Nithari Killings Case: ನಿಥಾರಿ ಸರಣಿ ಕೊಲೆ ಆರೋಪಿ ಪಂಧೇರ್‌ ಜೈಲಿನಿಂದ ಹೊರಕ್ಕೆ - Vistara News

ಕೋರ್ಟ್

Nithari Killings Case: ನಿಥಾರಿ ಸರಣಿ ಕೊಲೆ ಆರೋಪಿ ಪಂಧೇರ್‌ ಜೈಲಿನಿಂದ ಹೊರಕ್ಕೆ

ನೋಯ್ಡಾದ ನಿಥಾರಿ ಸರಣಿ ಹತ್ಯೆಗಳ ಪ್ರಕರಣ ದೇಶದಲ್ಲಿ ಸಂಚಲನ ಉಂಟುಮಾಡಿತ್ತು. 12 ಪ್ರಕರಣಗಳಲ್ಲಿ ಪ್ರಮುಖ ಆರೋಪಿಯಾಗಿ ಸುರಿಂದರ್ ಕೋಲಿಯನ್ನು (Surendra Koli) ಹಾಗೂ ಎರಡು ಪ್ರಕರಣಗಳಲ್ಲಿ ಆತನ ಉದ್ಯೋಗದಾತ ಮೊನೀಂದರ್ ಸಿಂಗ್ ಪಂಧೇರ್‌ನನ್ನು (Moninder Singh Pandher) ಹೆಸರಿಸಲಾಗಿತ್ತು.

VISTARANEWS.COM


on

Moninder Singh Pandher
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸದಿಲ್ಲಿ/ನೋಯ್ಡಾ: ನಿಥಾರಿ ಸರಣಿ ಹತ್ಯೆಯ (Nithari Killings Case) ಆರೋಪಿ ಮೊನೀಂದರ್ ಸಿಂಗ್ ಪಂಧೇರ್ (Moninder Singh Pandher) ಇಂದು ಗ್ರೇಟರ್ ನೋಯ್ಡಾ ಜೈಲಿನಿಂದ ಬಿಡುಗಡೆಗೊಂಡಿದ್ದಾನೆ. ಹತ್ಯಾಕಾಂಡದ ಎಲ್ಲಾ ಆರೋಪದಿಂದ ಆತನನ್ನು ಅಲಹಾಬಾದ್ ಹೈಕೋರ್ಟ್ ಮುಕ್ತಗೊಳಿಸಿದ ಕೆಲವು ದಿನಗಳ ನಂತರ ಈತ ಹೊರಬಿದ್ದಿದ್ದಾನೆ.

ಅಲಹಾಬಾದ್ ಹೈಕೋರ್ಟ್ ಸೋಮವಾರ ಎರಡು ಪ್ರಕರಣಗಳಲ್ಲಿ ಮೊನೀಂದರ್ ಸಿಂಗ್ ಪಂಧೇರ್ ಮತ್ತು ಪ್ರಕರಣದ ಇನ್ನೊಬ್ಬ ಪ್ರಮುಖ ಆರೋಪಿ, ಪಂಧೇರ್‌ ಮನೆಕೆಲಸಗಾರ ಸುರೇಂದ್ರ ಕೋಲಿಯನ್ನು (Surendra Koli) 12 ಪ್ರಕರಣಗಳಲ್ಲಿ ಖುಲಾಸೆಗೊಳಿಸಿದೆ. ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾಗಿದ್ದ ಸುರೀಂದರ್ ಕೋಲಿ ಮತ್ತು ಮೊನೀಂದರ್ ಸಿಂಗ್ ಪಂಧೇರ್‌ರನ್ನು ಸಾಕ್ಷ್ಯಾಧಾರಗಳ ಕೊರತೆಯಿಂದ ಹೈಕೋರ್ಟ್ ಖುಲಾಸೆಗೊಳಿಸಿತ್ತು.

ನೋಯ್ಡಾದ ನಿಥಾರಿ ಸರಣಿ ಹತ್ಯೆಗಳ ಪ್ರಕರಣ ದೇಶದಲ್ಲಿ ಸಂಚಲನ ಉಂಟುಮಾಡಿತ್ತು. 12 ಪ್ರಕರಣಗಳಲ್ಲಿ ಪ್ರಮುಖ ಆರೋಪಿಯಾಗಿ ಸುರಿಂದರ್ ಕೋಲಿಯನ್ನು (Surendra Koli) ಹಾಗೂ ಎರಡು ಪ್ರಕರಣಗಳಲ್ಲಿ ಆತನ ಉದ್ಯೋಗದಾತ ಮೊನೀಂದರ್ ಸಿಂಗ್ ಪಂಧೇರ್‌ನನ್ನು (Moninder Singh Pandher) ಹೆಸರಿಸಲಾಗಿತ್ತು. ಕೆಳಗಿನ ಕೋರ್ಟ್‌ ನೀಡಿದ್ದ ಅವರ ಮರಣದಂಡನೆಯನ್ನು ಹೈಕೋರ್ಟ್‌ ರದ್ದುಗೊಳಿಸಿದೆ. ನ್ಯಾಯಮೂರ್ತಿಗಳಾದ ಅಶ್ವನಿ ಕುಮಾರ್ ಮಿಶ್ರಾ ಮತ್ತು ಸೈಯದ್ ಅಫ್ತಾಬ್ ಹುಸೇನ್ ರಿಜ್ವಿ ಅವರಿದ್ದ ಪೀಠ ವಿಚಾರಣೆ ನಡೆಸಿತ್ತು. ಅತ್ಯಾಚಾರ ಮತ್ತು ಕೊಲೆ ಆರೋಪದ ಮೇಲೆ ಮರಣದಂಡನೆಗೆ ಗುರಿಯಾದ ಇಬ್ಬರನ್ನು ಸಾಕ್ಷ್ಯಾಧಾರಗಳ ಕೊರತೆಯಿಂದ ಖುಲಾಸೆಗೊಳಿಸಲಾಗಿದೆ.

17 ವರ್ಷಗಳ ಹಿಂದೆ ಬೆಳಕಿಗೆ ಬಂದ ಪ್ರಕರಣ ಇದಾಗಿದೆ. 2006ರಲ್ಲಿ ಆರೋಪಿ ಪಂಧೇರ್‌ ಮನೆಯ ಹಿಂದಿನ ಚರಂಡಿಯಲ್ಲಿ ನೋಯ್ಡಾ ಪೊಲೀಸರು ಮಾನವ ಅವಶೇಷಗಳನ್ನು ಪತ್ತೆ ಮಾಡಿದ್ದರು. ತನಿಖೆಯ ವೇಳೆ ಕೋಲಿಯ ಬಗ್ಗೆ ಅನುಮಾನ ಮೂಡಿತ್ತು. ಕೋಲಿ ಹಾಗೂ ಈತನ ಮಾಲಿಕ ಪಂಧೇರ್‌ರನ್ನು ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡೆಸಿದಾಗ ಸರಣಿ ಹತ್ಯೆಗಳ ವಿಚಾರ ಬೆಳಕಿಗೆ ಬಂದಿತ್ತು. ಮನೆಯ ಸುತ್ತಮುತ್ತಲಿನ ಭೂಮಿಯನ್ನು ಅಗೆದಾಗ ಹತ್ತಾರು ಮಕ್ಕಳ ಶವಗಳು ಪತ್ತೆಯಾಗಿದ್ದವು.

ಪ್ರಕರಣವನ್ನು ನಂತರ ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್‌ಗೆ (ಸಿಬಿಐ) ಹಸ್ತಾಂತರಿಸಲಾಗಿತ್ತು. ವಿಚಾರಣೆಯ ಬಳಿಕ, 2005 ಮತ್ತು 2006ರ ಇವರಿಬ್ಬರೂ ಹಲವಾರು ಹೆಣ್ಣು ಮಕ್ಕಳನ್ನು ಅಪಹರಿಸಿ ಅತ್ಯಾಚಾರ ಮಾಡಿ, ಕೊಲೆ ಎಸಗಿದ್ದಾರೆ ಎಂದು ಗೊತ್ತಾಯಿತು. ಸಿಬಿಐ ಇವರ ಮೇಲೆ 16 ಪ್ರಕರಣಗಳನ್ನು ದಾಖಲಿಸಿತು. ಇವೆಲ್ಲವೂ ಅಪಹರಣ, ಅತ್ಯಾಚಾರ ಮತ್ತು ಕೊಲೆಗಳಿಗೆ ಸಂಬಂಧಿಸಿದ್ದವು.

ಇವರ ಮೇಲಿನ ಆರೋಪಗಳನ್ನು ಸಿಬಿಐ ಕೋರ್ಟ್‌ನಲ್ಲಿ ಸಾಬೀತುಪಡಿಸಲಾಗಿತ್ತು. ಇವರಿಗೆ ಮರಣದಂಡನೆ ವಿಧಿಸಲಾಗಿತ್ತು. ಇಬ್ಬರೂ ಹೈಕೋರ್ಟ್‌ಗೆ ಹೋಗಿದ್ದರು. ಈ ನಡುವೆ ಮಕ್ಕಳು ಕಾಣೆಯಾಗಿರುವ ಬಗ್ಗೆ ಮಾಹಿತಿ ನೀಡಿದರೂ ಕ್ರಮ ಕೈಗೊಳ್ಳದ ಇಬ್ಬರು ಪೊಲೀಸರನ್ನೂ ಅಮಾನತುಗೊಳಿಸಲಾಗಿದೆ.

ನೋಯ್ಡಾದ ಡಿ-5, ಸೆಕ್ಟರ್ 31ರಲ್ಲಿ ಈ ಭಯಾನಕ ಮನೆ ಇನ್ನೂ ನಿಂತಿದೆ. 435 ಚದರ ಮೀಟರ್‌ಗಳ ಈ ಮನೆಯನ್ನು ಪೂರ್ತಿ ಲೂಟಿ ಮಾಡಲಾಗಿದೆ. ಇದರೊಳಗಿರುವ ಎಲ್ಲ ವಸ್ತುಗಳು ಕಾಣೆಯಾಗಿವೆ. ಇದರ ಸುತ್ತಮುತ್ತ ವಾಸಿಸುತ್ತಿದ್ದ ಹಲವಾರು ಕುಟುಂಬಗಳು ಈ ಮನೆಯ ಬಳಿ ವಾಸಿಸಲು ಅಂಜಿ ಬೇರೆಡೆಗೆ ಸ್ಥಳಾಂತರಗೊಂಡಿದ್ದಾರೆ. ಸಂತ್ರಸ್ತ ಮಕ್ಕಳ ಕುಟುಂಬಗಳಲ್ಲಿ ಹೆಚ್ಚಿನವರು ಪಶ್ಚಿಮ ಬಂಗಾಳ ಮತ್ತು ಬಿಹಾರದಿಂದ ಉದ್ಯೋಗಕ್ಕಾಗಿ ವಲಸೆ ಬಂದವರಾಗಿದ್ದರು.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ನಿತಾರಿ ಹಂತಕರ ಖುಲಾಸೆ: ಸಮಾಜ ಯಾವ ವ್ಯವಸ್ಥೆ ಮೇಲೆ ನಂಬಿಕೆ ಇಡಬೇಕು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

BS Yediyurappa: ಪೋಕ್ಸೊ ಕೇಸ್;‌ ಮಾಜಿ ಸಿಎಂಗೇ ಹೀಗಾದರೆ ಜನರ ಗತಿ ಏನು? ಸರ್ಕಾರಕ್ಕೆ ಕೋರ್ಟ್‌ ಚಾಟಿ!

BS Yediyurappa: ಬಿ.ಎಸ್.ಯಡಿಯೂರಪ್ಪ ಅವರು ಜೂನ್‌ 17ರಂದು ವಿಚಾರಣೆಗೆ ಹಾಜರಾಗಲಾಗುವುದು ಎಂದು ತಿಳಿಸಿದರೂ ಕೋರ್ಟ್‌ಗೆ ಹೋಗಿ ಅರೆಸ್ಟ್‌ ವಾರಂಟ್‌ ತರುವ ದರ್ದು ಏನಿತ್ತು ಎಂಬುದಾಗಿ ಸಿಐಡಿ ಪರ ವಾದ ಮಂಡಿಸಿದ ಎಜಿ ಶಶಿಕಿರಣ್‌ ಶೆಟ್ಟಿ ಅವರಿಗೆ ಕೋರ್ಟ್‌ ಚಾಟಿ ಬೀಸಿತು. ಹಾಗೆಯೇ, ಮಾಜಿ ಸಿಎಂಗೇ ಹೀಗಾದರೆ, ಸಾಮಾನ್ಯ ಜನರ ಗತಿ ಏನು ಎಂದು ಕೂಡ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರ ಏಕಸದಸ್ಯ ಪೀಠವು ಕಳವಳ ವ್ಯಕ್ತಪಡಿಸಿತು.

VISTARANEWS.COM


on

BS Yediyurappa
Koo

ಬೆಂಗಳೂರು: 17 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪೋಕ್ಸೊ ಕೇಸ್‌ನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (BS Yediyurappa) ಅವರಿಗೆ ಕರ್ನಾಟಕ ಹೈಕೋರ್ಟ್‌ (Karnataka High Court) ಬಿಗ್‌ ರಿಲೀಫ್‌ ನೀಡಿದೆ. ಪೋಕ್ಸೊ ಕೇಸ್‌ನಲ್ಲಿ ಯಡಿಯೂರಪ್ಪ ಅವರನ್ನು ಮುಂದಿನ ವಿಚಾರಣೆವರೆಗೆ ಬಂಧಿಸಬಾರದು ಎಂದು ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರ ಏಕಸದಸ್ಯ ಪೀಠವು ಆದೇಶ ಹೊರಡಿಸಿದೆ. ಇದರ ಮಧ್ಯೆಯೇ, ವಿಚಾರಣೆ ವೇಳೆ ನ್ಯಾಯಾಲಯವು ಕರ್ನಾಟಕ ಸರ್ಕಾರಕ್ಕೆ ಚಾಟಿ ಬೀಸಿದೆ. “ಒಬ್ಬ ಮಾಜಿ ಮುಖ್ಯಮಂತ್ರಿಯನ್ನೇ ಈ ರೀತಿ ನಡೆಸಿಕೊಂಡರೆ, ಸಾಮಾನ್ಯ ಜನರ ಪಾಡೇನು” ಎಂದು ಕೋರ್ಟ್‌ ಕಳವಳ ವ್ಯಕ್ತಪಡಿಸಿದೆ.

ಅಡ್ವೊಕೇಟ್‌ ಜನರಲ್‌ (AG) ಶಶಿಕಿರಣ್‌ ಶೆಟ್ಟಿ ಅವರು ಸಿಐಡಿ ಪರ ವಾದ ಮಂಡಿಸಿದರು. “ಜೂನ್‌ 11ರಂದು ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಿಐಡಿ ಅಧಿಕಾರಿಗಳು ನೋಟಿಸ್‌ ಜಾರಿ ಮಾಡಿದ್ದಾರೆ. ಜೂನ್‌ 12ರಂದು ವಿಚಾರಣೆಗೆ ಹಾಜರಾಗಬೇಕು ಎಂದು ನೋಟಿಸ್‌ ನೀಡಿದ್ದಾರೆ. ಹೀಗಿದ್ದರೂ, ಯಡಿಯೂರಪ್ಪ ಅವರು ಸಂಜೆಗೆ ವಿಮಾನದ ಟಿಕೆಟ್‌ ಬುಕ್‌ ಮಾಡಿಕೊಂಡು ದೆಹಲಿಗೆ ತೆರಳಿದ್ದಾರೆ” ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಇದೇ ವೇಳೆ ನ್ಯಾಯಾಲಯವು, “ಬಿ.ಎಸ್.ಯಡಿಯೂರಪ್ಪ ಅವರು ಜೂನ್‌ 12ರ ಬದಲು, ಜೂನ್‌ 17ರಂದು ತನಿಖಾಧಿಕಾರಿ ಎದುರು ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ. ಹೀಗಿದ್ದರೂ, ಕೋರ್ಟ್‌ಗೆ ಹೋಗಿ ಅರೆಸ್ಟ್‌ ವಾರೆಂಟ್‌ ತರುವ ಅವಶ್ಯಕತೆ ಏನಿತ್ತು? ಅವರು ಒಬ್ಬ ಮಾಜಿ ಮುಖ್ಯಮಂತ್ರಿ. ಅವರೇನೂ ದೇಶ ಬಿಟ್ಟು ಓಡಿ ಹೋಗುತ್ತಿದ್ದರೇ? ನಾಲ್ಕೈದು ದಿನ ತಡವಾಗಿ ವಿಚಾರಣೆಗೆ ಹಾಜರಾದರೆ ಆಕಾಶವೇ ಕಳಚಿ ಬೀಳುತ್ತಿತ್ತೇ? ಒಬ್ಬ ಮಾಜಿ ಮುಖ್ಯಮಂತ್ರಿಗೇ ಹೀಗಾದರೆ, ಸಾಮಾನ್ಯ ಜನರ ಗತಿ ಏನು” ಎಂದು ಚಾಟಿ ಬೀಸಿತು.

ಬಳಿಕ, ಯಡಿಯೂರಪ್ಪ ಅವರನ್ನು ಮುಂದಿನ ವಿಚಾರಣೆವರೆಗೆ ಬಂಧಿಸಬಾರದು ಎಂದು ನ್ಯಾ.ಕೃಷ್ಣ ದೀಕ್ಷಿತ್‌ ಅವರು ಆದೇಶ ಹೊರಡಿಸಿದರು. ಹಾಗೆಯೇ, ಜೂನ್‌ 17ರಂದು ತನಿಖಾಧಿಕಾರಿ ಎದುರು ಯಡಿಯೂರಪ್ಪ ಅವರು ವಿಚಾರಣೆಗೆ ಹಾಜರಾಗಬೇಕು ಎಂದು ಸೂಚಿಸಿ, ವಿಚಾರಣೆಯನ್ನು ಎರಡು ವಾರ ಮುಂದೂಡಿದರು.

ಏನಿದು ಪ್ರಕರಣ?

2024ರ ಫೆಬ್ರವರಿ 2ರಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಾರ್ಚ್‌ 14ರಂದು ಪೋಕ್ಸೊ ಕಾಯ್ದೆ ಅಡಿಯಲ್ಲಿ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಇದಾದ ಬಳಿಕ ಬಿ.ಎಸ್.ಯಡಿಯೂರಪ್ಪ ಅವರು ಸಿಐಡಿ ಅಧಿಕಾರಿಗಳ ವಿಚಾರಣೆಗೂ ಹಾಜರಾಗಿದ್ದರು. ಆದರೆ, ಎಫ್‌ಐಆರ್‌ ದಾಖಲಾದ ಮೂರು ತಿಂಗಳ ಬಳಿಕ ಪ್ರಕರಣವೀಗ ಮತ್ತೆ ಮುನ್ನೆಲೆಗೆ ಬಂದಿದೆ. ಜೂನ್‌ 12ರಂದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಬೇಕು ಎಂಬುದಾಗಿ ಜೂನ್‌ 11ರಂದೇ ಸಿಐಡಿ ಅಧಿಕಾರಿಗಳು ನೋಟಿಸ್‌ ನೀಡಿದ್ದರು.

ಇದನ್ನೂ ಓದಿ: BS Yediyurappa: ಪೋಕ್ಸೊ ಕೇಸ್‌ನಲ್ಲಿ ಯಡಿಯೂರಪ್ಪಗೆ ಬಿಗ್‌ ರಿಲೀಫ್‌; ಬಂಧಿಸದಂತೆ ಕೋರ್ಟ್‌ ಆದೇಶ

Continue Reading

ಪ್ರಮುಖ ಸುದ್ದಿ

BS Yediyurappa: ಪೋಕ್ಸೊ ಕೇಸ್‌ನಲ್ಲಿ ಯಡಿಯೂರಪ್ಪಗೆ ಬಿಗ್‌ ರಿಲೀಫ್‌; ಬಂಧಿಸದಂತೆ ಕೋರ್ಟ್‌ ಆದೇಶ

BS Yediyurappa: ಪೋಕ್ಸೊ ಕೇಸ್‌ನಲ್ಲಿ ನಿರೀಕ್ಷಣಾ ಜಾಮೀನು ನೀಡಬೇಕು ಹಾಗೂ ದಾಖಲಾಗಿರುವ ಪೋಕ್ಸೊ ಕೇಸ್‌ಅನ್ನು ರದ್ದುಗೊಳಿಸಬೇಕು ಎಂಬುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅದರಂತೆ, ಕರ್ನಾಟಕ ಹೈಕೋರ್ಟ್‌ ವಿಚಾರಣೆ ನಡೆಸಿತು.

VISTARANEWS.COM


on

BS Yediyurappa
Koo

ಬೆಂಗಳೂರು: 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ದಾಖಲಾದ ಪೋಕ್ಸೊ ಕೇಸ್‌ನಲ್ಲಿ (POCSO Case) ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ (BS Yediyurappa) ಅವರಿಗೆ ಕರ್ನಾಟಕ ಹೈಕೋರ್ಟ್‌ ಬಿಗ್‌ ರಿಲೀಫ್‌ ನೀಡಿದೆ. ಹೈಕೋರ್ಟ್‌ನ ಮುಂದಿನ ವಿಚಾರಣೆವರೆಗೆ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸಬಾರದು ಎಂದು ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರ ಏಕಸದಸ್ಯ ಪೀಠವು ಆದೇಶ ಹೊರಡಿಸಿದೆ. ಇದರಿಂದಾಗಿ, ಸಿಐಡಿ ಅಧಿಕಾರಿಗಳಿಂದ ಬಂಧನದ ಭೀತಿಯಲ್ಲಿ ಯಡಿಯೂರಪ್ಪ ಅವರಿಗೆ ತಾತ್ಕಾಲಿಕ ರಿಲೀಫ್‌ ಸಿಕ್ಕಿದೆ. ಆದರೆ, ಜೂನ್‌ 17ರಂದು ಸಿಐಡಿ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗಬೇಕು ಎಂದು ಯಡಿಯೂರಪ್ಪ ಅವರಿಗೆ ಕೋರ್ಟ್‌ ಸೂಚಿಸಿದೆ. ವಿಚಾರಣೆಯನ್ನು ಎರಡು ವಾರ ಮುಂದೂಡಲಾಗಿದೆ.

ಬಿ.ಎಸ್‌.ಯಡಿಯೂರಪ್ಪ ಅವರ ಪರವಾಗಿ ಹಿರಿಯ ವಕೀಲ ಸಿ.ವಿ. ನಾಗೇಶ್‌ ಅವರು ವಾದ ಮಂಡಿಸಿದರು. “ಪೋಕ್ಸೊ ಕೇಸ್‌ಗೆ ಸಂಬಂಧಿಸಿದಂತೆ ಎರಡು ಅರ್ಜಿಗಳನ್ನು ಸಲ್ಲಿಸಲಾಗಿದೆ. ಒಂದು ಪ್ರಕರಣವನ್ನು ರದ್ದುಗೊಳಿಸುವಂತೆ ಹಾಗೂ ಇನ್ನೊಂದು ನಿರೀಕ್ಷಣಾ ಜಾಮೀನು ನೀಡುವಂತೆ ಕೋರಿ ಅರ್ಜಿ ಸಲ್ಲಿಸಲಾಗಿದೆ. ಪ್ರಕರಣದಲ್ಲಿ ದೂರುದಾರೆಗೆ ಬ್ಲ್ಯಾಕ್‌ಮೇಲ್‌ ಮಾಡುವುದೇ ಕೆಲಸವಾಗಿದೆ. ಪ್ರಕರಣದಲ್ಲಿ ಸಂತ್ರಸ್ತೆಯ ತಾಯಿ ದೂರು ನೀಡಿದ್ದಾರೆ. ಆಕೆಯ ವೃತ್ತಿಯೇ ಬೇರೆಯವರ ವಿರುದ್ಧ ಕೇಸ್‌ ದಾಖಲಿಸುವುದಾಗಿದೆ. ಇದುವರೆಗೆ ಮಹಿಳೆಯು ಸುಮಾರು 53 ಪ್ರಕರಣಗಳನ್ನು ದಾಖಲಿಸಿದ್ದಾರೆ. ಇಲ್ಲಿ ಭಾವನಾತ್ಮಕ ಅಂಶಗಳಿಗಿಂತ ವಾಸ್ತವಾಂಶಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಿದೆ” ಎಂದು ಹೇಳಿದರು.

Medical Ethics

ಆಗ ನ್ಯಾಯಾಧೀಶರು, “ಎಫ್‌ಐಆರ್‌ ದಾಖಲಿಸಿದ್ದು ಯಾರು?” ಎಂದು ಪ್ರಶ್ನಿಸಿದರು. ಆಗ ನಾಗೇಶ್‌, “ಸಂತ್ರಸ್ತೆಯ ತಾಯಿ” ಎಂದರು. “ಆಕೆಯ ಉದ್ಯೋಗ ಏನು” ಎಂದು ಜಡ್ಜ್‌ ಕೇಳಿದ ಪ್ರಶ್ನೆಗೆ, “ಬೇರೆಯವರ ವಿರುದ್ಧ ಕೇಸ್‌ ಹಾಕುವುದೇ ಆಕೆಯ ಕೆಲಸವಾಗಿದೆ” ಎಂದು ನಾಗೇಶ್‌ ಹೇಳಿದರು. “ಉದ್ಯೋಗ ಏನು ಅಂತ ನಮೂದಿಸಿದ್ದಾರೆ” ಎಂದು ಜಡ್ಜ್‌ ಕೇಳಿದ್ದಕ್ಕೆ “ಉದ್ಯಮಿ” ಎಂದು ನಾಗೇಶ್‌ ಹೇಳಿದರು. ಆಗ ನ್ಯಾಯಾಲಯವು, “ಮಹಿಳಾ ಉದ್ಯಮಿ ಎಂದೇ ಪರಿಗಣಿಸಲಾಗುತ್ತದೆ” ಎಂದಿತು. “ಸಿಐಡಿ ನೋಟಿಸ್‌ ಬಳಿಕ ವಿಚಾರಣೆಗೆ ಹಾಜರಾಗಿದ್ದಾರೆ. ಧ್ವನಿ ಪರೀಕ್ಷೆಗೂ ಯಡಿಯೂರಪ್ಪ ಅವರು ಸಹಕಾರ ನೀಡಿದ್ದಾರೆ. ಹಾಗಾಗಿ, ಪ್ರಕರಣದಲ್ಲಿ ಯಡಿಯೂರಪ್ಪ ಅವರನ್ನು ಬಂಧಿಸುವ ಅವಶ್ಯಕತೆ ಇಲ್ಲ” ಎಂದು ನಾಗೇಶ್‌ ಹೇಳಿದರು.

ಅಡ್ವೊಕೇಟ್‌ ಜನರಲ್‌ ವಾದವೇನಿತ್ತು?

ಅಡ್ವೊಕೇಟ್‌ ಜನರಲ್‌ (AG) ಶಶಿಕಿರಣ್‌ ಶೆಟ್ಟಿ ಅವರು ಸಿಐಡಿ ಪರ ವಾದ ಮಂಡಿಸಿದರು. “ಮಹಿಳೆಯು 53 ಕೇಸ್‌ಗಳನ್ನು ದಾಖಲಿಸಿದ್ದಾರೆ ಎಂಬುದಾಗಿ ಅರ್ಜಿದಾರರು (ಬಿಎಸ್‌ವೈ) ಹೇಳಿದ್ದಾರೆ. ಆದರೆ, ಮಹಿಳೆಯು ಆರು ಕೇಸ್‌ಗಳನ್ನು ಮಾತ್ರ ದಾಖಲಿಸಿದ್ದಾರೆ. ದೂರು ನೀಡಿದ ಮಹಿಳೆಯು ಕೆಲ ದಿನಗಳ ಹಿಂದೆ ಮೃತಪಟ್ಟಿದ್ದಾರೆ” ಎಂದರು. ಆಗ ನ್ಯಾ.ಕೃಷ್ಣ ದೀಕ್ಷಿತ್‌, “ಮಹಿಳೆ ಯಾವಾಗ ಮೃತಪಟ್ಟರು” ಎಂದು ಪ್ರಶ್ನಿಸಿದರು. “2024ರ ಮೇ 27ರಂದು ಮಹಿಳೆ ಮೃತಪಟ್ಟಿದ್ದಾರೆ” ಎಂದು ಎ.ಜಿ ತಿಳಿಸಿದರು. “ಮೃತಪಡಲು ಕಾರಣವೇನು” ಎಂದು ನ್ಯಾಯಮೂರ್ತಿ ಕೇಳಿದ ಪ್ರಶ್ನೆಗೆ, “ಕ್ಯಾನ್ಸರ್‌ನಿಂದ ಮೃತಪಟ್ಟಿದ್ದಾರೆ” ಎಂದು ಶಶಿಕಿರಣ್‌ ಶೆಟ್ಟಿ ತಿಳಿಸಿದರು.

“ಅರೆಸ್ಟ್‌ ವಾರಂಟ್‌ ಏಕೆ” ಎಂದು ಕೋರ್ಟ್‌ ಪ್ರಶ್ನೆ ಕೇಳಿತು. “ಆರೋಪಿಯು ದೆಹಲಿಯಲ್ಲಿದ್ದಾರೆ. ಪ್ರಕರಣದ ವ್ಯಾಪ್ತಿಯಿಂದ ಅವರು ಹೊರಗಿದ್ದಾರೆ. ಹಾಗಾಗಿ, ಅರೆಸ್ಟ್‌ ವಾರಂಟ್”‌ ಎಂದು ಎ.ಜಿ ತಿಳಿಸಿದರು. ಅಷ್ಟೇ ಅಲ್ಲ, “ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಬಂದಿದೆ. ಸಿಐಡಿ ನೋಟಿಸ್‌ ಕಳುಹಿಸಿದರೂ (ಜೂನ್‌ 11) ಆರೋಪಿಯು ವಿಚಾರಣೆಗೆ ಹಾಜರಾಗಿಲ್ಲ. ಅವರು ದೆಹಲಿಗೆ ತೆರಳಿದ್ದರು” ಎಂದು ಕೋರ್ಟ್‌ ತಿಳಿಸಿದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು “ಬಿ.ಎಸ್.ಯಡಿಯೂರಪ್ಪ ಅವರು ಮಾಜಿ ಮುಖ್ಯಮಂತ್ರಿಯಾಗಿದ್ದಾರೆ. ಅವರು ಜೂನ್‌ 17ರಂದು ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದರೂ ಕೋರ್ಟ್‌ ಹೋಗಿ ಅರೆಸ್ಟ್‌ ವಾರಂಟ್‌ ತಂದಿದ್ದೀರಿ. ನಾಲ್ಕು ದಿನ ತಡವಾಗಿ ವಿಚಾರಣೆಗೆ ಹಾಜರಾಗಿದ್ದರೆ ಆಕಾಶವೇನೂ ಕಳಚಿ ಬೀಳುತ್ತಿರಲಿಲ್ಲ. ಹಾಗಾಗಿ, ಅರೆಸ್ಟ್‌ ವಾರಂಟ್‌ ಬಗ್ಗೆ ನಮಗೆ ಅನುಮಾನವಿದೆ. ಮುಂದಿನ ವಿಚಾರಣೆವರೆಗೂ ಯಡಿಯೂರಪ್ಪ ಅವರನ್ನು ಬಂಧಿಸಬಾರದು” ಎಂಬುದಾಗಿ ಏಕಸದಸ್ಯ ಪೀಠವು ಆದೇಶ ಹೊರಡಿಸಿತು.

ಏನಿದು ಪ್ರಕರಣ?

2024ರ ಫೆಬ್ರವರಿ 2ರಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಾರ್ಚ್‌ 14ರಂದು ಪೋಕ್ಸೊ ಕಾಯ್ದೆ ಅಡಿಯಲ್ಲಿ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಇದಾದ ಬಳಿಕ ಬಿ.ಎಸ್.ಯಡಿಯೂರಪ್ಪ ಅವರು ಸಿಐಡಿ ಅಧಿಕಾರಿಗಳ ವಿಚಾರಣೆಗೂ ಹಾಜರಾಗಿದ್ದರು. ಆದರೆ, ಎಫ್‌ಐಆರ್‌ ದಾಖಲಾದ ಮೂರು ತಿಂಗಳ ಬಳಿಕ ಪ್ರಕರಣವೀಗ ಮತ್ತೆ ಮುನ್ನೆಲೆಗೆ ಬಂದಿದೆ. ಜೂನ್‌ 12ರಂದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಬೇಕು ಎಂಬುದಾಗಿ ಜೂನ್‌ 11ರಂದೇ ಸಿಐಡಿ ಅಧಿಕಾರಿಗಳು ನೋಟಿಸ್‌ ನೀಡಿದ್ದರು.

ಇದನ್ನೂ ಓದಿ: BS Yediyurappa: ಪೋಕ್ಸೊ ಕೇಸ್; ಯಡಿಯೂರಪ್ಪ ವಿರುದ್ಧ ಅರೆಸ್ಟ್‌ ವಾರಂಟ್

Continue Reading

ಪ್ರಮುಖ ಸುದ್ದಿ

Medical Ethics : ಎದೆ ನೋವೆಂದು ಕ್ಲಿನಿಕ್​ಗೆ ಬಂದ ಯುವತಿ; ತಪಾಸಣೆ ನೆಪದಲ್ಲಿ ಅಂಗಿ ಬಿಚ್ಚಿಸಿ ಮುತ್ತಿಟ್ಟ ವೈದ್ಯ; ಕೇಸ್​ ದಾಖಲಿಸಲು ಕೋರ್ಟ್​ ಸೂಚನೆ

Medical Ethics: ಬೆಂಗಳೂರಿನ ಜರಗನಹಳ್ಳಿಯಲ್ಲಿರುವ ಆಸ್ಪತ್ರೆಯಲ್ಲಿ ಈ ‘ಅಧಿಕ ಪ್ರಸಂಗ ನಡೆದಿದೆ. ಎದೆ ನೋವಿನ ತಪಾಸಣೆ ನಡೆಸಲು ಬಂದ ಯುವತಿಯ ಒಳಉಡುಪುಗಳ ಬಿಚ್ಚಿಸಿದ್ದ ಆರೋಪಿ ವೈದ್ಯ , ಹೃದಯ ಬಡಿತ ಪರೀಕ್ಷೆ ಮಾಡುವ ನೆಪದಲ್ಲಿ ಸ್ತನಗಳ ಮೇಲೆ ಕೈಯಾಡಿಸಿದ್ದ. ಕೊನೆಗೆ ಮುತ್ತು ನೀಡಿದ್ದ. ತಕ್ಷಣ ಯುವತಿ ದೂರು ದಾಖಲಿಸಿದ್ದರು.

VISTARANEWS.COM


on

Medical Ethics
Koo

ಬೆಂಗಳೂರು: ವೈದ್ಯಕೀಯ ನೈತಿಕತೆ (Medical Ethics) ಮರೆತು ತನ್ನ ಬಳಿಕ ಚಿಕಿತ್ಸೆಗಾಗಿ ಬಂದಿದ್ದ ಯುವತಿಗೆ ತಪಾಸಣೆ ನೆಪದಲ್ಲಿ ಬಟ್ಟೆ ಹಾಗೂ ಒಳಉಡುಪುಗಳನ್ನು ಬಿಚ್ಚಿಸಿ ಸ್ತನಗಳ ಮೇಲೆ ಮುತ್ತಿಟ್ಟ ವೈದ್ಯನ ಮೇಲೆ ಕೇಸ್​ ದಾಖಲಿಸುವಂತೆ ಹೈಕೋರ್ಟ್​ ಹೇಳಿದೆ. ನಗರದ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣವನ್ನು ರದ್ದು ಮಾಡುವಂತೆ ಆರೋಪಿ ವೈದ್ಯ ಸಲ್ಲಿಸಿದ್ದ ಅರ್ಜಿಯನ್ನು ರದ್ದು ಮಾಡಿದ ಕೋರ್ಟ್​, ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಆದೇಶಿಸಿದೆ. ಇದು ವೈದ್ಯಕೀಯ ನೈತಿಕತೆಯನ್ನು ಮರೆಯುವ ವೃತ್ತಿಪರರಿಗೆ ತಕ್ಕ ಪಾಠ ಎಂಬುದಾಗಿ ಕೋರ್ಟ್​​ ಅಭಿಪ್ರಾಯಪಟ್ಟಿದೆ.

ಬೆಂಗಳೂರಿನ ಜರಗನಹಳ್ಳಿಯಲ್ಲಿರುವ ಆಸ್ಪತ್ರೆಯಲ್ಲಿ ಈ ‘ಅಧಿಕ ಪ್ರಸಂಗ ನಡೆದಿದೆ. ಎದೆ ನೋವಿನ ತಪಾಸಣೆ ನಡೆಸಲು ಬಂದ ಯುವತಿಯ ಒಳಉಡುಪುಗಳ ಬಿಚ್ಚಿಸಿದ್ದ ಆರೋಪಿ ವೈದ್ಯ , ಹೃದಯ ಬಡಿತ ಪರೀಕ್ಷೆ ಮಾಡುವ ನೆಪದಲ್ಲಿ ಸ್ತನಗಳ ಮೇಲೆ ಕೈಯಾಡಿಸಿದ್ದ. ಕೊನೆಗೆ ಮುತ್ತು ನೀಡಿದ್ದ. ತಕ್ಷಣ ಯುವತಿ ದೂರು ದಾಖಲಿಸಿದ್ದರು. ಈ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದ್ದು, ಇದನ್ನು ರದ್ದು ಮಾಡುವಂತೆ ಕೋರಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಕೋರ್ಟ್​ ಅರ್ಜಿ ವಜಾ ಮಾಡುವ ಮೂಲಕ ಆರೋಪಿಯ ಬಂಧನವಾಗಲಿದೆ.

ಕೋರ್ಟ್​ ಅಭಿಪ್ರಾಯವೇನು?

ವೈದ್ಯರು ತನ್ನ ವೃತ್ತಿ ನೈತಿಕತೆ ಹಾಗೂ ಜನರ ನಂಬಿಕೆ ದುರುಪಯೋಗಪಡಿಸಿಕೊಂಡರೆ ವೈದ್ಯ ಮತ್ತು ರೋಗಿಯ ನಡುವಿನ ಸಂಬಂಧಕ್ಕೆ ಅಪಚಾರವಾಗುತ್ತದೆ. ರೋಗಿಯ ದೇಹ ವೈದ್ಯಕೀಯ ತಪಾಸಣೆಗೆ ಸೀಮಿತ. ದುರುಪಯೋಗ ಸಲ್ಲ. ಪ್ರಕರಣದಲ್ಲಿ ಸ್ಪಷ್ಟವಾದ ಲೈಂಗಿಕ ಪ್ರಚೋದನೆ ಕಂಡುಬಂದಿರುವುದರಿಂದ ವೈದ್ಯರ ವಿರುದ್ಧ ದಾಖಲಿಸಿದ ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸಲಾಗದು ಎಂದು ಕೋರ್ಟ್ ಹೇಳಿದೆ.

ಇದನ್ನೂ ಓದಿ: CM Award : ಕಳಂಕಿತ ಡಿವೈಎಸ್ಪಿಜಾವೀದ್​ಗೆ ಸಿಎಂ ಪದಕ ನೀಡುವಂತೆ ಶಿಫಾರಸು; ಶಾಸಕ ಕಂದಕೂರ ವಿರೋಧ

ವೈದ್ಯರು ದೂರುದಾರರ ಬಳಿ ಆಕೆಯ ಶರ್ಟ್ ಮತ್ತು ಒಳ ಉಡುಪು ಬಿಚ್ಚುವಂತೆ ಹೇಳಿದ್ದಾರೆ. ಪರೀಕ್ಷೆ ಮಾಡುವುದನ್ನು ಬಿಟ್ಟು ಸ್ತನದ ಮೇಲೆ ಮುತ್ತು ನೀಡಿದ ಆರೋಪ ಎದುರಿಸುತ್ತಿದ್ದಾರೆ. ವೈದ್ಯರ ಈ ನಡತೆ ಐಪಿಸಿಯ ಸೆಕ್ಷನ್ 354ಎ(1)(i) ಅಡಿ ಅಪರಾಧವೆಂದು ಪರಿಗಣಿಸಲ್ಪಡುವ ಅಂಶಗಳಾಗಿರುತ್ತದೆ ಎಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಹೇಳಿದ್ದಾರೆ.

ಏನಿದು ಪ್ರಕರಣ

ಸಂತ್ರಸ್ತೆ ಯುವತಿ ಎದೆನೋವಿನಿಂದ ಬಳಲುತ್ತಿದ್ದರು. ಅವರು ಜೆಪಿ ನಗರದ ಆಸ್ಪತ್ರೆಗೆ ಭೇಟಿ ನೀಡಿದ್ದರು. ಚಿಕಿತ್ಸೆ ನೀಡಿದ ನಂತರ ಇಸಿಜಿ ಮತ್ತು ಎದೆಯ ಎಕ್ಸ್-ರೇ ಪರೀಕ್ಷೆಗೆ ಒಳಗಾಗುವಂತೆ ವೈದ್ಯರು ಸೂಚಿಸಿದ್ದರು. ಅಲ್ಲದೆ, ವರದಿಗಳನ್ನು ವಾಟ್ಸಾಪ್‌ ನಲ್ಲಿ ಕಳುಹಿಸಲು ಹೇಳಿದ್ದರು. ವರದಿಗಳನ್ನು ನೋಡಿದ ವೈದ್ಯರು ಮಾರ್ಚ್ 21 ರಂದು ಮಧ್ಯಾಹ್ನ 2 ಗಂಟೆಗೆ ಜರಗನಹಳ್ಳಿಯಲ್ಲಿರುವ ತನ್ನ ಕ್ಲಿನಿಕ್‌ಗೆ ಭೇಟಿ ನೀಡುವಂತೆ ಹೇಳಿದ್ದರು.

ಅಂತೆಯೇ ಯುವತಿ ಕ್ಲಿನಿಕ್‌ಗೆ ಭೇಟಿ ನೀಡಿದಾಗ ವೈದ್ಯ ಮಾತ್ರ ಅಲ್ಲಿದ್ದರು. ತಪಾಸಣಾ ಕೋಣೆಗೆ ಕರೆದೊಯ್ದು ವೈದ್ಯರು ಮಲಗಲು ಹೇಳಿದ್ದರು. ಬಳಿಕ ಆಕೆಯ ಎದೆಯ ಮೇಲೆ ಸ್ಟೆತಸ್ಕೋಪ್ ಇಟ್ಟು ಹೃದಯ ಬಡಿತ ಪರೀಕ್ಷಿಸಲು ಪ್ರಾರಂಭಿಸಿದ್ದರು. ಮುಂದುವರಿದು ಆಕೆಯ ಬಳಿ ಶರ್ಟ್ ಮತ್ತು ಒಳ ಉಡುಪು ತೆಗೆಯಲು ಹೇಳಿದ್ದರು. ಐದು ನಿಮಿಷಗಳ ಪರೀಕ್ಷೆಯ ನಂತರ, ಕೈಗಳಿಂದ ಸ್ತನವನ್ನು ಸ್ಪರ್ಶಿಸಲು ಪ್ರಾರಂಭಿಸಿದ್ದರು. ಅಂತಿಮವಾಗಿ ಸ್ತನಕ್ಕೆ ಮುತ್ತಿಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಗಾಬರಿಗೊಂಡ ಆಕೆ ಕ್ಲಿನಿಕ್‌ನಿಂದ ಓಡಿಬಂದು ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದ್ದರು. ಮರುದಿನ ಅವರು ಪುಟ್ಟೇನಹಳ್ಳಿ ಠಾಣೆಯಲ್ಲಿ ವೈದ್ಯರ ವಿರುದ್ಧ ದೂರು ದಾಖಲಿಸಿದ್ದರು.

Continue Reading

ಪ್ರಮುಖ ಸುದ್ದಿ

HSRP Number Plate : ಎಚ್​ಎಸ್​ಆರ್​ಪಿ ನಂಬರ್​ ಪ್ಲೇಟ್​ ಅಳವಡಿಕೆ ಗಡುವು ಜುಲೈ 4 ರವರೆಗೆ ವಿಸ್ತರಣೆ; ವಾಹನ ಮಾಲೀಕರಿಗೆ ನೆಮ್ಮದಿ

HSRP Number Plate : ಹೊಸ ಮಾದರಿಯ ಸುರಕ್ಷಿತ ನಂಬರ್ ಪ್ಲೇಟ್​ ಅಳವಡಿಕೆಗೆ ನೀಡಲಾಗಿರುವ ಗಡುವು ವಿಸ್ತರಿರಣೆಗೆ ಸರಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಎಚ್‌ಎಸ್‌ಆರ್‌ಪಿ ತಯಾರಿಕಾ ಕಂಪನಿ ಬಿಎನ್‌ಡಿ ಎನರ್ಜಿ ಲಿಮಿಟೆಡ್‌ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು .ಅದನ್ನು ವಿಚಾರಣೆ ಮಾಡಿದ ನ್ಯಾಯಮೂರ್ತಿ ಎನ್‌ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆವಿ ಅರವಿಂದ್‌ ಅವರಿದ್ದ ವಿಭಾಗೀಯ ಪೀಠ ಜುಲೈ 4ರ ವರೆಗೆ ವಿಸ್ತರಣೆ ಮಾಡುವಂತೆ ಹೇಳಿದೆ.

VISTARANEWS.COM


on

HSRP Number plate
Koo

ಬೆಂಗಳೂರು: 2019ಕ್ಕಿಂತ ಹಿಂದೆ ಮಾರುಕಟ್ಟೆಗೆ ಇಳಿದ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಸಂಖ್ಯೆ ಫಲಕ (HSRP Number Plate) ಕಡ್ಡಾಯವಾಗಿ ಅಳವಡಿಸಬೇಕೆಂಬ ಗಡುವು ಜುಲೈ 4ರವರೆಗೆ ವಿಸ್ತರಣೆಯಾಗಿದೆ. ಹೀಗಾಗಿ ನಾನಾ ತಾಂತ್ರಿಕ ಕಾರಣಗಳಿಂದಾಗಿ ಇನ್ನೂ ನಂಬರ್​ಪ್ಲೇಟ್​ ಅಳವಡಿಸದ ವಾಹನಗಳ ಮಾಲೀಕರಿಗೆ ನೆಮ್ಮದಿ ಸಿಕ್ಕಿದೆ. ಹೊಸ ನಂಬರ್​ ಪ್ಲೇಟ್ ಅಳವಡಿಸದ ವಾಹನ ಮಾಲೀಕರ ವಿರುದ್ಧ ಯಾವುದೇ ಕಠಿಣ ಕೈಗೊಳ್ಳಬಾರದು ಎಂದು ಹೈಕೋರ್ಟ್‌ ಮೇ 21ರಂದು ಹೊರಡಿಸಿದ್ದ ಆದೇಶ ಜುಲೈ 4ರವರೆಗೆ ವಿಸ್ತರಣೆಯಾಗಿರುವುದರಿಂದ ವಾಹನ ಮಾಲೀಕರಿಗೆ ತೊಂದರೆ ತಪ್ಪಿದೆ.

ಹೊಸ ಮಾದರಿಯ ಸುರಕ್ಷಿತ ನಂಬರ್ ಪ್ಲೇಟ್​ ಅಳವಡಿಕೆಗೆ ನೀಡಲಾಗಿರುವ ಗಡುವು ವಿಸ್ತರಿರಣೆಗೆ ಸರಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಎಚ್‌ಎಸ್‌ಆರ್‌ಪಿ ತಯಾರಿಕಾ ಕಂಪನಿ ಬಿಎನ್‌ಡಿ ಎನರ್ಜಿ ಲಿಮಿಟೆಡ್‌ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು .ಅದನ್ನು ವಿಚಾರಣೆ ಮಾಡಿದ ನ್ಯಾಯಮೂರ್ತಿ ಎನ್‌ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆವಿ ಅರವಿಂದ್‌ ಅವರಿದ್ದ ವಿಭಾಗೀಯ ಪೀಠ ಜುಲೈ 4ರ ವರೆಗೆ ವಿಸ್ತರಣೆ ಮಾಡುವಂತೆ ಹೇಳಿದೆ.

ಪ್ರಕರಣದಲ್ಲಿ ಸರಕಾರದ ಪರ ಹಾಜರಾಗಿದ್ದ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ವಿಕ್ರಮ್‌ ಹುಯಿಲಗೋಳ, ಅವರೂ ಸರ್ಕಾರದ ನಿಲುವನ್ನು ಇದೇ ವೇಳೆ ವ್ಯಕ್ತಪಡಿಸಿದ್ದಾರೆ. “ಎಚ್‌ಎಸ್‌ಆರ್‌ಪಿ ಫಲಕಗಳ ಅಳವಡಿಕೆ ಅವಧಿಯನ್ನು ರಾಜ್ಯ ಸರಕಾರ 2024ರ ಆಗಸ್ಟ್‌ ಇಲ್ಲವೇ ಸೆಪ್ಟೆಂಬರ್‌ವರೆಗೂ ವಿಸ್ತರಿಸುವ ಚಿಂತನೆ ನಡೆಸಿದೆ. ಹೈಕೋರ್ಟ್‌ ಅನುಮತಿ ನೀಡಿದಲ್ಲಿ ಸರಕಾರ ಈ ಸಂಬಂಧ ಒಂದು ವಾರದಲ್ಲಿ ಅಧಿಸೂಚನೆ ಹೊರಡಿಸಲಿದೆ,” ಎಂದು ಮನವರಿಕೆ ಮಾಡಿದರು. ಈ ವೇಳೆ ನ್ಯಾಯಪೀಠ, ವಾಹನ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳುವ ಅವಧಿಯನ್ನು ವಿಸ್ತರಿಸುವ ನಿರ್ಧಾರ ತೆಗೆದುಕೊಳ್ಳಲು ಸರಕಾರ ಸ್ವತಂತ್ರ,” ಎಂದು ಹೇಳಿತು.

ರಾಜ್ಯದಲ್ಲಿ 2019ರ ಏಪ್ರಿಲ್‌ 1ಕ್ಕಿಂತ ಮುನ್ನ ನೋಂದಣಿಯಾದ ಎಲ್ಲ ಮಾದರಿಯ ವಾಹನಗಳಿಗೆ ಮೂಲ ಉಪಕರಣ ತಯಾರಕ (ಓಇಎಂ) ಅಧಿಕೃತ ಡೀಲರ್‌ಗಳ ಮೂಲಕ ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳಲು ರಾಜ್ಯ ಸರಕಾರ 2023ರ ಆಗಸ್ಟ್‌ 17ರಂದು ಅಧಿಸೂಚನೆ ಹೊರಡಿಸಿತ್ತು. ಆದರೆ, ವಿತರಣೆ, ಅಳವಡಿಕೆ ಸೇರಿದಂತೆ ನಾನಾ ಸಮಸ್ಯೆಗಳಿಂದ ಈ ಯೋಜನೆಗೆ ಸಮಸ್ಯೆಯಾಗುತ್ತಿದೆ. ಸುರಕ್ಷಿತ ನಂಬರ್​ ಪ್ಲೇಟ್ ಅಳವಡಿಸಲು ಸುಮಾರು ಅರ್ಧದಷ್ಟು ವಾಹನ ಮಾಲೀಕರಿಗೆ ಇನ್ನೂ ಆಗಿಲ್ಲ. ಹೀಗಾಗಿ ಗಡುವು ವಿಸ್ತರಣೆ ಆಗುತ್ತಲೇ ಇದೆ. ಇದೀಗ ಕೋರ್ಟ್​ ಆದೇಶದ ಮೂಲಕ ಮತ್ತಷ್ಟು ವಿಸ್ತರಣೆಯಾಗಿದೆ. ಸರ್ಕಾರವೂ ಇದನ್ನು ಇನ್ನಷ್ಟು ಮುಂದುವರಿಸುವ ಯೋಜನೆ ಹೊಂದಿದೆ.

ಕೇಂದ್ರ ಮೋಟಾರು ವಾಹನಗಳ ನಿಯಮಗಳನ್ನು ಮೀರಿ ಕೆಲವು ಸಂಸ್ಥೆಗಳನ್ನು ಅಧಿಸೂಚನೆಯಿಂದ ಹೊರಗಿಡಲಾಗಿದೆ. ಪ್ರಭಾವಿ ಸಂಸ್ಥೆಗಳಿಗಷ್ಟೇ ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ಅವಕಾಶ ಮಾಡಿಕೊಡಲಾಗಿದೆ ಎಂದು ಆಕ್ಷೇಪಿಸಿ ಹೈ ಸೆಕ್ಯುರಿಟಿ ರೆಜಿಸ್ಪ್ರೇಷನ್‌ ಪ್ಲೇಟ್‌ ಮ್ಯಾನುಫ್ಯಾಕ್ಚರರ್ಸ್‌ ಅಸೋಸಿಯೇಷನ್‌ ಆಫ್‌ ಇಂಡಿಯಾ ಸೇರಿ ಅವಕಾಶ ವಂಚಿತ ಕೆಲ ಸಂಸ್ಥೆಗಳು ನ್ಯಾಯಾಲಯದ ಮೊರೆ ಹೋಗಿವೆ. ಆ ಅರ್ಜಿ ಜತೆಗೆ ಮಧ್ಯಂತರ ಅರ್ಜಿ ಹೂಡಿರುವ ಬಿಎನ್‌ಡಿ ಎನರ್ಜಿ ಲಿಮಿಟೆಡ್‌ ಎಚ್‌ಎಸ್‌ಆರ್‌ಪಿ ಅಳವಡಿಕೆ ವಿಧಿಸಿರುವ ಗಡುವು ವಿಸ್ತರಿಸಲು ಕೋರಿದೆ.

Continue Reading
Advertisement
World War 3
ಪ್ರಮುಖ ಸುದ್ದಿ4 hours ago

World War 3: ಜೂನ್ 18ರಿಂದ 3ನೇ ಮಹಾಯುದ್ಧ ಶುರು; ಖ್ಯಾತ ಜ್ಯೋತಿಷಿಯ ಭವಿಷ್ಯವಾಣಿ ಸಂಚಲನ

Cholera outbreak
ಕರ್ನಾಟಕ6 hours ago

Cholera outbreak: ಕಲುಷಿತ ನೀರು ಸೇವನೆ; ಮಧುಗಿರಿಯ ಚಿನ್ನೇನಹಳ್ಳಿಯಲ್ಲಿ ವ್ಯಕ್ತಿಗೆ ಕಾಲರಾ ದೃಢ

NCERT Textbooks
ಪ್ರಮುಖ ಸುದ್ದಿ6 hours ago

NCERT Textbooks: ರಾಜಕೀಯ ಶಾಸ್ತ್ರದ ಪಠ್ಯದಿಂದ ‘ಬಾಬ್ರಿ ಮಸೀದಿ’ ಅಧ್ಯಾಯ ತೆಗೆದ ಎನ್‌ಸಿಇಆರ್‌ಟಿ!

Parenting Tips
ಪ್ರಮುಖ ಸುದ್ದಿ7 hours ago

Parenting Tips: ನೀವು ಹೊಸ ಅಪ್ಪ ಅಮ್ಮಂದಿರೇ? ನಿಮಗಿದೆ ಇಲ್ಲಿ ಮುಖ್ಯವಾದ ಟಿಪ್ಸ್!

Drowns in Lake
ಕರ್ನಾಟಕ7 hours ago

Drowns in lake: ಸ್ನೇಹಿತರ ಜತೆ ಕೆರೆಗೆ ಈಜಲು ಹೋದ ಬಾಲಕ ನೀರುಪಾಲು

Petrol Diesel Price
ಕರ್ನಾಟಕ8 hours ago

Petrol Diesel Price: ಪೆಟ್ರೋಲ್, ಡೀಸೆಲ್ ದರ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ ಎಂದ ಸಿಎಂ

Amit Shah
ದೇಶ8 hours ago

Amit Shah: ಕಾಶ್ಮೀರದಲ್ಲಿ ಒಬ್ಬನೇ ಒಬ್ಬ ಉಗ್ರ ಉಳಿಯಬಾರದು; ಖಡಕ್‌ ಆದೇಶ ಕೊಟ್ಟ ಅಮಿತ್‌ ಶಾ

Karnataka Weather Forecast
ಮಳೆ8 hours ago

Karnataka weather : ಭಾನುವಾರ ರಾಯಚೂರಿನಲ್ಲಿ ಅಬ್ಬರಿಸಿದ ವರುಣ; ನಾಳೆಗೂ ಇದೆ ಮಳೆ ಅಲರ್ಟ್‌

Actor Darshan
ಪ್ರಮುಖ ಸುದ್ದಿ8 hours ago

Actor Darshan: ರೇಣುಕಾಸ್ವಾಮಿ ಕುಟುಂಬಕ್ಕಷ್ಟೇ ಅಲ್ಲ, ಚಿತ್ರರಂಗಕ್ಕೂ ನ್ಯಾಯ ಸಿಗಬೇಕು: ಕಿಚ್ಚ ಸುದೀಪ್‌

Lok Sabha Speaker
ದೇಶ8 hours ago

Lok Sabha Speaker: ಸ್ಪೀಕರ್‌ ಆಯ್ಕೆ ವಿಚಾರದಲ್ಲಿ ಟಿಡಿಪಿಗೆ ಬೆಂಬಲ ಎಂದ ಇಂಡಿಯಾ ಒಕ್ಕೂಟ; ಯಾರಾಗ್ತಾರೆ ಸ್ಪೀಕರ್?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Renukaswamy murder case The location of the accused is complete
ಸಿನಿಮಾ9 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ10 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ15 hours ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ2 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ2 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ5 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

ಟ್ರೆಂಡಿಂಗ್‌