Bengaluru Airport : ಬೆಂಗಳೂರು ವಿಮಾನ ನಿಲ್ದಾಣ ಟರ್ಮಿನಲ್‌ 2ನಿಂದ ಅಂತಾರಾಷ್ಟ್ರೀಯ ವಿಮಾನ ಸಂಚಾರ ಆರಂಭ - Vistara News

ಕರ್ನಾಟಕ

Bengaluru Airport : ಬೆಂಗಳೂರು ವಿಮಾನ ನಿಲ್ದಾಣ ಟರ್ಮಿನಲ್‌ 2ನಿಂದ ಅಂತಾರಾಷ್ಟ್ರೀಯ ವಿಮಾನ ಸಂಚಾರ ಆರಂಭ

Bengaluru Airport : ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್‌ 2ನಿಂದ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ಮಂಗಳವಾರ ಆರಂಭಗೊಂಡಿತು. ಇನ್ನು ಮುಂದೆ ಎಲ್ಲ ವಿದೇಶಿ ವಿಮಾನಗಳು ಇಲ್ಲಿಂದಲೇ ಹಾರುತ್ತವೆ. ಇಲ್ಲವೇ ಇಳಿಯುತ್ತವೆ.

VISTARANEWS.COM


on

Bangalore aiport terminal 2
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಜಗತ್ತಿನಲ್ಲೇ ಪ್ರಸಿದ್ಧಿ ಪಡೆದಿರುವ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (Kempegowda International Airport) ಟರ್ಮಿನಲ್‌ 2ನಿಂದ (Bangalore airport terminal 2) ಅಂತಾರಾಷ್ಟ್ರೀಯ ವಿಮಾನಗಳ ಸಂಚಾರ (International flights) ಮಂಗಳವಾರ (ಸೆಪ್ಟೆಂಬರ್‌ 12) ಆರಂಭಗೊಂಡಿತು. ಬೆಳಗ್ಗೆ 10.45ಕ್ಕೆ ದುಬೈನಿಂದ ಬಂದ ವಿಮಾನ (Flight from Dubai) ಟರ್ಮಿನಲ್‌ 2ನಲ್ಲಿ ಇಳಿಯುವ ಮೂಲಕ ಈ ಟರ್ಮಿನಲ್‌ನಲ್ಲಿ (Bengaluru Airport) ಅಂತಾರಾಷ್ಟ್ರೀಯ ವಿಮಾನಗಳ ಸಂಚಾರದ ಹೊಸ ಪರ್ವ ಆರಂಭಗೊಂಡಿತು.

ಅತ್ಯಾಧುನಿಕ ಸೌಕರ್ಯಗಳುಳ್ಳ ಟರ್ಮಿನಲ್‌ 2ವನ್ನು ಪ್ರಧಾನಿ ನರೇಂದ್ರ ಮೋದಿ ಅವರು 2022ರ ನವೆಂಬರ್‌ 11ರಂದು ಉದ್ಘಾಟನೆ ಮಾಡಿದ್ದರು. ಆದರೆ, ಇದುವರೆಗೆ ಇಲ್ಲಿ ಕೇವಲ ಮೂವರು ದೇಸೀಯ ವಿಮಾನಯಾನ ಸಂಸ್ಥೆಗಳಿಗೆ ಅವಕಾಶ ಮಾಡಿಕೊಡಲಾಗಿತ್ತು. ಸೆಪ್ಟೆಂಬರ್‌ 1ರಿಂದ ಅಂತಾರಾಷ್ಟ್ರೀಯ ವಿಮಾನಗಳು ಇಲ್ಲಿಂದ ಸಂಚರಿಸಲಿವೆ ಎಂದು ತಿಳಿಸಲಾಗಿತ್ತು. ಆದರೆ, ತಾಂತ್ರಿಕ ಕೆಲಸಗಳು ಪೂರ್ಣಗೊಳ್ಳದೆ ಇರುವುದರಿಂದ ಮುಂದೂಡಲಾಗಿತ್ತು. ಇದೀಗ ಸೆಪ್ಟೆಂಬರ್‌ 12ರಂದು ಮೊದಲ ವಿಮಾನ ಆಗಮಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಯಾಗಿದೆ.

Bangalore airport terminal 2
ಮೊದಲ ವಿದೇಶಿ ವಿಮಾನದಿಂದ ಇಳಿದು ಬಂದವರಿಗೆ ಸ್ವಾಗತ

ವಿದೇಶಿ ವಿಮಾನಗಳ ಹಾರಾಟಕ್ಕೆ ವಿಮಾನ ನಿಲ್ದಾಣದ ಆಡಳಿತ ನಿರ್ದೇಶಕ ಹರಿಮಾರನ್ ಅವರು ಚಾಲನೆ ನೀಡಿದರು. ವಿಮಾನದಿಂದ ಇಳಿದು ಬಂದ ಪ್ರಯಾಣಿಕರಿಗೆ ಯಕ್ಷಗಾನದ ವೇಷಧಾರಿಗಳು ಮತ್ತು ಡೊಳ್ಳು ಕುಣಿತಗಳ ಸಂಭ್ರಮದ ಸ್ವಾಗತ ದೊರೆಯಿತು.

ವಿದೇಶಿ ವಿಮಾನಯಾನ ಹಾರಾಟಕ್ಕೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಆಗಿದ್ದು, ಟಿ1ನಲ್ಲಿ ಇದ್ದ ಅಂತಾರಾಷ್ಟ್ರೀಯ ಕಸ್ಟಮ್ಸ್ ಅಧಿಕಾರಿಗಳ ಕಚೇರಿ, ಚಿಲ್ಲರೆ ಹಾಗೂ ಆಹಾರ ಮಳಿಗೆಗಳು ಟರ್ಮಿನಲ್‌ 2ಗೆ ಸ್ಥಳಾಂತರ ಆಗಿವೆ.

Bangalore airport terminal 2
ಮೊದಲ ವಿದೇಶಿ ವಿಮಾನದಲ್ಲಿ ಬಂದವರಿಗೆ ಸ್ವಾಗತ

ವಿದೇಶಕ್ಕೆ ಹೋಗುವವರು ಟರ್ಮಿನಲ್‌ 2ಗೆ ಹೋಗಿ

ಇದುವರೆಗೆ ಟರ್ಮಿನಲ್‌ 1ನಲ್ಲಿ ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನಗಳೆರಡನ್ನೂ ಹ್ಯಾಂಡಲ್‌ ಮಾಡಲಾಗುತ್ತಿತ್ತು. ಇದನ್ನು ಅಂತಾರಾಷ್ಟ್ರೀಯ ವಿಮಾನಗಳ ಟೇಕ್‌ ಆಫ್‌ ಮತ್ತು ಲ್ಯಾಂಡಿಂಗ್‌ ಸೇರಿದಂತೆ ಎಲ್ಲ ಚಟುವಟಿಕೆಗಳು ಟರ್ಮಿನಲ್‌ 2ನಲ್ಲಿ ನಡೆಯಲಿವೆ. ಅಂದರೆ ಟರ್ಮಿನಲ್‌ 1 ಪೂರ್ಣ ಪ್ರಮಾಣದಲ್ಲಿ ದೇಶೀಯ ವಿಮಾನಗಳಿಗೆ ಮೀಸಲಾಗಿದ್ದರೆ, ಟರ್ಮಿನಲ್‌ 2 ವಿದೇಶಿ ವಿಮಾನಗಳ ಹಾರಾಟಕ್ಕೆ ಅವಕಾಶ ನೀಡಲಿದೆ. ಆದರೆ, ಟರ್ಮಿನಲ್‌ 2 ಮೂಲಕ ಕೆಲವು ದೇಶೀಯ ವಿಮಾನಗಳೂ ಹಾರಾಡಲಿವೆ. ಹೀಗಾಗಿ ಅಂತಾರಾಷ್ಟ್ರೀಯ ವಿಮಾನಗಳಿಗೆ ಹೋಗುವವರು ನೇರವಾಗಿ ಟರ್ಮಿನಲ್‌ 2ಗೆ ಹೋಗಬಹುದು. ದೇಶೀಯ ವಿಮಾನಗಳಿಗೆ ಹೋಗುವವರು ಟರ್ಮಿನಲ್‌ 1 ಅಥವಾ ಎರಡು ಎಂದು ಚೆಕ್‌ ಮಾಡಿಕೊಂಡು ಹೋಗಬೇಕು.

ಇದನ್ನೂ ಓದಿ: Modi in Bengaluru | ಕೆಂಪೇಗೌಡ ವಿಮಾನ ನಿಲ್ದಾಣದ 2ನೇ ಟರ್ಮಿನಲ್‌ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ

ಟರ್ಮಿನಲ್‌ 2 ವಿಶೇಷತೆಗಳೇನು?

Bangalore airport terminal 2
  1. ಅತ್ಯಾಧುನಿಕ ತಂತ್ರಜ್ಞಾನವುಳ್ಳ ಟರ್ಮಿನಲ್ ಇದಾಗಿದ್ದು, 5 ಸಾವಿರ ಕೋಟಿ ‌ವೆಚ್ಚದಲ್ಲಿ‌ ನಿರ್ಮಾಣವಾಗಿರುವ ಗಾರ್ಡನನ್ನು ಹೊಂದಿದೆ.
  2. 2 ಲಕ್ಷ 55 ಸಾವಿರದ 661 ಚದರ್ ಮೀಟರ್ ವಿಸ್ತೀರ್ಣದ ಈ ಟರ್ಮಿನಲ್‌ ಎರಡೆರಡು ಪ್ರತ್ಯೇಕ ಆಗಮ‌ನ ನಿರ್ಗಮನ ದ್ವಾರಗಳನ್ನು ಹೊಂದಿದೆ.
  3. ವಾರ್ಷಿಕ್ 25 ಮಿಲಿಯನ್ ಪ್ರಯಾಣಿಕರು ಸಂಚರಿಸಬಹುದಾದ ದೊಡ್ಡ ಟರ್ಮಿನಲ್ ಇದು.
  4. 5 ಜಿ ನೆಟ್ವರ್ಕ್ ಸೇರಿದಂತೆ ಅತ್ಯಾಧುನಿಕ ತಂತ್ರಜ್ಞಾನದ ಚೆಕ್ ಇನ್, ಬ್ಯಾಗೇಜ್ ಡ್ರಾಪ್ ಕೌಂಟರ್ ವ್ಯವಸ್ಥೆ.
  5. 10 ಸಾವಿರ ಚದರ‌ ಮೀಟರ್ ಹಸಿರು ಗೋಡೆ, ಕೃತಕ ವಾಟರ್ ಪಾಲ್ಸ್, ನೂರಾರು ವರ್ಷಗಳ ಹಳೆಯ ಮರ ಹೊಂದಿದೆ.
  6. ವಿವಿಧ ಜಾತಿಯ ಸಸ್ಯಗಳು ಮತ್ತು ಮರಗಳಿಂದ ಸುತ್ತುವರಿದಿರುವ ಈ ಟರ್ಮಿನಲ್ ಅನ್ನು ಟರ್ಮಿನಲ್ ಇನ್​ ದಿ ಗಾರ್ಡನ್ ಎಂದು ಕರೆಯಲಾಗುತ್ತಿದೆ.
  7. ಈ ಟರ್ಮಿನಲ್​​​ನಲ್ಲಿ 180 ಅಪರೂಪದ ಮತ್ತು ಅಳಿವಿನಂಚಿನಲ್ಲಿರುವ ಜಾತಿಯ ಸಸ್ಯಗಳಿವೆ. 3,600 ಕ್ಕೂ ಹೆಚ್ಚು ಸಸ್ಯ ಪ್ರಭೇದಗಳು, ಬಿದಿರು, 620 ಸ್ಥಳೀಯ ಸಸ್ಯಗಳು, 7,700 ಕಸಿ ಮರಗಳು, 96 ಕಮಲ ಮತ್ತು ಇನ್ನೂ ಹೆಚ್ಚಿನ ಸಸ್ಯಗಳಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Karnataka Election Results 2024: ಗ್ಯಾರಂಟಿ ದರ್ಬಾರ್ ಮಧ್ಯೆಯೂ ಬಿಜೆಪಿ ಗೆದ್ದು ಬೀಗಿದೆ ಎಂದ ವಿಜಯೇಂದ್ರ

Karnataka Election Results 2024: ರಾಜ್ಯದಲ್ಲಿ 20 ಸೀಟ್ ಪಡೆಯುತ್ತೇವೆ ಅಂತ ಹೇಳಿದ್ದ ಕಾಂಗ್ರಸ್‌ಗೆ ಈ ಫಲಿತಾಂಶದಿಂದ ಮುಖಭಂಗವಾಗಿದೆ. ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿಗಳ ನಡುವೆ ನಮ್ಮ ಸಾಧನೆ ಬಗ್ಗೆ ತೃಪ್ತಿ ಇದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

VISTARANEWS.COM


on

Karnataka Election Results 2024
Koo

ಬೆಂಗಳೂರು: ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಗೆ ಸಂಪೂರ್ಣ ಬಹುಮತ (Karnataka Election Results 2024) ಸಿಕ್ಕಿದೆ. ಸುಮಾರು 295ಕ್ಕೂ ಹೆಚ್ಚಿನ ಸೀಟ್‌ಗಳನ್ನೂ ಮೈತ್ರಿಕೂಟ ಪಡೆದಿದೆ. ರಾಜ್ಯದಲ್ಲಿ ಜೆಡಿಎಸ್ ಹಾಗೂ ನಾವು ಒಟ್ಟಾಗಿ ಸ್ಪರ್ಧೆ ಮಾಡಿದ್ದು, ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿಗಳ ನಡುವೆ ನಮ್ಮ ಈ ಸಾಧನೆ ತೃಪ್ತಿ ತಂದಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra) ತಿಳಿಸಿದ್ದಾರೆ.

ನಗರದ ಮಲ್ಲೇಶ್ವರದ ಬಿಜೆಪಿ ಕಾರ್ಯಾಲಯದಲ್ಲಿ ಮಾತನಾಡಿದ ಅವರು, 20 ಸೀಟ್ ಪಡೆಯುತ್ತೇವೆ ಅಂತ ಹೇಳಿದ್ದ ಕಾಂಗ್ರೆಸ್‌ಗೆ ಈ ಫಲಿತಾಂಶದಿಂದ ಮುಖಭಂಗವಾಗಿದೆ. ಕಾಂಗ್ರೆಸ್ ಪಕ್ಷದ ಕನಸು ಭಗ್ನವಾಗಿದೆ. ನಮ್ಮ ಈ ಅಭೂತಪೂರ್ವ ಗೆಲುವಿಗೆ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಹಾಗೂ ರಾಜ್ಯದ ಮತದಾರರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

ಸಿಎಂ, ಡಿಸಿಎಂ 20 ಹೆಚ್ಚಿನ ಸ್ಥಾನ ಗೆಲ್ಲುತ್ತೇವೆ ಅಂತ ಹೇಳಿದ್ದರು. ಈ ಸರ್ಕಾರ ಗ್ಯಾರಂಟಿ ನಡುವೆ ನಮ್ಮ ಈ ಸಾಧನೆ ನಮಗೆ ತೃಪ್ತಿ ಇದೆ. ಇದು ನಮಗೆ ಹಿನ್ನಡೆ ಅಂತ ನಾವು ಅಂದುಕೊಳ್ಳಲ್ಲ. ನಾವು ಗೆದ್ದ 19 ಕ್ಷೇತ್ರಗಳಲ್ಲಿ ವಿಶ್ಲೇಷಣೆ ಆಗುತ್ತದೆ. ಹಾಸನ ಸೇರಿದಂತೆ ಸೋತಿರುವ ಕ್ಷೇತ್ರಗಳಲ್ಲಿ ಆತ್ಮಾವಲೋಕನ ನಡೆಯುತ್ತದೆ. ಸದ್ಯ ಯಾವ ಸಚಿವರೂ ಬೀಗುವ ವಾತಾವರಣ ಇಲ್ಲ ಎಂದು ತಿಳಿಸಿದ್ದಾರೆ.

ಗ್ಯಾರಂಟಿಗಳು ಬೋಗಸ್ ಅಂತ ಸಾಬೀಯಾಗಿದೆ: ಆರ್‌.ಅಶೋಕ್

Prajwal Revanna Case HD Revanna arrest is correct says R Ashok

ಲೋಕಸಭಾ ಚುನಾವಣೆ ಫಲಿತಾಂಶದ ಬಗ್ಗೆ ವಿಪಕ್ಷ ನಾಯಕ ಆರ್‌.ಅಶೋಕ್‌ ಮಾತನಾಡಿ, ರಾಜ್ಯದ ಫಲಿತಾಂಶವನ್ನು ತುಂಬು ಹೃದಯದಿಂದ ಸ್ವಾಗತ ಮಾಡುತ್ತೇನೆ. 136 ಜನ ಶಾಸಕರು ಇದ್ದಾರೆ ಅಂತ ಸಿಎಂ ಸಿದ್ದರಾಮಯ್ಯ ಮೆರೆಯುತ್ತಿದ್ದರು. 20 ಸ್ಥಾನ ಗೆಲ್ಲುತ್ತೇವೆ, ಅಂತ ಹೇಳುತ್ತಿದ್ದರು. ಗ್ಯಾರಂಟಿ ಎಲ್ಲಾ ಬೋಗಸ್ ಅಂತ ಈಗ ಸಾಬೀತು ಆಗಿದೆ ಎಂದು ತಿಳಿಸಿದರು.

ನಮ್ಮ ಹಣ ತೆಗೆದುಕೊಂಡು ನಮಗೆ ಕೊಡುತ್ತಿದ್ದಾರೆ. ಡಿಕೆಶಿ ತಮ್ಮನೇ ಸೋಲು ಕಂಡಿದ್ದಾರೆ. ಇದಕ್ಕೆ ರಾಜ್ಯದ ಜನತೆಗೆ ಅಭಿನಂದನೆ ಸಲ್ಲಿಸುತ್ತೇನೆ. ಸಿಎಂ ಅವರ ಸ್ವ ಕ್ಷೇತ್ರ ಮೈಸೂರಿನಲ್ಲಿ ಸಹ ಸೋತಿದ್ದಾರೆ. ಸೋಲಿನ ಪಶ್ಚಾತ್ತಾಪ ಅವರು ಪಡಬೇಕು. ಯಾವುದೇ ಗ್ಯಾರಂಟಿ ಮತ ತಂದು ಕೊಟ್ಟಿಲ್ಲ. ಅತ್ತ ಭ್ರಷ್ಟಾಚಾರ ಮಾಡಿದ ಸಚಿವರ ರಾಜೀನಾಮೆ ಸಹ ಕೇಳಿಲ್ಲ. ಅತಿಯಾದ ಮುಸ್ಲಿಂ ಓಲೈಕೆ ಮಾಡಲು ಹೋಗಿ ಹೀಗೆ ಆಗಿದೆ. ಈ ಮೂಲಕ ಕಾಂಗ್ರೆಸ್ ವಿರುದ್ಧದ ಅಲೆ ಎದ್ದಿದೆ ಎಂದರು.

ಇದನ್ನೂ ಓದಿ | AP Election Results 2024 Live: ಚಂದ್ರಬಾಬು ನಾಯ್ಡುಗೆ ಮತ್ತೆ ಒಲಿಯಲಿದೆ ಸಿಎಂ ಪಟ್ಟ; ಜೂನ್‌ 9ರಂದು ಪ್ರಮಾಣ ವಚನ ಸ್ವೀಕಾರ ಸಾಧ್ಯತೆ

ಮೋದಿ ದೇಶದ ಪ್ರಧಾನಿ ಆಗಬೇಕು ಹಾಗೂ 400 ಸೀಟ್ ಗೆಲ್ಲಬೇಕು ಅಂತ ಎರಡು ಅಜೆಂಡಾ ಇಟ್ಟು ಕೊಂಡಿದ್ದೆವು. ಅದರಲ್ಲಿ ಒಂದು ಆಗಿದೆ, ಮತ್ತೊಂದು ಆಗಿಲ್ಲ. ಒಟ್ಟಾರೆ ಈ ಫಲಿತಾಂಶ ನನಗೆ ತೃಪ್ತಿ ತಂದಿದೆ. ಕಾಂಗ್ರೆಸ್ ಕಳೆದ ಬಾರಿ ಹೊಂದಾಣಿಕೆ ವಿಫಲ ಆಗಿತ್ತು. ನಮ್ಮ ಈ ಹೊಂದಾಣಿಕೆ ವರ್ಕ್ ಔಟ್ ಆಗಿದೆ. ಕೆಲವು ಕಡೆಗಳಲ್ಲಿ ಅಭ್ಯರ್ಥಿ ಆಯ್ಕೆ ಗೊಂದಲ ಆಗಿತ್ತು. ಮುಂದಿನ ದಿನಗಳಲ್ಲಿ ಇವುಗಳನ್ನು ಸರಿಪಡಿಸಿ ಮುಂದೆ ಹೋಗುತ್ತೇವೆ ಎಂದು

Continue Reading

ಪ್ರಮುಖ ಸುದ್ದಿ

Bangalore South Election Result 2024 : ತೇಜಸ್ವಿ ಸೂರ್ಯಗೆ ಭಾರಿ ಅಂತರದ ಗೆಲುವು

Bangalore South Electon Resut 2024: 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಯುವ ನಾಯಕ ತೇಜಸ್ವಿ ಸೂರ್ಯ ಅವರನ್ನು ತನ್ನ ಅಭ್ಯರ್ಥಿಯಾಗಿ ಕಣಕ್ಕಿಳಿಸಿತ್ತು. ತೇಜಸ್ವಿ ಸೂರ್ಯ ಅವರು ಕಾಂಗ್ರೆಸ್ ನ ಬಿ.ಕೆ.ಹರಿಪ್ರಸಾದ್ ಅವರನ್ನು 3,31,192 ಮತಗಳ ಅಂತರದಿಂದ ಸೋಲಿಸಿದ್ದರು.

VISTARANEWS.COM


on

Udupi Chikmagalur Result 2024:
Koo

ಬೆಂಗಳೂರು: ಬೆಂಗಳೂರು ನಗರದ ಗಮನಾರ್ಯ ಕ್ಷೇತ್ರವಾಗಿರುವ ಬೆಂಗಳೂರು ದಕ್ಷಿಣದಲ್ಲಿ ತೇಜಸ್ವಿ ಸೂರ್ಯ ಅವರು ವಿಜಯ ಸಾಧಿಸಿದ್ದಾರೆ. (Bangalore South Electon Result 2024) ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಸೌಮ್ಯ ರೆಡ್ಡಿ ವಿರುದ್ಧ 2.44 ಭರ್ಜರಿ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಯುವ ನಾಯಕ ತೇಜಸ್ವಿ ಸೂರ್ಯ ಅವರನ್ನು ತನ್ನ ಅಭ್ಯರ್ಥಿಯಾಗಿ ಕಣಕ್ಕಿಳಿಸಿತ್ತು. ತೇಜಸ್ವಿ ಸೂರ್ಯ ಅವರು ಕಾಂಗ್ರೆಸ್ ನ ಬಿ.ಕೆ.ಹರಿಪ್ರಸಾದ್ ಅವರನ್ನು 3,31,192 ಮತಗಳ ಅಂತರದಿಂದ ಸೋಲಿಸಿದ್ದರು. ಸೂರ್ಯ 7,39,229 ಮತಗಳನ್ನು ಪಡೆದಿದ್ದರು. ಕಾಂಗ್ರೆಸ್ ನ ಬಿ.ಕೆ.ಹರಿಪ್ರಸಾದ್ 4,08,037 ಮತಗಳನ್ನು ಪಡೆದಿದ್ದರು.

2014 ರ ಸಾರ್ವತ್ರಿಕ ಚುನಾವಣೆಯಲ್ಲಿ, ಬಿಜೆಪಿ ಕಾಂಗ್ರೆಸ್ ಅನ್ನು ಗಮನಾರ್ಹ ಸಂಖ್ಯೆಯ ಮತಗಳಿಂದ ಸೋಲಿಸಿತು. 2014ರಲ್ಲಿ ಶೇ.55.75ರಷ್ಟು ಮತದಾನವಾಗಿತ್ತು. ಬಿಜೆಪಿಯ ಅನಂತ್ ಕುಮಾರ್ 6,33,816 ಮತಗಳನ್ನು ಪಡೆದಿದ್ದರು. ನಂದನ್ ನಿಲೇಕಣಿ 4,05,241 ಮತಗಳನ್ನು ಪಡೆದಿದ್ದರು. ಜೆಡಿಎಸ್ ನ ರುತ್ ಮನೋರೋಮಾ 25,677 ಮತಗಳನ್ನು ಪಡೆದಿದ್ದರು.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ 2019 ರವರೆಗೆ ಒಟ್ಟು 17 ಚುನಾವಣೆಗಳು ನಡೆದಿದ್ದು, ಅದರಲ್ಲಿ ಕಾಂಗ್ರೆಸ್ ಪಕ್ಷವು ಆರು ಬಾರಿ ಗೆದ್ದಿದೆ. ಜನತಾ ಪಕ್ಷವು ಮೂರು ಬಾರಿ ಜಯಗಳಿಸಿತು. 1991ರಿಂದ ಸತತ 8 ಬಾರಿ ಬಿಜೆಪಿ ಈ ಕ್ಷೇತ್ರದಲ್ಲಿ ಗೆಲುವು ಸಾಧಿಸಿದೆ. ಈ ಕ್ಷೇತ್ರವು ಬಿಜೆಪಿಯ ಅನಂತ್ ಕುಮಾರ್ ಅವರ ಭದ್ರಕೋಟೆಯಾಗಿತ್ತು. ಅವರು ಸತತ ಆರು ಬಾರಿ ಗೆದ್ದಿದ್ದಾರೆ. ಈ ಕ್ಷೇತ್ರವು ಆರಂಭದಲ್ಲಿ ಮೈಸೂರು ರಾಜ್ಯದ ಭಾಗವಾಗಿತ್ತು ಆದರೆ 1977 ರ ನಂತರ ಕರ್ನಾಟಕದ ಭಾಗವಾಯಿತು. ಈ ಕ್ಷೇತ್ರವನ್ನು ಮೊದಲು ಬೆಂಗಳೂರು ಎಂದು ಕರೆಯಲಾಗುತ್ತಿತ್ತು. ಕರ್ನಾಟಕದ ಇಬ್ಬರು ಮಾಜಿ ಮುಖ್ಯಮಂತ್ರಿಗಳಾದ ಎಚ್ ಹನುಮಂತಪ್ಪ ಮತ್ತು ಆರ್ ಗುಂಡೂರಾವ್ ಈ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ನಲ್ಲಿ ಗೆದ್ದಿದ್ದಾರೆ.

ಇದನ್ನೂ ಓದಿ: Udupi Chikmagalur Result 2024 : ಉಡುಪಿಯಲ್ಲಿ ಬಿಜೆಪಿಯ ಕೋಟಾ ಶ್ರೀನಿವಾಸ್​ ಪೂಜಾರಿಗೆ ವಿಜಯ

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರವು ಗೋವಿಂದರಾಜನಗರ, ವಿಜಯನಗರ, ಚಿಕ್ಕಪೇಟೆ, ಬಸವನಗುಡಿ, ಪದ್ಮನಾಭನಗರ, ಬಿಟಿಎಂ ಲೇಔಟ್, ಜಯನಗರ ಮತ್ತು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರವು ಕರ್ನಾಟಕದಲ್ಲಿ ಬಿಜೆಪಿಯ ಭದ್ರಕೋಟೆಯಾಗಿದೆ. ಈ ಸ್ಥಾನದಿಂದ ಗೆದ್ದ ಕಾಂಗ್ರೆಸ್ ಪಕ್ಷದ ಇಬ್ಬರು ನಾಯಕರು ರಾಜ್ಯದ ಮುಖ್ಯಮಂತ್ರಿಗಳಾಗಿಯೂ ಸೇವೆ ಸಲ್ಲಿಸಿದ್ದಾರೆ.

ಎಷ್ಟು ಮತದಾರರು ಇದ್ದಾರೆ

ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಒಟ್ಟು 23. 17 ಲಕ್ಷ ಮತದಾರರಿದ್ದು, ಈ ಬಾರಿ ಶೇಕಡಾ 53.17 ಮತದಾನವಾಗಿದೆ. ಹಿಂದಿನ ಬಾರಿಗೆ ಹೋಲಿಕೆ ಮಾಡಿದರೆ ಈ ಬಾರಿ ಕಡಿಮೆ ಪ್ರಮಾಣದ ಮತದಾನವಾಗಿದೆ. ಆದಾಗ್ಯೂ ಯುವ ಹೆಚ್ಚು ಸ್ಥಳೀಯವಾಗಿ ಹೆಚ್ಚು ಪರಿಚಿತವಾಗಿರುವ ತೇಜಸ್ವಿ ಸೂರ್ಯ ಗೆಲ್ಲಬಹುದು ಎಂದು ರಾಜಕೀಯ ವಿಶ್ಲೇಷಕರು ಅಂದಾಜಿಸಿದ್ದಾರೆ.

ವ್ಯಾಪ್ತಿ

ಬೆಂಗಳೂರು ದಕ್ಷಿಣ ಲೋಕ ಸಭಾ ಕ್ಷೇತ್ರವು ಬೆಂಗಳೂರಿನ ಹೃದಯ ಭಾಗದ ಹಲವಾರು ಬಿಬಿಎಂಪಿ ವಾರ್ಡ್​ಗಳು ಮತ್ತು ಬೆಂಗಳೂರು ದಕ್ಷಿಣ ತಾಲೂಕಿನ ಬೊಮ್ಮನಹಳ್ಳಿ, ಆನೇಕಲ್ ತಾಲೂಕಿನ ಕೆಲವು ಭಾಗಗಳನ್ನು ಹೊಂದಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ಇತರ ನಾಲ್ಕು ಲೋಕಸಭಾ ಕ್ಷೇತ್ರಗಳೊಂದಿಗೆ ತನ್ನ ಗಡಿಯನ್ನು ಹಂಚಿಕೊಂಡಿದೆ. ಬೆಂಗಳೂರು ದಕ್ಷಿಣಕ್ಕೆ ಹೊಂದಿಕೊಂಡಿರುವ ಇತರ ಲೋಕಸಭಾ ಕ್ಷೇತ್ರಗಳು ಈ ರೀತಿ ಇವೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಚಿಕ್ಕಬಳ್ಳಾಪುರ.

Continue Reading

ಕರ್ನಾಟಕ

Karnataka election results 2024: ಕರ್ನಾಟಕದ ಜನರು ಬಿಜೆಪಿಗೆ ಆಶೀರ್ವಾದ ಮಾಡಿದ್ದಾರೆ: ಪ್ರಲ್ಹಾದ್‌ ಜೋಶಿ

Karnataka election results 2024: ಐದು ವರ್ಷ ನನಗೆ ಮಂತ್ರಿಯಾಗಲು ಪ್ರಧಾನಿ ಮೋದಿಯವರು ಅವಕಾಶ ಮಾಡಿಕೊಟ್ಟಿದ್ದಾರೆ. ನನ್ನ ಸಚಿವ ಖಾತೆಯನ್ನು ಸರಿಯಾಗಿ ನಿಭಾಯಿಸಿದ್ದೇನೆ. ಮತ್ತೊಮ್ಮೆ ಆಶೀರ್ವಾದ ಮಾಡಿ ಜನರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಧಾರವಾಡ ವಿಜೇತ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್‌ ಜೋಶಿ ಹೇಳಿದ್ದಾರೆ.

VISTARANEWS.COM


on

Karnataka election results 2024
Koo

ಧಾರವಾಡ: ಜನತಾ ಜನಾರ್ದನರ ಆಶೀರ್ವಾದದಿಂದ ಗೆಲುವಾಗಿದೆ. ಮತದಾರ ಪ್ರಭುಗಳಿಗೆ ಈ ಗೆಲುವು ಸಲ್ಲಬೇಕು. ಎಲ್ಲ ಕಾರ್ಯಕರ್ತರು, ಮುಖಂಡರು ಸೇರಿ ಸಮರ್ಪಕವಾಗಿ ಕೆಲಸ ಮಾಡಿದ್ದಾರೆ. ಇಲ್ಲಿನ ಪ್ರತಿಸ್ಪರ್ಧಿಗಳು ಅಪಪ್ರಚಾರ ಮಾಡುತ್ತಾ ಬಂದಿದ್ದರು. ಸಾಕಷ್ಟು ಹಣ ಹೆಂಡವನ್ನು ಹಂಚಿದ್ದಾರೆ, ಆದ್ರೆ ಜನರು ನಮ್ಮ ಕೈ ಹಿಡಿದಿದ್ದಾರೆ. ಕರ್ನಾಟಕದ ಜನರು ಈಗಾಗಲೇ ಬಿಜೆಪಿಗೆ ಆಶಿರ್ವಾದ ಮಾಡಿದ್ದಾರೆ. ಹೀಗಾಗಿ ನಮ್ಮ ಕ್ಷೇತ್ರದ (Karnataka election results 2024) ಜನತೆಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಧಾರವಾಡ ವಿಜೇತ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

ಧಾರವಾಡ ಮತ ಎಣಿಕೆ ಕೇಂದ್ರದ ಬಳಿ ಮಂಗಳವಾರ ಪ್ರತಿಕ್ರಿಯಿಸಿದ ಅವರು, ಈಗಾಗಲೇ ದೇಶದಲ್ಲಿ 300ರ ಗಡಿ ದಾಡುವ ನಿಟ್ಟಿನಲ್ಲಿದ್ದೇವೆ. ನಿರೀಕ್ಷೆಗೆ ತಕ್ಕಂತೆ, ನಾವು ಅಂದುಕೊಂಡಂತೆ ಸೀಟು ಬಂದಿಲ್ಲ. ಎಲ್ಲಿ ಏನು ಆಗಿದೆ, ವಾಸ್ತವಿಕವಾಗಿ ಏನು ಆಗಿದೆ ಅನ್ನೋದನ್ನು ನೋಡಬೇಕಾಗಿದೆ. ಸದ್ಯದಲ್ಲಿ ದೆಹಲಿಗೆ ಹೋಗುತ್ತೇನೆ, ವರಿಷ್ಠರ ಜೊತೆ ಚರ್ಚಿಸುತ್ತೇನೆ. ಚುನಾವಣೆ ಆಗಿದ್ದು ಎನ್‌ಡಿಎ ಮತ್ತು ಇಂಡಿ ನಡುವೆ. ಹೀಗಾಗಿ ಎನ್‌ಡಿಎ ಜೊತೆ ಇದ್ದವರು ಗಟ್ಟಿಯಾಗಿ ನಿಲ್ಲುತ್ತಾರೆ ಅನ್ನೋ ವಿಶ್ವಾಸವಿದೆ ಎಂದು ಹೇಳಿದರು.

ಈಗಾಗಲೇ ನಾವು ಕೈಗೊಂಡಿರುವ ಕಾಮಗಾರಿಗಳನ್ನು ಮುಂದುವರಿಸಿಕೊಂಡು ಹೋಗುತ್ತೇವೆ. ನನ್ನ ಸಚಿವ ಖಾತೆಯನ್ನು ಸರಿಯಾಗಿ ನಿಭಾಯಿಸಿದ್ದೇನೆ. ಐದು ವರ್ಷ ನನಗೆ ಮಂತ್ರಿಯಾಗಲು ಪ್ರಧಾನಿ ಮೋದಿಯವರು ಅವಕಾಶ ಮಾಡಿಕೊಟ್ಟಿದ್ದಾರೆ. ದಿಂಗಾಲೇಶ್ವರ ಶ್ರೀಗಳು ಏನೇ ಹೇಳಿದರೂ ಆಶೀರ್ವಾದ ಅಂದಿದ್ದೆ, ಅವರ ಆಶಿರ್ವಾದದಿಂದ ಗೆದ್ದಿದ್ದೇನೆ ಎಂದು ತಿಳಿಸಿದರು .

ಇದನ್ನೂ ಓದಿ | Dharwad Election Result 2024: ಪ್ರಲ್ಹಾದ್‌ ಜೋಶಿಗೆ ‘ಧಾರವಾಡ ಪೇಡಾ’; ಅಸೂಟಿಗೆ ಸೋಲು

ಮತದಾರರಿಗೆ ಕಾಗೇರಿ ಧನ್ಯವಾದ

Vishweshwar Hegde Kageri

ಕಾರವಾರ: ಕ್ಷೇತ್ರದಲ್ಲಿ ಪ್ರಾರಂಭದಿಂದಲೂ ಬಿಜೆಪಿ ಗೆಲ್ಲುವ ವಿಶ್ವಾಸದಿಂದ ಕೆಲಸ ಮಾಡಿದ್ದೇವೆ. ಇದರ ಪರಿಣಾಮ ರಾಜ್ಯದಲ್ಲೇ ದಾಖಲೆ ಅಂತರದಿಂದ ಗೆಲುವು ಸಾಧ್ಯವಾಗಿದೆ ಎಂದು ಉತ್ತರ ಕನ್ನಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

ಕುಮಟಾದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಕಾಗೇರಿ ಅವರು, ಗೆಲುವಿಗೆ ಕಾರಣಕರ್ತರಾದ ಮತದಾರರಿಗೆ ಮೊಟ್ಟಮೊದಲು ಅಭಿನಂದಿಸುತ್ತೇನೆ. 5 ವರ್ಷಕ್ಕೊಮ್ಮೆ ಬರುವ ಚುನಾವಣೆಯಲ್ಲಿ ಮತದಾರರು ಬಹುದೊಡ್ಡ ಜವಾಬ್ದಾರಿ ನಿಭಾಯಿಸಿದ್ದಾರೆ ಎಂದು ಹೇಳಿದ್ದಾರೆ.

ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್‌ ಹೆಸರು ಹೇಳದೇ ಪರೋಕ್ಷವಾಗಿ ಕಾಗೇರಿ ಟಾಂಗ್‌ ನೀಡಿದರು. ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಇಬ್ಬರೇ ಬಿಜೆಪಿ ಶಾಸಕರು ಎಂದು ಕುಮಟಾದ ದಿನಕರ ಶೆಟ್ಟಿ, ಖಾನಾಪುರದ ವಿಠ್ಠಲ ಹಲಗೇಕರ್ ಹೆಸರನ್ನ ಮಾತ್ರ ಹೇಳಿದ ಕಾಗೇರಿ, ಸಂಘಟಿತವಾದ ಪ್ರಯತ್ನ ಈ ಚುನಾವಣಾ ಯಶಸ್ಸಿಗೆ ಕಾರಣ. ಸಂಘಟನೆಯ ಎಲ್ಲ ಹಂತದ ನಾಯಕರು, ಕಾರ್ಯಕರ್ತರಿಗೆ ಅಭಿನಂದಿಸಿದರು.

ಈ ಗೆಲುವು ನಮ್ಮ ಜವಾಬ್ದಾರಿಯನ್ನ ಹೆಚ್ಚಿಸಿದೆ, ಮುಂದಿನ ದಿನಗಳಲ್ಲಿ ಅಭಿವೃದ್ಧಿ ಕೇಂದ್ರೀಕರಿಸಿ ಕೆಲಸ ಮಾಡಲು ಬದ್ಧನಿದ್ದೇನೆ. ಚುನಾವಣಾ ಪ್ರಕ್ರಿಯೆಯಲ್ಲಿ ಯಾವುದೇ ಗೊಂದಲ, ತೊಡಕು ಉಂಟುಮಾಡದೆ, ಎಲ್ಲಾ ರೀತಿ ಸಹಕಾರ ಕೊಟ್ಟಿದ್ದಾಗಿ ಕಾಂಗ್ರೆಸ್‌ಗೆ ಅಭಿನಂದಿಸಿದರು.

ಇದನ್ನೂ ಓದಿ | Uttara Kannada Election Result 2024: ಉತ್ತರ ಕನ್ನಡದಲ್ಲಿ ಗೆದ್ದು ಬೀಗಿದ ವಿಶ್ವೇಶ್ವರ ಹೆಗಡೆ ಕಾಗೇರಿ

ಉತ್ತರ ಕನ್ನಡ ಕ್ಷೇತ್ರ ಬಿಜೆಪಿ ನಿರಂತರವಾಗಿ ಗೆಲ್ಲುತ್ತಿದ್ದ ಕ್ಷೇತ್ರ. ಈ ಬಾರಿಯೂ ಗೆಲ್ಲುವ ಮೂಲಕ ವ್ಯಕ್ತಿ ಆಧಾರಿತ ಪಕ್ಷ ನಮ್ಮದಲ್ಲ ಎಂದು ತೋರಿಸಿಕೊಟ್ಟಿದ್ದಾರೆ. ವ್ಯಕ್ತಿಗಿಂತ ಪಕ್ಷ ಮುಖ್ಯ ಎಂದು ನಂಬಿರುವ ಪಕ್ಷ ಬಿಜೆಪಿ. ಕೆಲವರು ಕೆಲವು ಭ್ರಮೆಗಳನ್ನ ಸೃಷ್ಟಿಸುತ್ತಿರುತ್ತಾರೆ, ಅಂತಹವರ ಮುಖವಾಡ ಬಯಲಾಗಿದೆ ಎಂದು ಹೇಳಿದರು.

Continue Reading

ಪ್ರಮುಖ ಸುದ್ದಿ

Udupi Chikmagalur Election Result 2024 : ಉಡುಪಿಯಲ್ಲಿ ಬಿಜೆಪಿಯ ಕೋಟಾ ಶ್ರೀನಿವಾಸ್​ ಪೂಜಾರಿಗೆ ವಿಜಯ

Udupi Chikmagalur Election Result 2024: 2019ರ ಸಾರ್ವತ್ರಿಕ ಚುನಾವಣೆಯಲ್ಲಿ ಶೋಭಾ ಕರಂದ್ಲಾಜೆ ಅವರು ಜೆಡಿಎಸ್​​ನ ಪ್ರಮೋದ್ ಮಧ್ವರಾಜ್ ಅವರನ್ನು 3,49,599 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. 2019ರ ಚುನಾವಣೆಯಲ್ಲಿ ಬಿಜೆಪಿ ಶೇ.62.43ರಷ್ಟು ಮತಗಳನ್ನು ಪಡೆದಿತ್ತು.

VISTARANEWS.COM


on

Udupi Chikmagalur Result 2024
Koo

ಬೆಂಗಳೂರು: ಪ್ರಕೃತಿ ಸೌಂದರ್ಯದ ನಾಡು ಹಾಗೂ ದೇವಸ್ಥಾನಗಳ ಬೀಡಾಗಿರುವ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ (731408 ಮತಗಳು) ಗೆಲುವು ಸಾಧಿಸಿದ್ದಾರೆ. ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಜಯಪ್ರಕಾಶ್ ಹೆಗ್ಡೆ (4,72,505) ವಿರುದ್ಧ ವಿರುದ್ಧ 2,58,903ಮತಗಳ ಅಂತರದಿಂದ ವಿಜಯ ಸಾಧಿಸಿದ್ದಾರೆ (Udupi Chikmagalur Election Result 2024).

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯ ಶೋಭಾ ಕರಂದ್ಲಾಜೆ ಅವರು ಜೆಡಿಎಸ್​​ನ ಪ್ರಮೋದ್ ಮಧ್ವರಾಜ್ ಅವರನ್ನು 3,49,599 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. 2019ರ ಚುನಾವಣೆಯಲ್ಲಿ ಬಿಜೆಪಿ ಶೇ.62.43ರಷ್ಟು ಮತಗಳನ್ನು ಪಡೆದಿತ್ತು.

2014ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯ ಶೋಭಾ ಕರಂದ್ಲಾಜೆ ಅವರು ಕಾಂಗ್ರೆಸ್​​ನ ಕೆ.ಜಯಪ್ರಕಾಶ್ ಹೆಗ್ಡೆ ಅವರನ್ನು 1,81,643 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಈ ಕ್ಷೇತ್ರದಲ್ಲಿ ಬಿಜೆಪಿ ಶೇ.56.2ರಷ್ಟು ಮತಗಳನ್ನು ಗಳಿಸಿದೆ.

2009ರ ಸಾರ್ವತ್ರಿಕ ಚುನಾವಣೆಯಲ್ಲಿ ಡಿ.ವಿ.ಸದಾನಂದ ಗೌಡ ಅವರು ಕಾಂಗ್ರೆಸ್​​ನ ಪಕ್ಷದ ಜಯಪ್ರಕಾಶ್ ಹೆಗ್ಡೆ ಅವರನ್ನು 27,018 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಈ ಕ್ಷೇತ್ರದಲ್ಲಿ ಬಿಜೆಪಿ ಶೇ.48.06ರಷ್ಟು ಮತಗಳನ್ನು ಪಡೆದಿತ್ತು.

ಗಮನ ಸೆಳೆದ ಕ್ಷೇತ್ರ

ಉಡುಪಿ ಚಿಕ್ಕಮಗಳೂರು ಲೋಕಸಭೆ ಕ್ಷೇತ್ರ 2008ರ ಕ್ಷೇತ್ರ ಮರು ವಿಂಗಡಣೆ (Udupi-Chikmagalur Lok Sabha constituency) ನಂತರ ಅಸ್ತಿತ್ವಕ್ಕೆ ಬಂದಿತು. 2019 ರವರೆಗೆ ಈ ಕ್ಷೇತ್ರದಲ್ಲಿ ಮೂರು ಚುನಾವಣೆಗಳು ನಡೆದಿವೆ. ಇದರಲ್ಲಿ 2012 ರ ಉಪಚುನಾವಣೆಯೂ ಸೇರಿದೆ. ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಭದ್ರಕೋಟೆಯಾಗಿದ್ದು ಉಪಚುನಾವಣೆಯಲ್ಲಿ ಮಾತ್ರ ಒಮ್ಮೆ ಕಾಂಗ್ರೆಸ್ ಗೆದ್ದಿದೆ. ಈ ಕ್ಷೇತ್ರದಲ್ಲಿ ಮೊದಲ ಚುನಾವಣೆ 2009ರಲ್ಲಿ ರಲ್ಲಿ ನಡೆಯಿತು. ಕುಂದಾಪುರ, ಉಡುಪಿ, ಕಾಪು, ಕಾರ್ಕಳ, ಶೃಂಗೇರಿ, ಮೂಡಿಗೆರೆ (ಎಸ್ಸಿ), ಚಿಕ್ಕಮಗಳೂರು, ತರೀಕೆರೆ ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ.

ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಮಾಜಿ ಸಚಿವರಾಗಿರುವ ಕೋಟಾ ಶ್ರೀನಿವಾಸ ಪೂಜಾರಿ ಅವರು ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಅವರು 2019 ರಿಂದ 2023 ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನಲ್ಲಿ ಸದನದ ನಾಯಕರಾಗಿ ಮತ್ತು 2018-19 ರ ಅವಧಿಯಲ್ಲಿ ವಿಧಾನ ಪರಿಷತ್ತಿನಲ್ಲಿ ವಿರೋಧ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸಿದ್ದಾರೆ.

ಜಯಪ್ರಕಾಶ್ ಹೆಗ್ಡೆ ಅವರು 2024ಲ್ಲಿ ಕಾಂಗ್ರೆಸ್ ಅಭ್ಯರ್ಥಿ. 1994ರಲ್ಲಿ ಜನತಾದಳದ ಅಭ್ಯರ್ಥಿಯಾಗಿ ಹಾಗೂ 1999 ಮತ್ತು 2004ರಲ್ಲಿ ಸ್ವತಂತ್ರ ಶಾಸಕರಾಗಿ ಬ್ರಹ್ಮಾವರ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಕ್ಷೇತ್ರ ಪುನರ್ವಿಂಗಡಣೆಯಿಂದಾಗಿ ಬ್ರಹ್ಮಾವರ ಕ್ಷೇತ್ರ ಅಸ್ತಿತ್ವ ಕಳೆದುಕೊಂಡಾಗ 2008ರ ವಿಧಾನಸಭೆ ಚುನಾವಣೆಯಲ್ಲಿ ಕುಂದಾಪುರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಕಂಡಿದ್ದರು ಅವರು.

2012ರ ಉಪಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಬಿಜೆಪಿ ಸೇರಿದ ನಂತರ ಹೆಗಡೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು. ನಂತರ ಅವರ ಕಾಂಗ್ರೆಸ್​ ಪಕ್ಷಕ್ಕೆ ಸೇರಿ ಟಿಕೆಟ್​ ಪಡೆದುಕೊಂಡಿದ್ದರು. ಉಡುಪಿ ಚಿಕ್ಕಮಗಳೂರು ತನ್ನ ಗಡಿಯನ್ನು ಇತರ ಐದು ಲೋಕಸಭಾ ಕ್ಷೇತ್ರಗಳೊಂದಿಗೆ ಹಂಚಿಕೊಂಡಿದೆ. ದಾವಣಗೆರೆ, ಶಿವಮೊಗ್ಗ, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ ಕ್ಷೇತ್ರ ಸುತ್ತಲಿದೆ.

Continue Reading
Advertisement
Election Results 2024
Lok Sabha Election 20246 mins ago

Election Results 2024: ಉತ್ತರ-ದಕ್ಷಿಣ ಎರಡೂ ಕಡೆ ಭರ್ಜರಿ ಜಯ ದಾಖಲಿಸಿದ ರಾಹುಲ್‌ ಗಾಂಧಿ

Karnataka Election Results 2024
Lok Sabha Election 20247 mins ago

Karnataka Election Results 2024: ಗ್ಯಾರಂಟಿ ದರ್ಬಾರ್ ಮಧ್ಯೆಯೂ ಬಿಜೆಪಿ ಗೆದ್ದು ಬೀಗಿದೆ ಎಂದ ವಿಜಯೇಂದ್ರ

Udupi Chikmagalur Result 2024:
ಪ್ರಮುಖ ಸುದ್ದಿ14 mins ago

Bangalore South Election Result 2024 : ತೇಜಸ್ವಿ ಸೂರ್ಯಗೆ ಭಾರಿ ಅಂತರದ ಗೆಲುವು

Election Results 2024
ದೇಶ34 mins ago

Election Results 2024: ನಿತೀಶ್‌ ಕುಮಾರ್‌ ಬೆಂಬಲ ಯಾರಿಗೆ? ಏನಂದ್ರು ಜೆಡಿಯು ನಾಯಕರು?

IND vs IRE T20 World Cup
ಕ್ರೀಡೆ53 mins ago

IND vs IRE T20 World Cup: ಐರ್ಲೆಂಡ್​ ಸವಾಲಿಗೆ ಟೀಮ್​ ಇಂಡಿಯಾ ಸಿದ್ಧ; ವಿಶ್ವಕಪ್​ ಸಾಧನೆ ಹೇಗಿದೆ?

AP Election Results 2024 Live
ದೇಶ1 hour ago

AP Election Results 2024 Live: ಚಂದ್ರಬಾಬು ನಾಯ್ಡುಗೆ ಮತ್ತೆ ಒಲಿಯಲಿದೆ ಸಿಎಂ ಪಟ್ಟ; ಜೂನ್‌ 9ರಂದು ಪ್ರಮಾಣ ವಚನ ಸ್ವೀಕಾರ ಸಾಧ್ಯತೆ

election results 2024 naidu
ಪ್ರಮುಖ ಸುದ್ದಿ1 hour ago

Election Results 2024: ಚಂದ್ರಬಾಬು ನಾಯ್ಡುಗೆ ಕರೆ ಮಾಡಿದ ಮೋದಿ, ಅಮಿತ್‌ ಶಾ‌; ಕೈ ಮುಖಂಡರಿಂದಲೂ‌ ಕಾಲ್; ನಾಯ್ಡು ಮನಸ್ಸು ಯಾರ ಕಡೆ?

Karnataka election results 2024
ಕರ್ನಾಟಕ1 hour ago

Karnataka election results 2024: ಕರ್ನಾಟಕದ ಜನರು ಬಿಜೆಪಿಗೆ ಆಶೀರ್ವಾದ ಮಾಡಿದ್ದಾರೆ: ಪ್ರಲ್ಹಾದ್‌ ಜೋಶಿ

Udupi Chikmagalur Result 2024
ಪ್ರಮುಖ ಸುದ್ದಿ1 hour ago

Udupi Chikmagalur Election Result 2024 : ಉಡುಪಿಯಲ್ಲಿ ಬಿಜೆಪಿಯ ಕೋಟಾ ಶ್ರೀನಿವಾಸ್​ ಪೂಜಾರಿಗೆ ವಿಜಯ

Election Results 2024 Kangana Ranaut on lead
ಬಾಲಿವುಡ್1 hour ago

Election Results 2024: ಕಂಗನಾ ರಣಾವತ್‌ ಎದುರು ʼಮಂಡಿʼಯೂರಿದ ಖ್ಯಾತ ರಾಜಕಾರಣಿಯ ಮಗ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ9 hours ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 day ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ1 day ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ2 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು3 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ5 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ7 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌