Chaitra Kundapura : ಆರೆಸ್ಸೆಸ್‌ ಪ್ರಚಾರಕನ ಪಾತ್ರ ಮಾಡಲು 10 ಲಕ್ಷ ಕೊಟ್ಟಿದ್ದ ಚೈತ್ರಾ ಕುಂದಾಪುರ! ಕಬಾಬ್‌ ಮಾರೋನು ಬಿಜೆಪಿ ಲೀಡರ್!‌ - Vistara News

ಉಡುಪಿ

Chaitra Kundapura : ಆರೆಸ್ಸೆಸ್‌ ಪ್ರಚಾರಕನ ಪಾತ್ರ ಮಾಡಲು 10 ಲಕ್ಷ ಕೊಟ್ಟಿದ್ದ ಚೈತ್ರಾ ಕುಂದಾಪುರ! ಕಬಾಬ್‌ ಮಾರೋನು ಬಿಜೆಪಿ ಲೀಡರ್!‌

Chaitra Kundapura: ಚೈತ್ರಾ ಕುಂದಾಪುರ ಎಂಥ ಖತರ್ನಾಕ್‌ ಎಂದರೆ ಆಕೆ ಆರೆಸ್ಸೆಸ್‌ ಪ್ರಚಾರಕ್‌ ವಿಶ್ವನಾಥ್‌ಜಿ ಪಾತ್ರವನ್ನು ನಕಲಿಯಾಗಿ ಸೃಷ್ಟಿಸಿದ್ದಳು. ಇದಕ್ಕೆ ಆಕೆ ಹೂಡಿದ ಹಣದ ಮೊತ್ತ 10 ಲಕ್ಷ ರೂ. ಹಾಗಿದ್ದರೆ ಆ ಪಾತ್ರ ಮಾಡಿದವರು ಯಾರು

VISTARANEWS.COM


on

Chaitra Kundapura with Ramesh and Dhanaraj
ವಿಶ್ವನಾಥ್‌ಜಿ ಪಾತ್ರ ಮಾಡಿದ ರಮೇಶ್‌ ಮತ್ತು ಧನರಾಜ್‌. ಮಧ್ಯೆ ಚೈತ್ರಾ ಕುಂದಾಪುರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು/ ಚಿಕ್ಕಮಗಳೂರು: ಚೈತ್ರಾ ಕುಂದಾಪುರ (Chaitra Kundapura) ಎಂಬ ಬೆಂಕಿ ಭಾಷಣಕಾರ್ತಿ ಬೈಂದೂರು ಎಂಎಲ್‌ಎ ಟಿಕೆಟ್‌ ಕೊಡಿಸುವುದಾಗಿ ಹೇಳಿ ಗೋವಿಂದ ಬಾಬು ಪೂಜಾರಿ (Govinda Poojari) ಎಂಬವರಿಂದ ಐದು ಕೋಟಿ ರೂ. ವಸೂಲಿ ಮಾಡಿ ವಂಚಿಸಿದ ಪ್ರಕರಣದಲ್ಲಿ ಹಲವು ರೋಚಕ ಘಟನೆಗಳಿವೆ. ಈ ವಂಚನೆಯ ಜಾಲದಲ್ಲಿ (Fraud Case) ಬರುವ ಆರೆಸ್ಸೆಸ್‌ ಪ್ರಚಾರಕ ವಿಶ್ವನಾಥ್‌ಜೀ (RSS Pracharak Vishwanathji) ಎಂಬ ಪಾತ್ರವನ್ನು ಸೃಷ್ಟಿ ಮಾಡಲು ಚೈತ್ರಾ ಕುಂದಾಪುರ ಕೊಟ್ಟಿರುವ ದುಡ್ಡು 10 ಲಕ್ಷ ರೂ.!

ಚಿಕ್ಕಮಗಳೂರಿನ ಒಬ್ಬ ಸಾಮಾನ್ಯ ಅಂಗಡಿಕಾರನನ್ನು ಸೆಲೂನ್‌ಗೆ ಕರೆದುಕೊಂಡು ಹೋಗಿ ವಿಶ್ವನಾಥ್‌ಜೀಯಾಗಿ ಬದಲಾಯಿಸಿದ ಚೈತ್ರಾ, ಬೆಂಗಳೂರಿನ ಒಬ್ಬ ಕಬಾಬ್‌ ವ್ಯಾಪಾರಿಯನ್ನು ಬಿಜೆಪಿಯ ಚುನಾವಣಾ ಸಮಿತಿ ಸದಸ್ಯ ಎಂದು ಪಾರ್ಟ್‌ ಮಾಡಿಸಿದ್ದಳು!

ಗೋವಿಂದ ಪೂಜಾರಿ ಅವರು ಬೈಂದೂರು ಟಿಕೆಟ್‌ ಕೊಡಿಸುವಂತೆ ಮೊದಲು ಚೈತ್ರಾ ಕುಂದಾಪುರಳನ್ನು ಕೇಳುತ್ತಾರೆ. ಆಕೆ ಓಕೆ ಸಾರ್‌ ಮಾಡಿಕೊಡೋಣ ಎಂದು ಭರವಸೆ ನೀಡುತ್ತಾಳೆ. ಬಳಿಕ ಅವಳು ಚರ್ಚೆ ಮಾಡುವುದು ಚಿಕ್ಕಮಗಳೂರಿನ ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿ ಗಗನ್‌ ಕಡೂರುನನ್ನು. ಗೋವಿಂದ ಪೂಜಾರಿ ಅವರಿಗೆ ತಾವು ಟಿಕೆಟ್‌ಗಾಗಿ ದೊಡ್ಡ ದೊಡ್ಡ ವ್ಯಕ್ತಿಗಳ ಜತೆ ಸಮಾಲೋಚನೆಯಲ್ಲಿದ್ದೇವೆ ಎನ್ನುವುದನ್ನು ತೋರಿಸುವುದಕ್ಕಾಗಿ ಚೈತ್ರಾ ಕುಂದಾಪುರ ಮತ್ತು ಗಗನ್‌ ಕಡೂರು ಸೃಷ್ಟಿ ಮಾಡುವ ಎರಡು ಪಾತ್ರಗಳೇ ಆರೆಸ್ಸೆಸ್‌ ಪ್ರಚಾರಕ್‌ ವಿಶ್ವನಾಥ್‌ಜೀ ಮತ್ತು ಬಿಜೆಪಿಯ ಚುನಾವಣಾ ಮಂಡಳಿಯ ಹಿರಿಯ ಸದಸ್ಯ ನಾಯ್ಕ್‌!

Chaithra Kundapura fraud

ಗೋವಿಂದ ಪೂಜಾರಿ ಅವರಿಗೆ ಈ ವ್ಯಕ್ತಿಗಳನ್ನು ಭೇಟಿ ಮಾಡಿಸಬೇಕು ಎಂದಾದಾಗ ಗಗನ್‌ ಕಡೂರ್‌ಗೆ ಹೊಳೆಯುವ ಐಡಿಯಾವೇ ತನ್ನ ಪರಿಚಯದವನೇ ಆದ ಧನರಾಜ್‌. ಧನರಾಜ್‌ ಕಡೂರಿನಲ್ಲಿ ಇನ್ನೋವಾ ವಾಹನ ಬಾಡಿಗೆ ಮಾಡುವ ಒಬ್ಬ ವ್ಯಕ್ತಿ. ಅದೊಂದು ದಿನ ಚೈತ್ರಾ ಧನರಾಜ್‌ನನ್ನು ಗಗನ್‌ ಕಡೂರು ಮನೆಗೆ ಕರೆಸಿಕೊಂಡು ಮಾತನಾಡುತ್ತಾಳೆ. ಕರಾವಳಿಯ ಚುನಾವಣಾ ಟಿಕೆಟ್‌ ವಿಚಾರವನ್ನು ಮಾತನಾಡುತ್ತಾಳೆ. ಗೋವಿಂದ ಪೂಜಾರಿಯವರಿಗೆ ಟಿಕೆಟ್‌ ಸಿಗೋದು ಗ್ಯಾರಂಟಿ ಆಗಿದೆ. ನಾವೇ ನಿಂತು ಎಲ್ಲ ಮಾಡಿಸಿದ್ದೇವೆ. ಆದರೆ, ಒಂದೊಮ್ಮೆ ಟಿಕೆಟ್‌ ಸಿಕ್ಕಿದರೆ ಅದು ತನಗೆ ಹೊಸಪೇಟೆಯ ಹಿರೇಹಡಗಲಿ ಮಠದ ಅಭಿನವ ಹಾಲಶ್ರೀ ಸ್ವಾಮೀಜಿಗಳೇ ಮಾಡಿಸಿದ್ದಾರೆ ಎಂದು ತಿಳಿಯುತ್ತಾರೆ. ನಾವು ಇಷ್ಟೆಲ್ಲ ಕಷ್ಟಪಟ್ಟಿದ್ದು ವೇಸ್ಟ್‌ ಆಗುತ್ತದೆ. ಹೀಗಾಗಿ ವಿಶ್ವನಾಥ್‌ಜೀ ಎನ್ನುವ ವ್ಯಕ್ತಿ ಬೇಕಲ್ಲ ಎಂದು ಕೇಳುತ್ತಾಳೆ. ಇದರಲ್ಲಿ ಏನೂ ಡೇಂಜರ್‌ ಇಲ್ಲ, ಸಹಕಾರ ನೀಡಿದರೆ ನಿಮಗೂ ಲಾಭವಾಗುತ್ತದೆ, ನಮಗೂ ಲಾಭವಾಗುತ್ತದೆ ಎನ್ನುತ್ತಾಳೆ.

ದುಡ್ಡಿನಾಸೆಗೆ ಬೀಳುವ ಧನರಾಜ್‌ ಆಯ್ತು ಮಾಡಿಸೋಣ ಅಂತಾನೆ. ಆಗ ಅವನ ತಲೆಗೆ ಹೊಳೆದಿರುವ ಹೆಸರು ರಮೇಶ್‌! ರಮೇಶ್‌ ಮೂಲತಃ ಚಳ್ಳಕೆರೆಯವನು. ಕಡೂರಿನಲ್ಲಿ ಸಣ್ಣ ಪುಟ್ಟ ವ್ಯವಹಾರ ಮಾಡಿಕೊಂಡಿದ್ದಾನೆ.

Chaitra Kundapura Case
ಧನರಾಜ್‌ ಮತ್ತು ರಮೇಶ್‌

ಸೆಲೂನ್‌ನಲ್ಲೇ ರೆಡಿ ಆದ್ರು ಆರೆಸ್ಸೆಸ್‌ ಪ್ರಚಾರಕ ವಿಶ್ವನಾಥ್‌ ಜಿ!

ಇತ್ತ ಧನರಾಜ್‌ ರಮೇಶ್‌ನ ಜತೆ ಮಾತನಾಡುತ್ತಾನೆ. ರಮೇಶ್‌ ಕೂಡಾ ಏನೇನೋ ವೇಷ ಮಾಡಿಲ್ವಾ? ಇದನ್ನೂ ಮಾಡೋಣ ಬಿಡು ಅಂತಾನೆ. ಅದೊಂದು ದಿನ ಗೋವಿಂದ ಪೂಜಾರಿ ಅವರು ಚಿಕ್ಕಮಗಳೂರಿಗೆ ಬರಲು ದಿನ ನಿಗದಿಯಾಗುತ್ತದೆ. ಆವತ್ತು ರಮೇಶ್‌ನನ್ನು ಕಡೂರಿನ ಒಂದು ಸೆಲೂನ್‌ಗೆ ಕರೆದುಕೊಂಡು ಹೋಗಿ ಚಂದ ಕಟ್ಟಿಂಗ್‌ ಮಾಡಿಸಿ ಡ್ರೆಸ್‌ ಹಾಕಿಸಿ ವಿಶ್ವನಾಥ್‌ ಜೀ ಮಾಡಲಾಗುತ್ತದೆ.

ಅದಕ್ಕಿಂತ ಮೊದಲು ಆರೆಸ್ಸೆಸ್‌ ಪ್ರಚಾರಕ್‌ ಎಂದರೆ ಏನು? ಅವರು ಹೇಗಿರುತ್ತಾರೆ? ಹೇಗೆ ಮಾತನಾಡುತ್ತಾರೆ? ಹೇಗ ಸಿಂಪಲ್‌ ಆಗಿರುತ್ತಾರೆ ಎನ್ನುವುದೆಲ್ಲವನ್ನೂ ಚೈತ್ರಾ ಕುಂದಾಪುರ ರಮೇಶ್‌ಗೆ ವಿವರಣೆ ಕೊಟ್ಟಿದ್ದಳು. ಹಾಗೆ ಆ ದಿನ ಬಂತು ಗೋವಿಂದ ಪೂಜಾರಿ ಅವರು ಬಂದು ವಿಶ್ವನಾಥ್‌ ಜೀ ಎಂಬ ನಕಲಿ ಆರೆಸ್ಸೆಸ್‌ ಪ್ರಚಾರಕರನ್ನು ಭೇಟಿ ಮಾಡುತ್ತಾರೆ. ಆಗ 50 ಲಕ್ಷದ ಡೀಲ್‌ ಕುದುರುತ್ತದೆ!

ಇದನ್ನೂ ಓದಿ: Chaithra Kundapura : ಮುಸ್ಲಿಮರ ಮೇಲೆ ಬೆಂಕಿ ಉಗುಳುವ ಚೈತ್ರಾ ಕುಂದಾಪುರ ಅಡಗಿ ಕುಳಿತದ್ದು ಮುಸ್ಲಿಮ್‌ ಫ್ರೆಂಡ್‌ ಮನೆಯಲ್ಲಿ!

ಕಬಾಬ್‌ ವ್ಯಾಪಾರಿ ಬಿಜೆಪಿಯ ಹಿರಿಯ ಲೀಡರ್‌ ಆಗಿದ್ದು ಹೀಗೆ!

ಅಂದ ಹಾಗೆ, ಚಿಕ್ಕಮಗಳೂರಿನಲ್ಲಿ ಪ್ರಚಾರಕ ವಿಶ್ವನಾಥ್‌ಜೀ ಪಾತ್ರ ಸೃಷ್ಟಿ ಮಾಡಿದಂತೆಯೇ ಬೆಂಗಳೂರಿನಲ್ಲಿ ಬಿಜೆಪಿಯ ಚುನಾವಣಾ ಮಂಡಳಿಯ ಹಿರಿಯ ಸದಸ್ಯ ನಾಯ್ಕ್‌ ಪಾತ್ರವನ್ನು ಸೃಷ್ಟಿ ಮಾಡಲಾಗುತ್ತದೆ. ಅಲ್ಲಿ ಚೈತ್ರಾ ಕೈಗೆ ಸಿಕ್ಕಿದವನು ಕೆ.ಆರ್‌. ಮಾರ್ಕೆಟ್‌ನಲ್ಲಿ ಕಬಾಬ್‌ ವ್ಯಾಪಾರಿಯಾಗಿರುವ ಒಬ್ಬ ವ್ಯಕ್ತಿ. ಬಿಜೆಪಿಯ ಹಿರಿಯ ನಾಯಕರು ಬೆಂಗಳೂರಿಗೆ ಬಂದಿದ್ದಾರೆ. ಕುಮಾರಕೃಪಾ ಗೆಸ್ಟ್‌ ಹೌಸ್‌ನಲ್ಲಿರುತ್ತಾರೆ ಎಂದು ಗೋವಿಂದ ಪೂಜಾರಿ ಅವರಿಗೆ ಹೇಳುತ್ತಾಳೆ ಚೈತ್ರಾ. ಆವತ್ತು ಗೋವಿಂದ ಪೂಜಾರಿ ಅವರು ಬಂದಾಗ ನಕಲಿ ನಾಯ್ಕ್‌ ಭೇಟಿಯಾಗುತ್ತಾರೆ. ನಿಮ್ಮ ಟಿಕೆಟ್‌ ಫೈನಲ್‌ ಆಗಿದೆ. ನೀವು ಮೂರು ಕೋಟಿ ಅಮೌಂಟ್‌ ಕೂಡಾ ರೆಡಿ ಮಾಡಿ ಎಂದು ಕಬಾಬ್‌ ವ್ಯಾಪಾರಿ ಸ್ಟೈಲಾಗಿ ಹೇಳುತ್ತಾನೆ. ಗೋವಿಂದ ಪೂಜಾರಿ ಅವರು ಇದನ್ನು ನಂಬಿಕೊಂಡು ಹೋಗುತ್ತಾರೆ.

ಧನರಾಜ್‌ಗೆ ಕೊಟ್ಟಿದ್ದು 10 ಲಕ್ಷ ರೂ.!

ನಕಲಿ ವಿಶ್ವನಾಥ್‌ ಜೀ ಸೃಷ್ಟಿಯ ನಾಟಕದ ಪಾತ್ರಧಾರಿಗಳಾದ ಧನರಾಜ್‌ ಮತ್ತು ರಮೇಶ್‌ಗೆ ಚೈತ್ರಾ ಕುಂದಾಪುರ ಯಾವ ಮೋಸವನ್ನೂ ಮಾಡಿಲ್ಲ! ಯಾಕೆಂದರೆ ಒಂದು ಸಣ್ಣ ಆಕ್ಟ್‌ಗೆ 10 ಲಕ್ಷ ರೂ. ಕೊಟ್ಟಿದ್ದಾಳೆ ಎಂದು ಸ್ವತಃ ಧನರಾಜ್‌ ಹೇಳಿದ್ದಾನೆ!

ಇದನ್ನೂ ಓದಿ: Chaithra Kundapura : ಅಬ್ಬಾ ಇವಳೆಂಥಾ ವಂಚಕಿ! 5 ಕೋಟಿ ವಂಚಿಸಿದ್ದಷ್ಟೇ ಅಲ್ಲ, ಮರ್ಡರ್‌ ಕೂಡಾ ಮಾಡಿದ್ದಾಳೆ ಚೈತ್ರಾ ಕುಂದಾಪುರ!

ಹಾಗಿದ್ದರೆ ಧನರಾಜ್‌ ಮತ್ತು ರಮೇಶ್‌ ಹೇಳಿದ್ದೇನು?

ಈ ಪ್ರಕರಣದಲ್ಲಿ ತಮ್ಮ ಪಾತ್ರವೇನು? ತಮ್ಮ ನಿಲುವೇನು ಎನ್ನುವುದನ್ನು ಧನರಾಜ್‌ ಮತ್ತು ರಮೇಶ್‌ ವಿಡಿಯೊ ಮೂಲಕ ಹೇಳಿದ್ದಾರೆ.

ʻʻಇಷ್ಟೊಂದು ದೊಡ್ಡ ಮಟ್ಟದ ವ್ಯವಹಾರ ಎಂದು ನಮ್ಗೆ ಗೊತ್ತಿರಲಿಲ್ಲ. ನಿಮಗೂ ಅನುಕೂಲ ಆಗುತ್ತೆ ಎಂದಿದ್ದಕ್ಕೆ ನಾವು ಒಪ್ಪಿಕೊಂಡಿದ್ದೀವಿ. ನಾನು ಹೇಳಿದಾಗಿ ನೀವು ನಟಿಸಿ ಎಂದು ಹೇಳಿದ್ರು. ನಾವು ಹಾಗೇ ಮಾಡಿದ್ವಿ ಅಷ್ಟೇ. ದೊಡ್ಡ ವ್ಯವಹಾರ ಬಗ್ಗೆ ಮಾಹಿತಿ ಇಲ್ಲʼʼ ಎಂದು ಧನರಾಜ್‌ ಮತ್ತು ರಮೇಶ್‌ ಹೇಳಿದ್ದಾರೆ.

ʻʻಎಲ್ಲಾ ಕ್ರಿಯೆಟ್ ಮಾಡಿದ್ದು ಗಗನ್. ಆ ರೀತಿ ನಾವು ನಟನೆ ಮಾಡಿದ್ವಿ ಅಷ್ಟೇ. ಟಿಕೆಟ್ ನೀಡಿದ್ರೆ ಅವರು ಗೆಲ್ಲುತ್ತಾರೆ.‌ ಆಗ ನಿಮಗೂ ಹೆಲ್ಪ್ ಆಗುತ್ತದೆ ಎಂದಿದ್ರು. ನಮಗೆ ಒಟ್ಟು 10 ಲಕ್ಷ ರೂ. ಕೊಟ್ಟಿದ್ದಾರೆʼʼ ಎಂದು ಧನರಾಜ್‌ ಹೇಳಿದ್ದಾನೆ. ಜತೆಗೆ ಈ ವಿಚಾರವನ್ನು ಬಾಯಿ ಬಿಟ್ಟರೆ ಹುಷಾರ್‌ ಎನ್ನುವ ಬೆದರಿಕೆಯನ್ನೂ ಹಾಕಿದ್ದಾಳಂತೆ ಚೈತ್ರಾ.

ಧನರಾಜ್‌, ರಮೇಶ್‌ ಪಾತ್ರವನ್ನು ಪತ್ತೆ ಹಚ್ಚಿದ್ದೇ ಗೋವಿಂದ ಪೂಜಾರಿ, ಹೇಗೆ?

ನಿಜವೆಂದರೆ, ವಿಶ್ವನಾಥ್‌ಜಿ ಒಂದು ನಕಲಿ ಪಾತ್ರ. ಅದನ್ನು ಮಾಡಿದ್ದು ಧನರಾಜ್‌ ಮತ್ತು ರಮೇಶ್‌ ಎಂದು ತನಿಖೆ ಮೂಲಕ ಪತ್ತೆ ಹಚ್ಚಿದ್ದೇ ಗೋವಿಂದ ಪೂಜಾರಿ.

ಯಾವಾಗ ಚೈತ್ರಾ ಕುಂದಾಪುರ ಹಣ ಪಡೆದುಕೊಂಡ ಆರೆಸ್ಸೆಸ್‌ ಪ್ರಚಾರ ವಿಶ್ವನಾಥ್‌ಜಿ ಮೃತಪಟ್ಟರು ಎಂದು ಹೇಳಿದಳೋ ಆಗ ಗೋವಿಂದ ಪೂಜಾರಿ ಅವರು ಮೊದಲ ಬಾರಿಗೆ ಸಂಶಯ ಪಟ್ಟು ಹುಡುಕಲು ಶುರು ಮಾಡುತ್ತಾರೆ. ಮೊದಲು ವಿಶ್ವನಾಥ್‌ಜೀ ಎಂಬ ಪ್ರಚಾರಕರೇ ಇಲ್ಲ ಎನ್ನುವುದನ್ನು ದೃಢಪಡಿಸಿಕೊಳ್ಳುವ ಅವರು ನಂತರ ಚಿಕ್ಕಮಗಳೂರಿನ ಹಿಂದೂ ಸಂಘಟನೆ ಕಾರ್ಯಕರ್ತರ ಮಂಜು ಎಂಬವರನ್ನು ಸಂಪರ್ಕಿಸಿ ಚಿಕ್ಕಮಗಳೂರಿನಲ್ಲಿರುವ ʻಆ ಸಂಘದ ಪ್ರಚಾರಕ ವಿಶ್ವನಾಥ್‌ಜಿʼ ಯಾರು ಎಂದು ಪ್ರಶ್ನಿಸುತ್ತಾರೆ. ಆಗ ಮಂಜು ಕಡೂರಿನ ಆ ಸೆಲೂನ್‌ನಲ್ಲಿ ನಡೆದ ವಿದ್ಯಮಾನವನ್ನು ನೆನಪಿಸಿಕೊಳ್ಳುತ್ತಾರೆ. ಗೋವಿಂದ ಪೂಜಾರಿ ಅವರು ಆ ಸೆಲೂನ್‌ಗೆ ಹೋಗಿ ವಿಚಾರಿಸಿದಾಗ ಸತ್ಯ ಬಯಲಾಗುತ್ತದೆ. ಅಲ್ಲಿಗೆ ಧನರಾಜ್‌ ಮತ್ತು ರಮೇಶ್‌ ಆವತ್ತೇ ಗೋವಿಂದ ಪೂಜಾರಿ ಕೈಗೆ ಸಿಕ್ಕಿಬಿದ್ದಿದ್ದರು. ಮತ್ತು ಚೈತ್ರಾ ಕುಂದಾಪುರಳ ಸಮಸ್ತ ವಂಚನೆ ಬಿಚ್ಚಿಕೊಂಡಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಮಳೆ

Karnataka Rain :‌ ಮುಂದುವರಿದ ಮಳೆ ಅಬ್ಬರ; ಸಿಡಿಲು ಬಡಿದು ಹೊತ್ತಿ ಉರಿದ ಮನೆ, ಸೇತುವೆ ಮುಳುಗಡೆ

Karnataka Rain : ಗುಡುಗು, ಸಿಡಿಲು ಸಹಿತ ಮಳೆಯಾಗುತ್ತಿದ್ದು, ಕಲಬುರಗಿಯಲ್ಲಿ ಮನೆಯೊಂದಕ್ಕೆ ಸಿಡಿಲು ಬಡಿದಿದೆ. ಕೊಡಗಿನಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಬೆಂಗಳೂರಲ್ಲಿ ಅಂಡರ್‌ಪಾಸ್‌ ಜಲಾವೃತಗೊಂಡಿತ್ತು.

VISTARANEWS.COM


on

By

karnataka Weather Forecast
Koo

ಕಲಬುರಗಿ/ಕೊಪ್ಪಳ: ರಾಜ್ಯದ ಹಲವೆಡೆ ಮಳೆಯು (Karnataka Rain) ಅಬ್ಬರಿಸುತ್ತಿದ್ದು, ಕಲಬುರಗಿಯಲ್ಲಿ ಸಿಡಿಲು ಬಡಿದು ಮನೆಯೊಂದು ಹೊತ್ತಿ ಉರಿದಿದೆ. ಕಲಬುರಗಿ ತಾಲೂಕಿನ ಹೊನ್ನ ಕಿರಣಗಿ ಗ್ರಾಮದಲ್ಲಿ‌ಘಟನೆ ನಡೆದಿದೆ.

ರಾಜಕುಮಾರ್ ನಿಂಗಯ್ಯ ಕೋಣಿನ್ ಅವರ ಮನೆಗೆ ಸಿಡಿಲು ಬಡಿದಿದ್ದು, ಸ್ವಲ್ಪದರಲ್ಲೆ ಅನಾಹುತವೊಂದು ತಪ್ಪಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು ಬೆಂಕಿಯನ್ನು ‌ನಂದಿಸಿದ್ದಾರೆ. ಫರತಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕೊಡಗಿನಲ್ಲಿ ಮುಂದುವರೆದ ಆರಿದ್ರಾ ಮಳೆ

ಕೊಡಗಿನಲ್ಲಿ ಆರಿದ್ರಾ ಮಳೆ ಅಬ್ಬರಕ್ಕೆ ನದಿ ತೋರೆ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದೆ. ತಲಕಾವೇರಿ ಭಾಗಮಂಡಲ ವ್ಯಾಪ್ತಿಯಲ್ಲೂ ಉತ್ತಮ ಮಳೆಯಾಗುತ್ತಿದೆ. ಕಾವೇರಿ ನದಿ ನೀರಿನ ಮಟ್ಟದಲ್ಲೂ ಗಣನೀಯ ಏರಿಕೆ ಕಂಡಿದೆ.

ಅಂಡರ್‌ ಪಾಸ್‌ ಜಲಾವೃತ

ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಮಳೆಗೆ ಮಲ್ಲೇಶ್ವರದ ಕೆಸಿ ಜನರಲ್ ಆಸ್ಪತ್ರೆಯ ಅಂಡರ್ ಪಾಸ್‌ನಲ್ಲಿ ನೀರು ನಿಂತಿದೆ. ನಿನ್ನೆ ಸುರಿದ ಮಳೆಗೆ ಅಂಡರ್ ಪಾಸ್ ಜಲಾವೃತವಾಗಿದ್ದು, ವಾಹನ ಸಂಚಾರಕ್ಕೆ ತೊಂದರೆ ಉಂಟಾಯಿತು.

ಕೂಡ್ಲಿಗಿಯಲ್ಲಿ ಮಳೆಗಾಗಿ ವಿಶೇಷ ಪೂಜೆ

ಒಂದು ಕಡೆ ಮಳೆಯು ಅಬ್ಬರಿಸುತ್ತಿದ್ದರೆ ಮತ್ತೊಂದು ಕಡೆ ಮಳೆಗಾಗಿ ವಿಶೇಷ ಪೂಜೆ ನಡೆದಿದೆ. ವಿಜಯನಗರದ ಕೂಡ್ಲಿಗಿ ಪಟ್ಟಣದ ಕೋಟೆ ಪ್ರದೇಶದಲ್ಲಿ ಮಳೆಗಾಗಿ ಕೊಂತೆಮ್ಮ ಗಂಗೆ ಪೂಜೆಯನ್ನು ಗ್ರಾಮಸ್ಥರು ನೆರವೇರಿಸಿದ್ದಾರೆ. ಪಂಚ ಮುತ್ತೈದೆಯರು, ಪಂಚ ಕನ್ನಿಕೇಯರಿಂದ ವರುಣನ ಕೃಪೆಗಾಗಿ ಕೊಂತೆಮ್ಮ ಗಂಗೆ ಪೂಜೆ ಸಲ್ಲಿಸಿದರು.

ಮೂರು ಕಾಲು ದಾರಿ ಸೇರುವ ವೃತ್ತದಲ್ಲಿ ನೀರು ತುಂಬಿದ ಕುಂಬವೊಂದನ್ನು ಅಲಂಕಾರ ಮಾಡಿ, ಅದನ್ನೇ ಮಳೆ ಕೊಂತೆಮ್ಮಳೆಂದು ವಿಧಿವತ್ತಾಗಿ ಪಂಚ ಮುತ್ತೈದೆಯರಿಂದ ಪ್ರತಿಷ್ಠಾಪನೆ ಮಾಡಿ ಮಳೆಗಾಗಿ ವಿಶೇಷ ಪೂಜೆ ನೆರವೇರಿಸಿದರು.

ಇದನ್ನೂ ಓದಿ: Karnataka Weather : ಸಾಧಾರಣದಿಂದ ಭಾರಿ ಮಳೆ ಸಾಧ್ಯತೆ; ಕರಾವಳಿ-ಮಲೆನಾಡಿಗೆ ಎಚ್ಚರಿಕೆ

ಸೇತುವೆ ಮುಳುಗಡೆ

ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಮಳೆ ಮುಂದುವರಿದಿದೆ. ನಿರಂತರ ಮಳೆಯಿಂದ ಪಂಚಗಂಗಾ ಒಳಹರಿವಿನ ಪ್ರಮಾಣ ಹೆಚ್ಚಳಗೊಂಡಿದೆ. ಪಂಚಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಬ್ರಿಡ್ಜ್ ಕಮ್ ಬ್ಯಾರೇಜ್ ಮುಳುಗಡೆಯಾಗಿದೆ.

ಕೊಲ್ಹಾಪುರ ಜಿಲ್ಲೆಯ ಶಿಂಗನಾಪುರ ಬಳಿ ಇರುವ ಸೇತುವೆ ಮುಳುಗಡೆಗೊಂಡಿದ್ದು, ವಾಹಗಳ ಸಂಚಾರಕ್ಕೆ ತೊಂದರೆಯುಂಟಾಗಿದೆ. ಇತ್ತ ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದ ಕೊಲ್ಹಾಪುರ ಜಿಲ್ಲಾಡಳಿತ ಹಾಗೂ ಪೊಲೀಸರ ವಿರುದ್ಧ ಜನರು ಆಕ್ರೋಶ ಹೊರಹಾಕಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಸಾಧಾರಣದಿಂದ ಭಾರಿ ಮಳೆ ಸಾಧ್ಯತೆ; ಕರಾವಳಿ-ಮಲೆನಾಡಿಗೆ ಎಚ್ಚರಿಕೆ

Karnataka Weather Forecast : ಗುಡುಗು ಸಹಿತ ಗಾಳಿಯೊಂದಿಗೆ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಹೀಗಾಗಿ ಆರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ (karnataka Weather Forecast) ನೀಡಿದೆ. ಮಲೆನಾಡು ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉತ್ತರಒಳನಾಡಿನಲ್ಲಿ ಹಗುರದಿಂದ ಮಧ್ಯಮ ಮಳೆಯಾದರೆ, ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ. ಇನ್ನೂ ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಸಹಿತ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದೆ.

ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ಬೆಳಗಾವಿ, ಧಾರವಾಡ, ರಾಯಚೂರು, ಯಾದಗಿರಿಯಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗಲಿದೆ.

ಮಲೆನಾಡಿನಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಆದರೆ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ವ್ಯಾಪಕವಾಗಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಲ್ಲೂ ಗುಡುಗು ಮಳೆ

ಬೆಂಗಳೂರು ಸುತ್ತಮುತ್ತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನಗಳು ಅನುಕ್ರಮವಾಗಿ 30 ಮತ್ತು 22 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಈ ಜಿಲ್ಲೆಗಳಿಗೆ ಅಲರ್ಟ್‌

ಜು.1ರಂದು ಗುಡುಗು ಸಹಿತ ಭಾರಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜತೆಗೆ ಮೀನುಗಾರರಿಗೂ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ: Kidnap case : ಕೋಟಿ ಆಸೆಗೆ ಸಿನಿಮಾ ಸ್ಟೈಲ್‌ನಲ್ಲಿ ಸ್ಟಾಕ್‌ ಮಾರ್ಕೆಟ್‌ ವಂಚಕನ ಕಿಡ್ನ್ಯಾಪ್‌

ಜು.1ರಿಂದ ಕೊಡಗಿಗೆ ಭಾರಿ ವಾಹನಗಳ ಓಡಾಟ ನಿಷೇಧ

ಕೊಡಗು: ಕೊಡಗಿನಲ್ಲಿ ಕಳೆದ ಮೂರು ದಿನಗಳಿಂದ ಸುರಿದ ಮಳೆಯ ಎಫೆಕ್ಟ್‌ನಿಂದಾಗಿ (Rain Effect), ಜಿಲ್ಲೆಯಲ್ಲಿ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ ಹಾಕಲಾಗಿದೆ. ಕೊಡಗು ಡಿಸಿ ಮತ್ತು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾದ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ. ಜುಲೈ 1 ರಿಂದ ಜುಲೈ 30ರವರೆಗೆ ಭಾರಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಅಗತ್ಯ ವಸ್ತುಗಳ ಪೂರೈಕೆ ಹಾಗೂ ಸಾರ್ವಜನಿಕ ಪ್ರಯಾಣಿಕರ ವಾಹನಗಳಿಲ್ಲ ಯಾವುದೇ ನಿರ್ಬಂಧ ಇಲ್ಲ. ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಭಾರಿ ಗಾತ್ರದ ವಾಹನಗಳು ಹೆಚ್ಚು ಸಂಚರಿಸುತ್ತಿದ್ದವು. ಆದರೆ ಗುಡ್ಡದ ಬದಿಯಿಂದ ಮಣ್ಣು ಕುಸಿಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ ಹಾಕಲಾಗಿದೆ.

ಯಾವೆಲ್ಲ ವಾಹನಗಳಿಗೆ ನಿರ್ಬಂಧ?

ವಾಹನದ ನೋಂದಣಿ ತೂಕ 18,500 ಕೆ.ಜಿ.ಗಿಂತ ಹೆಚ್ಚಿನ ತೂಕದ ಸರಕು ಸಾಗಾಣಿಕೆ ವಾಹನ, ಮಲ್ಟಿ ಆಕ್ಸಿಲ್ ಟ್ರಕ್‍ಗಳ ಸಂಚಾರ ಮತ್ತು ಭಾರೀ ವಾಹನಗಳಾದ ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೈನರ್ಸ್, ಲಾಂಗ್ ಚಾಸಿಸ್(ಮಲ್ಟಿ ಆಕ್ಸಿಲ್), ಆರ್ಟಿಕ್ಯೂಲೇಟೆಡ್ ವಾಹನಗಳು ಮತ್ತು ಮರಳು ಸಾಗಾಣಿಕೆ, ಮರದ ದಿಮ್ಮಿಗಳನ್ನು ಸಾಗಿಸುವ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ಕೊಡಗು ಜಿಲ್ಲೆಯಲ್ಲಿ ಮಳೆಗಾಲ ಮುಗಿಯುವವರೆಗೆ ನಿರ್ಬಂಧಿಸಲಾಗಿದೆ.

ಈ ವಾಹನಗಳಿಗೆ ವಿನಾಯಿತಿ

ಅಡುಗೆ ಅನಿಲ ಮತ್ತು ಇಂಧನ ಪೂರೈಕೆ ವಾಹನಗಳು, ಹಾಲು ಪೂರೈಕೆ ವಾಹನಗಳು, ಸರ್ಕಾರಿ ಕೆಲಸದ ನಿಮಿತ್ತ ಉಪಯೋಗಿಸಲ್ಪಡುವ ವಾಹನಗಳು, ಶಾಲಾ ಕಾಲೇಜು ಮತ್ತು ಸಾರ್ವಜನಿಕ ಪ್ರಯಾಣಿಕರ ವಾಹನಗಳಿಗೆ (ಮಲ್ಟಿ ಆಕ್ಸಿಲ್ ಬಸ್‍ಗಳು ಸೇರಿದಂತೆ) ನಿರ್ಬಂಧದಿಂದ ವಿನಾಯಿತಿ ನೀಡಲಾಗಿದೆ.

ಆದೇಶ ಮೀರಿದರೆ ದಂಡ ಪ್ರಯೋಗ

ಈ ಕುರಿತು ಸೂಚನಾ ಫಲಕಗಳನ್ನು ಅಳವಡಿಸಲು ಸೂಚಿಸಲಾಗಿದೆ. ಜತೆಗೆ ಕೊಡಗು ಜಿಲ್ಲೆಯ ಮುಖಾಂತರ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 275 ರ ಜಿಲ್ಲೆಯ ಗಡಿಭಾಗಗಳಾದ ಕುಶಾಲನಗರ ಮತ್ತು ಸಂಪಾಜೆಯಲ್ಲಿ ವ್ಯವಸ್ಥಿತ ಚೆಕ್‍ಪೋಸ್ಟ್ ನಿರ್ಮಿಸುವಂತೆ ತಿಳಿಸಲಾಗಿದೆ. ದಿನದ 24 ಗಂಟೆಯೂ ನಿಗಾ ವಹಿಸಲು ಸಿಬ್ಬಂದಿಯನ್ನು ನಿಯೋಜಿಸಲಾಗುತ್ತಿದೆ. ಮೊಬೈಲ್ ಪ್ಯಾಟ್ರೋಲಿಂಗ್ ನಡೆಸಲು ಹಾಗೂ ಈ ಆದೇಶ ಉಲ್ಲಂಘನೆಯಾಗದಂತೆ ಮತ್ತು ಆದೇಶ ಉಲ್ಲಂಘಿಸಿದವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಪೊಲೀಸ್ ಹಾಗೂ ಸಾರಿಗೆ ಇಲಾಖೆಗೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Lacchi Poojarthi: ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ತಾಯಿ ನಿಧನ

Lacchi Poojarthi: ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ತಾಯಿ, ಕೋಟದ ಕೋಟತಟ್ಟು ನಿವಾಸಿ ಲಚ್ಚಿ ಪೂಜಾರ್ತಿ (97) ಅವರು ವಯೋಸಹಜ ಕಾಯಿಲೆಯಿಂದ ಕೊನಯುಸಿರೆಳೆದಿದ್ದಾರೆ. ಇವರ ನಿಧನಕ್ಕೆ ಹಲವು ರಾಜಕೀಯ ನಾಯಕರು, ಗಣ್ಯರು ಸಂತಾಪ ಸೂಚಿಸಿದ್ದಾರೆ.

VISTARANEWS.COM


on

Lacchi Poojarthi
Koo

ಉಡುಪಿ: ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ (Kota Srinivas Poojary) ಅವರಿಗೆ ಮಾತೃ ವಿಯೋಗವಾಗಿದೆ. ಕೋಟದ ಕೋಟತಟ್ಟು ನಿವಾಸಿ ಲಚ್ಚಿ ಪೂಜಾರ್ತಿ (97) (Lacchi Poojarthi) ಅವರು ವಯೋಸಹಜ ಕಾಯಿಲೆಯಿಂದ ಭಾನುವಾರ ನಿಧನರಾದರು.

ಮೃತರಿಗೆ ಪುತ್ರ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಲಚ್ಚಿ ಪೂಜಾರ್ತಿ ಕೃಷಿಕರಾಗಿದ್ದರು. ರಾಜಕೀಯ ಕ್ಷೇತ್ರದಲ್ಲಿ ಉನ್ನತ ಸ್ಥಾನ ಏರಿದ ಪ್ರತಿ ಸಂದರ್ಭದಲ್ಲಿ ಕೋಟ ಶ್ರೀನಿವಾಸ ಪೂಜಾರಿ ಅವರು, ತಾಯಿ ಮನೆಗೆ ತೆರಳಿ ಆಶೀರ್ವಾದ ಪಡೆಯುತ್ತಿದ್ದರು. ಅಲ್ಲದೇ ಚುನಾವಣೆ ವೇಳೆ ತಾಯಿಯೊಂದಿಗೆ ತೆರಳಿ ಮತ ಚಲಾಯಿಸುತ್ತಿದ್ದರು. ಇನ್ನು ತಮ್ಮ ಯಶಸ್ಸಿನಲ್ಲಿ ತಾಯಿಯವರ ಪಾತ್ರ ಮಹತ್ವದ್ದು ಎಂದು ಯಾವಾಗಲೂ ಸ್ಮರಿಸುತ್ತಿದ್ದರು.

ಲಚ್ಚಿ ಪೂಜಾರ್ತಿ ಅವರ ನಿಧನಕ್ಕೆ ಕುಂದಾಪುರ ಶಾಸಕ ಕಿರಣ್‌ ಕುಮಾರ್‌ ಕೊಡ್ಲಿ, ಉಡುಪಿ ಶಾಸಕ ಯಶ್‌ಪಾಲ್‌ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ, ಬೈಂದೂರು ಶಾಸಕ ಗುರುರಾಜ್‌ ಗಂಟಿಹೊಳೆ, ಕಾರ್ಕಳ ಶಾಸಕ ಸುನೀಲ್‌ ಕುಮಾರ್‌ ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ.

ವೀರಪ್ಪ ಮೊಯ್ಲಿ ಪುತ್ರಿ ಹಂಸ ಮೊಯ್ಲಿ ವಿಧಿವಶ

Hamsa Moily Veerappa Moily's daughter passed away

ಬೆಂಗಳೂರು: ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಪುತ್ರಿ (Veerappa Moily’s daughter ) ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ (Hamsa Moily) ನಿನ್ನೆ ರಾತ್ರಿ ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ. ಪುತ್ರಿ ಹಂಸ ಮೊಯ್ಲಿ ಸಾವಿನ ಸುದ್ದಿ ತಿಳಿದು ಛತ್ತೀಸ್‌ಘಡದಲ್ಲಿದ್ದ ವೀರಪ್ಪ ಮೊಯ್ಲಿ ರಾತ್ರಿಯೇ ವಾಪಾಸ್ ಆಗಿದ್ದಾರೆ.

ಹಂಸ ಮೊಯ್ಲಿ ಅವರು ಭರತನಾಟ್ಯ ಕಲಾವಿದೆ ಆಗಿದ್ದರು. 46 ವರ್ಷದ ಹಂಸ ಮೊಯ್ಲಿ ಅವರು ಇತ್ತೀಚೆಗೆ ಅಸೌಖ್ಯದಿಂದ ಬಳಲುತ್ತಿದ್ದರು. ಭರತನಾಟ್ಯ ನೃತ್ಯಗಾರ್ತಿ ಮತ್ತು ಪ್ರಾಯೋಗಿಕ ನೃತ್ಯ ಸಂಯೋಜಕಿಯಾಗಿದ್ದರು. ದೇವದಾಸಿಯರ ಜೀವನವನ್ನು ಆಧರಿಸಿದ ತಮಿಳು ಸಿನಿಮಾʻ ಶೃಂಗಾರಂʼನಲ್ಲಿ ನಟಿಸಿದ್ದರು.

ಇದನ್ನೂ ಓದಿ | Road Accident: ಚನ್ನರಾಯಪಟ್ಟಣದಲ್ಲಿ ಭೀಕರ ಅಪಘಾತ; ಬಸ್-ಕಾರು ಡಿಕ್ಕಿಯಾಗಿ ಇಬ್ಬರ ದುರ್ಮರಣ

ಅನಾರೋಗ್ಯದಿಂದಾಗಿ ಏಕಾಏಕಿ ಬಳಲಿದ್ದ ಅವರು, ನಿನ್ನೆ ಸಂಜೆ ಅಸ್ವಸ್ಥರಾಗಿದ್ದರು. ತಕ್ಷಣವೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ವೀರಪ್ಪಮೊಯ್ಲಿ ಅವರ ಮೂರನೇ ಪುತ್ರಿಯಾಗಿದ್ದ ಹಂಸ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ʻಜನಾನುರಾಗಿʼ ಎಂಬ ಹೆಸರು ಪಡೆದಿದ್ದ ಅವರು, ತಮದೇ ಆದ ಚೌಕಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಭರತ ನಾಟ್ಯ ಕಲಾವಿದರಾಗಿದ್ದ ಹಂಸ ಮೊಯ್ಲಿ ಅವರು ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪ್ರದರ್ಶನ ನೀಡಿದ್ದರು.

Continue Reading

ಮಳೆ

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Karnataka Weather Forecast : ಭಾನುವಾರ ಬೆಂಗಳೂರು, ಕಲಬುರಗಿ, ಕೊಪ್ಪಳ ಸೇರಿದಂತೆ ಹಲವೆಡೆ ಮಳೆಯಾಗಿದೆ. ಕೊಡಗಿನಲ್ಲಿ ಮಳೆ ಎಫೆಕ್ಟ್‌ನಿಂದಾಗಿ (Rain News) ಭಾರಿ ಗಾತ್ರದ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಹಲವು ದಿನಗಳಿಂದ ಮೋಡ ಕವಿದ ವಾತಾವರಣ (Karnataka Weather Forecast) ಇತ್ತು. ಮಧ್ಯಾಹ್ನದ ಹೊತ್ತು ಕೆಲವೊಮ್ಮೆ ಜಿಟಿ ಜಿಟಿ ಮಳೆಯ (Rain News) ಸಿಂಚನವಾಗುತ್ತಿತ್ತು. ಭಾನುವಾರ ಗಾಳಿಯೊಂದಿಗೆ ಮಳೆಯಾಗಿದೆ. ಮೆಜೆಸ್ಟಿಕ್, ಕೆಆರ್‌ವೃತ್ತ, ಕಾರ್ಪೋರೇಶನ್ ಸರ್ಕಲ್‌, ಕೆಆರ್‌ ಮಾರ್ಕೆಟ್, ಶೇಷಾದ್ರಿಪುರಂ, ಗಾಂಧಿನಗರ, ಶಿವಾಜಿನಗರ. ವಿಧಾನಸೌಧ ಸುತ್ತಮುತ್ತ ಮಳೆಯಾಗಿದೆ. ಇತ್ತ ದಿಢೀರ್‌ ಬಂದ ಮಳೆಗೆ ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ಸಮಸ್ಯೆಯುಂಟಾಯಿತು.

ಇತ್ತ ಕಲಬುರಗಿಯಲ್ಲಿ ಭಾನುವಾರ ವರುಣನ ಆರ್ಭಟ ಜೋರಾಗಿತ್ತು. ಒಂದು ಗಂಟೆಗೂ ಹೆಚ್ಚು ಸಮಯ ಮಳೆ ಸುರಿದು,ಜನ ಜೀವನ ಅಸ್ತವ್ಯಸ್ತವಾಗಿತ್ತು. ಕೊಪ್ಪಳದಲ್ಲೂ ಕಳೆದ ಒಂದು ವಾರ ಬಿಡುವು ನೀಡಿದ್ದ ಮಳೆರಾಯ ಭಾನುವಾರ ಅಬ್ಬರಿಸಿದ್ದ. ಕೊಪ್ಪಳ ತಾಲೂಕಿನ‌ ಹಿರೇಸಿಂದೋಗಿ ಸುತ್ತಮುತ್ತ ಉತ್ತಮ ಮಳೆಯಾಗಿದೆ.

ಇದನ್ನೂ ಓದಿ: Kidnap case : ಕೋಟಿ ಆಸೆಗೆ ಸಿನಿಮಾ ಸ್ಟೈಲ್‌ನಲ್ಲಿ ಸ್ಟಾಕ್‌ ಮಾರ್ಕೆಟ್‌ ವಂಚಕನ ಕಿಡ್ನ್ಯಾಪ್‌

ಭಾರಿ ಮಳೆ ಎಫೆಕ್ಟ್‌ ರಾ.ಹೆ 275ರಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ

ಕೊಡಗಿನಲ್ಲಿ ಕಳೆದ ಮೂರು ದಿನಗಳಿಂದ ಸುರಿದ ಮಳೆಯ ಎಫೆಕ್ಟ್‌ನಿಂದಾಗಿ, ಜಿಲ್ಲೆಯಲ್ಲಿ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ ಹಾಕಲಾಗಿದೆ. ಕೊಡಗು ಡಿಸಿ ಮತ್ತು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾದ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ.

ಜುಲೈ 1ರಿಂದ ಜುಲೈ 30ರವರೆಗೆ ಭಾರಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಅಗತ್ಯ ವಸ್ತುಗಳ ಪೂರೈಕೆ ಹಾಗೂ ಸಾರ್ವಜನಿಕ ಪ್ರಯಾಣಿಕರ ವಾಹನಗಳಿಲ್ಲ ಯಾವುದೇ ನಿರ್ಬಂಧ ಇಲ್ಲ. ಗುಡ್ಡದ ಬದಿಯಿಂದ ಮಣ್ಣು ಕುಸಿತಗೊಳ್ಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ ಹಾಕಲಾಗಿದೆ. ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಭಾರಿ ಗಾತ್ರದ ವಾಹನಗಳು ಹೆಚ್ಚು ಸಂಚರಿಸುತ್ತಿದ್ದವು.

ಭೋರ್ಗರೆದ ಧನುಷ್ ಕೋಟಿ ಜಲಪಾತ

ಮೈಸೂರಿನ ಕಾವೇರಿ ಕೊಳ್ಳದಲ್ಲಿ ಭರ್ಜರಿ ಮಳೆ ಹಿನ್ನೆಲೆಯಲ್ಲಿ ಧನುಷ್ ಕೋಟಿ ಜಲಪಾತ ಭೋರ್ಗರೆದಿದೆ. ಮೈಸೂರಿನ ಕೆಆರ್ ನಗರದ ಚುಂಚನಕಟ್ಟೆ ಬಳಿ ಇರುವ ಧನುಷ್ಕೋಟಿ ಜಲಪಾತಕ್ಕೆ ಪ್ರವಾಸಿಗರ ಕೈಬೀಸಿ ಕರೆಯುತ್ತಿದೆ.

ಕೃಷ್ಣಾ ನದಿಯಲ್ಲಿ ಒಳಹರಿವು ಹೆಚ್ಚಳ

ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಸುರಿದ ಭಾರಿ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದಲ್ಲಿ ಕೃಷ್ಣಾ ನದಿಯ ಒಳಹರಿವು ಹೆಚ್ಚಳಗೊಂಡಿದೆ. ಚಿಕ್ಕೋಡಿ ತಾಲೂಕಿನ ಮಾಂಜರಿ, ಬಾವನಸೌದತ್ತಿ ಸಂಪರ್ಕಿಸುವ ಹಳೆ ಸೇತುವೆ ಜಲಾವೃತಗೊಂಡಿದೆ.

ಕರಾವಳಿಗೆ ಭಾರಿ ಮಳೆ ಮುನ್ಸೂಚನೆ

ಜುಲೈ 1ರಂದು ಕರಾವಳಿಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಗಾಳಿಯ ವೇಗವು 30-40 ಕಿ.ಮೀ ತಲುಪುವ ಸಾಧ್ಯತೆಯಿದೆ ಹಾಗೂ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಗಾಳಿ ಜತೆಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮಧ್ಯಮ ಮಳೆಯಾಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Dating Application
Latest5 mins ago

Dating Application: ಡೇಟಿಂಗ್‌ ನೆಪದಲ್ಲಿ ಕೆಫೆಗೆ ಕರೆದ ಮಹಿಳೆ ಹೀಗಾ ಮಾಡೋದು?

Special awareness programme on drug abuse illegal trafficking
ಬೆಂಗಳೂರು9 mins ago

Bengaluru News: ಮಾದಕ ದ್ರವ್ಯ ಅಕ್ರಮ ಸಾಗಾಟ; ಜಾಗೃತಿ ಮೂಡಿಸಿದ ವಿದ್ಯಾರ್ಥಿಗಳು

Monsoon session
ಕರ್ನಾಟಕ10 mins ago

Monsoon session: ರಾಜ್ಯ ಮುಂಗಾರು ಅಧಿವೇಶನಕ್ಕೆ ಮುಹೂರ್ತ ಫಿಕ್ಸ್‌; ದಿನಾಂಕ ಫೈನಲ್ ಮಾಡಿದ ಸಿಎಂ

UPSC 2024
ಪ್ರಮುಖ ಸುದ್ದಿ15 mins ago

UPSC 2024: ಯುಪಿಎಸ್ಸಿ ಸಿಎಸ್ಇ ಪ್ರಿಲಿಮ್ಸ್ ಫಲಿತಾಂಶ ಪ್ರಕಟ; ಪರಿಶೀಲಿಸುವುದು ಹೇಗೆ?

Kabzaa movie Appreciation Letter from Union Finance Ministry to Sri siddeshwar Enterprises
ಕರ್ನಾಟಕ44 mins ago

Kabzaa movie: ಅತಿ ಹೆಚ್ಚು ತೆರಿಗೆ ಪಾವತಿ; ಆರ್. ಚಂದ್ರು ನಿರ್ಮಾಣ ಸಂಸ್ಥೆಗೆ ಕೇಂದ್ರದಿಂದ ಪ್ರಶಂಸಾ ಪತ್ರ!

Parliament Sessions
ಪ್ರಮುಖ ಸುದ್ದಿ53 mins ago

Parliament Sessions : ರಾಹುಲ್ ಗಾಂಧಿಯಿಂದ ಹಿಂದೂಗಳಿಗೆ ಅವಮಾನ: ಬಿಜೆಪಿ ಆರೋಪ

Reliance Jio
ಕರ್ನಾಟಕ1 hour ago

Reliance Jio: ಮೊಬೈಲ್‌ ಶುಲ್ಕ ಏರಿಕೆ; ಯಾವ ಕಂಪನಿಯ ಪ್ಲ್ಯಾನ್‌ ಸೂಕ್ತ?

Parliament Sessions
ದೇಶ1 hour ago

Parliament Sessions: ಮೋದಿ ಆತ್ಮದ ಜೊತೆ ಪರಮಾತ್ಮನ ಸಂವಹನ; ರಾಹುಲ್‌ ಗಾಂಧಿ ವ್ಯಂಗ್ಯ

MUDA site scandal
ಕರ್ನಾಟಕ1 hour ago

MUDA site scandal: ಮುಡಾ ನಿವೇಶನಗಳ ಹಂಚಿಕೆ ರದ್ದು; ಬಹುಕೋಟಿ ಹಗರಣದ ತನಿಖೆಗೆ ಸರ್ಕಾರ ಆದೇಶ

Fashion Show News
ಫ್ಯಾಷನ್2 hours ago

Fashion Show News: ಸಿಇಎಸ್‌ ಫ್ಯಾಷನ್‌ ಡಿಸೈನಿಂಗ್‌ ವಿದ್ಯಾರ್ಥಿಗಳ ರ‍್ಯಾಂಪ್‌ ಶೋ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 hours ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ1 day ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು1 day ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ2 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ2 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ3 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು4 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

ಟ್ರೆಂಡಿಂಗ್‌