Congress Karnataka : ಕಾಂಗ್ರೆಸ್‌ನಲ್ಲಿ ನಿಲ್ಲದ ಒಳಜಗಳ; ಈಗ ಮಹಿಳಾ ಡಿಸಿಎಂಗೆ ಬೇಡಿಕೆ! - Vistara News

ಕರ್ನಾಟಕ

Congress Karnataka : ಕಾಂಗ್ರೆಸ್‌ನಲ್ಲಿ ನಿಲ್ಲದ ಒಳಜಗಳ; ಈಗ ಮಹಿಳಾ ಡಿಸಿಎಂಗೆ ಬೇಡಿಕೆ!

Congress Karnataka : ಈಚೆಗಷ್ಟೇ ಸಮುದಾಯವಾರು ಮೂವರು ಡಿಸಿಎಂಗಳ ಹುದ್ದೆ ಸೃಜಿಸಬೇಕು ಎಂದು ಸಚಿವ ಕೆ.ಎನ್.‌ ರಾಜಣ್ಣ ಹೇಳಿಕೆ ನೀಡಿ ಕಾಂಗ್ರೆಸ್‌ನಲ್ಲಿ ತೀವ್ರ ಚರ್ಚೆಯನ್ನು ಹುಟ್ಟುಹಾಕಿದ್ದರು. ಈಗ ಲಿಂಗವಾರು ಪ್ರಾತಿನಿಧ್ಯಕ್ಕೆ ಬೇಡಿಕೆ ಬಂದಿದೆ. ಎಂಎಲ್‌ಸಿ ಉಮಾಶ್ರೀ ಮಾತನಾಡಿ, ಮಹಿಳಾ ಡಿಸಿಎಂ ಮಾಡಬೇಕು ಎಂದು ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

VISTARANEWS.COM


on

DK Shivakumar and MLC Umashri
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ (Congress Karnataka) ಎಲ್ಲವೂ ಸರಿ ಇಲ್ಲ. ಸಂಪೂರ್ಣ ಬಹುಮತ ಬಂದು ಅಧಿಕಾರವನ್ನು ಹಿಡಿದರೂ ಪಕ್ಷದೊಳಗಿನ ಭಿನ್ನಮತ ಆಗಾಗ ಸ್ಫೋಟಗೊಳ್ಳುತ್ತಲೇ ಇದೆ. ಈ ಮಧ್ಯೆ ಡಿಸಿಎಂ ದಂಗಲ್‌ ಶುರುವಾಗಿದೆ. ಪೂರ್ಣಾವಧಿಗೆ ಸಿಎಂ ಆಗಿ ಸಿದ್ದರಾಮಯ್ಯ (CM Siddaramaiah) ಅವರೇ ಮುಂದುವರಿಯಲಿದ್ದಾರೆ. ಆದರೆ, ಮೂವರು ಡಿಸಿಎಂಗಳ ಅಗತ್ಯವಿದೆ ಎಂದು ಸಚಿವ ಕೆ.ಎನ್.‌ ರಾಜಣ್ಣ (Minister KN Rajanna) ಪ್ರಸ್ತಾಪ ಮಾಡಿದ್ದರು. ಇದಕ್ಕೆ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ (Home Minister Dr G Parameshwara) ಸಹಮತ ವ್ಯಕ್ತಪಡಿಸಿದ್ದರು. ಈಗ ಮಹಿಳಾ ಡಿಸಿಎಂಗೆ (Women Deputy CM) ಬೇಡಿಕೆ ಎದ್ದಿದೆ.

ಸಮುದಾಯವಾರು ಡಿಸಿಎಂ ಹುದ್ದೆ ಸೃಷ್ಟಿಯಾಗಬೇಕು. ಆಗ ಎಲ್ಲರಿಗೂ ನ್ಯಾಯ ಸಿಗುತ್ತದೆ. ಈ ಸಂಬಂಧ ಹೈಕಮಾಂಡ್‌ಗೆ ಪತ್ರ ಬರೆಯುತ್ತೇನೆ ಎಂದು ಸಚಿವ ಕೆ.ಎನ್.‌ ರಾಜಣ್ಣ ಹೇಳಿದರು. ಈ ಹೇಳಿಕೆಗೆ ಸಾಕಷ್ಟು ಪರ – ವಿರೋಧ ಚರ್ಚೆಗಳೂ ನಡೆದಿದ್ದವು. ಅಲ್ಲದೆ, ಡಿಸಿಎಂ ಡಿ.ಕೆ. ಶಿವಕುಮಾರ್‌ (DCM DK Shivakumar) ಇದಕ್ಕೆ ಸ್ವಲ್ಪ ಖಾರವಾಗಿಯೇ ಪ್ರತಿಕ್ರಿಯೆ ನೀಡಿದ್ದರು. ಈ ಹೇಳಿಕೆ ಬಗ್ಗೆ ಕೆ.ಎನ್.‌ ರಾಜಣ್ಣ ಅವರೇ ಉತ್ತರ ಕೊಡಬೇಕು. ಇಲ್ಲವೇ ಸಿಎಂ ಸಿದ್ದರಾಮಯ್ಯ ಉತ್ತರ ಕೊಡಬೇಕು ಎಂದು ಹೇಳಿಬಿಟ್ಟಿದ್ದರು.

ಇದನ್ನೂ ಓದಿ: Land Auditing : ಬೆಂಗಳೂರಲ್ಲಿ 75000 ಎಕರೆ ಸರ್ಕಾರಿ ಭೂ ಒತ್ತುವರಿ; ಲ್ಯಾಂಡ್‌ ಆಡಿಟಿಂಗ್‌ಗೆ ಸಿಎಂ ಸೂಚನೆ

ಈಗ ಮಹಿಳೆಯರಿಗೂ ಡಿಸಿಎಂ ಹುದ್ದೆ ನೀಡಬೇಕು ಎಂದು ಮಾಜಿ ಸಚಿವೆ, ಹಾಲಿ ಎಂಎಲ್‌ಸಿ ಉಮಾಶ್ರೀ ಹೇಳಿದ್ದಾರೆ. ಆ ಮೂಲಕ ಕೈ ಪಾಳಯದಲ್ಲಿ ಡಿಸಿಎಂ ಹುದ್ದೆ ದಂಗಲ್ ಮುಂದುವರಿದಿದೆ. ಅಲ್ಲದೆ, ಉಮಾಶ್ರೀ ನೇಮಕಕ್ಕೆ ಈ ಹಿಂದೆ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ವಿರೋಧ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ಆದರೂ ಮಹಿಳಾ ಕೋಟಾ ಹಾಗೂ ನೇಕಾರ ಸಮುದಾಯದ ಅಡಿಯಲ್ಲಿ ಅವರನ್ನು ಸಿಎಂ ಸಿದ್ದರಾಮಯ್ಯ ಪರಿಷತ್‌ ಸದಸ್ಯ ಸ್ಥಾನಕ್ಕೆ ನಾಮ ನಿರ್ದೇಶನ ಮಾಡಿದ್ದರು. ಇದರ ಜತೆಗೆ ಉಮಾಶ್ರೀ ಸಹ ಸಿಎಂ ಪಾಳಯದಲ್ಲಿ ಗುರುತಿಸಿಕೊಂಡವರು.

ಈಗ ಉಮಾಶ್ರೀ ನೀಡಿರುವ ಮಹಿಳಾ ಡಿಸಿಎಂ ಹೇಳಿಕೆ ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿದೆ. ಅಲ್ಲದೆ, ಮಂಗಳವಾರ ಸಂಸತ್‌ನಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡನೆಯಾಗಿದೆ. ಇದಲ್ಲದೆ, ಕೆ.ಎನ್.‌ ರಾಜಣ್ಣ ಮಾತನಾಡುತ್ತಾ ಸಮುದಾಯವಾರು ಡಿಸಿಎಂ ಹುದ್ದೆ ಸೃಷ್ಟಿಯಾಗಬೇಕು ಎಂದು ಹೇಳಿದ್ದರು. ಅದೇ ಕಾರಣಕ್ಕಾಗಿಯೇ ಈಗ ಉಮಾಶ್ರೀ ಅವರು, ಸಮುದಾಯವಾರು ಜತೆಗೆ ಲಿಂಗವಾರು ಪ್ರಾತಿನಿಧ್ಯವನ್ನೂ ನೀಡಿ ಎಂಬ ಬೇಡಿಕೆಯನ್ನು ಇಟ್ಟಿದ್ದಾರೆ.

ಇದನ್ನೂ ಓದಿ: ‌Cauvery water dispute : ಕಾವೇರಿ ಬಿಕ್ಕಟ್ಟು ಚರ್ಚೆಗೆ ನಾಳೆ ದೆಹಲಿಯಲ್ಲಿ ಮಹತ್ವದ ಸಭೆ; ಸಿಎಂ, ಡಿಸಿಎಂ ಭಾಗಿ

ಪೂರ್ಣ ಬಹುಮತದೊಂದಿಗೆ, ಸಂಪುಟ ಭರ್ತಿ ಮಾಡಿಕೊಂಡು ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ಸರ್ಕಾರವು ಪದೇ ಪದೆ ಪಕ್ಷದ ಶಾಸಕರು, ಸಚಿವರು ಹಾಗೂ ಮುಖಂಡರಿಂದಲೇ ಮುಜುಗರಕ್ಕೆ ಒಳಗಾಗುತ್ತಿದೆ. ಒಂದು ಸಮಸ್ಯೆ ಬಗೆಹರಿಯುತ್ತಿದೆ ಎನ್ನುವಷ್ಟರಲ್ಲಿ ಇನ್ನೊಂದು ಸಮಸ್ಯೆ ಉದ್ಭವವಾಗುತ್ತಿದೆ. ಈಗಾಗಲೇ ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್‌ ಪರೋಕ್ಷ ಅಸಮಾಧಾನವನ್ನು ಹೊರಹಾಕಿದ್ದಾರೆ. ಆದರೆ, ಚರ್ಚೆ ಮಾತ್ರ ಇನ್ನೂ ನಿಂತಿಲ್ಲ. ಈ ಹಿಂದೆ ಎಂ.ಬಿ. ಪಾಟೀಲ್‌ ಅವರು ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಸಿಎಂ ಎಂದು ನೀಡಿದ್ದ ಹೇಳಿಕೆಗೆ ಡಿಕೆ ಬ್ರದರ್ಸ್‌ ಕೆಂಡವಾಗಿದ್ದರು. ಈಗ ಅವರ ನಡೆ ಏನಿರುತ್ತದೆ ಎಂಬುದು ಸದ್ಯದ ಕುತೂಹಲವಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Actor Darshan: ಒಂದಲ್ಲ, ಎರಡಲ್ಲ, 3 ಕೇಸ್‌ಗಳಲ್ಲಿ ದರ್ಶನ್‌ಗೆ ಸಂಕಷ್ಟ; ಆರೋಪ ಸಾಬೀತಾದರೆ ಯಾವ ಶಿಕ್ಷೆ?

Actor Darshan: ನಟ ದರ್ಶನ್‌ಗೆ ಕೊಲೆ, ಅಪಹರಣ ಹಾಗೂ ಸಾಕ್ಷ್ಯ ನಾಶದ ಪ್ರಕರಣಗಳಲ್ಲಿ ತೀವ್ರ ಸಂಕಷ್ಟ ಎದುರಾಗಲಿದೆ ಎಂದು ಹೇಳಲಾಗುತ್ತಿದೆ. ಹಾಗೊಂದು ವೇಳೆ ಆರೋಪ ಸಾಬೀತಾದರೆ, ದರ್ಶನ್‌ಗೆ ಜೈಲು ಶಿಕ್ಷೆ ಗ್ಯಾರಂಟಿ ಎಂದು ಕಾನೂನು ತಜ್ಞರು ಹೇಳುತ್ತಿದ್ದಾರೆ. ಪ್ರಕರಣದಲ್ಲಿ ದರ್ಶನ್‌, ಪವಿತ್ರಾ ಗೌಡ ಸೇರಿ ಒಂಬತ್ತು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

VISTARANEWS.COM


on

Actor Darshan
Koo

ಬೆಂಗಳೂರು: ನಟನೆ, ಸಿನಿಮಾಗಳ ಜತೆಗೆ ವಿವಾದಗಳಿಂದಲೂ ಹೆಚ್ಚು ಸುದ್ದಿಯಲ್ಲಿರುವ ಸ್ಯಾಂಡಲ್‌ವುಡ್‌ ನಟ ದರ್ಶನ್‌ (Actor Darshan) ಅವರೀಗ ಗಂಭೀರ ಪ್ರಕರಣಗಳಲ್ಲಿ ಸಿಲುಕಿಕೊಂಡಿದ್ದಾರೆ. ಗೆಳತಿ ಪವಿತ್ರಾ ಗೌಡ (Pavithra Gowda) ಅವರಿಗೆ ಅಶ್ಲೀಲ ಮೆಸೇಜ್‌ ಕಳುಹಿಸಿದ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿ (Renukaswamy) ಎಂಬ 28 ವರ್ಷದ ಯುವಕನ ಕೊಲೆ ಪ್ರಕರಣದಲ್ಲಿ ದರ್ಶನ್‌ ಅವರನ್ನು ಬಂಧಿಸಲಾಗಿದೆ. ಅಷ್ಟೇ ಅಲ್ಲ, ದರ್ಶನ್‌ ಅವರ ವಿರುದ್ಧ ಕೊಲೆ, ಅಪಹರಣ ಹಾಗೂ ಸಾಕ್ಷ್ಯನಾಶ ಪ್ರಕರಣಗಳ ಸಂಕಷ್ಟ ಎದುರಾಗಿದ್ದು, ಆರೋಪ ಸಾಬೀತಾದರೆ ಇವರಿಗೆ ಕಠಿಣ ಶಿಕ್ಷೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಕಿಡ್ನ್ಯಾಪ್‌ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐಪಿಸಿ ಸೆಕ್ಷನ್‌ 364ರ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಲಿದ್ದಾರೆ. ಇನ್ನು ಗೋಡೌನ್‌ನಲ್ಲಿ ಇರಿಸಿಕೊಂಡು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದು, ಇದಾದ ಬಳಿಕ ರೇಣುಕಾಸ್ವಾಮಿ ಮೃತಪಟ್ಟಿದ್ದಾನೆ. ಹಾಗಾಗಿ, ಐಪಿಸಿ ಸೆಕ್ಷನ್‌ 302ರ ಅಡಿಯಲ್ಲಿ ಕೇಸ್‌ ದಾಖಲಾಗಲಿದೆ. ಇನ್ನು ಹತ್ಯೆ ಬಳಿಕ ಶವವನ್ನು ಬಿಸಾಕಿದ ಕಾರಣ ಸಾಕ್ಷ್ಯ ನಾಶದ ಪ್ರಕರಣವನ್ನೂ ಸೇರಿಸಲಾಗುತ್ತದೆ. ಹಾಗಾಗಿ, ಯಾವ ಪ್ರಕರಣಗಳಲ್ಲಿ ಆರೋಪ ಸಾಬೀತಾದರೂ ದರ್ಶನ್‌ ಅವರಿಗೆ ಜೈಲು ಶಿಕ್ಷೆಯಾಗಲಿದೆ. ಕೊಲೆ ಕೇಸ್‌ನಲ್ಲಿ ಆರೋಪ ಸಾಬೀತಾದರಂತೂ ಜೀವಾವಧಿ ಶಿಕ್ಷೆಯಾಗುತ್ತದೆ ಎಂದು ಹೇಳಲಾಗುತ್ತಿದೆ.

ಕೊಲೆ ಪ್ರಕರಣದಲ್ಲಿ ಬಂಧನವಾದ ಆರೋಪಿಗಳು

  1. ಪವನ್: ದರ್ಶನ್ ಮನೆಯಲ್ಲಿ ಇರುವ ದರ್ಶನ್ ಅಪ್ತ, ಕಿಡ್ನ್ಯಾಪ್ ಮಾಡಲು ಹೇಳಿದ್ದವನು, ಪವಿತ್ರಾಗೂ ಆಪ್ತ
  1. ಪ್ರದೋಶ್: ಹೋಟೆಲ್ ಉದ್ಯಮಿ
  2. ನಂದೀಶ್: ಹಲ್ಲೆ ಮಾಡಿದ ಮುಖ್ಯ ವ್ಯಕ್ತಿ ಕಿಡ್ನಾಪ್ ಮಾಡಿಕೊಂಡು ಕರೆತಂದವನು
  3. ಕೇಶವಮೂರ್ತಿ: ಪ್ರದೂಶ್ ಗೆಳೆಯ ಹಾಗೂ ಉದ್ಯಮಿ
  4. ರಾಘವೇಂದ್ರ : ದರ್ಶನ್ ಅಭಿಮಾನಿ ಸಂಘದ ಅಧ್ಯಕ್ಷ
  5. ಲಕ್ಷ್ಮಣ್‌
  6. ದೀಪಕ್
  7. ಕಾರ್ತಿಕ್
  8. ಪವಿತ್ರಾ ಗೌಡ

ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂಗೆ ಅಖಿಲ ಕರ್ನಾಟಕ ತೂಗುದೀಪ ಸೇನಾ ಚಿತ್ರದುರ್ಗ ಜಿಲ್ಲಾಧ್ಯಕ್ಷ ರಘು ದರ್ಶನ್‌ ಎಂಬಾತನನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ರೇಣುಕಾಸ್ವಾಮಿ ಅವರನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕಳುಹಿಸಲು ದರ್ಶನ್‌ ಅವರು ರಘು ದರ್ಶನ್‌ ಅವರ ನೆರವು ಪಡೆದಿದ್ದರು ಎನ್ನಲಾಗಿದೆ. ಕೊಲೆ ಕಾರಣಕ್ಕಾಗಿ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆತಂದ ಸಂಚಿನ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ದರ್ಶನ್‌ ಕೈವಾಡವೇನು?

ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಕಳುಹಿಸಿದ ಹಿನ್ನೆಲೆಯಲ್ಲಿ ದರ್ಶನ್‌ ಆಪ್ತರು ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಮತ್ತೊಂದಿಷ್ಟು ಮೂಲಗಳ ಪ್ರಕಾರ, ರೇಣುಕಾಸ್ವಾಮಿ ಮೇಲೆ ದರ್ಶನ್‌ ಅವರೇ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ರೇಣುಕಾಸ್ವಾಮಿ ಮರ್ಮಾಂಗಕ್ಕೆ ಒದ್ದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಇದಾದ ಬಳಿಕ ಗಂಭೀರವಾಗಿ ಗಾಯಗೊಂಡಿದ್ದ ರೇಣುಕಾಸ್ವಾಮಿ ಮೃತಪಟ್ಟಿದ್ದರು. ನಂತರ ಶವವನ್ನು ಚರಂಡಿ ಬಳಿ ಎಸೆಯಲಾಗಿತ್ತು ಎನ್ನಲಾಗಿದೆ.

ಇದನ್ನೂ ಓದಿ: Actor Darshan: ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ ಅರೆಸ್ಟ್‌; ಪೊಲೀಸರು ಹೇಳಿದ್ದೇನು?

Continue Reading

ಸಿನಿಮಾ

Actor Darshan: ರೇಣುಕಾಸ್ವಾಮಿ ಕೊಲೆ ಕೇಸ್; ತನಿಖೆ ಬಳಿಕವೇ ದರ್ಶನ್ ಪಾತ್ರ ಗೊತ್ತಾಗಲಿದೆ ಎಂದ ಸಚಿವ ಪರಮೇಶ್ವರ್‌

Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲು ಅರೆಸ್ಟ್ ಆದ ಆರೋಪಿಗಳು ದರ್ಶನ್‌ ಹೆಸರು ಹೇಳಿದ್ದಾರೆ. ಹೀಗಾಗಿ ಅವರನ್ನ ಅರೆಸ್ಟ್ ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.

VISTARANEWS.COM


on

Actor Darshan
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿ 9 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಇದೀಗ ಪ್ರಕರಣದ ಬಗ್ಗೆ ಗೃಹ ಸಚಿವ ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದು, ಇದು ಮರ್ಡರ್ ಕೇಸ್ ಆಗಿರುವುದರಿಂದ ಸೀರಿಯಸ್‌ ಕೇಸ್ ಆಗಿದೆ. ಇದರಲ್ಲಿ ದರ್ಶನ್ (Actor Darshan) ಪಾತ್ರ ತನಿಖೆ ಬಳಿಕವೇ ಗೊತ್ತಾಗಲಿದೆ. ವೈಯುಕ್ತಿಕ ಕಾರಣಕ್ಕೆ ಕೊಲೆ ಆಗಿದೆಯೋ, ಇದರ ಹಿಂದೆ ಬೇರೆ ಯಾವ ಉದ್ದೇಶ ಇದೆ ಎಂಬುವುದು ತನಿಖೆಯಿಂದ ಗೊತ್ತಾಗಲಿದೆ ಎಂದು ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್‌ ಅವರು, ಮೈಸೂರಿನಲ್ಲಿ ನಟನನ್ನು ಅರೆಸ್ಟ್ ಮಾಡಿದ್ದಾರೆ. ಮೊದಲು ಅರೆಸ್ಟ್ ಆದ ಆರೋಪಿಗಳು ದರ್ಶನ್‌ ಹೆಸರು ಹೇಳಿದ್ದಾರೆ. ಹೀಗಾಗಿ ಅವರನ್ನ ಅರೆಸ್ಟ್ ಮಾಡಲಾಗಿದೆ ಎಂದು ಹೇಳಿದ್ದಾರೆ.

ಆರೋಪಿಗಳನ್ನ ವಿಚಾರಣೆ ಮಾಡುವಾಗ ದರ್ಶನ್ ಹೆಸರು ಬಂದಿದೆ ಅಂತ ಮಾಹಿತಿ ಇದೆ. ಅದರ ಮೇಲೆ ತನಿಖೆ ಆಗುವವರೆಗೂ ಕೂಡ ಏನು ಹೇಳೋಕಾಗಲ್ಲ. ಪ್ರಕರಣದಲ್ಲಿ ಅವರು ನೇರವಾಗಿ ಭಾಗಿಯಾಗಿದ್ದಾರೋ, ಇಲ್ಲವೋ? ತಿಳಿಯಬೇಕು. ಯಾವ ಕಾರಣಕ್ಕೂ ಮರ್ಡರ್ ಆಗಿದೆ. ಇವರ ಹೆಸರು ಯಾಕೆ ಬಂದಿದೆ ಅನ್ನೋದು ತನಿಖೆ ನಂತರ ಗೊತ್ತಾಗುತ್ತೆ. ಈ ಸಂದರ್ಭದಲ್ಲಿ ಬೇರೆ ಏನು ಹೇಳಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Actor Darshan: ಕೊಲೆ ಕೇಸ್‌ಗೆ ಕ್ಷಣಕ್ಕೊಂದು ಟ್ವಿಸ್ಟ್;‌ ದರ್ಶನ್‌ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷನೂ ಅರೆಸ್ಟ್!

ಏನಿದು ಪ್ರಕರಣ?

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ (28) ಎಂಬವರನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಸ್ಯಾಂಡಲ್‌ವುಟ್‌ ನಟ, ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ (Actor Darshan) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನಲ್ಲಿರುವ (Mysore) ದರ್ಶನ್‌ ಅವರ ತೋಟದ ಮನೆಯಲ್ಲಿ ಬೆಂಗಳೂರಿನ ಪೊಲೀಸರು ದರ್ಶನ್‌ ಅವರನ್ನು ಬಂಧಿಸಿದ್ದಾರೆ. ನಟನನ್ನು ಬಂಧಿಸಿರುವ (Actor Darshan Arrested) ಪೊಲೀಸರು ಬೆಂಗಳೂರಿಗೆ ಕರೆದುಕೊಂಡು ಬರುತ್ತಿದ್ದಾರೆ. ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ.

ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ಹಿನ್ನೆಲೆಯಲ್ಲಿ ದರ್ಶನ್‌ ಆಪ್ತರು ಜೂನ್‌ 8ರಂದು ರೇಣುಕಾಸ್ವಾಮಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಬಳಿಕ ಶವವನ್ನು ಎಸೆದು ಹೋಗಿದ್ದರು. ಬೆಂಗಳೂರಿನ ಆರ್‌.ಆರ್‌.ನಗರದ ಸುಮ್ಮನಹಳ್ಳಿಯ ರಾಜಕಾಲುವೆ ಬಳಿ ಜೂನ್‌ 9ರಂದು ಬೀದಿ ನಾಯಿಗಳು ಕಸ ಎಳೆದಾಡುವಾಗ ಶವ ಪತ್ತೆಯಾಗಿತ್ತು. ಇದಾದ ಬಳಿಕ ಅದೇ ದಿನ ರಾಮ್‌ ದೋರ್‌ ಎಂಬ ಸೆಕ್ಯುರಿಟಿ ಗಾರ್ಡ್‌ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಆಗಮಿಸಿದ ವೇಳೆ ಶವದ ಮುಖ, ತಲೆ, ಕಿವಿಗೆ ರಕ್ತಗಾಯವಾಗಿರುವುದು ಕಂಡು ಬಂದಿತ್ತು. ಯಾರೋ‌ ಕೊಲೆ ಮಾಡಿ ತಂದು ಬಿಸಾಡಿರೋ ಅನುಮಾನದ ಮೇಲೆ ಪೊಲೀಸರು ದೂರು ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದರು. ಈ ವೇಳೆ ಇದು ರೇಣುಕಾಸ್ವಾಮಿ ಶವ ಎನ್ನುವುದು ತಿಳಿದು ಬಂದಿತ್ತು.

ಇದನ್ನೂ ಓದಿ | Actor Darshan: ಹತ ರೇಣುಕಾಸ್ವಾಮಿ ಯಾರು? ಕೊಲೆ ಹಿಂದೆ ದರ್ಶನ್‌ ಕೈವಾಡವೇನು? ಇಲ್ಲಿದೆ ಶಾಕಿಂಗ್‌ ಮಾಹಿತಿ

ಈ ಪ್ರಕರಣದಲ್ಲಿ ಸೋಮವಾರ ಗಿರಿನಗರ ಮೂಲದ ಮೂವರು ಆರೋಪಿಗಳು ಸರೆಂಡರ್ ಆಗಿದ್ದರು. ಹಣಕಾಸು ವಿಚಾರವಾಗಿ ಕೊಲೆ ಮಾಡಿದ್ದಾಗಿ ಹೇಳಿದ್ದರು. ಪೊಲೀಸರಿಗೆ ಅನುಮಾನ ಬಂದು ತೀವ್ರ ವಿಚಾರಣೆ ಮಾಡಿದಾಗ ದರ್ಶನ್ ಹೆಸರು ಬಾಯಿ ಬಿಟ್ಟಿದ್ದಾರೆ. ಸದ್ಯ ಈ ಪ್ರಕರಣದಲ್ಲಿ ದರ್ಶನ್‌ ಅವರ ಪಾತ್ರದ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹಸಚಿವ ಜಿ.ಪರಮೇಶ್ವರ್‌ ಮಾಹಿತಿ ಕಲೆ ಹಾಕುತ್ತಿದ್ದಾರೆ.

Continue Reading

ಕರ್ನಾಟಕ

Actor Darshan: ಕೊಲೆ ಕೇಸ್‌ಗೆ ಕ್ಷಣಕ್ಕೊಂದು ಟ್ವಿಸ್ಟ್;‌ ದರ್ಶನ್‌ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷನೂ ಅರೆಸ್ಟ್!

Actor Darshan: ರೇಣುಕಾಸ್ವಾಮಿ ಎಂಬ ಯುವಕನ ಕೊಲೆ ಪ್ರಕರಣದಲ್ಲಿ ಪೊಲೀಸರು ದರ್ಶನ್‌, ಪವಿತ್ರಾಗೌಡ ಸೇರಿ 9 ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮಾಕ್ಷಿಪಾಳ್ಯ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ ದರ್ಶನ್‌ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ ರಾಘವೇಂದ್ರ ಎಂಬಾತನನ್ನೂ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

Actor Darshan
Koo

ಬೆಂಗಳೂರು: ನಟ ದರ್ಶನ್‌ ಗೆಳತಿ, ನಟಿಯೂ ಆದ ಪವಿತ್ರಾ ಗೌಡ (Pavithra Gowda) ಅವರ ಕುರಿತು ಅಶ್ಲೀಲ ಪೋಸ್ಟ್‌ ಮಾಡಿದ ಹಿನ್ನೆಲೆಯಲ್ಲಿ ನಡೆದ ರೇಣುಕಾಸ್ವಾಮಿ ಎಂಬ ಯುವಕನ ಕೊಲೆ ಪ್ರಕರಣಕ್ಕೆ ಕ್ಷಣಕ್ಕೊಂದು ತಿರುವುಗಳು ಸಿಗುತ್ತಿವೆ. ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ (Actor Darshan) ಹಾಗೂ ಅವರ ಗೆಳತಿ ಪವಿತ್ರಾ ಗೌಡ ಅವರನ್ನು ಪೊಲೀಸರು ಬಂಧಿಸಿದ ಬೆನ್ನಲ್ಲೇ, ಇದೇ ಕೇಸ್‌ಗೆ ಸಂಬಂಧಿಸಿದಂತೆ ದರ್ಶನ್‌ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ ರಾಘವೇಂದ್ರ (Raghavendra) ಅಲಿಯಾಸ್‌ ರಘು ದರ್ಶನ್‌ ಎಂಬಾತನನ್ನೂ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಹೌದು, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂಗೆ ಅಖಿಲ ಕರ್ನಾಟಕ ತೂಗುದೀಪ ಸೇನಾ ಚಿತ್ರದುರ್ಗ ಜಿಲ್ಲಾಧ್ಯಕ್ಷ ರಘು ದರ್ಶನ್‌ ಎಂಬಾತನನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ರೇಣುಕಾಸ್ವಾಮಿ ಅವರನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕಳುಹಿಸಲು ದರ್ಶನ್‌ ಅವರು ರಘು ದರ್ಶನ್‌ ಅವರ ನೆರವು ಪಡೆದಿದ್ದರು ಎನ್ನಲಾಗಿದೆ. ಕೊಲೆ ಕಾರಣಕ್ಕಾಗಿ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆತಂದ ಸಂಚಿನ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ರೇಣುಕಾಸ್ವಾಮಿ ಪತ್ನಿ ಗರ್ಭಿಣಿ

ರೇಣುಕಾಸ್ವಾಮಿ ಹಾಗೂ ಸಹನಾ 2023ರ ಜೂನ್‌ 28ರಂದು ಮದುವೆಯಾಗಿದ್ದರು. ಇನ್ನೇನು ಕೆಲವೇ ದಿನಗಳಲ್ಲಿ ಇಬ್ಬರೂ ಮೊದಲ ವಿವಾಹ ವಾರ್ಷಿಕೋತ್ಸವ ಆಚರಿಸುವವರಿದ್ದರು. ಇದರ ಮಧ್ಯೆಯೇ ರೇಣುಕಾಸ್ವಾಮಿಯನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಸಹನಾ ಈಗ ಐದು ತಿಂಗಳ ಗರ್ಭಿಣಿಯಾಗಿದ್ದು, ಅವರಿಗೆ ರೇಣುಕಾಸ್ವಾಮಿ ಸಾವಿಗೀಡಾಗಿರುವ ವಿಚಾರವನ್ನು ಕುಟುಂಬಸ್ಥರು ಇನ್ನೂ ತಿಳಿಸಿಲ್ಲ. ಆಸ್ಪತ್ರೆಯಲ್ಲಿದ್ದಾನೆ, ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದಷ್ಟೇ ಹೇಳಿದ್ದಾರೆ. ಪತಿಯ ಸಾವಿನ ವಿಚಾರ ತಿಳಿದರೆ, ಗರ್ಭವತಿಯಾಗಿರುವ ಸಹನಾಗೆ ಏನಾಗುತ್ತದೆಯೋ ಎಂಬ ಭಯದಿಂದ ಕುಟುಂಬಸ್ಥರು ಸಾವಿನ ವಿಚಾರ ತಿಳಿಸಿಲ್ಲ ಎಂದು ಹೇಳಲಾಗುತ್ತಿದೆ.

ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ಹಿನ್ನೆಲೆಯಲ್ಲಿ ದರ್ಶನ್‌ ಆಪ್ತರು ಜೂನ್‌ 8ರಂದು ರೇಣುಕಾಸ್ವಾಮಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಸುಮ್ಮನಹಳ್ಳಿಯ ರಾಜಕಾಲುವೆ ಬಳಿ ಅಪರಿಚಿತ ಶವ ಪತ್ತೆಯಾಗಿತ್ತು. ಜೂನ್‌ 9ರ ಭಾನುವಾರ ರಾಜಕಾಲುವೆ ಬಳಿ ಶವ ಪತ್ತೆಯಾಗಿತ್ತು. ಬೀದಿ ನಾಯಿಗಳು ಕಸ ಎಳೆದಾಡುವಾಗ ಶವ ಪತ್ತೆಯಾಗಿತ್ತು. ಇದಾದ ಬಳಿಕ ಅದೇ ದಿನ ರಾಮ್‌ ದೋರ್‌ ಎಂಬ ಸೆಕ್ಯುರಿಟಿ ಗಾರ್ಡ್‌ ಪೊಲೀಸರಿಗೆ ದೂರು ನೀಡಿದ್ದರು. ಇದಾದ ನಂತರ ಪೊಲೀಸರು ತನಿಖೆ ನಡೆಸಿದ್ದರು.

ಇದನ್ನೂ ಓದಿ: Actor Darshan: ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ ಅರೆಸ್ಟ್‌; ಪೊಲೀಸರು ಹೇಳಿದ್ದೇನು?

Continue Reading

ದಕ್ಷಿಣ ಕನ್ನಡ

Drowned in water : ಅಪ್ಪಳಿಸಿ ಬಂದ ರಕ್ಕಸ ಅಲೆಗೆ ಕೊಚ್ಚಿ ಹೋದ ಮಹಿಳೆ ಸಾವು; ಮೂವರ ರಕ್ಷಣೆ

Drowned in water : ನಾಲ್ಕೈದು ಮಹಿಳೆಯರ ತಂಡವೊಂದು ಪ್ರವಾಸಕ್ಕೆಂದು ಆಂಧ್ರಪ್ರದೇಶದಿಂದ ಕರ್ನಾಟಕಕ್ಕೆ ಬಂದಿದ್ದರು. ಉಳ್ಳಾಲ ಸಮುದ್ರ ತೀರ ವಿಹಾರಕ್ಕೆ ಬಂದಾಗ ಅಲೆಗಳು ಅಪ್ಪಳಿಸಿದ್ದು, ಒಬ್ಬರು ಮೃತಪಟ್ಟರೆ ಮೂವರು ಅಪಾಯದಿಂದ ಪಾರಾಗಿದ್ದಾರೆ.

VISTARANEWS.COM


on

By

Drowned in water
ಸಾಂದರ್ಭಿಕ ಚಿತ್ರ
Koo

ಮಂಗಳೂರು: ಮಂಗಳೂರಿನ ಉಳ್ಳಾಲ ಕಡಲತೀರದಲ್ಲಿ (Drowned in water) ಸಮುದ್ರಪಾಲಾಗುತ್ತಿದ್ದ ಮೂವರು ಮಹಿಳೆಯರ ರಕ್ಷಣೆ ಮಾಡಲಾಗಿದ್ದು, ಓರ್ವ ಮಹಿಳೆ ನೀರುಪಾಲಾಗಿದ್ದಾರೆ. ಪಿ.ಎಲ್ ಪ್ರಸನ್ನ ಎಂಬುವರ ಪತ್ನಿ ಪರಿಮೀ ರತ್ನ ಕುಮಾರಿ (57) ನೀರುಪಾಲಾದವರು.

ಆಂಧ್ರಪ್ರದೇಶದ ಕೊಂಡಾಪುರದ ಸಿರಿಲಿಂಗಪಲ್ಲಿ ನಿವಾಸಿಗಳು ಎಂದು ತಿಳಿದು ಬಂದಿದೆ. ಪರಿಮೀ ರತ್ನ ಕುಮಾರಿ ಹಾಗೂ ಅವರ ಸ್ನೇಹಿತರು ಪ್ರವಾಸಕ್ಕೆಂದು ಆಂಧ್ರಪ್ರದೇಶದಿಂದ ಬಂದಿದ್ದರು. ಸಮುದ್ರಕ್ಕಿಳಿದಾಗ ಬೃಹತ್ ಗಾತ್ರದ ಅಲೆಯೊಂದು ಅಪ್ಪಳಿಸಿದಾಗ ನಾಲ್ವರು ಮಹಿಳೆಯರನ್ನು ಎಳೆದುಹೋಗಿದೆ.

ಕೂಡಲೇ ಎಚ್ಚೆತ್ತ ಸ್ಥಳೀಯರು ಕೊಚ್ಚಿ ಹೋಗುತ್ತಿದ್ದವರನ್ನು ತಕ್ಷಣ ಸಮುದ್ರದಿಂದ ಹೊರಗೆಳೆದು ರಕ್ಷಿಸಿದ್ದಾರೆ. ಈ ಪೈಕಿ ಪರಿಮೀ ರತ್ನ ಕುಮಾರಿ ಪ್ರಜ್ಞೆ ತಪ್ಪಿದ್ದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ಹೈದರಾಬಾದ್‌ನಿಂದ 5 ಮಂದಿ ಮಹಿಳೆಯರ ತಂಡ ಜೂ.6 ಕ್ಕೆ ಮೈಸೂರಿಗೆ ವಿಮಾನದ ಮೂಲಕ ಬಂದಿಳಿದಿದ್ದರು. ಅಲ್ಲಿ ಪ್ರವಾಸ ಮುಗಿಸಿ ಇನೋವಾ ಕಾರಿನ ಮೂಲಕ ಜೂ.7 ಕ್ಕೆ ಕೊಡಗಿಗೆ ತಲುಪಿತ್ತು. ಅಲ್ಲಿಂದ ಜೂ.9 ಕ್ಕೆ ಸುಬ್ರಹ್ಮಣ್ಯ ಕ್ಷೇತ್ರ ಸಂದರ್ಶನ ನಡೆಸಿ, ನಿನ್ನೆ ಸೋಮವಾರವಷ್ಟೇ ಧರ್ಮಸ್ಥಳ ಸಂದರ್ಶನ ನಡೆಸಿದ್ದರು. ಉಳ್ಳಾಲ ಸಮುದ್ರ ತೀರ ವಿಹಾರಕ್ಕೆ ಬಂದಾಗ ಈ ದುರ್ಘಟನೆ ನಡೆದಿದೆ.

ಇದನ್ನೂ ಓದಿ: Black Magic : 25 ಕುರಿ-ಮೇಕೆಗಳ ರುಂಡ ಕತ್ತರಿಸಿ ವ್ಯಕ್ತಿಗಳ ಫೋಟೊ ಇಟ್ಟು ಭಯಾನಕ ವಾಮಾಚಾರ!

ಪ್ರಾಣ ಕಸಿದ ಸೆಲ್ಫಿ ಕ್ರೇಜ್; ಫಾಲ್ಸ್‌ನಲ್ಲಿ ಕಾಲು ಜಾರಿ ಬಿದ್ದ ಪ್ರವಾಸಿಗ ಸಾವು

ಚಿಕ್ಕಮಗಳೂರು: ಸೆಲ್ಫಿ ಕ್ರೇಜ್‌ಗೆ (Selfie Craze)​ ಯುವಕನೊಬ್ಬ ಬಲಿಯಾಗಿದ್ದಾನೆ. ಫಾಲ್ಸ್‌ನಲ್ಲಿ (Hebbe Waterfalls) ಕಾಲು ಜಾರಿ ಬಿದ್ದು ಪ್ರವಾಸಿಗ ಮೃತಪಟ್ಟಿದ್ದಾನೆ. ಹೈದರಾಬಾದ್ ಮೂಲದ ಶ್ರವಣ್ (25) ಮೃತ ದುರ್ದೈವಿ. ಚಿಕ್ಕಮಗಳೂರಿನ ತರೀಕೆರೆ ತಾಲೂಕಿನ ಹೆಬ್ಬೆ ಫಾಲ್ಸ್‌ನಲ್ಲಿ ಘಟನೆ ನಡೆದಿದೆ.

ಶ್ರವಣ್‌ ತನ್ನ ಸ್ನೇಹಿತನೊಂದಿಗೆ ಹೈದರಾಬಾದ್‌ನಿಂದ‌ ಚಿಕ್ಕಮಗಳೂರು ಪ್ರವಾಸ ಕೈಗೊಂಡಿದ್ದ. ಸೋಮವಾರ ಬೆಳಗ್ಗೆ ಬೈಕ್‌ನಲ್ಲಿ ಹೆಬ್ಬೆ ಫಾಲ್ಸ್‌ಗೆ ತೆರಳಿದ್ದ. ಹೆಬ್ಬೆ ಫಾಲ್ಸ್‌ನಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ಬಿದ್ದಿದ್ದಾನೆ.

ಬಿದ್ದ ರಭಸಕ್ಕೆ ತಲೆಗೆ ತೀವ್ರ ಪೆಟ್ಟಾಗಿದ್ದು, ಕೂಡಲೇ ಆಸ್ಪತ್ರೆಗೆ ಕರೆತರಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Narendra Modi
ದೇಶ3 mins ago

Narendra Modi: ಮೊದಲ ಕ್ಯಾಬಿನೆಟ್‌ ಸಭೆಯಲ್ಲಿ ಪ್ರಧಾನಿ ಮೋದಿ ಸಚಿವರಿಗೆ ಹೇಳಿದ ಕಿವಿ ಮಾತು ಇದು

Actor Darshan
ಸಿನಿಮಾ13 mins ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Danielle Wyatt Marriage
ಕ್ರೀಡೆ31 mins ago

Danielle Wyatt Marriage: ಸಲಿಂಗ ಸಂಗಾತಿಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಇಂಗ್ಲೆಂಡ್ ಮಹಿಳಾ ಕ್ರಿಕೆಟ್​ ತಂಡದ ಆಟಗಾರ್ತಿ

Actor Darshan
ಕರ್ನಾಟಕ36 mins ago

Actor Darshan: ಒಂದಲ್ಲ, ಎರಡಲ್ಲ, 3 ಕೇಸ್‌ಗಳಲ್ಲಿ ದರ್ಶನ್‌ಗೆ ಸಂಕಷ್ಟ; ಆರೋಪ ಸಾಬೀತಾದರೆ ಯಾವ ಶಿಕ್ಷೆ?

Supreme Court
ದೇಶ38 mins ago

Supreme Court: ನೀಟ್​ ಅಕ್ರಮ ಆರೋಪ; ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ ನೋಟಿಸ್‌ ಜಾರಿ ಮಾಡಿದ ಸುಪ್ರೀಂ ಕೋರ್ಟ್‌

Actor Darshan
ಸಿನಿಮಾ44 mins ago

Actor Darshan: ರೇಣುಕಾಸ್ವಾಮಿ ಕೊಲೆ ಕೇಸ್; ತನಿಖೆ ಬಳಿಕವೇ ದರ್ಶನ್ ಪಾತ್ರ ಗೊತ್ತಾಗಲಿದೆ ಎಂದ ಸಚಿವ ಪರಮೇಶ್ವರ್‌

Actor Darshan
ಕರ್ನಾಟಕ1 hour ago

Actor Darshan: ಕೊಲೆ ಕೇಸ್‌ಗೆ ಕ್ಷಣಕ್ಕೊಂದು ಟ್ವಿಸ್ಟ್;‌ ದರ್ಶನ್‌ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷನೂ ಅರೆಸ್ಟ್!

Champions Trophy 2025
ಕ್ರಿಕೆಟ್1 hour ago

Champions Trophy 2025: ಲಾಹೋರ್​ನಲ್ಲಿ ಭಾರತದ ಪಂದ್ಯ ಆಯೋಜನೆಗೆ ಸಿದ್ಧತೆ ಆರಂಭಿಸಿದ ಪಾಕ್​ ಕ್ರಿಕೆಟ್​ ಮಂಡಳಿ

Drowned in water
ದಕ್ಷಿಣ ಕನ್ನಡ2 hours ago

Drowned in water : ಅಪ್ಪಳಿಸಿ ಬಂದ ರಕ್ಕಸ ಅಲೆಗೆ ಕೊಚ್ಚಿ ಹೋದ ಮಹಿಳೆ ಸಾವು; ಮೂವರ ರಕ್ಷಣೆ

Actor Darshan
ಕರ್ನಾಟಕ2 hours ago

Actor Darshan: ಕಳೆದ ವರ್ಷ ಮದುವೆಯಾಗಿದ್ದ ರೇಣುಕಾಸ್ವಾಮಿ ಪತ್ನಿ ಗರ್ಭಿಣಿ; ಸಾವಿನ ವಿಚಾರ ಆಕೆಗೆ ಗೊತ್ತೇ ಇಲ್ಲ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಸಿನಿಮಾ13 mins ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ3 hours ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ21 hours ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ4 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ4 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 week ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ1 week ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

ಟ್ರೆಂಡಿಂಗ್‌