Karnataka Weather : ಮಳೆಯಾಟ ಬಂದ್‌; ಇನ್ನೆರಡು ದಿನ ಕರ್ನಾಟಕ ಸಿಕ್ಕಾಪಟ್ಟೆ Hot - Vistara News

ಉಡುಪಿ

Karnataka Weather : ಮಳೆಯಾಟ ಬಂದ್‌; ಇನ್ನೆರಡು ದಿನ ಕರ್ನಾಟಕ ಸಿಕ್ಕಾಪಟ್ಟೆ Hot

Karnataka Weather Forecast : ರಾಜ್ಯಾದ್ಯಂತ ಯಾವುದೇ ಮಳೆ ಮುನ್ಸೂಚನೆ (No Rain warning) ಇಲ್ಲ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆಯೇ (Dry weather) ಮೇಲುಗೈ ಸಾಧಿಸಲಿದೆ.

VISTARANEWS.COM


on

Dry weather Sunny Hot
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮುಂದಿನ 48 ಗಂಟೆಯಲ್ಲಿ ರಾಜ್ಯಾದ್ಯಂತ ಒಣ ಹವೆ (Dry Weather) ಇರಲಿದೆ. ಮಲೆನಾಡು ಮತ್ತು ಕರಾವಳಿಯ ಪ್ರತ್ಯೇಕ ಕಡೆಗಳಲ್ಲಿ ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ (Rain News) ಮಳೆಯಾಗಲಿದೆ. ಉಳಿದಂತೆ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ (Karnataka weather Forecast) ಮುನ್ಸೂಚನೆಯನ್ನು ನೀಡಿದೆ.

ಮಲೆನಾಡಿನ ಕೊಡಗು ಹಾಗೂ ಚಿಕ್ಕಮಗಳೂರಲ್ಲಿ ಅತಿ ಸಣ್ಣ ಮಳೆ ಬೀಳಬಹುದು. ಉಳಿದಂತೆ ಹಾಸನ, ಶಿವಮೊಗ್ಗದಲ್ಲಿ ಒಣಹವೆ ಇರಲಿದೆ. ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿಯ ಪ್ರತ್ಯೇಕ ಕಡೆಗಳಲ್ಲಿ ಮಾತ್ರ ಹಗುರ ಮಳೆಯಾಗಬಹುದು. ಉತ್ತರ ಕನ್ನಡದಲ್ಲಿ ಬಿಸಿಲು ಝಳಪೀಸಲಿದೆ.

ಬೆಂಗಳೂರು ನಗರದಲ್ಲೂ ಯಾವುದೇ ಮಳೆ ಮುನ್ಸೂಚನೆಯಿಲ್ಲ. ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಮುಸುಕಿದ ವಾತಾವರಣ ಇರಲಿದೆ. ಗರಿಷ್ಠ ಉಷ್ಣಾಂಶ 31 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Bengaluru Air pollution : ಬೆಂಗಳೂರಿಗರ ಉಸಿರು ಸೇರುತ್ತಿರುವ ವಿಷ ಗಾಳಿ!

ಅ.23ರಂದು ರಾಜ್ಯಾದ್ಯಂತ ಒಣಹವೆ ಇತ್ತು. ಕಾರವಾರದಲ್ಲಿ ಗರಿಷ್ಠ ಉಷ್ಣಾಂಶ 37.5 ಡಿ.ಸೆ ಹಾಗೂ ಕಡಿಮೆ ಉಷ್ಣಾಂಶ 14.4 ಡಿ.ಸೆ. ಚಿಕ್ಕನಹಳ್ಳಿಯಲ್ಲಿ ದಾಖಲಾಗಿತ್ತು.

ಈ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ ಹೆಚ್ಚಳ

ಕರಾವಳಿಯ ಉಡುಪಿ, ಉತ್ತರ ಕನ್ನಡ ಹಾಗೂ ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಗದಗ, ರಾಯಚೂರು, ವಿಜಯಪುರ ಸೇರಿದಂತೆ ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ತುಮಕೂರು, ಬಳ್ಳಾರಿ, ವಿಜಯನಗರದ ಒಂದೆರಡು ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 2-3 ಡಿಗ್ರಿ ಹೆಚ್ಚಾಗುವ ಸಾಧ್ಯತೆಯಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Toilet Video: ಮೆಡಿಕಲ್‌ ಕಾಲೇಜಿನ ಲೇಡಿಸ್‌ ಟಾಯ್ಲೆಟ್‌ನಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣ!

Toilet Video: ಮಂಗಳೂರಿನ ಬಾವುಟಗುಡ್ಡೆಯಲ್ಲಿರುವ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ಮೇ‌ 6ರಂದು ನಡೆದಿರುವ ಘಟನೆ ಇದಾಗಿದೆ. ಮೆಡಿಕಲ್ ಕಾಲೇಜಿಗೆ ರೋಗಿಯಂತೆ ಬಂದಿದ್ದ ಅಪ್ರಾಪ್ತ ಯುವಕ, ಬಳಿಕ ಲೇಡಿಸ್ ಟಾಯ್ಲೆಟ್‌ಗೆ ಹೋಗಿ ಮೊಬೈಲ್ ಇಟ್ಟಿದ್ದ.

VISTARANEWS.COM


on

toilet video shooting in mangalore
Koo

ಮಂಗಳೂರು: ಖಾಸಗಿ ಮೆಡಿಕಲ್ ಕಾಲೇಜೊಂದರ (Private Medical College) ಲೇಡಿಸ್ ಟಾಯ್ಲೆಟ್‌ನಲ್ಲಿ (Ladies toilet) ಮೊಬೈಲ್ ಇಟ್ಟು ವಿದ್ಯಾರ್ಥಿನಿಯರ ವಿಡಿಯೋ (Toilet Video) ಚಿತ್ರೀಕರಣ ಮಾಡಿಕೊಂಡಿರುವ ಘಟನೆಯೊಂದು ವರದಿಯಾಗಿದ್ದು, ಅಪ್ರಾಪ್ತ ವಯಸ್ಸಿನ ವ್ಯಕ್ತಿಯನ್ನು ಈ ಪ್ರಕರಣದಲ್ಲಿ ಪೊಲೀಸರು (Crime news) ಬಂಧಿಸಿದ್ದಾರೆ.

ಮಂಗಳೂರಿನ ಬಾವುಟಗುಡ್ಡೆಯಲ್ಲಿರುವ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ಮೇ‌ 6ರಂದು ನಡೆದಿರುವ ಘಟನೆ ಇದಾಗಿದೆ. ಮೆಡಿಕಲ್ ಕಾಲೇಜಿಗೆ ರೋಗಿಯಂತೆ ಬಂದಿದ್ದ ಅಪ್ರಾಪ್ತ ಯುವಕ, ಬಳಿಕ ಲೇಡಿಸ್ ಟಾಯ್ಲೆಟ್‌ಗೆ ಹೋಗಿ ಮೊಬೈಲ್ ಇಟ್ಟಿದ್ದ. ಲೇಡಿಸ್ ಟಾಯ್ಲೆಟ್ ಒಳಗಿನಿಂದ ಮೊಬೈಲ್ ರಿಂಗ್ ಆಗುತ್ತಿರುವುದು ಕೇಳಿಸಿ ವಾಚ್‌ಮನ್ ಪರಿಶೀಲನೆ ಮಾಡಿದಾಗ ಮೊಬೈಲ್ ಪತ್ತೆಯಾಗಿದೆ.

ಈ ಹಿನ್ನೆಲೆಯಲ್ಲಿ ಬಂದರು ಪೊಲೀಸ್ ಠಾಣೆಗೆ ಕಾಲೇಜಿನ ವಾಚ್‌ಮನ್ ದೂರು ನೀಡಿದ್ದರು. ಕಾಲೇಜಿನ ಸಿಸಿಟಿವಿ ಪರಿಶೀಲನೆ ಮಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸುಮಾರು ಹದಿನೇಳು ವರ್ಷದ ಅಪ್ರಾಪ್ತ ಯುವಕನಿಂದ ಕೃತ್ಯ ನಡೆದಿದೆ. ಕಾಲೇಜಿನ ಸುತ್ತಮುತ್ತವೇ ಈತ ಸುಳಿದಾಡುತ್ತಿದ್ದುದು ಪತ್ತೆಯಾಗಿದೆ. ಯುವಕನನ್ನು ವಶಕ್ಕೆ ಪಡೆದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.

ಇತ್ತೀಚೆಗೆ ಉಡುಪಿಯ ನೇತ್ರಜ್ಯೋತಿ ಕಾಲೇಜಿನಲ್ಲಿ (Nethrajyothi College udupi) ಮೂವರು ಮುಸ್ಲಿಂ ವಿದ್ಯಾರ್ಥಿನಿಯರು (Three Muslim students) ಟಾಯ್ಲೆಟ್‌ನಲ್ಲಿ ಮೊಬೈಲ್‌ (Udupi Toilet Video) ಇಟ್ಟು ಇತರ ಹೆಣ್ಣುಮಕ್ಕಳು ಶೌಚಾಲಯ ಬಳಸುವುದನ್ನು ಚಿತ್ರೀಕರಿಸಿಕೊಂಡ (mobile shooting at Ladies toilet) ಪ್ರಕರಣವನ್ನು ಇಲ್ಲಿ ನೆನಪಿಸಿಕೊಳ್ಳಬಹುದು. ಈ ಪ್ರಕರಣದಲ್ಲಿ ಮೂವರು ವಿದ್ಯಾರ್ಥಿನಿಯರ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದ್ದಲ್ಲದೆ, ರಾಷ್ಟ್ರೀಯ ಸುದ್ದಿಯಾಗಿಯೂ ಬಿತ್ತರಗೊಂಡಿತ್ತು.

ಮಾಜಿ ಪ್ರಿಯಕರನಿಂದ ಮಹಿಳೆಯ ಕೊಲೆ, ಕಾರಣ ನಿಗೂಢ

ಬೆಂಗಳೂರು: ರಾಜಧಾನಿಯ ಸುಂಕದಕಟ್ಟೆಯ ಬಳಿ ಮಹಿಳೆಯೊಬ್ಬರು ಮಾಜಿ ಪ್ರಿಯಕರನಿಂದ (woman Murder Case) ಕೊಲೆಯಾಗಿದ್ದಾರೆ. ನಿನ್ನೆ ರಾತ್ರಿ 9:40ರ ಸುಮಾರಿಗೆ ಈ ಹತ್ಯೆ ನಡೆದಿದೆ. ದಿವ್ಯಾ (30) ಕೊಲೆಯಾದ ಮಹಿಳೆ.

ತನ್ನ ಜೊತೆಗಿದ್ದ ಪ್ರಿಯಕರ ಶಾಂತಕುಮಾರ್ ಎಂಬಾತನಿಂದ ದಿವ್ಯಾ ಕೊಲೆಯಾಗಿದ್ದಾರೆ. ನಾಲ್ಕು ವರ್ಷದ ಹಿಂದೆ ಶಾಂತಕುಮಾರ್ ಜೊತೆ ಬಂದಿದ್ದ ದಿವ್ಯಾ ಈ ಮೊದಲು ಕಾಮಾಕ್ಷಿಪಾಳ್ಯದಲ್ಲಿ ಮನೆ ಮಾಡಿದ್ದರು. ಅನಂತರ ಇಬ್ಬರ ಮಧ್ಯೆ ಜಗಳವಾಗಿದ್ದು, ಇದರಿಂದ ಶಾಂತಕುಮಾರ್‌ನನ್ನು ದಿವ್ಯಾ ಬಿಟ್ಟುಬಿಟ್ಟಿದ್ದರು. ಇಬ್ಬರೂ ಮದುವೆಯಾಗಿದ್ದರೇ ಇಲ್ಲವೇ ಎಂಬ ಬಗ್ಗೆ ಅನುಮಾನವಿದೆ.

5 ದಿನದ ಹಿಂದೆ ಸುಂಕದಕಟ್ಟೆಯ ಸೊಲ್ಲಾಪುರಂ ಲೇ ಔಟ್‌ನಲ್ಲಿ ದಿವ್ಯಾ ಬಾಡಿಗೆ ಮನೆ ಮಾಡಿದ್ದರು. ಈಕೆ ಮನೆ ಮಾಡಿದ್ದ ಬಗ್ಗೆ ತಿಳಿದುಕೊಂಡಿದ್ದ ಶಾಂತಕುಮಾರ್ ರಾತ್ರಿ 9:30ರ ಸುಮಾರಿಗೆ ಬಾಡಿಗೆ ಮನೆ ಸಮೀಪ ಬಂದಿದ್ದ. ಅನಂತರ ಚಾಕುವಿನ ಮೂಲಕ ದಿವ್ಯಳ ಎದೆ ಭಾಗಕ್ಕೆ ಚುಚ್ಚಿ ಕೊಲೆ ಮಾಡಿದ್ದಾನೆ. ಇಬ್ಬರೂ ಮೂಲತಃ ಬಿಡದಿಯವರು.

“ರಾತ್ರಿ 9:30 ಸುಮಾರಿಗೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೊಲೆ ನಡೆದಿದೆ. ಕೊಲೆಯಾದ ಮಹಿಳೆ ದಿವ್ಯ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡಿಕೊಂಡಿದ್ದಳು. 35 ವರ್ಷದ ಶಾಂತಕುಮಾರ್ ಎಂಬಾತನಿಂದ ಕೊಲೆಯಾಗಿದೆ. ಆರೋಪಿ ತಲೆಮರೆಸಿಕೊಂಡಿದ್ದು ಆತನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ” ಎಂದು ಪಶ್ಚಿಮ ವಿಭಾಗ ಡಿಸಿಪಿ ಗಿರೀಶ್ ಹೇಳಿದ್ದಾರೆ.

ಅಟ್ಟಾಡಿಸಿ ಕೊಚ್ಚಿ ರೌಡಿಶೀಟರ್‌ ಕೊಲೆ

Murder Case

ಬೆಂಗಳೂರು: ನಡು ರಸ್ತೆಯಲ್ಲೇ ರೌಡಿಶೀಟರ್‌ನ ಅಟ್ಟಾಡಿಸಿ, ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಿರುವ ಘಟನೆ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ. ಭೀಕರ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ರೌಡಿಶೀಟರ್‌ ಪ್ರಾಣ ಬಿಟ್ಟಿದ್ದು, ಘಟನಾ ಸ್ಥಳಕ್ಕೆ ಬಾಣಸವಾಡಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಕಾರ್ತಿಗೇಯನ್ (40) ಕೊಲೆಯಾದವ. ಮೃತ ವ್ಯಕ್ತಿ ವಿರುದ್ಧ ಕಮರ್ಷಿಯಲ್ ಸ್ಟ್ರೀಟ್, ಬಾಣಸವಾಡಿ ಪೊಲೀಸ್ ಠಾಣೆಯ ರೌಡಿ ಶೀಟ್‌ ದಾಖಲಾಗಿತ್ತು. ಎರಡು ವರ್ಷಗಳ ಹಿಂದೆ ರೌಡಿಶೀಟ್‌ನಿಂದ ಕೈ ಬಿಡಲಾಗಿತ್ತು. ಈ ಹಿಂದೆ ಬಾಣಸವಾಡಿ ಪೊಲೀಸರಿಂದ ರೌಡಿಶೀಟರ್‌ ಕಾರ್ತಿಗೇಯನ್ ಗಡಿಪಾರಾಗಿದ್ದ. ಮತ್ತೆ ಬೆಂಗಳೂರಿಗೆ ಬಂದು‌ ಬಾಣಸವಾಡಿಯಲ್ಲಿ ರಿಯಲ್ ಎಸ್ಟೇಟ್ ವ್ಯವಹಾರದ ಕಚೇರಿ ತೆರೆದಿದ್ದ. ಆದರೆ, ಮಂಗಳವಾರ ರಾತ್ರಿ ದುಷ್ಕರ್ಮಿಗಳು ದಾಳಿ ನಡೆಸಿ ಕೊಲೆ ಮಾಡಿದ್ದಾರೆ.

ಇದನ್ನೂ ಓದಿ: Murder Case: ಬೆಂಗಳೂರಿನಲ್ಲಿ ರೌಡಿಶೀಟರ್‌ ಬರ್ಬರ ಹತ್ಯೆ; ನಡು ರಸ್ತೆಯಲ್ಲೇ ಅಟ್ಟಾಡಿಸಿ ಕೊಲೆ

Continue Reading

ಮಳೆ

Karnataka Weather : ಬಿರುಗಾಳಿಯೊಂದಿಗೆ ಗುಡುಗು, ಮಿಂಚು ಸಹಿತ ಭಾರಿ ಮಳೆ ಎಚ್ಚರಿಕೆ

Karnataka Weather Forecast : ರಾಜ್ಯಾದ್ಯಂತ ಮತ್ತೆ ಮಳೆ ಅಬ್ಬರಿಸಲಿದ್ದು, ವಿವಿಧ ಜಿಲ್ಲೆಗಳಿಗೆ ಆರೆಂಜ್‌, ಯೆಲ್ಲೋ ಘೋಷಿಸಲಾಗಿದೆ. ಮಳೆ ನಡುವೆಯೂ ಕೆಲವು ಜಿಲ್ಲೆಗಳಿಗೆ ಹೀಟ್‌ ವೇವ್‌ ವಾರ್ನಿಂಗ್‌ ಅನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಬಿರುಗಾಳಿ ಜತೆಗೆ ಗುಡುಗು ಸಹಿತ ಭಾರಿ ಮಳೆಯಾಗುವ (Heavy Rain) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka weather Forecast) ಮುನ್ಸೂಚನೆಯನ್ನು ನೀಡಿದೆ.

ಮುಖ್ಯವಾಗಿ ಕೊಡಗು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಇನ್ನೂ ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ ಮತ್ತು ತುಮಕೂರಿನಲ್ಲಿ 40-50 ಕಿ.ಮೀ ಗಾಳಿಯೊಂದಿಗೆ ಗುಡುಗು ಸಹಿತ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮಳೆ ಜತೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ.

ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಇನ್ನೂ ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ.

ಹೀಟ್‌ ವೇವ್‌ ವಾರ್ನಿಂಗ್‌

ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ, ವಿಜಯನಗರ, ಬಳ್ಳಾರಿ, ದಾವಣಗೆರೆ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಬಿಸಿಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜತೆಗೆ ಬಳ್ಳಾರಿ, ದಾವಣಗೆರೆ, ವಿಜಯನಗರ ಜಿಲ್ಲೆಗಳಿಗೆ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Rain News : ಮೇ 7ರಂದು ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ ಸುರಿದಿದೆ. ರಾಜ್ಯದಲ್ಲಿ ಇನ್ನೊಂದು ವಾರ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಚಿಕ್ಕಮಗಳೂರು/ಹಾಸನ/ಬೆಂಗಳೂರು: ಮಂಗಳವಾರ ಮಧ್ಯಾಹ್ನ ಚಿಕ್ಕಮಗಳೂರು ನಗರದಲ್ಲಿ ಧಾರಾಕಾರ ಮಳೆಯಾಗಿದೆ. ಭಾರಿ ಆಲಿಕಲ್ಲು ಮಳೆಗೆ ಚಿಕ್ಕಮಗಳೂರು ನಗರ ನಿವಾಸಿಗಳು ಥಂಡಾ ಹೊಡೆದಿದ್ದಾರೆ. ಮಳೆಯಿಲ್ಲದೆ ಕಾದ ಕಾವಲಿಯಂತಾಗಿದ್ದ ಕಾಫಿನಾಡಿನಲ್ಲಿ ಕಳೆದೊಂದು ಗಂಟೆಯಿಂದ ಭಯಂಕರ ಮಳೆ ಸುರಿಯುತ್ತಿದೆ.

ರಸ್ತೆಯಲ್ಲಿ ಅರ್ಧ ಅಡಿ ಎತ್ತರದಲ್ಲಿ ನೀರು ಹರಿಯುತ್ತಿದೆ. 41 ಡಿಗ್ರಿ ತಲುಪುತ್ತಿದ್ದ ಬಿಸಿಲ ತಾಪಮಾನಕ್ಕೆ ಜನ ಹೈರಾಣಾಗಿದ್ದರು. ಧಾರಾಕಾರ ಮಳೆ ಕಂಡು ರೈತರು, ಬೆಳೆಗಾರರು ಸಂತಸಗೊಂಡರು. ಇನ್ನೂ ಆಲಿಕಲ್ಲು ಕೈಯಲ್ಲಿ ಹಿಡಿದು ಖುಷಿ ಪಟ್ಟರು.

Karnataka weather Forecast

ಹಾಸನದಲ್ಲೂ ಧಾರಾಕಾರ ಮಳೆ

ಹಾಸನ ಜಿಲ್ಲೆಯ ಹಲವೆಡೆ ಧಾರಾಕಾರ ಮಳೆಯಾಗಿದೆ. ಹಾಸನ, ಹೊಳೆನರಸೀಪುರ, ಅರಸೀಕೆರೆ ಭಾಗಗಳಲ್ಲಿ ಭಾರಿ ಗಾಳಿಯೊಂದಿಗೆ ಗುಡುಗು, ಸಿಡಿಲು ಸಹಿತ ಮಳೆ ಸುರಿಯುತ್ತಿದೆ. ಅರಸೀಕೆರೆಯಲ್ಲಿ ಆಲಿಕಲ್ಲು ಸಹಿತ ಮಳೆಯಾಗುತ್ತಿದೆ. ಜೋರಾಗಿ ಆಲಿಕಲ್ಲು ಬೀಳುತ್ತಿರುವುದರಿಂದ ಸವಾರರು ಬೈಕ್‌ ನಿಲ್ಲಿಸಿ ರಸ್ತೆ ಬದಿ ನಿಲ್ಲುವಂತಾಯಿತು. ಬಿಸಿಲಿನಿಂದ ಕಂಗಾಲಾಗಿದ್ದ ಜನತೆಗೆ ವರುಣ ತಂಪೆರೆದಿದ್ದಾನೆ.

ಇದನ್ನೂ ಓದಿ: Karnataka Rains: ಮಳೆಗೆ ಮರ ಬಿದ್ದು ಮಂಡ್ಯದಲ್ಲಿ ವ್ಯಕ್ತಿ ಸಾವು, ಬೆಂಗಳೂರಲ್ಲಿ ಟೆಕ್ಕಿ ಬೆನ್ನು ಮೂಳೆ ಮುರಿತ

ಮಂಗಳವಾರ ಸಂಜೆಗೆ ಲಘು ಮಳೆ ಎಚ್ಚರಿಕೆ

ಮೇ 7ರ ಸಂಜೆಗೆ ದಕ್ಷಿಣ ಕನ್ನಡ, ಕೊಡಗು, ಮಂಡ್ಯ, ಮೈಸೂರು ಸೇರಿದಂತೆ ತುಮಕೂರು, ಉಡುಪಿಯಲ್ಲಿ ಗುಡುಗು ಸಹಿತ ಲಘು ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

ಬೆಂಗಳೂರಲ್ಲಿ ಗುಡುಗು, ಮಿಂಚು ಸಹಿತ ಗಾಳಿ ಮಳೆ

ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂದಿನ 24 ಗಂಟೆಯಲ್ಲಿ ಮುಂಜಾನೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಸಂಜೆ/ರಾತ್ರಿಯ ಸಮಯದಲ್ಲಿ ಗುಡುಗು ಮಿಂಚು ಜತೆಗೆ ಮಳೆಯಾಗಲಿದೆ. ಈ ವೇಳೆ ಗಾಳಿ ವೇಗವು 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 35 ಮತ್ತು 22 ಡಿ.ಸೆ ಇರಲಿದೆ.

ಇನ್ನೂ ಕೊಡಗು, ಮೈಸೂರು, ಮಂಡ್ಯ, ಹಾಸನ, ಕೋಲಾರ, ಬೆಂಗಳೂರು ನಗರ, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಭಾರೀ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ತುಮಕೂರು ಮತ್ತು ಕೆಲವು ಸ್ಥಳಗಳಲ್ಲಿ ಬಿರುಗಾಳಿ ಸಹಿತ (ಗಂಟೆಗೆ 40-50 ಕಿಮೀ) ಹಗುರದಿಂದ ಶುರುವಾಗಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ವಿಜಯನಗರ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಬಿರುಗಾಳಿ ಸಹಿತ (30-40 ಕಿಮೀ) ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

Lok Sabha Election 2024

Lok Sabha Election 2024: ಓದಿದ ಶಾಲೆಯಲ್ಲಿ ಮತ ಹಾಕಿದ ನಟ ರಿಷಬ್‌ ಶೆಟ್ಟಿ; ಕಾಂತಾರ 2 ಸೀಕ್ರೆಟ್‌ ರಿವೀಲ್‌!

Lok Sabha Election 2024 : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಂಜೆ ಮತಗಟ್ಟೆಗೆ ಬಂದು ನಟ ರಿಷಬ್‌ ಶೆಟ್ಟಿ (Rishab Shetty) ಮತದಾನವನ್ನು ಮಾಡಿದ್ದಾರೆ. ಸಾಂಪ್ರದಾಯಿಕವಾಗಿ ವೈಟ್‌ ಆ್ಯಂಡ್‌ ವೈಟ್‌ ಶರ್ಟ್‌ ಪಂಚೆ ತೊಟ್ಟು ಮತಗಟ್ಟೆಗೆ ಆಗಮಿಸಿದ್ದರು. ಇದೇ ವೇಳೆ ಕಾಂತಾರ 2 (Kantara 2) ಚಿತ್ರದ ಬಗ್ಗೆಯೂ ಮಾತನಾಡಿದರು.

VISTARANEWS.COM


on

By

lok sabha Election 2024 Actor Rishb Shetty
Koo

ಉಡುಪಿ: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಉಡುಪಿಯ ಬೈಂದೂರಿನಲ್ಲಿ ಡಿವೈನ್‌ ಸ್ಟಾರ್‌ ಖ್ಯಾತಿಯ ನಟ ರಿಷಬ್ ಶೆಟ್ಟಿ ಮತ ಚಲಾಯಿಸಿದರು. ಬೈಂದೂರಿನ ಕೆರಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 135 ರಲ್ಲಿ ರಿಷಬ್ (Rishab Shetty) ಮತದಾನ ಮಾಡಿದರು.

ಮತದಾನದ ಬಳಿಕ ಮಾತನಾಡಿನ ನಟ ರಿಷಬ್ ಶೆಟ್ಟಿ ಲೋಕಸಭಾ ಚುನಾವಣೆ ನಡೆಯುವುದು ದೇಶಕ್ಕಾಗಿ, ನಾನು ದೇಶಕ್ಕೆ ಮತ ಹಾಕಿದ್ದೇನೆ. ಮತದಾನ ನಮ್ಮ ಹಕ್ಕು ಜವಾಬ್ದಾರಿ ಅದನ್ನು ಚಲಾಯಿಸಿದ್ದೇನೆ. ಜನ ಕಡಿಮೆ ಇರುತ್ತಾರೆ ಎಂದು ಸಂಜೆ ಬಂದಿದ್ದೇನೆ. ಸರ್ಕಾರದ ನಿರೀಕ್ಷೆ ಹಾಗೂ ಬೇಡಿಕೆ ಹಾಗೂ ರಾಜಕೀಯದ ಬಗ್ಗೆ ಮಾತನಾಡಲ್ಲ. ನನ್ನ ಜವಾಬ್ದಾರಿಯನ್ನು ಮಾಡಿದ್ದೇನೆ ಅಷ್ಟೇ ಅಂದರು.

ರಿಷಬ್ ಶೆಟ್ಟಿ ತಾವು ಓದಿದ ಶಾಲೆಯಲ್ಲಿ ಮತದಾನ ಮಾಡಿದ್ದಾರೆ. ಮಾತ್ರವಲ್ಲ ಈ ಶಾಲೆಯನ್ನು ದತ್ತು ಸ್ವೀಕಾರ ಮಾಡಿ ಅಭಿವೃದ್ಧಿ ಮಾಡುತ್ತಿದ್ದಾರೆ. ಚುನಾವಣೆ ಇರುವುದರಿಂದ ಪೂರ್ತಿ ಕೆಲಸ ಮಾಡಲು ಆಗಿಲ್ಲ. ಶಾಲೆಯ ಗ್ರೌಂಡನ್ನು ಮಕ್ಕಳಿಗೆ ಆಟವಾಡಲು ದೊಡ್ಡದಾಗಿ ಮಾಡಿದ್ದೇವೆ. ಕಟ್ಟಡದ ಕೆಲಸ ಮತ್ತು ಪೀಠೋಪಕರಣ ಕೆಲಸ ಇನ್ನು ಆಗಬೇಕಾಗಿದೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: Lok Sabha Election 2024: ಮತ ಹಾಕಲು ವಿದೇಶದಿಂದ ಬಂದರು! ಒಂದೇ ಕುಟುಂಬದ 69 ಮಂದಿಯ ವೋಟ್‌ ಸೆಲ್ಫಿ!

ಚಿತ್ರೀಕರಣ ಮುಗಿಯುವವರೆಗೆ ಎಲ್ಲವೂ ಗೌಪ್ಯ

ಕಾಂತಾರ 2 ಚಿತ್ರದ ಬಗ್ಗೆಯೂ ಮಾತನಾಡಿರುವ ನಟ ರಿಷಬ್ ಶೆಟ್ಟಿ, ಕಾಂತಾರ ಚಿತ್ರದ ಕುರಿತು ಅಧಿಕೃತವಾಗಿ ಹೊಂಬಾಳೆ ಸಂಸ್ಥೆ ಎಲ್ಲವನ್ನೂ ಘೋಷಣೆ ಮಾಡುತ್ತದೆ. ಈಗಾಗಲೇ ಚಿತ್ರೀಕರಣ ಆರಂಭವಾಗಿದ್ದು, ಬಹಳ ಚೆನ್ನಾಗಿ ಕೆಲಸಕಾರ್ಯಗಳು ನಡೀತಾ ಇದೆ. ಮೊದಲಿಗಿಂತ ದೊಡ್ಡ ಜವಾಬ್ದಾರಿಯೊಂದಿಗೆ ದೊಡ್ಡ ತಂಡ ಕೆಲಸ ಮಾಡುತ್ತಿದೆ.

ಹೊಂಬಾಳೆ ಪ್ರೊಡಕ್ಷನ್ ಹೌಸ್ ಸಿಕ್ಕಿರುವುದು ಫಿಲಂ ಮೇಕರ್‌ಗಳಿಗೆ ಒಂದು ಪುಣ್ಯ. ಕಾಂತರದಲ್ಲಿ ಅದ್ಭುತವಾದ ಟೆಕ್ನಿಷಿಯನ್ಸ್‌ಗಳು ಕೆಲಸ ಮಾಡುತ್ತಿದ್ದಾರೆ. ನಿರಂತರವಾಗಿ ಕೆಲಸಗಳು ನಡೆಯುತ್ತಿದ್ದು ಪಾರ್ಟ್ ಬೈ ಪಾರ್ಟ್ ಚಿತ್ರೀಕರಣ ನಡೆಯುತ್ತದೆ. ಜನ ಕಾಂತಾರವನ್ನು ಗೆಲ್ಲಿಸಿದ್ದಾರೆ, ಹೀಗಾಗಿ ಮಾತಿನಲ್ಲಿ ಏನನ್ನು ಹೇಳುವುದಿಲ್ಲ. ಕೆಲಸದ ಮೂಲಕ ಮಾಡಿ ತೋರಿಸಬೇಕು ಎಂದು ಅಂದುಕೊಂಡಿದ್ದೇನೆ.

ಸಿನಿಮಾಗಾಗಿ ಒಂದು ವರ್ಷದಿಂದ ಗಡ್ಡ ಹಾಗೂ ಕೂದಲು ಬಿಟ್ಟಿದ್ದೇನೆ. ಚಿತ್ರೀಕರಣ ಪೂರ್ತಿ ಮುಗಿದ ಮೇಲೆ ಸೆಟ್ ವರ್ಕ್ ಚಿತ್ರೀಕರಣ ಸ್ಥಳಕ್ಕೆ ಕರೆಯುತ್ತೇವೆ. ಚಿತ್ರೀಕರಣ ಮುಗಿಯುವವರೆಗೆ ಬಹಳ ಗೌಪ್ಯತೆಯನ್ನು ಕಾಪಾಡಬೇಕಾಗುತ್ತದೆ. ಅಂತೆ ಕಂತೆಗಳ ಸುದ್ದಿ ಬಹಳಷ್ಟು ಹರಿದಾಡುತ್ತಿದೆ,ಆದರೆ ಚಿತ್ರದ ಬಗ್ಗೆ ಜನಕ್ಕೆ ನಿರೀಕ್ಷೆ ಹೋಗಬಾರದು. ಜನರು ಸಿನಿಮಾವನ್ನು ಚಿತ್ರಮಂದಿರದಲ್ಲಿ ನೋಡಿದರೆ ಒಳ್ಳೆಯದು. ಚಿತ್ರ ತೆರೆಗೆ ಬರುವ ತನಕ ಗೌಪ್ಯತೆ ಕಾಪಾಡಬೇಕು ಜನಕ್ಕೆ ಕುತೂಹಲ ಇರಬೇಕು. ಪೂರ್ತಿ ಕರಾವಳಿ ಭಾಗದಲ್ಲಿ ಚಿತ್ರೀಕರಣ ಮಾಡುತ್ತೇವೆ ಎಂದು ತಿಳಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Hindu population
ದೇಶ57 seconds ago

Hindu Population: ಹಿಂದೂಗಳ ಜನಸಂಖ್ಯೆ ಶೇ.7.8 ಕುಸಿತ; ಮುಸ್ಲಿಮರ ಸಂಖ್ಯೆ ಶೇ.43.15 ಏರಿಕೆ!

Rain News
ಪ್ರಮುಖ ಸುದ್ದಿ4 mins ago

Rain News: ರಾಜ್ಯದ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ; ಬೆಂಗಳೂರಿನಲ್ಲಿ ಹೊಳೆಯಂತಾದ ರಸ್ತೆಗಳು!

BJP Karnataka State police issues notices to JP Nadda and Amit Malviya and BY Vijayendra
ಕ್ರೈಂ26 mins ago

BJP Karnataka: ಜೆ.ಪಿ. ನಡ್ಡಾ, ಅಮಿತ್‌ ಮಾಳವೀಯಾಗೆ ರಾಜ್ಯ ಪೊಲೀಸರ ನೋಟಿಸ್‌; 7 ದಿನದೊಳಗೆ ವಿಚಾರಣೆಗೆ ಹಾಜರಾಗಲು ಸೂಚನೆ

Sam Pitroda
ಪ್ರಮುಖ ಸುದ್ದಿ33 mins ago

Sam Pitroda: ಭಾರತೀಯರ ಬಣ್ಣದ ಕುರಿತು ಮಾತಾಡಿದ ಸ್ಯಾಮ್‌ ಪಿತ್ರೋಡಾ ತಲೆದಂಡ; ಕಾಂಗ್ರೆಸ್‌ ಸ್ಥಾನಕ್ಕೆ ರಾಜೀನಾಮೆ!

Neeraj Chopra
ಕ್ರೀಡೆ52 mins ago

Neeraj Chopra: 3 ವರ್ಷದ ಬಳಿಕ ದೇಶೀಯ ಕ್ರೀಡಾಕೂಟದಲ್ಲಿ ನೀರಜ್​ ಚೋಪ್ರಾ ಸ್ಪರ್ಧೆ

Cancer Risk
ಆರೋಗ್ಯ1 hour ago

Cancer Risk: ಕ್ಯಾನ್ಸರ್ ಅಪಾಯದಿಂದ ಪಾರಾಗಲು ಯಾವ ಆಹಾರ ಸೇವಿಸಬಾರದು? ಯಾವ ಆಹಾರ ಸೇವಿಸಬೇಕು?

K Vasantha Bangera
ಪ್ರಮುಖ ಸುದ್ದಿ1 hour ago

K Vasantha Bangera: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

T20 World Cup 2024
ಕ್ರೀಡೆ2 hours ago

T20 World Cup 2024: ಕ್ರಿಕೆಟ್​ ಪ್ರಿಯರಿಗೆ ಗುಡ್​ ನ್ಯೂಸ್​​; ಈ ಮೊಬೈಲ್‌ ಆ್ಯಪ್​ನಲ್ಲಿ ಟಿ20 ವಿಶ್ವಕಪ್ ಉಚಿತ ಪ್ರಸಾರ

Girls Pleats Skirts Fashion
ಫ್ಯಾಷನ್2 hours ago

Girls Pleats Skirts Fashion: ಹುಡುಗಿಯರ ಮೆಚ್ಚಿನ ಆಯ್ಕೆ ಕೊರಿಯನ್‌ ಪ್ಲೀಟ್ಸ್‌ ಸ್ಕರ್ಟ್ಸ್‌ಗಳು

Jan Aushadhi
ದೇಶ2 hours ago

Jan Aushadhi: ಪ್ರಯಾಣಿಕರಿಗೆ ಗುಡ್‌ ನ್ಯೂಸ್; ರೈಲು ನಿಲ್ದಾಣಗಳಲ್ಲೂ ಸಿಗಲಿವೆ ಕಡಿಮೆ ಬೆಲೆಗೆ ಔಷಧ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ15 hours ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ23 hours ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ1 day ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ1 day ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ2 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ2 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ2 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ3 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ3 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಟ್ರೆಂಡಿಂಗ್‌