Cabinet Meeting: ವೈದ್ಯಕೀಯ ಅಭ್ಯರ್ಥಿಗಳ ಒಂದು ವರ್ಷದ ಕಡ್ಡಾಯ ಗ್ರಾಮೀಣ ಸೇವೆ ರದ್ದು! ರಾಜ್ಯ ಸಂಪುಟ ಒಪ್ಪಿಗೆ - Vistara News

ಕರ್ನಾಟಕ

Cabinet Meeting: ವೈದ್ಯಕೀಯ ಅಭ್ಯರ್ಥಿಗಳ ಒಂದು ವರ್ಷದ ಕಡ್ಡಾಯ ಗ್ರಾಮೀಣ ಸೇವೆ ರದ್ದು! ರಾಜ್ಯ ಸಂಪುಟ ಒಪ್ಪಿಗೆ

Cabinet Meeting: ಎಂಬಿಬಿಎಸ್‌ ಮತ್ತು ವೈದ್ಯಕೀಯ ಸ್ನಾತಕೋತ್ತರ ಅಭ್ಯರ್ಥಿಗಳು ಕಡ್ಡಾಯವಾಗಿ ಒಂದು ವರ್ಷ ಗ್ರಾಮೀಣ ಸೇವೆ ಮಾಡಬೇಕೆಂಬ ನಿಯಮವನ್ನು ರಾಜ್ಯ ಸರ್ಕಾರವು ಕೈ ಬಿಡಲು ಮುಂದಾಗಿದೆ.

VISTARANEWS.COM


on

7th Pay Commission
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಎಂಬಿಬಿಎಸ್‌ ಮತ್ತು ವೈದ್ಯಕೀಯ ಸ್ನಾತಕೋತ್ತರ ಅಭ್ಯರ್ಥಿಗಳು (Medical Candidates) ಕಡ್ಡಾಯವಾಗಿ ಒಂದು ವರ್ಷ ಗ್ರಾಮೀಣ ಹಾಗೂ ನಗರ ಸರ್ಕಾರಿ ಆಸ್ಪತ್ರೆಗಳಲ್ಲಿ (Rural Service) ಸೇವೆ ಮಾಡಬೇಕೆಂಬ ನಿಯಮವನ್ನು ರಾಜ್ಯ ಸರ್ಕಾರವು ಕೈ ಬಿಡಲು ಮುಂದಾಗಿದೆ. ಈ ಕುರಿತಾದ ಕಾನೂನು ತಿದ್ದುಪಡಿ ಮಾಡಲು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ (cm Siddaramaiah) ಅವರ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ (Cabinet Meeting) ನಿರ್ಧರಿಸಲಾಗಿದೆ. ಸಂಪುಟದ ನಿರ್ಣಯಗಳ ಕುರಿತು ಮಾಧ್ಯಮಗಳಿಗೆ ವಿವರ ನೀಡಿದ ಸಚಿವ ಎಚ್ ಕೆ ಪಾಟೀಲ್ (H K Patil) ಅವರು, ಗ್ರಾಮೀಣ ಮತ್ತು ನಗರದ ಪ್ರದೇಶ ಸರ್ಕಾರಿ ಆಸ್ಪತ್ರೆಗಳಲ್ಲಿ ಒಂದು ವರ್ಷ ಕಡ್ಡಾಯ ಸೇವೆ ಸಲ್ಲಿಸಬೇಕು ಎಂಬ ನಿಯಮವನ್ನು ಕೈ ಬಿಡಲಾಗುತ್ತಿದೆ. ಖಾಲಿ ಹುದ್ದೆಗಳಿಗೆ ಅಗತ್ಯವಿರುವಷ್ಟು ಮಾತ್ರ ಕಡ್ಡಾಯ ಸೇವೆಯನ್ನು ಪಡೆಯಲಾಗುವುದು. ಸುಗ್ರಿವಾಜ್ಞೆ ಮೂಲಕ ವಿಧೇಯಕ ಅನುಮೋದನೆ ಪಡೆಯಲು ಕ್ಯಾಬಿನೆಟ್ ನಿರ್ಧಾರ ಮಾಡಿದೆ ಎಂದು ವಿವರಿಸಿದರು.

ನೈರುತ್ಯ ಮುಂಗಾರಿನಲ್ಲಿ ಮಳೆ ಕೊರತೆಯಿಂದ ಹಲವು ತಾಲೂಕು ಬರ ಘೋಷಣೆಯಾಗಿದೆ. ೧೯೫ ತಾಲೂಕುಗಳನ್ನು ಬರಪೀಡಿತ ತಾಲೂಕು ಅಂತ ಘೋಷಣೆ ಮಾಡಲಾಗಿದೆ. ಇದರ ಜೊತೆಗೆ ೨೧ ತಾಲೂಕುಗಳನ್ನು ಬರ ಪೀಡಿತ ತಾಲೂಕು ಅಂತ ಘೋಷಣೆ ಮಾಡಲು ಒಪ್ಪಿಗೆ ನೀಡಿದೆ ಎಂದು ಸಚಿವರು ತಿಳಿಸಿದರು.

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ

ಚಳಿಗಾಲದ ಅಧಿವೇಶನಕ್ಕೆ ಮುಹೂರ್ತ ಫೀಕ್ಸ್ ಮಾಡಲಾಗಿದ್ದು, ಡಿಸೆಂಬರ್ 4 ರಿಂದ ಅಧಿವೇಶನಕ್ಕೆ ಕರೆಯಲು ಸಂಪುಟ ಒಪ್ಪಿಗೆ ನೀಡಿದೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲೇ ಡಿಸೆಂಬರ್ 4 ರಿಂದ 15 ರವರೆಗೆ ಅಧಿವೇಶನ ನಡೆಯಿಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಸಂಪುಟ ಸಭೆಯ ಕುರಿತು ಸಚಿವ ಎಚ್‌ ಕೆ ಪಾಟೀಲ್ ನೀಡಿದ ಮಾಹಿತಿ ಹೀಗಿದೆ…

ಬರದಿಂದಾಗಿ ಒಟ್ಟು ಕೃಷಿ ತೋಟಾಗಾರಿಕೆ ನಷ್ಟ 33,770 ಕೋಟಿ ರೂ. ಕೃಷಿ ತೋಟಗಾರಿಕೆ ನಷ್ಟಕ್ಕೆ ೪೪೧೪ ಕೋಟಿ ಪರಿಹಾರಕ್ಕೆ ಬೇಡಿಕೆ ಇಟ್ಟಿದ್ದೇವೆ. ೫೩೨೬ ಕೋಟಿ ಒಟ್ಟೂ ನಷ್ಟ ಪರಿಹಾರಕ್ಕೆ ಬೇಡಿಕೆ ಇಟ್ಟಿದ್ದೇವೆ ರಾಜ್ಯ ಮಂತ್ರಿಗಳು ಕೇಂದ್ರ ಮಂತ್ರಿಗಳನ್ನು ಒತ್ತಾಯ ಮಾಡುವುದಕ್ಕೆ ಪದೇ ಪದೇ ಸಮಯ ಕೇಳ್ತಿದ್ದಾರೆ.

೨೦೦೮-೦೯ ರಲ್ಲಿ ಗ್ರಾಮ ನ್ಯಾಯಾಲಯ ಸ್ಥಾಪನೆ ಬಗ್ಗೆ ಕಾನೂನು ತರಲಾಗಿತ್ತು. ೧೦೦ ಗ್ರಾಮ ನ್ಯಾಯಾಲಯದ ಸ್ಥಾಪನೆಗೆ ಅನುಮತಿ ನೀಡಿದ ಕ್ಯಾಬಿನೆಟ್ ತಾತ್ವಿಕ ಒಪ್ಪಿಗೆ ನೀಡಿದೆ. 100 ಗ್ರಾಮ ಕೋರ್ಟ್ ಗಳ ಸ್ಥಾಪನೆಗೆ ಅಂದಾಜು ಲೆಕ್ಕಾಚಾರ ೨೫-೩೦ ಕೋಟಿ ಬರಬಹುದು. ಕೃಷಿ ಇಲಾಖೆಯಿಂದ ರಸಗೊಬ್ಬರ ದಾಸ್ತಾನಿಗೆ ೨೦೦ ಕೋಟಿ ರೂ ಬಂಡವಾಳ ಸಾಲ ತೆಗೆದುಕೊಳ್ಳಲು ಸರ್ಕಾರಿ ಖಾತರಿಗೆ ಅನುಮತಿ ನೀಡಲಾಗಿದೆ.

೧೧ ಪೊಲೀಸ್ ತರಬೇತಿ ಶಾಲೆಗಳ ಬಲವರ್ಧನೆಗೆ ಅಗತ್ಯ ಸಾಮಾಗ್ರಿ ಒದಗಿಸಲು ೨೦ ಕೋಟಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ವಾಹನಗಳ ಸಿಎನ್‌ಜಿ ಮತ್ತು ಗೃಹ ಬಳಕೆಯ ಪಿಎನ್.ಜಿ ಬಳಕೆಗೆ ರಾಜ್ಯ ಅನಿಲ ನೀತಿ ರೂಪಿಸಲು ಕ್ಯಾಬಿನೆಟ್ ನಿರ್ಧಾರ ಮಾಡಿದೆ. ಸಿಟಿ ಗ್ಯಾಸ್ ಡಿಸ್ಟ್ರಿಬ್ಯುಷನ್ ನೆಟವರ್ಕ್ ಪಾಲಿಸಿ ಗೆ ಅನುಮೋದನೆ ನೀಡಲಾಗಿದೆ. ಗೃಹ ಲಕ್ಷ್ಮಿ ಯೋಜನೆಯನ್ನು ಲಿಂಗತ್ವ ಅಲ್ಪ ಅಸಂಖ್ಯಾತರಿಗೂ ವಿಸ್ತರಣೆ ಮಾಡಿದ ಆದೇಶಕ್ಕೆ ಸಂಪುಟ ನಿರ್ಧಾರ ಮಾಡಿದೆ.

ಅನ್ನಭಾಗ್ಯ ಕುರಿತು ಆಹಾರ ಇಲಾಖೆಯಿಂದ ಅಕ್ಕಿ ಒದಗಿಸುವ ವ್ಯವಸ್ಥೆ ಕುರಿತು ಸಂಪುಟ ಸಭೆಯಲ್ಲಿ ಚರ್ಚೆಯಾಗಿದೆ. ಈಗ ಇರುವ ಪದ್ದತಿ ಮುಂದುವರೆಸಲು ನಿರ್ಧಾರ ಮಾಡಲಾಗಿದೆ. ಐದು ಕೆಜಿ ಅಕ್ಕಿ ಕೊಡಬೇಕಾ ಅಥವಾ ನೀಡಲಾಗುತ್ತಿರುವ ಹಣ ಮುಂದುವರಿಸಬೇಕಾ ಎಂಬ ಚರ್ಚೆ ನಡೆಯಿತು. ಅಂತಿಮವಾಗಿ ಸದ್ಯದ ಪದ್ದತಿಯನ್ನೇ ಮುಂದುವರಿಸಲು ನಿರ್ಧರಿಸಲಾಯಿತು.

ನಗರಾಭಿವೃದ್ಧಿ ಇಲಾಖೆಯಿಂದ ಎನ್.ಜಿ.ಟಿ ಅನುಸರಣೆಗೆ ತ್ವರಿತ ಪರಿಸರ ಪರಿಹಾರ ನಿಧಿ ಅಡಿಯಲ್ಲಿ ೧೧೦ ಮಲ ತ್ಯಾಜ್ಯ ಸಂಸ್ಕರಣ ಘಟಕಗಳನ್ನು ಸ್ಥಾಪನೆ ಮಾಡಲು ಒಪ್ಪಿಗೆ ನೀಡಲಾಗಿದೆ. ೫೦,೦೦೦ ಕಡಿಮೆ ಇರುವ ಪಟ್ಟಣಗಳಲ್ಲಿ ಸ್ಥಾಪನೆ ಮಾಡಲಾಗುತ್ತದೆ. ೪೦ ಕೋಟಿ ರೂ. ಅಂದಾಜು ವೆಚ್ಚದಲ್ಲಿ ಸೆಸ್ ಪೂಲ್ ವೆಹಿಕಲ್ ಖರೀದಿಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ತುಮಕೂರು

Koratagere News: ವೀರಶೈವ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Koratagere News: ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘ ಕೊರಟಗೆರೆ ತಾಲೂಕು ಘಟಕದ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಎಂ. ರಾಜಶೇಖರ್ ತಿಳಿಸಿದ್ದಾರೆ.

VISTARANEWS.COM


on

Koo

ಕೊರಟಗೆರೆ: ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘ ಕೊರಟಗೆರೆ ತಾಲೂಕು ಘಟಕದ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಎಂ. ರಾಜಶೇಖರ್ (Koratagere News) ತಿಳಿಸಿದ್ದಾರೆ.

2023-24ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಶೇಕಡಾ 75% ಕ್ಕಿಂತ ಹೆಚ್ಚು ಅಂಕ ಪಡೆದಿರುವ ಕೊರಟಗೆರೆ ತಾಲೂಕಿನ ವೀರಶೈವ ಲಿಂಗಾಯತ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಇದನ್ನೂ ಓದಿ: Kundapura Kannada:  ಅರಮನೆ ಮೈದಾನದಲ್ಲಿ ಈ ಬಾರಿ `ವಿಶ್ವ ಕುಂದಾಪುರ ಕನ್ನಡ ಹಬ್ಬ’; ಕಾರ್ಯಕ್ರಮದ ವಿವರ ಪಟ್ಟಿ ಇಲ್ಲಿದೆ!

ವಿದ್ಯಾರ್ಥಿಗಳು ಸ್ವ-ವಿವರಗಳೊಂದಿಗೆ ಪಾಸ್‌ಪೋರ್ಟ್ ಪೋಟೋ , ಆಧಾರ್ ಕಾರ್ಡ್, ಜಾತಿ ಪ್ರಮಾಣಪತ್ರ, ಅಂಕಪಟ್ಟಿಗಳ ನಕಲು ಪ್ರತಿ ಮತ್ತು ದೂರವಾಣಿ ಸಂಖ್ಯೆಗಳೊಂದಿಗೆ ಜುಲೈ 31ರ ಒಳಗಾಗಿ ಮೊಬೈಲ್‌ ಸಂಖ್ಯೆ: 9353887370 , 9972361460 , 9741459164 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

CM Siddaramaiah: ರಾಜ್ಯದಲ್ಲಿ ಶೇ.80 ಬಿಪಿಎಲ್‌ ಕಾರ್ಡ್‌! ಕಡಿತ ಮಾಡಲು ಸಿಎಂ ಸೂಚನೆ

CM Siddaramaiah: ರಾಜ್ಯದಲ್ಲಿ ಶೇ. 80ರಷ್ಟು ಬಿಪಿಎಲ್‌ ಕಾರ್ಡುಗಳನ್ನು ಹೊಂದಿದ್ದಾರೆ. ರಾಜ್ಯದಲ್ಲಿ 1.27 ಕೋಟಿ ಕುಟುಂಬಗಳಿಗೆ ಬಿಪಿಎಲ್‌ ಕಾರ್ಡ್‌ ನೀಡಿದ್ದೇವೆ. ಅನರ್ಹ ಬಿ.ಪಿ.ಎಲ್. ಕಾರ್ಡುಗಳನ್ನು ರದ್ದು ಪಡಿಸಿ, ಅರ್ಹರಿಗೆ ಬಿಪಿಎಲ್‌ ಕಾರ್ಡು ಒದಗಿಸಬೇಕು ಎಂದು ಸಿಎಂ ಸೂಚಿಸಿದರು.

VISTARANEWS.COM


on

cm Siddaramaiah
Koo

ಬೆಂಗಳೂರು: ರಾಜ್ಯದಲ್ಲಿ ಬಿಪಿಎಲ್‌ ಕಾರ್ಡುದಾರರ (BPL Card holders) ಸಂಖ್ಯೆ ಮಿತಿ ಮೀರಿದೆ. ಅನರ್ಹರ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದು ಮಾಡಿ ಅರ್ಹರಿಗೆ ನೀಡಿ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಸೂಚಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ನಡೆಸಿ ಈ ಸೂಚನೆ ನೀಡಿದರು.

ರಾಜ್ಯದಲ್ಲಿ ಶೇ. 80ರಷ್ಟು ಬಿಪಿಎಲ್‌ ಕಾರ್ಡುಗಳನ್ನು ಹೊಂದಿದ್ದಾರೆ. ತಮಿಳುನಾಡಿನಲ್ಲಿ ಶೇ.40 ರಷ್ಟಿದೆ. ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಪ್ರಸ್ತುತ ಬಡತನ ರೇಖೆಗಿಂತ ಕೆಳಗಿರುವವರ ಪ್ರಮಾಣ ಶೇ.5.67 ಇರಬೇಕು. ಆದರೆ ರಾಜ್ಯದಲ್ಲಿ 1.27 ಕೋಟಿ ಕುಟುಂಬಗಳಿಗೆ ಬಿಪಿಎಲ್‌ ಕಾರ್ಡ್‌ ನೀಡಿದ್ದೇವೆ. ಅನರ್ಹ ಬಿ.ಪಿ.ಎಲ್. ಕಾರ್ಡುಗಳನ್ನು ರದ್ದು ಪಡಿಸಿ, ಅರ್ಹರಿಗೆ ಬಿಪಿಎಲ್‌ ಕಾರ್ಡು ಒದಗಿಸಬೇಕು ಎಂದು ಸಿಎಂ ಸೂಚಿಸಿದರು.

ಜನರನ್ನು ಅನಗತ್ಯವಾಗಿ ಅಲೆದಾಡಿಸಬೇಡಿ, ಅವರ ದೂರುಗಳನ್ನು ಆಲಿಸಿ, ಅಗತ್ಯ ಪರಿಹಾರ ಒದಗಿಸಬೇಕು. ರಾಜ್ಯದಲ್ಲಿ ಈ ಬಾರಿ ಬರ ನಿರ್ವಹಣೆಯನ್ನು ಉತ್ತಮವಾಗಿ ಮಾಡಿದ್ದೇವೆ. ಕುಡಿಯುವ ನೀರಿಗೆ ಸಂಬಂಧಿಸಿದಂತೆ ಸಮಸ್ಯಾತ್ಮಕ ಗ್ರಾಮಗಳನ್ನು ಮೊದಲೇ ಗುರುತಿಸಿ. ಪರ್ಯಾಯ ವ್ಯವಸ್ಥೆ ಮಾಡಿದ ಕಾರಣ ಎಲ್ಲೂ ಹೆಚ್ಚು ತೊಂದರೆಯಾಗಿಲ್ಲ. ಬರ ನಿರ್ವಹಣೆಗೆ 85 ಕೋಟಿ ವೆಚ್ಚವಾಗಿದ್ದು ಪಾರದರ್ಶಕವಾಗಿ ಮಾಡಲಾಗಿದೆ. 783 ಕೋಟಿ ಜಿಲ್ಲಾಧಿಕಾರಿ ಖಾತೆಯಲ್ಲಿ ಲಭ್ಯವಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಪ್ರಸ್ತುತ ಮುಂಗಾರು ಅವಧಿಯಲ್ಲಿ ಇದುವರೆಗೆ ಶೇ.7ರಷ್ಟು ಹೆಚ್ಚು ಮಳೆಯಾಗಿದೆ. ಈ ವರ್ಷ ಮಳೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅತಿವೃಷ್ಟಿಯಿಂದ ಸಮಸ್ಯೆಯಾಗುವ ಗ್ರಾಮಗಳನ್ನು ಗುರುತಿಸಲಾಗಿದೆ. 225 ಅಂತಹ ಜಲಾಗ್ರಾಮಗಳನ್ನು 1247ಗ್ರಾಮ ಪಂಚಾಯತ್‌ ಗುರುತಿಸಲಾಗಿದೆ. ಪ್ರತಿಯೊಂದು ಗ್ರಾಂ ಪಂಚಾಯತ್‌ನಲ್ಲಿ ಟಾಸ್ಕ್‌ ಪೋಸ್ಟ್‌ ರಚನೆ ಮಾಡಿ ಕಂದಾಯ ಇಲಾಖೆ, ಪಂಚಾಯತ್‌, ಪೋಲಿಸ್‌, ಅಗ್ನಿಶಾಮಕ, ಆರೋಗ್ಯ ಸೇರಿದಂತೆ ತಾಲೂಕು ಒಬ್ಬರಂತೆ ನೋಡಲ್‌ ಅಧಿಕಾರಿ ನೇಮಕಕ್ಕೆ ಸೂಚನೆ ನೀಡಲಾಗಿದೆ. ಎಲ್ಲಾ ಕಡೆ ಅಣಕುಪ್ರದರ್ಶನ ಮಾಡಲಾಗುತ್ತಿದೆ. ಬೆಳೆ ಹಾನಿ, ಮನೆ ಹಾನಿ ಎಸ್‌ಡಿಆರ್‌ಎಫ್‌ ಪ್ರಕಾರ ನೀಡಲು, ಜಿಲ್ಲಾಡಳಿತ ಮುಂಜಾಗರೂಕತೆ ವಹಿಸಲು ಸೂಚನೆ ನೀಡಲಾಗಿದೆ ಎಂದರು.

ಪ್ರಾಣ ಹಾನಿ ತಪ್ಪಿಸುವುದು ಆದ್ಯತೆಯಾಗಬೇಕು. 27 ಜಿಲ್ಲೆ 177 ತಾಲೂಕುಗಳು, 1247 ಗ್ರಾಮ ಪಂಚಾಯತ್‌ಗಳಲ್ಲಿ ಅತಿವೃಷ್ಟಿಗೆ ತುತ್ತಾಗುವುದನ್ನು ಗುರುತಿಸಲಾಗಿದ್ದು, ಪ್ರತಿ ಕಡೆ ಟಾಸ್ಕ್‌ಪೋರ್ಸ್‌ ರಚಿಸಬೇಕು. 20,38,334 ಜನರು ಪದೇ ಪದೇ ಪ್ರವಾಹಕ್ಕೆ ತುತ್ತಾಗುವುದನ್ನು ಗುರುತಿಸಲಾಗಿದೆ. ಅಂತಹ ಜನರನ್ನು ಬೇರೆ ಕಡೆಗೆ ಸ್ಥಳಾಂತರಿಸಿ ಮನೆ ಒದಗಿಸುವ ಬಗ್ಗೆ ಕ್ರಮ ಕೈಗೊಳ್ಳಬೇಕು. 2225 ಗ್ರಾಮಗಳಲ್ಲಿ 2242 ಕಾಳಜಿ ಕೇಂದ್ರಗಳನ್ನು ಗುರುತಿಸಲಾಗಿದೆ. ಉತ್ತಮವಾಗಿ ಮಳೆಯಾಗಿದೆ. ಜಲಾಶಯಗಳಲ್ಲಿ ಒಟ್ಟು 293 ಟಿಎಂಸಿ ನೀರು ಸಂಗ್ರಹವಿದೆ. ಈ ಬಾರಿ ಪೂರ್ವ ಮುಂಗಾರಿನಲ್ಲಿ 3714 ಮನೆಗಳಿಗೆ ಹಾನಿ ಉಂಟಾಗಿದ್ದು, ಎಸ್‌ಡಿಆರ್‌ಎಫ್‌ ಮಾನದಂಡ ಪ್ರಕಾರ ಪರಿಹಾರವನ್ನು ತಕ್ಷಣ ಒದಗಿಸಬೇಕು. ಹವಾಮಾನ ಇಲಾಖೆಯೊಂದಿಗೆ ನಿಕಟ ಸಂಪರ್ಕದಲ್ಲಿದ್ದು, ಪರಿಸ್ಥಿತಿಯನ್ನು ನಿಭಾಯಿಸಬೇಕು ಎಂದು ಸೂಚಿಸಲಾಯಿತು.

ಇದನ್ನೂ ಓದಿ: CM Siddaramaiah: ಡಿಸಿಗಳು ಮಹಾರಾಜರಲ್ಲ; ಬೀದಿಗಿಳಿದು ಡೆಂಗ್ಯು ನಿಯಂತ್ರಿಸದಿದ್ದರೆ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

Continue Reading

ಕರ್ನಾಟಕ

Rain Affected areas: ಮಳೆ ಸಂತ್ರಸ್ತ ಪ್ರದೇಶಗಳಲ್ಲಿ ಶಾಶ್ವತ ಪರಿಹಾರ ಕ್ರಮ ಕೈಗೊಳ್ಳಿ: ಡಿಸಿಗಳಿಗೆ ಸಿಎಂ ಸೂಚನೆ

Rain Affected areas: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ.

VISTARANEWS.COM


on

Koo

ಬೆಂಗಳೂರು: ರಾಜ್ಯದಲ್ಲಿ 2,225 ಗ್ರಾಮಗಳು ಮತ್ತು 20,38,334 ಜನರು ಪ್ರವಾಹ, ಭೂ ಕುಸಿತಕ್ಕೆ ಪ್ರತೀ ವರ್ಷ ತುತ್ತಾಗುತ್ತಾರೆ. ನಿಮ್ಮ ನಿಮ್ಮ ಜಿಲ್ಲೆಗಳಲ್ಲಿನ ಮಳೆ ಸಂತ್ರಸ್ತ ಗ್ರಾಮಗಳನ್ನು (Rain Affected areas) ಗುರುತಿಸಿ, ಅವರಿಗೆ ಶಾಶ್ವತ ಪರಿಹಾರ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಸೂಚಿಸಿದರು

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿ, ಈ ವರ್ಷ ಮಳೆಯಿಂದ ಮನೆ, ಬೆಳೆ ಹಾನಿ ಆಗಿರುವವರಿಗೆ ಎಸ್‌ಡಿಆರ್‌ಎಫ್‌ ಪ್ರಕಾರ ಪರಿಹಾರವನ್ನು ಕೂಡಲೇ ಇತ್ಯರ್ಥ ಮಾಡಬೇಕು ಎಂದು ಸೂಚನೆ ನೀಡಿದರು.

ಪಿಂಚಣಿ ಅರ್ಜಿಗಳು ಯಾವ ಯಾವ ಜಿಲ್ಲೆಗಳಲ್ಲಿ ಎಷ್ಟೆಷ್ಟು ಬಾಕಿ ಇವೆ ಎನ್ನುವ ಪಟ್ಟಿ ಪ್ರಸ್ತಾಪಿಸಿದ ಸಿಎಂ, ಆಯಾ ಜಿಲ್ಲಾಧಿಕಾರಿಗಳಿಗೆ ಕಾಲಮಿತಿಯೊಳಗೆ ಇತ್ಯರ್ಥ ಮಾಡಬೇಕು ಎಂದರು. ಇದೇ ವೇಳೆ ಕಾಲ ಮಿತಿ ಮೀರಿದ ಅರ್ಜಿಗಳು ಏಕೆ ಇದೆ ಎಂದು ಆಯಾ ಜಿಲ್ಲಾಧಿಕಾರಿಗಳಿಗೆ ಖಾರವಾಗಿ ಪ್ರಶ್ನಿಸಿ ಇತ್ಯರ್ಥ ಮಾಡಲು ಸೂಚಿಸಿದರು.

ಪಿಂಚಣಿಗಳ ವಿಲೇ ಅವಧಿ ಸದ್ಯ 45 ದಿನ ಇದೆ. ಇದನ್ನು 30 ದಿನಕ್ಕೆ ಇಳಿಸಲಾಗುವುದು. ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಕಾನೂನು ಪ್ರಕಾರವೇ ಉದಾರತನದಿಂದ ವರ್ತಿಸಿ ಪರಿಹಾರ ನೀಡಿ ಎನ್ನುವ ಸೂಚನೆಗಳನ್ನು ಜಿಲ್ಲಾಧಿಕಾರಿಗಳಿಗೆ ಸಿಎಂ ನೀಡಿದರು. ಇನ್ನು ಸಣ್ಣ ಪುಟ್ಟ ತಾಂತ್ರಿಕ ಕಾರಣಗಳಿಗಾಗಿ ರೈತರ ಆತ್ಮಹತ್ಯೆ ಪರಿಹಾರದ ಅರ್ಜಿಗಳನ್ನು ತಿರಸ್ಕರಿಸದೆ ಉದಾರವಾಗಿ ವರ್ತಿಸಿ ರೈತ ಕುಟುಂಬಗಳಿಗೆ ಸಹಾಯ ಮಾಡಿ ಎಂದರು.

ಇದನ್ನೂ ಓದಿ | Shiva Rajkumar: ಹಾವೇರಿ ಅಪಘಾತ; ಮೃತಪಟ್ಟ ಕುಟುಂಬಗಳಿಗೆ ಧನ ಸಹಾಯ ಮಾಡಿದ ಶಿವಣ್ಣ ದಂಪತಿ

ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಉಪನೋಂದಣಾಧಿಕಾರಿಗಳ ಕಚೇರಿಗಳಿಗೆ ಪ್ರತಿ ತಿಂಗಳು ಕೋಟಿಗಟ್ಟಲೆ ಬಾಡಿಗೆ ನೀಡುತ್ತಿದ್ದೇವೆ. ಇವರಿಗೆ ಸ್ವಂತ ಕಟ್ಟಡ ಕೊಡಿ. ಸ್ವಂತ ಕಟ್ಟಡದ ಅವಕಾಶ ಇಲ್ಲದಿದ್ದರೆ ಜಾಗ ನೀಡಿ ಕಟ್ಟಡ ಕಟ್ಟಿಸಿ. ಇದರಿಂದ ನಮಗೆ ವರ್ಷಕ್ಕೆ 40-50 ಕೋಟಿ ಬಾಡಿಗೆ ಹಣ ಉಳಿತಾಯವಾಗುತ್ತದೆ ಎಂದು ಸೂಚನೆ ನೀಡಿದರು.

ಮಹಿಳಾ ಆಯೋಗದ ವರದಿ ಬಳಿಕ ಕ್ರಮ

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಕಲಬುರಗಿ ಮಹಿಳಾ ಹಾಸ್ಟೆಲ್‌ಗೆ ಭೇಟಿ ನೀಡಿ ಹಾಸ್ಟೆಲ್ ಟ್ಯಾಂಕ್ ಮೂಲಕ ಕಲುಷಿತ ನೀರಿನ ಸರಬರಾಜು ಆಗುತ್ತಿರುವ ಬಗ್ಗೆ ಬರೆದಿರುವ ಪತ್ರವನ್ನು ಸಿಎಂ ಸಭೆಯಲ್ಲಿ ಪ್ರಸ್ತಾಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಆ ಸಮಸ್ಯೆಯನ್ನು ಬಗೆಹರಿಸಿ ಈಗಾಗಲೇ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ ಎಂದು ಉತ್ತರಿಸಿದರು.

ಗ್ಯಾರಂಟಿ ಯೋಜನೆ ಸಮೀಕ್ಷೆ

ಗ್ಯಾರಂಟಿ ಯೋಜನೆಗಳ ಕುರಿತು ಜಾಗೃತಿ ಮೂಡಿಸಲು ಹಾಗೂ ಫಲಾನುಭವಿಗಳಿಂದ ಪ್ರತಿಕ್ರಿಯೆ ಪಡೆಯಲು ಸಮೀಕ್ಷೆ ಕಾರ್ಯವನ್ನು ಚುರುಕುಗೊಳಿಸಬೇಕು. ರಾಜ್ಯದಲ್ಲಿ 8452317 ಕುಟುಂಬಗಳ ಸುಮಾರು 5 ಕೋಟಿ ಜನರ ಸಮೀಕ್ಷೆ ನಡೆಸಬೇಕಾಗಿದೆ ಎಂದು ಸಿಎಂ ಸೂಚಿಸಿದರು.

ಗ್ರಾಮೀಣಾಭಿವೃದ್ಧಿ

ಜಿಲ್ಲಾ ಮಟ್ಟ ಹಾಗೂ ತಾಲೂಕು ಮಟ್ಟದಲ್ಲಿ ಕುಡಿಯುವ ನೀರಿನ ಗುಣಮಟ್ಟ ಪರಿಶೀಲನೆಗೆ ಟಾಸ್ಕ್‌ಫೋರ್ಸ್‌ ರಚಿಸಲಾಗಿದೆ. ಕಲುಷಿತ ನೀರು ಪರೀಕ್ಷೆಗೆ ಸಾಕಷ್ಟು ಪ್ರಮಾಣದಲ್ಲಿ ಕಿಟ್‌ ಲಭ್ಯವಿದೆ. ಪ್ರತಿ ಹೋಬಳಿಗೆ ಭೇಟಿ ನೀಡಿ ಪ್ರಮಾಣ ಪತ್ರ ಒದಗಿಸಲು ಅಧಿಕಾರಿಗಳ ತಂಡಗಳನ್ನು ರಚಿಸಲಾಗಿದೆ. ಇದುವರೆಗೆ 42945 ಜನವಸತಿ ಪ್ರದೇಶಗಳಲ್ಲಿ ಜಂಟಿ ತಪಾಸಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಶುದ್ಧ ನೀರು ಘಟಕ ದುರಸ್ತಿ ಮಾಡಿ

ಕೆಟ್ಟು ನಿಂತಿರುವ ಶುದ್ಧ ನೀರಿನ ಘಟಕಗಳ ದುರಸ್ತಿಗೆ ಯೋಜನೆ ರೂಪಿಸಬೇಕು. ಈಗಾಗಲೇ ಅಂತಹ ಶುದ್ಧ ನೀರು ಘಟಕಗಳ ಪರಿಶೀಲನೆ ನಡೆಸಲಾಗಿದ್ದು, ಸಮರ್ಪಕ ಯೋಜನೆ ರೂಪಿಸಿ, ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸೂಚಿಸಿದರು.

ಇದನ್ನೂ ಓದಿ | Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವ ಸಂಪುಟದ ಎಲ್ಲ ಸದಸ್ಯರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಪಾಲ್ಗೊಂಡಿದ್ದರು.

Continue Reading

ಕೊಪ್ಪಳ

Road Accident : ಕೊಪ್ಪಳದಲ್ಲಿ ಟಿಪ್ಪರ್‌ ಹರಿದು ಬೈಕ್‌ ಸವಾರ ಸಾವು

Road Accident : ಪ್ರತ್ಯೇಕ ಕಡೆಗಳಲ್ಲಿ ರಸ್ತೆ ಅಪಘಾತಗಳು ನಡೆದಿದ್ದು, ಕೊಪ್ಪಳದಲ್ಲಿ ಲಾರಿ ಹರಿದು ಬೈಕ್‌ ಸವಾರ ಮೃತಪಟ್ಟಿದ್ದಾರೆ. ಮೈಸೂರಿನಲ್ಲಿ ಬಸ್‌ ಹಿಂಬದಿಗೆ ಬೊಲೆರೋ ಡಿಕ್ಕಿ ಹೊಡೆದು, ಕಾರವಾರದಲ್ಲಿ ಅಡ್ಡ ಬಂದ ಜಾನುವಾರು ತಪ್ಪಿಸಲು ಹೋಗಿ ಹೈವೇಯಲ್ಲಿ ಸರಣಿ ಅಪಘಾತ ಸಂಭವಿಸಿದೆ.

VISTARANEWS.COM


on

By

road Accident
Koo

ಕೊಪ್ಪಳ: ಟಿಪ್ಪರ್ ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲೇ (Road Accident) ಮೃತಪಟ್ಟಿದ್ದಾರೆ. ಕೊಪ್ಪಳ ತಾಲೂಕಿನ ಕಾಸನಕಂಡಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ವೇಗವಾಗಿ ಬಂದ ಟಿಪ್ಪರ್ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಹಾರಿದ ಸವಾರ ಟಿಪ್ಪರ್ ವಾಹನದ ವ್ಹೀಲ್‌ಗೆ ಸಿಲುಕಿ ಮೃತಪಟ್ಟಿದ್ದಾರೆ.

ಮೃತನ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಮುನಿರಾಬಾದ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮುನಿರಾಬಾದ್‌ ಪೊಲೀಸ್‌ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಬಸ್‌ ಹಿಂಬದಿಗೆ ಗುದ್ದಿದ ಬೊಲೆರೋ

ಕೆಎಸ್‌ಆರ್‌ಟಿಸಿ ಬಸ್‌ಗೆ ಹಿಂಬದಿಯಿಂದ ಬಂದ ಬೊಲೆರೋ ವಾಹನ ಡಿಕ್ಕಿ ಹೊಡೆದಿದೆ. ಮೈಸೂರಿನ ಆಲನಹಳ್ಳಿ ರಿಂಗ್ ರೋಡ್ ಬಳಿ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್‌ ಅಪಘಾತದಲ್ಲಿ ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲ. ಸ್ವಲ್ಪದರಲ್ಲಿ ಭಾರಿ ಅನಾಹುತ ತಪ್ಪಿದ್ದು, ವಾಹನಗಳ ಮುಂಭಾಗ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

ಅಡ್ಡ ಬಂದ ಜಾನುವಾರು; ಹೈವೇಯಲ್ಲಿ ಸರಣಿ ಅಪಘಾತ

ಉತ್ತರಕನ್ನಡ ಜಿಲ್ಲೆಯ ಕಾರವಾರದ ರಾಷ್ಟ್ರೀಯ ಹೆದ್ದಾರಿ 66ರ ಅರಗಾ ಗ್ರಾಮದ ಬಳಿ ಏಕಾಏಕಿ ಜಾನುವಾರು ಅಡ್ಡ ಬಂದಿದೆ. ಜಾನುವಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಎರಡು ಕಾರು, ಬಸ್ ನಡುವೆ ಸರಣಿ ಅಪಘಾತ ಸಂಭವಿಸಿದೆ. ಅಂಕೋಲಾ ಭಾಗದಿಂದ ಕಾರವಾರದತ್ತ ಆಗಮಿಸುತ್ತಿದ್ದ ಸ್ಕಾರ್ಪಿಯೋ ಕಾರಿಗೆ ದನ ಎದುರಾಗಿದ್ದರಿಂದ ಚಾಲಕ ಸಡನ್‌ ಬ್ರೇಕ್ ಹಾಕಿದ್ದಾನೆ.

ಇದೇ ವೇಳೆ ಹಿಂಬದಿಯಿಂದ ಬರುತ್ತಿದ್ದ ಡಿಸೈರ್ ಕಾರು ಚಾಲಕ ಸಹ ಬ್ರೇಕ್ ಹಾಕಿ ನಿಲ್ಲಿಸಿದ್ದ. ಆದರೆ ಹಿಂದಿನಿಂದ ಬಂದ ಸರ್ಕಾರಿ ಬಸ್ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದಿದೆ. ಬಸ್ ಗುದ್ದಿದ ಪರಿಣಾಮ ಮುಂದಿದ್ದ ಸ್ಕಾರ್ಪಿಯೋಗೆ ಗುದ್ದಿ ಕಾರು ಜಖಂಗೊಂಡಿದೆ. ಇತ್ತ ಬಸ್ ಡಿಕ್ಕಿಯಾದ ಪರಿಣಾಮ ಕಾರೊಂದು ದನಕ್ಕೆ ಗುದ್ದಿದೆ. ಡಿಸೈರ್ ಕಾರಿನಲ್ಲಿದ್ದ ವೃದ್ಧೆಗೆ ಸಣ್ಣಪುಟ್ಟ ಗಾಯವಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾರಿನಲ್ಲಿದ್ದವರನ್ನು ಕೆಳಗಿಳಿಸಿದ ಸ್ಥಳೀಯರು ಗಾಯಾಳುಗಳು ಕಾರವಾರ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಕಾರವಾರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
ತುಮಕೂರು4 mins ago

Koratagere News: ವೀರಶೈವ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Home remedies for Dengue
ಆರೋಗ್ಯ7 mins ago

Home remedies for Dengue: ಸರಳ ಮನೆ ಮದ್ದು ಬಳಸಿ; ಡೆಂಗ್ಯೂ ಅಪಾಯದಿಂದ ಪಾರಾಗಿ!

ಪ್ರಮುಖ ಸುದ್ದಿ8 mins ago

Menstrual Leave: ಋತುಸ್ರಾವದ ರಜೆ ಬಗ್ಗೆ ಮಾದರಿ ನೀತಿ ರೂಪಿಸಲು ಸರ್ಕಾರಕ್ಕೆ ಸುಪ್ರೀಂ ಕೋರ್ಟ್​​​ ನಿರ್ದೇಶನ

cm Siddaramaiah
ಪ್ರಮುಖ ಸುದ್ದಿ8 mins ago

CM Siddaramaiah: ರಾಜ್ಯದಲ್ಲಿ ಶೇ.80 ಬಿಪಿಎಲ್‌ ಕಾರ್ಡ್‌! ಕಡಿತ ಮಾಡಲು ಸಿಎಂ ಸೂಚನೆ

Narendra modi Russia visit
ದೇಶ10 mins ago

Narendra Modi Russia Visit: ಪ್ರಧಾನಿ ಮೋದಿ ಮೂರು ದಿನಗಳ ವಿದೇಶ ಪ್ರವಾಸ; ರಷ್ಯಾ, ಆಸ್ಟ್ರೀಯಾಕ್ಕೆ ಭೇಟಿ

ಕರ್ನಾಟಕ15 mins ago

Rain Affected areas: ಮಳೆ ಸಂತ್ರಸ್ತ ಪ್ರದೇಶಗಳಲ್ಲಿ ಶಾಶ್ವತ ಪರಿಹಾರ ಕ್ರಮ ಕೈಗೊಳ್ಳಿ: ಡಿಸಿಗಳಿಗೆ ಸಿಎಂ ಸೂಚನೆ

Murder Case
Latest38 mins ago

Murder Case: ಕದ್ದುಮುಚ್ಚಿ ಸರಸವಾಡುತ್ತಿದ್ದ ಮಹಿಳೆ ಸಿಕ್ಕಿಬಿದ್ದಾಗ ಗಂಡನನ್ನೇ ಕೊಂದಳು!

road Accident
ಕೊಪ್ಪಳ39 mins ago

Road Accident : ಕೊಪ್ಪಳದಲ್ಲಿ ಟಿಪ್ಪರ್‌ ಹರಿದು ಬೈಕ್‌ ಸವಾರ ಸಾವು

Abhishek Sharma
ಪ್ರಮುಖ ಸುದ್ದಿ40 mins ago

Abhishek Sharma : ಅಭಿಷೇಕ್​ ಶತಕಕ್ಕೆ ಸಹೋದರಿಯ ಚಪ್ಪಾಳೆ, ವಿಡಿಯೊ ಶೇರ್ ಮಾಡಿದ ಕೋಮಲ್​ ಶರ್ಮಾ

MUDA site scandal
ಕರ್ನಾಟಕ57 mins ago

MUDA site scandal: ಸಿಎಂ ಆಪ್ತ ರಾಕೇಶ್‌ ಪಾಪಣ್ಣಗೆ ಹಂಚಿಕೆಯಾಗಿದ್ದ ಮುಡಾ ಸೈಟ್‌ಗೂ ತಡೆ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 hour ago

Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

Karnataka weather Forecast
ಮಳೆ2 hours ago

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

karnataka weather Forecast
ಮಳೆ19 hours ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ21 hours ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ22 hours ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ1 day ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ2 days ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ2 days ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ2 days ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು2 days ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಟ್ರೆಂಡಿಂಗ್‌