Hosanagara News: ಅಕ್ರಮ ಮರಳು ಸಾಗಾಟ: ಮೂರು ಟಿಪ್ಪರ್ ಲಾರಿ ವಶ - Vistara News

ಶಿವಮೊಗ್ಗ

Hosanagara News: ಅಕ್ರಮ ಮರಳು ಸಾಗಾಟ: ಮೂರು ಟಿಪ್ಪರ್ ಲಾರಿ ವಶ

Shivamogga News: ಪ್ರತ್ಯೇಕ ಮೂರು ಪ್ರಕರಣಗಳಲ್ಲಿ ಅಕ್ರಮವಾಗಿ ಮರಳು ಸಾಗಿಸುತಿದ್ದ ಮೂರು ಟಿಪ್ಪರ್ ಲಾರಿಗಳನ್ನು ಹೊಸನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

VISTARANEWS.COM


on

Illegal sand transportation Three tipper lorries seized at hosanagara
ಹೊಸನಗರ ಠಾಣೆಯ ಪೊಲೀಸರು ಪ್ರತ್ಯೇಕ 3 ಪ್ರಕರಣಗಳಲ್ಲಿ ಅಕ್ರಮವಾಗಿ ಮರಳು ಸಾಗಿಸುತಿದ್ದ ಮೂರು ಟಿಪ್ಪರ್ ಲಾರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸನಗರ: ಪ್ರತ್ಯೇಕ ಮೂರು ಪ್ರಕರಣಗಳಲ್ಲಿ ಅಕ್ರಮವಾಗಿ ಮರಳು ಸಾಗಿಸುತಿದ್ದ (Illegal Sand Transportation) ಮೂರು ಟಿಪ್ಪರ್ ಲಾರಿಗಳನ್ನು (Tipper Lorries) ಹೊಸನಗರ ಠಾಣೆಯ ಪೊಲೀಸರು ವಶಕ್ಕೆ (Seized) ಪಡೆದುಕೊಂಡಿರುವ ಘಟನೆ ಜರುಗಿದೆ.

ಹೊಸನಗರ ಪೊಲೀಸ್ ಠಾಣೆ ಪಿಎಸ್‌ಐ ಶಿವಾನಂದ್ ಕೆ. ನೇತೃತ್ವದ ಸಿಬ್ಬಂದಿ ತಂಡವು ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಮೂರು ಟಿಪ್ಪರ್ ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ. ಪಟಗುಪ್ಪ ಬಳಿಯಲ್ಲಿ ಎರಡು ಟಿಪ್ಪರ್ ಲಾರಿ ಹಾಗೂ ಸೊನಲೆ ಗ್ರಾಮದಲ್ಲಿ ಒಂದು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.

ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿ ಗಂಗಪ್ಪ , ಸುನೀಲ್ ಹಾಗೂ ಅವಿನಾಶ್ ಪಾಲ್ಗೊಂಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Karnataka Weather Forecast : ಕರಾವಳಿಯಲ್ಲಿ ಸೋಮವಾರ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದ್ದು, ಮುನ್ನೆಚ್ಚರಿಕಾ ದೃಷ್ಟಿಯಿಂದ ಹಲವು ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು/ಕಾರವಾರ: ಕರಾವಳಿ ಭಾಗದಲ್ಲಿ ಮಳೆಯು ಅಬ್ಬರಿಸುತ್ತಿದ್ದು, ಜು.8ಕ್ಕೂ ವ್ಯಾಪಕ ಮಳೆಯಾಗುವ (Heavy rain Alert) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಕರಾವಳಿಯ ಉತ್ತರಕನ್ನಡದಲ್ಲಿ ನಾಳೆಯೂ ಧಾರಾಕಾರ ಮಳೆ‌‌ಯಾಗಲಿದ್ದು, ಶಾಲಾ- ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ.ಕೆ. ರಿಂದ ರಜೆ ಆದೇಶ ಹೊರಡಿಸಲಾಗಿದೆ. ಮಕ್ಕಳ ಹಿತದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ. ಇನ್ನೂ ಘಟ್ಟದ ಮೇಲಿನ ತಾಲೂಕುಗಳ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಇಲ್ಲ.

ಬೆಂಗಳೂರಲ್ಲಿ ಸಾಧಾರಣ ಮಳೆ

ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಮುಂಜಾನೆ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ವೇಳೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲಿಯಸ್ಸ್‌ ಇರಲಿದೆ.

ಇದನ್ನೂ ಓದಿ: Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

ಮಳೆಗೆ ಕುಸಿದು ಬಿದ್ದ ಮನೆ ಗೋಡೆ

ಭಾರೀ ಗಾಳಿ ಮಳೆಗೆ ಗೋಡೆ ಬಿದ್ದು ಮನೆಗೆ ಹಾನಿಯಾಗಿದೆ. ಉತ್ತರಕನ್ನಡ ಜಿಲ್ಲೆಯ ಕುಮಟಾದ ಕುಮಟಾ ವಾಲಗಳ್ಳಿ ಗ್ರಾ.ಪಂ ವ್ಯಾಪ್ತಿಯ ಕೋಟೆಗುಡ್ಡದಲ್ಲಿ ಘಟನೆ ನಡೆದಿದೆ. ಕೋಟೆಗುಡ್ಡದ ರಘು ಹಮ್ಮು ಮುಕ್ರಿ ಎಂಬುವವರ ಮನೆ ಕುಸಿದು ಬಿದ್ದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಕುಸಿದು ಪರಿಣಾಮ ಯಾವುದೇ ಸಾವು-ನೋವು ಸಂಭವಿಸಿಲ್ಲ.

ಪಕ್ಕದ ವಿಷ್ಣು ಹಮ್ಮು ಮುಕ್ರಿ ಅವರ ಮನೆಯ ಗೋಡೆಯು ಕುಸಿದು ಹಾನಿಯಾಗಿದೆ. ಮನೆ ಕಳೆದುಕೊಂಡ ಕುಟುಂಬಸ್ಥರಿಗೆ ಕೋಟೆಗುಡ್ಡದ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಆಶ್ರಯ ನೀಡಲಾಗಿದೆ. ಸ್ಥಳಕ್ಕೆ ಗ್ರಾ.ಪಂ ಅಧ್ಯಕ್ಷೆ ಶಾಂತಿ ಮಡಿವಾಳ, ಕಂದಾಯ ಅಧಿಕಾರಿಗಳು, ನೋಡಲ್ ಅಧಿಕಾರಿ ವಿನಾಯಕ ವೈದ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮನೆ ಬಿದ್ದ ಪರಿಣಾಮ ಲಕ್ಷಾಂತರ ರೂಪಾಯಿ ವಸ್ತುಗಳು ಮಣ್ಣಿನಡಿ ಸಿಲುಕಿ ಹಾನಿಯಾಗಿದೆ. ಮನೆ ಕಳೆದುಕೊಂಡು ರಘು, ವಿಷ್ಣು ಕುಟುಂಬಸ್ಥರು ಕಂಗಲಾಗಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

Karnataka Rain : ಬೆಂಗಳೂರು, ಧಾರವಾಡ, ಚಿಕ್ಕಮಗಳೂರು ಸೇರಿದಂತೆ ಹಲವೆಡೆ (Heavy Rain Effect) ಮಳೆಯಾಗಿದ್ದು, ಮಲೆನಾಡು ಭಾಗದಲ್ಲಿ ಗುಡ್ಡ ಕುಸಿತ ಪ್ರಕರಣಗಳು ಹೆಚ್ಚಾಗುತ್ತಿವೆ. ಮಳೆಗೆ ಮರಗಳು ರಸ್ತೆಗೆ ಉರುಳಿ ಬೀಳುತ್ತಿವೆ. ಈ ಮಧ್ಯೆ ಪ್ರವಾಸಿಗರ ಹುಚ್ಚಾಟ ಮುಂದುವರಿದಿದೆ.

VISTARANEWS.COM


on

By

Karnataka Rain
Koo

ಚಿಕ್ಕಮಗಳೂರು/ಕಾರವಾರ: ಭಾನುವಾರವೂ ಕರಾವಳಿ, ಮಲೆನಾಡು ಸೇರಿದಂತೆ ಒಳನಾಡಿನ ಕೆಲವೆಡೆ ಮಳೆಯು (Heavy Rain) ಅಬ್ಬರಿಸಿತ್ತು. ರಾಜಧಾನಿ ಬೆಂಗಳೂರಿನಲ್ಲಿ ಮುಂಜಾನೆಯಿಂದಲೂ ಮೋಡ ಕವಿದ ವಾತಾವರಣ (Karnataka Rain) ಇತ್ತು.. ಸಂಜೆ ಆಗುತ್ತಿದ್ದಂತೆ ಮೆಜೆಸ್ಟಿಕ್‌, ಕಾಟನ್‌ಪೇಟೆ, ಕೆಆರ್‌ ಮಾರ್ಕೆಟ್‌ ,ಟೌನ್ ಹಾಲ್, ಶಿವಾನಂದ ಸರ್ಕಲ್, ಮೈಸೂರು ಸರ್ಕಲ್ ಸುತ್ತಮುತ್ತ ಮಳೆಯಾಗಿದೆ. ಜಿಟಿ ಜಿಟಿಯಾಗಿ ಶುರುವಾದ ಮಳೆಯು ನಂತರ ಕೆಲ ಕಾಲ ಅಬ್ಬರಿಸಿತ್ತು. ಇತ್ತ ಧಾರವಾಡ ನಗರದಲ್ಲೂ ನಿರಂತರ ಮಳೆಯಾಗಿದೆ. ಬೆಳಗ್ಗೆಯಿಂದಲ್ಲೂ ಬಿಟ್ಟು ಬಿಡದೆ ಸುರಿಯುತ್ತಿದೆ. ಕೆಲವೆಡೆ ಜಿಟಿ ಜಿಟಿ ಮಳೆಯಿಂದಾಗಿ ಸವಾರರು ಪರದಾಡಿದರು. ಧಾರವಾಡ ಗ್ರಾಮೀಣ ಕೆಲ ಭಾಗಗಳಲ್ಲಿ ಹೊರತುಪಡಿಸಿ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗಿದೆ.

ನಿರಂತರ ಮಳೆಗೆ ಗುಡ್ಡ ಕುಸಿತ

ಚಿಕ್ಕಮಗಳೂರಿನಲ್ಲಿ ಬಿಟ್ಟುಬಿಡದೆ ಮಳೆಯು ಸುರಿಯುತ್ತಿದ್ದು, ರಸ್ತೆ ಬದಿ ಗುಡ್ಡ ಕುಸಿತ ಹೆಚ್ಚಾಗುತ್ತಿದೆ. ಶೃಂಗೇರಿ ತಾಲೂಕಿನ ಕೂತು ಗೋಡು ಗ್ರಾಮದ ಬಳಿ ಘಟನೆ ನಡೆದಿದೆ. ಗುಡ್ಡ ಕುಸಿತದಿಂದಾಗಿ ಹಲವು ಗಂಟೆಗಳ ಕಾಲ ಸಂಚಾರ ಬಂದ್ ಆಗಿತ್ತು. ಅಧಿಕಾರಿಗಳು ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯದಲ್ಲಿ ತೊಡಗಿದ್ದರು. ಕಳೆದ ಏಳೆಂಟು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಪದೆಪದೇ ಗುಡ್ಡದ ಮಣ್ಣು ಕುಸಿಯುತ್ತಿದೆ. ಹೀಗಾಗಿ ತಾಲೂಕು ಆಡಳಿತವು ಗುಡ್ಡಗಾಡು ಗ್ರಾಮಗಳ ಜನರಿಗೆ ಎಚ್ಚರಿಕೆ ನೀಡಿದೆ.

ರಸ್ತೆಗೆ ಅಡ್ಡಲಾಗಿ ಬಿದ್ದ ಮರ

ಅಂಕೋಲಾ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಗೆ ಮರವೊಂದು ಅಡ್ಡಲಾಗಿ ಬಿದ್ದು, ವಾಹನಗಳ ಸಂಚಾರಕ್ಕೆ ಅಡ್ಡಿಯನ್ನುಂಟು ಮಾಡಿತ್ತು. ಉತ್ತರಕನ್ನಡದ ಯಲ್ಲಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63ರ ಅರಬೈಲ್ ಘಟ್ಟದಲ್ಲಿ ಮರ ಬಿದ್ದು ಸಂಚಾರ ಅಸ್ತವ್ಯಸ್ತವಾಗಿತ್ತು. ಇತ್ತ ಹೆದ್ದಾರಿ ಸಿಬ್ಬಂದಿಯಿಂದ ಮರ ತೆರವು ಕಾರ್ಯಾಚರಣೆವರೆಗೆ ವಾಹನಗಳು ಹೆದ್ದಾರಿಯ ಮತ್ತೊಂದು ಬದಿಯಿಂದ ಸಂಚರಿಸುತ್ತಿದ್ದವು.

ಮುಂದುವರಿದ ಪ್ರವಾಸಿಗರ ಹುಚ್ಚಾಟ

ಬೆಳಗಾವಿಯ ಗೋಕಾಕ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ ಮುಂದುವರಿದಿದೆ. ನೀರು ರಭಸವಾಗಿ ಧುಮ್ಮಿಕ್ಕುವ ಸ್ಥಳಗಳಲ್ಲಿ ಪ್ರವಾಸಿಗರು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಂದಾಗುತ್ತಿದ್ದಾರೆ. ಜತೆಗೆ ಕೆಲವರು ಬಂಡೆಗಲ್ಲುಗಳ‌ ಮೇಲೆ ಕುಳಿತು ಊಟ ಮಾಡುತ್ತಿರುವುದು ಕಂಡು ಬಂದಿದೆ. ಜಲಪಾತಕ್ಕೆ ಭದ್ರತೆ ‌ಒದಗಿಸದೆ ಪೊಲೀಸರು ನಿರ್ಲಕ್ಷ್ಯವಹಿಸುತ್ತಿದ್ದಾರೆ. ಚೂರು ಆಯ ತಪ್ಪಿದರೂ ಸಹ ಅಪಾಯ ಗ್ಯಾರಂಟಿ ಎಂದು ಸ್ಥಳೀಯರು ಕಿಡಿಕಾರಿದ್ದಾರೆ.

ಮಳೆಯಲ್ಲೇ ಟ್ರಾಫಿಕ್‌ಗೆ ಸಿಲುಕಿದ ಪ್ರವಾಸಿಗರು

ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ದೇವರ ಮನೆ ಪ್ರವಾಸಿತಾಣಕ್ಕೆ ಪ್ರವಾಸಿಗರ ದಂಡು ಹರಿದುಬರುತ್ತಿದ್ದು, ಮಳೆಯಲ್ಲೇ ಟ್ರಾಫಿಕ್‌ನಲ್ಲಿ ಸಿಲುಕಿದರು. ಸುಮಾರು ಎರಡು ಗಂಟೆ ಕಾಲ ನಿಂತಲ್ಲೇ ನಿಲ್ಲುಂತಾಯಿತು. ವೀಕೆಂಡ್ ಹಿನ್ನೆಲೆಯಲ್ಲಿ ಸಾವಿರಾರು ಟೂರಿಸ್ಟ್‌ಗಳು ಆಗಮಿಸಿದ್ದರು.

ಇದನ್ನೂ ಓದಿ: Rain News: ಕರಾವಳಿಯಲ್ಲಿ ಮುಂದುವರಿದ ವರುಣನ ಅಬ್ಬರ; ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ

ಮಳೆಗೆ ಜಲಾಶಯಗಳು ಭರ್ತಿ!

ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಗೆ ರಾಜ್ಯದ ಹಲವೆಡೆ ಜಲಾಶಯಗಳು ಭರ್ತಿಯಾಗುತ್ತಿವೆ. ಮೈಸೂರಿನ ಎಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿ ಗ್ರಾಮದ ಕಬಿನಿ ಜಲಾಶಯ ಭರ್ತಿಗೆ ಎರಡು ಅಡಿ ಬಾಕಿ‌ ಇದೆ. ಕೇರಳದ ವೈನಾಡು ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಬಿನಿ ಜಲಾಶಯದ ಒಳಹರಿವು ಗಣನೀಯವಾಗಿ ಏರಿಕೆ ಆಗುತ್ತಿದೆ. ರಾಜ್ಯದಲ್ಲೇ ಮೊದಲು ಭರ್ತಿಯಾಗುವ ಅಣೆಕಟ್ಟಾಗಿದೆ.

ಇತ್ತ ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಲ್ಯಾಣ- ಕರ್ನಾಟಕದ ಜೀವನಾಡಿ ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳಗೊಂಡಿದೆ. ತುಂಗಭದ್ರಾ ಜಲಾಶಯದ ಒಳ ಹರಿವಿನಲ್ಲಿ ಭಾರೀ ಪ್ರಮಾಣ ಹೆಚ್ಚಳವಾಗುತ್ತಿದ್ದು, 24 ಗಂಟೆಗಳಲ್ಲಿ ಬರೋಬ್ಬರಿ 5 ಟಿಎಂಸಿ ನೀರು ಜಲಾಶಯಕ್ಕೆ ಹರಿದು ಬಂದಿದೆ. ನಿನ್ನೆ ಶನಿವಾರ 13.90 ಟಿಎಂಸಿ ಇದ್ದ ನೀರಿನ ಸಂಗ್ರಹ ಇಂದು ಭಾನುವಾರ 18. 24 ಗೆ ಏರಿಕೆ ಆಗಿದೆ.

ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಒಳ ಹರಿವು ಇರುವುದರಿಂದ ರೈತರಲ್ಲಿ ಸಂತಸ ಹೆಚ್ಚಿಸಿದೆ. ತುಂಗಭದ್ರಾ ಜಲಾಶಯ ಕರ್ನಾಟಕ, ಆಂಧ್ರ ತೆಲಂಗಾಣ ರಾಜ್ಯಗಳ ರೈತರ ಜೀವನಾಡಿ ಆಗಿದೆ. ಇದೇ ರೀತಿ ಒಳ ಹರಿವು ಹೆಚ್ಚಾದರೆ 10 ರಿಂದ 15 ದಿನದಲ್ಲಿ ಜಲಾಶಯ ಭರ್ತಿ ಆಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಶಿವಮೊಗ್ಗ

Murder case : ಸ್ನೇಹಿತನಿಂದಲೇ ಕೊಲೆಯಾದಳು ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ

Missing Case : ಕಾಣೆಯಾಗಿದ್ದ ಯುವತಿಯೊಬ್ಬಳ ಶವ (Dead body Found) ಪತ್ತೆಯಾಗಿದ್ದು, ಹಣಕಾಸಿನ ವಿಚಾರಕ್ಕೆ (Money Dispute) ಸ್ನೇಹಿತರಿಬ್ಬರ ನಡುವೆ ಶುರುವಾದ ಜಗಳವು ಬಳಿಕ ಕೊಲೆಯಲ್ಲಿ (Murder case) ಅಂತ್ಯವಾಗಿದೆ.

VISTARANEWS.COM


on

By

murder case
Koo

ಶಿವಮೊಗ್ಗ : ಕಾಣೆಯಾಗಿದ್ದ (Missing Case) ಯುವತಿಯೊಬ್ಬಳು ಶವವಾಗಿ (Dead Body Found) ಪತ್ತೆಯಾಗಿದ್ದಾಳೆ. ಶಿವಮೊಗ್ಗದ (Shivamogga News) ತೀರ್ಥಹಳ್ಳಿ ತಾಲೂಕಿನ ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ (Murder case) ಘಟನೆ ನಡೆದಿದೆ. ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿಯಾಗಿದ್ದ ಪೂಜಾ.ಎ.ಕೆ (24) ಕೊಲೆಯಾದ ಮೃತ ದುರ್ದೈವಿ.

ಕಳೆದ ಜೂ.30ರಂದು ಮನೆಯಿಂದ ಕೆಲಸಕ್ಕೆ ಹೋಗಿದ್ದ ಪೂಜಾ ಏಕಾಏಕಿ ಕಾಣೆಯಾಗಿದ್ದಳು. ಮನೆಗೆ ವಾಪಸ್ ಬರದ ಹಿನ್ನೆಲೆಯಲ್ಲಿ ಪೂಜಾ ಪೋಷಕರು ಆತಂಕಗೊಂಡು ಎಲ್ಲೆಡೆ ಹುಡುಕಾಟ ನಡೆಸಿದ್ದರು. ಬಳಿಕ ಆಗುಂಬೆ ಪೊಲೀಸ್ ಠಾಣೆಯಲ್ಲಿ ತಂದೆ ಕುಶಾಲ್ ಮಿಸ್ಸಿಂಗ್‌ ಕಂಪ್ಲೇಟ್‌ ಕೊಟ್ಟಿದ್ದರು.

ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆಗಿಳಿದಾಗ ಪೂಜಾಳ ಶವವು ಪತ್ತೆಯಾಗಿತ್ತು. ಬಳಿಕ ಆಕೆಯ ಫೋನ್‌ ಕಾಲ್‌ ಲಿಸ್ಟ್‌ ತೆಗೆದು ಮಿಸ್ಸಿಂಗ್‌ ಆದ ಕೊನೆ ದಿನ ಯಾರೆಲ್ಲ ಕರೆ ಮಾಡಿದ್ದರು ಅವರನ್ನೆಲ್ಲ ಪೊಲೀಸರು ವಿಚಾರಣೆ ನಡೆಸಿದ್ದರು.

ಈ ವೇಳೆ ಹಲವು ವರ್ಷಗಳಿಂದ ಸ್ನೇಹಿತನಾಗಿದ್ದ ಮಣಿಕಂಠ ಎಂಬಾತನಿಂದಲೇ ಪೂಜಾ ಕೂಲೆಯಾಗಿದ್ದಳು. ಪೊಲೀಸರು ತಮ್ಮದೇ ಸ್ಟೈಲ್‌ನಲ್ಲಿ ವಿಚಾರನೆ ನಡೆಸಿದಾಗ ಪೂಜಾಳನ್ನು ಕೊಂದಿದ್ದಾಗಿ ಮಣಿಕಂಠ ಒಪ್ಪಿಕೊಂಡಿದ್ದಾನೆ. ಹಣಕಾಸಿ‌ ವಿಚಾರಕ್ಕೆ ಜಗಳ ನಡೆದು ಕೊಲೆಯಲ್ಲಿ ಅಂತ್ಯವಾಗಿದೆ.

ಸದ್ಯ ಆಗುಂಬೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿಯಿಂದ ಮತ್ತಷ್ಟು ಮಾಹಿತಿಯನ್ನು ಪೊಲೀಸರು ಕಲೆಹಾಕುತ್ತಿದ್ದಾರೆ.

ಇದನ್ನೂ ಓದಿ: Crime News: ಗಾಂಜಾ ಮತ್ತಿನಲ್ಲಿ ಕಾರು ಓಡಿಸಿ ಬೈಕ್‌ಗಳಿಗೆ ಗುದ್ದಿದ ಚಾಲಕ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಳ್ಳರು

ರಾಜಕಾಲುವೆಗೆ ಬಿದ್ದ ಬೈಕ್‌ ಸವಾರನ ಮೃತದೇಹ ಪತ್ತೆ

ಬೆಂಗಳೂರು: ರಾಜಕಾಲುವೆ (Rajakaluve)ಗೆ ಬಿದ್ದ ಬೈಕ್‌ ಸವಾರನ ಮೃತದೇಹ ಮೂರು ದಿನಗಳ ಬಳಿಕ ಪತ್ತೆಯಾಗಿದೆ. ಶುಕ್ರವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಹೇಮಂತ ಕುಮಾರ್ (27) ಜ್ಞಾನ ಭಾರತಿ ಮೆಟ್ರೋ ಸ್ಟೆಷನ್ ಬಳಿ ರಾಜಕಾಲುವೆಗೆ ಬಿದ್ದಿದ್ದರು. ಡಿವೈಡರ್‌ಗೆ ಗುದ್ದಿದ ಪರಿಣಾಮ ಹೇಮಂತ ಕುಮಾರ್ ಚಿಮ್ಮಿ ವೃಷಭಾವತಿ ನದಿ‌ ರಾಜಕಾಲುವೆ ಒಳಗೆ ಬಿದ್ದಿದ್ದರು. ವೇಗವಾಗಿ ಬೈಕ್‌ ಚಲಾಯಿಸಿದ್ದರಿಂದ, ಬೈಕ್‌ ಡಿವೈಡರ್‌ಗೆ ಗುದ್ದಿದ ಪರಿಣಾಮ ಅವರು ಚಿಮ್ಮಿ ರಾಜಕಾಲುವೆ ಒಳಗೆ ಬಿದ್ದಿದ್ದಾರೆ ಎಂದು ಊಹಿಸಲಾಗಿದೆ. ಸಣ್ಣದಾಗಿ ಮಳೆ ಬರುತ್ತಿದ್ದುದರಿಂದ ಡಿವೈಡರ್‌ ಗುರುತಿಸಲು ಸಾಧ್ಯವಾಗದೆ ಈ ಅವಘಡ ಸಂಭವಿಸಿದೆ. ಆದರೆ ಮೂರು ದಿನಗಳಿಂದ ಅವರು ಪತ್ತೆಯಾಗಿರಲಿಲ್ಲ. ಇದೀಗ ಮೃತದೇಹ ಕಂಡು ಬಂದಿದೆ (Road Accident).

ಸತತ ಶೋಧ ಕಾರ್ಯ

ಶುಕ್ರವಾರದಿಂದ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಹೇಮಂತ ಕುಮಾರ್‌ಗಾಗಿ ಸತತವಾಗಿ ಹುಡುಕಾಟ ನಡೆಸುತ್ತಿದ್ದರು. ಇದೀಗ ಬಿದ್ದ ಸ್ಥಳದಲ್ಲಿಯೇ ಯುವಕನ ಮೃತದೇಹ ಪತ್ತೆಯಾಗಿದೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಮೃತದೇಹವನ್ನು ಪತ್ತೆ ಹಚ್ಚಿದ್ದಾರೆ. ಸದ್ಯ ಮೃತದೇಹವನ್ನು ಮೇಲಕ್ಕೆ ಎತ್ತಿ ಅಂಬ್ಯುಲೆನ್ಸ್ ಮೂಲಕ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

ಯಾದಗಿರಿ: ಬಾವಿಗೆ ಎಸೆದು ಹಸುಗೂಸನ್ನು ಕೊಲೆ (Murder case) ಮಾಡಲಾಗಿದೆ. ಯಾದಗಿರಿ ನಗರದ ಅಂಬೇಡ್ಕರ್ ಬಡಾವಣೆಯಲ್ಲಿ ಅಮಾನವೀಯ ಘಟನೆ ನಡೆದಿದೆ. ಮೀನಾಕ್ಷಿ (2 ತಿಂಗಳು) ಮೃತ ದುರ್ದೈವಿ. ನಾಗೇಶ್ ಹಾಗೂ ಚಿಟ್ಟೆಮ್ಮ ದಂಪತಿಯ ಮಗು ಮೀನಾಕ್ಷಿಯನ್ನು ಕೊಲೆ ಯಾರು ಮಾಡಿದ್ದಾರೆ? ಯಾಕೆ‌‌ ಮಾಡಿದ್ದಾರೆ ಎಂಬುದು ಗೊತ್ತಿಲ್ಲ. ಬಡಾವಣೆಯ ಹೊರ ಭಾಗದ ನಿರ್ಜನ ಪ್ರದೇಶದಲ್ಲಿರುವ ಬಾವಿಗೆ ಬಿಸಾಡಿ ಹೋಗಿದ್ದಾರೆ.

ಹೆಣ್ಣು ಮಗು ಎಂಬ ಕಾರಣಕ್ಕೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳದಲ್ಲಿ ಮಗುವಿನ ಪೋಷಕರು ಕಣ್ಣೀರು ಹಾಕುತ್ತಿದ್ದು, ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಯಾದಗಿರಿ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾವಿಯಲ್ಲಿದ್ದ ಮೃತದೇಹವನ್ನು ಮೇಲೆ ಎತ್ತಿದ್ದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಯಾದಗಿರಿ ನಗರ ಠಾಣೆಯಲ್ಲಿ ಈ ಸಂಬಂಧ ಕೇಸ್ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಶಿವಮೊಗ್ಗ

Bhadra Dam: ಕೊನೆಗೂ ಭದ್ರಾ ಡ್ಯಾಂನ ರಿವರ್ ಗೇಟ್‌ ದುರಸ್ತಿ; ಸೋರಿಕೆಯಾಗುತ್ತಿದ್ದ ನೀರಿಗೆ ತಡೆ

Bhadra Dam: ಶಿವಮೊಗ್ಗದ ಭದ್ರಾ ಡ್ಯಾಂನ ರಿವರ್ ಗೇಟ್‌ ಅನ್ನು ಸರಿಪಡಿಸಲಾಗಿದ್ದು, ಸೋರಿಕೆಯಾಗುತ್ತಿದ್ದ ನೀರನ್ನು ಸಂಪೂರ್ಣವಾಗಿ ತಡೆಯಲಾಗಿದೆ. ಸೋರಿಕೆಯಾಗುತ್ತಿದ್ದ ನೀರನ್ನು ಅಧಿಕಾರಿಗಳು, ಸಿಬ್ಬಂದಿ ಸತತ ಪ್ರಯತ್ನದ ಮೂಲಕ ಸಂಪೂರ್ಣ ಸ್ಥಗಿತಗೊಳಿಸಿದ್ದು, ಕಳೆದ 6 ದಿನಗಳಿಂದ ಕಾಣಿಸಿಕೊಂಡಿದ್ದ ಸಮಸ್ಯೆಯನ್ನು ಬಗೆಹರಿಸಿದ್ದಾರೆ. ಕಳೆದ ಆರು ದಿನಗಳಿಂದ ಭದ್ರಾ ಜಲಾಶಯದಿಂದ ಸಾವಿರಾರು ಕ್ಯೂಸೆಕ್ ನೀರು ಸೋರಿಕೆಯಾಗಿ ನದಿಗೆ ಹರಿದು ಹೋಗುತ್ತಿರುವುದರಿಂದ ಕೃಷಿಕರು ಆತಂಕ್ಕೆ ಒಳಗಾಗಿದ್ದಾರು.

VISTARANEWS.COM


on

Bhadra Dam
Koo

ಶಿವಮೊಗ್ಗ: ಭದ್ರಾ ಡ್ಯಾಂ (Bhadra Dam)ನ ರಿವರ್ ಗೇಟ್‌ ಅನ್ನು ಸರಿಪಡಿಸಲಾಗಿದ್ದು, ಸೋರಿಕೆಯಾಗುತ್ತಿದ್ದ ನೀರನ್ನು ಸಂಪೂರ್ಣವಾಗಿ ತಡೆಯಲಾಗಿದೆ. ಸೋರಿಕೆಯಾಗುತ್ತಿದ್ದ ನೀರನ್ನು ಅಧಿಕಾರಿಗಳು, ಸಿಬ್ಬಂದಿ ಸತತ ಪ್ರಯತ್ನದ ಮೂಲಕ ಸಂಪೂರ್ಣ ಸ್ಥಗಿತಗೊಳಿಸಿದ್ದು, ಕಳೆದ 6 ದಿನಗಳಿಂದ ಕಾಣಿಸಿಕೊಂಡಿದ್ದ ಸಮಸ್ಯೆಯನ್ನು ಬಗೆಹರಿಸಿದ್ದಾರೆ. ಇದರಿಂದ ಕೃಷಿಕರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಕಳೆದ ಆರು ದಿನಗಳಿಂದ ಭದ್ರಾ ಜಲಾಶಯದಿಂದ ಸಾವಿರಾರು ಕ್ಯೂಸೆಕ್ ನೀರು ಸೋರಿಕೆಯಾಗಿ ನದಿಗೆ ಹರಿದು ಹೋಗುತ್ತಿರುವುದರಿಂದ ಕೃಷಿಕರು ಆತಂಕ್ಕೆ ಒಳಗಾಗಿದ್ದಾರು. 6 ದಿನಗಳಲ್ಲಿ ಅಂದಾಜು ಬರೋಬ್ಬರಿ 2,500 ಕ್ಯೂಸೆಕ್ಸ್‌ ನೀರು ಪೋಲಾಗಿತ್ತು. ಇದೀಗ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗಿದೆ.

ಮಳೆಗಾಲದಲ್ಲಿ ರಿವರ್ ಗೇಟ್ ರಿಪೇರಿ ಮಾಡುವಾಗ ಆಗಿದ್ದ ಎಡವಟ್ಟಿನಿಂದ ಈ ಸಮಸ್ಯೆ ಕಾಣಿಸಿಕೊಂಡಿತ್ತು. ʼʼಅಧಿಕಾರಿಗಳ ಎಡವಟ್ಟಿನಿಂದಾಗಿ ಸಾವಿರಾರು ಕ್ಯೂಸೆಕ್ಸ್‌ ವ್ಯರ್ಥವಾಗಿ ಹರಿದು ಹೋಗುತ್ತಿತ್ತು. ಇದರಿಂದ ಅತಂಕಗೊಂಡಿದ್ದ ಅಚ್ಚುಕಟ್ಟು ಪ್ರದೇಶದ ರೈತರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದರು. ಸದ್ಯ ನೀರು ಸೋರಿಕೆಯಾಗುವುದು ಸಂಪೂರ್ಣ ನಿಂತಿದೆ. ಇದರಿಂದ ಕೃಷಿಕರು ಸಮಾಧಾನಗೊಂಡಿದ್ದಾರೆʼʼ ಎಂದು ಸ್ಥಳೀಯರು ತಿಳಿಸಿದ್ದಾರೆ.

ಕಳೆದ 48 ಗಂಟೆ ಹಗಲು- ರಾತ್ರಿ ನಿರಂತರ ಕಾರ್ಯಾಚರಣೆ ನಂತರ ಅಧಿಕಾರಿಗಳು ಮತ್ತು ಸಿಬ್ಬಂದಿ ಪೋಲಾಗುತ್ತಿದ್ದ ನೀರು ಬಂದ್ ಮಾಡಿದ್ದಾರೆ. ಸದ್ಯ ರೈತರ ಜತೆಗೆ ಅಮಾನತ್ತುಗೊಳ್ಳುವ ಭೀತಿಯಲ್ಲಿದ್ದ ಡ್ಯಾಂ ಅಧಿಕಾರಿಗಳೂ ನಿಟ್ಟುಸಿರು ಬಿಟ್ಟಿದ್ದಾರೆ.

ಇದನ್ನೂ ಓದಿ: Rain News: ಕರಾವಳಿಯಲ್ಲಿ ಮುಂದುವರಿದ ವರುಣನ ಅಬ್ಬರ; ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ

ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ

ವಿಜಯನಗರ: ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಕಲ್ಯಾಣ- ಕರ್ನಾಟಕದ ಜೀವನಾಡಿ ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳಗೊಂಡಿದೆ. ತುಂಗಭದ್ರಾ ಜಲಾಶಯದ ಒಳ ಹರಿವಿನಲ್ಲಿ ಭಾರೀ ಪ್ರಮಾಣ ಹೆಚ್ಚಳವಾಗಿದ್ದು, 24 ಗಂಟೆಗಳಲ್ಲಿ ಬರೋಬ್ಬರಿ 5 ಟಿಎಂಸಿ ನೀರು ಹರಿದು ಬಂದಿದೆ.

ನಿನ್ನೆ 13.90 ಟಿಎಂಸಿ ಇದ್ದ ನೀರಿನ ಸಂಗ್ರಹ ಇಂದು 18.24 ಟಿಎಂಸಿಗೆ ಏರಿಕೆಯಾಗಿದೆ. ಸದ್ಯ ಜಲಾಶಯಕ್ಕೆ ಸಾವಿರಾರು ಕ್ಯೂಸೆಕ್ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಒಳ ಹರಿವಿನ ಪ್ರಮಾಣದಲ್ಲಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಒಳ ಹರಿವು ಇರುವುದರಿಂದ ರೈತರಲ್ಲಿ ಮೊಗದಲ್ಲಿ ಸಂತಸ ಮೂಡಿದೆ. ಇದೇ ರೀತಿ ಒಳ ಹರಿವು ಹೆಚ್ಚಾದರೆ ಕರ್ನಾಟಕ, ಆಂಧ್ರ ತೆಲಂಗಾಣ ರೈತರ ಜೀವನಾಡಿ ಆಗಿರುವ ತುಂಗಭದ್ರಾ ಜಲಾಶಯ 10ರಿಂದ 15 ದಿನದಲ್ಲಿ ಜಲಾಶಯ ಭರ್ತಿ ಆಗಲಿದೆ.

Continue Reading
Advertisement
School Principal
ದೇಶ4 hours ago

School Principal: ಶಾಲೆಯಲ್ಲೇ ಮಹಿಳಾ ಟೀಚರ್‌ ಜತೆ ಪ್ರಿನ್ಸಿಪಾಲ್‌ ರೊಮ್ಯಾನ್ಸ್;‌ ವೈರಲ್‌ ಫೋಟೊ ಇಲ್ಲಿದೆ

WCPL 2024
ಪ್ರಮುಖ ಸುದ್ದಿ5 hours ago

WCPL 2024 : ಸಿಪಿಎಲ್​​ನ ಟ್ರಿನ್​ಬ್ಯಾಗೊ ರೈಡರ್ಸ್​ ತಂಡಕ್ಕೆ ಜೆಮಿಮಾ, ಶಿಖಾ ಸೇರ್ಪಡೆ

KRS Inflow
ದೇಶ5 hours ago

KRS Inflow: ಕೆಆರ್‌ಎಸ್‌ಗೆ ದಾಖಲೆಯ 11 ಸಾವಿರ ಕ್ಯುಸೆಕ್‌ ನೀರು ಒಳಹರಿವು; ಸೋಮವಾರದಿಂದ ನಾಲೆಗಳಿಗೆ ನೀರು

Abhishek Sharma
ಕ್ರೀಡೆ5 hours ago

Abhishek Sharma : 47 ಎಸೆತಕ್ಕೆ ಶತಕ ಬಾರಿಸಿ ಹಲವಾರು ದಾಖಲೆ ಮುರಿದಿ ಅಭಿಷೇಕ್​ ಶರ್ಮಾ

Dengue Scare
ಕರ್ನಾಟಕ5 hours ago

Dengue Scare: ಸರ್ಕಾರದಿಂದಲೇ ಉಚಿತವಾಗಿ ಡೆಂಗ್ಯೂ ಪರೀಕ್ಷೆ ಮಾಡಿಸಲಿ; ಆರ್.‌ ಅಶೋಕ್‌ ಆಗ್ರಹ

World Biryani Day:
ಪ್ರಮುಖ ಸುದ್ದಿ6 hours ago

World Biryani Day : ಕೋಲ್ಕತಾ, ಹೈದರಾಬಾದ್ ಬಿರಿಯಾನಿ ತಿಂದಿರಬಹುದು; ಇವುಗಳ ಹಿನ್ನೆಲೆ ಗೊತ್ತಾ?

Accident
Latest6 hours ago

Accident: ಟೆರೇಸ್ ಮೇಲೆ ನಿಂತು ಜಗಳ ನೋಡುತ್ತಿದ್ದ ಮಹಿಳೆಗೇ ಬಿತ್ತು ಗುಂಡೇಟು!

Puri Jagannath Rath Yatra
ಪ್ರಮುಖ ಸುದ್ದಿ7 hours ago

Puri Jagannath Rath Yatra: ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ, ಒಬ್ಬನ ಸಾವು, 400 ಭಕ್ತರಿಗೆ ಗಾಯ!

NIA Arrest
ದೇಶ7 hours ago

NIA Arrest: ಹಿಜ್ಬುಲ್‌, LeT ಉಗ್ರ ಸಂಘಟನೆಗಳ ಜೊತೆ ನಂಟು; ಪ್ರಮುಖ ಆರೋಪಿ ಅರೆಸ್ಟ್‌

Elephant attack car in Kodagu‌ four people escape
ಕೊಡಗು7 hours ago

Elephant attack :ಕಾರಿನ ಮೇಲೆ ಕಾಡಾನೆ ದಾಳಿ; ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ8 hours ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ11 hours ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ12 hours ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ22 hours ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ1 day ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ2 days ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ2 days ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು2 days ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ2 days ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ2 days ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

ಟ್ರೆಂಡಿಂಗ್‌