Cauvery water dispute : ಜಲ ಶಕ್ತಿ ಇಲಾಖೆಯಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಲಿ, ಮೋದಿ ಮಧ್ಯ ಪ್ರವೇಶಿಸಲಿ: ಎಚ್.ಡಿ. ದೇವೇಗೌಡ - Vistara News

ಕರ್ನಾಟಕ

Cauvery water dispute : ಜಲ ಶಕ್ತಿ ಇಲಾಖೆಯಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಲಿ, ಮೋದಿ ಮಧ್ಯ ಪ್ರವೇಶಿಸಲಿ: ಎಚ್.ಡಿ. ದೇವೇಗೌಡ

Cauvery water dispute : ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯಕ್ಕೆ ಹಿನ್ನಡೆಯಾಗಿರುವ ಸಂಬಂಧ ನಾವು ಕೋರ್ಟ್‌ ಅನ್ನು ದೂಷಣೆ ಮಾಡುವುದು ಸರಿಯಲ್ಲ. ಇದು ರಾಜ್ಯ ಸರ್ಕಾರದ ವೈಫಲ್ಯ ಎಂದು ಎಚ್.ಡಿ. ದೇವೇಗೌಡ ಹೇಳಿದ್ದಾರೆ. ಅಲ್ಲದೆ, ಈ ವಿವಾದ ಸಂಬಂಧ ಜಲ ಶಕ್ತಿ ಇಲಾಖೆಯಿಂದ ಅರ್ಜಿ ಸಲ್ಲಿಕೆ ಮಾಡಬೇಕು. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯ ಪ್ರವೇಶ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

VISTARANEWS.COM


on

HD Devegowda Press meet
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕಾವೇರಿ ಜಲ ವಿವಾದಕ್ಕೆ (Cauvery water dispute) ಸಂಬಂಧಪಟ್ಟಂತೆ ಈಗ ಏನು ವಾಸ್ತವಾಂಶ ಇದೆಯೋ ಅದರ ಆಧಾರದ ಮೇಲೆ ಕೇಂದ್ರ ಜಲ ಶಕ್ತಿ ಇಲಾಖೆಯಿಂದ (Water Resources Department) ಸುಪ್ರೀಂ ಕೋರ್ಟ್‌ಗೆ (Supreme Court) ಅರ್ಜಿ ಹಾಕಬೇಕು. ಅರ್ಜಿ ಹಾಕಲು ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಅವರು ಮಧ್ಯ ಪ್ರವೇಶ ಮಾಡಬೇಕು. ನೀರು ಸಂಗ್ರಹಣಾ ಸಾಮರ್ಥ್ಯ ಸಹಿತ ಎಲ್ಲ ಸ್ಥಿತಿಗತಿಗಳನ್ನು ಅರಿತು ಅರ್ಜಿ ಹಾಕಲು ತಜ್ಞರನ್ನು ನೇಮಿಸಲು ಪ್ರಧಾನಿ ಮೋದಿ ಮುಂದಾಗಬೇಕು ಎಂದು ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್.ಡಿ. ದೇವೇಗೌಡ (Former Prime Minister and JDS supremo HD DeveGowda) ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್.ಡಿ. ದೇವೇಗೌಡ, ಈಗ ಸುಪ್ರೀಂ ‌ಕೋರ್ಟ್‌ ಅನ್ನು ದೂಷಣೆ ಮಾಡುವುದಿಲ್ಲ. ಇದು ರಾಜ್ಯ ಸರ್ಕಾರದ ವೈಫಲ್ಯ ಆಗಿದೆ. ಈ ಬಗ್ಗೆ ಆಗಲೇ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಅವರು ಸಲಹೆ ಕೊಟ್ಟಿದ್ದರು. ಆದರೆ, ಸರ್ಕಾರದವರು ಇದಕ್ಕೆ ‌ಎಷ್ಟು‌ ಮಾನ್ಯತೆಯನ್ನು ಕೊಟ್ಟಿದ್ದರು? ನಾ‌ನು ಈಗ ಈ ಬಗ್ಗೆ ಮಧ್ಯ ಪ್ರವೇಶ ಮಾಡುವಂತೆ ವಿನಮ್ರವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದೇನೆ ಎಂದು ಹೇಳಿದರು.

HD Devegowda Press meet

ಪ್ರಧಾನಿ ಮೋದಿಗೆ ಪತ್ರ ಬರೆದಿರುವ ದೇವೇಗೌಡ

ಕಾವೇರಿ ಜಲವಿವಾದ ಸಂಬಂಧ ರಾಜ್ಯದ ಸ್ಥಿತಿಗತಿಗಳು ಸೇರಿದಂತೆ ಇಲ್ಲಿನ ವಾಸ್ತವತೆಯನ್ನು ವಿವರಿಸಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಈ ಸಂಬಂಧ ಅವರು ಬರೆದ ಪತ್ರವನ್ನು ಸುದ್ದಿಗೋಷ್ಠಿಯಲ್ಲಿ ಮಾಧ್ಯಮಗಳಿಗೆ ಬಿಡುಗಡೆ ಮಾಡಿದರು. ಅಲ್ಲದೆ, ಇದೇ ವೇಳೆ ಕೆಆರ್‌ಎಸ್‌ ಡ್ಯಾಂನಲ್ಲಿ (KRS Dam) ಈಗಿನ ಸ್ಥಿತಿಗತಿ ಏನಿದೆ? ಎಂಬುದರ ಬಗ್ಗೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಭೇಟಿ ನೀಡಿ ತಂದಿರುವ ಫೋಟೊ ಸಹಿತ ವರದಿ ಚಿತ್ರಣವನ್ನೂ ಸಹ ದೇವೇಗೌಡ ಬಿಡುಗಡೆ ಮಾಡಿದರು.

ಬಳಿಕ ಮಾತನಾಡಿದ ಎಚ್.ಡಿ. ದೇವೇಗೌಡ, ಈಗ ಬಿಡುಗಡೆ ಮಾಡುತ್ತಿರುವ ಪತ್ರವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೂ ಕಳುಹಿಸಲಾಗಿದೆ. ನಾಳೆ ಬಂದ್ ನಡೆಸಲಾಗುತ್ತಿದೆ. ಇಂದು ನಾನು ಕಾಂಗ್ರೆಸ್, ಬಿಜೆಪಿ ಯಾವುದೇ ರಾಜಕೀಯದ ಬಗ್ಗೆ ಮಾತನಾಡುವುದಿಲ್ಲ. ಇಂದು ಕಾವೇರಿ ವಿಚಾರದ ಬಗ್ಗೆ ಮಾತ್ರವೇ ಮಾತನಾಡುತ್ತೇನೆ. ಜನರಿಗೆ ಆಗುತ್ತಿರುವ ತೊಂದರೆಗಳ ಮಾಹಿತಿಯನ್ನು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಕಲೆಹಾಕಿದ್ದಾರೆ.‌ ನನಗೆ ಹೋಗುವ ಶಕ್ತಿಯಿಲ್ಲ.‌ ಅದಕ್ಕಾಗಿ ಕುಮಾರಸ್ವಾಮಿ ಹೋಗಿದ್ದಾರೆ ಎಂದು ಹೇಳಿದರು.

HD Devegowda Press meet

ಜನರ ಹಿತ ಕಾಯುವುದು ಮುಖ್ಯ

ಬೇರೆ ರಾಜ್ಯದ ಅಧಿಕಾರಿಗಳ ತಂಡವನ್ನು ರಾಜ್ಯಕ್ಕೆ ಕಳುಹಿಸಬೇಕು. ನಮ್ಮ ಜಲಾಶಯಗಳಿಗೆ ಆ ತಂಡ ಭೇಟಿ ನೀಡಬೇಕು. ಎಲ್ಲವನ್ನೂ ಪರಿಶೀಲನೆ ನಡೆಸಬೇಕು. ನಾಳೆ ಬಂದ್ ವಿಷಯವಾಗಿ ಯಾರು ಏನು ಮಾತನಾಡುತ್ತಾರೆ ಅನ್ನೋದು ಮುಖ್ಯವಲ್ಲ. ಇಲ್ಲಿ ರಾಜ್ಯದ ಜನರ ಹಿತ ಕಾಯುವುದು ಮುಖ್ಯ ಎಂದು ಎಚ್.ಡಿ. ದೇವೇಗೌಡ ಕಿವಿಮಾತು ಹೇಳಿದರು.

ಬೇರೆ ರಾಜ್ಯಗಳ ತಜ್ಞರನ್ನು ಕರೆಸಿ

ಕುಮಾರಸ್ವಾಮಿ ಅವರು ಕೆಆರ್‌ಎಸ್‌ ಡ್ಯಾಮ್‌ಗೆ ಭೇಟಿ ನೀಡಿ ವೀಕ್ಷಣೆ ಮಾಡಿದ್ದಾರೆ. ಅಲ್ಲಿಂದ ಮಾಹಿತಿ ಸಂಗ್ರಹಣೆ ಮಾಡಿ ನನಗೆ ತಿಳಿಸಿದ್ದಾರೆ. ಪ್ರಧಾನಿಗೆ ಈ ಸಂಬಂಧ ಪತ್ರವನ್ನು ‌ಕಳುಹಿಸಿದ್ದೇನೆ. ಮಂಡ್ಯ – ಮೈಸೂರು ಸೇರಿ ಹಲವು ಕಡೆ ಪ್ರತಿಭಟನೆ ‌ಮಾಡುತ್ತಿದ್ದಾರೆ. ತಮಿಳುನಾಡಿನವರು ಅರ್ಥ ಮಾಡಿಕೊಳ್ಳಬೇಕು. ಇನ್ನು ಬೇರೆ ರಾಜ್ಯಗಳ ಐವರು ತಜ್ಞರನ್ನು ಕೇಂದ್ರದಿಂದ ಕಳುಹಿಸಿಕೊಡಬೇಕು. ಅಚ್ಚುಕಟ್ಟು ಪ್ರದೇಶಕ್ಕೆ ಅವರು ಭೇಟಿ ನೀಡಿ ವರದಿ ಕೊಡಲಿ ಎಂದು ಉಪ ರಾಷ್ಟ್ರಪತಿಗೆ ಮನವಿ ಮಾಡಿದ್ದೆ. ಇದಕ್ಕೆ ತಮಿಳರು ವಿರೋಧಿಸಿದ್ದರು ಎಂದು ಎಚ್.ಡಿ. ದೇವೇಗೌಡ ತಿಳಿಸಿದರು.

ಇದನ್ನೂ ಓದಿ: Operation Hasta : ಬಿಜೆಪಿ-ಜೆಡಿಎಸ್ ಮೈತ್ರಿ ಬೆನ್ನಲ್ಲೇ ಜೋರಾಯ್ತು ಆಪರೇಷನ್ ಹಸ್ತ! ಸಿಎಂ ಬಳಿ ಚರ್ಚಿಸುವೆನೆಂದ ಡಿಕೆಶಿ

ನಾನು ಕಾಂಗ್ರೆಸ್ – ಬಿಜೆಪಿ ವಿಚಾರವನ್ನು ಈಗ ಮಾತನಾಡುವುದಿಲ್ಲ. ರಾಜಕೀಯ ‌ನಿರ್ಣಯದ ವಿಚಾರವನ್ನು ಇಲ್ಲಿ ಪ್ರಸ್ತಾಪ ಮಾಡಲಾರೆ. ಅದಕ್ಕೆ ಬುಧವಾರ ಸುದ್ದಿಗೋಷ್ಠಿ ಕರೆಯುತ್ತೇನೆ ಎಂದು ಎಚ್.ಡಿ. ದೇವೇಗೌಡ ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಯಚೂರು

Raichur News: 371 ಜೆ ಮೀಸಲಾತಿ ಮುಂದುವರಿಸದಂತೆ ಸಿಎಂಗೆ ಪತ್ರ ಬರೆದ ಎಚ್.ಕೆ. ಪಾಟೀಲ್ ವಜಾಗೆ ದಸಂಸ ಆಗ್ರಹ

Raichur News: ಕಲ್ಯಾಣ ಕರ್ನಾಟಕ ಭಾಗದ ಕಲಂ 371 (ಜೆ) ಮೀಸಲಾತಿ ಮುಂದುವರೆಸದಂತೆ ಸಿಎಂಗೆ ಪತ್ರ ಬರೆದು ಕಲ್ಯಾಣ ಕರ್ನಾಟಕ ಭಾಗಕ್ಕೆ ಮೋಸ ಮಾಡುತ್ತಿರುವ ಕಾನೂನು ಸಚಿವ ಎಚ್.ಕೆ.ಪಾಟೀಲ್ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಲಿಂಗಸುಗೂರಿನಲ್ಲಿ ದಲಿತ ಸಂಘರ್ಷ ಸಮಿತಿ ಮುಖಂಡರು, ಎಸಿ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

VISTARANEWS.COM


on

Dalita Sangharsha samiti demands that Minister HK Patil should be dismissed from the Cabinet
Koo

ಲಿಂಗಸುಗೂರು: ಕಲ್ಯಾಣ ಕರ್ನಾಟಕ ಭಾಗದ ಕಲಂ 371 (ಜೆ) ಮೀಸಲಾತಿ ಮುಂದುವರೆಸದಂತೆ ಸಿಎಂಗೆ ಪತ್ರ ಬರೆದು ಕಲ್ಯಾಣ ಕರ್ನಾಟಕ ಭಾಗಕ್ಕೆ ಮೋಸ ಮಾಡುತ್ತಿರುವ ಕಾನೂನು ಸಚಿವ ಎಚ್.ಕೆ. ಪಾಟೀಲ್ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯ ಮುಖಂಡರು, ಎಸಿ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ (Raichur News) ಸಲ್ಲಿಸಿದರು.

ಇದನ್ನೂ ಓದಿ: Fortis Hospital: ರೋಬೋಟಿಕ್‌ ನೆರವಿನಿಂದ ಇಬ್ಬರಿಗೆ ‘ಸಂಕೀರ್ಣ ಕಿಡ್ನಿ ಕಸಿ’ ಆಪರೇಷನ್ ಸಕ್ಸೆಸ್!

ಕಲ್ಯಾಣ ಕರ್ನಾಟಕ ಪ್ರದೇಶದ ಸಾಮಾಜಿಕ, ಆರ್ಥಿಕ, ಔದ್ಯೋಗಿಕ ಅಸಮತೋಲನ ನಿವಾರಣೆಗೆ ಸಂವಿಧಾನದ ಕಲಂ 371 (ಜೆ) ಅನುಷ್ಠಾನಕ್ಕೆ ತರಲಾಗಿದೆ. ಆದರೆ ಕಲ್ಯಾಣ ಕರ್ನಾಟಕೇತರ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಕರ್ನಾಟಕ ಲೋಕಸೇವಾ ಆಯೋಗ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಕೇಂದ್ರಿಕೃತ ದಾಖಲಾತಿ ಘಟಕ ಸಂಸ್ಥೆಗಳ ನೇಮಕಾತಿಯಲ್ಲಿ ಸಂವಿಧಾನದ ಕಲಂ 371 (ಜೆ) ದಡಿ ಮೀಸಲಾತಿ ಮುಂದುವರೆಸದಂತೆ ಸಚಿವ ಎಚ್.ಕೆ ಪಾಟೀಲ್‌, ಮುಖ್ಯಮಂತ್ರಿಗೆ ಪತ್ರ ಬರೆದಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 2024ರ ಜನವರಿ 22ರಂದು ಮುಖ್ಯಮಂತ್ರಿಗೆ ಬರೆದ ಪತ್ರದಲ್ಲಿ ಕೆಇಎ, ಸಿಎಸಿ ಸಂಸ್ಥೆ ಮೂಲಕ ನೇಮಕ ಮಾಡುವ ಇಲಾಖೆಗಳ ನೇಮಕಾತಿಯಲ್ಲಿ ಕಲ್ಯಾಣ ಕರ್ನಾಟಕೇತರ ಭಾಗದ 24 ಜಿಲ್ಲೆಗಳ ಅಭ್ಯರ್ಥಿಗಳಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸುವಂತೆ ಬರೆದುಕೊಂಡಿರುವುದು ರಾಜ್ಯ ಸರ್ಕಾರ ಕಲ್ಯಾಣ ಕರ್ನಾಟಕ ಭಾಗಕ್ಕೆ ಮಾಡುತ್ತಿರುವ ಮಲತಾಯಿ ಧೋರಣೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ವಿವರಿಸಲಾಗಿದೆ.

ಸಂವಿಧಾನ ಕಲಂ 371 (ಜೆ) ರ ಅಡಿ ಸಿಗುವ ಸೌಲಭ್ಯಗಳನ್ನು ಯಥಾವತ್ತಾಗಿ ಮುಂದುವರೆಸಬೇಕು. ಅನ್ಯ ಜಿಲ್ಲೆ ಅಭ್ಯರ್ಥಿಗಳಿಗೆ ಅನ್ಯಾಯ ಆಗುವ ವಿಚಾರ ಮುಂದಿಟ್ಟು ಸರ್ಕಾರವನ್ನು ಬ್ಲಾಕ್‌ಮೇಲ್ ಮಾಡುತ್ತಿರುವ ಸಚಿವ ಎಚ್.ಕೆ ಪಾಟೀಲರನ್ನು ಸಚಿವ ಸಂಪುಟದಿಂದ ಕೈಬಿಡಬೇಕು. ಇಲ್ಲವಾದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಪ್ರತ್ಯೇಕ ರಾಜ್ಯದ ಹೋರಾಟ ರೂಪಿಸಲಾಗುವುದು. ಮಧ್ಯ ಪ್ರವೇಶಿಸಿ ಕಲ್ಯಾಣ ಕರ್ನಾಟಕ ಭಾಗಕ್ಕೆ ನ್ಯಾಯ ಒದಗಿಸಬೇಕು ಎಂದು ದಲಿತ ಸಂಘರ್ಷ ಸಮಿತಿಯ ರಾಜ್ಯ ಸಮಿತಿ ಸದಸ್ಯ ಪ್ರಭುಲಿಂಗ ಮೇಗಳಮನಿ, ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: SBI Rates: ಎಸ್‌ಬಿಐನಲ್ಲಿ ಎಫ್‌ಡಿ ಇಟ್ಟವರಿಗೆ ಬಂಪರ್‌ ನ್ಯೂಸ್;‌ ಭಾರಿ ಬಡ್ಡಿದರ ಹೆಚ್ಚಿಸಿದ ಬ್ಯಾಂಕ್!

ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿಯ ತಾಲೂಕು ಸಂಚಾಲಕ ಯಲ್ಲಪ್ಪ ಹಾಲಭಾವಿ, ಅಕ್ರಂ ಪಾಶಾ, ಹುಸೇನಪ್ಪ ನಾಯಕ, ಸುನೀಲ್‌ಕುಮಾರ, ಹನುಮೇಶ ಕುಪ್ಪಿಗುಡ್ಡ, ಹಾಗೂ ಇನ್ನಿತರಿದ್ದರು.

Continue Reading

ಕರ್ನಾಟಕ

Terrorist Arrested: ಬೆಂಗಳೂರಿನ ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು ರೂಪಿಸಿದ್ದ ಶಂಕಿತ ಉಗ್ರನ ಬಂಧನ

Terrorist Arrested: ಚೆನ್ನೈನ ಯುಎಸ್ ಕಾನ್ಸುಲೇಟ್ ಹಾಗೂ ಬೆಂಗಳೂರಿನ ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು ರೂಪಿಸಿದ ಆರೋಪದಲ್ಲಿ ಶಂಕಿತ ಉಗ್ರನ ಸೆರೆಯಾಗಿದೆ. ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ.

VISTARANEWS.COM


on

Terrorist Arrested
Koo

ಬೆಂಗಳೂರು: ನಗರದ ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಶಂಕಿತ ಉಗ್ರನನ್ನು ಎನ್‌ಐಎ ಬಂಧಿಸಿದೆ. 2014ರಲ್ಲಿ ಚೆನ್ನೈನ ಯುಎಸ್ ಕಾನ್ಸುಲೇಟ್ ಹಾಗೂ ಬೆಂಗಳೂರಿನ ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು ರೂಪಿಸಿದ ಆರೋಪದಲ್ಲಿ ಶಂಕಿತ ಉಗ್ರನ (Terrorist Arrested) ಸೆರೆಯಾಗಿದೆ.

ನೂರುದ್ದೀನ್ ಅಲಿಯಾಸ್ ರಫಿ ಬಂಧಿತ ಶಂಕಿತ ಉಗ್ರ. ಮೈಸೂರಿನ ರಾಜೀವ ನಗರದಲ್ಲಿ ಶಂಕಿತ ಉಗ್ರನನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ 2014ರಲ್ಲಿ ಚೆನ್ನೈನ ಯುಎಸ್ ಕಾನ್ಸುಲೇಟ್ ಹಾಗೂ ಬೆಂಗಳೂರಿನ ಟ್ರಿನಿಟಿ ಸರ್ಕಲ್ ಬಳಿ ಇರುವ ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು ರೂಪಿಸಿದ್ದ.

ಇನ್ನು ಕೊಲಂಬೋದಲ್ಲಿರುವ ಪಾಕಿಸ್ತಾನಿ ಹೈ ಕಮೀಷನ್‌ ಕಚೇರಿನಲ್ಲಿ ಉದ್ಯೋಗಿಯಾಗಿರುವವನ ಜತೆ ಸಂಪರ್ಕ ಹೊಂದಿದ್ದ ಶಂಕಿತ ಉಗ್ರ, ಪಾಕಿಸ್ತಾನಿ ಪ್ರಜೆ ಅಮೀರ್ ಜುಬೇರ್ ಸಿದ್ಧಿಕಿಯ ಆಣತಿ ಮೇರೆಗೆ ಕಾರ್ಯ ನಿರ್ವಹಿಸುತ್ತಿದ್ದ. ಜತೆಗೆ ಪಾಕಿಸ್ತಾನಿ ಬೇಹುಗಾರರಿಗೆ ನೂರುದ್ದೀನ್ ಹಣ ಸಹಾಯ ಮಾಡುತ್ತಿದ್ದ. ಸದ್ಯ ಮೈಸೂರಿನಲ್ಲಿ ವಶಕ್ಕೆ ಪಡೆದ ಶಂಕಿತನಿಂದ ಒಂದು ಡ್ರೋನ್, ಮೊಬೈಲ್, ಲ್ಯಾಪ್ ಟಾಪ್, ಪೆನ್ ಡ್ರೈವ್ ವಶಕ್ಕೆ ಪಡೆಯಲಾಗಿದೆ.

ಈ ಹಿಂದೆ ಹೈದರಾಬಾದ್ ಬೇಹುಗಾರಿಕಾ ಪ್ರಕರಣದಲ್ಲಿ ಜಾಮೀನು ಪಡೆದು ಪರಾರಿಯಾಗಿದ್ದ ಶಂಕಿತ ಉಗ್ರ ನೂರುದ್ದೀನ್ ಸುಳಿವು ನೀಡಿದವರಿಗೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) 5 ಲಕ್ಷ ಬಹುಮಾನ ಘೋಷಿಸಿತ್ತು. 2023ರ ಆಗಸ್ಟ್‌ನಲ್ಲಿ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಯಾದ ನಂತರ ಚೆನ್ನೈನ NIA ವಿಶೇಷ ನ್ಯಾಯಾಲಯಕ್ಕೆ ಹಾಜರಾಗಲು ವಿಫಲವಾದಾಗ ನೂರುದ್ದೀನ್ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿತ್ತು.

ಇದನ್ನೂ ಓದಿ | Prajwal Revanna Case: ಸೆಕ್ಸ್‌ ಕೇಸಲ್ಲಿ ಎಕ್ಸ್‌ ಮಾನ್ಯತೆ ಕಳೆದುಕೊಂಡ ಪ್ರಜ್ವಲ್‌ ರೇವಣ್ಣ!

ಶ್ರೀಲಂಕಾದ ಪ್ರಜೆ ಮುಹಮ್ಮದ್‌ ಸಕೀರ್‌ ಹುಸೇನ್ ಮತ್ತು ಕೊಲಂಬೋದಲ್ಲಿನ ಪಾಕಿಸ್ತಾನ ಹೈಕಮೀಷನ್‌ ಕಚೇರಿ ಉದ್ಯೋಗಿ, ಪಾಕಿಸ್ತಾನದ ಪ್ರಜೆ ಅಮೀರ್ ಜುಬೇರ್ ಸಿದ್ಧಿಕಿ ಸೇರಿ ಚೆನ್ನೈನ ಯುಎಸ್ ಕಾನ್ಸುಲೇಟ್‌ ಹಾಗೂ ಬೆಂಗಳೂರಿನ ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು ರೂಪಿಸಿದ್ದರು. ಆ ಸಂದರ್ಭದಲ್ಲಿ ಆರೋಪಿ ನೂರುದ್ದೀನ್‌, ಪಾಕಿಸ್ತಾನಿ ಪ್ರಜೆಯ ಆದೇಶದ ಮೇರೆಗೆ ನಕಲಿ ನೋಟುಗಳನ್ನು ಪೂರೈಸುವ ಮೂಲಕ ದೇಶ ವಿರೋಧಿ ಬೇಹುಗಾರಿಕೆ ಚಟುವಟಿಕೆಗಳಿಗೆ ಹಣಕಾಸು ನೆರವು ಒದಗಿಸುತ್ತಿದ್ದ ಎಂದು ಎನ್ಐಎ ತನಿಖೆಯಲ್ಲಿ ಬಹಿರಂಗವಾಗಿದೆ.

ನೂರುದ್ದೀನ್ ತಲೆಮರೆಸಿಕೊಂಡ ನಂತರ ಸ್ಥಗಿತಗೊಂಡಿದ್ದ ಆತನ ವಿರುದ್ಧದ ವಿಚಾರಣೆ ಈಗ ಪುನರಾರಂಭವಾಗಲಿದೆ ಎಂದು ಎನ್‌ಐಎ ಮಾಹಿತಿ ನೀಡಿದೆ.

Continue Reading

ಕ್ರೀಡೆ

DP Manu: ಫೆಡರೇಷನ್ ಕಪ್‌ನಲ್ಲಿ ನೀರಜ್​ ಚೋಪ್ರಾಗೆ ಬೆವರಿಳಿಯುವಂತೆ ಮಾಡಿದ ಕನ್ನಡಿಗ ಮನು; ಇವರ ಹಿನ್ನೆಲೆ, ಸಾಧನೆ ಏನೇನು?

DP Manu: ಫೆಡರೇಷನ್ ಕಪ್‌ನಲ್ಲಿ (82.06 ಮೀ) ಭರ್ಜಿ ಎಸೆದು ಭರವಸೆ ಮೂಡಿಸಿರುವ 23 ವರ್ಷದ ಡಿ.ಪಿ. ಮನು ಅವರು ಹಾಸನ(D. P. Manu Hassan) ಜಿಲ್ಲೆ ಬೇಲೂರು ತಾಲೂಕು ಕುಪ್ಪಗೋಡು ಗ್ರಾಮದವರು. ಹೊಯ್ಸಳ ಶಾಲೆಯಲ್ಲಿ ಓದುವಾಗಲೇ ಭರ್ಜಿಯತ್ತ ಆಕರ್ಷಣೆ ಬೆಳೆಸಿಕೊಂಡ ಮನು ಮೂಡುಬಿದಿರೆಯ ಆಳ್ವಾಸ್‌ ಕಾಲೇಜಿನಲ್ಲಿ ಕಠಿಣ ತರಬೇತಿ ಪಡೆದರು. ಇಲ್ಲಿ ತೋರಿದ ಪ್ರದರ್ಶನವು ಇಂದು ಚಿಗುರು ಮೀಸೆ ಹುಡುಗನನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದಿದೆ.

VISTARANEWS.COM


on

DP Manu
Koo

ಬೆಂಗಳೂರು: ಬುಧವಾರ ನಡೆದ ಫೆಡರೇಷನ್ ಕಪ್‌ನಲ್ಲಿ(Federation Cup 2024) ಒಲಿಂಪಿಕ್​ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ(Neeraj Chopra) ಅವರಿಗೆ ಬೆವರಿಳಿಸುಂತೆ ಮಾಡಿ ಸಣ್ಣ ಅಂತರದಿಂದ ಚಿನ್ನದ ಪದಕದಿಂದ ವಂಚಿತರಾಗಿ ಬೆಳ್ಳಿ ಪದಕ ಗೆದ್ದ ಡಿ.ಪಿ ಮನು(DP Manu) ಅಪ್ಪಟ ಕನ್ನಡಿಗ. ಇವರ ಪೂರ್ಣ ಹೆಸರು ದೇವರಕೇಶವಿ ಪ್ರಕಾಶ ಮನು (ಡಿ.ಪಿ. ಮನು ಎಂದೇ ಖ್ಯಾತಿ). ಈಗಾಗಲೇ ಇವರು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆಗೈದಿದ್ದಾರೆ. ಇದೇ ರೀತಿಯ ಪ್ರದರ್ಶನ ತೋರಿದರೆ ಮುಂದಿನ ದಿನಗಳಲ್ಲಿ ಜಾಗತಿಕ ಮಟ್ಟದಲ್ಲಿ ಇನ್ನೂ ಉತ್ತಮ ಸಾಧನೆ ಮಾಡುವುದರಲ್ಲಿ ಎರಡು ಮಾತಿಲ್ಲ ಎಂದೇ ವಿಶ್ಲೇಷಿಸಲಾಗುತ್ತಿದೆ. 

ಡಿ.ಪಿ. ಮನು ಹಿನ್ನೆಲೆ


ಫೆಡರೇಷನ್ ಕಪ್‌ನಲ್ಲಿ (82.06 ಮೀ) ಭರ್ಜಿ ಎಸೆದು ಭರವಸೆ ಮೂಡಿಸಿರುವ 23 ವರ್ಷದ ಡಿ.ಪಿ. ಮನು ಅವರು ಹಾಸನ(D. P. Manu Hassan) ಜಿಲ್ಲೆ ಬೇಲೂರು ತಾಲೂಕು ಕುಪ್ಪಗೋಡು ಗ್ರಾಮದವರು. ತಂದೆ ಪ್ರಕಾಶ ಹಾಗೂ ತಾಯಿ ಸುಜಾತಾ. ಹೊಯ್ಸಳ ಶಾಲೆಯಲ್ಲಿ ಓದುವಾಗಲೇ ಭರ್ಜಿಯತ್ತ ಆಕರ್ಷಣೆ ಬೆಳೆಸಿಕೊಂಡ ಮನು ಮೂಡುಬಿದಿರೆಯ ಆಳ್ವಾಸ್‌ ಕಾಲೇಜಿನಲ್ಲಿ ಕಠಿಣ ತರಬೇತಿ ಪಡೆದರು. ಇದೇ ವೇಳೆ ಮನು ಅವರು ಅಂತಾರಾಜ್ಯ, ಜೂನಿಯರ್‌ ರಾಷ್ಟ್ರೀಯ ಕೂಟಗಳಲ್ಲಿ ಭಾಗವಹಿಸಿ ಸೈ ಎನಿಸಿಕೊಂಡರು. ಆಳ್ವಾಸ್‌ ಕಾಲೇಜಿನಲ್ಲಿ ಅವರು ಪಡೆದ ತರಬೇತಿ, ನೀಡಿದ ಪ್ರದರ್ಶನವು ಚಿಗುರು ಮೀಸೆ ಹುಡುಗನನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದಿದೆ.

ಕಳೆದ ವರ್ಷ ನಡೆದಿದ್ದ ವಿಶ್ವ ಆ್ಯತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ನಲ್ಲಿ ಮನು (84.14 ಮೀ.) 6ನೇ ಸ್ಥಾನ ಪಡೆದು ಭಾರೀ ಸಂಚಲನ ಮೂಡಿಸಿದ್ದರು. ಅಲ್ಲದೆ 2023ರಲ್ಲಿ ನಡೆದ ಏಶ್ಯನ್​ ಆ್ಯತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ ಗೆದ್ದ ಸಾಧನೆ ಮಾಡಿದ್ದರು. ಇಂದು ನಡೆದ ಫೆಡರೇಷನ್ ಕಪ್‌ನಲ್ಲಿ (82.06 ಮೀ) ಬೆಳ್ಳಿ ಗೆದ್ದಿದ್ದಾರೆ. ಮೂರನೇ ಸುತ್ತಿನ ವರೆಗೂ ಅಗ್ರಸ್ಥಾನ ಕಾಯ್ದುಕೊಂಡು ಅನುಭವಿ ನೀರಜ್​ಗೆ ಒಂದು ಕ್ಷಣ ಬೆವರಿಳಿಸುವಂತೆ ಮಾಡಿದ್ದು ನಿಜಕ್ಕೂ ಸಣ್ಣ ಮಾತಲ್ಲ. ನೀರಜ್​ ಗೆಲುವಿನ ಅಂತರ 82.27 ಮೀ.

ಇದನ್ನೂ ಓದಿ Federation Cup 2024: ಕನ್ನಡಿಗ ಮನು ಎದುರು ತೀವ್ರ ಪೈಪೋಟಿ ಎದುರಿಸಿ ಚಿನ್ನ ಗೆದ್ದ ನೀರಜ್ ಚೋಪ್ರಾ

ಕಾಶಿನಾಥ ನಾಯ್ಕ್ ಗರಡಿಯಲ್ಲಿ ಬೆಳೆದ ಪ್ರತಿಭೆ


ಮನು ಅವರು ಕಾಶಿನಾಥ ನಾಯ್ಕ್​ ಅವರ ಗರಡಿಯಲ್ಲಿ ಬೆಳೆದು ಬಂದ ಪ್ರತಿಭೆ. 2020ರಲ್ಲಿ ಡಿ.ಪಿ.ಮನು ಅವರಿಗೆ ಮಹತ್ವದ ತಿರುವು ಸಿಕ್ಕಿತು. ಅವರು ಪುಣೆಯಲ್ಲಿರುವ ಆರ್ಮಿ ಸ್ಪೋರ್ಟ್ಸ್‌ ಇನ್‌ಸ್ಟಿಟ್ಯೂಟ್‌ನಲ್ಲಿ ಹವಾಲ್ದಾರ್‌ ಕೆಲಸಕ್ಕೆ ಸೇರಿದರು. ಇದೇ ವೇಳೆ ಕಾಶಿನಾಥ ನಾಯ್ಕ್​ ಅವರ ಪರಿಚಯವಾಯಿತು. ಕಾಶಿನಾಥ ಅವರ ಬಳಿ ಸತತ ತರಬೇತಿ ಪಡೆದ ಮನು, 65 ಮೀಟರ್‌ ದೂರ ಭರ್ಜಿ ಎಸೆತದಿಂದ 80 ಮೀಟರ್‌ ದಾಟುವಂತಾದರು. ಇದೀಗ ವಿಶ್ವ ಚಾಂಪಿಯನ್​ ನೀರಜ್​ಗೆ ತೀವ್ರ ಪೈಪೋಟಿ ನೀಡುವಷ್ಟರ ಮಟ್ಟಿಗೆ ಬೆಳೆದು ನಿಂತಿದ್ದಾರೆ. ನೀರಜ್​ ಕೂಡ ಕಾಶಿನಾಥ ನಾಯ್ಕ್ ಮಾರ್ಗದರ್ಶನದಲ್ಲೇ ಬೆಳೆದು ಬಂದ ಪ್ರತಿಭೆಯಾಗಿದ್ದಾರೆ. ಒಟ್ಟಿನಲ್ಲಿ ಕನ್ನಡಿಗರೊಬ್ಬರು ಜಾವೆಲಿನ್‌ ಥ್ರೋ ಮೂಲಕ ಜಾಗತಿಕ ಮಟ್ಟದಲ್ಲಿ ಹೆಸರು ಮಾಡುತ್ತಿದ್ದು, ಅವರು ಒಲಿಂಪಿಕ್ಸ್‌ಗೂ ಆಯ್ಕೆಯಾಗಲಿ, ಅಲ್ಲೂ ರಾಜ್ಯ, ದೇಶದ ಘನತೆ ಹೆಚ್ಚಿಸಲಿ ಎಂದು ಆಶಿಸೋಣ.


ಮನು ಮಾಡಿದ ಸಾಧನೆಗಳು

  1. 1. 2023ರ ಜುಲೈನಲ್ಲಿ ಬ್ಯಾಂಕಾಕ್‌ನಲ್ಲಿ ನಡೆದ ಏಷ್ಯನ್‌ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್ಸ್‌ನಲ್ಲಿ ಬೆಳ್ಳಿ

    2. 2023ರಲ್ಲಿ ನಡೆದಿದ್ದ ವಿಶ್ವ ಆ್ಯತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ನಲ್ಲಿ 6ನೇ ಸ್ಥಾನ
  2. 3. 2024ರಲ್ಲಿ ನಡೆದ ಫೆಡರೇಷನ್ ಕಪ್‌ನಲ್ಲಿ ಬೆಳ್ಳಿ ಪದಕ

    4. 2022ರ ಜೂನ್‌ನಲ್ಲಿ ನಡೆದ ರಾಷ್ಟ್ರೀಯ ಅಂತಾರಾಜ್ಯ ಹಿರಿಯ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್ಸ್‌ನಲ್ಲಿ ಚಿನ್ನದ ಪದಕ
  3. 5. 2023ರ ಏಪ್ರಿಲ್‌ನಲ್ಲಿ ಬೆಂಗಳೂರಿನ ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ನಡೆದ ಇಂಡಿಯನ್‌ ಗ್ರ್ಯಾಂಡ್‌ ಪ್ರಿಕ್ಸ್‌ನಲ್ಲಿ ಚಿನ್ನ
  4. 6. 2022ರ ಏಪ್ರಿಲ್‌ನಲ್ಲಿ ಕೇರಳದ ತಿರುವನಂಪುರಂನಲ್ಲಿ ನಡೆದ ಇಂಡಿಯನ್‌ ಗ್ರ್ಯಾಂಡ್‌ ಪ್ರಿಕ್ಸ್‌ನಲ್ಲಿ ಬಂಗಾರದ ಪದಕ
  5. 7. 2022ರ ಆಗಸ್ಟ್‌ನಲ್ಲಿ ನಡೆದ ಬರ್ಮಿಂಗ್‌ಹ್ಯಾಮ್‌ ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಐದನೇ ಸ್ಥಾನಕ್ಕೆ ತೃಪ್ತಿ
  6. 8. 2022ರ ಅಕ್ಟೋಬರ್‌ನಲ್ಲಿ ಗುಜರಾತ್‌ನಲ್ಲಿ ನಡೆದ ಇಂಡಿಯನ್‌ ನ್ಯಾಷನಲ್‌ ಗೇಮ್ಸ್‌ನಲ್ಲಿ ಚಿನ್ನ

Continue Reading

ಕರ್ನಾಟಕ

Davanagere News: ದಾವಣಗೆರೆ ಸಮೀಪದ ಕೆರೆಯಲ್ಲಿ ಲಕ್ಷಕ್ಕೂ ಅಧಿಕ ಮೀನುಗಳ ಮಾರಣಹೋಮ; ವಿಷಪ್ರಾಶನ ಶಂಕೆ

Davanagere News: ದಾವಣಗೆರೆ ಸಮೀಪದ ಎಲೆಬೇತೂರಿನ ಕೆರೆಯಲ್ಲಿ ಲಕ್ಷಾಂತರ ಮೀನುಗಳು ಮೃತಪಟ್ಟಿವೆ. ಈ ಬಗ್ಗೆ ಅಧಿಕಾರಿಗಳು ತನಿಖೆ ನಡೆಸಿ ಪರಿಹಾರ ನೀಡುವಂತೆ ಮೀನು ಸಾಕಾಣಿಕೆದಾರರು ಮನವಿ ಮಾಡಿದ್ದಾರೆ.

VISTARANEWS.COM


on

Davanagere News
Koo

ದಾವಣಗೆರೆ: ಕೆರೆಯಲ್ಲಿ 1 ಲಕ್ಷಕ್ಕೂ ಅಧಿಕ ಮೀನುಗಳ ಮಾರಣ ಹೋಮವಾಗಿರುವ ಘಟನೆ ದಾವಣಗೆರೆ (Davanagere News) ಸಮೀಪದ ಎಲೆಬೇತೂರಿನ ಕೆರೆಯಲ್ಲಿ ನಡೆದಿದೆ. ಅಧಿಕ ಬಿಸಿಲಿನ ತಾಪಕ್ಕೆ ಮೀನುಗಳು ಮೃತಪಟ್ಟಿರಬಹುದಾ ಅಥವಾ ಹಳೇ ವೈಷಮ್ಯದಿಂದ ಯಾರಾದರೂ ಕೆರೆಗೆ ವಿಷ ಬೆರೆಸಿದ್ದರಿಂದ ಮೀನುಗಳು ಸಾವಿಗೀಡಾಗಿರಬಹುದಾ ಎಂಬ ಶಂಕೆ ವ್ಯಕ್ತವಾಗಿದೆ.

ಕೆರೆಯಲ್ಲಿ 1.50 ಲಕ್ಷ ಮೀನುಗಳನ್ನು ಸಾಕಲಾಗಿತ್ತು. ಅದರಲ್ಲಿ 40 ಸಾವಿರ ಮೀನು ಹಿಡಿದು ಮಾರಲಾಗಿತ್ತು. ಇನ್ನುಳಿದ ಸುಮಾರು ಲಕ್ಷಕ್ಕೂ ಅಧಿಕ ಮೀನುಗಳು ಸಾವನ್ನಪ್ಪಿವೆ ಎನ್ನಲಾಗಿದೆ. ಬರೋಬ್ಬರಿ 5ರಿಂದ 10 ಕೆಜಿ ಇರುವ ಮೀನುಗಳು ಮೃತಪಟ್ಟು, ಕೆರೆಯಲ್ಲಿ ತೇಲುತ್ತಿವೆ. ಸತ್ತ ಮೀನುಗಳನ್ನು ನೋಡಿ ಮೀನು ಸಾಕಾಣಿಕೆದಾರರು ಕಂಗಾಲಾಗಿದ್ದು, ಈ ಬಗ್ಗೆ ಅಧಿಕಾರಿಗಳು ತನಿಖೆ ನಡೆಸಿ ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ | Murder Case: ಪ್ರಿಯತಮನ ಜೊತೆ ಶೋಕಿಗಾಗಿ ಮನೆ ಮಾಲಕಿಯ ಕೊಲೆ ಮಾಡಿದ ಯುವತಿ ಸೆರೆ

ವಿದ್ಯುತ್ ಸ್ಪರ್ಶಿಸಿ ಯುವಕ ಸಾವು

ದಾವಣಗೆರೆ: ಕುರಿಗೆ ಮೇವು ತರಲು ಹೋಗಿದ್ದ ಯುವಕ‌ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿರುವ ಘಟನೆ ದಾವಣಗೆರೆ ತಾಲೂಕಿನ ಬಿ.ಚಿತ್ತಾನಹಳ್ಳಿಯಲ್ಲಿ ನಡೆದಿದೆ. ಬಸವರಾಜ್ (18) ಮೃತ ದುರ್ದೈವಿ. ದಿವಂಗತ ಮಂಜುನಾಥ್, ಸೀತಮ್ಮ ದಂಪತಿಗಳ ದ್ವಿತೀಯ ಪುತ್ರ ಬಸವರಾಜ್ ಮುಂಜಾನೆ ಕುರಿಗಳಿಗೆ ಮೇವು ತರಲು ತೆರಳಿದ್ದ ವೇಳೆ ಅವಘಡ ನಡೆದಿದೆ.

ಮರ ಹತ್ತಿ ಸೊಪ್ಪು ಕತ್ತರಿಸುವ ವೇಳೆ ವಿದ್ಯುತ್ ತಗುಲಿ ಯುವಕ ಮೃತಪಟ್ಟಿದ್ದಾನೆ. ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading
Advertisement
Dalita Sangharsha samiti demands that Minister HK Patil should be dismissed from the Cabinet
ರಾಯಚೂರು43 seconds ago

Raichur News: 371 ಜೆ ಮೀಸಲಾತಿ ಮುಂದುವರಿಸದಂತೆ ಸಿಎಂಗೆ ಪತ್ರ ಬರೆದ ಎಚ್.ಕೆ. ಪಾಟೀಲ್ ವಜಾಗೆ ದಸಂಸ ಆಗ್ರಹ

Sandeep Lamichhane
ಕ್ರೀಡೆ12 mins ago

Sandeep Lamichhane: ಅತ್ಯಾಚಾರ ಆರೋಪದಲ್ಲಿ 8 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ಕ್ರಿಕೆಟಿಗ ಲಮಿಚಾನೆಗೆ ರಿಲೀಫ್; ನಿರಪರಾಧಿ ಎಂದ ಕೋರ್ಟ್​

Shyam Rangeela
ದೇಶ21 mins ago

Shyam Rangeela: ವಾರಾಣಸಿಯಲ್ಲಿ ಮೋದಿ ವಿರುದ್ಧ ಕಣಕ್ಕಿಳಿದ ಕಲಾವಿದನ ನಾಮಪತ್ರ ತಿರಸ್ಕಾರ!

Terrorist Arrested
ಕರ್ನಾಟಕ1 hour ago

Terrorist Arrested: ಬೆಂಗಳೂರಿನ ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು ರೂಪಿಸಿದ್ದ ಶಂಕಿತ ಉಗ್ರನ ಬಂಧನ

Monsoon 2024
ದೇಶ1 hour ago

Monsoon 2024: ರೈತರಿಗೆ ಗುಡ್‌ ನ್ಯೂಸ್;‌ ಮುಂಗಾರು ಮಳೆ ಆಗಮನಕ್ಕೆ ಫಿಕ್ಸ್‌ ಆಯ್ತು ದಿನಾಂಕ!

DP Manu
ಕ್ರೀಡೆ1 hour ago

DP Manu: ಫೆಡರೇಷನ್ ಕಪ್‌ನಲ್ಲಿ ನೀರಜ್​ ಚೋಪ್ರಾಗೆ ಬೆವರಿಳಿಯುವಂತೆ ಮಾಡಿದ ಕನ್ನಡಿಗ ಮನು; ಇವರ ಹಿನ್ನೆಲೆ, ಸಾಧನೆ ಏನೇನು?

Davanagere News
ಕರ್ನಾಟಕ2 hours ago

Davanagere News: ದಾವಣಗೆರೆ ಸಮೀಪದ ಕೆರೆಯಲ್ಲಿ ಲಕ್ಷಕ್ಕೂ ಅಧಿಕ ಮೀನುಗಳ ಮಾರಣಹೋಮ; ವಿಷಪ್ರಾಶನ ಶಂಕೆ

Robert Fico
ವಿದೇಶ2 hours ago

Robert Fico: ಸ್ಲೊವಾಕಿಯಾ ಪ್ರಧಾನಿ ರಾಬರ್ಟ್‌ ಫಿಕೊ ಮೇಲೆ ಗುಂಡಿನ ದಾಳಿ; ಭೀಕರ ವಿಡಿಯೊ ಇಲ್ಲಿದೆ

Federation Cup 2024
ಕ್ರೀಡೆ2 hours ago

Federation Cup 2024: ಕನ್ನಡಿಗ ಮನು ಎದುರು ತೀವ್ರ ಪೈಪೋಟಿ ಎದುರಿಸಿ ಚಿನ್ನ ಗೆದ್ದ ನೀರಜ್ ಚೋಪ್ರಾ

Tips For Healthy Skin
ಆರೋಗ್ಯ3 hours ago

Tips For Healthy Skin: ಈ ಐದು ಸಲಹೆಗಳನ್ನು ಪಾಲಿಸಿ, ಮೊಡವೆಗಳಿಂದ ಪಾರಾಗಿ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ15 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ18 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ1 day ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20241 day ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20241 day ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ1 day ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು1 day ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌