ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ವರುಣಾರ್ಭಟ, ಮೂರು ದಿನ ಭಾರೀ ಮಳೆ ಸಾಧ್ಯತೆ - Vistara News

ದೇಶ

ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ವರುಣಾರ್ಭಟ, ಮೂರು ದಿನ ಭಾರೀ ಮಳೆ ಸಾಧ್ಯತೆ

ದೇಶದ ಹಲವು ರಾಜ್ಯಗಳಲ್ಲಿ ಮಳೆರಾಯನ ಅಬ್ಬರ ಜೋರಾಗಿದೆ. ಮುಂದಿನ ಕೆಲವು ದಿನ ಮಳೆ ಆರ್ಭಟ ಹೀಗೆಯೇ ಮುಂದುವರಿಯಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

VISTARANEWS.COM


on

rain news
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ದೇಶದ ಹಲವು ರಾಜ್ಯಗಳಲ್ಲಿ ಮಳೆರಾಯನ ಅಬ್ಬರ ಜೋರಾಗಿದ್ದು, ಜನರು ಅಕ್ಷರಶಃ ನಲುಗಿ ಹೋಗಿದ್ದಾರೆ. ಈ ಬಾರಿ ಮುಂಗಾರಿನ ಆರ್ಭಟ ಬಿರುಸಾಗಿದೆ. ದಕ್ಷಿಣ ಭಾರತದಲ್ಲಿ ಮಾತ್ರವಲ್ಲದೆ ಉತ್ತರದ ರಾಜ್ಯಗಳಲ್ಲೂ ಧಾರಾಕಾರ ಮಳೆಯಾಗುತ್ತಿದೆ. ಪ್ರವಾಹ ಪೀಡಿತ ಸ್ಥಳಗಳಿಂದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡುವ ಕಾರ್ಯ ಮಾಡಲಾಗುತ್ತಿದೆ.

ಕರ್ನಾಟಕ ಸೇರಿದಂತೆ ತೆಲಂಗಾಣ, ಮಧ್ಯಪ್ರದೇಶ, ಅಸ್ಸಾಂ, ರಾಜಸ್ಥಾನ, ಮಹಾರಾಷ್ಟ್ರ, ಗುಜರಾತ್​ನಲ್ಲಿ ಕಳೆದ ಹಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಭೂ ಕುಸಿತ, ಪ್ರವಾಹ ಪರಿಸ್ಥಿತಿಯಿಂದಾಗಿ ಜನರು ಹೈರಾಣಾಗಿ ಹೋಗಿದ್ದಾರೆ.

ಇದನ್ನು ಓದಿ| Weather Report | ರಾಜ್ಯಾದ್ಯಂತ ಮುಂದಿನ 24 ಗಂಟೆ ಭಾರಿ ಮಳೆ ಮುನ್ಸೂಚನೆ

ಮಳೆಗೆ ತತ್ತರಿಸಿದ ಮಹಾ ಮುಂಬೈ

ಮಹಾರಾಷ್ಟ್ರದ ವಾಣಿಜ್ಯ ನಗರಿಯಾಗಿರುವ ಮುಂಬೈನಲ್ಲಿ ಬಿಟ್ಟೂಬಿಡದೇ ಮಳೆಯಾಗುತ್ತಿರುವುದರಿಂದ ನಗರದ ರಸ್ತೆಗಳು, ತಗ್ಗು ಪ್ರದೇಶಗಳಿಗೆಲ್ಲ ನೀರು ನುಗ್ಗಿ ಭಾರೀ ಅವಾಂತರ ಸೃಷ್ಟಿಯಾಗಿದೆ. ಮುಂಬೈನ ಪ್ರಮುಖ ನಗರಗಳಾದ ಪುಣೆ, ಥಾಣೆ, ರಾಯ್​ಗಢ, ಪಾಲ್ಗರ್​ನಲ್ಲಿ ಹೆಚ್ಚು ಮಳೆ ಬೀಳುತ್ತಿದೆ. ಜನ ಮನೆಗಳಿಂದ ಹೊರಬರಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂಬೈನಲ್ಲಿ ಇನ್ನು ಎರಡೂ ಮೂರು ದಿನ ಮಳೆ ಇದೇ ರೀತಿ ಮುಂದುವರೆಯಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬುಧವಾರ (ಜು.13) ಬಾಂದ್ರಾ, ನಾಗಪುರ, ಗೊಂದಿಯಾ ಮತ್ತು ವರ್ಧಾ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಎಚ್ಚರಿಕೆ ನೀಡಿದೆ.

ದೆಹಲಿಯಲ್ಲೂ ವರುಣಾರ್ಭಟ ಜೋರು

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಧಾರಕಾರ ಮಳೆಯಾಗುತ್ತಿದೆ. ಗಾಜಿಯಾಬಾದ್​, ಚಪ್ರುಲ್ಲಾ, ದಾದ್ರಿ, ಗ್ರೇಟರ್ ನೋಯ್ಡಾದಲ್ಲಿ ಮುಂದಿನ ಕೆಲ ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 2 ಮಿ.ಮೀನಷ್ಟು ಮಳೆಯಾಗಿದ್ದು, ನಗರದ ಹಲವು ರಸ್ತೆಗಳು ಸಂಪೂರ್ಣ ಜಲಾವೃತವಾಗಿದೆ.

ಮಳೆಗೆ ಹೈರಾಣಾದ ಗುಜರಾತ್ ಜನ

ಗುಜರಾತ್​ನ ಹಲವು ರಾಜ್ಯಗಳಲ್ಲಿ ಭೀಕರ ಮಳೆಯಾಗುತ್ತಿರುವ ಕಾರಣ ರಾಜ್ಯಾದ್ಯಂತ ಮುಂಜಾಗೃತೆ ಕ್ರಮವಾಗಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾರೀ ಮಳೆಯಿಂದಾಗಿ ಕಳೆದ 24 ಗಂಟೆಯಲ್ಲಿ 6 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಪ್ರವಾಹ, ಭೂಕುಸಿತದಿಂದಾಗಿ 69 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಈವರೆಗೆ 27,896 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದ್ದು, 18,225 ಮಂದಿ ನಿರಾಶ್ರಿತ ಕೇಂದ್ರಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ.

ತೆಲಂಗಾಣದಲ್ಲೂ ಮಳೆರಾಯನ ಗರ್ಜನೆ

ತೆಲಂಗಾಣದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಅದಿಲಾಬಾದ್​ ಜಿಲ್ಲೆಯಲ್ಲಿ ಮಳೆಯ ರೌದ್ರ ನರ್ತನ ಹೆಚ್ಚಾಗಿದ್ದು, ಜಿಲ್ಲೆಯ 10 ಹಳ್ಳಿಗಳು ಸಂಪೂರ್ಣ ಜಲ ಸಮಾಧಿಯಾಗಿದೆ. ಹೀಗಾಗಿ ಸ್ಥಳದಲ್ಲಿರುವ ಎನ್​ಡಿಆರ್​ಎಫ್​ ತಂಡ ಪ್ರವಾಹ ಪೀಡಿತ ಸ್ಥಳಗಳಲ್ಲಿರುವ ಜನರನ್ನು ಬೇರೆಡೆ ಸ್ಥಳಾಂತರ ಮಾಡುವ ಕಾರ್ಯವನ್ನು ಮಾಡುತ್ತಿದ್ದಾರೆ.

ಕರ್ನಾಟಕದಲ್ಲೂ ನಿಲ್ಲದ ಮೇಘ ನರ್ತನ

ಕರ್ನಾಟಕದ ಕರಾವಳಿ ಭಾಗದಲ್ಲಿ ಕಳೆದ ಒಂದು ವಾರದಿಂದಲೂ ನಿರಂತರ ಮಳೆಯಾಗುತ್ತಿರುವುದರಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಬೆಂಗಳೂರು, ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಹಾಸನ, ಹಾವೇರಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿರುವುದರಿಂದ ನದಿಗಳು ಉಕ್ಕಿ ಹರಿಯುತ್ತಿವೆ. ಮಂಗಳವಾರ (ಜು.12) ಸಿಎಂ ಬಸವರಾಜ ಬೊಮ್ಮಾಯಿ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕರ್ನಾಟಕದಲ್ಲೂ ಮುಂದಿನ ಎರಡುಮೂರು ದಿನ ಮಳೆ ಹೀಗೆಯೇ ಮುಂದುವರಿಯಲಿದೆ. ಕರಾವಳಿ ಭಾಗದಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಇದನ್ನು ಓದಿ|Rain News| ಭೀಕರ ಮಳೆಗೆ ಬೀಳುತ್ತಿವೆ ಮನೆಗಳು, ತತ್ತರಿಸುತ್ತಿದೆ ಬದುಕು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Naxals: ಛತ್ತೀಸ್‌ಗಢದಲ್ಲಿ ಭದ್ರತಾ ಸಿಬ್ಬಂದಿ ಭರ್ಜರಿ ಬೇಟೆ; 7 ನಕ್ಸಲರ ಎನ್‌ಕೌಂಟರ್

Naxals: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿರುವ ಕುರಿತು ನಿಖರ ಮಾಹಿತಿ ಪಡೆದ ಭದ್ರತಾ ಸಿಬ್ಬಂದಿಯು ಕಾರ್ಯಾಚರಣೆ ಕೈಗೊಂಡಿದ್ದಾರೆ. ಬೆಳಗ್ಗೆ 11 ಗಂಟೆಗೆ ಕಾರ್ಯಾಚರಣೆ ಆರಂಭವಾಗಿದ್ದು, ಇದಾದ ಕೆಲ ಹೊತ್ತಿನಲ್ಲಿ ನಕ್ಸಲರು ಕೂಡ ಪ್ರತಿದಾಳಿ ನಡೆಸಿದ್ದಾರೆ. ಈ ವೇಳೆ ಮುನ್ನಡೆ ಸಾಧಿಸಿದ ಭದ್ರತಾ ಸಿಬ್ಬಂದಿಯು ಏಳು ಮಾವೋವಾದಿಗಳನ್ನು ಹತ್ಯೆ ಮಾಡಿದ್ದಾರೆ. ಇದರೊಂದಿಗೆ 2024ರಲ್ಲಿ ಭದ್ರತಾ ಸಿಬ್ಬಂದಿಯ ಸ್ಕೋರ್‌ 107 ಆಗಿದೆ.

VISTARANEWS.COM


on

Naxals
Koo

ರಾಯ್‌ಪುರ: ದೇಶದಲ್ಲಿ ಮಾವೋವಾದಿಗಳನ್ನು (Naxalites) ನಿಗ್ರಹಿಸಲು ಪಣ ತೊಟ್ಟಿರುವ ಭದ್ರತಾ ಸಿಬ್ಬಂದಿಯು (Security Forces) ಪ್ರಸಕ್ತ ವರ್ಷದಲ್ಲಿ ಸಾಲು ಸಾಲಾಗಿ ಎನ್‌ಕೌಂಟರ್‌ ಮಾಡುತ್ತಿದ್ದಾರೆ. ಛತ್ತೀಸ್‌ಗಢ, ತೆಲಂಗಾಣ, ಮಹಾರಾಷ್ಟ್ರ ಸೇರಿ ಹಲವೆಡೆ ಕಾರ್ಯಾಚರಣೆ ಮೂಲಕ ಹತ್ಯೆಗೈಯುತ್ತಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ, ಛತ್ತೀಸ್‌ಗಢದಲ್ಲಿ (Chhattisgarh) 7 ಉಗ್ರರನ್ನು ಭದ್ರತಾ ಸಿಬ್ಬಂದಿಯು (Security Forces) ಗುರುವಾರ (ಮೇ 23) ಎನ್‌ಕೌಂಟರ್‌ ಮಾಡಿದ್ದಾರೆ. ಇದರೊಂದಿಗೆ ಭಧ್ರತಾ ಸಿಬ್ಬಂದಿಯು ಪ್ರಸಕ್ತ ವರ್ಷದಲ್ಲಿಯೇ 107 ಮಾವೋವಾದಿಗಳನ್ನು ಹತ್ಯೆ ಮಾಡಿದಂತಾಗಿದೆ.

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿರುವ ಕುರಿತು ನಿಖರ ಮಾಹಿತಿ ಪಡೆದ ಭದ್ರತಾ ಸಿಬ್ಬಂದಿಯು ಕಾರ್ಯಾಚರಣೆ ಕೈಗೊಂಡಿದ್ದಾರೆ. ಬೆಳಗ್ಗೆ 11 ಗಂಟೆಗೆ ಕಾರ್ಯಾಚರಣೆ ಆರಂಭವಾಗಿದ್ದು, ಇದಾದ ಕೆಲ ಹೊತ್ತಿನಲ್ಲಿ ನಕ್ಸಲರು ಕೂಡ ಪ್ರತಿದಾಳಿ ನಡೆಸಿದ್ದಾರೆ. ಬಿಜಾಪುರ ಹಾಗೂ ನಾರಾಯಣಪುರ ಗಡಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮುನ್ನಡೆ ಸಾಧಿಸಿದ ಭದ್ರತಾ ಸಿಬ್ಬಂದಿಯು ಏಳು ಉಗ್ರರನ್ನು ಹತ್ಯೆಗೈದಿದ್ದಾರೆ. ಇನ್ನೂ ಕಾರ್ಯಾಚರಣೆ ಮುಂದುವರಿದಿದೆ” ಎಂದು ನಾರಾಯಣಪುರ ಎಸ್‌ಪಿ ಪ್ರಭಾತ್‌ ಕುಮಾರ್‌ ತಿಳಿಸಿದ್ದಾರೆ.

5 ತಿಂಗಳಲ್ಲಿ 107 ನಕ್ಸಲರ ಖತಂ

ಪ್ರಸಕ್ತ ವರ್ಷದಲ್ಲಿ ಭದ್ರತಾ ಸಿಬ್ಬಂದಿಯು ನಕ್ಸಲರ ವಿರುದ್ಧ ಭಾರಿ ಸಮರ ಸಾರಿದ್ದಾರೆ. ಶುಕ್ರವಾರ ಹತ್ಯೆಗೈದ 12 ನಕ್ಸಲರು ಸೇರಿ ಪ್ರಸಕ್ತ ವರ್ಷದ ಐದು ತಿಂಗಳಲ್ಲಿ 107 ಮಾವೋವಾದಿಗಳನ್ನು ಭದ್ರತಾ ಸಿಬ್ಬಂದಿಯು ಹತ್ಯೆ ಮಾಡಿದ್ದಾರೆ. 2023ರಲ್ಲಿ ಭದ್ರತಾ ಸಿಬ್ಬಂದಿಯು 22 ಮಾವೋವಾದಿಗಳನ್ನು ಎನ್‌ಕೌಂಟರ್‌ ಮಾಡಿದ್ದರು. ಲೋಕಸಭೆ ಚುನಾವಣೆಗೆ ವೇಳೆಯೇ ತೆಲಂಗಾಣ ಗಡಿ ಹಾಗೂ ಛತ್ತೀಸ್‌ಗಢದ ಸುಕ್ಮಾ, ಬಿಜಾಪುರ ಸೇರಿ ಹಲವೆಡೆ ಮಾವೋವಾದಿಗಳ ಉಪಟಳ ಜಾಸ್ತಿ ಇರುತ್ತದೆ. ಹಾಗಾಗಿ, ಭದ್ರತಾ ಸಿಬ್ಬಂದಿಯು ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.

ಮೇ ‌13ರಂದು ಮಹಾರಾಷ್ಟ್ರದಲ್ಲಿ ಮೂವರು ಮಾವೋವಾದಿಗಳನ್ನು ಭದ್ರತಾ ಸಿಬ್ಬಂದಿಯು ಹತ್ಯೆ ಮಾಡಿದ್ದರು. ಗಡ್ಚಿರೋಲಿ ಜಿಲ್ಲೆಯ ಕಟ್ರಂಗಟ್ಟ ಗ್ರಾಮದ ಸುತ್ತಮುತ್ತಲಿನ ಅರಣ್ಯ ಪ್ರದೇಶದಲ್ಲಿ ಮಾವೋವಾದಿಗಳು ಅಡಗಿರುವ ಕುರಿತು ಗುಪ್ತಚರ ಮೂಲಗಳಿಂದ ನಿಖರ ಮಾಹಿತಿ ಮೇರೆಗೆ ಭದ್ರತಾ ಸಿಬ್ಬಂದಿಯು ಕಾರ್ಯಾಚರಣೆ ಕೈಗೊಂಡಿದ್ದರು. ಭಾರಿ ಪ್ರಮಾಣದ ದಾಳಿ, ಅಕ್ರಮ ಚಟುವಟಿಕೆಗೆ ಯೋಜನೆ ರೂಪಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗುತ್ತಲೇ ದಾಳಿ ನಡೆಸಿ ಮೂವರನ್ನು ಹತ್ಯೆ ಮಾಡಿದ್ದರು.

ಇದನ್ನೂ ಓದಿ: Naxals in Karnataka : ಕುಕ್ಕೆ ಸುಬ್ರಹ್ಮಣ್ಯ ಸಮೀಪ ಮತ್ತೆ ಕಾಣಿಸಿಕೊಂಡ ನಕ್ಸಲರು

Continue Reading

ತಂತ್ರಜ್ಞಾನ

WhatsApp AI: WhatsAppಗೂ ಬಂತು ಎಐ; ನಿಮ್ಮ ಪ್ರೊಫೈಲ್‌ ಫೋಟೊ ಇನ್ನು AI ಜನರೇಟೆಡ್!‌

WhatsApp AI: ವಾಟ್ಸ್‌ಆ್ಯಪ್‌ ಫೀಚರ್‌ಗಳ ಕುರಿತು ವಿಶ್ವಾಸಾರ್ಹ ಮಾಹಿತಿ ನೀಡುವ ಡಬ್ಲ್ಯೂಎ ಬೀಟಾ ಇನ್ಫೋ ಈ ಕುರಿತು ಮಾಹಿತಿ ನೀಡಿದೆ. ವಾಟ್ಸ್‌ಆ್ಯಪ್‌ ಬಳಕೆದಾರರು ಆ್ಯಪ್‌ನಲ್ಲಿ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ತಂತ್ರಜ್ಞಾನದ ಮೂಲಕ ತಮ್ಮ ಪ್ರೊಫೈಲ್‌ ಫೋಟೊ ಸೆಟ್‌ ಮಾಡಬಹುದಾಗಿದೆ. ಹೊಸ ಫೀಚರ್‌ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ.

VISTARANEWS.COM


on

WhatsApp AI
Koo

ನವದೆಹಲಿ: ಮೆಟಾ ಒಡೆತನದ ವಾಟ್ಸ್‌ಆ್ಯಪ್‌ (WhatsApp) ನಿಯಮಿತವಾಗಿ ಹೊಸ ಹೊಸ ಫೀಚರ್‌ಗಳನ್ನು ಪರಿಚಯಿಸುವ ಮೂಲಕ ಗ್ರಾಹಕರಿಗೆ ನೂತನ ಅನುಭವ, ಸೌಕರ್ಯಗಳನ್ನು ನೀಡುತ್ತದೆ. ಈಗ ವಾಟ್ಸ್‌ಆ್ಯಪ್‌ ಮತ್ತೊಂದು ಫೀಚರ್‌ ಬಿಡುಗಡೆ ಮಾಡಲಿದ್ದು, ಗ್ರಾಹಕರ ಡಿಪಿ ಅಥವಾ ಪ್ರೊಫೈಲ್‌ ಫೋಟೊಗಳು (Profile Photo) ಇನ್ನು ಎಐ ಜನರೇಟೆಡ್‌ (ಕೃತಕ ಬುದ್ಧಿಮತ್ತೆ) (WhatsApp AI) ಆಗಲಿವೆ. ಇತ್ತೀಚೆಗಷ್ಟೇ ಎಐ ಸ್ಟಿಕ್ಕರ್‌ಗಳನ್ನು (ಎಮೋಜಿ) ಪರಿಚಯಿಸಿದ್ದ ವಾಟ್ಸ್‌ಆ್ಯಪ್‌ ಈಗ ಮತ್ತೊಂದು ಫೀಚರ್‌ ಮುಂದಿಡುತ್ತಿದೆ.

ವಾಟ್ಸ್‌ಆ್ಯಪ್‌ ಫೀಚರ್‌ಗಳ ಕುರಿತು ವಿಶ್ವಾಸಾರ್ಹ ಮಾಹಿತಿ ನೀಡುವ ಡಬ್ಲ್ಯೂಎ ಬೀಟಾ ಇನ್ಫೋ ಈ ಕುರಿತು ಮಾಹಿತಿ ನೀಡಿದೆ. ವಾಟ್ಸ್‌ಆ್ಯಪ್‌ ಬಳಕೆದಾರರು ಆ್ಯಪ್‌ನಲ್ಲಿ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ತಂತ್ರಜ್ಞಾನದ ಮೂಲಕ ತಮ್ಮ ಪ್ರೊಫೈಲ್‌ ಫೋಟೊ ಸೆಟ್‌ ಮಾಡಬಹುದಾಗಿದೆ. ಐಎ ಆಧಾರಿತ, ಬಳಕೆದಾರರ ವ್ಯಕ್ತಿತ್ವ, ಆಸಕ್ತಿ ಅಥವಾ ಮನಸ್ಸಿನ ಸ್ಥಿತಿ (Mood) ಆಧಾರದ ಮೇಲೆ ಹೊಸ ಪ್ರೊಫೈಲ್‌ ಫೋಟೊ ಕ್ರಿಯೇಟ್‌ ಮಾಡಬಹುದಾಗಿದೆ ಎಂದು ಡಬ್ಲ್ಯೂಎ ಬೀಟಾ ಇನ್ಫೋ ಮಾಹಿತಿ ನೀಡಿದೆ.

employee attacked the boss and broke the iPhone for removing him from the WhatsApp group

ವಾಟ್ಸ್‌ಆ್ಯಪ್‌ ಈಗ ಬೀಟಾ ವರ್ಷನ್‌ನಲ್ಲಿ (ನಿಯಮಿತ ಬಳಕೆದಾರರಿಗೆ ಅಪ್‌ಡೇಟೆಡ್‌ ವರ್ಷನ್‌ ಆ್ಯಪ್‌ ಬಳಸಲು ಕೊಟ್ಟು, ಅವರ ಅಭಿಪ್ರಾಯ ಸಂಗ್ರಹಿಸುವುದು) ಅಪ್‌ಡೇಟ್‌ ಆಗಿರುವ ಅಪ್ಲಿಕೇಶನ್‌ ಬಿಡುಗಡೆ ಮಾಡಿದೆ. ಆ್ಯಂಡ್ರಾಯ್ಡ್‌ ಬಳಕೆದಾರರಿಗೆ ಹೊಸ ಫೀಚರ್‌ ಶೀಘ್ರದಲ್ಲೇ ಲಭ್ಯವಾಗಲಿದೆ ಎಂದು ಹೇಳಲಾಗುತ್ತಿದೆ. ಅನಗತ್ಯವಾದ, ಅನ್‌ರೀಡ್‌ (Unread) ಮೇಸೇಜ್‌ಗಳನ್ನು ಅಳಿಸಿ ಹಾಕುವುದು ಸೇರಿ ಹಲವು ಫೀಚರ್‌ಗಳನ್ನೂ ಶೀಘ್ರದಲ್ಲೇ ಪರಿಚಯಿಸಲಾಗುತ್ತದೆ ಎಂದು ತಿಳಿದುಬಂದಿದೆ.

ಒರಿಜಿನಲ್‌ ಫೋಟೊ ಬೇಕಾಗಿಲ್ಲ

ಕೃತಕ ಬುದ್ಧಿಮತ್ತೆ ತಂತ್ರಜ್ಞಾನದ ಮೂಲಕ ವಾಟ್ಸ್‌ಆ್ಯಪ್‌ ಪ್ರೊಫೈಲ್‌ ಫೋಟೊ ಕ್ರಿಯೇಟ್‌ ಮಾಡಲು ಒರಿಜಿನಲ್‌ ಫೋಟೊಗಳನ್ನು ಬಳಸಬೇಕಿಲ್ಲ. ಆಯಾ ವ್ಯಕ್ತಿಯ ಮನಸ್ಥಿತಿ, ಖುಷಿ, ದುಃಖವನ್ನು ಅಭಿವ್ಯಕ್ತಪಡಿಸುವ ರೀತಿಯಲ್ಲಿ ಕೃತಕ ಬುದ್ಧಿಮತ್ತೆ ಮೂಲಕ ಪ್ರೊಫೈಲ್‌ ಫೋಟೊ ತಯಾರಿಸಬಹುದಾಗಿದೆ. ಹಾಗೆಯೇ, ಬಳಕೆದಾರರ ಖಾಸಗಿತನವನ್ನು ಕಾಪಾಡಲು ವಾಟ್ಸ್‌ಆ್ಯಪ್‌ ಆದ್ಯತೆ ನೀಡಿದೆ. ಯಾರದ್ದೋ ವ್ಯಕ್ತಿಯ ಒರಿಜಿನಲ್‌ ಫೋಟೊ ಬಳಸಿ, ಎಐ ಮೂಲಕ ಇಮೇಜ್‌ ಕ್ರಿಯೇಟ್‌ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್‌ ಮಾಡುವುದನ್ನು ನಿಗ್ರಹಿಸುವ ತಂತ್ರಜ್ಞಾನ ಹೊಂದಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Fake News: ವಾಟ್ಸ್‌ಆ್ಯಪ್‌ನಲ್ಲಿ ಸಿಕ್ಕಿದ್ದೆಲ್ಲ ಫಾರ್ವರ್ಡ್‌ ಮಾಡಿದರೆ 3 ವರ್ಷ ಜೈಲು; ಹೊಸ ಕಾನೂನು ಬಗ್ಗೆ ಇರಲಿ ಎಚ್ಚರಿಕೆ

Continue Reading

ದೇಶ

Share Market: ಸೆನ್ಸೆಕ್ಸ್‌ ನೆಗೆತ, ನಿಫ್ಟಿ ಜಿಗಿತ; ಮೋದಿ ಭವಿಷ್ಯ ನಿಜವಾಗುತ್ತಾ? ಇಂದಿನ ಏರಿಕೆಗೆ ಕಾರಣಗಳು ಗೊತ್ತಾ?

Share Market: ಷೇರು ಮಾರುಕಟ್ಟೆಯಲ್ಲಿ ಗಣನೀಯ ಪ್ರಗತಿಯಾಗಿದೆ. ಬಿಎಸ್‌ಇ ಸೆನ್ಸೆಕ್ಸ್‌ 1,197 ಪಾಯಿಂಟ್ಸ್‌ ಏರಿಕೆಯೊಂದಿಗೆ ದಾಖಲೆಯ 75,460 ಪಾಯಿಂಟ್ಸ್‌ಗೆ ತಲುಪಿದರೆ, ನಿಫ್ಟಿಯು 370 ಪಾಯಿಂಟ್ಸ್‌ ಏರಿಕೆಯೊಂದಿಗೆ 22,989 ಪಾಯಿಂಟ್ಸ್‌ ತಲುಪಿದೆ. ಇದು ಲೋಕಸಭೆ ಚುನಾವಣೆ ಫಲಿತಾಂಶ, ಸ್ಥಿರ ಸರ್ಕಾರದ ಮುನ್ಸೂಚನೆಗೆ ಹಿಡಿದ ಕನ್ನಡಿ ಎಂದೇ ವಿಶ್ಲೇಷಿಸಲಾಗುತಿದೆ.

VISTARANEWS.COM


on

Share Market
Koo

ಮುಂಬೈ: “ಲೋಕಸಭೆ ಚುನಾವಣೆ (Lok Sabha Election 2024) ಫಲಿತಾಂಶ ಪ್ರಕಟವಾಗುವ ಜೂನ್‌ 4ರಂದು ಭಾರತದ ಷೇರು ಮಾರುಕಟ್ಟೆಯು (Share Market) ದಾಖಲೆ ಬರೆಯಲಿದೆ” ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಕೂಡ ಇದೇ ಮಾತು ಹೇಳಿದ್ದಾರೆ. ಇದರ ಮಧ್ಯೆಯೇ, ಗುರುವಾರ (ಮೇ 23) ಷೇರು ಮಾರುಕಟ್ಟೆಯಲ್ಲಿ ಗಣನೀಯ ಪ್ರಗತಿಯಾಗಿದೆ. ಬಿಎಸ್‌ಇ ಸೆನ್ಸೆಕ್ಸ್‌ 1,197 ಪಾಯಿಂಟ್ಸ್‌ ಏರಿಕೆಯೊಂದಿಗೆ ದಾಖಲೆಯ 75,460 ಪಾಯಿಂಟ್ಸ್‌ಗೆ ತಲುಪಿದರೆ, ನಿಫ್ಟಿಯು 370 ಪಾಯಿಂಟ್ಸ್‌ ಏರಿಕೆಯೊಂದಿಗೆ 22,989 ಪಾಯಿಂಟ್ಸ್‌ ತಲುಪಿದೆ. ಲೋಕಸಭೆ ಚುನಾವಣೆ ಫಲಿತಾಂಶ, ಸ್ಥಿರ ಸರ್ಕಾರದ ಮುನ್ಸೂಚನೆಯ ಸಂಕೇತವಾಗಿಯೇ ಷೇರು ಮಾರುಕಟ್ಟೆಯು ದಾಖಲೆ ಬರೆದಿದೆ ಎಂದೇ ತಜ್ಞರು ವಿಶ್ಲೇಷಿಸುತ್ತಿದ್ದಾರೆ.

“ನಿಫ್ಟಿಯು ದಾಖಲೆಯ ಏರಿಕೆ ಕಾಣುವ ಮೂಲಕ ಚುನಾವಣೆ ನಂತರದಲ್ಲಿ ದೇಶದಲ್ಲಿ ರಾಜಕೀಯ ಸ್ಥಿರತೆ ಇರುತ್ತದೆ ಎಂಬ ಸಂದೇಶ ರವಾನಿಸಿದೆ. ಅತಿ ಹೆಚ್ಚಿನ ಹಣ ಹೂಡಿಕೆ ಮಾಡುವವರು ಸೇರಿ ಎಲ್ಲರಿಗೂ ಇದು ಸಕಾರಾತ್ಮಕ ಬೆಳವಣಿಗೆಯಾಗಿದೆ” ಎಂದು ಜಿಯೋಜೀತ್‌ ಫೈನಾನ್ಶಿಯಲ್‌ ಸರ್ವಿಸಸ್‌ನ ಮುಖ್ಯ ಹೂಡಿಕೆ ರಣತಂತ್ರಗಾರ ವಿ.ಕೆ.ವಿಜಯ್‌ ಕುಮಾರ್‌ ಮಾಹಿತಿ ನೀಡಿದ್ದಾರೆ. ಸಾಮಾನ್ಯವಾಗಿ, ಸಾರ್ವತ್ರಿಕ ಚುನಾವಣೆ ಫಲಿತಾಂಶದ ದಿನ ಷೇರು ಪೇಟೆಯಲ್ಲಿ ಲವಲವಿಕೆ ಇದ್ದೇ ಇರುತ್ತದೆ. ಆದರೆ, ಜೂನ್‌ 4ರಂದು ಇತಿಹಾಸ ಸೃಷ್ಟಿಯಾಗುತ್ತದೆ ಎಂದು ಹೇಳುತ್ತಿರುವುದು ಹೂಡಿಕೆದಾರರ ಖುಷಿ ಹೆಚ್ಚಿಸಿದೆ.

Share Market

ಕೇಂದ್ರಕ್ಕೆ ಆರ್‌ಬಿಐ ಲಾಭಾಂಶದ ಕೊಡುಗೆ

ಕೇಂದ್ರ ಸರ್ಕಾರಕ್ಕೆ 2023-24ನೇ ಸಾಲಿನಲ್ಲಿ ಭಾರತೀಯ ರಿಸರ್ವ್‌ ಬ್ಯಾಂಕ್ ದಾಖಲೆಯ 2.10 ಲಕ್ಷ ಕೋಟಿ ರೂ. ಡೆವಿಡೆಂಡ್‌ (ಲಾಭಾಂಶ) ನೀಡಲು ಒಪ್ಪಿಗೆ ನೀಡಿರುವುದು ಕೂಡ ಷೇರು ಮಾರುಕಟ್ಟೆಯ ಏರಿಕೆಗೆ ಕಾರಣ ಎನ್ನಲಾಗುತ್ತಿದೆ. 2022-23ರಲ್ಲಿ ಕೇಂದ್ರ ಸರ್ಕಾರಕ್ಕೆ ಆರ್‌ಬಿಐ 87 ಸಾವಿರ ಕೋಟಿ ರೂ. ನೀಡಿತ್ತು. ಆದರೆ, ಅದು ಎರಡು ಪಟ್ಟು ಜಾಸ್ತಿಯಾಗಿರುವುದರಿಂದ ಕೇಂದ್ರ ಸರ್ಕಾರಕ್ಕೆ ಹೆಚ್ಚಿನ ಹಣ ಸಿಗುತ್ತದೆ. ಆ ಹಣವು ಸಾರ್ವಜನಿಕ ವಲಯದ ಸಂಸ್ಥೆಗಳಿಗೆ ವಿನಿಯೋಗವಾಗುತ್ತದೆ. ಇದರಿಂದ ಷೇರು ಪೇಟೆಯಲ್ಲಿ ಲಾಭ ಗಳಿಸಬಹುದು ಎಂಬ ಕಾರಣದಿಂದ ಹೂಡಿಕೆ ಜಾಸ್ತಿಯಾಗಿದೆ. ಗುರುವಾರವೂ ಸಾರ್ವಜನಿಕ ವಲಯದ ಸಂಸ್ಥೆಗಳು ಲಾಭ ಗಳಿಸಿರುವುದು ಈ ಮಾತಿಗೆ ಪುಷ್ಟಿ ನೀಡುವಂತಿದೆ.

ಷೇರು ಮಾರುಕಟ್ಟೆ ಬಗ್ಗೆ ಮೋದಿ ಹೇಳಿದ್ದೇನು?

“ಕೇಂದ್ರ ಸರ್ಕಾರವು ಕಳೆದ 10 ವರ್ಷಗಳಲ್ಲಿ ಮಹತ್ವದ ಸುಧಾರಣೆ ತಂದಿದೆ. ಆರ್ಥಿಕ ಶಿಸ್ತು, ವಿತ್ತೀಯ ಪ್ರಕ್ರಿಯೆಗಳಲ್ಲಿ ಸುಧಾರಣಾ ಕ್ರಮಗಳನ್ನು ಅನುಸರಿಸಿಕೊಂಡಿದೆ. ಇದರಿಂದಾಗಿ ಭಾರತದ ಷೇರು ಮಾರುಕಟ್ಟೆಯು ಕಳೆದ ಒಂದು ದಶಕದಲ್ಲಿ ಗಣನೀಯ ಏಳಿಗೆ ಕಂಡಿದೆ. 10 ವರ್ಷಗಳ ಹಿಂದೆ ಸೆನ್ಸೆಕ್ಸ್‌ 25 ಸಾವಿರ ಪಾಯಿಂಟ್ಸ್‌ ಹೊಂದಿತ್ತು. ಆದರೀಗ, ಸೆನ್ಸೆಕ್ಸ್‌ 75 ಸಾವಿರ ಪಾಯಿಂಟ್ಸ್‌ಗೆ ಏರಿಕೆಯಾಗಿದೆ. ಈಕ್ವಿಟಿ ಮಾರುಕಟ್ಟೆಯ ಮೌಲ್ಯವು ಕೆಲ ದಿನಗಳ ಹಿಂಷ್ಟೇ 5 ಲಕ್ಷ ಕೋಟಿ ಡಾಲರ್‌ ಆಗಿದೆ. ಹಾಗಾಗಿ, ಜೂನ್‌ 4ರಂದು ಷೇರು ಮಾರುಕಟ್ಟೆಯು ದಾಖಲೆ ಬರೆಯಲಿದೆ” ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಇದನ್ನೂ ಓದಿ: Equity Market: ದೇಶದ ಷೇರುಪೇಟೆಯಲ್ಲಿ ಗೂಳಿ ನೆಗೆತ; 6 ತಿಂಗಳಲ್ಲಿ 1 ಲಕ್ಷ ಕೋಟಿ ಡಾಲರ್‌ ಗಳಿಕೆ!

Continue Reading

ದೇಶ

Prashant Kishor: ಜೂನ್‌ 4ರಂದು ಪ್ರತಿಪಕ್ಷಗಳು ನೀರು ಕುಡಿಯಲಿವೆ; ಪ್ರಶಾಂತ್‌ ಕಿಶೋರ್‌ ಮಾತಿನ ಮರ್ಮವೇನು?

Prashant Kishor: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂಬುದಾಗಿ ಪ್ರಶಾಂತ್‌ ಕಿಶೋರ್‌ ಪ್ರತಿಪಾದಿಸಿದ್ದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗಳು ವ್ಯಕ್ತವಾಗುತ್ತಿದೆ. ಇದರ ಬೆನ್ನಲ್ಲೇ, ಪ್ರಶಾಂತ್‌ ಕಿಶೋರ್‌ ಅವರು ಪ್ರತಿಪಕ್ಷಗಳಿಗೆ, ಟೀಕಾಕಾರರಿಗೆ ವ್ಯಂಗ್ಯವಾಗಿ ಉತ್ತರ ನೀಡಿದ್ದಾರೆ. “ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು. ಜೂನ್‌ 4ರಂದು ಪಕ್ಕದಲ್ಲಿ ನೀರು ಇಟ್ಟುಕೊಂಡಿರಿ” ಎಂದು ಪೋಸ್ಟ್‌ ಮಾಡಿದ್ದಾರೆ. ಬಿಜೆಪಿಗೆ 300ಕ್ಕೂ ಅಧಿಕ ಸ್ಥಾನಗಳು ಲಭಿಸುವುದು ನಿಶ್ಚಿತ ಎಂಬುದಾಗಿ ಪ್ರಶಾಂತ್‌ ಕಿಶೋರ್‌ ಹೇಳಿದ್ದರು.

VISTARANEWS.COM


on

Prashant Kishor
Koo

ನವದೆಹಲಿ: ಚುನಾವಣಾ ರಣತಂತ್ರಗಾರ, ರಾಜಕೀಯ ತಜ್ಞ ಪ್ರಶಾಂತ್‌ ಕಿಶೋರ್‌ (Prashant Kishor) ಅವರು ಲೋಕಸಭೆ ಚುನಾವಣೆ (Lok Sabha Election 2024) ಫಲಿತಾಂಶದ ಬಗ್ಗೆ ಮಾತನಾಡಿರುವ, ಸಂದರ್ಶನದಲ್ಲಿ ಉಲ್ಲೇಖಿಸಿರುವ ಅಂಶಗಳು ದೇಶಾದ್ಯಂತ ಚರ್ಚೆಯಾಗುತ್ತಿವೆ. ನರೇಂದ್ರ ಮೋದಿ (Narendra Modi) ಅವರ ವರ್ಚಸ್ಸು ಕಡಿಮೆಯಾದರೂ ಬಿಜೆಪಿ ಬಹುಮತ ಸಾಬೀತುಪಡಿಸಲಿದೆ ಎಂಬುದಾಗಿ ವಿಶ್ಲೇಷಿಸಿದ್ದಾರೆ. ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂಬುದಾಗಿ ಪ್ರಶಾಂತ್‌ ಕಿಶೋರ್‌ ಪ್ರತಿಪಾದಿಸಿದ್ದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗಳು ವ್ಯಕ್ತವಾಗುತ್ತಿದೆ. ಇದರ ಬೆನ್ನಲ್ಲೇ, ಪ್ರಶಾಂತ್‌ ಕಿಶೋರ್‌ ಅವರು ಪ್ರತಿಪಕ್ಷಗಳಿಗೆ, ಟೀಕಾಕಾರರಿಗೆ ವ್ಯಂಗ್ಯವಾಗಿ ಉತ್ತರ ನೀಡಿದ್ದಾರೆ. “ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು. ಜೂನ್‌ 4ರಂದು ಪಕ್ಕದಲ್ಲಿ ನೀರು ಇಟ್ಟುಕೊಂಡಿರಿ” ಎಂದು ಪೋಸ್ಟ್‌ ಮಾಡಿದ್ದಾರೆ.

“ಹೆಚ್ಚಿನ ಪ್ರಮಾಣದ ನೀರು ಕುಡಿಯುವುದರಿಂದ ದೇಹ ಹಾಗೂ ಮನಸ್ಸು ನಿರ್ಜಲೀಕರಣಗೊಳ್ಳುತ್ತದೆ. ನಾನು ನೀಡಿರುವ ಸಮೀಕ್ಷಾ ವರದಿಯ ಕುರಿತು ಗಾಬರಿಗೊಂಡವರು ಜೂನ್‌ 4ರಂದು ಹೆಚ್ಚಿನ ಪ್ರಮಾಣದ ನೀರನ್ನು ಪಕ್ಕದಲ್ಲೇ ಇಟ್ಟುಕೊಳ್ಳುವುದು ತುಂಬ ಒಳಿತು” ಎಂಬುದಾಗಿ ಪ್ರಶಾಂತ್‌ ಕಿಶೋರ್‌ ಅವರು ಎಕ್ಸ್‌ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ. ಅಷ್ಟೇ ಅಲ್ಲ, 2021ರಲ್ಲಿ ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆ ಫಲಿತಾಂಶ ಹಾಗೂ ಪ್ರಶಾಂತ್‌ ಕಿಶೋರ್‌ ಲೆಕ್ಕಾಚಾರ ನಿಖರವಾಗಿತ್ತು ಎಂಬುದನ್ನು ಕೂಡ ಅವರು ನೆನಪಿಸಿದ್ದಾರೆ.

ಪ್ರಶಾಂತ್‌ ಕಿಶೋರ್‌ ಹೇಳಿದ್ದೇನು?

ಕೆಲ ದಿನಗಳ ಹಿಂದಷ್ಟೇ ಸಂದರ್ಶನವೊಂದರಲ್ಲಿ ಪ್ರಶಾಂತ್‌ ಕಿಶೋರ್‌ ಹಲವು ವಿಷಯಗಳನ್ನು ಪ್ರಸ್ತಾಪಿಸಿದ್ದರು. “ದೇಶದಲ್ಲಿ ನರೇಂದ್ರ ಮೋದಿ ಅವರ ವರ್ಚಸ್ಸು ಕಡಿಮೆಯಾದರೂ ಜನಕ್ಕೆ ಅವರ ಮೇಲೆ ಸಿಟ್ಟಿಲ್ಲ. ಹಾಗಾಗಿ, ಬಿಜೆಪಿ 300ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ” ಎಂದಿದ್ದರು. ಹಾಗೆಯೇ, ವಿರೋಧ ಪಕ್ಷಗಳ ಕಾರ್ಯ ವೈಖರಿಯನ್ನೂ ಅವರು ಟೀಕಿಸಿದ್ದರು. ಬಿಜೆಪಿ ವಿರುದ್ಧ ಪ್ರಯೋಗಿಸಬಹುದಾದ ಅನೇಕ ಅಸ್ತ್ರಗಳನ್ನು, ಅವಕಾಶಗಳನ್ನು ʼಇಂಡಿಯಾʼ ಮೈತ್ರಿಕೂಟ ಸಮರ್ಪಕವಾಗಿ ಬಳಸಿಕೊಳ್ಳುತ್ತಿಲ್ಲ ಎಂದು ಹೇಳಿದ್ದರು.

ಕಾಂಗ್ರೆಸ್‌ ರಾಜ್ಯ ವಿಧಾನಸಭಾ ಚುನಾವಣೆಗಳ ಮೇಲೆ ಗಮನ ಕೇಂದ್ರೀಕರಿಸಿದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ಮತ್ತು ಡಿಸೆಂಬರ್ ನಡುವಿನ ನಿರ್ಣಾಯಕ ತಿಂಗಳುಗಳು ವ್ಯರ್ಥವಾಗಿದೆ. ಇದು ʼಇಂಡಿಯಾʼ ಬಣದ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ ಎಂದು ಅವರು ಒತ್ತಿ ಹೇಳಿದ್ದರು. ಡಿಸೆಂಬರ್‌ನಲ್ಲಿ ಮೂರು ರಾಜ್ಯಗಳಲ್ಲಿನ ಬಿಜೆಪಿಯ ಗೆಲುವು ಮತ್ತು ಜನವರಿಯಲ್ಲಿ ನಡೆದ ಅಯೋಧ್ಯೆ ರಾಮ ಮಂದಿರದ ಉದ್ಘಾಟನೆ ಕಮಲ ಪಡೆಯ ಗೆಲುವಿಗೆ ಇನ್ನಷ್ಟು ಶಕ್ತಿ ನೀಡಲಿದೆ ಎಂದಿದ್ದರು. ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗಳು ವ್ಯಕ್ತವಾಗಿದ್ದವು.

ಇದನ್ನೂ ಓದಿ: Lok Sabha Election : ಬಿಜೆಪಿ 305 ಸೀಟ್ ಗೆಲ್ಲೋದು ಗ್ಯಾರಂಟಿ; ಅಮೆರಿಕದ ರಾಜಕೀಯ ಪಂಡಿತನ ಭವಿಷ್ಯ

Continue Reading
Advertisement
Rajakaluve
ಸಂಪಾದಕೀಯ5 mins ago

ವಿಸ್ತಾರ ಸಂಪಾದಕೀಯ: ಮುಂಗಾರಿಗೆ ಮುನ್ನವೇ ರಾಜಕಾಲುವೆ ಒತ್ತುವರಿ ತೆರವಾಗಲಿ

IPL 2024
ಪ್ರಮುಖ ಸುದ್ದಿ6 mins ago

IPL 2024 : ಅಭಿಮಾನಿಗಳ ದುರಂಹಕಾರವೇ ಆರ್​​ಸಿಬಿ ಸೋಲಿಗೆ ಕಾರಣ ಎಂದ ಮಾಜಿ ಕ್ರಿಕೆಟಿಗ

DCM D K Shivakumar instructed to test drinking water everywhere including Bengaluru
ಕರ್ನಾಟಕ11 mins ago

Bengaluru News: ಬೆಂಗಳೂರು ಸೇರಿದಂತೆ ಎಲ್ಲೆಡೆ ಕುಡಿಯುವ ನೀರಿನ ಪರೀಕ್ಷೆಗೆ ಸೂಚನೆ ನೀಡಿದ ಡಿ.ಕೆ.ಶಿವಕುಮಾರ್

Naxals
ದೇಶ49 mins ago

Naxals: ಛತ್ತೀಸ್‌ಗಢದಲ್ಲಿ ಭದ್ರತಾ ಸಿಬ್ಬಂದಿ ಭರ್ಜರಿ ಬೇಟೆ; 7 ನಕ್ಸಲರ ಎನ್‌ಕೌಂಟರ್

IPL 2024
ಪ್ರಮುಖ ಸುದ್ದಿ1 hour ago

IPL 2024 : ಐಪಿಎಲ್​ನಲ್ಲಿ ಕಳಪೆ ದಾಖಲೆಯೊಂದನ್ನು ಸೃಷ್ಟಿಸಿ ನಿರ್ಗಮಿಸಿದ ಆರ್​ಸಿಬಿ

arecanut price
ಕರ್ನಾಟಕ2 hours ago

Arecanut Price: ಮಲೆನಾಡಿನ ರಾಶಿ ಇಡಿ ಅಡಿಕೆ ಧಾರಣೆ ‘ಅಬ್‌ ಕಿ ಬಾರ್ ₹60,000 ಪಾರ್ ಆಗಲಿದೆಯಾ?

Self Harming Husband commits suicide for taking his wife home
ಕರ್ನಾಟಕ2 hours ago

Self Harming: ಹೆಂಡತಿಯನ್ನು ತವರು ಮನೆಗೆ ಕರೆದುಕೊಂಡು ಹೋಗಿದ್ದಕ್ಕೆ ಪತಿ ಆತ್ಮಹತ್ಯೆ!

WhatsApp AI
ತಂತ್ರಜ್ಞಾನ2 hours ago

WhatsApp AI: WhatsAppಗೂ ಬಂತು ಎಐ; ನಿಮ್ಮ ಪ್ರೊಫೈಲ್‌ ಫೋಟೊ ಇನ್ನು AI ಜನರೇಟೆಡ್!‌

T20 world cup 2024
ಕ್ರೀಡೆ2 hours ago

T20 World Cup 2024 : ಭಾರತ ತಂಡ ವಿಶ್ವ ಕಪ್​ ಗೆಲ್ಲುವುದಿಲ್ಲ; ಇಂಗ್ಲೆಂಡ್​ ಮಾಜಿ ಆಟಗಾರನ ಭವಿಷ್ಯ

Udupi Tour
ಪ್ರವಾಸ2 hours ago

Udupi Tour: ಉಡುಪಿಗೆ ಹೋದಾಗ ನೀವು ನೋಡಲೇಬೇಕಾದ 10 ಸ್ಥಳಗಳಿವು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ19 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು2 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು3 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ3 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ4 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ4 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ4 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ6 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌