ICC World Cup 2023: ಸಂಪೂರ್ಣ ಫಿಟ್​ ಆಗಿಲ್ಲ ಎಂದು ತಂಡಕ್ಕೆ ಆತಂಕ ಸೃಷ್ಟಿಸಿದ ವಿಲಿಯಮ್ಸನ್ - Vistara News

ಕ್ರಿಕೆಟ್

ICC World Cup 2023: ಸಂಪೂರ್ಣ ಫಿಟ್​ ಆಗಿಲ್ಲ ಎಂದು ತಂಡಕ್ಕೆ ಆತಂಕ ಸೃಷ್ಟಿಸಿದ ವಿಲಿಯಮ್ಸನ್

ವಿಶ್ವಕಪ್​ ಟೂರ್ನಿಯಲ್ಲಿ ಪಾಲ್ಗೊಳ್ಳಲು ಬುಧವಾರ ಕಿವೀಸ್​ ತಂಡ ಭಾರತ ಹೊರಡುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ವಿಲಿಯಮ್ಸನ್ ಮೊಣಕಾಲಿನ ಗಾಯದಿಂದ ತಾನು ಇನ್ನೂ ಸಂಪೂರ್ಣ ಗುಣಮುಖವಾಗಿಲ್ಲ ಎಂದು ಹೇಳಿದ್ದಾರೆ.

VISTARANEWS.COM


on

New Zealand captain Kane Williamson
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವೆಲ್ಲಿಂಗ್ಟನ್​: ಏಕದಿನ ವಿಶ್ವಕಪ್‌ಗೆ(ICC World Cup 2023) ನ್ಯೂಜಿಲ್ಯಾಂಡ್​ ತಂಡ ಪ್ರಕಟಗೊಂಡಿದೆ. ಆದರೆ ತಂಡ ನಾಯಕ ಕೇನ್​ ವಿಲಿಯಮ್ಸನ್​(Kane Williamson) ನಾನು ಸಂಪೂರ್ಣ ಫಿಟ್ ಆಗಿಲ್ಲ ಎಂದು ಹೇಳಿದ್ದಾರೆ. ಅವರ ಈ ಹೇಳಿಕೆ ಕಿವೀಸ್​ ತಂಡಕ್ಕೆ ಚಿಂತೆಗೀಡು ಮಾಡಿದೆ.

ವಿಶ್ವಕಪ್​ ಟೂರ್ನಿಯಲ್ಲಿ ಪಾಲ್ಗೊಳ್ಳಲು ಬುಧವಾರ ಕಿವೀಸ್​ ತಂಡ(New Zealand Team) ಭಾರತ ಹೊರಡುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ವಿಲಿಯಮ್ಸನ್ ಮೊಣಕಾಲಿನ ಗಾಯದಿಂದ ತಾನು ಇನ್ನೂ ಸಂಪೂರ್ಣ ಗುಣಮುಖವಾಗಿಲ್ಲ. ಅಲ್ಲದೆ ಕ್ರಿಕೆಟ್​ ಆಡದೆ ಸುಮಾರು 5 ತಿಂಗಳು ಕಳೆದಿದೆ. ಅಭ್ಯಾಸ ಪಂದ್ಯಗಳಲ್ಲಿ ಆಡಿ ನನ್ನ ಫಾರ್ಮ್​ ಕಂಡುಕೊಳ್ಳುವ ವಿಶ್ವಾಸವಿದೆ ಎಂದರು. ವಿಲಿಯಮ್ಸನ್​ ಮಾತ್ರವಲ್ಲದೆ ಗಾಯದ ಸಮಸ್ಯೆ ಎದುರಿಸುತ್ತಿರುವ ಬೌಲರ್​ ಟಿಮ್​ ಸೌಥಿ ಕೂಟ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಕಳೆದ ಬಾರಿ ಫೈನಲ್ ಪ್ರವೇಶಿಸಿದ್ದ ಕಿವೀಸ್​ ಈ ಬಾರಿ ಪ್ರಮುಖ ಆಟಗಾರರ ಗಾಯದ ಆತಂಕದಲ್ಲೇ ಕಣಕ್ಕಿಳಿಯಲಿದೆ.

ಐಪಿಎಲ್​ ವೇಳೆ ಗಂಭೀರ ಗಾಯ

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL)ನಲ್ಲಿ ಫೀಲ್ಡಿಂಗ್​ ನಡೆಸುವ ವೇಳೆ ಕೇನ್ ವಿಲಿಯಮ್ಸನ್ ಮೊಣಕಾಲಿನ ಗಾಯಕ್ಕೆ ಒಳಗಾಗಿದ್ದರು. ಉದ್ಘಾಟನ ಐಪಿಎಲ್​ ಪಂದ್ಯದಲ್ಲಿ ಗುಜರಾತ್​ ಟೈಟಾನ್ಸ್​(gujarat titans)​ ಪರ ಫೀಲ್ಡಿಂಗ್ ಮಾಡುವ ವೇಳೆ ಕೇನ್​ ವಿಲಿಯಮ್ಸನ್ ಗಾಯಕ್ಕೆ ಒಳಗಾಗಿದ್ದರು. ಋತುರಾಜ್​ ಗಾಯಕ್ವಾಡ್​ ಬಾರಿಸಿದ ಚೆಂಡನನ್ನು ಬೌಂಡರಿ ಗೆರೆಯ ಬಳಿ ತಡೆಯಲು ವಿಲಿಯಮ್ಸನ್​ ಮೇಲಕ್ಕೆ ಜಿಗಿದಿದ್ದರು. ಚೆಂಡನ್ನು ತಡೆದು ಎದುರಾಳಿ ತಂಡ ಆರು ರನ್​ಗಳು ಸಂಗ್ರಹಿಸದಂತೆ ನೋಡಿಕೊಂಡ ಹೊರತಾಗಿಯೂ ಅವರು ಕಳಕ್ಕೆ ಬೀಳುವಾಗ ಮಂಡಿಯೂರಿದ್ದರು. ಮಂಡಿ ಜೋರಾಗಿ ನೆಲಕ್ಕೆ ಅಪ್ಪಳಿಸಿದ ಅವರು ಗಂಭೀರ ಗಾಯಗೊಂಡಿದ್ದರು. ಬಳಿಕ ಅವರು ತವರಿಗೆ ತೆರಳಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

ಅಭ್ಯಾಸ ಪಂದ್ಯದಲ್ಲಿ ಪಾಕ್​ ಎದುರಾಳಿ

ನ್ಯೂಜಿಲ್ಯಾಂಡ್​ ತಂಡ ಸೆಪ್ಟೆಂಬರ್​ 29ರಂದು ಪಾಕಿಸ್ತಾನ ವಿರುದ್ಧ ಅಭ್ಯಾಸ ಪಂದ್ಯ ಆಡುವ ಮೂಲಕ ವಿಶ್ವಕಪ್​ಗೆ ತಯಾರಿ ನಡೆಸಲಿದೆ. ಟೂರ್ನಿ ಆರಂಭವಾಗುವ ಅಕ್ಟೋಬರ್​ 5ರಂದು ಹಾಲಿ ಚಾಂಪಿಯನ್​ ಇಂಗ್ಲೆಂಡ್​ ಎದುರು ಆಡುವ ಮೂಲಕ ವಿಶ್ವಕಪ್​ ಅಭಿಯಾನ ಆರಂಭಿಸಲಿದೆ. ಈ ಪಂದ್ಯ ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ. 2015 ಮತ್ತು 2019ರಲ್ಲಿ ವಿಶ್ವಕಪ್​ ಫೈನಲ್​ ಪ್ರವೇಶ ಪಡೆದ ಕಿವೀಸ್​ ಕಪ್​ ಗೆಲ್ಲುವಲ್ಲಿ ವಿಫಲವಾಗಿತ್ತು. ಈ ಬಾರಿ ಕಪ್​ ಗೆಲ್ಲುವ ವಿಶ್ವಾಸವಿದ್ದರೂ ಮೊದಲು ಗಾಯದ ಸಮಸ್ಯೆಯನ್ನು ಮೀರಿ ನಿಲ್ಲಬೇಕಿದೆ.

ಪ್ರಮುಖ ಬೌಲರ್​ಗಳಾದ ಕೈಲ್ ಜೇಮಿಸನ್ ಮತ್ತು ಆಡ್ಯಂ ಮಿಲ್ನೆ ಅವರು ಗಾಯದಿಂದ ಅಲಭ್ಯರಾಗಿದ್ದಾರೆ. ಇವರ ಅನುಪಸ್ಥಿತಿಯಲ್ಲಿ ಟಿಮ್ ಸೌಥಿ, ಟ್ರೆಂಟ್ ಬೌಲ್ಟ್, ಲ್ಯೂಕಿ ಫರ್ಗ್ಯಸನ್, ಮ್ಯಾಟ್ ಹೆನ್ರಿ ಬೌಲಿಂಗ್ ವಿಭಾಗವನ್ನು ನೋಡಿಕೊಳ್ಳಬೇಕಿದೆ. ಇದರಲ್ಲಿ ಟಿಮ್ ಸೌಥಿ ಚೇತರಿಕೆಯ ಹಾದಿಯಲ್ಲಿದ್ದಾರೆ. ಸ್ಪಿನ್ ವಿಭಾಗದಲ್ಲಿ ಇಶ್ ಸೋಧಿ, ಮಿಚೆಲ್ ಸ್ಯಾಂಟ್ನರ್ ಮತ್ತು ರಚಿನ್ ರವೀಂದ್ರ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ ICC World Cup 2023: ಭಾರತಕ್ಕೆ ಹೊರಟ ಪಾಕ್​ ತಂಡ; ಖಾಲಿ ಸ್ಟೇಡಿಯಂನಲ್ಲಿ ಪಂದ್ಯ

ನ್ಯೂಜಿಲ್ಯಾಂಡ್​ ವಿಶ್ವಕಪ್​ ತಂಡ

ಕೇನ್ ವಿಲಿಯಮ್ಸನ್ (ನಾಯಕ), ಟ್ರೆಂಟ್ ಬೌಲ್ಟ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೇ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಟಾಮ್ ಲ್ಯಾಥಮ್ (ವಿ.ಕೀ, ಉ.ನಾ), ಡ್ಯಾರಿಲ್ ಮಿಚೆಲ್, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ವಿಲ್ ಯಂಗ್.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Abhishek Sharma : ಅಭಿಷೇಕ್​ ಶತಕಕ್ಕೆ ಸಹೋದರಿಯ ಚಪ್ಪಾಳೆ, ವಿಡಿಯೊ ಶೇರ್ ಮಾಡಿದ ಕೋಮಲ್​ ಶರ್ಮಾ

Abhishek Sharma : ಅಭಿಷೇಕ್ ಶರ್ಮಾ ತಮ್ಮ ಚೊಚ್ಚಲ ಟಿ 20 ಐ ನಲ್ಲಿ ಡಕ್ ಔಟ್ ಆಗಿದ್ದರು. ತಮ್ಮ ಎರಡನೇ ಟಿ 20 ಪಂದ್ಯದಲ್ಲಿ ಅವರು ಗರಿಷ್ಠ ಲಾಭ ಪಡೆದರು. ಅವರು 47 ಎಸೆತಗಳಲ್ಲಿ 100 ರನ್ ಗಳಿಸಿದ್ದರು. ಜಿಂಬಾಬ್ವೆ ಬೌಲರ್ ಗಳನ್ನು ಮೈದಾನದ ಎಲ್ಲಾ ಭಾಗಗಳಿಗೆ ಅಟ್ಟಿದರು. ಅವರು ತಮ್ಮ ಇನ್ನಿಂಗ್ಸ್ ಉದ್ದಕ್ಕೂ 200 ಕ್ಕೂ ಹೆಚ್ಚು ಸ್ಟ್ರೈಕ್ ರೇಟ್ ನಲ್ಲಿ ಆಡಿದ್ದಾರೆ.

VISTARANEWS.COM


on

Abhishek Sharma
Koo

ಬೆಂಗಳೂರು: ಅಭಿಷೇಕ್ ಶರ್ಮಾ (Abhishek Sharma) ತಮ್ಮ ವೃತ್ತಿ ಜೀವನದ ಎರಡನೇ ಟಿ 20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ತಮ್ಮ ಚೊಚ್ಚಲ ಟಿ 20 ಶತಕ ಗಳಿಸಿದ್ದರು. ಇದರೊಂದಿಗೆ ಭಾರತಕ್ಕೆ ಜಿಂಬಾಬ್ವೆ ವಿರುದ್ಧ 100 ರನ್ ಗಳ ಗೆಲುವು ಸಿಕ್ಕಿದ್ದು, ಐದು ಪಂದ್ಯಗಳ ಸರಣಿಯಲ್ಲಿ ಸಮಬಲದ ಸಾಧನೆ ಮಾಡಿದೆ.

ಅಭಿಷೇಕ್ ಶರ್ಮಾ ತಮ್ಮ ಚೊಚ್ಚಲ ಟಿ 20 ಐ ನಲ್ಲಿ ಡಕ್ ಔಟ್ ಆಗಿದ್ದರು. ತಮ್ಮ ಎರಡನೇ ಟಿ 20 ಪಂದ್ಯದಲ್ಲಿ ಅವರು ಗರಿಷ್ಠ ಲಾಭ ಪಡೆದರು. ಅವರು 47 ಎಸೆತಗಳಲ್ಲಿ 100 ರನ್ ಗಳಿಸಿದ್ದರು. ಜಿಂಬಾಬ್ವೆ ಬೌಲರ್ ಗಳನ್ನು ಮೈದಾನದ ಎಲ್ಲಾ ಭಾಗಗಳಿಗೆ ಅಟ್ಟಿದರು. ಅವರು ತಮ್ಮ ಇನ್ನಿಂಗ್ಸ್ ಉದ್ದಕ್ಕೂ 200 ಕ್ಕೂ ಹೆಚ್ಚು ಸ್ಟ್ರೈಕ್ ರೇಟ್ ನಲ್ಲಿ ಆಡಿದ್ದಾರೆ. ಅವರು 34 ಎಸೆತಗಳಲ್ಲಿ ತಮ್ಮ ಅರ್ಧಶತಕ ಗಳಿಸಿದ್ದರು ಹಾಗೂ ಮುಂದಿನ 13 ಎಸೆತಗಳಲ್ಲಿ ತಮ್ಮ ಮುಂದಿನ 50 ರನ್ ಗಳಿಸಿದರು.

ಟಿ 20 ಪಂದ್ಯಗಳಲ್ಲಿ ಸಿಕ್ಸರ್​ನೊಂದಿಗೆ ಇನಿಂಗ್ಸ್ ಆರಂಭಿಸಿದ್ದರು ಮತ್ತು ಸತತ ಮೂರು ಸಿಕ್ಸರ್​ಗಳೊಂದಿಗೆ 100 ರನ್ ಗಳಿಸಿದರು. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಸಿಕ್ಸರ್​ ಮೂಲಕ ಶತಕ ಗಳಿಸಿದ ಆರನೇ ಭಾರತೀಯ ಬ್ಯಾಟರ್​​ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ತಮ್ಮ ಚೊಚ್ಚಲ ಟಿ 20 ಐ ಶತಕವನ್ನು ಗಳಿಸಲು ಕಡಿಮೆ ಇನ್ನಿಂಗ್ಸ್ (2) ತೆಗೆದುಕೊಂಡ ದಾಖಲೆಯೂ ಅವರ ಹೆಸರಿನಲ್ಲಿದೆ.

ಋತುರಾಜ್ ಗಾಯಕ್ವಾಡ್ ಅವರೊಂದಿಗೆ 37 ರನ್ ಸೇರಿಸಿದರು ಮತ್ತು 14 ನೇ ಓವರ್ ನ ಕೊನೆಯ ಎಸೆತದಲ್ಲಿ 100 ರನ್ ಗಳಿಸಿ ಔಟಾದರು. ಗಾಯಕ್ವಾಡ್ ಮತ್ತು ರಿಂಕು ಸಿಂಗ್ (22 ಎಸೆತಗಳಲ್ಲಿ 48* ರನ್) ಕೊನೆಯ ಐದು ಓವರ್​ಗಳಲ್ಲಿ 87 ರನ್​ ಸೇರಿಸಿ ಬೃಹತ್ ಮೊತ್ತವನ್ನು ಗಳಿಸಲು ಸಹಾಯ ಮಾಡಿದರು. ನಂತರ ಭಾರತೀಯ ಬೌಲರ್​ಗಳು ಜಿಂಬಾಬ್ವೆಯನ್ನು ಕೇವಲ 134 ರನ್​ಗಳಿಗೆ ಆಲೌಟ್ ಮಾಡಿದರು.

ಕುಟುಂಬದ ಸಂಭ್ರಮ

ಅಭಿಷೇಕ್​ ಶರ್ಮಾ ಸಿಕ್ಸರ್​ ಬಾರಿಸಿ ಶತಕ ದಾಖಲಿಸುತ್ತಿದ್ದಂತ ಅವರ ಕುಟುಂಬದ ಸದಸ್ಯರು ಸಂಭ್ರಸಿದ್ದಾರೆ. ಇದರ ವಿಡಿಯೊವನ್ನು ಸಹೋದರಿ ಕೋಮಲ್​ ಶರ್ಮಾ ಇಂಟರ್ನೆಟ್​ನಲ್ಲಿ ಪೋಸ್ಟ್​ ಮಾಡಿದ್ದಾರೆ. ಈ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ತಮ್ಮ ಮಗ ವಿಶೇಷ ಹೆಗ್ಗುರುತನ್ನು ತಲುಪಿದ ನಂತರ ಅವರೆಲ್ಲರೂ ನಗುವುದು ಕಂಡು ಬಂತು. ಐಪಿಎಲ್​​ನ ಅವರ ಅದ್ಭುತ ಪ್ರದರ್ಶನದ ಬಳಿಕ ಶರ್ಮಾ ಅವರನ್ನು ಸರಣಿಗಾಗಿ ಈ ಭಾರತೀಯ ತಂಡಕ್ಕೆ ಸೇರಿಸಲಾಯಿತು. ಅವರು ಎಸ್​​ಆರ್​ಎಚ್​ ಪರ 16 ಇನಿಂಗ್ಸ್​ಗಳಲ್ಲಿ 204.02 ಸ್ಟ್ರೈಕ್ ರೇಟ್​​ನಲ್ಲಿ 484 ರನ್ ಗಳಿಸಿದ್ದರು.

ಇದನ್ನೂ ಓದಿ: Mumbai Cricket Association : ಮುಂಬೈನಲ್ಲಿ ನಿರ್ಮಾಣವಾಗಲಿದೆ 1 ಲಕ್ಷ ಪ್ರೇಕ್ಷಕರ ಸಾಮರ್ಥ್ಯದ ಕ್ರಿಕೆಟ್​ ಸ್ಟೇಡಿಯಮ್​

ಹರಾರೆಯಲ್ಲಿ ನಡೆದ 2 ನೇ ಟಿ 20 ಪಂದ್ಯದಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದ ನಂತರ ಅಭಿಷೇಕ್ ಶರ್ಮಾ ಹರಾರೆ ಸ್ಪೋರ್ಟ್ಸ್ ಕ್ಲಬ್​ನಿಂದ ತಮ್ಮ ಕುಟುಂಬದೊಂದಿಗೆ ವಿಡಿಯೊ ಕಾಲ್ ಮೂಲಕ ಮಾತನಾಡಿದರು. ದಾಖಲೆಯ ಶತಕದ ನಂತರ ಅಭಿಷೇಕ್ ತನ್ನ ಹೆತ್ತವರೊಂದಿಗೆ ಮಾತನಾಡುವ ವೀಡಿಯೊವನ್ನು ಬಿಸಿಸಿಐ ಹಂಚಿಕೊಂಡಿದೆ.

ಅಭಿಷೇಕ್ ಶರ್ಮಾ ಅವರ ಸಹೋದರಿ ಪಂಜಾಬ್​​ ಯುವ ಕ್ರಿಕೆಟಿಗನಿಗೆ ಬೆಂಬಲವಾಗಿದ್ದಾರೆ. ವೈದ್ಯರಾಗಿರುವ ಕೋಮಲ್, ಐಪಿಎಲ್ 2024 ರ ಋತುವಿನಾದ್ಯಂತ ಅಭಿಷೇಕ್ ಅವರೊಂದಿಗೆ ಸಮಯ ಕಳೆಯುತ್ತಿದ್ದರು. ಹರಾರೆಯಲ್ಲಿ ಶತಕದ ನಂತರ ಅಭಿಷೇಕ್ ಶರ್ಮಾ ತಮ್ಮ ಮಾರ್ಗದರ್ಶಕ ಮತ್ತು ಭಾರತದ ಮಾಜಿ ಆಲ್ರೌಂಡರ್ ಯುವರಾಜ್ ಸಿಂಗ್ ಅವರೊಂದಿಗೆ ಮಾತನಾಡಿದರು. ಭಾರತೀಯ ಕ್ರಿಕೆಟ್ ಮಂಡಳಿ ಹಂಚಿಕೊಂಡ ವೀಡಿಯೊದಲ್ಲಿ, ಯುವರಾಜ್ ಅಭಿಷೇಕ್ ಅವರನ್ನು ಅಭಿನಂದಿಸುವುದನ್ನು ಕಾಣಬಹುದು.

Continue Reading

ಪ್ರಮುಖ ಸುದ್ದಿ

Mumbai Cricket Association : ಮುಂಬೈನಲ್ಲಿ ನಿರ್ಮಾಣವಾಗಲಿದೆ 1 ಲಕ್ಷ ಪ್ರೇಕ್ಷಕರ ಸಾಮರ್ಥ್ಯದ ಕ್ರಿಕೆಟ್​ ಸ್ಟೇಡಿಯಮ್​

Mumbai Cricket Association : ಟಿ20 ವಿಜಯೋತ್ಸವ ಬಳಿಕ ಆಟಗಾರರಾದ ನಾಯಕ ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ಶಿವಂ ದುಬೆ ಮತ್ತು ಯಶಸ್ವಿ ಜೈಸ್ವಾಲ್ ಅವರು ಮಹಾರಾಷ್ಟ್ರ ವಿಧಾನ ಸಭೆಯಲ್ಲಿ ಕಾಣಿಸಿಕೊಂಡಿದ್ದರು. ಅಲ್ಲಿ ಅವರನ್ನು ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಇತರರು ಸ್ವಾಗತಿಸಿದ್ದರು.

VISTARANEWS.COM


on

Mumbai Cricket Association
Koo

ಬೆಂಗಳೂರು: ಟಿ 20 ವಿಶ್ವಕಪ್ 2024 ವಿಜೇತ ಭಾರತೀಯ ತಂಡದ ಸದಸ್ಯರು ಇತ್ತೀಚೆಗೆ ಮುಂಬೈನ ಐತಿಹಾಸಿಕ ವಾಂಖೆಡೆ ಸ್ಟೇಡಿಯಮ್​ನಲ್ಲಿ (wankhede stadium) ಸಂಭ್ರಮಾಚರಣೆ ಮಾಡಿದ್ದರು. ಆದರೆ, ಈ ಐತಿಹಾಸಿಕ ಸ್ಟೇಡಿಯಮ್​ ಇನ್ನು ಮುಂದೆ ಇತಿಹಾಸದ ಪುಸ್ತಕ ಸೇರುವ ಎಲ್ಲ ಸಾಧ್ಯತೆಗಳಿವೆ. ಯಾಕೆಂದರೆ ಮಹಾರಾಷ್ಟ್ರ ಕ್ರಿಕೆಟ್​ ಸಂಸ್ಥೆಯು (Mumbai Cricket Association) ಒಂದು ಲಕ್ಷ ಮಂದಿ ಪ್ರೇಕ್ಷಕರ ದೊಡ್ಡ ಸ್ಟೇಡಿಯಮ್ ಒಂದನ್ನು ನಿರ್ಮಿಸಲು ಮುಂದಾಗಿದೆ. ಹೀಗಾದರೆ ವಾಂಖೆಡೆ ಮೂಲೆಗುಂಪಾಗುವುದು ಖಚಿತ.

ಟಿ20 ವಿಜಯೋತ್ಸವ ಬಳಿಕ ಆಟಗಾರರಾದ ನಾಯಕ ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ಶಿವಂ ದುಬೆ ಮತ್ತು ಯಶಸ್ವಿ ಜೈಸ್ವಾಲ್ ಅವರು ಮಹಾರಾಷ್ಟ್ರ ವಿಧಾನ ಸಭೆಯಲ್ಲಿ ಕಾಣಿಸಿಕೊಂಡಿದ್ದರು. ಅಲ್ಲಿ ಅವರನ್ನು ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಇತರರು ಸ್ವಾಗತಿಸಿದ್ದರು.

ಮಹಾರಾಷ್ಟ್ರ ಮೂಲದ ಎಲ್ಲಾ ಕ್ರಿಕೆಟಿಗರನ್ನು ರಾಜ್ಯ ಸರ್ಕಾರವು ಸನ್ಮಾನಿಸಿತ್ತು. ಆಗ ಫಡ್ನವೀಸ್ ಸಿಎಂ ಏಕನಾಥ್​ ಶಿಂಧೆ ಬಳಿ ರಾಜ್ಯದಲ್ಲಿ ಮತ್ತೊಂದು ವಿಶ್ವ ದರ್ಜೆಯ ಕ್ರಿಕೆಟ್ ಕ್ರೀಡಾಂಗಣವನ್ನು ನಿರ್ಮಿಸುವ ಆಲೋಚನೆಯನ್ನು ಪರಿಶೀಲಿಸುವಂತೆ ವಿನಂತಿಸಿದ್ದರು. ಇದು ಒಂದು ಲಕ್ಷಕ್ಕೂ ಹೆಚ್ಚು ಆಸನ ಸಾಮರ್ಥ್ಯವನ್ನು ಹೊಂದಿರಲಿದೆ. ಇದು ದೇಶದ ಅತಿದೊಡ್ಡ ಕ್ರೀಡಾಂಗಣಗಳಲ್ಲಿ ಒಂದಾಗಲಿದೆ.

ಥಾಣೆ ಜಿಲ್ಲೆಯ ಅಮಾನೆ ಗ್ರಾಮದಲ್ಲಿ 50 ಎಕರೆ ಭೂಮಿಗಾಗಿ ಮಹಾರಾಷ್ಟ್ರ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ (ಎಂಎಸ್ಆರ್​ಡಿಸಿಗೆ) ನೀಡುವ ಮುಕ್ತ ಟೆಂಡರ್​ಗೆ ಮುಂಬೈ ಕ್ರಿಕೆಟ್ ಅಸೋಸಿಯೇಷನ್ (ಎಂಸಿಎ) ಈಗಾಗಲೇ ಅರ್ಜಿ ಸಲ್ಲಿಸಿದೆ ಎಂದು ಟೈಮ್ಸ್ ಆಫ್ ಇಂಡಿಯಾದ ವರದಿ ಮಾಡಿದೆ. ರಾಜ್ಯ ಸರ್ಕಾರದಿಂದ ಅನುಮೋದನೆ ಪಡೆದ ನಂತರ ಔಪಚಾರಿಕ ಯೋಜನೆ ಸಿದ್ಧಗೊಳ್ಳಲಿದೆ.

ವಾಂಖೆಡೆಯಿಂದ 68 ಕಿ.ಮೀ ದೂರದ ಸ್ಟೇಡಿಯಮ್​

ಥಾಣೆಯಿಂದ 26 ಕಿ.ಮೀ ಮತ್ತು ವಾಂಖೆಡೆ ಕ್ರೀಡಾಂಗಣದಿಂದ 68 ಕಿ.ಮೀ ದೂರದಲ್ಲಿರುವ ಅಮಾನೆಯಲ್ಲಿ ಸುಮಾರು 50 ಎಕರೆ ತೆರೆದ ಭೂಮಿಯಲ್ಲಿ ಹರಡಿರುವ 1 ಲಕ್ಷ ಸಾಮರ್ಥ್ಯದ ಬೃಹತ್ ಕ್ರಿಕೆಟ್ ಕ್ರೀಡಾಂಗಣವನ್ನು ನಿರ್ಮಿಸಲು ಎಂಸಿಎ ನೋಡುತ್ತಿದೆ. ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಮಹಾರಾಷ್ಟ್ರ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ (ಎಂಎಸ್ಆರ್ಡಿಸಿ) ಕರೆದ ಮುಕ್ತ ಟೆಂಡರ್ ಅನ್ನು ಎಂಸಿಎ ಭರ್ತಿ ಮಾಡಿದೆ. ಸಂಘವು ಮಹಾರಾಷ್ಟ್ರ ಸರ್ಕಾರದ ಅನುಮೋದನೆಗಾಗಿ ಕಾಯುತ್ತಿದೆ” ಎಂದು ವರದಿ ತಿಳಿಸಿದೆ.

ಅಮೋಲ್ ಕಾಳೆ ಕನಸಿನ ಯೋಜನೆ

ದಿವಂಗತ ಎಂಸಿಎ ಅಧ್ಯಕ್ಷ ಅಮೋಲ್ ಕಾಳೆ ಅವರು ಫಡ್ನವೀಸ್ ಅವರ ಆಪ್ತ ಸ್ನೇಹಿತರಾಗಿದ್ದರು. ಹೊಸ ಕ್ರಿಕೆಟ್ ಅಖಾಡವನ್ನು ನಿರ್ಮಿಸುವುದು ಅವರ ಕನಸಿನ ಯೋಜನೆಯಾಗಿತ್ತು ಎಂದು ವರದಿಯಾಗಿದೆ. ವಿಶೇಷವೆಂದರೆ, ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಲ್ಲಿ ಭಾಗವಹಿಸಿದ ಸ್ವಲ್ಪ ಸಮಯದ ನಂತರ ಹೃದಾಯಘಾತದಿಂದ ನಿಧನ ಹೊಂದಿದ್ದರು.

ಇದನ್ನೂ ಓದಿ: Sourav Ganguly : ಸೌರವ್​ ಗಂಗೂಲಿಗೆ 52ನೇ ಜನ್ಮದಿನ; ದಾದಾನ ಅಭೂತಪೂರ್ವ ವೃತ್ತಿ ಜೀವನದ ಬಗ್ಗೆ ಇಲ್ಲಿದೆ ಸಂಕ್ಷಿಪ್ತ ವಿವರ

ಈ ಕ್ರೀಡಾಂಗಣವು ಎಂಸಿಎ ಅಧ್ಯಕ್ಷ ಅಮೋಲ್ ಕಾಳೆ ಅವರ ಕನಸಿನ ಯೋಜನೆಯಾಗಿತ್ತು. ಇದು ಪ್ರಥಮ ದರ್ಜೆ ಪಂದ್ಯಗಳನ್ನು ಆಡಬಹುದಾದ ಎರಡು ಮೈದಾನಗಳು ಸೇರಿದಂತೆ ಎಲ್ಲಾ ಆಧುನಿಕ ಸೌಲಭ್ಯಗಳನ್ನು ಹೊಂದಿರುತ್ತದೆ” ಎಂದು ಮೂಲಗಳು ತಿಳಿಸಿವೆ.

ಪ್ರಸ್ತುತ, ಮುಂಬೈನ ವಾಂಖೆಡೆ ಕ್ರೀಡಾಂಗಣ ಮತ್ತು ನವೀ ಮುಂಬೈನ ಡಾ.ಡಿ.ವೈ.ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿ ಎಂಸಿಎ ಅಡಿಯಲ್ಲಿ ಅಂತರರಾಷ್ಟ್ರೀಯ ಪಂದ್ಯಗಳನ್ನು ಆಯೋಜಿಸಿದ ಎರಡು ಸ್ಥಳಗಳಾಗಿವೆ. ಬಿಕೆಸಿ ಮೈದಾನ ಮತ್ತು ಡೆಕ್ಕನ್ ಜಿಮ್ಖಾನಾ ಮೈದಾನಗಳು ಸಹ ಅಂತರರಾಷ್ಟ್ರೀಯ ಪಂದ್ಯಗಳಿಗೆ ಆತಿಥ್ಯ ವಹಿಸಿವೆ. ಆದರೆ ಆಧುನಿಕ ಕ್ರಿಕೆಟ್​ಗೆ ಪೂರಕವಾಗಿ ಸೌಲಭ್ಯಗಳು ಇಲ್ಲ.

Continue Reading

ಪ್ರಮುಖ ಸುದ್ದಿ

Sourav Ganguly : ಸೌರವ್​ ಗಂಗೂಲಿಗೆ 52ನೇ ಜನ್ಮದಿನ; ದಾದಾನ ಅಭೂತಪೂರ್ವ ವೃತ್ತಿ ಜೀವನದ ಬಗ್ಗೆ ಇಲ್ಲಿದೆ ಸಂಕ್ಷಿಪ್ತ ವಿವರ

Sourav Ganguly: ಆಟದ ಸಮಯದಲ್ಲಿ ಬ್ಯಾಟಿಂಗ್​ನಲ್ಲಿ ಅಬ್ಬರಿಸಿದ್ದ ಅವರು ಬಳಿಕ ಕೊಲ್ಕೊತಾ ಕ್ರಿಕೆಟ್ ಸಂಸ್ಥೆ ಹಾಗೂ ಬಿಸಿಸಿಐ ಅಧ್ಯಕ್ಷರಾಗಿಯೂ ಅದ್ಭುತ ಕೆಲಸಗಳನ್ನು ಮಾಡಿದ್ದರು. ಇದೀಗ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಫ್ರಾಂಚೈಸಿ ಡೆಲ್ಲಿ ಕ್ಯಾಪಿಟಲ್ಸ್​ನಲ್ಲಿ ನಿರ್ದೇಶಕರಾಗಿದ್ದಾರೆ. ಹೀಗೆ ಸುಮಾರು ಎರಡು ದಶಕಗಳ ವೃತ್ತಿಜೀವನದಲ್ಲಿ ಅಪಾರ ಸಾಧನೆ ಮಾಡಿದ್ದಾರೆ.

VISTARANEWS.COM


on

Sourav Ganguly
Koo

ನವದೆಹಲಿ: ಬಿಸಿಸಿಐ ಮಾಜಿ ಅಧ್ಯಕ್ಷ ಹಾಗೂ ಭಾರತ ಕ್ರಿಕೆಟ್ ತಂಡ ಅತ್ಯಂತ ಯಶಸ್ವಿ ನಾಯಕ ಸೌರವ್ ಗಂಗೂಲಿ (Sourav Ganguly) 52ನೇ ವರ್ಷದ ಜನುಮ ದಿನದ ಸಂಭ್ರಮದಲ್ಲಿದ್ದಾರೆ. ಅವರು ತಮ್ಮ ಸಹ ಆಟಗಾರ ರಾಹುಲ್ ದ್ರಾವಿಡ್ ಅವರಿಂದ ‘ಆಫ್ ಸೈಡ್ ದೇವರು’ ಎಂದು ಕರೆಸಿಕೊಂಡವರು. ಇಂಥ ಪ್ರಚಂಡ ಕ್ರಿಕೆಟಿಗ ಅನೇಕ ಅದ್ಭುತ ಕೊಡುಗೆಗಳನ್ನು ಕ್ರಿಕೆಟ್ ಕ್ಷೇತ್ರಕ್ಕೆ ನೀಡಿದ್ದಾರೆ ಆಟದ ಸಮಯದಲ್ಲಿ ಬ್ಯಾಟಿಂಗ್​ನಲ್ಲಿ ಅಬ್ಬರಿಸಿದ್ದ ಅವರು ಬಳಿಕ ಕೊಲ್ಕೊತಾ ಕ್ರಿಕೆಟ್ ಸಂಸ್ಥೆ ಹಾಗೂ ಬಿಸಿಸಿಐ ಅಧ್ಯಕ್ಷರಾಗಿಯೂ ಅದ್ಭುತ ಕೆಲಸಗಳನ್ನು ಮಾಡಿದ್ದರು. ಇದೀಗ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಫ್ರಾಂಚೈಸಿ ಡೆಲ್ಲಿ ಕ್ಯಾಪಿಟಲ್ಸ್​ನಲ್ಲಿ ನಿರ್ದೇಶಕರಾಗಿದ್ದಾರೆ. ಹೀಗೆ ಸುಮಾರು ಎರಡು ದಶಕಗಳ ವೃತ್ತಿಜೀವನದಲ್ಲಿ ಅಪಾರ ಸಾಧನೆ ಮಾಡಿದ್ದಾರೆ.

ಗಂಗೂಲಿ ಭಾರತದ ಅತ್ಯಂತ ಯಶಸ್ವಿ ಟೆಸ್ಟ್ ನಾಯಕರಾಗಿದ್ದರು. ಪ್ರತಿಭಾನ್ವಿತ ಆಟಗಾರರ ಗುಂಪಿನಿಂದ ವಿಜೇತ ತಂಡವನ್ನು ಮುನ್ನಡೆಸಿದ್ದರು ಅವರು ಇತಿಹಾಸದ ಅತ್ಯುತ್ತಮ ಏಕದಿನ ಬ್ಯಾಟರ್​ಗಳಲ್ಲಿ ಒಬ್ಬರಾಗಿದ್ದಾರೆ. ಅವರು 1996 ರಲ್ಲಿ ಲಾರ್ಡ್ಸ್​​ನಲ್ಲಿ ನಡೆದ ಚೊಚ್ಚಲ ಪಂದ್ಯದಲ್ಲಿ ಅದ್ಭುತ ಶತಕವನ್ನು ಗಳಿಸಿದ್ದರು. ಆ ವರ್ಷದ ಕೊನೆಯಲ್ಲಿ ಅವರನ್ನು ಏಕದಿನ ಕ್ರಮಾಂಕದ ಅಗ್ರಸ್ಥಾನಕ್ಕೆ ಏರಿದ್ದರು. ಸೌರವ್​ ಗಂಗೂಲಿ ಮತ್ತು ಸಚಿನ್ ತೆಂಡೂಲ್ಕರ್ ಒಟ್ಟಾಗಿ ಕ್ರಿಕೆಟ್​ ಇತಿಹಾಸದ ಅತ್ಯಂತ ಪ್ರಬಲ ಆರಂಭಿಕ ಬ್ಯಾಟರ್​ಗಳೆನಿಸಿಕೊಂಡಿದ್ದರು.

ಗಂಗೂಲಿ ಮೈದಾನದಲ್ಲಿ ಇದ್ದ ತಮ್ಮ ಸಮಯದುದ್ದಕ್ಕೂ ತಮ್ಮ ವಿಶಿಷ್ಟ ನಾಯಕತ್ವದ ಮೂಲಕ ಹೆಸರುವಾಸಿಯಾಗಿದ್ದರು. 1996 ರ ಬೇಸಿಗೆಯಲ್ಲಿ, ಅವರು ಇಂಗ್ಲೆಂಡ್ ವಿರುದ್ಧ ಟೆಸ್ಟ್ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದರು. ‘ದಾದಾ’ ಎಂಬ ಅಡ್ಡಹೆಸರನ್ನು ಗಳಿಸಿಕೊಂಡ ಅವರು ಲಾರ್ಡ್ಸ್​​ನಲ್ಲಿ ತಮ್ಮ ಮೊದಲ ಟೆಸ್ಟ್​​ನಲ್ಲಿ ಶತಕ ಗಳಿಸಿದ ನಂತರ ಸುದ್ದಿಯಾದರು. ನಂತರ ‘ಪ್ರಿನ್ಸ್ ಆಫ್ ಕೋಲ್ಕತ್ತಾ’ ಎಂಬ ಹೆಸರಿನಿಂದ ಕರೆಸಲ್ಪಟ್ಟರು. ಬಳಿಕ ಅವರು ಎರಡನೇ ಟೆಸ್ಟ್​​ ಪಂದ್ಯದಲ್ಲೂ ಶತಕ ಬಾರಿಸಿದ್ದರು. ಇತಿಹಾಸದಲ್ಲಿ ತಮ್ಮ ಮೊದಲ ಎರಡು ಟೆ್ಸ್ಟ್​ ಇನ್ನಿಂಗ್ಸ್​ಗಳಲ್ಲಿ ಶತಕ ಗಳಿಸಿದ ಮೂರನೇ ಬ್ಯಾಟರ್​​ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಇದನ್ನೂ ಓದಿ: Team India : ಭಾರತ ತಂಡಕ್ಕೆ ಸಿಕ್ಕಿದ 125 ಕೋಟಿ ರೂ. ಬಹುಮಾನದಲ್ಲಿ ಯಾರಿಗೆ ಎಷ್ಟು? ಮಾಹಿತಿ ಬಹಿರಂಗ

2000ನೇ ಇಸವಿಯಲ್ಲಿ ಟೀಮ್ ಇಂಡಿಯಾ ಮ್ಯಾಚ್ ಫಿಕ್ಸಿಂಗ್ ಹಗರಣದಲ್ಲಿ ಸಿಲುಕಿಕೊಂಡಿತ್ತು. ನಂತರ ಗಂಗೂಲಿ ಅವರನ್ನು ತಂಡದ ನಾಯಕರನ್ನಾಗಿ ನೇಮಿಸಲಾಯಿತು. ಅಲ್ಲಿ ಅವರು ಹೊಸ ಪ್ರತಿಭೆಗಳನ್ನು ಬೆಳೆಸಲು ಪ್ರಾರಂಭಿಸಿದರು.

ಗಂಗೂಲಿ ನಾಯಕತ್ವದಲ್ಲಿ ಭಾರತ ತಂಡ 2000ರಲ್ಲಿ ನಡೆದ ಐಸಿಸಿ ನಾಕೌಟ್ ಟ್ರೋಫಿಯಲ್ಲಿ ಮೊದಲ ಬಾರಿಗೆ ಫೈನಲ್ ತಲುಪಿತ್ತು. 2001ರಲ್ಲಿ ಗಂಗೂಲಿ ನೇತೃತ್ವದ ಭಾರತ ತಂಡ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಆಸ್ಟ್ರೇಲಿಯಾವನ್ನು 2-1 ಅಂತರದಿಂದ ಸೋಲಿಸಿತ್ತು. ಸ್ಟೀವ್ ವಾ ನೇತೃತ್ವದ ಆಸ್ಟ್ರೇಲಿಯಾ ತಂಡವು ಸರಣಿಯಲ್ಲಿ ಭಾರತಕ್ಕೆ ಸವಾಲು ಹಾಕಿತು. ಆದರೆ ವಿವಿಎಸ್ ಲಕ್ಷ್ಮಣ್ ಮತ್ತು ರಾಹುಲ್ ದ್ರಾವಿಡ್ ಭಾರತೀಯ ಕ್ರಿಕೆಟ್ ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದರು.

ಅಂಗಿ ಬಿಚ್ಚಿ ಕುಣಿದಿದ್ದರು

2002 ರಲ್ಲಿ ನಾಟ್​ವೆಸ್ಟ್​​ ಟ್ರೋಫಿ ಫೈನಲ್​​ನಲ್ಲಿ ಭಾರತವು ಇಂಗ್ಲೆಂಡ್ ವಿರುದ್ದ ಗೆದ್ದಿತ್ತು. ಭಾರತವನ್ನು ಸೋಲಿನ ದವಡೆಯಿಂದ ಯುವರಾಜ್ ಸಿಂಗ್ ಹಾಗೂ ಮೊಹಮ್ಮದ್​ ಕೈಫ್​ ಕಾಫಾಡಿದ್ದರು. ಈ ವೇಲೆ ಲಾರ್ಡ್ಸ್ ಬಾಲ್ಕನಿಯಲ್ಲಿ ತನ್ನ ಅಂಗಿ ಬಿಚ್ಚಿದ ಕುಣಿದಿದ್ದರು ಗಂಗೂಲಿ. ಅದು ಕ್ರಿಕೆಟ್ ಇತಿಹಾಸದ ಸ್ಮರಣೀಯ ವಿಷಯವಾಗಿ ದಾಖಲಾಗಿದೆ.

ಗಂಗೂಲಿ 2003 ರಲ್ಲಿ ಭಾರತವನ್ನು ವಿಶ್ವಕಪ್ ಫೈನಲ್​ ತನಕ ಮುನ್ನಡೆಸಿದ್ದರು. ಅಲ್ಲಿ ಅವರ ನೇತೃತ್ವದ ತಂಡ ಆಸ್ಟ್ರೇಲಿಯಾ ವಿರುದ್ಧ ಸೋತಿತ್ತು. 2004 ರಲ್ಲಿ, ಅವರು ಪಾಕಿಸ್ತಾನದಲ್ಲಿ ಏಕದಿನ ಮತ್ತು ಟೆಸ್ಟ್ ಸರಣಿಯ ಮುಂದಾಳತ್ವ ವಹಿಸಿದ್ದರು. ಪಾಕಿಸ್ತಾನದ ನೆಲದಲ್ಲಿ ಭಾರತದ ಮೊದಲ ಟೆಸ್ಟ್ ಸರಣಿ ಗೆಲುವು ತಂದುಕೊಟ್ಟಿದ್ದರು.

2005-06ರಲ್ಲಿ ಆಗಿನ ಕೋಚ್ ಗ್ರೆಗ್ ಚಾಪೆಲ್ ಅವರೊಂದಿಗೆ ಗಲಾಟೆ ಸುದ್ದಿಯಾಗಿತ್ತು. ಮತ್ತೊಂದೆಡೆ, ಗಂಗೂಲಿ ತಂಡಕ್ಕೆ ಮರಳಿದ್ದರು ಮತ್ತು ದಕ್ಷಿಣ ಆಫ್ರಿಕಾದ ಜೋಹಾನ್ಸ್​ಬರ್ಗ್​ನಲ್ಲಿ 50ಪ್ಲಸ್ ಸ್ಕೋರ್ ದಾಖಲಿಸಿದ್ದರು.

ಗಂಗೂಲಿ 2008ರಲ್ಲಿ ನಾಗ್ಪುರದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧ ಕೊನೆಯ ಟೆಸ್ಟ್ ಪಂದ್ಯವನ್ನಾಡಿದ್ದರು. 2012ರಲ್ಲಿ ದೇಶೀಯ ಕ್ರಿಕೆಟ್​​ನಿಂದ ನಿವೃತ್ತರಾಗುವವರೆಗೂ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಆಡಿದ್ದರು. ದಾದಾ ಭಾರತ ಪರ 113 ಟೆಸ್ಟ್ ಮತ್ತು 311 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ತಮ್ಮ ಅಂತಾರಾಷ್ಟ್ರೀಯ ವೃತ್ತಿಜೀವನದಲ್ಲಿ, ಎಡಗೈ ಬ್ಯಾಟ್ಸ್ಮನ್ ಎಲ್ಲಾ ಸ್ವರೂಪಗಳಲ್ಲಿ ಸೇರಿ 18,575 ರನ್ ಗಳಿಸಿದ್ದಾರೆ.

ಗಂಗೂಲಿ ಎಲ್ಲಾ ಸ್ವರೂಪಗಳಲ್ಲಿ 195 ಪಂದ್ಯಗಳಲ್ಲಿ ಭಾರತವನ್ನು ಮುನ್ನಡೆಸಿದ್ದರು/ ಅವುಗಳಲ್ಲಿ 97 ಪಂದ್ಯಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದರು. ಮಾಜಿ ನಾಯಕ ನಂತರ ಕ್ರಿಕೆಟ್ ಅಸೋಸಿಯೇಷನ್ ಆಫ್ ಬಂಗಾಳದ (ಸಿಎಬಿ) ಅಧ್ಯಕ್ಷರಾದರು ಮತ್ತು ಬಿಸಿಸಿಐನ ಮಾಜಿ ಅಧ್ಯಕ್ಷರಾಗಿದ್ದಾರೆ.

ಆಡಳಿತಾತ್ಮಕ ಬುದ್ಧಿವಂತಿಕೆ

ಭಾರತದಲ್ಲಿ ಹಗಲು-ರಾತ್ರಿ ಟೆಸ್ಟ್​ ಕ್ರಿಕೆಟ್​ ಕ ಲ್ಪನೆ ಹೊರಹೊಮ್ಮಲು ಗಂಗೂಲಿ ಪ್ರಮುಖ ಕಾರಣಗಳಲ್ಲಿ ಒಬ್ಬರು. ಅವರು ಈ ಅವಧಿಯಲ್ಲಿ ಬಿಸಿಸಿಐ ಅಧ್ಯಕ್ಷರಾಗಿದ್ದರು. 2019 ರಲ್ಲಿ ಈಡನ್ ಗಾರ್ಡನ್ಸ್​ನಲ್ಲಿ ಬಾಂಗ್ಲಾದೇಶ ವಿರುದ್ಧ ಭಾರತ ತನ್ನ ಮೊದಲ ಹಗಲು-ರಾತ್ರಿ ಟೆಸ್ಟ್ ಪಂದ್ಯವನ್ನು ಆಡಿತ್ತು.

Continue Reading

ಪ್ರಮುಖ ಸುದ್ದಿ

Team India : ಭಾರತ ತಂಡಕ್ಕೆ ಸಿಕ್ಕಿದ 125 ಕೋಟಿ ರೂ. ಬಹುಮಾನದಲ್ಲಿ ಯಾರಿಗೆ ಎಷ್ಟು? ಮಾಹಿತಿ ಬಹಿರಂಗ

Team India : ಬಿಸಿಸಿಐ ಹೊರತುಪಡಿಸಿ, ರಾಜ್ಯ ಸರ್ಕಾರಗಳು ಸಹ ಆಯಾ ಆಟಗಾರರಿಗೆ ಬಹುಮಾನದ ಮೊತ್ತ ಘೋಷಿಸಿವೆ. ಮಹಾರಾಷ್ಟ್ರ ಸರ್ಕಾರವು ರೋಹಿತ್, ಶಿವಂ ದುಬೆ, ಯಶಸ್ವಿ ಜೈಸ್ವಾಲ್ ಮತ್ತು ಸೂರ್ಯಕುಮಾರ್ ಯಾದವ್ ಅವರಿಗೆ 11 ಕೋಟಿ ರೂ.ಗಳನ್ನು ನೀಡಿತ್ತು.

VISTARANEWS.COM


on

Team India
Koo

ಬೆಂಗಳೂರು: ಅಮೆರಿಕದ ಮತ್ತು ವೆಸ್ಟ್​ ಇಂಡೀಸ್​ನಲ್ಲಿ ನಡೆದ 2024 ರ ಟಿ 20 ವಿಶ್ವಕಪ್ ನಲ್ಲಿ ಭಾರತ ತಂಡ (Team India ) ಟ್ರೋಫಿ ಗೆದ್ದ ನಂತರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) 125 ಕೋಟಿ ರೂಪಾಯಿ ಬಹುಮಾನ ಘೋಷಿಸಿತ್ತು. ಜೂನ್ 4 ರಂದು ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ನಾಯಕ ರೋಹಿತ್ ಶರ್ಮಾ (Rohit Sharma) ಮತ್ತು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ಬಹುಮಾನದ ಮೊತ್ತವನ್ನು ಹಸ್ತಾಂತರಿಸಲಾಗಿತ್ತು. ಅದರಲ್ಲಿ ಯಾರಿಗೆ ಎಷ್ಟು ಎಂಬ ಕುತೂಹಲ ಮೂಡಿತ್ತು. ಆ ಮಾಹಿತಿ ಇದೀಗ ಬಹಿರಂಗಗೊಂಡಿದೆ.

ವರದಿಗಳ ಪ್ರಕಾರ, ತಂಡದ ಎಲ್ಲಾ 15 ಸದಸ್ಯರು ತಲಾ 5 ಕೋಟಿ ರೂ ಪಡೆದಿದ್ದಾರೆ. ಮುಖ್ಯ ಕೋಚ್ ದ್ರಾವಿಡ್ ಕೂಡ ಇದೇ ಮೊತ್ತವನ್ನು ಪಡೆದಿದ್ದಾರೆ. ಉಳಿದ ಕೋಚಿಂಗ್ ಗ್ರೂಪ್ ತಲಾ 2.5 ರೂಪಾಯಿ ಪಡೆದುಕೊಂಡಿದ್ದಾರೆ. ವಿಡಿಯೋ ನಿರ್ಮಾಣ ತಂಡ ಸೇರಿದಂತೆ ಬ್ಯಾಕ್ರೂಮ್ ಸಿಬ್ಬಂದಿಗೆ ತಲಾ 2 ಕೋಟಿ ರೂ., ಮಾಜಿ ಕ್ರಿಕೆಟಿಗ ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಗೆ ತಲಾ 1 ಕೋಟಿ ರೂಪಾಯಿ, ಮೀಸಲು ಆಟಗಾರರಾದ ರಿಂಕು ಸಿಂಗ್, ಖಲೀಲ್ ಅಹ್ಮದ್, ಶುಭ್ಮನ್ ಗಿಲ್ ಮತ್ತು ಅವೇಶ್ ಖಾನ್ ಅವರಿಗೆ ತಲಾ 1 ಕೋಟಿ ರೂಪಾಯಿ ದೊರಕಿದೆ.

ಬಿಸಿಸಿಐ ಹೊರತುಪಡಿಸಿ, ರಾಜ್ಯ ಸರ್ಕಾರಗಳು ಸಹ ಆಯಾ ಆಟಗಾರರಿಗೆ ಬಹುಮಾನದ ಮೊತ್ತ ಘೋಷಿಸಿವೆ. ಮಹಾರಾಷ್ಟ್ರ ಸರ್ಕಾರವು ರೋಹಿತ್, ಶಿವಂ ದುಬೆ, ಯಶಸ್ವಿ ಜೈಸ್ವಾಲ್ ಮತ್ತು ಸೂರ್ಯಕುಮಾರ್ ಯಾದವ್ ಅವರಿಗೆ 11 ಕೋಟಿ ರೂ.ಗಳನ್ನು ನೀಡಿತ್ತು.

ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಟೀಮ್ ಇಂಡಿಯಾಕ್ಕೆ 2.45 ಮಿಲಿಯನ್ ಡಾಲರ್ ಅಂದರೆ ಸುಮಾರು 20.37 ಕೋಟಿ ರೂಪಾಯಿ ಬಹುಮಾನ ಕೊಟ್ಟಿತ್ತು. ಬಿಸಿಸಿಐನ ಆರ್ಥಿಕ ಸ್ಥಿರತೆಯು ಎಲ್ಲಾ ಆಟಗಾರರಿಗೆ ಟ್ರೋಫಿ ಜತೆ ಸಿಕ್ಕ ಬಹುಮಾನ ಮೊತ್ತಕ್ಕಿಂತ ಸುಮಾರು ಆರು ಪಟ್ಟು ಹೆಚ್ಚು ನಗದು ಸಿಗಲು ಸಹಾಯ ಮಾಡಿತು. ಇದು ಇವರೆಗಿನ ಗರಿಷ್ಠ ಗಳಿಕೆಯಾಗಿದೆ. 1983 ರಲ್ಲಿ ಏಕದಿನ ವಿಶ್ವಕಪ್ ಗೆಲುವಿನ ನಂತರ, ಆಡಳಿತ ಮಂಡಳಿಯು ಪ್ರತಿ ಆಟಗಾರನಿಗೆ 25,000 ರೂ.ಗಳ ಬಹುಮಾನವನ್ನು ಘೋಷಿಸಿತು. ಇದು ಆಧುನಿಕ ಕಾಲದಲ್ಲಿ ಆಟಗಾರರು ಪಡೆದ ಮೊತ್ತಕ್ಕೆ ಹೋಲಿಸಿದರೆ ಕನಿಷ್ಠ ಪ್ರಮಾಣದ ಮೊತ್ತವಾಗಿದೆ.

ಇದನ್ನೂ ಓದಿ: Gautam Gambhir : ಗಂಭೀರ್ ಕೆಕೆಆರ್ ತೊರೆಯುವುದು ನಿಶ್ಚಿತ​; ಈಡನ್​ ಗಾರ್ಡನ್ಸ್​​ನಲ್ಲಿ ವಿದಾಯದ ಶೂಟಿಂಗ್

ಐಪಿಎಲ್​ನ ಶಕ್ತಿ ಮತ್ತು ಹಣಕಾಸಿನ ವಿಷಯದಲ್ಲಿ ಭಾರತೀಯ ಕ್ರಿಕೆಟ್ ದೊಡ್ಡ ಗಳಿಕೆಯಲ್ಲಿದೆ. ಆದಾಗ್ಯೂ ಆಟಗಾರರು ಐಪಿಎಲ್ ಕಡೆಗೆ ಹೆಚ್ಚಿನ ಗಮನ ಸೆಳೆಯುತ್ತಿದ್ದಾರೆ ಎಂಬ ಆರೋಪವಿದೆ. ಇದನ್ನು ನಿವಾರಿಸಲೂ ಬಿಸಿಸಿಐ 125 ಕೋಟಿ ರೂಪಾಯಿ ಘೋಷಿಸಿದೆ ಎನ್ನಲಾಗಿದೆ. ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಆದ್ಯತೆ ನೀಡಿದವರಿಗೂ ದೊಡ್ಡ ಮೊತ್ತ ಸಿಗುತ್ತದೆ ಎಂಬ ಸ್ಪಷ್ಟ ಸಂದೇಶವನ್ನು ಬಿಸಿಸಿಐ ಎಲ್ಲಾ ಆಟಗಾರರಿಗೆ ಕಳುಹಿಸಿದೆ.

“ಐಪಿಎಲ್ ಯುಗದಲ್ಲಿ, ಆಟಗಾರರಿಗೆ ಅವರ ಫ್ರಾಂಚೈಸಿಗಳು ಸಾಕಷ್ಟು ಸಂಭಾವನೆ ನೀಡುತ್ತವೆ. ಟಿ 20 ವಿಶ್ವಕಪ್ ಗೆದ್ದ ತಂಡಕ್ಕೆ 125 ಕೋಟಿ ರೂ.ಗಳು ಆಟಗಾರರಿಗೆ ಸರಳ ಸಂದೇಶವಾಗಿದೆ. ಭಾರತಕ್ಕಾಗಿ ಟ್ರೋಫಿಗಳನ್ನು ಗೆಲ್ಲಿರಿ ಮತ್ತು ನೀವು ಶ್ರೀಮಂತರಾಗುತ್ತೀರಿ” ಎಂಬುದು ಬಿಸಿಸಿಐ ಸಂದೇಶ ಎಂಬುದಾಗಿ ಅಧಿಕಾರಿ ಹೇಳಿದ್ದಾರೆ.

ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​​ ಮತ್ತು ಚಾಂಪಿಯನ್ಸ್ ಟ್ರೋಫಿಗೆ ರೋಹಿತ್ ನಾಯಕನಾಗಿ ಮುಂದುವರಿಯುತ್ತಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಖಚಿತಪಡಿಸಿದ್ದಾರೆ.

Continue Reading
Advertisement
ಕರ್ನಾಟಕ3 mins ago

Rain Affected areas: ಮಳೆ ಸಂತ್ರಸ್ತ ಪ್ರದೇಶಗಳಲ್ಲಿ ಶಾಶ್ವತ ಪರಿಹಾರ ಕ್ರಮ ಕೈಗೊಳ್ಳಿ: ಡಿಸಿಗಳಿಗೆ ಸಿಎಂ ಸೂಚನೆ

Murder Case
Latest26 mins ago

Murder Case: ಕದ್ದುಮುಚ್ಚಿ ಸರಸವಾಡುತ್ತಿದ್ದ ಮಹಿಳೆ ಸಿಕ್ಕಿಬಿದ್ದಾಗ ಗಂಡನನ್ನೇ ಕೊಂದಳು!

road Accident
ಕೊಪ್ಪಳ27 mins ago

Road Accident : ಕೊಪ್ಪಳದಲ್ಲಿ ಟಿಪ್ಪರ್‌ ಹರಿದು ಬೈಕ್‌ ಸವಾರ ಸಾವು

Abhishek Sharma
ಪ್ರಮುಖ ಸುದ್ದಿ28 mins ago

Abhishek Sharma : ಅಭಿಷೇಕ್​ ಶತಕಕ್ಕೆ ಸಹೋದರಿಯ ಚಪ್ಪಾಳೆ, ವಿಡಿಯೊ ಶೇರ್ ಮಾಡಿದ ಕೋಮಲ್​ ಶರ್ಮಾ

MUDA site scandal
ಕರ್ನಾಟಕ45 mins ago

MUDA site scandal: ಸಿಎಂ ಆಪ್ತ ರಾಕೇಶ್‌ ಪಾಪಣ್ಣಗೆ ಹಂಚಿಕೆಯಾಗಿದ್ದ ಮುಡಾ ಸೈಟ್‌ಗೂ ತಡೆ!

steel flyover bridge shivananda circle
ಪ್ರಮುಖ ಸುದ್ದಿ52 mins ago

Steel Flyover: ಬೆಂಗಳೂರಿನ ಮೊದಲ ಸ್ಟೀಲ್‌ ಫ್ಲೈಓವರ್‌ ಸೇತುವೆಯಲ್ಲಿ ಬಿರುಕು

Gurdaspur attack
ವಿದೇಶ54 mins ago

Gurdaspur Attack: ಗುರುದಾಸಪುರ ಉಗ್ರ ದಾಳಿಯ ರೂವಾರಿ, ಐಎಸ್ಐ ಅಧಿಕಾರಿಯನ್ನು ಕರಾಚಿಯಲ್ಲಿ ಫಿನಿಷ್ ಮಾಡಿದ ‘ಅಪರಿಚಿತರು’!

Karnataka Rain
ಮಳೆ55 mins ago

Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

Haveri accident Shivanna couple helped the money to families
ಸ್ಯಾಂಡಲ್ ವುಡ್1 hour ago

Shiva Rajkumar: ಹಾವೇರಿ ಅಪಘಾತ; ಮೃತಪಟ್ಟ ಕುಟುಂಬಗಳಿಗೆ ಧನ ಸಹಾಯ ಮಾಡಿದ ಶಿವಣ್ಣ ದಂಪತಿ

Mumbai Cricket Association
ಪ್ರಮುಖ ಸುದ್ದಿ1 hour ago

Mumbai Cricket Association : ಮುಂಬೈನಲ್ಲಿ ನಿರ್ಮಾಣವಾಗಲಿದೆ 1 ಲಕ್ಷ ಪ್ರೇಕ್ಷಕರ ಸಾಮರ್ಥ್ಯದ ಕ್ರಿಕೆಟ್​ ಸ್ಟೇಡಿಯಮ್​

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ55 mins ago

Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

Karnataka weather Forecast
ಮಳೆ2 hours ago

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

karnataka weather Forecast
ಮಳೆ18 hours ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ21 hours ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ22 hours ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ1 day ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ2 days ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ2 days ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ2 days ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು2 days ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಟ್ರೆಂಡಿಂಗ್‌