Bangalore Bandh : ಬೆಂಗಳೂರು ಬಂದ್‌ ಫಿಕ್ಸ್‌; ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ, ಬಸ್‌ ಸಂಚಾರ ಡೌಟ್; ಏನಿರುತ್ತೆ? ಏನಿರಲ್ಲ?‌ - Vistara News

ಕರ್ನಾಟಕ

Bangalore Bandh : ಬೆಂಗಳೂರು ಬಂದ್‌ ಫಿಕ್ಸ್‌; ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ, ಬಸ್‌ ಸಂಚಾರ ಡೌಟ್; ಏನಿರುತ್ತೆ? ಏನಿರಲ್ಲ?‌

Bangalore Bandh : ಮಂಗಳವಾರದ ಬೆಂಗಳೂರು ಬಂದ್‌ಗೆ ವೇದಿಕೆ ಸಿದ್ಧವಾಗಿದೆ. ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಬಹುತೇಕ ಅಂಗಡಿ ಮುಂಗಟ್ಟುಗಳು ಬಂದ್‌ ಆಗುವ ಸಾಧ್ಯತೆ ಇದೆ. ಹಾಗಿದ್ದರೆ ಬಂದ್‌ ವೇಳೆ ಏನಿರುತ್ತದೆ? ಏನಿರಲ್ಲ ಎಂಬುದರ ಪೂರ್ಣ ವಿವರ ಇಲ್ಲಿದೆ.

VISTARANEWS.COM


on

Bangalore Bandh Photo
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ (Cauvery water Dispute) ಮಾಡಬಾರದು ಎಂದು ಆಗ್ರಹಿಸಿ ಜಲ ಸಂರಕ್ಷಣಾ ಸಮಿತಿ (Jala Samrakshana Samiti) ಕರೆ ನೀಡಿರುವ ಸೆ. 26ರ ಬೆಂಗಳೂರು ಬಂದ್‌ (Bangalore bandh) ಮೊದಲು ಪ್ರಕಟಿಸಿದಂತೆ ಯಥಾವತ್ತಾಗಿ ನಡೆಯಲಿದೆ. ಆದರೆ, ವಾಟಾಳ್‌ ನಾಗರಾಜ್‌ (Vatal Nagaraj) ನೇತೃತ್ವದಲ್ಲಿ ಸೆ. 29ರಂದು ಕರ್ನಾಟಕ ಬಂದ್‌ಗೆ (Karnataka Bandh) ಕರೆ ನೀಡಿರುವ ಹಿನ್ನೆಲೆಯಲ್ಲಿ ಕೆಲವು ಸಂಘಟನೆಗಳು ಈ ಹಿಂದೆ ನೀಡಿದ್ದ ಬೆಂಬಲವನ್ನು ವಾಪಸ್‌ ಪಡೆದಿವೆ.

ರೈತ ಸಂಘದ ಕುರುಬೂರು ಶಾಂತ ಕುಮಾರ್‌ ಮತ್ತು ಆಮ್‌ ಆದ್ಮಿ ಪಕ್ಷದ ಮುಖ್ಯಮಂತ್ರಿ ಚಂದ್ರು ನೇತೃತ್ವದಲ್ಲಿ ಹಲವಾರು ಸಂಘಟನೆಗಳ ಬೆಂಬಲದೊಂದಿಗೆ ಬೆಂಗಳೂರು ಬಂದ್‌ ನಡೆಯಲಿದೆ. ಬಂದ್‌ನಿಂದಾಗಿ ಮಕ್ಕಳಿಗೆ ಸಮಸ್ಯೆ ಆಗಬಾರದು ಎಂಬ ಕಾರಣಕ್ಕಾಗಿ ಬೆಂಗಳೂರು ಜಿಲ್ಲಾಧಿಕಾರಿಗಳು ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ (Holiday announced for School and Colleges) ಘೋಷಿಸಿದ್ದಾರೆ. ಕಾಲೇಜುಗಳು ಮತ್ತು ವಿವಿಗಳು ನಿಗದಿ ಮಾಡಿದ್ದ ಪರೀಕ್ಷೆಗಳನ್ನು ಮುಂದೂಡಿವೆ (Exams Postponed).

ಈ ನಡುವೆ ಬೆಂಗಳೂರಿನ ಸಾರಿಗೆ ವ್ಯವಸ್ಥೆಯಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸುವ ಬಿಎಂಟಿಸಿ ಮತ್ತು ಕರ್ನಾಟಕ ಸಾರಿಗೆ ಬಸ್‌ಗಳ ಸಂಚಾರ ವ್ಯತ್ಯಯಗೊಳ್ಳುವ ಸಾಧ್ಯತೆಗಳಿವೆ. ಯಾಕೆಂದರೆ, ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ನೌಕರರ ಸಂಘಟನೆ ಬಂದ್‌ಗೆ ಬೆಂಬಲ ಘೋಷಿಸಿವೆ. ಆದರೆ ಮೆಟ್ರೋ ಸಂಚಾರ ಎಂದಿನಂತೆ ಇರುತ್ತದೆ.

ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ ಇಲ್ಲ

ಕನ್ನಡ ಮತ್ತು ನೀರಿಗೆ ಸಂಬಂಧಿಸಿದ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಕನ್ನಡ ರಕ್ಷಣಾ ವೇದಿಕೆ ಈ ಬಾರಿ ತಟಸ್ಥವಾಗಿ ಉಳಿದಿದೆ. ಸೆ. 26 ಅಥವಾ ಸೆ. 29 ಯಾವ ಬಂದ್‌ಗೂ ಬೆಂಬಲ ಕೊಡುವುದಿಲ್ಲ ಎಂದು ಅದು ಪ್ರಕಟಿಸಿದೆ. ಇದು ಬಂದ್‌ ಆಯೋಜಕರಿಗೆ ದೊಡ್ಡ ಹಿನ್ನಡೆಯಾಗಲಿದೆ.

ಹಲವು ಸಂಘಟನೆಗಳ ಬೆಂಬಲ ವಾಪಸ್‌

ಬೆಂಗಳೂರು ಬಂದ್‌, ಕರ್ನಾಟಕ ಬಂದ್‌ ಎರಡು ಬಂದ್‌ ಘೋಷಣೆಯಾಗಿದ್ದರಿಂದ ಕೆಲವು ಸಂಘಟನೆಗಳು ಸೆ. 26ರ ಬಂದ್‌ಗೆ ನೀಡಿದ್ದ ಬೆಂಬಲವನ್ನು ವಾಪಸ್‌ ಪಡೆದಿವೆ.
1. ಬೆಂಗಳೂರಿನ ಓಲಾ, ಊಬರ್‌ ಟ್ಯಾಕ್ಸಿ ಚಾಲಕರ ಸಂಘದ ಅಧ್ಯಕ್ಷ ತನ್ವೀರ್‌ ಪಾಷಾ ಅವರು ತಾವು ಸೆ. 26ರ ಬದಲು ಸೆ. 29ರ ಬಂದ್‌ ಬೆಂಬಲಿಸುವುದಾಗಿ ಹೇಳಿದೆ.

2. ಬೆಂಗಳೂರಿನ ಆದರ್ಶ ಆಟೋ ಚಾಲಕರ ಯೂನಿಯನ್‌ ಕೂಡಾ ಸೆ. 26ರ ಬದಲು ಸೆ. 29ಕ್ಕೆ ಶಿಫ್ಟ್‌ ಆಗಿದೆ.

3. ಈ ಹಿಂದೆ ಸೆ. 26ರ ಬೆಂಗಳೂರು ಬಂದ್‌ಗೆ ಬೆಂಬಲ ಘೋಷಿಸಿದ್ದ ಬೃಹತ್‌ ಬೆಂಗಳೂರು ಹೋಟೆಲ್‌ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ. ರಾವ್‌ ಅವರು ಈಗ ಸೆ. 29ರ ಬಂದ್‌ಗೆ ಬೆಂಬಲ ಸೂಚಿಸಿದ್ದಾರೆ.

ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಬಸ್‌ ಇರುವುದಿಲ್ಲ ಅಂದಿದೆ ಸಂಘಟನೆ

ಸೆ. 26ರಂದು ನಡೆಯುವ ಬೆಂಗಳೂರು ಬಂದ್ ಗೆ ಬಿಎಂಟಿಸಿ ಹಾಗೂ KSRTC ನೌಕರರು ಬೆಂಬಲ ಕೊಡುತ್ತಾರೆ ಎಂದು ಕರ್ನಾಟಕ ಸಾರಿಗೆ ನಿಗಮಗಳ ನೌಕರರ ಕೂಟದ ಪ್ರಧಾನ ಕಾರ್ಯದರ್ಶಿ ಎಸ್ ನಾಗರಾಜ್ ಹೇಳಿಕೆ ನೀಡಿದ್ದಾರೆ. ನಾವು ಹಾಗೂ ಸಮಾನ ಮನಸ್ಕರ ವೇದಿಕೆ ಹಾಗೂ ಬಿಎಂಟಿಸಿ ನೌಕರರ ಸಂಘಗಳು ತೀರ್ಮಾನ ಮಾಡಿದ್ದೇವೆ. ಯಾವ ವಾಹನಗಳನ್ನು ರಸ್ತೆಗೆ ಇಳಿಸಬೇಡಿ ಅಂತ ನಾವು ಸೂಚನೆ ಕೊಟ್ಟಿದ್ದೇವೆ. ಈ ಹಿಂದೆಯೂ ನಾವು ಬೆಂಬಲ ಕೊಟ್ಟಿದ್ದೆವು, ನಾಳೆಯೂ ಬೆಂಬಲ ಕೊಡುತ್ತೇವೆ ಎಂದಿದ್ದಾರೆ ನಾಗರಾಜ್‌.

ಸೆ. 26ರ ಬಂದ್‌ನಲ್ಲಿ ಎಲ್ಲರೂ ಸಕ್ರಿಯವಾಗಿ ಭಾಗಿ ಆಗುವಂತೆ ಕರೆ ಕೊಟ್ಟಿದ್ದೇವೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಕೂಟದ ಅಧ್ಯಕ್ಷ ಚಂದ್ರಶೇಖರ್ ಹೇಳಿದ್ದಾರೆ. ಶಾಂತಿಯುತ ಹೋರಾಟಕ್ಕೆ ನಾವು ಒಟ್ಟು ಕೊಡುತ್ತೇವೆ, ಅಹಿತಕರ ಘಟನೆ ಆಸ್ಪದ ಕೊಡಲ್ಲ. ಇದರಲ್ಲಿ ನಮ್ಮ ನೌಕರರನ್ನು ವಿಭಜನೆ ಮಾಡಿ ನೋಡುವ ಅಗತ್ಯ ಇಲ್ಲ ಎಂದು ಚಂದ್ರಶೇಖರ್‌ ಹೇಳಿದ್ದಾರೆ.

ಇದನ್ನೂ ಓದಿ: Cauvery water dispute : ನಾಳೆ ಬಂದ್‌ ಯಶಸ್ವಿ ಆಗಬೇಕು; ಹೋಟೆಲ್‌ ಓಪನ್‌ ಮಾಡ್ಬೇಡಿ, ಸಮಸ್ಯೆಗೆ ನೀವೇ ಹೊಣೆ: ಬಿಎಸ್‌ವೈ

ಹಾಗಿದ್ದರೆ ಸೆ. 26ರ ಬೆಂಗಳೂರು ಬಂದ್‌ನಲ್ಲಿ ಏನಿರುತ್ತದೆ? ಏನಿರುವುದಿಲ್ಲ?

ಏನೇನು ಇರುವುದಿಲ್ಲ?

-ಶಾಲೆ, ಕಾಲೇಜುಗಳು ಬಂದ್‌: ಪರೀಕ್ಷೆಗಳು ಕೂಡಾ ಮುಂದಕ್ಕೆ
-ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್‌ಗಳು ಬಹುತೇಕ ಇರುವುದಿಲ್ಲ
– ಓಲಾ, ಊಬರ್‌ ಹೊರತಾದ ಆಟೋ ರಿಕ್ಷಾಗಳು ಡೌಟ್‌
– ಸಿನಿಮಾ ಥಿಯೇಟರ್‌ಗಳು ಬಂದ್‌
– ಖಾಸಗಿ ಬಸ್‌ಗಳು, ಗೂಡ್ಸ್‌ ವಾಹನಗಳು
-ಸೂಪರ್‌ ಮಾರ್ಕೆಟ್‌, ಮಾಲ್‌ಗಳು
– ಬಹುತೇಕ ಅಂಗಡಿಗಳು ಬಂದ್‌
– ಕೈಗಾರಿಕೆಗಳು
– ಜುವೆಲ್ಲರಿ ಶಾಪ್‌ಗಳು
– ಬಿಬಿಎಂಪಿ ಕಾರ್ಮಿಕರು, ನೌಕರರು ಕೆಲಸ ಮಾಡಲ್ಲ

ಏನೇನು ಸೇವೆಗಳು ಲಭ್ಯ ಇರುತ್ತವೆ?
– ತುರ್ತು ಅಗತ್ಯದ ಎಲ್ಲ ಸೇವೆಗಳು ಇರುತ್ತವೆ.
– ಹಾಲಿನ ಬೂತ್‌ ಓಪನ್‌, ಪತ್ರಿಕೆಗಳು ಸಿಗುತ್ತವೆ
– ನಗರದಲ್ಲಿ ಹೋಟೆಲ್‌ಗಳು ತೆರೆದಿರುತ್ತವೆ.
– ಓಲಾ ಮತ್ತು ಊಬರ್‌ ಟ್ಯಾಕ್ಸಿಗಳು ಓಡಾಡುತ್ತವೆ
– ಹೆಚ್ಚಿನ ಆಟೋಗಳು ಓಡಾಡುತ್ತವೆ.
– ಆಸ್ಪತ್ರೆ, ಮೆಡಿಕಲ್‌ಗಳ ಸೇವೆ ಯಥಾಸ್ಥಿತಿ
– ಸರ್ಕಾರಿ ಕಚೇರಿಗಳು ಇರುತ್ತವೆ, ಜನ ಕಡಿಮೆ ಇರಬಹುದು
– ಆಂಬ್ಯುಲೆನ್ಸ್‌ ಸೇವೆಗಳು ಸಿಗುತ್ತವೆ.
– ಮೆಟ್ರೋ ಸೇವೆ ಎಂದಿನಂತೆ ಇರುತ್ತದೆ.

ಬಲವಂತವಾಗಿ ಬಂದ್‌ ಮಾಡುವಂತಿಲ್ಲ

ಸುಪ್ರೀಂಕೋರ್ಟ್‌ ತೀರ್ಪಿನಂತೆ ಬಂದ್‌ ಎಂಬ ಪದವೇ ಇಲ್ಲ. ಪ್ರತಿಭಟನೆಗೆ ಮಾತ್ರ ಅವಕಾಶ. ಬೆಂಗಳೂರು ಬಂದ್‌ ವೇಳೆ ಯಾರೂ ಯಾವುದೇ ಅಂಗಡಿಗಳನ್ನು ಬಲವಂತವಾಗಿ ಮುಚ್ಚಿಸುವಂತಿಲ್ಲ, ವಾಹನಗಳನ್ನು ತಡೆಯುವಂತಿಲ್ಲ. ಹಾಗೆ ಮಾಡಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಜತೆಗೆ ಬಂದ್‌ನಿಂದಾಗಿ ಆಸ್ತಿಪಾಸ್ತಿಗೆ ಹಾನಿ ಉಂಟಾದರೆ ಸಂಘಟಕರಿಂದಲೇ ವಸೂಲಿ ಮಾಡಲಾಗುವುದು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

CM Siddaramaiah: ಬಜೆಟ್ ಮೂಲಪಾಠವೇ ಗೊತ್ತಿಲ್ಲದ ನಿರ್ಮಲಾ ಸೀತಾರಾಮನ್; ಸಂಪುಟದಿಂದ ಕೈಬಿಡಲು ಸಿಎಂ ಒತ್ತಾಯ

CM Siddaramaiah: ಆಯವ್ಯಯದ ಲೆಕ್ಕಾಚಾರದ ಮೂಲಪಾಠವೇ ಗೊತ್ತಿಲ್ಲದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ತಕ್ಷಣ ಸಂಪುಟದಿಂದ ಕೈಬಿಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ. ಇಂಥವರ ಕೈಯಲ್ಲಿ ಹಣಕಾಸು ಖಾತೆ ನೀಡಿರುವುದು ಅತ್ಯಂತ ಅಪಾಯಕಾರಿ ನಿರ್ಧಾರ ಎಂದು ಅವರು ಹೇಳಿದ್ದಾರೆ.

VISTARANEWS.COM


on

CM Siddaramaiah demands to Pm for drop the Nirmala Sitharaman from the cabinet
Koo

ಬೆಂಗಳೂರು: ಆಯವ್ಯಯದ ಲೆಕ್ಕಾಚಾರದ ಮೂಲಪಾಠವೇ ಗೊತ್ತಿಲ್ಲದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ತಕ್ಷಣ ಸಂಪುಟದಿಂದ ಕೈಬಿಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ. ಇಂಥವರ ಕೈಯಲ್ಲಿ ಹಣಕಾಸು ಖಾತೆ ನೀಡಿರುವುದು ಅತ್ಯಂತ ಅಪಾಯಕಾರಿ ನಿರ್ಧಾರ ಎಂದು ಅವರು ಹೇಳಿದ್ದಾರೆ.

ಭಾನುವಾರದ ಪತ್ರಿಕಾಗೋಷ್ಠಿಯಲ್ಲಿ ನರೇಂದ್ರ ಮೋದಿ ಸರ್ಕಾರದಿಂದ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯವನ್ನು ಮರೆಮಾಚುವ ಹತಾಶ ಪ್ರಯತ್ನ ಮಾಡಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಾವೇ ಹೆಣೆದ ಬಲೆಯಲ್ಲಿ ಸಿಕ್ಕಿ ಹಾಕಿಕೊಡಿರುವುದು ದುರಂತ. ಸಚಿವರ ಗೊಂದಲಮಯ ಹೇಳಿಕೆಗಳ ಸಿಕ್ಕುಗಳನ್ನೆಲ್ಲ ಬಿಡಿಸುತ್ತಾ ಹೋದರೆ ಕೊನೆಗೂ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ನೀಡಿರುವುದು ಚೊಂಬು ಮಾತ್ರ ಎನ್ನುವುದು ಸಾಬೀತಾಗುತ್ತದೆ.

ನಿರ್ಮಲಾ ಸೀತಾರಾಮನ್ ಅವರ ಪ್ರಕಾರ ಹಿಂದಿನ ಯುಪಿಎ ಸರ್ಕಾರ (2004-2014) ಹತ್ತು ವರ್ಷಗಳ ಅವಧಿಯಲ್ಲಿ ಕರ್ನಾಟಕಕ್ಕೆ ನೀಡಿರುವ ಅನುದಾನ ರೂ.60,779 ಕೋಟಿ. ಎನ್‌ಡಿಎ ಸರ್ಕಾರ (2014-2024) ಹತ್ತು ವರ್ಷಗಳ ಅವಧಿಯಲ್ಲಿ ನೀಡಿದ್ದ ಹಣ ರೂ.2,36,955 ಕೋಟಿ ಎಂದು ಸಚಿವೆ ಆರೋಪಿಸಿದ್ದಾರೆ.

ಆದರೆ ಹತ್ತು ವರ್ಷಗಳ ಅವಧಿಯಲ್ಲಿ ಕೇಂದ್ರ ಸರ್ಕಾರದ ಬಜೆಟ್ ಗಾತ್ರ ಎಷ್ಟು ಪಟ್ಟು ಹೆಚ್ಚಾಗಿದೆ ಎನ್ನುವುದನ್ನು ಅವರು ಮರೆತಿದ್ದಾರೆ. ಇದು ಅವರ ಅಜ್ಞಾನವೋ, ಇಲ್ಲವೇ ಜನತೆಯ ದಾರಿ ತಪ್ಪಿಸುವ ಹುನ್ನಾರವೋ? ಎಂಬುದನ್ನು ಅವರೇ ಸ್ಪಷ್ಟಪಡಿಸಬೇಕು ಎಂದರು.

ಇದನ್ನೂ ಓದಿ: Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

2013-14ರ ಕೇಂದ್ರ ಸರ್ಕಾರದ ಬಜೆಟ್ ರೂ.16,06 ಲಕ್ಷ ಕೋಟಿ. ಆಗ ಕರ್ನಾಟಕಕ್ಕೆ ಅನುದಾನದ ರೂಪದಲ್ಲಿ ರೂ. 16,428 ಕೋಟಿ ಮತ್ತು ತೆರಿಗೆ ಹಂಚಿಕೆಯಲ್ಲಿ ರೂ.15,005 ಕೋಟಿ ಹೀಗೆ ಒಟ್ಟು ರೂ.31,483 ಕೋಟಿ ನೀಡಲಾಗಿತ್ತು. ಈ ನೆರವು ಒಟ್ಟು ಬಜೆಟ್ ನ ಶೇಕಡಾ 1.9 ರಷ್ಟಾಗುತ್ತದೆ.

2024-25ರ ಅವಧಿಯ ಕೇಂದ್ರ ಸರ್ಕಾರದ ಬಜೆಟ್ ಗಾತ್ರ ರೂ.48.02 ಲಕ್ಷ ಕೋಟಿಯಾಗಿದೆ. ಈ ಅವಧಿಯಲ್ಲಿ ನಮಗೆ ಕೇಂದ್ರ ಅನುದಾನದ ರೂಪದಲ್ಲಿ ರೂ.15,229 ಕೋಟಿ ಮತ್ತು ತೆರಿಗೆ ಹಂಚಿಕೆಯಲ್ಲಿ ರೂ.44.485 ಕೋಟಿ ನೀಡಲಾಗುತ್ತದೆ. ಇದು ಒಟ್ಟು ಬಜೆಟ್ ಗಾತ್ರದ ಶೇಕಡಾ 1.2 ರಷ್ಟಾಗುತ್ತದೆ.

ನರೇಂದ್ರ ಮೋದಿ ಸರ್ಕಾರದಿಂದ ಅನ್ಯಾಯ

2013-14ರ ಪ್ರಮಾಣದಲ್ಲಿ (ಶೇಕಡಾ 1.9)ಯೇ ಅನುದಾನ ಮತ್ತು ತೆರಿಗೆ ಹಂಚಿಕೆಯ ಹಣವನ್ನು 2024-25ರ ಅವಧಿಯಲ್ಲಿಯೂ ಕರ್ನಾಟಕಕ್ಕೆ ನೀಡಿದ್ದರೆ, ಕೇಂದ್ರ ಸರ್ಕಾರ ನೀಡುವ ಹಣದ ಮೊತ್ತ ರೂ.91,580 ಕೋಟಿಗಳಾಗುತ್ತಿತ್ತು. ಅಂದರೆ ನರೇಂದ್ರ ಮೋದಿ ಸರ್ಕಾರ ಮಾಡಿರುವ ಅನ್ಯಾಯದಿಂದಾಗಿ ಕಳೆದ ಒಂದು ವರ್ಷದ ಅವಧಿಯಲ್ಲಿ ಕರ್ನಾಟಕ 31,866 ಕೋಟಿ ರೂಪಾಯಿ ಕಳೆದುಕೊಂಡಿದೆ ಎಂದು ಆರೋಪಿಸಿದರು.

ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸುಳ್ಳಿನ ದಾರಿಯಲ್ಲಿ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಬರುವ ತೆರಿಗೆ ಹಂಚಿಕೆಯಲ್ಲಿ ವೃದ್ಧಿಯಾಗಿದೆ ಎನ್ನುವ ದಾರಿ ತಪ್ಪಿಸುವ ಹೇಳಿಕೆ ನೀಡಿದ್ದಾರೆ. ಅವರ ಪ್ರಕಾರ ಯುಪಿಎ ಸರ್ಕಾರದ ಕಾಲದಲ್ಲಿ ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದ ಪಾಲು ರೂ.81,791 ಕೋಟಿ ಮಾತ್ರ. 2014-24ರ ಅವಧಿಯ ಎನ್‌ಡಿ.ಎ ಸರ್ಕಾರದ ಅವಧಿಯಲ್ಲಿ ಕರ್ನಾಟಕ ಪಡೆದಿರುವುದು ರೂ. 2.9 ಲಕ್ಷ ಕೋಟಿ.

ಹದಿನಾಲ್ಕನೇ ಹಣಕಾಸು ಆಯೋಗ ಕರ್ನಾಟಕದ ತೆರಿಗೆ ಪಾಲು ಶೇ 4.72 ಎಂದು ನಿಗದಿಪಡಿಸಿತ್ತು, ಈಗಿನ 15ನೇ ಹಣಕಾಸು ಆಯೋಗ ಈ ಪಾಲನ್ನು ಕಡಿಮೆಗೊಳಿಸಿ ಶೇ 3.64ಕ್ಕೆ ಇಳಿಸಿತು. ಇದರಿಂದ ಕಳೆದ ಐದು ವರ್ಷಗಳಲ್ಲಿ ತೆರಿಗೆ ಪಾಲಿನಲ್ಲಿ ಅಂದಾಜು ರೂ.62,098 ಕೋಟಿಯನ್ನು ಕರ್ನಾಟಕ ಕಳೆದುಕೊಂಡಿದೆ. ಇದನ್ನು ನಿರ್ಮಲಾ ಸೀತಾರಾಮನ್ ಜಾಣತನದಿಂದ ಮರೆಮಾಚಲು ಪ್ರಯತ್ನಿಸಿದ್ದಾರೆ ಎಂದು ಸಿಎಂ ದೂರಿದರು.

ಇದನ್ನೂ ಓದಿ: Lakshmi Hebbalkar: ಪ್ರವಾಹ ಸಂತ್ರಸ್ತರ ಕಣ್ಣೀರು ಒರೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಜಿಎಸ್‌ಟಿ ಸಂಗ್ರಹದಲ್ಲಿ ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿ ರಾಜ್ಯ ಇದೆ. ಇನ್ನು ಜಿಎಸ್‌ಟಿ ಸಂಗ್ರಹದ ಬೆಳೆವಣಿಗೆ ದರವನ್ನು ಗಮನಿಸಿದರೆ ಶೇ.17ರ ಸಾಧನೆಯ ಮೂಲಕ ದೇಶದಲ್ಲೇ ಮೊದಲ ಸ್ಥಾನದಲ್ಲಿ ಕರ್ನಾಟಕವಿದೆ. ವಿಪರ್ಯಾಸವೆಂದರೆ ಈ ಪ್ರಮಾಣದಲ್ಲಿ ಜಿಎಸ್‌ಟಿ ಹಣವನ್ನು ಕೇಂದ್ರಕ್ಕೆ ಸಂಗ್ರಹಿಸಿ ನೀಡಿದರೂ ಇದರಿಂದ ರಾಜ್ಯಕ್ಕೆ ಮರಳಿ ದೊರೆಯುತ್ತಿರುವುದು ಶೇ.52 ಪಾಲು ಮಾತ್ರ. ಜಿಎಸ್‌ಟಿಯ ಅವೈಜ್ಞಾನಿಕ ಅನುಷ್ಠಾನದಿಂದಾಗಿ ಕರ್ನಾಟಕವು 2017-18 ರಿಂದ 2023-24 ರವರೆಗೆ ಸುಮಾರು ರೂ. 59,274 ಕೋಟಿ ಹಣವನ್ನು ಕಳೆದುಕೊಂಡಿದೆ.

2023-24ರ ಅವಧಿಯಲ್ಲಿ ಕೇಂದ್ರವು ರಾಜ್ಯದಿಂದ ಕನಿಷ್ಠ ರೂ. 4.30 ಲಕ್ಷ ಕೋಟಿಗೂ ಹೆಚ್ಚು ಸಂಪನ್ಮೂಲವನ್ನು ತೆರಿಗೆ, ಸೆಸ್‌, ಸರ್‌ಚಾರ್ಜ್‌ ಮೂಲಕ ಸಂಗ್ರಹಿಸಿದೆ. ಆದರೆ, ಇದಕ್ಕೆ ಪ್ರತಿಯಾಗಿ ರೂ.50 ರಿಂದ 53 ಸಾವಿರ ಕೋಟಿ ಮಾತ್ರ ಕರ್ನಾಟಕಕ್ಕೆ ನೀಡಿದೆ. ನಾವು ನೂರು ರೂ. ಸಂಗ್ರಹಿಸಿ ಕೊಟ್ಟರೆ ನಮಗೆ ಮರಳಿ ದೊರೆಯುವುದು 12-13 ರೂಪಾಯಿ ಮಾತ್ರ. ಇದರಲ್ಲಿ ತೆರಿಗೆ ಪಾಲು ₹37,000 ಕೋಟಿ ಮತ್ತು ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ನೀಡಿದ ಪಾಲಿನ ಹಣ ₹13,005 ಕೋಟಿ.

ಕಳೆದ ಆರು ವರ್ಷಗಳ ಅವಧಿಯಲ್ಲಿ ಕೇಂದ್ರ ಸರ್ಕಾರದ ಬಜೆಟ್‌ ಸರಿಸುಮಾರು ದುಪ್ಪಟ್ಟಾಗಿದೆ. 2018-19 ರಲ್ಲಿ ಕೇಂದ್ರ ಬಜೆಟ್‌ ಗಾತ್ರ ರೂ. 24,42,213 ಕೋಟಿ ಇತ್ತು. ಆಗ ಕೇಂದ್ರದಿಂದ ರಾಜ್ಯಕ್ಕೆ ದೊರೆಯುತ್ತಿದ್ದ ತೆರಿಗೆ ಪಾಲು ರೂ.35,895 ಕೋಟಿ ಹಾಗೂ ರೂ.16,082 ಕೋಟಿ ಅನುದಾನ ಸೇರಿ ಒಟ್ಟು ರೂ.46,288 ಕೋಟಿ ಲಭ್ಯವಾಗಿತ್ತು.

ಇದನ್ನೂ ಓದಿ: Paris Olympics 2024 : ಒಲಿಂಪಿಕ್ಸ್ ಕ್ವಾರ್ಟರ್​ಫೈನಲ್​ಗೇರಿ ದಾಖಲೆ ಸೃಷ್ಟಿಸಿದ ಬ್ಯಾಡ್ಮಿಂಟನ್ ಪುರುಷರ ಡಬಲ್ಸ್ ಜೋಡಿ ಸಾತ್ವಿಕ್​- ಚಿರಾಗ್​

ಆದರೆ, 2023-24ರಲ್ಲಿ ಕೇಂದ್ರದ ಬಜೆಟ್‌ ಗಾತ್ರ ರೂ.45,03,097 ಕೋಟಿಗೆ ಏರಿಕೆಯಾಗಿದೆ. ವಿಪರ್ಯಾಸವೆಂದರೆ, ಕರ್ನಾಟಕ್ಕೆ ಕೇಂದ್ರದಿಂದ ತೆರಿಗೆ ಪಾಲು ಹಾಗೂ ಅನುದಾನಗಳೆರಡೂ ಸೇರಿ ಸಿಕ್ಕಿರುವುದು ರೂ.50,257 ಕೋಟಿ ಮಾತ್ರ. ಅಂದರೆ ಐದು ವರ್ಷದ ಅವಧಿಯಲ್ಲಿ ಬಜೆಟ್‌ ದುಪ್ಪಟ್ಟಾದರೂ ರಾಜ್ಯಕ್ಕೆ ದೊರೆಯುತ್ತಿರುವ ಪಾಲಿನಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಪ್ರಸಕ್ತ ಬಜೆಟ್‌ ಗಾತ್ರದ ಹೋಲಿಕೆಯಲ್ಲಿ ಕರ್ನಾಟಕಕ್ಕೆ ವಾರ್ಷಿಕ ಕನಿಷ್ಠ ರೂ.1 ಲಕ್ಷ ಕೋಟಿಯಷ್ಟು ಹಣ ತೆರಿಗೆಯ ಪಾಲು ಹಾಗೂ ಅನುದಾನದ ಮುಖೇನ ದೊರೆಯಬೇಕಿತ್ತು, ಆದರೆ ದೊರೆತಿಲ್ಲ ಎಂದು ಸಿಎಂ ತಿಳಿಸಿದರು.

ಕರ್ನಾಟಕಕ್ಕೆ ದೊಡ್ಡ ಮಟ್ಟದ ಅನ್ಯಾಯ

ಕರ್ನಾಟಕಕ್ಕೆ ಈ ಪರಿಯ ದೊಡ್ಡ ಮಟ್ಟದ ಅನ್ಯಾಯ ಆಗಿರುವುದು ಮನವರಿಕೆಯಾದ ನಂತರವೇ ಹದಿನೈದನೇ ಹಣಕಾಸು ಆಯೋಗ ಕರ್ನಾಟಕಕ್ಕೆ ವಿಶೇಷ ಅನುದಾನದ ರೂಪದಲ್ಲಿ ₹5,495 ಕೋಟಿ ನೀಡಬೇಕೆಂದು ಶಿಫಾರಸು ಮಾಡಿತ್ತು. ಕನ್ನಡಿಗರ ಜನಪ್ರತಿನಿಧಿಯಾಗಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೇ ಈ ಶಿಫಾರಸನ್ನು ನಿರಾಕರಿಸಿರುವ ಕಾರಣ ಆ ದುಡ್ಡು ಕೂಡಾ ಬರಲಿಲ್ಲ.

ಕೇಂದ್ರ ಸರ್ಕಾರದ ಈ ತಾರತಮ್ಯ ನೀತಿ, ಮಲತಾಯಿ ಧೋರಣೆಯಿಂದಾಗಿ ಕರ್ನಾಟಕವು 2017-18ರಿಂದ ಈವರೆಗೆ ತನಗೆ ಸೇರಬೇಕಾದ ನ್ಯಾಯಯುತ ಪಾಲಾದ ರೂ. 1,87,867 ಕೋಟಿ ಹಣದಿಂದ ವಂಚಿತವಾಗಿದೆ. ಅಂದರೆ, ಕರ್ನಾಟಕದ ಪರಿಷ್ಕೃತ ಆಯವ್ಯಯದ ಗಾತ್ರ 3.24 ಲಕ್ಷ ಕೋಟಿಯ ಹೋಲಿಕೆಯಲ್ಲಿ ಅದರ ಅರ್ಧಕ್ಕಿಂತಲೂ ಹೆಚ್ಚು ಹಣ, ನಿಖರವಾಗಿ ಹೇಳಬೇಕೆಂದರೆ ಪ್ರಸಕ್ತ ಸಾಲಿನ ಬಜೆಟ್‌ನ‌ ಶೇ.57ರಷ್ಟು ಗಾತ್ರದ ಹಣ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯಕ್ಕೆ ನಷ್ಟವಾಗಿದೆ ಎಂದು ಹೇಳಿದರು.

ಇದಲ್ಲದೆ, ಹದಿನೈದನೇ ಹಣಕಾಸು ಆಯೋಗವು ಬೆಂಗಳೂರಿನ ಫೆರಿಫೆರಲ್‌ ರಿಂಗ್‌ ರಸ್ತೆಗೆ ರೂ.3,000 ಕೋಟಿ ಮತ್ತು ಕೆರೆಗಳು ಸೇರಿದಂತೆ ಬೆಂಗಳೂರು ಜಲಮೂಲ ಅಭಿವೃದ್ಧಿಗೆ ರೂ. 3000 ನೀಡಲು ಶಿಫಾರಸ್ಸು ಮಾಡಿತ್ತು. ಆದರೆ, ಈ ಶಿಫಾರಸ್ಸುಗಳನ್ನು ತಿರಸ್ಕರಿಸಿದ ವಿತ್ತ ಸಚಿವರು ರಾಜ್ಯಕ್ಕೆ ಸುಮಾರು ರೂ.11,495 ಕೋಟಿ ದ್ರೋಹ ಮಾಡಿದ್ದಾರೆ.

ನರೇಂದ್ರ ಮೋದಿಯವರು ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೂಡಿಕೊಂಡು ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ದೇಶದ ವಿರೋಧ ಪಕ್ಷಗಳ ಸರ್ಕಾರ ಇರುವ ಪ್ರತಿಯೊಂದು ರಾಜ್ಯಗಳಿಗೆ ತೆರಿಗೆ ಮತ್ತು ಅನುದಾನದ ಹಂಚಿಕೆಯಲ್ಲಿ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ: Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಜುಲೈ 30ರಂದು ಭಾರತದ ವೇಳಾಪಟ್ಟಿ ಈ ರೀತಿ ಇದೆ

ಆದರೆ ದುರಂತವೆಂದರೆ ನಿರ್ಮಲಾ ಸೀತಾರಾಮನ್ ಅವರು ಉಂಡ ಮನೆಗೆ ಎರಡು ಬಗೆದಿದ್ದಾರೆ. ತಮ್ಮನ್ನು ರಾಜ್ಯಸಭೆಗೆ ಆರಿಸಿ ಕಳಿಸಿದ ಕರ್ನಾಟಕಕ್ಕೆ ಅನ್ಯಾಯ ಮಾಡಲು ಹೇಸದ ನಿರ್ಮಲಾ ಸೀತಾರಾಮನ್ ಅವರಿಗೆ ರಾಜ್ಯದ ಹಣಕಾಸು ವ್ಯವಸ್ಥೆ ಬಗ್ಗೆ ಮಾತನಾಡುವ ಯಾವ ನೈತಿಕ ಅಧಿಕಾರ ಇದೆ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಖಾರವಾಗಿ ಪ್ರಶ್ನಿಸಿದ್ದಾರೆ.

Continue Reading

ಕರ್ನಾಟಕ

Lakshmi Hebbalkar: ಪ್ರವಾಹ ಸಂತ್ರಸ್ತರ ಕಣ್ಣೀರು ಒರೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Lakshmi Hebbalkar: ಸತತ ಮಳೆಯಿಂದಾಗಿ ಪ್ರವಾಹ ಉಂಟಾಗಿರುವ ಖಾನಾಪುರ ತಾಲೂಕಿನ ವಿವಿಧ ಗ್ರಾಮಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೋಮವಾರ ಭೇಟಿ ನೀಡಿ, ಸಂತ್ರಸ್ತರ ಕಣ್ಣೀರು ಒರೆಸಿದರು. ಜನರ ಸಮಸ್ಯೆಗಳನ್ನು ಅಲಿಸುವುದರ ಜತೆಗೆ ವೈಯಕ್ತಿಕವಾಗಿ ಆರ್ಥಿಕ ಸಹಾಯ ನೀಡುವ ಮೂಲಕ ಸ್ಪಂದಿಸಿದರು.

VISTARANEWS.COM


on

Minister Lakshmi Hebbalkar reviewed the flood situation and provided individual financial assistance to the victims
Koo

ಬೆಳಗಾವಿ: ಸತತ ಮಳೆಯಿಂದಾಗಿ ಪ್ರವಾಹ ಉಂಟಾಗಿರುವ ಖಾನಾಪುರ ತಾಲೂಕಿನ ವಿವಿಧ ಗ್ರಾಮಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar) ಸೋಮವಾರ ಭೇಟಿ ನೀಡಿ, ಸಂತ್ರಸ್ತರ ಕಣ್ಣೀರು ಒರೆಸಿದರು. ಜನರ ಸಮಸ್ಯೆಗಳನ್ನು ಅಲಿಸುವುದರ ಜತೆಗೆ ವೈಯಕ್ತಿಕವಾಗಿ ಆರ್ಥಿಕ ಸಹಾಯ ನೀಡುವ ಮೂಲಕ ಸ್ಪಂದಿಸಿದರು.

ಖಾನಾಪುರ ತಾಲೂಕಿನ ಮಲಪ್ರಭಾ ಸೇತುವೆಯ ವೀಕ್ಷಣೆ ಮಾಡಿದ ಸಚಿವರು, ನದಿಗೆ ನೀರಿನ ಒಳಹರಿವಿನ ಪ್ರಮಾಣ ಮತ್ತು ಸದ್ಯದ ಪರಿಸ್ಥಿತಿಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಮುಖ್ಯ ರಸ್ತೆಯಲ್ಲಿರುವ ಸೇತುವೆಯ ಪರಿಸ್ಥಿತಿ ಕುರಿತು ಮಾಹಿತಿ ಪಡೆದು, ತುರ್ತಾಗಿ ಎರಡೂ ಕಡೆಯ ಗ್ರಿಲ್‌ಗಳ ದುರಸ್ತಿಗೆ ಸೂಚಿಸಿದ ಸಚಿವರು, ಜತೆಗೆ ತಾಲೂಕಿನಲ್ಲಿ ಬೆಳೆ ನಷ್ಟ, ಮನೆ ಹಾನಿ ಸೇರಿದಂತೆ ಇನ್ನಿತರ ಸಂಗತಿಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.

ಮೃತ ಮಹಿಳೆ ಕುಟುಂಬಕ್ಕೆ ನೆರವು

ಮೂಲಸೌಕರ್ಯ ಕೊರತೆಯ ಹಿನ್ನೆಲೆಯಲ್ಲಿ ಖಾನಾಪುರ ತಾಲೂಕಿನ ಅಮಗಾಂವ್ ಗ್ರಾಮದ ಅನಾರೋಗ್ಯ ಪೀಡಿತ ಮಹಿಳೆಯನ್ನು ಗ್ರಾಮಸ್ಥರು ಹೊತ್ತು ಆಸ್ಪತ್ರೆಗೆ ಸಾಗಿಸಿದರೂ ಪ್ರಯೋಜನವಾಗದೆ ಈಚೆಗೆ ಮೃತಪಟ್ಟಿದ್ದರು. ಮಹಿಳೆ ಹರ್ಷದಾ ಕುಟುಂಬಸ್ಥರಿಗೆ ಧೈರ್ಯ ತುಂಬಿ, ಸಚಿವರು ವೈಯಕ್ತಿಕ ಪರಿಹಾರ ನೀಡಿದರು. ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ಸಚಿವರು, ಇನ್ಮುಂದೆ ಇಂಥ ಪ್ರಕರಣಗಳು ಜಿಲ್ಲೆಯಲ್ಲಿ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇದನ್ನೂ ಓದಿ: Natural Mosquito Repellents: ಸೊಳ್ಳೆಗಳು ನಿಮ್ಮ ಹತ್ತಿರ ಸುಳಿಯದಂತೆ ಮಾಡಲು ಇಲ್ಲಿವೆ ನೈಸರ್ಗಿಕ ಉಪಾಯಗಳು!

ನಂತರ, ರುಮೇವಾಡಿ ಸೇತುವೆಯನ್ನು ಸಹ ಸಚಿವರು ಪರಿಶೀಲಿಸಿದರು. ಅಲ್ಲಿಂದ ಚಿಕ್ಕಹಟ್ಟಿಹೊಳಿ ಹಾಗೂ ಹಿರೆಹಟ್ಟಿಹೊಳಿ ಗ್ರಾಮಕ್ಕೆ ತೆರಳಿ ಗ್ರಾಮದಲ್ಲಿ ಮನೆಗಳು ಬಿದ್ದಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಮನೆ ಸಂಪೂರ್ಣವಾಗಿ ಬಿದ್ದು ಹಾನಿಯಾದರೂ ಅಧಿಕಾರಿಗಳು ಭಾಗಶಃ ಬಿದ್ದಿದೆ ಎಂದು ವರದಿ ನೀಡಿರುವ ಕುರಿತು ಎಂಜಿನಿಯರ್ ತರಾಟೆಗೆ ತೆಗೆದುಕೊಂಡ ಸಚಿವರು, ಅಧಿಕಾರಿಗಳು ಮಾಡುವ ತಪ್ಪಿನಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತಿದೆ. ಬಿದ್ದಿರುವ ಮನೆಯಲ್ಲಿ ನೀವು ಉಳಿದುಕೊಳ್ಳಲು ಸಾಧ್ಯವೇ? ಸರ್ಕಾರ ಪರಿಹಾರ ಕೊಡಲು ಸಿದ್ಧವಿರುವಾಗ ನೀವು ಈ ರೀತಿ ವರದಿ ಕೊಡಟ್ಟಿದ್ದೇಕೆ? ಇಂತಹ ಮನೆಯಲ್ಲಿ ನೀವು ಉಳಿದುಕೊಳ್ಳಲು ಸಾಧ್ಯವೇ? ಎಂದು ಪ್ರಶ್ನಿಸಿದರು.

ಕೆಲವು ಅಧಿಕಾರಿಗಳು ಕಟುಕರ ರೀತಿ ಕೆಲಸ ಮಾಡುತ್ತಿದ್ದಾರೆ. ಹೃದಯವಂತಿಕೆಯಿಂದ ಕೆಲಸ ಮಾಡಬೇಕು. ಇಲ್ಲಿನ ಪರಿಸ್ಥಿತಿ ನೋಡಿದರೆ ಕರುಳು ಹಿಂಡಿದಂತಾಗುತ್ತದೆ. ತಪ್ಪು ಮಾಡುವ ಅಧಿಕಾರಿಗಳಿಗೆ ಬಿಸಿ ಮುಟ್ಟಿಸುತ್ತೇನೆ ಎಂದು ಸಚಿವರು ಸುದ್ದಿಗಾರರಿಗೆ ತಿಳಿಸಿದರು.

ಚಿಕ್ಕಹಟ್ಟಿಹೊಳಿ ಮಲಪ್ರಭಾ ಸೇತುವೆ ಪ್ರದೇಶಕ್ಕೆ ತೆರಳಿ ಪರಿಶೀಲನೆ ನಡೆಸಿ, ಅಗತ್ಯ ತಡೆಗೊಡೆ ಹಾಗೂ ಸೇತುವೆಯನ್ನು ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಪ್ರವಾಹ ಪರಿಹಾರ ಕೊಡಲು ಅಗತ್ಯ ಹಣವಿದೆ. ಯಾವುದೇ ಸಮಸ್ಯೆ ಇಲ್ಲ. ಸೂಕ್ತ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಮನೆ ಕಳೆದುಕೊಂಡ ಹಲವು ಸಂತ್ರಸ್ತರಿಗೆ ಸಚಿವರು ತಮ್ಮ ವೈಯಕ್ತಿಕ ನಿಧಿಯಿಂದ ಆರ್ಥಿಕ ಸಹಾಯ ನೀಡಿದರು. ಸರ್ಕಾರದಿಂದ ಸಾಧ್ಯವಾದಷ್ಟು ಹೆಚ್ಚು ಪರಿಹಾರ ಒದಗಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಇದನ್ನೂ ಓದಿ: Paris Olympics 2024 : ಒಲಿಂಪಿಕ್ಸ್ ಕ್ವಾರ್ಟರ್​ಫೈನಲ್​ಗೇರಿ ದಾಖಲೆ ಸೃಷ್ಟಿಸಿದ ಬ್ಯಾಡ್ಮಿಂಟನ್ ಪುರುಷರ ಡಬಲ್ಸ್ ಜೋಡಿ ಸಾತ್ವಿಕ್​- ಚಿರಾಗ್​

ಖಾನಾಪುರ ತಾಲೂಕಿನ ಜನರು, ಸಚಿವರು ಹೋದಲ್ಲೆಲ್ಲ ಅತ್ಯಂತ ಪ್ರೀತಿಯಿಂದ ಬಂದು ಮಾತನಾಡಿಸುತ್ತಿದ್ದರು. ತಮ್ಮ ಬೇಡಿಕೆಗಳ ಅಹವಾಲು ಆಲಿಸುತ್ತಿದ್ದರು. ಹತ್ತಾರು ವರ್ಷಗಳಿಂದ ಈಡೇರದ ಬೇಡಿಕೆಗಳ ಕುರಿತು ಗಮನ ಸೆಳೆಯುತ್ತಿದ್ದರು. ಎಲ್ಲದಕ್ಕೂ ಕಿವಿಯಾದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಮಾಧಾನದಿಂದ ಸ್ಪಂದಿಸಿದರು. ಈ ವೇಳೆ ವಿವಿಧ ಇಲಾಖೆಯ ಅಧಿಕಾರಿಗಳು, ಕಾರ್ಯಕರ್ತರು ಇದ್ದರು.

ಮಾನವೀಯತೆಯಿಂದ ಸಂತ್ರಸ್ತರಿಗೆ ಸ್ಪಂದಿಸಿ

ನಂತರ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕುಕಡೊಳ್ಳಿ ಗ್ರಾಮಕ್ಕೆ ತೆರಳಿ ಅಲ್ಲಿನ ಪರಿಸ್ಥಿತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಅಧಿಕಾರಿಗಳು ಮಾನವೀಯತೆಯಿಂದ ಸಂತ್ರಸ್ತರಿಗೆ ಸ್ಪಂದಿಸಬೇಕು ಎಂದು ಸೂಚಿಸಿದರು.

ಇದಾದ ನಂತರ, ಬೆಂಡಿಗೇರಿ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಪ್ರವಾಹದಿಂದ ಮನೆಗಳಿಗೆ ಹಾನಿಯಾಗಿರುವ ಕುರಿತು ಮಾಹಿತಿ ಪಡೆದರು. ಸಭೆಯ ಬಳಿಕ ಮಳೆಯಿಂದ ಹಾನಿಗೊಳಗಾಗಿರುವ ಮನೆಗಳನ್ನು ವೀಕ್ಷಿಸಿ, ಮನೆ ಕಳೆದುಕೊಂಡ ಸಂತ್ರಸ್ತರಿಗೆ ಧೈರ್ಯ ತುಂಬಿ, ಸರ್ಕಾರದಿಂದ ಪರಿಹಾರ ದೊರಕಿಸಿಕೊಡುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಗ್ರಾಮ ಪಂಚಾಯತಿಯ ಪದಾಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

ಬಳಿಕ, ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಮನೆಗಳನ್ನು ಕಳೆದುಕೊಂಡಿರುವ ಹಿರೇ ಬಾಗೇವಾಡಿ ಗ್ರಾಮದ ಪಾರ್ವತಿ ಯಮ್ಮಿನಕಟ್ಟಿ, ಚಂಬಣ್ಣ ತಲ್ಲೂರ್, ಕಾಶವ್ವ ಪಡಗಲ್ ಹಾಗೂ ಸುಶೀಲಾ ನಾವಲಗಿ ಮತ್ತಿತರರ ಮನೆ ಬಿದ್ದ ಸ್ಥಳಕ್ಕೆ ಭೇಟಿ ನೀಡಿದ ಲಕ್ಷ್ಮೀ ಹೆಬ್ಬಾಳಕರ್, ಸಂತ್ರಸ್ತರಿಗೆ ಧೈರ್ಯ ತುಂಬಿ, ಸರ್ಕಾರದಿಂದ ಪರಿಹಾರ ದೊರಕಿಸಿಕೊಡುವ ಭರವಸೆಯನ್ನು ನೀಡಿದರು.ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

ಕರ್ನಾಟಕ

Pralhad Joshi: ಟೊಮೆಟೊ ಬೆಲೆ ಸ್ಥಿರತೆಗೆ ಕ್ರಮ; ಕೆಜಿಗೆ 60 ರೂ. ನಿಗದಿ: ಪ್ರಲ್ಹಾದ್‌ ಜೋಶಿ

Pralhad Joshi: ಮಾರುಕಟ್ಟೆಯಲ್ಲಿ ಏರಿಳಿತ ಕಾಣುತ್ತಿರುವ ಟೊಮೆಟೊ ಬೆಲೆ ಸ್ಥಿರತೆಗೆ ಕ್ರಮ ಕೈಗೊಳ್ಳಲಾಗಿದ್ದು, ಕೆಜಿಗೆ 60 ರೂ. ದರ ನಿಗದಿಪಡಿಸಲಾಗಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

VISTARANEWS.COM


on

Union Minister Pralhad Joshi statement on tomato price
Koo

ನವದೆಹಲಿ: ಮಾರುಕಟ್ಟೆಯಲ್ಲಿ ಏರಿಳಿತ ಕಾಣುತ್ತಿರುವ ಟೊಮೆಟೊ ಬೆಲೆ ಸ್ಥಿರತೆಗೆ ಕ್ರಮ ಕೈಗೊಳ್ಳಲಾಗಿದ್ದು, ಕೆಜಿಗೆ 60 ರೂ. ದರ ನಿಗದಿಪಡಿಸಲಾಗಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ತಿಳಿಸಿದ್ದಾರೆ.

ದೆಹಲಿಯ ಕೃಷಿ ಭವನದಲ್ಲಿ ಇಂದು ಭಾರತೀಯ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟದ ಟೊಮೆಟೊ ವ್ಯಾನ್‌ಗಳಿಗೆ ಚಾಲನೆ ನೀಡಿ ಬೆಲೆ ಸ್ಥಿರತೆ ಕುರಿತು ತಿಳಿಸಿದರು.

ದೆಹಲಿ, ಎನ್‌ಸಿಆರ್‌ನ ಚಿಲ್ಲರೆ ಮಾರುಕಟ್ಟೆಗಳಲ್ಲಿ ಟೊಮೆಟೊ ಬೆಲೆ ಏರಿಳಿತ ಕಾಣುತ್ತಿದ್ದು, ಸ್ಥಿರತೆ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: Natural Mosquito Repellents: ಸೊಳ್ಳೆಗಳು ನಿಮ್ಮ ಹತ್ತಿರ ಸುಳಿಯದಂತೆ ಮಾಡಲು ಇಲ್ಲಿವೆ ನೈಸರ್ಗಿಕ ಉಪಾಯಗಳು!

ಟೊಮೆಟೋಗೆ ಚಿಲ್ಲರೆ ಬೆಲೆ ಪ್ರತಿ ಕಿಜಿಗೆ 60 ರೂ. ನಿಗದಿಪಡಿಸಲಾಗಿದೆ. ಅಲ್ಲದೇ, ಪ್ರಮುಖ 18 ಸ್ಥಳಗಳಲ್ಲಿ ಮಾರಾಟ ಮಾಡಲಾಗುವುದು. ಗ್ರಾಹಕರ ಅನುಕೂಲ ಮತ್ತು ಬೇಡಿಕೆಗೆ ಅನುಗುಣವಾಗಿ ಮಾರಾಟ ಸ್ಥಳಗಳ ಸಂಖ್ಯೆಯನ್ನು ಹೆಚ್ಚಿಸಲಾಗುತ್ತದೆ ಎಂದು ಸಚಿವ ಜೋಶಿ ತಿಳಿಸಿದರು.

ಭಾರತೀಯ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟದ ಟೊಮೆಟೊ ವ್ಯಾನ್‌ಗಳು ದೆಹಲಿ- ಎನ್‌ಸಿಆರ್ ಪ್ರದೇಶಗಳಲ್ಲಿ ಲಭ್ಯವಿರುತ್ತವೆ ಎಂದರು.

ದೆಹಲಿ, ಕೋಲಾರ ಮತ್ತು ರಾಜಸ್ಥಾನದ ಮಾರುಕಟ್ಟೆಗಳಿಂದ ಟೊಮೆಟೊ ಖರೀದಿಸಿ, ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಪ್ರತಿ ಕೆಜಿಗೆ 60 ರೂ. ದರದಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ: Rohit Sharma : ಏಕ ದಿನ ಸರಣಿಗಾಗಿ ಶ್ರೀಲಂಕಾ ತಲುಪಿದ ರೋಹಿತ್, ವಿರಾಟ್​ ಕೊಹ್ಲಿ

ಈ ಸಂದರ್ಭದಲ್ಲಿ ಕೇಂದ್ರ ರಾಜ್ಯ ಸಚಿವ ಬಿ.ಎಲ್.ವರ್ಮಾ ಉಪಸ್ಥಿತರಿದ್ದರು.

Continue Reading

ಕರ್ನಾಟಕ

HD Devegowda: ಮೋದಿ ಬಜೆಟ್‌ಗೆ ಎಚ್‌.ಡಿ.ದೇವೇಗೌಡರ ಮೆಚ್ಚುಗೆ; ಬೆಂಗಳೂರು ನೀರಿನ ಸಮಸ್ಯೆ ಬಗೆಹರಿಸಲು ಮನವಿ

HD Devegowda: ಮೈತ್ರಿ ಸರ್ಕಾರವನ್ನು ನಡೆಸುವುದು ತುಂಬಾ ಕಷ್ಟ. ನಾನೂ ಮೈತ್ರಿ ಸರ್ಕಾರವನ್ನು ನಡೆಸಿದ್ದೇನೆ. ಆದರೆ ನರೇಂದ್ರ ಮೋದಿ ಉತ್ತಮವಾಗಿ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ. ಸ್ಪೀಕರ್ ಆಯ್ಕೆಯಿಂದ ಹಿಡಿದು ಪ್ರಮುಖ ನಿರ್ಧಾರಗಳಲ್ಲಿ ಯಾರು ಆಕ್ಷೇಪ ವ್ಯಕ್ತಪಡಿಸಿಲ್ಲ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ತಿಳಿಸಿದ್ದಾರೆ.

VISTARANEWS.COM


on

HD Devegowda
Koo

ನವ ದೆಹಲಿ: ಕೇಂದ್ರ ಸರ್ಕಾರ ಇತ್ತೀಚೆಗೆ ಮಂಡಿಸಿದ ಬಜೆಟ್‌ ಬಗ್ಗೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಾನು ಹೃದಯಪೂರ್ವಕವಾಗಿ ಬಜೆಟ್ ಬೆಂಬಲಿಸುತ್ತೇನೆ. ಮುಂದಿನ ಬಜೆಟ್ ಬಗ್ಗೆ ಮಾತಮಾಡುತ್ತೀನೋ, ಇಲ್ಲವೊ ಗೊತ್ತಿಲ್ಲ. ಹೀಗಾಗಿ ಬೆಂಗಳೂರು ನಗರ ಕುಡಿಯುವ ನೀರು ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಕೇಂದ್ರ ಬಜೆಟ್ ಬಗ್ಗೆ ರಾಜ್ಯಸಭೆ ಕಲಾಪದಲ್ಲಿ ಮಾತನಾಡಿರುವ ಅವರು, ನಾನು 1991 ರಲ್ಲಿ ಸಂಸತ್‌ಗೆ ಬಂದೆ, ಈಗ ನನಗೆ 92 ವರ್ಷ. ಮುಂದಿನ ಬಜೆಟ್ ಬಗ್ಗೆ ಮಾತಮಾಡುತ್ತೀನೋ, ಇಲ್ಲವೊ ಗೊತ್ತಿಲ್ಲ. ನಾನು ಎನ್‌ಡಿಎ ಭಾಗವಾಗಿದ್ದೇನೆ, ಅದಕ್ಕಾಗಿ ಜೆ.ಪಿ ನಡ್ಡಾ ಅವರಿಗೆ ಧನ್ಯವಾದಗಳು ಎಂದು ಹೇಳಿದರು.

ನಾನು ಕೃಷಿ ಮತ್ತು ನಿರುದ್ಯೋಗ ಸಮಸ್ಯೆ ಬಗ್ಗೆ ಮಾತನಾಡುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಬದ್ಧತೆ ಇರುವ ವ್ಯಕ್ತಿಯನ್ನು ಕೃಷಿಗೆ ಸಚಿವರನ್ನಾಗಿ ಮಾಡಿದ್ದಾರೆ. ಉತ್ತಮ‌ ಅನುಭವ ಇರುವ ತಂಡವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಮೋದಿ ಹತ್ತು ವರ್ಷ ಸಿಎಂ ಆಗಿದ್ದಾಗ ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ. ಬೇರೆ ರಾಜ್ಯಗಳಲ್ಲಿ ಹೋಲಿಸಿದರೆ ಗುಜರಾತ್ ಅತ್ಯುತ್ತಮ ಮಾದರಿ ರಾಜ್ಯವಾಗಿದೆ ಎಂದು ತಿಳಿಸಿದರು.

ಮೈತ್ರಿ ಸರ್ಕಾರವನ್ನು ನಡೆಸುವುದು ತುಂಬಾ ಕಷ್ಟ. ನಾನೂ ಮೈತ್ರಿ ಸರ್ಕಾರವನ್ನು ನಡೆಸಿದ್ದೇನೆ. ಆದರೆ ನರೇಂದ್ರ ಮೋದಿ ಉತ್ತಮವಾಗಿ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ. ಸ್ಪೀಕರ್ ಆಯ್ಕೆಯಿಂದ ಹಿಡಿದು ಪ್ರಮುಖ ನಿರ್ಧಾರಗಳಲ್ಲಿ ಯಾರು ಆಕ್ಷೇಪ ವ್ಯಕ್ತಪಡಿಸಿಲ್ಲ. ಕರ್ನಾಟಕದಲ್ಲಿ ಎರಡು ಸೀಟು ಮಾತ್ರ ನಮ್ಮ ಶಕ್ತಿ. ಆದಾಗ್ಯೂ ಒಂದು ಸಂಪುಟ ದರ್ಜೆ ಸ್ಥಾನ ನೀಡಿದ್ದಾರೆ ಎಂದು ಹೇಳಿದರು.

ಇದು ವೈಜ್ಞಾನಿಕ ಬಜೆಟ್ ಆಗಿದ್ದು, ಮಹಿಳೆಯರು, ಬಡವರು, ಯುವಕರು, ರೈತರ ಪರವಾದ ಬಜೆಟ್ ಅನ್ನು ಕೇಂದ್ರ ಮಂಡಿಸಿದೆ. ಕೃಷಿಯಲ್ಲಿ ಉತ್ಪಾದಕತೆಯನ್ನು ಹೆಚ್ಚಿಸಲು ಒತ್ತು ನೀಡಿದೆ, ಹಂಚಿಕೆ ಸರಪಳಿ ಬಲಿಷ್ಠಗೊಳಿಸಲು ಕ್ರಮ ತೆಗೆದುಕೊಂಡಿದೆ. ಯುವಕರಿಗೆ ಇಂರ್ಟರ್ನ್‌ಶಿಪ್‌ನಲ್ಲಿ ಮೊದಲ ತಿಂಗಳ ಸಂಬಳ ನೀಡಲಾಗುತ್ತಿದೆ. ಉದ್ಯೋಗ ಹೆಚ್ಚಿಸಲು ಸರ್ಕಾರ ಆದ್ಯತೆ ನೀಡಿದೆ. ಯುವಕರನ್ನು ಕೌಶಲ್ಯಯುತರಾಗಿ ಮಾಡಲು ಹಣ ವ್ಯಯ ಮಾಡುತ್ತಿದೆ ಎಂದು ಮೆಚ್ಚುಗೆ ಸೂಚಿಸಿದ್ದಾರೆ.

ಇದನ್ನೂ ಓದಿ | DK Shivakumar: ಕನ್ನಂಬಾಡಿ ಕಟ್ಟೆ, ನಮ್ಮೆಲ್ಲರ ಅನ್ನದ ತಟ್ಟೆ; ಮಳೆ ಬರಲ್ಲ ಎಂದವರಿಗೆ ತಕ್ಕ ಉತ್ತರ ಸಿಕ್ಕಿದೆ ಎಂದ ಡಿಕೆಶಿ

ಬೆಂಗಳೂರು ನಗರದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗಿದೆ. ನಾನು ಯಾರನ್ನು ಟೀಕಿಸಲು ಹೋಗುವುದಿಲ್ಲ, ಹಣಕಾಸು ಸಚಿವರು ಕರ್ನಾಟಕದಿಂದ ಆಯ್ಕೆಯಾಗಿದ್ದಾರೆ. ಬೆಂಗಳೂರು ಬೆಳೆಯುತ್ತಿರುವ ನಗರ, ಅದಕ್ಕೆ ಕುಡಿಯುವ ನೀರು ಬೇಕು. ಇತ್ತೀಚೆಗೆ ಒಂದು ಟಿಎಂಸಿ ನೀರು ಹರಿಸಲು ಹೇಳಲಾಗಿತ್ತು. ಈಗ ಮಳೆಯಿಂದ ಎಲ್ಲವೂ ಸುಗಮವಾಗಿದೆ, ಸಹಾಯವಾಗಿದೆ. ಮಳೆ ಬಾರದಿದ್ದರೇ ಪರಿಸ್ಥಿತಿ ಏನು ಹೇಳಿ? ನೀರಿನ ಸಮಸ್ಯೆ ಹಿನ್ನೆಲೆ ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಜನರು ಎನ್‌ಡಿಎ ಮೈತ್ರಿಕೂಟ ಬೆಂಬಲಿಸಿದ್ದಾರೆ. ಹಳೆ ಮೈಸೂರು ಭಾಗ ಮತ್ತು ಬೆಂಗಳೂರಿಗೆ ಇದೇ ಆಧಾರ. ಭದ್ರಾ ಮೇಲ್ದಂಡೆ ಯೋಜನೆಯನ್ನು ಕೇಂದ್ರ ಒಪ್ಪಿಕೊಂಡಿದೆ. ಬೆಂಗಳೂರು ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿ ಎಂದು ಮನವಿ ಮಾಡಿದ್ದಾರೆ.

Continue Reading
Advertisement
Paris Olympics 2024
ಕ್ರೀಡೆ1 min ago

Paris Olympics 2024 : ಒಲಿಂಪಿಕ್ಸ್​ನಲ್ಲಿ ಬೆಳ್ಳಿ ಪದಕ ಗೆದ್ದ ಈಜುಪಟುವಿಗೆ ಕೊರೊನಾ ಸೋಂಕು!

Asia Cup cricket
ಪ್ರಮುಖ ಸುದ್ದಿ22 mins ago

Asia Cup Cricket : ಭಾರತದಲ್ಲಿ ನಡೆಯಲಿದೆ 2025ರ ಏಷ್ಯಾ ಕಪ್ ಕ್ರಿಕೆಟ್​, ಇಲ್ಲಿದೆ ಪೂರ್ಣ ವಿವರ

Viral video
ವೈರಲ್ ನ್ಯೂಸ್35 mins ago

Viral Video: ಕಾರಿನಲ್ಲೇ ಸೆಕ್ಸ್‌.. ಡಿವೈಡರ್‌ಗೆ ಡಿಕ್ಕಿ; ನಗ್ನ ಸ್ಥಿತಿಯಲ್ಲಿದ್ದ ಇಬ್ಬರು ಯುವಕರು, ಯುವತಿಯನ್ನು ಕಂಡು ಜನ ಶಾಕ್‌-ವಿಡಿಯೋ ಇದೆ

Rohan Bopanna
ಕ್ರೀಡೆ48 mins ago

Rohan Bopanna : ಅಂತಾರಾಷ್ಟ್ರೀಯ ಟೆನಿಸ್​ಗೆ ವಿದಾಯ ಘೋಷಿಸಿದ ಕನ್ನಡಿಗ ರೋಹನ್ ಬೋಪಣ್ಣ

CM Siddaramaiah demands to Pm for drop the Nirmala Sitharaman from the cabinet
ಕರ್ನಾಟಕ49 mins ago

CM Siddaramaiah: ಬಜೆಟ್ ಮೂಲಪಾಠವೇ ಗೊತ್ತಿಲ್ಲದ ನಿರ್ಮಲಾ ಸೀತಾರಾಮನ್; ಸಂಪುಟದಿಂದ ಕೈಬಿಡಲು ಸಿಎಂ ಒತ್ತಾಯ

Parliament session
ದೇಶ1 hour ago

Parliament Session: ಅಗ್ನಿಪಥ್‌ ಯೋಜನೆ ಬಗ್ಗೆ ರಾಹುಲ್‌ ನಿಗಿ ನಿಗಿ ಕೆಂಡ; ರಾಜನಾಥ್‌ ಸಿಂಗ್‌ ಸಖತ್‌ ಟಾಂಗ್‌

Minister Lakshmi Hebbalkar reviewed the flood situation and provided individual financial assistance to the victims
ಕರ್ನಾಟಕ1 hour ago

Lakshmi Hebbalkar: ಪ್ರವಾಹ ಸಂತ್ರಸ್ತರ ಕಣ್ಣೀರು ಒರೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Union Minister Pralhad Joshi statement on tomato price
ಕರ್ನಾಟಕ1 hour ago

Pralhad Joshi: ಟೊಮೆಟೊ ಬೆಲೆ ಸ್ಥಿರತೆಗೆ ಕ್ರಮ; ಕೆಜಿಗೆ 60 ರೂ. ನಿಗದಿ: ಪ್ರಲ್ಹಾದ್‌ ಜೋಶಿ

Paris Olympics 2024
ಪ್ರಮುಖ ಸುದ್ದಿ1 hour ago

Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಜುಲೈ 30ರಂದು ಭಾರತದ ವೇಳಾಪಟ್ಟಿ ಈ ರೀತಿ ಇದೆ

Arvind Kejriwal
ದೇಶ2 hours ago

Arvind Kejriwal: ದಿನೇ ದಿನೆ ಕೇಜ್ರಿವಾಲ್‌ ಆರೋಗ್ಯ ಕ್ಷೀಣ; ಪ್ರತಿಪಕ್ಷಗಳಿಂದ ನಾಳೆ ಭಾರೀ ಪ್ರತಿಭಟನಾ ರ್‍ಯಾಲಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ6 hours ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ7 hours ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ10 hours ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ1 day ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ1 day ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ1 day ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ1 day ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ2 days ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ2 days ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ2 days ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

ಟ್ರೆಂಡಿಂಗ್‌