Retail Inflation: ಮೂರು ತಿಂಗಳ ಕನಿಷ್ಠ ಮಟ್ಟಕ್ಕೆ ಇಳಿಕೆಯಾದ ಚಿಲ್ಲರೆ ಹಣದುಬ್ಬರ! - Vistara News

ದೇಶ

Retail Inflation: ಮೂರು ತಿಂಗಳ ಕನಿಷ್ಠ ಮಟ್ಟಕ್ಕೆ ಇಳಿಕೆಯಾದ ಚಿಲ್ಲರೆ ಹಣದುಬ್ಬರ!

Retail Inflation: ಗ್ರಾಹಕ ಬೆಲೆ ಸೂಚ್ಯಂಕ (ಸಿಪಿಐ) ಆಧರಿಸಿದ ಹಣದುಬ್ಬರವು, 2022ರ ಆಗಸ್ಟ್‌ನಲ್ಲಿ ಶೇ.6.83 ಶೇಕಡಾ ಮತ್ತು ಸೆಪ್ಟೆಂಬರ್ ಶೇ.7.41 ರಷ್ಟಿತ್ತು ಎಂದು ಅಂಕಿಸಂಖ್ಯೆಗಳಲ್ಲಿ ತಿಳಿಸಲಾಗಿದೆ.

VISTARANEWS.COM


on

Retail Inflation reduced to 4.87 percent Says Government report
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಪ್ರಸಕ್ತ ವರ್ಷದ ಸೆಪ್ಟೆಂಬರ್‌ನಲ್ಲಿ ದೇಶದ ಚಿಲ್ಲರೆ ಹಣದುಬ್ಬರವು (Retail Inflation) ಮೂರು ತಿಂಗಳ ಕನಿಷ್ಠ ಶೇ.5.02ಕ್ಕೆ ಮಟ್ಟಕ್ಕೆ ಇಳಿಕೆಯಾಗಿದೆ. ಆಹಾರ ಬೆಲೆ (Food Price) ಇಳಿಕೆಯೇ ಇದಕ್ಕೆ ಮುಖ್ಯ ಕಾರಣವಾಗಿದೆ ಎಂಬ ಮಾಹಿತಿಯನ್ನು ಗುರುವಾರ ಬಿಡುಗಡೆ ಮಾಡಲಾದ ವರದಿಯಲ್ಲಿ ತಿಳಿಸಲಾಗಿದೆ. ಸಿಪಿಐ (Consumer Price Index) ಹಣದುಬ್ಬರವು ಎರಡು ತಿಂಗಳ ಅಂತರದ ನಂತರ ಆರ್‌ಬಿಐನ ಆರಾಮದಾಯಕ ಮಟ್ಟವಾದ ಶೇ.6ಕ್ಕೆ ಇಳಿಕೆಯಾಗಿರುವುದು ಸಕಾರಾತ್ಮಕ ಬೆಳವಣಿಗೆಯಾಗಿದೆ. ಗ್ರಾಹಕ ಬೆಲೆ ಸೂಚ್ಯಂಕ (ಸಿಪಿಐ) ಆಧರಿಸಿದ ಹಣದುಬ್ಬರವು, 2022ರ ಆಗಸ್ಟ್‌ನಲ್ಲಿ ಶೇ.6.83 ಶೇಕಡಾ ಮತ್ತು ಸೆಪ್ಟೆಂಬರ್ ಶೇ.7.41 ರಷ್ಟಿತ್ತು.

ಕಳೆದ ವರ್ಷ ಜೂನ್ ತಿಂಗಳಲ್ಲಿ ಅತಿ ಕಡಿಮೆ(ಶೇ.4.87) ಹಣದುಬ್ಬರ ದಾಖಲಾಗಿತ್ತು. ರಾಷ್ಟ್ರೀಯ ಅಂಕಿಅಂಶ ಕಚೇರಿ (ಎನ್‌ಎಸ್‌ಒ) ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, ಆಹಾರ ಹಣದುಬ್ಬರವು ಸೆಪ್ಟೆಂಬರ್‌ನಲ್ಲಿ ಶೇ.9.94 ರಿಂದ ಶೇ.6.56ಕ್ಕೆ ಇಳಿದಿದೆ.

ಈ ಸುದ್ದಿಯನ್ನೂ ಓದಿ: Intrest Rate : ಸಾಲಗಾರರಿಗೆ ಗುಡ್​ ನ್ಯೂಸ್​; ಹಣದುಬ್ಬರದ ನಡುವೆಯೂ ಬಡ್ಡಿ ಏರಿಕೆ ಸಾಧ್ಯತೆಯಿಲ್ಲ

ಅಲ್ಲದೇ, ಗುರುವಾರ ಬಿಡುಗಡೆಯಾದ ಅಧಿಕೃತ ಅಂಕಿಅಂಶಗಳ ಪ್ರಕಾರ ಭಾರತದ ಕೈಗಾರಿಕಾ ಉತ್ಪಾದನೆಯು ಆಗಸ್ಟ್‌ನಲ್ಲಿ ಶೇಕಡಾ 10.3 ರಷ್ಟು ಹೆಚ್ಚಾಗಿದೆ. ಕೈಗಾರಿಕಾ ಉತ್ಪಾದನೆಯ ಸೂಚ್ಯಂಕದಲ್ಲಿ (IIP) ಮಾಪನ ಮಾಡಲಾದ ಕಾರ್ಖಾನೆಯ ಉತ್ಪಾದನೆಯು ಆಗಸ್ಟ್ 2022 ರಲ್ಲಿ ಶೇಕಡಾ 0.7 ರಷ್ಟು ಸಂಕುಚಿತಗೊಂಡಿದೆ.

ರಾಷ್ಟ್ರೀಯ ಅಂಕಿಅಂಶ ಕಚೇರಿ (NSO) ಬಿಡುಗಡೆ ಮಾಡಿದ ಮಾಹಿತಿಯು 2023ರ ಆಗಸ್ಟ್ ತಿಂಗಳಲ್ಲಿ ಉತ್ಪಾದನಾ ವಲಯದ ಉತ್ಪಾದನೆಯು 9.3 ಪ್ರತಿಶತದಷ್ಟು ಹೆಚ್ಚಾಗಿದೆ ಎಂದು ಹೇಳಿದೆ. ಗಣಿಗಾರಿಕೆ ಉತ್ಪಾದನೆಯು 12.3 ಶೇಕಡಾ ಏರಿಕೆಯಾಗಿದೆ. ಆಗಸ್ಟ್ ತಿಂಗಳಲ್ಲಿ ವಿದ್ಯುತ್ ಉತ್ಪಾದನೆಯು ಶೇಕಡಾ 15.3 ರಷ್ಟು ಬೆಳವಣಿಗೆ ಕಂಡಿದೆ. 2022-23 ರ ಅದೇ ಅವಧಿಯಲ್ಲಿ ಶೇಕಡಾ 7.7 ಕ್ಕೆ ಹೋಲಿಸಿದರೆ 2023 ರ ಏಪ್ರಿಲ್-ಆಗಸ್ಟ್‌ನಲ್ಲಿ ಐಐಪಿ ಶೇ.6.1 ರಷ್ಟು ಹೆಚ್ಚಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ವಾಣಿಜ್ಯದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral Video: ವಿವಾಹ ಮಂಟಪದಲ್ಲಿ ನಾಗವಲ್ಲಿ ಅವತಾರ ತಾಳಿದ ವಧು; ವರ ಈಗ ಕೋಮಾದಲ್ಲಿದ್ದಾನೆ ಎಂದ ನೆಟ್ಟಿಗರು

Viral Video: ಅದ್ಧೂರಿ ಮದುವೆಯೊಂದನ್ನು ಆಯೋಜಿಸಲಾಗಿತ್ತು. ಎಲ್ಲವೂ ಅಂದುಕೊಂಡಂತೆ ನಡೆಯುತ್ತಿತ್ತು. ಆದರೆ ಇದ್ದಕ್ಕಿದ್ದಂತೆ ವಧು ವಿಚಿತ್ರವಾಗಿ ಆಡಲು ಶುರು ಮಾಡುತ್ತಾಳೆ. ಅದುವರೆಗೆ ಸಂತೋಷದಿಂದ ಕೂಡಿದ್ದ ಮದುವೆ ಹಾಲ್‌ ಗೊಂದಲದ ಗೂಡಾಗುತ್ತದೆ. ಸದ್ಯ ಈ ವಿಡಿಯೊ ವೈರಲ್‌ ಆಗಿದೆ.

VISTARANEWS.COM


on

Viral Video
Koo

ಬೆಂಗಳೂರು: ಮದುವೆ ಎನ್ನುವುದು ಸ್ವರ್ಗದಲ್ಲೇ ನಿಶ್ಚಯವಾಗಿರುತ್ತದೆ ಎನ್ನುವ ಮಾತಿದೆ. ಜತೆಗೆ ಭಾರತೀಯ ಸಂಸ್ಕೃತಿಯಲ್ಲಿ ಮದುವೆಗೆ ಮಹತ್ವದ ಸ್ಥಾನವಿದೆ. ಶಾಸ್ತ್ರೋಕ್ತವಾಗಿ ವಧು-ವರರು ವೈವಾಹಿಕ ಜೀವನಕ್ಕೆ ಕಾಲಿಡುತ್ತಾರೆ. ಈ ಅಪರೂಪದ ಘಳಿಗೆಯನ್ನು ಸ್ಮರಣೀಯವಾಗಿಸಲು ಮೊದಲೇ ಸಾಕಷ್ಟು ಸಿದ್ಧತೆ ನಡೆಸಲಾಗುತ್ತದೆ. ಆದರೆ ಕೆಲವೊಮ್ಮೆ ಮದುವೆ ಮನೆಯಲ್ಲಿ ನಡೆಯುವ ಎಡವಟ್ಟುಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡಿ ವೈರಲ್‌ ಆಗುತ್ತವೆ. ಸದ್ಯ ಅಂತಹದ್ದೇ ವಿಡಿಯೊವೊಂದು ಇಂಟರ್‌ನೆಟ್‌ನಲ್ಲಿ ಸದ್ದು ಮಾಡುತ್ತಿದೆ (Viral Video).

ಅದ್ಧೂರಿ ಮದುವೆಯೊಂದನ್ನು ಆಯೋಜಿಸಲಾಗಿತ್ತು. ಎಲ್ಲವೂ ಅಂದುಕೊಂಡಂತೆ ನಡೆಯುತ್ತಿತ್ತು. ಆದರೆ ಇದ್ದಕ್ಕಿದ್ದಂತೆ ವಧು ವಿಚಿತ್ರವಾಗಿ ಆಡಲು ಶುರು ಮಾಡುತ್ತಾಳೆ. ಅದುವರೆಗೆ ಸಂತೋಷದಿಂದ ಕೂಡಿದ್ದ ಮದುವೆ ಹಾಲ್‌ ಗೊಂದಲದ ಗೂಡಾಗುತ್ತದೆ. ಈ ವಿಡಿಯೊದ ಮೂಲ ಎಲ್ಲಿ ಎನ್ನುವುದು ಪತ್ತೆಯಾಗಿಲ್ಲ. ಸದ್ಯ ವೈರಲ್‌ ಆಗಿರುವ ಈ ವಿಡಿಯೊವನ್ನು ಈಗಾಗಲೇ ಲಕ್ಷಾಂತರ ಮಂದಿ ವೀಕ್ಷಿಸಿದ್ದಾರೆ.

ವಿಡಿಯೊದಲ್ಲಿ ಏನಿದೆ?

ಅ‍ದ್ಧೂರಿ ವಿವಾಹ ಮಂಟಪ. ಬಲ್ಪ್‌, ಹೂಗಳಿಂದ ಅಲಂಕರಿಸಿರುವ ಈ ಮಂಟಪದ ಆಸನದಲ್ಲಿ ಚೆನ್ನಾಗಿ ಮೇಕಪ್‌ ಮಾಡಿಕೊಂಡ ವಧು ಕೂತಿರುತ್ತಾಳೆ. ಆಕೆಯ ಎದುರು ವರ ನಿಂತಿದ್ದರೆ ಸುತ್ತ ನೆಂಟರಿಷ್ಟರು ನೆರೆದಿದ್ದಾರೆ. ಇದ್ದಕ್ಕಿದ್ದಂತೆ ವದು ಮೈಮೇಲೆ ದೆವ್ವ ಬಂದಂತೆ ಆಡಲು ಶುರು ಮಾಡುತ್ತಾಳೆ. ಕಣ್ಣನ್ನು ವಿಚಿತ್ರವಾಗಿ ತಿರುಗಿಸಿ ಅಕ್ಷರಶಃ ʼಆಪ್ತಮಿತ್ರʼ ಸಿನಿಮಾದಲ್ಲಿ ಬರುವ ನಾಗವಲ್ಲಿ ಅವತಾರ ತಾಳುತ್ತಾಳೆ. ಕೂದಲನ್ನು ಬಿಚ್ಚಿ ಹಾಕಿ ದೆವ್ವ ಮೈಮೇಲೆ ಬಂದವರು ಆಡುತ್ತಾರೆ ಎನ್ನುತ್ತಾರ ಹಾಗೆ ವರ್ತಿಸುತ್ತಾಳೆ. ಜತೆಗೆ ಜೋರಾಗಿ ನಗುತ್ತಾಳೆ. ಇದರಿಂದ ಬೆಚ್ಚಿಬೀಳುವ ವರ ಹಾರಿ ಬೀಳುತ್ತಾನೆ. ಸುತ್ತಲಿದ್ದವರು ಭಯ, ಗೊಂದಲದಲ್ಲಿ ಏನು ಮಾಡಬೇಕೆಂದು ತೋಚದೆ ದಿಗ್ಭ್ರಾಂತರಾಗಿ ನಿಲ್ಲುತ್ತಾರೆ. ಆಗ ಆಕೆಯ ಸಂಬಂಧಿಕರಿಬ್ಬರು ಧೈರ್ಯದಿಂದ ಮುಂದೆ ಬಂದು ಆಕೆಯನ್ನು ಹಿಡಿದುಕೊಳ್ಳುತ್ತಾರೆ. ಇವಿಷ್ಟು ವಿಡಿಯೊದಲ್ಲಿ ಕಂಡು ಬಂದಿದೆ.

ನೆಟ್ಟಿಗರು ಏನಂದ್ರು?

ಕೇವಲ 17 ಸೆಕೆಂಡ್‌ಗಳ ಈ ವಿಡಿಯೊದ ಬಗ್ಗೆಯೇ ಚರ್ಚೆ ಆರಂಭವಾಗಿದೆ. ಹಲವರು ವಿಡಿಯೊ ನೋಡಿ ಅಲ್ಲಿದ್ದವರಂತೆ ಶಾಕ್‌ಗೆ ಒಳಗಾಗಿದ್ದಾರೆ. ಪಾಪದ ವರ ಇದನ್ನು ನೋಡಿ ಕೋಮಾಕ್ಕೆ ಜಾರಿರಬೇಕು ಎನ್ನುವ ಕ್ಯಾಪ್ಶನ್‌ ನೀಡಿ ವಿಡಿಯೊ ಹಂಚಿಕೊಳ್ಳಲಾಗಿದೆ. ಕೆಲವರು ಇದನ್ನು ಪೂರ್ವ ನಿಯೋಜಿತ ಎಂದು ಕರೆದಿದ್ದಾರೆ. ಹೆಚ್ಚು ವ್ಯೂವ್ಸ್‌ ಪಡೆದುಕೊಳ್ಳಲು ಬೇಕಂತಲೇ ನಾಟಕ ಮಾಡಿದ್ದಾರೆ ಎಂದು ಹೇಳಿದ್ದಾರೆ. ವಿಡಿಯೊ ನೋಡಿದ ಕೆಲವರು ನಾಗವಲ್ಲಿ ಪಾತ್ರವನ್ನು ನೆಪಿಸಿಕೊಂಡಿದ್ದಾರೆ. ಇನ್ನು ಕೆಲವರು ಇದು ನಿಜವೆ? ಎಲ್ಲಿ ನಡೆದಿರುವುದು? ಮುಂತಾಗಿ ಪ್ರಶ್ನಿಸಿದ್ದಾರೆ.

ಇನ್ನೊಂದು ವಿಡಿಯೊ

ಇದೇ ರೀತಿಯ ಇನ್ನೊಂದು ಘಟನೆಯ ವಿಡಿಯೊ ಕೂಡ ಇದೀಗ ಸದ್ದು ಮಾಡುತ್ತಿದೆ. ಇದರಲ್ಲಿ ಈ ವಧು-ವರರಿಬ್ಬರು ವೇದಿಕೆ ಮೇಲೆ ಪರಸ್ಪರ ಹೊಡೆದಾಡಿಕೊಳ್ಳುತ್ತಿರುವುದು ಕಂಡು ಬಂದಿದೆ. ವರ ಚಪ್ಪಲಿ ಕೈಯಲ್ಲಿ ಹಿಡಿದು ಹಲ್ಲೆಗೆ ಮುಂದಾದರೆ ತಾನು ಯಾವುದರಲ್ಲಿಯೂ ಕಡಿಮೆ ಇಲ್ಲ ಎನ್ನುವಂತೆ ವಧು ಕೂಡ ಪ್ರತಿ ದಾಳಿ ನಡೆಸುತ್ತಾಳೆ. ಪಕ್ಕದಲ್ಲಿದ್ದವರು ತಡೆಯಲು ಪ್ರಯತ್ನಿಸಿದಷ್ಟೂ ಇಬ್ಬರ ಜಗಳ ತಾರಕಕ್ಕೆ ಏರುತ್ತದೆ. ಘಟನೆಯ ಸತ್ಯಾಸತ್ಯತೆ ಇನ್ನಷ್ಟೇ ತಿಳಿದು ಬರಬೇಕಿದ.

ಇದನ್ನೂ ಓದಿ: Viral Video: ಮದುವೆಗೆ ಬಂದ ಮಾಜಿ ಪ್ರಿಯಕರ; ಆಮೇಲೆ ನಡೆದಿದ್ದೇ ಬೇರೆ- ಸಿನಿಮಾ ಸ್ಟೈಲ್‌ನಲ್ಲಿ ಟ್ವಿಸ್ಟ್‌ ಎಂದ ನೆಟ್ಟಿಗರು

Continue Reading

ದೇಶ

Weather Updates: ಬಿಸಿಗಾಳಿ ಶಾಖಕ್ಕೆ ಕುಲುಮೆಯಂತಾದ ಉತ್ತರ ಭಾರತ..ದಕ್ಷಿಣದಲ್ಲಿ ವರುಣಾರ್ಭಟ- ಕೇರಳದಲ್ಲಿ ನಾಲ್ವರ ದುರ್ಮರಣ

Weather Updates: ರಾಜಸ್ಥಾನದ ಬಾರ್ಮರ್‌ ಪ್ರದೇಶದಲ್ಲಿ 48 ಡಿಗ್ರಿ ಸೆಲ್ಸಿಯಸ್‌ಗೆ ತಾಪಮಾನ ಏರಿಕೆ ಆಗಿದ್ದು, ಇದು ಈ ಬಾರಿ ಗರಿಷ್ಠ ತಾಪಮಾನ ಆಗಿದೆ. ಮುಂದಿನ ಕೆಲವು ದಿನಗಳಲ್ಲಿ ಈಶಾನ್ಯ ರಾಜ್ಯಗಳಲ್ಲೂ ತಾಪಮಾನ ಮೂರರಿಂದ ನಾಲ್ಕು ಡಿಗ್ರಿಯಷ್ಟು ಏರಿಕೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ(IMD) ಎಚ್ಚರಿಸಿದೆ. ಅಲ್ಲದೇ ಬಿಸಿಗಾಳಿಯ ಪ್ರಮಾಣವೂ ಹೆಚ್ಚಾಗಿದ್ದು, ಜನ ಎಚ್ಚರದಿಂದ ಇರುವಂತೆ ಸೂಚನೆ ನೀಡಿದೆ.

VISTARANEWS.COM


on

Weather Report
Koo

ನವದೆಹಲಿ: ದೇಶಾದ್ಯಂತ ಒಂದೆಡೆ ಬಿಸಿಲು(Heat wave) ಮತ್ತೊಂದೆಡೆ ಮಳೆರಾಯನ(Heavy Rain) ಅಬ್ಬರ ಜೋರಾಗಿದೆ. ದಕ್ಷಿಣ ಭಾರತದ ರಾಜ್ಯಗಳಲ್ಲಿ ಕೆಲವು ದಿನಗಳಿಂದ ಮಳೆಯ ಅಬ್ಬರ ಶುರುವಾಗಿದ್ದು, ಉತ್ತರಭಾರತದ ರಾಜ್ಯಗಳಲ್ಲಿ ಬಿಸಿಲಿನ ಬೇಗೆಗೆ ಜನ ಹೈರಾಣಾಗಿದ್ದಾರೆ(Weather Updates). ಉತ್ತರಭಾರತದಲ್ಲಿ ಬುಧವಾರ ಗರಿಷ್ಠ ತಾಪಮಾನ ದಾಖಲೆ ಆಗಿದ್ದು, ಅಧಿಕೃತ ಮಾಹಿತಿ ಪ್ರಕಾರ ದಿಲ್ಲಿ, ಪಂಜಾಬ್‌, ಹರ್ಯಾಣ, ರಾಜಸ್ಥಾನ, ಉತ್ತರಪ್ರದೇಶ, ಗುಜರಾತ್‌ ಮತ್ತು ಮಧ್ಯಪ್ರದೇಶದ ಒಟ್ಟು 24 ಪ್ರದೇಶಗಳಲ್ಲಿ ಬುಧವಾರ 45 ಡಿಗ್ರಿ ಸೆಲ್ಸಿಯಸ್‌ಗಿಂತಲೂ ಹೆಚ್ಚಿನ ತಾಪಮಾನ ದಾಖಲಾಗಿದೆ.

ರಾಜಸ್ಥಾನದ ಬಾರ್ಮರ್‌ ಪ್ರದೇಶದಲ್ಲಿ 48 ಡಿಗ್ರಿ ಸೆಲ್ಸಿಯಸ್‌ಗೆ ತಾಪಮಾನ ಏರಿಕೆ ಆಗಿದ್ದು, ಇದು ಈ ಬಾರಿ ಗರಿಷ್ಠ ತಾಪಮಾನ ಆಗಿದೆ. ಮುಂದಿನ ಕೆಲವು ದಿನಗಳಲ್ಲಿ ಈಶಾನ್ಯ ರಾಜ್ಯಗಳಲ್ಲೂ ತಾಪಮಾನ ಮೂರರಿಂದ ನಾಲ್ಕು ಡಿಗ್ರಿಯಷ್ಟು ಏರಿಕೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ(IMD) ಎಚ್ಚರಿಸಿದೆ. ಅಲ್ಲದೇ ಬಿಸಿಗಾಳಿಯ ಪ್ರಮಾಣವೂ ಹೆಚ್ಚಾಗಿದ್ದು, ಜನ ಎಚ್ಚರದಿಂದ ಇರುವಂತೆ ಸೂಚನೆ ನೀಡಿದೆ.

ಕೇರಳದಲ್ಲಿ ಭಾರೀ ಮಳೆ

ಮಧ್ಯ ಮತ್ತು ಉತ್ತರ ಕೇರಳದಾದ್ಯಂತ ಭಾರೀ ಮಳೆಯಾಗಿದ್ದು, 5 ಜಿಲ್ಲೆಗಳಿಗೆ ರೆಡ್ ಅಲರ್ಟ್, 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಕೇರಳದಲ್ಲಿ ಪೂರ್ವ ಮುಂಗಾರು ಅಬ್ಬರ ಜೋರಾಗಿದ್ದು, ಬುಧವಾರ ರಾತ್ರಿ ಸುರಿದ ಭಾರೀ ಮಳೆಗೆ ಕೊಚ್ಚಿಯ ಐಟಿ ಟೆಕ್ ಪಾರ್ಕ್ ಜಲಾವೃತ ಗೊಂಡಿದೆ. ಆಫೀಸ್ ಒಳಭಾಗದಲ್ಲಿ ನೀರು ನಿಂತಿದ್ದು, ಪರಿಣಾಮ ಟೆಕ್ಕಿಗಳು ಪರದಾಡಿದ್ದಾರೆ. ಇನ್ನು ಕೇರಳದ ತ್ರಿಶೂರ್ ಜಿಲ್ಲೆಯಲ್ಲಿರುವ ಗುರುವಾಯೂರು ಶ್ರೀಕೃಷ್ಣ ದೇವಸ್ಥಾನದ ಮುಂಭಾಗ ಕೂಡ ಜಲಾವೃತವಾಗಿದೆ. ಅಂಗಡಿಗಳಿಗೂ ನೀರು ನುಗ್ಗಿ ಅಸ್ತವ್ಯಸ್ತವಾಗಿತ್ತು. ಇನ್ನು ಭಾರೀ ಮಳೆಗೆ ಇದುವರೆಗೆ ನಾಲ್ವರು ಬಲಿ ಆಗಿದ್ದಾರೆ.

ಕೇರಳದಲ್ಲಿ ವಿಮಾನ ಸಂಚಾರಕ್ಕೆ ಸ್ಥಗಿತ

ಇನ್ನು ಕೇರಳದಲ್ಲಿ ಭಾರೀ ಮಳೆಯಿಂದಾಗಿ ವಿಮಾನ ಸಂಚಾರ ಸ್ಥಗಿತಗೊಂಡಿದೆ. ಪ್ರತಿಕೂಲ ಹವಾಮಾನದಿಂದಾಗಿ ಕಲ್ಲಿಕೋಟೆ ವಿಮಾನ ನಿಲ್ದಾಣದಿಂದ ಹೊರಡಬೇಕಾಗಿದ್ದ ವಿಮಾನಗಳ ಸಂಚಾರ ಅಸ್ತವ್ಯಸ್ತಗೊಂಡಿದೆ. ದೋಹಾ, ಮಸ್ಕತ್‌, ದುಬೈ, ದಾಮನ್‌ ಮತ್ತು ರಿಯಾಧ್‌ನಿಂದ ಬರುತ್ತಿದ್ದ ವಿಮಾನಗಳನ್ನು ಡೈವರ್ಟ್‌ ಮಾಡಲಾಗಿದೆ. ಭಾರೀ ಮಳೆಯಿಂದಾಗಿ ಜೆಡ್ಡಾ, ಕುವೈತ್ ಮತ್ತು ದುಬೈಗೆ ಹೋಗುವ ವಿಮಾನಗಳು ವಿಳಂಬವಾಗಿದ್ದರೆ, ದೋಹಾಗೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವನ್ನು ರದ್ದುಗೊಳಿಸಲಾಗಿದೆ.

ಇದನ್ನೂ ಓದಿ:Lok Sabha Election 2024: ಉತ್ತರ ಕನ್ನಡ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಎಂಇಎಸ್‌ನಿಂದ ನಿರಂಜನ್ ಸರ್ದೇಸಾಯಿ ಸ್ಪರ್ಧೆ

ಒಡಿಶಾದಲ್ಲಿ ಈ ವಾರ ಭಾರೀ ಮಳೆ

ಇನು ಒಡಿಶಾದಲ್ಲೂ ಈ ವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಅಂದಾಜಿಸಿದೆ. ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ಉಂಟಾಗಿದ್ದು, ಅದರ ಪ್ರಭಾವದಿಂದ ಉತ್ತರ ಒಡಿಶಾ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಬುಧವಾರ ತಿಳಿಸಿದೆ.

Continue Reading

ಕ್ರೈಂ

Physical Abuse & Murder: ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಬರ್ಬರವಾಗಿ ಕೊಲೆ; ದೃಶ್ಯಂ ಸಿನಿಮಾ ರೀತಿಯಲ್ಲಿ ಎಸ್ಕೇಪ್‌ಗೆ ಯತ್ನ

Physical Abuse & Murder: ಮಧ್ಯಪ್ರದೇಶದ ಬುರ್ಹಾನ್ಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಗೌರವ್‌ ಅಲಿಯಾಸ್‌ ಕುಶಾಲ್‌ ಎಂಬ ಯುವಕ ಪುಟ್ಟ ಬಾಲಕಿಯ ಮೇಲೆ ಕ್ರೌರ್ಯ ಮೆರೆದಿದ್ದು, ಬಳಿಕ ಉಸಿರುಗಟ್ಟಿಸಿ ಕೊಂದಿದ್ದಾನೆ. ಇದಕ್ಕೂ ಮುನ್ನ ಗೌರವ್‌ ತನ್ನ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋವೊಂದನ್ನು ನೋಡಿದ್ದ. ಅದನ್ನು ನೋಡಿದ ನಂತರ ಆತನಿಗೆ ತನ್ನ ಮೇಲೆ ನಿಯಂತ್ರಣ ಇಲ್ಲದಂತಾಗಿತ್ತು. ಹೀಗಾಗಿ ಅವನು ಮನೆಯ ಹೊರಗೆ ಆಟವಾಡುತ್ತಿದ್ದ ಆರು ವರ್ಷದ ಬಾಲಕಿಯನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ನಂತರ ತನ್ನ ಕೃತ್ಯ ಎಲ್ಲಿ ಬಯಲಾಗುತ್ತದೋ ಎಂಬ ಭಯದಲ್ಲಿ ಬಾಲಕಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.

VISTARANEWS.COM


on

physical abuse & murder
Koo

ಮಧ್ಯಪ್ರದೇಶ: ಆಧುನಿಕ ಕಾಲಘಟ್ಟ, ಬದಲಾದ ತಂತ್ರಜ್ಞಾನವು (Technology) ಒಂದೆಡೆ ಒಲಿತನ್ನು ಮಾಡುತ್ತಿದ್ದರೆ, ಮತ್ತೊಂದೆಡೆ ಸಮಾಜ, ಮೌಲ್ಯಗಳ ಅಧಃಪತನಕ್ಕೆ ಕಾರಣವಾಗುತ್ತಿದೆ. ಹಿಂದೆ ಸಿನಿಮಾಗಳನ್ನು ಮನೋರಂಜನೆಗಾಗಿ, ಸಾಮಾಜಿಕ ಮೌಲ್ಯಗಳ ಅರಿವಿಗಾಗಿ ನೋಡುತ್ತಿದ್ದ ಕಾಲಘಟ್ಟವೊಂದಿತ್ತು. ಆದರೆ ಈಗ ಅದೇ ಸಿನಿಮಾದಿಂದ ಪ್ರೇರಿತರಾಗಿ ಅಪರಾಧ ಕೃತ್ಯಗಳನ್ನು ಎಸಗುತ್ತಿರುವ ಘಟನೆಗಳು ಆಗಾಗ ಕಣ್ಣೆದುರು ಬರುತ್ತಿರುತ್ತವೆ. ಇದಕ್ಕೆ ನಿದರ್ಶನ ಎಂಬಂತೆ ಮಧ್ಯಪ್ರದೇಶದಲ್ಲಿ 21ವರ್ಷದ ಯುವಕನೋರ್ವ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸೆದು ಕೊಲೆಗೈದು(Physical Abuse & Murder) ಬಳಿಕ ದೃಶ್ಯಂ(Drishyam) ಸಿನಿಮಾ ಶೈಲಿನಲ್ಲಿ ಪೊಲೀಸರಿಂದ ಎಸ್ಕೇಪ್‌ ಆಗಲು ಯತ್ನಿಸಿದ್ದಾನೆ.

ಘಟನೆ ವಿವರ:

ಮಧ್ಯಪ್ರದೇಶದ ಬುರ್ಹಾನ್ಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಗೌರವ್‌ ಅಲಿಯಾಸ್‌ ಕುಶಾಲ್‌ ಎಂಬ ಯುವಕ ಪುಟ್ಟ ಬಾಲಕಿಯ ಮೇಲೆ ಕ್ರೌರ್ಯ ಮೆರೆದಿದ್ದು, ಬಳಿಕ ಉಸಿರುಗಟ್ಟಿಸಿ ಕೊಂದಿದ್ದಾನೆ. ಇದಕ್ಕೂ ಮುನ್ನ ಗೌರವ್‌ ತನ್ನ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋವೊಂದನ್ನು ನೋಡಿದ್ದ. ಅದನ್ನು ನೋಡಿದ ನಂತರ ಆತನಿಗೆ ತನ್ನ ಮೇಲೆ ನಿಯಂತ್ರಣ ಇಲ್ಲದಂತಾಗಿತ್ತು. ಹೀಗಾಗಿ ಅವನು ಮನೆಯ ಹೊರಗೆ ಆಟವಾಡುತ್ತಿದ್ದ ಆರು ವರ್ಷದ ಬಾಲಕಿಯನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ನಂತರ ತನ್ನ ಕೃತ್ಯ ಎಲ್ಲಿ ಬಯಲಾಗುತ್ತದೋ ಎಂಬ ಭಯದಲ್ಲಿ ಬಾಲಕಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.

ದೃಶ್ಯಂ ಶೈಲಿಯಲ್ಲಿ ಎಸ್ಕೇಪ್‌ ಆಗಲು ಪ್ಲ್ಯಾನ್‌

ಬಾಲಕಿಯನ್ನು ಕೊಲೆ ಮಾಡಿದ ಬಳಿಕ ಗೌರವ್‌ ಬಾಲಿವುಡ್‌ ಖ್ಯಾತ ಸಿನಿಮಾ ದೃಶ್ಯಂ ಶೈಲಿಯಲ್ಲೇ ಎಸ್ಕೇಪ್‌ ಆಗಲು ಯತ್ನಿಸಿದ್ದಾನೆ. ಕೃತ್ಯ ಎಸಗಿದ ನಂತರ ಆತ ನೇರವಾಗಿ ಜಿಮ್‌ಗೆ ಹೋಗಿದ್ದಾನೆ. ಅಲ್ಲಿಂದ ನೇರವಾಗಿ ಒಂದು ಧಾರ್ಮಿಕ ಕಾರ್ಯಕ್ರಮಕ್ಕೆ ತೆರಳಿದ್ದಾನೆ. ಅಲ್ಲಿ ಸುಮಾರು ಹೊತ್ತು ಕಳೆದಿದ್ದಾನೆ. ಹೀಗೆ ಘಟನೆ ವೇಳೆ ತಾನು ಆ ಸ್ಥಳದಲ್ಲೇ ಇರಲಿಲ್ಲ ಎಂಬುದನ್ನು ಪೊಲೀಸರಿಗೆ ನಂಬಿಸುವ ಪ್ರಯತ್ನ ಮಾಡಿದ್ದ. ಮಗುವಿನ ಮೃತ ಸಿಗುತ್ತಿದ್ದಂತೆ ಪೊಲೀಸರು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದು, ಆಕೆಯ ಮೇಲೆ ಅತ್ಯಾಚಾರ ನಡೆದಿತ್ತು ಎಂಬುದು ಸ್ಪಷ್ಟವಾಗಿತ್ತು. ಅನುಮಾನದ ಮೇರೆ ಯುವಕನನ್ನು ವಿಚಾರಣೆಗೊಳಪಡಿಸಿದಾಗ ಕೃತ್ಯ ಎಸಗಿರುವ ಬಗ್ಗೆ ಬಾಯ್ಬಿಟ್ಟಿದ್ದಾನೆ. ಅದ್ಯ ಗೌರವ್‌ನನ್ನು ಅರೆಸ್ಟ್‌ ಮಾಡಲಾಗಿದ್ದು, ಆತನ ವಿರುದ್ಧ ಪೋಕ್ಸೋ ಕಾಯಿದೆಯಲ್ಲಿ ಕೇಸ್‌ ದಾಖಲಿಸಲಾಗಿದೆ.

ಇದನ್ನೂ ಓದಿ: Viral Video: ಸುಡುವ ಮರಳಿನಲ್ಲಿ ಹಪ್ಪಳ ಸುಟ್ಟ ಬಿಎಸ್‌ಎಫ್‌ ಯೋಧ; ಎಲ್ಲೆಡೆ ಇದೇ ವಿಡಿಯೋ ವೈರಲ್‌

ಮಹಾರಾಷ್ಟ್ರದಲ್ಲೂ ಎರಡು ದಿನಗಳ ಹಿಂದೆ ಇಂತಹದ್ದೇ ಒಂದು ಘಟನೆ ಬೆಳಕಿಗೆ ಬಂದಿದ್ದು, 13 ವರ್ಷದ ಬಾಲಕನೊಬ್ಬ ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರಗಳನ್ನು ನೋಡಿ 15 ವರ್ಷದ ಅಕ್ಕನ ಮೇಲೆಯೇ ಅತ್ಯಾಚಾರ ಎಸಗಿದ್ದಾನೆ. ಕಳೆದ ಡಿಸೆಂಬರ್‌ನಲ್ಲಿ ಅಕ್ಕ ಹಾಗೂ ತಮ್ಮ ಒಟ್ಟಿಗೆ ಕುಳಿತು ಮೊಬೈಲ್‌ನಲ್ಲಿ ನೀಲಿ ಚಿತ್ರಗಳನ್ನು ವೀಕ್ಷಿಸಿದ್ದಾರೆ. ಇದಾದ ಬಳಿಕ ಇಬ್ಬರೂ ಸೆಕ್ಸ್‌ ಮಾಡಲು ಪ್ರಯತ್ನಿಸಿದ್ದಾರೆ. ಇನ್ನು ಜನವರಿಯಲ್ಲಿ ಬಾಲಕನು ಮತ್ತೆ ವಿಡಿಯೊಗಳನ್ನು ನೋಡಿದ್ದು, ಅದಾದ ನಂತರ ಅಕ್ಕ ಬೇಡ ಎಂದರೂ ಕೇಳದೆ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರದ ಬಳಿಕ ಬಾಲಕಿಯ ಋತುಸ್ರಾವ ಆಗಿಲ್ಲ. ಇದರಿಂದ ಗಾಬರಿಗೊಂಡ ಬಾಲಕಿಯು ತನ್ನ ತಾಯಿಗೆ ವಿಷಯ ತಿಳಿಸಿದ್ದಾಳೆ. ನಂತರ ಅವರು ಆಸ್ಪತ್ರೆಗೆ ತೆರಳಿ ಗರ್ಭಪಾತ ಮಾಡಿಸಲು ಮುಂದಾಗಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.

Continue Reading

ಕ್ರೈಂ

Prajwal Revanna Case: ಪ್ರಜ್ವಲ್‌ ಪಾಸ್‌ಪೋರ್ಟ್‌ ರದ್ದತಿಗಾಗಿ ಪಿಎಂಗೆ ಸಿದ್ದರಾಮಯ್ಯ ಇನ್ನೊಂದು ಪತ್ರ; ಚುರುಕಾದ ವಿದೇಶಾಂಗ ಇಲಾಖೆ

Prajwal Revanna Case: ರಾಜ್ಯ ಸರ್ಕಾರದ ಪತ್ರ ಆಧರಿಸಿ ಕೆಲಸಕ್ಕೆ ಆರಂಬಿಸಿರುವ ಕೇಂದ್ರ ವಿದೇಶಾಂಗ ಇಲಾಖೆ, ಪ್ರಜ್ವಲ್‌ ರೇವಣ್ಣ ಪಾಸ್‌ಪೋರ್ಟ್‌ ರದ್ದು ಮಾಡುವ ಪ್ರಕ್ರಿಯೆ ಆರಂಭಿಸಿದೆ. ಪಾಸ್‌ಪೋರ್ಟ್ ಆಕ್ಟ್ 1967ರ ಸೆಕ್ಷನ್ 10(3)(h) ಅಡಿ ಪಾಸ್‌ಪೋರ್ಟ್ ರದ್ದು ಮಾಡಿ. ಭಾರತಕ್ಕೆ ವಾಪಸ್ ಕರೆ ತರಲು ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿ ಪತ್ರದ ಮೂಲಕ ಕೇಂದ್ರದ ಸಹಕಾರವನ್ನು ಸಿಎಂ ಸಿದ್ದರಾಮಯ್ಯ ಕೋರಿದ್ದಾರೆ.

VISTARANEWS.COM


on

Prajwal Revanna case Siddaramaiah writes to PM narendra Modi
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ (Prajwal Revanna Case) ಕೇಂದ್ರ ಸರಕಾರದ ವಿರುದ್ಧ ರಾಜತಾಂತ್ರಿಕ ಸಮರದ ಹಾದಿ ಹಿಡಿದಿರುವ ಕರ್ನಾಟಕ ಸರ್ಕಾರ, ಇನ್ನೊಂದು ಪತ್ರವನ್ನು ರವಾನಿಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಅವರಿಗೆ ಮತ್ತೊಂದು ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ (CM Siddaramaiah), ಪ್ರಜ್ವಲ್ ರೇವಣ್ಣನ ರಾಜತಾಂತ್ರಿಕ ಪಾಸ್‌ಪೋರ್ಟ್ (Diplomatic passport) ರದ್ದು ಮಾಡಿ ಎಂದು ಮನವಿ ಮಾಡಿದ್ದಾರೆ.

ರಾಜ್ಯ ಸರ್ಕಾರದ ಪತ್ರ ಆಧರಿಸಿ ಕೆಲಸಕ್ಕೆ ಆರಂಬಿಸಿರುವ ಕೇಂದ್ರ ವಿದೇಶಾಂಗ ಇಲಾಖೆ, ಪ್ರಜ್ವಲ್‌ ರೇವಣ್ಣ ಪಾಸ್‌ಪೋರ್ಟ್‌ ರದ್ದು ಮಾಡುವ ಪ್ರಕ್ರಿಯೆ ಆರಂಭಿಸಿದೆ. ಪಾಸ್‌ಪೋರ್ಟ್ ಆಕ್ಟ್ 1967ರ ಸೆಕ್ಷನ್ 10(3)(h) ಅಡಿ ಪಾಸ್‌ಪೋರ್ಟ್ ರದ್ದು ಮಾಡಿ. ಭಾರತಕ್ಕೆ ವಾಪಸ್ ಕರೆ ತರಲು ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿ ಪತ್ರದ ಮೂಲಕ ಕೇಂದ್ರದ ಸಹಕಾರವನ್ನು ಸಿಎಂ ಸಿದ್ದರಾಮಯ್ಯ ಕೋರಿದ್ದಾರೆ. ಎಸ್‌ಐಟಿ ಹೊರಡಿಸಿದ ಆರೆಸ್ಟ್‌ ವಾರೆಂಟ್‌ ಸಮೇತ ಪತ್ರದ ಜೊತೆಗೆ ಲಗತ್ತಿಸಲಾಗಿದೆ.

ಪ್ರಕರಣ ಪ್ರಧಾನ ಆರೋಪಿಯಾಗಿರುವ ಪ್ರಜ್ವಲ್‌ ರೇವಣ್ಣ ಹಾಲಿ ಸಂಸದ ಹಾಗೂ ಮಾಜಿ ಪ್ರಧಾನಿಗಳ ಕುಟುಂಬದ ಸದಸ್ಯನಾಗಿದ್ದು, ರಾಜತಾಂತ್ರಿಕ ಪಾಸ್‌ಪೋರ್ಟ್ ಬಳಸಿ ಪ್ರಯಾಣ ಮಾಡಿದ್ದಾರೆ. FIR ದಾಖಲಾಗುವ ಕೆಲ ಗಂಟೆಗಳಿಗೆ ಮುನ್ನ ದೇಶ ತೊರೆದಿದ್ದಾರೆ. ಅವರ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಒತ್ತಾಯ ಪೂರ್ವಕವಾಗಿ ವಿಡಿಯೋ ಮಾಡಿರುವ ಆರೋಪಗಳಿವೆ. ಇಂತಹ ಆರೋಪಿ ರಾಜತಾಂತ್ರಿಕ ಪಾಸ್‌ಪೋರ್ಟ್ ಬಳಸಿ ಕಾನೂನು ಕ್ರಮಗಳಿಂದ ತಪ್ಪಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಆರೋಪಿ ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಮಾಡಿ. ಈ ವಿಚಾರವನ್ನು ಅತ್ಯಂತ ಗಂಭೀರ ಎಂದು ಪರಿಗಣಿಸಿ. ಸಾರ್ವಜನಿಕ ಹಿತಾಸಕ್ತಿ ಕಾರಣಕ್ಕಾಗಿ ಪಾಸ್‌ಪೋರ್ಟ್ ರದ್ದುಗೊಳಿಸಿ ಭಾರತಕ್ಕೆ ಬರುವಂತೆ ಮಾಡಿ ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ.

ಇದು ಸಿಎಂ ಕೇಂದ್ರಕ್ಕೆ ಎರಡನೇ ಬಾರಿ ಬರೆಯುತ್ತಿರುವ ಪತ್ರವಾಗಿದೆ. ಈ ಹಿಂದೆಯೂ ಒಮ್ಮೆ ಅವರು ಪತ್ರ ಬರೆದಿದ್ದರು. ಪ್ರಕರಣದ ಪ್ರಮುಖ ಆರೋಪಿ ಜೆಡಿಎಸ್‌ ಸಂಸದರಾಗಿದ್ದು, ಜೆಡಿಎಸ್‌ ಜತೆಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿಯನ್ನು ಮುಜುಗರ ಹಾಗೂ ಇಕ್ಕಟ್ಟಿಗೆ ಸಿಕ್ಕಿಸುವುದು ಈ ಪತ್ರಗಳ ಉದ್ದೇಶವಾಗಿದೆ ಎಂದು ವಿಶ್ಲೇಷಿಸಲಾಗಿದೆ.

ಈ ಬಾರಿ ವಿದೇಶಾಂಗ ಇಲಾಖೆ ಪ್ರಕ್ರಿಯೆ ಚುರುಕುಗೊಳಿಸಿರುವುದರಿಂದ, ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್‌ಗೆ ನಿಜವಾಗಿಯೂ ಸಂಕಷ್ಟ ಎದುರಾಗಿದೆ. ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದು ಮಾಡಿದರೆ ಪ್ರಜ್ವಲ್‌ ವಿದೇಶ ಯಾನ ಕಷ್ಟವಾಗಲಿದೆ. ಚಾಲ್ತಿಯಲ್ಲಿಲ್ಲದ ಪಾಸ್‌ಪೋರ್ಟ್‌ ಬಳಸಿದರೆ ಅಧಿಕಾರಿಗಳು ಅವರನ್ನು ಬಂಧಿಸಿ ಭಾರತಕ್ಕೆ ಹಸ್ತಾಂತರಿಸಲು ಸುಲಭವಾಗಲಿದೆ. ಇದರೊಂದಿಗೆ ಪ್ರಜ್ವಲ್‌ಗೆ ಪಲಾಯನದ ದಾರಿಗಳು ಬಂದ್‌ ಆಗಿವೆ.

ವಿದೇಶಾಂಗ ಇಲಾಖೆಗೆ ಎಸ್‌ಐಟಿ ಪತ್ರ

ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ವಿದೇಶದಲ್ಲಿ ತಲೆಮರೆಸಿಕೊಂಡ ಹಿನ್ನೆಲೆಯಲ್ಲಿ ನಗರದ 42ನೇ ಎಸಿಎಂಎಂ ಕೋರ್ಟ್‌, ಇತ್ತೀಚೆಗೆ ಸಂಸದನ ವಿರುದ್ಧ ಬಂಧನ ವಾರಂಟ್‌ ಹೊರಡಿಸಿ, ಪಾಸ್‌ಪೋರ್ಟ್ ಕ್ಯಾನ್ಸಲ್ ಮಾಡಲು ಅನುಮತಿ ನೀಡಿತ್ತು. ಹೀಗಾಗಿ‌ ಪ್ರಜ್ವಲ್ ಪಾಸ್‌ ಪೋರ್ಟ್ ರದ್ದು ಮಾಡುವಂತೆ ಕೋರಿ, ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಎಸ್‌ಐಟಿ ಪತ್ರ ಬರೆದಿದೆ.

ಈ ಕೂಡಲೇ ಸಂಸದ ಪ್ರಜ್ವಲ್‌ ರೇವಣ್ಣ ಅವರ ಪಾಸ್ ಪೋರ್ಟ್ ರದ್ದು ಮಾಡಬೇಕು ಎಂದು ಮನವಿ ಮಾಡಿರುವ ಎಸ್‌ಐಟಿ, ಲುಕ್ ಔಟ್ ನೋಟಿಸ್, ಬ್ಲೂ ಕಾರ್ನರ್ ನೋಟಿಸ್ ಎಲ್ಲವನ್ನೂ ಪತ್ರದ ಜತೆ ಟ್ಯಾಗ್ ಮಾಡಿದೆ. ಜತೆಗೆ ಪ್ರಜ್ವಲ್ ವಿರುದ್ಧದ ಪ್ರಕರಣಗಳ ಬಗ್ಗೆ ವಿದೇಶಾಂಗ ಇಲಾಖೆಗೆ ಮಾಹಿತಿ ನೀಡಿದ್ದು, ಸಂಸದ ಯಾವ ದೇಶದಲ್ಲಿ ಇದ್ದಾನೆ ಎಂಬ ಮಾಹಿತಿ ನೀಡುವಂತೆ ಮನವಿ ಮಾಡಿದೆ.

ಇದನ್ನೂ ಓದಿ: Prajwal Revanna Case: 400 ಮಹಿಳೆಯರ ಮೇಲೆ ಪ್ರಜ್ವಲ್‌ ಮಾಸ್‌ ರೇಪ್‌ ಆರೋಪ; ರಾಹುಲ್ ಗಾಂಧಿ ವಿರುದ್ಧ ಡಿಜಿಗೆ ಜೆಡಿಎಸ್‌ ದೂರು

Continue Reading
Advertisement
Self Harming
ಚಿಕ್ಕೋಡಿ44 seconds ago

Self Harming : ಮದುವೆಗೆ ವಧು ಸಿಕ್ಕಿಲ್ಲವೆಂದು ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

Viral Video
ವೈರಲ್ ನ್ಯೂಸ್10 mins ago

Viral Video: ವಿವಾಹ ಮಂಟಪದಲ್ಲಿ ನಾಗವಲ್ಲಿ ಅವತಾರ ತಾಳಿದ ವಧು; ವರ ಈಗ ಕೋಮಾದಲ್ಲಿದ್ದಾನೆ ಎಂದ ನೆಟ್ಟಿಗರು

ರಾಜಕೀಯ25 mins ago

Diplomatic passport: ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌? ಕೇಂದ್ರ ರದ್ದು ಮಾಡಿದರೆ ಪ್ರಜ್ವಲ್‌ ರೇವಣ್ಣ ಅರೆಸ್ಟ್!

Weather Report
ದೇಶ30 mins ago

Weather Updates: ಬಿಸಿಗಾಳಿ ಶಾಖಕ್ಕೆ ಕುಲುಮೆಯಂತಾದ ಉತ್ತರ ಭಾರತ..ದಕ್ಷಿಣದಲ್ಲಿ ವರುಣಾರ್ಭಟ- ಕೇರಳದಲ್ಲಿ ನಾಲ್ವರ ದುರ್ಮರಣ

Prajwal Revanna Case Passport Cancellation Process Begins Arrest of Prajwal is certain
ಪ್ರಮುಖ ಸುದ್ದಿ33 mins ago

Prajwal Revanna Case: ಪಾಸ್‌ಪೋರ್ಟ್‌ ರದ್ದತಿ ಪ್ರಕ್ರಿಯೆ ಶುರು; ಪ್ರಜ್ವಲ್‌ ರೇವಣ್ಣ ಬಂಧನ ಖಚಿತ

ಗುರು ಸಕಲಮಾ guru sakalamaa
ಕರ್ನಾಟಕ39 mins ago

ಹಿಮಾಲಯ ಋಷಿಗಳ ದಿವ್ಯ ಸಂದೇಶಗಳು- ಇವು ಗುರು ಸಕಲಮಾ ಬದುಕಿನ ಅಧ್ಯಾಯಗಳು!

Road Accident in Vijayanagara
ಕ್ರೈಂ41 mins ago

Road Accident : ಬೈಕ್‌ ಸ್ಕಿಡ್‌ ಆಗಿ ಕಂದಕಕ್ಕೆ ಬಿದ್ದ ಸವಾರ ಮೃತ್ಯು; ಕೆರೆಗೆ ಕಾರು ಹಾರಿಸಿ ಪ್ರಾಣಬಿಟ್ಟ ಚಾಲಕ

RCB Funny Memes
ಕ್ರೀಡೆ1 hour ago

RCB Funny Memes: ಕೊನೆಗೊಂಡ ಆರ್​ಸಿಬಿಯ ಹೊಸ ಅಧ್ಯಾಯ; ಟ್ರೋಲ್​, ಮೀಮ್ಸ್​ಗಳ ಮೂಲಕವೇ ತಿರುಗೇಟು ಕೊಟ್ಟ ಚೆನ್ನೈ ಅಭಿಮಾನಿಗಳು

Hamas Terrorists
ವಿದೇಶ1 hour ago

ಎಲ್ಲೆ ಮೀರಿದ ಹಮಾಸ್‌ ಉಗ್ರರ ಅಟ್ಟಹಾಸ; ಗಾಯಗೊಂಡ ಇಸ್ರೇಲಿ ಮಹಿಳಾ ಸೈನಿಕರ ಮೇಲೆ ಲೈಂಗಿಕ ದೌರ್ಜನ್ಯ: ಭಯಾನಕ ವಿಡಿಯೊ ಇಲ್ಲಿದೆ

PM Narendra Modi
Lok Sabha Election 20241 hour ago

PM Narendra Modi: ಪ್ರಧಾನಿ ಮೋದಿ ರ್‍ಯಾಲಿಯಲ್ಲಿ ಜನವೋ…ಜನ! ಅದ್ಭುತ ದೃಶ್ಯ ಕ್ಯಾಮೆರಾದಲ್ಲಿ ಸೆರೆ-ವಿಡಿಯೋ ವೈರಲ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ8 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 day ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು2 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು2 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ3 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ4 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ4 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ4 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ6 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌