Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌! - Vistara News

ಪ್ರಮುಖ ಸುದ್ದಿ

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

Dina Bhavishya : ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷದ ಅಷ್ಟಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina bhavishya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂದ್ರನು ಶನಿವಾರವೂ ಮಕರ ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ಮಿಥುನ, ಕಟಕ, ತುಲಾ, ಧನಸ್ಸು, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಸಿಂಹ ರಾಶಿಯ ಉದ್ಯೋಗ ಅಪೇಕ್ಷಿತರಿಗೆ ಉದ್ಯೋಗದ ಭರವಸೆ ಸಿಗಲಿದೆ. ಮನೆಯಲ್ಲಿ ಕಲಹದಿಂದ ವಾತಾವರಣ ಹದಗೆಡಬಹುದು ಕನ್ಯಾ ರಾಶಿಯವರು ಎಚ್ಚರಿಕೆ ವಹಿಸಿ. ತುಲಾ ರಾಶಿಯವರು ತರಾತುರಿಯಲ್ಲಿ ನಿರ್ಧಾರ ಕೈಗೊಂಡು ಯಾವುದೇ ಹೂಡಿಕೆ ಬೇಡಿ. ಕುಂಭ ರಾಶಿಯವರ ಬಹು ದಿನಗಳ ಕನಸು ನನಸಾಗುವ ಕಾಲ ಕೂಡಿ ಬರಲಿದೆ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (23-09-2023)

ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷ
ತಿಥಿ:
ಅಷ್ಟಮಿ 12:17 ವಾರ: ಶನಿವಾರ
ನಕ್ಷತ್ರ: ಮೂಲಾ 14:55 ಯೋಗ: ಸೌಭಾಗ್ಯ 21:29
ಕರಣ: ಭವ 12:17 ಅಮೃತಕಾಲ : ಬೆಳಗ್ಗೆ 08:42 ಯಿಂದ 10:16 ರವರೆಗೆ
ದಿನದ ವಿಶೇಷ : ರಾಧಾ ಜಯಂತಿ, ಕೇದಾರ ವ್ರತ

ಸೂರ್ಯೋದಯ : 06:13  ಸೂರ್ಯಾಸ್ತ : 06:46

ರಾಹುಕಾಲ: ಬೆಳಗ್ಗೆ 9.00 ರಿಂದ 10.30
ಗುಳಿಕಕಾಲ: ಬೆಳಗ್ಗೆ 6.00 ರಿಂದ 7.30
ಯಮಗಂಡಕಾಲ
:ಮಧ್ಯಾಹ್ನ 1.30 ರಿಂದ 3.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಉತ್ಸಾಹದ ವಾತಾವರಣ ಇರಲಿದೆ. ಆಪ್ತರೊಂದಿಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಭರವಸೆಯ ಹೊಸ ಅವಕಾಶಗಳು ಸಿಗಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಹೆಚ್ಚಿನ ಲಾಭ ದೊರೆಯಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ವೃಷಭ: ಬಂಧು ಮಿತ್ರರಿಂದ ಸಹಕಾರ ಸಿಗಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ನಿಮ್ಮ ವ್ಯಕ್ತಿತ್ವ ಇತತರನ್ನು ಆಕರ್ಷಿಸಿ ಕಾರ್ಯದಲ್ಲಿ ಯಶಸ್ಸು ಸಾಧಿಸುವಿರಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ. ಅದೃಷ್ಟ ಸಂಖ್ಯೆ: 5

Horoscope Today

ಮಿಥುನ: ಸಂತಸದ ಕ್ಷಣಗಳನ್ನು ಕಳೆಯುವಿರಿ. ಆರ್ಥಿಕ ಪ್ರಗತಿ ಇರಲಿದೆ. ಬಹಳ ದಿನಗಳ ಬಾಕಿ ಇರುವ ಕಾರ್ಯವು ಪೂರ್ಣವಾಗುವುದು. ಮನೆಯಲ್ಲಿ ಪರಸ್ಪರ ಸಹಕಾರ ಸಿಗುವುದು, ಉತ್ಸಾಹದ ದಿನವಿದು.
ಅದೃಷ್ಟ ಸಂಖ್ಯೆ: 3

Horoscope Today

ಕಟಕ: ಆಕರ್ಷಕ ವ್ಯಕ್ತಿತ್ವ ಹೊಂದಿರುವ ನೀವು ಇಂದು ಇತತರನ್ನು ಆಕರ್ಷಿಸುವಿರಿ. ಆರ್ಥಿಕ ಪ್ರಗತಿ ಸಾಧಾರಣವಿದ್ದರೂ ಸಮರ್ಥವಾಗಿ ನಿರ್ವಹಿಸುವಿರಿ. ಉದ್ಯೋಗದಲ್ಲಿ ಪ್ರಗತಿ ಇರಲಿದೆ. ಮಡದಿಯ ಪ್ರೀತಿಗೆ ಸೋಲುವಿರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.
ಅದೃಷ್ಟ ಸಂಖ್ಯೆ: 7

Horoscope Today

ಸಿಂಹ: ಉದ್ಯೋಗ ಅಪೇಕ್ಷಿತರಿಗೆ ಉದ್ಯೋಗದ ಭರವಸೆ ಸಿಗಲಿದೆ. ಆರ್ಥಿಕ ಪ್ರಗತಿ ಇರಲಿದೆ. ಪರಿಶ್ರಮಕ್ಕೆ ಪ್ರತಿ ಫಲ ಸಿಗುವುದು. ಮನೆಯವರ ಪ್ರೀತಿ ಸಹಕಾರ ಸಿಗಲಿದೆ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.
ಅದೃಷ್ಟ ಸಂಖ್ಯೆ: 5

Horoscope Today

ಕನ್ಯಾ: ಮನೆಯಲ್ಲಿ ಕಲಹದಿಂದ ವಾತಾವರಣ ಹದಗೆಡಬಹುದು. ಕೆಲಸದಲ್ಲಿ ಹಿರಿಯರಿಂದ ಒತ್ತಡ ಬರಲಿದ್ದು, ಎಚ್ಚರಿಕೆ ವಹಿಸಿ. ಆರ್ಥಿಕ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ತರಾತುರಿಯಲ್ಲಿ ನಿರ್ಧಾರ ಕೈಗೊಂಡು ಯಾವುದೇ ಹೂಡಿಕೆ ಬೇಡಿ. ಬಂಧು ಮಿತ್ರರಿಂದ ಸಹಕಾರ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಮನೆಯಲ್ಲಿಂದು ಸಂತೋಷದ ದಿನ
ಅದೃಷ್ಟ ಸಂಖ್ಯೆ: 8

Horoscope Today

ವೃಶ್ಚಿಕ: ಮಿತ್ರರಿಂದ ಸಹಕಾರ ಸಿಗಲಿದೆ. ಆರ್ಥಿಕವಾಗಿ ಪ್ರಗತಿ ಹೊಂದಲು ಹಿರಿಯರು ಮಾರ್ಗದರ್ಶನ ಮಾಡಲಿದ್ದಾರೆ. ಧೈರ್ಯದಿಂದ ಕಾರ್ಯದಲ್ಲಿ ಮುನ್ನುಗ್ಗಿ ಯಶಸ್ಸು ಸಿಗುವುದು. ಕುಟುಂಬದಲ್ಲಿ ನೆಮ್ಮದಿ.
ಅದೃಷ್ಟ ಸಂಖ್ಯೆ: 5

Horoscope Today

ಧನಸ್ಸು: ಕುಟುಂಬ ಸದಸ್ಯರ ಆರೋಗ್ಯ ಸಂಬಂಧಿ ವಿಷಯಗಳು ತಮಗೆ ಒತ್ತಡ ಉಂಟುಮಾಡಬಹುದು. ಉದಾಸೀನತೆ ಮಾಡುವುದು ಬೇಡ. ಆಶಾವಾದಿಗಳಾಗಿರಿ ಕುಲದೇವರನ್ನು ಸ್ಮರಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

ಇವುಗಳನ್ನು ಪಾಲಿಸಿದರೆ ಮನಸ್ಸು ಶಾಂತವಾಗಿರುತ್ತೆ

Horoscope Today

ಮಕರ: ಉದ್ಯೋಗದಲ್ಲಿ ಹಿರಿಯ ಅಧಿಕಾರಿಗಳಿಂದ ಕಿರಿಕಿರಿ ಒತ್ತಡ ಉಂಟಾಗುವ ಸಾಧ್ಯತೆ ಇದೆ. ಆಲಸ್ಯದಿಂದ ದೂರವಿದ್ದು ಕಾರ್ಯ ಪೂರ್ಣ ಮಾಡಿ. ಕೆಲಸದ ಒತ್ತಡದಿಂದ ಮನೆಯ ಸದಸ್ಯರ ಮೇಲೆ ಹಾಕಿ, ವಾತಾವರಣ ಹದಗೆಡಲು ಕಾರಣವಾಗಬೇಡಿ. ಗುರುಗಳ ಆರಾಧನೆ ಮಾಡಿ.ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಕುಂಭ: ಭೂ ಸಂಬಂಧಿ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಬಹಳ ದಿನಗಳ ಕನಸು ನನಸಾಗುವ ಕಾಲ ಕೂಡಿ ಬರುವುದು. ಅನ್ಯರು ಆಡುವ ಕುಹುಕು ಮಾತುಗಳಿಗೆ ಧ್ವನಿಯಾಗಬೇಡಿ.ಕುಟುಂಬದಲ್ಲಿ ನೆಮ್ಮದಿ.
ಅದೃಷ್ಟ ಸಂಖ್ಯೆ: 3

ಇದನ್ನೂ ಓದಿ : ತಾತಯ್ಯ ತತ್ವಾಮೃತಂ: ದೇಹದಲ್ಲಿ ಜೀವ ಇರುವಾಗ ಏನು ಮಾಡಬೇಕು?

Horoscope Today

ಮೀನ: ನಿಮ್ಮ ಮಹತ್ವಾಕಾಂಕ್ಷೆಯ ಕೆಲಸ ಕಾರ್ಯಗಳು ಕುಂಠಿತವಾಗುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳು ಬಹಿರಂವಾಗದಿರಲಿ. ಆರ್ಥಿಕ ನಷ್ಟ ತಪ್ಪಿಸಿಕೊಳ್ಳಿ. ಸಂಗಾತಿಯ ಮಾತುಗಳು ಹಿತವೆನಿಸುದು. ಕುಟುಂಬದಲ್ಲಿ ನೆಮ್ಮದಿ.
ಅದೃಷ್ಟ ಸಂಖ್ಯೆ: 9

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

PM Modi Russia Visit: ದೇಶ, ಜನರಿಗಾಗಿ ನಿಮ್ಮ ಜೀವನವೇ ಮುಡಿಪು ಎಂದು ಮೋದಿಯನ್ನು ಹೊಗಳಿದ ಪುಟಿನ್

PM Modi Russia Visit: ಮಾಸ್ಕೋದಲ್ಲಿರುವ ವ್ಲಾಡಿಮಿರ್‌ ಪುಟಿನ್‌ ಅವರ ನಿವಾಸಕ್ಕೆ (ನೋವೊ-ಒಗಾರ್ಯೊವೊ) ನರೇಂದ್ರ ಮೋದಿ ಅವರನ್ನು ರಷ್ಯಾ ಅಧ್ಯಕ್ಷ ಕೈ ಕುಲುಕಿ, ತಬ್ಬಿಕೊಂಡು ಸ್ವಾಗತಿಸಿದರು. ಉಭಯ ನಾಯಕರು ಆತ್ಮೀಯವಾಗಿ ಮಾತುಕತೆ ನಡೆಸಿದರು. ಬಿಸಿ ಬಿಸಿ ಚಹಾ ಸವಿಯುತ್ತ ಉಭಯ ಕುಶಲೋಪರಿ ನಡೆಸಿದರು. ಇದೇ ವೇಳೆ ಮೋದಿ ಅವರನ್ನು ಪುಟಿನ್‌ ಅವರು ಹಾಡಿ ಹೊಗಳಿದರು.

VISTARANEWS.COM


on

PM Modi Russia Visit
Koo

ಮಾಸ್ಕೋ: ಎರಡು ದಿನಗಳ ರಷ್ಯಾ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ (PM Modi Russia Visit) ಅವರು ಮಾಸ್ಕೋ ತಲುಪುತ್ತಲೇ ಅದ್ಧೂರಿ ಸ್ವಾಗತ ಸಿಕ್ಕಿದೆ. ಅನಿವಾಸಿ ಭಾರತೀಯರು, ರಷ್ಯಾ ಕಲಾವಿದರು ಹಿಂದಿಗೆ ಹಾಡಿಗೆ ನೃತ್ಯ ಮಾಡಿ, ಭಜನೆ, ಹಾಡುಗಳ ಮೂಲಕ ನರೇಂದ್ರ ಮೋದಿ (Narendra Modi) ಅವರನ್ನು ಸಾಂಪ್ರದಾಯಿಕವಾಗಿ ಸ್ವಾಗತಿಸಿದ್ದಾರೆ. ಅಷ್ಟೇ ಅಲ್ಲ, ಮೋದಿ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ (Vladimir Putin) ಅವರನ್ನೂ ಭೇಟಿಯಾಗಿದ್ದು, ಪುಟಿನ್‌ ಮನೆಯಲ್ಲೇ ಚಾಯ್‌ ಪೆ ಚರ್ಚಾ, ಔತಣ ಕೂಡ ನಡೆದಿದೆ.

ಮಾಸ್ಕೋದಲ್ಲಿರುವ ವ್ಲಾಡಿಮಿರ್‌ ಪುಟಿನ್‌ ಅವರ ನಿವಾಸಕ್ಕೆ (ನೋವೊ-ಒಗಾರ್ಯೊವೊ) ನರೇಂದ್ರ ಮೋದಿ ಅವರನ್ನು ರಷ್ಯಾ ಅಧ್ಯಕ್ಷ ಕೈ ಕುಲುಕಿ, ತಬ್ಬಿಕೊಂಡು ಸ್ವಾಗತಿಸಿದರು. ತಮ್ಮ ನಿವಾಸದಲ್ಲಿಯೇ ಮೋದಿ ಅವರಿಗೆ ಪುಟಿನ್‌ ಅವರು ಚಹಾ, ಭೋಜನಕೂಟದ ಉಸ್ತುವಾರಿ ನೋಡಿಕೊಂಡರು. ಇದೇ ವೇಳೆ ಉಭಯ ನಾಯಕರು ಔಪಚಾರಿಕವಾಗಿ ಮಾತುಕತೆ ನಡೆಸಿದ್ದಾರೆ.

ಮೋದಿಯನ್ನು ಹೊಗಳಿದ ಪುಟಿನ್‌

ನರೇಂದ್ರ ಮೋದಿ ಅವರನ್ನು ವ್ಲಾಡಿಮಿರ್‌ ಪುಟಿನ್‌ ಅವರು ಹಾಡಿ ಹೊಗಳಿದ್ದಾರೆ. “ಚುನಾವಣೆಯಲ್ಲಿ ಗೆಲುವು ಸಾಧಿಸಿ ಮತ್ತೆ ಪ್ರಧಾನಿಯಾಗಿದ್ದಕ್ಕೆ ಅಭಿನಂದನೆಗಳು. ನೀವು ಹೊಂದಿರುವ ಸಾಮರ್ಥ್ಯ, ಉತ್ಸಾಹವು ಅಮೋಘವಾದುದು. ನೀವು ದೇಶ ಹಾಗೂ ಸಾರ್ವಜನಿಕರ ಸೇವೆಗಾಗಿ ಇಡೀ ಜೀವನವನ್ನೇ ಮುಡಿಪಾಗಿಟ್ಟಿದ್ದೀರಿ. ನೀವು ನಮ್ಮ ದೇಶಕ್ಕೆ ಆಗಮಿಸಿರುವುದು ಖುಷಿಯಾಗಿದೆ. ಇನ್ನು, ಬಾರತದಲ್ಲಿ 2.3 ಕೋಟಿ ಮಕ್ಕಳಿದ್ದು, ಅವರು ಭವಿಷ್ಯದ ಬಗ್ಗೆ ಯೋಚಿಸುತ್ತಾರೆ, ಕನಸು ಕಾಣುತ್ತಾರೆ. ಅಲ್ಲದೆ, ಇದು ಭದ್ರ, ಸ್ಥಿರ ಭಾರತದ ಸಂಕೇತವಾಗಿದೆ” ಎಂದು ವ್ಲಾಡಿಮಿರ್‌ ಪುಟಿನ್‌ ಅವರು ಖಾಸಗಿ ಭೇಟಿ ವೇಳೆ ಹೊಗಳಿದ್ದಾರೆ.

ಭಾರತ ಮತ್ತು ರಷ್ಯಾ ವಾರ್ಷಿಕ ಶೃಂಗಸಭೆಯು ಮೋದಿಯವರ ರಷ್ಯಾ ಭೇಟಿಯ ಪ್ರಮುಖ ಅಜೆಂಡಾವಾಗಿದ್ದು, ರಷ್ಯಾ-ಉಕ್ರೇನ್‌ ಯುದ್ಧದ ಬಳಿಕ ಮೊದಲ ಭೇಟಿಯಲ್ಲಿ ರಷ್ಯಾ ಅಧ್ಯಕ್ಷರಾದ ವ್ಲಾಡಿಮಿರ್‌ ಪುಟಿನ್‌ ಅವರೊಂದಿಗೆ ಈ ಕುರಿತು ಮಾತುಕತೆ ನಡೆಸಿದ್ದಾರೆ. ರಷ್ಯಾ ಅಧ್ಯಕ್ಷರಾದ ವ್ಲಾಡಿಮಿರ್‌ ಪುಟಿನ್‌ ಅವರು ಸೋಮವಾರ ನರೇಂದ್ರ ಮೋದಿ ಅವರಿಗೆ ಔತಣಕೂಟ ಏರ್ಪಡಿಸಿದ್ದಾರೆ. ಮಂಗಳವಾರ (ಜುಲೈ 9) ಶೃಂಗಸಭೆ ನಡೆಯಲಿದ್ದು, ಉಭಯ ನಾಯಕರು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಭಾರತ-ರಷ್ಯಾ ನಡುವಿನ 22ನೇ ವಾರ್ಷಿಕ ಸಭೆಯು ದ್ವಿಪಕ್ಷೀಯ ಸಂಬಂಧದ ದೃಷ್ಟಿಯಿಂದ ಪ್ರಾಮುಖ್ಯತೆ ಪಡೆದಿದೆ.

ಇದನ್ನೂ ಓದಿ: PM Modi Russia Visit: ರಷ್ಯಾ ತಲುಪಿದ ಮೋದಿಗೆ ಭಾರತದ ಸಂಪ್ರದಾಯದಂತೆ ಅದ್ಧೂರಿ ಸ್ವಾಗತ; Video ಇದೆ

Continue Reading

ಪ್ರಮುಖ ಸುದ್ದಿ

LKG, UKG: ಎಲ್‌ಕೆಜಿ, ಯುಕೆಜಿ, 1ನೇ ತರಗತಿ ಪ್ರವೇಶಾತಿಗೆ ಗರಿಷ್ಠ ವಯೋಮಿತಿ ನಿಗದಿ; ಇಲ್ಲಿದೆ ಹೊಸ ಅಪ್‌ಡೇಟ್

LKG, UKG: ಮಕ್ಕಳನ್ನು ಎಲ್‌ಕೆಜಿಗೆ ಸೇರಿಸಲು 4-5 ವರ್ಷ ಕನಿಷ್ಠ ವಯೋಮಿತಿಯಾದರೆ, ಈಗ ಗರಿಷ್ಠ ವಯೋಮಿತಿಯು 6 ವರ್ಷ ಆಗಿದೆ. ಯುಕೆಜಿಗೆ 4-5 ವರ್ಷ ಕನಿಷ್ಠ ವಯೋಮಿತಿಯಾದರೆ, 7 ವರ್ಷ ಗರಿಷ್ಠ ವಯೋಮಿತಿಯಾಗಿದೆ. ಹಾಗೆಯೇ, ಒಂದನೇ ತರಗತಿಗೆ ಕನಿಷ್ಠ 6 ವರ್ಷ ಇದ್ದರೆ, ಗರಿಷ್ಠ 8 ವರ್ಷ ಇರಬೇಕಾಗುತ್ತದೆ.

VISTARANEWS.COM


on

LKG UKG
Koo

ಬೆಂಗಳೂರು: ಮಕ್ಕಳನ್ನು ಎಲ್‌ಕೆಜಿ, ಯುಕೆಜಿ (LKG, UKG) ಹಾಗೂ ಒಂದನೇ ತರಗತಿಗೆ ದಾಖಲಿಸಲು ರಾಜ್ಯ ಸರ್ಕಾರವು (Karnataka Government) ಈಗಾಗಲೇ ಕನಿಷ್ಠ ವಯೋಮಿತಿಯನ್ನು ನಿಗದಿಪಡಿಸಿದೆ. ಆದರೆ, ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸದ ರಾಜ್ಯ ಸರ್ಕಾರವೀಗ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಿದೆ. ಅದರಂತೆ, 2023-24ನೇ ಶೈಕ್ಷಣಿಕ ವರ್ಷದಿಂದ ಅನ್ವಯವಾಗುವಂತೆ ಎಲ್‌ಕೆಜಿ, ಯುಕೆಜಿ ಹಾಗೂ 1ನೇ ತರಗತಿಗೆ ದಾಖಲಿಸುವ ಮಕ್ಕಳ ಗರಿಷ್ಠ ವಯೋಮಿತಿಯನ್ನು ಪರಿಷ್ಕರಣೆ ಮಾಡಲಾಗಿದೆ.

ಹೀಗಿದೆ ಪರಿಷ್ಕರಿಸಿದ ವಯೋಮಿತಿ

ಮಕ್ಕಳನ್ನು ಎಲ್‌ಕೆಜಿಗೆ ಸೇರಿಸಲು 4-5 ವರ್ಷ ಕನಿಷ್ಠ ವಯೋಮಿತಿಯಾದರೆ, ಈಗ ಗರಿಷ್ಠ ವಯೋಮಿತಿಯು 6 ವರ್ಷ ಆಗಿದೆ. ಯುಕೆಜಿಗೆ 4-5 ವರ್ಷ ಕನಿಷ್ಠ ವಯೋಮಿತಿಯಾದರೆ, 7 ವರ್ಷ ಗರಿಷ್ಠ ವಯೋಮಿತಿಯಾಗಿದೆ. ಹಾಗೆಯೇ, ಒಂದನೇ ತರಗತಿಗೆ ಕನಿಷ್ಠ 6 ವರ್ಷ ಇದ್ದರೆ, ಗರಿಷ್ಠ 8 ವರ್ಷ ಇರಬೇಕಾಗುತ್ತದೆ. ಎಲ್‌ಕೆಜಿಗೆ 2023-24, ಯುಕೆಜಿಗೆ 2024-25 ಹಾಗೂ ಒಂದನೇ ತರಗತಿಗೆ 2025-26ನೇ ಶೈಕ್ಷಣಿಕ ಸಾಲಿನಿಂದ ಹೊಸ ಆದೇಶವು ಅನ್ವಯವಾಗಲಿದೆ. ಡ್ರಾಪ್‌ಔಟ್‌ ಆಗುವ ಮಕ್ಕಳ ಸಂಖ್ಯೆಯನ್ನು ತಗ್ಗಿಸುವ ಉದ್ದೇಶದಿಂದ ಸರ್ಕಾರವು ಹೊಸ ಆದೇಶ ಹೊರಡಿಸಿದೆ.

ಸರ್ಕಾರದ ಆದೇಶ ಹೀಗಿದೆ…

ಸಾರ್ವಜನಿಕ ಶಿಕ್ಷಣ ಇಲಾಖೆಯು 2025-26 ನೇ ಸಾಲಿನ ಶೈಕ್ಷಣಿಕ ಸಾಲಿನಿಂದ ಜೂನ್‌ 1ನೇ ತಾರೀಖಿಗೆ ಕಡ್ಡಾಯವಾಗಿ ಆರು ವರ್ಷ ಪೂರ್ಣಗೊಂಡಿರುವ ಮಗುವನ್ನು ಮಾತ್ರ ಒಂದೇ ತರಗತಿಗೆ ದಾಖಲಿಸಿಕೊಳ್ಳುವಂತೆ ಕಳೆದ ವರ್ಷವೇ ಆದೇಶ ಹೊರಡಿಸಿದೆ. ಹೀಗಾಗಿ ಈ ಶೈಕ್ಷಣಿಕ ಸಾಲಿನಿಂದಲೇ ಎಲ್‌ಕೆಜಿ ತರಗತಿಗೆ ದಾಖಲು ಮಾಡಿಕೊಳ್ಳಲು ಜೂನ್‌ 01ನೇ ತಾರೀಖಿಗೆ ಅನ್ವಯವಾಗುವಂತೆ ನಾಲ್ಕು (4) ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

ಕಳೆದ ವರ್ಷ ಅಂದರೆ 2022 ಜುಲೈ 26ರಂದು ಆದೇಶ ಹೊರಡಿಸಿದ್ದ ಶಿಕ್ಷಣ ಇಲಾಖೆ ಇನ್ನು ಮುಂದೆ ಒಂದು ಮಗುವಿಗೆ ಒಂದನೇ ತರಗತಿಗೆ ಪ್ರವೇಶ ನೀಡಬೇಕಾದರೆ ಜೂನ್‌ ಒಂದನೇ ತಾರೀಖಿಗೆ ಅನ್ವಯವಾಗುವಂತೆ ಆರು ವರ್ಷ ತುಂಬಿರಲೇಬೇಕು ಎಂದು ಸೂಚಿಸಿತ್ತು. ಈ ಆದೇಶವನ್ನು 2023-24 ನೇ ಸಾಲಿನಿಂದಲೇ ಜಾರಿಗೆ ತರಬೇಕೆಂದು ಸೂಚಿಸಲಾಗಿತ್ತಾದರೂ ಪೋಷಕರು ಮತ್ತು ಶಾಲೆಗಳ ಆಡಳಿತ ಮಂಡಳಿಗಳು ಆಕ್ಷೇಪಣೆ ವ್ಯಕ್ತಪಡಿಸಿದ್ದರಿಂದ ಇದನ್ನು 2025-26 ನೇ ಸಾಲಿನ ಶೈಕ್ಷಣಿಕ (Education News) ಸಾಲಿನಿಂದ ಜಾರಿಗೆ ತರಲಾಗುವುದು ಎಂದು ಪ್ರಕಟಿಸಿದೆ.

ಹೊಸ ನಿಯಮದಂತೆ 2025-26ನೇ ಸಾಲಿನಲ್ಲಿ ಒಂದನೇ ತರಗತಿಗೆ ನಿಮ್ಮ ಮಗುವನ್ನು ಸೇರಿಸಿಬೇಕೆಂದರೆ ಎಲ್‌ಕೆಜಿ ಸೇರ್ಪಡೆ ವಿಷಯದಲ್ಲಿ ಈಗಿನಿಂದಲೇ ಎಚ್ಚರಿಕೆ ವಹಿಸಬೇಕಾಗುತ್ತದೆ. ಅಂದರೆ 2025-26ನೇ ಸಾಲಿಗೆ ಬರುವಾಗ ಒಂದನೇ ತರಗತಿ ಸೇರುವ ಮಗುವಿಗೆ ಆರು ವರ್ಷ ತುಂಬಿರುವುದು ಕಡ್ಡಾಯ. ಹಾಗಾಗಿ, ಈ ವರ್ಷ ಎಲ್‌ಕೆಜಿಗೆ ಸೇರಿಸುವಾಗ ನಿಮ್ಮ ಮಗು ಕಡ್ಡಾಯವಾಗಿ ನಾಲ್ಕು ವರ್ಷ ಪೂರ್ಣಗೊಳಿಸಿರಬೇಕು. ಇಲ್ಲದೇ ಇದ್ದಲ್ಲಿ ಎಲ್‌ಕೆಜಿ ಅಥವಾ ಯುಕೆಜಿಯಲ್ಲಿಯೇ ಮಗು ಒಂದು ವರ್ಷ ಹೆಚ್ಚಾಗಿ ಉಳಿದುಕೊಳ್ಳುವ ಅನಿವಾರ್ಯತೆ ಸೃಷ್ಟಿಯಾಗಲಿದ್ದು, ಇದು ಮಗುವಿನ ಮಾನಸಿಕ ಸ್ಥಿತಿಯ ಮೇಲೆ ಪರಿಣಾಮ ಬೀರಬಹುದಾಗಿದೆ.

ಇದನ್ನೂ ಓದಿ: LKG UKG in Anganwadis: ಅಂಗನವಾಡಿಗಳಲ್ಲೇ ಎಲ್‌ಕೆಜಿ, ಯುಕೆಜಿ ಆರಂಭಿಸಲು ಸಿಎಂ ಸಹಮತ

Continue Reading

ದೇಶ

Ramniwas Rawat: 15 ನಿಮಿಷದಲ್ಲಿ 2 ಬಾರಿ ಸಚಿವನಾಗಿ ಬಿಜೆಪಿ ಶಾಸಕ ಪ್ರಮಾಣವಚನ; ಎಲ್ಲಾಯ್ತು ಎಡವಟ್ಟು?

Ramniwas Rawat: ರಾಜಭವನದಲ್ಲಿ ಸೋಮವಾರ ಬೆಳಗ್ಗೆ 9 ಗಂಟೆಗೆ ರಾಮ್‌ನಿವಾಸ್‌ ಅವರಿಗೆ ರಾಜ್ಯಪಾಲ ಮಂಗುಭಾಯಿ ಸಿ ಪಟೇಲ್‌ ಅವರು ಪ್ರಮಾಣವಚನ ಸ್ವೀಕರಿಸಿದರು. ಪ್ರಮಾಣವಚನ ಸ್ವೀಕರಿಸುವಾಗ ರಾಮ್‌ನಿವಾಸ್‌ ರಾವತ್‌ ಅವರು ರಾಜ್ಯ ಕೆ ಮಂತ್ರಿ ಎಂದು ಹೇಳುವ ಬದಲು ರಾಜ್ಯ ಮಂತ್ರಿ (ಸಹಾಯಕ ಸಚಿವ) ಎಂದು ಹೇಳಿದರು. ಇದರಿಂದಾಗಿ ಕೆಲಹೊತ್ತು ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಬಳಿಕ ಎರಡನೇ ಬಾರಿ ಬಿಜೆಪಿ ಶಾಸಕ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

VISTARANEWS.COM


on

Ramniwas Rawat
Koo

ಭೋಪಾಲ್‌: ನಾವು ಮಾತನಾಡುವಾಗ, ಬರೆಯುವಾಗ ಬಳಸುವ ಒಂದು ಪದವು ಎಷ್ಟು ಪರಿಣಾಮ ಬೀರುತ್ತದೆಯೋ, ಬಳಸಬೇಕಾದ ಜಾಗದಲ್ಲಿ ಇನ್ನೊಂದು ಪದ ಬಳಸದಿದ್ದರೂ ಅದು ಕೂಡ ಬೇರೊಂದು ಪರಿಣಾಮವನ್ನೇ ಬೀರುತ್ತದೆ. ಇದಕ್ಕೆ ನಿದರ್ಶನ ಎಂಬಂತೆ, ಮಧ್ಯಪ್ರದೇಶದ (Madhya Pradesh Cabinet) ನೂತನ ಸಚಿವರಾಗಿ ಬಿಜೆಪಿಯ ರಾಮ್‌ನಿವಾಸ್‌ ರಾವತ್‌ (Ramniwas Rawat) ಅವರು ಪ್ರಮಾಣವಚನ ಸ್ವೀಕರಿಸುವಾಗ ಒಂದು ಪದವನ್ನು ಬಳಸದ ಕಾರಣ 15 ನಿಮಿಷಗಳಲ್ಲಿಯೇ ಎರಡನೇ ಬಾರಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬಳಿಕ ಮೋಹನ್‌ ಯಾದವ್‌ ಅವರು ಸಿಎಂ ಆಗಿ ಪದಗ್ರಹಣ ಮಾಡಿದ್ದಾರೆ. ಇದಾದ ಐದು ತಿಂಗಳ ಬಳಿಕ ಅವರು ಮೊದಲ ಬಾರಿಗೆ ಸಂಪುಟ ವಿಸ್ತರಣೆ ಮಾಡಿದ್ದಾರೆ. ಇದಕ್ಕೂ ಮೊದಲು ಕಾಂಗ್ರೆಸ್‌ನಲ್ಲಿದ್ದ ರಾಮ್‌ನಿವಾಸ್‌ ರಾವತ್‌ ಅವರು ಬಿಜೆಪಿ ಸೇರ್ಪಡೆಯಾಗಿದ್ದು, ಸೋಮವಾರ (ಜುಲೈ 8) ಪ್ರಮಾಣವಚನ ಸ್ವೀಕರಿಸಿದ್ದಾರೆ. ಪ್ರಮಾಣವಚನ ಸ್ವೀಕರಿಸುವಾಗ ಅವರು ಒಂದು ಪದವನ್ನು ಉಚ್ಚರಣೆ ಮಾಡದ ಕಾರಣ ಎರಡನೇ ಬಾರಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಅವರು ಬಳಸದ ಆ ಒಂದು ಪದ ಯಾವುದು?

ರಾಜಭವನದಲ್ಲಿ ಸೋಮವಾರ ಬೆಳಗ್ಗೆ 9 ಗಂಟೆಗೆ ರಾಮ್‌ನಿವಾಸ್‌ ಅವರಿಗೆ ರಾಜ್ಯಪಾಲ ಮಂಗುಭಾಯಿ ಸಿ ಪಟೇಲ್‌ ಅವರು ಪ್ರಮಾಣವಚನ ಸ್ವೀಕರಿಸಿದರು. ಪ್ರಮಾಣವಚನ ಸ್ವೀಕರಿಸುವಾಗ ರಾಮ್‌ನಿವಾಸ್‌ ರಾವತ್‌ ಅವರು ರಾಜ್ಯ ಕೆ ಮಂತ್ರಿ ಎಂದು ಹೇಳುವ ಬದಲು ರಾಜ್ಯ ಮಂತ್ರಿ (ಸಹಾಯಕ ಸಚಿವ) ಎಂದು ಹೇಳಿದರು. ಸಹಾಯಕ ಸಚಿವ ಎಂಬುದಾಗಿ ಅವರು ಹೇಳುತ್ತಲೇ ಕಾರ್ಯಕ್ರಮದಲ್ಲಿ ಗೊಂದಲವಾಯಿತು. ಪತ್ರಕರ್ತರು ಕೂಡ ಈ ಕುರಿತು ನಾಯಕರ ಗಮನಕ್ಕೆ ತಂದರು.

ರಾಜ್ಯ ಕೆ ಮಂತ್ರಿ ಎಂಬುದಾಗಿ ಹೇಳುವ ಬದಲು ರಾಜ್ಯ ಮಂತ್ರಿ ಎಂದು ಹೇಳಿರುವುದು ಗಮನಕ್ಕೆ ಬಂದ 15 ನಿಮಿಷದಲ್ಲಿಯೇ ರಾಮ್‌ನಿವಾಸ್‌ ರಾವತ್‌ ಅವರು ಎರಡನೇ ಬಾರಿ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಒಂದೇ ಒಂದು ಪದವನ್ನು ಬಳಸದ ಕಾರಣ ರಾಜಭವನದಲ್ಲಿ ಇಷ್ಟೆಲ್ಲ ಗೊಂದಲ ಉಂಟಾಯಿತು. ರಾಮ್‌ನಿವಾಸ್‌ ರಾವತ್‌ ಅವರ ಸೇರ್ಪಡೆಯೊಂದಿಗೆ ಮಧ್ಯಪ್ರದೇಶ ಸಚಿವರ ಸಂಖ್ಯೆ 32ಕ್ಕೆ ಏರಿಕೆಯಾಯಿತು. Words

ಇದನ್ನೂ ಓದಿ: Hemant Soren: 5 ತಿಂಗಳ ಜೈಲುವಾಸದ ಬಳಿಕ ಮತ್ತೆ ಜಾರ್ಖಂಡ್‌ ಸಿಎಂ ಆಗಿ ಹೇಮಂತ್‌ ಸೊರೆನ್‌ ಪ್ರಮಾಣವಚನ!

Continue Reading

ಕ್ರೀಡೆ

Paris Olympics 2024: ಪ್ಯಾರಿಸ್ ಒಲಿಂಪಿಕ್ಸ್‌ಗೆ ಸಿಂಧು, ಶರತ್ ಕಮಲ್ ಭಾರತದ ಧ್ವಜಧಾರಿ

Paris Olympics 2024: ವೈಯಕ್ತಿಕ ಕಾರಣ ನೀಡಿ 2 ತಿಂಗಳ ಹಿಂದೆ ಮೇರಿ ಕೋಮ್ ಅವರು ಷೆಫ್ ಡಿ ಮಿಷನ್ ಹುದ್ದೆಗೆ ರಾಜೀನಾಮೆ ನೀಡಿದ್ದರು. ಇದೀಗ ಈ ಸ್ಥಾನಕ್ಕೆ 2012 ಲಂಡನ್​ ಒಲಿಂಪಿಕ್ಸ್​ ಟೂರ್ನಿಯಲ್ಲಿ 10 ಮೀ. ಏರ್​ ರೈಫಲ್​ ಸ್ಫರ್ದೆಯಲ್ಲಿ ಕಂಚಿನ ಪದಕ ಗೆದ್ದಿದ್ದ ಗಗನ್​ ನಾರಂಗ್​ ಅವರನ್ನು ಆಯ್ಕೆ ಮಾಡಲಾಗಿದೆ

VISTARANEWS.COM


on

Paris Olympics 2024
Koo

ನವದೆಹಲಿ: ಅವಳಿ ಒಲಿಂಪಿಕ್ಸ್​ ಪದಕ ವಿಜೇತೆ, ಸ್ಟಾರ್​ ಶಟ್ಲರ್​, ಪಿ.ವಿ.ಸಿಂಧು(PV Sindhu) ಮತ್ತು ಹಿರಿಯ ಟೇಬಲ್ ಟೆನಿಸ್ ಆಟಗಾರ ಶರತ್ ಕಮಲ್(Sharath Kamal) ಜುಲೈ 26ರಿಂದ ಆರಂಭಗೊಳ್ಳಲಿರುವ ಪ್ಯಾರಿಸ್ ಒಲಿಂಪಿಕ್(Paris Olympics 2024) ಕ್ರೀಡೆಗಳ ಉದ್ಘಾಟನಾ ಸಮಾರಂಭದಲ್ಲಿ ಭಾರತದ ಧ್ವಜಧಾರಿಯಾಗಲಿದ್ದಾರೆ. ಮಾಜಿ ಒಲಿಂಪಿಕ್​ ಪದಕ ವಿಜೇತ ಶೂಟರ್​ ಗಗನ್​ ನಾರಂಗ್​ ಅವರನ್ನು ತಂಡದ ಷೆಫ್ ಡಿ ಮಿಷನ್ ಆಗಿ ಸೋಮವಾರ ನೇಮಿಸಲಾಗಿದೆ.

ವೈಯಕ್ತಿಕ ಕಾರಣ ನೀಡಿ 2 ತಿಂಗಳ ಹಿಂದೆ ಮೇರಿ ಕೋಮ್ ಅವರು ಷೆಫ್ ಡಿ ಮಿಷನ್ ಹುದ್ದೆಗೆ ರಾಜೀನಾಮೆ ನೀಡಿದ್ದರು. ಇದೀಗ ಈ ಸ್ಥಾನಕ್ಕೆ 2012 ಲಂಡನ್​ ಒಲಿಂಪಿಕ್ಸ್​ ಟೂರ್ನಿಯಲ್ಲಿ 10 ಮೀ. ಏರ್​ ರೈಫಲ್​ ಸ್ಫರ್ದೆಯಲ್ಲಿ ಕಂಚಿನ ಪದಕ ಗೆದ್ದಿದ್ದ ಗಗನ್​ ನಾರಂಗ್​ ಅವರನ್ನು ಆಯ್ಕೆ ಮಾಡಲಾಗಿದೆ. ಇದಕ್ಕೂ ಮುನ್ನ ನಾರಂಗ್ ಉಪ ಸಿಡಿಎಂ ಸ್ಥಾನ ಹೊಂದಿದ್ದರು. ಬಡ್ತಿ ನೀಡುವ ಮೂಲಕ ಷೆಫ್ ಡಿ ಮಿಷನ್ ನೀಡಲಾಗಿದೆ. ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ​​(ಐಒಎ) ಅಧ್ಯಕ್ಷೆ ಪಿಟಿ ಉಷಾ ಈ ವಿಚಾರವನ್ನು ಅಧಿಕೃತ ಪ್ರಕಟನೆ ಮೂಲಕ ತಿಳಿಸಿದ್ದಾರೆ.

“ಎರಡು ಒಲಿಂಪಿಕ್ಸ್ ಪದಕಗಳನ್ನು ಗೆದ್ದ ಭಾರತದ ಏಕೈಕ ಮಹಿಳೆಯಾಗಿರುವ ಸಿಂಧು ಅವರು ಆರಂಭಿಕ ಸಮಾರಂಭದಲ್ಲಿ ಶರತ್ ಕಮಲ್ ಅವರೊಂದಿಗೆ ಮಹಿಳಾ ಧ್ವಜಧಾರಿಯಾಗಿ ಘೋಷಿಸಲು ಸಂತೋಷಪಡುತ್ತೇನೆ. ಪ್ಯಾರಿಸ್ 2024ರ ಒಲಿಂಪಿಕ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಉತ್ತಮ ಫಲಿತಾಂಶಗಳನ್ನು ನೀಡಲು ನಮ್ಮ ಕ್ರೀಡಾಪಟುಗಳು ಉತ್ತಮವಾಗಿ ಸಿದ್ಧರಾಗಿದ್ದಾರೆ ಎಂದು ನನಗೆ ವಿಶ್ವಾಸವಿದೆ”ಎಂದು ಪಿಟಿ ಉಷಾ ಹೇಳಿದ್ದಾರೆ.

ಇದನ್ನೂ ಓದಿ Paris Olympics 2024: ಸರ್ಕಾರಿ, ಖಾಸಗಿ ವಲಯದ ಪಾಲುದಾರಿಕೆಯಿಂದ ಕ್ರೀಡೆಗಳ ಭವಿಷ್ಯ ನಿರ್ಧಾರ: ಪಾರ್ಥ್ ಜಿಂದಾಲ್

ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಪದಕ ಗೆಲ್ಲುವುದು ಭಾರತದ ಪ್ರಮುಖ ಗುರಿಯಾಗಿದೆ. ಟೋಕಿಯೊದಲ್ಲಿ ಭಾರತ ಒಟ್ಟು 7 ಪದಕ ಜಯಿಸಿತ್ತು. ಇದರಲ್ಲಿ ಒಂದು ಚಿನ್ನ, 2 ಬೆಳ್ಳಿ ಮತ್ತು 4 ಕಂಚಿನ ಪದಕ ಒಳಗೊಂಡಿತ್ತು. ಒಟ್ಟಾರೆಯಾಗಿ ಭಾರತ ಪದಕ ಪಟ್ಟಿಯಲ್ಲಿ 48ನೇ ಸ್ಥಾನ ಪಡೆದಿತ್ತು. ಕ್ರೀಡಾಕೂಟ ಜುಲೈ 26ರಿಂದ ಆಗಸ್ಟ್ 11ರವರೆಗೆ ನಡೆಯಲಿದೆ. ಪ್ಯಾರಿಸ್ ಆತಿಥ್ಯದಲ್ಲಿ ನಡೆಯುತ್ತಿರುವ ಮೂರನೇ (1900 ಮತ್ತು 1924ರ ನಂತರ) ಟೂರ್ನಿ ಇದಾಗಿದೆ. 32 ಕ್ರೀಡೆಗಳು ಮತ್ತು 329 ಈವೆಂಟ್‌ಗಳನ್ನು ಯೋಜಿಸಲಾಗಿದೆ. 30 ಸದಸ್ಯರನ್ನು ಒಳಗೊಂಡ ಟ್ರ್ಯಾಕ್ ಆ್ಯಂಡ್ ಫೀಲ್ಡ್ ತಂಡಕ್ಕೆ ಟೋಕಿಯೊ ಒಲಿಂಪಿಕ್​ ಚಿನ್ನದ ಪದಕ ವಿಜೇತ, ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಅವರು ನಾಯಕನಾಗಿದ್ದಾರೆ.

ಈ ಬಾರಿಯ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ(Paris Olympics) ಭಾಗಿಯಾಗುವ ಭಾರತದ ಆ್ಯತ್ಲೀಟ್‌ಗಳಿಗೆ ಮನೆಯ ವಾತಾವರಣವನ್ನು ಕಲ್ಪಿಸುವ ಉದ್ದೇಶದಿಂದ ರಿಲಯನ್ಸ್‌ ಸಂಸ್ಥೆ “ಇಂಡಿಯಾ ಹೌಸ್​”(India House)​ ಎಂಬ ವಿಶೇಷ ವ್ಯವಸ್ಥೆಯೊಂದನ್ನು ಮಾಡಿದೆ. ಭಾರತೀಯ ಕ್ರೀಡಾಪಟುಗಳು ಇದರಲ್ಲೇ ಉಳಿದುಕೊಳ್ಳಲಿದ್ದಾರೆ.

Continue Reading
Advertisement
PM Modi Russia Visit
ವಿದೇಶ5 hours ago

PM Modi Russia Visit: ದೇಶ, ಜನರಿಗಾಗಿ ನಿಮ್ಮ ಜೀವನವೇ ಮುಡಿಪು ಎಂದು ಮೋದಿಯನ್ನು ಹೊಗಳಿದ ಪುಟಿನ್

LKG UKG
ಪ್ರಮುಖ ಸುದ್ದಿ5 hours ago

LKG, UKG: ಎಲ್‌ಕೆಜಿ, ಯುಕೆಜಿ, 1ನೇ ತರಗತಿ ಪ್ರವೇಶಾತಿಗೆ ಗರಿಷ್ಠ ವಯೋಮಿತಿ ನಿಗದಿ; ಇಲ್ಲಿದೆ ಹೊಸ ಅಪ್‌ಡೇಟ್

IND vs SL
ಕ್ರೀಡೆ6 hours ago

IND vs SL: ಶ್ರೀಲಂಕಾ ವಿರುದ್ಧದ ಸರಣಿಗೆ ರೋಹಿತ್​-ಕೊಹ್ಲಿಗೆ ವಿಶ್ರಾಂತಿ

Ramniwas Rawat
ದೇಶ7 hours ago

Ramniwas Rawat: 15 ನಿಮಿಷದಲ್ಲಿ 2 ಬಾರಿ ಸಚಿವನಾಗಿ ಬಿಜೆಪಿ ಶಾಸಕ ಪ್ರಮಾಣವಚನ; ಎಲ್ಲಾಯ್ತು ಎಡವಟ್ಟು?

Paris Olympics 2024
ಕ್ರೀಡೆ7 hours ago

Paris Olympics 2024: ಪ್ಯಾರಿಸ್ ಒಲಿಂಪಿಕ್ಸ್‌ಗೆ ಸಿಂಧು, ಶರತ್ ಕಮಲ್ ಭಾರತದ ಧ್ವಜಧಾರಿ

MLA Satish Sail visited the flood affected areas of Karwar taluk
ಉತ್ತರ ಕನ್ನಡ7 hours ago

Uttara Kannada News: ಕಾರವಾರ ತಾಲೂಕಿನ ನೆರೆ ಪೀಡಿತ ಪ್ರದೇಶಗಳಿಗೆ ಶಾಸಕ ಸತೀಶ ಕೆ. ಸೈಲ್ ಭೇಟಿ

Union Budget 2024
ದೇಶ7 hours ago

Union Budget 2024: ಕೇಂದ್ರ ಬಜೆಟ್;‌ 8ನೇ ವೇತನ ಆಯೋಗ ಸೇರಿ 7 ಬೇಡಿಕೆ ಇಟ್ಟ ಸರ್ಕಾರಿ ನೌಕರರು!

Dengue Cases
ಕರ್ನಾಟಕ7 hours ago

Dengue Cases: ರಾಜ್ಯದಲ್ಲಿ ಸೋಮವಾರ 197 ಡೆಂಗ್ಯೂ ಕೇಸ್‌ಗಳು ಪತ್ತೆ, ಒಬ್ಬರ ಸಾವು

ಕ್ರೀಡೆ8 hours ago

Kuldeep Yadav: ಕುಲ್​ದೀಪ್ ಯಾದವ್​ರನ್ನು​ ಅಭಿನಂದಿಸಿದ ಯೋಗಿ ಆದಿತ್ಯನಾಥ್

Channappa Gowda Mosambi elected as new District President of Akhila bharata Veerashaiva Mahasabha
ಯಾದಗಿರಿ8 hours ago

Yadgiri News: ಅಖಿಲ ಭಾರತ ವೀರಶೈವ ಮಹಾಸಭಾ ನೂತನ ಜಿಲ್ಲಾಧ್ಯಕ್ಷರಾಗಿ ಚನ್ನಪ್ಪಗೌಡ ಮೋಸಂಬಿ ಅವಿರೋಧ ಆಯ್ಕೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Rain Effect
ಮಳೆ11 hours ago

Rain Effect : ಭಾರಿ ಮಳೆಗೆ ನೀರಲ್ಲಿ ಕೊಚ್ಚಿ ಹೋದ ಪಾನ್‌ ಶಾಪ್‌, ಕಾರು! ಉಡುಪಿಯ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ

Karnataka Rain Effect
ಮಳೆ13 hours ago

Karnataka Rain : ಮಳೆ ಅವಾಂತರ; ಮರ ಬಿದ್ದು ಕಾರು ಜಖಂ, ಕುಸಿದು ಬಿದ್ದ ಪಾವಂಜೆ ಮಹಾಗಣಪತಿ ದೇವಸ್ಥಾನದ ತಡೆಗೋಡೆ

Karnataka Rain
ಮಳೆ15 hours ago

Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

Karnataka weather Forecast
ಮಳೆ16 hours ago

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

Murder case
ಬೆಂಗಳೂರು17 hours ago

Murder case : ಕುಡಿದ ಅಮಲಿನಲ್ಲಿ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

karnataka weather Forecast
ಮಳೆ1 day ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ1 day ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ1 day ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ2 days ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ2 days ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

ಟ್ರೆಂಡಿಂಗ್‌