Asian Games 2023: ಹ್ಯಾಟ್ರಿಕ್​ ಚಿನ್ನ ಗೆದ್ದ ಭಾರತ; ಪದಕ ಸಂಖ್ಯೆ 84ಕ್ಕೆ ಏರಿಕೆ - Vistara News

ಕ್ರೀಡೆ

Asian Games 2023: ಹ್ಯಾಟ್ರಿಕ್​ ಚಿನ್ನ ಗೆದ್ದ ಭಾರತ; ಪದಕ ಸಂಖ್ಯೆ 84ಕ್ಕೆ ಏರಿಕೆ

ಏಷ್ಯನ್​ ಗೇಮ್ಸ್​ನಲ್ಲಿ(Asian Games 2023) ಗುರುವಾರ, ಭಾರತ ಮುಟ್ಟಿದೆಲ್ಲ ಚಿನ್ನ ಎಂಬಂತೆ ಮೂರು ಚಿನ್ನದ ಪದಕ ಗೆದ್ದುಕೊಂಡಿದೆ.

VISTARANEWS.COM


on

archery
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹ್ಯಾಂಗ್‌ಝೌ: ಇಲ್ಲಿ ನಡೆಯುತ್ತಿರುವ ಏಷ್ಯನ್​ ಗೇಮ್ಸ್​ನಲ್ಲಿ(Asian Games 2023) ಗುರುವಾರ, ಭಾರತ ಮುಟ್ಟಿದೆಲ್ಲ ಚಿನ್ನ ಎಂಬಂತೆ ಮೂರು ಚಿನ್ನದ ಪದಕ ಗೆದ್ದುಕೊಂಡಿದೆ. ಇದರಲ್ಲಿ ಎರಡು ಚಿನ್ನ ಆರ್ಚರಿಯಲ್ಲಿ ದಾಖಲಾದರೆ, ಮತ್ತೊಂದು ಚಿನ್ನ ಸ್ಕ್ವಾಷ್​ನಲ್ಲಿ ದೊರಕಿತು. ಮಧ್ಯಾಹ್ನ ನಡೆದ ಪುರಷರ ಆರ್ಚರಿ ತಂಡದ ಫೈನಲ್​ನಲ್ಲಿ ಭಾರತದ ಓಜಸ್ ಡಿಯೋಟಾಲೆ, ಅಭಿಷೇಕ್ ವರ್ಮಾ ಮತ್ತು ಪ್ರಥಮೇಶ್ ಜಾವ್ಕರ್ ಅವರು ಕೊರಿಯಾವನ್ನು 230-235 ಅಂಕಗಳಿಂದ ಸೋಲಿಸಿ ಚಿನ್ನ ಗೆದ್ದರು. ಈ ಮೂಲಕ ಭಾರತದ ಚಿನ್ನದ ಪದಕ ಸಂಖ್ಯೆ 21ಕ್ಕೆ ಏರಿದೆ. ಮಹಿಳಾ ಹಾಕಿ ಸೆಮಿಫೈನಲ್​ ಪಂದ್ಯದಲ್ಲಿ ಭಾರತ ತಂಡ ಚೀನಾ ವಿರುದ್ಧ 4-0 ಗೋಲ್​ಗಳಿಂದ ಸೋತು ನಿರಾಸೆ ಮೂಡಿಸಿದರು.

ಇದಕ್ಕೂ ಮುನ್ನ ನಡೆದ ಮಹಿಳೆಯರ ಕಾಂಪೌಂಡ್ ಆರ್ಚರಿ ಫೈನಲ್‌ನಲ್ಲಿ ಭಾರತ ಚಿನ್ನದ ಪದಕ ಜಯಿಸಿತ್ತು. ಜ್ಯೋತಿ ವೆನ್ನಮ್, ಅದಿತಿ ಸ್ವಾಮಿ, ಪರ್ನೀತ್ ಕೌರ್ ಸೇರಿಕೊಂಡು 30 ಅಂಕ ಪಡೆದು ಎದುರಾಳಿ ಚೈನೀಸ್ ತೈಪೆಯನ್ನು ಹೊಡೆದುರುಳಿಸಿದರು. ಒಟ್ಟು 230 ಅಂಕ ಪಡೆದು ಚಿನ್ನದ ಪದಕ ತಮ್ಮದಾಗಿಸಿಕೊಂಡರು. 229 ಅಂಕ ಪಡೆದ ಚೈನೀಸ್ ತೈಪೆ ಬೆಳ್ಳಿಗೆ ತೃಪ್ತಿಪಟ್ಟಿತು. ಈ ಪಂದ್ಯ ಅತ್ಯಂತ ಜಿದ್ದಾಜಿದ್ದಿನಿಂದ ಕೂಡಿತು. ಅಂತಿಮ ಮೂರು ಹೊಡೆತದಲ್ಲಿ ಭಾರತೀಯ ಸ್ಪರ್ಧಿಗಳು ಪರಿಪೂರ್ಣ ಹೊಡೆತಗಳಿಂದ ಗೆದ್ದು ಬೀಗಿದರು.

ಸ್ಕ್ವಾಷ್‌ನಲ್ಲಿ ಚಿನ್ನ

ಸ್ಕ್ವಾಷ್‌ ಮಿಕ್ಸೆಡ್​ ಡಬಲ್ಸ್​ನಲ್ಲಿ ದೀಪಿಕಾ ಪಳ್ಳಿಕಲ್‌​ ಮತ್ತು ಹರಿಂದರ್ ಪಾಲ್ ಸಿಂಗ್ ಜೋಡಿ ಫೈನಲ್​ನಲ್ಲಿ ಮಲೇಷ್ಯಾ ಜೋಡಿಯನ್ನು 2-0(11-10, 11-10) ಅಂತರದಿಂದ ಮಣಿಸಿ ಚಿನ್ನದ ಪದಕ್ಕೆ ಕೊರಳೊಡ್ಡಿದರು. ಭಾರತದ ಅನುಭವಿ ಜೋಡಿಯ ಮುಂದೆ ಮಲೇಷ್ಯಾದ ಐಫಾ ಬಿಂಟಿ ಅಜ್ಮಾನ್ ಮತ್ತು ಮೊಹಮ್ಮದ್ ಸಯಾಫಿಕ್ ಬಿನ್ ಮೊಹಮ್ಮದ್ ಜೋಡಿ ಸಂಪೂರ್ಣ ವಿಫಲಗೊಂಡಿತು. ಈ ಪಂದ್ಯ ಏಕಪಕ್ಷೀಯವಾಗಿ ಸಾಗಿತು. ಭಾರತ ಅಧಿಕಾರಯುತ ಗೆಲುವು ಸಾಧಿಸಿತು.

ಭಾರತ ಸದ್ಯ 21 ಚಿನ್ನ, 31 ಬೆಳ್ಳಿ, 32 ಕಂಚಿನ ಪದಕಗೊಂದಿಗೆ ಒಟ್ಟು 84 ಪದಕ ಗೆದ್ದು ನಾಲ್ಕನೇ ಸ್ಥಾನದಲ್ಲಿದೆ. ಇನ್ನು ಕೆಲ ಸ್ಪರ್ಧೆಯಲ್ಲಿ ಭಾರತೀಯ ಕ್ರೀಡಾಪಟುಗಳು ಫೈನಲ್​ ತಲುಪಿದ್ದು ಶತಕದ ಪದಕ ಗೆಲ್ಲುವ ವಿಶ್ವಾಸದಲ್ಲಿದ್ದಾರೆ. 1951ರಿಂದ ಶುರುವಾದ ಏಷ್ಯಾಡ್‌ನಲ್ಲಿ ಭಾರತದ ಆವೃತ್ತಿಯೊಂದರಲ್ಲಿ ಗೆದ್ದ ಶ್ರೇಷ್ಠ ಸಾಧನೆಯಾಗಿದೆ. 2018ರಲ್ಲಿ ಪಡೆದಿದ್ದ 70 ಪದಕಗಳ ದಾಖಲೆ ಈ ಬಾರಿ ಪತನಗೊಂಡಿದೆ.

ಇದನ್ನೂ ಓದಿ Asian Games 2023: ಚಿನ್ನಕ್ಕೆ ಗುರಿಯಿಟ್ಟ ಮಹಿಳಾ ಆರ್ಚರಿ ತಂಡ

ಪಿ.ವಿ.ಸಿಂಧುಗೆ ಸೋಲು

ಅವಳಿ ಒಲಿಂಪಿಕ್ಸ್​ ಪದಕ ವಿಜೇತೆ ಪಿ.ವಿ. ಸುಂಧು ಅವರ ಕಳಪೆ ಪ್ರದರ್ಶನ ಏಷ್ಯನ್ ಗೇಮ್ಸ್‌ನಲ್ಲಿಯೂ ಮುಂದುವರಿದಿದೆ. ಮಹಿಳಾ ಸಿಂಗಲ್ಸ್​ನ ಕ್ವಾಟರ್​ಫೈನಲ್​ನಲ್ಲಿ ಸೋಲು ಕಂಡು ನಿರಾಸೆ ಮೂಡಿಸಿದ್ದಾರೆ. ಪುರುಷರ ಕಬಡ್ಡಿ ತಂಡ ‘ಎ’ ಗುಂಪಿನ ಪಂದ್ಯದಲ್ಲಿ ಚೈನೀಸ್ ತೈಪೆ ವಿರುದ್ಧ 50-27 ಅಂಕದಿಂದ ಗೆದ್ದು ಮುಂದಿನ ಹಂತಕ್ಕೇರಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Rohit Sharma: ಟಿ20 ವಿಶ್ವಕಪ್​ ಟೂರ್ನಿಯಲ್ಲಿ ವಿಶ್ವ ದಾಖಲೆ ಬರೆದ ಹಿಟ್​ಮ್ಯಾನ್ ರೋಹಿತ್

Rohit Sharma:ಇಂಗ್ಲೆಂಡ್​(IND vs ENG semifinal) ವಿರುದ್ಧದ ಸೆಮಿ ಫೈನಲ್​ ಪಂದ್ಯದಲ್ಲಿ ರೋಹಿತ್​ 4 ಬೌಂಡರಿ ಬಾರಿಸುತ್ತಿದ್ದಂತೆ ಟಿ20 ವಿಶ್ವಕಪ್​ ಕ್ರಿಕೆಟ್​ನಲ್ಲಿ ಅತ್ಯಧಿಕ ಬೌಂಡರಿ ಬಾರಿಸಿದ ಆಟಗಾರ ಎನಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ ಶ್ರೀಲಂಕಾದ ಮಾಜಿ ನಾಯಕ ಮಹೇಲ ಜಯವರ್ಧನೆ ಹೆಸರಿನಲ್ಲಿತ್ತು.

VISTARANEWS.COM


on

Rohit Sharma
Koo

ಪ್ರೊವಿಡೆನ್ಸ್‌: ಟೀಮ್​ ಇಂಡಿಯಾದ ನಾಯಕ, ಹಿಟ್​ಮ್ಯಾನ್​ ಖ್ಯಾತಿಯ ರೋಹಿತ್​ ಶರ್ಮ(Rohit Sharma) ಅವರು ಟಿ20 ವಿಶ್ವಕಪ್​ ಟೂರ್ನಿಯಲ್ಲಿ(T20 World Cup) ವಿಶ್ವ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಈ ಮೂಲಕ ಶ್ರೀಲಂಕಾದ ಮಾಜಿ ನಾಯಕ ಹಾಗೂ ಆಟಗಾರ ಮಹೇಲ ಜಯವರ್ಧನೆ(Mahela Jayawardene) ಅವರ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದ್ದಾರೆ.

ಇಲ್ಲಿನ ಪ್ರೊವಿಡೆನ್ಸ್‌ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್​(IND vs ENG semifinal) ವಿರುದ್ಧದ ಸೆಮಿ ಫೈನಲ್​ ಪಂದ್ಯದಲ್ಲಿ ರೋಹಿತ್​ 4 ಬೌಂಡರಿ ಬಾರಿಸುತ್ತಿದ್ದಂತೆ ಟಿ20 ವಿಶ್ವಕಪ್​ ಕ್ರಿಕೆಟ್​ನಲ್ಲಿ ಅತ್ಯಧಿಕ ಬೌಂಡರಿ ಬಾರಿಸಿದ ಆಟಗಾರ ಎನಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ ಶ್ರೀಲಂಕಾದ ಮಾಜಿ ನಾಯಕ ಮಹೇಲ ಜಯವರ್ಧನೆ ಹೆಸರಿನಲ್ಲಿತ್ತು. ಜಯವರ್ಧನೆ 111 ಬೌಂಡರಿ ಬಾರಿಸಿದ್ದರು. ಈ ದಾಖಲೆಯನ್ನು ರೋಹಿತ್​ ಹಿಂದಿಕ್ಕಿದ್ದಾರೆ. ಟಿ20 ವಿಶ್ವಕಪ್​ ಆರಂಭಕ್ಕೂ ಮುನ್ನ ರೋಹಿತ್​ ಅವರ ಬೌಂಡರಿಗಳ ಸಂಖ್ಯೆ 91 ಇತ್ತು. ಸದ್ಯ ರೋಹಿತ್​ 26 ಎಸೆತಗಳಿಂದ 37 ರನ್​ ಗಳಿಸಿ ಬ್ಯಾಟಿಂಗ್​ ಕಾಯ್ದುಕೊಂಡಿದ್ದಾರೆ. ಮಳೆಯಿಂದಾಗಿ ಪಂದ್ಯ ಸದ್ಯಕ್ಕೆ ಸ್ಥಗಿತಗೊಂಡಿದೆ.

ಟಿ20 ವಿಶ್ವಕಪ್​ನಲ್ಲಿ ಅತ್ಯಧಿಕ ಬೌಂಡರಿ ಬಾರಿಸಿದ ಬ್ಯಾಟರ್​ಗಳು

ಆಟಗಾರದೇಶಇನಿಂಗ್ಸ್​ಬೌಂಡರಿ
ರೋಹಿತ್​ ಶರ್ಮಭಾರತ46113*
ಮಹೇಲಾ ಜಯವರ್ಧನೆಶ್ರೀಲಂಕಾ31111
ವಿರಾಟ್​​ ಕೊಹ್ಲಿಭಾರತ33105
ಡೇವಿಡ್​ ವಾರ್ನರ್​ಆಸ್ಟ್ರೇಲಿಯಾ41101
ತಿಲಕರತ್ನೆ ದಿಲ್ಶನ್ಶ್ರೀಲಂಕಾ35101
ಜಾಸ್​ ಬಟ್ಲರ್​ಇಂಗ್ಲೆಂಡ್3487*
ಕ್ರಿಸ್​ ಗೇಲ್​​ವೆಸ್ಟ್​ ಇಂಡೀಸ್​3178
ಶಕೀಬ್​ ಅಲ್​ ಹಸನ್​ಬಾಂಗ್ಲಾದೇಶ​4374*
ಕೇನ್​ ವಿಲಿಯಮ್ಸನ್​ನ್ಯೂಜಿಲ್ಯಾಂಡ್2971*
ಬ್ರೆಂಡನ್​ ಮೆಕಲಮ್​ನ್ಯೂಜಿಲ್ಯಾಂಡ್2567

ಟಾಸ್​ ಸೋತು ಬ್ಯಾಟಿಂಗ್​ ಆಹ್ವಾನ ಪಡೆದ ಭಾರತ ಸದ್ಯ 8 ಓವರ್​ಗೆ 2 ವಿಕೆಟ್​ ಕಳೆದುಕೊಂಡು 65 ರನ್​ ಗಳಿಸಿದೆ. ರೋಹಿತ್​ ಮತ್ತು ಸೂರ್ಯಕುಮಾರ್​ ಬ್ಯಾಟಿಂಗ್​ ಕಾಯ್ದುಕೊಂಡಿದ್ದಾರೆ. ವಿರಾಟ್​ ಕೊಹ್ಲಿ 9 ರನ್​ಗೆ ವಿಕೆಟ್​ ಕಳೆದುಕೊಂಡು ಈ ಪಂದ್ಯದಲ್ಲಿಯೂ ಘೋರ ಬ್ಯಾಟಿಂಗ್​ ವೈಫಲ್ಯ ಎದುರಿಸಿದರು. ಪಂತ್​ ಆಟ 4 ರನ್​ಗೆ ಕೊನೆಗೊಂಡಿತು.

ಇದನ್ನೂ ಓದಿ IND vs ENG: ಸೆಮಿ ಪಂದ್ಯಕ್ಕೂ ಮುನ್ನ ಬಿಸಿಸಿಐ ವಿರುದ್ಧ ಗಂಭೀರ ಆರೋಪ ಮಾಡಿದ ಮಾಜಿ ನಾಯಕ

2014, 2016, 2022ರಲ್ಲಿ ಭಾರತ ಆಡಿದ ಎಲ್ಲ ಟಿ20 ವಿಶ್ವಕಪ್​ ಸೆಮಿಫೈನಲ್​ ಪಂದ್ಯದಲ್ಲಿ ವಿರಾಟ್​ ಕೊಹ್ಲಿ ಅರ್ಥಶತಕ ಬಾರಿಸಿ ಮಿಂಚಿದ್ದರು. ಆದರೆ, ಈ ಬಾರಿ ಒಂದಂಕಿಗೆ ಸೀಮಿತರಾದರು. ಜತೆಗೆ ಈ ಬಾರಿ ಆಡಿದ ಎಲ್ಲ ಪಂದ್ಯಗಳಲ್ಲಿಯೂ ಕೊಹ್ಲಿ ಬ್ಯಾಟಿಂಗ್​ ವೈಫಲ್ಯ ಕಂಡಂತಾಯಿತು. ಇಂಗ್ಲೆಂಡ್​ ವಿರುದ್ಧ 9 ಎಸೆತಗಳಲ್ಲಿ 9 ರನ್​ ಬಾರಿಸಿ ಟಾಪ್ಲಿ ಎಸೆತಕ್ಕೆ ಕ್ಲೀನ್​ ಬೌಲ್ಡ್​ ಆದರು. ವಿಕೆಟ್​ ಕಳೆದುಕೊಂಡು ಡಗೌಟ್​ನಲ್ಲಿ​ ಹತಾಶರಾಗಿ ಕುಳಿತಿದ್ದ ವಿರಾಟ್​ ಕೊಹ್ಲಿಯನ್ನು ಕೋಚ್​ ರಾಹುಲ್​ ದ್ರಾವಿಡ್​ ಬಂದು ಸಮಾಧಾನ ಪಡಿಸಿದರು. ಈ ವಿಡಿಯೊವೊಂದು ವೈರಲ್​ ಆಗಿದೆ.

Continue Reading

ಕ್ರೀಡೆ

Virat Kohli: ಮೊದಲ ಬಾರಿಗೆ ಸೆಮಿಫೈನಲ್​ನಲ್ಲಿ ಸಿಂಗಲ್​ ಡಿಜಿಟ್​ಗೆ ಔಟ್​ ಆದ​ ಕೊಹ್ಲಿ; ಸಮಾಧಾನಪಡಿಸಿದ ಕೋಚ್​

Virat Kohli:2014, 2016, 2022ರಲ್ಲಿ ಭಾರತ ಆಡಿದ ಎಲ್ಲ ಟಿ20 ವಿಶ್ವಕಪ್​ ಸೆಮಿಫೈನಲ್​ ಪಂದ್ಯದಲ್ಲಿ ವಿರಾಟ್​ ಕೊಹ್ಲಿ ಅರ್ಥಶತಕ ಬಾರಿಸಿ ಮಿಂಚಿದ್ದರು. ಆದರೆ, ಈ ಬಾರಿ ಒಂದಂಕಿಗೆ ಸೀಮಿತರಾದರು.

VISTARANEWS.COM


on

virat kohli
Koo

ಪ್ರೊವಿಡೆನ್ಸ್‌: ವಿರಾಟ್​ ಕೊಹ್ಲಿ(Virat Kohli) ಅವರು ಮೊಟ್ಟ ಮೊದಲ ಬಾರಿಗೆ ಟಿ20 ವಿಶ್ವಕಪ್(T20 World Cup 2024) ಸೆಮಿಫೈನಲ್​ ಪಂದ್ಯದಲ್ಲಿ ಸಿಂಗಲ್​ ಡಿಜಿಟ್​ಗೆ ವಿಕೆಟ್​ ಒಪ್ಪಿಸಿದ ಕೆಟ್ಟ ದಾಖಲೆಯೊಂದನ್ನು ತಮ್ಮ ಹೆಸರಿಗೆ ಸೇರಿಸಿಕೊಂಡಿದ್ದಾರೆ. ಇಂಗ್ಲೆಂಡ್​ ವಿರುದ್ಧದ ಸೆಮಿ ಪಂದ್ಯದಲ್ಲಿ 9 ರನ್​ಗೆ ವಿಕೆಟ್​ ಕಳೆದುಕೊಂಡು ಈ ಅನಗತ್ಯ ದಾಖಲೆ ಬರೆದರು.

2014, 2016, 2022ರಲ್ಲಿ ಭಾರತ ಆಡಿದ ಎಲ್ಲ ಟಿ20 ವಿಶ್ವಕಪ್​ ಸೆಮಿಫೈನಲ್​ ಪಂದ್ಯದಲ್ಲಿ ವಿರಾಟ್​ ಕೊಹ್ಲಿ ಅರ್ಥಶತಕ ಬಾರಿಸಿ ಮಿಂಚಿದ್ದರು. ಆದರೆ, ಈ ಬಾರಿ ಒಂದಂಕಿಗೆ ಸೀಮಿತರಾದರು. ಜತೆಗೆ ಈ ಬಾರಿ ಆಡಿದ ಎಲ್ಲ ಪಂದ್ಯಗಳಲ್ಲಿಯೂ ಕೊಹ್ಲಿ ಬ್ಯಾಟಿಂಗ್​ ವೈಫಲ್ಯ ಕಂಡಂತಾಯಿತು. ಇಂಗ್ಲೆಂಡ್​ ವಿರುದ್ಧ 9 ಎಸೆತಗಳಲ್ಲಿ 9 ರನ್​ ಬಾರಿಸಿ ಟಾಪ್ಲಿ ಎಸೆತಕ್ಕೆ ಕ್ಲೀನ್​ ಬೌಲ್ಡ್​ ಆದರು.

ವಿಕೆಟ್​ ಕಳೆದುಕೊಂಡು ಡಗೌಟ್​ನಲ್ಲಿ​ ಹತಾಶರಾಗಿ ಕುಳಿತಿದ್ದ ವಿರಾಟ್​ ಕೊಹ್ಲಿಯನ್ನು ಕೋಚ್​ ರಾಹುಲ್​ ದ್ರಾವಿಡ್​ ಬಂದು ಸಮಾಧಾನ ಪಡಿಸಿದರು. ಈ ವಿಡಿಯೊವೊಂದು ವೈರಲ್​ ಆಗಿದೆ.

ಕಳೆದ ತಿಂಗಳು ಮುಕ್ತಾಯ ಕಂಡಿದ್ದ ಐಪಿಎಲ್​ ಟೂರ್ನಿಯಲ್ಲಿ 700ಕ್ಕೂ ಅಧಿಕ ರನ್​ ಗಳಿಸಿ ಟೂರ್ನಿಯಲ್ಲೇ ಗರಿಷ್ಠ ರನ್​ ಗಳಿಸಿದ ಆಟಗಾರ ಎನಿಸಿಕೊಂಡಿದ್ದ ಕೊಹ್ಲಿಯ ಮೇಲೆ ಟಿ20 ವಿಶ್ವಕಪ್​ ಟೂರ್ನಿಯಲ್ಲಿಯೂ ಭಾರೀ ನಿರೀಕ್ಷೆ ಇಡಲಾಗಿತ್ತು. ಆದರೆ ಕೊಹ್ಲಿ ಕಳಪೆ ಬ್ಯಾಟಿಂಗ್​ ಮೂಲಕ ಈ ನಿರೀಕ್ಷೆಯನ್ನು ಹುಸಿಗೊಳಿಸಿದ್ದಾರೆ. ಆಡಿದ 7 ಪಂದ್ಯಗಳ ಪೈಕಿ 2 ಪಂದ್ಯದಲ್ಲಿ ಶೂನ್ಯ ಸುತ್ತಿದ್ದಾರೆ. ಒಟ್ಟಾರೆ ಅವರ ಗಳಿಕೆ 75 ರನ್​.

ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸುವ ಮುನ್ನ ಅಮೆರಿಕ ಮತ್ತು ವಿಂಡೀಸ್​ ಪಿಚ್​ಗಳು ನಿಧಾನಗತಿಯದ್ದಾಗಿದ್ದು, ಕೊಹ್ಲಿಗೆ ಇದು ಸೂಕ್ತವಾಗಿಲ್ಲ ಹೀಗಾಗಿ ಅವರನ್ನು ಆಯ್ಕೆ ಮಾಡುವುದು ಅನುಮಾನ ಎನ್ನಲಾಗಿತ್ತು. ಆದರೆ, ಸ್ಟಾರ್​ ಆಟಗಾರನನ್ನು ಕೈ ಬಿಟ್ಟರೆ ಬಿಸಿಸಿಐ ವಿರುದ್ಧ ಭಾರೀ ಟೀಕೆ ಮತ್ತು ವಿರೋಧ ವ್ಯಕ್ತವಾಗುವ ನಿಟ್ಟಿನಲ್ಲಿ ಅವರಿಗೆ ಅವಕಾಶ ನೀಡಲಾಗಿತ್ತು. ಅಂದು ಊಹೆ ಮಾಡಿದಂತೆ ಇದೀಗ ಕೊಹ್ಲಿ ನಿಧಾನಗತಿಯ ಪಿಚ್​ನಲ್ಲಿ ರನ್​ ಗಳಿಸಲು ಪರದಾಡುತ್ತಿದ್ದಾರೆ.

ಇದನ್ನೂ ಓದಿ Virat kohli : ನಿವೃತ್ತಿಯಾಗುವುದು ಉತ್ತಮ; ಕೊಹ್ಲಿ, ರೋಹಿತ್​ಗೆ ಸಲಹೆ ನೀಡಿದ ವೀರೇಂದ್ರ ಸೆಹ್ವಾಗ್​

ಕೊಹ್ಲಿಯನ್ನು ಆರಂಭಿಕನಾಗಿ ಆಡಿಸಿದ್ದು ಕೂಡ ಅವರ ಬ್ಯಾಟಿಂಗ್​ ವೈಫಲ್ಯಕ್ಕೆ ಕಾರಣವಿರಬಹುದು. ಕೆಲ ವರ್ಷಗಳಿಂದ ಐಪಿಎಲ್​ನಲ್ಲಿ ಕೊಹ್ಲಿ ಆರಂಭಿಕನಾಗಿ ಆಡಿದ್ದರೂ ಕೂಡ ಐಸಿಸಿ ಟೂರ್ನಿಯಲ್ಲಿ ಇದುವರೆಗೂ ಆಡಿರಲಿಲ್ಲ. ಶೈನಿಂಗ್​ ಬಾಲ್​ನಲ್ಲಿ ಅವರಿಗೆ ಆಡಿದ ಅನುಭವ ಕೂಡ ಅಷ್ಟಾಗಿ ಇಲ್ಲ. ಏನಿದ್ದರೂ ಮಧ್ಯಮ ಕ್ರಮಾಂಕದಲ್ಲಿಯೇ ಅವರು ಹೆಚ್ಚು ಸಕ್ಸನ್​ ಕಂಡಿರುವುದು.

Continue Reading

ಕ್ರೀಡೆ

IND vs ENG: ಟಾಸ್​ ಗೆದ್ದ ಇಂಗ್ಲೆಂಡ್​; ಭಾರತಕ್ಕೆ ಬ್ಯಾಟಿಂಗ್ ಆಹ್ವಾನ

IND vs ENG: ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಇತ್ತಂಡಗಳು 4 ಪಂದ್ಯಗಳನ್ನು ಆಡಿ ತಲಾ 2 ಪಂದ್ಯಗಳಲ್ಲಿ ಗೆಲುವು ಮತ್ತು ಸೋಲು ಕಂಡಿವೆ. ಭಾರತ ಕೊನೆಯ ಬಾರಿಗೆ ಇಂಗ್ಲೆಂಡ್​ ವಿರುದ್ಧ ಟಿ20 ಗೆಲುವು ಕಂಡಿದ್ದು 2012ರಲ್ಲಿ. ಆ ಪಂದ್ಯದಲ್ಲಿ ಧೋನಿ ಪಡೆ 90 ರನ್​ ಗೆಲುವು ಸಾಧಿಸಿತ್ತು.

VISTARANEWS.COM


on

IND vs ENG
Koo

ಪ್ರೊವಿಡೆನ್ಸ್‌: .ಮಳೆಯಿಂದ ವಿಳಂಬವಾದ ಟಿ20 ವಿಶ್ವಕಪ್​ನ ದ್ವಿತೀಯ ಸೆಮಿಫೈನಲ್​ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್​ ತಂಡದ ನಾಯಕ ಜಾಸ್​ ಬಟ್ಲರ್​ ಬೌಲಿಂಗ್​ ಆಯ್ದುಕೊಂಡಿದ್ದಾರೆ. ಭಾರತ ಬ್ಯಾಟಿಂಗ್​ ಆಹ್ವಾನ ಪಡೆದಿದೆ. ಭಾರತ ತನ್ನ ಆಡುವ ಬಳಗದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಕಳೆದ ಆಸೀಸ್​ ವಿರುದ್ಧ ಕಣಕ್ಕಿಳಿಸಿದ ತಂಡವನ್ನೇ ಈ ಪಂದ್ಯದಲ್ಲಿಯೂ ಮುಂದುವರಿಸಿದೆ.

ಈ ಪಂದ್ಯಕ್ಕೆ ಮತ್ತೆ ಮಳೆ ಅಡ್ಡಿಪಡಿಸಿದರೆ ಹೆಚ್ಚುವರಿ 250 ನಿಮಿಷವನ್ನು ನೀಡಲಾಗಿದೆ. ಆದರೆ ಮೀಸಲು ದಿನ ಇಲ್ಲ. ಹೆಚ್ಚುವರಿ ಸಮಯದಲ್ಲಿಯೂ ಪಂದ್ಯ ನಡೆಯದೇ ಹೋದರೆ, ಸೂಪರ್​-8 ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಹೊಂದಿರುವ ಭಾರತ ನೇರವಾಗಿ ಫೈನಲ್​ ಪ್ರವೇಶಿಸಲಿದೆ.

ಭಾರತ ಮತ್ತು ಇಂಗ್ಲೆಂಡ್​ ಇದುವರೆಗೆ ಟಿ20 ಕ್ರಿಕೆಟ್​ನಲ್ಲಿ 23 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಭಾರತ 12 ಪಂದ್ಯ ಗೆದ್ದಿದ್ದರೆ, ಇಂಗ್ಲೆಂಡ್​ 11 ಪಂದ್ಯಗಳನ್ನು ಗೆದ್ದಿದೆ. ಕಳೆದ 2 ವರ್ಷಗಳಿಂದ ಇಂಗ್ಲೆಂಡ್​ ವಿರುದ್ಧ ಭಾರತ ಗೆಲುವು ಕಂಡಿಲ್ಲ. 2022ರ ಟಿ20 ವಿಶ್ವಕಪ್(T20 World Cup 2024)​ ಸೆಮಿಫೈನಲ್​ ಪಂದ್ಯದ ಬಳಿಕ ಉಭಯ ತಂಡಗಳು ಇದುವರೆಗೂ ಟಿ20ಯಲ್ಲಿ ಮುಖಾಮುಖಿಯಾಗಿಲ್ಲ. ಆ ಪಂದ್ಯದಲ್ಲಿ ಭಾರತ 10 ವಿಕೆಟ್​ ಸೋಲು ಕಂಡಿತ್ತು. ಅಂದಿನ ಸೋಲಿಗೆ ಈ ಬಾರಿಯ ಸೆಮಿ ಕಾದಾಟದಲ್ಲಿ ಭಾರತ ಸೇಡು ತೀರಿಸಿಕೊಂಡೀತೇ ಎಂದು ಕಾದು ನೋಡಬೇಕಿದೆ.

ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಇತ್ತಂಡಗಳು 4 ಪಂದ್ಯಗಳನ್ನು ಆಡಿ ತಲಾ 2 ಪಂದ್ಯಗಳಲ್ಲಿ ಗೆಲುವು ಮತ್ತು ಸೋಲು ಕಂಡಿವೆ. ಭಾರತ ಕೊನೆಯ ಬಾರಿಗೆ ಇಂಗ್ಲೆಂಡ್​ ವಿರುದ್ಧ ಟಿ20 ಗೆಲುವು ಕಂಡಿದ್ದು 2012ರಲ್ಲಿ. ಆ ಪಂದ್ಯದಲ್ಲಿ ಧೋನಿ ಪಡೆ 90 ರನ್​ ಗೆಲುವು ಸಾಧಿಸಿತ್ತು.

ಇದನ್ನೂ ಓದಿ IND vs ENG: ಸೆಮಿ ಪಂದ್ಯಕ್ಕೂ ಮುನ್ನ ಬಿಸಿಸಿಐ ವಿರುದ್ಧ ಗಂಭೀರ ಆರೋಪ ಮಾಡಿದ ಮಾಜಿ ನಾಯಕ

ಪಿಚ್​ ರಿಪೋರ್ಟ್​


ಪ್ರಾವಿಡೆನ್ಸ್ ಸ್ಟೇಡಿಯಂನ ಪಿಚ್​ ಬೌಲಿಂಗ್​ಗೆ ಹೆಚ್ಚಿನ ನೆರವು ನೀಡುತ್ತದೆ. ಪಂದ್ಯ ಸಾಗಿದಂತೆ ಇಲ್ಲಿ ಹೆಚ್ಚಾಗಿ ಸ್ಪಿನ್ನರ್‌ಗಳು ಪ್ರಾಬಲ್ಯ ಸಾಧಿಸಲಿದ್ದಾರೆ. ದೊಡ್ಡ ಮೊತ್ತ ಬಾರಿಸುವುದು ಇಲ್ಲಿ ಅಷ್ಟು ಸುಲಭವಲ್ಲ. 2010ರಲ್ಲಿ 191 ರನ್ ದಾಖಲಾದದ್ದೆ ಇಲ್ಲಿನ ಗರಿಷ್ಠ ಸ್ಕೋರ್​. 

ಸೇಡಿನ ಪಂದ್ಯ

​2022ರಲ್ಲಿ ಅಡಿಲೇಡ್​ನಲ್ಲಿ ನಡೆದ ಟಿ20 ವಿಶ್ವಕಪ್​ ಸೆಮೀಸ್​ನಲ್ಲಿ ಇಂಗ್ಲೆಂಡ್​ ತಂಡ ಭಾರತಕ್ಕೆ 10 ವಿಕೆಟ್​ಗಳ ಹೀನಾಯ ಸೋಲುಣಿಸಿ ಫೈನಲ್​ ಪ್ರವೇಶಿಸಿತ್ತು. ಇದೀಗ ಅಂದಿನ ಸೋಲಿಗೆ ಸೇಡು ತೀರಿಸಿಕೊಳ್ಳುವ ಅಪೂರ್ವ ಅವಕಾಶವೊಂದು ಭಾರತಕ್ಕೆ ಎದುರಾಗಿದೆ. ಇದರಲ್ಲಿ ರೋಹಿತ್​ ಬಳಗ ಎಷ್ಟರ ಮಟ್ಟಿಗೆ ಯಶಸ್ವಿಯಾಗುತ್ತದೆ ಎಂಬುದೊಂದು ಕುತೂಹಲ.

ಭಾರತ: ರೋಹಿತ್​ ಶರ್ಮ(ನಾಯಕ), ವಿರಾಟ್ ಕೊಹ್ಲಿ, ರಿಷಭ್​ ಪಂತ್​(ವಿಕೀ), ಸೂರ್ಯಕುಮಾರ್ ಯಾದವ್, ಶಿವಂ ದುಬೆ​, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಜಸ್​ಪ್ರೀತ್​ ಬುಮ್ರಾ.

ಇಂಗ್ಲೆಂಡ್​: ಫಿಲಿಪ್ ಸಾಲ್ಟ್, ಜೋಸ್ ಬಟ್ಲರ್ (ನಾಯಕ), ಜಾನಿ ಬೈರ್‌ಸ್ಟೋವ್, ಹ್ಯಾರಿ ಬ್ರೂಕ್, ಮೊಯಿನ್ ಅಲಿ, ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕರನ್, ಕ್ರಿಸ್ ಜೋರ್ಡಾನ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ರೀಸ್ ಟೋಪ್ಲಿ.

Continue Reading

ಕ್ರೀಡೆ

Paris Olympics 2024 : ರಿಲಯನ್ಸ್ ಫೌಂಡೇಷನ್ ಸಹಯೋಗದಲ್ಲಿ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ “ಇಂಡಿಯಾ ಹೌಸ್”

“ಭಾರತಕ್ಕೆ ಒಲಿಂಪಿಕ್ ಸಂಭ್ರಮವನ್ನು ತರಬೇಕು ಎಂಬ ನೂರಾ ನಲವತ್ತು ಕೋಟಿ ಭಾರತೀಯರ ಕನಸನ್ನು ನನಸಾಗಿಸಲು ಇಂಡಿಯಾ ಹೌಸ್ ಮತ್ತೊಂದು ಹೆಜ್ಜೆಯಾಗಲಿದೆ ಎಂದು ನಾವು ನಿಜವಾಗಿಯೂ ಭಾವಿಸುತ್ತೇವೆ!” ನೀತಾ ಅಂಬಾನಿ ಹೇಳಿದ್ದಾರೆ.

VISTARANEWS.COM


on

Paris Olympics 2024
Koo

ಮುಂಬೈ : ವಿಶ್ವ ಮಟ್ಟದಲ್ಲಿ ಪ್ರಮುಖ ಕ್ರೀಡಾಕೂಟವಾದ ಒಲಿಂಪಿಕ್ಸ್ (Paris Olympics 2024) ಆರಂಭಕ್ಕೆ ಇನ್ನು ಕೇವಲ ಒಂದು ತಿಂಗಳಷ್ಟೇ ಬಾಕಿ ಇದೆ. ಪ್ಯಾರಿಸ್ ಒಲಿಂಪಿಕ್ಸ್- 2024ರ ಕಡೆಗೆ ವಿಶ್ವಾದ್ಯಂತದ ಕ್ರೀಡಾಸಕ್ತರು ಕಣ್ಣು ನೆಟ್ಟಿದ್ದಾರೆ. ಅಂದಹಾಗೆ ಇದೇ ಮೊದಲ ಬಾರಿಗೆ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ “ಇಂಡಿಯಾ ಹೌಸ್” ಕಾಣಬಹುದಾಗಿದೆ. ಭಾರತೀಯ ಒಲಿಂಪಿಕ್ಸ್ ಒಕ್ಕೂಟದ (ಐಒಎ) ಸಹಭಾಗಿತ್ವ ವಹಿಸಿರುವಂಥ ರಿಲಯನ್ಸ್ ಫೌಂಡೇಷನ್ ನಿಂದ ಈ “ಇಂಡಿಯಾ ಹೌಸ್” ಪರಿಕಲ್ಪನೆ ಮೂಡಿದೆ. ಈ ಇಂಡಿಯಾ ಹೌಸ್ ನಲ್ಲಿ ಭಾರತದ ಕ್ರೀಡಾ ಸಂಸ್ಕೃತಿ- ಪರಂಪರೆಯನ್ನು ಪ್ರದರ್ಶಿಸಲಾಗುತ್ತದೆ. ಅದರಲ್ಲಿ ಕ್ರೀಡೆಗೆ ಸಂಬಂಧಿಸಿ ಭಾರತದ ಭೂತ- ಭವಿಷ್ಯತ್ ಹಾಗೂ ವರ್ತಮಾನದ ಸಾಧನೆ, ಕನಸುಗಳನ್ನು ಸಹ ತೋರಿಸಲಾಗುತ್ತದೆ. ತಂತ್ರಜ್ಞಾನ ಮತ್ತು ಡಿಜಿಟಲೈಸೇಷನ್ ನಲ್ಲಿ ಭಾರತದ ಸಾಧನೆಯನ್ನು ಜಗತ್ತಿನೆದುರು ತೆರೆದಿಡಲಾಗುತ್ತದೆ. ವಿಶ್ವದ ವಿವಿಧ ಅಥ್ಲೀಟ್ ಗಳು, ಗಣ್ಯರು, ಕ್ರೀಡಾ ಉತ್ಸಾಹಿಗಳು ಈ ಇಂಡಿಯಾ ಹೌಸ್ ಗೆ ಭೇಟಿ ನೀಡುವ ನಿರೀಕ್ಷೆ ಇದೆ. ಇನ್ನು ಭಾರತದ ನೀತಿಯನ್ನು ವ್ಯಾಖ್ಯಾನಿಸುವ ಏಕತೆ, ವೈವಿಧ್ಯತೆ ಮತ್ತು ಶ್ರೇಷ್ಠತೆಯನ್ನು ಸಾರುವುದಕ್ಕೂ ಇದು ಸಹಕಾರಿ ಆಗುತ್ತದೆ.

ಇಂಡಿಯಾ ಹೌಸ್ ಎಂಬುದು ಯಾಕೆ ಮಹತ್ವದ್ದು ಎಂಬ ಬಗ್ಗೆ ಮಾತನಾಡಿದ ಐಒಎ ಸದಸ್ಯೆ , ರಿಲಯನ್ಸ್ ಫೌಂಡೇಷನ್ ಸ್ಥಾಪಕಿ ಮತ್ತು ಅಧ್ಯಕ್ಷೆ ನೀತಾ ಅಂಬಾನಿ ಅವರು , “ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಇದೇ ಮೊದಲ ಬಾರಿಗೆ ಇಂಡಿಯಾ ಹೌಸ್ ಅನ್ನು ಘೋಷಿಸಲು ನಾನು ಅಪಾರ ಸಂತೋಷ ಪಡುತ್ತೇನೆ ಮತ್ತು ಇದೇ ಉತ್ಸಾಹದಿಂದ ರೋಮಾಂಚನಗೊಂಡಿದ್ದೇನೆ. ಕಳೆದ ವರ್ಷ ಭಾರತದಲ್ಲಿ ನಡೆದ ಐಒಸಿ ಅಧಿವೇಶನವು 40 ವರ್ಷಗಳಲ್ಲಿ ಮೊದಲನೆಯದು, ನಮ್ಮ ಒಲಿಂಪಿಕ್ ಪಯಣದಲ್ಲಿ ಪ್ರಮುಖ ಇದು ಮೈಲುಗಲ್ಲು. ಮತ್ತು ನಮ್ಮ ಕ್ರೀಡಾಪಟುಗಳನ್ನು ಗೌರವಿಸುವ, ನಮ್ಮ ವಿಜಯಗಳನ್ನು ಆಚರಿಸುವ, ನಮ್ಮ ಯಶೋಗಾಥೆಗಳನ್ನು- ಸಾಧನೆಗಳನ್ನು ಹಂಚಿಕೊಳ್ಳುವ ಮತ್ತು ಜಗತ್ತನ್ನು ಭಾರತಕ್ಕೆ ಸ್ವಾಗತಿಸುವ ಜಾಗವಾದ ಇಂಡಿಯಾ ಹೌಸ್ ಅನ್ನು ಪ್ರಾರಂಭಿಸುವುದರೊಂದಿಗೆ ಈ ಪ್ರಯತ್ನಕ್ಕೆ ವೇಗ ನೀಡುವುದನ್ನು ಮುಂದುವರಿಸಲು ನಾವು ಸಂತೋಷಪಡುತ್ತೇವೆ,” ಎಂದಿದ್ದಾರೆ.

“ಭಾರತಕ್ಕೆ ಒಲಿಂಪಿಕ್ ಸಂಭ್ರಮವನ್ನು ತರಬೇಕು ಎಂಬ ನೂರಾ ನಲವತ್ತು ಕೋಟಿ ಭಾರತೀಯರ ಕನಸನ್ನು ನನಸಾಗಿಸಲು ಇಂಡಿಯಾ ಹೌಸ್ ಮತ್ತೊಂದು ಹೆಜ್ಜೆಯಾಗಲಿದೆ ಎಂದು ನಾವು ನಿಜವಾಗಿಯೂ ಭಾವಿಸುತ್ತೇವೆ!” ಎಂದಿದ್ದಾರೆ.

ಇದನ್ನೂ ಓದಿ: Rohit Sharma : ನಿಮ್ಮತಲೆಯಲ್ಲಿರುವ ಮೆದುಳು ಉಪಯೋಗಿಸಿ, ಪಾಕ್​ ಮಾಜಿ ನಾಯಕನ ಚೆಂಡು ವಿರೂಪದ ಆರೋಪಕ್ಕೆ ರೋಹಿತ್ ಶರ್ಮಾ ತಿರುಗೇಟು

ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷೆ ಪಿ.ಟಿ.ಉಷಾ ಮಾತನಾಡಿ , ”ರಿಲಯನ್ಸ್ ಫೌಂಡೇನ್ ಸಹಭಾಗಿತ್ವದಲ್ಲಿ ಉದ್ಘಾಟನೆ ಆಗಲಿರುವ ಇಂಡಿಯಾ ಹೌಸ್ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತೀಯ ಅಭಿಮಾನಿಗಳು ಮತ್ತು ಕ್ರೀಡಾಪಟುಗಳ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿದೆ. ಇದು ಅಭಿಮಾನಿಗಳಿಗೆ ಮತ್ತು ಇತರ ದೇಶಗಳ ಜನರು ಭಾರತದ ಬಗ್ಗೆ ಹೆಚ್ಚು ತಿಳಿದುಕೊಳ್ಳಲು ಉತ್ತಮ ಮಾರ್ಗವಾಗಿದೆ. ಮತ್ತು ಭಾರತವು ಪ್ರಮುಖ ಕ್ರೀಡಾವಳಿಗಳ ಆತಿಥೇಯ ಆಗಿ ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸಿದೆ ಮತ್ತು ಇಂಡಿಯಾ ಹೌಸ್ ನಾವು ಕ್ರೀಡಾ ರಾಷ್ಟ್ರವಾಗಿ ಮತ್ತು ಒಲಿಂಪಿಕ್ ನಲ್ಲಿ ಮಾಡಿದ ಸಾಧನೆಗಳನ್ನು ಪ್ರತಿಬಿಂಬಿಸುತ್ತದೆ. ಈ ಉಪಕ್ರಮ ಮತ್ತು ಭಾರತದ ಒಲಿಂಪಿಕ್ ಪಯಣಕ್ಕೆ ಚಾಲನೆ ನೀಡಿದ ಐಒಸಿ ಸದಸ್ಯೆ ನೀತಾ ಅಂಬಾನಿ ಅವರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ,” ಎಂದಿದ್ದಾರೆ.

ಭಾರತೀಯ ಸಂಸ್ಕೃತಿ- ಪರಂಪರೆಯ ಪ್ರದರ್ಶನ

ಒಲಿಪಿಕ್ಸ್ ಕ್ರೀಡಾಕೂಟದ ಸಮಯದಲ್ಲಿ “ಪಾರ್ಕ್ ಆಫ್ ನೇಷನ್ಸ್” ಎಂದು ಹೆಸರಿಸಲಾದ ಐಕಾನಿಕ್ ಪಾರ್ಕ್ ಡೆ ಲಾ ವಿಲ್ಲೆಟ್ ನಲ್ಲಿ ಇಂಡಿಯಾ ಹೌಸ್ ಇರಲಿದ್ದು, ನೆದರ್ ಲೆಂಡ್ಸ್, ಕೆನಡಾ, ಬ್ರೆಜಿಲ್ ಮತ್ತು ಅತಿಥೇಯ ಫ್ರಾನ್ಸ್ ಸೇರಿದಂತೆ ಒಟ್ಟು 14 ಇತರ ಆತಿಥ್ಯ ಹೌಸ್ ಗಳಿಂದ ಸುತ್ತುವರಿದಿದೆ. ಇಂಡಿಯಾ ಹೌಸ್ ಎಂಬುದು ಸಂಸ್ಕೃತಿಯಿಂದ ಕಲೆ ಮತ್ತು ಕ್ರೀಡೆಗಳವರೆಗೆ ಅಡುಗೆಯ ಸತ್ಕಾರಗಳು ಮತ್ತು ಯೋಗ, ಕರಕುಶಲ ವಸ್ತುಗಳು, ಸಂಗೀತ, ಭಾರತೀಯ ನೃತ್ಯ ಗುಂಪುಗಳಿಂದ ಪ್ರದರ್ಶನಗಳು ಮತ್ತಿತರ ಅನುಭವಗಳನ್ನು ಅಭಿಮಾನಿಗಳಿಗೆ ದೊರಕಿಸುತ್ತದೆ. ಈ ಮೂಲಕ ಜಗತ್ತಿಗೆ ಭಾರತದ ಪ್ರತಿಭೆ, ಸಾಮರ್ಥ್ಯ ಮತ್ತು ಮಹತ್ವಾಕಾಂಕ್ಷೆಯ ಒಂದು ನೋಟವನ್ನು ನೀಡುತ್ತದೆ.

ಭಾರತೀಯ ಕ್ರೀಡಾಪಟುಗಳು ಮತ್ತು ಅಭಿಮಾನಿಗಳಿಗೆ ಮನೆಯಿಂದ ದೂರ

ಇಂಡಿಯಾ ಹೌಸ್ ಭಾರತದ ವಿಜಯಗಳು ಮತ್ತು ಪದಕ ಗೆಲುವುಗಳನ್ನು ಆಚರಿಸುವ ಗುರಿಯನ್ನು ಹೊಂದಿದೆ. ಸಂದರ್ಶಕರು, ಕ್ರೀಡಾ ದಂತಕಥೆಗಳೊಂದಿಗೆ ಮಾತುಕತೆ ನಡೆಸಲು ಮತ್ತು ತೊಡಗಿಸಿಕೊಳ್ಳುವ ಕಾರ್ಯಕ್ರಮಗಳ ಮೂಲಕ ಸ್ನೇಹಿತರೊಂದಿಗೆ ಪ್ರಮುಖ ಘಟನೆಗಳನ್ನು ಸ್ಮರಣೀಯವಾಗಿಸುವ ಗಮ್ಯಸ್ಥಾನವಾಗಿದೆ. ಇದು ಎಲ್ಲಾ ದೇಶಗಳ ಮಾಧ್ಯಮ ಮತ್ತು ಅಭಿಮಾನಿಗಳಿಗೆ ಮುಕ್ತವಾಗಿರುತ್ತದೆ. ಪ್ರಮುಖ ಭಾರತೀಯ ಕಾರ್ಯಕ್ರಮಗಳ ಸಂಭ್ರಮಾಚರಣೆಯನ್ನು ಇಂಡಿಯಾ ಹೌಸ್‌ನಲ್ಲಿ ಭಾರತದಲ್ಲಿ ಒಲಂಪಿಕ್ ಗೇಮ್ಸ್‌ನ ವಿಶೇಷ ಮಾಧ್ಯಮ ಹಕ್ಕುದಾರರಾದ ವಯಾಕಾಮ್18 ಸಹಭಾಗಿತ್ವದಲ್ಲಿ ಪ್ರತ್ಯೇಕವಾಗಿ ನಡೆಸಲಾಗುತ್ತದೆ.

ಒಂದು ಪ್ರಯತ್ನ

ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (IOA)ನ ಪ್ರಮುಖ ಪಾಲುದಾರರಾಗಿ ರಿಲಯನ್ಸ್ ಫೌಂಡೇಷನ್ ಸ್ಥಾಪಿಸಿದ ಇಂಡಿಯಾ ಹೌಸ್ ಎಂಬುದು ಜಾಗತಿಕವಾಗಿ ಭಾರತೀಯ ಕ್ರೀಡೆಗಳನ್ನು ಉನ್ನತ ಸ್ಥಾನಕ್ಕೆ ಒಯ್ಯುವ ಸಾಮೂಹಿಕ ಪ್ರಯತ್ನವನ್ನು ಪ್ರತಿನಿಧಿಸುತ್ತದೆ.

Continue Reading
Advertisement
Abhyas Trial
ದೇಶ2 mins ago

Abhyas Trial: ದೇಶದ ಕ್ಷಿಪಣಿ ವ್ಯವಸ್ಥೆಗೆ ಬಲ ತುಂಬ ‘ಅಭ್ಯಾಸ್’‌ ಪ್ರಯೋಗಾರ್ಥ ಪರೀಕ್ಷೆ ಯಶಸ್ವಿ

Congress Protest
ಕರ್ನಾಟಕ19 mins ago

ಹಾಲು, ಪೆಟ್ರೋಲ್‌ ಬೆಲೆ ಏರಿಸಿ, ಎಸಿ ಬಸ್‌ನಲ್ಲಿ ಪ್ರತಿಭಟನೆಗೆ ಹೊರಟ ಕಾಂಗ್ರೆಸ್‌ ಹಣದ ಮೂಲ ಏನು? ಬಿಜೆಪಿ ಪ್ರಶ್ನೆ

NEET Aspirant
ದೇಶ57 mins ago

NEET Aspirant: ನೀಟ್‌ ಅಕ್ರಮ ಬಯಲಾದ ಬೆನ್ನಲ್ಲೇ 17 ವರ್ಷದ NEET ಅಭ್ಯರ್ಥಿ ಆತ್ಮಹತ್ಯೆ; ಸಾವಿಗೆ ಯಾರು ಹೊಣೆ?

Tata Motors has taken the lead in the SUV market with Nexon Punch
ಕರ್ನಾಟಕ1 hour ago

Tata Motors: ನೆಕ್ಸಾನ್, ಪಂಚ್‌ ಮೂಲಕ ಎಸ್‌ಯುವಿ ಮಾರುಕಟ್ಟೆಯಲ್ಲಿ ಮುನ್ನಡೆ ಸಾಧಿಸಿದ ಟಾಟಾ ಮೋಟಾರ್ಸ್

Rohit Sharma
ಕ್ರೀಡೆ1 hour ago

Rohit Sharma: ಟಿ20 ವಿಶ್ವಕಪ್​ ಟೂರ್ನಿಯಲ್ಲಿ ವಿಶ್ವ ದಾಖಲೆ ಬರೆದ ಹಿಟ್​ಮ್ಯಾನ್ ರೋಹಿತ್

virat kohli
ಕ್ರೀಡೆ2 hours ago

Virat Kohli: ಮೊದಲ ಬಾರಿಗೆ ಸೆಮಿಫೈನಲ್​ನಲ್ಲಿ ಸಿಂಗಲ್​ ಡಿಜಿಟ್​ಗೆ ಔಟ್​ ಆದ​ ಕೊಹ್ಲಿ; ಸಮಾಧಾನಪಡಿಸಿದ ಕೋಚ್​

DCM DK Shivakumar latest statement about CM change issue
ಪ್ರಮುಖ ಸುದ್ದಿ2 hours ago

DK Shivakumar: ಸಿಎಂ ಬದಲಾವಣೆ; ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದ ಡಿ.ಕೆ. ಶಿವಕುಮಾರ್

roopantara Movie First Look Poster released
ಕರ್ನಾಟಕ2 hours ago

Kannada New Movie: ‘ರೂಪಾಂತರ’ಗೊಂಡ ರಾಜ್ ಬಿ. ಶೆಟ್ಟಿ! ಮತ್ತೊಂದು ವಿಭಿನ್ನ ಚಿತ್ರ

Hosur Airport
ಪ್ರಮುಖ ಸುದ್ದಿ2 hours ago

Hosur Airport: ಬೆಂಗಳೂರಿನಿಂದ ಕೇವಲ 40 ಕಿ.ಮೀ ದೂರದ ಹೊಸೂರಿನಲ್ಲಿ ಹೊಸ ಏರ್‌ಪೋರ್ಟ್‌!

Sudipa Chatterjee
ದೇಶ2 hours ago

Sudipa Chatterjee: ಗೋಮಾಂಸ ಸೇವನೆಗೆ ಪ್ರಚಾರ- TMC ನಾಯಕ ಬಬೂಲ್‌ ಸುಪ್ರಿಯೋ ಆಪ್ತೆ, ಬೆಂಗಾಳಿ ನಟಿಗೆ ಜೀವ ಬೆದರಿಕೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ5 hours ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ6 hours ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು8 hours ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ12 hours ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ3 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ6 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ6 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

ಟ್ರೆಂಡಿಂಗ್‌