National Flag : ತ್ರಿವರ್ಣ ಧ್ವಜದಲ್ಲಿ ಮುಸ್ಲಿಂ ಸಂಕೇತಗಳನ್ನು ಹಾಕಿ ಅಪಮಾನ ಆರೋಪ - Vistara News

ಕರ್ನಾಟಕ

National Flag : ತ್ರಿವರ್ಣ ಧ್ವಜದಲ್ಲಿ ಮುಸ್ಲಿಂ ಸಂಕೇತಗಳನ್ನು ಹಾಕಿ ಅಪಮಾನ ಆರೋಪ

National Flag : ಚಳ್ಳಕೆರೆಯ ಗ್ರಾಮವೊಂದರಲ್ಲಿ ವಿರೂಪಗೊಂಡ ತ್ರಿವರ್ಣ ಧ್ವಜವನ್ನು ಹಾಕಲಾಗಿದೆ. ಇದರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

VISTARANEWS.COM


on

National flag disrespect in Challakere
ವಿರೂಪಗೊಂಡ ತ್ರಿವರ್ಣ ಧ್ವಜ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿತ್ರದುರ್ಗ: ಉತ್ತರ ಕನ್ನಡ ಜಿಲ್ಲೆಯ ಮಿರ್ಜಾನ್‌ನಲ್ಲಿ ಇತ್ತೀಚೆಗೆ ಮುಸ್ಲಿಮರ ಈದ್‌ ಮೆರವಣಿಗೆ (Eid Procession) ವೇಳೆ ರಾಷ್ಟ್ರ ಧ್ವಜಕ್ಕೆ ಅಪಮಾನ (Disrespecting National Flag) ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಅದೇ ರೀತಿಯ ಘಟನೆ ಈಗ ಚಿತ್ರದುರ್ಗ ಜಿಲ್ಲೆಯ (Chitradurga district) ಚಳ್ಳಕೆರೆ ತಾಲೂಕಿನ ಇಮಾಂಪುರ ಬಂಡೆಹಟ್ಟಿ ಗ್ರಾಮದ ಬಳಿ ನಡೆದಿದೆ.

ಗ್ರಾಮದ ಹೆಸರಿರುವ ನಾಮಫಲಕದ ಕಂಬಕ್ಕೆ ಒಂದು ತ್ರಿವರ್ಣ ಧ್ವಜವನ್ನು ಕಟ್ಟಲಾಗಿದ್ದು, ಅದನ್ನು ವಿರೂಪಗೊಳಿಸಲಾಗಿದೆ. ಚಳ್ಳಕೆರೆ ತಾಲೂಕಿನ ಇಮಾಂಪುರ ಬಂಡೆಹಟ್ಟಿ ಗ್ರಾಮದಲ್ಲಿ ಕೇಸರಿ, ಬಿಳಿ, ಹಸಿರು ಬಣ್ಣದ ಬಾವುಟ ಹಾಕಲಾಗಿದೆ.

ಅದರಲ್ಲಿ ಬಿಳಿ ಬಣ್ಣ, ಅಶೋಕ ಚಕ್ರ ಇರುವ ಜಾಗದಲ್ಲಿ ಧಾರ್ಮಿಕ ಸ್ಥಳಗಳ ಚಿತ್ರ ಹಾಕಲಾಗಿದೆ. ಮುಸ್ಲಿಂ ಧಾರ್ಮಿಕ ಸಂಕೇತಗಳನ್ನು ಹಾಕಿ ರಾಷ್ಟ್ರ ಧ್ವಜದಂತೆ ಬಿಂಬಿಸಲಾಗಿದೆ.

National Flag

ಈ ರೀತಿ ವಿರೂಪ ಮಾಡಿದ ಧ್ವಜದ ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡಿ ವಿವಾದದ ಸ್ವರೂಪ ಪಡೆಯುವ ಲಕ್ಷಣಗಳು ಕಂಡುಬಂದವು. ಕೂಡಲೇ ಅಲರ್ಟ್‌ ಆದ ಪೊಲೀಸರು ಸ್ಥಳಕ್ಕೆ ಧಾವಿಸಿ ಧ್ವಜ ತೆರವು ಮಾಡಿದರು.

ಈ ರೀತಿ ಧ್ವಜವನ್ನು ವಿರೂಪಗೊಳಿಸಿದ ಘಟನೆಯ ಬಗ್ಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕಿಡಿಗೇಡಿಗಳನ್ನು ಕೂಡಲೇ ಪತ್ತೆ ಹಚ್ಚುವಂತೆ ಒತ್ತಾಯ ಮಾಡಿದ್ದಾರೆ.

ಮಂಗಳವಾರ ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು,ದೂರು ನೀಡಿದರೆ ಕೇಸ್ ದಾಖಲಿಸಿಕೊಳ್ಳುವುದಾಗಿ ಪೊಲೀಸರ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: National Flag: ತ್ರಿವರ್ಣ ಧ್ವಜದ ಅಶೋಕ ಚಕ್ರ ಜಾಗದಲ್ಲಿ ಮದೀನಾ ಗುಂಬಜ್‌ ಚಿತ್ರ ಹಾಕಿದವ ಅರೆಸ್ಟ್

ಮಿರ್ಜಾನ್‌ ಗ್ರಾಮದಲ್ಲಿ ಏನಾಗಿತ್ತು?

ಮಿರ್ಜಾನ್‌ನ ಜಮಾತ್ ಉಲ್ ಮುಸ್ಲಮಿನ್ ಕಮಿಟಿ ನಡೆಸಿದ್ದ ಮೆರವಣಿಗೆ ವೇಳೆ ಯುವಕರು ಅತ್ಯಂತ ಉತ್ಸಾಹದಿಂದ ರಾಷ್ಟ್ರ ಧ್ವಜವನ್ನು ಬೀಸುವ ದೃಶ್ಯಗಳು ವೈರಲ್‌ ಆಗಿವೆ. ಹೆಚ್ಚಿನವರು ಈದ್‌ನಲ್ಲಿ ಬಳಸುವ ಮುಸ್ಲಿಂ ಧ್ವಜಗಳನ್ನು ಬಳಸಿದ್ದರೆ ನಡುವೆ ದೊಡ್ಡ ಧ್ವಜವನ್ನು ಬಳಸಲಾಗಿದೆ. ಇದು ತ್ರಿವರ್ಣದಲ್ಲಿದೆ. ಕೇಸರಿ, ಬಿಳಿ ಹಸಿರು ಧ್ವಜವನ್ನು ಬಳಸಲಾಗಿದ್ದು, ಅದರಲ್ಲಿ ಬಿಳಿ ಬಣ್ಣದಲ್ಲಿ ಅಶೋಕ ಚಕ್ರ ಇರಬೇಕಾದ ಜಾಗದಲ್ಲಿ ಅರ್ಧ ಚಂದ್ರನ ಚಿತ್ರವನ್ನು ಹಾಕಲಾಗಿದೆ. ಜತೆಗೆ ಕೇಸರಿ ಮತ್ತು ಹಸಿರು ಬಣ್ಣದಲ್ಲಿ ಕೂಡಾ ಇದೇ ರೀತಿಯ ಅರ್ಧ ಚಂದ್ರ ಮತ್ತು ನಕ್ಷತ್ರಗಳ ಚಿತ್ರಗಳನ್ನು ಹಾಕಲಾಗಿದೆ. ಇದರ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಡಿತ್ತು.

National Flag disrespect at mirjan

ಮಿರ್ಜಾನಾ ಪೊಲೀಸರು ಫೇಸ್‌ಬುಕ್, ಇನ್‌ಸ್ಟಾ ಗ್ರಾಂ ಖಾತೆಗಳನ್ನು ಚೆಕ್ ಮಾಡುತ್ತಿರುವಾಗ, ಕೇಸರಿ ಸಾಮ್ರಾಟ್ ಎಂಬ ಖಾತೆಯಲ್ಲಿ ಈ ವಿಡಿಯೊ ಗಮನಕ್ಕೆ ಬಂದಿತ್ತು. ಅದರಲ್ಲಿ ʻʻಇದು ಕೇರಳ, ಪಶ್ಚಿಮ ಬಂಗಾಳ ಅಲ್ಲ. ನಮ್ಮ ಉತ್ತರ ಕನ್ನಡದ ಕುಮಟಾದ ಮಿರ್ಜಾನ. ಇಲ್ಲಿ ನಮ್ಮ ಬಾವುಟದಲ್ಲಿ ಅಶೋಕ ಚಕ್ರ ಇರುವ ಜಾಗದಲ್ಲಿ ಅರ್ಧ ಚಂದ್ರ ಬಂದು ಕೂತಿದೆ. ಮುಂದಿನ ದಿನದಲ್ಲಿ ಕೇಸರಿ ಬಣ್ಣ ಅಳಿಸಿ ಶಾಶ್ವತ ಹಸಿರು ಬಣ್ಣಕ್ಕೆ ಬದಲಾಯಿಸುತ್ತಾರೆ ಜಾಗೋ ಭಾರತೀಯ_ಜಾಗೋʼ ಎಂಬ ಬರೆದ್ದನ್ನು ಗಮನಿಸಲಾಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

New Criminal Law: ರಾಜ್ಯದ ಮೊದಲ ಬಿಎನ್‌ಎಸ್‌ ಪ್ರಕರಣ ಹಾಸನದಲ್ಲಿ ದಾಖಲು, ಯಾವ ಕೇಸ್?‌

New Criminal Law: ಹಾಸನ ರೂರಲ್ ಪೊಲೀಸ್ ಠಾಣೆಯಲ್ಲಿ ರಾಜ್ಯದ ಈ ಮೊದಲ ಬಿಎನ್ಎಸ್ ಪ್ರಕರಣ ಬೆಳಗ್ಗೆ 6.30‌ಕ್ಕೆ ದಾಖಲಾಗಿದೆ. ವೈದ್ಯ ಶಂಕರೇಗೌಡ ಎಂಬವರು ನೀಡಿದ ದೂರಿನ ಮೇಲೆ ಇದನ್ನು ಕಾಯಿದೆಯ ಸೆಕ್ಷನ್ 281, 106 ಅಡಿ ದಾಖಲು ಮಾಡಿಕೊಳ್ಳಲಾಗಿದೆ.

VISTARANEWS.COM


on

new criminal law
Koo

ಹಾಸನ: ರಾಜ್ಯದಲ್ಲಿ ಮೊದಲ ಬಿಎನ್ಎಸ್ (BNS FIR) ಪ್ರಕರಣ ಹಾಸನದಲ್ಲಿ (Hassan) ದಾಖಲಾಗಿದೆ. ಇಂದಿನಿಂದ ದೇಶಾದ್ಯಂತ ಜಾರಿಯಾಗುತ್ತಿರುವ ನೂತನ ಅಪರಾಧ ಕಾಯಿದೆ (New Criminal law) ಭಾರತೀಯ ನ್ಯಾಯ ಸಂಹಿತೆಯ (Bharatiya Nyaya Sanhita) ಅಡಿಯಲ್ಲಿ ಈ ಪ್ರಕರಣ ದಾಖಲಾಗಿದ್ದು, ಅತಿ ವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯಿಂದ ಮಹಿಳೆಯೊಬ್ಬರ ಸಾವಿಗೆ ಕಾರಣನಾದ ಚಾಲಕನ ಮೇಲೆ ಪ್ರಯೋಗಿಸಲ್ಪಟ್ಟಿದೆ.

ಹಾಸನ ರೂರಲ್ ಪೊಲೀಸ್ ಠಾಣೆಯಲ್ಲಿ ರಾಜ್ಯದ ಈ ಮೊದಲ ಬಿಎನ್ಎಸ್ ಪ್ರಕರಣ ಬೆಳಗ್ಗೆ 6.30‌ಕ್ಕೆ ದಾಖಲಾಗಿದೆ. ವೈದ್ಯ ಶಂಕರೇಗೌಡ ಎಂಬವರು ನೀಡಿದ ದೂರಿನ ಮೇಲೆ ಇದನ್ನು ಕಾಯಿದೆಯ ಸೆಕ್ಷನ್ 281, 106 ಅಡಿ ದಾಖಲು ಮಾಡಿಕೊಳ್ಳಲಾಗಿದೆ. ಸಾಗರ್ ಎಂಬ ಕಾರು ಚಾಲಕನ ಮೇಲೆ ಪ್ರಕರಣ ದಾಖಲಿಸಲಾಗಿದ್ದು, ಈತ ಅತಿ ವೇಗ ಹಾಗು ನಿರ್ಲಕ್ಷ್ಯತನದಿಂದ ವಾಹನ ಚಾಲನೆ ಮಾಡಿ ಮಹಿಳೆಯ ಸಾವಿಗೆ ಕಾರಣನಾಗಿದ್ದಾನೆ ಎಂದು ದೂರಲಾಗಿದೆ.

ದೂರು ನೀಡಿದ ವೈದ್ಯರ ಅತ್ತೆಯಾದ ಇಂದು ಎಂಬ ಮಹಿಳೆ ಮೃತಪಟ್ಟಿದ್ದಾರೆ. ಹಾಸನದ ಹಳೆಬೀಡು ರಸ್ತೆ ಸೀಗೇಗೇಟ್ ಹತ್ತಿರ ಸೇತುವೆಯಿಂದ ಕೆಳಗೆ ಕಾರು ಪಲ್ಟಿಯಾಗಿತ್ತು. ಬೆಂಗಳೂರು ಏರ್‌ಪೋರ್ಟ್‌ನಿಂದ ಶಂಕರೇಗೌಡನರ ಅತ್ತೆ ಇಂದು, ‌ಮಾವ ಯೋಗೇಶ್ ಅವರನ್ನು ಚಾಲಕ ಸಾಗರ್ ಪಿಕಪ್ ಮಾಡಿದ್ದ. ಅಪಘಾತದಲ್ಲಿ ಯೋಗೇಶ್ ಬಚಾವ್ ಆಗಿದ್ದರೆ, ಇಂದು ಸಾವಿಗೀಡಾಗಿದ್ದರು.

ಬೀದಿ ವ್ಯಾಪಾರಿಯ ಮೇಲೆ ಮೊದಲ ಕೇಸ್

ನವದೆಹಲಿ: ಬ್ರಿಟಿಷ್​ ವಸಾಹತು ಕಾಲದ ಕ್ರಿಮಿನಲ್‌ ಕಾನೂನುಗಳಿಗೆ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿದ್ದು, ಇಂದು ಜಾರಿಗೆ ಬಂದಿದೆ (New Criminal Law). ಹೊಸ ಕಾನೂನಿನ ಪ್ರಕಾರ ಹೊಸದಿಲ್ಲಿಯ ರೈಲ್ವೆ ನಿಲ್ದಾಣದ ಬಳಿ ರಸ್ತೆಯ ಸುಗಮ ಸಂಚಾರಕ್ಕೆ ಅಡ್ಡಿಪಡಿಸಿದ ಬೀದಿ ವ್ಯಾಪಾರಿಯ ವಿರುದ್ಧ ಮೊದಲ ಎಫ್ಐಆರ್ ದಾಖಲಿಸಲಾಗಿದೆ.

ಹೊಸ ಕ್ರಿಮಿನಲ್ ಕೋಡ್‌ನ ಸೆಕ್ಷನ್ 285ರ ಅಡಿಯಲ್ಲಿ ಈ ಎಫ್ಐಆರ್ ದಾಖಲಿಸಲಾಗಿದೆ. ಈ ಕಾನೂನಿನ ಪ್ರಕಾರ ಯಾವುದೇ ಸಾರ್ವಜನಿಕ ರಸ್ತೆಗೆ ಅಡ್ಡಿಪಡಿಸಿದರೆ ಅಥವಾ ಸಾರ್ವಜನಿಕ ಮಾರ್ಗದಲ್ಲಿ ಸಂಚರಿಸುವ ಯಾವುದೇ ವ್ಯಕ್ತಿಗೆ ಅಪಾಯ ಅಥವಾ ಗಾಯವನ್ನು ಉಂಟು ಮಾಡಿದರೆ 5 ಸಾವಿರ ರೂಪಾಯಿವರೆಗೆ ದಂಡ ವಿಧಿಸಬಹುದಾಗಿದೆ.‌

ಭಾನುವಾರ ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ರಸ್ತೆಯಲ್ಲಿ ನೀರಿನ ಬಾಟಲಿಗಳು ಮತ್ತು ಗುಟ್ಕಾ ಮಾರಾಟ ಮಾಡುವ ಬೀದಿ ವ್ಯಾಪಾರಿಯನ್ನು ಗುರುತಿಸಿದ ನಂತರ ಎಫ್ಐಆರ್ ದಾಖಲಿಸಲಾಗಿದೆ. ಬೀದಿ ವ್ಯಾಪಾರಿಯ ತಾತ್ಕಾಲಿಕ ಅಂಗಡಿಯು ರಸ್ತೆಗೆ ಅಡ್ಡವಾಗಿ ನಿಂತಿತ್ತು. ಅದನ್ನು ಸ್ಥಳಾಂತರಿಸಲು ಪೊಲೀಸ್‌ ಸಿಬ್ಬಂದಿ ಕೇಳಿಕೊಂಡರೂ ಒಪ್ಪದೇ ಇದ್ದಾಗ ಎಫ್ಐಆರ್ ದಾಖಲಿಸಲಾಗಿದೆ.

ಎಫ್‌ಐಆರ್‌ನಲ್ಲಿ ಏನಿದೆ?

ಬೀದಿ ಬದಿ ವ್ಯಾಪಾರಿ ಭಾನುವಾರ ರಾತ್ರಿ ನವದೆಹಲಿ ರೈಲ್ವೆ ನಿಲ್ದಾಣದ ಬಳಿಯ ಪಾದಚಾರಿ ಮೇಲ್ಸೇತುವೆಯ ಕೆಳಗೆ ತನ್ನ ಅಂಗಡಿಯನ್ನು ನಿಲ್ಲಿಸಿದ್ದ ಎಂದು ಹೇಳಲಾಗಿದೆ. “ಆ ವ್ಯಾಪಾರಿಯು ಬೀದಿಯಲ್ಲಿ ನೀರಿನ ಬಾಟಲಿ, ಬೀಡಿ ಮತ್ತು ಸಿಗರೇಟುಗಳನ್ನು ಮಾರಾಟ ಮಾಡುತ್ತಿದ್ದ. ಸಾರ್ವಜನಿಕರ ಸುಗಮ ಸಂಚಾರಕ್ಕೆ ಆತನ ಅಂಗಡಿ ಅಡ್ಡಿಯಾಗುತ್ತಿತ್ತು. ರಸ್ತೆಯಿಂದ ಅಂಗಡಿಯನ್ನು ತೆರವುಗೊಳಿಸುವಂತೆ ಸಬ್ ಇನ್ಸ್‌ಪೆಕ್ಟರ್ ಆ ವ್ಯಾಪಾರಿ ಬಳಿ ಹಲವು ಬಾರಿ ಮನವಿ ಮಾಡಿದರು. ಆದರೆ ಆತ ಅದಕ್ಕೆ ಒಪ್ಪಲಿಲ್ಲ” ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ. ವ್ಯಾಪಾರಿಯನ್ನು ಬಿಹಾರದ ಪಾಟ್ನಾ ಮೂಲದ ಪಂಕಜ್ ಕುಮಾರ್ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: Amit Shah: ಹೊಸ ಕ್ರಿಮಿನಲ್ ಕಾನೂನಿನಲ್ಲಿ ಶಿಕ್ಷೆಯ ಬದಲು ನ್ಯಾಯಕ್ಕೆ ಪ್ರಾಧಾನ್ಯತೆ; ಅಮಿತ್ ಶಾ

Continue Reading

ತುಮಕೂರು

Tumkur News : ತುಮಕೂರಿನಲ್ಲಿ ಗ್ರಾಪಂ ಸದಸ್ಯನ ಮೇಲೆ ಚಪ್ಪಲಿ ಎಸೆದು ಮನಬಂದಂತೆ ಥಳಿಸಿದ ಉಪಾಧ್ಯಕ್ಷ!

Tumkur News : ತಂಡಗ ಗ್ರಾಮ ಪಂಚಾಯತಿ ಅಧ್ಯಕ್ಷನ ಅವಿಶ್ವಾಸ ಮಂಡನೆಗೆ ಸಹಿ ಹಾಕಲು ನಿರಾಕರಿಸಿದ್ದಕ್ಕೆ ಗ್ರಾಪಂ ಸದಸ್ಯನ ಮೇಲೆ ಚಪ್ಪಲಿ ಎಸೆದು ಉಪಾಧ್ಯಕ್ಷ ಹಲ್ಲೆ (Assault Case) ನಡೆಸಿದ್ದಾನೆ.

VISTARANEWS.COM


on

By

tumkur News Assault Case
Koo

ತುಮಕೂರು: ಮದುವೆ ಸಮಾರಂಭಕ್ಕೆ ಹೋಗಿದ್ದಾಗ ಗ್ರಾಮ ಪಂಚಾಯತಿ ಸದಸ್ಯನ ಮೇಲೆ ಚಪ್ಪಲಿಯಿಂದ ಹಲ್ಲೆ (Assault Case) ನಡೆಸಲಾಗಿದೆ. ಹಲ್ಲೆ ದೃಶ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿ (Tumkur news) ಘಟನೆ ನಡೆದಿದೆ.

ತುರುವೇಕೆರೆ ತಾಲೂಕಿನ ತಂಡಗ ಗ್ರಾಮ ಪಂಚಾಯತಿಯ ಸದಸ್ಯ ಮೋಹನ್ ಎಂಬಾತನ ಮೇಲೆ ಉಪಧ್ಯಾಕ್ಷ ಚನ್ನಬಸವೇಗೌಡನಿಂದ ಹಲ್ಲೆ ನಡೆದಿದೆ. ತಂಡಗ ಗ್ರಾಮ ಪಂಚಾಯತಿ ಅಧ್ಯಕ್ಷನ ಅವಿಶ್ವಾಸ ಮಂಡನೆಗೆ ಸಹಿ ಹಾಕಲು ಮೋಹನ್ ನಿರಾಕರಿಸಿದ್ದರು ಎನ್ನಲಾಗಿದೆ. ಹೀಗಾಗಿ ಸಹಿ ಹಾಕುವಂತೆ ಮೋಹನ್‌ಗೆ ಚನ್ನಬಸವೇಗೌಡ ಒತ್ತಾಯಿಸಿದ್ದರು.

ಸಹಿ ಹಾಕಲು ಒಪ್ಪದಿದ್ದಾಗ ಚನ್ನಬಸವೇಗೌಡ ಸಿಟ್ಟಿನಲ್ಲಿ ಮುಖಕ್ಕೆ ಹೊಡೆದು ಚಪ್ಪಲಿಯಿಂದ ಹಲ್ಲೆ ನಡೆಸಿದ್ದಾರೆ. ಮದುವೆ ಸಮಾರಂಭಕ್ಕೆ ಹೋಗಿದ್ದ ವೇಳೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ. ಸದ್ಯ ಘಟನೆ ಸಂಬಂಧ ನೊಣವಿನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Assault case: ಹುಬ್ಬಳ್ಳಿಯಲ್ಲಿ ಪುಡಿ ರೌಡಿಗಳ ಗ್ಯಾಂಗ್ ವಾರ್! ನಡುರಸ್ತೆಯಲ್ಲೆ ಹೊಡಿಬಡಿ

ಕಚೇರಿಗೆ ನುಗ್ಗಿ ದರದರನೆ ಎಳೆದು ಪಿಡಿಓ ಥಳಿಸಿದ ಪುಂಡರ ಗ್ಯಾಂಗ್‌!

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿ ಕರ್ತವ್ಯನಿರತ ಪಿಡಿಓ (PDO) ಮೇಲೆ ಹಲ್ಲೆ (Assault Case) ನಡೆದಿದೆ. ಪಿಡಿಓ ವಿವೇಕ್ ತೇಜಸ್ವಿ ಎಂಬುವವರು ಹಲ್ಲೆಗೊಳಗಾಗಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಹೊಸ ಯಳನಾಡು ಗ್ರಾಮ ಪಂಚಾಯತಿ ಮುಂಭಾಗದಲ್ಲಿ ಘಟನೆ ನಡೆದಿದೆ. ಹಲ್ಲೆ ನಡೆಸುವ ವಿಡಿಯೊ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕಳೆದ ಜೂನ್‌ 29ರ ಬೆಳಗ್ಗೆ ಹೊಸಯಳನಾಡು ಗ್ರಾಮ ಪಂಚಾಯತಿಗೆ ಆಲೂರು ಗ್ರಾಮದ ಬಾಲ ರಾಮಯ್ಯ, ಅಜ್ಜಯ್ಯ ಸಿದ್ದರಾಮೇಶ್ವರ, ಬೋರ್ ವೆಲ್ ರಾಮಚಂದ್ರಪ್ಪ ಎಂಬುವವರು ಬಂದಿದ್ದರು. ಕಚೇರಿಯೊಳಗೆ ನುಗ್ಗಿ ಬಂದವರೇ ಪಿಡಿಒ ವಿವೇಕ್‌ ತೇಜಸ್ವಿ ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ನಿನ್ನಿಂದ ಆಲೂರು ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಸರಿಯಾಗಿ ನೀರು ಸರಬಾರಜು ಆಗುತ್ತಿಲ್ಲ ಎಂದು ಹೇಳಿ ದರದರನೇ ಹೊರಗಡೆ ಎಳೆದುಹೋಗಿದ್ದಾರೆ.

ಬಳಿಕ ಹತ್ತಾರು ಮಂದಿ ವಿವೇಕ್‌ ಅವರನ್ನು ಸುತ್ತುವರೆದು ಜಗಳವಾಡಿ ಮನಬಂದಂತೆ ಥಳಿಸಿದ್ದಾರೆ. ಇತ್ತ ವಿವೇಕ್‌ ತೇಜಸ್ವಿ ಅವರ ಕೂಗಾಟ ಕೇಳಿ ಹೊರ ಬಂದ ಇತರೆ ಸಿಬ್ಬಂದಿ ಜಗಳವನ್ನು ಬಿಡಿಸಿದ್ದಾರೆ. ಈ ವೇಳೆ ನಿನಗೆ ಕೆಲಸ ಮಾಡಲು ಬಿಡುವುದಿಲ್ಲ ಎಂದೇಳಿ ಬೆದರಿಕೆಯನ್ನು ಹಾಕಿದ್ದಾರೆ.

ಹಲ್ಲೆ ಬಳಿಕ ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ. ಇವರ ವಿರುದ್ಧ ಐಪಿಸಿ 323, 504, 353, 506 ಅಟ್ರಾಸಿಟಿ ಕಾಯ್ದೆಯಡಿ ಕೇಸ್ ದಾಖಲಾಗಿದೆ. ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಮಾಹಿತಿ ಕಲೆಹಾಕಿದ್ದಾರೆ. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಹುಬ್ಬಳ್ಳಿ

Assault case: ಹುಬ್ಬಳ್ಳಿಯಲ್ಲಿ ಪುಡಿ ರೌಡಿಗಳ ಗ್ಯಾಂಗ್ ವಾರ್! ನಡುರಸ್ತೆಯಲ್ಲೆ ಹೊಡಿಬಡಿ

Assault case : ಹುಬ್ಬಳ್ಳಿಯಲ್ಲಿ ಪ್ರತ್ಯೇಕ ಕಡೆಗಳಲ್ಲಿ ಹೊಡೆದಾಟ ಬಡಿದಾಟ ನಡೆದಿದೆ. ಪುಡಿ ರೌಡಿಗಳ ಗ್ಯಾಂಗ್‌ ವಾರ್‌ ನಡೆದಿದ್ದು, ದೂರು-ಪ್ರತಿದೂರು ದಾಖಲಾಗಿದೆ. ಇತ್ತ ತುಮಕೂರಿನಲ್ಲಿ ಗ್ರಾಪಂ ಸದಸ್ಯನ ಮೇಲೆ ಉಪಾಧ್ಯಕ್ಷ ಚಪ್ಪಲಿ ಎಸೆದು ಹಲ್ಲೆ ನಡೆಸಿದ್ದಾನೆ.

VISTARANEWS.COM


on

By

Assault Case in Hubballi
Koo

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಪುಡಿ ರೌಡಿಗಳ ನಡುವೆ ಗ್ಯಾಂಗ್ ವಾರ್ (Gang War) ನಡೆದಿದ್ದು, ಎರಡು ಗ್ಯಾಂಗ್‌ಗಳಿಂದ ದೂರು ಪ್ರತಿದೂರು ದಾಖಲಾಗಿದೆ. ಗನ್ ತೋರಿಸಿ‌ ಕೊಲೆ ಮಾಡಲು ಯತ್ನಿಸಿರುವ ಆರೋಪದಡಿ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ (Assault case) ದಾಖಲಾಗಿದೆ.

ಸುಂದರ್, ಪಿಲೋಮಿನ್, ಚಂದ್ರ ಪೌಲ್ ಎಂಬುವವರ ವಿರುದ್ಧ ಹುಬ್ಬಳ್ಳಿಯ ಸೆಟ್ಲಮೆಂಟ್ ನಿವಾಸಿ ಅಭಿಷೇಕ್ ಜಾಧವ್ ದೂರು ನೀಡಿದ್ದಾರೆ. ಕಾಂಗ್ರೆಸ್ ಮುಖಂಡ ಶಾಮ್ ಜಾಧವ ಹಾಗೂ ಪಾಲಿಕೆ ಸದಸ್ಯೆ ಮಂಜುಳಾ ಜಾಧವ ಅವರ ಪುತ್ರ ಅಭಿಷೇಕ್ ಜಾಧವ್‌ಗೆ ಈ ಆರೋಪಿಗಳು ಹುಬ್ಬಳ್ಳಿಗೆ ನಾವೇ ಡಾನ್‌ಗಳು ಎಂದು‌ ಧಮ್ಕಿ ಹಾಕಿದ್ದರಂತೆ.

ಇತ್ತ ಸುಂದರ ಪೌಲ್ ಆ್ಯಂಡ್ ಟೀಮ್ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರತಿ ದೂರು ದಾಖಲಿಸಿದ್ದಾರೆ. ಅಭಿಷೇಕ್‌ ಜಾಧವ್ ಗ್ಯಾಂಗ್‌ನವರು ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು ನಾಲ್ವರ ವಿರುದ್ಧ ದೂರು ನೀಡಿದ್ದಾರೆ. ಹಲವು ಕ್ರಿಮಿನಲ್ ಆರೋಪ ಹೊತ್ತಿರುವ ಈ ಎರಡು ಗ್ಯಾಂಗ್‌ಗಳ ನಡುವೆ ಕಲಹ ಶುರುವಾಗಿದೆ. ಈ ಮಧ್ಯೆ ಪರಸ್ಪರ ಅವಾಜ್ ಹಾಕಿರುವ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: Murder Case : ರೌಡಿಯಾಗಲು ಹೊರಟವನನ್ನು ಕೊಂದು ಹಾಕಿದ್ರು ಪುಂಡರು

ಕ್ಷುಲ್ಲಕ ಕಾರಣಕ್ಕೆ ಹುಬ್ಬಳ್ಳಿಯಲ್ಲಿ ಮಾರಾಮಾರಿ

ಹುಬ್ಬಳ್ಳಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಮಾರಣಾಂತಿಕ ಹಲ್ಲೆ ಮಾಡಿದವರ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಹುಬ್ಬಳ್ಳಿಯ ಸೆಟ್ಲ್‌ಮೆಂಟ್‌‌ ಏರಿಯಾದಲ್ಲಿ ಪ್ರಜ್ವಲ ಬೆಳ್ಳಿಗಟ್ಟಿ, ವಿಕಾಸ ಭಜಂತ್ರಿ ಎಂಬುವವರ ಸ್ವಯಂ ಜಾಧವ, ಪ್ರಜ್ವಲ ಜಾಧವ ಎಂಬುವವರು ಗುಂಪು ಹಲ್ಲೆ ಮಾಡಿದ್ದಾರೆ ಎಂಬ ಆರೋಪವಿದೆ.

assault Case in hubballi

ಕ್ರಿಮಿನಲ್ ಹಿನ್ನೆಲೆ ಇರುವವರಿಗೆ ಹೊಂದಾಣಿಕೆಗೆ ಅವಕಾಶ ಕೊಟ್ಟು ಪೊಲೀಸರು ಸುಮ್ಮನಾಗಿದ್ದಾರೆ ಎಂದು ಹಲ್ಲೆಗೊಳಗಾದ ಗುಂಪು ಆರೋಪಿಸಿವೆ. ಇನ್ನೂ ಹಲ್ಲೆಗೊಳಗಾದವರು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಪೊಲೀಸರು ಗಾಯಾಳುಗಳ MLC ಮಾಡಿ ಸುಮ್ಮನಾಗಿದ್ದಾರೆ. ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ತುಮಕೂರಿನಲ್ಲಿ ಗ್ರಾಪಂ ಸದಸ್ಯನ ಮೇಲೆ ಚಪ್ಪಲಿ ಎಸೆತ

ಮದುವೆ ಸಮಾರಂಭಕ್ಕೆ ಹೋಗಿದ್ದಾಗ ಗ್ರಾಮ ಪಂಚಾಯತಿ ಸದಸ್ಯನ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಲಾಗಿದೆ. ಹಲ್ಲೆ ದೃಶ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿ ಘಟನೆ ನಡೆದಿದೆ.

ತುರುವೇಕೆರೆ ತಾಲೂಕಿನ ತಂಡಗ ಗ್ರಾಮ ಪಂಚಾಯತಿಯ ಸದಸ್ಯ ಮೋಹನ್ ಮೇಲೆ ಉಪಧ್ಯಾಕ್ಷ ಚನ್ನಬಸವೇಗೌಡನಿಂದ ಹಲ್ಲೆ ನಡೆದಿದೆ. ತಂಡಗ ಗ್ರಾಮ ಪಂಚಾಯತಿ ಅಧ್ಯಕ್ಷನ ಅವಿಶ್ವಾಸ ಮಂಡನೆಗೆ ಸಹಿ ಹಾಕಲು ಮೋಹನ್ ನಿರಾಕರಿಸಿದ್ದರು ಎನ್ನಲಾಗಿದೆ.

ಹೀಗಾಗಿ ಸಹಿ ಹಾಕುವಂತೆ ಮೋಹನ್‌ಗೆ ಚನ್ನಬಸವೇಗೌಡ ಒತ್ತಾಯಿಸಿದ್ದರು. ಸಹಿ ಹಾಕಲು ಒಪ್ಪದಿದ್ದಾಗ ಚನ್ನಬಸವೇಗೌಡ ಸಿಟ್ಟಿನಲ್ಲಿ ಮುಖಕ್ಕೆ ಹೊಡೆದು ಚಪ್ಪಲಿಯಿಂದ ಹಲ್ಲೆ ನಡೆಸಿದ್ದಾರೆ. ಮದುವೆ ಸಮಾರಂಭಕ್ಕೆ ಹೋಗಿದ್ದ ವೇಳೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ. ಸದ್ಯ ಘಟನೆ ಸಂಬಂಧ ನೊಣವಿನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

DK Shivakumar: ಸಿಎಂ- ಡಿಸಿಎಂ ದಂಗಲ್‌ ವಿಷಯ ಎತ್ತುವ ಶಾಸಕರಿಗೆ ನೊಟೀಸ್: ಡಿಕೆ ಶಿವಕುಮಾರ್

DK Shivakumar: ಕೆಪಿಸಿಸಿ ಪದಾಧಿಕಾರಿಗಳ ಸಭೆಯಲ್ಲಿ ಸಿಎಂ- ಡಿಸಿಎಂ ದಂಗಲ್ ವಿಚಾರ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯೊಬ್ಬರಿಂದ ಪ್ರಸ್ತಾಪವಾಯಿತು. ಸಿಎಂ, ಡಿಸಿಎಂ ಬದಲಾವಣೆ ಬಗ್ಗೆ ಮಾತನಾಡುವರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ಪ್ರಧಾನ ಕಾರ್ಯದರ್ಶಿ ಒತ್ತಾಯ ಮಾಡಿದರು. ಪದಾಧಿಕಾರಿಗಳ ಪ್ರಸ್ತಾಪಕ್ಕೆ ಡಿಕೆ ಶಿವಕುಮಾರ್ ಖಡಕ್ ಉತ್ತರ ನೀಡಿದರು.

VISTARANEWS.COM


on

DK ShivaKumar
Koo

ಬೆಂಗಳೂರು: ಸಿಎಂ- ಡಿಸಿಎಂ ಬದಲಾವಣೆ ಕುರಿತು ಮಾತನಾಡುವ ಪಕ್ಷದ ಶಾಸಕರಿಗೆ ಇಷ್ಟರಲ್ಲೇ ನೋಟೀಸ್‌ (Notice) ನೀಡುತ್ತೇವೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಜೊತೆಗೂ ಮಾತನಾಡಿದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DCM DK Shivakumar) ಹೇಳಿದ್ದಾರೆ.

ಕೆಪಿಸಿಸಿ ಪದಾಧಿಕಾರಿಗಳ ಸಭೆಯಲ್ಲಿ ಸಿಎಂ- ಡಿಸಿಎಂ ದಂಗಲ್ ವಿಚಾರ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯೊಬ್ಬರಿಂದ ಪ್ರಸ್ತಾಪವಾಯಿತು. ಸಿಎಂ, ಡಿಸಿಎಂ ಬದಲಾವಣೆ ಬಗ್ಗೆ ಮಾತನಾಡುವರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ಪ್ರಧಾನ ಕಾರ್ಯದರ್ಶಿ ಒತ್ತಾಯ ಮಾಡಿದರು. ಪದಾಧಿಕಾರಿಗಳ ಪ್ರಸ್ತಾಪಕ್ಕೆ ಡಿಕೆ ಶಿವಕುಮಾರ್ ಖಡಕ್ ಉತ್ತರ ನೀಡಿದರು.

ʼಕೆಲವರಿಗೆ ಮೈಕ್ ಕಂಡ ತಕ್ಷಣ ಮಾತಾಡುವ ದೊಡ್ಡ ಚಟವಿದೆ. ಆದರೆ ಇದನ್ನು ಎಐಸಿಸಿ ಗಮನಿಸುತ್ತಿದೆ. ಗೊಂದಲ ಮೂಡಿಸುತ್ತಿರುವವರ ಬಗ್ಗೆ ಅರಿವಿದೆ. ಸಭೆಯಲ್ಲಿ ಶಾಸಕರಿಗೆ ನೋಟೀಸ್ ನೀಡಲಾಗುವುದು. ನಾನು ಮತ್ತು ಸಿಎಂ ಈ ಬಗ್ಗೆ ಮಾತಾಡಿದ್ದೇವೆ. ಸಿಎಂ ಜೊತೆಗೆ ಕೆಲವರ ಬಗ್ಗೆ ಮಾತಾಡಿದ್ದೇನೆ. ಶೀಘ್ರದಲ್ಲೇ ಕೆಲವು ಶಾಸಕರಿಗೆ ನೊಟೀಸ್ ನೀಡುತ್ತೇವೆʼ ಎಂದು ಡಿಕೆಶಿ ನುಡಿದರು.

ಇದೇ ಸಂದರ್ಭದಲ್ಲಿ ಪಕ್ಷಾಧ್ಯಕ್ಷನಾಗಿ ತಮ್ಮ ಶ್ರಮದ ಬಗ್ಗೆ ಪದಾಧಿಕಾರಿಗಳಿಗೆ ಡಿಕೆ ಶಿವಕುಮಾರ್ ಮನವರಿಕೆ ಮಾಡಿಕೊಟ್ಟರು. ʼನಾನು ಅಧ್ಯಕ್ಷನಾಗುವ ಮೊದಲು ಪಕ್ಷ ಹೇಗಿತ್ತು, ಈಗ ಹೇಗಿದೆ ನೋಡಿ. ಸೋನಿಯಾ ಗಾಂಧಿ ಪಕ್ಷ ಸಂಕಷ್ಟದಲ್ಲಿದ್ದಾಗ ನನ್ನ ಅಧ್ಯಕ್ಷನನ್ನಾಗಿ ಮಾಡಿದರು. ಈಗ ಪಕ್ಷ ಸದೃಢವಾಗಿದೆ, ಇನ್ನಷ್ಟು ಬಲಿಷ್ಠ ಮಾಡುವ ಹೊಣೆಗಾರಿಕೆ ನನ್ನ ಮೇಲಿದೆ. ಯಾರೋ ಒಂದಿಬ್ಬರು ನನ್ನನ್ನು ಬಗ್ಗಿಸಬಹುದು ಅಂತ ಭಾವಿಸಿದ್ದರೆ ಅದು ಆಗದ ಕೆಲಸʼ ಎಂದು ಶಿವಕುಮಾರ್‌ ಭರವಸೆ ನೀಡಿದರು.

ಪಕ್ಷ ಕಟ್ಟುವತ್ತ ಡಿಕೆ ಶಿವಕುಮಾರ್‌ ಚಿತ್ತ

ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ರಾಜ್ಯ ಕಾಂಗ್ರೆಸ್‌ ನಾಯಕರಿಂದಲೇ ಒತ್ತಾಯ ಕೇಳಿಬರುತ್ತಿದೆ. ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ (DCM Post) ಸ್ಥಾನವನ್ನು ಒಬ್ಬರಿಗೆ ನೀಡಿರುವುದಕ್ಕೆ ಪಕ್ಷದಲ್ಲಿ ಭಿನ್ನಮತ ಭುಗಿಲೆದ್ದಿದೆ. ಆದರೆ, ಒನ್ ಮ್ಯಾನ್ ಒನ್ ಪೋಸ್ಟ್ ಕೂಗಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತ್ರ ಡೋಂಟ್ ಕೇರ್ ಎನ್ನುತ್ತಿದ್ದು, ಕೇಡರ್ ಬೇಸ್ ಪಾರ್ಟಿ ಕಟ್ಟಲು ಅವರು ಪಣತೊಟ್ಟಿದ್ದಾರೆ. ಇದಕ್ಕಾಗಿ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ.

ಚುನಾವಣೆ ದೃಷ್ಟಿಯಿಂದ ಪ್ರತ್ಯೇಕ ಆ್ಯಕ್ಷನ್ ಪ್ಲ್ಯಾನ್ ಸಿದ್ಧಪಡಿಸಿ ಪದಾಧಿಕಾರಿಗಳ ಸಭೆಯಲ್ಲಿ ಮಂಡನೆ ಮಾಡಿದ್ದಾರೆ. ಇನ್ನು ಲೋಕಸಭೆ ಫಲಿತಾಂಶದ ಹಿನ್ನಡೆ ಹಿನ್ನೆಲೆಯಲ್ಲಿ ವಲಯವಾರು ಸತ್ಯ ಶೋಧನಾ ಸಮಿತಿ ರಚನೆಗೆ ನಿರ್ಧಾರ ಮಾಡಿದ್ದಾರೆ.

ಲೋಕಸಭೆಯಲ್ಲಿ ಹಿನ್ನಡೆ ಅನುಭವಿಸಿದ ವಿಧಾನಸಭಾ ಕ್ಷೇತ್ರಗಳ ಪ್ರಗತಿ ಪರಿಶೀಲನೆ, ಕಾರಣಗಳನ್ನು ಪತ್ತೆ ಹಚ್ಚುವುದು, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ರೂಪುರೇಷೆ ಸಿದ್ಧಪಡಿಸಲು ವಲಯವಾರು ಸಮಿತಿ ರಚನೆ ಮಾಡಲು ಹಾಗೂ ಬಿಬಿಎಂಪಿ, ಜಿಪಂ, ತಾಪಂ ಚುನಾವಣೆಗೆ ಹಾಗೂ ಉಪ ಚುನಾವಣೆಯಲ್ಲಿ ಸಕ್ರಿಯವಾಗಿ ಕೆಲಸ ಮಾಡುವಂತೆ ಸೂಚನೆ ನೀಡಿದ್ದಾರೆ.

ಪ್ರತಿ ಜಿಲ್ಲೆ ಹಾಗೂ ವಿಧಾನಸಭಾ ಕ್ಷೇತ್ರವಾರು ಸಂಚಾಲನ ಸಮಿತಿ ರಚನೆಗೂ ನಿರ್ಧಾರ ಮಾಡಲಾಗಿದೆ. ಇದಕ್ಕಾಗಿ ಮಾಜಿ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್ ಸದಸ್ಯರ ಪ್ರತ್ಯೇಕ ಸಭೆಯನ್ನು ಡಿಕೆಶಿ ನಡೆಸಲಿದ್ದಾರೆ. ಕೆಳಹಂತದಲ್ಲಿ ಪಕ್ಷ ಬಲವರ್ಧನೆಗೆ ಸಲಹೆ ನೀಡಲು ಪದಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಹಾಗೆಯೇ ಬೂತ್ ಮಟ್ಟದ ಸಮಸ್ಯೆ ಬಗೆಹರಿಸಲು ವಾರ್ಡ್ ಸಮಿತಿ/ ಪಂಚಾಯತ್ ಸಮಿತಿಗಳ ರಚನೆಗೆ ತೀರ್ಮಾನ ಮಾಡಿದ್ದು, ಗ್ಯಾರಂಟಿ ಫಲಾನುಭವಿಗಳ ದಾಖಲೆ ಹಾಗೂ ಮೊಬೈಲ್ ಸಂಖ್ಯೆ ಸಂಗ್ರಹಿಸಲು ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಕೆಪಿಸಿಸಿ ಮಟ್ಟದಲ್ಲಿ ಅಪಾರ್ಟ್ಮೆಂಟ್ ಸೆಲ್ ಹಾಗೂ ರೆಸಿಡೆಂಟ್ ವೆಲ್ಫೆರ್ ಅಸೋಸಿಯೇಷನ್‌ಗೆ ಪುನಶ್ಚೇತನ ನೀಡಲು ಯೋಜಿಸಿದ್ದು, ಉಪ ಚುನಾವಣೆಗಳಿಗೆ ಸಚಿವರು, ಶಾಸಕರನ್ನು ಹೋಬಳಿ ಮಟ್ಟದಲ್ಲಿ ನಿಯೋಜನೆಗೆ ನಿರ್ಧಾರ ಮಾಡಿದ್ದಾರೆ. ಅಲ್ಲದೇ ಸ್ಥಳೀಯ ಶಾಸಕರು, ಹಿರಿಯ ನಾಯಕರ ನೇತೃತ್ವದಲ್ಲಿ ಎಲೆಕ್ಷನ್ ಕ್ಯಾಂಪ್ ಆಫೀಸ್, ವಾರ್ ರೂಂ ಸ್ಥಾಪನೆ ಮಾಡಲು ನಿರ್ಧರಿಸಿದ್ದಾರೆ.

ಪದಾಧಿಕಾರಿಗಳ ಸಭೆಯಲ್ಲಿ ಎರಡು‌ ರೀತಿಯ ಪ್ಲ್ಯಾನ್ ಆಫ್ ಆ್ಯಕ್ಷನ್ ಮಾಡಲು ಮುಂದಾಗಿದ್ದು, ಪಕ್ಷ ಸಂಘಟನೆ ಮತ್ತು ಮುಂಬರುವ ಚುನಾವಣೆ ಕುರಿತು ಕಾರ್ಯ ಯೋಜನೆ ಮಾಡಲು ತೀರ್ಮಾನಿಸಿದ್ದಾರೆ.

ಇದನ್ನೂ ಓದಿ | Hosur Airport: ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣದ ಹೊಣೆ ಬಿಐಎಎಲ್‌ಗೆ! ಕರ್ನಾಟಕಕ್ಕೆ ಟಕ್ಕರ್‌ ಕೊಟ್ಟ ತಮಿಳುನಾಡು

Continue Reading
Advertisement
new criminal law
ಕ್ರೈಂ7 mins ago

New Criminal Law: ರಾಜ್ಯದ ಮೊದಲ ಬಿಎನ್‌ಎಸ್‌ ಪ್ರಕರಣ ಹಾಸನದಲ್ಲಿ ದಾಖಲು, ಯಾವ ಕೇಸ್?‌

tumkur News Assault Case
ತುಮಕೂರು23 mins ago

Tumkur News : ತುಮಕೂರಿನಲ್ಲಿ ಗ್ರಾಪಂ ಸದಸ್ಯನ ಮೇಲೆ ಚಪ್ಪಲಿ ಎಸೆದು ಮನಬಂದಂತೆ ಥಳಿಸಿದ ಉಪಾಧ್ಯಕ್ಷ!

Amith Shah
ದೇಶ24 mins ago

Amit Shah: ಹೊಸ ಕ್ರಿಮಿನಲ್ ಕಾನೂನಿನಲ್ಲಿ ಶಿಕ್ಷೆಯ ಬದಲು ನ್ಯಾಯಕ್ಕೆ ಪ್ರಾಧಾನ್ಯತೆ; ಅಮಿತ್ ಶಾ

Parliament Sessions
ದೇಶ25 mins ago

Parliament Sessions: ಹಿಂದೂ ಹಿಂಸಾವಾದಿ ಹೇಳಿಕೆ; ಸಂಸತ್‌ನಲ್ಲಿ ರಾಹುಲ್‌-ಮೋದಿ ಜಟಾಪಟಿ

Meghana Raj didn't want to enter the film Father Sundarraj
ಸ್ಯಾಂಡಲ್ ವುಡ್31 mins ago

Meghana Raj: ಮೇಘನಾ ರಾಜ್‌  ಫಿಲ್ಮ್​ಗೆ ಎಂಟ್ರಿ ಕೊಟ್ಟಿದ್ದು ಇಷ್ಟವಿರಲಿಲ್ಲ; ಬೇಸರ ಹೊರಹಾಕಿದ್ದ ಅಪ್ಪ ಸುಂದರರಾಜ್​ 

Assault Case in Hubballi
ಹುಬ್ಬಳ್ಳಿ41 mins ago

Assault case: ಹುಬ್ಬಳ್ಳಿಯಲ್ಲಿ ಪುಡಿ ರೌಡಿಗಳ ಗ್ಯಾಂಗ್ ವಾರ್! ನಡುರಸ್ತೆಯಲ್ಲೆ ಹೊಡಿಬಡಿ

DK ShivaKumar
ಪ್ರಮುಖ ಸುದ್ದಿ46 mins ago

DK Shivakumar: ಸಿಎಂ- ಡಿಸಿಎಂ ದಂಗಲ್‌ ವಿಷಯ ಎತ್ತುವ ಶಾಸಕರಿಗೆ ನೊಟೀಸ್: ಡಿಕೆ ಶಿವಕುಮಾರ್

M.R.Jayaram
ಪ್ರಮುಖ ಸುದ್ದಿ48 mins ago

M.R.Jayaram: ಶಿಕ್ಷಣ ತಜ್ಞ ಡಾ ಎಂ ಆರ್ ಜಯರಾಮ್‌ಗೆ ಬೆಂಗಳೂರು ವಿವಿಯಿಂದ ಗೌರವ ಡಾಕ್ಟರೇಟ್

Actor Darshan
ಕರ್ನಾಟಕ52 mins ago

Actor Darshan: ದರ್ಶನ್ ಅಪ್ಪಿಕೊಂಡು ಕಣ್ಣೀರಿಟ್ಟ ತಾಯಿ ಮೀನಾ; ಕುಟುಂಬಸ್ಥರನ್ನು ಕಂಡು ನಟ ಭಾವುಕ

DCM Post
ಕರ್ನಾಟಕ2 hours ago

DCM Post: ಒನ್ ಮ್ಯಾನ್ ಒನ್ ಪೋಸ್ಟ್ ಕೂಗಿಗೆ ಡಿಕೆಶಿ ಡೋಂಟ್ ಕೇರ್‌; ಕೇಡರ್ ಬೇಸ್ ಪಾರ್ಟಿ ಕಟ್ಟಲು ಪಣ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ22 hours ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು1 day ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ2 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ2 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ3 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು4 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ4 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಟ್ರೆಂಡಿಂಗ್‌