Dolly Dhananjay: ತೋತಾಪುರಿ -2 ಟ್ರೈಲರ್‌ ಔಟ್‌;‌ ಡಾಲಿ ನಯಾ ಲುಕ್‌, ಶಿವಣ್ಣ ಸಾಥ್‌! - Vistara News

South Cinema

Dolly Dhananjay: ತೋತಾಪುರಿ -2 ಟ್ರೈಲರ್‌ ಔಟ್‌;‌ ಡಾಲಿ ನಯಾ ಲುಕ್‌, ಶಿವಣ್ಣ ಸಾಥ್‌!

Dolly Dhananjay: ಟ್ರೈಲರ್‌ಅನ್ನು (Thothapuri 2 Trailer) ಹ್ಯಾಟ್ರಿಕ್‌ ಹೀರೊ ಶಿವರಾಜ್‌ಕುಮಾರ್‌ (Shivarajkumar) ಅವರು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಸಾಥ್‌ ಕೊಟ್ಟಿದ್ದಾರೆ.

VISTARANEWS.COM


on

Thothapuri 2 Poster
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಗೌರಿ ಗಣೇಶ ಹಬ್ಬದಂದು ಸ್ಯಾಂಡಲ್‌ವುಡ್‌ನಿಂದ ಪ್ರೇಕ್ಷಕರಿಗೆ ಬಿಗ್‌ ಅಪ್‌ಡೇಟ್‌ಗಳು ಬರುತ್ತಲೇ ಇದೆ. ಇದೀಗ ನವರಸ ನಾಯಕ ಜಗ್ಗೇಶ್‌ (navarasanayaka Jaggesh) ಅಭಿನಯದ ತೋತಾಪುರಿ ಚಿತ್ರದ ಮುಂದುವರಿದ ಭಾಗ ತೋತಾಪುರಿ -2 ಟ್ರೈಲರ್‌ ಬಿಡುಗಡೆಯಾಗಿದೆ. ವಿಜಯಪ್ರಸಾದ್ ನಿರ್ದೇಶನದಲ್ಲಿ (Dolly Dhananjay) ಮೂಡಿಬಂದಿರುವ ಈ ಚಿತ್ರವನ್ನು ಸುರೇಶ್ ಆರ್ಟ್ಸ್, ಮೋನ್ ಫ್ಲಿಕ್ಸ್ ಸ್ಟುಡಿಯೋಸ್ ಮೂಲಕ‌ ಕೆ.ಎ. ಸುರೇಶ್ ಅವರು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ. ಟ್ರೈಲರ್‌ಅನ್ನು (Thothapuri 2 Trailer) ಹ್ಯಾಟ್ರಿಕ್‌ ಹೀರೊ ಶಿವರಾಜ್‌ಕುಮಾರ್‌ (Shivarajkumar) ಅವರು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಸಾಥ್‌ ಕೊಟ್ಟಿದ್ದಾರೆ.

ತೋತಾಪುರಿ -2 ಸಿನಿಮಾದಲ್ಲಿ ಡಾಲಿ ಧನಂಜಯ್‌ ಹಾಗೂ ಅದಿತಿ ಪ್ರಭುದೇವ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಡಾಲಿ ಧನಂಜಯ್ ಈ ಚಿತ್ರದಲ್ಲಿ ಜಗ್ಗೇಶ್ ಅವರ ಜತೆ ಪೂರ್ಣಪ್ರಮಾಣದ ನಾಯಕನಾಗಿ ಅಭಿನಯಿಸಿದ್ದಾರೆ. ಧನಂಜಯ್ ಹಾಗೂ ಜಗ್ಗೇಶ್ ಅವರ ಕ್ಯಾರೆಕ್ಟರ್ ಲುಕ್ ಗುರುಪೂರ್ಣಿಮೆಯ ದಿನ ಬಿಡುಗಡೆಯಾಗಿತ್ತು. ಉಳಿದಂತೆ ಚಿತ್ರದಲ್ಲಿ ದತ್ತಣ್ಣ, ಸುಮನಾ ರಂಗನಾಥ್, ವೀಣಾ ಸುಂದರ್, ಹೇಮಾದತ್ ಹೀಗೆ ಮೊದಲ ಭಾಗದಲ್ಲಿದ್ದ ಬಹುತೇಕ ಪಾತ್ರಗಳು ಮುಂದುವರಿದಿವೆ. ನಿರಂಜನ ಬಾಬು ಛಾಯಾಗ್ರಹಣ, ಅರುಣ್ ಆಂಡ್ರ್ಯೂ ಸಂಗೀತ ಸಂಯೋಜನೆ ಚಿತ್ರಕ್ಕಿದೆ.

ಟ್ರೈಲರ್‌ನಲ್ಲಿ ಜಗ್ಗೇಶ್‌ ಹಾಗೂ ಡಾಲಿ ಅವರ ಪ್ರೇಮ ಕಥೆಗಳೇ ಪ್ರಮುಖ ಹೈಲೈಟ್‌. ತೋತಾಪುರಿ-2 ಚಿತ್ರದಲ್ಲಿ  ಜಾಗೃತಿ ಮೂಡಿಸುವ ಸಂದೇಶ ಇದ್ದಂತೆ ತೋರುತ್ತದೆ.

ಇದನ್ನೂ ಓದಿ: Varamahalakshmi Festival | ಸ್ಯಾಂಡಲ್‌ವುಡ್‌ ಪೋಸ್ಟರ್‌ ಧಮಾಕಾ: ತೋತಾಪುರಿ ರಿಲೀಸ್‌ ಡೇಟ್‌ ಫಿಕ್ಸ್‌

ಉದ್ಯಮಿಯ ಪಾತ್ರದಲ್ಲಿ ಡಾಲಿ ಧನಂಜಯ ಮತ್ತು ನಾಯಕಿಯಾಗಿ ಅದಿತಿ ಪ್ರಭುದೇವ ನಟಿಸಿದ್ದಾರೆ. ನಿರ್ಮಾಪಕ ಕೆ ಎ ಸುರೇಶ್ ಅವರ ಹಿಂದಿನ ಸಿನಿಮಾಗಳಿಗಿಂತ ಹೆಚ್ಚಿನ ಭರವಸೆ ಈ ಚಿತ್ರ ಮೂಡಿಸಿದೆ. ಮೊದಲ ಬಾರಿಗೆ ಡಾಲಿ ಧನಂಜಯ್ , ಜಗ್ಗೇಶ್ ಜತೆಯಾಗಿದ್ದಾರೆ. ನಾಯಕಿ ಅದಿತಿ ಪ್ರಭುದೇವ ಮುಸ್ಲಿಂ ಹುಡುಗಿ, ಸುಮನ್ ರಂಗನಾಥ್ ಕ್ರಿಶ್ಚಿಯನ್ ಹೆಣ್ಣುಮಗಳಾಗಿ ಅಭಿನಯಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Niveditha Gowda: ಚಂದನ್‌ ಶೆಟ್ಟಿ-ನಿವೇದಿತಾ ನಡುವಿನ ವಯಸ್ಸಿನ ಅಂತರವೆಷ್ಟು?

Niveditha Gowda:  ಬಿಗ್‌ ಬಾಸ್‌ ಜೋಡಿ, ಕ್ಯೂಟ್‌ ಕಪಲ್‌ ಚಂದನ್‌ ಶೆಟ್ಟಿ ಹಾಗೂ ನಿವೇದಿತಾ ಗೌಡ (Niveditha Gowda) ದಂಪತಿ ವಿಚ್ಛೇದನ ಪಡೆದುಕೊಂಡಿದೆ. ಯುವ ದಸರಾ ವೇದಿಕೆಯಲ್ಲಿ ಚಂದನ್ ಶೆಟ್ಟಿ ನಿವೇದಿತಾಗೆ ಲವ್ ಪ್ರೊಪೋಸಲ್ ಮಾಡಿ ಸುದ್ದಿಯಾಗಿದ್ದರು. ಚಂದನ್ ವರ್ತನೆಗೆ ಪರ ಹಾಗೂ ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿದ್ದವು. ಇದೇ ವರ್ಷ ಮೇ 12 ರಂದು ನಿವೇದಿತಾ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ್ದರು ಚಂದನ್‌.

VISTARANEWS.COM


on

Niveditha Gowda chandan shetty age differance
Koo

ನಿವೇದಿತಾ ಗೌಡ (Niveditha Gowda) ಹಾಗೂ ಚಂದನ್‌ ಶೆಟ್ಟಿ ಕ್ಯೂಟ್‌ ಕಪಲ್‌ ಎಂದೇ ಹೆಸರುವಾಸಿಯಾದವರು.

ಇದೀಗ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಪಡೆದುಕೊಂಡಿದ್ದಾರೆ. 4 ವರ್ಷಗಳ ದಾಂಪತ್ಯ ಜೀವನಕ್ಕೆ ಫುಲ್‌ಸ್ಟಾಪ್‌ ಇಟ್ಟಿದ್ದಾರೆ.

ಚಂದನ್‌ ಶೆಟ್ಟಿ ಅವರಿಗೆ ಸದ್ಯ 34 ವರ್ಷ. ಹಾಸನದ ಶಾಂತಿಗ್ರಾಮದಲ್ಲಿ 1989ರ ಸೆಪ್ಟೆಂಬರ್‌ 17ರಂದು ಜನಿಸಿದ್ದರು.

ಇದನ್ನೂ ಓದಿ: Niveditha Gowda: ಜೀವನಾಂಶಕ್ಕೆ ಬೇಡಿಕೆ ಇಟ್ಟಿದ್ರಾ ನಿವೇದಿತಾ ಗೌಡ?

ನಿವೇದಿತಾ ಗೌಡ ಅವರಿಗೆ ಈಗ 26 ವರ್ಷ. 1998ರ ಮೇ 12ರಂದು ಜನಿಸಿದರು. ಇಬ್ಬರ ನಡುವೆ ಒಂಬತ್ತು ವರ್ಷಗಳ ನಡುವೆ ವಯಸ್ಸಿನ ಅಂತರವಿದೆ.

ನಿವೇದಿತಾ ಗೌಡಗೆ ಇರುವ ಅತಿಯಾದ ಸೋಷಿಯಲ್ ಮೀಡಿಯಾ ಕ್ರೇಜ್‌ನಿಂದಾಗಿಯೇ, ರೀಲ್ಸ್ ವ್ಯಾಮೋಹದಿಂದಾಗಿಯೇ ಡಿವೋರ್ಸ್ ಹಂತ ತಲುಪಿದೆ ಎಂಬ ವದಂತಿಗಳೂ ಹಬ್ಬಿವೆ. 

Continue Reading

ಸ್ಯಾಂಡಲ್ ವುಡ್

Niveditha Gowda: ಜೀವನಾಂಶಕ್ಕೆ ಬೇಡಿಕೆ ಇಟ್ಟಿದ್ರಾ ನಿವೇದಿತಾ ಗೌಡ?

Niveditha Gowda: ಬಿಗ್‌ ಬಾಸ್‌ ಜೋಡಿ, ಕ್ಯೂಟ್‌ ಕಪಲ್‌ ಚಂದನ್‌ ಶೆಟ್ಟಿ ಹಾಗೂ ನಿವೇದಿತಾ ಗೌಡ (Niveditha Gowda) ದಂಪತಿ ವಿಚ್ಛೇದನ ಪಡೆದುಕೊಂಡಿದೆ. ಯುವ ದಸರಾ ವೇದಿಕೆಯಲ್ಲಿ ಚಂದನ್ ಶೆಟ್ಟಿ ನಿವೇದಿತಾಗೆ ಲವ್ ಪ್ರೊಪೋಸಲ್ ಮಾಡಿ ಸುದ್ದಿಯಾಗಿದ್ದರು. ಚಂದನ್ ವರ್ತನೆಗೆ ಪರ ಹಾಗೂ ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿದ್ದವು. ಇದೇ ವರ್ಷ ಮೇ 12 ರಂದು ನಿವೇದಿತಾ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ್ದರು ಚಂದನ್‌.

VISTARANEWS.COM


on

Niveditha Gowda Demand For Divorce Alimony
Koo

ಬೆಂಗಳೂರು: ಚಂದನ್‌ ಶೆಟ್ಟಿ (Niveditha Gowda) ಹಾಗೂ ನಿವೇದಿತಾ ಗೌಡ ಅವರು ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಪಡೆದುಕೊಂಡಿದ್ದಾರೆ. ಇದೀಗ ಚಂದನ್ ಹಾಗೂ ನಿವೇದಿತಾ ಪರ ವಕೀಲರಾದ ಅನಿತಾ ಅವರು ನಿವೇದಿತಾ ಅವರು ಜೀವನಾಂಶಕ್ಕೆ ಬೇಡಿಕೆ ಇಟ್ಟಿಲ್ಲ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ಇಬ್ಬರದ್ದೂ ಸಹ ಪರಸ್ಪರ ಒಪ್ಪಿಗೆ ವಿಚ್ಛೇದನ ಆಗಿರುವ ಕಾರಣ, ನಿವೇದಿತಾ, ಜೀವನಾಂಶಕ್ಕೆ ಬೇಡಿಕೆ ಇಟ್ಟಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ವಕೀಲೆ ಅನಿತಾ ಹೇಳಿರುವಂತೆ, ಇಬ್ಬರೂ ಸಹ ದುಡಿಯುತ್ತಿರುವವರು, ಹಾಗಾಗಿ ಇನ್ನೊಬ್ಬರ ಹಣದ ಅವಶ್ಯಕತೆ ಇಬ್ಬರಿಗೂ ಇಲ್ಲ ಎಂದಿದ್ದಾರೆ.

ಸಂಧಾನಕ್ಕೆ ಒಪ್ಪಲಿಲ್ಲ ಚಂದನ್​-ನಿವೇದಿತಾ!

ನ್ಯಾಯಾಲಯದ ಪ್ರಕ್ರಿಯೆ ವೇಳೆ ತಾವಿಬ್ಬರೂ ಮುಂದೆ ಜತೆಯಾಗಿ ಬಾಳುವುದಕ್ಕೆ ಸಾಧ್ಯವೇ ಇಲ್ಲ ಎಂದು ಖಡಾಖಂಡಿತವಾಗಿ ಹೇಳಿದ್ದರು ಚಂದನ್‌ ಹಾಗೂ ನಿವೇದಿತಾ. ಚಂದನ್​ ಹಾಗೂ ನಿವೇದಿತಾ ವಿಚ್ಛೇದನ ಅರ್ಜಿ (ಕೇಸ್ ನಂಬರ್-Mc 3388-/2024) ಕೋರ್ಟ್​ ಮುಂದಕ್ಕೆ ಬಂದಿತ್ತು. ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಎಸ್ ಜ್ಯೋತಿ ಶ್ರೀ ಅವರು ಬೆಂಚ್​ ಮುಂದೆ ಈ ಪ್ರಕರಣ ಬಂದಿತ್ತು. ಅರ್ಜಿಯನ್ನು ವಿಚಾರಣೆ ಮಾಡುವ ಮೊದಲು ಕಾನೂನು ಪ್ರಕ್ರಿಯೆಯಂತೆ ಮಿಡಿಯೇಷನ್ ಪ್ರಕ್ರಿಯೆ ಒಳಪಡಬೇಕಾಯಿತು. ಚಂದನ್ ಹಾಗೂ ನಿವೇದಿತಾ ಅವರಿಗೆ ಕೌಟುಂಬಿಕ ಕೋರ್ಟ್‌ನ ಮಿಡಿಯೇಷನ್​ ಸೆಂಟರ್​ನಲ್ಲಿ ಮಾತುಕತೆ ನಡೆಸಲಾಯಿತು. ವಿಚ್ಛೇದನ ಪ್ರಕ್ರಿಯೆ ಮೊದಲು ಈ ಸಂಧಾನ ನಡೆಯಲೇಬೇಕು. ಅಂತೆಯೇ ಸಂಧಾನಕಾರರು ಮಾತುಕತೆ ನಡೆಸಿದಾಗ ಅವರಿಬ್ಬರು ತಮ್ಮ ನಿರ್ಧಾರದಿಂದ ವಾಪಸ್ ಬರುವುದಿಲ್ಲ ಎಂದು ಹೇಳಿದ್ದರು ಎನ್ನಲಾಗಿದೆ.

ಮೀಡಿಯೇಷನ್ ಸೆಂಟರ್​ನಲ್ಲಿ ವಿಚ್ಛೇದನ ನೀಡದಂತೆ ಸಲಹೆ ಕೊಡುತ್ತಾರೆ. ಪರಸ್ಪರ ಒಂದಾಗಿ ಬಾಳಿ ಎಂದು ಸಲಹೆ ನೀಡುತ್ತಾರೆ. ಇಬ್ಬರು ಒಪ್ಪದೇ ಇದ್ದರೆ ನ್ಯಾಯಾಧೀಶರ ಮುಂದೆ ಹಾಜರು ಪಡಿಸುತ್ತಾರೆ. ಬಳಿಕ ನ್ಯಾಯಾಧೀಶರು ನಿರ್ಧಾರದ ಬಗ್ಗೆ ಕೇಳುತ್ತಾರೆ. ಬಳಿಕ ವಿಚ್ಛೇಧನಕ್ಕೆ ಒಪ್ಪಿಗೆ ಕೊಡುತ್ತಾರೆ.

ಇದನ್ನೂ ಓದಿ: Niveditha Gowda: ಚಂದನ್‌-ನಿವೇದಿತಾ ಡಿವೋರ್ಸ್‌ ಬಗ್ಗೆ ಅಸಲಿ ಸತ್ಯ ಬಯಲು ಮಾಡಿದ ವಕೀಲೆ!

ಆದರೆ ಚಂದನ್‌ ಹಾಗೂ ನಿವೇದಿತಾ ಕೇಸ್‌ನಲ್ಲಿ ಪರಸ್ಪರ ಒಪ್ಪಿಗೆ ಮೇಲೆ ವಿಚ್ಛೇದನಕ್ಕೆ ಸಲ್ಲಿಸಿದ್ದ ಕಾರಣ ಹಾಗೂ ಕಳೆದ ಆರು ತಿಂಗಳಿನಿಂದಲೂ ಪತಿ-ಪತ್ನಿ ರೀತಿ ಸಹಬಾಳ್ವೆ ನಡೆಸದ ಕಾರಣ ನ್ಯಾಯಾಲಯವು ಇವರಿಗೆ ವಿಚ್ಛೇದನ ನೀಡಿದೆ.

ವಕೀಲೆ ಅನಿತಾ ಹೇಳಿಕೆ ನೀಡಿದ್ದೇನು?

ಈ ಬಗ್ಗೆ ವಕೀಲರಾದ ಅನಿತಾ ಮಾತನಾಡಿ ʻʻಇವರಿಬ್ಬರ ಬಗ್ಗೆ ಮಾಧ್ಯಮದಲ್ಲಿ ತಪ್ಪಾಗಿ ತೋರಿಸಲಾಗುತ್ತಿದೆ. ಮೊದಲು ವಿಚ್ಛೇದನ ಅರ್ಜಿ ಸಲ್ಲಿಸಿದ ಬಳಿಕ ಆರು ತಿಂಗಳ ಸಮಯಾವಕಾಶ ಇರುತ್ತಿತ್ತು. ಈಗ ಹಾಗಿಲ್ಲ. ತಕ್ಷಣಕ್ಕೆ ವಿಚ್ಛೇದನ ಪಡೆಯಬಹುದು. ದೊಡ್ಡವರು ಸಂಧಾನ ಮಾಡಲು ಪ್ರಯತ್ನಿಸಿದರು. ಆದರೆ, ಅದು ಆಗಿಲ್ಲ. ಮಗು ಹೊಂದಲು ನಿವೇದಿತಾ ಒಪ್ಪಿಲ್ಲ, ಇದಕ್ಕೆ ವಿಚ್ಛೇದನ ಪಡೆದರು ಎನ್ನುವುದು ಸುಳ್ಳು. ಇಬ್ಬರ ಆಲೋಚನೆ ಬೇರೆ ಇದೆ. ಒಬ್ಬರಿಗೊಬ್ಬರು ತೆಗೆದುಕೊಂಡ ನಿರ್ಧಾರವನ್ನು ಗೌರವಿಸುತ್ತಾರೆ. ಅವರ ಖಾಸಗಿತನಕ್ಕೆ ನಾವು ಗೌರವ ಕೊಡಬೇಕು. ಒಬ್ಬರನ್ನೊಬ್ಬರು ಚೆನ್ನಾಗಿ ಅರ್ಥ ಮಾಡಿಕೊಂಡಿದ್ದಾರೆ. ನಿನ್ನೆಯೇ ಡಿವೋರ್ಸ್‌ ಆಗಿದೆ. ಅವರಿಬ್ಬರಲ್ಲಿ ಒಳ್ಳೆಯ ಮಾನವೀಯತೆ ಇದೆ. ತುಂಬ ಮೆಚ್ಯೂರ್‌ ಆಗಿದ್ದಾರೆʼʼ ಎಂದರು.

ʻಇಬ್ಬರೂ ಡಿಫೆಂಡ್‌ ಆಗುವ ಪರಿಸ್ಥಿಯಲ್ಲಿಯೂ ಅವರು ಇಲ್ಲ. ಯಾವುದೇ ಜೀವನಾಂಶ ಕೂಡ ಕೇಳಿಲ್ಲ. ಗಂಡ ಹೆಂಡತಿ ಮಧ್ಯೆ ಭಿನ್ನವಾದ ಸಂಬಂಧ ಇರುತ್ತದೆ. ಎಷ್ಟೋ ಜನ ಗಂಡ ಹೆಂಡತಿಯರು ಹೆದರಿಕೊಂಡು ಡಿವೋರ್ಸ್‌ ಹಂತಕ್ಕೆ ಬರುವುದಿಲ್ಲ. ಇನ್ನೂ ಕೆಲವರು ತುಂಬ ಜಗಳ ಮಾಡುತ್ತಾರೆ. ಆದರೆ ತುಂಬ ಒಬ್ಬರಿಗೊಬ್ಬರು ಪ್ರೀತಿಸುತ್ತಾರೆ. ಆದರೆ ಇವರ ಕೇಸ್‌ನಲ್ಲಿ ಬೇರೆಯಾಗಬೇಕು ಎಂದು ಅವರು ಆಗಲೇ ನಿರ್ಧಾರ ಮಾಡಿದ್ದರು. ಫ್ಯಾಮಿಲಿ ಜತೆ ಕೂಡ ಚರ್ಚಿಸಿದ್ದರು. ಇದೀಗ ಅಧಿಕೃತವಾಗಿ ಡಿವೋರ್ಸ್‌ ಪಡೆದಿದ್ದಾರೆʼʼ ಎಂದರು.

Continue Reading

ಸ್ಯಾಂಡಲ್ ವುಡ್

Niveditha Gowda: ಚಂದನ್‌-ನಿವೇದಿತಾ ಡಿವೋರ್ಸ್‌ ಬಗ್ಗೆ ಅಸಲಿ ಸತ್ಯ ಬಯಲು ಮಾಡಿದ ವಕೀಲೆ!

Niveditha Gowda: ಯುವ ದಸರಾ ಕಾರ್ಯಕ್ರಮದಲ್ಲಿ ಚಂದನ್‌ ಶೆಟ್ಟಿ ಅವರು ನಿವೇದಿತಾ ಗೌಡ ಪ್ರಪೋಸ್‌ ಮಾಡಿದ್ದೂ ವಿವಾದಕ್ಕೆ ಕಾರಣವಾಗಿತ್ತು. ಸಾಕಷ್ಟು ಮಂದಿ ಇದಕ್ಕೆ ಟೀಕೆ ವ್ಯಕ್ತಪಡಿಸಿದ್ದರು. ಬಿಗ್‌ ಬಾಸ್‌ ಐದನೇ ಸೀಸನ್‌ನಲ್ಲಿ ಚಂದನ್‌ ಗೌಡ ಹಾಗೂ ನಿವೇದಿತಾ ಗೌಡ ಮೊದಲ ಬಾರಿಗೆ ಭೇಟಿಯಾಗಿದ್ದರು. ಮೊದಲಿಗೆ ಬಿಗ್‌ಬಾಸ್‌ನಲ್ಲಿ ನಿವೇದಿತಾಳನ್ನು ತನ್ನ ತಂಗಿ ಎಂದೇ ಹೇಳುತ್ತಿದ್ದ ಚಂದನ್‌ ಗೌಡ ಬಳಿಕ ಮದುವೆಯಾಗಿದ್ದರು.

VISTARANEWS.COM


on

Niveditha Gowda chandan divorce main reason told by advocate
Koo

ಬೆಂಗಳೂರು: ಚಂದನ್‌ ಹಾಗೂ ನಿವೇದಿತಾ (Niveditha Gowda) ಅವರು ಡಿವೋರ್ಸ್‌ ಪಡೆದ ಕಾರಣಗಳ ಬಗ್ಗೆ ಹಲವು ವದಂತಿಗಳು ಹಬ್ಬಿವೆ. ಈಗ ಚಂದನ್ ಹಾಗೂ ನಿವೇದಿತಾ ಪರ ವಕೀಲರಾದ ಅನಿತಾ ಅವರು ಇವರ ವಿಚ್ಛೇದನಕ್ಕೆ ಕಾರಣ ಏನು ಎಂಬುದನ್ನು ರಿವೀಲ್ ಮಾಡಿದ್ದಾರೆ. `ಒಂದು ವರ್ಷಗಳ ಹಿಂದೆಯೇ ಇವರು ವಿಚ್ಛೇದನಕ್ಕೆ ನಿರ್ಧರಿಸಿದ್ದರು’ ಎಂದು ಹೇಳಿಕೆ ನೀಡಿದ್ದಾರೆ.

ಈ ಬಗ್ಗೆ ವಕೀಲರಾದ ಅನಿತಾ ಮಾತನಾಡಿ ʻʻಇವರಿಬ್ಬರ ಬಗ್ಗೆ ಮಾಧ್ಯಮದಲ್ಲಿ ತಪ್ಪಾಗಿ ತೋರಿಸಲಾಗುತ್ತಿದೆ. ಮೊದಲು ವಿಚ್ಛೇದನ ಅರ್ಜಿ ಸಲ್ಲಿಸಿದ ಬಳಿಕ ಆರು ತಿಂಗಳ ಸಮಯಾವಕಾಶ ಇರುತ್ತಿತ್ತು. ಈಗ ಹಾಗಿಲ್ಲ. ತಕ್ಷಣಕ್ಕೆ ವಿಚ್ಛೇದನ ಪಡೆಯಬಹುದು. ದೊಡ್ಡವರು ಸಂಧಾನ ಮಾಡಲು ಪ್ರಯತ್ನಿಸಿದರು. ಆದರೆ, ಅದು ಆಗಿಲ್ಲ. ಮಗು ಹೊಂದಲು ನಿವೇದಿತಾ ಒಪ್ಪಿಲ್ಲ, ಇದಕ್ಕೆ ವಿಚ್ಛೇದನ ಪಡೆದರು ಎನ್ನುವುದು ಸುಳ್ಳು. ಇಬ್ಬರ ಆಲೋಚನೆ ಬೇರೆ ಇದೆ. ಒಬ್ಬರಿಗೊಬ್ಬರು ತೆಗೆದುಕೊಂಡ ನಿರ್ಧಾರವನ್ನು ಗೌರವಿಸುತ್ತಾರೆ. ಅವರ ಖಾಸಗಿತನಕ್ಕೆ ನಾವು ಗೌರವ ಕೊಡಬೇಕು. ಒಬ್ಬರನ್ನೊಬ್ಬರು ಚೆನ್ನಾಗಿ ಅರ್ಥ ಮಾಡಿಕೊಂಡಿದ್ದಾರೆ. ನಿನ್ನೆಯೇ ಡಿವೋರ್ಸ್‌ ಆಗಿದೆ. ಅವರಿಬ್ಬರಲ್ಲಿ ಒಳ್ಳೆಯ ಮಾನವೀಯತೆ ಇದೆ. ತುಂಬ ಮೆಚ್ಯೂರ್‌ ಆಗಿದ್ದಾರೆʼʼ ಎಂದರು.

ʻʻಇಬ್ಬರೂ ಡಿಫೆಂಡ್‌ ಆಗುವ ಪರಿಸ್ಥಿಯಲ್ಲಿಯೂ ಅವರು ಇಲ್ಲ. ಯಾವುದೇ ಜೀವನಾಂಶ ಕೂಡ ಕೇಳಿಲ್ಲ. ಗಂಡ ಹೆಂಡತಿ ಮಧ್ಯೆ ಭಿನ್ನವಾದ ಸಂಬಂಧ ಇರುತ್ತದೆ. ಎಷ್ಟೋ ಜನ ಗಂಡ ಹೆಂಡತಿಯರು ಹೆದರಿಕೊಂಡು ಡಿವೋರ್ಸ್‌ ಹಂತಕ್ಕೆ ಬರುವುದಿಲ್ಲ. ಇನ್ನೂ ಕೆಲವರು ತುಂಬ ಜಗಳ ಮಾಡುತ್ತಾರೆ. ಆದರೆ ತುಂಬ ಒಬ್ಬರಿಗೊಬ್ಬರು ಪ್ರೀತಿಸುತ್ತಾರೆ. ಆದರೆ ಇವರ ಕೇಸ್‌ನಲ್ಲಿ ಬೇರೆಯಾಗಬೇಕು ಎಂದು ಅವರು ಆಗಲೇ ನಿರ್ಧಾರ ಮಾಡಿದ್ದರು. ಫ್ಯಾಮಿಲಿ ಜತೆ ಕೂಡ ಚರ್ಚಿಸಿದ್ದರು. ಇದೀಗ ಅಧಿಕೃತವಾಗಿ ಡಿವೋರ್ಸ್‌ ಪಡೆದಿದ್ದಾರೆʼʼ ಎಂದರು.

ಇದನ್ನೂ ಓದಿ: Niveditha Gowda: ಚಂದನ್‌-ನಿವೇದಿತಾ ಡಿವೋರ್ಸ್‌ಗೆ ಸೃಜನ್ ಲೋಕೇಶ್ ಕಾರಣ? ಯಾಕೆ ಈ ಗಾಸಿಪ್‌?

ನಿವೇದಿತಾ ಗೌಡ ಪೋಸ್ಟ್‌

ಈ ದಿನ., ಚಂದನ್ ಶೆಟ್ಟಿ ಮತ್ತು ನಾನು, ನಮ್ಮ ದಾಂಪತ್ಯ ಜೀವನವನ್ನ ಕಾನೂನುಬದ್ಧವಾಗಿ ಪರಸ್ಪರ ಒಪ್ಪಿಗೆಯಿಂದ ಕೊನೆಗೂಳಿಸಿದ್ದೇವೆ. ನಮ್ಮ ನಿರ್ಧಾರವನ್ನು ಮತ್ತು ನಮ್ಮ ಜೀವನದ ಖಾಸಗಿತನವನ್ನು ಗೌರವಿಸಲು ಕೋರುತ್ತೇವೆ. ಪ್ರತಿ ಸಂದರ್ಭದಲ್ಲಿ ನಮ್ಮೊಂದಿಗೆ ನಿಂತ ಮಾಧ್ಯಮ ಮಿತ್ರರು ನಮ್ಮ ಸ್ನೇಹಿತರು ಮತ್ತು ಅಭಿಮಾನಿಗಳಿಂದ ನಾವು ಎಂದಿನಂತೆ ಬೆಂಬಲವನ್ನು ಕೋರುತ್ತೇವೆ. ನಾವು ನಮ್ಮ ಪ್ರತ್ಯೇಕ ಮಾರ್ಗ ಅನುಸರಿಸಿದರೂ ಪರಸ್ಪರ ಒಬ್ಬರನ್ನು ಒಬ್ಬರು ಗೌರವಿಸುತ್ತೇವೆ. ಸೂಕ್ಷ್ಮ ಪರಿಗಣೆಗಾಗಿ ಎಲ್ಲರಿಗೂ ಧನ್ಯವಾದಗಳು ಎಂದು ನಿವೇದಿತಾ ಗೌಡ ಬರೆದುಕೊಂಡಿದ್ದಾರೆ.

ಯುವ ದಸರಾ ಕಾರ್ಯಕ್ರಮದಲ್ಲಿ ಚಂದನ್‌ ಶೆಟ್ಟಿ ಅವರು ನಿವೇದಿತಾ ಗೌಡ ಪ್ರಪೋಸ್‌ ಮಾಡಿದ್ದೂ ವಿವಾದಕ್ಕೆ ಕಾರಣವಾಗಿತ್ತು. ಸಾಕಷ್ಟು ಮಂದಿ ಇದಕ್ಕೆ ಟೀಕೆ ವ್ಯಕ್ತಪಡಿಸಿದ್ದರು. ಬಿಗ್‌ ಬಾಸ್‌ ಐದನೇ ಸೀಸನ್‌ನಲ್ಲಿ ಚಂದನ್‌ ಶೆಟ್ಟಿ ಹಾಗೂ ನಿವೇದಿತಾ ಗೌಡ ಮೊದಲ ಬಾರಿಗೆ ಭೇಟಿಯಾಗಿದ್ದರು. ಮೊದಲಿಗೆ ಬಿಗ್‌ಬಾಸ್‌ನಲ್ಲಿ ನಿವೇದಿತಾಳನ್ನು ತನ್ನ ತಂಗಿ ಎಂದೇ ಹೇಳುತ್ತಿದ್ದ ಚಂದನ್‌ ಶೆಟ್ಟಿ ಬಳಿಕ ಮದುವೆಯಾಗಿದ್ದರು.

Continue Reading

ಸ್ಯಾಂಡಲ್ ವುಡ್

Chandan Shetty: ಚಂದನ್-ನಿವೇದಿತಾ ಸಂಬಂಧ ಸರಿ ಮಾಡ್ತಾರಾ ಧ್ರುವ ಸರ್ಜಾ? ಪ್ರಥಮ್ ಕೊಟ್ಟಿದ್ದಾರೆ ಕ್ಲೂ!

Chandan Shetty: ಫ್ಯಾಮಿಲಿ ಕೋರ್ಟ್‌ನಲ್ಲಿ ಜೂನ್ 6ರಂದು ಡಿವೋರ್ಸ್​ಗೆ ಅರ್ಜಿ ಸಲ್ಲಿಸಿದ್ದರು. ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಅರ್ಜಿ ಸಲ್ಲಿಸಿದ್ದರು. ಮಿಡಿಯೆಟರ್ ಸಂಧಾನಕ್ಕೆ ಕೊನೆಗೂ ದಂಪತಿ ಒಪ್ಪಿಲ್ಲ. ಡಿವೋರ್ಸ್‌ ಪಡೆದುಕೊಂಡರೂ ಜೀವನಾಂಶ ಬೇಡ ಎಂದಿದ್ದಾರೆ ನಿವೇದಿತಾ. ಡಿವೋರ್ಸ್ ಸಿಕ್ಕ ನಂತರ ನಿವೇದಿತಾ ವಿದೇಶಕ್ಕೆ ಹೋಗುವ ಸಾಧ್ಯತೆ ಇದೆ ಎನ್ನಲಾಗಿದೆ.

VISTARANEWS.COM


on

Chandan Shetty Dhruva Sarja Talk With Niveditha Gowda
Koo

ಬೆಂಗಳೂರು: ಕನ್ನಡದ ರ್‍ಯಾಪರ್‌ ಚಂದನ್ ಶೆಟ್ಟಿ (Chandan Shetty) ಮತ್ತು ನಿವೇದಿತಾ ಗೌಡ  ವಿಚ್ಛೇದನ ಕೋರಿ ಬೆಂಗಳೂರು ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಶುಕ್ರವಾರ ಅವರಿಬ್ಬರೂ ಒಂದೇ ಕಾರಿನಲ್ಲಿ ಒಟ್ಟಿಗೆ ಬಂದು ಅರ್ಜಿ ಸಲ್ಲಿಸಿ ಕೈಕೈ ಹಿಡಿದುಕೊಂಡು ವಾಪಸ್‌ ಹೊರಟಿದ್ದರು. ಚಂದನ್‌ ಹಾಗೂ ನಿವೇದಿತಾ ಬಗ್ಗೆ ಪ್ರಥಮ್‌ ಮಾತನಾಡಿದ್ದಾರೆ. ಧ್ರುವ ಸರ್ಜಾ ಹಾಗೂ ಚಂದನ್ ಮಧ್ಯೆ ಆಪ್ತತೆ ಇದೆ.ಹೀಗಾಗಿ ಧ್ರುವ ಅವರು ಇದಕ್ಕೆ ಮಧ್ಯಸ್ಥಿಕೆ ವಹಿಸಲೇಬೇಕು ಎಂದು ಪ್ರಥಮ್‌ ಹೇಳಿದರು.

ಈ ಬಗ್ಗೆ ಪ್ರಥಮ್‌ ಮಾಧ್ಯಮವೊಂದರ ಮುಂದೆ ಮಾತನಾಡಿ ʻʻನನ್ನ , ಚಂದನ್‌ ಹಾಗೂ ಧ್ರುವ ಅವರ ಸಂಬಂಧ ಬಿಡಿಸಲಾಗದೇ ಇರುವಂತದ್ದು. ಧ್ರುವ ಅವರು ಸ್ನೇಹಿತರ ಜತೆ ಸದಾ ನಿಲ್ಲುತ್ತಾರೆ. ಧ್ರುವ ಅವರ ಮಾತನ್ನು ಚಂದನ್‌ ತೆಗೆದುಹಾಕಲ್ಲ ಅಂದುಕೊಳ್ಳುತ್ತೇನೆ. ಇವತ್ತು ಧ್ರುವ ಹತ್ತಿರ ಮಾತನಾಡಿಸುತ್ತೇನೆ. ಚಂದನ್, ನಿವೇದಿತಾ ಬೇರೆ ಆದರೆ ಅಯ್ಯೋ ಎನ್ನುವರಿಗಿಂತ ಸಂಭ್ರಮಿಸುವವರು ತುಂಬ ಜನ ಇರುತ್ತಾರೆ. ಕೂತು ಮಾತನಾಡಿದರೆ ಎಲ್ಲವೂ ಪರಿಹಾರ ಆಗುತ್ತದೆ. ನಾನು ಚಂದನ್​ ಬಳಿ ಮಾತನಾಡುತ್ತೇನೆ. ಧ್ರುವ ಹಾಗೂ ಚಂದನ್ ಮಧ್ಯೆ ಆಪ್ತತೆ ಇದೆ. ಪೊಗರು ಚಿತ್ರಕ್ಕೆ ಚಂದನ್ ಅವರೇ ಬೇಕು ಎಂದು ಹಠ ಹಿಡಿದಿದ್ದರು. ಹೀಗಾಗಿ ಧ್ರುವ ಅವರು ಇದಕ್ಕೆ ಮಧ್ಯಸ್ಥಿಕೆ ವಹಿಸಲೇಬೇಕುʼʼ‌ ಎಂದರು.

ಇದನ್ನೂ ಓದಿ: Chandan Shetty: ತಂಗಿ ತಂಗಿ ಎಂದೇ ಮದುವೆಯಾಗಿದ್ದ ಚಂದನ್‌! ಇವರ ಬಾಳಲ್ಲಿ ವಿಲನ್‌ ಆಗಿದ್ದು ಯಾರು?

ಡಿವೋರ್ಸ್​ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡ ನಿವೇದಿತಾ-ಚಂದನ್‌

ʻʻಈ ದಿನ., ಚಂದನ್ ಶೆಟ್ಟಿ ಮತ್ತು ನಾನು, ನಮ್ಮ ದಾಂಪತ್ಯ ಜೀವನವನ್ನ ಕಾನೂನುಬದ್ಧವಾಗಿ ಪರಸ್ಪರ ಒಪ್ಪಿಗೆಯಿಂದ ಕೊನೆಗೂಳಿಸಿದ್ದೇವೆ. ನಮ್ಮ ನಿರ್ಧಾರವನ್ನು ಮತ್ತು ನಮ್ಮ ಜೀವನದ ಖಾಸಗಿತನವನ್ನು ಗೌರವಿಸಲು ಕೋರುತ್ತೇವೆ. ಪ್ರತಿ ಸಂದರ್ಭದಲ್ಲಿ ನಮ್ಮೊಂದಿಗೆ ನಿಂತ ಮಾಧ್ಯಮ ಮಿತ್ರರು ನಮ್ಮ ಸ್ನೇಹಿತರು ಮತ್ತು ಅಭಿಮಾನಿಗಳಿಂದ ನಾವು ಎಂದಿನಂತೆ ಬೆಂಬಲವನ್ನು ಕೋರುತ್ತೇವೆ. ನಾವು ನಮ್ಮ ಪ್ರತ್ಯೇಕ ಮಾರ್ಗ ಅನುಸರಿಸಿದರೂ ಪರಸ್ಪರ ಒಬ್ಬರನ್ನು ಒಬ್ಬರು ಗೌರವಿಸುತ್ತೇವೆ. ಸೂಕ್ಷ್ಮ ಪರಿಗಣೆಗಾಗಿ ಎಲ್ಲರಿಗೂ ಧನ್ಯವಾದಗಳು ಎಂದು ನಿವೇದಿತಾ ಗೌಡ ಬರೆದುಕೊಂಡಿದ್ದಾರೆ.

ವಿದೇಶಕ್ಕೆ ಹೋಗುವ ಸಾಧ್ಯತೆ

ಫ್ಯಾಮಿಲಿ ಕೋರ್ಟ್‌ನಲ್ಲಿ ಜೂನ್ 6ರಂದು ಡಿವೋರ್ಸ್​ಗೆ ಅರ್ಜಿ ಸಲ್ಲಿಸಿದ್ದರು. ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಅರ್ಜಿ ಸಲ್ಲಿಸಿದ್ದರು. ಮಿಡಿಯೆಟರ್ ಸಂಧಾನಕ್ಕೆ ಕೊನೆಗೂ ದಂಪತಿ ಒಪ್ಪಿಲ್ಲ. ಡಿವೋರ್ಸ್‌ ಪಡೆದುಕೊಂಡರೂ ಜೀವನಾಂಶ ಬೇಡ ಎಂದಿದ್ದಾರೆ ನಿವೇದಿತಾ. ಡಿವೋರ್ಸ್ ಸಿಕ್ಕ ನಂತರ ನಿವೇದಿತಾ ವಿದೇಶಕ್ಕೆ ಹೋಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಯುವ ದಸರಾ ಕಾರ್ಯಕ್ರಮದಲ್ಲಿ ಚಂದನ್‌ ಶೆಟ್ಟಿ ಅವರು ನಿವೇದಿತಾ ಗೌಡ ಪ್ರಪೋಸ್‌ ಮಾಡಿದ್ದೂ ವಿವಾದಕ್ಕೆ ಕಾರಣವಾಗಿತ್ತು. ಸಾಕಷ್ಟು ಮಂದಿ ಇದಕ್ಕೆ ಟೀಕೆ ವ್ಯಕ್ತಪಡಿಸಿದ್ದರು. ಬಿಗ್‌ ಬಾಸ್‌ ಐದನೇ ಸೀಸನ್‌ನಲ್ಲಿ ಚಂದನ್‌ ಗೌಡ ಹಾಗೂ ನಿವೇದಿತಾ ಗೌಡ ಮೊದಲ ಬಾರಿಗೆ ಭೇಟಿಯಾಗಿದ್ದರು. ಮೊದಲಿಗೆ ಬಿಗ್‌ಬಾಸ್‌ನಲ್ಲಿ ನಿವೇದಿತಾಳನ್ನು ತನ್ನ ತಂಗಿ ಎಂದೇ ಹೇಳುತ್ತಿದ್ದ ಚಂದನ್‌ ಗೌಡ ಬಳಿಕ ಮದುವೆಯಾಗಿದ್ದರು.

Continue Reading
Advertisement
sonia gandhi
ದೇಶ12 mins ago

Sonia Gandhi: ಮತ್ತೆ ಸೋನಿಯಾ ಗಾಂಧಿಗೆ ಮಣೆ; ಕಾಂಗ್ರೆಸ್‌ ಸಂಸದೀಯ ಪಕ್ಷದ ಅಧ್ಯಕ್ಷೆಯಾಗಿ ಮರು ಆಯ್ಕೆ!

IND vs PAK
ಕ್ರೀಡೆ34 mins ago

IND vs PAK: ಪಾಕ್​ ವಿರುದ್ಧದ ಪಂದ್ಯದಲ್ಲಿ ವಿಶ್ವ ದಾಖಲೆ ನಿರ್ಮಿಸಲು ಕೊಹ್ಲಿ ಸಜ್ಜು; ಯಾವುದು ಈ ದಾಖಲೆ?

Karnataka weather Forecast
ಮಳೆ57 mins ago

Karnataka Weather : ಉತ್ತರ ಒಳನಾಡು, ಕರಾವಳಿಯಲ್ಲಿ ವ್ಯಾಪಕ ಮಳೆ; ಶಾಲೆಗೆ ನುಗ್ಗಿದ ನೀರು, ಮಕ್ಕಳಿಗೆ ರಜೆ

ಬೆಂಗಳೂರು1 hour ago

Wheelchair Cricket Tournament: ವಿಶೇಷಚೇತನರ ಗಾಲಿಕುರ್ಚಿಯ ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸಿದ ರವಿಶಂಕರ್ ಗುರೂಜಿ

Ambani Family Fashion
ಫ್ಯಾಷನ್1 hour ago

Ambani Family Fashion: ಅಂಬಾನಿ ಕುಟುಂಬದ ಮಹಿಳೆಯರ ಜ್ಯುವೆಲರಿ ಡಿಸೈನ್ಸ್ ಕಾಪಿ ಮಾಡಿ ಟ್ರೆಂಡಿಯಾದ ಜ್ಯುವೆಲರಿಗಳಿವು!

Narendra Modi
ದೇಶ1 hour ago

Narendra Modi: ನಾಳೆ 3ನೇ ಬಾರಿ ಮೋದಿಗೆ ಪ್ರಧಾನಿ ಗಾದಿ; ಇಲ್ಲಿದೆ ಅವರ ರಾಜಕೀಯದ ಹಾದಿ!

Norway Chess
ಕ್ರೀಡೆ1 hour ago

Norway Chess: 3ನೇ ಸ್ಥಾನಕ್ಕೆ ತೃಪ್ತಿಪಟ್ಟ ಪ್ರಜ್ಞಾನಂದ; ಸಹೋದರಿ ವೈಶಾಲಿಗೆ 4ನೇ ಸ್ಥಾನ

IND vs PAK
ಕ್ರೀಡೆ2 hours ago

IND vs PAK: ಭಾರತ-ಪಾಕ್​ ಪಂದ್ಯಕ್ಕೆ 4 ಹಂತದ ಭದ್ರತಾ ವ್ಯವಸ್ಥೆ; ಮೈದಾನಕ್ಕೆ ನುಗ್ಗಿದರೆ ಜೈಲೂಟ ಖಚಿತ!

Money Guide
ಮನಿ-ಗೈಡ್2 hours ago

Money Guide: ಈಗಿನ ಆರೋಗ್ಯ ವಿಮಾ ಪಾಲಿಸಿ ಬಗ್ಗೆ ಸಮಾಧಾನ ಇಲ್ಲವೆ? ಹೆಲ್ತ್ ಇನ್ಶೂರೆನ್ಸ್ ಪೋರ್ಟೆಬಿಲಿಟಿ ಬಳಸಿ

Niveditha Gowda chandan shetty age differance
ಸ್ಯಾಂಡಲ್ ವುಡ್2 hours ago

Niveditha Gowda: ಚಂದನ್‌ ಶೆಟ್ಟಿ-ನಿವೇದಿತಾ ನಡುವಿನ ವಯಸ್ಸಿನ ಅಂತರವೆಷ್ಟು?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ1 day ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ1 day ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ5 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ5 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ5 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌