ರಾಜಸ್ಥಾನ, ಮಧ್ಯ ಪ್ರದೇಶ, ಛತ್ತೀಸ್‌ಗಢದಲ್ಲಿ ಆಪ್ ಸ್ಪರ್ಧೆ! ಇಂಡಿಯಾ ಕೂಟದಲ್ಲಿ ಬಿರುಕು! - Vistara News

ದೇಶ

ರಾಜಸ್ಥಾನ, ಮಧ್ಯ ಪ್ರದೇಶ, ಛತ್ತೀಸ್‌ಗಢದಲ್ಲಿ ಆಪ್ ಸ್ಪರ್ಧೆ! ಇಂಡಿಯಾ ಕೂಟದಲ್ಲಿ ಬಿರುಕು!

Assembly Election: ಕಾಂಗ್ರೆಸ್ ನೇತೃತ್ವದ ಇಂಡಿಯಾ ಕೂಟದ ಪಾಲುದಾರ ಪಕ್ಷವಾಗಿರುವ ಆಪ್, ಮುಂಬರುವ ಛತ್ತೀಸ್‌ಗಢ, ಮಧ್ಯ ಪ್ರದೇಶ, ರಾಜಸ್ಥಾನ ಚುನಾವಣೆಯಲ್ಲಿ ಸ್ಪರ್ಧಿಸಲಿದೆ.

VISTARANEWS.COM


on

Arvind Kejriwal
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: 2024ರ ಲೋಕಸಭೆ ಚುನಾವಣೆಯನ್ನು (Lok Sabha 2023) ಎದರಿಸಲು ಪ್ರತಿಪಕ್ಷಗಳು ಇಂಡಿಯಾ (India bloc) ಹೆಸರಿನಡಿ ಕೂಟವನ್ನು ರಚಿಸಿಕೊಂಡಿವೆ. ಆದರೆ, ಈ ಕೂಟದ ಪ್ರಮುಖ ಪಕ್ಷವಾಗಿರುವ ಆಮ್ ಆದ್ಮಿ ಪಾರ್ಟಿ(Aam Aadmi Party) ಮುಂಬರುವ ಮಧ್ಯ ಪ್ರದೇಶ(Madhya Pradesh), ಛತ್ತೀಸ್‌ಗಢ (Chhattisgarh) ಮತ್ತು ರಾಜಸ್ಥಾನ(Rajasthan) ವಿಧಾನಸಭೆ ಚುನಾವಣೆಯಲ್ಲಿ (Assembly Election) ಸ್ಪರ್ಧಿಸುವುದಾಗಿ ಹೇಳಿದೆ. ಅಲ್ಲದೇ, ಶೀಘ್ರವೇ ಅಬ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಆಪ್‌ನ ರಾಷ್ಟ್ರೀಯ ಸಂಚಾಲಕರೂ ಆಗಿರುವ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಹೇಳಿದ್ದಾರೆ. ಇದರೊಂದಿಗೆ ಇಂಡಿಯಾ ಕೂಟದ ಒಗ್ಗಟ್ಟಿಲ್ಲ ಎಂಬುದಕ್ಕೆ ಮತ್ತೊಂದು ಉದಾಹರಣೆ ದೊರೆತಿದೆ.

ಭಾರತೀಯ ಕೇಂದ್ರ ಚುನಾವಣಾ ಆಯೋಗ ಮಿಜೋರಾಂ, ಛತ್ತೀಸ್‌ಗಢ, ಮಧ್ಯ ಪ್ರದೇಶ, ರಾಜಸ್ಥಾನ ಮತ್ತು ತೆಲಂಗಾಣ ವಿಧಾನಸಭೆ ಚುನಾವಣೆ ವೇಳಾಪಟ್ಟಿಯನ್ನು ಘೋಷಣೆ ಮಾಡಿದೆ. ಚುನಾವಣೆಗಳು ನವೆಂಬರ್ 7ರಿಂದ ಆರಂಭವಾಗಲಿದ್ದು, ಡಿಸೆಂಬರ್ 3ರಂದು ಚುನಾವಣಾ ಫಲಿತಾಂಶವು ಪ್ರಕಟವಾಗಲಿದೆ.

ಈ ಸುದ್ದಿಯನ್ನೂ ಓದಿ: INDIA Bloc: ಇಂಡಿಯಾ ಒಕ್ಕೂಟದಲ್ಲಿ ಬಿಕ್ಕಟ್ಟು; ಟಿಎಂಸಿ, ಕಾಂಗ್ರೆಸ್‌ ಜತೆ ಮೈತ್ರಿಗೆ ಸಿಪಿಎಂ ನಕಾರ

ಆಪ್ ಕೂಡ ಚುನಾವಣೆಗೆ ಸಿದ್ಧತೆ ಮಾಡಿಕೊಂಡಿದೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು, ರಾಜಸ್ಥಾನ, ಮಧ್ಯ ಪ್ರದೇಶ, ಛತ್ತೀಸ್‌ಗಢ ವಿಧಾನಸಭೆ ಚುನಾವಣೆಗೆ ಆಮ್ ಆದ್ಮಿ ಪಾರ್ಟಿ ಪೂರ್ಣ ಪ್ರಮಾಣದಲ್ಲಿ ಸ್ಪರ್ಧಿಸಲಿದೆ ಎಂದು ಹೇಳಿದರು. ಇಂಡಿಯಾ ಕೂಟದ ಭಾಗವಾಗಿಯೇ ಸ್ಪರ್ಧಿಸಲಿದೆಯೇ ಎಂಬ ಪ್ರಶ್ನೆಗೆ, ಏನೇನು ಆಗುತ್ತದೆ ಎಂಬುದನ್ನು ನಾವು ನಿಮಗೆ ಹೇಳುತ್ತೇವೆ ಎಂದು ಅವರು ಹೇಳಿದರು.

ನವೆಂಬರ್ 7ರಿಂದ ವಿಧಾನಸಭೆ ಚುನಾವಣೆ ನಡೆಯಲಿದ್ದು, ಡಿಸೆಂಬರ್ 3ರಂದು ಫಲಿತಾಂಶ ದೊರೆಯಲಿದೆ. ವಿಧಾನಸಭೆ ಚುನಾವಣೆ ನಡೆಯಲಿರುವ ರಾಜಸ್ಥಾನ, ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿವೆ. ಕಾಂಗ್ರೆಸ್ ಮತ್ತು ಆಪ್ ಇಂಡಿಯಾ ಕೂಟದ ಪಾಲುದಾರ ಪಕ್ಷಗಳಿವೆ.

ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ತಂತ್ರಜ್ಞಾನ

Four Digit PIN: ಇಂಥ ಪಿನ್ ನಂಬರ್ ಕೊಡ್ತಾ ಇದ್ದೀರಾ? ನಿಮ್ಮ ದುಡ್ಡಿಗೆ ಕಾದಿದೆ ಅಪಾಯ!

ಸಾಮಾನ್ಯವಾಗಿ 1234, 0000, ಜನ್ಮ ದಿನಾಂಕ ಅಥವಾ ಫೋನ್ ಸಂಖ್ಯೆಯಂತಹ ವೈಯಕ್ತಿಕ ಮಾಹಿತಿಯನ್ನು ಆಧರಿಸಿದಂತಹ ದುರ್ಬಲ ಪಿನ್ ನಂಬರ್ (Four Digit PIN) ಅನ್ನು ಹೊಂದಿದ್ದರೆ ನಮ್ಮ ವಯಕ್ತಿಕ ಮಾಹಿತಿಗಳು ಸುಲಭವಾಗಿ ಸೈಬರ್ ದಾಳಿಕೋರರಿಗೆ ಲಭ್ಯವಾಗುವುದು.

VISTARANEWS.COM


on

By

Four Digit PIN
Koo

ಸಾಮಾನ್ಯವಾಗಿ ನಾವು ನಾಲ್ಕು ಅಂಕೆಯ (Four Digit PIN) ಪಿನ್ ನಂಬರ್ ಹಾಕಬೇಕಾದಾಗ ನಮಗೆ ಸುಲಭವಾಗಿ ನೆನಪಿಟ್ಟುಕೊಳ್ಳಬಹುದಾದ ಅಂಕೆಗಳನ್ನು (numbers) ಹಾಕುತ್ತೇವೆ. ಆದರೆ ಇದು ತುಂಬಾ ಅಪಾಯಕಾರಿ. ಯಾಕೆಂದರೆ ಸುಲಭವಾದ ಪಿನ್ ಸಂಖ್ಯೆಯು ಶೀಘ್ರದಲ್ಲಿ ಸೈಬರ್ ವಂಚಕರ (cyber attacks) ಪಾಲಾಗಬಹುದು. ಹೀಗಾಗಿ ಅತ್ಯಂತ ಸರಳ ಪಿನ್ ಗಳನ್ನು ನೀವು ಯಾವುದೇ ಉದ್ದೇಶಕ್ಕೆ ಬಳಸಿದ್ದರೆ ಕೂಡಲೇ ಅದನ್ನು ಬದಲಾಯಿಸುವುದು ಒಳ್ಳೆಯದು.

ಸಾಮಾನ್ಯವಾಗಿ ನಾವು 1234 ಅಥವಾ 0000 ಅಥವಾ ಜನ್ಮ ದಿನಾಂಕ (date of birth) ಅಥವಾ ಫೋನ್ ಸಂಖ್ಯೆಯಂತಹ (phone number) ವೈಯಕ್ತಿಕ ಮಾಹಿತಿಯನ್ನು ಆಧರಿಸಿದಂತಹ ದುರ್ಬಲ ಪಿನ್ ನಂಬರ್ ಅನ್ನು ನಾವು ಹೊಂದಿರುತ್ತೇವೆ. ಇದು ಸೈಬರ್ ದಾಳಿಕೋರರಿಗೆ ಸುಲಭವಾಗಿ ಸಿಗುತ್ತದೆ.

ವರ್ಷದಿಂದ ವರ್ಷಕ್ಕೆ ಸೈಬರ್ ದಾಳಿಗಳು ಹೆಚ್ಚಾಗುತ್ತಲೇ ಇದೆ. 2024 ರ ಮೊದಲ ತ್ರೈಮಾಸಿಕದಲ್ಲಿ ಸೈಬರ್ ದಾಳಿಯ ಪ್ರಮಾಣ ಶೇ. 33ರಷ್ಟು ಹೆಚ್ಚಾಗಿದೆ. ಭಾರತವು ವಿಶ್ವದಲ್ಲೇ ಅತೀ ಹೆಚ್ಚು ಸೈಬರ್ ದಾಳಿಗೆ ಒಳಗಾದ ರಾಷ್ಟ್ರಗಳಲ್ಲಿ ಒಂದಾಗಿದೆ ಎಂದು ಚೆಕ್ ಪಾಯಿಂಟ್ ಸಾಫ್ಟ್‌ವೇರ್ ಟೆಕ್ನಾಲಜೀಸ್ ಲಿಮಿಟೆಡ್ ವರದಿ ತಿಳಿಸಿದೆ.

ಕಂಪ್ಯೂಟರ್ ವ್ಯವಸ್ಥೆಗಳು, ನೆಟ್‌ವರ್ಕ್‌ಗಳಲ್ಲಿನ ದೌರ್ಬಲ್ಯಗಳನ್ನು ಕಂಡುಹಿಡಿಯುವ ಮೂಲಕ ಸೈಬರ್ ಅಪರಾಧಿಗಳು ಜನರ ವ್ಯವಹಾರ ಖಾತೆಗಳು ಮತ್ತು ಸರ್ಕಾರದ ಖಾತೆಗಳ ಮೇಲೆ ದಾಳಿ ನಡೆಸುತ್ತಾರೆ. ಸೂಕ್ಷ್ಮ ಮಾಹಿತಿಯನ್ನು ಕದಿಯಲು, ಬ್ಯಾಂಕ್ ಖಾತೆಗಳಿಂದ ಹಣವನ್ನು ದೋಚಲು ವಿವಿಧ ವಿಧಾನಗಳನ್ನು ಬಳಸುತ್ತಾರೆ.


ಏನು ಕಾರಣ?

ಸೈಬರ್ ದಾಳಿಯಲ್ಲಿ ದಿಢೀರ್ ಏರಿಕೆಗೆ ಮುಖ್ಯ ಕಾರಣ ನಾವು ಬಳಸುವ ದುರ್ಬಲ ಪಿನ್ ಗಳು. ಇದು ಯಾವುದೇ ವ್ಯವಸ್ಥೆಯನ್ನು ಉಲ್ಲಂಘಿಸಲು ಸುಲಭವಾದ ಮಾರ್ಗವಾಗಿದೆ. ದುರ್ಬಲವಾದ ಪಿನ್ “1234” ಅಥವಾ “0000” ನಂತಹ ಸ್ಪಷ್ಟವಾಗಿರಬಹುದು ಅಥವಾ ಜನ್ಮ ದಿನಾಂಕ ಅಥವಾ ಫೋನ್ ಸಂಖ್ಯೆಯಂತಹ ವೈಯಕ್ತಿಕ ಮಾಹಿತಿಯ ಆಧಾರದ ಮೇಲೆ ಸುಲಭವಾಗಿ ಊಹಿಸಬಹುದಾಗಿದೆ.

ಸಾಮಾನ್ಯವಾದ ಪಿನ್‌ಗಳು ಯಾವುವು?

ಸೈಬರ್‌ ಸೆಕ್ಯುರಿಟಿ ಅಧ್ಯಯನವು ಅನೇಕರು ತಮ್ಮ ಭದ್ರತಾ ಕೋಡ್‌ಗಳಲ್ಲಿ ಸರಳ ಮಾದರಿಗಳ ಪಿನ್ ಗಳನ್ನು ಬಳಸುತ್ತಾರೆ ಎಂದು ತೋರಿಸಿದ್ದಾರೆ. ಪರೀಕ್ಷಿಸಿದ 3.4 ಮಿಲಿಯನ್ ಪಿನ್‌ಗಳಲ್ಲಿ ಸಾಮಾನ್ಯ ಮಾದರಿಗಳು ಹೀಗಿವೆ.

1234, 1111, 0000, 1212, 7777, 1004, 2000, 4444, 2222, 6969 ಈಗಾಗಲೇ ಈ ಮಾದರಿಯ ಪಿನ್ ಗಳು ಸೈಬರ್ ದಾಳಿಗೆ ತುತ್ತಾಗಿದ್ದು, ಯಾರಾದರೂ ಈಗಲೂ ಇಂತಹ ಪಿನ್ ಬಳಸುತ್ತಿದ್ದಾರೆ ಬದಲಾಯಿಸಿಕೊಳ್ಳುವುದು ಒಳ್ಳೆಯದು.
ಸರಳವಾದ ಅಥವಾ ಸುಲಭವಾಗಿ ಊಹಿಸಬಹುದಾದ ಪಿನ್ ಅನ್ನು ಆಯ್ಕೆ ಮಾಡುವುದರಿಂದ ಸೈಬರ್ ಅಪರಾಧಿಗಳಿಗೆ ನೀವು ಸುಲಭ ಗುರಿಯಾಗಬಹುದು. ನಿಮ್ಮ ಖಾತೆಗಳು ಮತ್ತು ಸಾಧನಗಳನ್ನು ರಕ್ಷಿಸಲು ಪಿನ್ ಅನ್ನು ಆಯ್ಕೆ ಮಾಡುವಾಗ ಸುರಕ್ಷತೆಗೆ ಆದ್ಯತೆ ನೀಡುವುದು ಮುಖ್ಯವಾಗಿದೆ. ಬಲವಾದ, ವಿಶಿಷ್ಟವಾದ ಪಿನ್ ಸೂಕ್ಷ್ಮ ಮಾಹಿತಿಗೆ ಅನಧಿಕೃತ ಪ್ರವೇಶದ ಅಪಾಯವನ್ನು ಗಣನೀಯವಾಗಿ ಕಡಿಮೆ ಮಾಡುತ್ತದೆ.

ಇಎಸ್ ಇ ಟಿ ಸೈಬರ್ ಸೆಕ್ಯುರಿಟಿ ತಜ್ಞ, ಜೇಕ್ ಮೂರ್, ಸರಳವಾದ ಪಾಸ್‌ಕೋಡ್‌ಗಳನ್ನು ಬಳಸದಂತೆ ಸಲಹೆ ನೀಡಿದ್ದಾರೆ. ಇದು ಜನರನ್ನು ಸೈಬರ್‌ಟಾಕ್‌ಗಳಿಗೆ ಗುರಿಯಾಗಿಸಬಹುದು ಎಂದು ಡೈಲಿ ಮೇಲ್ ವರದಿ ಮಾಡಿದೆ.

ಪರಿಣಿತ ಹ್ಯಾಕರ್‌ಗಳು ಸೀಮಿತ ಸಂಖ್ಯೆಯ ಪ್ರಯತ್ನಗಳಲ್ಲಿ ಪಾಸ್ಕೋಡ್ ಗಳನ್ನು ಊಹಿಸಿ ಶೀಘ್ರದಲ್ಲೇ ಖಾತೆಗಳಿಗೆ, ವಯಕ್ತಿಕ ಮಾಹಿತಿಗಳ ಮೇಲೆ ಕನ್ನ ಹಾಕಬಹುದು. ಸಾಮಾಜಿಕ ಮಾಧ್ಯಮ ಸೇರಿದಂತೆ ವೈಯಕ್ತಿಕ ಖಾತೆಗಳಿಗೆ ಜನ್ಮ ವರ್ಷಗಳು, ವೈಯಕ್ತಿಕ ಮಾಹಿತಿ ಅಥವಾ ಪುನರಾವರ್ತಿತ ಪಾಸ್‌ವರ್ಡ್‌ಗಳನ್ನು ಬಳಸದಂತೆ ಜಾಗತಿಕ ಸೈಬರ್‌ ಸೆಕ್ಯುರಿಟಿ ಸಲಹೆಗಾರರು ಶಿಫಾರಸು ಮಾಡುತ್ತಾರೆ. ಸುಲಭವಾಗಿ ಊಹಿಸಬಹುದಾದ ಪಿನ್‌ಗಳನ್ನು ಬಳಸುವುದರಿಂದ ಜನರು ಸುಲಭವಾಗಿ ದಾಳಿಕೋರರು ಬಲಿಯಾಗುತ್ತಾರೆ.

ಇದನ್ನೂ ಓದಿ: Google Update: ಕೃತಕ ಬುದ್ಧಿಮತ್ತೆ, ವಂಚನೆ ತಡೆಯಲು ಅಲರ್ಟ್‌; ಗೂಗಲ್‌ ಹೊಸ ಘೋಷಣೆಗಳು ಏನೇನು?

ಕಡಿಮೆ ಬಳಕೆಯ ಸಾಮಾನ್ಯ ಪಿನ್

ಕಡಿಮೆ ಬಳಸುವ ಆದರೆ ತೀರಾ ಸಾಮಾನ್ಯವಾದ 4-ಅಂಕಿಯ ಪಿನ್‌ಗಳು ಹೀಗಿವೆ. 8557, 8438, 9539,7063, 6827, 0859, 6793, 0738, 6835.

ಸಾಕಷ್ಟು ಮುನ್ನೆಚ್ಚರಿಕೆಗಳನ್ನು ವಹಿಸಿದ್ದರೂ ಪಾಸ್‌ಕೋಡ್‌ಗಳನ್ನು ಹ್ಯಾಕ್ ಮಾಡಬಹುದು. ಆದ್ದರಿಂದ ಹೆಚ್ಚುವರಿ ಭದ್ರತೆಗಾಗಿ ಪಾಸ್‌ವರ್ಡ್ ನಿರ್ವಾಹಕರನ್ನು ಬಳಸಲು ಶ್ರೀ ಮೂರ್ ಸಲಹೆ ನೀಡಿದ್ದಾರೆ. ಇದರಿಂದ ವೈಯಕ್ತಿಕ ಮಾಹಿತಿಯನ್ನು ರಕ್ಷಿಸಬಹುದು ಮತ್ತು ಸಂಪೂರ್ಣವಾಗಿ ಯಾದೃಚ್ಛಿಕ ಕೋಡ್‌ಗಳನ್ನು ರಚಿಸಲು ಸಹಾಯ ಮಾಡಬಹುದು ಎಂದು ಅವರು ತಿಳಿಸಿದ್ದಾರೆ.

Continue Reading

ದೇಶ

Medicine Price: ಗುಡ್‌ ನ್ಯೂಸ್;‌ ಶುಗರ್‌, ಹೃದ್ರೋಗ ಸೇರಿ 41 ಔಷಧಗಳ ಬೆಲೆ ಇಳಿಸಿದ ಮೋದಿ ಸರ್ಕಾರ

Medicine Price: ರಕ್ತದ ಗ್ಲುಕೋಸ್‌ ಕಡಿಮೆಯಾದಾಗ ಬಳಿಸುವ Dapagliflozin Metformin Hydrochlorideಗೆ ಮೊದಲು 30 ರೂ. ಇತ್ತು. ಈಗ ಅದಕ್ಕೆ 16 ರೂ. ನಿಗದಿಪಡಿಸಲಾಗಿದೆ. ಅಸ್ತಮಾ ಹಾಗೂ ಶ್ವಾಸಕೋಶದ ಸಮಸ್ಯೆ ಇದ್ದವರು ತೆಗೆದುಕೊಳ್ಳವ ಬ್ಯೂಡ್‌ಸೊನೈಡ್‌ ಹಾಗೂ ಫಾರ್ಮೊಟೆರೋಲ್‌ನ ಒಂದು ಡೋಸ್‌ ಬೆಲೆಯನ್ನು 6.62 ರೂ.ಗೆ ಇಳಿಕೆ ಮಾಡಲಾಗಿದೆ.

VISTARANEWS.COM


on

Medicine Price
Koo

ನವದೆಹಲಿ: ದೇಶದಲ್ಲಿ ಅಗತ್ಯ ಔಷಧಗಳ ಬೆಲೆ ಏರಿಕೆ ಕುರಿತು ವದಂತಿಗಳು ಹರಡಿದ ಬೆನ್ನಲ್ಲೇ ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್‌ಗಳ ಬೆಲೆಯನ್ನು ಕೇಂದ್ರ ಸರ್ಕಾರ (Central Government) ಇಳಿಸಿದೆ. ಔಷಧಗಳ ಬೆಲೆ ಇಳಿಕೆ (Medicine Price) ಮಾಡಿ ರಾಷ್ಟ್ರೀಯ ಔಷಧ ಬೆಲೆ ಪ್ರಾಧಿಕಾರವು (NPPA) ಆದೇಶ ಹೊರಡಿಸಿದೆ. ಇದರಿಂದ ದೇಶಾದ್ಯಂತ ಕೋಟ್ಯಂತರ ಜನರು ಕಡಿಮೆ ಬೆಲೆಗೆ ಔಷಧಗಳನ್ನು ಖರೀದಿಸಬಹುದಾಗಿದೆ.

ಯಾವ ಕಾಯಿಲೆಗಳ ಔಷಧ ಬೆಲೆ ಇಳಿಕೆ?

ಮಧುಮೇಹ, ಹೃದ್ರೋಗ, ಯಕೃತ್ತಿನ ಸಮಸ್ಯೆ, ಆ್ಯಂಟಿಬಯೋಟಿಕ್ಸ್‌, ಮಲ್ಟಿ ವಿಟಮಿನ್‌ ಸೇರಿ ಹಲವು ಔಷಧಗಳ ಬೆಲೆಯನ್ನು ಎನ್‌ಪಿಪಿಎ ಇಳಿಕೆ ಮಾಡಿದೆ. ಭಾರತದಲ್ಲಿ 10 ಕೋಟಿಗೂ ಅಧಿಕ ಮಂದಿ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದಾರೆ. ಜಗತ್ತಿನಲ್ಲೇ ಅತಿ ಹೆಚ್ಚು ಮಧುಮೇಹಿಗಳು ಇರುವ ದೇಶಗಳಲ್ಲಿ ಭಾರತವೂ ಸೇರಿದೆ. ಹಾಗಾಗಿ, ಸಕ್ಕರೆ ಕಾಯಿಲೆಗೆ ಬಳಸುವ ಮಾತ್ರೆಗಳು ಹಾಗೂ ಇನ್ಸುಲಿನ್‌ಗಳ ಬೆಲೆಯನ್ನು ಇಳಿಕೆ ಮಾಡಿರುವುದು ಕೋಟ್ಯಂತರ ಜನರಿಗೆ ಅನುಕೂಲವಾಗಲಿದೆ ಎಂದು ತಿಳಿದುಬಂದಿದೆ.

medicines

“ಸಾರ್ವಜನಿಕರಿಗೆ ಅನುಕೂಲವಾಗುವ ಔಷಧಗಳ ಬೆಲೆಯನ್ನು ಇಳಿಕೆ ಮಾಡಲಾಗಿದೆ. ಬೆಲೆ ಇಳಿಕೆಯು ಒಂದು ನಿಯಮಿತ ಪ್ರಕ್ರಿಯೆಯಾಗಿದ್ದು, ಪ್ರಾಧಿಕಾರವು ಅದನ್ನು ಅನುಸರಿಸಿದೆ” ಎಂದು ಎನ್‌ಪಿಪಿಎ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ರಕ್ತದ ಗ್ಲುಕೋಸ್‌ ಕಡಿಮೆಯಾದಾಗ ಬಳಿಸುವ Dapagliflozin Metformin Hydrochlorideಗೆ ಮೊದಲು 30 ರೂ. ಇತ್ತು. ಈಗ ಅದಕ್ಕೆ 16 ರೂ. ನಿಗದಿಪಡಿಸಲಾಗಿದೆ. ಅಸ್ತಮಾ ಹಾಗೂ ಶ್ವಾಸಕೋಶದ ಸಮಸ್ಯೆ ಇದ್ದವರು ತೆಗೆದುಕೊಳ್ಳವ ಬ್ಯೂಡ್‌ಸೊನೈಡ್‌ ಹಾಗೂ ಫಾರ್ಮೊಟೆರೋಲ್‌ನ ಒಂದು ಡೋಸ್‌ ಬೆಲೆಯನ್ನು 6.62 ರೂ.ಗೆ ಇಳಿಕೆ ಮಾಡಲಾಗಿದೆ.

ಕೆಲ ತಿಂಗಳ ಹಿಂದಷ್ಟೇ, ಔಷಧಗಳ ಬೆಲೆಯೇರಿಕೆ ಕುರಿತು ವದಂತಿಗಳು ಹರಡಿದ್ದವು. ಆದರೆ, ಕೇಂದ್ರ ಸರ್ಕಾರವು ಇದನ್ನು ಅಲ್ಲಗಳೆದಿತ್ತು. “ಏಪ್ರಿಲ್‌ 1ರಿಂದ 500ಕ್ಕೂ ಅಧಿಕ ಔಷಧಗಳ ಬೆಲೆಯಲ್ಲಿ ಶೇ.12ರಷ್ಟು ಬೆಲೆ ಏರಿಕೆಯಾಗಿದೆ ಎಂಬ ವದಂತಿಗಳು, ವರದಿಗಳು ಸತ್ಯಕ್ಕೆ ದೂರವಾಗಿವೆ. ಜನರ ಹಾದಿ ತಪ್ಪಿಸಲು ಇಂತಹ ವರದಿಗಳನ್ನು ಪಸರಿಸಲಾಗಿದೆ. ರಾಷ್ಟ್ರೀಯ ಔಷಧ ಬೆಲೆ ಪ್ರಾಧಿಕಾರವು ಸಗಟು ಬೆಲೆ ಸೂಚ್ಯಂಕದ ಆಧಾರದ ಬೆಲೆ ಏರಿಕೆ ಮಾಡುತ್ತದೆ. ಆದರೆ, 782 ಔಷಧಗಳ ಬೆಲೆಯಲ್ಲಿ ಯಾವುದೇ ಏರಿಕೆಯಾಗಿಲ್ಲ. ಇನ್ನು ಸುಮಾರು 54 ಔಷಧಗಳ ಬೆಲೆಯು ಒಂದು ಪೈಸೆ ಮಾತ್ರ ಏರಿಕೆಯಾಗಿದೆ” ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿತ್ತು. ಇದರ ಬೆನ್ನಲ್ಲೇ, ಅಗತ್ಯ ಔಷಧಗಳ ಬೆಲೆಯನ್ನು ಕೇಂದ್ರ ಸರ್ಕಾರ ಇಳಿಕೆ ಮಾಡಿದೆ.

ಇದನ್ನೂ ಓದಿ: Jan Aushadhi: ಪ್ರಯಾಣಿಕರಿಗೆ ಗುಡ್‌ ನ್ಯೂಸ್; ರೈಲು ನಿಲ್ದಾಣಗಳಲ್ಲೂ ಸಿಗಲಿವೆ ಕಡಿಮೆ ಬೆಲೆಗೆ ಔಷಧ!

Continue Reading

ದೇಶ

Reliance Retail: ರಿಲಯನ್ಸ್‌ ರಿಟೇಲ್‌ನಲ್ಲಿ ಎಎಸ್‌ಒಎಸ್‌ ಬ್ರ್ಯಾಂಡ್‌ನ ಉತ್ಪನ್ನಗಳು ಈಗ ಲಭ್ಯ

Reliance Retail: ಬ್ರಿಟನ್‌ನ ಪ್ರಮುಖ ಆನ್‌ಲೈನ್‌ ಫ್ಯಾಷನ್‌ ಕಂಪನಿ ಎಎಸ್‌ಒಎಸ್‌ ನ (ಎಸೋಸ್‌) ಉತ್ಪನ್ನಗಳನ್ನು ಭಾರತದಲ್ಲಿ ಮಾರಾಟ ಮಾಡಲು ರಿಲಯನ್ಸ್‌ ರಿಟೇಲ್‌ ಕಂಪನಿಯು ದೀರ್ಘಾವಧಿಯ ಪಾಲುದಾರಿಕೆ ಮಾಡಿಕೊಂಡಿದ್ದು, ಈ ಒಪ್ಪಂದದ ಪ್ರಕಾರ ರಿಲಯನ್ಸ್‌ ರಿಟೇಲ್‌ ಕಂಪನಿಯು ಭಾರತದಲ್ಲಿ ತನ್ನ ಆನ್‌ಲೈನ್‌ ಮತ್ತು ಆಫ್‌ಲೈನ್‌ ಪ್ಲಾಟ್‌ಫಾರಂಗಳಲ್ಲಿ (ASOS) ಎಎಸ್‌ಒಎಸ್‌ನ ಉತ್ಪನ್ನಗಳು ಲಭ್ಯವಾಗುವಂತೆ ಮಾಡಲಿದೆ. ಎಎಸ್‌ಒಎಸ್‌ ಕಂಪನಿಯು ಜಗತ್ತಿನಾದ್ಯಂತ ಯುವ ಪೀಳಿಗೆಯಲ್ಲಿ ಜನಪ್ರಿಯವಾಗಿದ್ದು, 200ಕ್ಕೂ ಅಧಿಕ ಮಾರುಕಟ್ಟೆಗಳಲ್ಲಿ ಕಂಪನಿಯ ಉತ್ಪನ್ನಗಳು ಲಭ್ಯವಿವೆ.

VISTARANEWS.COM


on

ASOS brand products are available at Reliance Retail
Koo

ನವದೆಹಲಿ: ಬ್ರಿಟನ್‌ನ ಪ್ರಮುಖ ಆನ್‌ಲೈನ್‌ ಫ್ಯಾಷನ್‌ ಕಂಪನಿ ಎಎಸ್‌ಒಎಸ್‌ ನ (ಎಸೋಸ್‌) ಉತ್ಪನ್ನಗಳನ್ನು ಭಾರತದಲ್ಲಿ ಮಾರಾಟ ಮಾಡಲು ರಿಲಯನ್ಸ್‌ ರಿಟೇಲ್‌ (Reliance Retail) ಕಂಪನಿಯು ದೀರ್ಘಾವಧಿಯ ಪಾಲುದಾರಿಕೆ ಮಾಡಿಕೊಂಡಿದ್ದು, ಈ ಒಪ್ಪಂದದ ಪ್ರಕಾರ, ರಿಲಯನ್ಸ್‌ ರಿಟೇಲ್‌ ಕಂಪನಿಯು ಭಾರತದಲ್ಲಿ ತನ್ನ ಆನ್‌ಲೈನ್‌ ಮತ್ತು ಆಫ್‌ಲೈನ್‌ ಪ್ಲಾಟ್‌ಫಾರಂಗಳಲ್ಲಿ (ASOS) ಎಎಸ್‌ಒಎಸ್‌ನ ಉತ್ಪನ್ನಗಳು ಲಭ್ಯವಾಗುವಂತೆ ಮಾಡಲಿದೆ.

ಎಎಸ್‌ಒಎಸ್‌ ಕಂಪನಿಯು ಜಗತ್ತಿನಾದ್ಯಂತ ಯುವ ಪೀಳಿಗೆಯಲ್ಲಿ ಜನಪ್ರಿಯವಾಗಿದ್ದು, 200ಕ್ಕೂ ಅಧಿಕ ಮಾರುಕಟ್ಟೆಗಳಲ್ಲಿ ಕಂಪನಿಯ ಉತ್ಪನ್ನಗಳು ಲಭ್ಯವಿವೆ.

ಇದನ್ನೂ ಓದಿ: Udupi News: ಮೂವರು ಸಾಧಕರಿಗೆ ಭಂಡಾರಕೇರಿ ಮಠದ ಪ್ರಶಸ್ತಿ; ಬೆಂಗಳೂರಿನಲ್ಲಿ ಮೇ 20ರಂದು ಪ್ರಶಸ್ತಿ ಪ್ರದಾನ

ಈ ಕುರಿತು ರಿಲಿಯನ್ಸ್‌ ರಿಟೇಲ್‌ ವೆಂಚರ್ಸ್‌ನ ನಿರ್ದೇಶಕಿ ಇಶಾ ಅಂಬಾನಿ ಮಾತನಾಡಿ, ನಮ್ಮ ಫ್ಯಾಷನ್‌ ಕುಟುಂಬಕ್ಕೆ ಎಎಸ್‌ಒಎಸ್‌ ಅನ್ನು ಸ್ವಾಗತಿಸುತ್ತೇವೆ. ಜಾಗತಿಕ ಫ್ಯಾಷನ್‌ ಅನ್ನು ಭಾರತದ ಮಾರುಕಟ್ಟೆಗೆ ತರುವ ನಿಟ್ಟಿನಲ್ಲಿ ಇದೊಂದು ಮಹತ್ವದ ಮೈಲಿಗಲ್ಲು. ಭಾರತದ ರಿಟೇಲ್‌ ಮಾರುಕಟ್ಟೆಯಲ್ಲಿ ನಮಗಿರುವ ಸ್ಥಾನವನ್ನು ಈ ಪಾಲುದಾರಿಕೆಯು ಸೂಚಿಸುತ್ತದೆ. ಅಲ್ಲದೆ, ನಮ್ಮ ಗ್ರಾಹಕರು ಬಯಸುವ ಫ್ಯಾಷನ್‌ ಉತ್ಪನ್ನಗಳನ್ನು ಅವರಿಗೆ ಒದಗಿಸುವ ಖಾತರಿಯನ್ನೂ ನೀಡುತ್ತದೆ ಎಂದು ತಿಳಿಸಿದರು.

ಈ ಬಗ್ಗೆ ಎಎಸ್‌ಒಎಸ್‌ (ASOS) ನ ಸಿಇಒ ಜೋಸ್‌ ಆಂಟೋನಿಯೋ ಮಾತನಾಡಿ, ರಿಲಯನ್ಸ್‌ ರಿಟೇಲ್‌ ಜತೆಗೂಡಿ ನಮ್ಮ ಫ್ಯಾಷನ್‌ ಬ್ರ್ಯಾಂಡ್‌ಗಳಲ್ಲಿ ಕೆಲವೊಂದನ್ನು ನಾವು ಭಾರತದ ಗ್ರಾಹಕರಿಗೆ ನೀಡಲು ಉತ್ಸುಕರಾಗಿದ್ದೇವೆ. ಮುಖ್ಯವಾಗಿ ಜಗತ್ತಿನಲ್ಲಿಯೇ ಬ್ರಿಟಿಷ್‌ ಫ್ಯಾಷನ್‌ ಬ್ರ್ಯಾಂಡ್‌ಗಳಲ್ಲಿ ಒಂದಾಗಿರುವ ಎಎಸ್‌ಒಎಸ್‌ ವಿನ್ಯಾಸವನ್ನು ನೀಡಲು ಕಾತುರರಾಗಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ: Bengaluru News: ವ್ಯಾಸ-ದಾಸ ಸಾಹಿತ್ಯ ಜ್ಞಾನ ಪ್ರಸಾರಕ್ಕೆ ಮಾನ್ಯತೆ ನೀಡಿ; ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ

ಆರ್‌ಐಎಲ್‌ (ರಿಲಯನ್ಸ್‌ ಇಂಡಸ್ಟ್ರೀಸ್‌ ಲಿಮಿಟೆಡ್‌) ಸಮೂಹದ ಎಲ್ಲಾ ರೀಟೇಲ್‌ ಕಂಪನಿಗಳನ್ನು ಒಳಗೊಂಡಿರುವ ಕಂಪನಿಯೇ ರಿಲಿಯನ್ಸ್‌ ರಿಟೇಲ್‌ ವೆಂಚರ್ಸ್‌ ಲಿಮಿಟೆಡ್‌ (ರಿಲಯನ್ಸ್‌ ರಿಟೇಲ್‌). ರಿಲಯನ್ಸ್‌ ರಿಟೇಲ್‌ 18,836ಕ್ಕೂ ಅಧಿಕ ಮಳಿಗೆಗಳು ಮತ್ತು ಡಿಜಿಟಲ್‌ ಇ-ಕಾಮರ್ಸ್‌ ಮೂಲಕ ಕಾರ್ಯಾಚರಿಸುತ್ತದೆ. ರಿಲಯನ್ಸ್‌ ರಿಟೇಲ್‌ ಕಂಪನಿಯು ತನ್ನ ಹೊಸ ವಾಣಿಜ್ಯ ಯೋಜನೆಯ ಭಾಗವಾಗಿ 30 ಲಕ್ಷಕ್ಕೂ ಅಧಿಕ ವ್ಯಾಪಾರಿಗಳೊಂದಿಗೆ ಪಾಲುದಾರಿಕೆ ಮಾಡಿಕೊಂಡಿದೆ.

Continue Reading

ಒಟಿಟಿ

OTT Release: ಒಟಿಟಿಯಲ್ಲಿ ಈ ವಾರ ಬ್ರಿಡ್ಜರ್‌ಟನ್‌, ಬಾಹುಬಲಿ ಸರಣಿ; ಇನ್ನೂ ಏನೇನಿವೆ?

ಥ್ರಿಲರ್, ರೊಮ್ಯಾಂಟಿಕ್, ಆಕ್ಷನ್ ಅನ್ನು ಒಳಗೊಂಡಿರುವ ವೀಕ್ಷಕರು ಬಹು ನಿರೀಕ್ಷೆಯ ಬ್ರಿಡ್ಜರ್ಟನ್, ಬಾಹುಬಲಿ ಸೇರಿದಂತೆ ಹಲವು ಸರಣಿಗಳು ಈ ವಾರದಲ್ಲಿ ಒಟಿಟಿ ಗೆ (OTT Release) ಬರಲಿದೆ. ಈ ಕುರಿತ ಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

By

OTT Release
Koo

ಅಭಿಮಾನಿಗಳು ತುದಿಗಾಲಲ್ಲಿ ನಿಂತು ಕಾಯುವಂತೆ ಮಾಡಿರುವ ಹಲವು ಸರಣಿ ಚಿತ್ರಗಳು ಈ ವಾರ ಒಟಿಟಿ ಪ್ಲಾಟ್ ಫಾರ್ಮ್ ನಲ್ಲಿ (OTT Release) ತೆರೆ ಕಾಣುತ್ತಿದೆ. ನೆಟ್‌ಫ್ಲಿಕ್ಸ್ (Netflix), ಡಿಸ್ನಿ+ ಹಾಟ್‌ಸ್ಟಾರ್ (Disney+ Hotstar), ಜಿಯೋ ಸಿನಿಮಾ (Jio Cinema) ಮತ್ತು ಇತರ ವೇದಿಕೆಯಲ್ಲಿ ಈ ಬಾರಿ ಪ್ರೇಕ್ಷರನ್ನು ರಂಜಿಸಲು ಹಲವು ಚಲನಚಿತ್ರಗಳು ಬಿಡುಗಡೆಯಾಗಲಿದೆ.

ಬ್ರಿಡ್ಜರ್ಟನ್ ಮತ್ತು ಬಾಹುಬಲಿ ಸರಣಿಯು ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದೆ. ಪೆನೆಲೋಪ್ ಫೆದರಿಂಗ್‌ಟನ್ ಮತ್ತು ಕಾಲಿನ್ ಬ್ರಿಡ್ಜರ್‌ಟನ್‌ರ ಪ್ರೇಮಕಥೆಯನ್ನು ಹೇಳುವ ನೆಟ್‌ಫ್ಲಿಕ್ಸ್‌ನ ಬ್ರಿಡ್ಜರ್‌ಟನ್‌ನ ಸೀಸನ್ 3 ಸಾಕಷ್ಟು ಕುತೂಹಲ ಮೂಡಿಸಿದೆ. ಇದರೊಂದಿಗೆ ಎಸ್‌.ಎಸ್. ರಾಜಮೌಳಿ ಅವರ ಪೂರ್ವಭಾವಿ ಸರಣಿಯಾದ ಬಾಹುಬಲಿ: ಕ್ರೌನ್ ಆಫ್ ಬ್ಲಡ್‌ ಕೂಡ ಎಲ್ಲರೂ ಕಾತರದಿಂದ ಕಾಯುವಂತೆ ಮಾಡಿದೆ.

ಬ್ರಿಡ್ಜರ್ಟನ್ ಸೀಸನ್ 3 ಭಾಗ 1

ಬ್ರಿಡ್ಜರ್ಟನ್ ಭಾಗ 2 ಕಳೆದ ಜೂನ್ 13ರಂದು ಬಿಡುಗಡೆಯಾಗಿತ್ತು. ಇದೀಗ ಇದರ ಮುಂದುವರಿದ ಸರಣಿ ಬಿಡುಗಡೆಯಾಗಿದೆ.

ನಿಕೋಲಾ ಕೋಗ್ಲಾನ್, ಲ್ಯೂಕ್ ನ್ಯೂಟನ್, ಕ್ಲೌಡಿಯಾ ಜೆಸ್ಸಿ, ಲ್ಯೂಕ್ ಥಾಂಪ್ಸನ್, ಜೊನಾಥನ್ ಬೈಲಿ, ಸಿಮೋನ್ ಆಶ್ಲೇ ಮುಖ್ಯ ಭೂಮಿಕೆಯಲ್ಲಿರುವ ಈ ಸರಣಿ ಮೇ 16ರಿಂದ ನೆಟ್ ಫ್ಲಿಕ್ಸ್ ನಲ್ಲಿ ತೆರೆ ಕಾಣುತ್ತಿದೆ. ಇದು ಜೂಲಿಯಾ ಕ್ವಿನ್‌ನ ಹೆಚ್ಚು ಮಾರಾಟವಾದ ಕಾದಂಬರಿಗಳನ್ನು ಆಧರಿಸಿದ ಪ್ರೇಮಕಥೆಯಾಗಿದೆ. ಲೇಡಿ ವಿಸ್ಲ್‌ಡೌನ್ ಮೇಲೆ ಚಿತ್ರ ಕೇಂದ್ರೀಕೃತವಾಗಿದೆ. ಕುಟುಂಬದ ಒತ್ತಡದಿಂದ ಪೆನೆಲೋಪ್ ಫೆದರಿಂಗ್‌ಟನ್ (ನಿಕೋಲಾ ಕಾಗ್ಲಾನ್) ತನಗಾಗಿ ಗಂಡನನ್ನು ಹುಡುಕಲು ಪ್ರಾರಂಭಿಸುತ್ತಾಳೆ. ಆಗ ಕಾಲಿನ್ ಬ್ರಿಡ್ಜರ್ಟನ್ (ಲ್ಯೂಕ್ ನ್ಯೂಟನ್) ಅವಳ ಬದುಕಿನಲ್ಲಿ ಆಗಮಿಸುತ್ತಾನೆ. ಅವರಿಬ್ಬರು ಉತ್ತಮ ಸ್ನೇಹಿತರಾಗಿ ಜೀವನವನ್ನು ಕಾಣಲು ಬಯಸುತ್ತಾರೆ.


ಬಾಹುಬಲಿಕೆ ಕ್ರೌನ್ ಆಫ್ ಬ್ಲಡ್

ಶರದ್ ಕೇಳ್ಕರ್, ಸಮಯ್ ಠಕ್ಕರ್, ರಾಜೇಶ್ ಖಟ್ಟರ್ ಅವರು ಧ್ವನಿ ನೀಡಿರುವ ಸರಣಿ ಮೇ 17ರಂದು ಡಿಸ್ನಿ ಪ್ಲಸ್ ಹಾಟ್ ಸ್ಟಾರ್ ನಲ್ಲಿ ಬಿಡುಗಡೆಯಾಗಲಿದೆ. ಇದು ಮಾಹಿಷ್ಮತಿ ರಾಜ್ಯದ ಕಥೆಯನ್ನು ಆಧರಿಸಿದೆ. ಎಸ್.ಎಸ್. ರಾಜಮೌಳಿ ಅವರ ಇತ್ತೀಚಿನ ಚಿತ್ರದ ಅನಿಮೇಟೆಡ್ ಸರಣಿ ಇದಾಗಿದೆ. 2D ಅನಿಮೇಟೆಡ್ ಸರಣಿಯು ಒಂದು ಮಹಾಕಾವ್ಯದ ಕಥೆಯನ್ನು ಹೊಂದಿದೆ. ಭವ್ಯವಾದ ಯುದ್ಧದ ಸರಣಿಗಳು ಮತ್ತು ಕೆಲವು ಸಾಂಪ್ರದಾಯಿಕ ಪಾತ್ರಗಳು ಇದರಲ್ಲಿ ಗಮನ ಸೆಳೆಯಲಿದೆ.


ಜರಾ ಹಟ್ಕೆ ಜರಾ ಬಚ್ಕೆ

ವಿಕ್ಕಿ ಕೌಶಲ್, ಸಾರಾ ಅಲಿ ಖಾನ್, ಇನಾಮುಲ್ಹಾಕ್, ಸುಶ್ಮಿತಾ ಮುಖರ್ಜಿ ಅಭಿನಯದ ಈ ಚಿತ್ರ ಜಿಯೋ ಸಿನಿಮಾದಲ್ಲಿ ಮೇ 17ರಂದು ಬಿಡುಗಡೆಯಾಗಲಿದೆ. ಲಕ್ಷ್ಮಣ್ ಉಟೇಕರ್ ನಿರ್ದೇಶನದ ಹಿಂದಿ ಚಿತ್ರ. ಇದರಲ್ಲಿ ವಿಕ್ಕಿ ಕೌಶಲ್ ಮತ್ತು ಸಾರಾ ಅಲಿ ಖಾನ್ ವಿವಾಹಿತ ದಂಪತಿಯಾಗಿ ಕಾಣಿಸಿಕೊಂಡಿದ್ದಾರೆ. ತಮ್ಮ ಸ್ವಂತ ಮನೆಯನ್ನು ಮಾಡಿಕೊಳ್ಳಲು ಅವರು ಮಾಡುವ ಪರಿಶ್ರಮ ಚಿತ್ರದಲ್ಲಿದೆ. ಚಿತ್ರ ಕಳೆದ ವರ್ಷ ಜೂನ್ 2 ರಂದು ಬಿಡುಗಡೆಯಾಗಿದ್ದು, ಇದೀಗ ಒಟಿಟಿಗೆ ಪಾದಾರ್ಪಣೆ ಮಾಡುತ್ತಿದೆ.

ಇದನ್ನೂ ಓದಿ: Single Screen Theaters: ಹತ್ತು ದಿನ ತೆಲಂಗಾಣದ ಸಿಂಗಲ್-ಸ್ಕ್ರೀನ್ ಥಿಯೇಟರ್‌ಗಳು ಬಂದ್; ಕಾರಣ ವಿಚಿತ್ರ!

ಗ್ರೇಟ್ ಇಂಡಿಯನ್ ಕಪಿಲ್ ಶೋ

ಕಪಿಲ್ ಶರ್ಮಾ, ಅರ್ಚನಾ ಪುರಾಣ್ ಸಿಂಗ್, ಕೃಷ್ಣಾ ಅಭಿಷೇಕ್ ಅವರ ಈ ಸರಣಿ ಮೇ 18ರಿಂದ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಲಿದೆ.

ಕಪಿಲ್ ಶರ್ಮಾ ತನ್ನ ಹೊಸ ನೆಟ್‌ಫ್ಲಿಕ್ಸ್ ಸರಣಿಗೆ ಅಂತಾರಾಷ್ಟ್ರೀಯ ಅತಿಥಿ ಬ್ರಿಟಿಷ್ ಪಾಪ್ ಐಕಾನ್ ಎಡ್ ಶೀರಾನ್ ಅವರನ್ನು ವೇದಿಕೆಗೆ ಆಹ್ವಾನಿಸಿದ್ದಾರೆ. ಎಡ್ ಅವರು ಭಾರತಕ್ಕೆ ಭೇಟಿ ನೀಡಿದಾಗ ಹಲವಾರು ಬಾರಿ ಹಾಸ್ಯನಟರನ್ನು ಭೇಟಿ ಮಾಡಿದ್ದಾರೆ ಮತ್ತು ಈ ಬಾರಿ ಅವರು ಶರ್ಮಾ ಅವರ ಸರಣಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪೂರ್ವಸಿದ್ಧತೆಯಿಲ್ಲದ ಸಂಗೀತ ಕಛೇರಿಯನ್ನು ಅವರು ಇಲ್ಲಿ ನಡೆಸಿಕೊಡಲಿದ್ದಾರೆ.

Continue Reading
Advertisement
ASI who was injured in a road accident died in kunigal
ಕರ್ನಾಟಕ5 mins ago

Road Accident: ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಎಎಸ್‌ಐ ಚಿಕಿತ್ಸೆ ಫಲಿಸದೆ ಸಾವು

IPL 2024
ಕ್ರಿಕೆಟ್15 mins ago

IPL 2024: ಸಿಎಸ್​​ಕೆ ಮಾಜಿ ಆಟಗಾರನಾಗಿದ್ದರೂ ಈ ಸಲ ಕೊಹ್ಲಿ ಗೆಲ್ಲಲಿ ಎಂದ ಸುರೇಶ್​ ರೈನಾ!

Prajwal Revanna Case KR Nagar victim kidnapping case Satish sent to judicial custody
ಕ್ರೈಂ17 mins ago

Prajwal Revanna Case: ಕೆ.ಆರ್.ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್;‌ 2, 6ನೇ ಆರೋಪಿಗಿಲ್ಲ ಬಿಡುಗಡೆ ಭಾಗ್ಯ! ಸತೀಶ್‌ಗೆ ನ್ಯಾಯಾಂಗ ಬಂಧನ

Pay attention to childrens safety during holidays Minister Lakshmi Hebbalkar appeals to parents
ಬೆಳಗಾವಿ23 mins ago

Lakshmi Hebbalkar: ರಜೆಯಲ್ಲಿ ಮಕ್ಕಳ ಸುರಕ್ಷತೆಗೆ ಗಮನ ನೀಡಿ; ಪಾಲಕರಿಗೆ ಹೆಬ್ಬಾಳ್ಕರ್ ಮನವಿ

Four Digit PIN
ತಂತ್ರಜ್ಞಾನ35 mins ago

Four Digit PIN: ಇಂಥ ಪಿನ್ ನಂಬರ್ ಕೊಡ್ತಾ ಇದ್ದೀರಾ? ನಿಮ್ಮ ದುಡ್ಡಿಗೆ ಕಾದಿದೆ ಅಪಾಯ!

Nitish Kumar Reddy
Latest37 mins ago

Nitish Reddy : ಐಪಿಎಲ್​ನಲ್ಲಿ ಮಿಂಚಿದ ಈ ಆಟಗಾರನಿಗೆ ಎಪಿಎಲ್​ನಲ್ಲಿ ಸಿಕ್ಕಿತು ಭರ್ಜರಿ ದುಡ್ಡು

Medicine Price
ದೇಶ45 mins ago

Medicine Price: ಗುಡ್‌ ನ್ಯೂಸ್;‌ ಶುಗರ್‌, ಹೃದ್ರೋಗ ಸೇರಿ 41 ಔಷಧಗಳ ಬೆಲೆ ಇಳಿಸಿದ ಮೋದಿ ಸರ್ಕಾರ

Belagavi News Masked man stabs TC and four others for asking them to show tickets on train
ಕ್ರೈಂ48 mins ago

Belagavi News: ರೈಲಲ್ಲಿ ಟಿಕೆಟ್‌ ತೋರಿಸು ಎಂದಿದ್ದಕ್ಕೆ ಟಿಸಿ ಸೇರಿ ನಾಲ್ವರಿಗೆ ಚಾಕು ಇರಿದ ಮುಸುಕುಧಾರಿ; ಒಬ್ಬ ಸಾವು, ನಾಲ್ವರು ಗಂಭೀರ

Skin Care Tips in Kannada
ಆರೋಗ್ಯ1 hour ago

Skin Care Tips in Kannada: ಈ ಕಾರಣಕ್ಕಾಗಿ ನೀವು ಸನ್‌ಸ್ಕ್ರೀನ್‌ ಹಚ್ಚಿಕೊಳ್ಳಲೇಬೇಕು!

Car Care tips
ಪ್ರಮುಖ ಸುದ್ದಿ1 hour ago

Car Care Tips : ನಿಮ್ಮ ಕಾರಿನ ಈ ಬಿಡಿಭಾಗಗಳಿಗೂ ಇವೆ ಎಕ್ಸ್​ಪೈರಿ ಡೇಟ್​​; ಅವುಗಳು ಯಾವವು ಎಂಬುದು ತಿಳಿದಿರಲಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ4 hours ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ6 hours ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು10 hours ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

ಟ್ರೆಂಡಿಂಗ್‌