ಆಲ್ಟ್‌ ನ್ಯೂಸ್‌ ಸಹಸಂಸ್ಥಾಪಕ ಜುಬೇರ್‌ಗೆ ಲಖಿಂಪುರ್‌ ಪ್ರಕರಣದಲ್ಲಿ 14 ದಿನಗಳ ನ್ಯಾಯಾಂಗ ಬಂಧನ - Vistara News

ಕ್ರೈಂ

ಆಲ್ಟ್‌ ನ್ಯೂಸ್‌ ಸಹಸಂಸ್ಥಾಪಕ ಜುಬೇರ್‌ಗೆ ಲಖಿಂಪುರ್‌ ಪ್ರಕರಣದಲ್ಲಿ 14 ದಿನಗಳ ನ್ಯಾಯಾಂಗ ಬಂಧನ

ಆಲ್ಟ್‌ ನ್ಯೂಸ್‌ ಸಹ ಸಂಸ್ಥಾಪಕ ಮೊಹಮ್ಮದ್‌ ಜುಬೇರ್‌ಗೆ ಒಂದಾದ ಬಳಿಕ ಒಂದು ಕೋರ್ಟ್‌ನಿಂದ ವಿಚಾರಣೆಗೆ ಕರೆ ಬರುತ್ತಿದೆ, ನ್ಯಾಯಾಂಗ ಬಂಧನಕ್ಕೆ ಸೂಚನೆ ನೀಡಲಾಗುತ್ತಿದೆ. ಈಗ ಲಾಖಿಂಪುರ್‌ ಕೋರ್ಟ್‌ನ ಸರದಿ.

VISTARANEWS.COM


on

mohammad zubair
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಫ್ಯಾಕ್ಟ್‌ ಚೆಕ್‌ ಹೆಸರಿನಲ್ಲಿ ಹಿಂದೂಗಳ ಭಾವನೆಗಳಿಗೆ ಘಾಸಿ ಮಾಡುತ್ತಿದ್ದ ಆರೋಪ ಎದುರಿಸುತ್ತಿರುವ ಆಲ್ಟ್‌ ನ್ಯೂಸ್‌ ಸಹ ಸಂಸ್ಥಾಪಕ ಮೊಹಮ್ಮದ್‌ ಜುಬೇರ್‌ಗೆ ಲಖಿಂಪುರದ ಕೋರ್ಟ್‌ ೧೪ ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಕಳೆದ ಜೂನ್‌ ೨೭ರಂದು ದಿಲ್ಲಿ ಪೊಲೀಸರಿಂದ ಬಂಧಿತನಾದ ಈತನ ವಿರುದ್ಧ ದೇಶದ ನಾನಾ ಭಾಗಗಳಲ್ಲಿ ದಾಖಲಾಗಿರುವ ಪ್ರಕರಣಗಳ ವಿಚಾರಣೆ ನಡೆಯುತ್ತಿದೆ. ಸೋಮವಾರ ಉತ್ತರ ಪ್ರದೇಶದ ಲಖಿಂಪುರದ ಕೋರ್ಟ್‌ನಲ್ಲಿ ವಿಚಾರಣೆ ನಡೆದಿತ್ತು.

ಜುಬೇರ್‌ ವಿರುದ್ಧ ಕಳೆದ ವರ್ಷದ ನವೆಂಬರ್‌ನಲ್ಲೇ ಲಖಿಂಪುರದಲ್ಲಿ ಪ್ರಕರಣ ದಾಖಲಾಗಿತ್ತು. ದ್ವೇಷವನ್ನು ಹರಡುವ ಟ್ವೀಟ್‌ ಮಾಡಿದ್ದಾರೆನ್ನುವ ಆರೋಪವಿತ್ತು. ಇದೀಗ ದಿಲ್ಲಿ ಪೊಲೀಸರು ಆತನನ್ನು ಬಂಧಿಸಿದ ಬೆನ್ನಿಗೇ ಲಾಖಿಂಪುರ ಪ್ರಕರಣಕ್ಕೆ ಮರುಜೀವ ಬಂದಿದೆ. ಜುಬೇರ್‌ ಪ್ರಸಕ್ತ ದಿಲ್ಲಿ ಪೊಲೀಸರ ಕಸ್ಟಡಿಯಲ್ಲಿದ್ದಾನೆ. ಲಖಿಂಪುರ ಪ್ರಕರಣದಲ್ಲಿ ಜುಲೈ ೧೩ರ ಬಳಿಕ ಜಾಮೀನು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಜಾಮೀನು ಸಿಕ್ಕಿದರೂ ಬಿಡುಗಡೆ ಇಲ್ಲ
ನಿಜವೆಂದರೆ, ಜೂನ್‌ ೨೭ರಂದು ಬಂಧನಕ್ಕೆ ಒಳಗಾಗಿದ್ದ ಜುಬೇರ್‌ಗೆ ಒಂದು ಕಡೆ ಜಾಮೀನು ಸಿಕ್ಕಿದರೂ ಇನ್ನೊಂದು ಕಡೆ ಬಂಧನ ಆಗುತ್ತಿದೆ. ಸೀತಾಪುರ್‌ ಜಿಲ್ಲೆಯ ಒಂದು ಪ್ರಕರಣದಲ್ಲಿ ಸುಪ್ರೀಂಕೋರ್ಟ್‌ ಐದು ದಿನಗಳ ಮಧ್ಯಂತರ ಜಾಮೀನು ನೀಡಿತ್ತಾದರೂ ದಿಲ್ಲಿಯಲ್ಲಿ ದಾಖಲಾದ ಪ್ರಧಾನ ಕೇಸಿನಲ್ಲಿ ಜಾಮೀನು ಸಿಕ್ಕಿರಲಿಲ್ಲ! ಈಗ ಜುಲೈ ೧೩ರಂದು ಲಖಿಂಪುರ ಪ್ರಕರಣದಲ್ಲಿ ಜಾಮೀನು ಸಿಕ್ಕರೂ ದಿಲ್ಲಿಯ ಪ್ರಕರಣದಲ್ಲಿ ಜಾಮೀನು ಸಿಗದೆ ಹೊರಬರುವಂತಿಲ್ಲ!

ಜುಬೇರ್‌ ಮೇಲಿರುವ ಆರೋಪ ಏನು?

ಆಲ್ಟ್‌ ನ್ಯೂಸ್‌ (alt news) ಮಾಧ್ಯಮದಲ್ಲಿ ಫ್ಯಾಕ್ಟ್‌ ಚೆಕ್‌ ನೆಪದಲ್ಲಿ ಅನೇಕ ವಿವಾದ ಸೃಷ್ಟಿಸಿದ ಆರೋಪ ಜುಬೇರ್‌ ಮೇಲಿದೆ. ಈ ಮಾಧ್ಯಮದಲ್ಲಿ ಸಾಮಾನ್ಯವಾಗಿ ಹಿಂದುತ್ವ ವಿರೋಧಿ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅನೇಕ ಸುದ್ದಿಗಳನ್ನು ಪೋಸ್ಟ್‌ ಮಾಡಲಾಗುತ್ತಿತ್ತು. ಇದು ವಿವಾದದ ಕಿಡಿ ಎಬ್ಬಿಸುತ್ತಿತ್ತು. ಜುಬೇರ್ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿಭಾಗ 153 (ಉದ್ದೇಶಪೂರ್ವಕ ಕೋಮು ಗಲಭೆಗೆ ಪ್ರಚೋದನೆ ನೀಡುವುದು) ಹಾಗೂ ವಿಭಾಗ 295A (ಒಂದು ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ದೆಹಲಿ ಪೊಲೀಸ್‌ ಇಲಾಖೆಯ ಇಂಟಲಿಜೆನ್ಸ್‌ ಫ್ಯೂಷನ್‌ ಹಾಗೂ ಸ್ಟ್ರಾಟಜಿಕ್‌ ಆಪರೇಷನ್ ವಿಭಾಗ ಜುಬೇರ್‌ನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದೆ. ಈತ ದೇಶದಲ್ಲಿ ಸಮುದಾಯಗಳ ನಡುವಿನ ಸೌಹಾರ್ದತೆ ಹಾಳು ಮಾಡುವಂತಹ ಟ್ವೀಟ್‌ ಮಾಡಿದ್ದಾನೆ ಎಂಬ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. 2020ರಲ್ಲೂ ಕೋಮು ಪ್ರಚೋದನಕಾರಿ ಟ್ವೀಟ್‌ ಮಾಡಿದ ಆರೋಪದಲ್ಲಿ ಜುಬೇರ್‌ನನ್ನು ಬಂಧಿಸಲಾಗತ್ತು. ಆ ಪ್ರಕರಣದಲ್ಲಿ ಜುಬೇರ್‌ ವಿರುದ್ಧ ಆಕ್ಷೇಪಾರ್ಹ ಸಂಗತಿ ಕಂಡುಬಂದಿಲ್ಲ ಎಂದು ಹೇಳಲಾಗಿತ್ತು. ಈಗ ಮತ್ತೊಮ್ಮೆ ಅದೇ ಪ್ರಕರಣದಲ್ಲಿ ಬಂಧಿಸಲಾಗಿದೆ.

ಇದನ್ನೂ ಓದಿ| ಆಲ್ಟ್‌ ನ್ಯೂಸ್‌ ಸಹ ಸ್ಥಾಪಕ ಮೊಹಮ್ಮದ್‌ ಜುಬೇರ್‌ಗೆ 14 ದಿನ ನ್ಯಾಯಾಂಗ ಬಂಧನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Suraj Revanna Case: ಸೂರಜ್ ರೇವಣ್ಣ ಮತ್ತೆ 2 ದಿನ ಸಿಐಡಿ ಕಸ್ಟಡಿಗೆ; ವಕೀಲ ದೇವರಾಜೇಗೌಡಗೆ ಜಾಮೀನು

Suraj Revanna Case: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ 8 ದಿನ ಸಿಐಡಿ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ 42ನೇ ಎಸಿಎಂಎಂ ಕೋರ್ಟ್‌ಗೆ ಸೂರಜ್ ರೇವಣ್ಣನನ್ನು ಹಾಜರುಪಡಿಸಲಾಗಿತ್ತು. ಅವರಿಗೆ ಮತ್ತೆ 2 ದಿನ ಸಿಐಡಿ ಕಸ್ಟಡಿಗೆ ನೀಡಿ ಕೋರ್ಟ್‌ ಆದೇಶಿಸಿದೆ.

VISTARANEWS.COM


on

Suraj Revanna Case
Koo

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನವಾಗಿರುವ ಸೂರಜ್ ರೇವಣ್ಣನನ್ನು (Suraj Revanna Case) ಮತ್ತೆ ಎರಡು ದಿನ ಸಿಐಡಿ ಕಸ್ಟಡಿಗೆ ನೀಡಲು 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶ ಕೆ.ಎನ್. ಶಿವಕುಮಾರ್ ಆದೇಶ ನೀಡಿದ್ದಾರೆ. ಮತ್ತೊಂದೆಡೆ ಅತ್ಯಾಚಾರ ಪ್ರಕರಣದಲ್ಲಿ ಬಂಧನವಾಗಿದ್ದ ವಕೀಲ ದೇವರಾಜೇಗೌಡಗೆ ಜಾಮೀನು ಸಿಕ್ಕಿದೆ.

ಯುವಕನೊಬ್ಬನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಅರೋಪದಡಿ ದಾಖಲಾದ ಪ್ರಕರಣದಲ್ಲಿ ಜೂನ್‌ 22ರಂದು ಸೂರಜ್‌ ರೇವಣ್ಣನನ್ನು ಹೊಳೆನರಸೀಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದರು. ನಂತರ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ 8 ದಿನ ಸಿಐಡಿ ಕಸ್ಟಡಿಗೆ ಒಪ್ಪಿಸಲಾಗಿತ್ತು. ಇಂದು ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಕೋರ್ಟ್‌ಗೆ ಸೂರಜ್‌ನ ಹಾಜರುಪಡಿಸಲಾಗಿತ್ತು. ಹೀಗಾಗಿ ಪ್ರಕರಣದ ವಿಚಾರಣೆ ನಡೆಸಿರುವ ಕೋರ್ಟ್‌ ಸೂರಜ್‌ಗೆ ಜುಲೈ 3ರವರೆಗೆ ಕಸ್ಟಡಿ ವಿಸ್ತರಿಸಿದೆ.

ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ ವೇಳೆ ಮತ್ತೆ ಆರು ದಿನ ಕಸ್ಟಡಿಗೆ ನೀಡುವಂತೆ ಎಸ್‌ಪಿಪಿ ಅಶೋಕ್ ನಾಯಕ್ ಮನವಿ ಮಾಡಿದರು. ವಾಯ್ಸ್ ಸ್ಯಾಂಪಲ್ಸ್ ಸಂಗ್ರಹ ಮಾಡಬೇಕಿದೆ, ಪ್ರತಿನಿತ್ಯ ಏನೆಲ್ಲಾ ತನಿಖೆ ನಡೆದಿದೆ, ನಡೆಯುತ್ತಿದೆ ಎಂದು ಮಾಹಿತಿ ನೀಡಿದರು. ಈ ವೇಳೆ ಎಂಟು ದಿನ ಕಸ್ಟಡಿಯಲ್ಲಿದ್ದಾಗ ಏನಾದೂ ತೊಂದರೆ ನೀಡಿದರಾ ಎಂದು ಸೂರಜ್‌ಗೆ ಜಡ್ಜ್ ಪ್ರಶ್ನೆ ಕೇಳಿದರು. ಯಾವುದೇ ತೊಂದರೆ ನೀಡಿಲ್ಲ ಎಂದು ಸೂರಜ್ ಉತ್ತರಿಸಿದ್ದಾರೆ. ಬಳಿಕ 2 ದಿನ ಕಸ್ಟಡಿ ವಿಸ್ತರಿಸಲು ನ್ಯಾಯಾಧೀಶರು ಸೂಚಿಸಿದ್ದಾರೆ.

ಇದನ್ನೂ ಓದಿ | New Criminal Law: ರಾಜ್ಯದ ಮೊದಲ ಬಿಎನ್‌ಎಸ್‌ ಪ್ರಕರಣ ಹಾಸನದಲ್ಲಿ ದಾಖಲು, ಯಾವ ಕೇಸ್?‌

ವಕೀಲ ದೇವರಾಜೇಗೌಡಗೆ ಜಾಮೀನು

Prajwal Revanna case Devaraje Gowda should be given mental treatment says Congress

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ವಕೀಲ ದೇವರಾಜೇಗೌಡಗೆ ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿದೆ. 2023ರ ಡಿ.29ರಂದು ರಂದು ಅತ್ಯಾಚಾರ ಮಾಡಿದ್ದಾರೆ ಎಂದು 2024ರ ಏ.1 ರಂದು ಸಂತ್ರಸ್ತೆ ದೂರು ನೀಡಿದ್ದರು. ಇದಕ್ಕೂ ಮೊದಲು ಹನಿಟ್ರ್ಯಾಪ್ ಎಂದು ದೇವರಾಜೇಗೌಡ ಮಾ.28 ರಂದು ದೂರು ನೀಡಿದ್ದರು. ಇದೀಗ ಪ್ರಕರಣದಲ್ಲಿ ವಕೀಲ ದೇವರಾಜೇಗೌಡಗೆ ಜಾಮೀನು ನೀಡಲಾಗಿದೆ.

ಮಾರ್ಚ್ 29 ರಂದು ದೇವರಾಜೇಗೌಡ ವಿರುದ್ಧ ಸಂತ್ರಸ್ತೆ ಪತಿ ದೂರು ನೀಡಿದ್ದರು. ಅದರಲ್ಲಿ ಅತ್ಯಾಚಾರದ ಬಗ್ಗೆ ಯಾವುದೇ ಚಕಾರವಿಲ್ಲ. ಈ ಪ್ರಕರಣದಲ್ಲಿ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದಾರೆ ಎಂದು ದೇವರಾಜೇಗೌಡ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದ್ದಾರೆ. ವಾದ-ಪ್ರತಿವಾದ ಆಲಿಸಿದ ಬಳಿಕ ವಕೀಲ ದೇವರಾಜೇಗೌಡಗೆ ನ್ಯಾ. ಎಂ.ಜಿ.ಉಮಾ ಅವರಿದ್ದ ಹೈಕೋರ್ಟ್ ಪೀಠ ಜಾಮೀನು ನೀಡಿ ಆದೇಶಿಸಿದೆ.

ವಕೀಲ ದೇವರಾಜೇಗೌಡ ಬಂಧನವಾಗಿದ್ದು ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಾದರೂ ಹಾಸನ ಪೆನ್ ಡ್ರೈವ್ ಪ್ರಕರಣಕ್ಕೇ ತಳುಕು ಹಾಕಿಕೊಂಡಿದೆ. ಈಗಾಗಲೇ ಮಾಜಿ ಸಂಸದ ಶಿವರಾಮೇಗೌಡ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ವಿರುದ್ಧ ಗಂಭೀರ ಆರೋಪ ಮಾಡಿದ್ದಲ್ಲದೆ, ಅವರ ಜತೆಗಿನ ಮಾತುಕತೆ ಎನ್ನಲಾದ ಆಡಿಯೊವನ್ನು ಬಿಡುಗಡೆ ಮಾಡಿದ್ದರು. ಇದಲ್ಲದೆ, ಸಾಕಷ್ಟು ವಿಡಿಯೊಗಳು, ಸಾಕ್ಷಿಗಳು ಸಹ ತಮ್ಮ ಬಳಿ ಇದೆ ಎಂದು ಹೇಳಿಕೊಂಡಿದ್ದರು. ಸಾಕ್ಷ್ಯಗಳನ್ನು ಮುಂದಿನ ದಿನಗಳಲ್ಲಿ ಸಿಬಿಐ ಮುಂದೆ ಇಡುತ್ತೇನೆ ಎಂದು ಸಹ ಸುದ್ದಿಗೋಷ್ಠಿ ನಡೆಸಿ ನೇರವಾಗಿ ರಾಜ್ಯ ಸರ್ಕಾರದ ವಿರುದ್ಧ ಸವಾಲು ಹಾಕಿದ್ದರು. ಆದರೆ, ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಅವರನ್ನು ಬಂಧಿಸಲಾಗಿತ್ತು.

Continue Reading

ಕ್ರೈಂ

New Criminal Law: ರಾಜ್ಯದ ಮೊದಲ ಬಿಎನ್‌ಎಸ್‌ ಪ್ರಕರಣ ಹಾಸನದಲ್ಲಿ ದಾಖಲು, ಯಾವ ಕೇಸ್?‌

New Criminal Law: ಹಾಸನ ರೂರಲ್ ಪೊಲೀಸ್ ಠಾಣೆಯಲ್ಲಿ ರಾಜ್ಯದ ಈ ಮೊದಲ ಬಿಎನ್ಎಸ್ ಪ್ರಕರಣ ಬೆಳಗ್ಗೆ 6.30‌ಕ್ಕೆ ದಾಖಲಾಗಿದೆ. ವೈದ್ಯ ಶಂಕರೇಗೌಡ ಎಂಬವರು ನೀಡಿದ ದೂರಿನ ಮೇಲೆ ಇದನ್ನು ಕಾಯಿದೆಯ ಸೆಕ್ಷನ್ 281, 106 ಅಡಿ ದಾಖಲು ಮಾಡಿಕೊಳ್ಳಲಾಗಿದೆ.

VISTARANEWS.COM


on

new criminal law
Koo

ಹಾಸನ: ರಾಜ್ಯದಲ್ಲಿ ಮೊದಲ ಬಿಎನ್ಎಸ್ (BNS FIR) ಪ್ರಕರಣ ಹಾಸನದಲ್ಲಿ (Hassan) ದಾಖಲಾಗಿದೆ. ಇಂದಿನಿಂದ ದೇಶಾದ್ಯಂತ ಜಾರಿಯಾಗುತ್ತಿರುವ ನೂತನ ಅಪರಾಧ ಕಾಯಿದೆ (New Criminal law) ಭಾರತೀಯ ನ್ಯಾಯ ಸಂಹಿತೆಯ (Bharatiya Nyaya Sanhita) ಅಡಿಯಲ್ಲಿ ಈ ಪ್ರಕರಣ ದಾಖಲಾಗಿದ್ದು, ಅತಿ ವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯಿಂದ ಮಹಿಳೆಯೊಬ್ಬರ ಸಾವಿಗೆ ಕಾರಣನಾದ ಚಾಲಕನ ಮೇಲೆ ಪ್ರಯೋಗಿಸಲ್ಪಟ್ಟಿದೆ.

ಹಾಸನ ರೂರಲ್ ಪೊಲೀಸ್ ಠಾಣೆಯಲ್ಲಿ ರಾಜ್ಯದ ಈ ಮೊದಲ ಬಿಎನ್ಎಸ್ ಪ್ರಕರಣ ಬೆಳಗ್ಗೆ 6.30‌ಕ್ಕೆ ದಾಖಲಾಗಿದೆ. ವೈದ್ಯ ಶಂಕರೇಗೌಡ ಎಂಬವರು ನೀಡಿದ ದೂರಿನ ಮೇಲೆ ಇದನ್ನು ಕಾಯಿದೆಯ ಸೆಕ್ಷನ್ 281, 106 ಅಡಿ ದಾಖಲು ಮಾಡಿಕೊಳ್ಳಲಾಗಿದೆ. ಸಾಗರ್ ಎಂಬ ಕಾರು ಚಾಲಕನ ಮೇಲೆ ಪ್ರಕರಣ ದಾಖಲಿಸಲಾಗಿದ್ದು, ಈತ ಅತಿ ವೇಗ ಹಾಗು ನಿರ್ಲಕ್ಷ್ಯತನದಿಂದ ವಾಹನ ಚಾಲನೆ ಮಾಡಿ ಮಹಿಳೆಯ ಸಾವಿಗೆ ಕಾರಣನಾಗಿದ್ದಾನೆ ಎಂದು ದೂರಲಾಗಿದೆ.

ದೂರು ನೀಡಿದ ವೈದ್ಯರ ಅತ್ತೆಯಾದ ಇಂದು ಎಂಬ ಮಹಿಳೆ ಮೃತಪಟ್ಟಿದ್ದಾರೆ. ಹಾಸನದ ಹಳೆಬೀಡು ರಸ್ತೆ ಸೀಗೇಗೇಟ್ ಹತ್ತಿರ ಸೇತುವೆಯಿಂದ ಕೆಳಗೆ ಕಾರು ಪಲ್ಟಿಯಾಗಿತ್ತು. ಬೆಂಗಳೂರು ಏರ್‌ಪೋರ್ಟ್‌ನಿಂದ ಶಂಕರೇಗೌಡನರ ಅತ್ತೆ ಇಂದು, ‌ಮಾವ ಯೋಗೇಶ್ ಅವರನ್ನು ಚಾಲಕ ಸಾಗರ್ ಪಿಕಪ್ ಮಾಡಿದ್ದ. ಅಪಘಾತದಲ್ಲಿ ಯೋಗೇಶ್ ಬಚಾವ್ ಆಗಿದ್ದರೆ, ಇಂದು ಸಾವಿಗೀಡಾಗಿದ್ದರು.

ಬೀದಿ ವ್ಯಾಪಾರಿಯ ಮೇಲೆ ಮೊದಲ ಕೇಸ್

ನವದೆಹಲಿ: ಬ್ರಿಟಿಷ್​ ವಸಾಹತು ಕಾಲದ ಕ್ರಿಮಿನಲ್‌ ಕಾನೂನುಗಳಿಗೆ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿದ್ದು, ಇಂದು ಜಾರಿಗೆ ಬಂದಿದೆ (New Criminal Law). ಹೊಸ ಕಾನೂನಿನ ಪ್ರಕಾರ ಹೊಸದಿಲ್ಲಿಯ ರೈಲ್ವೆ ನಿಲ್ದಾಣದ ಬಳಿ ರಸ್ತೆಯ ಸುಗಮ ಸಂಚಾರಕ್ಕೆ ಅಡ್ಡಿಪಡಿಸಿದ ಬೀದಿ ವ್ಯಾಪಾರಿಯ ವಿರುದ್ಧ ಮೊದಲ ಎಫ್ಐಆರ್ ದಾಖಲಿಸಲಾಗಿದೆ.

ಹೊಸ ಕ್ರಿಮಿನಲ್ ಕೋಡ್‌ನ ಸೆಕ್ಷನ್ 285ರ ಅಡಿಯಲ್ಲಿ ಈ ಎಫ್ಐಆರ್ ದಾಖಲಿಸಲಾಗಿದೆ. ಈ ಕಾನೂನಿನ ಪ್ರಕಾರ ಯಾವುದೇ ಸಾರ್ವಜನಿಕ ರಸ್ತೆಗೆ ಅಡ್ಡಿಪಡಿಸಿದರೆ ಅಥವಾ ಸಾರ್ವಜನಿಕ ಮಾರ್ಗದಲ್ಲಿ ಸಂಚರಿಸುವ ಯಾವುದೇ ವ್ಯಕ್ತಿಗೆ ಅಪಾಯ ಅಥವಾ ಗಾಯವನ್ನು ಉಂಟು ಮಾಡಿದರೆ 5 ಸಾವಿರ ರೂಪಾಯಿವರೆಗೆ ದಂಡ ವಿಧಿಸಬಹುದಾಗಿದೆ.‌

ಭಾನುವಾರ ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ರಸ್ತೆಯಲ್ಲಿ ನೀರಿನ ಬಾಟಲಿಗಳು ಮತ್ತು ಗುಟ್ಕಾ ಮಾರಾಟ ಮಾಡುವ ಬೀದಿ ವ್ಯಾಪಾರಿಯನ್ನು ಗುರುತಿಸಿದ ನಂತರ ಎಫ್ಐಆರ್ ದಾಖಲಿಸಲಾಗಿದೆ. ಬೀದಿ ವ್ಯಾಪಾರಿಯ ತಾತ್ಕಾಲಿಕ ಅಂಗಡಿಯು ರಸ್ತೆಗೆ ಅಡ್ಡವಾಗಿ ನಿಂತಿತ್ತು. ಅದನ್ನು ಸ್ಥಳಾಂತರಿಸಲು ಪೊಲೀಸ್‌ ಸಿಬ್ಬಂದಿ ಕೇಳಿಕೊಂಡರೂ ಒಪ್ಪದೇ ಇದ್ದಾಗ ಎಫ್ಐಆರ್ ದಾಖಲಿಸಲಾಗಿದೆ.

ಎಫ್‌ಐಆರ್‌ನಲ್ಲಿ ಏನಿದೆ?

ಬೀದಿ ಬದಿ ವ್ಯಾಪಾರಿ ಭಾನುವಾರ ರಾತ್ರಿ ನವದೆಹಲಿ ರೈಲ್ವೆ ನಿಲ್ದಾಣದ ಬಳಿಯ ಪಾದಚಾರಿ ಮೇಲ್ಸೇತುವೆಯ ಕೆಳಗೆ ತನ್ನ ಅಂಗಡಿಯನ್ನು ನಿಲ್ಲಿಸಿದ್ದ ಎಂದು ಹೇಳಲಾಗಿದೆ. “ಆ ವ್ಯಾಪಾರಿಯು ಬೀದಿಯಲ್ಲಿ ನೀರಿನ ಬಾಟಲಿ, ಬೀಡಿ ಮತ್ತು ಸಿಗರೇಟುಗಳನ್ನು ಮಾರಾಟ ಮಾಡುತ್ತಿದ್ದ. ಸಾರ್ವಜನಿಕರ ಸುಗಮ ಸಂಚಾರಕ್ಕೆ ಆತನ ಅಂಗಡಿ ಅಡ್ಡಿಯಾಗುತ್ತಿತ್ತು. ರಸ್ತೆಯಿಂದ ಅಂಗಡಿಯನ್ನು ತೆರವುಗೊಳಿಸುವಂತೆ ಸಬ್ ಇನ್ಸ್‌ಪೆಕ್ಟರ್ ಆ ವ್ಯಾಪಾರಿ ಬಳಿ ಹಲವು ಬಾರಿ ಮನವಿ ಮಾಡಿದರು. ಆದರೆ ಆತ ಅದಕ್ಕೆ ಒಪ್ಪಲಿಲ್ಲ” ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ. ವ್ಯಾಪಾರಿಯನ್ನು ಬಿಹಾರದ ಪಾಟ್ನಾ ಮೂಲದ ಪಂಕಜ್ ಕುಮಾರ್ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: Amit Shah: ಹೊಸ ಕ್ರಿಮಿನಲ್ ಕಾನೂನಿನಲ್ಲಿ ಶಿಕ್ಷೆಯ ಬದಲು ನ್ಯಾಯಕ್ಕೆ ಪ್ರಾಧಾನ್ಯತೆ; ಅಮಿತ್ ಶಾ

Continue Reading

ತುಮಕೂರು

Tumkur News : ತುಮಕೂರಿನಲ್ಲಿ ಗ್ರಾಪಂ ಸದಸ್ಯನ ಮೇಲೆ ಚಪ್ಪಲಿ ಎಸೆದು ಮನಬಂದಂತೆ ಥಳಿಸಿದ ಉಪಾಧ್ಯಕ್ಷ!

Tumkur News : ತಂಡಗ ಗ್ರಾಮ ಪಂಚಾಯತಿ ಅಧ್ಯಕ್ಷನ ಅವಿಶ್ವಾಸ ಮಂಡನೆಗೆ ಸಹಿ ಹಾಕಲು ನಿರಾಕರಿಸಿದ್ದಕ್ಕೆ ಗ್ರಾಪಂ ಸದಸ್ಯನ ಮೇಲೆ ಚಪ್ಪಲಿ ಎಸೆದು ಉಪಾಧ್ಯಕ್ಷ ಹಲ್ಲೆ (Assault Case) ನಡೆಸಿದ್ದಾನೆ.

VISTARANEWS.COM


on

By

tumkur News Assault Case
Koo

ತುಮಕೂರು: ಮದುವೆ ಸಮಾರಂಭಕ್ಕೆ ಹೋಗಿದ್ದಾಗ ಗ್ರಾಮ ಪಂಚಾಯತಿ ಸದಸ್ಯನ ಮೇಲೆ ಚಪ್ಪಲಿಯಿಂದ ಹಲ್ಲೆ (Assault Case) ನಡೆಸಲಾಗಿದೆ. ಹಲ್ಲೆ ದೃಶ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿ (Tumkur news) ಘಟನೆ ನಡೆದಿದೆ.

ತುರುವೇಕೆರೆ ತಾಲೂಕಿನ ತಂಡಗ ಗ್ರಾಮ ಪಂಚಾಯತಿಯ ಸದಸ್ಯ ಮೋಹನ್ ಎಂಬಾತನ ಮೇಲೆ ಉಪಧ್ಯಾಕ್ಷ ಚನ್ನಬಸವೇಗೌಡನಿಂದ ಹಲ್ಲೆ ನಡೆದಿದೆ. ತಂಡಗ ಗ್ರಾಮ ಪಂಚಾಯತಿ ಅಧ್ಯಕ್ಷನ ಅವಿಶ್ವಾಸ ಮಂಡನೆಗೆ ಸಹಿ ಹಾಕಲು ಮೋಹನ್ ನಿರಾಕರಿಸಿದ್ದರು ಎನ್ನಲಾಗಿದೆ. ಹೀಗಾಗಿ ಸಹಿ ಹಾಕುವಂತೆ ಮೋಹನ್‌ಗೆ ಚನ್ನಬಸವೇಗೌಡ ಒತ್ತಾಯಿಸಿದ್ದರು.

ಸಹಿ ಹಾಕಲು ಒಪ್ಪದಿದ್ದಾಗ ಚನ್ನಬಸವೇಗೌಡ ಸಿಟ್ಟಿನಲ್ಲಿ ಮುಖಕ್ಕೆ ಹೊಡೆದು ಚಪ್ಪಲಿಯಿಂದ ಹಲ್ಲೆ ನಡೆಸಿದ್ದಾರೆ. ಮದುವೆ ಸಮಾರಂಭಕ್ಕೆ ಹೋಗಿದ್ದ ವೇಳೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ. ಸದ್ಯ ಘಟನೆ ಸಂಬಂಧ ನೊಣವಿನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Assault case: ಹುಬ್ಬಳ್ಳಿಯಲ್ಲಿ ಪುಡಿ ರೌಡಿಗಳ ಗ್ಯಾಂಗ್ ವಾರ್! ನಡುರಸ್ತೆಯಲ್ಲೆ ಹೊಡಿಬಡಿ

ಕಚೇರಿಗೆ ನುಗ್ಗಿ ದರದರನೆ ಎಳೆದು ಪಿಡಿಓ ಥಳಿಸಿದ ಪುಂಡರ ಗ್ಯಾಂಗ್‌!

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿ ಕರ್ತವ್ಯನಿರತ ಪಿಡಿಓ (PDO) ಮೇಲೆ ಹಲ್ಲೆ (Assault Case) ನಡೆದಿದೆ. ಪಿಡಿಓ ವಿವೇಕ್ ತೇಜಸ್ವಿ ಎಂಬುವವರು ಹಲ್ಲೆಗೊಳಗಾಗಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಹೊಸ ಯಳನಾಡು ಗ್ರಾಮ ಪಂಚಾಯತಿ ಮುಂಭಾಗದಲ್ಲಿ ಘಟನೆ ನಡೆದಿದೆ. ಹಲ್ಲೆ ನಡೆಸುವ ವಿಡಿಯೊ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕಳೆದ ಜೂನ್‌ 29ರ ಬೆಳಗ್ಗೆ ಹೊಸಯಳನಾಡು ಗ್ರಾಮ ಪಂಚಾಯತಿಗೆ ಆಲೂರು ಗ್ರಾಮದ ಬಾಲ ರಾಮಯ್ಯ, ಅಜ್ಜಯ್ಯ ಸಿದ್ದರಾಮೇಶ್ವರ, ಬೋರ್ ವೆಲ್ ರಾಮಚಂದ್ರಪ್ಪ ಎಂಬುವವರು ಬಂದಿದ್ದರು. ಕಚೇರಿಯೊಳಗೆ ನುಗ್ಗಿ ಬಂದವರೇ ಪಿಡಿಒ ವಿವೇಕ್‌ ತೇಜಸ್ವಿ ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ನಿನ್ನಿಂದ ಆಲೂರು ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಸರಿಯಾಗಿ ನೀರು ಸರಬಾರಜು ಆಗುತ್ತಿಲ್ಲ ಎಂದು ಹೇಳಿ ದರದರನೇ ಹೊರಗಡೆ ಎಳೆದುಹೋಗಿದ್ದಾರೆ.

ಬಳಿಕ ಹತ್ತಾರು ಮಂದಿ ವಿವೇಕ್‌ ಅವರನ್ನು ಸುತ್ತುವರೆದು ಜಗಳವಾಡಿ ಮನಬಂದಂತೆ ಥಳಿಸಿದ್ದಾರೆ. ಇತ್ತ ವಿವೇಕ್‌ ತೇಜಸ್ವಿ ಅವರ ಕೂಗಾಟ ಕೇಳಿ ಹೊರ ಬಂದ ಇತರೆ ಸಿಬ್ಬಂದಿ ಜಗಳವನ್ನು ಬಿಡಿಸಿದ್ದಾರೆ. ಈ ವೇಳೆ ನಿನಗೆ ಕೆಲಸ ಮಾಡಲು ಬಿಡುವುದಿಲ್ಲ ಎಂದೇಳಿ ಬೆದರಿಕೆಯನ್ನು ಹಾಕಿದ್ದಾರೆ.

ಹಲ್ಲೆ ಬಳಿಕ ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ. ಇವರ ವಿರುದ್ಧ ಐಪಿಸಿ 323, 504, 353, 506 ಅಟ್ರಾಸಿಟಿ ಕಾಯ್ದೆಯಡಿ ಕೇಸ್ ದಾಖಲಾಗಿದೆ. ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಮಾಹಿತಿ ಕಲೆಹಾಕಿದ್ದಾರೆ. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಹುಬ್ಬಳ್ಳಿ

Assault case: ಹುಬ್ಬಳ್ಳಿಯಲ್ಲಿ ಪುಡಿ ರೌಡಿಗಳ ಗ್ಯಾಂಗ್ ವಾರ್! ನಡುರಸ್ತೆಯಲ್ಲೆ ಹೊಡಿಬಡಿ

Assault case : ಹುಬ್ಬಳ್ಳಿಯಲ್ಲಿ ಪ್ರತ್ಯೇಕ ಕಡೆಗಳಲ್ಲಿ ಹೊಡೆದಾಟ ಬಡಿದಾಟ ನಡೆದಿದೆ. ಪುಡಿ ರೌಡಿಗಳ ಗ್ಯಾಂಗ್‌ ವಾರ್‌ ನಡೆದಿದ್ದು, ದೂರು-ಪ್ರತಿದೂರು ದಾಖಲಾಗಿದೆ. ಇತ್ತ ತುಮಕೂರಿನಲ್ಲಿ ಗ್ರಾಪಂ ಸದಸ್ಯನ ಮೇಲೆ ಉಪಾಧ್ಯಕ್ಷ ಚಪ್ಪಲಿ ಎಸೆದು ಹಲ್ಲೆ ನಡೆಸಿದ್ದಾನೆ.

VISTARANEWS.COM


on

By

Assault Case in Hubballi
Koo

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಪುಡಿ ರೌಡಿಗಳ ನಡುವೆ ಗ್ಯಾಂಗ್ ವಾರ್ (Gang War) ನಡೆದಿದ್ದು, ಎರಡು ಗ್ಯಾಂಗ್‌ಗಳಿಂದ ದೂರು ಪ್ರತಿದೂರು ದಾಖಲಾಗಿದೆ. ಗನ್ ತೋರಿಸಿ‌ ಕೊಲೆ ಮಾಡಲು ಯತ್ನಿಸಿರುವ ಆರೋಪದಡಿ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ (Assault case) ದಾಖಲಾಗಿದೆ.

ಸುಂದರ್, ಪಿಲೋಮಿನ್, ಚಂದ್ರ ಪೌಲ್ ಎಂಬುವವರ ವಿರುದ್ಧ ಹುಬ್ಬಳ್ಳಿಯ ಸೆಟ್ಲಮೆಂಟ್ ನಿವಾಸಿ ಅಭಿಷೇಕ್ ಜಾಧವ್ ದೂರು ನೀಡಿದ್ದಾರೆ. ಕಾಂಗ್ರೆಸ್ ಮುಖಂಡ ಶಾಮ್ ಜಾಧವ ಹಾಗೂ ಪಾಲಿಕೆ ಸದಸ್ಯೆ ಮಂಜುಳಾ ಜಾಧವ ಅವರ ಪುತ್ರ ಅಭಿಷೇಕ್ ಜಾಧವ್‌ಗೆ ಈ ಆರೋಪಿಗಳು ಹುಬ್ಬಳ್ಳಿಗೆ ನಾವೇ ಡಾನ್‌ಗಳು ಎಂದು‌ ಧಮ್ಕಿ ಹಾಕಿದ್ದರಂತೆ.

ಇತ್ತ ಸುಂದರ ಪೌಲ್ ಆ್ಯಂಡ್ ಟೀಮ್ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರತಿ ದೂರು ದಾಖಲಿಸಿದ್ದಾರೆ. ಅಭಿಷೇಕ್‌ ಜಾಧವ್ ಗ್ಯಾಂಗ್‌ನವರು ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು ನಾಲ್ವರ ವಿರುದ್ಧ ದೂರು ನೀಡಿದ್ದಾರೆ. ಹಲವು ಕ್ರಿಮಿನಲ್ ಆರೋಪ ಹೊತ್ತಿರುವ ಈ ಎರಡು ಗ್ಯಾಂಗ್‌ಗಳ ನಡುವೆ ಕಲಹ ಶುರುವಾಗಿದೆ. ಈ ಮಧ್ಯೆ ಪರಸ್ಪರ ಅವಾಜ್ ಹಾಕಿರುವ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: Murder Case : ರೌಡಿಯಾಗಲು ಹೊರಟವನನ್ನು ಕೊಂದು ಹಾಕಿದ್ರು ಪುಂಡರು

ಕ್ಷುಲ್ಲಕ ಕಾರಣಕ್ಕೆ ಹುಬ್ಬಳ್ಳಿಯಲ್ಲಿ ಮಾರಾಮಾರಿ

ಹುಬ್ಬಳ್ಳಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಮಾರಣಾಂತಿಕ ಹಲ್ಲೆ ಮಾಡಿದವರ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಹುಬ್ಬಳ್ಳಿಯ ಸೆಟ್ಲ್‌ಮೆಂಟ್‌‌ ಏರಿಯಾದಲ್ಲಿ ಪ್ರಜ್ವಲ ಬೆಳ್ಳಿಗಟ್ಟಿ, ವಿಕಾಸ ಭಜಂತ್ರಿ ಎಂಬುವವರ ಸ್ವಯಂ ಜಾಧವ, ಪ್ರಜ್ವಲ ಜಾಧವ ಎಂಬುವವರು ಗುಂಪು ಹಲ್ಲೆ ಮಾಡಿದ್ದಾರೆ ಎಂಬ ಆರೋಪವಿದೆ.

assault Case in hubballi

ಕ್ರಿಮಿನಲ್ ಹಿನ್ನೆಲೆ ಇರುವವರಿಗೆ ಹೊಂದಾಣಿಕೆಗೆ ಅವಕಾಶ ಕೊಟ್ಟು ಪೊಲೀಸರು ಸುಮ್ಮನಾಗಿದ್ದಾರೆ ಎಂದು ಹಲ್ಲೆಗೊಳಗಾದ ಗುಂಪು ಆರೋಪಿಸಿವೆ. ಇನ್ನೂ ಹಲ್ಲೆಗೊಳಗಾದವರು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಪೊಲೀಸರು ಗಾಯಾಳುಗಳ MLC ಮಾಡಿ ಸುಮ್ಮನಾಗಿದ್ದಾರೆ. ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ತುಮಕೂರಿನಲ್ಲಿ ಗ್ರಾಪಂ ಸದಸ್ಯನ ಮೇಲೆ ಚಪ್ಪಲಿ ಎಸೆತ

ಮದುವೆ ಸಮಾರಂಭಕ್ಕೆ ಹೋಗಿದ್ದಾಗ ಗ್ರಾಮ ಪಂಚಾಯತಿ ಸದಸ್ಯನ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಲಾಗಿದೆ. ಹಲ್ಲೆ ದೃಶ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿ ಘಟನೆ ನಡೆದಿದೆ.

ತುರುವೇಕೆರೆ ತಾಲೂಕಿನ ತಂಡಗ ಗ್ರಾಮ ಪಂಚಾಯತಿಯ ಸದಸ್ಯ ಮೋಹನ್ ಮೇಲೆ ಉಪಧ್ಯಾಕ್ಷ ಚನ್ನಬಸವೇಗೌಡನಿಂದ ಹಲ್ಲೆ ನಡೆದಿದೆ. ತಂಡಗ ಗ್ರಾಮ ಪಂಚಾಯತಿ ಅಧ್ಯಕ್ಷನ ಅವಿಶ್ವಾಸ ಮಂಡನೆಗೆ ಸಹಿ ಹಾಕಲು ಮೋಹನ್ ನಿರಾಕರಿಸಿದ್ದರು ಎನ್ನಲಾಗಿದೆ.

ಹೀಗಾಗಿ ಸಹಿ ಹಾಕುವಂತೆ ಮೋಹನ್‌ಗೆ ಚನ್ನಬಸವೇಗೌಡ ಒತ್ತಾಯಿಸಿದ್ದರು. ಸಹಿ ಹಾಕಲು ಒಪ್ಪದಿದ್ದಾಗ ಚನ್ನಬಸವೇಗೌಡ ಸಿಟ್ಟಿನಲ್ಲಿ ಮುಖಕ್ಕೆ ಹೊಡೆದು ಚಪ್ಪಲಿಯಿಂದ ಹಲ್ಲೆ ನಡೆಸಿದ್ದಾರೆ. ಮದುವೆ ಸಮಾರಂಭಕ್ಕೆ ಹೋಗಿದ್ದ ವೇಳೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ. ಸದ್ಯ ಘಟನೆ ಸಂಬಂಧ ನೊಣವಿನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Arecanut Insurance Karnataka last date
ಕೃಷಿ9 mins ago

Arecanut Insurance : ಮೆಣಸು, ಅಡಿಕೆಗೆ ವಿಮೆ ಪ್ರೀಮಿಯಂ ಕಟ್ಟಲು ಜು.31 ಕೊನೆಯ ದಿನ

Thalapathy Vijay
Latest29 mins ago

Thalapathy Vijay: ದಳಪತಿ ವಿಜಯ್‌ಗೆ ಭುಜದ ಮೇಲಿನ ಕೈ ತೆಗೆಯಲು ಹೇಳಿದ ಹುಡುಗಿ; ವಿಡಿಯೊ ವೈರಲ್

The whole society should be very careful about fake news says CM Siddaramaiah
ಕರ್ನಾಟಕ31 mins ago

Press Day: ಸುಳ್ಳು ಸುದ್ದಿಗಳ ಮೇಲೆ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ: ಸಿದ್ದರಾಮಯ್ಯ

Money Guide
ಮನಿ-ಗೈಡ್39 mins ago

Money Guide: ವಿದೇಶ ಪ್ರವಾಸಕ್ಕೆ ಮುಂದಾಗಿದ್ದೀರಾ? ಅತ್ಯುತ್ತಮ ಕೊಡುಗೆ ನೀಡುವ ಈ ಅಂತಾರಾಷ್ಟ್ರೀಯ ಡೆಬಿಟ್ ಕಾರ್ಡ್‌ ಬಗ್ಗೆ ತಿಳಿಯಿರಿ

Suraj Revanna Case
ಪ್ರಮುಖ ಸುದ್ದಿ55 mins ago

Suraj Revanna Case: ಸೂರಜ್ ರೇವಣ್ಣ ಮತ್ತೆ 2 ದಿನ ಸಿಐಡಿ ಕಸ್ಟಡಿಗೆ; ವಕೀಲ ದೇವರಾಜೇಗೌಡಗೆ ಜಾಮೀನು

Actor Yash to recreate the 50s and 70s era in Toxic
ಸಿನಿಮಾ1 hour ago

Actor Yash: ರಾಕಿಂಗ್‌ ಸ್ಟಾರ್‌ ಯಶ್‌ ʼಟಾಕ್ಸಿಕ್‌ʼ ಸಿನಿಮಾದಿಂದ ಹೊರ ಬಿತ್ತು ಬಿಗ್‌ ಅಪ್‌ಡೇಟ್‌!

New Rules
ವಾಣಿಜ್ಯ1 hour ago

New Rules: ಐಟಿಆರ್‌ನಿಂದ ಕ್ರೆಡಿಟ್ ಕಾರ್ಡ್‌ವರೆಗೆ; ಈ ತಿಂಗಳಲ್ಲಿ ಹಲವು ಹೊಸ ಬದಲಾವಣೆ

new criminal law
ಕ್ರೈಂ2 hours ago

New Criminal Law: ರಾಜ್ಯದ ಮೊದಲ ಬಿಎನ್‌ಎಸ್‌ ಪ್ರಕರಣ ಹಾಸನದಲ್ಲಿ ದಾಖಲು, ಯಾವ ಕೇಸ್?‌

tumkur News Assault Case
ತುಮಕೂರು2 hours ago

Tumkur News : ತುಮಕೂರಿನಲ್ಲಿ ಗ್ರಾಪಂ ಸದಸ್ಯನ ಮೇಲೆ ಚಪ್ಪಲಿ ಎಸೆದು ಮನಬಂದಂತೆ ಥಳಿಸಿದ ಉಪಾಧ್ಯಕ್ಷ!

Amith Shah
ದೇಶ2 hours ago

Amit Shah: ಹೊಸ ಕ್ರಿಮಿನಲ್ ಕಾನೂನಿನಲ್ಲಿ ಶಿಕ್ಷೆಯ ಬದಲು ನ್ಯಾಯಕ್ಕೆ ಪ್ರಾಧಾನ್ಯತೆ; ಅಮಿತ್ ಶಾ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ23 hours ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು1 day ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ2 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ2 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ3 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು4 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ4 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಟ್ರೆಂಡಿಂಗ್‌