Karnataka Politics: ಬಿಜೆಪಿ ಸರ್ಕಾರದಲ್ಲಿ ಜಾರಿಯಾದ 485 ಕೋಟಿ ರೂ. ಯೋಜನೆಗಳು ರದ್ದು! - Vistara News

ಕರ್ನಾಟಕ

Karnataka Politics: ಬಿಜೆಪಿ ಸರ್ಕಾರದಲ್ಲಿ ಜಾರಿಯಾದ 485 ಕೋಟಿ ರೂ. ಯೋಜನೆಗಳು ರದ್ದು!

Karnataka Politics: ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಯೋಜನೆಗಳನ್ನು ರದ್ದು ಮಾಡಿರುವ ಕಾಂಗ್ರೆಸ್‌ ಸರ್ಕಾರ, ಆ ಅನುದಾನವನ್ನು ಕಾಂಗ್ರೆಸ್‌ ಶಾಸಕರ ಕ್ಷೇತ್ರಗಳಿಗೆ ಹಂಚಿಕೆ ಮಾಡಿರುವುದು ಕಂಡುಬಂದಿದೆ.

VISTARANEWS.COM


on

Construction work
ಸೇತುವೆ ಕಾಮಗಾರಿ ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಈ ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ 485 ಕೋಟಿ ರೂ.ಗಳ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ (Karnataka Politics) ರದ್ದುಪಡಿಸಿದೆ. ಯೋಜನೆಗಳ ಜತೆಗೆ ಸಫಾಯಿ ಕರ್ಮಚಾರಿಗಳಿಗೆ ಸಮವಸ್ತ್ರ, ಸುರಕ್ಷತಾ ಸಾಧನಾ ಖರೀದಿಗೆ ಮೀಸಲಿಟ್ಟಿದ್ದ 15 ಕೋಟಿ ರೂ. ಅನುದಾನವನ್ನೂ ವಾಪಸ್‌ ಪಡೆದಿರುವುದು ಕಂಡುಬಂದಿದೆ.

ಹಲವು ಶಾಸಕರು ನಮ್ಮ ಕ್ಷೇತ್ರಕ್ಕೆ ಅನುದಾನ ನೀಡಿಲ್ಲ ಎಂದು ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕುತ್ತಿದ್ದಾರೆ. ಈ ನಡುವೆ ರಾಜರಾಜೇಶ್ವರಿ ನಗರ ಕ್ಷೇತ್ರ ಶಾಸಕ ಎಂ.ಮುನಿರತ್ನ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಇಳಿದಿದ್ದಾರೆ. ಆದರೆ, ಇತ್ತ ಕಾಂಗ್ರೆಸ್ ಸರ್ಕಾರ ಮಾತ್ರ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಯೋಜನೆಗಳನ್ನು ರದ್ದುಪಡಿಸುತ್ತಿದೆ. ಮಿನರ್ವ ಸರ್ಕಲ್ ಫ್ಲೈಓವರ್ ಸೇರಿ ಸಫಾಯಿ ಕರ್ಮಚಾರಿಗಳಿಗೆ ಮೀಸಲಿಟ್ಟಿದ್ದ ಅನುದಾನವನ್ನು ಕಾಂಗ್ರೆಸ್ ಹಿಂಪಡೆದಿದೆ.

ಮಿನರ್ವ ವೃತ್ತ- ಹಡ್ಸನ್ ವೃತ್ತದವರೆಗಿನ ₹213 ಕೋಟಿಯ ಮೇಲ್ಸೇತುವೆ ರದ್ದು

ಬಿಬಿಎಂಪಿ ನಿರ್ವಹಿಸಬೇಕಿದ್ದ 20 ಕಾಮಗಾರಿಗಳನ್ನು ಕಾಂಗ್ರೆಸ್‌ ಸರ್ಕಾರ ರದ್ದು ಮಾಡಿದ್ದು, ಅದರ ಬದಲಿಗೆ ಅದೇ ಮೊತ್ತದ ಅನುದಾನದಲ್ಲಿ ಕಾಂಗ್ರೆಸ್‌ ಶಾಸಕರ ಕ್ಷೇತ್ರದಲ್ಲಿ ರಸ್ತೆ, ಚರಂಡಿ ಕಾಮಗಾರಿಗಳನ್ನು ಕೈಗೊಳ್ಳಲು ಆದೇಶಿಸಲಾಗಿದೆ. ಯಶವಂತಪುರ ಕ್ಷೇತ್ರವನ್ನು ಈ ಪಟ್ಟಿಯಲ್ಲಿ ಸೇರ್ಪಡಿಸಲಾಗಿದೆ. ಇನ್ನು ಮಿನರ್ವ ವೃತ್ತದಿಂದ ಹಡ್ಸನ್ ವೃತ್ತದವರೆಗೆ ₹213 ಕೋಟಿ ರೂ. ವೆಚ್ಚದಲ್ಲಿ ಜೆ.ಸಿ. ರಸ್ತೆ ಮೇಲ್ಸೇತುವೆಯನ್ನು ನಿರ್ಮಿಸಲು ಹಿಂದಿನ ಸರ್ಕಾರ ನಿರ್ಧರಿಸಿತ್ತು. ಇನ್ನೂ ಟೆಂಡರ್‌ ಕರೆಯದ ಕಾರಣದ ಈ ಯೋಜನೆಯನ್ನು ರದ್ದು ಮಾಡಲಾಗಿದೆ.

ಹೊರ ವರ್ತುಲ ರಸ್ತೆಯಲ್ಲಿ ₹45.5 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಅನುಮೋದನೆಯಾಗಿದ್ದ ಇಟ್ಟುಮಡು ಜಂಕ್ಷನ್‌ ಹಾಗೂ ಕಾಮಾಕ್ಯ ಜಂಕ್ಷನ್‌ನಲ್ಲಿ ಎಲಿವೇಟೆಡ್‌ ಕಾರಿಡಾರ್‌ ಅನ್ನು ರದ್ದು ಮಾಡಲಾಗಿದೆ. ಮುಖ್ಯಮಂತ್ರಿಯವರ ವಿವೇಚನಾ ಅನುದಾನ ₹11.5 ಕೋಟಿ, ಶಿವರಾಮ ಕಾರಂತ ಬಡಾವಣೆಯಲ್ಲಿ ಬಿಬಿಎಂಪಿ ನಿರ್ವಹಿಸಬೇಕಿದ್ದ ₹70 ಕೋಟಿ ಕಾಮಗಾರಿಗಳು ರದ್ದಾಗಿವೆ. ಇತ್ತ ಜಯನಗರ, ಚಿಕ್ಕಪೇಟೆ, ಆರ್‌.ಆರ್‌. ನಗರ, ಕೆ.ಆರ್‌. ಪುರ, ಮಹದೇವಪುರ, ಪದ್ಮನಾಭನಗರ, ದಾಸರಹಳ್ಳಿ ವಿಧಾನಸಭೆ ಕ್ಷೇತ್ರಗಳಲ್ಲಿ ಅನುಮೋದನೆಯಾಗಿದ್ದ ಸುಮಾರು ₹100 ಕೋಟಿ ಕಾಮಗಾರಿಗಳನ್ನು ರದ್ದು ಮಾಡಲಾಗಿದೆ.

ಇದನ್ನೂ ಓದಿ | Karnataka Politics : ಡಿಕೆಶಿ ಕಾಲಿಗೆ ಬಿದ್ದಿದ್ದೇನೆ; ಅನುದಾನ ಕೊಡದಿದ್ದರೆ ಉಗ್ರ ಪ್ರತಿಭಟನೆ ಎಂದ ಮುನಿರತ್ನ

ಕೆಲ ವಿಧಾನಸಭೆ ಕ್ಷೇತ್ರಗಳಲ್ಲಿ ಚರಂಡಿ, ರಸ್ತೆ, ತೋಟಗಾರಿಕೆ ಇಲಾಖೆಯ ಸೌಂದರ್ಯೀಕರಣ, ಘನತ್ಯಾಜ್ಯ ಮೂಲಸೌಕರ್ಯ, ರಾಜಕಾಲುವೆ ಕಾಮಗಾರಿಗಳನ್ನು ನಿರ್ವಹಿಸಲು ಅನುಮೋದಿಸಲಾಗಿತ್ತು. ಈಗ ಇಲ್ಲಿನ‌ ಅನುದಾನವನ್ನ ಕಾಂಗ್ರೆಸ್ ಶಾಸಕರ ಕ್ಷೇತ್ರಗಳಲ್ಲಿ ಹಂಚಿಕೆ ಮಾಡಲಾಗಿದೆ. ಹಾಗೆಯೇ ಸರ್ಕಾರ 18 ಸಾವಿರ ಸಫಾಯಿ ಕರ್ಮಚಾರಿಗಳಿಗೆ ಸಮವಸ್ತ್ರ, ಸುರಕ್ಷತಾ ಸಾಧನಾ ಖರೀದಿಗೆ ಮೀಸಲಿಟ್ಟದ್ದ 15 ಕೋಟಿ ರೂ. ಅನುದಾನ ಹಿಂಪಡೆದು ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಹಂಚಿಕೆ ಮಾಡಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Karnataka Rain: ಸೋಮವಾರ ರಾತ್ರಿ ಸುರಿದ ಮಳೆಗೆ (Heavy Rain) ಜನರು ಕಂಗಲಾಗಿದ್ದಾರೆ. ಹಲವೆಡೆ ಭಾರಿ ಮಳೆಗೆ (Karnataka Weather) ಮರಗಳು, ವಿದ್ಯುತ್‌ ಕಂಬಗಳು ಧರೆಗುರುಳಿದ್ದರೆ, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದರಿಂದ ನಿವಾಸಿಗಳು ಜಾಗರಣೆ ಮಾಡುವಂತಾಯಿತು.

VISTARANEWS.COM


on

By

karnataka Rain Effected
Koo

ಬೆಂಗಗಳೂರು/ಬೆಳಗಾವಿ: ತಡರಾತ್ರಿ ಸುರಿದ ಮಳೆಯು (Karnataka Rain) ಅವಾಂತರವನ್ನೇ ಸೃಷ್ಟಿಸಿ ಮಾಡಿದೆ. ಬೆಂಗಳೂರಿನಲ್ಲಿ ರಾತ್ರಿ ಪೂರ್ತಿ ಅಬ್ಬರಿಸಿದ ಮಳೆಗೆ (Rain News) ಮರಗಳು ಧರೆಗುರುಳಿದ್ದವು. ನೃಪತುಂಗದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಎದುರಿಗೆ ಮರದ ಕೊಂಬೆ ನೆಲಕ್ಕೆ ಉರುಳಿದ ಪರಿಣಾಮ ಅರ್ಧ ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಇತ್ತ ಬುಕ್‌ಫೀಲ್ಡ್‌ನಲ್ಲಿ ಮರ ಬಿದ್ದು ಕಾರೊಂದು ಜಖಂಗೊಂಡಿತ್ತು. ಚಾಮರಾಜಪೇಟೆಯ ಗುಡ್ಡದಹಳ್ಳಿಯಲ್ಲಿ ಮನೆಗಳಿಗೆ ಕೆಸರುಮಯ ನೀರು ನುಗ್ಗಿದ್ದರಿಂದ ಹೊರಹಾಕಲು ಜನರು ತೊಂದರೆ ಅನುಭವಿಸಿದರು.

ಮೈಸೂರಿನಲ್ಲಿ ಕುಸಿದು ಬಿದ್ದ ಮನೆ

ಭಾರಿ ಮಳೆಗೆ ಮನೆಯೊಂದು ಕುಸಿದು ಬಿದ್ದ ಘಟನೆ ಮೈಸೂರಿನ ಹುಣಸೂರು ತಾಲೂಕಿನ ಮೂಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸೋಮವಾರ ರಾತ್ರಿ ಸುರಿದ ಬಾರಿ ಬಿರುಗಾಳಿ ಸಹಿತ ಮಳೆಗೆ ಭಾಗ್ಯಮ್ಮ ಎಂಬುವವರಿಗೆ ಸೇರಿದ ಮನೆ ಕುಸಿದಿದೆ. ಮನೆ ಕುಸಿದು ಬಿದ್ದಿದ್ದು, ವಾಸ ಮಾಡಲು ಮನೆ ಇಲ್ಲದೆ ಭಾಗ್ಯಮ್ಮ ಕಣ್ಣೀರು ಹಾಕಿದರು. ಮನೆಯಲ್ಲಿ ಸುಮಾರು 6 ತಿಂಗಳು ಸಣ್ಣ ಮಗುವಿದ್ದು ಮಧ್ಯರಾತ್ರಿ ಸುರಿದ ಭಾರಿ ಮಳೆಯಿಂದ ಮನೆ ಕುಸಿದು ಬಿದ್ದು ಕುಟುಂಬವು ಕಂಗಲಾಗಿದೆ. ಮನೆಯಲ್ಲಿದ್ದ ಸಾಮಾನುಗಳು ನಾಶವಾಗಿವೆ. ನಮಗೆ ಆದಷ್ಟು ಬೇಗ ಸರ್ಕಾರ ಪರಿಹಾರ ಮಾಡಿಕೊಡಬೇಕು ಎಂದು ಭಾಗ್ಯಮ್ಮ ಮನವಿ ಮಾಡಿದರು.

ವಿಜಯನಗರದಲ್ಲಿ ಮಳೆಗೆ ಬೆಳೆ ಹಾನಿ

ಕಳೆದ ರಾತ್ರಿ ಮಳೆ ಜೆತಗೆ ಬಿರುಗಾಳಿ ಬೀಸಿದ ಹಿನ್ನೆಲೆಯಲ್ಲಿ ಬಾಳೆ, ಭತ್ತ, ವೀಳ್ಯದೆಲೆ ತೋಟಕ್ಕೆ ಹಾನಿಯಾಗಿದೆ. ವಿಜಯನಗರದ ಹುರುಳಿಹಾಳ ಗ್ರಾಮದಲ್ಲಿ ಗಾಳಿ ಪ್ರಮಾಣ ಹೆಚ್ಚಿದರಿಂದ ವೀಳ್ಯದೆಲೆ ತೋಟಕ್ಕೆ ಹಾನಿಯಾಗಿದೆ. ಕಾನಾಹೊಸಹಳ್ಳಿ ಹೋಬಳಿಯ ಎಕ್ಕೆಗೊಂದಿ ಗ್ರಾಮದಲ್ಲಿ ರೇಷ್ಮೆ ಸಾಗಾಣೆ ಮನೆಗೆ ಹಾನಿಯಾಗಿದೆ. ಹರಪನಹಳ್ಳಿ ತಾಲೂಕಿನಲ್ಲಿ ಗುಡುಗು, ಮಿಂಚು ಸಿಡಿಲಿನ ಆರ್ಭಟ ಮಧ್ಯೆ ಸಾಧಾರಣ ಮಳೆ ವರದಿಯಾಗಿದೆ.

ಧರೆಗುರುಳಿದ ಮರಗಳು

ಚಿಕ್ಕೋಡಿ ಗಡಿ ತಾಲೂಕು ನಿಪ್ಪಾಣಿಯಲ್ಲಿ ರಣ ಗಾಳಿ-ಮಳೆಗೆ ಸಿಕ್ಕಿ ನಲುಗಿದೆ. ನಿಪ್ಪಾಣಿ ನಗರದ ವಿವಿಧೆಡೆ ಗಾಳಿ ಮಳೆಗೆ ಮರಗಳು ಧರೆಗುರುಳಿವೆ. ನಿಪ್ಪಾಣಿಯ ಭೀಮನಗರ,ವಿದ್ಯಾನಗರ,ಅಂಬೇಡ್ಕರ್ ನಗರದ ಹತ್ತಿರ ಮರಗಳು ಬಿದ್ದಿವೆ. ಮುನ್ಸಿಪಲ್ ಹೈಸ್ಕೂಲ್,ಅಬಕಾರಿ ಫೀಸ್ ಸೇರಿದಂತೆ ವಿವಿಧೆಡೆ ಹಾನಿಯಾಗಿದೆ. ಭಾರಿ ಗಾಳಿಗೆ ವಿದ್ಯುತ್ ಕಂಬಗಳು ವಾಲಿದರೆ, ಮನೆಯ ಚಾವಣೆ ಹಾರಿ ಹೋಗಿವೆ. ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ನಿಪ್ಪಾಣಿ ನಗರಸಭೆ ಪೌರಾಯುಕ್ತ ಜಗದೀಶ ಹುಲಗೆಜ್ಜಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪೊಲೀಸ್ ವಾಹನ ಸೇರಿದಂತೆ ಸುಮಾರು 10ಕ್ಕೂ ಹೆಚ್ಚು ವಾಹನಗಳು ಜಖಂಗೊಂಡಿವೆ. ಹಾನಿಯಾದ ಪ್ರದೇಶಗಳಿಗೆ ಜಗದೀಶ ಹುಲಗೆಜ್ಜಿ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.

ಕಳೆದ ರಾತ್ರಿ ಸುರಿದ ಭಾರಿ ಮಳೆಗೆ ನಿಪ್ಪಾಣಿ ನಗರ ತತ್ತರಿಸಿದೆ. ಭಾರಿ ಮಳೆಗೆ 20 ಕ್ಕೂ ಹೆಚ್ಚು ಮನೆಗಳ ಚಾವಣಿ ಹಾರಿ ಹೋಗಿದೆ. ಪತ್ರಾಸ್ ಶೇಡ್ ಹಾಗೂ ಹಂಚಿನ ಮನೆಗಳಿಗೆ ಹೆಚ್ಚಿನ ಹಾನಿಯಾಗಿದೆ. ಭಾರಿ ಮಳೆ ಗಾಳಿಗೆ 30 ಕ್ಕೂ ಹೆಚ್ಚು ಮರಗಳು ಧರೆಗೆ ಉರುಳಿವೆ. ಮರಗಳ ಜತೆಗೆ ನಗರದಲ್ಲಿ 50 ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಬಿದ್ದು ಹಾನಿಯಾಗಿವೆ. ಮರಗಳು ಬಿದ್ದು 10 ಕ್ಕೂ ಹೆಚ್ಚು ವಾಹನಗಳು ಸಹ ಜಖಂಗೊಂಡಿವೆ. ಕಳೆದ ರಾತ್ರಿಯಿಂದ ನಿಪ್ಪಾಣಿ ನಗರದಲ್ಲಿ ವಿದ್ಯುತ್ ಕಟ್ ಆಗಿದೆ. ನಿಪ್ಪಾಣಿ ನಗರಸಭೆಯಿಂದ ಮರಗಳ ತೆರುವು ಕಾರ್ಯಾಚರಣೆ ನಡೆಸಲಾಗುತ್ತಿದೆ. ನಿಪ್ಪಾಣಿ ನಗರಸಭೆ ಅಧಿಕಾರಿಗಳು ಹಾನಿಯಾದ ಮನೆಗಳ ಸರ್ವೆಗೆ ಮುಂದಾಗಿದ್ದಾರೆ. ನಿಪ್ಪಾಣಿ ಪಟ್ಟಣದ ಅಂಬೇಡ್ಕರ್ ಗಲ್ಲಿಗೆ ಭೀಮ ನಗರ ಪ್ರದೇಶದಲ್ಲಿ ಅತಿ ಹೆಚ್ಚಿನ ಹಾನಿಯಾಗಿದೆ.

ಇದನ್ನೂ ಓದಿ: Salman Khan: ಸಲ್ಮಾನ್‌ ಖಾನ್‌ ಮನೆ ಎದುರು ಫೈರಿಂಗ್‌ ಕೇಸ್‌; 6ನೇ ಆರೋಪಿಯ ಬಂಧನ

ಆನೇಕಲ್‌ನಲ್ಲಿ ಮನೆಗೆ ನುಗ್ಗಿದ ಚರಂಡಿ ನೀರು

ಸೋಮವಾರ ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತಾಲೂಕಿನ ಹೆಬ್ಬಗೋಡಿಯಲ್ಲಿ ಮನೆಗಳಿಗೆ ಹಾಗೂ ಬಡಾವಣೆಗಳಿಗೆ ಕೊಳಚೆ ನೀರು ನುಗ್ಗಿದೆ. ಚರಂಡಿ-ರಾಜಕಾಲುವೆ ವ್ಯವಸ್ಥೆ ಸರಿ ಇಲ್ಲದೆ ಮನೆಗಳಿಗೆ ನೀರು ನುಗ್ಗಿದೆ. ಇಡೀ ರಾತ್ರಿ ನೀರಿನಲ್ಲಿ ನಿವಾಸಿಗಳು ಕಾಲ ಕಳೆದಿದ್ದಾರೆ. ಹೆಬ್ಬಗೋಡಿ ನಗರಸಭೆ ವ್ಯಾಪ್ತಿಯಲ್ಲಿ ಪ್ರತಿ ಬಾರಿ ಮಳೆ ಬಂದಾಗಲೂ ತಗ್ಗು ಪ್ರದೇಶದಲ್ಲಿರುವ ಮನೆಗಳಿಗೆ ನೀರು ನುಗ್ಗುತ್ತದೆ. ಮನೆಯೊಳಗೆ ನುಗ್ಗಿದ ಕೊಳಚೆ ನೀರನ್ನು ಸ್ವಚ್ಛ ಮಾಡುವುದರಲ್ಲಿ ದಿನದೂಡುತ್ತಿದ್ದಾರೆ.

ವಿಜಯನಗರದಲ್ಲಿ ವರುಣನ ಕೃಪೆಗಾಗಿ ಜಪ – ತಪ

ಜಪ – ತಪ ಮಾಡಿದ ಕೇವಲ ಎಂಟು ದಿನದಲ್ಲಿ ವರುಣನ ಆಗಮನವಾಗಿದೆ. ಕಳೆದ ಒಂದು ವಾರದಲ್ಲಿ ಎರಡು ಬಾರಿ ವಿಜಯನಗರದ ಹೊಸಪೇಟೆ ತಾಲೂಕಿನಲ್ಲಿ ಮಳೆ ಸುರಿದಿದೆ. ಭೀಕರ ಬರಗಾಲ, ಬಿಸಿಲಿನ ಧಗೆಯಿಂದ ಜನರು ಆಂಜನೇಯನ ಮೊರೆ ಹೋಗಿದ್ದರು. ಮಳೆಗಾಗಿ ನೂರಾರು ವರ್ಷ ಹಳೆಯದಾದ ಐತಿಹಾಸಿಕ ಹಿನ್ನೆಲೆವೊಳ್ಳ ಆಂಜನೇಯನಿಗೆ ಮಳೆಗಾಗಿ ನಿತ್ಯ ಪೂಜೆ, ಭಜನೆ ಮಾಡುತ್ತಿದ್ದರು. ಹೊಸಪೇಟೆ ತಾಲೂಕಿನ ನಾಗೇನಹಳ್ಳಿ ಗ್ರಾಮದಲ್ಲಿರೋ ಐತಿಹಾಸಿಕ ಆಂಜನೇಯ ದೇಗುಲವನ್ನು ವಿಜಯನಗರ ಅರಸರ ಕಾಲದಿಂದಲೂ ವಿಶೇಷ ಸಲ್ಲಿಕೆ ಮಾಡುತ್ತಿದ್ದಾರೆ.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಿಂತ ನೀರು

ಧಾರಾಕಾರ ಮಳೆಗೆ ಹಳೇ ಮೈ-ಬೆಂ ಹೆದ್ದಾರಿಯಲ್ಲಿ ಜಲಾವೃತಗೊಂಡಿತ್ತು. ಶ್ರೀರಂಗಪಟ್ಟಣದ ಅಗ್ನಿಶಾಮಕ ದಳದ ಎದುರಿನ ಮೈ- ಬೆಂ ಹೆದ್ದಾರಿಯಲ್ಲಿ ರಸ್ತೆ ಮಧ್ಯೆ ಮೂರು ಅಡಿ ನೀರು ನಿಂತಿದ್ದರಿಂದ ವಾಹನ ಸವಾರರು ಪರದಾಡಿದರು. ಹೆದ್ದಾರಿಯಲ್ಲಿ ತೆರಳಲಾಗದೆ ಬೈಕ್ ಸವಾರರು ಬದಲಿ ರಸ್ತೆಯಲ್ಲಿ ಸಾಗಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Bomb Hoax: ಬೆಂಗಳೂರಿನ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಇಮೇಲ್, ತಪಾಸಣೆ

Bomb Hoax: ಇಂದು ಬೆಳಗ್ಗೆ ಏಳೂವರೆಗೆ ಶಾಲಾ ಸಿಬ್ಬಂದಿ ಕಚೇರಿ ಒಪನ್‌ ಮಾಡಿದ್ದರು. ಈ ವೇಳೆ ಮೇಲ್ ಬಂದಿರುವುದು ಪತ್ತೆಯಾಗಿದೆ. ಕೂಡಲೇ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ರಾತ್ರಿ ಸುಮಾರು 12.20ರ ಸುಮಾರಿಗೆ ಬಾಂಬ್ ಬೆದರಿಕೆಯ ಮೇಲ್ ರವಾನೆಯಾಗಿದೆ.

VISTARANEWS.COM


on

bomb hoax bengaluru
Koo

ಬೆಂಗಳೂರು: ರಾಜಧಾನಿಯ ಅಮೃತಹಳ್ಳಿ ಠಾಣಾ ವ್ಯಾಪ್ತಿಯ ಶಾಲೆಯೊಂದಕ್ಕೆ ಬಾಂಬ್ ಬೆದರಿಕೆ ಇಮೇಲ್‌ (Bomb Hoax, bomb threat Email) ಬಂದಿದೆ. ಅಮೃತಹಳ್ಳಿಯ ಕೆಂಪಾಪುರದಲ್ಲಿರುವ ಜೈನ್ ಹೆರಿಟೇಜ್‌ ಶಾಲೆಗೆ ಬಾಂಬ್ ಬೆದರಿಕೆ ಮೇಲ್ ಬಂದಿದ್ದು, ನಿನ್ನೆ ಮಧ್ಯರಾತ್ರಿ ಬಾಂಬ್ ಬೆದರಿಕೆ ಇಮೇಲ್ ಅನ್ನು ದುಷ್ಕರ್ಮಿಗಳು (miscreants) ಕಳಿಸಿದ್ದಾರೆ.

ಇಂದು ಬೆಳಗ್ಗೆ ಏಳೂವರೆಗೆ ಶಾಲಾ ಸಿಬ್ಬಂದಿ ಕಚೇರಿ ಒಪನ್‌ ಮಾಡಿದ್ದರು. ಈ ವೇಳೆ ಮೇಲ್ ಬಂದಿರುವುದು ಪತ್ತೆಯಾಗಿದೆ. ಕೂಡಲೇ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ರಾತ್ರಿ ಸುಮಾರು 12.20ರ ಸುಮಾರಿಗೆ ಬಾಂಬ್ ಬೆದರಿಕೆಯ ಮೇಲ್ ರವಾನೆಯಾಗಿದೆ. ಶಾಲೆಗೆ ಸ್ಥಳೀಯ ಪೊಲೀಸರು, ಡಾಗ್ ಸ್ಕ್ವಾಡ್, ಬಾಂಬ್ ಸ್ಕ್ವಾಡ್ ಭೇಟಿ ನೀಡಿ ಪರಿಶೀಲನೆ ನಡೆಸಿವೆ. ಸದ್ಯ ಪೊಲೀಸರಿಂದ ಪರಿಶೀಲನೆ ಮುಂದುವರಿದಿದೆ. ಪರಿಶೀಲನೆಯಲ್ಲಿ ಇದೊಂದು ಹುಸಿ ಬಾಂಬ್ ಮೇಲ್ ಎನ್ನುವುದು ಧೃಢವಾಗಿದೆ.

ಕಳೆದ ವರ್ಷ ಹಲವು ಪ್ರತಿಷ್ಠಿತ ಶಾಲೆಗಳಿಗೆ ಇದೇ ರೀತಿಯ ಬಾಂಬ್‌ ಬೆದರಿಕೆ ಇಮೇಲ್‌ ಬಂದಿತ್ತು. ಇದು ಕೂಡ ಹುಸಿಯಾಗಿತ್ತು. ಇತ್ತೀಚೆಗೆ ಹೊಸದಿಲ್ಲಿಯ ಹತ್ತಾರು ಶಾಲೆಗಳಿಗೆ ಬಾಂಬ್‌ ಬೆದರಿಕೆ ಇಮೇಲ್‌ ಬಂದಿದ್ದು, ಆ ಎಲ್ಲ ಶಾಲೆಗಳ ಮಕ್ಕಳಿಗೂ ರಜೆ ನೀಡಿ ಆವರಣ ತಲಾಶ್‌ ಮಾಡಲಾಗಿತ್ತು. ಇದು ಕೂಡ ಹುಸಿ ಎಂದು ಕಂಡುಬಂದಿತ್ತು. ಹೀಗೆ ಬೆದರಿಕೆ ಇಮೇಲ್‌ ಮಾಡಿದ ವ್ಯಕ್ತಿ ಅಪ್ರಾಪ್ತ ವಯಸ್ಕ ಎಂದು ಪೊಲೀಸರು ಮಾಹಿತಿ ನೀಡಿದ್ದರು.

ಇತ್ತೀಚೆಗೆ ಕಿಡಿಗೇಡಿಗಳ ಕೃತ್ಯ ಎಂದು ಶಂಕಿಸಲಾಗಿದೆ. ಹೀಗೆ ಬೆದರಿಕೆ ಮೇಲ್‌ ಮಾಡುತ್ತಿರುವವರ ತಂತ್ರಜ್ಞಾನದಲ್ಲಿ ಪರಿಣಿತರಾಗಿದ್ದು, ದೇಶದ ಸರ್ವರ್‌ ಕನೆಕ್ಷನ್‌ ತಪ್ಪಿಸಿ ವಿಪಿಎನ್‌ ಮೂಲಕ ಕಾರ್ಯಾಚರಿಸಿ ವಿದೇಶಗಳ ಸರ್ವರ್‌ನಿಂದ ಬಂದಂತೆ ತೋರಿಸುವ ಕಲೆಯಲ್ಲಿ ನಿಷ್ಣಾತರಾಗಿದ್ದಾರೆ. ಹೀಗಾಗಿ ಇದನ್ನು ಭೇದಿಸುವುದು ಪೊಲೀಸರಿಗೆ ಕಷ್ಟವಾಗುತ್ತಿದೆ. ಒಂದು ಶಾಲೆಗೆ ಮಾತ್ರ ಬೆದರಿಕೆ ಮೇಲ್‌ ಬಂದಿರುವ ಹಿನ್ನೆಲೆಯಲ್ಲಿ, ವೈಯಕ್ತಿಕ ದ್ವೇಷ ಕಾರ್ಯಾಚರಿಸಿರಬಹುದು ಎಂದು ಶಂಕಿಸಲಾಗಿದೆ.

ಕೋರ್ಟ್‌ ಇಂಜಂಕ್ಷನ್‌ ಇರುವ ಜಮೀನಿಗೆ ಕಾಲಿಟ್ಟಿದ್ದಕ್ಕೆ ಕುಡುಗೋಲಿನಿಂದ ಕಡಿದು ಕೊಂದರು!

ಶಿವಮೊಗ್ಗ: ತಾಲೂಕಿನ ದುಮ್ಮಳ್ಳಿ ಗ್ರಾಮದ ಒಂದು ಜಮೀನು (Land dispute) ಹಲವು ವರ್ಷಗಳಿಂದ ವಿವಾದದಲ್ಲಿತ್ತು. ಈ ಹಿನ್ನೆಲೆಯಲ್ಲಿ ಇಂಜಂಕ್ಷನ್‌ ಆರ್ಡರ್‌ (Injenction Order) ಅನ್ನು ಸಹ ತರಲಾಗಿತ್ತು. ಇಷ್ಟಾದರೂ ಈ ಜಮೀನಿಗೆ ಪ್ರವೇಶ ಮಾಡಿದ್ದಾನೆ ಎಂಬ ಕಾರಣಕ್ಕೆ ಇನ್ನೊಂದು ಕಡೆಯ ಗುಂಪಿನವರು ದಾಳಿ ನಡೆಸಿ ಕುಡುಗೋಲು ಬೀಸಿ ಕೊಂದು (Murder case) ಹಾಕಿದ್ದಾರೆ.

ಜಮೀನು ವಿವಾದ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಹಾಡಹಗಲೇ ಕೊಲೆ ನಡೆದಿದೆ. ಇಂಜಂಕ್ಷನ್‌ ಆರ್ಡರ್ ಇದ್ದ ಜಮೀನಿಗೆ ತೆರಳಿದ್ದ ಸತೀಶ್ ನಾಯ್ಕ (28) ಕೊಲೆಯಾದ ದುರ್ದೈವಿ. ದೂರದ ಸಂಬಂಧಿ ಅಖಿಲೇಶ್ (27) ಸೇರಿದಂತೆ ಹಲವರ ಗುಂಪಿನಿಂದ ಮಾರಣಾಂತಿಕ ಹಲ್ಲೆ ನಡೆದಿದೆ.

ಕಳೆದ ಹಲವಾರು ವರ್ಷಗಳಿಂದ ಈ ಜಮೀನು ವಿವಾದದಲ್ಲಿತ್ತು. ಯಾರೂ ಕೂಡ ಜಮೀ‌ನಿನೊಳಗೆ ತೆರಳದಂತೆ ಇಂಜಂಕ್ಷನ್‌ ಆದೇಶವನ್ನು ತರಲಾಗಿತ್ತು. ಆದರೆ, ಸೋಮವಾರ ಬೆಳಗ್ಗೆ ಸತೀಶ್ ನಾಯ್ಕ ಜಮೀನಿಗೆ ತೆರಳಿದ್ದರು. ಈ ವೇಳೆ ಅಖಿಲೇಶ್‌ ಹಾಗೂ ಕೆಲವರು ಇದನ್ನು ಪ್ರಶ್ನೆ ಮಾಡಿದ್ದಾರೆ. ಆಗ ಪರಸ್ಪರ ಮಾತಿಗೆ ಮಾತು ಬೆಳೆದಿದೆ. ತೀವ್ರ ವಾಗ್ವಾದಗಳು ನಡೆದಿದ್ದು, ಪರಸ್ಪರ ಹೊಡೆದಾಡಿಕೊಳ್ಳುವ ಮಟ್ಟಕ್ಕೆ ಹೋಗಿದೆ.

ಗಲಾಟೆ ಜೋರಾಗುತ್ತಿದ್ದಂತೆ ತಾಳ್ಮೆ ಕಳೆದುಕೊಂಡ ಅಖಿಲೇಶ್‌ ಗುಂಪಿನವರಲ್ಲೊಬ್ಬರು ಸ್ಥಳದಲ್ಲಿದ್ದ ಕುಡುಗೋಲಿನಿಂದ ಹಲ್ಲೆ ನಡೆಸಿದ್ದಾರೆ. ಮತ್ತೆ ಕೆಲವರು ಕೈಯಿಂದಲೇ ಗುದ್ದಿದ್ದಾರೆ. ಬಹಳಷ್ಟು ಜನ ಏಕಾಏಕಿ ದಾಳಿ ನಡೆಸಿದ್ದರಿಂದ ತೀವ್ರವಾಗಿ ಗಾಯಗೊಂಡ ಸತೀಶ್‌ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂರು ಮಂದಿಯನ್ನು ಕೊಂದು ಅಬ್ಬರಿಸಿದ ರೌಡಿ ಶೀಟರ್‌ ಕಾಲಿಗೆ ಗುಂಡೇಟು, ಬಂಧನ

ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದಿದ್ದ ಗ್ಯಾಂಗ್ ವಾರ್ (Shimogga Gang War) ಪ್ರಕರಣದಲ್ಲಿ ಮೂವರನ್ನು ನಡುಬೀದಿಯಲ್ಲಿ ಕೊಚ್ಚಿ ಕೊಲೆ (Triple Murder Case) ಮಾಡಿದ್ದ ಆರೋಪಿಗಳಲ್ಲಿ ಒಬ್ಬ ರೌಡಿ ಶೀಟರ್‌ (Rowdy Sheeter) ಕಾಲಿಗೆ ಪೊಲೀಸರು ಗುಂಡು ಹಾರಿಸಿ (Shoot out) ಬಂಧಿಸಿದ್ದಾರೆ.

ತ್ರಿಬಲ್ ಮರ್ಡರ್ ಪ್ರಕರಣದ ಆರೋಪಿ, ರೌಡಿ ಶೀಟರ್ ಶೋಹಿಬ್ ಕಾಲಿಗೆ ಪೊಲೀಸರು ಶೂಟ್‌ ಮಾಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯ ಬೀರನಕೆರೆ ಬಳಿ ರೌಡಿ ಶೀಟರ್ ಶೋಹಿಬ್‌ನನ್ನು ಬಂಧಿಸಲು ಹೋದಾಗ ಆತ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದ. ಪಿಎಸ್ಐ ಕುಮಾರ್ ಹಾಗೂ ಹೆಡ್ ಕಾನ್ಸ್‌ಟೇಬಲ್ ಅಣ್ಣಪ್ಪ ಮೇಲೆ ಹಲ್ಲೆಗೆ ಯತ್ನಿಸಿದ್ದ ಶೋಹಿಬ್‌ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ.

ಶಿವಮೊಗ್ಗ ನಗರದ ಲಷ್ಕರ್ ಮೊಹಲ್ಲಾ ಸರ್ಕಲ್ ಬಳಿ ಗ್ಯಾಂಗ್‌ ವಾರ್‌ ನಡೆದಿತ್ತು. ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್‌ಗಳನ್ನು ಕೊಚ್ಚಿ ಕೊಲೆ (Murder Case) ಮಾಡಲಾಗಿತ್ತು. ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಭೀಕರವಾಗಿ ದುಷ್ಕರ್ಮಿಗಳು ಕೊಲೆ ಮಾಡಿದ್ದರು. ತುಂಗಾನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್ ಶೋಯೆಬ್ ಅಲಿಯಾಸ್ ಸೇಬು‌, ದೊಡ್ಡಪೇಟೆ ಠಾಣಾ ವ್ಯಾಪ್ತಿಯ ರೌಡಿಶೀಟರ್ ಗೌಸ್ ಹತ್ಯೆಯಾಗಿತ್ತು. ಚಾಕುವಿನಿಂದ ತಿವಿತಕ್ಕೊಳಗಾಗಿ ತೀವ್ರವಾಗಿ ಗಾಯಗೊಂಡಿದ್ದ ಯಾಸೀನ್‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ.

ಮೊದಲಿಗೆ ಮೃತ ಯುವಕರ ಕಡೆಯ ಗುಂಪು ರೌಡಿ ಶೀಟರ್ ಯಾಸೀನ್ ಕುರೇಶಿ ಎಂಬಾತನ ಮೇಲೆ ದಾಳಿ ಮಾಡಿದೆ. ಹೀಗಾಗಿ ಯಾಸೀನ್ ಕುರೇಶಿ ಗ್ಯಾಂಗ್ ಪ್ರತಿದಾಳಿ ನಡೆಸಿ, ಹಲ್ಲೆ ಮಾಡಲು ಬಂದಿದ್ದ ಶೋಯೆಬ್, ಗೌಸ್‌ನನ್ನು ಕೊಲೆ ಮಾಡಿದ್ದಾರೆ. ಬ್ಯಾಟ್, ಲಾಂಗುಗಳಿಂದ ಹೊಡೆದು, ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಇದನ್ನೂ ಓದಿ: Murder Case: ರಸ್ತೆ ಬದಿ ಮಲಗಿದ್ದ ವ್ಯಕ್ತಿಯ ತಲೆ ಮೇಲೆ‌ ಕಲ್ಲು ಎತ್ತಿ ಹಾಕಿ ಕೊಲೆ

Continue Reading

ಪ್ರಮುಖ ಸುದ್ದಿ

‌Prajwal Revanna Case: ಜೀವನದಲ್ಲಿ ಮೊದಲ ಬಾರಿಗೆ ಗಡ್ಡ ಬಿಟ್ಟ ದೇವೇಗೌಡರು; ವೈರಿನಾಶಕ್ಕೆ ಶಪಥ!

‌Prajwal Revanna Case: ದೇವೇಗೌಡರ ಐವತ್ತು ವರ್ಷಗಳ ಕಾಲದ ಘನತೆಯ ರಾಜಕೀಯ ಜೀವನಕ್ಕೆ ಪೆನ್‌ ಡ್ರೈವ್‌ ಪ್ರಕರಣದಿಂದ ಭಾರಿ ಪೆಟ್ಟು ಬಿದ್ದಿದೆ. ಕುಟುಂಬಕ್ಕೆ ಮುಜುಗರ ಸೃಷ್ಟಿಯಾಗಿದೆ. ಅವಮಾನಿತರಾದ ದೇವೇಗೌಡರು ರೇವಣ್ಣ ಜೈಲಿಗೆ ಹೋದ ಬಳಿಕ, ಎಂದೂ ಗಡ್ಡ ಬಿಡದವರು ಮೊದಲ ಬಾರಿಗೆ ದಾಡಿ ಬಿಟ್ಟಿದ್ದರು. ಡಿಕೆಶಿ ಹಾಗೂ ಸಿದ್ದರಾಮಯ್ಯ ತಮಗೆ ಸೃಷ್ಟಿಸಿರುವ ಅವಮಾನಕ್ಕೆ ಪ್ರತೀಕಾರ ಮಾಡಲು ಎಚ್‌ಡಿಡಿ ಕುಟುಂಬ ಕುದಿಯುತ್ತಿದೆ.

VISTARANEWS.COM


on

HD Deve gowda prajwal revanna case
Koo

ಬೆಂಗಳೂರು: ಮಾಜಿ ಸಚಿವ ಎಚ್‌.ಡಿ ರೇವಣ್ಣ (HD Revanna Jailed) ಅವರು ಇಂದು ಜಾಮೀನಿನಲ್ಲಿ ಬಿಡುಗಡೆ ಆಗುತ್ತಿದ್ದು, ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ (Prajwal Revanna Case) ಕುಟುಂಬಕ್ಕೆ ಆಗಿರುವ ಅವಮಾನದ ಸೇಡು ತೀರಿಸಿಕೊಳ್ಳಲು ರಾಜಕೀಯ ಭೀಷ್ಮ, ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರು (HD Deve Gowda) ಸಜ್ಜಾಗಿದ್ದಾರೆ. ಸದಾ ನೀಟ್‌ ಶೇವ್‌ ಮಾಡಿಕೊಳ್ಳುವ ದೇವೇಗೌಡರು ಮಗ ಜೈಲುಪಾಲಾದ ಬಳಿಕ ಮೊದಲ ಬಾರಿಗೆ ಗಡ್ಡ ಬಿಟ್ಟಿದ್ದು, ಇದೀಗ ಎದುರಾಳಿಗಳನ್ನು ಎದುರಿಸಲು ಎದ್ದು ಕೂತಿದ್ದಾರೆ.

ಇಂದು ರೇವಣ್ಣ ಮನೆಗೆ

ಹನ್ನೊಂದು ದಿನಗಳ ಹಿಂದೆ ಪದ್ಮನಾಭ ನಗರದ ದೇವೇಗೌಡರ ನಿವಾಸದಲ್ಲೇ ಆರೆಸ್ಟ್ ಆಗಿದ್ದ ಎಚ್‌.ಡಿ ರೇವಣ್ಣ ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಜೈಲರ್‌ಗೆ ಬಿಡುಗಡೆ ಆದೇಶ ಪ್ರತಿ ಸಿಗುವವರೆಗೂ ಬಿಡುಗಡೆ ದೊರೆಯುವುದಿಲ್ಲ. ಬೆಳಿಗ್ಗೆ ಹತ್ತುವರೆಗೆ ಕೋರ್ಟ್ ಕಲಾಪ ಆರಂಭವಾಗಲಿದ್ದು, ಹತ್ತುವರೆಗೆ ಪರಪ್ಪನ ಅಗ್ರಹಾರ ಜೈಲಿಗೆ ಜೈಲರ್‌ ಬರಲಿದ್ದಾರೆ. ರೇವಣ್ಣ ಪರ ವಕೀಲರಿಂದ ಜೈಲರ್‌ಗೆ ಬಿಡುಗಡೆ ಆದೇಶ ಪ್ರತಿ ನೀಡಿ ಹನ್ನೊಂದು ಗಂಟೆ ಬಳಿಕ ಬಿಡುಗಡೆ ಸಾಧ್ಯತೆ ಇದೆ. ಬಹುತೇಕ ಅಭಿಜಿನ್ ಮುಹೂರ್ತ 11.40ರ ಸಮಯದಲ್ಲಿ ಬಿಡುಗಡೆ ಸಾಧ್ಯತೆ ಇದೆ.

ರೇವಣ್ಣ ಬಿಡುಗಡೆ ಬಳಿಕ ನೇರವಾಗಿ ಪದ್ಮನಾಭ ನಗರಕ್ಕೆ ಆಗಮಿಸುವ ಸಾಧ್ಯತೆ ಇದೆ. ರೇವಣ್ಣ ಬಿಡುಗಡೆಯಿಂದ ಗೌಡರ ಕುಟುಂಬದಲ್ಲಿ ಸಂತೋಷ ಮೂಡಿದ್ದು, ಬಿಡುಗಡೆ ‌ಬಳಿಕ ತಂದೆ ದೇವೇಗೌಡರು, ಹೆಚ್‌ಡಿಕೆ ಸೇರಿ ಕುಟುಂಬ ಸದಸ್ಯರ ಜೊತೆಗೆ ರೇವಣ್ಣ ಚರ್ಚೆ ನಡೆಸುವ ಸಾಧ್ಯತೆ ಇದೆ. ಮಾಜಿ ಪಿಎಂ ಎಚ್.ಡಿ ದೇವೇಗೌಡರ ಆಶೀರ್ವಾದ ಪಡೆದು ಬಳಿಕ ಮುಂದಿನ ಕೆಲಸಗಳಿಗಾಗಿ ಹಾಸನ ಕಡೆ ಹೊರಡಲಿದ್ದಾರೆ.

ಹನ್ನೊಂದು ದಿನಗಳ ಸಂಕಷ್ಟದ ಮೂಡ್‌ನಿಂದ ಇಂದು ಹೊರಬಂದಿರುವ ದೇವೇಗೌಡರು, ನಿನ್ನೆ ರಾತ್ರಿ ಒಂದು ಗಂಟೆವರೆಗೂ ತಮ್ಮ ಮಕ್ಕಳೊಂದಿಗೆ ಹಲವು ವಿಚಾರಗಳನ್ನು ಚರ್ಚೆ ಮಾಡಿದ್ದಾರೆ. ಮಾಜಿ ಸಿಎಂ ಎಚ್‌ಡಿಕೆ ಸೇರಿದಂತೆ ದೇವೇಗೌಡರ ಪುತ್ರಿಯರು ಸಹ ಇದರಲ್ಲಿ ಭಾಗಿಯಾಗಿದ್ದರು. ಇಂದು ಮನೆಯಲ್ಲಿ ಹಬ್ಬದ ವಾತಾವರಣವಿದ್ದು, ನಿನ್ನೆ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದರು.

“ಪೆನ್ ಡ್ರೈವ್ ಪ್ರಕರಣದಿಂದ ಈಗಾಗಲೇ ನಮ್ಮ ಕುಟುಂಬದ ಮಾನ ಬೀದಿಗೆ ಬಂದಿದೆ. ಲೋಕಸಭೆ ‌ಚುನಾವಣೆ ಹೊತ್ತಿನಲ್ಲಿ ಇಕ್ಕಟ್ಟಿಗೆ ಸಿಲುಕಿದ್ದೇವೆ. ಈ ಹೊತ್ತಲ್ಲಿ ರಾಜಕೀಯ ಹೇಳಿಕೆ ಸೇರಿದಂತೆ ಯಾವುದಕ್ಕೂ ಹೇಳಿಕೆ ನೀಡಬೇಡಿ. ಹೆಚ್ಚು ಮಾತನಾಡಬೇಡಿ” ಎಂದು ದೇವೇಗೌಡರು ಮಕ್ಕಳಿಗೆ ಸೂಚನೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಬಹಳ ಎಚ್ಚರಿಕೆಯಿಂದ ಹೆಜ್ಜೆ ಇಡುವಂತೆ ಎಚ್ಚರಿಸಿದ್ದಾರೆ.

ಸರ್ಕಾರದ ವಿರುದ್ಧ ಯಾವ ಅಸ್ತ್ರ?

ದೇವೇಗೌಡರ ಐವತ್ತು ವರ್ಷಗಳ ಕಾಲದ ಘನತೆಯ ರಾಜಕೀಯ ಜೀವನಕ್ಕೆ ಪೆನ್‌ ಡ್ರೈವ್‌ ಪ್ರಕರಣದಿಂದ ಭಾರಿ ಪೆಟ್ಟು ಬಿದ್ದಿದೆ. ಕುಟುಂಬಕ್ಕೆ ಮುಜುಗರ ಸೃಷ್ಟಿಯಾಗಿದೆ. ಅವಮಾನಿತರಾದ ದೇವೇಗೌಡರು ರೇವಣ್ಣ ಜೈಲಿಗೆ ಹೋದ ಬಳಿಕ, ಎಂದೂ ಗಡ್ಡ ಬಿಡದವರು ಮೊದಲ ಬಾರಿಗೆ ದಾಡಿ ಬಿಟ್ಟಿದ್ದರು. ಡಿಕೆಶಿ ಹಾಗೂ ಸಿದ್ದರಾಮಯ್ಯ ತಮಗೆ ಸೃಷ್ಟಿಸಿರುವ ಅವಮಾನಕ್ಕೆ ಪ್ರತೀಕಾರ ಮಾಡಲು ಎಚ್‌ಡಿಡಿ ಕುಟುಂಬ ಕುದಿಯುತ್ತಿದೆ.

ಈ ನಿಟ್ಟಿನಲ್ಲಿ ತಂತ್ರ ರೆಡಿಯಾಗುತ್ತಿದ್ದು, ರಾಜಕೀಯ, ಸಾಮಾಜಿಕ ಎಲ್ಲ ನೆಲೆಗಳಲ್ಲೂ ಎದುರಾಳಿಗಳಿಗೆ ಕೌಂಟರ್‌ ಕೊಡಲು ಸಜ್ಜಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಮೂರು ಅಸ್ತ್ರಗಳು ತಯಾರಾಗುತ್ತಿವೆ ಎನ್ನಲಾಗಿದೆ.

ಅಸ್ತ್ರ – 1: ಡಿಕೆಶಿ ಸಿದ್ದರಾಮಯ್ಯ ವಿರುದ್ಧ ಪ್ರಯೋಗ

ಒಕ್ಕಲಿಗ ಸಮುದಾಯದ ಮುಂದೆ ಡಿಕೆಶಿಯನ್ನು ವಿಲನ್ ಮಾಡುವುದು, ದೇವೇಗೌಡರ ಫ್ಯಾಮಿಲಿಯನ್ನು ಜೈಲಿಗೆ ಕಳುಹಿಸಿದ್ದೇ ಡಿಕೆಶಿ ಹಾಗೂ ಸಿದ್ದರಾಮಯ್ಯ ಅಂತ ಬಿಂಬಿಸುವುದು ಈ ಅಸ್ತ್ರ. ಡಿಕೆಶಿಗೆ ದೇವೇಗೌಡರ ಕುಟುಂಬ ನೋಡಿದರೆ ಆಗಲ್ಲ. ಹೀಗಾಗಿ ಪೆನ್ ಡ್ರೈವ್ ಕೇಸ್‌ನಲ್ಲಿ ನಮ್ಮನ್ನು ಸಿಕ್ಕಿ ಹಾಕಿಸಿದ್ದಾರೆ. ಸಿದ್ದರಾಮಯ್ಯಗೆ ಒಕ್ಕಲಿಗ ಸಮುದಾಯ ಕಂಡರೆ ಆಗಲ್ಲ ಅಂತ ಬಿಂಬಿಸುವುದು, ರಾಜ್ಯಾದ್ಯಂತ ಸರ್ಕಾರದ ನಡೆ ವಿರುದ್ಧ ಮೈತ್ರಿ ಪಕ್ಷದ ಜತೆ ಜನಾಭಿಪ್ರಾಯ ಸಂಗ್ರಹಿಸುವುದು, ಇವರ ತಪ್ಪು ಮರೆ ಮಾಚಲು ಪೆನ್ ಡ್ರೈವ್ ಪ್ರಕರಣ ತಂದರು ಅಂತ ಪ್ರಚಾರ ಮಾಡುವುದು ಇತ್ಯಾದಿಗಳ ಮೂಲಕ ಮುಗಿಬೀಳುವುದು.

ಅಸ್ತ್ರ – 2: ಭ್ರಷ್ಟಾಚಾರದ ಪ್ರಸ್ತಾಪ

ಸರ್ಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ವಿಚಾರಗಳನ್ನು ಪ್ರಸ್ತಾಪ ಮಾಡಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವುದು, ಈ ಹಿಂದೆ ಸರ್ಕಾರದ ಸಚಿವರ ವರ್ಗಾವಣೆ ದಂಧೆ ಸಂಬಂಧ ಇದೆ ಎನ್ನಲಾದ ಪೆನ್ ಡ್ರೈವ್ ಅಸ್ತ್ರ ಪ್ರಯೋಗ ಮಾಡುವುದು ಪ್ಲಾನ್‌ನಲ್ಲಿದೆ.

ಅಸ್ತ್ರ – 3: ಕಾನೂನು ಅಸ್ತ್ರಗಳು

ಡಿಕೆಶಿ ವಿರುದ್ಧ ಇರುವ, ಕೇಂದ್ರ ತನಿಖಾ ಏಜೆನ್ಸಿಗಳ ಮುಂದೆ ದಾಖಲಾಗಿರುವ ಪ್ರಕರಣಗಳಿಗೆ ಮರುಜೀವ ಕೊಡಿಸುವುದು, ಡಿಕೆಶಿಗೆ ಐಟಿ, ಇಡಿ, ಸಿಬಿಐ ಸಂಕಷ್ಟ ಎದುರಾಗುವಂತೆ ನೋಡಿಕೊಳ್ಳುವುದು, ಈ ಬಗ್ಗೆ ಕೇಂದ್ರದ ಮುಂದೆ ಇನ್ನಷ್ಟು ದಾಖಲೆ ನೀಡಿ ಮೈತ್ರಿ ಪಕ್ಷದ ಬೆಂಬಲ ಪಡೆಯುವುದು ಈ ಪ್ಲಾನ್‌ನಲ್ಲಿದೆ.

ಇದನ್ನೂ ಓದಿ: HD Revanna Bail: ನಿನ್ನೆ ಜಾಮೀನು ಸಿಕ್ಕರೂ ಇಂದು ಸಂಜೆಯವರೆಗೆ ರೇವಣ್ಣ ಜೈಲಿನಲ್ಲಿರಬೇಕು!

Continue Reading

ಕ್ರೈಂ

Prajwal Revanna Case: ವಕೀಲ ದೇವರಾಜೇಗೌಡ ಇಂದು ಪೊಲೀಸ್‌ ಕಸ್ಟಡಿಗೆ

Prajwal Revanna Case: ದೇವರಾಜೇಗೌಡ ಮೇ 11ರಂದು ಬಂಧನಕ್ಕೆ ಒಳಗಾಗಿದ್ದರು. ಇವರ ಮೇಲೆ ಲೈಂಗಿಕ ದೌರ್ಜನ್ಯ, ಕಿರುಕುಳ ಆರೋಪಗಳನ್ನು ಹೊರಿಸಲಾಗಿದೆ. ಹೆಚ್ಚಿನ ವಿಚಾರಣೆಗಾಗಿ ಹೊಳೆನರಸೀಪುರ ನಗರ ಠಾಣೆ ಪೊಲೀಸರು ಕಸ್ಟಡಿಗೆ ಪಡೆಯುತ್ತಿದ್ದಾರೆ.

VISTARANEWS.COM


on

Prajwal Revanna Case Devaraje Gowda
Koo

ಹಾಸನ: ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ (physical Abuse) ಕೇಸ್‌ ಆರೋಪಿ ವಕೀಲ ದೇವರಾಜೇಗೌಡ (Devarajegowda) ಅವರನ್ನು ಇಂದು ಪೊಲೀಸ್ ಕಸ್ಟಡಿಗೆ ಪಡೆಯಲಾಗುತ್ತಿದೆ. ಎರಡು ದಿನಗಳ ಕಾಲ ಅವರನ್ನು ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ. ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ (Prajwal Revanna Case) ವಿಡಿಯೊ ವೈರಲ್‌ (video viral) ಮಾಡಿದವರ ಕುರಿತು ಸಾಕ್ಷ್ಯ ಬಿಡುಗಡೆ ಮಾಡುತ್ತೇನೆ ಎನ್ನುತ್ತಿದ್ದ ವಕೀಲ ದೇವರಾಜೇಗೌಡ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಬಂಧನವಾಗಿದ್ದರು.

ಹೊಳೆನರಸೀಪುರ ಪೊಲೀಸರು ದೇವರಾಜೇಗೌಡ ಅವರನ್ನು ಇಂದು ಬೆಳಗ್ಗೆ ಕಸ್ಟಡಿಗೆ ತೆಗೆದುಕೊಳ್ಳಲಿದ್ದು, ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಹೊಳೆನರಸೀಪುರದ ಜೆಎಂಎಫ್‌ಸಿ ಕೋರ್ಟ್ ಅನುಮತಿ ನೀಡಿದೆ. ಇಂದಿನಿಂದ ಮೇ 16ರ ಬೆಳಗ್ಗೆ 12 ಗಂಟೆವರೆಗೆ ಪೊಲೀಸ್ ಕಸ್ಟಡಿಯಲ್ಲಿ ಇರಲಿದ್ದಾರೆ.

ದೇವರಾಜೇಗೌಡ ಮೇ 11ರಂದು ಬಂಧನಕ್ಕೆ ಒಳಗಾಗಿದ್ದರು. ಇವರ ಮೇಲೆ ಲೈಂಗಿಕ ದೌರ್ಜನ್ಯ, ಕಿರುಕುಳ ಆರೋಪಗಳನ್ನು ಹೊರಿಸಲಾಗಿದೆ. ಹೆಚ್ಚಿನ ವಿಚಾರಣೆಗಾಗಿ ಹೊಳೆನರಸೀಪುರ ನಗರ ಠಾಣೆ ಪೊಲೀಸರು ಕಸ್ಟಡಿಗೆ ಪಡೆಯುತ್ತಿದ್ದಾರೆ. ಹಾಸನದ ಜಿಲ್ಲಾ ಕಾರಾಗೃಹದಿಂದ ಕೆಲವೇ ಕ್ಷಣದಲ್ಲಿ ದೇವರಾಜೇಗೌಡರನ್ನು ಪೊಲೀಸರು ಕರೆದೊಯ್ಯಲಿದ್ದು, ಹೊಳೆನರಸೀಪುರ, ಹಾಸನ ಸೇರಿ ಇತರ ಅಗತ್ಯ ಸ್ಥಳಗಳಿಗೆ ಕರೆದೊಯ್ದು ವಿಚಾರಣೆ ನಡೆಸಲಿದ್ದಾರೆ.

ಅತ್ಯಾಚಾರ ಕೇಸ್‌ನ ಆರೋಪಿ ದೇವರಾಜೇಗೌಡ ಅವರನ್ನು ಬುಧವಾರ ಬೆಳಗ್ಗೆ 9 ಗಂಟೆಯಿಂದ ಮೇ 16 ರ ರಾತ್ರಿ ವರೆಗೆ ಮೂರು ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ನೀಡಲು ಹೊಳೆನರಸೀಪುರ ನಗರ ಠಾಣೆ ಪೊಲೀಸರು ಮನವಿ ಮಾಡಿದ್ದರು. ಹೀಗಾಗಿ ಅವರನ್ನು ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ. ಮೇ 11 ರಂದು ದೇವರಾಜೇಗೌಡ ಬಂಧನವಾಗಿತ್ತು. ನಾಳ ಬೆಳಗ್ಗೆ 9 ಗಂಟೆಗೆ ಹಾಸನದ ಜಿಲ್ಲಾ ಕಾರಾಗೃಹದಿಂದ ದೇವರಾಜೇಗೌಡ ಅವರನ್ನು ಪೊಲೀಸರು ಕರೆದೊಯ್ಯಲಿದ್ದಾರೆ.

ಇದನ್ನೂ ಓದಿ | Prajwal Revanna Case: ಪೆನ್‌ಡ್ರೈವ್, ವಿಡಿಯೊ ಇದ್ದವರನ್ನೆಲ್ಲ ಬಂಧಿಸ್ತಾರಾ?; ಆಪ್ತರ ಬಂಧನದ ಬಗ್ಗೆ ಪ್ರೀತಂ ಗೌಡ ಫಸ್ಟ್‌ ರಿಯಾಕ್ಷನ್

ವಕೀಲ ದೇವರಾಜೇಗೌಡ ಬಂಧನವಾಗಿರುವುದು ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಾದರೂ ಹಾಸನ ಪೆನ್ ಡ್ರೈವ್ ಪ್ರಕರಣಕ್ಕೇ ತಳುಕು ಹಾಕಿಕೊಂಡಿದೆ. ಈಗಾಗಲೇ ಮಾಜಿ ಸಂಸದ ಶಿವರಾಮೇಗೌಡ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ವಿರುದ್ಧ ಗಂಭೀರ ಆರೋಪ ಮಾಡಿದ್ದಲ್ಲದೆ, ಅವರ ಜತೆಗಿನ ಮಾತುಕತೆ ಎನ್ನಲಾದ ಆಡಿಯೊವನ್ನು ಬಿಡುಗಡೆ ಮಾಡಿದ್ದರು. ಇದಲ್ಲದೆ, ಸಾಕಷ್ಟು ವಿಡಿಯೊಗಳು, ಸಾಕ್ಷಿಗಳು ಸಹ ತಮ್ಮ ಬಳಿ ಇದೆ ಎಂದು ಹೇಳಿಕೊಂಡಿದ್ದರು. ಸಾಕ್ಷ್ಯಗಳನ್ನು ಮುಂದಿನ ದಿನಗಳಲ್ಲಿ ಸಿಬಿಐ ಮುಂದೆ ಇಡುತ್ತೇನೆ ಎಂದು ಸಹ ಸುದ್ದಿಗೋಷ್ಠಿ ನಡೆಸಿ ನೇರವಾಗಿ ರಾಜ್ಯ ಸರ್ಕಾರದ ವಿರುದ್ಧ ಸವಾಲು ಹಾಕಿದ್ದರು. ಆದರೆ, ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಅವರನ್ನು ಬಂಧಿಸಲಾಗಿದೆ.

ಪತಿಯು ಮಾಲೀಕತ್ವದ ಸೈಟ್ ವಿಚಾರವಾಗಿ ದೇವರಾಜೇಗೌಡ ಅವರನ್ನು ಮಹಿಳೆಯೊಬ್ಬರು ಭೇಟಿಯಾಗಿದ್ದರು. ಆ ಪರಿಚಯವನ್ನು ದುರ್ಬಳಕೆ ಮಾಡಿಕೊಂಡು ಲೈಂಗಿಕವಾಗಿ ಬಳಸಿಕೊಂಡಿರುವ ಆರೋಪ ದೇವರಾಜೇಗೌಡ ವಿರುದ್ಧ ಕೇಳಿ ಬಂದಿದೆ.

ಇದನ್ನೂ ಓದಿ | Prajwal Revanna Case: ಎಚ್‌.ಡಿ. ರೇವಣ್ಣ ಜಾಮೀನು ಅರ್ಜಿಯ ರೋಚಕ ವಾದ – ಪ್ರತಿವಾದ; ಇಲ್ಲಿದೆ ಇಂಚಿಂಚು ಡಿಟೇಲ್ಸ್‌

ಕಿಡ್ನ್ಯಾಪ್‌ ಕೇಸ್; ಸತೀಶ್ ಬಾಬು ಹೊರತು ಪಡಿಸಿ ಮೂವರಿಗೆ ನ್ಯಾಯಾಂಗ ಬಂಧನ

ಕೆ.ಆರ್.ನಗರ ಸಂತ್ರಸ್ತೆ ಕಿಡ್ನ್ಯಾಪ್ ಕೇಸ್‌ನಲ್ಲಿ ಬಂಧನವಾಗಿರುವ ಸತೀಶ್ ಬಾಬು ಹೊರತುಪಡಿಸಿ ಮೂವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನಾಲ್ವರು ಆರೋಪಿಗಳನ್ನು ಬೆಂಗಳೂರಿನ 17ನೇ ಎಸಿಎಂಎಂ ನ್ಯಾಯಾಲಯಕ್ಕೆ ಎಸ್‌ಐಟಿ ಅಧಿಕಾರಿಗಳು ಹಾಜರುಪಡಿಸಿದ್ದರು. ಸಂತ್ರಸ್ರೆ ಕಿಡ್ನ್ಯಾಪ್‌ಗೆ ಸಹಕರಿಸಿದ್ದ ಆರೋಪದಲ್ಲಿ ಬಂಧನವಾಗಿದ್ದ ಮಧು, ಮನು, ಸುಜಯ್‌ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಪೆನ್‌ ಡ್ರೈವ್‌ ಹಂಚಿಕೆ ಆರೋಪ ಮಾಡಿದ್ದ ನವೀನ್‌ ಗೌಡ ಮೇಲೆ ಶಾಸಕ ಮಂಜು ದೂರು

A Manju and Naveen Gowda

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೆನ್‌ಡ್ರೈವ್‌ ಲೀಕ್‌ ಮಾಡಿದ್ದು ಅರಕಲಗೂಡು ಜೆಡಿಎಸ್ ಶಾಸಕ ಎ. ಮಂಜು (A Manju) ಎಂದು ಕಾಂಗ್ರೆಸ್‌ ಕಾರ್ಯಕರ್ತ ನವೀನ್‌ ಗೌಡ (Naveen Gowda) ಆರೋಪಿಸಿ ಫೇಸ್‌ಬುಕ್‌ ಪೋಸ್ಟ್‌ ಮಾಡಿದ್ದರ ವಿರುದ್ಧ ಎಸ್‌ಐಟಿಗೆ ದೂರು ದಾಖಲಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಮಂಜು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸೋಮವಾರ ಎಸ್.ಐ.ಟಿ ಕಚೇರಿಗೆ ಆಗಮಿಸಿದ ಅರಕಲಗೂಡು ಜೆಡಿಎಸ್ ಶಾಸಕ ಎ. ಮಂಜು, ನವೀನ್ ಗೌಡ ವಿರುದ್ಧ ದೂರು ನೀಡಿದ್ದಾರೆ. ಪೆನ್ ಡ್ರೈವ್ ಅನ್ನು ಶಾಸಕ ಎ. ಮಂಜು ಅವರಿಗೆ ಕೊಟ್ಟಿದ್ದಾಗಿ ಭಾನುವಾರ ನವೀನ್‌ ಗೌಡ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಹಾಕಿದ್ದ. ಈ ಆರೋಪಕ್ಕೆ ಸಿಟ್ಟಾಗಿರುವ ಮಂಜು ಈಗ ದೂರು ನೀಡಿದ್ದಾರೆ.

ನನಗೆ ಏಪ್ರಿಲ್ 20 ರಂದು ಪೆನ್ ಡ್ರೈವ್ ಸಿಕ್ಕಿತ್ತು. ನಾನದನ್ನು ಏಪ್ರಿಲ್‌ 21ರಂದು ಅರಕಲಗೂಡು ಶಾಸಕ ಮಂಜು ಅವರಿಗೆ ಅರಕಲಗೂಡು ಮಾರುತಿ ಕಲ್ಯಾಣ ಮಂಟಪದಲ್ಲಿ ನೀಡಿದ್ದೇನೆ. ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ವಿಡಿಯೊವನ್ನು ವೈರಲ್ ಮಾಡಿದ್ದರ ಹಿಂದೆ ಮಹಾ ನಾಯಕನ ಕೈವಾಡ ಇದೆ ಎಂದು ಹೇಳಿದ್ದರು. ಆ ಮಹಾ ನಾಯಕ ಅರಕಲಗೂಡು ಶಾಸಕರೇ ಇರಬಹುದು ಎಂದು ಪೋಸ್ಟ್ ಮಾಡಿದ್ದ. ನವೀನ್ ಗೌಡ ಪೋಸ್ಟ್ ಎಲ್ಲೆಡೆ ವೈರಲ್ ಆಗಿತ್ತು. ಆದರೆ, ಪೋಸ್ಟ್ ಮಾಡಿ‌ ಸ್ವಲ್ಪ ಸಮಯದ ಬಳಿಕ ನವೀನ್ ಗೌಡ ಪೋಸ್ಟ್ ಅನ್ನು ಡಿಲೀಟ್ ಮಾಡಿದ್ದ.

ನವೀನ್‌ ಗೌಡ ಯಾರು?

ನವೀನ್‌ ಗೌಡ ಕಾಂಗ್ರೆಸ್‌ ಕಾರ್ಯಕರ್ತನಾಗಿದ್ದು, ಶಾಸಕ ಜಮೀರ್‌ ಅಹಮ್ಮದ್‌ ಆಪ್ತರಲ್ಲೊಬ್ಬನಾಗಿದ್ದಾನೆ ಎಂದು ಹೇಳಲಾಗಿದೆ. ಅಲ್ಲದೆ, ಈತ ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್‌ ಪಟೀಲ್‌ಗೂ ಆಪ್ತನಾಗಿದ್ದ. ಚುನಾವಣೆ ವೇಳೆ ಶ್ರೇಯಸ್‌ ಪರವಾಗಿ ಪ್ರಚಾರವನ್ನೂ ಮಾಡಿದ್ದ. ಈತನೇ ಹಾಸನ ಜಿಲ್ಲಾದ್ಯಂತ ಪೆನ್‌ಡ್ರೈವ್‌ ಅನ್ನು ಹಂಚಿಕೆ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ನವೀನ್ ಗೌಡನ ಮೇಲೆ ಈಗಾಗಲೇ ಹಾಸನ ಸೆನ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಎಫ್‌ಐಆರ್ ಬಳಿಕ ನವೀನ್ ಗೌಡ ನಾಪತ್ತೆಯಾಗಿದ್ದ. ಆದರೆ, ಭಾನುವಾರ ಫೇಸ್‌ಬುಕ್‌ನಲ್ಲಿ ದಿಢೀರನೆ ಪ್ರತ್ಯಕ್ಷವಾಗಿ ಶಾಸಕ ಎ. ಮಂಜು ವಿರುದ್ಧ ಪೋಸ್ಟ್ ಹಾಕಿ ಕೆಲವೇ ಸಮಯದ ಬಳಿಕ ಡಿಲೀಟ್‌ ಮಾಡಿದ್ದ.

ದೂರು ನೀಡಿದ ಎ. ಮಂಜು

ಈ ಸಂಬಂಧ ಎಸ್‌ಐಟಿಗೆ ಬಂದ ಶಾಸಕ ಎ. ಮಂಜು ಅವರು ನವೀನ್‌ ಗೌಡನ ಮೇಲೆ ದೂರು ದಾಖಲು ಮಾಡಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನವೀನ್ ಗೌಡನಿಗೆ ಏಪ್ರಿಲ್‌ 20ರಂದು ಅಶ್ಲೀಲ ವಿಡಿಯೊದ ಪೆನ್‌ಡ್ರೈವ್‌ ಸಿಗುತ್ತದೆ. ಅದನ್ನು ಏಪ್ರಿಲ್‌ 21ರಂದು ನನಗೆ ಕೊಟ್ಟಿದ್ದೇನೆ ಎಂದು ಹೇಳಿದ್ದಾರೆ. ನನಗೆ ಪೆನ್ ಡ್ರೈವ್ ಅನ್ನು ಯಾಕೆ ಕೊಡಬೇಕು ಎಂಬುದನ್ನು ಮನಸ್ಸು ಮುಟ್ಟಿ ಹೇಳಿಕೊಳ್ಳಲಿ. ನವೀನ್ ಗೌಡ ನನಗೆ ಪರಿಚಯವೇ ಇಲ್ಲ. ನವೀನ್ ಗೌಡ ತಪ್ಪಿಸಿಕೊಳ್ಳಲು ಹಾಗೂ ಎಸ್ಐಟಿ ತನಿಖೆಯ ದಿಕ್ಕು ತಪ್ಪಿಸಲು ಈ ಹೇಳಿಕೆ ಕೊಟ್ಟಿದ್ದಾರೆ. ನನಗೆ ಗೊತ್ತಿಲ್ಲದೆಯೇ ಈ ಪ್ರಕರಣದ ಹಿಂದೆ ಯಾರಿದ್ದಾರೆಂದು ಹೇಳಲ್ಲ ಎಂದು ಹೇಳಿದರು.

Continue Reading
Advertisement
karnataka Rain Effected
ಬೆಂಗಳೂರು7 mins ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Viral Video
ವೈರಲ್ ನ್ಯೂಸ್9 mins ago

Viral Video: ಛೇ..ಇವನೆಂಥಾ ಪಾಪಿ..! ನಾಯಿ ಮೇಲೆ ಪದೇ ಪದೇ ಹಲ್ಲೆ ನಡೆಸಿ ವಿಕೃತಿ

Salman Khan
ಬಾಲಿವುಡ್19 mins ago

Salman Khan: ಸಲ್ಮಾನ್‌ ಖಾನ್‌ ಮನೆ ಎದುರು ಫೈರಿಂಗ್‌ ಕೇಸ್‌; 6ನೇ ಆರೋಪಿಯ ಬಂಧನ

RCB Vs CSK
ಕ್ರೀಡೆ20 mins ago

RCB vs CSK: ಆರ್​ಸಿಬಿ ಪ್ಲೇ ಆಫ್​ ಹಾದಿಗೆ ಕೊಳ್ಳಿ ಇಡಲಿದೆಯೇ ಮಳೆ; ಹವಾಮಾನ ಇಲಾಖೆ ನೀಡಿದ ಮುನ್ಸೂಚನೆ ಏನು?

bomb hoax bengaluru
ಕ್ರೈಂ51 mins ago

Bomb Hoax: ಬೆಂಗಳೂರಿನ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಇಮೇಲ್, ತಪಾಸಣೆ

Team India Coach
ಕ್ರಿಕೆಟ್1 hour ago

Team India Coach: ಭಾರತ ಕ್ರಿಕೆಟ್‌ ತಂಡದ ಮುಖ್ಯ ಕೋಚ್‌ ಹುದ್ದೆಗೆ ಅರ್ಜಿ ಆಹ್ವಾನ; ಮೇ 27 ಕೊನೆಯ ದಿನ

Job Alert
ಉದ್ಯೋಗ1 hour ago

Job Alert: ಎಚ್ಎ‌ಎಲ್‌ನಿಂದ 200 ಅಪ್ರೆಂಟಿಸ್‌ಗಳ ನೇಮಕ; ಐಟಿಐ ಪಾಸಾದವರು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಿ

Narendra Modi
ದೇಶ1 hour ago

Narendra Modi: ನಾಮಪತ್ರ ಸಲ್ಲಿಕೆಗೂ ಮುನ್ನ ಗಂಗಾರತಿ ಮಾಡಿದ ಮೋದಿ-ಇಲ್ಲಿದೆ ಲೈವ್‌

HD Deve gowda prajwal revanna case
ಪ್ರಮುಖ ಸುದ್ದಿ2 hours ago

‌Prajwal Revanna Case: ಜೀವನದಲ್ಲಿ ಮೊದಲ ಬಾರಿಗೆ ಗಡ್ಡ ಬಿಟ್ಟ ದೇವೇಗೌಡರು; ವೈರಿನಾಶಕ್ಕೆ ಶಪಥ!

Thailand Open
ಕ್ರೀಡೆ2 hours ago

Thailand Open 2024: ಇಂದಿನಿಂದ ಥಾಯ್ಲೆಂಡ್‌ ಓಪನ್‌ ಟೂರ್ನಿ; ಚಿರಾಗ್‌-ಸಾತ್ವಿಕ್‌ ಜೋಡಿ ಮೇಲೆ ಪದಕ ಭರವಸೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain Effected
ಬೆಂಗಳೂರು7 mins ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ7 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ17 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ17 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ17 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ18 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ18 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 day ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ1 day ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ1 day ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

ಟ್ರೆಂಡಿಂಗ್‌