ಎಸಿಬಿ, ಸೀಮಂತ್‌ ಕುಮಾರ್‌ ಸಿಂಗ್‌ಗೆ 3 ದಿನ ರಿಲೀಫ್‌ : ವಿಚಾರಣೆ ಮುಂದೂಡುವಂತೆ ಸುಪ್ರೀಂ ಮನವಿ - Vistara News

ಕೋರ್ಟ್

ಎಸಿಬಿ, ಸೀಮಂತ್‌ ಕುಮಾರ್‌ ಸಿಂಗ್‌ಗೆ 3 ದಿನ ರಿಲೀಫ್‌ : ವಿಚಾರಣೆ ಮುಂದೂಡುವಂತೆ ಸುಪ್ರೀಂ ಮನವಿ

ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಐದು ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ಸಿಕ್ಕಿಬಿದ್ದ ಪ್ರಕರಣದಲ್ಲಿ ಜಿಲ್ಲಾಧಿಕಾರಿ ಕುರಿತು ಎಸಿಬಿ ಮೃದುಧೋರಣೆ ತೋರುತ್ತಿದೆ ಎಂದು ಹೈಕೋರ್ಟ್‌ ನ್ಯಾ. ಎಚ್‌.ಪಿ. ಸಂದೇಶ್‌ ಅವರು ಆಕ್ರೋಶ ವ್ಯಕ್ತಪಡಿಸಿದ್ದರು.

VISTARANEWS.COM


on

Make stricter law against unlicensed weapons Says Supreme Court
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದಾಗ ಸಿಕ್ಕಿಬಿದ್ದ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ವೇಳೆ ಹೈಕೋರ್ಟ್‌ ನ್ಯಾಯಮೂರ್ತಿ ಎಚ್‌.ಪಿ. ಸಂದೇಶ್‌ ಅವರಿಂದ ಆಕ್ರೋಶಕ್ಕೆ ಒಳಗಾಗಿರುವ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಹಾಗೂ ಎಸಿಬಿ ಮುಖ್ಯಸ್ಥ ಸೀಮಂತ್‌ಕುಮಾರ್‌ ಸಿಂಗ್‌ಗೆ ಮೂರು ದಿನ ರಿಲೀಫ್‌ ಸಿಕ್ಕಿದೆ.

ನ್ಯಾ. ಎಚ್‌.ಪಿ. ಸಂದೇಶ್‌ ಅವರು ತಮ್ಮ ವಿರುದ್ಧ ಮೌಖಿಕ ಹೇಳಿಕೆ ನೀಡುವುದರಿಂದ ರಕ್ಷಣೆ ನೀಡಬೇಕೆಂಬ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ಮುಖ್ಯನ್ಯಾಯಮೂರ್ತಿ ಎನ್‌.ವಿ. ರಮಣ, ನ್ಯಾ. ಕೃಷ್ಣ ಮುರಾರಿ ಹಾಗೂ ಹಿಮಾ ಕೊಹ್ಲಿ ಮಂಗಳವಾರ ನಡೆಸಿದರು.

ತಮಗೆ ಹಾಲಿ ನ್ಯಾಯಮೂರ್ತಿಯೊಬ್ಬರ ಮೂಲಕ ವರ್ಗಾವಣೆ ಬೆದರಿಕೆ ಒಡ್ಡಲಾಗಿದೆ ಎಂದು ನ್ಯಾ. ಎಚ್‌.ಪಿ. ಸಂದೇಶ್‌ ಜುಲೈ 4ರಂದು ಮೌಖಿಕವಾಗಿ ತಿಳಿಸಿದ್ದರು. ನಂತರ ಜುಲೈ 11ರಂದು ವಿಚಾರಣೆ ನಡೆಸುವಾಗ, ಈ ಹಿಂದೆ ಹೇಳಿದ್ದನ್ನು ಲಿಖಿತ ರೂಪದಲ್ಲಿ ದಾಖಲಿಸಿದ್ದರು.‌ ವಿಚಾರಣೆಯನ್ನು ಜುಲೈ 13ಕ್ಕೆ ಮುಂದೂಡಿಕೆ ಮಾಡಲಾಗಿತ್ತು. ಇದಕ್ಕೂ ಮುನ್ನವೇ ಎಸಿಬಿ ಪರ ವಕೀಲರು ಸುಪ್ರೀಂಕೋರ್ಟ್‌ನಲ್ಲಿ ಮನವಿ ಸಲ್ಲಿಸಿದ್ದರು.

ವಿಚಾರಣೆ ಆರಂಭಿಸಿದ ಸುಪ್ರೀಂಕೋರ್ಟ್‌, ಜುಲೈ 11ರಂದು ನೀಡಿರುವ ತೀರ್ಪಿನ ಕುರಿತು ನಾವು ಪರಿಶೀಲನೆ ನಡೆಸಬೇಕಿದೆ. ಈ ಆದೇಶ ಇನ್ನೂ ಅಪ್‌ಲೋಡ್‌ ಆಗಿಲ್ಲ. ಹೀಗಾಗಿ ಹೈಕೋರ್ಟ್‌ ನ್ಯಾಯಮೂರ್ತಿಗಳು ಮೂರು ದಿನ ವಿಚಾರಣೆಯನ್ನು ಮುಂದೂಡುವಂತೆ ಮನವಿ ಮಾಡುತ್ತೇವೆ ಎಂದ ನ್ಯಾಯಪೀಠ, ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿತು. ಈ ಮೂಲಕ ಎಸಿಬಿ ಹಾಗೂ ಸೀಮಂತ್‌ಕುಮಾರ್‌ ಸಿಂಗ್‌ ಅವರಿಗೆ ಮೂರು ದಿನಗಳ ಸಮಯಾವಕಾಶ ಲಭಿಸಿದೆ.

ಜುಲೈ 11ರಂದು ಲಿಖಿತವಾಗಿ ದಾಖಲು ಮಾಡಿಸಿದ್ದ ನ್ಯಾ. ಎಚ್‌.ಪಿ. ಸಂದೇಶ್‌, 2022ರ ಜೂನ್‌ 22ರಂದು ಪ್ರರಕಣದ ವಿಚಾರಣೆ ನಡೆಸುವಾಗ, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಎಸಿಬಿ ನಿಷ್ಕ್ರಿಯತೆ ಕುರಿತು ಅಭಿಪ್ರಾಯವನ್ನು ವ್ಯಕ್ತಪಡಿಸಿ ಜುಲೈ 4ಕ್ಕೆ ವಿಚಾರಣೆಯನ್ನು ಮುಂದೂಡಲಾಗಿತ್ತು. ಇದರ ನಡುವೆ, ಮುಖ್ಯನ್ಯಾಯಮೂರ್ತಿಗಳ ನಿವೃತ್ತಿ ಹಿನ್ನೆಲೆಯಲ್ಲಿ ಭೋಜನ ಕೂಟವನ್ನು ಜುಲೈ 1ರಂದು ಆಯೋಜಿಸಲಾಗಿತ್ತು. ಈ ಸಮಯದಲ್ಲಿ ಹಾಲಿ ನ್ಯಾಯಮೂರ್ತಿಯೊಬ್ಬರು ನನ್ನ ಪಕ್ಕದಲ್ಲಿ ಬಂದು ಕುಳಿತು, ತಮಗೆ ದೆಹಲಿಯಿಂದ ಈ ಕುರಿತು ಕರೆ ಬಂದಿರುವುದಾಗಿ ತಿಳಿಸಿದರು. ದೂರವಾಣಿ ಕರೆ ಮಾಡಿದವರು ನನ್ನ ಕುರಿತು ಮಾಹಿತಿ ಕೇಳಿದ್ದಾರೆ ಎಂದು ಹೇಳಿದರು. ನಾನು ಯಾವುದೇ ರಾಜಕೀಯ ಪಕ್ಷದ ಜತೆಗೆ ಸಂಬಂಧ ಹೊಂದಿಲ್ಲ ಎಂದು ನಾನು ಹೇಳಿದೆ. ಇಷ್ಟಕ್ಕೂ ನ್ಯಾಯಾಧೀಶರು ಸುಮ್ಮನಾಗದೆ, ಎಡಿಜಿಪಿ (ಸೀಮಂತ್‌ಕುಮಾರ್‌ ಸಿಂಗ್‌) ಉತ್ತರ ಭಾರತದವರಾಗಿದ್ದು, ಬಹಳ ಪ್ರಭಾವಶಾಲಿಯಾಗಿದ್ದಾರೆ. ನಿಮ್ಮ ವರ್ಗಾವಣೆಯನ್ನೂ ಮಾಡಿಸಬಹುದು ಎಂದು ತಿಳಿಸಿದ್ದರು.

ಎಡಿಜಿಪಿ ಸೀಮಂತ್‌ಕುಮಾರ್‌ ಸಿಂಗ್‌ ಕುರಿತು ತಮ್ಮ ಅಭಿಪ್ರಾಯಗಳನ್ನು ಮುಂದುವರಿಸಿದ್ದ ನ್ಯಾ. ಎಚ್‌.ಪಿ. ಸಂದೇಶ್‌ ಅವರು, ಎಸಿಬಿಯಂತಹ ಸಂಸ್ಥೆಗೆ ಕಳಂಕಿತ ಅಧಿಕಾರಿಗಳನ್ನು ನೇಮಿಸಬಾರದು. ಮುಖ್ಯಕಾರ್ಯದರ್ಶಿಯವರು ಈ ಕುರಿತು ಎಚ್ಚರಿಕೆ ವಹಿಸಬೇಕು. ಇಲ್ಲಿಗೆ ನೇಮಕವಾಗುವ ಅಧಿಕಾರಿ ವಿಶ್ವಾಸಾರ್ಹತೆಯನ್ನು ಹೊಂದಿರಬೇಕು ಹಾಗೂ ಬಾಹ್ಯ ಒತ್ತಡದ ಕಾರಣಕ್ಕೆ ನೇಮಿಸಬಾರದು. ಯಾವುದೇ ಅಧಿಕಾರಿ ಅಥವಾ ಆತನ ಕುಟುಂಬದವರು ಎಸಿಬಿ ಅಥವಾ ಲೋಕಾಯುಕ್ತದಲ್ಲಿ ವಿಚಾರಣೆಯನ್ನು ಎದುರಿಸುತ್ತಿದ್ದರೆ ಅಂತಹ ಅಧಿಕಾರಿಯನ್ನು ನೇಮಕ ಮಾಡಬಾರದು ಎಂದು ತಿಳಿಸಿದ ನ್ಯಾಯಪೀಠ, ವಿಚಾರಣೆಯನ್ನು ಜುಲೈ 13ಕ್ಕೆ ಮುಂದೂಡಿತ್ತು. ಇದೀಗ ಶುಕ್ರವಾರದವರೆಗೆ ವಿಚಾರಣೆ ನಡೆಸದಂತೆ ಸುಪ್ರೀಂಕೋರ್ಟ್‌ ಮನವಿ ಮಾಡಿದೆ.

ಇದನ್ನೂ ಓದಿ | ಎಡಿಜಿಪಿ ಆತ್ಮಸಾಕ್ಷಿ ಕೇಳಿಕೊಳ್ಳಲಿ: ಎಸಿಬಿ ವಿರುದ್ಧ ಮತ್ತೆ ನ್ಯಾಯಮೂರ್ತಿ ಎಚ್‌.ಪಿ. ಸಂದೇಶ್‌ ಆಕ್ರೋಶ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

New Criminal Laws : ಹೊಸ ಕ್ರಿಮಿನಲ್ ಕಾನೂನು ಇಂದಿನಿಂದ ಜಾರಿ; ಏನು ಬದಲಾವಣೆ? ಕಂಪ್ಲೀಟ್ ಡೀಟೆಲ್ಸ್​ ಇಲ್ಲಿದೆ!

New Criminal Laws: : ಈಗಿರುವ ಭಾರತೀಯ ದಂಡ ಸಂಹಿತೆಯಲ್ಲಿ 420 ಸೆಕ್ಷನ್ ಅನ್ನು ವಂಚನೆ ಅಪರಾಧಕ್ಕೆ ಅನ್ವಯಿಸಲಾಗುತ್ತದೆ. ಆದರೆ, ಭಾರತೀಯ ನ್ಯಾಯ ಸಂಹಿತೆಯ ಈ ಅಪರಾಧಕ್ಕೆ 316(2), (3) ಮತ್ತು (4) ಸೆಕ್ಷನ್‌ಗಳು ಇರಲಿವೆ. ವಂಚನೆ ಅಪರಾಧಕ್ಕಾಗಿ ಈ ಸೆಕ್ಷನ್‌ಗಳಡಿ ಅಪರಾಧಿಗೆ ಮೂರು ವರ್ಷ, ಐದು ವರ್ಷ ಅಥವಾ ಏಳು ವರ್ಷಗಳವರೆಗೆ ದಂಡ ಸಹಿತ ಜೈಲು ಶಿಕ್ಷೆಯನ್ನು ವಿಸ್ತರಿಸಬಹುದಾಗಿದೆ.

VISTARANEWS.COM


on

New criminal law
Koo

ನವದೆಹಲಿ: ಬ್ರಿಟಿಷ್​ ವಸಾಹತು ಕಾಲದ ಕ್ರಿಮಿನಲ್‌ ಕಾನೂನುಗಳನ್ನು (New Criminal Laws) ಕೇಂದ್ರ ಸರ್ಕಾರ ತಿದ್ದು ಮಾಡಿದೆ. ಭಾರತೀಯ ದಂಡ ಸಂಹಿತೆ (IPC-1860), ಭಾರತೀಯ ಅಪರಾಧ ಪ್ರಕ್ರಿಯಾ ಸಂಹಿತೆ (CrPC-1973) ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಗಳನ್ನು (Indian Evidence Act-1872) ತಿದ್ದುಪಡಿಗೆ ಒಳಪಡಿಸಲಾಗಿದೆ. . ಇವುಗಳ ಬದಲಾಗಿ ಮೂರು ಹೊಸ ಕಾನೂನುಗಳು (New Laws) ಜುಲೈ 1ರಿಂದಲೇ ದೇಶಾದ್ಯಂತ ಜಾರಿಗೆ ಬರಲಿವೆ.
ಐಪಿಸಿಯನ್ನು ಭಾರತೀಯ ನ್ಯಾಯ ಸಂಹಿತೆ-2023, ಸಿಆರ್‌ಪಿಸಿಯನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023 ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಯನ್ನು ಭಾರತೀಯ ಸಾಕ್ಷ್ಯ ವಿಧೇಯಕ-2023 ಎಂಬುದಾಗಿ ಮಾರ್ಪಡಿಸಲಾಗಿದೆ.

ಈಗಿರುವ ಭಾರತೀಯ ದಂಡ ಸಂಹಿತೆಯಲ್ಲಿ 420 ಸೆಕ್ಷನ್ ಅನ್ನು ವಂಚನೆ ಅಪರಾಧಕ್ಕೆ ಅನ್ವಯಿಸಲಾಗುತ್ತದೆ. ಆದರೆ, ಭಾರತೀಯ ನ್ಯಾಯ ಸಂಹಿತೆಯ ಈ ಅಪರಾಧಕ್ಕೆ 316(2), (3) ಮತ್ತು (4) ಸೆಕ್ಷನ್‌ಗಳು ಇರಲಿವೆ. ವಂಚನೆ ಅಪರಾಧಕ್ಕಾಗಿ ಈ ಸೆಕ್ಷನ್‌ಗಳಡಿ ಅಪರಾಧಿಗೆ ಮೂರು ವರ್ಷ, ಐದು ವರ್ಷ ಅಥವಾ ಏಳು ವರ್ಷಗಳವರೆಗೆ ದಂಡ ಸಹಿತ ಜೈಲು ಶಿಕ್ಷೆಯನ್ನು ವಿಸ್ತರಿಸಬಹುದಾಗಿದೆ.

ಮೂರು ಕ್ರಿಮಿನಲ್ ಕಾನೂನುಗಳನ್ನು ಕಳೆದ ವರ್ಷ ಡಿಸೆಂಬರ್‌ನಲ್ಲಿ ಸಂಸತ್ತು ಅಂಗೀಕರಿಸಿತ್ತು. ಅದೇ ತಿಂಗಳು ರಾಷ್ಟ್ರಪತಿಗಳ ಒಪ್ಪಿಗೆ ಪಡೆಯಿತು. ಆದರೆ, ಅವು ಜಾರಿಗೆ ಬಂದಿರಲಿಲ್ಲ. ಈ ವರ್ಷ ಫೆಬ್ರವರಿ 25ರಂದು ಮೂರು ಕಾನೂನುಗಳು ಜುಲೈ 1ರಂದು ಜಾರಿಗೆ ಬರುತ್ತವೆ ಎಂದು ಸರ್ಕಾರವು ಅಧಿಸೂಚನೆಯನ್ನು ಹೊರಡಿಸಿತ್ತು.

ಪೊಲೀಸ್ ಸಂಶೋಧನೆ ಮತ್ತು ಅಭಿವೃದ್ಧಿ ಬ್ಯೂರೋ (ಬಿಪಿಆರ್‌ಡಿ) ಈ ಹೊಸ ಕಾನೂನುಗಳಿಗೆ ತರಬೇತಿಯನ್ನು ನೀಡಿವೆ. ನಮ್ಮ ನ್ಯಾಯಾಂಗ ಅಕಾಡೆಮಿಗಳು, ರಾಷ್ಟ್ರೀಯ ಕಾನೂನು ವಿಶ್ವವಿದ್ಯಾನಿಲಯಗಳು ಸಹ ತರಬೇತಿಯನ್ನು ನೀಡಿವೆ. ನ್ಯಾಯಾಧೀಶರಿಗೂ ನ್ಯಾಯಾಂಗ ಇಲಾಖೆಯಿಂದ ತರಬೇತಿ ನೀಡಲಾಗಿದೆ.

ಹೊಸ ಕ್ರಿಮಿನಲ್ ಕಾನೂನುಗಳು ಯಾವವು?

ಮೂರು ಹೊಸ ಕ್ರಿಮಿನಲ್ ಕಾನೂನುಗಳಾದ ಭಾರತೀಯ ನ್ಯಾಯ ಸಂಹಿತಾ (Indian Code), ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (Indian Civil Protection Code) ಮತ್ತು ಭಾರತೀಯ ಸಾಕ್ಷಿ ಕಾಯಿದೆಯು (Indian Evidence Act) ಜುಲೈ 1ರಿಂದ ಜಾರಿಗೆ ಬರಲಿವೆ. ಬ್ರಿಟಿಷರ ಕಾಲದ ಭಾರತೀಯ ದಂಡ ಸಂಹಿತೆ, ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ ಮತ್ತು 1872ರ ಭಾರತೀಯ ಸಾಕ್ಷಿ ಕಾಯಿದೆಗೆ ತಿದ್ದುಪಡಿ ಮಾಡಿ ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಕಾಯಿದೆ ಎಂದು ಬದಲಿಸಲಾಗಿದೆ

ಭಯೋತ್ಪಾದಕರ ಆಸ್ತಿ ಮುಟ್ಟುಗೋಲು

ಭಯೋತ್ಪಾದನೆಯನ್ನು ಮೊದಲ ಬಾರಿಗೆ ಭಾರತೀಯ ನ್ಯಾಯ ಸಂಹಿತೆಯಲ್ಲಿ ಸೆಕ್ಷನ್ 113 (1) ಅಡಿಯಲ್ಲಿ ಶಿಕ್ಷಾರ್ಹ ಅಪರಾಧ ಎಂದು ವ್ಯಾಖ್ಯಾನಿಸಲಾಗಿದೆ. ಭಾರತದಲ್ಲಿ ಅಥವಾ ಯಾವುದೇ ವಿದೇಶದಲ್ಲಿ ಭಾರತದ ಏಕತೆ, ಸಮಗ್ರತೆ ಮತ್ತು ಭದ್ರತೆಗೆ ಧಕ್ಕೆ ತರುವ ಉದ್ದೇಶದಿಂದ ಯಾವುದೇ ಕೃತ್ಯವನ್ನು ಎಸಗುವ ವ್ಯಕ್ತಿಯನ್ನು ಈ ಕಾನೂನಿನಲ್ಲಿ ಭಯೋತ್ಪಾದಕ ಎಂದು ವ್ಯಾಖ್ಯಾನಿಸಲಾಗುತ್ತದೆ. ಸಾಮಾನ್ಯ ಸಾರ್ವಜನಿಕರನ್ನು ಅಥವಾ ಅದರ ಒಂದು ಭಾಗವನ್ನು ಬೆದರಿಸಲು ಅಥವಾ ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವ ಭಯೋತ್ಪಾದಕರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಅವಕಾಶವೂ ಈ ಕಾನೂನಿನ ಅಡಿಯಲ್ಲಿ ಇದೆ. ಭಯೋತ್ಪಾದನೆಗೆ ಸಂಬಂಧಿಸಿದ ಕೃತ್ಯಗಳನ್ನು ಮರಣದಂಡನೆ ಅಥವಾ ಪೆರೋಲ್ ಇಲ್ಲದೆ ಜೀವಾವಧಿ ಶಿಕ್ಷೆಗೆ ಒಳಪಡಿಸಲಾಗಿದೆ. ‘ಆಸ್ತಿಗೆ ಹಾನಿ, ಅಥವಾ ಕರೆನ್ಸಿಯ ತಯಾರಿಕೆ ಅಥವಾ ಕಳ್ಳಸಾಗಣೆಯನ್ನು ಇದು ಒಳಗೊಂಡಿದೆ.

ದೇಶದ್ರೋಹ ಎಂಬುದು ರದ್ದು

ಭಾರತೀಯ ದಂಡ ಸಂಹಿತೆ1860ರ ದೇಶದ್ರೋಹದ ನಿಬಂಧನೆಗಳನ್ನು ರದ್ದುಗೊಳಿಸಲಾಗಿದೆ. ಇದನ್ನು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 152ಕ್ಕೆ ಬದಲಾಯಿಸಲಾಗಿದೆ. ರಾಷ್ಟ್ರದ ಏಕತೆ ಮತ್ತು ಸಮಗ್ರತೆಗೆ ಧಕ್ಕೆ ತರುವ ಕಾರ್ಯಗಳ ಮೇಲೆ ಕೇಂದ್ರೀಕರಿಸುವ ವಿಭಾಗಗಳನ್ನು ಪರಿಚಯಿಸಲಾಗಿದೆ.

ಅತ್ಯಾಚಾರ ಮಾಡಿದರೆ ಮರಣ ದಂಡನೆ

ಭಾರತೀಯ ನ್ಯಾಯ ಸಂಹಿತೆ ಲೈಂಗಿಕ ಅಪರಾಧಗಳನ್ನು ಪರಿಹರಿಸಲು ‘ಮಹಿಳೆ ಮತ್ತು ಮಕ್ಕಳ ವಿರುದ್ಧದ ಅಪರಾಧಗಳು’ ಎಂಬ ಅಧ್ಯಾಯವನ್ನು ಪರಿಚಯಿಸಿದೆ. ಇದಲ್ಲದೆ, ಸಂಹಿತೆ 18 ವರ್ಷದೊಳಗಿನ ಬಾಲಕಿಯರ ಅತ್ಯಾಚಾರಕ್ಕೆ ಸಂಬಂಧಿಸಿದ ನಿಬಂಧನೆಗಳಿಗೆ ಮಾರ್ಪಾಡುಗಳನ್ನು ಶಿಫಾರಸು ಮಾಡುತ್ತಿದೆ.

ಅಪ್ರಾಪ್ತ ವಯಸ್ಸಿನ ಮಹಿಳೆಯ ಸಾಮೂಹಿಕ ಅತ್ಯಾಚಾರಕ್ಕೆ ಸಂಬಂಧಿಸಿದ ನಿಬಂಧನೆಯನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆ (ಪೋಕ್ಸೊ)ಗೆ ಅನುಗುಣವಾಗಿ ಮಾಡಲಾಗಿದೆ. 18 ವರ್ಷದೊಳಗಿನ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಅಥವಾ ಮರಣದಂಡನೆಗೆ ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ಓದಿ: NIA Raid: ಹಿಜ್ಬು-ಉತ್‌-ತಹ್ರೀರ್‌ ಉಗ್ರ ಸಂಘಟನೆ ಜೊತೆ ನಂಟು-10 ಕಡೆಗಳಲ್ಲಿ NIA ರೇಡ್‌; ಶಂಕಿತ ಉಗ್ರರು ಅರೆಸ್ಟ್‌

ಅತ್ಯಾಚಾರ ಎಸಗುವವರಿಗೆ ಕಾನೂನಿನ ಪ್ರಕಾರ 10 ವರ್ಷಗಳಿಗಿಂತ ಕಡಿಮೆಯಿಲ್ಲದ ಕಠಿಣ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ. ಆದರೆ ಇದು ಜೀವಾವಧಿಯವರೆಗೆ ಜೈಲು ಶಿಕ್ಷೆಗೆ ವಿಸ್ತರಿಸಬಹುದು ಮತ್ತು ದಂಡಕ್ಕೆ ಸಹ ಹೊಣೆಗಾರರಾಗಬೇಕಾಗುತ್ತದೆ. ಸಾಮೂಹಿಕ ಅತ್ಯಾಚಾರಕ್ಕೆ 20 ವರ್ಷಗಳ ಜೈಲು ಶಿಕ್ಷೆ ಅಥವಾ ಜೀವಾವಧಿ ಶಿಕ್ಷೆಗೆ ಅವಕಾಶವಿದೆ. ಇದಲ್ಲದೆ ಮದುವೆ, ಉದ್ಯೋಗ, ಬಡ್ತಿಯ ನೆಪದಲ್ಲಿ ಅಥವಾ ಯಾವುದೇ ಆಮಿಷದ ಮೂಲಕ ಮಹಿಳೆಯರ ಲೈಂಗಿಕ ಶೋಷಣೆಯನ್ನು ಅಪರಾಧವೆಂದು ಪರಿಗಣಿಸಲಾಗುತ್ತದೆ.

ಮೊದಲ ಬಾರಿಗೆ ಸಂಘಟಿತ ಅಪರಾಧದ ವ್ಯಾಖ್ಯಾನ

ಸಂಘಟಿತ ಅಪರಾಧಕ್ಕೆ ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸಲಾಗಿದೆ ಮತ್ತು ಭಾರತೀಯ ನ್ಯಾಯ ಸಂಹಿತಾ 111 (1) ಅಡಿಯಲ್ಲಿ ಪದವನ್ನು ಮೊದಲ ಬಾರಿಗೆ ವ್ಯಾಖ್ಯಾನಿಸಲಾಗಿದೆ. ಈ ವ್ಯಾಖ್ಯಾನವು ಸಶಸ್ತ್ರ ದಂಗೆ, ವಿಧ್ವಂಸಕ ಕಾರ್ಯಾಚರಣೆಗಳು, ಪ್ರತ್ಯೇಕತಾವಾದಿ ಚಟುವಟಿಕೆಗಳು ಮತ್ತು ಭಾರತದ ಸಾರ್ವಭೌಮತ್ವ, ಏಕತೆ ಮತ್ತು ಸಮಗ್ರತೆಗೆ ಧಕ್ಕೆ ತರುವ ಯಾವುದೇ ಕೃತ್ಯವನ್ನು ಒಳಗೊಂಡಿದೆ. ಶಿಕ್ಷೆಯು ವಿವಿಧ ಅಪರಾಧಗಳಿಗೆ ಮರಣದಂಡನೆ, ಜೀವಾವಧಿ ಶಿಕ್ಷೆ, ದಂಡ ಅಥವಾ ಏಳು ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ಒಳಗೊಂಡಿರುತ್ತದೆ.

ಗುಂಪು ಹತ್ಯೆಗೆ ಶಿಕ್ಷೆಯ ಹೆಚ್ಚಳ

ಮೊದಲ ಬಾರಿಗೆ ಮೂಲ ಮಸೂದೆಯು ಗುಂಪು ಹತ್ಯೆ ಮತ್ತು ದ್ವೇಷದ ಅಪರಾಧಗಳನ್ನು ಪ್ರತ್ಯೇಕ ರೀತಿಯ ಕೊಲೆಗಳೆಂದು ವರ್ಗೀಕರಿಸಿದೆ. ಈ ಕಾಯಿದೆಯು ಗುಂಪು ಹತ್ಯೆಯಂತಹ ಅಪರಾಧಗಳಿಗೆ ಗರಿಷ್ಠ ಮರಣದಂಡನೆಯನ್ನು ನೀಡಲು ಬಯಸುತ್ತದೆ.

ದೇಶ ವಿರೋಧಿ ಕೃತ್ಯಗಳಿಗೆ ಜೀವಾವಧಿ ಶಿಕ್ಷೆ

“ಸಶಸ್ತ್ರ ದಂಗೆ ಅಥವಾ ವಿಧ್ವಂಸಕ ಚಟುವಟಿಕೆಗಳಿಗೆ” ಸಂಬಂಧಿಸಿದ ಕೃತ್ಯಗಳ ಸಂದರ್ಭದಲ್ಲಿ ಕಾನೂನುಗಳು ಕಠಿಣ ಶಿಕ್ಷೆಯನ್ನು ಒದಗಿಸುತ್ತವೆ. ಯಾರಾದರೂ ಉದ್ದೇಶಪೂರ್ವಕವಾಗಿ ಪದಗಳಲ್ಲಿ ಮಾತನಾಡುವ ಅಥವಾ ಬರೆಯುವ ಅಥವಾ ಚಿಹ್ನೆಗಳ ಮೂಲಕ, ಅಥವಾ ಗೋಚರ ಪ್ರಾತಿನಿಧ್ಯದಿಂದ, ಅಥವಾ ವಿದ್ಯುನ್ಮಾನ ಸಂವಹನದ ಮೂಲಕ ಅಥವಾ ಹಣಕಾಸಿನ ಅರ್ಥದ ಬಳಕೆಯಿಂದ ಅಥವಾ ಬೇರೆ ಬೇರೆ ಅಥವಾ ಸಶಸ್ತ್ರ ದಂಗೆ ಅಥವಾ ವಿಧ್ವಂಸಕವನ್ನು ಪ್ರಚೋದಿಸಲು ಪ್ರಯತ್ನಿಸಿದರೆ ಕಠಿಣ ಶಿಕ್ಷೆ ಕಾದಿದೆ. ಅಕ್ರಮ ಚಟುವಟಿಕೆಗಳು, ಅಥವಾ ಪ್ರತ್ಯೇಕತಾವಾದಿ ಚಟುವಟಿಕೆಗಳ ಭಾವನೆಗಳನ್ನು ಪ್ರೋತ್ಸಾಹಿಸುವುದು ಅಥವಾ ಭಾರತದ ಸಾರ್ವಭೌಮತ್ವ ಅಥವಾ ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟು ಮಾಡುತ್ತದೆ ಅಥವಾ ಅಂತಹ ಯಾವುದೇ ಕೃತ್ಯದಲ್ಲಿ ತೊಡಗಿದರೆ ಅಥವಾ ಎಸಗಿದರೆ ಜೀವಾವಧಿ ಶಿಕ್ಷೆ ಅಥವಾ ಏಳು ವರ್ಷಗಳವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ ಮತ್ತು ದಂಡಕ್ಕೆ ಗುರಿಯಾಗಬಹುದು.

ತ್ವರಿತ ವಿಚಾರಣೆ ಮತ್ತು ನ್ಯಾಯ

ಹೊಸ ಕಾನೂನುಗಳ ಪ್ರಕಾರ 90 ದಿನಗಳಲ್ಲಿ ಆರೋಪಪಟ್ಟಿ ಸಲ್ಲಿಸಬೇಕಾಗುತ್ತದೆ ಮತ್ತು ಪರಿಸ್ಥಿತಿಯನ್ನು ನೋಡಿ ನ್ಯಾಯಾಲಯವು ಇನ್ನೂ 90 ದಿನಗಳವರೆಗೆ ಅನುಮತಿ ನೀಡಬಹುದು. ತನಿಖೆಯನ್ನು 180 ದಿನಗಳಲ್ಲಿ ಮುಗಿಸಿ ವಿಚಾರಣೆಗೆ ಕಳುಹಿಸಬೇಕು.

ಇದಲ್ಲದೆ, ಪೊಲೀಸರು 90 ದಿನಗಳಲ್ಲಿ ಪ್ರಕರಣದ ಸ್ಥಿತಿಯನ್ನು ಅಪ್‌ಡೇಟ್‌ ಮಾಡಬೇಕಾಗುತ್ತದೆ. ವಿಚಾರಣೆಯ ಅನಂತರ 30 ದಿನಗಳಲ್ಲಿ ತೀರ್ಪು ನೀಡಬೇಕಾಗುತ್ತದೆ. ಒಂದು ವಾರದೊಳಗೆ ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಬೇಕು. ಮೂರು ವರ್ಷಕ್ಕಿಂತ ಕಡಿಮೆ ಜೈಲು ಶಿಕ್ಷೆಗೆ ಒಳಪಡುವ ಪ್ರಕರಣಗಳಿಗೆ ಸಾಮಾನ್ಯ ವಿಚಾರಣೆ ಸಾಕಾಗುತ್ತದೆ. ಇದರಿಂದ ಸೆಷನ್ ಕೋರ್ಟ್‌ಗಳಲ್ಲಿನ ಪ್ರಕರಣಗಳು ಶೇ. 40ರಷ್ಟು ಕಡಿಮೆಯಾಗಲಿವೆ. ಶೂನ್ಯ ಎಫ್‌ಐಆರ್ ದಾಖಲಿಸುವ ಪದ್ಧತಿಯನ್ನು ಸಾಂಸ್ಥಿಕಗೊಳಿಸಲಾಗಿದೆ. ಎಲ್ಲೇ ಘಟನೆ ನಡೆದರೂ ಎಲ್ಲಿ ಬೇಕಾದರೂ ಎಫ್‌ಐಆರ್‌ ದಾಖಲಿಸಬಹುದು.

ಸಂತ್ರಸ್ತರ ಮಾಹಿತಿ ಹಕ್ಕನ್ನು ಬಲಪಡಿಸಲಾಗಿದೆ. ಎಫ್‌ಐಆರ್‌ನ ಉಚಿತ ಪ್ರತಿಯನ್ನು ಪಡೆಯುವ ಹಕ್ಕು ಬಲಿಪಶುವಿಗೆ ಇದೆ. 90 ದಿನಗಳಲ್ಲಿ ತನಿಖೆಯ ಸ್ಥಿತಿಯನ್ನು ಸಂತ್ರಸ್ತರಿಗೆ ತಿಳಿಸಲು ಅವಕಾಶವಿದೆ. ಹೊಸ ಸಂಹಿತೆಯು ಕ್ರಿಮಿನಲ್ ಪ್ರಕರಣಗಳಲ್ಲಿ ತ್ವರಿತ ನ್ಯಾಯವನ್ನು ಖಚಿತಪಡಿಸಿಕೊಳ್ಳಲು ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸುತ್ತದೆ.

ಇತರ ನಿಬಂಧನೆಗಳು

ಹೊಸ ಕಾನೂನಿನ ಪ್ರಕಾರ ‘ಆರ್ಥಿಕ ಅಪರಾಧಗಳನ್ನು’ ಹೊರತುಪಡಿಸಿ ಘೋರ ಅಪರಾಧಿಗಳಿಗೆ ಮಾತ್ರ ಕೈಕೋಳವನ್ನು ಬಳಸಲಾಗುವುದು. ಅಂಗವೈಕಲ್ಯ ಅಥವಾ ಶಾಶ್ವತ ಅಂಗವೈಕಲ್ಯಕ್ಕೆ ಕಾರಣವಾಗುವ ಅಪರಾಧ ಕಾರ್ಯಗಳಿಗೆ ಕಠಿಣ ದಂಡವನ್ನು ಪರಿಚಯಿಸಲಾಗಿದೆ.

ಶಿಕ್ಷೆ ಮನ್ನಾಗೊಳಿಸಲು ಕಾನೂನುಗಳಲ್ಲಿ ಹೊಸ ನಿಬಂಧನೆಯನ್ನು ಮಾಡಲಾಗಿದೆ. ಮರಣದಂಡನೆಗಳನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಬಹುದು. ಏಳು ವರ್ಷಗಳ ಒಳಗಿನ ಸೆರೆವಾಸ ಮತ್ತು ಜೀವಾವಧಿ ಶಿಕ್ಷೆಯನ್ನು ಮಾತ್ರ ಕ್ಷಮಿಸಬಹುದು.

Continue Reading

ಬೆಂಗಳೂರು

Renuka swamy Murder : ರೇಣುಕಾಸ್ವಾಮಿ ಕೊಲೆ ಕೇಸ್‌ನ 17ನೇ ಆರೋಪಿಯಿಂದ ಜಾಮೀನು ಅರ್ಜಿ ಸಲ್ಲಿಕೆ

Renuka swamy Murder : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ (Actor Darshan) ಸೇರಿ ಒಟ್ಟು 17 ಮಂದಿ ಜೈಲು ಸೇರಿದ್ದಾರೆ. ಈ ಪೈಕಿ ಪ್ರಕರಣದ 17ನೇ ಆರೋಪಿ ನಿಖಿಲ್‌ ನಾಯಕ್‌ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.

VISTARANEWS.COM


on

By

Renukaswamy murder case 17th accused files bail plea
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ (Renuka Swamy Murder) ನಟ ದರ್ಶನ್‌ (Actor Darshan) ಗ್ಯಾಂಗ್‌ನಿಂದ ಬರ್ಬರ ಕೊಲೆಯಾದ ಬಳಿಕ ಪ್ರಕರಣದ ಆರೋಪಿಯೊಬ್ಬ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾನೆ. ಕೊಲೆ ನಡೆದ ಬಳಿಕ ಮೊದಲು ಪೊಲೀಸರ ಮುಂದೆ 17ನೇ ಆರೋಪಿ ನಿಖಿಲ್ ನಾಯಕ್ ಶರಣಾಗಿದ್ದ.

ಒಟ್ಟಾರೆ 17 ಆರೋಪಿಗಳ ಪೈಕಿ ನಿಖಿಲ್‌ ನಾಯಕ್‌ ಪರ ವಕೀಲರು ಸಿಟಿ ಸಿವಿಲ್ ಕೋರ್ಟ್‌ನ 57ನೇ ಸೆಷನ್ಸ್ ಕೋರ್ಟ್‌ನಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಬನ್ನೇರುಘಟ್ಟ ರಸ್ತೆ ಕೆಂಬತ್ತಹಳ್ಳಿ ನಿವಾಸಿ ನಿಖಿಲ್ ನಾಯಕ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ. ರೇಣುಕಾಸ್ವಾಮಿ ಕೊಲೆ ಬಳಿಕ ಪಟ್ಟಣಗೆರೆ ಶೆಡ್‌ನಿಂದ ಮೃತದೇಹವನ್ನು ಸಾಗಿಸಿದ್ದ ಆರೋಪವಿದೆ.

ಇದನ್ನೂ ಓದಿ: Actor Darshan: ಒಂದಲ್ಲ, ಎರಡಲ್ಲ…. ಬರೋಬ್ಬರಿ 50 ನಿಮಿಷ ರೇಣುಕಾ ಸ್ವಾಮಿ ಮೇಲೆ ದರ್ಶನ್‌ ಕ್ರೌರ್ಯ!

Renukaswamy murder case 17th accused files bail plea
ಕೊಲೆಯಾದ ರೇಣುಕಾಸ್ವಾಮಿ ಹಾಗೂ ಕೊಲೆ ಕೇಸ್‌ನಲ್ಲಿ ಬಂಧಿತನಾಗಿರುವ ನಿಖಿಲ್‌ ನಾಯಕ್

ಬೆಂಗಳೂರಿನಿಂದ ತುಮಕೂರು ಜೈಲು ಸೇರಿದ್ದ ನಿಖಿಲ್‌ ನಾಯಕ್‌

ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಆದೇಶದ ಹಿನ್ನೆಲೆ‌ಯಲ್ಲಿ ನಾಲ್ವರು ಆರೋಪಿಗಳನ್ನು ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಿಂದ ತುಮಕೂರು ಜೈಲಿಗೆ ಶಿಫ್ಟ್‌ ಮಾಡಲಾಗಿತ್ತು. ಅದರಲ್ಲಿ ನಿಖಿಲ್‌ ನಾಯಕ್‌ ಸೇರಿ ರವಿಶಂಕರ್, ಕಾರ್ತಿಕ್, ಕೇಶವ್ ತುಮಕೂರು ಜೈಲಿಗೆ ಸ್ಥಳಾಂತರಗೊಂಡಿದ್ದರು.

ಕೊಲೆ ನಡೆದ ಬಳಿಕ ಮೊದಲು ಪೊಲೀಸರ ಮುಂದೆ ಕಾರ್ತಿಕ್‌, ಕೇಶವ್ ಮತ್ತು ನಿಖಿಲ್ ಶರಣಾಗಿದ್ದರು. ಈ ಮೂವರು ಕೊಲೆ ಬಗ್ಗೆ ಸಂಪೂರ್ಣವಾಗಿ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದರು. ಇದರಿಂದ ದರ್ಶನ್ ಮತ್ತು ಗ್ಯಾಂಗ್ ಅರೆಸ್ಟ್ ಆಗಿತ್ತು. ಒಂದೇ ಜೈಲಿನಲ್ಲಿದ್ದರೇ ಅವರವರೇ ಹೊಡೆದಾಡಿಕೊಳ್ಳುವ ಸಾಧ್ಯತೆ ಇದ್ದು, ನಾಲ್ವರು ಆರೋಪಿಗಳ ಜೀವಕ್ಕೆ ಅಪಾಯ ಇರುವ ಸಾಧ್ಯತೆ ಹಿನ್ನೆಲೆಯಲ್ಲಿ ಅವರನ್ನು ತುಮಕೂರು ಜೈಲಿಗೆ ಶಿಫ್ಟ್‌ ಮಾಡಲು ಕ್ರಮ ಕೈಗೊಳ್ಳಲಾಗಿತ್ತು.

ಆರಡಿ ದೇಹವ ಮೂರಡಿ ಬಗ್ಗಿಸಿ ನಮ್ಮೊಂದಿಗೆ ವಿನಯದಿ ಮಾತನಾಡಿದ ದರ್ಶನ್‌ ಅಣ್ಣ ಎಂದ ಖ್ಯಾತ ಗಾಯಕಿ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪರಪ್ಪನ ಅಗ್ರಹಾರದಲ್ಲಿ ಇದ್ದಾರೆ ದರ್ಶನ್‌. ದರ್ಶನ್ ಪರ ಒಲವು ತೋರಿದವರ (Actor Darshan) ಸಂಖ್ಯೆ ತೀರಾ ಕಡಿಮೆ. ಇದೀಗ ಹಲವು ನಟ ನಟಿಯರು ದರ್ಶನ್‌ ಪರ ಧ್ವನಿ ಎತ್ತುತ್ತಿದ್ದಾರೆ. ಇದೀಗ ಈ ಸಾಲಿಗೆ ಗಾಯಕಿ ಡಾ.ಶಮಿತಾ ಮಲ್ನಾಡ್ (dr shamitha malnad) ಸೇರ್ಪಡೆಯಾಗಿದ್ದಾರೆ. ʻʻಸಹಚರ, ಗೆಳೆಯ, ಸೋದರ, ಎಷ್ಟೋ ಜನರಿಗೆ ಸಹಾಯ ಹಸ್ತ ನೀಡಿ ಜೀವನವಾಗಿದ್ದವರು, ಒಳ್ಳೆ ಕೆಲಸಗಳಿಗೆ ಕೈ ಚಾಚಿದ್ದವರು. ಜಾರಿ ಬಿದ್ದಾಗ ಆಳಿಗೊಂದು ಕಲ್ಲಾಗೋದು ಬೇಡಾʼʼಎಂದು ಬರೆದುಕೊಂಡಿದ್ದಾರೆ. ಇದೀಗ ಅವರ ಪೋಸ್ಟ್‌ ವೈರಲ್‌ ಆಗುತ್ತಿದೆ.

ʻʻಮನಸೇ ಮನಸೇ,,, ಸೋಲೋ ಗೆಲುವೋ, ನೋವೋ ನಲಿವೋ, ಏಳೋ ಬೀಳೋ,,ಕಲ್ಲೋ ಮುಳ್ಳೋ ಜೀವನದ ಹಾದಿ ಸುಲಭವಲ್ಲ.. ಯಶಸ್ಸಿನ ಹಾದಿ ಸುಗಮವಲ್ಲ… ಹಸಿವು, ಅವಮಾನ, ನೋವುಂಡು ಯಶಸ್ಸು ಗಳಿಸಿದ ಹೆಸರು
ದರ್ಶನ್ ತೂಗುದೀಪ.. ಸಹಚರ, ಗೆಳೆಯ, ಸೋದರ, ಎಷ್ಟೋ ಜನರಿಗೆ ಸಹಾಯ ಹಸ್ತ ನೀಡಿ ಜೀವನವಾಗಿದ್ದವರು, ಒಳ್ಳೆ ಕೆಲಸಗಳಿಗೆ ಕೈ ಚಾಚಿದ್ದವರು,, ಜಾರಿ ಬಿದ್ದಾಗ ಆಳಿಗೊಂದು ಕಲ್ಲಾಗೋದು ಬೇಡಾ…. ಅವರ ಅಭಿನಯ, ಭೇದವಿಲ್ಲದ ಪ್ರೀತಿ, ಸರಳತೆ, ಸ್ನೇಹ ಅಭಿಮಾನದ ಸಿಹಿ ಉಂಡವರು ನಾವು, ಅಭಿಮಾನಿಯಾಗಿ ಸಿನಿಮಾ ಅಭಿನಯ ನೋಡಿ ಅತ್ತು, ನಕ್ಕು, ಚಪ್ಪಾಳೆ ಶಿಳ್ಳೆ ಹೊಡೆದು ಸಂಭ್ರಮಿಸಿದವರು ನಾವು,, ಆರಡಿ ದೇಹವ ಮೂರಡಿ ಬಗ್ಗಿಸಿ ತಗ್ಗಿ ನಮ್ಮೊಂದಿಗೆ ವಿನಯದಿ ಮಾತಾಡುವಾಗ ಹೆಮ್ಮೆ ಪಟ್ಟವರು ನಾವು,,, ತಪ್ಪಾಗಿದೆಯೋ ಇಲ್ಲವೋ ಏನಾಗಿದೆ ಎಂದು ಅರಿಯದವರು ನಾವು.. ಹಣಕ್ಕೆ ಬಗ್ಗದೆ ಪ್ರೀತಿಗೆ ಬಗ್ಗಿದವರು ಅವರು,,, ತಪ್ಪಾಗಿದ್ದರೆ ನ್ಯಾಯಾಂಗವಿದೆ, ಕಾನೂನಿದೆ,,,
ಶಿಕ್ಷೆ ಇದೇʼʼಎಂದು ಬರೆದುಕೊಂಡಿದ್ದಾರೆ.

ʻʻ ಅಕಾಲ ನಿಧನರಾದ ಶ್ರೀ ರೇಣುಕಾಸ್ವಾಮಿ ಆತ್ಮಕ್ಕೆ ಶಾಂತಿ ಸಿಗಲಿ,,, ಅವರ ಕುಟುಂಬ ಹಾಗೂ ಹಲವು ನೊಂದ ಕುಟುಂಬಗಳಿಗೆ ನಮ್ಮೆಲ್ಲರ ಸಾಂತ್ವನ ,, ನೆರವು, ಆಸರೆ, ನ್ಯಾಯ ಬೇಕಿದೆ,, ಹಾಗೆ ಸೋಶಿಯಲ್ ಮೀಡಿಯಾವನ್ನು ದಯವಿಟ್ಟು ಒಳಿತಿಗೆ ಉಪಯೋಗಿಸಿ,, ಎಲ್ಲರ ಮೇಲೆ ಗೌರವವಿರಲಿ,, ಕಾಮೆಂಟ್ಸ್, ಪೋಸ್ಟ್, ಮೇಲೆ ಹಿಡಿತವಿರಲಿ,,
ದರ್ಶನ್ ಅಣ್ಣಾ,, ಕನ್ನಡದ ಕುಟುಂಬ,, ಚಲನಚಿತ್ರದ ಕುಟುಂಬ ನಮ್ಮ ಕುಟುಂಬ,, ಕಲಾವಿದರ ಕುಟುಂಬ,, ಏನೇ ಆದರೂ ನಮ್ಮ ಮನೆಯವರ ಜೊತೆ ನಾವು ಯಾವಾಗ್ಲೂ ಜೊತೆ ಇರುತ್ತೇವೆ,, ಅಲ್ಲವೇ??? ಹಾಗೆ ಪ್ರೀತಿ ಅಭಿಮಾನ ಬದಲಾಗದು,, ತಪ್ಪು ಯಾರು ಮಾಡಿದ್ದರೂ ಶಿಕ್ಷೆ ಆಗಬೇಕು .. ನ್ಯಾಯ ಎಲ್ಲರಿಗೂ ಒಂದೇ,,, ದರ್ಶನ್ ಅವರನ್ನು ಪ್ರೀತಿಸುವ ಎಲ್ಲರಿಗೂ ನೋವಾಗಿದೆ,,ಸಂಕಟವಾಗಿದೆ,, ಇದು ಸಂಯಮ, ತಾಳ್ಮೆ, ಪ್ರಾರ್ಥನೆಯ ಸಮಯ,,
ಸಿಟ್ಟು, ಕೋಪ, ಅಸಹನೆ, ಹತಾಶೆ ದರ್ಶನ್ ಹಾಗೂ ಅವರ ಕುಟುಂಬಕ್ಕೆ ಇನ್ನಷ್ಟು ತೊಂದರೆ ಒಡ್ಡಬಹುದು,,
ಚಿನ್ನ ಕುದಿವ ಕುಲುಮೆಯಲ್ಲಿದೆ, ಕಲ್ಮಶ ಕಳೆದು ಅಪರಂಜಿ ಆಗಿ ಶುದ್ಧವಾಗಿ ಬರಲು ಸಮಯ ಬೇಕು,,, ಕಾಯೋಣ ,, ಸಮಾಧಾನದಿಂದ..ದರ್ಶನ್ ಅಣ್ಣಾ ಅವರಿಗಾಗಿ ಪ್ರಾರ್ಥಿಸೋಣ, ಹಾರೈಸೋಣ…ʼʼಎಂದು ಬರೆದುಕೊಂಡಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ (Renukaswamy murder case) ನಟ ದರ್ಶನ್‌ (Actor Darshan) ಹಾಗೂ ಸಹಚರರು ಜೈಲುವಾಸದಲ್ಲಿದ್ದಾರೆ. ಇತ್ತ ನಿತ್ಯವೂ ಅಭಿಮಾನಿಗಳು ದರ್ಶನ್‌ (Darshan Fans) ಭೇಟಿಗೆ ಪರಪ್ಪನ ಅಗ್ರಹಾರಕ್ಕೆ ಆಗಮಿಸುತ್ತಿದ್ದು, ಪೊಲೀಸರಿಗೆ ತಲೆ ಬಿಸಿಯಾಗಿದೆ. 

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕೋರ್ಟ್

Fake Complaint : ಹೆಸ್ಕಾಂ ಎಂಜಿನಿಯರ್‌ ವಿರುದ್ಧ ಸುಳ್ಳು ಅತ್ಯಾಚಾರ ಕೇಸ್‌; ದೂರುದಾರೆ ಸೇರಿ 13 ಮಂದಿ ಜೈಲುಪಾಲು

Fake Complaint : ತನ್ನ ಮೇಲೆ ಅತ್ಯಾಚಾರ ಆಗಿದೆ ಎಂದು ದೂರು ಕೊಟ್ಟಿದ್ದಾಕೆ ದೂರುದಾರೆ ಸೇರಿ 13 ಮಂದಿ ಜೈಲು ಪಾಲಾಗಿದ್ದಾರೆ. 10 ವರ್ಷಗಳ ಸುದೀರ್ಘ ವಾದ-ವಿವಾದ ಆಲಿಸಿದ ನ್ಯಾಯಾಧೀಶೆ ಎಲ್.ವಿಜಯಲಕ್ಷ್ಮಿದೇವಿ ಮಹತ್ವದ ತೀರ್ಪು ಹೊರಡಿಸಿದ್ದಾರೆ.

VISTARANEWS.COM


on

By

Fake Complaint
ಹೆಸ್ಕಾಂ ಸಹಾಯಕ ಅಧೀಕ್ಷಕ ಅಭಿಯಂತರ ತುಕಾರಾಮ್ ಮಜ್ಜಿಗೆ ವಿರುದ್ಧ ಸುಳ್ಳು ದೂರು ನೀಡಿದ್ದ ಬಿ.ವಿ ಸಿಂಧೂ
Koo

ಬೆಳಗಾವಿ: ತನ್ನ ಮೇಲೆ ಅತ್ಯಾಚಾರ (Physical Abuse) ನಡೆದಿದೆ ಎಂದು ಸುಳ್ಳು ದೂರು (Fake Complaint) ಕೊಟ್ಟಿದ್ದಕ್ಕೆ ದೂರುದಾರೆ ಸೇರಿ 13 ಮಂದಿ ಜೈಲು ಪಾಲಾಗಿದ್ದಾರೆ. ಬೆಳಗಾವಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ಮಹತ್ವದ ಆದೇಶ ಹೊರಡಿಸಿದೆ. ಅತ್ಯಾಚಾರದ ದೂರುದಾರೆ ಬಿ.ವಿ ಸಿಂಧೂ ಸೇರಿ 13 ಜನರಿಗೆ 3 ವರ್ಷ ಆರು ತಿಂಗಳು ಜೈಲು ಶಿಕ್ಷೆ ಹಾಗೂ 13 ಆರೋಪಿಗಳಿಗೂ ತಲಾ 86 ಸಾವಿರ ರೂ. ದಂಡ ವಿಧಿಸಿ ನ್ಯಾಯಾಧೀಶೆ ಎಲ್.ವಿಜಯಲಕ್ಷ್ಮಿದೇವಿ ಮಹತ್ವದ ತೀರ್ಪು ಹೊರಡಿಸಿದ್ದಾರೆ.

ಅಂದಿನ ಹೆಸ್ಕಾಂ ಸಹಾಯಕ ಅಧೀಕ್ಷಕ ಅಭಿಯಂತರ ತುಕಾರಾಮ್ ಮಜ್ಜಿಗೆ ವಿರುದ್ಧ ಬಿ.ವಿ ಸಿಂಧೂ ಅತ್ಯಾಚಾರ ಹಾಗೂ ಜೀವ ಬೆದರಿಕೆ ಕೇಸ್ ದಾಖಲಿಸಿದ್ದಳು. 2014 ನವೆಂಬರ್ 19ರಂದು ಮಾಳಮಾರುತಿ ಠಾಣೆಯಲ್ಲಿ ಅತ್ಯಾಚಾರ, ಜೀವ ಬೆದರಿಕೆ, ಆತ್ಮಹತ್ಯೆ ಪ್ರಚೋದನೆ ಕೇಸ್‌ ದಾಖಲಾಗಿತ್ತು.

ಈ ಪ್ರಕರಣದಲ್ಲಿ ವಿಚಾರಣೆ ನಡೆಸಿದ ಮಾಳಮಾರುತಿ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದರು. ತನಿಖೆಯಲ್ಲಿ ಅತ್ಯಾಚಾರ, ಜೀವಬೆದರಿಕೆ ಹಾಕಿದ್ದು ಸುಳ್ಳು ಎಂದು ಬಯಲಾಗಿತ್ತು. ಆ ನಂತರ ಇತರೆ ಆರೋಪಗಳಿಂದ ಪ್ರಚೋದನೆಗೆ ಒಳಗಾಗಿ ಸುಳ್ಳು ದೂರು ನೀಡಿದ್ದಾಗಿ ದೂರುದಾರೆ ಸಿಂಧೂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ್ದಳು. ಆದರೆ 2017ರಲ್ಲಿ ದೂರುದಾರೆ ಸಿಂಧೂ ಸೇರಿ 13 ಮಂದಿ ವಿರುದ್ಧ ಪೊಲೀಸರು ಕೇಸ್ ದಾಖಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ 13 ಜನ ಸಾಕ್ಷಿದಾರರಿಂದ 81 ಸಾಕ್ಷಿಗಳ ಸಂಗ್ರಹಿಸಿದ್ದರು. ಅಂದಿನಿಂದ ಸುದೀರ್ಘ ವಿಚಾರಣೆ ನಡೆಸಿ ವಾದ-ವಿವಾದ ಆಲಿಸಿದ ನ್ಯಾಯಾಲಯವು ಗುರುವಾರ ತೀರ್ಪು ಪ್ರಕಟಿಸಿದೆ.

ಇದನ್ನೂ ಓದಿ: Actor Darshan : ನಟ ದರ್ಶನ್‌ಗಾಗಿ ಊಟ ಬಿಟ್ಟು ಜೈಲಿನ ಹೊರಗೆ ವಿಶೇಷಚೇತನ ಯುವತಿ ಗೋಳಾಟ

ಮಗಳನ್ನೇ ಗರ್ಭಿಣಿ ಮಾಡಿದ ಕಾಮಪಿಶಾಚಿ ಅಪ್ಪನಿಗೆ ಗೂಸಾ

ಮಂಡ್ಯ: ಅಪ್ರಾಪ್ತ ವಯಸ್ಸಿನ ಮಗಳನ್ನು ಅಪ್ಪನೇ ಗರ್ಭಿಣಿ (Physical abuse) ಮಾಡಿರುವ ಆರೋಪ ಮಂಡ್ಯ (Mandya news) ಗುತ್ತಲಿನ ಮುನೀರ್‌ ಎಂಬಾತನ ಮೇಲೆ ಬಂದಿದೆ. ಈ ಕೃತ್ಯದಿಂದ ರೊಚ್ಚಿಗೆದ್ದ ಗ್ರಾಮಸ್ಥರು ಮುನೀರ್‌ನನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಮಂಡ್ಯ ನಗರದ ಗುತ್ತಲಿನಲ್ಲಿ ಈ ಘಟನೆ ನಡೆದಿದೆ. ಮುನೀರ್ ತನ್ನ ಅಪ್ರಾಪ್ತ ಮಗಳನ್ನು ಪುಸಲಾಯಿಸಿ ಆಕೆಯ ಮೇಲೆ ಅತ್ಯಾಚಾರ ಮಾಡಿ ಗರ್ಭ ಧರಿಸುವಂತೆ ಮಾಡಿದ್ದಾನೆ. ಗರ್ಭಿಣಿಯಾದ ಬಾಲಕಿ ನಿನ್ನೆ ಈ ಬಗ್ಗೆ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದು, ಇದನ್ನು ಕೇಳಿ ಕೆರಳಿ ಕೆಂಡವಾದ ಗ್ರಾಮಸ್ಥರು ಮುನೀರ್‌ಗೆ ನಡು ರಸ್ತೆಯಲ್ಲೇ ಹಿಗ್ಗಾ ಮುಗ್ಗಾ ಥಳಿಸಿದ್ದಾರೆ.

ಮುನೀರ್‌ನನ್ನು ಪ್ರಶ್ನಿಸಿದಾಗ ಆತ ತಪ್ಪೊಪ್ಪಿಕೊಂಡಿದ್ದಾನೆ. ವಿಚಾರ ತಿಳಿದ ಮಂಡ್ಯ ಈಸ್ಟ್ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಸಾರ್ವಜನಿಕರ ಕೈಯಿಂದ ಆರೋಪಿ ಮುನೀರ್‌ನನ್ನು ಬಿಡಿಸಿ ತಮ್ಮ ವಶಕ್ಕೆ ಪಡೆದಿದ್ದಾರೆ. ಮಗಳಿಗೆ ಅಗತ್ಯ ಚಿಕಿತ್ಸೆ ನೀಡಲಾಗಿದ್ದು, ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Horse Racing: ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿ ಕುದುರೆ ರೇಸ್‌ಗೆ ತಡೆ ನೀಡಿದ ಹೈಕೋರ್ಟ್

Horse Racing: ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿ ಕುದುರೆ ರೇಸ್ ಆಯೋಜನೆಗೆ ತಡೆ ನೀಡಿ ಸಿಜೆ ಎನ್‌.ವಿ. ಅಂಜಾರಿಯಾ, ನ್ಯಾ.ಕೆ.ವಿ. ಅರವಿಂದ್ ಅವರಿದ್ದ ಹೈಕೋರ್ಟ್ ವಿಭಾಗೀಯ ಪೀಠ ಆದೇಶ ನೀಡಿದೆ.

VISTARANEWS.COM


on

Horse Racing
Koo

ಬೆಂಗಳೂರು: ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿ ಕುದುರೆ ರೇಸ್ ಆಯೋಜನೆಗೆ ಅನುಮತಿ ನೀಡಿ ಏಕಸದಸ್ಯ ಪೀಠ ನೀಡಿದ್ದ ಮಧ್ಯಂತರ ಆದೇಶಕ್ಕೆ ತಡೆ ನೀಡಿ ಹೈಕೋರ್ಟ್‌ನ ವಿಭಾಗೀಯ ಪೀಠ ಆದೇಶ ನೀಡಿದ್ದು, ಇದರಿಂದ ಸದ್ಯಕ್ಕೆ ರೇಸ್ ಪಂದ್ಯಾವಳಿ (Horse Racing) ಹಾಗೂ ಬೆಟ್ಟಿಂಗ್‌ ಸ್ಥಗಿತಗೊಳ್ಳಲಿದೆ.

ಸಿಜೆ ಎನ್‌.ವಿ. ಅಂಜಾರಿಯಾ, ನ್ಯಾ.ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ಪೀಠ ಆದೇಶ ನೀಡಿದೆ. ಇದರಿಂದ ಇಂದಿನಿಂದ ಆರಂಭವಾಗಬೇಕಿದ್ದ ರೇಸ್‌ ಪಂದ್ಯಾವಳಿಗಳು ತಾತ್ಕಾಲಿಕವಾಗಿ ಅಮಾನತುಗೊಂಡಂತಾಗಿದೆ.

ಕುದುರೆ ರೇಸ್ ಆಯೋಜನೆಗೆ ಅನುಮತಿ ನಿರಾಕರಿಸಿ ರಾಜ್ಯ ಸರ್ಕಾರ 2024ರ ಜೂ.6ರಂದು ಹೊರಡಿಸಿದ್ದ ಆದೇಶ ಪ್ರಶ್ನಿಸಿ ಬೆಂಗಳೂರು ಟರ್ಫ್ ಕ್ಲಬ್ ಲಿಮಿಟೆಡ್ (ಬಿಟಿಸಿ), ಕರ್ನಾಟಕ ಟ್ರೈನರ್ಸ್‌ ಅಸೋಸಿಯೇಷನ್ಸ್, ಕರ್ನಾಟಕ ರೇಸ್ ಕುದುರೆ ಮಾಲೀಕರ ಸಂಘ, ಕರ್ನಾಟಕ ಜಾಕಿಗಳ ಸಂಘ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್‌ ಏಕಸದಸ್ಯ ಪೀಠ, ಮಾರ್ಚ್‌ ತಿಂಗಳಲ್ಲಿ ಆನ್‌ ಕೋರ್ಸ್‌ ಮತ್ತು ಆಫ್‌ ಕೋರ್ಸ್‌ ಕುದುರೆ ಪಂದ್ಯ ಮತ್ತು ಬೆಟ್ಟಿಂಗ್‌ ಚಟುವಟಿಕೆಗಳನ್ನು ನಡೆಸಲು ಸರ್ಕಾರ ನೀಡಿದ್ದ ಪರವಾನಗಿಯ ಷರತ್ತಿನಂತೆ ಕುದುರೆ ಪಂದ್ಯ ಆಯೋಜಿಸಬಹುದು ಎಂದು ಮಧ್ಯಂತರ ಆದೇಶ ನೀಡಿತ್ತು. ಇದಕ್ಕೆ ಹೈಕೋರ್ಟ್‌ ವಿಭಾಗೀಯ ಪೀಠ ತಡೆ ನೀಡಿದೆ.

ಬೆಂಗಳೂರು ಟರ್ಫ್‌ ಕ್ಲಬ್‌ನಲ್ಲಿ 2024ರ ಏಪ್ರಿಲ್‌ನಿಂದ ಆಗಸ್ಟ್‌ವರೆಗೆ ಆನ್‌ ಕೋರ್ಸ್‌-ಆಫ್‌ ಕೋರ್ಸ್‌ ಕುದುರೆ ಪಂದ್ಯಗಳು ಹಾಗೂ ಬೆಟ್ಟಿಂಗ್ ಚಟುವಟಿಕೆ ನಡೆಸಲು ಅನುಮತಿ ನೀಡುವಂತೆ ಕೋರಿ ಬಿಟಿಸಿ 2024ರ ಮಾ.21ರಂದು ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿತ್ತು. ಆದರೆ, ಸರ್ಕಾರದಿಂದ ಕುದುರೆ ರೇಸ್ ಪಂದ್ಯಾವಳಿ ಆಯೋಜನೆಗೆ ಅನುಮತಿ ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ಬಿಟಿಸಿ ಮತ್ತಿತರರು ಹೈಕೋರ್ಟ್‌ ಅರ್ಜಿ ಸಲ್ಲಿಸಿದ್ದರು. ಅರ್ಜಿಗಳನ್ನು ಪರಿಗಣಿಸಿ ನಿರ್ಧಾರ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಜೂ.6ರವರೆಗೆ ಕಾಲಾವಕಾಶ ನೀಡಿ ಹೈಕೋರ್ಟ್‌ ಮೇ 21 ಹಾಗೂ 23ರಂದು ಆದೇಶಿಸಿತ್ತು. ಅದರಂತೆ, ಬಿಟಿಸಿಯ ಮನವಿ ಪರಿಶೀಲಿಸಿದ್ದ ರಾಜ್ಯ ಸರ್ಕಾರ, ತೆರಿಗೆ ವಂಚನೆ ಹಾಗೂ ಬೆಟ್ಟಿಂಗ್‌ ಅಕ್ರಮ ಸೇರಿ ವಿವಿಧ ಅವ್ಯವಹಾರಗಳನ್ನು ಮುಂದಿಟ್ಟುಕೊಂಡು ಕುದುರೆ ಪಂದ್ಯ ಆಯೋಜಿಸಲು ಅನುಮತಿ ನಿರಾಕರಿಸಿ ಜೂ.6ರಂದು ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಅರ್ಜಿದಾರರು ತಿದ್ದುಪಡಿ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ | Parking Complex: ಬೆಂಗಳೂರಿನಲ್ಲಿ ಸುಸಜ್ಜಿತ ಪಾರ್ಕಿಂಗ್‌ ಕಾಂಪ್ಲೆಕ್ಸ್;‌ ಶುಲ್ಕದ ಕುರಿತ ಮಾಹಿತಿ ಇಲ್ಲಿದೆ

ಭೂ ಕಬಳಿಕೆ; ರೋಹಿಣಿ ಸಿಂಧೂರಿ ಸೇರಿ 6 ಮಂದಿ ವಿರುದ್ಧ ಬಾಲಿವುಡ್‌ ಖ್ಯಾತ ಗಾಯಕ ದೂರು

Land Grabbing

ಬೆಂಗಳೂರು: ಭೂ ಕಬಳಿಕೆ (Land Grabbing) ಮಾಡಿದ್ದಾರೆ ಎಂದು ಆರೋಪಿಸಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ಸೇರಿ 6 ಮಂದಿ ವಿರುದ್ಧ ಬಾಲಿವುಡ್‌ನ ಖ್ಯಾತ ಗಾಯಕ ಲಕ್ಕಿ ಅಲಿ(Lucky Ali), ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಯಲಹಂಕ ನ್ಯೂ ಟೌನ್ ಬಳಿ, ಟ್ರಸ್ಟ್‌ಗೆ ಸೇರಿರುವ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಲಕ್ಕಿ ಅಲಿ ಆರೋಪಿಸಿದ್ದು, ಈ ಬಗ್ಗೆ ದೂರಿನ ಪ್ರತಿಯನ್ನು ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ, ಸಹಾಯಕ ಪೊಲೀಸ್‌ ಕಮಿಷನರ್‌ ಮಂಜುನಾಥ್‌, ಯಲಹಂಕ ನ್ಯೂ ಟೌನ್‌ ಪಿಎಸ್‌ಐ, ತಾಲೂಕು ಸರ್ವೇಯರ್‌ ಮನೋಹರ್‌, ಸುಧೀರ್‌ ರೆಡ್ಡಿ ಹಾಗೂ ಮಧಸೂಧನ್‌ ರೆಡ್ಡಿ ಸೇರಿ ಮಂದಿ ವಿರುದ್ಧ ದೂರು ದಾಖಲಾಗಿದೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ 2022ರಲ್ಲಿಯೂ ಲಕ್ಕಿ ಅಲಿ ದೂರು ಸಲ್ಲಿಸಿದ್ದರು. ತಮ್ಮ ಟ್ರಸ್ಟ್‌ ಜಮೀನನ್ನು ಸುಧೀರ್ ರೆಡ್ಡಿ ಹಾಗೂ ಮಧುಸೂಧನ್ ರೆಡ್ಡಿ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ. ಇದಕ್ಕೆ ರೋಹಿಣಿ ಸಿಂಧೂರಿ ಸಹಕಾರ ಕೊಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.

ಯಲಹಂಕ ನ್ಯೂಟೌನ್ ಬಳಿ ಲಕ್ಕಿ ಅಲಿ ಟ್ರಸ್ಟ್ ಇದ್ದು, ಭೂ ಕಬಳಿಕೆಯಲ್ಲಿ ಯಲಹಂಕ ನ್ಯೂ ಟೌನ್ ಠಾಣೆಯ ಎಸಿಪಿ ಮಂಜುನಾಥ್, ತಾಲೂಕು ಸರ್ವೇ ಅಧಿಕಾರಿ ಮನೋಹನ್ ಶಾಮೀಲಾಗಿದ್ದಾರೆ ಎಂದು ದೂರು ನೀಡಿದ್ದಾರೆ. ರೋಹಿಣಿ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದು, ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಲೋಕಾಯುಕ್ತಕ್ಕೆ ಗಾಯಕ ಮನವಿ ಮಾಡಿದ್ದಾರೆ.

Continue Reading
Advertisement
Karave Protest
ಪ್ರಮುಖ ಸುದ್ದಿ2 mins ago

Karave Protest: ಕನ್ನಡಿಗರಿಗೆ ಉದ್ಯೋಗ ನೀಡಿ, ಇಲ್ಲವೇ ರಾಜ್ಯ ಬಿಟ್ಟು ತೊಲಗಿ: ಕರವೇ ಕಾರ್ಯಕರ್ತರ ಆಕ್ರೋಶ

Actor Darshan grandmother came running distant town to see and not punish him
ಸ್ಯಾಂಡಲ್ ವುಡ್21 mins ago

Actor Darshan: ದರ್ಶನ್‌ ತಪ್ಪು ಮಾಡಿದ್ದಾನೆ ಆದರೆ ಶಿಕ್ಷೆ ಕೊಡಬೇಡಿ ಎಂದು ದೂರದ ಊರಿಂದ ಓಡೋಡಿ ಬಂದ ಅಜ್ಜಿ!

ಚಿಕ್ಕಬಳ್ಳಾಪುರ23 mins ago

Dead Body Found : ಮರದಲ್ಲಿ ನೇತಾಡುತ್ತಿತ್ತು ಅಪರಿಚಿತನ ಶವ; ಸತ್ತವನ ಕೈ ಮೇಲಿತ್ತು ಲಕ್ಷ್ಮಿ ಹೆಸರಿನ ಹಚ್ಚೆ

Hurricane Beryl
ಪ್ರಮುಖ ಸುದ್ದಿ27 mins ago

Hurricane Beryl : ವೆಸ್ಟ್​ ಇಂಡೀಸ್​ನಲ್ಲಿ ಚಂಡಮಾರುತ, ಸಂಕಷ್ಟದಲ್ಲಿ ಸಿಲುಕಿದ ಚಾಂಪಿಯನ್ ಭಾರತ ತಂಡ

NEET UG 2024 Re-Test Result
ದೇಶ37 mins ago

NEET UG 2024 Re-Test Result: ನೀಟ್‌ ಮರುಪರೀಕ್ಷೆಯ ಫಲಿತಾಂಶ ಪ್ರಕಟ; ಹೀಗೆ ಚೆಕ್‌ ಮಾಡಿ

National Doctor’s Day
ಆರೋಗ್ಯ40 mins ago

National Doctor’s Day: ಇಂದು ರಾಷ್ಟ್ರೀಯ ವೈದ್ಯರ ದಿನ; ಕಾಳಜಿಯ ಕೈಗಳಿಗೆ ಕೃತಜ್ಞತೆ ಹೇಳುವ ದಿನ

hassan murder case
ಕ್ರೈಂ49 mins ago

Murder Case: ಎಸ್‌ಪಿ ಕಚೇರಿ ಆವರಣದಲ್ಲೇ ಪತ್ನಿಯನ್ನು ಇರಿದು ಕೊಂದ ಪೊಲೀಸ್ ಕಾನ್‌ಸ್ಟೇಬಲ್

Golden Star Ganesh Birthday Not Celebrating His Birthday This Year
ಸ್ಯಾಂಡಲ್ ವುಡ್50 mins ago

Golden Star Ganesh Birthday:  ಈ ವರ್ಷವೂ ಬರ್ತ್​ಡೇ ಆಚರಿಸಿಕೊಳ್ಳದಿರಲು ನಿರ್ಧರಿಸಿದ ಗೋಲ್ಡನ್ ಸ್ಟಾರ್ ಗಣೇಶ್

ICC Team of the Tournament
ಪ್ರಮುಖ ಸುದ್ದಿ52 mins ago

ICC Team of the Tournament : ಐಸಿಸಿ ಟೀಮ್​ ಆಫ್​​ ದಿ ಟೂರ್ನಮೆಂಟ್​ನಲ್ಲಿ ಆರು ಭಾರತೀಯರು​; ಕೊಹ್ಲಿಗಿಲ್ಲ ಚಾನ್ಸ್​

Job Alert
ಉದ್ಯೋಗ1 hour ago

Job Alert: HCLನಲ್ಲಿ ಖಾಲಿ ಇರುವ 56 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಮಾಸಿಕ ವೇತನ 1 ಲಕ್ಷ ರೂ.ವರೆಗೆ: ಇಂದೇ ಅಪ್ಲೈ ಮಾಡಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ19 hours ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು1 day ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ2 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ2 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ3 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು4 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ4 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಟ್ರೆಂಡಿಂಗ್‌