Lingayat CM : ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಲಿಂಗಾಯತ ಅಸ್ತ್ರ ಡ್ಯಾಮೇಜ್? ಸಾಫ್ಟ್‌ ಆದ ಸಿದ್ದರಾಮಯ್ಯ! - Vistara News

ಕರ್ನಾಟಕ

Lingayat CM : ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಲಿಂಗಾಯತ ಅಸ್ತ್ರ ಡ್ಯಾಮೇಜ್? ಸಾಫ್ಟ್‌ ಆದ ಸಿದ್ದರಾಮಯ್ಯ!

Lingayat CM : ಸರ್ಕಾರದ ವಿರುದ್ಧ ಗುಡುಗಿರುವ ಶಾಮನೂರು ಶಿವಶಂಕರಪ್ಪ ವಿರುದ್ಧ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಸಾಫ್ಟ್‌ ಆಗಿದ್ದಾರೆ. ಎಲ್ಲವೂ ಮಾತುಕತೆ ಮೂಲಕ ಬಗೆಹರಿಯುತ್ತದೆ ಎಂಬ ಮಾತನ್ನಾಡಿದ್ದಾರೆ. ಆ ಮೂಲಕ “ಲಿಂಗಾಯತ” ಅಸ್ತ್ರವನ್ನು ನಾಜೂಕಾಗಿ ಬಳಕೆ ಮಾಡಲು ಮುಂದಾಗಿದ್ದಾರೆ.

VISTARANEWS.COM


on

Shamanur Shivashankarappa and CM Siddaramaiah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಸಮೀಪಿಸುತ್ತಿದೆ. ಈ ನಡುವೆ ಕಾಂಗ್ರೆಸ್‌ ಕರ್ನಾಟಕದಲ್ಲಿ 28 ಲೋಕಸಭಾ ಕ್ಷೇತ್ರಗಳಲ್ಲಿ ಕನಿಷ್ಠ 20 ಕ್ಷೇತ್ರಗಳಲ್ಲಿ ಗೆಲ್ಲುವ ಗುರಿಯನ್ನು ಹಾಕಿಕೊಂಡಿದೆ. ಇದಕ್ಕಾಗಿ ಈಗಾಗಲೇ ಕಾರ್ಯಾಚರಣೆಯನ್ನೂ ಶುರು ಮಾಡಿದೆ. ಚುನಾವಣಾ ರಣತಂತ್ರವನ್ನು ಹೆಣೆಯುತ್ತಿದೆ. ಆದರೆ, ಈಗ ಎದ್ದಿರುವ “ಲಿಂಗಾಯತರಿಗೆ ಅನ್ಯಾಯ” ಹಾಗೂ “ಲಿಂಗಾಯತ ಸಿಎಂ” (Lingayat CM) ಎಂಬ ಕೂಗು ಕೈಪಡೆಯನ್ನು ಆತಂಕಕ್ಕೆ ದೂಡಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಕೈ ಹಿಡಿದಿದ್ದ ಲಿಂಗಾಯತ ಅಸ್ತ್ರವು ಈಗ 2024ರ ಲೋಕಸಭಾ ಚುನಾವಣೆಗೆ ಡ್ಯಾಮೇಜ್ ಮಾಡಲಿದೆಯೇ? ಎಂಬ ಭಯ ಕಾಡುತ್ತಿದೆ. ಸ್ವಪಕ್ಷೀಯ ಹಿರಿಯ ಶಾಸಕರಾದ ಶಾಮನೂರು ಶಿವಶಂಕರಪ್ಪ (Shamanur Shivashankarappa) ಅವರ ಆ ಒಂದು ಹೇಳಿಕೆ ಸರ್ಕಾರವನ್ನು ಇಕ್ಕಟ್ಟಿಗೆ ದೂಡಿದೆ. ಬಿಸಿ ತುಪ್ಪವಾಗಿಯೂ ಪರಿಣಮಿಸಿದೆ. ಇತ್ತ ನುಂಗಲೂ ಆಗದೆ, ಅತ್ತ ಉಗುಳಲೂ ಆಗದೆ. ಒದ್ದಾಟ ನಡೆಸಬೇಕಾದ ಸ್ಥಿತಿ ಬಂದೊದಗಿದೆ. ಆದರೆ, ಈಗ ಶಾಮನೂರು ವಿರುದ್ಧ ಸ್ವತಃ ಸಿಎಂ ಸಿದ್ದರಾಮಯ್ಯ (CM Siddaramaiah) ಅವರೇ ಸಾಫ್ಟ್‌ ಆಗಿದ್ದಾರೆ. ಎಲ್ಲವೂ ಮಾತುಕತೆ ಮೂಲಕ ಬಗೆಹರಿಯುತ್ತದೆ ಎಂಬ ಮಾತನ್ನಾಡಿದ್ದಾರೆ. ಆ ಮೂಲಕ “ಲಿಂಗಾಯತ” ಅಸ್ತ್ರವನ್ನು ನಾಜೂಕಾಗಿ ಬಳಕೆ ಮಾಡಲು ಮುಂದಾಗಿದ್ದಾರೆ.

2023ರ ವಿಧಾನಸಭಾ ಚುನಾವಣೆಯಲ್ಲಿ (2023 Assembly Election) ಬಿಜೆಪಿಗೆ ಲಿಂಗಾಯತ ಅಸ್ತ್ರ ಬಹಳವೇ ಪೆಟ್ಟು ಕೊಟ್ಟಿತ್ತು. ಸಿಎಂ ಆಗಿದ್ದ ಬಿ.ಎಸ್.‌ ಯಡಿಯೂರಪ್ಪ (BS Yediyurappa) ಅವರನ್ನು ಅಧಿಕಾರದಿಂದ ಕೆಳಗೆ ಇಳಿಸಿದ್ದಲ್ಲದೆ, ಅವರನ್ನು ಗೌರವಯುತವಾಗಿ ನಡೆಸಿಕೊಂಡಿಲ್ಲ ಎಂದು ಕಾಂಗ್ರೆಸ್‌ ಗಟ್ಟಿ ಧ್ವನಿಯಲ್ಲಿ ಹೇಳಿತ್ತು. ಇದರ ಲಾಭವನ್ನು ಕಾಂಗ್ರೆಸ್‌ ಕಳೆದ ಚುನಾವಣೆಯಲ್ಲಿ ಅತ್ಯುತ್ತಮವಾಗಿಯೇ ಪಡೆದುಕೊಂಡಿತ್ತು.

ಇದನ್ನೂ ಓದಿ: JDS Politics : ಕಿತ್ತೂರು ಕರ್ನಾಟಕದ ಕಡೆ ಜೆಡಿಎಸ್‌ ನಡೆ; ಗ್ಯಾರಂಟಿಯೇ ಸುಳ್ಳು ಎಂದ ಜಿ.ಟಿ. ದೇವೇಗೌಡ

ಈಗ ಸಂಪೂರ್ಣ ಬಹುಮತದೊಂದಿಗೆ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದೆ. ಸರ್ಕಾರ ಬಂದ ಬಳಿಕ ಕಾಂಗ್ರೆಸ್ ಲಿಂಗಾಯತ ಸಮುದಾಯವನ್ನು ಕಡೆಗಣಿಸಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಅದಕ್ಕೆ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಬಹಿರಂಗ ಹೇಳಿಕೆ ಮತ್ತಷ್ಟು ಪುಷ್ಟಿಯನ್ನು ನೀಡಿತ್ತು. ಇದು ಲಿಂಗಾಯತ ಸಮುದಾಯದವರ ಕೆಂಗಣ್ಣಿಗೂ ಗುರಿಯಾಗಿದೆ.

ಮಾತುಕತೆಗೆ ಸಿಎಂ ಮುಂದು; ಇಲ್ಲಿದೆ ವಿಡಿಯೊ

ಶಾಮನೂರು ಶಿವಶಂಕರಪ್ಪ ಹೇಳಿದ್ದೇನು?

ದಾವಣಗೆರೆಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಶಾಮನೂರು ಶಿವಶಂಕರಪ್ಪ ಅವರು ಕಾಂಗ್ರೆಸ್‌ ಸರ್ಕಾರ, ಕಾಂಗ್ರೆಸ್‌ ನಾಯಕರು, ಅದರಲ್ಲೂ ಮುಖ್ಯವಾಗಿ ಸಿದ್ದರಾಮಯ್ಯ ಅವರ ಮೇಲೆ ಮೇಲೆ ಹಲವು ಆರೋಪಗಳನ್ನು ಮಾಡಿದ್ದರು.

  1. ಕಾಂಗ್ರೆಸ್‌ ಸರ್ಕಾರದಲ್ಲಿ ಲಿಂಗಾಯತರನ್ನು ಮೂಲೆಗುಂಪು ಮಾಡಲಾಗುತ್ತಿದ್ದು, ಸರಿಯಾದ ಸ್ಥಾನಮಾನ ನೀಡುತ್ತಿಲ್ಲ.
  2. ಲಿಂಗಾಯತ ಅಧಿಕಾರಿಗಳಿಗೆ ಪ್ರಮುಖ ಹುದ್ದೆಗಳೇ ಸಿಗುತ್ತಿಲ್ಲ. ಸಿದ್ದರಾಮಯ್ಯ ಸರ್ಕಾರ ತಾರತಮ್ಯ ಮಾಡುತ್ತಿದೆ. ಸರ್ಕಾರದ ಆಯಕಟ್ಟಿನ ಹುದ್ದೆಗಳನ್ನು ನಮ್ಮ ಸಮಾಜದವರಿಗೆ ಕೊಟ್ಟಿಲ್ಲ.
  3. ಈ ಹಿಂದೆ ಎಲ್ಲರೂ ಚೆನ್ನಾಗಿದ್ದರು. ನಿಜಲಿಂಗಪ್ಪ, ಜೆ.ಎಚ್‌.ಪಾಟೀಲರು ಇದ್ದಾಗ ಎಲ್ಲರೂ ಲಿಂಗಾಯತ ಸಮಾಜದ ವಿಚಾರದಲ್ಲಿ ಚೆನ್ನಾಗಿದ್ದರು.
  4. ಕಾಂಗ್ರೆಸ್‌ ಸರ್ಕಾರದಲ್ಲಿ ಮುಖ್ಯವಾದ ಹುದ್ದೆಗಳನ್ನು ಬಹಳಷ್ಟು ಜನರಿಗೆ ಕೊಟ್ಟಿಲ್ಲ.
  5. ಲಿಂಗಾಯತ ಸಮುದಾಯಕ್ಕೆ ಡಿಸಿಎಂ ಕೊಡಬೇಕು ಎಂಬ ಪ್ರಸ್ತಾಪ ಮಾಡಲಾಗುತ್ತಿದೆ. ಈ ಪ್ರಸ್ತಾಪ ಯಾವಾಗಲೂ ನಮ್ಮ ಕಡೆಯಿಂದ ಇರುತ್ತದೆ. ಆದರೆ, ಡಿಸಿಎಂ ತೆಗೆದುಕೊಂಡು ಏನು ಮಾಡಬೇಕು. ಕೊಟ್ಟರೆ ಸಿಎಂ ಕೊಡಬೇಕು.

ರಾಜ್ಯ ಕಾಂಗ್ರೆಸ್‌ನಲ್ಲಿ ಈಗ ಲಿಂಗಾಯತರ ಅವಗಣನೆ (Neglecting Lingayats) ಮತ್ತು ಲಿಂಗಾಯತರು ಸಿಎಂ (Lingayat CM Demdand) ಆಗಬೇಕು. ಅಲ್ಲದೆ, ಈ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳ ಕಡೆಗಣನೆ ಆಗಿದೆ ಎಂಬುದಾಗಿ ಶಾಮನೂರು ಶಿವಶಂಕರಪ್ಪ ಅವರು ತಮ್ಮದೇ ಸರ್ಕಾರದ ವಿರುದ್ಧ ಹೀಗೆ ಗುಡುಗಿದ್ದರು.

ಕೌಂಟರ್ ಕೊಟ್ಟಿದ್ದ ಸಿದ್ದರಾಮಯ್ಯ ಟೀಮ್!

ಶಾಮನೂರು ಶಿವಶಂಕರಪ್ಪ ಅವರ ಈ ಹೇಳಿಕೆಗೆ ಕಾಂಗ್ರೆಸ್‌ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇದಕ್ಕೆ ಸಿದ್ದರಾಮಯ್ಯ ಟೀಮ್ ಕೌಂಟರ್ ಕೊಟ್ಟಿತ್ತು. ಆದರೆ, ಮಾತಿಗೆ ಮಾತು ಬೆಳೆದರೆ ಸಮುದಾಯದ ಅಸಮಾಧಾನಕ್ಕೆ ಕಾರಣವಾಗುತ್ತದೆ. ಹೀಗಾಗಿ ಶಾಮನೂರು ಜತೆ ಗುದ್ದಾಡುವುದಕ್ಕಿಂತಲೂ ಮಾತುಕತೆಯೇ ಬೆಸ್ಟ್ ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. ಹೀಗೇ ಮಾತನಾಡುತ್ತಾ ಹೋದರೆ ವಿಷಯ ಮತ್ತಷ್ಟು ಜಟಿಲವಾಗುತ್ತದೆ. ಅದು ಮತ್ತೊಂದು ರೀತಿಯ ಸಂಘರ್ಷಕ್ಕೆ ಕಾರಣವಾಗುತ್ತದೆ. ಹೀಗಾಗಿ ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ಪ್ರತಿಕ್ರಿಯೆ ಕೊಡದೆ ಮಾತುಕತೆಗೆ ಸಿಎಂ ಮುಂದಾಗಿದ್ದಾರೆ.

ಇದನ್ನೂ ಓದಿ: Power Point with HPK : ಶಿವಮೊಗ್ಗದಲ್ಲಿ 10 ಮನೆಗಳಿಗೆ ಕಲ್ಲು ಬಿದ್ದಿದೆ; ಅದು ಕೋಮು ಗಲಭೆ ಅಲ್ಲ!

ಏಕೆ ಮಾತುಕತೆಯ ನಿರ್ಧಾರ?

ಒಂದು ವೇಳೆ ಈ ಮಾತನ್ನು ಹೀಗೇ ಮುಂದುವರಿಸಿದರೆ 2024ರ ಲೋಕಸಭಾ ಚುನಾವಣೆ ಮೇಲೆ ಪಕ್ಷಕ್ಕೆ ಡ್ಯಾಮೇಜ್ ಆಗುತ್ತದೆ. ಹೀಗಾಗಿ ಶಾಮನೂರು ಜತೆ ಗುದ್ದಾಟ ಬಿಟ್ಟು ಮಾತುಕತೆ ನಡೆಸಿ ಪರಿಸ್ಥಿತಿಯನ್ನು ತಿಳಿಗೊಳಿಸುವುದೇ ಸರಿ. ಲೋಕಸಭಾ ಚುನಾವಣೆಯ ಟಾರ್ಗೆಟ್ 20 ರೀಚ್ ಆಗಲು ಸಮುದಾಯ ನಾಯಕರ ಜತೆ ಗುದ್ದಾಟಕ್ಕೆ ಕೈ ಹಾಕಬಾರದು. ಹೀಗಾಗಿ ಮಾತನಾಡಿ ಸಮಸ್ಯೆಯನ್ನು ಪರಿಹರಿಸಿಕೊಳ್ಳಬೇಕೆಂಬ ನಿರ್ಧಾರಕ್ಕೆ ಬಂದಿದ್ದಾರೆ. ಜತೆಗೆ ತಮ್ಮ ಬೆಂಬಲಿಗರಿಗೂ ಇನ್ನು ಮಾತನಾಡದಂತೆ ಸೂಚಿಸಿದ್ದಾರೆನ್ನಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Actor Darshan: ಇಂದೇ ಪರಪ್ಪನ ಅಗ್ರಹಾರ ಸೇರ್ತಾರ ದರ್ಶನ್‌, ಪವಿತ್ರಾ ಗೌಡ?

Actor Darshan: ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಕಂಬಿ ಎಣಿಸುತ್ತಿರುವ ನಟ ದರ್ಶನ್‌ ಮತ್ತು ಅವರ ಗೆಳತಿ ಪವಿತ್ರಾ ಗೌಡ ಇಂದೇ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್‌ ಆಗುವ ಸಾಧ್ಯತೆ ಇದೆ. ಜೂನ್‌ 11ರಿಂದ ಜೂನ್‌ 17ರ ವರೆಗೆ ಪೊಲೀಸರು ದರ್ಶನ್‌ ಮತ್ತು ಪವಿತ್ರಾ ಗೌಡ ಅವರನ್ನು ವಶಕ್ಕೆ ಪಡೆದಿದ್ದರು. ಆದರೆ ಜೂನ್‌ 17ರಂದು ಸರ್ಕಾರಿ ರಜೆ ಇರುವುದರಿಂದ ಪೊಲೀಸರು ಎರಡು ದಿನಗಳ ಮೊದಲೇ ಕೋರಮಂಗಲದ ಜಡ್ಜ್​​​​ ನಿವಾಸಕ್ಕೆ ಇಬ್ಬರನ್ನು ಹಾಜರು ಪಡಿಸಲಿದ್ದಾರೆ ಎನ್ನಲಾಗಿದೆ.

VISTARANEWS.COM


on

Actor Darshan
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ (Renuka Swamy murder case) ಕೊಲೆ ಆರೋಪದಲ್ಲಿ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಕಂಬಿ ಎಣಿಸುತ್ತಿರುವ ನಟ ದರ್ಶನ್‌ (Actor Darshan) ಮತ್ತು ಅವರ ಗೆಳತಿ ಪವಿತ್ರಾ ಗೌಡ ಇಂದೇ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್‌ ಆಗುವ ಸಾಧ್ಯತೆ ಇದೆ. ಹೌದು, ಕೊಲೆ ಪ್ರಕರಣದಲ್ಲಿ ಎ 1 ಮತ್ತು ಎ 2 ಆರೋಪಿಗಳಾಗಿರುವ ದರ್ಶನ್‌ ಮತ್ತು ಪವಿತ್ರಾ ಗೌಡ ಅವರನ್ನು ಇಂದು ಜಡ್ಜ್‌ ಮುಂದೆ ಹಾಜರುಪಡಿಸಲಾಗುತ್ತಿದ್ದು, ಬಹುತೇಕ ಶಿಕ್ಷೆ ಜಾರಿಯಾಗುವ ಸಾಧ್ಯತೆ ಇದೆ. ಹೀಗಾಗಿ ಸದ್ಯ ಇಬ್ಬರೂ ಆತಂಕದಲ್ಲಿಯೇ ಸಮಯ ದೂಡುತ್ತಿದ್ದಾರೆ.

ಜೂನ್‌ 11ರಿಂದ ಜೂನ್‌ 17ರ ವರೆಗೆ ಪೊಲೀಸರು ದರ್ಶನ್‌ ಮತ್ತು ಪವಿತ್ರಾ ಗೌಡ ಅವರನ್ನು ವಶಕ್ಕೆ ಪಡೆದಿದ್ದರು. ಆದರೆ ಜೂನ್‌ 17ರಂದು ಸರ್ಕಾರಿ ರಜೆ ಇರುವುದರಿಂದ ಪೊಲೀಸರು ಎರಡು ದಿನಗಳ ಮೊದಲೇ ಕೋರಮಂಗಲದ ಜಡ್ಜ್​​​​ ನಿವಾಸಕ್ಕೆ ಇಬ್ಬರನ್ನು ಹಾಜರು ಪಡಿಸಲಿದ್ದಾರೆ ಎನ್ನಲಾಗಿದೆ. ಈಗಾಗಲೇ ಪೊಲೀಸರು ದರ್ಶನ್‌ ಅವರ ಪ್ರಾಥಮಿಕ ವಿಚಾರಣೆಯನ್ನು ಮುಗಿಸಿದ್ದಾರೆ. ಹೀಗಾಗಿ ದರ್ಶನ್‌ ಮತ್ತು ಪವಿತ್ರಾ ಗೌಡ ಇಬ್ಬರನ್ನೂ ನ್ಯಾಯಾಧೀಶರು ಪರಪ್ಪನ ಅಗ್ರಹಾರಕ್ಕೆ ಕಳುಹಿಸುವ ಸಾಧ್ಯತೆಯೇ ಹೆಚ್ಚಿದೆ.

ಮಧ್ಯಾಹ್ನದ ವೇಳೆಗೆ ನ್ಯಾಯಾಲಯದ ಮುಂದೆ ಆರೋಪಿಗಳನ್ನು ಹಾಜರು ಪಡಿಸಲಾಗುವುದು ಎಂದು ಪೊಲೀಸ್ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಪ್ರಕರಣದ ಎ1 ಆರೋಪಿಯಾಗಿರುವ ಪವಿತ್ರಾ ಗೌಡ ಅವರನ್ನು ಈಗಾಗಲೇ ಮಹಿಳಾ ಸಾಂತ್ವನ ಕೇಂದ್ರದಿಂದ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಕರೆ ತರಲಾಗಿದೆ. ಬಟ್ಟೆ, ಬ್ಯಾಗ್ ಸಮೇತ ಠಾಣೆಗೆ ಆಗಮಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಆಗಮಿಸಿದ್ದು, ಪ್ರಕರಣದ ಬಗ್ಗೆ ಕಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದರ್ಶನ್ ವಿರುದ್ಧ ತೆರಯಲಾಗುತ್ತಾ ರೌಡಿಶೀಟ್?

ಸದ್ಯ ಹೀಗೊಂದು ಸಾಧ್ಯತೆ ಇದೆ ಎನ್ನುವ ಚರ್ಚೆ ಆರಂಭವಾಗಿದೆ. ದರ್ಶನ್ ವಿರುದ್ಧ ರೌಡಿಶೀಟ್ ತೆರೆಯುವ ಬಗ್ಗೆ ಕಾನೂನು ತಜ್ಞರ ಜತೆ ಪೊಲೀಸರು ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಪದೇ ಪದೆ ಕ್ರೈಂನಲ್ಲಿ ಭಾಗಿಯಾಗಿದ್ದರೆ ರೌಡಿಶೀಟ್‌ ತೆರೆಯಬಹುದು. ಆದರೆ 2011ರ ಬಳಿಕ ದರ್ಶನ್ ವಿರುದ್ಧ ಯಾವುದೇ ಕ್ರೈಂ ಪ್ರಕರಣ ದಾಖಲಾಗಿಲ್ಲ. ಈಗ ಕೊಲೆ ಅರೋಪದಲ್ಲಿ ಬಂಧಿತರಾಗಿದ್ದಾರೆ. ಹೀಗಾಗಿ ಈ ಬಗ್ಗೆ ಕಾನೂನು ತಜ್ಞರ ಬಳಿ ಪೊಲೀಸರ ಚರ್ಚೆ ನಡೆಸಿದ್ದಾರೆ.

ಇದನ್ನೂ ಓದಿ: Actor Darshan: ಪ್ರಾಯಶ್ಚಿತದ ಬೇಗೆಯಲ್ಲಿ ದರ್ಶನ್‌; ದುಃಖ ತೋಡಿಕೊಂಡ ಚಾಲೆಂಜಿಂಗ್‌ ಸ್ಟಾರ್‌ ಹೇಳಿದ್ದೇನು?

ದರ್ಶನ್‌ ಅವರ ಗೆಳತಿ ಪವಿತ್ರಾಗೌಡ ಅವರಿಗೆ ಅಶ್ಲೀಲ ಮೆಸೇಜ್‌ ಕಳುಹಿಸಿದ್ದಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿ ಎನ್ನುವ ವ್ಯಕ್ತಿಯನ್ನು ಅಪಹರಿಸಿ ಕೊಲೆ ಮಾಡಲಾಗಿತ್ತು. ದರ್ಶನ್‌ ಸೂಚನೆ ಕೊಟ್ಟಿದ್ದರಿಂದಲೇ ಈ ಕೃತ್ಯ ಎಸಗಿರುವುದಾಗಿ ಆರಂಭದಲ್ಲಿ ಬಂಧಿತರು ಬಾಯ್ಬಿಟ್ಟಿದ್ದರು. ಹೀಗಾಗಿ ಜೂನ್‌ 11ರಂದು ದರ್ಶನ್‌ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಪೊಲೀಸ್‌ ವಶದಲ್ಲಿರುವ ದರ್ಶನ್‌ ಈಗ ಕೃತ್ಯದ ಬಗ್ಗೆ ಪ್ರಾಯಶ್ಚಿತ ಪಡುತ್ತಿದ್ದಾರೆ ಎಂದು ಆಪ್ತಮೂಲಗಳು ತಿಳಿಸಿವೆ.

Continue Reading

ಸ್ಯಾಂಡಲ್ ವುಡ್

Actor Darshan: ಕೃಷಿ ಇಲಾಖೆ ರಾಯಭಾರಿ ಹುದ್ದೆಯಿಂದ ಕೊಲೆ ಆರೋಪಿ ದರ್ಶನ್‌ ವಜಾ!

Actor Darshan: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿತ್ತು. ವನ್ಯಜೀವಿ ಧಾಮದಲ್ಲಿ ಖಾಸಗಿ ವಾಹನ ಬಳಕೆ ಬಳಕೆ, ಅರಣ್ಯ ಸಿಬ್ಬಂದಿ ಜತೆ ‌ಬಾಡೂಟ, ಎಣ್ಣೆ ಪಾರ್ಟಿ ಮಾಡುವ ಮೂಲಕ ಅರಣ್ಯ ಮತ್ತು ವನ್ಯಜೀವಿ ಕಾಯ್ದೆ ಉಲ್ಲಂಘಿಸಿದ್ದಾರೆ ಎನ್ನಲಾಗಿತ್ತು. ನಟ ದರ್ಶನ್ ಅವರು ಕರ್ನಾಟಕ ರಾಜ್ಯ ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯೂ ಆಗಿದ್ದು, ಜಿಲ್ಲೆಯ ಮುತ್ತೋಡಿ, ಭದ್ರ ವನ್ಯಜೀವಿ ತಾಣದಲ್ಲಿ ಖಾಸಗಿ ವಾಹನ ಬಳಕೆ ಮಾಡಿದ್ದಾರೆ. ಅಲ್ಲದೇ ಸೂಕ್ಷ್ಮ ಪ್ರದೇಶಗಳಲ್ಲಿ ಅರಣ್ಯ ಸಿಬ್ಬಂದಿ ಜತೆ ‌ಬಾಡೂಟ, ಎಣ್ಣೆ ಪಾರ್ಟಿ ಮಾಡಿದ್ದಾರೆ ಎನ್ನಲಾಗಿತ್ತು.

VISTARANEWS.COM


on

Actor Darshan continue as Agriculture Department ambassador What MB Patil said
Koo

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸ್‌ ಕಸ್ಟಡಿ ಪಾಲಾಗಿರುವ ನಟ ದರ್ಶನ್  (Actor Darshan) ಕರ್ನಾಟಕ ರಾಜ್ಯ ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯೂ ಆಗಿದ್ದರು. ದರ್ಶನ್‌ 2021ರ ಫೆಬ್ರವರಿಯಲ್ಲಿ ಬಿಜೆಪಿ ಆಡಳಿತಾವಧಿಯಲ್ಲಿ ದರ್ಶನ್‌ ಕೃಷಿ ಇಲಾಖೆಯ ರಾಯಭಾರಿಯಾಗಿದ್ದರು. ಇದೀಗ ರೇಣುಕಾಚಾರ್ಯ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನವಾಗಿದೆ. ಕೊಲೆ ಆರೋಪ ಎದುರಿಸುತ್ತಿರುವ ನಟ ದರ್ಶನ್ (Darshan) ಅವರು ಕೃಷಿ ಇಲಾಖೆಯ ರಾಯಭಾರಿ ಹುದ್ದೆಯಿಂದ ವಜಾ ಮಾಡುವುದು ಖಚಿತವಾಗಿದೆ. ದರ್ಶನ್‌ ಇನ್ನು ಕೃಷಿ ರಾಯಭಾರಿಯಾಗಿ ಮುಂದುವರಿಯುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ.

ಈ ಬಗ್ಗೆ ಎಂ.ಬಿ ಪಾಟೀಲ್ ಮಾತನಾಡಿ ʻʻದರ್ಶನ್‌ಗೆ ರಾಜಮರ್ಯಾದೆಯ ಪ್ರಶ್ನೆಯೇ ಇಲ್ಲ. ಆರೋಪಿ ಆರೋಪಿಯೇ. ಆರೋಪ ಸಾಬೀತಾದರೆ ಅವರಿಗೆ ಶಿಕ್ಷೆ ಆಗುತ್ತದೆ. ದರ್ಶನ್ ಕೃಷಿ ಇಲಾಖೆ ರಾಯಭಾರಿಯಾಗಿ ಮುಂದುವರಿಯುವ ಪ್ರಶ್ನೆಯೇ ಇಲ್ಲ. ಈ ರೀತಿಯ ಘಟನೆ ಆದ ಬಳಿಕ ರಾಯಭಾರಿಯಾಗಿ ಮುಂದುವರಿಸಲು ಆಗುವುದಿಲ್ಲʼʼ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ವನ್ಯಜೀವಿ ಧಾಮದಲ್ಲಿ ಖಾಸಗಿ ವಾಹನ ಬಳಕೆ, ಬಾಡೂಟ, ಎಣ್ಣೆ ಪಾರ್ಟಿ

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿತ್ತು. ವನ್ಯಜೀವಿ ಧಾಮದಲ್ಲಿ ಖಾಸಗಿ ವಾಹನ ಬಳಕೆ ಬಳಕೆ, ಅರಣ್ಯ ಸಿಬ್ಬಂದಿ ಜತೆ ‌ಬಾಡೂಟ, ಎಣ್ಣೆ ಪಾರ್ಟಿ ಮಾಡುವ ಮೂಲಕ ಅರಣ್ಯ ಮತ್ತು ವನ್ಯಜೀವಿ ಕಾಯ್ದೆ ಉಲ್ಲಂಘಿಸಿದ್ದಾರೆ ಎನ್ನಲಾಗಿತ್ತು. ನಟ ದರ್ಶನ್ ಅವರು ಕರ್ನಾಟಕ ರಾಜ್ಯ ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯೂ ಆಗಿದ್ದು, ಜಿಲ್ಲೆಯ ಮುತ್ತೋಡಿ, ಭದ್ರ ವನ್ಯಜೀವಿ ತಾಣದಲ್ಲಿ ಖಾಸಗಿ ವಾಹನ ಬಳಕೆ ಮಾಡಿದ್ದಾರೆ. ಅಲ್ಲದೇ ಸೂಕ್ಷ್ಮ ಪ್ರದೇಶಗಳಲ್ಲಿ ಅರಣ್ಯ ಸಿಬ್ಬಂದಿ ಜತೆ ‌ಬಾಡೂಟ, ಎಣ್ಣೆ ಪಾರ್ಟಿ ಮಾಡಿದ್ದಾರೆ ಎನ್ನಲಾಗಿತ್ತು. ವನ್ಯಜೀವಿ ಧಾಮಗಳಿಗೆ ದರ್ಶನ್ ಭೇಟಿ ನೀಡಿದ ಫೋಟೋಗಳು‌ ಸದ್ಯ ವೈರಲ್ ಆಗಿದ್ದವು.

ಇದನ್ನೂ ಓದಿ: Actor Darshan: ಎಷ್ಟೇ ದಿನ ಆದರೂ ಚಂದ್ರಣ್ಣನ ಶವ ಎತ್ತಲ್ಲ; ಅನು ತಂದೆ ನಿಧನಕ್ಕೆ ಸಂಬಂಧಿಕರ ಕಣ್ಣೀರು

ಅರಣ್ಯದ ಸೂಕ್ಷ್ಮ ಪ್ರದೇಶದಲ್ಲಿ ಖಾಸಗಿ ಕಾರುಗಳ ಬಳಕೆ ನಿಷಿದ್ಧ. ಆದರೂ ದರ್ಶನ್‌ ಅವರಿಗೆ ಖಾಸಗಿ ವಾಹನ ಬಳಸಲು ಅನುಮತಿ ನೀಡಲಾಗಿದೆ ಎಂದು ಚಿಕ್ಕಮಗಳೂರಿನ ಅರಣ್ಯ ಸಿಬ್ಬಂದಿ ವಿರುದ್ಧ ಸಾರ್ವಜನಿಕರು ಗಂಭೀರ ಆರೋಪ ಮಾಡಿದ್ದರು. ಸಾಮಾನ್ಯ ಜನರಿಗೆ ಮಾತ್ರ ಕಠಿಣ ನಿಯಮಗಳು, ಸೆಲೆಬ್ರಿಟಿಗಳಿಗಾದರೆ ನಿಯಮ ಅನ್ವಯಿಸಲ್ಲವೇ ಎಂದು ಜನರು ಪ್ರಶ್ನಿಸಿಸಿದ್ದರು.

ಮತ್ತೊಂದು ಪ್ರಕರಣದಲ್ಲಿ ಎಫ್‌ಐಆರ್‌

ಮೈಸೂರಿನ ಟಿ. ನರಸೀಪುರದಲ್ಲಿರುವ ಫಾರ್ಮ್ ಹೌಸ್‌ನಲ್ಲಿ ನಾಲ್ಕು ಬಾರ್‌ ಹೆಡೆಡ್‌ ಗೂಸ್‌ (ವಿಶಿಷ್ಟ ಪ್ರಭೇದದ ಬಾತುಕೋಳಿ)ಗಳನ್ನು ಸಾಕಿದ ಹಿನ್ನೆಲೆಯಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ದರ್ಶನ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ನಟ ದರ್ಶನ್, ಅವರ ಪತ್ನಿ ವಿಜಯಲಕ್ಷ್ಮಿ ಮತ್ತು ಪ್ರಾಪರ್ಟಿ ಮ್ಯಾನೇಜರ್ ನಾಗರಾಜ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎನ್ನಲಾಗಿದೆ. ಅರಣ್ಯ ಇಲಾಖೆಯ ವಿಚಕ್ಷಣಾ ವಿಭಾಗದಿಂದ ಎಫ್‌ಐಆರ್ ದಾಖಲಿಸಲಾಗಿದೆ. ಐದು ನೋಟಿಸ್‌ ನೀಡಿದ್ದು, ಇದುವರೆಗೆ ತನಿಖಾಧಿಕಾರಿಗಳ ಮುಂದೆ ಹಾಜರಾಗಿಲ್ಲ ಎಂದು ತನಿಖಾಧಿಕಾರಿಯೊಬ್ಬರು ತಿಳಿಸಿದ್ದಾರೆ.

Continue Reading

ಕರ್ನಾಟಕ

Road Accident: ಬೆಂಗಳೂರು-ಮೈಸೂರು‌ ಎಕ್ಸ್‌ಪ್ರೆಸ್‌ ವೇಯಲ್ಲಿ ಸರಣಿ ಅಪಘಾತ; ಐದು ಕಾರುಗಳು ಜಖಂ

Road Accident: ಬೆಂಗಳೂರು-ಮೈಸೂರು‌ ಎಕ್ಸ್ ಪ್ರೆಸ್ ವೇಯಲ್ಲಿ ಸರಣಿ ಅಪಘಾತ ಸಂಭವಿಸಿ ಐದು ಕಾರುಗಳು ಜಖಂಗೊಂಡಿವೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗೆಜ್ಜಲಗೆರೆ ಗ್ರಾಮದ ಬಳಿ ಈ ಸರಣಿ ಅಪಘಾತ ನಡೆದಿದೆ. ವಾಹನಗಳು ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದವು. ಮದ್ದೂರು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

VISTARANEWS.COM


on

Road Accident
Koo

ಮಂಡ್ಯ: ಬೆಂಗಳೂರು-ಮೈಸೂರು‌ ಎಕ್ಸ್ ಪ್ರೆಸ್ ವೇಯಲ್ಲಿ ಸರಣಿ ಅಪಘಾತ ಸಂಭವಿಸಿ ಐದು ಕಾರುಗಳು ಜಖಂಗೊಂಡಿವೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗೆಜ್ಜಲಗೆರೆ ಗ್ರಾಮದ ಬಳಿ ಈ ಸರಣಿ ಅಪಘಾತ ನಡೆದಿದೆ. ವಾಹನಗಳು ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದವು. ಮದ್ದೂರು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ (Road Accident).

ಕೆಲವು ದಿನಗಳ ಹಿಂದೆಯಷ್ಟೇ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಅವಘಡ ನಡೆದು ನಾಲ್ವರು ಗಾಯಗೊಂಡಿದ್ದರು. ಓವರ್ ಸ್ಪೀಡ್‌ನಲ್ಲಿ ಬಂದ ಕಾರು ನಿಯಂತ್ರಣ ಕಳೆದುಕೊಂಡು ಸಂಕಲಗೆರೆ ಗೇಟ್ ಬಳಿ ಹೆದ್ದಾರಿ ಪಕ್ಕದ ಕೆರೆಗೆ ಬಿದ್ದ ಅಪಘಾತ ಸಂಭವಿಸಿತ್ತು. ಸ್ಕೋಡಾ ಕಾರಿನಲ್ಲಿ ನಾಲ್ವರು ಬೆಂಗಳೂರಿನಿಂದ ಮೈಸೂರು ಕಡೆಗೆ ಪ್ರಯಾಣಿಸುತ್ತಿದ್ದಾಗ ಅವಘಡ ನಡೆದಿತ್ತು. ಓವರ್ ಸ್ಪೀಡ್‌ನಿಂದ ಸರ್ವಿಸ್ ರಸ್ತೆಗೆ ತೆಗೆದುಕೊಳ್ಳುವ ವೇಳೆ ನಿಯಂತ್ರಣ ತಪ್ಪಿ ಸಿನಿಮಾ ಸ್ಟೈಲ್‌ನಲ್ಲಿ ಕಾರು ಕೆರೆಗೆ ಹಾರಿತ್ತು.

ಚಿತ್ರದುರ್ಗದಲ್ಲಿ ಭೀಕರ ಅಪಘಾತ; ನಾಲ್ಕು ಮಂದಿ ಸಾವು

ಚಿತ್ರದುರ್ಗ: ಶನಿವಾರ ಮುಂಜಾನೆ ಚಿತ್ರದುರ್ಗ ತಾಲೂಕಿನ ಚಿಕ್ಕಬೆನ್ನೂರು ಗ್ರಾಮದಲ್ಲಿ ಹಾದು ಹೋಗುವ NH 4 ರಲ್ಲಿ ಭೀಕರ ಅಪಘಾತ ನಡೆದಿದೆ. ನ್ಯಾಷನಲ್​ ಹೈವೇನಲ್ಲಿ ಚಲಿಸುತ್ತಿದ್ದ ಕಾರೊಂದಕ್ಕೆ ಹಿಂಬದಿಂದ ಲಾರಿಯೊಂದು ರಭಸದಿಂದ ಗುದ್ದಿದ ಪರಿಣಾಮ ಇಬ್ಬರು ಮಕ್ಕಳು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಭರಮಸಾಗರ ಹೋಬಳಿಯ ಚಿಕ್ಕಬೆನ್ನೂರು ಗ್ರಾಮದ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಲಾರಿ ಮತ್ತು ಕಾರು ಚಿತ್ರದುರ್ಗ ಕಡೆಯಿಂದ ದಾವಣಗೆರೆ ಕಡೆಗೆ ಹೊರಟಿತ್ತು. ಈ ವೇಳೆ ಅತಿ ವೇಗದಲ್ಲಿ ಬಂದ ಲಾರಿ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಕಾರಿನಲ್ಲಿದ್ದವರು ಒಂದೇ ಕುಟುಂಬಕ್ಕೆ ಸೇರಿದವರು ಇರಬೇಕು ಎಂದು ಸ್ಥಳೀಯರು ಅಂದಾಜಿಸಿದ್ದಾರೆ. ಶನಿವಾರವಾಗಿದ್ದ ಕಾರಣ ಮುಂಜಾನೆ ತಮ್ಮ ಪ್ರಯಾಣ ಆರಂಭಿಸಿರಬಹುದು ಎಂದು ಹೇಳಲಾಗಿದೆ. 

ಇದನ್ನೂ ಓದಿ: Actor Darshan: ಇಂದು ನಟ ದರ್ಶನ್‌ ಭವಿಷ್ಯ ನಿರ್ಧಾರ; ಕೋರ್ಟ್‌ ತೀರ್ಪು ಏನಿರಲಿದೆ?

ಉಡುಪಿ: ಕಾರು ಪಲ್ಟಿಯಾಗಿ ಗಾಯ

ಉಡುಪಿ: ಡಿವೈಡರ್ ಕಲ್ಲುಗಳಿಗೆ ಬಡಿದ ಕಾರು ಪಲ್ಟಿಯಾದ ಘಟನೆ ಉಡುಪಿ-ಮಣಿಪಾಲ ಮಧ್ಯದ ಇಂದ್ರಾಳಿಯಲ್ಲಿ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರಿಗೆ ತೀವ್ರ ಗಾಯಗಳಾಗಿದ್ದು, ಈ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದೆ. ಮಣಿಪಾಲದಿಂದ ಉಡುಪಿಯತ್ತ ತೆರಳುತ್ತಿದ್ದ ಫೋರ್ಡ್ ಫಿಗೊ ಕಾರು ಅಪಘಾತಕ್ಕೀಡಾಗಿದೆ ಎಂದು ಮೂಲಗಳು ತಿಳಿಸಿವೆ.

ಬೈಕ್‌ಗೆ ಹಾನಿ

ಆರಂಭದಲ್ಲಿ ಕಾರು ಡಿವೈಡರ್ ಕಲ್ಲಿಗೆ ಡಿಕ್ಕಿ ಹೊಡೆದಿತ್ತು. ತಕ್ಷಣ ಕಲ್ಲಿನ ತುಂಡು ಹಾರಿ ಸಮೀಪದಲ್ಲಿದ್ದ ಬೈಕ್‌ ಮೇಲೆ ಬಿದ್ದಿದೆ. ಇದರಿಂದ ಬೈಕಿಗೂ ತೀವ್ರ ಹಾನಿಯಾಗಿದ್ದು, ಅದೃಷ್ಟವಶಾತ್‌ ಬೈಕ್‌ ಸವಾರ ಬಚಾವಾಗಿದ್ದಾನೆ. ರಸ್ತೆ ಮಧ್ಯೆ ವಿಭಜಕವಾಗಿ ಬಳಸುತ್ತಿದ್ದ ಕಲ್ಲುಗಳು ಎಗರಿದ್ದು, ಟ್ರಾಫಿಕ್ ಪೊಲೀಸ್ ಮತ್ತು ಹೈವೇ ಅಥಾರಿಟಿ ನಿರ್ಲಕ್ಷ್ಯದಿಂದ ಇಂತಹ ಘಟನೆ ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

Continue Reading

ಯಾದಗಿರಿ

Students Fall Sick: ಬಿಸಿಯೂಟ ಸೇವಿಸಿ ಸರ್ಕಾರಿ ಶಾಲೆಯ 70ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆರೋಗ್ಯ ವಿಚಾರಿಸಿದ ಶಾಸಕ

Students Fall Sick: ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದ ನಾಲ್ಕು ಸರ್ಕಾರಿ ಶಾಲೆಯ 70ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬಿಸಿಯೂಟ ಸೇವಿಸಿ ಅಸ್ವಸ್ಥರಾಗಿದ್ದು, ದೋರನಹಳ್ಳಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಾಗಿದ್ದಾರೆ. ಸದ್ಯ ಅವರೆಲ್ಲ ಚೇತರಿಸಿಕೊಳ್ಳುತ್ತಿದ್ದು, ದೋರನಹಳ್ಳಿ ಆಸ್ಪತ್ರೆಗೆ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಜತೆಗೆ ಅಧಿಕಾರಿಗಳೂ ಆಗಮಿಸಿ ಮಾಹಿತಿ ಕಲೆ ಹಾಕಿದ್ದಾರೆ.

VISTARANEWS.COM


on

Students Fall Sick
Koo

ಯಾದಗಿರಿ: ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದ ನಾಲ್ಕು ಸರ್ಕಾರಿ ಶಾಲೆಯ 70ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬಿಸಿಯೂಟ ಸೇವಿಸಿ ಅಸ್ವಸ್ಥರಾಗಿದ್ದು (Students Fall Sick), ದೋರನಹಳ್ಳಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಾಗಿದ್ದಾರೆ. ಸದ್ಯ ಅವರೆಲ್ಲ ಚೇತರಿಸಿಕೊಳ್ಳುತ್ತಿದ್ದು, ದೋರನಹಳ್ಳಿ ಆಸ್ಪತ್ರೆಗೆ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ (Yadagiri News).

ಖಾಸಗಿ ಏಜೆನ್ಸಿಯಿಂದ ಪೂರೈಕೆಯಾದ ಬಿಸಿಯೂಟವನ್ನು ಶುಕ್ರವಾರ ಮಧ್ಯಾಹ್ನ ಸೇವಿಸಿದ ವಿದ್ಯಾರ್ಥಿಗಳು ಬಳಿಕ ಅಸ್ವಸ್ಥರಾಗಿದ್ದರು. ಅನ್ನ, ಸಾಂಬರ್ ಸೇವಿಸಿದ 70ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಾಂತಿ-ಬೇಧಿ ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಶಾಸಕರು ಹೇಳಿದ್ದೇನು?

ಆರೋಗ್ಯ ವಿಚಾರಿಸಿದ ಬಳಿಕ ಮಾತನಾಡಿದ ಶಾಸಕ ಚನ್ನಾರೆಡ್ಡಿ ಪಾಟೀಲ ಅವರು, ʼʼದೋರನಹಳ್ಳಿ ಗ್ರಾಮದ ನಾಲ್ಕು ಶಾಲೆಯ ವಿದ್ಯಾರ್ಥಿಗಳು ಬಿಸಿಯೂಟ ಸೇವಿಸಿದ ನಂತರ ಅಸ್ವಸ್ಥಗೊಂಡಿದ್ದಾರೆ. ಊಟವಾದ ನಂತರ ವಾಂತಿ-ಭೇದಿ ಕಾಣಿಸಿಕೊಂಡಿದೆ. ಈ ಪೈಕಿ ಮೂವರು ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿದ್ದಾರೆ. ಆದರೆ ಜೀವಕ್ಕೆ ಯಾವುದೇ ಅಪಾಯವಿಲ್ಲ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆʼʼ ಎಂದು ತಿಳಿಸಿದ್ದಾರೆ.

ʼʼಖಾಸಗಿ ಏಜೆನ್ಸಿಯಿಂದ ಶಾಲೆಗೆ ಊಟ ಪೂರೈಕೆಯಾಗಿದೆ ಎನ್ನುವುದು ತಿಳಿದು ಬಂದಿದ್ದು, ತಪ್ಪಿತಸ್ಥರು ಯಾರೇ ಆಗಿದ್ದರೂ ಕ್ರಮ ಕೈಗೊಳ್ಳಲಾಗುತ್ತದೆ. ಈ ಬಗ್ಗೆ ಸೂಕ್ತ ತನಿಖೆ ಕೈಗೊಳ್ಳುತ್ತೇವೆʼʼ ಎಂದು ಅವರು ವಿವರಿಸಿದ್ದಾರೆ.

ಅಧಿಕಾರಿಗಳ ಭೇಟಿ

ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದ ಪ್ರಕರಣ ಬೆಳಕಿಗೆ ಬರುತ್ತಲೇ ದೋರನಹಳ್ಳಿ ಸರ್ಕಾರಿ ಆಸ್ಪತ್ರೆಗೆ ಅಧಿಕಾರಿಗಳ ದಂಡು ದೌಡಾಯಿಸಿ ಆರೋಗ್ಯ ವಿಚಾರಿಸಿದೆ. ಜಿಲ್ಲಾಧಿಕಾರಿ ಡಾ. ಸುಶೀಲಾ ಬಿ., ಜಿಲ್ಲಾ ಪಂಚಾಯತ್‌ ಸಿಇಒ ಗರೀಮಾ ಪನ್ವಾರ್, ಎಸ್‌ಪಿ ಜಿ. ಸಂಗೀತಾ ಸೇರಿ ಅಧಿಕಾರಿಗಳ ತಂಡ ಆಗಮಿಸಿ ಮಾಹಿತಿ ಕಲೆ ಹಾಕಿದೆ.

ಇದನ್ನೂ ಓದಿ: Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಬುರ್ಕಾ ಧರಿಸಿ ಓಡಾಡ್ತಿದ್ದ ವ್ಯಕ್ತಿಗೆ ಮಹಿಳೆಯರಿಂದ ಚಪ್ಪಲಿ ಏಟು!

ಬಾಗಲಕೋಟೆ: ಬುರ್ಕಾ ಧರಿಸಿ ಓಡಾಡ್ತಿದ್ದ ವ್ಯಕ್ತಿಗೆ ಮಹಿಳೆಯರಿಂದ ಚಪ್ಪಲಿ ಏಟು ಬಿದ್ದಿರುವ ಘಟನೆ ಇಳಕಲ್‌ ನಗರದ (Bagalkot News) ಎಸಿಒ ಶಾಲೆ ಬಳಿ ನಡೆದಿದೆ. ಬುರ್ಕಾ ಧರಿಸಿ ಹೋಗುತ್ತಿದ್ದಾಗ ಅನುಮಾನ ಬಂದು ಸ್ಥಳೀಯರು ಪ್ರಶ್ನಿಸಿದ್ದಾರೆ. ಈ ವೇಳೆ ಆ ವ್ಯಕ್ತಿ ಮಹಿಳೆಯಲ್ಲ, ಪುರುಷ ಎಂದು ತಿಳಿದುಬಂದಿದ್ದರಿಂದ ಸ್ಥಳೀಯರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಇದೇ ವೇಳೆ ಮಹಿಳೆಯರು ಕೂಡ ಬಾಯಿಗೆ ಬಂದಂತೆ ಬೈಯ್ದು ಚಪ್ಪಲಿಯಿಂದ ಹೊಡೆದಿದ್ದಾರೆ.

ವಿಚಾರಣೆ ವೇಳೆ ಬುರ್ಕಾ ಧರಿಸಿದ್ದ ವ್ಯಕ್ತಿ ಹುನಗುಂದ ತಾಲೂಕಿನ ವೀರಾಪುರ ನಿವಾಸಿ ಮಹಾಂತೇಶ್ ರಾಮವಾಡಗಿ (36) ಎಂದು ತಿಳಿದುಬಂದಿದೆ. ನಗರದಲ್ಲಿ ಬುರ್ಕಾದಲ್ಲಿ ಓಡಾಡುತ್ತಿದ್ದರಿಂದ ಸಂಶಯ ಬಂದು ವಿಚಾರಿಸಿದಾಗ ಮಹಿಳೆ ಅಲ್ಲ ಎಂದು ಗೊತ್ತಾಗಿದೆ. ಇದರಿಂದ ಸ್ಥಳದಲ್ಲಿದ್ದ ಜನತೆಯಿಂದ ವ್ಯಕ್ತಿಗೆ ಧರ್ಮದೇಟು ಬಿದ್ದಿದೆ. ಆತನ ಚೀಲ ಪರಿಶೀಲಿಸಿದಾಗ ಚಾಕು, ಕತ್ತರಿ ಕಂಡುಬಂದಿದೆ. ಸುದ್ದಿ ತಿಳಿದು ಸ್ಥಳಕ್ಕೆ ಇಳಕಲ್‌ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಚಪ್ಪಲಿ ಏಟು ತಿಂದ ವ್ಯಕ್ತಿಗೆ ಹೆಂಡತಿ, ಮಗ ಇದ್ದು, ಮಂಗಳೂರಿನ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಮಂಗಳೂರಿನಿಂದ ಗದಗಗೆ ಬಂದು, ಬುರ್ಕಾ ಖರೀದಿಸಿದ್ದ ಮಹಾಂತೇಶ್, ಇಳಕಲ್‌ನಲ್ಲಿ ಓಡಾಡುತ್ತಿದ್ದ. ಇಳಕಲ್ ಠಾಣೆಗೆ ಮಹಾಂತೇಶ್ ಸಂಬಂಧಿಕರನ್ನು ಕರೆಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Continue Reading
Advertisement
ESP vs CRO
ಕ್ರೀಡೆ9 mins ago

ESP vs CRO: ಯುರೋ ಕಪ್​ನಲ್ಲಿ ಇಂದು 2 ಪಂದ್ಯ; ಸ್ಪೇನ್‌ಗೆ ಸವಾಲೊಡ್ಡೀತೇ ಕ್ರೊವೇಷಿಯಾ?

Actor Darshan
ಕರ್ನಾಟಕ9 mins ago

Actor Darshan: ಇಂದೇ ಪರಪ್ಪನ ಅಗ್ರಹಾರ ಸೇರ್ತಾರ ದರ್ಶನ್‌, ಪವಿತ್ರಾ ಗೌಡ?

Actor Darshan continue as Agriculture Department ambassador What MB Patil said
ಸ್ಯಾಂಡಲ್ ವುಡ್46 mins ago

Actor Darshan: ಕೃಷಿ ಇಲಾಖೆ ರಾಯಭಾರಿ ಹುದ್ದೆಯಿಂದ ಕೊಲೆ ಆರೋಪಿ ದರ್ಶನ್‌ ವಜಾ!

Pakistan cricket team
ಕ್ರೀಡೆ48 mins ago

Pakistan Team Troll: ಟಿ20 ವಿಶ್ವಕಪ್‌ನಿಂದ ಹೊರಬಿದ್ದ ಪಾಕ್​ಗೆ ಟ್ರೋಲ್​ಗಳ ಛಡಿಯೇಟು

Road Accident
ಕರ್ನಾಟಕ54 mins ago

Road Accident: ಬೆಂಗಳೂರು-ಮೈಸೂರು‌ ಎಕ್ಸ್‌ಪ್ರೆಸ್‌ ವೇಯಲ್ಲಿ ಸರಣಿ ಅಪಘಾತ; ಐದು ಕಾರುಗಳು ಜಖಂ

Importance Of Tilaka
ಧಾರ್ಮಿಕ54 mins ago

Importance Of Tilaka: ಹಣೆಯ ಮೇಲೆ ತಿಲಕ ಇಟ್ಟರೆ ಏನೇನು ಪ್ರಯೋಜನ? ಇದಕ್ಕಿದೆ ವೈಜ್ಞಾನಿಕ ಕಾರಣ!

Raveena Tandon sues man for Rs 100 crore for defamatory
ಬಾಲಿವುಡ್1 hour ago

Raveena Tandon: ರವೀನಾ ಟಂಡನ್ ವಿಡಿಯೊ ವೈರಲ್​ ಮಾಡಿದ ವ್ಯಕ್ತಿ ಮೇಲೆ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ

Students Fall Sick
ಯಾದಗಿರಿ1 hour ago

Students Fall Sick: ಬಿಸಿಯೂಟ ಸೇವಿಸಿ ಸರ್ಕಾರಿ ಶಾಲೆಯ 70ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆರೋಗ್ಯ ವಿಚಾರಿಸಿದ ಶಾಸಕ

RSA vs NEP
ಕ್ರೀಡೆ1 hour ago

RSA vs NEP: ನೇಪಾಳ ವಿರುದ್ಧ ದಕ್ಷಿಣ ಆಫ್ರಿಕಾಗೆ 1 ರನ್​ ರೋಚಕ ಜಯ; ಗೆಲುವಿನ ಖಾತೆ ತೆರೆದ ಕಿವೀಸ್​

Actor Darshan Chandranna Family Members Want Anu To Attend Funeral
ಸ್ಯಾಂಡಲ್ ವುಡ್2 hours ago

Actor Darshan: ಎಷ್ಟೇ ದಿನ ಆದರೂ ಚಂದ್ರಣ್ಣನ ಶವ ಎತ್ತಲ್ಲ; ಅನು ತಂದೆ ನಿಧನಕ್ಕೆ ಸಂಬಂಧಿಕರ ಕಣ್ಣೀರು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ16 hours ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು18 hours ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು18 hours ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ19 hours ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ4 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ4 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ4 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ4 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

ಟ್ರೆಂಡಿಂಗ್‌