VISTARA TOP 10 NEWS : ರಾಜ್ಯಕ್ಕೆ ಸುಪ್ರೀಂ ಕೋರ್ಟಲ್ಲೂ ಶಾಕ್‌, ಕೆನಡಾದಲ್ಲಿ ಮತ್ತೊಬ್ಬ ಖಲಿಸ್ತಾನಿ ಉಗ್ರನ ಹತ್ಯೆ ಇತರ ಪ್ರಮುಖ ಸುದ್ದಿಗಳು - Vistara News

ಕರ್ನಾಟಕ

VISTARA TOP 10 NEWS : ರಾಜ್ಯಕ್ಕೆ ಸುಪ್ರೀಂ ಕೋರ್ಟಲ್ಲೂ ಶಾಕ್‌, ಕೆನಡಾದಲ್ಲಿ ಮತ್ತೊಬ್ಬ ಖಲಿಸ್ತಾನಿ ಉಗ್ರನ ಹತ್ಯೆ ಇತರ ಪ್ರಮುಖ ಸುದ್ದಿಗಳು

VISTARA TOP 10 NEWS: ತಮಿಳುನಾಡಿಗೆ ಪ್ರತಿ ದಿನ 5000 ಕ್ಯೂಸೆಕ್‌ ನೀರು ಬಿಡುಗಡೆ ಮಾಡಬೇಕು ಎಂಬ ಕಾವೇರಿ ನೀರು ನಿಯಂತ್ರಣ ಮಂಡಳಿ ಆದೇಶ ಮತ್ತು ಅದನ್ನು ಎತ್ತಿ ಹಿಡಿದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ಗುರುವಾರ ನಡೆದ ಮಹತ್ವದ ವಿಚಾರಣೆ ವೇಳೆ ಸುಪ್ರೀಂಕೋರ್ಟ್‌ ಎತ್ತಿಹಿಡಿದಿದೆ. ಇದೂ ಸೇರಿದಂತೆ ಇನ್ನೂ ಹಲವು ಸುದ್ದಿಗಳು ಇಲ್ಲಿವೆ.

VISTARANEWS.COM


on

Top 10 news
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

1. ರಾಜ್ಯಕ್ಕೆ ಸುಪ್ರೀಂ ಕೋರ್ಟಲ್ಲೂ ಶಾಕ್‌; ಕಾವೇರಿ ಪ್ರಾಧಿಕಾರ ಆದೇಶವೇ ಸರಿ ಎಂದ ಪೀಠ, ನ್ಯಾಯ ಎಲ್ಲಿದೆ?
ಕಾವೇರಿ ಜಲ ವಿವಾದಕ್ಕೆ (Cauvery dispute) ಸಂಬಂಧಿಸಿ ರಾಜ್ಯಕ್ಕೆ ಸುಪ್ರೀಂಕೋರ್ಟ್‌ (Supreme Court) ಕೂಡಾ ನ್ಯಾಯ ಕೊಡಲಿಲ್ಲ. ತಮಿಳುನಾಡಿಗೆ ಪ್ರತಿ ದಿನ 5000 ಕ್ಯೂಸೆಕ್‌ ನೀರು ಬಿಡುಗಡೆ ಮಾಡಬೇಕು ಎಂಬ ಕಾವೇರಿ ನೀರು ನಿಯಂತ್ರಣ ಮಂಡಳಿ ಆದೇಶ ಮತ್ತು ಅದನ್ನು ಎತ್ತಿ ಹಿಡಿದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ಗುರುವಾರ ನಡೆದ ಮಹತ್ವದ ವಿಚಾರಣೆ ವೇಳೆ ಸುಪ್ರೀಂಕೋರ್ಟ್‌ ಎತ್ತಿಹಿಡಿದಿದೆ. ಜತೆಗೆ ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿ ದಿನವೂ 5000 ಕ್ಯೂಸೆಕ್‌ ನೀರು ಬಿಡುಗಡೆ ಮಾಡುವಂತೆ ಆದೇಶ ನೀಡಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್​ ಮಾಡಿ.
ಈ ಸುದ್ದಿಯನ್ನೂ ಓದಿ: ಕಾವೇರಿ ಕೊಳ್ಳದಲ್ಲಿ ಭುಗಿಲೆದ್ದ ಆಕ್ರೋಶ; ಕೆಆರ್‌ಎಸ್‌ಗೆ ನುಗ್ಗಲು ಯತ್ನಿಸಿದ ರೈತರು ವಶಕ್ಕೆ, ಸೆ.23ಕ್ಕೆ ಮಂಡ್ಯ ಬಂದ್
ಹೆಜ್ಜೆ ಹೆಜ್ಜೆಗೂ ತಪ್ಪು, ನಿರ್ಲಕ್ಷ್ಯ, ಸ್ವಾರ್ಥ ರಾಜಕಾರಣ; ಕಾವೇರಿ ಹಿನ್ನಡೆಗೆ ಕಾರಣ ಪಟ್ಟಿ ಮಾಡಿದ HDK

2. ಕೆನಡಾದಲ್ಲಿ ಮತ್ತೊಬ್ಬ ಭಾರತ ವಿರೋಧಿ ಖಲಿಸ್ತಾನಿ ಉಗ್ರನ ಹತ್ಯೆ
ಕೆನಡಾದಲ್ಲಿ ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆಯ ಹಿಂದೆ ಭಾರತದ ಕೈವಾಡ ಇದೆ ಎಂದು ಕೆನಡಾ ಸರ್ಕಾರ ಆರೋಪಿಸಿದ ಬೆನ್ನಲ್ಲೇ ಕೆನಡಾದಲ್ಲಿ ಮತ್ತೊಬ್ಬ ಭಾರತ ವಿರೋಧಿ ಖಲಿಸ್ತಾನಿ ಉಗ್ರನನ್ನು (Khalistani Terrorist) ಹತ್ಯೆಯಾಗಿದೆ. ಪಂಜಾಬ್‌ ಮೂಲದ ಗ್ಯಾಂಗ್‌ಸ್ಟರ್‌ ಸುಖ್‌ದೂಲ್‌ ಸಿಂಗ್‌ನನ್ನು (Sukha Duneke) (ಸುಖಾ ದುನೆಕೆ ಎಂದೇ ಖ್ಯಾತಿ) ಬುಧವಾರ (ಸೆಪ್ಟೆಂಬರ್‌ 20) ರಾತ್ರಿ ಹತ್ಯೆ ಮಾಡಿರುವುದು ಈಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ಈ ಸುದ್ದಿಯನ್ನೂ ಓದಿ : ಕೆನಡಾಗೆ ಭಾರತ ಮತ್ತೊಂದು ಗುದ್ದು; ವೀಸಾ ಸೇವೆಯೇ ರದ್ದು
ಕೆನಡಾದ ಜಸ್ಟಿನ್‌ ಟ್ರುಡೋ ಸರ್ಕಾರ ಖಲಿಸ್ತಾನಿಗಳಿಗೆ ಬೆಂಬಲ ನೀಡುತ್ತಿರುವುದೇಕೆ? ಇಲ್ಲಿದೆ ಇನ್‌ಸೈಡ್‌ ಸ್ಟೋರಿ!

3.ಮೈತ್ರಿ ಮಾತುಕತೆಗೆ ವೇದಿಕೆ ರೆಡಿ; ಆ ಆರು ಕ್ಷೇತ್ರ ಕೇಳಲು ಮುಂದಾದ ಜೆಡಿಎಸ್‌; ಬಿಜೆಪಿ ಒಪ್ಪುತ್ತಾ?
ಬಹುಸಮಯದಿಂದ ಸುದ್ದಿ ಮಾಡುತ್ತಿದ್ದ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ (BJP-JDS Alliance) ಈಗ ನನಸಾಗುವ ಕಾಲ ಸನ್ನಿಹಿತವಾಗಿದೆ. 2024ರ ಲೋಕಸಭಾ ಚುನಾವಣೆಯನ್ನು (Parliament Elections 2024) ದೃಷ್ಟಿಯಲ್ಲಿಟ್ಟುಕೊಂಡು ಕಾಂಗ್ರೆಸ್‌ನ್ನು ಮಣಿಸುವ ಉದ್ದೇಶದಿಂದ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಳ್ಳುವುದು ಖಚಿತ ಎಂಬ ಬಗ್ಗೆ ಹಲವು ಸಮಯದಿಂದ ಕಾಣುತ್ತಿದ್ದ ಸಂಜ್ಞೆಗಳು ಈಗ ನಿಜವಾಗಿದೆ. ಮೈತ್ರಿ ಮತ್ತು ಸೀಟು ಹಂಚಿಕೆಯ ಮಹತ್ವದ ಮಾತುಕತೆಗಾಗಿ ವೇದಿಕೆ ಅಣಿಯಾಗಿದ್ದು, ಬಿಜೆಪಿ ಕಡೆಯಿಂದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ (JP Nadda) ಮತ್ತು ಹಿರಿಯ ನಾಯಕ ಅಮಿತ್‌ ಶಾ (Amit Shah), ಜೆಡಿಎಸ್‌ ಕಡೆಯಿಂದ ಎಚ್‌.ಡಿ ದೇವೇಗೌಡರು (HD Devegowda) ಮತ್ತು ಎಚ್‌.ಡಿ ಕುಮಾರಸ್ವಾಮಿ (HD Kumaraswamy) ಅವರು ಮಾತುಕತೆ ನಡೆಸಲಿದ್ದಾರೆ. ಗುರುವಾರ ರಾತ್ರಿಯೇ ಈ ಮಾತುಕತೆ ನಡೆದು ಶುಕ್ರವಾರ ಜಂಟಿ ಪತ್ರಿಕಾಗೋಷ್ಠಿ ನಡೆಯುವ ಸಾಧ್ಯತೆ ಇದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್​ ಮಾಡಿ.

4. ರಾಜ್ಯಸಭೆಯಲ್ಲಿ ‘ಮೀಸಲು’ ಭಾರೀ ಚರ್ಚೆ; ಖರ್ಗೆ-ನಡ್ಡಾ ಮಧ್ಯೆ ಜಟಾಪಟಿ
ಲೋಕಸಭೆಯಲ್ಲಿ (Lok Sabha) ಭಾರೀ ಮತಗಳೊಂದಿಗೆ ಅಂಗೀಕಾವಾದ, ‘ನಾರಿ ಶಕ್ತಿ ವಂದನ್ ಅಧಿನಿಯಮ್’ ಎಂದು ಕರೆಯಲಾಗುವ ಮಹಿಳಾ ಮೀಸಲು ವಿಧೇಯಕವನ್ನು (Women’s Reservation Bill) ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘ್ವಾಲ್ ಅವರು ಗುರುವಾರ ಸಂಸತ್ತಿನ ಮೇಲ್ಮನೆಯಾದ ರಾಜ್ಯಸಭೆಯಲ್ಲಿ (Rajya Sabha) ಮಂಡಿಸಿದರು. ರಾಜ್ಯಸಭೆಯಲ್ಲೂ ಈ ವಿಧೇಯಕದ ಕುರಿತು ಕಾಂಗ್ರೆಸ್ ಸಂಸದ, ಪ್ರತಿ ಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ(Mallikarjun Kharge), ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ (JP Nadda) ಸೇರಿದಂತೆ ಪ್ರಮುಖ ನಾಯಕರು ಮಾತನಾಡಿದ್ದಾರೆ. ಈ ಮಧ್ಯೆ, ಖರ್ಗೆ ಮತ್ತು ನಡ್ಡಾ ಮಧ್ಯೆ ವಾಗ್ವಾದ ಕೂಡ ನಡೆಯಿತು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್​ ಮಾಡಿ.

5. ಚಂದ್ರನ ಮೇಲೆ ಬೆಳಗಾಯಿತು; ನಿದ್ರೆಯಿಂದ ಏಳುವುದೇ ಲ್ಯಾಂಡರ್‌, ರೋವರ್?‌
ಚಂದ್ರನ ಮೇಲೆ ರಾತ್ರಿ (moon night) ಮುಗಿದು (ಭೂಮಿಯ ಹದಿನಾಲ್ಕು ದಿನ, ಚಂದ್ರನ ಒಂದು ದಿನಕ್ಕೆ ಸಮ) ಬುಧವಾರ ಮುಂಜಾನೆಯಾಗಿದೆ. ಸೂರ್ಯನ ಬೆಳಕಿನ ಅನುಪಸ್ಥಿತಿಯಲ್ಲಿ ಕಾರ್ಯಾಚರಣೆ ನಿಲ್ಲಿಸಿದ್ದ ಇಸ್ರೋದ (ISRO) ಚಂದ್ರಯಾನ- 3 (Chandrayaan 3) ಮಿಷನ್‌ನ ಲ್ಯಾಂಡರ್ ಮತ್ತು ರೋವರ್ ಮಾಡ್ಯೂಲ್‌ಗಳು ಮತ್ತೆ ಕಾರ್ಯಾರಂಭಿಸಲಿವೆಯೇ ಎಂಬ ಕುತೂಹಲ ಎದುರಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್​ ಮಾಡಿ.

6. ಕರ್ನಾಟಕ ಮುಕ್ತ ವಿವಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಒಂದು ದಿನ ಮೊದಲೇ ಮಾರಾಟ!

7. ಆಸ್ಟ್ರೇಲಿಯಾ ವಿರುದ್ಧ ಸರಣಿ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಕೆಲವು ಸಂಗತಿಗಳು ಇಲ್ಲಿವೆ

8. ಕರ್ನಾಟಕದ ‘ಅಕ್ರಮ’ ಅದಿರು ಗಣಿಗಳಿಗೆ ಹೊಸ ಲೀಸ್! ಒಪ್ಪಿಗೆ ನೀಡಿದ ಕೇಂದ್ರ ಅರಣ್ಯ ಸಲಹಾ ಸಮಿತಿ

9. ಭಾರತೀಯ ವೈದ್ಯಕೀಯ ಪದವೀಧರರು ಇನ್ನು ಅಮೆರಿಕ, ಆಸ್ಟ್ರೇಲಿಯದಲ್ಲೂ ಪ್ರಾಕ್ಟೀಸ್‌ ಮಾಡಬಹುದು!

10. ವ್ಹೀಲ್‌ ಇರುವ ಬ್ಯಾಗ್ ತಲೆಮೇಲೆ ಹೊತ್ತು ತಿರುಗಿದ ರಾಹುಲ್‌ ಗಾಂಧಿ; ಭಾರಿ ಟ್ರೋಲ್
ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Siddaramaiah: ಅಮಿತ್‌ ಶಾ-ಸಿದ್ದರಾಮಯ್ಯ ಭೇಟಿ; ರಾಜ್ಯದ 5 ನಗರಗಳಲ್ಲಿ ಸೇಫ್‌ ಸಿಟಿ ಯೋಜನೆ ಜಾರಿಗೆ ಒತ್ತಾಯ

Siddaramaiah: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ (ಜೂನ್‌ 28) ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿ ರಾಜ್ಯದ ಪೊಲೀಸ್‌ ಪಡೆಯ ಬಲವರ್ಧನೆಗೆ ಸಂಬಂಧಿಸಿದ ವಿವಿಧ ಪ್ರಸ್ತಾವನೆಗಳ ಮಂಜೂರಾತಿ ಕುರಿತಂತೆ ಗಮನ ಸೆಳೆದರು. ಹಾಗೆಯೇ, ಹಲವು ಮನವಿಗಳನ್ನು ಕೂಡ ಸಿದ್ದರಾಮಯ್ಯ ಮಾಡಿದರು.

VISTARANEWS.COM


on

CM SIddaramaiah
Koo

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬೀಡು ಬಿಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಸಾಲು ಸಾಲು ಸಭೆ ನಡೆಸುತ್ತಿದ್ದಾರೆ. ಇದರ ಮಧ್ಯೆಯೇ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಅವರನ್ನು ದೆಹಲಿಯಲ್ಲಿ ಭೇಟಿಯಾಗಿದ್ದು, ಕರ್ನಾಟಕದ 5 ನಗರಗಳಲ್ಲಿ ಸೇಫ್‌ ಸಿಟಿ ಯೋಜನೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕರ್ನಾಟಕ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡಲು ಮತ್ತು ಸಾರ್ವಜನಿಕರ ಸುರಕ್ಷತೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರದಿಂದ ಅಗತ್ಯವಿರುವ ನೆರವಿನ ಕುರಿತ ಹಲವು ಪ್ರಸ್ತಾವನೆಗಳಿಗೆ ಅನುಮೋದನೆ ನೀಡುವಂತೆ ಮನವಿ ಮಾಡಿದರು. ನಿರ್ಭಯಾ ನಿಧಿಯಡಿಯಲ್ಲಿ ಬೆಂಗಳೂರು ನಗರದಂತೆಯೇ ಮೈಸೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಮಂಗಳೂರು ಹಾಗೂ ಕಲಬುರಗಿ ನಗರಗಳಲ್ಲಿ ಸೇಫ್‌ ಸಿಟಿ ಯೋಜನೆಯನ್ನು ತಲಾ 200 ಕೋಟಿ ರೂ. ಗಳಂತೆ ಒಟ್ಟು 1000 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಕ್ಕೆ ಅನುಮೋದನೆ ನೀಡಬೇಕು ಎಂದು ಅವರು ಕೋರಿದರು.

ಭಾರತ ಸರ್ಕಾರವು 80 ಕೋಟಿ ರೂ. ವೆಚ್ಚದಲ್ಲಿ India Reserve Battalion ಸ್ಥಾಪನೆಗೆ ಅನುಮೋದನೆ ನೀಡಿದ್ದು, ಹೆಚ್ಚುವರಿಯಾಗಿ ಬಳ್ಳಾರಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಎರಡು ಬೆಟಾಲಿಯನ್‌ ಸ್ಥಾಪನೆಗೆ ಅನುಮೋದನೆ ನೀಡುವಂತೆ ಕೋರಿದರು. ಹೈಕೋರ್ಟಿನ ಆದೇಶದಂತೆ ಬಂಧಿಸುವ ಅಧಿಕಾರ ಹೊಂದಿರುವ ಸಿಬ್ಬಂದಿಗೆ Body worn camera ಕಡ್ಡಾಯವಾಗಿರುವುದರಿಂದ ರಾಜ್ಯದಲ್ಲಿ ಇನ್ನೂ 175 ಕೋಟಿ ರೂ. ವೆಚ್ಚದಲ್ಲಿ 58,546 Body worn camera ಖರೀದಿಸುವ ಅಗತ್ಯವಿದ್ದು, 100 ಕೋಟಿ ರೂ. ನೆರವು ನೀಡುವಂತೆ ಮನವಿ ಸಲ್ಲಿಸಲಾಯಿತು.

ಪ್ರಸಕ್ತ ಸಾಲಿನಲ್ಲಿ ಬಾಡಿಗೆ ಕಟ್ಟದಲ್ಲಿರುವ/ ಶಿಥಿಲಾವಸ್ಥೆಯಲ್ಲಿರುವ 100 ಪೊಲೀಸ್‌ ಠಾಣೆಗಳಿಗೆ ಹೊಸ ಕಟ್ಟಡವನ್ನು ತಲಾ 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ 300 ಕೋಟಿ ರೂ. ಅಗತ್ಯವಿದೆ. ಇದಕ್ಕೆ ನೆರವು ಒದಗಿಸುವಂತೆಯೂ ಗೃಹ ಸಚಿವ ಅಮಿತ್‌ ಶಾ ಅವರನ್ನು ಕೋರಲಾಯಿತು. ಪೊಲೀಸ್‌ ಕ್ಯಾಂಟೀನ್‌ ಸೌಲಭ್ಯ ಮಾದರಿಯಲ್ಲಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿಗೂ ಕ್ಯಾಂಟೀನ್‌ ಸ್ಥಾಪನೆಗೆ ಅಗತ್ಯ ಅನುಮತಿಗಳನ್ನು ಒದಗಿಸುವುದು, ಪೊಲೀಸ್‌ ವಸತಿ ಗೃಹಗಳ ನಿರ್ಮಾಣಕ್ಕೆ ನೆರವು, ವಿಧಿವಿಜ್ಞಾನ ಪ್ರಯೋಗಾಲಯಗಳ ಆಧುನೀಕರಣಕ್ಕೆ ನೆರವು ಮತ್ತಿತರ ವಿಷಯಗಳ ಕುರಿತು ಸಹ ಚರ್ಚಿಸಲಾಯಿತು.

ಇದನ್ನೂ ಓದಿ: CM Siddaramaiah: ನಿತಿನ್‌ ಗಡ್ಕರಿ ಭೇಟಿಯಾದ ಸಿಎಂ ಸಿದ್ದರಾಮಯ್ಯ; ಪ್ರಮುಖ ಹೆದ್ದಾರಿ ಯೋಜನೆಗಳ ಬಗ್ಗೆ ಚರ್ಚೆ

Continue Reading

ಕರ್ನಾಟಕ

Air Wing NCC: ಏರ್ ವಿಂಗ್ ಎನ್‌ಸಿಸಿ ಸೇರಲು ಅರ್ಜಿ ಆಹ್ವಾನ; ಜುಲೈ 9 ಕೊನೆಯ ದಿನ

Air Wing NCC: ನಂ. 2 ಕರ್ನಾಟಕ ಟೆಕ್ನಿಕಲ್ ಏರ್ ಸ್ಕ್ವಾಡ್ರನ್ ಎನ್.ಸಿ.ಸಿ. ವತಿಯಿಂದ ಏರ್ ವಿಂಗ್ ಎನ್‌ಸಿಸಿ 2024-27 ನೇ ಬ್ಯಾಚ್‌ಗೆ ಜೂ. 22ರಿಂದ ನೋಂದಣಿ ಪ್ರಾರಂಭಗೊಂಡಿದ್ದು ಜುಲೈ 09 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ ಎಂದು ಕಮಾಂಡಿಂಗ್ ಅಧಿಕಾರಿ ಗ್ರೂಪ್ ಕ್ಯಾಪ್ಟನ್ ರಾಜೇಶ್ ಚಂದ್ರ ತಿಳಿಸಿದ್ದಾರೆ.

VISTARANEWS.COM


on

Application Invitation to Join Air Wing NCC July 09 is the last day for submission of application
Koo

ಬೆಂಗಳೂರು: ನಂ. 2 ಕರ್ನಾಟಕ ಟೆಕ್ನಿಕಲ್ ಏರ್ ಸ್ಕ್ವಾಡ್ರನ್ ಎನ್.ಸಿ.ಸಿ ವತಿಯಿಂದ ಏರ್ ವಿಂಗ್ ಎನ್‌ಸಿಸಿ (Air Wing NCC) 2024-27 ನೇ ಬ್ಯಾಚ್‌ಗೆ ಜೂ. 22ರಿಂದ ನೋಂದಣಿ ಪ್ರಾರಂಭಗೊಂಡಿದ್ದು, ಜುಲೈ 9 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ ಎಂದು ಕಮಾಂಡಿಂಗ್ ಅಧಿಕಾರಿ ಗ್ರೂಪ್ ಕ್ಯಾಪ್ಟನ್ ರಾಜೇಶ್ ಚಂದ್ರ ತಿಳಿಸಿದ್ದಾರೆ.

ಇದನ್ನೂ ಓದಿ: Bengaluru Power Cut: ಬೆಂಗಳೂರು ನಿವಾಸಿಗಳೇ ಗಮನಿಸಿ; ಜೂ.29ರಂದು ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ಅಭ್ಯರ್ಥಿಗಳು ಪಿಯುಸಿ ಪ್ರಥಮ ಅಥವಾ ಪ್ರಥಮ ವರ್ಷದ ಪದವಿಯಲ್ಲಿ ಬೆಂಗಳೂರಿನ ಯಾವುದಾದರೂ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರಬೇಕು. ಎನ್.ಸಿ.ಸಿ ಸೇರಬಯಸುವ ವಿದ್ಯಾರ್ಥಿಗಳು ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಚಿತ್ರದಲ್ಲಿ ನೀಡಿರುವ ಕ್ಯೂ.ಆರ್. ಕೋಡ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: Run4Research: ಬೆಂಗಳೂರಿನಲ್ಲಿ ಜೂ.30ರಂದು ʼರನ್4ರೀಸರ್ಚ್ʼ ಓಟ

ವಿಳಾಸ: ನಂ. 2 ಕರ್ನಾಟಕ ಟೆಕ್ನಿಕಲ್ ಏರ್ ಸ್ಕ್ವಾಡ್ರನ್ ಎನ್.ಸಿ.ಸಿ., ಯುವಿಸಿಇ ಕ್ಯಾಂಪಸ್, ಕೆ.ಆರ್. ಸರ್ಕಲ್ ಹತ್ತಿರ, ಬೆಂಗಳೂರು, ದೂರವಾಣಿ ಸಂಖ್ಯೆ 8788506566/9108939392 ಗೆ ಸಂಪರ್ಕಿಸಬಹುದಾಗಿದೆ.

Continue Reading

ಕರ್ನಾಟಕ

Pralhad Joshi: ಹಿಂದೂಗಳು ಅಲ್ಪಸಂಖ್ಯಾತರಾದ ದಿನ ಭಾರತ ಜಾತ್ಯತೀತವಾಗಿ ಉಳಿಯದು; ಪ್ರಲ್ಹಾದ್‌ ಜೋಶಿ ಆತಂಕ

Pralhad Joshi: ಭಾರತ ಹಿಂದೂ ರಾಷ್ಟ್ರವಲ್ಲ ಎಂಬ ನೋಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್ ಹೇಳಿಕೆ ಸರಿಯಿದೆ. ನಾನೂ ಅದನ್ನು ಮೊದಲಿನಿಂದಲೂ ಪ್ರತಿಪಾದಿಸುತ್ತಾ ಬಂದಿದ್ದೇವೆ ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ಹಿಂದೂಗಳು ಅಲ್ಪಸಂಖ್ಯಾತರಾದ ದಿನ ಭಾರತ ಜಾತ್ಯತೀತ ರಾಷ್ಟ್ರವಾಗಿ ಉಳಿಯಲು ಸಾಧ್ಯವಿಲ್ಲ ಎಂದು ಎಚ್ಚರಿಸಿದ್ದಾರೆ.

VISTARANEWS.COM


on

India is a secular nation because Hindus are the majority says Union Minister Pralhad Joshi
Koo

ನವದೆಹಲಿ: ಹಿಂದೂಗಳು ಬಹುಸಂಖ್ಯಾತರಾಗಿ ಇರುವುದರಿಂದಲೇ ಭಾರತ ಜಾತ್ಯತೀತ ರಾಷ್ಟ್ರವಾಗಿದೆ ಎಂಬ ಕಟು ಸತ್ಯವನ್ನು ಸಿಎಂ ಸಿದ್ದರಾಮಯ್ಯ ಮೊದಲು ಅರ್ಥ ಮಾಡಿಕೊಳ್ಳಲಿ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ತಿಳಿಸಿದ್ದಾರೆ.

“ಭಾರತ ಹಿಂದೂ ರಾಷ್ಟ್ರವಲ್ಲ” ಎಂಬ ಅಮರ್ತ್ಯ ಸೇನ್ ಹೇಳಿಕೆ ಸಮರ್ಥಿಸಿದ ಸಿಎಂ ಸಿದ್ದರಾಮಯ್ಯ ಅವರ ನಡೆಗೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆಕ್ಷೇಪಿಸಿದ್ದು, ನವದೆಹಲಿಯಲ್ಲಿ ಶುಕ್ರವಾರ ಈ ಕುರಿತು ಪ್ರತಿಕ್ರಿಯಿಸಿದರು.

ಇದನ್ನೂ ಓದಿ: R Ashok: ವಾಲ್ಮೀಕಿ ನಿಗಮ ಹಗರಣದಲ್ಲಿ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ಹೋರಾಟ; ಆರ್‌. ಅಶೋಕ್‌

ಹಿಂದೂಗಳು ಅಲ್ಪಸಂಖ್ಯಾತರಾದ ದಿನ ಭಾರತ ಜಾತ್ಯಾತೀತ ರಾಷ್ಟ್ರವಾಗಿ ಉಳಿಯಲು ಸಾಧ್ಯವಿಲ್ಲ ಎಂದು ಸಚಿವ ಪ್ರಲ್ಹಾದ್‌ ಜೋಶಿ ಎಚ್ಚರಿಸಿದ್ದಾರೆ.

ಇದನ್ನೂ ಓದಿ: Team India : ಟೆಸ್ಟ್​​ ಕ್ರಿಕೆಟ್​ನ ಒಂದೇ ದಿನದಲ್ಲಿ ಗರಿಷ್ಠ ರನ್​; ದಾಖಲೆ ಬರೆದ ಭಾರತ ತಂಡ

ಭಾರತ ಹಿಂದೂ ರಾಷ್ಟ್ರವಲ್ಲ ಎಂಬ ನೋಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್ ಹೇಳಿಕೆ ಸರಿಯಿದೆ. ತಾವೂ ಅದನ್ನು ಮೊದಲಿನಿಂದಲೂ ಪ್ರತಿಪಾದಿಸುತ್ತಾ ಬಂದಿದ್ದೇವೆ ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಸಚಿವ ಪ್ರಲ್ಹಾದ್‌ ಜೋಶಿ ತೀವ್ರವಾಗಿ ಖಂಡಿಸಿದ್ದಾರೆ.

Continue Reading

ಕರ್ನಾಟಕ

Rain News: ಕಾರವಾರದಲ್ಲಿ ಭಾರಿ ಮಳೆಗೆ ಮಣ್ಣಿನ ಗೋಡೆ ಕುಸಿದು ವೃದ್ಧೆ ಸಾವು

Rain News: ಕಾರವಾರದ ಅಸ್ನೋಟಿಯ ಆರವ ಗ್ರಾಮದ ತೋರ್ಲೆಭಾಗದಲ್ಲಿ ಶುಕ್ರವಾರ ದುರ್ಘಟನೆ ನಡೆದಿದೆ. ಮನೆಯ ಪಕ್ಕದ ಹಳೆಯ ಕಟ್ಟಡದ ಬಳಿ ತೆರಳಿದ್ದಾಗ ಮೈಮೇಲೆ ಗೋಡೆ ಕುಸಿದಿದ್ದರಿಂದ ವೃದ್ಧೆ ಮೃತಪಟ್ಟಿದ್ದಾರೆ.

VISTARANEWS.COM


on

Rain News
Koo

ಕಾರವಾರ: ಭಾರಿ ಮಳೆಗೆ ಮಣ್ಣಿನ ಗೋಡೆ ಕುಸಿದು ವೃದ್ಧೆ ಮೃತಪಟ್ಟಿರುವ ಘಟನೆ ಕಾರವಾರದ ಅಸ್ನೋಟಿಯ ಆರವ ಗ್ರಾಮದ ತೋರ್ಲೆಭಾಗದಲ್ಲಿ ಶುಕ್ರವಾರ ನಡೆದಿದೆ. ಗುಲಾಬಿ ರಾಮಚಂದ್ರ ಮಾಂಜ್ರೇಕರ್ (70) ಮೃತ ದುರ್ದೈವಿ.

ಮನೆಯಲ್ಲಿ ಒಂಟಿಯಾಗಿ ವಾಸವಾಗಿದ್ದ ವೃದ್ಧೆ, ಚಿತ್ತಾಕುಲದಲ್ಲಿ ಹಣ್ಣಿನ ವ್ಯಾಪಾರ ಮಾಡಿ ಜೀವನ ಸಾಗಿಸುತ್ತಿದ್ದರು. ನೆನ್ನೆ ಮಧ್ಯಾಹ್ನ ಮನೆಯ ಪಕ್ಕದ ಹಳೆಯ ಕಟ್ಟಡದ ಬಳಿ ತೆರಳಿದ್ದಾಗ ಮೈಮೇಲೆ ಗೋಡೆ ಕುಸಿದಿದೆ. ಗೋಡೆಯ ಅವಶೇಷಗಳಡಿ ವೃದ್ಧೆ ಮುಚ್ಚಿಹೋಗಿದ್ದರಂದ ಇಂದು ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳಕ್ಕೆ ತಹಸೀಲ್ದಾರ್ ನಿಶ್ಚಲ ನೊರೋನ್ಹಾ, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ಡೆಂಗ್ಯೂಗೆ ಮೊದಲ ಬಲಿ

ಬೆಂಗಳೂರು ನಗರದಲ್ಲಿ ಡೆಂಗ್ಯೂಗೆ ಮೊದಲ ಬಲಿಯಾಗಿದೆ. 80 ವರ್ಷದ ಮಹಿಳೆ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಖಾಸಗಿ ಅಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಬೆಂಗಳೂರು ಪೂರ್ವ ವಲಯದ ವಾರ್ಡ್‌ನಲ್ಲಿ ಪ್ರಕರಣ ನಡೆದಿದೆ.

ಬೈಕ್-ಟ್ರ್ಯಾಕ್ಟರ್ ಡಿಕ್ಕಿಯಾಗಿ ಆಹಾರ ಇಲಾಖೆ ನಿರೀಕ್ಷಕ ಸಾವು

ಚಾಮರಾಜನಗರ: ಬೈಕ್ ಹಾಗೂ ಟ್ರ್ಯಾಕ್ಟರ್ ನಡುವೆ ಡಿಕ್ಕಿಯಾಗಿ ಆಹಾರ ಇಲಾಖೆ ನಿರೀಕ್ಷಕ ಮೃತಪಟ್ಟು, ಶಿರಸ್ತೇದಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬಸಪುರ ಗ್ರಾಮದ ಬಳಿ ನಡೆದಿದೆ.

ಆಹಾರ ಇಲಾಖೆ ನಿರೀಕ್ಷಕ ನಾಗೇಂದ್ರ (46) ಮೃತರು. ಆಹಾರ‌ ಇಲಾಖೆ ಶಿರಸ್ತೇದಾರ ರಮೇಶ್‌ಗೆ ಗಂಭೀರ ಗಾಯಗಳಾಗಿವೆ. ಗುಂಡ್ಲುಪೇಟೆ ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇಬ್ಬರು ಅಧಿಕಾರಿಗಳು, ಇಂದು ಹಂಗಲ ಗ್ರಾಮದಲ್ಲಿ ಜನಸ್ಪಂದನ ಕಾರ್ಯಕ್ರಮ ಮುಗಿಸಿ ಬರುವ ವೇಳೆ ಅವಘಡ ನಡೆದಿದೆ. ಅಪಘಾತದಲ್ಲಿ
ಸ್ಥಳದಲ್ಲೇ ಆಹಾರ ಇಲಾಖೆ ನಿರೀಕ್ಷಕ ನಾಗೇಂದ್ರ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಜಿಲ್ಲಾಧಿಕಾರಿ ಹಾಗೂ ಎಸ್ಪಿ ಭೇಟಿ ನೀಡಿ ಪರಿಶೀಲಿಸಿದ್ದು, ಗಾಯಾಳು ರಮೇಶ್‌ರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Road Accident : ಅಂತ್ಯಸಂಸ್ಕಾರ ಮುಗಿಸಿ ಬರುತ್ತಿದ್ದ ದಂಪತಿ ಮೇಲೆ ಮುರಿದು ಬಿದ್ದ ಬೃಹತ್‌ ಮರ!

ಕಲಬುರಗಿಯಲ್ಲಿ 13 ವರ್ಷದ ಬಾಲಕಿ ಲೈಂಗಿಕ ದೌರ್ಜನ್ಯ, ತೀವ್ರ ರಕ್ತಸ್ರಾವವಾಗಿ ಸಾವು!

ಕಲಬುರಗಿ: ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ್ದರಿಂದ 13 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿ ಮೃತಪಟ್ಟಿರುವ ಘಟನೆ (Physical Abuse) ಕಲಬುರಗಿ ನಗರದ ಸಬ್ ಅರ್ಬನ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಲೈಂಗಿಕ ದೌರ್ಜನ್ಯದಿಂದ ತೀವ್ರ ರಕ್ತಸ್ರಾವವಾಗಿ ಬಾಲಕಿ ಕೊನೆಯುಸಿರೆಳೆದಿದ್ದಾಳೆ ಎಂಬ ಆರೋಪ ಕೇಳಿಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಒಬ್ಬ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಜ್ಜಿ ಅಂಗಡಿ ವ್ಯಾಪಾರಿ ಸರ್ಫರಾಜ್ (30) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಲಕಿಯ ಮನೆಗೆ ಹೋಗಿ ಹೆದರಿಸಿ ಕಾರಿನಲ್ಲಿ ಕರೆದುಕೊಂಡು ಹೋಗಿ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದರಿಂದ ತೀವ್ರ ರಕ್ತ ಸ್ರಾವವಾಗಿ ಬಾಲಕಿ ಮೃತಪಟ್ಟಿದ್ದಾಳೆ ಎನ್ನಲಾಗಿದೆ.

ಅತ್ಯಾಚಾರಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿ ದಲಿತ ಸೇನೆ ಕಾರ್ಯಕರ್ತರು ರಸ್ತೆ ತಡೆ ನಡೆಸಿ, ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಆಗಮಿಸಿದ್ದಾರೆ.

Continue Reading
Advertisement
Bridge Collapse
ದೇಶ50 seconds ago

Bridge Collapse: ಬಿಹಾರದಲ್ಲಿ ಮತ್ತೊಂದು ನಿರ್ಮಾಣ ಹಂತದ ಸೇತುವೆ ಕುಸಿತ; 9 ದಿನದಲ್ಲಿ 5ನೇ ಪ್ರಕರಣ!

Muhammad Usman
ಪ್ರಮುಖ ಸುದ್ದಿ1 hour ago

Muhammad Usman : ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಯುಎಇ ಕ್ರಿಕೆಟಿಗ ಉಸ್ಮಾನ್​

Dina Bhavishya
ಭವಿಷ್ಯ1 hour ago

Dina Bhavishya : ಈ ದಿನ ಆತ್ಮೀಯರೊಂದಿಗೆ ಕಾಲ ಕಳೆಯುವಿರಿ

UGC NET Exam
ದೇಶ6 hours ago

UGC NET Exam: ರದ್ದಾಗಿದ್ದ ಯುಜಿಸಿ ನೆಟ್‌ ಪರೀಕ್ಷೆಗೆ ಹೊಸ ದಿನಾಂಕ ಘೋಷಣೆ; ಪರೀಕ್ಷೆಗೆ ಹೊಸ ವಿಧಾನ, ಇಲ್ಲಿದೆ ವಿವರ‌

Vodafone Idea
ದೇಶ7 hours ago

Vodafone Idea: ಜಿಯೋ, ಏರ್‌ಟೆಲ್‌ ಬೆನ್ನಲ್ಲೇ ವೋಡಾಫೋನ್‌ ಐಡಿಯಾ ಪ್ಲಾನ್‌ ಬೆಲೆ ಏರಿಕೆ; ಹೀಗಿದೆ ವಿವರ

T20 World Cup 2024
ಪ್ರಮುಖ ಸುದ್ದಿ7 hours ago

T20 World Cup 2024 : ಭಾರತ ತಂಡವನ್ನು ಟೀಕಿಸಿದ ಮೈಕೆಲ್​ ವಾನ್​ಗೆ ತಿರುಗೇಟು ಕೊಟ್ಟ ಗಂಗೂಲಿ

CM SIddaramaiah
ಪ್ರಮುಖ ಸುದ್ದಿ7 hours ago

Siddaramaiah: ಅಮಿತ್‌ ಶಾ-ಸಿದ್ದರಾಮಯ್ಯ ಭೇಟಿ; ರಾಜ್ಯದ 5 ನಗರಗಳಲ್ಲಿ ಸೇಫ್‌ ಸಿಟಿ ಯೋಜನೆ ಜಾರಿಗೆ ಒತ್ತಾಯ

Religious Freedom
ದೇಶ8 hours ago

Religious Freedom: ಧಾರ್ಮಿಕ ಸ್ವಾತಂತ್ರ್ಯದ ಕುರಿತು ಅಮೆರಿಕ ಹುಸಿ ಕಳವಳ; ಭಾರತ ತಿರುಗೇಟು

Virat Kohli
ಪ್ರಮುಖ ಸುದ್ದಿ9 hours ago

Virat Kohli : ಫಾರ್ಮ್​ ಕಳೆದುಕೊಂಡಿರುವ ವಿರಾಟ್​ ಕೊಹ್ಲಿಯ ಬೆಂಬಲಕ್ಕೆ ನಿಂತ ಗಂಗೂಲಿ

Application Invitation to Join Air Wing NCC July 09 is the last day for submission of application
ಕರ್ನಾಟಕ9 hours ago

Air Wing NCC: ಏರ್ ವಿಂಗ್ ಎನ್‌ಸಿಸಿ ಸೇರಲು ಅರ್ಜಿ ಆಹ್ವಾನ; ಜುಲೈ 9 ಕೊನೆಯ ದಿನ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ12 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ19 hours ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ1 day ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ4 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

ಟ್ರೆಂಡಿಂಗ್‌