Best Company of 2023: 'ಟೈಮ್' 100 ಬೆಸ್ಟ್‌ ಕಂಪನಿಗಳ ಲಿಸ್ಟ್‌ನಲ್ಲಿ ಭಾರತದ ಏಕೈಕ ಬೆಂಗಳೂರಿನ ಕಂಪನಿ! - Vistara News

ದೇಶ

Best Company of 2023: ‘ಟೈಮ್’ 100 ಬೆಸ್ಟ್‌ ಕಂಪನಿಗಳ ಲಿಸ್ಟ್‌ನಲ್ಲಿ ಭಾರತದ ಏಕೈಕ ಬೆಂಗಳೂರಿನ ಕಂಪನಿ!

Best Company of 2023: ಪ್ರತಿಷ್ಠಿತ ಟೈಮ್ ಮ್ಯಾಗಜಿನ್ ಜಗತ್ತಿನ ಟಾಪ್ 100 ಅತ್ಯುತ್ತಮ ಕಂಪನಿಗಳ ಪಟ್ಟಿಯನ್ನು ಪ್ರಕಟಿಸಿದೆ.

VISTARANEWS.COM

on

7.3 percent decline in Infosys net profit, 1.3 percent increase in revenue
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಪ್ರತಿಷ್ಠಿತ ಟೈಮ್ ಮ್ಯಾಗ್‌ಜಿನ್ (TIME Magazine) 2023ರ ಸಾಲಿನ ಜಗತ್ತಿನ ಅತ್ಯುತ್ತಮ 100 ಕಂಪನಿಗಳ ಪಟ್ಟಿಯನ್ನು (World’s Best 100 Companies List) ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿ ಇನ್ಫೋಸಿಸ್ ಮಾತ್ರ ಸ್ಥಾನ ಪಡೆದ ಭಾರತದ ಏಕೈಕ ಕಂಪನಿಯಾಗಿದೆ(Infosys – Only Indian Company). ಕನ್ನಡಿಗರಾದ ಎನ್ ಆರ್ ನಾರಾಯಣಮೂರ್ತಿ ಅವರ ಈ ಕಂಪನಿಯ ಸಹ ಸಂಸ್ಥಾಪಕರು. ಮೈಕ್ರೋಸಾಫ್ಟ್(Microsoft), ಆ್ಯಪಲ್ (Apple) ಮತ್ತು ಅಲ್ಪಾಬೆಟ್ (Alphabet) ಈ ಪಟ್ಟಿಯ ಅಗ್ರ ಮೂರು ಸ್ಥಾನಗಳನ್ನು ಪಡೆದುಕೊಂಡಿವೆ(Best Company of 2023).

ಟೈಮ್ ಮ್ಯಾಗಜಿನ್ ಪ್ರಕಾರ ಸುಸ್ಥಿರತೆಯ ಪ್ರಕಾರ ಇನ್ಫೋಸಿಸ್ 135 ಹಾಗೂ ಉದ್ಯೋಗಿಗಳ ತೃಪ್ತಿಯ ವಿಷಯದಲ್ಲಿ ಕಂಪನಿಯು 103 ನೇ ಸ್ಥಾನದಲ್ಲಿದೆ. ಹಾಗೆಯೇ, ಕಂಪನಿಯ ಬೆಳವಣಿಗೆಯ ದರವು ಹೆಚ್ಚಾಗಿದೆ. ಇನ್ಫೋಸಿಸ್ ವಿಶ್ವದ ಅಗ್ರ 3 ವೃತ್ತಿಪರ ಸೇವಾ ಕಂಪನಿಗಳಲ್ಲಿ ಒಂದಾಗಿದೆ ಎಂದು ತಿಳಿಸಲಾಗಿದೆ.

ಆದಾಯದ ಸೂತ್ರವನ್ನು ಆಧರಿಸಿದ ಸ್ಟ್ಯಾಟಿಸ್ಟಾ ಮತ್ತು ಟೈಮ್‌ನಿಂದ ವಿಶ್ವದ ಅತ್ಯುತ್ತಮ ಕಂಪನಿಗಳ 750ರ ಹೊಸ ಅಂಕಿಅಂಶಗಳ ಶ್ರೇಯಾಂಕದಲ್ಲಿ ಮೈಕ್ರೋಸಾಫ್ಟ್, ಆ್ಯಪಲ್, ಆಲ್ಫಾಬೆಟ್ (ಗೂಗಲ್ ಮಾಲೀಕತ್ವದ ಕಂಪನಿ) ಮತ್ತು ಮೆಟಾ ಪ್ಲಾಟ್‌ಫಾರ್ಮ್‌ಗಳು (ಫೇಸ್‌ಬುಕ್) ಅಗ್ರ ನಾಲ್ಕು ಕಂಪನಿಗಳಾಗಿವೆ. ಬೆಳವಣಿಗೆ, ಉದ್ಯೋಗಿ ತೃಪ್ತಿ ಸಮೀಕ್ಷೆಗಳು ಮತ್ತು ಕಠಿಣ ಪರಿಸರ, ಸಾಮಾಜಿಕ ಮತ್ತು ಕಾರ್ಪೊರೇಟ್ ಆಡಳಿತ ಮುಂತಾದ ಸಂಗತಿಗಳನ್ನು ಆಧರಿಸಿ ಈ ಪಟ್ಟಿಯನ್ನು ಸಿದ್ದಪಡಿಸಲಾಗಿದೆ ಎಂದು ಟೈಮ್ ಮ್ಯಾಗಜಿನ್ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಸುದ್ದಿಯನ್ನೂ ಓದಿ: Rafael Nadal: ಇನ್ಫೋಸಿಸ್​ಗೆ ಟೆನಿಸ್​ ದಿಗ್ಗಜ ರಫೆಲ್‌ ನಡಾಲ್‌​ ರಾಯಭಾರಿ

750 ಕಂಪನಿಗಳ ಪಟ್ಟಿಯಲ್ಲಿ ಇನ್ಫೋಸಿಸ್ ಹೊರತಾಗಿ ಭಾರತದ 7 ಕಂಪನಿಗಳಿವೆ. ದೈತ್ಯ ಟೆಕ್ ಕಂಪನಿ ವಿಪ್ರೋ ಪಟ್ಟಿಯಲ್ಲಿ 174ನೇ ಸ್ಥಾನದಲ್ಲಿದ್ದರೆ, ಆನಂದ್ ಮಹೀಂದ್ರಾ ನೇತೃತ್ವದ ಮಹೀಂದ್ರಾ ಗ್ರೂಪ್ 210ನೇ ಸ್ಥಾನದಲ್ಲಿದೆ. ರಿಲಯನ್ಸ್ ಇಂಡಸ್ಟ್ರೀಸ್ 248 ಮತ್ತು ಎಚ್‌ಸಿಎಲ್ ಟೆಕ್ನಾಲಜೀಸ್ 262ನೇ ಸ್ಥಾನದಲ್ಲಿವೆ. ಎಚ್‌ಡಿಎಫ್‌ಸಿ ಬ್ಯಾಂಕ್ 418ನೇ ಶ್ರೇಯಾಂಕದಲ್ಲಿ, ಡಬ್ಲ್ಯುಎನ್‌ಎಸ್ ಗ್ಲೋಬಲ್ ಸರ್ವಿಸಸ್ 596, ಐಟಿಸಿ 672ನೇ ಸ್ಥಾನದಲ್ಲಿವೆ ಎಂದು ಟೈಮ್ ಮ್ಯಾಗಜಿನ್ ತಿಳಿಸಿದೆ.

ವಿದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Lok Sabha Election: ಮತ ಚಲಾಯಿಸಿದ ರಾಷ್ಟ್ರಪತಿ ಮುರ್ಮು, ಸೋನಿಯಾ, ರಾಹುಲ್;‌ ಮತಕ್ಕಾಗಿ ಸರ್ಟಿಫಿಕೇಟ್ ಪಡೆದ ಜೈಶಂಕರ್‌!

Lok Sabha Election 2024: ದಿಲ್ಲಿಯ ಗಣ್ಯ ಮತಗಟ್ಟೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಗಮಿಸಿ ಮತ ಚಲಾಯಿಸಿದರು. ಇನ್ನೊಂದು ಮತಗಟ್ಟೆಯಲ್ಲಿ ಕಾಂಗ್ರೆಸ್‌ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿ ಮತ ಚಲಾಯಿಸಿ, ಇಂಕ್‌ ಹಾಕಿದ ತಮ್ಮ ಬೆರಳುಗಳನ್ನು ಪ್ರದರ್ಶಿಸಿದರು. ಪ್ರಿಯಾಂಕ ಗಾಂಧಿ ಅವರ ಮಕ್ಕಳಾದ ರೆಹಾನ್‌ ಮತ್ತು ಮಿರಾಯಾ ಕೂಡ ತಮ್ಮ ಮತಗಳನ್ನು ಚಲಾಯಿಸಿದರು.

VISTARANEWS.COM

on

lok sabha election 2024 jaishankar rahul sonia murmu
Koo

ಹೊಸದಿಲ್ಲಿ: ಇಂದು ನಡೆಯುತ್ತಿರುವ ಲೋಕಸಭೆ ಚುನಾವಣೆ (Lok Sabha Election 2024) 6ನೇ ಹಂತದ ಮತದಾನದಲ್ಲಿ (voting) ಈವರೆಗೆ ಹಲವು ಗಣ್ಯರು ಮತ ಚಲಾಯಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu), ಉಪರಾಷ್ಟ್ರಪತಿ ಜಗದೀಪ್‌ ಧನ್‌ಕರ್‌, ಕಾಂಗ್ರೆಸ್‌ ಮುಖಂಡರಾದ ಸೋನಿಯಾ ಗಾಂಧಿ (Sonia Gandhi), ರಾಹುಲ್‌ ಗಾಂಧಿ (Rahul Gandhi) ತಮ್ಮ ಮತ ಚಲಾಯಿಸಿದರು.

ದಿಲ್ಲಿಯ ಗಣ್ಯ ಮತಗಟ್ಟೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಗಮಿಸಿ ಮತ ಚಲಾಯಿಸಿದರು. ಇನ್ನೊಂದು ಮತಗಟ್ಟೆಯಲ್ಲಿ ಕಾಂಗ್ರೆಸ್‌ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿ ಮತ ಚಲಾಯಿಸಿ, ಇಂಕ್‌ ಹಾಕಿದ ತಮ್ಮ ಬೆರಳುಗಳನ್ನು ಪ್ರದರ್ಶಿಸಿದರು. ಪ್ರಿಯಾಂಕ ಗಾಂಧಿ ಹಾಗೂ ಅವರ ಮಕ್ಕಳಾದ ರೆಹಾನ್‌ ಮತ್ತು ಮಿರಾಯಾ ಕೂಡ ತಮ್ಮ ಮತಗಳನ್ನು ಚಲಾಯಿಸಿದರು.

ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಮತ ಚಲಾಯಿಸಿ, “ಮತದಾನವು ಒಂದು ಜವಾಬ್ದಾರಿ ಮತ್ತು ಅಧಿಕಾರವಾಗಿದೆ. ಭಾರತವು ವಿಶ್ವದ ಅತ್ಯಂತ ವೈವಿಧ್ಯಮಯ, ಸಕ್ರಿಯ ಮತ್ತು ಪರಿಣಾಮಕಾರಿ ಪ್ರಜಾಪ್ರಭುತ್ವವಾಗಿದೆ” ಎಂದು ಹೇಳಿದರು. ಮಾಜಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರೂ ಮತ ಹಾಕಿದರು.

ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ದೆಹಲಿಯಲ್ಲಿ ಮತ ಚಲಾಯಿಸಿದರು. ತಮ್ಮ ಗೊತ್ತುಪಡಿಸಿದ ಮತಗಟ್ಟೆಯಲ್ಲಿ ಮೊದಲ ಪುರುಷ ಮತದಾರರಾಗಿದ್ದ ಕಾರಣ ಅವರು ಈ ಮತದಾನಕ್ಕಾಗಿ ಪ್ರಮಾಣಪತ್ರವನ್ನು ಸಹ ಪಡೆದರು. “ಈ ಬೂತ್‌ನಲ್ಲಿ ನಾನು ಮೊದಲ ಪುರುಷ ಮತದಾರನಾಗಿದ್ದೇನೆ” ಎಂದು ಜೈಶಂಕರ್ ತಮ್ಮ ಪ್ರಮಾಣಪತ್ರವನ್ನು ಹಿಡಿದುಕೊಂಡು ಫೋಟೋ ತೆಗೆಸಿಕೊಂಡರಲ್ಲದೆ, ಛಾಯಾಚಿತ್ರವನ್ನು ತಮ್ಮ x ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇದಕ್ಕೂ ಮುನ್ನ ಅವರ ಮತಗಟ್ಟೆಯ ವಿಚಾರದಲ್ಲಿ ಗೊಂದಲ ಉಂಟಾಯಿತು. ಮೊದಲು ಬೇರೆ ಮತಗಟ್ಟೆಗೆ ತೆರಲಿದ ಅವರು, ನಂತರ ಸರಿಯಾದ ಮತಗಟ್ಟೆಗೆ ಹೋಗಿ ಮತ ಚಲಾಯಿಸಿದರು. “”ದೇಶಕ್ಕೆ ಇದು ನಿರ್ಣಾಯಕ ಕ್ಷಣವಾಗಿರುವುದರಿಂದ ಜನರು ಹೊರಗೆ ಬಂದು ಮತ ಚಲಾಯಿಸಬೇಕೆಂದು ನಾವು ಬಯಸುತ್ತೇವೆ. ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ನನಗೆ ವಿಶ್ವಾಸವಿದೆ” ಎಂದು ಅವರು ಮತದಾನದ ನಂತರ ಹೇಳಿದರು.

ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ನಲ್ಲಿ, ಪಿಡಿಪಿ ಮುಖ್ಯಸ್ಥೆ ಮತ್ತು ಅನಂತನಾಗ್-ರಜೌರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮೆಹಬೂಬಾ ಮುಫ್ತಿ (Mehabuba Mufti) ಅವರು ಪಕ್ಷದ ಮುಖಂಡರು ಮತ್ತು ಬೆಂಬಲಿಗರೊಂದಿಗೆ ತಮ್ಮ ಕಾರ್ಯಕರ್ತರ ಬಂಧನವನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರು. ಅಧಿಕಾರಿಗಳು ಚುನಾವಣೆಗಳಲ್ಲಿ ಅಕ್ರಮವೆಸಗಿದ್ದಾರೆ ಎಂದು ಆರೋಪಿಸಿದರು. PDP ಪೋಲಿಂಗ್ ಏಜೆಂಟ್‌ಗಳು ಮತ್ತು ಕಾರ್ಯಕರ್ತರನ್ನು ಯಾವುದೇ ಕಾರಣವಿಲ್ಲದೆ ಬಂಧಿಸಲಾಗಿದೆ ಎಂದು ಮುಫ್ತಿ ಹೇಳಿಕೊಂಡಿದ್ದಾರೆ.

9 ಗಂಟೆವರೆಗಿನ ಮತದಾನ ಪ್ರಮಾಣ ಹೀಗಿದೆ:

ಬಿಹಾರ : 9.66
ಹರಿಯಾಣ : 8.31
ಜಮ್ಮು & ಕಾಶ್ಮೀರ : 8.89
ಜಾರ್ಖಂಡ್ : 11.74
ದಿಲ್ಲಿ : 8.94
ಒಡಿಶಾ : 7.43
ಉತ್ತರ ಪ್ರದೇಶ : 12.33
ಪಶ್ಚಿಮ ಬಂಗಾಳ : 16.54

ಯಾವ ರಾಜ್ಯಗಳ ಎಷ್ಟು ಕ್ಷೇತ್ರಗಳಲ್ಲಿ ಮತದಾನ?

ಆರನೇ ಹಂತದಲ್ಲಿ 5.84 ಕೋಟಿ ಪುರುಷರು, 5.29 ಕೋಟಿ ಮಹಿಳೆಯರು, 5120 ತೃತೀಯ ಲಿಂಗಿಗಳು ಸೇರಿ ಒಟ್ಟು 11.13 ಕೋಟಿ ಮತದಾರರು ನೋಂದಣಿ ಮಾಡಿಕೊಂಡಿದ್ದಾರೆ. 8 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ 58 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಬಿಹಾರದ 8 ಸ್ಥಾನಗಳು, ಹರಿಯಾಣದ ಎಲ್ಲ 10 ಸ್ಥಾನ, ಜಾರ್ಖಂಡ್‌ 4, ಜಮ್ಮು-ಕಾಶ್ಮೀರ 1, ದೆಹಲಿಯ ಎಲ್ಲ 7 ಸ್ಥಾನ, ಒಡಿಶಾ 6, ಉತ್ತರ ಪ್ರದೇಶ 14 ಹಾಗೂ ಪಶ್ಚಿಮ ಬಂಗಾಳದ 8 ಕ್ಷೇತ್ರಗಳಲ್ಲಿ ವೋಟಿಂಗ್‌ ನಡೆಯಲಿದೆ. ಒಟ್ಟು 889 ಅಭ್ಯರ್ಥಿಗಳು ಚುನಾವಣಾ ಅಖಾಡದಲ್ಲಿ ಇದ್ದಾರೆ.

ಇದನ್ನೂ ಓದಿ: Lok Sabha Election: 58 ಕ್ಷೇತ್ರಗಳಲ್ಲಿ 6ನೇ ಹಂತದ ಮತದಾನ ಆರಂಭ; ಜೈಶಂಕರ್‌ ಮತಗಟ್ಟೆ ಗೊಂದಲ, ಮುಫ್ತಿ ಪ್ರತಿಭಟನೆ

Continue Reading

Lok Sabha Election 2024

Lok Sabha Election: 58 ಕ್ಷೇತ್ರಗಳಲ್ಲಿ 6ನೇ ಹಂತದ ಮತದಾನ ಆರಂಭ; ಜೈಶಂಕರ್‌ ಮತಗಟ್ಟೆ ಗೊಂದಲ, ಮುಫ್ತಿ ಪ್ರತಿಭಟನೆ

Lok Sabha Election: ಸಾರ್ವತ್ರಿಕ ಚುನಾವಣೆಯ ಆರನೇ ಹಂತದಲ್ಲಿ ವಿದೇಶಾಂಗ ವ್ಯವಹಾರ ಸಚಿವ ಡಾ. ಎಸ್. ಜೈಶಂಕರ್ (S Jaishankar) ಅವರು ತಮ್ಮ ಮತಗಟ್ಟೆಯಲ್ಲಿ ಮೊದಲಿಗರಾಗಿ ಮತದಾನ ಮಾಡಿದರು. ಇದಕ್ಕೂ ಮುನ್ನ ಅವರ ಮತಗಟ್ಟೆಯ ವಿಚಾರದಲ್ಲಿ ಗೊಂದಲ ಉಂಟಾಯಿತು.

VISTARANEWS.COM

on

lok sabha election 2024 jaishankar mufti
Koo

ಬೆಂಗಳೂರು: ರಾಜಧಾನಿ ದಿಲ್ಲಿ (Delhi) ಸೇರಿದಂತೆ ಎಂಟು ರಾಜ್ಯಗಳಲ್ಲಿ ಲೋಕಸಭೆ ಚುನಾವಣೆ (Lok Sabha Election 2024) 6ನೇ ಹಂತದ ಮತದಾನ (voting) ಇಂದು ಮುಂಜಾನೆ 7 ಗಂಟೆಯಿಂದ ಆರಂಭವಾಗಿದೆ. 8 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ವ್ಯಾಪ್ತಿಯ 58 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನ ಆರಂಭವಾಯಿತು.

ಸಾರ್ವತ್ರಿಕ ಚುನಾವಣೆಯ ಆರನೇ ಹಂತದಲ್ಲಿ ವಿದೇಶಾಂಗ ವ್ಯವಹಾರ ಸಚಿವ ಡಾ. ಎಸ್. ಜೈಶಂಕರ್ (S Jaishankar) ಅವರು ತಮ್ಮ ಮತಗಟ್ಟೆಯಲ್ಲಿ ಮೊದಲಿಗರಾಗಿ ಮತದಾನ ಮಾಡಿದರು. ಇದಕ್ಕೂ ಮುನ್ನ ಅವರ ಮತಗಟ್ಟೆಯ ವಿಚಾರದಲ್ಲಿ ಗೊಂದಲ ಉಂಟಾಯಿತು. ನಂತರ ಸರಿಯಾದ ಮತಗಟ್ಟೆಗೆ ಹೋಗಿ ಮತ ಚಲಾಯಿಸಿದರು. “ನಾವು ನಮ್ಮ ಮತವನ್ನು ಚಲಾಯಿಸಿದ್ದೇವೆ. ಈ ಮತಗಟ್ಟೆಯಲ್ಲಿ ಮೊದಲ ಪುರುಷ ಮತದಾರ ಎಂಬ ಸವಲತ್ತು ನನಗೆ ಸಿಕ್ಕಿತು. ಪ್ರತಿಯೊಬ್ಬರೂ ತಮ್ಮ ಮತ ಚಲಾಯಿಸುವ ಮೂಲಕ ದೇಶಕ್ಕಾಗಿ ಈ ನಿರ್ಣಾಯಕ ಕ್ಷಣದಲ್ಲಿ ಭಾಗವಹಿಸಬೇಕು” ಎಂದವರು ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ನಲ್ಲಿ, ಪಿಡಿಪಿ ಮುಖ್ಯಸ್ಥೆ ಮತ್ತು ಅನಂತನಾಗ್-ರಜೌರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮೆಹಬೂಬಾ ಮುಫ್ತಿ (Mehabuba Mufti) ಅವರು ಪಕ್ಷದ ಮುಖಂಡರು ಮತ್ತು ಬೆಂಬಲಿಗರೊಂದಿಗೆ ತಮ್ಮ ಕಾರ್ಯಕರ್ತರ ಬಂಧನವನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರು. ಅಧಿಕಾರಿಗಳು ಚುನಾವಣೆಗಳಲ್ಲಿ ಅಕ್ರಮವೆಸಗಿದ್ದಾರೆ ಎಂದು ಆರೋಪಿಸಿದರು. PDP ಪೋಲಿಂಗ್ ಏಜೆಂಟ್‌ಗಳು ಮತ್ತು ಕಾರ್ಯಕರ್ತರನ್ನು ಯಾವುದೇ ಕಾರಣವಿಲ್ಲದೆ ಬಂಧಿಸಲಾಗಿದೆ ಎಂದು ಮುಫ್ತಿ ಹೇಳಿಕೊಂಡಿದ್ದಾರೆ.

ಸುಷ್ಮಾ ಸ್ವರಾಜ್‌ ಪುತ್ರಿ ಬಾನ್ಸುರಿ ಸ್ವರಾಜ್‌, ಮನೋಹರ ಲಾಲ್‌ ಖಟ್ಟರ್‌, ಕನ್ಹಯ್ಯ ಕುಮಾರ್‌ ಸೇರಿ ಹಲವು ಪ್ರಮುಖ ನಾಯಕರ ಭವಿಷ್ಯವು ಶನಿವಾರ ಮತಯಂತ್ರಗಳಲ್ಲಿ ಭದ್ರವಾಗಲಿದೆ. ಶಾಂತಿಯುತ ಹಾಗೂ ಪಾರದರ್ಶಕ ಮತದಾನಕ್ಕಾಗಿ ಚುನಾವಣೆ ಆಯೋಗವು (Election Commission) ಸಕಲ ಸಿದ್ಧತೆ ಮಾಡಿಕೊಂಡಿದ್ದು, ಸೂಕ್ಷ್ಮ ಮತಗಟ್ಟೆಗಳಲ್ಲಿ ಹೆಚ್ಚಿನ ಭದ್ರತೆ ಕೈಗೊಂಡಿದೆ.

ಯಾವ ರಾಜ್ಯಗಳ ಎಷ್ಟು ಕ್ಷೇತ್ರಗಳಲ್ಲಿ ಮತದಾನ?

ಆರನೇ ಹಂತದಲ್ಲಿ 5.84 ಕೋಟಿ ಪುರುಷರು, 5.29 ಕೋಟಿ ಮಹಿಳೆಯರು, 5120 ತೃತೀಯ ಲಿಂಗಿಗಳು ಸೇರಿ ಒಟ್ಟು 11.13 ಕೋಟಿ ಮತದಾರರು ನೋಂದಣಿ ಮಾಡಿಕೊಂಡಿದ್ದಾರೆ. 8 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ 58 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಬಿಹಾರದ 8 ಸ್ಥಾನಗಳು, ಹರಿಯಾಣದ ಎಲ್ಲ 10 ಸ್ಥಾನ, ಜಾರ್ಖಂಡ್‌ 4, ಜಮ್ಮು-ಕಾಶ್ಮೀರ 1, ದೆಹಲಿಯ ಎಲ್ಲ 7 ಸ್ಥಾನ, ಒಡಿಶಾ 6, ಉತ್ತರ ಪ್ರದೇಶ 14 ಹಾಗೂ ಪಶ್ಚಿಮ ಬಂಗಾಳದ 8 ಕ್ಷೇತ್ರಗಳಲ್ಲಿ ವೋಟಿಂಗ್‌ ನಡೆಯಲಿದೆ. ಒಟ್ಟು 889 ಅಭ್ಯರ್ಥಿಗಳು ಚುನಾವಣಾ ಅಖಾಡದಲ್ಲಿ ಇದ್ದಾರೆ.

6ನೇ ಹಂತದಲ್ಲಿ ಕಣಕ್ಕಿಳಿದ ಪ್ರಮುಖ ಅಭ್ಯರ್ಥಿಗಳು

ಬಾನ್ಸುರಿ ಸ್ವರಾಜ್: ನವದೆಹಲಿ ಕ್ಷೇತ್ರ
ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಅವರ ಪುತ್ರಿ ಬಾನ್ಸುರಿ ಸ್ವರಾಜ್‌ ಅವರು ನವದೆಹಲಿ ಲೋಕಸಭಾ ಅಭ್ಯರ್ಥಿಯಾಗಿದ್ದು, ಎಎಪಿಯ ಸೋಮನಾಥ್ ಭಾರ್ತಿ ವಿರುದ್ಧ ಸ್ಪರ್ಧಿಸುತ್ತಿದ್ದಾರೆ. ಹಾಲಿ ಸಂಸದೆ ಮೀನಾಕ್ಷಿ ಲೇಖಿ ಬದಲು ಬಾನ್ಸುರಿಗೆ ಬಿಜೆಪಿ ಟಿಕೆಟ್ ನೀಡಿದೆ.

ಮನೇಕಾ ಗಾಂಧಿ: ಸುಲ್ತಾನ್‌ಪುರ
ಮನೇಕಾ ಗಾಂಧಿ ಸುಲ್ತಾನ್‌ಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಸಮಾಜವಾದಿ ಪಕ್ಷದ ರಾಮ್ ಭುಲ್ ನಿಶಾದ್ ಮತ್ತು ಬಹುಜನ ಸಮಾಜ ಪಕ್ಷದ ಉದಯ್ ರಾಜ್ ವರ್ಮಾ ವಿರುದ್ಧ ಕಣಕ್ಕಿಳಿದಿದ್ದಾರೆ.

Maneka Gandhi

ನವೀನ್ ಜಿಂದಾಲ್: ಕುರುಕ್ಷೇತ್ರ
6ನೇ ಹಂತದ ಚುನಾವಣೆಯಲ್ಲಿ ಹರಿಯಾಣದ ಕುರುಕ್ಷೇತ್ರ ತ್ರಿಕೋನ ಸ್ಪರ್ಧೆಗೆ ಸಾಕ್ಷಿಯಾಗಲಿದೆ. ಬಿಜೆಪಿ ಅಭ್ಯರ್ಥಿ ನವೀನ್ ಜಿಂದಾಲ್, ಎಎಪಿಯ ಸುಶೀಲ್ ಗುಪ್ತಾ ಮತ್ತು ಇಂಡಿಯನ್ ನ್ಯಾಷನಲ್ ಲೋಕದಳದ (ಐಎನ್‌ಎಲ್‌ಡಿ) ಅಭಯ್ ಸಿಂಗ್ ಚೌಟಾಲಾ ವಿರುದ್ಧ ಕಣಕ್ಕಿಳಿದಿದ್ದಾರೆ. ಈ ವರ್ಷದ ಮಾರ್ಚ್‌ನಲ್ಲಿ ಕಾಂಗ್ರೆಸ್‌ನಿಂದ ಬಿಜೆಪಿಗೆ ಜಿಂದಾಲ್ ಬಂದಿದ್ದಾರೆ

ಅಭಿಜಿತ್ ಗಂಗೋಪಾಧ್ಯಾಯ: ತಮ್ಲುಕ್ ಕ್ಷೇತ್ರ
ಕಲ್ಕತ್ತಾ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ಅಭಿಜಿತ್ ಗಂಗೋಪಾಧ್ಯಾಯ ಪಶ್ಚಿಮ ಬಂಗಾಳದ ತಮ್ಲುಕ್ ಕ್ಷೇತ್ರದಿಂದ ಬಿಜೆಪಿ ಪಕ್ಷದ ಅಭ್ಯರ್ಥಿ. ಟಿಎಂಸಿಯ ದೇಬಂಗ್ಶು ಭಟ್ಟಾಚಾರ್ಯ ಮತ್ತು ಸಿಪಿಐ(ಎಂ) ನಿಂದ ಸಯಾನ್ ಬ್ಯಾನರ್ಜಿ ವಿರುದ್ಧ ಸ್ಪರ್ಧಿಸಿದ್ದಾರೆ. ಗಂಗೋಪಾಧ್ಯಾಯ ಅವರು ಕೋಲ್ಕೊತಾ ಹೈಕೋರ್ಟ್‌ನ ನ್ಯಾಯಮೂರ್ತಿ ಹುದ್ದೆಗೆ ರಾಜೀನಾಮೆ ನೀಡಿ ಮಾರ್ಚ್‌ನಲ್ಲಿ ಬಿಜೆಪಿ ಸೇರಿದ್ದರು.

ಪ್ರವೀಣ್ ನಿಶಾದ್: ಸಂತ ಕಬೀರ ನಗರ
ಸಂತ ಕಬೀರ್ ನಗರದಲ್ಲಿ ಬಿಜೆಪಿ ಉಸ್ತುವಾರಿ ಪ್ರವೀಣ್ ನಿಶಾದ್, ಸಮಾಜವಾದಿ ಪಕ್ಷದ ಲಕ್ಷ್ಮೀಕಾಂತ್ ಅಲಿಯಾಸ್ ಪಪ್ಪು ನಿಶಾದ್ ವಿರುದ್ಧ ಸ್ಪರ್ಧಿಸುತ್ತಿದ್ದಾರೆ.

ಮನೋಜ್ ತಿವಾರಿ VS ಮತ್ತು ಕನ್ಹಯ್ಯ ಕುಮಾರ್
ಈಶಾನ್ಯ ದೆಹಲಿ ಕ್ಷೇತ್ರದಲ್ಲಿ ಇಬ್ಬರು ಪ್ರಮುಖ ಅಭ್ಯರ್ಥಿಗಳ ವಿರುದ್ಧ ಕದನ ನಡೆಯಲಿದೆ. ಹಾಲಿ ಸಂಸದ ಮನೋಜ್ ತಿವಾರಿ ಮತ್ತು ಕಾಂಗ್ರೆಸ್‌ನ ಕನ್ಹಯ್ಯ ಕುಮಾರ್ ಕಣದಲ್ಲಿದ್ದಾರೆ. 2019ರ ಚುನಾವಣೆಯಲ್ಲಿ ಬಿಜೆಪಿ ಗೆದ್ದಿದ್ದ ಏಳು ಸಂಸದರ ಪೈಕಿ ಎಲ್ಲ ಆರು ಸಂಸದರನ್ನು ಕೈಬಿಟ್ಟರೆ, ತಿವಾರಿ ಮಾತ್ರ ಕಣದಲ್ಲಿದ್ದಾರೆ.

Kanhaiya Kumar

ಸಂಬಿತ್ ಪಾತ್ರಾ: ಪುರಿ ಕ್ಷೇತ್ರ
ಒಡಿಶಾದ ಪುರಿ ಕ್ಷೇತ್ರದಿಂದ ಸಂಬಿತ್ ಪಾತ್ರ ಸ್ಪರ್ಧಿಸುತ್ತಿದ್ದಾರೆ. ಬಿಜೆಡಿಯ ಅರೂಪ್ ಪಟ್ನಾಯಕ್ ಮತ್ತು ಕಾಂಗ್ರೆಸ್‌ನ ಜಯನಾರಾಯಣ ಪಟ್ನಾಯಕ್ ವಿರುದ್ಧ ಸ್ಪರ್ಧೆ ಮಾಡುತ್ತಿದ್ದಾರೆ.

ದಿನೇಶ್ ಲಾಲ್ ಯಾದವ್ VS ಧರ್ಮೇಂದ್ರ ಯಾದವ್
ಅಜಂಗಢ ಕ್ಷೇತ್ರದಲ್ಲಿ ಸಂಸದ ದಿನೇಶ್ ಲಾಲ್ ಯಾದವ್ ನಿರಾಹುವಾ, ಉತ್ತರ ಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್ ಅವರ ಸೋದರ ಸಂಬಂಧಿ ಸಮಾಜವಾದಿ ಪಕ್ಷದ ಧರ್ಮೇಂದ್ರ ಯಾದವ್ ವಿರುದ್ಧ ಸ್ಪರ್ಧಿಸುತ್ತಿದ್ದಾರೆ. 2019ರಲ್ಲಿ ಅಜಂಗಢ ಕ್ಷೇತ್ರವನ್ನು ಅಖಿಲೇಶ್ ಯಾದವ್ ಗೆದ್ದಿದ್ದರು.

ಮನೋಹರ್ ಲಾಲ್ ಖಟ್ಟರ್: ಕರ್ನಾಲ್
ಬಿಜೆಪಿ ಅಭ್ಯರ್ಥಿ ಮತ್ತು ಹರಿಯಾಣದ ಮಾಜಿ ಸಿಎಂ ಮನೋಹರ್ ಲಾಲ್ ಖಟ್ಟರ್, ಕರ್ನಾಲ್ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ದಿವ್ಯಾoಶು ಬುಧಿರಾಜ ವಿರುದ್ಧ ಸ್ಪರ್ಧಿಸಿದ್ದಾರೆ.

ಅನಂತ್ ನಾಗ್ -ರಾಜೌರಿ ಕ್ಷೇತ್ರ
ಜಮ್ಮು – ಕಾಶ್ಮೀರದ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಅವರು ಇಲ್ಲಿ ಸ್ಪರ್ಧೆಗೆ ಇಳಿದಿದ್ದಾರೆ. ಬಿಜೆಪಿಯು ಇಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ.

ಇದನ್ನೂ ಓದಿ: Lok Sabha Election : ಲೊಕಸಭಾ ಚುನಾವಣೆಯ ಎರಡನೇ ಹಂತದ 88 ಕ್ಷೇತ್ರಗಳಲ್ಲಿ ಶೇ 60.96 ಮತದಾನ

Continue Reading

ದೇಶ

Lok Sabha Election: ಇಂದು 6ನೇ ಹಂತದಲ್ಲಿ 58 ಕ್ಷೇತ್ರಗಳಿಗೆ ಮತದಾನ; ಖಟ್ಟರ್‌, ಕನ್ಹಯ್ಯ ಸೇರಿ ಹಲವರ ಭವಿಷ್ಯ ನಿರ್ಧಾರ

Lok Sabha Election: ಶನಿವಾರ ಆರನೇ ಹಂತದ ಮತದಾನ ನಡೆಯಲಿದೆ. ಸುಷ್ಮಾ ಸ್ವರಾಜ್‌ ಪುತ್ರಿ ಬಾನ್ಸುರಿ ಸ್ವರಾಜ್‌, ಮನೋಹರ ಲಾಲ್‌ ಖಟ್ಟರ್‌, ಕನ್ಹಯ್ಯ ಕುಮಾರ್‌ ಸೇರಿ ಹಲವು ಪ್ರಮುಖ ನಾಯಕರ ಭವಿಷ್ಯವು ಶನಿವಾರ ಮತಯಂತ್ರಗಳಲ್ಲಿ ಭದ್ರವಾಗಲಿದೆ. ಶಾಂತಿಯುತ ಹಾಗೂ ಪಾರದರ್ಶಕ ಮತದಾನಕ್ಕಾಗಿ ಚುನಾವಣೆ ಆಯೋಗವು ಸಕಲ ಸಿದ್ಧತೆ ಮಾಡಿಕೊಂಡಿದೆ.

VISTARANEWS.COM

on

Lok Sabha Election
Koo

ನವದೆಹಲಿ: ಲೋಕಸಭೆ ಚುನಾವಣೆಯು (Lok Sabha Election 2024) ಅಂತಿಮ ಹಂತ ತಲುಪಿದ್ದು, ಶನಿವಾರ (ಮೇ 26) 58 ಕ್ಷೇತ್ರಗಳಲ್ಲಿ 6ನೇ ಹಂತದ ಮತದಾನ (6th Phase Voting) ನಡೆಯಲಿದೆ. ಸುಷ್ಮಾ ಸ್ವರಾಜ್‌ ಪುತ್ರಿ ಬಾನ್ಸುರಿ ಸ್ವರಾಜ್‌, ಮನೋಹರ ಲಾಲ್‌ ಖಟ್ಟರ್‌, ಕನ್ಹಯ್ಯ ಕುಮಾರ್‌ ಸೇರಿ ಹಲವು ಪ್ರಮುಖ ನಾಯಕರ ಭವಿಷ್ಯವು ಶನಿವಾರ ಮತಯಂತ್ರಗಳಲ್ಲಿ ಭದ್ರವಾಗಲಿದೆ. ಶಾಂತಿಯುತ ಹಾಗೂ ಪಾರದರ್ಶಕ ಮತದಾನಕ್ಕಾಗಿ ಚುನಾವಣೆ ಆಯೋಗವು (Election Commission) ಸಕಲ ಸಿದ್ಧತೆ ಮಾಡಿಕೊಂಡಿದ್ದು, ಸೂಕ್ಷ್ಮ ಮತಗಟ್ಟೆಗಳಲ್ಲಿ ಹೆಚ್ಚಿನ ಭದ್ರತೆ ಕೈಗೊಂಡಿದೆ.

ಯಾವ ರಾಜ್ಯಗಳ ಎಷ್ಟು ಕ್ಷೇತ್ರಗಳಲ್ಲಿ ಮತದಾನ?

ಆರನೇ ಹಂತದಲ್ಲಿ 5.84 ಕೋಟಿ ಪುರುಷರು, 5.29 ಕೋಟಿ ಮಹಿಳೆಯರು, 5120 ತೃತೀಯ ಲಿಂಗಿಗಳು ಸೇರಿ ಒಟ್ಟು 11.13 ಕೋಟಿ ಮತದಾರರು ನೋಂದಣಿ ಮಾಡಿಕೊಂಡಿದ್ದಾರೆ. 8 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ 58 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಬಿಹಾರದ 8 ಸ್ಥಾನಗಳು, ಹರಿಯಾಣದ ಎಲ್ಲ 10 ಸ್ಥಾನ, ಜಾರ್ಖಂಡ್‌ 4, ಜಮ್ಮು-ಕಾಶ್ಮೀರ 1, ದೆಹಲಿಯ ಎಲ್ಲ 7 ಸ್ಥಾನ, ಒಡಿಶಾ 6, ಉತ್ತರ ಪ್ರದೇಶ 14 ಹಾಗೂ ಪಶ್ಚಿಮ ಬಂಗಾಳದ 8 ಕ್ಷೇತ್ರಗಳಲ್ಲಿ ವೋಟಿಂಗ್‌ ನಡೆಯಲಿದೆ. ಒಟ್ಟು 889 ಅಭ್ಯರ್ಥಿಗಳು ಚುನಾವಣಾ ಅಖಾಡದಲ್ಲಿ ಇದ್ದಾರೆ.

6ನೇ ಹಂತದಲ್ಲಿ ಕಣಕ್ಕಿಳಿದ ಪ್ರಮುಖ ಅಭ್ಯರ್ಥಿಗಳು

ಬಾನ್ಸುರಿ ಸ್ವರಾಜ್: ನವದೆಹಲಿ ಕ್ಷೇತ್ರ
ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಅವರ ಪುತ್ರಿ ಬಾನ್ಸುರಿ ಸ್ವರಾಜ್‌ ಅವರು ನವದೆಹಲಿ ಲೋಕಸಭಾ ಅಭ್ಯರ್ಥಿಯಾಗಿದ್ದು, ಎಎಪಿಯ ಸೋಮನಾಥ್ ಭಾರ್ತಿ ವಿರುದ್ಧ ಸ್ಪರ್ಧಿಸುತ್ತಿದ್ದಾರೆ. ಹಾಲಿ ಸಂಸದೆ ಮೀನಾಕ್ಷಿ ಲೇಖಿ ಬದಲು ಬಾನ್ಸುರಿಗೆ ಬಿಜೆಪಿ ಟಿಕೆಟ್ ನೀಡಿದೆ.

ಮನೇಕಾ ಗಾಂಧಿ: ಸುಲ್ತಾನ್‌ಪುರ
ಮನೇಕಾ ಗಾಂಧಿ ಸುಲ್ತಾನ್‌ಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಸಮಾಜವಾದಿ ಪಕ್ಷದ ರಾಮ್ ಭುಲ್ ನಿಶಾದ್ ಮತ್ತು ಬಹುಜನ ಸಮಾಜ ಪಕ್ಷದ ಉದಯ್ ರಾಜ್ ವರ್ಮಾ ವಿರುದ್ಧ ಕಣಕ್ಕಿಳಿದಿದ್ದಾರೆ.

Maneka Gandhi

ನವೀನ್ ಜಿಂದಾಲ್: ಕುರುಕ್ಷೇತ್ರ
6ನೇ ಹಂತದ ಚುನಾವಣೆಯಲ್ಲಿ ಹರಿಯಾಣದ ಕುರುಕ್ಷೇತ್ರ ತ್ರಿಕೋನ ಸ್ಪರ್ಧೆಗೆ ಸಾಕ್ಷಿಯಾಗಲಿದೆ. ಬಿಜೆಪಿ ಅಭ್ಯರ್ಥಿ ನವೀನ್ ಜಿಂದಾಲ್, ಎಎಪಿಯ ಸುಶೀಲ್ ಗುಪ್ತಾ ಮತ್ತು ಇಂಡಿಯನ್ ನ್ಯಾಷನಲ್ ಲೋಕದಳದ (ಐಎನ್‌ಎಲ್‌ಡಿ) ಅಭಯ್ ಸಿಂಗ್ ಚೌಟಾಲಾ ವಿರುದ್ಧ ಕಣಕ್ಕಿಳಿದಿದ್ದಾರೆ. ಈ ವರ್ಷದ ಮಾರ್ಚ್‌ನಲ್ಲಿ ಕಾಂಗ್ರೆಸ್‌ನಿಂದ ಬಿಜೆಪಿಗೆ ಜಿಂದಾಲ್ ಬಂದಿದ್ದಾರೆ

ಅಭಿಜಿತ್ ಗಂಗೋಪಾಧ್ಯಾಯ: ತಮ್ಲುಕ್ ಕ್ಷೇತ್ರ
ಕಲ್ಕತ್ತಾ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ಅಭಿಜಿತ್ ಗಂಗೋಪಾಧ್ಯಾಯ ಪಶ್ಚಿಮ ಬಂಗಾಳದ ತಮ್ಲುಕ್ ಕ್ಷೇತ್ರದಿಂದ ಬಿಜೆಪಿ ಪಕ್ಷದ ಅಭ್ಯರ್ಥಿ. ಟಿಎಂಸಿಯ ದೇಬಂಗ್ಶು ಭಟ್ಟಾಚಾರ್ಯ ಮತ್ತು ಸಿಪಿಐ(ಎಂ) ನಿಂದ ಸಯಾನ್ ಬ್ಯಾನರ್ಜಿ ವಿರುದ್ಧ ಸ್ಪರ್ಧಿಸಿದ್ದಾರೆ. ಗಂಗೋಪಾಧ್ಯಾಯ ಅವರು ಕೋಲ್ಕೊತಾ ಹೈಕೋರ್ಟ್‌ನ ನ್ಯಾಯಮೂರ್ತಿ ಹುದ್ದೆಗೆ ರಾಜೀನಾಮೆ ನೀಡಿ ಮಾರ್ಚ್‌ನಲ್ಲಿ ಬಿಜೆಪಿ ಸೇರಿದ್ದರು.

ಪ್ರವೀಣ್ ನಿಶಾದ್: ಸಂತ ಕಬೀರ ನಗರ
ಸಂತ ಕಬೀರ್ ನಗರದಲ್ಲಿ ಬಿಜೆಪಿ ಉಸ್ತುವಾರಿ ಪ್ರವೀಣ್ ನಿಶಾದ್, ಸಮಾಜವಾದಿ ಪಕ್ಷದ ಲಕ್ಷ್ಮೀಕಾಂತ್ ಅಲಿಯಾಸ್ ಪಪ್ಪು ನಿಶಾದ್ ವಿರುದ್ಧ ಸ್ಪರ್ಧಿಸುತ್ತಿದ್ದಾರೆ.

ಮನೋಜ್ ತಿವಾರಿ VS ಮತ್ತು ಕನ್ಹಯ್ಯ ಕುಮಾರ್
ಈಶಾನ್ಯ ದೆಹಲಿ ಕ್ಷೇತ್ರದಲ್ಲಿ ಇಬ್ಬರು ಪ್ರಮುಖ ಅಭ್ಯರ್ಥಿಗಳ ವಿರುದ್ಧ ಕದನ ನಡೆಯಲಿದೆ. ಹಾಲಿ ಸಂಸದ ಮನೋಜ್ ತಿವಾರಿ ಮತ್ತು ಕಾಂಗ್ರೆಸ್‌ನ ಕನ್ಹಯ್ಯ ಕುಮಾರ್ ಕಣದಲ್ಲಿದ್ದಾರೆ. 2019ರ ಚುನಾವಣೆಯಲ್ಲಿ ಬಿಜೆಪಿ ಗೆದ್ದಿದ್ದ ಏಳು ಸಂಸದರ ಪೈಕಿ ಎಲ್ಲ ಆರು ಸಂಸದರನ್ನು ಕೈಬಿಟ್ಟರೆ, ತಿವಾರಿ ಮಾತ್ರ ಕಣದಲ್ಲಿದ್ದಾರೆ.

Kanhaiya Kumar

ಸಂಬಿತ್ ಪಾತ್ರಾ: ಪುರಿ ಕ್ಷೇತ್ರ
ಒಡಿಶಾದ ಪುರಿ ಕ್ಷೇತ್ರದಿಂದ ಸಂಬಿತ್ ಪಾತ್ರ ಸ್ಪರ್ಧಿಸುತ್ತಿದ್ದಾರೆ. ಬಿಜೆಡಿಯ ಅರೂಪ್ ಪಟ್ನಾಯಕ್ ಮತ್ತು ಕಾಂಗ್ರೆಸ್‌ನ ಜಯನಾರಾಯಣ ಪಟ್ನಾಯಕ್ ವಿರುದ್ಧ ಸ್ಪರ್ಧೆ ಮಾಡುತ್ತಿದ್ದಾರೆ.

ದಿನೇಶ್ ಲಾಲ್ ಯಾದವ್ VS ಧರ್ಮೇಂದ್ರ ಯಾದವ್
ಅಜಂಗಢ ಕ್ಷೇತ್ರದಲ್ಲಿ ಸಂಸದ ದಿನೇಶ್ ಲಾಲ್ ಯಾದವ್ ನಿರಾಹುವಾ, ಉತ್ತರ ಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್ ಅವರ ಸೋದರ ಸಂಬಂಧಿ ಸಮಾಜವಾದಿ ಪಕ್ಷದ ಧರ್ಮೇಂದ್ರ ಯಾದವ್ ವಿರುದ್ಧ ಸ್ಪರ್ಧಿಸುತ್ತಿದ್ದಾರೆ. 2019ರಲ್ಲಿ ಅಜಂಗಢ ಕ್ಷೇತ್ರವನ್ನು ಅಖಿಲೇಶ್ ಯಾದವ್ ಗೆದ್ದಿದ್ದರು.

ಮನೋಹರ್ ಲಾಲ್ ಖಟ್ಟರ್: ಕರ್ನಾಲ್
ಬಿಜೆಪಿ ಅಭ್ಯರ್ಥಿ ಮತ್ತು ಹರಿಯಾಣದ ಮಾಜಿ ಸಿಎಂ ಮನೋಹರ್ ಲಾಲ್ ಖಟ್ಟರ್, ಕರ್ನಾಲ್ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ದಿವ್ಯಾoಶು ಬುಧಿರಾಜ ವಿರುದ್ಧ ಸ್ಪರ್ಧಿಸಿದ್ದಾರೆ.

ಅನಂತ್ ನಾಗ್ -ರಾಜೌರಿ ಕ್ಷೇತ್ರ
ಜಮ್ಮು – ಕಾಶ್ಮೀರದ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಅವರು ಇಲ್ಲಿ ಸ್ಪರ್ಧೆಗೆ ಇಳಿದಿದ್ದಾರೆ. ಬಿಜೆಪಿಯು ಇಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ.

ಇದನ್ನೂ ಓದಿ: Phalodi Satta Bazar: ಚುನಾವಣೆಯಲ್ಲಿ ಮೋದಿ ಹ್ಯಾಟ್ರಿಕ್ ಖಚಿತ; ಸಟ್ಟಾ ಬಜಾರ್‌ ಸಮೀಕ್ಷಾ ವರದಿ ಇಲ್ಲಿದೆ

Continue Reading

ದೇಶ

Narendra Modi: ನನ್ನನ್ನು ನಾಶಪಡಿಸಲು ಯಾರಿಂದಲೂ ಸಾಧ್ಯವಿಲ್ಲ; ಮಮತಾ ಬ್ಯಾನರ್ಜಿಗೆ ಮೋದಿ ಚಾಟಿ

Narendra Modi: ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಜೂನ್‌ 4ರಂದು ಪತನವಾಗುತ್ತದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೀಡಿದ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ ಪ್ರತ್ಯುತ್ತರ ನೀಡಿದ್ದು, “ನನ್ನನ್ನು ಯಾರಿಂದಲೂ ನಾಶಪಡಿಸಲು ಸಾಧ್ಯವಿಲ್ಲ” ಎಂದು ಹೇಳಿದರು.

VISTARANEWS.COM

on

Narendra Modi
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ರಾಜಕೀಯ ನಾಯಕರ ಮಧ್ಯೆ ವಾಕ್ಸಮರ, ವಾಗ್ದಾಳಿ, ಟೀಕೆ, ವ್ಯಂಗ್ಯ ಚುರುಕಾಗಿವೆ. ಇದಕ್ಕೆ ನಿದರ್ಶನ ಎಂಬಂತೆ, “ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಜೂನ್‌ 4ರಂದು ಪತನವಾಗುತ್ತದೆ” ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ನೀಡಿದ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಪ್ರತ್ಯುತ್ತರ ನೀಡಿದ್ದು, “ನನ್ನನ್ನು ಯಾರಿಂದಲೂ ನಾಶಪಡಿಸಲು ಸಾಧ್ಯವಿಲ್ಲ” ಎಂದು ಹೇಳಿದರು.

ಎನ್‌ಡಿಟಿವಿಗೆ ನೀಡಿದ ಸಂದರ್ಶನದ ವೇಳೆ ಮಮತಾ ಬ್ಯಾನರ್ಜಿ ಹೇಳಿಕೆ ಕುರಿತ ಪ್ರಶ್ನೆಗೆ ಅವರು ಉತ್ತರಿಸಿದರು. “ಮಮತಾ ಬ್ಯಾನರ್ಜಿ ಅವರು ಹೇಳಿದ್ದು ನಿಜ. ಜೂನ್‌ 4ರಂದು ಲೋಕಸಭೆ ಅವಧಿ ಮುಗಿಯಲಿದೆ. ಆದರೆ, ಬಿಜೆಪಿ ನೇತೃತ್ವದ ಎನ್‌ಡಿಎ ಹೊಸ ಸರ್ಕಾರ ರಚಿಸಲಿದೆ. ನಾನು ಕಾಶಿಯವ (ಅವರ ಲೋಕಸಭೆ ಕ್ಷೇತ್ರ), ನಾನು ಅವಿನಾಶಿ. ಕಾಶಿಯನ್ನು ಹೇಗೆ ನಾಶಪಡಿಸಲು ಆಗುವುದಿಲ್ಲವೋ, ಹಾಗೆಯೇ, ನನ್ನನ್ನು ಕೂಡ ಯಾರಿಂದಲೂ ನಾಶಪಡಿಸಲು ಆಗುವುದಿಲ್ಲ” ಎಂಬುದಾಗಿ ಹೇಳಿದರು.

ಬಿಜೆಪಿಯೇ ಅಧಿಕಾರಕ್ಕೆ ಎಂದ ಸಮೀಕ್ಷೆ

ಲೋಕಸಭೆ ಚುನಾವಣೆ ಕುರಿತು ಸಟ್ಟಾ ಬಜಾರ್‌ ಸಮೀಕ್ಷಾ ವರದಿ ತಯಾರಿಸಿದೆ. ಐದು ಹಂತದ ಮತದಾನದ ಮುಕ್ತಾಯದ ಬಳಿಕ ಸಟ್ಟಾ ಬಜಾರ್ ಸಮೀಕ್ಷಾ ವರದಿ ಪ್ರಕಟಿಸಿದಂತೆ, ಬಿಜೆಪಿಯೊಂದೇ 304-306 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಇನ್ನು ಎನ್‌ಡಿಎ ಮೈತ್ರಿಕೂಟವು ಸುಲಭವಾಗಿ 325-330 ಕ್ಷೇತ್ರಗಳಲ್ಲಿ ಜಯಿಸಲಿದೆ. ಮತ್ತೊಂದೆಡೆ ಕಾಂಗ್ರೆಸ್‌ ಪಕ್ಷವು 60-62 ಕ್ಷೇತ್ರಗಳಲ್ಲಿ ಜಯಿಸಲಿದೆ ಎಂಬುದಾಗಿ ಸಮೀಕ್ಷಾ ವರದಿ ತಿಳಿಸಿದೆ. ಹಾಗಾಗಿ, ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರವೇ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬರಲಿದೆ ಎಂಬುದು ವರದಿಯ ಸಾರಾಂಶವಾಗಿದೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯೊಂದೇ 300 ಸೀಟುಗಳಲ್ಲಿ ಗೆದ್ದರೂ ಕೆಲ ರಾಜ್ಯಗಳಿಗೆ ಬಿಜೆಪಿಗೆ ಅನುಕೂಲವಾದರೆ, ಕೆಲ ರಾಜ್ಯಗಳಲ್ಲಿ ಬಿಜೆಪಿಗೆ ಕಡಿಮೆ ಸ್ಥಾನಗಳು ಲಭಿಸಲಿವೆ ಎಂದು ಹೇಳಲಾಗುತ್ತಿದೆ. ಬಿಹಾರ, ಹರಿಯಾಣ, ಮಹಾರಾಷ್ಟ್ರ ಹಾಗೂ ರಾಜಸ್ಥಾನದಲ್ಲಿ ಬಿಜೆಪಿಯ ಸ್ಥಾನಗಳು ಕಡಿಮೆಯಾಗಲಿವೆ. ಆದರೆ, ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಬಿಜೆಪಿಗೆ ಹೆಚ್ಚಿನ ಕ್ಷೇತ್ರಗಳು ಬರಲಿವೆ. ತಮಿಳುನಾಡು ಹಾಗೂ ಒಡಿಶಾ ಕೂಡ ಬಿಜೆಪಿಗೆ ಹೆಚ್ಚಿನ ಕ್ಷೇತ್ರಗಳನ್ನು ತಂದುಕೊಡಲಿವೆ ಎಂಬುದಾಗಿ ಸಮೀಕ್ಷೆಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: Kangana Ranaut: ಈ ಗುಲಾಬಿಯು ನಿಮಗಾಗಿ; ಮೋದಿಗೆ ಕೆಂಪು ಗುಲಾಬಿ ಕೊಟ್ಟು ಸ್ವಾಗತಿಸಿದ ಕಂಗನಾ! Photo ಇದೆ

Continue Reading
Advertisement
lok sabha election 2024 jaishankar rahul sonia murmu
ಪ್ರಮುಖ ಸುದ್ದಿ14 mins ago

Lok Sabha Election: ಮತ ಚಲಾಯಿಸಿದ ರಾಷ್ಟ್ರಪತಿ ಮುರ್ಮು, ಸೋನಿಯಾ, ರಾಹುಲ್;‌ ಮತಕ್ಕಾಗಿ ಸರ್ಟಿಫಿಕೇಟ್ ಪಡೆದ ಜೈಶಂಕರ್‌!

Konark Tourist Destination
ಪ್ರವಾಸ16 mins ago

Konark Tourist Destination: ರಜೆಯಲ್ಲಿ ಕೋನಾರ್ಕ್‌ಗೆ ಹೋದಾಗ ಈ ಅದ್ಭುತ ಸ್ಥಳಗಳಿಗೆ ಭೇಟಿ ನೀಡಲು ಮರೆಯಬೇಡಿ

Karthi next film Suriya to produce Meiyazhagan
ಕಾಲಿವುಡ್24 mins ago

Karthi next film: ಇಂದು ನಟ ಕಾರ್ತಿ ಬರ್ತ್‌ಡೇ: ತಮ್ಮನ ಚಿತ್ರಕ್ಕೆ ಅಣ್ಣ ಸೂರ್ಯ ಬಂಡವಾಳ!

IPL 2024
ಕ್ರೀಡೆ25 mins ago

IPL 2024: ಐಪಿಎಲ್​ ಟ್ರೋಫಿಯಲ್ಲಿರುವ ಸಂಸ್ಕೃತ ಶ್ಲೋಕದ ಮೂಲ ಸಾರವೇನು?

Best Tourist Places In Tamilnadu
ಪ್ರವಾಸ43 mins ago

Best Tourist Places In Tamilnadu: ಈ ಸುಂದರ ದೇವಾಲಯಗಳ ದರ್ಶನಕ್ಕಾದರೂ ತಮಿಳುನಾಡಿಗೆ ಹೋಗಲೇಬೇಕು!

rave party culprit with jagan mohan reddy
ಪ್ರಮುಖ ಸುದ್ದಿ50 mins ago

Rave Party: ರೇವ್‌ ಪಾರ್ಟಿ ಆರೋಪಿಗೆ ಆಂಧ್ರ ಸಿಎಂ ಜಗನ್‌ ಜೊತೆ ಸ್ನೇಹ!

IPL 2024 Prize money
ಕ್ರೀಡೆ1 hour ago

IPL 2024 Prize money: ಐಪಿಎಲ್​ ವಿನ್ನರ್​ಗೆ ಸಿಗುವ ಬಹುಮಾನ ಮೊತ್ತವೆಷ್ಟು? 4ನೇ ಸ್ಥಾನಿ ಆರ್​ಸಿಬಿಗೆ ಸಿಕ್ಕ ಹಣವೆಷ್ಟು?

South Indian Monsoon Destinations
ಪ್ರವಾಸ1 hour ago

South Indian Monsoon Destinations: ದಕ್ಷಿಣ ಭಾರತದ ಈ 6 ಸ್ಥಳಗಳಲ್ಲಿ ಮಳೆಗಾಲದಲ್ಲಿ ಚಾರಣ ಮಾಡಲೇಬೇಕು!

Kiccha Sudeep Max cinema Pre climax Photo leak
ಸ್ಯಾಂಡಲ್ ವುಡ್1 hour ago

Kiccha Sudeep: ʻಮ್ಯಾಕ್ಸ್ʼ ಪ್ರಿ- ಕ್ಲೈಮ್ಯಾಕ್ಸ್ ಫೋಟೊ ಲೀಕ್‌? ಬೆಂಕಿ ಬಿರುಗಾಳಿ ಅಂದ್ರು ಫ್ಯಾನ್ಸ್‌!

lok sabha election 2024 jaishankar mufti
Lok Sabha Election 20242 hours ago

Lok Sabha Election: 58 ಕ್ಷೇತ್ರಗಳಲ್ಲಿ 6ನೇ ಹಂತದ ಮತದಾನ ಆರಂಭ; ಜೈಶಂಕರ್‌ ಮತಗಟ್ಟೆ ಗೊಂದಲ, ಮುಫ್ತಿ ಪ್ರತಿಭಟನೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ2 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ3 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು4 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು4 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ5 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ6 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ6 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ6 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ1 week ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌