ್ನು ಘೋಷಿಸಲಾಗುತ್ತದೆ. ಇದರಿಂದ ಪ್ರವಾಸೋದ್ಯಮದ ಆದಾಯ ಹೆಚ್ಚಾಗುತ್ತದೆ. ಹತ್ತಾರು ಅವಕಾಶಗಳು ಸೃಷ್ಟಿಯಾಗುತವೆ” ಎಂದು ಹೇಳಿದರು.

ಇದನ್ನೂ ಓದಿ: Narendra Modi: ನನ್ನ ದನಿಯೂ ಗಟ್ಟಿಯಿದೆ, ಸಂಕಲ್ಪವೂ; ಈ ಮೋದಿ ಯಾರಿಗೂ ಹೆದರಲ್ಲ, ಬಗ್ಗಲ್ಲ: ಸಂಸತ್‌ನಲ್ಲಿ ಪ್ರಧಾನಿ ಅಬ್ಬರ

Continue Reading
Advertisement
Sour Curd
ಆರೋಗ್ಯ4 mins ago

Sour Curd: ಹುಳಿ ಬಂದ ಮೊಸರಿನ ಸೇವನೆ ಆರೋಗ್ಯಕ್ಕೆ ಒಳ್ಳೆಯದೋ ಕೆಟ್ಟದ್ದೋ?

Dina Bhavishya
ಭವಿಷ್ಯ4 mins ago

Dina Bhavishya : ಒತ್ತಡಗಳು ದೂರವಾಗಿ ಹರ್ಷದಿಂದ ಕಾಲ ಕಳೆಯುವಿರಿ

ಆಟೋಮೊಬೈಲ್3 hours ago

Mahindra Scorpio N : ಮಹೀಂದ್ರಾ ತನ್ನ ಸ್ಕಾರ್ಪಿಯೋ-ಎನ್ Z8 ವೇರಿಯೆಂಟ್​ನಲ್ಲಿ ನೀಡಿದ ಹಲವು ಫೀಚರ್​ಗಳು

suicide news
ಕರ್ನಾಟಕ5 hours ago

Suicide News : ಮಗನ ಕುಡಿತದ ಚಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಅಪ್ಪ, ಅಮ್ಮ

Aditya L1
ದೇಶ5 hours ago

Aditya L1: ಲ್ಯಾಗ್ರೇಂಜ್‌ ಪಾಯಿಂಟ್‌ನ ಮೊದಲ ಸುತ್ತು ಪೂರ್ಣಗೊಳಿಸಿದ ಆದಿತ್ಯ ಎಲ್‌ 1; ಇಸ್ರೋಗೆ ಭಾರಿ ಮುನ್ನಡೆ

David Miller :
ಪ್ರಮುಖ ಸುದ್ದಿ5 hours ago

David Miller : ಸೋಲಿನ ಬೇಸರದಲ್ಲಿ ವಿದಾಯ ಹೇಳಿದರೇ ಮಿಲ್ಲರ್​​; ದಕ್ಷಿಣ ಆಫ್ರಿಕಾ ಆಟಗಾರನ ಪ್ರತಿಕ್ರಿಯೆ ಏನು?

Sudha Murty
ದೇಶ6 hours ago

Sudha Murty: ಕರ್ನಾಟಕ ಸೇರಿ ದೇಶದ ಪ್ರವಾಸೋದ್ಯಮಕ್ಕೆ ಒತ್ತು ನೀಡಿ; ರಾಜ್ಯಸಭೆಯಲ್ಲಿ ಸುಧಾಮೂರ್ತಿ ಮೊದಲ ಭಾಷಣ!

Physical Abuse
ಕರ್ನಾಟಕ6 hours ago

Physical Abuse : ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ; ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

Mahua Moitra
ಪ್ರಮುಖ ಸುದ್ದಿ7 hours ago

Mahua Moitra: ಸುಮ್ನೆ ಕೂತ್ಕೊಳ್ಳಿ ರಾಹುಲ್‌ ಗಾಂಧಿ; ಸಂಸತ್ತಲ್ಲೇ ಮಹುವಾ ಮೊಯಿತ್ರಾ ಹೀಗೆ ಸಿಟ್ಟಾಗಿದ್ದೇಕೆ?

Viral Video
Latest7 hours ago

Viral Video: ಲೈವ್‌ ವರದಿ ಮಾಡುತ್ತಿದ್ದಾಗ ಪಾಕ್ ಟಿವಿ ವರದಿಗಾರ್ತಿ ಮೇಲೆ ಗೂಳಿ ದಾಳಿ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ10 hours ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ1 day ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ2 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು3 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ4 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ4 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ4 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌