ಐಶ್ವರ್ಯ ರಾಯ್‌ಗೆ ಪ್ರತ್ಯೇಕ ಮನೆ ಮಾಡಿಕೊಡಲು ಕೌಟುಂಬಿಕ ನ್ಯಾಯಾಲಯ ಆದೇಶ! ಏನಿದು ಪ್ರಕರಣ? - Vistara News

ಕೋರ್ಟ್

ಐಶ್ವರ್ಯ ರಾಯ್‌ಗೆ ಪ್ರತ್ಯೇಕ ಮನೆ ಮಾಡಿಕೊಡಲು ಕೌಟುಂಬಿಕ ನ್ಯಾಯಾಲಯ ಆದೇಶ! ಏನಿದು ಪ್ರಕರಣ?

Family Court: ಬಿಹಾರದ ಸಚಿವ ತೇಜ್ ಪ್ರತಾಪ್ ಅವರು ತಮ್ಮ ಪತ್ನಿ ವಿರುದ್ಧ ಕೌಟುಂಬಿಕ ದೌರ್ಜನ್ಯ ಎಸಗಿದ್ದಾರೆಂದು ಪಾಟ್ನಾ ಕೌಟುಂಬಿಕ ನ್ಯಾಯಾಲಯವು ಹೇಳಿದೆ.

VISTARANEWS.COM


on

Family court order to tej pratap to provide separate house to Aishwarya Rai
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪಾಟ್ನಾ, ಬಿಹಾರ: ಆರ್‌ಜೆಡಿಯ ವರಿಷ್ಠ ನಾಯಕ ಲಾಲು ಪ್ರಸಾದ್ ಯಾದವ್ (RJD Leader Lalu Prasad Yadav) ಅವರ ಹಿರಿಯ ಪುತ್ರ, ಬಿಹಾರದ ಸಚಿವ ತೇಜ್ ಪ್ರತಾಪ್ (Minister Tej Pratap Yadav) ಅವರು ತಮ್ಮ ಪತ್ನಿ ಐಶ್ವರ್ಯ ರಾಯ್‌ (Aishwarya Rai) ವಿರುದ್ಧ ಕೌಟುಂಬಿಕ ದೌರ್ಜನ್ಯ ಎಸಗಿದ್ದಾರೆ (domestic violence) ಎಂದು ಪಾಟ್ನಾದ ಕೌಟುಂಬಿಕ ನ್ಯಾಯಾಲಯವು (Family Court) ತೀರ್ಪು ನೀಡಿದೆ. ಕೌಟುಂಬಿಕ ಹಿಂಸಾಚಾರ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ರಕ್ಷಣೆಗಾಗಿ ಐಶ್ವರ್ಯಾ ಸಲ್ಲಿಸಿದ ಅರ್ಜಿಯನ್ನು ಅನುಮತಿಸಿರುವ ನ್ಯಾಯಾಲಯವು, ತೇಜ್ ಅವರ ಪತ್ನಿ ಐಶ್ವರ್ಯ ರಾಯ್ ಅವರಿಗೆ ತಿಂಗಳೊಳಗೇ ಪರ್ಯಾಯ ವಸತಿ ವ್ಯವಸ್ಥೆ ಮಾಡುವಂತೆ ಸೂಚಿಸಿದೆ.

ಐಶ್ವರ್ಯ ರಾಯ್ ಅವರ ವಿದ್ಯುತ್, ನೀರು ಪೂರೈ ಮತ್ತು ಇತರ ಎಲ್ಲ ಸೌಲಭ್ಯಗಳ ವೆಚ್ಚವನ್ನು ತೇಜ್ ಪ್ರತಾಪ್ ಅವರೇ ಭರಿಸಬೇಕು. ತೇಜ್ ಪ್ರತಾಪ್ ಅವರು ತಮ್ಮ ಪತ್ನಿಗೆ ಮನೆ ಪ್ರವೇಶಿಸುವುದನ್ನು ತಡೆದಿರುವುದು ಮೇಲ್ನೋಟಕ್ಕೆ ಕೌಟುಂಬಿಕ ದೌರ್ಜನ್ಯ ಎಂಬುದು ಸಾಬೀತಾಗುತ್ತದೆ. ರಾಬ್ರಿ ದೇವಿಗೆ ಮಂಜೂರು ಮಾಡಲಾದ ವಸತಿ ಬಂಗಲೆಯು ಐಶ್ವರ್ಯ ರಾಯ್ ಅವರ ವೈವಾಹಿಕ ಮನೆಯಾಗಿದ್ದು, ಅದನ್ನು “ಹಂಚಿದ ಮನೆ” ಯಾಗಿ ಬಳಸಿಕೊಳ್ಳಲು ಅವಳು ಬಳಸುವ ವಿದ್ಯುತ್, ನೀರು ಸರಬರಾಜು ಮತ್ತು ಇತರ ಸೌಕರ್ಯಗಳ ಎಲ್ಲಾ ವೆಚ್ಚಗಳನ್ನು ಸಹ ಅವನು ಭರಿಸಬೇಕು ಎಂದು ಕೋರ್ಟ್ ಹೇಳಿದೆ.

ಬಿಹಾರದ ಸರ್ಕಾರದಲ್ಲಿ ತೇಜ್ ಪ್ರತಾಪ್ ಅವರು ಪರಿಸರ, ಅರಣ್ಯ ಹಾಗೂ ಹವಾಮಾನ ಇಲಾಖೆಯ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರ ಸಹೋದರ ತೇಜಸ್ವಿ ಯಾದವ್ ಅವರು ಬಿಹಾರ ಉಪಮುಖ್ಯಮಂತ್ರಿಯಾಗಿದ್ದಾರೆ. ಬಿಹಾರದ ಮಾಜಿ ಸಿಎಂ ದರೋಗಾ ಪ್ರಸಾದ್ ರೈ ಅವರ ಮೊಮ್ಮಗಳಾದ ಐಶ್ವರ್ಯ ರಾಯ್ ಅವರನ್ನು ತೇಜ್ ಪ್ರತಾಪ್ ಅವರು 2018ರಲ್ಲಿ ವಿವಾಹವಾಗಿದ್ದರು.

ಈ ಸುದ್ದಿಯನ್ನೂ ಓದಿ: Bhai Bhatijavaad | ಮೋದಿ ʼಪರಿವಾರವಾದʼ ಟೀಕೆ ಬೆನ್ನಲ್ಲೇ ತೇಜ್‌ ಪ್ರತಾಪ್‌ ಯಾದವ್‌ ಸಭೆಯಲ್ಲಿ ಅವರ ಬಾವ ಭಾಗಿ!

ವಿವಾಹವಾದ ಸ್ವಲ್ಪ ದಿನಗಳ ಬಳಿಕವೇ ಐಶ್ವರ್ಯ ರಾಯ್ ಮತ್ತು ತೇಜ್ ಪ್ರತಾಪ್ ನಡುವೆ ಸಾಂಸಾರಿಕ ಭಿನ್ನಾಭಿಪ್ರಾಯಗಳು ಶುರುವಾಗಿದ್ದವು. ತಮ್ಮ ಪತಿ ವಿರುದ್ಧ ಐಶ್ವರ್ಯ ಅನೇಕ ಆರೋಪಗಳನ್ನು ಮಾಡಿದ್ದರು. ಮಾಧ್ಯಮಗಳಲ್ಲಿ ಈ ಬಗ್ಗೆ ಸಾಕಷ್ಟು ಸುದ್ದಿ ಕೂಡ ಆಘಿತ್ತು. ನನ್ನ ಹೆಂಡತಿ ತನ್ನ ಲೈಫ್‌ಸ್ಟೈಲಿಗೆ ಹೊಂದಾಣಿಕೆಯಾಗುತ್ತಿಲ್ಲ ಎಂದು ತೇಜ್ ಪ್ರತಾಪ್ ಅವರು ಆರೋಪಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಅಂತಿಮವಾಗಿ, ತೇಜ್ ಪ್ರತಾಪ್ ಹಾಗೂ ಐಶ್ವರ್ಯ ರಾಯ್ ಅವರ ಕೌಟುಂಬಿಕ ಕಲಹ ಕೌಟುಂಬಿಕ ನ್ಯಾಯಾಲಯಕ್ಕೆ ಬಂತು. ಇದೀಗ ಕೋರ್ಟ್, ತೇಜ್ ಪ್ರತಾಪ್ ಕೌಟುಂಬಿಕ ದೌರ್ಜನ್ಯ ಎಸಗಿರುವುದು ಸಾಬೀತಾಗಿದೆ ಎಂದು ತೀರ್ಪು ನೀಡಿದೆ. ಇದರೊಂದಿಗೆ, ತೇಜ್ ಪ್ರತಾಪ್ ಅವರಿಗೆ ಭಾರೀ ಹಿನ್ನಡೆಯಾಗಿದೆ.

ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಚಿಕ್ಕೋಡಿ

Physical Abuse: ಬಾಲಕಿಯನ್ನು ಕಬ್ಬಿನ ಗದ್ದೆಗೆ ಕರೆದೊಯ್ದು ಅತ್ಯಾಚಾರವೆಸಗಿ ಕೊಂದಿದ್ದ ನೀಚನಿಗೆ ಗಲ್ಲುಶಿಕ್ಷೆ ವಿಧಿಸಿದ ಕೋರ್ಟ್‌

Physical Abuse: ಬಾಲಕಿಯನ್ನು ಕಬ್ಬಿನ ಗದ್ದೆಗೆ ಕರೆದೊಯ್ದು ಅತ್ಯಾಚಾರವೆಸಗಿ ಕೊಂದಿದ್ದ ನೀಚನಿಗೆ ಕೋರ್ಟ್‌ ಗಲ್ಲುಶಿಕ್ಷೆ ಹಾಗೂ ದಂಡವನ್ನು ವಿಧಿಸಿದೆ.

VISTARANEWS.COM


on

By

ಸಾಂದರ್ಭಿಕ ಚಿತ್ರ
Koo

ಚಿಕ್ಕೋಡಿ: ಬಾಲಕಿಯ ಮೇಲೆ ಎರಗಿ ತನ್ನ ಕಾಮದಾಸೆಯನ್ನು (Physical Abuse) ತೀರಿಸಿಕೊಂಡು ಕೊಂದು (murder case) ಹಾಕಿದ್ದ ಕಾಮುಕನಿಗೆ ಗಲ್ಲುಶಿಕ್ಷೆ ಪ್ರಕಟವಾಗಿದೆ. ಬೆಳಗಾವಿಯ ಪೋಕ್ಸೊ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು ಆದೇಶ ಹೊರಡಿಸಿದೆ. ಆರೋಪಿ ಉದ್ದಪ್ಪ ರಾಮಪ್ಪ ಗಾಣಿಗೇರ(32) ಎಂಬಾತನಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ.

2017ರಲ್ಲಿ ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಅಪ್ರಾಪ್ತೆ ಮೇಲೆ ತನ್ನ‌ ಕಾಮದ ಕಣ್ಣಿಟ್ಟಿದ್ದ ಕಾಮುಕ ಉದ್ದಪ್ಪ ರಾಮಪ್ಪ , ಯಾರು ಇಲ್ಲದೆ ಇರುವಾಗ ಬಾಲಕಿಗೆ ಚಾಕೋಲೇಟ್ ಆಸೆ ತೋರಿಸಿದ್ದ. ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕಿಗೆ ಚಾಕೋಲೇಟ್‌ ಕೊಡಿಸಿ ಪುಸಲಾಯಿಸಿದ್ದ ಕೀಚಕ ಬಳಿಕ ಕಬ್ಬಿನ ಗದ್ದೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿದ್ದ. ತನ್ನ ಕೃತ್ಯ ಎಲ್ಲಿ ಹೊರಬರುತ್ತೋ ಎಂದು ನಂತರ ಮಗುವಿನ ಕಣ್ಣು, ಮೂಗಿಗೆ ಮಣ್ಣು ಹಾಕಿ ಕೊಲೆ ಮಾಡಿದ್ದ.

Physical Abuse
Physical Abuse

ಪ್ರಕರಣದ ಕೂಲಂಕುಷ ವಿಚಾರಣೆ ನಡೆಸಿದ್ದ ನ್ಯಾಯಾಲಯವು ಅಪರಾಧಿಗೆ ಗಲ್ಲು ಶಿಕ್ಷೆ ಮತ್ತು 45 ಸಾವಿರ ದಂಡ ವಿಧಿಸಿ ಆದೇಶಿಸಿದೆ. ಜಿಲ್ಲಾ ಕಾನೂನು ಪ್ರಾಧಿಕಾರದಿಂದ ಬಾಲಕಿ ಪೋಷಕರಿಗೆ 3 ಲಕ್ಷ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ. ಹಾರೂಗೇರಿ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಇದಾಗಿದೆ.

ರಾಯಚೂರಿನಲ್ಲಿ ಮನೆ ಮಾಲೀಕಿಯನ್ನು ಕೊಂದ ಬಾಡಿಗೆದಾರ

ರಾಯಚೂರಿನಲ್ಲಿ ಬಾಡಿಗೆದಾರನಿಂದ ಮಹಿಳೆಯೊಬ್ಬರ ಕೊಲೆ ಆಗಿದೆ. ರಾಯಚೂರು ನಗರದ ಉದಯ್ ನಗರದಲ್ಲಿ ಘಟನೆ ನಡೆದಿದೆ. ಶೋಭಾ ಪಾಟೀಲ್(60) ಕೊಲೆಯಾದವರು. ಇದೇ ಸೆಪ್ಟೆಂಬರ್25 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೊಲೆ ಮಾಡಿ ಸ್ವ ಗ್ರಾಮದಲ್ಲಿ ಆರೋಪಿ ತಲೆಮರೆಸಿಕೊಂಡಿದ್ದ. ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರು ಆರೋಪಿ ಶಿವು ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.

ವೃದ್ಧೆ ಶೋಭಾ ಮನೆಯಲ್ಲಿ ಶಿವು ಬಾಡಿಗೆಗೆ ಇದ್ದ. ಬೆಂಗಳೂರಿನಲ್ಲಿ ಮಕ್ಕಳ ಜತೆ ಇದ್ದ ಶೋಭಾ ಇತ್ತೀಚೆಗೆ ರಾಯಚೂರಿಗೆ ಬಂದಿದ್ದರು. ಮನೆ‌ ಖಾಲಿ ಮಾಡುವಂತೆ ಆರೋಪಿ ಶಿವುಗೆ ತಿಳಿಸಿದ್ದರು. ಘಟನಾ ದಿನ ಶೋಭಾರ ಮನೆಗೆ ಬಂದಿದ್ದ. ಮಲಗಿದ್ದ ವೃದ್ಧೆಯನ್ನು ಉಸಿರುಗಟ್ಟಿಸಿ ಕೊಂದು, ಚಿನ್ನಾಭರಣ, ಫೋನ್ ಕದ್ದೊಯ್ದಿದ್ದ. ಬಳಿಕ ತಾನೇನು ಮಾಡಿಲ್ಲ ಎಂಬಂತೆ ಮೃತ ಮಹಿಳೆ ಕುಟುಂಬಸ್ಥರ ಜತೆಗೆ ಓಡಾಡಿಕೊಂಡಿದ್ದ. ಶೋಭಾ ಅಂತ್ಯಕ್ರಿಯೆ ಬಳಿಕ ಆಕೆ ಚಿನ್ನಾಭರಣ ಕಾಣದೇ ಇದ್ದಾಗ ಪೊಲೀಸರಿಗೆ ದೂರು ನೀಡಿದ್ದರು. ಸಿಸಿಟಿವಿ ಒಂದರಲ್ಲಿ ಆತ ಓಡಾಡಿದ್ದ ದೃಶ್ಯ ಸೆರೆ ಆಗಿತ್ತು. ಅದರ ಆಧಾರದಲ್ಲಿ ಆರೋಪಿ ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದಾಗ ಕೃತ್ಯ ಬಯಲಾಗಿದೆ. ಪಶ್ಚಿಮ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

MLA Muniratna: ಅತ್ಯಾಚಾರ ಕೇಸ್‌; ಶಾಸಕ ಮುನಿರತ್ನಗೆ 12 ದಿನ ಎಸ್‌ಐಟಿ ಕಸ್ಟಡಿಗೆ ನೀಡಿ ಕೋರ್ಟ್‌ ಆದೇಶ

MLA Muniratna: ಅತ್ಯಾಚಾರ ಕೇಸ್‌ ಸಂಬಂಧ ಜೈಲುಪಾಲಾಗಿರುವ ಶಾಸಕ ಮುನಿರತ್ನಗೆ 12 ದಿನಗಳು ಎಸ್‌ಐಟಿ ಕಸ್ಟಡಿಗೆ ನೀಡಿ ಕೋರ್ಟ್‌ ಆದೇಶ ಹೊರಡಿಸಿದೆ.

VISTARANEWS.COM


on

By

MLA Munirathna
Koo

ಬೆಂಗಳೂರು: ಶಾಸಕ ಮುನಿರತ್ನ (MLA Muniratna) ವಿರುದ್ಧ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ್ದಂತೆ 12 ದಿನ ಎಸ್ಐಟಿ ಕಸ್ಟಡಿಗೆ ನೀಡಿ 42ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ. ಅಕ್ಟೋಬರ್ 5ರ ವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ. ಶಾಸಕ ಮುನಿರತ್ನ ವಿಡಿಯೊ ಕಾನ್ಫೆರೆನ್ಸ್‌ ಮೂಲಕ ವಿಚಾರಣೆಗೆ ಹಾಜರಾಗಿದ್ದರು. ಕೋರ್ಟ್‌ನಿಂದ ಬಾಡಿ ವಾರೆಂಟ್ ಮೇಲೆ ಎಸ್‌ಐಟಿ ಕಸ್ಟಡಿಗೆ ಕೇಳಿದ್ದರು. ಹೀಗಾಗಿ ಆದೇಶದ ಪ್ರತಿ ಪಡೆದು ಎಸ್ ಐಟಿ ತಂಡ ಪರಪ್ಪನ ಅಗ್ರಹಾರ ಜೈಲಿನತ್ತ ಹೊರಟಿದ್ದಾರೆ. ಸಿಐಡಿ ಕಚೇರಿಗೆ ಕರೆತಂದು ವಿಚಾರಣೆ ನಡೆಸಲಿದ್ದಾರೆ.

ಏನಿದು ಪ್ರಕರಣ?

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣ ಸಂಬಂಧ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಕೋವಿಡ್ ಸಮಯದಲ್ಲಿ ನನ್ನ ಸಾಮಾಜಿಕ ಸೇವೆಯನ್ನು ಗುರುತಿಸಿ ಮುನಿರತ್ನ ಕರೆ ಮಾಡಿದ್ದರು. ಅದರಂತೆ ಭೇಟಿಯಾದ ಸಂತ್ರಸ್ತೆ ಹಾಗೂ ಮುನಿರತ್ನ ನಡುವೆ ಆತ್ಮೀಯತೆ ಬೆಳೆದಿತ್ತು. ಆಗಾಗ ವಿಡಿಯೊ ಕಾಲ್‌ ಮೂಲಕ ಮಾತನಾಡುತ್ತಿದ್ದರು. ಹೀಗೊಂದು ದಿನ ನಗ್ನವಾಗಿ ವಿಡಿಯೊ ಕರೆ ಮಾಡುವಂತೆ ಒತ್ತಾಯಿಸಿದಾಗ ಸಂತ್ರಸ್ತೆ ನಿರಾಕರಿಸಿದ್ದರಂತೆ. ಇದಾದ ಬಳಿಕ ಸಂತ್ರಸ್ತೆಯನ್ನು ಗೋಡೌನ್‌ಗೆ ಕರೆಸಿಕೊಂಡು ನಿನ್ನ ನೋಡಿದರೆ ಮೈ ಜುಮ್‌ ಎನಿಸುತ್ತೆ ಎಂದೇಳಿ ತಬ್ಬಿಕೊಳ್ಳಲು ಮುಂದಾಗಿದ್ದರಂತೆ.

ಇದಕ್ಕೆ ಸಂತ್ರಸ್ತೆ ಆಕ್ಷೇಪಿಸಿದಾಗ ರಾಜಕೀಯಕ್ಕೆ ಬರಬೇಕಾದರೆ ಇದೆಲ್ಲಾ ಕಾಮನ್ ಎಂದಿದ್ದಾರೆ. ನಾನು ಕಿರುಚಿಕೊಳ್ಳುತ್ತೇನೆ ಎಂದಾಗ ನಾನು ಶಾಸಕ, ಅಪಾರ ಜನಬೆಂಬಲವಿದೆ ಸುಮ್ಮನಿದ್ದರೆ ಸರಿ , ಇಲ್ಲವಾದರೆ ನಿನ್ನ ವಿರುದ್ಧವೇ ಕಂಪ್ಲೆಂಟ್ ನೀಡುತ್ತೇನೆ ಎಂದು ಹೆದರಿಸಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದರಂತೆ. ಅತ್ಯಾಚಾರದ ಬಳಿಕ ಈ ರೂಂನಲ್ಲಿ ಸೀಕ್ರೆಟ್ ವೀಡಿಯೊ ರೆಕಾರ್ಡರ್ ಇಟ್ಟಿದ್ದು, ಎಲ್ಲಾ ದೃಶ್ಯಗಳು ಸೆರೆಯಾಗಿದೆ. ನಿನ್ನ ವಿಡಿಯೊ ಎಡಿಟ್ ಮಾಡಿ ಹಂಚುತ್ತೇನೆ. ಹೇಳಿದಂತೆ ಕೇಳಬೇಕು ಅಂತಾ ಹನಿಟ್ರ್ಯಾಪ್ ಮಾಡುವಂತೆ ಹೇಳಿ ನನ್ನನ್ನು ಬಳಸಿಕೊಂಡರು ಎಂದು ಸಂತ್ರಸ್ತೆ ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದ್ದಾರೆ.

ಜತೆಗೆ ಚಿತ್ರೀಕರಿಸಿದ ವಿಡಿಯೊಗಳನ್ನು ಟಿವಿಯಲ್ಲಿ ಹಾಕಿ ತೋರಿಸುತ್ತಾ, 2020 ರಿಂದ 2022ರ ಅವಧಿಯಲ್ಲಿ ನಿರಂತರ ಅತ್ಯಾಚಾರ ನಡೆಸಿದ್ದಾರೆ. ಇದೇ ವೇಳೆ ಹನಿಟ್ರ್ಯಾಪ್‌ಗು ಬಳಕೆ ಮಾಡಿಕೊಂಡಿದ್ದಾರೆ. ಹೇಳಿದಂತೆ ಕೇಳಲಿಲ್ಲ ಅಂದರೆ ಗಂಡ ಮತ್ತು ಮಕ್ಕಳಿಗೆ ವಿಡಿಯೊ ತೋರಿಸೋದಾಗಿ ಬೆದರಿಕೆ ಹಾಕಿದ್ದಾರೆ. ತನಗೆ ಪರಿಚಯ ಇರುವ ಮತ್ತೊಬ್ಬ ಮಹಿಳೆ ಜತೆ ಸೇರಿ ಆತ ಹೇಳಿದವರನ್ನು ಹನಿಟ್ರ್ಯಾಪ್ ಮಾಡಿಸಿದ್ದಾರೆ. ಮರ್ಯಾದೆ ಹಾಗು ಪ್ರಾಣಕ್ಕೆ ಅಂಜಿ ಶಾಸಕ ಮುನಿರತ್ನ ಹೇಳಿದಂತೆ ಕೇಳಿದ್ದೇನೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಯಾವ್ಯಾವ ಸೆಕ್ಷನ್‌ನಡಿ ಕೇಸ್?

354A – ಲೈಂಗಿಕ ದೌರ್ಜನ್ಯ
354C – ಮಹಿಳೆಯರ ಇಚ್ಛೆಗೆ ವಿರುದ್ಧವಾಗಿ ಚಿತ್ರೀಕರಣ
376N(2) – ಸರ್ಕಾರಿ ಸೇವಕನಿಂದ ಅತ್ಯಾಚಾರ
506 – ಜೀವ ಬೆದರಿಕೆ
504 – ಉದ್ದೇಶಪೂರ್ವಕವಾಗಿ ನಿಂದನೆ
120(B) – ಅಪರಾಧಿಕ ಒಳಸಂಚು
149 -ಕಾನೂನು ಬಾಹಿರ ಸಭೆ
406 – ನಂಬಿಕೆ ದ್ರೋಹ
384 – ಸುಲಿಗೆ
308 – ಹತ್ಯೆ ಮಾಡಲು ಪ್ರಯತ್ನ, ಐಟಿ ಆಕ್ಟ್ 66,66e

ಮಹಿಳೆಯೊಬ್ಬರನ್ನು ಮುಂದಿಟ್ಟುಕೊಂಡು ಮುನಿರತ್ನ ಹನಿಟ್ರ್ಯಾಪ್‌ ಮಾಡಿಸುತ್ತಿದ್ದನಂತೆ. ತನಗೆ ಆಗದವರನ್ನು ಮಟ್ಟ ಹಾಕಲು ಹನಿಟ್ರ್ಯಾಪ್‌ ಮಾಡಿ ಅವರಿಗೆ ಏಡ್ಸ್‌ ಸೋಂಕಿತರ ರಕ್ತ ಇಂಜೆಕ್ಟ್‌ ಮಾಡಿಸುತ್ತಿದ್ದ ಎನ್ನಲಾಗಿದೆ. ಮುನಿರತ್ನನ ಈ ಭಯಾನಕ ಕೃತ್ಯಕ್ಕೆ ಹಲವರು ಬಲಿಯಾಗಿದ್ದಾರೆ. ತನ್ನ ಎದುರಾಳಿ ಸ್ಥಳೀಯ ಕಾರ್ಪೋರೇಟರ್‌ಗಳನ್ನು ಸೈಲೆಂಟ್ ಮಾಡಿಸಿದ್ದು ಹೀಗೆ, ಅದರಲ್ಲಿ ಮಾಗಡಿ ಎಂಎಲ್‌ಎ ಸಹ ಒಬ್ಬರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಹನಿಟ್ರ್ಯಾಪ್, ಏಡ್ಸ್ ಹರಡಿಸುವ ಕೃತ್ಯ, ಡ್ರಗ್ಸ್ ದಂಧೆ ಬಗ್ಗೆಯೂ ಎಫ್ಐಆರ್‌ನಲ್ಲಿದೆ.

ನನ್ನ ಜತೆಗೆ ಇದ್ದವರಿಂದಲೇ ದೂರು ದಾಖಲು

ನ್ಯಾಯಾಧೀಶರ ಸಮ್ಮತಿ ಪಡೆದು ಮಾತನಾಡಿದ ಶಾಸಕ ಮುನಿರತ್ನ, ಕಳೆದ ಐದು ವರ್ಷದಿಂದ ನನ್ನ ಜತೆ ಇದ್ದವರೇ ನನ್ನ ವಿರುದ್ಧ ದೂರುಗಳನ್ನು ನೀಡುತ್ತಿದ್ದಾರೆ. ಚುನಾವಣಾ ಸಂದರ್ಭದಲ್ಲಿ ನಡೆದ ಮನಸ್ತಾಪಗಳನ್ನು ಮುಂದಿಟ್ಟುಕೊಂಡು ದಿನೆದಿನೇ ಹೊಸ ಕೇಸ್‌ಗಳನ್ನು ದಾಖಲಿಸುತ್ತಿದ್ದಾರೆ. ನಾನು ನಾಲ್ಕು ಬಾರಿ ಎಂಎಲ್‌ಎ ಆಗಿದ್ದೇನೆ. ಎಂಎಲ್‌ಎ ಸ್ಥಾನಕ್ಕಾಗಿಯೆ ಪ್ರತಿದಿನ ಕಿರುಕುಳ‌ ನೀಡುತ್ತಿದ್ದಾರೆ. ಈ ಕಿರುಕುಳಕ್ಕಿಂತ ಈಗಲೇ ನಾನು ನನ್ನ ಶಾಸಕ ಸ್ಥಾನಕ್ಕೆ ಬೇಕಾದರೆ ರಾಜೀನಾಮೆ ನೀಡುತ್ತೇನೆ ಸ್ವಾಮಿ. ಸಾರ್ವಜನಿಕ ಜೀವನದಲ್ಲಿರುವ ವ್ಯಕ್ತಿ ನಾನು, ವಿನಾ ಕಾರಣ ನನ್ನ ತೇಜೋವಧೆ ಮಾಡುವಂತಹ ಕೆಲಸ ಮಾಡುತ್ತಿದ್ದಾರೆ. ಐದು ವರ್ಷದ ಹಿಂದೆ ಅತ್ಯಾಚಾರವೆಸಗಿದ್ದರೆ ಆಗಲೇ ಕೇಸ್ ದಾಖಲಿಸಬಹುದಿತ್ತು. ಎಲ್ಲ ಪೊಲೀಸ್ ಠಾಣೆಗಳು ತೆರೆದಿದ್ದವು ಎಂದು ಅಳಲು ತೋಡಿಕೊಂಡರು. ವಾದ ಆಲಿಸಿದ ನ್ಯಾಯಾಧೀಶರು ಶಾಸಕ ಮುನಿರತ್ನರಿಗೆ ಅ.5ರ ವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

CM Siddaramaiah : ‌ರಾಜ್ಯಪಾಲರ ಪ್ರಾಸಿಕ್ಯೂಷನ್‌; ಸಿಎಂ ಸಿದ್ದರಾಮಯ್ಯ ಅರ್ಜಿ ವಜಾಕ್ಕೆ ಹೈಕೋರ್ಟ್‌ ಕೊಟ್ಟ ಕಾರಣಗಳೇನು?

VISTARANEWS.COM


on

By

cm Siddaramaiah
Koo

ಬೆಂಗಳೂರು: ಮುಡಾ ಹಗರಣದಲ್ಲಿ (Muda Scam) ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಷನ್‌ಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಲು ಹೈಕೋರ್ಟ್ ನೀಡಿದ 11 ಕಾರಣಗಳು ಇಲ್ಲಿವೆ.

1.ದೂರುದಾರರು ದೂರನ್ನು ದಾಖಲಿಸಲು ಅಥವಾ ರಾಜ್ಯಪಾಲರ ಕೈಯಲ್ಲಿ ಅನುಮೋದನೆ ಪಡೆಯಲು ಸಮರ್ಥರಾಗಿದ್ದಾರೆ.
2. ವಾಸ್ತವ ಪರಿಸ್ಥಿತಿಯಲ್ಲಿ PC ಕಾಯಿದೆಯ ಸೆಕ್ಷನ್ 17A ಅಡಿಯಲ್ಲಿ ಅನುಮೋದನೆಯು ಕಡ್ಡಾಯವಾಗಿದೆ.
3. ಕಾಯಿದೆಯ ನಿಬಂಧನೆಗಳ ಅಡಿಯಲ್ಲಿ ಶಿಕ್ಷಾರ್ಹ ಅಪರಾಧಗಳಿಗಾಗಿ ಸಾರ್ವಜನಿಕ ನೌಕರನ ವಿರುದ್ಧ BNSS ನ Cr.P.C./223 ನ ಸೆಕ್ಷನ್ 200 ರ ಅಡಿಯಲ್ಲಿ ದಾಖಲಿಸಲಾದ ಖಾಸಗಿ ದೂರಿನಲ್ಲಿ ಪೊಲೀಸ್ ಅಧಿಕಾರಿಯು ಅನುಮೋದನೆ ಪಡೆಯಲು ಸೆಕ್ಷನ್ 17A ಎಲ್ಲಿಯೂ ಅಗತ್ಯವಿಲ್ಲ. ಅಂತಹ ಅನುಮೋದನೆ ಪಡೆಯುವುದು ದೂರುದಾರರ ಕರ್ತವ್ಯ.
4.ಸಾಮಾನ್ಯ ಪರಿಸ್ಥಿತಿಯಲ್ಲಿ ರಾಜ್ಯಪಾಲರು ಭಾರತದ ಸಂವಿಧಾನದ 163 ನೇ ವಿಧಿಯ ಅಡಿಯಲ್ಲಿ ಪಡೆದಂತೆ ಮಂತ್ರಿಗಳ ಮಂಡಳಿಯ ಸಹಾಯ ಮತ್ತು ಸಲಹೆಯ ಮೇರೆಗೆ ಕಾರ್ಯನಿರ್ವಹಿಸಬೇಕಾಗುತ್ತದೆ, ಆದರೆ ಅಸಾಧಾರಣ ಸಂದರ್ಭಗಳಲ್ಲಿ ಸ್ವತಂತ್ರ ನಿರ್ಧಾರವನ್ನು ತೆಗೆದುಕೊಳ್ಳಬಹುದು ಮತ್ತು ಪ್ರಸ್ತುತ ಪ್ರಕರಣವು ಅಂತಹ ಒಂದು ಅಪವಾದವಾಗಿದೆ.

ಇದನ್ನೂ ಓದಿ:CM Siddaramaiah : ಪ್ರಾಸಿಕ್ಯೂಷನ್‌ಗೆ ಗ್ರೀನ್‌ ಸಿಗ್ನಲ್‌; ಸಿದ್ದರಾಮಯ್ಯ ರಾಜಿನಾಮೆಗೆ ಬಿಜೆಪಿ-ಜೆಡಿಎಸ್‌ ಒತ್ತಾಯ

5.ರಾಜ್ಯಪಾಲರು ಸ್ವತಂತ್ರ ವಿವೇಚನಾಧಿಕಾರವನ್ನು ಚಲಾಯಿಸುವ ಕ್ರಮದಲ್ಲಿ ಯಾವುದೇ ದೋಷ ಕಂಡುಬಂದಿಲ್ಲ.
6. ಕಾರಣಗಳನ್ನು ನಿರ್ಣಯ ಮಾಡುವ ಅಧಿಕಾರದ ಫೈಲ್‌ನಲ್ಲಿ, ವಿಶೇಷವಾಗಿ ಉನ್ನತ ಹುದ್ದೆಯಲ್ಲಿ ದಾಖಲಿಸಿದರೆ ಸಾಕು ಮತ್ತು ಆ ಕಾರಣಗಳು ಸಂಕ್ಷೇಪಿತ ಆದೇಶದ ಭಾಗವಾಗಿದೆ. ಒಂದು ಎಚ್ಚರಿಕೆ, ಕಾರಣಗಳು ಕಡತದಲ್ಲಿರಬೇಕು. ಮೊದಲ ಬಾರಿಗೆ ಕಾರಣಗಳನ್ನು ಆಕ್ಷೇಪಣೆಗಳ ಮೂಲಕ ಸಾಂವಿಧಾನಿಕ ನ್ಯಾಯಾಲಯದ ಮುಂದೆ ತರಲಾಗುವುದಿಲ್ಲ.
7. ಆದೇಶದಲ್ಲಿ ಎಲ್ಲಿಯೂ ಮನಸ್ಸಿನ ಅನ್ವಯದ ಕೊರತೆಯಿಂದ ಬಳಲುತ್ತಿಲ್ಲ. ಇದು ರಾಜ್ಯಪಾಲರಿಂದ ಮನಸ್ಸಿನ ಅನ್ವಯದ ಹೋಲಿಕೆಯ ಒಂದು ಪ್ರಕರಣವಲ್ಲ, ಆದರೆ ಮನಸ್ಸಿನ ಅನ್ವಯದ ಸಮೃದ್ಧಿಯಾಗಿದೆ.
8. ಸೆಕ್ಷನ್ 17A ಅಡಿಯಲ್ಲಿ ಅನುಮೋದನೆಗೆ ಮುಂಚಿತವಾಗಿ ವಿಚಾರಣೆಯ ಅವಕಾಶವನ್ನು ನೀಡುವುದು ಕಡ್ಡಾಯವಲ್ಲ. ಅಧಿಕಾರವು ಹಾಗೆ ಮಾಡಲು ನಿರ್ಧರಿಸಿದರೆ, ಅದು ಮುಕ್ತವಾಗಿರುತ್ತದೆ.
9. ಆಪಾದಿತ‌ ಅತ್ಯಂತ ತರಾತುರಿಯಲ್ಲಿ ರಾಜ್ಯಪಾಲರ ನಿರ್ಧಾರವು ಆದೇಶವನ್ನು ಉಲ್ಲಂಘಿಸಿಲ್ಲ.
10 . ಆದೇಶವನ್ನು ಕಾಯಿದೆಯ ಸೆಕ್ಷನ್ 17A ಅಡಿಯಲ್ಲಿ ಅನುಮೋದನೆಗೆ ನಿರ್ಬಂಧಿಸಲು ಓದಲಾಗುತ್ತದೆ ಮತ್ತು BNSS ನ ಮಂಜೂರಾತಿ 218 ಅನ್ನು ನೀಡುವ ಆದೇಶವಲ್ಲ.
11.ಅರ್ಜಿಯಲ್ಲಿ ವಿವರಿಸಿರುವ ಸಂಗತಿಗಳು ನಿಸ್ಸಂದೇಹವಾಗಿ ತನಿಖೆಯ ಅಗತ್ಯವಿರುತ್ತದೆ. ಈ ಎಲ್ಲಾ ಕಾಯಿದೆಗಳ ಫಲಾನುಭವಿಯು ಹೊರಗಿನವರು ಯಾರೂ ಅಲ್ಲ, ಆದರೆ ಅರ್ಜಿದಾರರ ಪತ್ನಿ ಎಂಬ ಸತ್ಯದ ಸಂಗತಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

CM Siddaramaiah : ಬಿಜೆಪಿಯ‌ ಷಡ್ಯಂತರ, ನನ್ನ ವಿರುದ್ಧ ಸೇಡಿನ ರಾಜಕೀಯವಷ್ಟೇ; ತನಿಖೆಗೆ ಹಿಂಜರಿಯುವುದಿಲ್ಲ-ಸಿಎಂ ಸಿದ್ದರಾಮಯ್ಯ

VISTARANEWS.COM


on

By

CM Siddaramaiah
Koo

ಬೆಂಗಳೂರು: ಹೈ ಕೋಟ್೯ ತೀರ್ಪು ಕುರಿತು ಸಿಎಂ ಸಿದ್ದರಾಮಯ್ಯ (CM Siddaramaiah) ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಕಾನೂನು ತಜ್ಞರ ಜತೆಗೆ ಚರ್ಚೆ ಮಾಡಿ ಮುಂದಿನ ಹೋರಾಟ ನಡೆಸಲಾಗುವುದು. ಇದು ಬಿಜೆಪಿಯ‌ ಷಡ್ಯಂತರವಷ್ಟೇ, ಎನ್‌ಡಿಎಯಿಂದ ರಾಜಭವನ ದುರ್ಬಳಕೆ ಮಾಡಿಕೊಂಡಿದೆ. ನನ್ನ ವಿರುದ್ಧ ಸೇಡಿನ ರಾಜಕೀಯ ನಡೆಯುತ್ತಿದೆ ಎಂದು ಕಿಡಿಕಾರಿದ್ದಾರೆ. ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ಆದೇಶ ಪ್ರತಿ ಪಡೆದು ಓದಿದ ಬಳಿಕ‌ ಪ್ರತಿಕ್ರಿಯೆ ನೀಡುತ್ತೇನೆ. ನ್ಯಾಯಾಲಯವು ಸೆಕ್ಷನ್ 218 ರ ಅಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ನ್ಯಾಯಾಲಯ ಸಂಪೂರ್ಣವಾಗಿ ತಿರಸ್ಕರಿಸಿದೆ. ರಾಜ್ಯಪಾಲರ ಆದೇಶದಲ್ಲಿನ ಸೆಕ್ಷನ್ 17 ಎ ಗೆ ಮಾತ್ರ ನ್ಯಾಯಮೂರ್ತಿಗಳು ಸೀಮಿತಗೊಳಿಸಿದ್ದಾರೆ. ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನು ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುತ್ತೇನೆ. ಕಾನೂನು ತಜ್ಞರ ಜೊತೆ ಚರ್ಚಿಸಿ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ ಎಂದಿದ್ದಾರೆ.

ದೂರುದಾರ ತನ್ನ ದೂರಿನಲ್ಲಿ ಸೆಕ್ಷನ್ 218 ಬಿಎನ್ ಎಸ್ ಎಸ್, 17 ಎ ಮತ್ತು 19 ಪಿಸಿ ಕಾಯಿದೆ ಪ್ರಕಾರ ತನಿಖೆ ಹಾಗೂ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿದ್ದರು. ಆದರೆ, ರಾಜ್ಯಪಾಲರು ಪ್ರಾಥಮಿಕ ಹಂತದಲ್ಲಿ 19 ಪಿಸಿ ಕಾಯಿದೆ ಪ್ರಕಾರ ಕೇಳಿದ್ದ ಅಭಿಯೋಜನಾ ಅನುಮತಿ‌ ನಿರಾಕರಿಸಿದ್ದರು. ಈ ದಿನ ನ್ಯಾಯಾಲಯ ರಾಜ್ಯಪಾಲರು 218 ಬಿಎನ್ ಎಸ್ ಎಸ್ ಪ್ರಕಾರ ನೀಡಿರುವ ಅಭಿಯೋಜನಾ ಅನುಮತಿಯನ್ನು ಸ್ಪಷ್ಟವಾಗಿ ತಳ್ಳಿ ಹಾಕಿದೆ. ಮುಂದಿನ ದಿನಗಳಲ್ಲಿ ಸತ್ಯ ಹೊರಬಂದು 17 ಎ ಅಡಿ ನೀಡಿರುವ ತನಿಖೆ ರದ್ದಾಗಲಿದೆ ಎಂಬ ದೃಢ ವಿಶ್ವಾಸ ನನಗಿದೆ. ಈ ರಾಜಕೀಯ ಹೋರಾಟದಲ್ಲಿ ರಾಜ್ಯದ ಜನ ನನ್ನ ಹಿಂದೆ ಇದ್ದಾರೆ. ಅವರ ಆಶೀರ್ವಾದವೇ ನನಗೆ ಶ್ರೀರಕ್ಷೆ. ಕಾನೂನು ಮತ್ತು ಸಂವಿಧಾನದಲ್ಲಿ ನನಗೆ ನಂಬಿಕೆ ಇದೆ. ಈ ಹೋರಾಟದಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಗಲಿದೆ ಎಂದು ತಿಳಿಸಿದ್ದಾರೆ.

ಇದು ನರೇಂದ್ರಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಸೇಡಿನ ರಾಜಕೀಯದ ವಿರುದ್ಧದ ಹೋರಾಟವಾಗಿದೆ. ಬಿಜೆಪಿ, ಜೆಡಿಎಸ್‌ ಪಕ್ಷದ ಈ ಸೇಡಿನ ರಾಜಕೀಯದ ವಿರುದ್ಧ ನಮ್ಮ ನ್ಯಾಯಾಂಗದ ಹೋರಾಟ ಮುಂದುವರಿಯಲಿದೆ. ನ್ಯಾಯಾಲಯದ ಮೇಲೆ ನನಗೆ ನಂಬಿಕೆ ಇದೆ. ನಮ್ಮ ಪಕ್ಷದ ಎಲ್ಲ ಶಾಸಕರು, ನಾಯಕರು ಮತ್ತು ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಹೈಕಮಾಂಡ್ ನನ್ನ ಪರವಾಗಿ ಭದ್ರವಾಗಿ ನಿಂತಿದ್ದು ಕಾನೂನಿನ ಹೋರಾಟ ಮುಂದುವರಿಸುವಂತೆ ಉತ್ತೇಜನ ನೀಡಿದ್ದಾರೆ. ನಾನು ಬಡವರ ಪರವಾಗಿದ್ದೇನೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದೇನೆ ಎನ್ನುವ ಕಾರಣಕ್ಕಾಗಿ ನನ್ನ ವಿರುದ್ದ ಬಿಜೆಪಿ, ಜೆಡಿಎಸ್ ರಾಜಕೀಯ ಪ್ರತಿಕಾರಕ್ಕೆ ಇಳಿದಿದೆ.

ಮುಡಾ ಪ್ರಕರಣ ನೆಪ ಅಷ್ಟೇ

ನನ್ನ 40 ವರ್ಷಗಳ ರಾಜಕೀಯ ಜೀವನದುದ್ದಕ್ಕೂ ಇಂತಹ ಸೇಡು, ಸಂಚಿನ ರಾಜಕೀಯವನ್ನು ಎದುರಿಸಿದ್ದೇನೆ ಮತ್ತು ರಾಜ್ಯದ ಜನರ ಆಶೀರ್ವಾದ, ಹಾರೈಕೆಯ ಬಲದಿಂದ ಗೆಲ್ಲುತ್ತಾ ಬಂದಿದ್ದೇನೆ. ಈ ಹೋರಾಟವನ್ನು ಜನತೆಯ ಆಶೀರ್ವಾದದ ಬಲದಿಂದ ಗೆಲ್ಲುತ್ತೇನೆ ಎಂಬ ವಿಶ್ವಾಸ ಇದೆ. ಮುಡಾ ಪ್ರಕರಣ ಒಂದು ನೆಪ ಅಷ್ಟೇ. ಬಡವರು ಮತ್ತು ಶೋಷಿತರ ಪರವಾಗಿರುವ ನಮ್ಮ ಸರ್ಕಾರದ ಯೋಜನೆಗಳನ್ನು ನಿಲ್ಲಿಸಬೇಕೆಂಬುದೇ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮುಖ್ಯ ಉದ್ದೇಶ. ಮುಡಾ ಪ್ರಕರಣವನ್ನು ಸೃಷ್ಟಿಸಿ, ಅದರ ಮೂಲಕ ಸುಳ್ಳು ಆರೋಪಗಳನ್ನು ಮಾಡುತ್ತಿರುವವರ ಮುಖಗಳನ್ನು ಒಮ್ಮೆ ರಾಜ್ಯದ ಜನತೆ ಸರಿಯಾಗಿ ನೋಡಬೇಕೆಂದು ನಾನು ಮನವಿ ಮಾಡುತ್ತೇನೆ.

ರಾಜಭವನದ ದುರ್ಬಳಕೆ

ನನ್ನ ರಾಜೀನಾಮೆ ಕೇಳುತ್ತಿರುವ ಇದೇ ನಾಯಕರು ನಾನು ರಾಜ್ಯದ ಬಡವರು, ಶೋಷಿತರ ಪರವಾಗಿ ಜಾರಿಗೆ ತಂದಿದ್ದ ಯೋಜನೆಗಳನ್ನು ವಿರೋಧಿಸಿದವರೇ ಆಗಿದ್ದಾರೆ. ಇದೇ ಬಿಜೆಪಿ, ಜೆಡಿಎಸ್ ನಾಯಕರು ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದ ಅನ್ನಭಾಗ್ಯ, ಕ್ಷೀರ ಭಾಗ್ಯ, ಕ್ಷೀರ ಧಾರೆ, ವಿದ್ಯಾಸಿರಿ, ಕೃಷಿಭಾಗ್ಯ, ಪಶುಭಾಗ್ಯ, ಇಂದಿರಾ ಕ್ಯಾಂಟೀನ್ ಯೋಜನೆಗಳನ್ನು ವಿರೋಧಿಸಿದ್ದಾರೆ. ಇಂದು ನನ್ನ ವಿರುದ್ದ ರಾಜಕೀಯ ಸಂಚು ನಡೆಸುತ್ತಿರುವ ಇದೇ ನಾಯಕರು ಎಸ್ ಸಿ ಎಸ್ ಪಿ/ಟಿಎಸ್‌ ಪಿ ಕಾಯ್ದೆಯನ್ನು ವಿರೋಧಿಸಿದ್ದಾರೆ.

ಕರ್ನಾಟಕದ ಜನತೆ ಇಲ್ಲಿಯ ವರೆಗೆ ಭಾರತೀಯ ಜನತಾ ಪಕ್ಷಕ್ಕೆ ಸ್ವಂತ ಬಲದಿಂದ ಅಧಿಕಾರಕ್ಕೆ ಬರುವಷ್ಟು ಬಹುಮತ ನೀಡಿಲ್ಲ. ಇಲ್ಲಿಯ ವರೆಗೆ ಬಿಜೆಪಿ ಅನೈತಿಕವಾಗಿ, ದುಡ್ಡಿನ ಬಲದಿಂದ ಆಪರೇಷನ್ ಕಮಲ ನಡೆಸಿ ಅಧಿಕಾರಕ್ಕೆ ಬಂದದ್ದು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಆಪರೇಷನ್ ಕಮಲಕ್ಕೆ ಅವಕಾಶವೇ ಇಲ್ಲದಂತೆ ನಮ್ಮ ಪಕ್ಷಕ್ಕೆ ೧೩೬ ಸದಸ್ಯರ ಬಲ ನೀಡಿ ಗೆಲ್ಲಿಸಿದರು. ಇದರಿಂದ ಹತಾಶೆಗೀಡಾಗಿರುವ ಬಿಜೆಪಿ, ಜೆಡಿಎಸ್ ನಾಯಕರು, ರಾಜಭವನವನ್ನು ದುರ್ಬಳಕೆ ಮಾಡಿಕೊಂಡು ನನ್ನ ವಿರುದ್ದ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ನಮ್ಮ ಸರ್ಕಾರವನ್ನು ಡಿಸ್ಟರ್ಬ್ ಮಾಡುವ ಹುನ್ನಾರ ನಡೆಸಿದೆ. ರಾಜಭವನದ ದುರ್ಬಳಕೆ ಮೂಲಕ ವಿರೋಧ ಪಕ್ಷಗಳ ಸರ್ಕಾರವನ್ನು ಹಣಿಯುವ ಸಂಚನ್ನು ನರೇಂದ್ರಮೋದಿ ನೇತೃತ್ವದ ಬಿಜೆಪಿ ದೇಶಾದ್ಯಂತ ನಡೆಸುತ್ತಿದೆ. ನನ್ನ ಪ್ರಕರಣದಲ್ಲಿಯೂ ಬಿಜೆಪಿ ಮತ್ತು ಜೆಡಿಎಸ್ ಇದೇ ರೀತಿ ಮುಖಭಂಗ ಅನುಭವಿಸುವುದು ಖಂಡಿತ ಎಂದು ಕಿಡಿಕಾರಿದ್ದಾರೆ.

ಸಿಎಂ ವಿರುದ್ಧದ ಷಡ್ಯಂತರ -ಡಿಕೆ ಶಿವಕುಮಾರ್‌

ಸಿಎಂ ವಿರುದ್ಧ ಷಡ್ಯಂತರ ನಡಿತಿದೆ. ನನ್ನ ಮೇಲೂ ಬಿಜೆಪಿಯವರು ಷಡ್ಯಂತರ ನಡೆಸಿದರು. ಈಗ ಸಿಎಂ ಸಿದ್ದರಾಮಯ್ಯ ಮೇಲೆ ಷಡ್ಯಂತರ ನಡೆಸುತ್ತಿದ್ದಾರೆ. ಸಿಎಂ ರಾಜಿನಾಮೆ ಕೊಡುವ ಪ್ರಶ್ನೆ ಇಲ್ಲ. ನಾವೆಲ್ಲರೂ ಸಿಎಂ ಪರ ಇದ್ದಿವಿ. ಸದ್ಯ ಕಾನೂನು ಸಲಹೆ ಪಡೆದು ಮುಂದಿನ ಹೋರಾಟದ ಬಗ್ಗೆ ಚರ್ಚೆ ‌ ಮಾಡುತ್ತೇವೆ ಎಂದು ತಿಳಿಸಿದರು. ನಮ್ಮ ಮುಖ್ಯಮಂತ್ರಿಗಳು ಯಾವುದೇ ತಪ್ಪು ಮಾಡಿಲ್ಲ, ಅವರು ಯಾವುದೇ ಹಗರಣದಲ್ಲೂ ಭಾಗಿಯಾಗಿಲ್ಲ. ಅವರ ವಿರುದ್ಧ ಬಿಜೆಪಿ ಷಡ್ಯಂತ್ರ ರೂಪಿಸುತ್ತಿದೆ. ಯಾವುದೇ ತನಿಖೆ ನಡೆದರೂ ಅವರು ದೋಷಮುಕ್ತರಾಗುತ್ತಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ತೀರ್ಪಿನ ಸಂಪೂರ್ಣ ಮಾಹಿತಿ ಪಡೆದು ಪ್ರತಿಕ್ರಿಯಿಸುತ್ತೇನೆ

ಸಿಎಂ ಹಾಗೂ ಸರ್ಕಾರಕ್ಕೆ ಇದು ಹಿನ್ನಡೆಯೇ ಎಂದು ಕೇಳಿದಾಗ, “ಇಲ್ಲಿ ಹಿನ್ನಡೆಯಾಗುವ ವಿಚಾರ ಏನಿದೆ? ತನಿಖೆ ನಡೆಯಬೇಕು ಎಂದು ಕೋರ್ಟ್ ಆದೇಶ ನೀಡಿರುವುದಾಗಿ ಮಾಧ್ಯಮಗಳು ಹೇಳುತ್ತಿವೆ. ಈ ತೀರ್ಪಿನ ಬಗ್ಗೆ ಸಂಪೂರ್ಣ ಮಾಹಿತಿ ಪಡೆದ ನಂತರ ಮಾತನಾಡುತ್ತೇನೆ. ನ್ಯಾಯಲಯದ ತೀರ್ಪು ಏನಿದೆ ಎಂದು ನಾನು ನೋಡಿಲ್ಲ. ಮಾಧ್ಯಮಗಳಿಂದ ವಿಚಾರ ತಿಳಿಯುತ್ತಿದೆ. ಸಂಪೂರ್ಣ ಮಾಹಿತಿ ಪಡೆದ ನಂತರ ಪ್ರತಿಕ್ರಿಯೆ ನೀಡುತ್ತೇನೆ.” ಎಂದು ತಿಳಿಸಿದರು.

ಸಿಎಂ ರಾಜೀನಾಮೆ ಕೊಡುವ ಅಗತ್ಯವೇ ಇಲ್ಲ

ಸಚಿವ ರಾಮಲಿಂಗರೆಡ್ಡಿ ಪ್ರತಿಕ್ರಿಯಿಸಿದ್ದು, ಸಿಂಗಲ್ ಬೇಂಚ್‌ನಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಇನ್ನು ಡಬಲ್ ಬೆಂಚ್ ಇದೆ. ನ್ಯಾಯಾಂಗದ ಮೇಲೆ ನಮಗೆ ನಂಬಿಕೆ ಇದೆ. 17 A ಮೂಲಕ ಅನುಮತಿ ಕೊಟ್ಟಿದ್ದಾರೆ. ಡಬಲ್ ಬೆಂಚ್‌ನಲ್ಲಿ ನಾವು ಚಾಲೆಂಜ್ ಮಾಡುತ್ತೇವೆ. ಸಿಎಂ ರಾಜೀನಾಮೆ ಕೊಡುವ ಅಗತ್ಯವಿಲ್ಲ. ನಾವೆಲ್ಲರೂ ಅವರ ಜತೆ ಇದ್ದೇವೆ. ರಾಜ್ಯಪಾಲರ ಮುಂದಿಟ್ಟುಕೊಂಡು ದೇಶದೆಲ್ಲೆಡೆ ಇದೆ ರೀತಿ ಮಾಡುತ್ತಿದ್ದಾರೆ. ಕುಮಾರಸ್ವಾಮಿ, ನಿರಾಣಿ, ಡಿ ನೋಟಿಫೀಕೇಷನ್ ಅವರ ಕೇಸ್‌ಗಳ ಬಗ್ಗೆ ರಾಜ್ಯಪಾಲರು ಕ್ರಮ ಕೈಗೊಳ್ಳಲಿ ಎಂದು ಆಕ್ರೋಶಿಸಿದರು. ನಮ್ಮ ರಾಜ್ಯಕ್ಕೆ ಇಷ್ಟು ಅನ್ಯಾಯ ಆದರೂ ಬಿಜೆಪಿಯವರು ನಮ್ಮ ರಾಜ್ಯದ ಪರ ಮಾತನಾಡಲಿಲ್ಲ. ನಮ್ಮ ಪ್ರಕಾರ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಅಗತ್ಯ ಇರಲಿಲ್ಲ. ಈಗ ಅನುಮತಿ ಕೊಟ್ಟಿದ್ದಾರೆ. ಕೋರ್ಟ್ ತೀರ್ಪಿಗೆ ನಾವು ಗೌರವ ಕೊಡುತ್ತೇವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
KEA UGCET 2024
ಬೆಂಗಳೂರು25 ನಿಮಿಷಗಳು ago

UGCET 2024 : ದ್ವಿತೀಯ ಪಿಯುಸಿ 3ನೇ ಪರೀಕ್ಷೆಯಲ್ಲಿ ಅರ್ಹರಾದವರಿಗೆ ಆಪ್ಷನ್‌ ದಾಖಲಿಸಲು ಲಿಂಕ್‌ ಓಪನ್‌

ಚಿಕ್ಕೋಡಿ48 ನಿಮಿಷಗಳು ago

Physical Abuse: ಬಾಲಕಿಯನ್ನು ಕಬ್ಬಿನ ಗದ್ದೆಗೆ ಕರೆದೊಯ್ದು ಅತ್ಯಾಚಾರವೆಸಗಿ ಕೊಂದಿದ್ದ ನೀಚನಿಗೆ ಗಲ್ಲುಶಿಕ್ಷೆ ವಿಧಿಸಿದ ಕೋರ್ಟ್‌

BBMP plans to make arrangements for food in areas where stray dogs do not get food
ಬೆಂಗಳೂರು2 ಗಂಟೆಗಳು ago

Street Dogs : ಬೀದಿನಾಯಿಗಳ ಹಸಿವು ನೀಗಿಸಲು ಮುಂದಾದ ಬಿಬಿಎಂಪಿ; ಸಾರ್ವಜನಿಕರು ಕೈ ಜೋಡಿಸುವಂತೆ ಮನವಿ

Cm Siddaramaiah
ಬೆಂಗಳೂರು2 ಗಂಟೆಗಳು ago

CM Siddaramaiah : ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಪ್ರಶ್ನಿಸಿ ದ್ವಿಸದಸ್ಯ ಪೀಠಕ್ಕೆ ಅಪೀಲು ಅರ್ಜಿ ಸಲ್ಲಿಕೆಗೆ ಸಿಎಂ ಸಿದ್ದರಾಮಯ್ಯ ತೀರ್ಮಾನ

Mahalaya Amavasya on Gandhi Jayanti Poultry Association demands withdrawal of ban on sale of meat
ಬೆಂಗಳೂರು3 ಗಂಟೆಗಳು ago

Mahalaya Amavasya 2024: ಗಾಂಧಿ ಜಯಂತಿಯಂದೇ ಮಹಾಲಯ ಅಮಾವಾಸ್ಯೆ; ಮಾಂಸ ಮಾರಾಟ ನಿಷೇಧ ಹಿಂಪಡೆಯುವಂತೆ ಒತ್ತಾಯ

Road Accident
ಬೆಂಗಳೂರು4 ಗಂಟೆಗಳು ago

Road Accident : ಆಟೋಗೆ ಲೋಡ್‌ ತುಂಬಿದ್ದ ಲಾರಿ ಡಿಕ್ಕಿ; ಚಾಲಕನ ನಿದ್ರೆ ಮಂಪರಿಗೆ ಜೀವ ಬಿಟ್ಟಳು ಯುವತಿ

Techie robbery plans to delete her photo video from lovers mobile phone
ಬೆಂಗಳೂರು5 ಗಂಟೆಗಳು ago

Robbery case : ಲವ್ವರ್ ಮೊಬೈಲ್‌ನಲ್ಲಿದ್ದ ತನ್ನ ಫೋಟೊ, ವಿಡಿಯೊ ಡಿಲೀಟ್‌ ಮಾಡಿಸಲು ಟೆಕ್ಕಿಯ ಖರ್ತನಾಕ್‌ ರಾಬರಿ ಪ್ಲ್ಯಾನ್‌

Hopcoms store loses charm in Bengaluru
ಬೆಂಗಳೂರು6 ಗಂಟೆಗಳು ago

HOPCOMS Outlets : ಬೆಂಗಳೂರಿನಲ್ಲಿ ಚಾರ್ಮ್‌ ಕಳೆದುಕೊಂಡ ಹಾಪ್‌ಕಾಮ್ಸ್‌ ಮಳಿಗೆ

fire accident
ಬೆಂಗಳೂರು ಗ್ರಾಮಾಂತರ7 ಗಂಟೆಗಳು ago

Fire Accident : ಹೊಸೂರು ಸಮೀಪದ ಟಾಟಾ ಕಂಪೆನಿಯಲ್ಲಿ ಭಾರಿ ಅಗ್ನಿ ಅವಘಡ; ಪ್ರಾಣ ಉಳಿಸಿಕೊಳ್ಳಲು ಓಡಿ ಬಂದ ಕಾರ್ಮಿಕರು ‌

Fraud Case
ಬೆಂಗಳೂರು7 ಗಂಟೆಗಳು ago

Fraud Case : ಆನ್‌ಲೈನ್ ಜಾಬ್, ಹೂಡಿಕೆ ಹೆಸರಲ್ಲಿ ವಂಚನೆ; ಕನ್ನ ಹಾಕಿದ ಕೋಟಿ ಹಣ ಚೈನಾ ವ್ಯಾಲೆಟ್‌ಗೆ ರವಾನೆ!

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್4 ವಾರಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 ತಿಂಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 ತಿಂಗಳುಗಳು ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌