Giorgia Meloni: ಮೋದಿ ಜತೆಗಿನ ವಿಡಿಯೊ ಟ್ರೋಲ್‌ ಬೆನ್ನಲ್ಲೇ ಇಟಲಿ ಪ್ರಧಾನಿ ಮೆಲೋನಿ‌ ಬ್ರೇಕಪ್! - Vistara News

ವಿದೇಶ

Giorgia Meloni: ಮೋದಿ ಜತೆಗಿನ ವಿಡಿಯೊ ಟ್ರೋಲ್‌ ಬೆನ್ನಲ್ಲೇ ಇಟಲಿ ಪ್ರಧಾನಿ ಮೆಲೋನಿ‌ ಬ್ರೇಕಪ್!

Giorgia Meloni: ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ತಮ್ಮ ಸಂಗಾತಿ ಆ್ಯಂಡ್ರಿಯಾ ಗಿಯಾಂಬ್ರುನೊ ಜತೆಗಿನ ಸಂಬಂಧವನ್ನು ಕೊನೆಗೊಳಿಸುವುದಾಗಿ ಘೋಷಿಸಿದ್ದಾರೆ

VISTARANEWS.COM


on

italy
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರೋಮ್: ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ (Italy PM Giorgia Meloni) ತಮ್ಮ ಸಂಗಾತಿ ಆ್ಯಂಡ್ರಿಯಾ ಗಿಯಾಂಬ್ರುನೊ (Andrea Giambruno) ಜತೆಗಿನ ಸಂಬಂಧವನ್ನು ಕೊನೆಗೊಳಿಸುವುದಾಗಿ ಘೋಷಿಸಿದ್ದಾರೆ. ತಮ್ಮ ಸೋಷಿಯಲ್‌ ಮೀಡಿಯಾ ಖಾತೆಯಲ್ಲಿ ಈ ಬಗ್ಗೆ ಶುಕ್ರವಾರ ಬರೆದುಕೊಂಡಿದ್ದಾರೆ.

ಪತ್ರಕರ್ತ ಗಿಯಾಂಬ್ರುನೊ ಜತೆ ಮೆಲೋನಿ ಸುಮಾರು 10 ವರ್ಷ ಸಂಬಂಧ ಹೊಂದಿದ್ದರು. ʼʼಆ್ಯಂಡ್ರಿಯಾ ಗಿಯಾಂಬ್ರುನೊ ಜತೆಗಿನ 10 ವರ್ಷಗಳ ಸಂಬಂಧ ಇಲ್ಲಿಗೆ ಕೊನೆಯಾಗುತ್ತಿದೆ. ನಮ್ಮ ದಾರಿ ಬೇರೆ ಬೇರೆ ಎನ್ನುವುದು ಈಗ ಗಮನಕ್ಕೆ ಬಂದಿದೆ. ಹೀಗಾಗಿ ಬೇರ್ಪಡುತ್ತಿದ್ದೇವೆʼʼ ಎಂದು ಅವರು ಹೇಳಿದ್ದಾರೆ. ಈ ಜೋಡಿಗೆ 7ರ ಹರೆಯದ ಪುತ್ರಿ ಕೂಡ ಇದ್ದಾಳೆ.

ದಿ. ಸಿಲ್ವಿಯೊ ಬೆರ್ಲುಸ್ಕೋನಿ ಅವರ ಉತ್ತರಾಧಿಕಾರಿಗಳ ಒಡೆತನದ ಎಂಎಫ್ಇ ಮಾಧ್ಯಮ ಗುಂಪಿನ ಭಾಗವಾದ ಮೀಡಿಯಾಸೆಟ್ ಪ್ರಸಾರ ಮಾಡಿದ ಸುದ್ದಿ ಕಾರ್ಯಕ್ರಮದ ನಿರೂಪಕ ಗಿಯಾಂಬ್ರುನೊ. ಈ ವಾರದ ಆರಂಭದಲ್ಲಿ ಜಿಯಾಂಬ್ರುನೊ ಅವರ ಕಾರ್ಯಕ್ರಮದ ಆಯ್ದ ಭಾಗಗಳನ್ನು ಪ್ರಸಾರ ಮಾಡಲಾಗಿತ್ತು. ಅದರಲ್ಲಿ ಅವರು ಕೆಟ್ಟ ಭಾಷೆಯನ್ನು ಬಳಸಿರುವುದು ಕಂಡು ಬಂದಿದೆ. ಇದರಿಂದಾಗಿ ಮೆಲೋನಿ ತಮ್ಮ ಸಂಬಂಧಕ್ಕೆ ಕೊನೆ ಹಾಡುತ್ತಿದ್ದಾರೆ ಎನ್ನಲಾಗಿದೆ.

ಗಿಯಾಂಬ್ರುನೊ ಆಗಸ್ಟ್‌ನಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣದ ನಂತರ ಬಲಿಪಶುವನ್ನು ದೂಷಿಸುವ ಕಮೆಂಟ್‌ ಮಾಡಿ ವ್ಯಾಪಕ ಟೀಕೆಗೆ ಒಳಗಾಗಿದ್ದರು. “ನೀವು ಅತಿಯಾಗಿ ಮದ್ಯ ಸೇವಿಸಿ ಪ್ರಜ್ಞೆ ಕಳೆದುಕೊಳ್ಳವುದನ್ನು ತಪ್ಪಿಸಿದರೆ ಅತ್ಯಾಚಾರದಂತಹ ಘಟನೆ ನಡೆಯುವುದಿಲ್ಲ” ಎಂಬ ಅರ್ಥದಲ್ಲಿ ಅವರು ಅಂದು ಮಾತನಾಡಿದ್ದರು.

ಅವರ ಹೇಳಿಕೆ ಸಾರ್ವಜನಿಕರಿಂದ ಮತ್ತು ರಾಜಕಾರಣಿಗಳಿಂದ ತೀವ್ರ ಟೀಕೆಗೆ ಒಳಗಾಗಿತ್ತು. ಅದಕ್ಕೆ ಜಿಯಾಂಬ್ರುನೊ ಪ್ರತಿಕ್ರಿಯಿಸಿ, ʼʼಅತ್ಯಾಚಾರದ ಕೃತ್ಯವನ್ನು ಸಮರ್ಥಿಸುವುದಿಲ್ಲ. ಅದನ್ನು ‘ಶೋಚನೀಯ’ ಎಂದು ಕರೆದಿದ್ದೇನೆ ಮತ್ತು ಅತ್ಯಾಚಾರಿಗಳನ್ನು ‘ಮೃಗಗಳು’ ಎಂದು ಬಣ್ಣಿಸಿದ್ದೇನೆʼʼ ಎಂದು ಹೇಳಿದ್ದರು. ʼʼಕುಡಿದು ಮಹಿಳೆಯರ ಮೇಲೆ ಅತ್ಯಾಚಾರ ಎಸಗುವುದು ಪುರುಷರಿಗೆ ನ್ಯಾಯಸಮ್ಮತ ಎಂದು ನಾನು ಎಂದಿಗೂ ಹೇಳಿಲ್ಲʼʼ ಎಂದು ಅವರು ಬಳಿಕ ಸ್ಪಷ್ಟಪಡಿಸಿದ್ದರು.

ʼʼಗಿಯಾಂಬ್ರುನೊ ಜತೆಗೆ ಉತ್ತಮ ದಿನಗಳನ್ನು ಕಳೆದಿದ್ದೇನೆ. ಅದಕ್ಕಾಗಿ ಧನ್ಯವಾದ ಅರ್ಪಿಸುತ್ತಿದ್ದೇನೆ. ಪುತ್ರಿ ನನಗೆ ಆತನಿಂದ ಲಭಿಸಿದ ಅತೀ ಅಮೂಲ್ಯ ಉಡುಗೊರೆ. ಈ ಎಲ್ಲಾ ಕಾರಣಕ್ಕೆ ಗಿಯಾಂಬ್ರುನೊಗೆ ಕೃತಜ್ಞತೆ ಸಲ್ಲಿಸುತ್ತೇನೆʼʼ ಎಂದು ಮೆಲೋನಿ ಬರೆದುಕೊಂಡಿದ್ದಾರೆ.

ಮೋದಿ ಜತೆಗಿನ ವಿಡಿಯೊ ಟ್ರೋಲ್

ಮೋದಿಯನ್ನು ಹೊಗಳಿದ್ದ ಮೆಲೋನಿ

ಮೆಲೋನಿ ಇತ್ತೀಚೆಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳುವ ಮೂಲಕ ಸುದ್ದಿಯಾಗಿದ್ದರು. “ಜಾಗತಿಕ ನಾಯಕರಲ್ಲಿಯೇ ಪ್ರಧಾನಿ ನರೇಂದ್ರ ಮೋದಿ ಹೆಚ್ಚು ಪ್ರೀತಿಪಾತ್ರರು” ಎಂದು ಮಾರ್ಚ್‌ನಲ್ಲಿ ರೈಸಿನಾ ಶೃಂಗಸಭೆಯ ಹಿನ್ನೆಲೆಯಲ್ಲಿ ಭಾರತಕ್ಕೆ ಆಗಮಿಸಿದ್ದ ಮೆಲೋನಿ ಹೇಳಿದ್ದರು. “ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತ ಹಾಗೂ ಇಟಲಿ ಸಂಬಂಧ ಮತ್ತಷ್ಟು ವೃದ್ಧಿಯಾಗುತ್ತಿದೆ. ಉಭಯ ದೇಶಗಳ ಸಂಬಂಧವನ್ನು ವ್ಯೂಹಾತ್ಮಕ ಸಂಬಂಧವಾಗಿ ಮಾರ್ಪಡಿಸಲು ನಾವು ಉತ್ಸುಕರಾಗಿದ್ದೇವೆ. ಇದರಿಂದ ಎರಡೂ ದೇಶಗಳ ಸಂಬಂಧ ಇನ್ನಷ್ಟು ವೃದ್ಧಿಯಾಗಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು. ಈ ಸಂದರ್ಭದಲ್ಲಿ ಟ್ರೋಲಿಗರು ಮೋದಿ ಮತ್ತು ಮೆಲೋನಿ ಕುರಿತಾದ ಟ್ರೋಲ್‌ಗಳನ್ನು ಹರಿಯಬಿಟ್ಟಿದ್ದು, ಭರ್ಜರಿಯಾಗಿ ಸದ್ದು ಮಾಡಿದ್ದವು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Nikhil Gupta: ಗುರುಪತ್ವಂತ್‌ ಸಿಂಗ್‌ ಪನ್ನುನ್‌ ಹತ್ಯೆಗೆ ಸಂಚು ಆರೋಪ; ಜೆಕ್‌ ಗಣರಾಜ್ಯದಿಂದ ನಿಖಿಲ್‌ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

Nikhil Gupta: ಖಲಿಸ್ತಾನ್‌ ಉಗ್ರ ಗುರುಪತ್ವಂತ್‌ ಸಿಂಗ್‌ ಪನ್ನುನ್‌ ಹತ್ಯೆ ಸಂಚು ಆರೋಪದಲ್ಲಿ ಬಂಧಿತನಾಗಿರುವ ಭಾರತೀಯ ಉದ್ಯಮಿ ನಿಖಿಲ್‌ ಗುಪ್ತಾನನ್ನು ಜೆಕ್‌ ಗಣರಾಜ್ಯದಿಂದ ಅಮೆರಿಕಕ್ಕೆ ಹಸ್ತಾಂತರಿಸಲಾಗಿದೆ. ಅಮರಿಕದ ನ್ಯೂಯಾರ್ಕ್‌ನಲ್ಲಿರುವ ಖಲಿಸ್ತಾನ್ ಭಯೋತ್ಪಾದಕ ಗುರುಪತ್ವಂತ್‌ ಸಿಂಗ್‌ ಪನ್ನುನ್‌ನ ಹತ್ಯೆಯ ಸಂಚಿನಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ 52 ವರ್ಷದ ನಿಖಿಲ್‌ ಗುಪ್ತಾನನ್ನು ಅಮೆರಿಕ ಸರ್ಕಾರದ ಕೋರಿಕೆಯ ಮೇರೆಗೆ ಕಳೆದ ವರ್ಷ ಜೆಕ್ ಗಣರಾಜ್ಯದಲ್ಲಿ ಬಂಧಿಸಲಾಗಿತ್ತು. ಆತನನ್ನು ಸೋಮವಾರ (ಜೂನ್‌ 17) ನ್ಯೂಯಾರ್ಕ್‌ನ ಫೆಡರಲ್ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ.

VISTARANEWS.COM


on

Nikhil Gupta
Koo

ವಾಷಿಂಗ್ಟನ್‌: ಖಲಿಸ್ತಾನ್‌ ಉಗ್ರ (Khalistan Terrorist) ಗುರುಪತ್ವಂತ್‌ ಸಿಂಗ್‌ ಪನ್ನುನ್‌ (Gurpatwant Singh Pannun) ಹತ್ಯೆ ಸಂಚು (Murder plot) ಆರೋಪದಲ್ಲಿ ಬಂಧಿತನಾಗಿರುವ ಭಾರತೀಯ ಉದ್ಯಮಿ ನಿಖಿಲ್‌ ಗುಪ್ತಾ (Nikhil Gupta)ನನ್ನು ಜೆಕ್‌ ಗಣರಾಜ್ಯದಿಂದ ಅಮೆರಿಕಕ್ಕೆ ಹಸ್ತಾಂತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಅಮರಿಕದ ನ್ಯೂಯಾರ್ಕ್‌ನಲ್ಲಿರುವ ಖಲಿಸ್ತಾನ್ ಭಯೋತ್ಪಾದಕ ಗುರುಪತ್ವಂತ್‌ ಸಿಂಗ್‌ ಪನ್ನುನ್‌ನ ಹತ್ಯೆಯ ಸಂಚಿನಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ 52 ವರ್ಷದ ನಿಖಿಲ್‌ ಗುಪ್ತಾನನ್ನು ಅಮೆರಿಕ ಸರ್ಕಾರದ ಕೋರಿಕೆಯ ಮೇರೆಗೆ ಕಳೆದ ವರ್ಷ ಜೆಕ್ ಗಣರಾಜ್ಯದಲ್ಲಿ ಬಂಧಿಸಲಾಗಿತ್ತು. ಆತನನ್ನು ಸೋಮವಾರ (ಜೂನ್‌ 17) ನ್ಯೂಯಾರ್ಕ್‌ನ ಫೆಡರಲ್ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ.

ನಿಖಿಲ್‌ ಗುಪ್ತಾನನ್ನು ಪ್ರಸ್ತುತ ಬ್ರೂಕ್ಲಿನ್‌ನ ಫೆಡರಲ್ ಮೆಟ್ರೋಪಾಲಿಟನ್ ಡಿಟೆನ್ಷನ್ ಸೆಂಟರ್‌ಗೆ ದಾಖಲಿಸಲಾಗಿದೆ. “ಜೆಕ್ ಗಣರಾಜ್ಯದಲ್ಲಿ ಬಂಧನಕ್ಕೊಳಗಾಗಿದ್ದ ನಿಖಿಲ್‌ ಗುಪ್ತಾನನ್ನು ಭಾನುವಾರ ನ್ಯೂಯಾರ್ಕ್‌ಗೆ ಕರೆ ತರಲಾಗಿದೆ. ಸಾಮಾನ್ಯವಾಗಿ ಗಡಿಪಾರಾದ ಆರೋಪಿಗಳು ದೇಶಕ್ಕೆ ಆಗಮಿಸಿದ ಒಂದು ದಿನದೊಳಗೆ ನ್ಯಾಯಾಲಯಕ್ಕೆ ಹಾಜರಾಗಬೇಕು ಎನ್ನುವ ಕಾನೂನಿದೆʼʼ ಎಂದು ವರದಿಯೊಂದು ತಿಳಿಸಿದೆ.

ಗುರುಪತ್ವಂತ್‌ ಸಿಂಗ್‌ ಪನ್ನುನ್‌ನನ್ನು ಹತ್ಯೆ ಮಾಡಲು ನಿಖಿಲ್‌ ಗುಪ್ತಾ ವ್ಯಕ್ತಿಯೊಬ್ಬರಿಗೆ ಸುಪಾರಿ ನೀಡಿದ್ದ. ಅಲ್ಲದೆ ಆತನಿಗೆ 15,000 ಡಾಲರ್ ಮುಂಗಡವನ್ನು ಪಾವತಿಸಿದ್ದ ಎಂದು ಫೆಡರಲ್ ಪ್ರಾಸಿಕ್ಯೂಟರ್‌ ಆರೋಪಿಸಿದ್ದಾರೆ. ಅನಾಮಧೇಯ ಭಾರತೀಯ ಸರ್ಕಾರಿ ಅಧಿಕಾರಿಯೊಬ್ಬರು ಇದರಲ್ಲಿ ಭಾಗಿಯಾಗಿದ್ದಾರೆ ಎಂದೂ ಅವರು ದೂರಿದ್ದಾರೆ. ಆದರೆ ಭಾರತ ಈಗಾಗಲೇ ಈ ಆರೋಪಗಳನ್ನು ತಳ್ಳಿ ಹಾಕಿದೆ. ಜತೆಗೆ ನಿಖಿಲ್‌ ಗುಪ್ತಾ ಕೂಡ ತನ್ನ ಮೇಲೆ ಸುಳ್ಳು ಆರೋಪ ಹೊರಿಸಲಾಗಿದೆ ಎಂದು ತಿಳಿಸಿದ್ದಾನೆ.

ವಾರ್ಷಿಕ ಐಸಿಇಟಿ ಮಾತುಕತೆಗಾಗಿ ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವಾನ್ ಅವರು ನವದೆಹಲಿಗೆ ಭೇಟಿ ನೀಡುವ ಮುನ್ನ ಈ ಹಸ್ತಾಂತರ ನಡೆದಿದೆ. ಈ ವಿಷಯವನ್ನು ಸುಲ್ಲಿವಾನ್ ಅವರು ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರೊಂದಿಗೆ ಚರ್ಚಿಸಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Khalistan Terrorist: ನಿಖಿಲ್‌ ಗುಪ್ತಾ ಬಂಧನ ವಿಚಾರದಲ್ಲಿ ಮಧ್ಯೆ ಪ್ರವೇಶಿಸುವುದಿಲ್ಲ: ಸುಪ್ರೀಂ ಕೋರ್ಟ್

ಕಳೆದ ವರ್ಷ ಬಂಧನ

ದೆಹಲಿ ಮೂಲದ ಉದ್ಯಮಿ ನಿಖಿಲ್ ಗುಪ್ತಾನನ್ನು ಕಳೆದ ವರ್ಷ ಅಂದರೆ 2023ರಲ್ಲಿ ಜೆಕ್ ಗಣರಾಜ್ಯದಲ್ಲಿ ಬಂಧಿಸಲಾಯಿತು. ಸಿಖ್ ಪ್ರತ್ಯೇಕತಾವಾದಿ ನಾಯಕ ಗುರುಪತ್ವಂತ್ ಸಿಂಗ್ ಪನ್ನುನ್‌ನನ್ನು ಕೊಲ್ಲಲು ಸಂಚು ರೂಪಿಸಿದ ಆರೋಪವನ್ನು ಅಮೆರಿಕ ಆತನ ಮೇಲೆ ಹೊರಿಸಿದೆ. ನಿಖಿಲ್ ಗುಪ್ತಾ ಭಾರತದ ಸರ್ಕಾರಿ ಏಜೆಂಟ್‌ನೊಂದಿಗೆ ಸಂಚಿನಲ್ಲಿ ಭಾಗಿಯಾಗಿದ್ದಾನೆ ಮತ್ತು ಪನ್ನುನ್‌ನನ್ನು ಕೊಲ್ಲಲು ಒಬ್ಬ ಹಿಟ್‌ಮ್ಯಾನ್ ಅನ್ನು ನೇಮಿಸಿಕೊಂಡಿದ್ದಾನೆ ಎಂದು ಅಮೆರಿಕ ಹೇಳಿದೆ.‌

ಆರೋಪಗಳು ತುಂಬಾ ಗಂಭೀರವಾಗಿರುವುದರಿಂದ ತನಿಖಾ ಸಮಿತಿಯನ್ನು ರಚಿಸಲಾಗಿದ್ದು, ವಿಚಾರವನ್ನು ಪರಿಶೀಲಿಸಲಾಗುತ್ತಿದೆ ಎಂದು ನವದೆಹಲಿ ಹೇಳಿದೆ. ನಿಖಿಲ್ ಗುಪ್ತಾ ಬಂಧನದ ಬಳಿಕ ಆತನ ಕುಟುಂಬವು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಗುಪ್ತಾನನ್ನು ಜೈಲಿನಲ್ಲಿ ಪ್ರತ್ಯೇಕವಾಗಿ ಇರಿಸಲಾಗಿದೆ, ಹಂದಿಮಾಂಸವನ್ನು ತಿನ್ನಲು ಅವರನ್ನು ಒತ್ತಾಯಿಸಲಾಗುತ್ತಿದೆ ಎಂದು ಅರ್ಜಿಯಲ್ಲಿ ಹೇಳಲಾಗಿತ್ತು.

Continue Reading

ಆರೋಗ್ಯ

Flesh-Eating Bacteria: ಆತಂಕ ಮೂಡಿಸಿದ ಮಾಂಸ ಭಕ್ಷಕ ಬ್ಯಾಕ್ಟೀರಿಯಾ; ಸೋಂಕು ತಗುಲಿದ 48 ಗಂಟೆಯಲ್ಲೇ ಸಾವು!

Flesh-Eating Bacteria: ಅಪಾಯಕಾರಿ ಕಾಯಿಲೆಯೊಂದು ಜಪಾನ್‌ನಲ್ಲಿ ಪತ್ತೆಯಾಗಿದ್ದು, ಸೋಂಕು ತಗುಲಿದ 48 ಗಂಟೆಯಲ್ಲೇ ಮಾನವನ ಸಾವಿಗೆ ಕಾರಣವಾಗುತ್ತದೆ. ಈ ಸೋಂಕಿಗೆ ಮಾಂಸ-ಭಕ್ಷಕ ಬ್ಯಾಕ್ಟೀರಿಯಾ ಕಾರಣವಾಗಿದ್ದು, ಜಪಾನ್‌ನಲ್ಲಿ ವ್ಯಾಪಕವಾಗಿ ಪ್ರಸಾರವಾಗುತ್ತಿದೆ. ಈ ಅಪರೂಪದ ಕಾಯಿಲೆಯನ್ನು ಸ್ಟ್ರೆಪ್ಟೋಕೊಕ್ಕಾಲ್ ಟಾಕ್ಸಿಕ್ ಶಾಕ್ ಸಿಂಡ್ರೋಮ್ ಎಂದು ಕರೆಯಲಾಗುತ್ತದೆ.

VISTARANEWS.COM


on

Flesh-Eating Bacteria
Koo

ಟೋಕಿಯೊ: ವಿಶ್ವವನ್ನೇ ನಡುಗಿಸಿದ ಕೋವಿಡ್‌ ಹೊಡೆತದಿಂದ ಜಗತ್ತು ನಿಧಾನವಾಗಿ ಚೇತರಿಸಿಕೊಳ್ಳುತ್ತಿದೆ. ಈ ಮಧ್ಯೆ ಮತ್ತೊಂದು ಅಪಾಯಕಾರಿ ಕಾಯಿಲೆ ಜಪಾನ್‌ನಲ್ಲಿ ಪತ್ತೆಯಾಗಿದ್ದು, ಸೋಂಕು ತಗುಲಿದ 48 ಗಂಟೆಯಲ್ಲೇ ಮಾನವನ ಸಾವಿಗೆ ಕಾರಣವಾಗುತ್ತದೆ. ಈ ಸೋಂಕಿಗೆ ಮಾಂಸ ಭಕ್ಷಕ ಬ್ಯಾಕ್ಟೀರಿಯಾ (Flesh-Eating Bacteria)ಕಾರಣವಾಗಿದ್ದು, ಜಪಾನ್‌ನಲ್ಲಿ ವ್ಯಾಪಕವಾಗಿ ಪ್ರಸಾರವಾಗುತ್ತಿದೆ. ಈ ಅಪರೂಪದ ಕಾಯಿಲೆಯನ್ನು ಸ್ಟ್ರೆಪ್ಟೋಕೊಕ್ಕಾಲ್ ಟಾಕ್ಸಿಕ್ ಶಾಕ್ ಸಿಂಡ್ರೋಮ್ (Streptococcal Toxic Shock Syndrome-STSS) ಎಂದು ಕರೆಯಲಾಗುತ್ತದೆ.

ಜಪಾನ್‌ನಲ್ಲಿ ಈಗಾಗಲೇ ಈ ಮಾಂಸ ಭಕ್ಷಕ ಬ್ಯಾಕ್ಟೀರಿಯಾದಿಂದ ಕಾಣಿಸಿಕೊಳ್ಳುವ ಸ್ಟ್ರೆಪ್ಟೋಕೊಕ್ಕಾಲ್ ಟಾಕ್ಸಿಕ್ ಶಾಕ್ ಸಿಂಡ್ರೋಮ್ ಪ್ರಕರಣ 977ಕ್ಕೆ ಏರಿಕೆಯಾಗಿದೆ. ಕಳೆದ ವರ್ಷ ಒಟ್ಟು 941 ಪ್ರಕರಣಗಳು ವರದಿಯಾಗಿದ್ದವು. ಈ ವರ್ಷದ ಅರ್ಧ ಭಾಗದಲ್ಲಿಯೇ ಅದನ್ನೂ ಮೀರಿದ ಪ್ರಕರಣಗಳು ದಾಖಲಾಗಿದ್ದು ಆತಂಕ ಸೃಷ್ಟಿಸಿದೆ ಎಂದು ಮೂಲಗಳು ತಿಳಿಸಿವೆ.

“ಹೆಚ್ಚಿನ ಸಾವು ಸೋಂಕು ತಗುಲಿದ 48 ಗಂಟೆಗಳ ಒಳಗೆ ಸಂಭವಿಸುತ್ತವೆ. ಸೋಂಕು ಬಾಧಿತರ ಪಾದ ಬೆಳಿಗ್ಗೆ ಊದಿಕೊಂಡರೆ ಮಧ್ಯಾಹ್ನದ ವೇಳೆಗೆ ಊತ ಮೊಣಕಾಲಿನವರೆಗೆ ಹರಡುತ್ತದೆ ಮತ್ತು ಅವರು 48 ಗಂಟೆಗಳಲ್ಲಿ ಸಾಯುವ ಸಾಧ್ಯತೆ ಇದೆ” ಎಂದು ಟೋಕಿಯೊ ಮಹಿಳಾ ವೈದ್ಯಕೀಯ ವಿಶ್ವವಿದ್ಯಾಲಯದ ಸಾಂಕ್ರಾಮಿಕ ರೋಗಗಳ ಪ್ರಾಧ್ಯಾಪಕ ಕೆನ್ ಕಿಕುಚಿ ಆಘಾತಕಾರಿ ಮಾಹಿತಿ ಹಂಚಿಕೊಂಡಿದ್ದಾರೆ.

ಯಾವ ಬ್ಯಾಕ್ಟೀರಿಯಾ?

ಗ್ರೂಪ್ ಎ ಸ್ಟ್ರೆಪ್ಟೋಕಾಕಸ್ (ಜಿಎಎಸ್) ಬ್ಯಾಕ್ಟೀರಿಯಾ ಸಾಮಾನ್ಯವಾಗಿ ಸ್ಟ್ರೆಪ್ಟೋಕಾಕಸ್ ಪಿಯೋಜೆನೆಸ್ (Streptococcus Pyogenes) ಎಂದು ಕರೆಯಲ್ಪಡುತ್ತದೆ. ಇದು ವಿವಿಧ ರೀತಿಯ ಸೋಂಕುಗಳಿಗೆ ಕಾರಣವಾಗುತ್ತದೆ. ಗ್ರೂಪ್ ಎ ಸ್ಟ್ರೆಪ್ಟೋಕಾಕಸ್‌ನ ಕೆಲವು ತಳಿಗಳು ಗಂಟಲು ಅಥವಾ ಚರ್ಮದ ಸೋಂಕುಗಳಂತಹ ಸೌಮ್ಯ ಕಾಯಿಲೆಗಳಿಗೆ ಕಾರಣವಾಗಬಹುದು. ಜತೆಗೆ ನೆಕ್ರೋಟೈಸಿಂಗ್ ಫಾಸಿಟಿಸ್ ಅಥವಾ ಪ್ಟೋಕೊಕ್ಕಾಲ್ ಟಾಕ್ಸಿಕ್ ಶಾಕ್ ಸಿಂಡ್ರೋಮ್‌ನಂತಹ ಅಪಾಯಕಾರಿ ಕಾಯಿಲೆಗಳಂತಹ ಗಂಭೀರ ಸೋಂಕುಗಳೂ ಸಂಭವಿಸಬಹುದು. ಈ ಸಂದರ್ಭದಲ್ಲಿ ಸೂಕ್ತ ಚಿಕಿತ್ಸೆ ಅಗತ್ಯ.

ಸ್ಟ್ರೆಪ್ಟೋಕೊಕ್ಕಾಲ್ ಟಾಕ್ಸಿಕ್ ಶಾಕ್ ಸಿಂಡ್ರೋಮ್‌ನ ಲಕ್ಷಣ

ದೇಹದ ಭಾಗಗಳಲ್ಲಿ ನೋವು, ಊತ, ಜ್ವರ ಹಾಗೂ ಕಡಿಮೆ ರಕ್ತದೊತ್ತಡ ಮುಂತಾದವು ಸ್ಟ್ರೆಪ್ಟೋಕೊಕ್ಕಾಲ್ ಟಾಕ್ಸಿಕ್ ಶಾಕ್ ಸಿಂಡ್ರೋಮ್‌ನ ಲಕ್ಷಣಗಳು. ಇದು ಜೀವಕೋಶಗಳ ಸಾವು, ತೀವ್ರ ಜ್ವರ, ಉಸಿರಾಟದ ತೊಂದರೆ, ಅಂಗಾಂಗ ವೈಫಲ್ಯ ಹಾಗೂ ಸಾವಿಗೆ ಕೂಡ ಕಾರಣವಾಗಬಹುದು. ವಯಸ್ಕರು, ಮುಖ್ಯವಾಗಿ 50 ವರ್ಷ ದಾಟಿದವರಿಗೆ ಈ ಕಾಯಿಲೆ ಹೆಚ್ಚು ಅಪಾಯಕಾರಿ. ಇದರ ತಡೆಗೆ ಕೈಗಳನ್ನು ಸ್ವಚ್ಛವಾಗಿ ಇರಿಸಿಕೊಳ್ಳುವುದು ಬಹಳ ಮುಖ್ಯ. ಜತೆಗೆ ಯಾವುದೇ ತೆರೆದ ಗಾಯಗಳನ್ನು ನಿರ್ಲಕ್ಷಿಸಬಾರದು. ಮಾತ್ರವಲ್ಲ ಸೋಂಕಿತ ವ್ಯಕ್ತಿಗಳೊಂದಿಗೆ ನಿಕಟ ಸಂಪರ್ಕವನ್ನು ತಪ್ಪಿಸಬೇಕು ಎಂದು ತಜ್ಞರು ಸಲಹೆ ನೀಡುತ್ತಾರೆ.

ಜಪಾನ್ ಜತೆಗೆ ಯುರೋಪ್‌ನ ಐದು ದೇಶಗಳು ಸ್ಟ್ರೆಪ್ಟೋಕೊಕ್ಕಾಲ್ ಟಾಕ್ಸಿಕ್ ಶಾಕ್ ಸಿಂಡ್ರೋಮ್‌ ಪ್ರಕರಣಗಳ ಹೆಚ್ಚು ವರದಿಯಾಗುತ್ತಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆಗೆ (WHO) ವರದಿ ಮಾಡಿದೆ. ಕೋವಿಡ್ -19 ನಿರ್ಬಂಧಗಳನ್ನು ತೆಗೆದುಹಾಕಿದ ನಂತರ ಸೋಂಕಿನ ಪ್ರಮಾಣ ಹೆಚ್ಚಿದೆ ಎಂದು ತಿಳಿಸಿದೆ. ಪ್ರಸ್ತುತ ಸೋಂಕಿನ ದರ ಗಮನಿಸಿದರೆ ಜಪಾನ್​ನಲ್ಲಿ ಈ ವರ್ಷ 2,500 ಪ್ರಕರಣಗಳ ದಾಖಲಾಗಬಹುದು ಎನ್ನುವ ಆತಂಕ ಮೂಡಿದೆ.

ಇದನ್ನೂ ಓದಿ: Health Tips: ಮಳೆಗಾಲದಲ್ಲಿ ಆರೋಗ್ಯವಾಗಿರಲು ಈ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ

Continue Reading

ಪ್ರಮುಖ ಸುದ್ದಿ

World War 3: ಜೂನ್ 18ರಿಂದ 3ನೇ ಮಹಾಯುದ್ಧ ಶುರು; ಖ್ಯಾತ ಜ್ಯೋತಿಷಿಯ ಭವಿಷ್ಯವಾಣಿ ಸಂಚಲನ

World War 3: ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ದುರಂತದಿಂದ ಸಾವಿಗೀಡಾಗುತ್ತಾರೆ ಎಂಬುದಾಗಿ ಇದಕ್ಕೂ ಮೊದಲು ಕುಶಾಲ್‌ ಕುಮಾರ್ ಅವರು ಭವಿಷ್ಯ ನುಡಿದಿದ್ದರು. ಅದರಂತೆ, ಇಬ್ರಾಹಿಂ ರೈಸಿ ಅವರು ಮೇ 19ರಂದು ಸಂಭವಿಸಿದ ಹೆಲಿಕಾಪ್ಟರ್‌ ದುರಂತದಲ್ಲಿ ಮೃತಪಟ್ಟಿದ್ದರು. ಈಗ ರಾಜಕೀಯ ಹಾಗೂ ಜಾಗತಿಕ ಗಡಿ ಬಿಕ್ಕಟ್ಟಿನಿಂದಾಗಿ ಮೂರನೇ ಮಹಾಯುದ್ಧ ಸಂಭವಿಸಲಿದೆ ಎಂದು ಮಾಧ್ಯಮ ಸಂಸ್ಥೆಯೊಂದಕ್ಕೆ ಕುಶಾಲ್‌ ಕುಮಾರ್‌ ಅವರು ಭವಿಷ್ಯ ನುಡಿದಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

VISTARANEWS.COM


on

World War 3
Koo

ನವದೆಹಲಿ: ಅಫಘಾನಿಸ್ತಾನದಲ್ಲಿ ತಾಲಿಬಾನಿಗಳ ಆಡಳಿತ ಜಾರಿಗೆ ಬಂದಿದ್ದು, ಮಾನವ ಹಕ್ಕುಗಳು ಸರ್ವನಾಶಗೊಂಡಿವೆ. ಉಕ್ರೇನ್‌ ಮೇಲೆ ರಷ್ಯಾ ದಾಳಿ ಮಾಡುತ್ತಲೇ ಇದೆ. ಪ್ಯಾಲೆಸ್ತೀನ್‌ನ ಗಾಜಾ ಪಟ್ಟಿ ಮೇಲೆ ಇಸ್ರೇಲ್‌ ದಾಳಿ ನಡೆಸುತ್ತಲೇ ಇದೆ. ಇದೆಲ್ಲದ ಕಾರಣ ನಾಸ್ಟ್ರಾಡಾಮಸ್‌ ಹಾಗೂ ಬಾಬಾ ವಂಗಾ ಅವರು ಮೂರನೇ ಮಹಾಯುದ್ಧದ ಕುರಿತು ಭವಿಷ್ಯ ನುಡಿದಿದ್ದಾರೆ. ಇದರ ಬೆನ್ನಲ್ಲೇ, ಭಾರತದ ಜ್ಯೋತಿಷಿಯೊಬ್ಬರು ಮುಂದಿನ 48 ಗಂಟೆಗಳಲ್ಲಿಯೇ ಮೂರನೇ ಮಹಾಯುದ್ಧ ಆರಂಭವಾಗಲಿದ್ದು, ಜಗತ್ತಿನ ಬಹುತೇಕ ರಾಷ್ಟ್ರಗಳು ಸಂಕಷ್ಟಕ್ಕೆ ಸಿಲುಕಲಿವೆ ಎಂದು ಭವಿಷ್ಯ ನುಡಿದಿರುವುದು ಸಂಚಲನ ಮೂಡಿಸಿದೆ.

ಹೌದು, ಹರಿಯಾಣದವರಾದ ಕುಶಾಲ್‌ ಕುಮಾರ್‌ ಅವರು ಮೂರನೇ ಮಹಾಯುದ್ಧದ ಕುರಿತು ಭವಿಷ್ಯ ನುಡಿದಿದ್ದಾರೆ. “2024ರ ಜೂನ್‌ 18ರಿಂದಲೇ ಅಂದರೆ, ಮುಂದಿನ 48 ಗಂಟೆಗಳಲ್ಲಿಯೇ ಜಗತ್ತಿನಾದ್ಯಂತ ಬಿಕ್ಕಟ್ಟು ಸೃಷ್ಟಿಯಾಗಲಿದೆ. ತಮ್ಮನ್ನು ತಾವು ವೈದಿಕ ಜ್ಯೋತಿಷಿ ಎಂದು ಘೋಷಿಸಿಕೊಂಡಿರುವ ಕುಶಾಲ್‌ ಕುಮಾರ್‌ ಅವರು ಇದುವರೆಗೆ ನುಡಿದ ಭವಿಷ್ಯಗಳು ನಿಜವಾಗಿವೆ. ಜೂನ್‌ 18ರಂದೇ ಜಾಗತಿಕವಾಗಿ ಸಂಚಲನ ಮೂಡಿಸುವ ಬೆಳವಣಿಗೆಯೊಂದು ನಡೆಯಲಿದೆ ಎಂದು ಅವರು ಭವಿಷ್ಯ ನುಡಿದಿದ್ದಾರೆ.

ಜ್ಯೋತಿಷಿ ಕುಶಾಲ್‌ ಕುಮಾರ್.‌

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ದುರಂತದಿಂದ ಸಾವಿಗೀಡಾಗುತ್ತಾರೆ ಎಂಬುದಾಗಿ ಇದಕ್ಕೂ ಮೊದಲು ಕುಶಾಲ್‌ ಕುಮಾರ್ ಅವರು ಭವಿಷ್ಯ ನುಡಿದಿದ್ದರು. ಅದರಂತೆ, ಇಬ್ರಾಹಿಂ ರೈಸಿ ಅವರು ಮೇ 19ರಂದು ಸಂಭವಿಸಿದ ಹೆಲಿಕಾಪ್ಟರ್‌ ದುರಂತದಲ್ಲಿ ಮೃತಪಟ್ಟಿದ್ದರು. ಈಗ ರಾಜಕೀಯ ಹಾಗೂ ಜಾಗತಿಕ ಗಡಿ ಬಿಕ್ಕಟ್ಟಿನಿಂದಾಗಿ ಮೂರನೇ ಮಹಾಯುದ್ಧ ಸಂಭವಿಸಲಿದೆ ಎಂದು ಮಾಧ್ಯಮ ಸಂಸ್ಥೆಯೊಂದಕ್ಕೆ ಕುಶಾಲ್‌ ಕುಮಾರ್‌ ಅವರು ಭವಿಷ್ಯ ನುಡಿದಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಉತ್ತರ ಕೊರಿಯಾ ಸೈನಿಕರು ದಕ್ಷಿಣ ಕೊರಿಯಾ ಗಡಿಗಳತ್ತ ನುಗ್ಗುತ್ತಿದ್ದಾರೆ. ಇಸ್ರೇಲ್‌ ಹಾಗೂ ಗಾಜಾ ನಡುವಿನ ಸಮರವು ಭಾರಿ ಬಿಕ್ಕಟ್ಟು ಸೃಷ್ಟಿಸಿದೆ. ಉಕ್ರೇನ್‌ನಲ್ಲಿ ರಷ್ಯಾವಂತೂ ಮಾರಣಹೋಮ ನಡೆಸುತ್ತಿದೆ. ಇನ್ನು ಕಳೆದ ಜೂನ್‌ನಲ್ಲಿಯೇ ಜಮ್ಮು-ಕಾಶ್ಮೀರದಲ್ಲಿ ಯಾತ್ರಿಕರ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಇದೆಲ್ಲ ಕಾರಣದಿಂದಾಗಿ ಜಾಗತಿಕ ರಾಜಕೀಯ ಬಿಕ್ಕಟ್ಟು ಸೃಷ್ಟಿಯಾಗಿ, ಇದು ಮಿಲಿಟರಿ ಕಾರ್ಯಾಚರಣೆಗಳಿಗೆ ಮುನ್ನುಡಿ ಬರೆಯುತ್ತದೆ. ಇದರಿಂದ ಜಾಗತಿಕ ಅಶಾಂತಿ ಸೃಷ್ಟಿಯಾಗುತ್ತದೆ ಎಂದೇ ಹೇಳಲಾಗುತ್ತಿದೆ.

ಇದನ್ನೂ ಓದಿ: Moscow Attack: ರಷ್ಯಾದಲ್ಲಿ ಉಗ್ರರ ದಾಳಿ; ಸಾವಿನ ಸಂಖ್ಯೆ 150, ಏನೆಲ್ಲ ಬೆಳವಣಿಗೆ?

Continue Reading

ವಿದೇಶ

12ರ ಹರೆಯದ ಮಗಳನ್ನು 5 ಲಕ್ಷ ರೂ.ಗೆ ಮಾರಿ 72 ವರ್ಷದ ವೃದ್ಧನೊಂದಿಗೆ ಮದುವೆ ಮಾಡಿಸಲು ಮುಂದಾದ ಪಾಪಿ ತಂದೆ!

Child Marriage: ಪಾಪಿ ತಂದೆಯೊಬ್ಬ ತನ್ನ 12 ವರ್ಷದ ಮಗಳನ್ನು 72 ವರ್ಷದ ಮುದುಕನೊಬ್ಬನಿಗೆ ಮಾರಾಟ ಮಾಡಿ ಆತನ ಜತೆಗೆ ಮದುವೆ ಮಾಡಿಸಲು ಯತ್ನಿಸಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಸದ್ಯ 72 ವರ್ಷದ ವರನನ್ನು ಪೊಲೀಸರು ಬಂಧಿಸಿದ್ದು, ಬಾಲಕಿಯ ತಂದೆ ತಲೆ ಮರೆಸಿಕೊಂಡಿದ್ದಾನೆ. ಬಾಲಕಿಯ ಪಾಪಿ ತಂದೆಯ ಹೆಸರು ಆಲಂ ಸೈಯದ್. ಬಾಲಕಿಯ ಮದುವೆಯಾಗಲು ತಯಾರಾಗಿ ಸದ್ಯ ಜೈಲು ಕಂಬಿ ಎಣಿಸುತ್ತಿರುವ ಮುದುಕನನ್ನು ಹಬೀಬ್‌ ಖಾನ್‌ ಎಂದು ಗುರುತಿಸಲಾಗಿದೆ.

VISTARANEWS.COM


on

Child Marriage
Koo

ಇಸ್ಲಾಮಾಬಾದ್‌: ಜಗತ್ತು ಎಷ್ಟೇ ಮುಂದುವರಿದಿದೆ ಎಂದು ಹೇಳಿಕೊಂಡರೂ ಇಂದಿಗೂ ಬಾಲ್ಯ ವಿವಾಹ (Child Marriage), ಹೆಣ್ಣು ಮಕ್ಕಳ ಮಾರಾಟ ಮುಂತಾದ ಸಾಮಾಜಿಕ ಪಿಡುಗನ್ನು ತೊಡೆದು ಹಾಕಲು ಸಾಧ್ಯವಾಗಿಲ್ಲ. ಇದಕ್ಕೆ ತಾಜಾ ಉದಾಹರಣೆಯೊಂದು ಪಾಕಿಸ್ತಾನದಲ್ಲಿ ವರದಿಯಾಗಿದೆ. ಪಾಪಿ ತಂದೆಯೊಬ್ಬ ತನ್ನ 12 ವರ್ಷದ ಮಗಳನ್ನು 72 ವರ್ಷದ ಮುದುಕನೊಬ್ಬನಿಗೆ ಮಾರಾಟ ಮಾಡಿ ಆತನ ಜತೆಗೆ ಮದುವೆ ಮಾಡಿಸಲು ಯತ್ನಿಸಿದ್ದಾನೆ. ಸದ್ಯ 72 ವರ್ಷದ ವರನನ್ನು ಪೊಲೀಸರು ಬಂಧಿಸಿದ್ದು, ಬಾಲಕಿಯ ತಂದೆ ತಲೆ ಮರೆಸಿಕೊಂಡಿದ್ದಾನೆ.

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದಲ್ಲಿ ಈ ವಿಲಕ್ಷಣ ಪ್ರಕರಣ ನಡೆದಿದೆ. ಬಾಲಕಿಯ ಪಾಪಿ ತಂದೆಯ ಹೆಸರು ಆಲಂ ಸೈಯದ್. ಬಾಲಕಿಯ ಮದುವೆಯಾಗಲು ತಯಾರಾಗಿ ಸದ್ಯ ಜೈಲು ಕಂಬಿ ಎಣಿಸುತ್ತಿರುವ ಮುದುಕನ ಹೆಸರು ಹಬೀಬ್‌ ಖಾನ್‌ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ವಿವರ

ಎಲ್ಲವೂ ಆಲಂ ಸೈಯದ್ ಯೊಜನೆಯಂತೆಯೇ ನಡೆದಿದ್ದರೆ ಪಾಪದ 12ರ ಬಾಲಕಿ ತನ್ನ ಅಜ್ಜನ ಪ್ರಾಯದ ಹಬೀಬ್‌ ಖಾನ್‌ನನ್ನು ಮದುವೆಯಾಗಬೇಕಿತ್ತು. ಆದರೆ ಆಕೆಯ ಅದೃಷ್ಟ ಚೆನ್ನಾಗಿತ್ತು. ಇನ್ನೇನು ಮದುವೆ ಶಾಸ್ತ್ರ ಮುಗಿಯಬೇಕು ಎನ್ನುವಷ್ಟರಲ್ಲಿ ಪೊಲೀಸರು ಬಂದು ಮದುವೆ ನಿಲ್ಲಿಸಿ ಆಕೆಯನ್ನು ರಕ್ಷಿಸಿದ್ದಾರೆ.

ಬಾಲಕಿಯ ತಂದೆ ಸೈಯದ್ ತನ್ನ ಮಗಳನ್ನು ಹಬೀಬ್ ಖಾನ್‌ಗೆ 5 ಲಕ್ಷ ರೂ.ಗೆ ಮಾರಾಟ ಮಾಡಲು ಒಪ್ಪಂದ ಮಾಡಿಕೊಂಡಿದ್ದ. ಇಷ್ಟು ಹಣ ಸಿಗದಿದ್ದರೆ ಮದುವೆ ಮಾಡಿಕೊಡುವುದಿಲ್ಲ ಎಂದೂ ಹಠ ಹಿಡಿದಿದ್ದ. ಮಧ್ಯ ಪ್ರವೇಶಿಸಿದ ಪೊಲೀಸರು ಮದುವೆ ತಡೆದಿದ್ದಾರೆ. ಈ ವೇಳೆ ಸೈಯದ್ ಪೊಲೀಸರ ಕೈಯೊಂದ ತಪ್ಪಿಸಿಕೊಂಡು ತಲೆ ಮರೆಸಿಕೊಂಡಿದ್ದಾನೆ. ಬಾಲಕಿ ತಂದೆ, ವರ ಮತ್ತು ನಿಕಾಹ್ ಖಾವಾನ್ (ಮದುವೆ ನಡೆಸುವವರು) ವಿರುದ್ಧ ವಿವಾಹ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಪಾಕಿಸ್ತಾನದಲ್ಲಿ ಬಾಲ್ಯ ವಿವಾಹ ತಡೆ ಕಾನೂನು ಜಾರಿಯಾದ ನಂತರವೂ ಇಂತಹ ಘಟನೆಗಳು ನಡೆಯುತ್ತಲೇ ಇರುವುದು ಅಧಿಕಾರಿಗಳ ನಿದ್ದೆಗೆಡಿಸಿದೆ.

ಈ ಹಿಂದೆ ಪಾಕಿಸ್ತಾನದ ರಾಜನ್‌ಪುರ ಮತ್ತು ಥಟ್ಟಾದಲ್ಲಿ ಬಾಲ್ಯ ವಿವಾಹಕ್ಕೆ ಸಿದ್ಧತೆ ನಡೆದಿದ್ದವು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದ ಪೊಲೀಸರು ಇದನ್ನು ತಡೆದಿದ್ದರು. ಪಂಜಾಬ್‌ನ ರಾಜನ್‌ಪುರದಲ್ಲಿ 11 ವರ್ಷದ ಬಾಲಕಿಯನ್ನು 40 ವರ್ಷದ ವ್ಯಕ್ತಿಯೊಂದಿಗೆ ವಿವಾಹ ಮಾಡಿಕೊಡಲು ಸಿದ್ಧತೆ ನಡೆಸಲಾಗಿತ್ತು. ಇದನ್ನು ತಡೆದು ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ಮಾತ್ರವಲ್ಲ ಕೆಲವು ದಿನಗಳ ಥಟ್ಟಾದಲ್ಲಿ ಶ್ರೀಮಂತನೊಬ್ಬ ಅಪ್ರಾಪ್ತೆಯನ್ನು ವರಿಸಲು ಮುಂದಾಗಿದ್ದ. ಇದನ್ನೂ ಪೊಲೀಸರು ತಡೆದಿದ್ದರು. ಅಲ್ಲದೆ ಕಳೆದ ತಿಂಗಳು ಸ್ವಾತ್‌ನಲ್ಲಿ ಅಪ್ರಾಪ್ತ ಬಾಲಕಿಯನ್ನು ಮದುವೆಯಾಗಿದ್ದಕ್ಕಾಗಿ 70 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದರು.

ಇದನ್ನೂ ಓದಿ: Child Marriage :ಬಾಲ್ಯ ವಿವಾಹದ ಬಲೆಗೆ ಸಿಲುಕಿದ ಬಾಲಕಿ ಆತ್ಮಹತ್ಯೆ; ಗಂಡನ ಬಂಧನ

80ರ ಅಜ್ಜನನ್ನು ಪ್ರೀತಿಸಿ ಮದುವೆಯಾದ 23ರ ಸುಂದರಿ!

ಇತ್ತೀಚೆಗೆ ಚಿನಾದಲ್ಲಿ 23ರ ಹರೆಯದ ಯುವತಿಯೊಬ್ಬಳು 80 ವರ್ಷ ವೃದ್ಧರೊಬ್ಬರನ್ನು ಮದುವೆಯಾಗಿರುವ ಸುದ್ದಿ ವೈರಲ್‌ ಆಗಿತ್ತು. ವೃದ್ಧಾಶ್ರಮದಲ್ಲಿ ಆಶ್ರಯ ಪಡೆದುಕೊಂಡಿದ್ದ ಚೀನಾದ 80 ವರ್ಷ ವ್ಯಕ್ತಿ ಶ್ರೀಲಿ ಹಾಗೂ ಅದೇ ವೃದ್ಧಾಶ್ರಮದಲ್ಲಿ ಕೆಲಸ ಮಾಡುತ್ತಿದ್ದ ಕ್ಸಿಯಾಫಾಂಗ್ ಎಂಬ ಯುವತಿಯ ನಡುವೆ ಸ್ನೇಹ ಬೆಳೆದಿದೆ. ನಂತರ ಅದು ಪ್ರೀತಿಗೆ ತಿರುಗಿ ಇಬ್ಬರು ಮದುವೆಯಾಗಲು ನಿರ್ಧರಿಸಿದ್ದಾರೆ. ಆದರೆ ಆಕೆಯ ಮನೆಯವರಿಗೆ ಈ ಮದುವೆ ಇಷ್ಟವಿಲ್ಲದಿದ್ದ ಕಾರಣ ತನ್ನ ಹೆತ್ತವರ ಸಂಬಂಧ ಮುರಿದುಕೊಂಡು ಆಕೆ ಶ್ರೀಲಿಯನ್ನು ಮದುವೆಯಾಗಿದ್ದಳು.

Continue Reading
Advertisement
pattanagere shed darshan renuka swamy murder
ಕ್ರೈಂ4 mins ago

Renuka Swamy Murder: ಸಿಸಿಟಿವಿ ದಾಖಲೆ ಸಂಪೂರ್ಣ ನಾಶ ಮಾಡಿದ ಪಾತಕಿಗಳು! ಆ ಭಯಾನಕ ಶೆಡ್‌ನಲ್ಲಿದೆ ಇನ್ನಷ್ಟು ರಹಸ್ಯ!

murder Case in chikkodi
ಬೆಳಗಾವಿ15 mins ago

Murder Case : ನಡುರಸ್ತೆಯಲ್ಲಿ ಚಿಮ್ಮಿದ ರಕ್ತ; ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಕೊಲೆ

Train Accident
ದೇಶ25 mins ago

Train Accident: ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಗೂಡ್ಸ್​ ರೈಲು ಡಿಕ್ಕಿ; 5 ಮಂದಿ ಸಾವು

Actor Darshan old interview goes viral Explain About Murder And His Mindset
ಸ್ಯಾಂಡಲ್ ವುಡ್26 mins ago

Actor Darshan: ಕೊಲೆಯನ್ನು ಆತುರದಲ್ಲಿ ಮಾಡಿರ್ತಾನೆ ಬಳಿಕ ಕೊರಗುತ್ತಾನೆ; ದರ್ಶನ್ ಹಳೆಯ ಸಂದರ್ಶನ ವೈರಲ್‌!

Paris Olympics 2024
ಕ್ರೀಡೆ26 mins ago

Paris Olympics 2024: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಗೀತ ಗೋವಿಂದಂ ಚಿತ್ರದ ಹಾಡು; ಹರ್ಷ ವ್ಯಕ್ತಪಡಿಸಿದ ರಶ್ಮಿಕಾ-ದೇವರಕೊಂಡ

Actor Darshan case real star upendra react about case
ಸ್ಯಾಂಡಲ್ ವುಡ್33 mins ago

Actor Darshan: ದರ್ಶನ್ & ಗ್ಯಾಂಗ್ ಪೊಲೀಸ್ ವಿಚಾರಣೆ ಲೈವ್ ಸ್ಟ್ರೀಮಿಂಗ್ ಆಗಬೇಕು ಎಂದ ಉಪೇಂದ್ರ!

water Price hike in bwssb
ಬೆಂಗಳೂರು37 mins ago

Water Price Hike : ತೈಲ ದರ ಬಳಿಕ ಕುಡಿಯುವ ನೀರು ದುಬಾರಿ! ನೀರಿನ ದರ ಏರಿಕೆಗೆ ಜಲಮಂಡಳಿ ಪ್ರಸ್ತಾವನೆ!

Maoists Killed
ದೇಶ53 mins ago

Maoists Killed: ಭದ್ರತಾ ಪಡೆಗಳ ಕಾರ್ಯಾಚರಣೆ; ಮತ್ತೆ 4 ಮಾವೋವಾದಿಗಳ ಹತ್ಯೆ

petrol diesel price hike
ಪ್ರಮುಖ ಸುದ್ದಿ1 hour ago

Petrol Diesel Price: ಪೆಟ್ರೋಲ್‌ ಬೆಲೆ ಏರಿಕೆ ವಿರೋಧಿಸಿ ಇಂದು ಬಿಜೆಪಿ ಮಿಂಚಿನ ಪ್ರತಿಭಟನೆ

Shah Rukh Khan Took ₹1 As Signing Amount For 'Nayak'
ಬಾಲಿವುಡ್1 hour ago

Shah Rukh Khan: ʻನಾಯಕ್‌ʼ ಸಿನಿಮಾಗೆ ಶಾರುಖ್‌ ಹೀರೊ ಆಗಬೇಕಿತ್ತು! 1 ರೂ. ಅಡ್ವಾನ್ಸ್ ಪಡೆದಿದ್ದರು!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Renukaswamy murder case The location of the accused is complete
ಸಿನಿಮಾ18 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ19 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ24 hours ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ6 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

ಟ್ರೆಂಡಿಂಗ್‌