Tiger Nail : ಸೆಲೆಬ್ರಿಟಿಗಳಿಗೆ ಉಗುರು ಸಂಕಷ್ಟ; ದರ್ಶನ್‌, ರಾಕ್‌ಲೈನ್‌, ಜಗ್ಗೇಶ್‌, ನಿಖಿಲ್‌ ಮನೆಗೇ ನೋಟಿಸ್‌ - Vistara News

ಕರ್ನಾಟಕ

Tiger Nail : ಸೆಲೆಬ್ರಿಟಿಗಳಿಗೆ ಉಗುರು ಸಂಕಷ್ಟ; ದರ್ಶನ್‌, ರಾಕ್‌ಲೈನ್‌, ಜಗ್ಗೇಶ್‌, ನಿಖಿಲ್‌ ಮನೆಗೇ ನೋಟಿಸ್‌

Tiger nail : ಹುಲಿ ಉಗುರು ಸೆಲೆಬ್ರಿಟಿಗಳನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ನಾಲ್ವರು ಚಿತ್ರ ನಟರಿಗೆ ಈಗ ಅರಣ್ಯ ಅಧಿಕಾರಿಗಳು ನೋಟಿಸ್‌ ಜಾರಿ ಮಾಡಿದ್ದಾರೆ.

VISTARANEWS.COM


on

Darshan and tiger nail
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಿಗ್‌ ಬಾಸ್‌ ಸ್ಪರ್ಧಿ (BBK season 10), ಕೃಷಿಕ ವರ್ತೂರು ಸಂತೋಷ್‌ (Varthur Prakash) ಅವರನ್ನು ಹುಲಿಯುಗುರು ಹೊಂದಿರುವ ಕಾರಣಕ್ಕಾಗಿ ಬಂಧಿಸಿರುವ ಅಧಿಕಾರಿಗಳಿಗೆ ಈಗ ತಮ್ಮ ಬಳಿ ಹುಲಿಯುಗುರು ಇದೆ ಎಂದು ಹೇಳಿಕೊಂಡ, ತೋರಿಸಿಕೊಂಡ ಸೆಲೆಬ್ರಿಟಿಗಳ ಮೇಲೆ ಕ್ರಮ ಕೈಗೊಳ್ಳಬೇಕಾದ ಒತ್ತಡ ಸೃಷ್ಟಿಯಾಗಿದೆ. ಇದೇ ಕಾರಣಕ್ಕೆ ಅಧಿಕಾರಿಗಳು ನಟರಾದ ದರ್ಶನ್‌ (Actor Darshan), ನಿಖಿಲ್‌ ಕುಮಾರಸ್ವಾಮಿ (Nikhil Kumaraswamy), ರಾಕ್‌ಲೈನ್‌ ವೆಂಕಟೇಶ್‌ (Rockline Venkatesh) ಮತ್ತು ರಾಜ್ಯಸಭಾ ಸದಸ್ಯ ಜಗ್ಗೇಶ್‌ (Actor Jaggesh) ಅವರಿಗೆ ನೋಟಿಸ್‌ ಜಾರಿಗೊಳಿಸಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳ ನಾಲ್ಕು ತಂಡಗಳು ನಾಲ್ಕು ಸೆಲೆಬ್ರಿಟಿಗಳ ಮನೆಗೆ ತೆರಳಿ ನೋಟಿಸ್‌ ಜಾರಿಗೊಳಿಸಿವೆ. ನಾಲ್ವರ ಮನೆಯ ಗೋಡೆಗೆ ಈ ನೋಟಿಸ್‌ಗಳನ್ನು ಅಂಟಿಸಲಾಗಿದೆ.

ವರ್ತೂರು ಸಂತೋಷ್‌ ಅವರು ಹುಲಿಯುಗುರು ಧರಿಸಿದ್ದನ್ನು ಟಿವಿಯಲ್ಲಿ ವೀಕ್ಷಿಸಿದ ಅಧಿಕಾರಿಗಳು ಬಿಗ್‌ ಬಾಸ್‌ ಮನೆಗೇ ನುಗ್ಗಿ ಬಂಧಿಸಿ ಕೋರ್ಟ್‌ಗೆ ಹಾಜರುಪಡಿಸಿದ್ದರು. ಆಗ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದರು. ಇದಾದ ಬಳಿಕ ಹುಲಿಯುಗುರು ಧರಿಸಿದ ಸೆಲೆಬ್ರಿಟಿಗಳು, ಕುಣಿಗಲ್‌ನ ಧನಂಜಯ ಗುರೂಜಿ, ಗೌರಿ ಗದ್ದೆಯ ವಿನಯ ಗುರೂಜಿ ಮೊದಲಾದ ಧಾರ್ಮಿಕ ವ್ಯಕ್ತಿಗಳ ಮೇಲೂ ಹುಲಿಯುಗುರು ಮತ್ತು ಹುಲಿ ಚರ್ಮ ಹೊಂದಿರುವ ಆಪಾದನೆ ಮಾಡಲಾಗಿತ್ತು. ಅವರ ವಿರುದ್ಧ ದೂರು ಕೂಡಾ ದಾಖಲಾಗಿತ್ತು. ಧನಂಜಯ ಗುರೂಜಿ ಮತ್ತು ವಿನಯ ಗುರೂಜಿ ಅವರ ಮಠಕ್ಕೇ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ರಾಕ್‌ಲೈನ್‌ ವೆಂಕಟೇಶ್‌ ಅವರ ಮನೆಗೆ ನೋಟಿಸ್‌

ಚಿತ್ರ ನಟರ ಮನೆಗೆ ನೋಟಿಸ್‌

ದರ್ಶನ್‌, ರಾಕ್‌ಲೈನ್‌, ಜಗ್ಗೇಶ್‌ ಮತ್ತು ನಿಖಿಲ್‌ ಕುಮಾರ್‌ ಅವರು ಧರಿಸಿರುವ ಹುಲಿಯುಗುರಿನ ಪೆಂಡೆಂಟ್‌ಗಳ ಬಗ್ಗೆ ದೂರುಗಳ ಮೂಲಕ ಗಮನ ಸೆಳೆಯಲಾಗಿತ್ತು. ಜಗ್ಗೇಶ್‌ ಅವರಂತೂ ಇದು ನನ್ನ ಅಮ್ಮ ಕೊಟ್ಟ ಅಸಲೀ ಹುಲಿಯುಗುರು ಎಂದು ಘಂಟಾಘೋಷವಾಗಿ ಪ್ರಕಟಿಸುವ ವಿಡಿಯೋಗಳು ಓಡಾಡುತ್ತಿವೆ. ಇತ್ತ ನಿಖಿಲ್‌ ಕುಮಾರಸ್ವಾಮಿ ಅವರು ಇದು ತಮ್ಮ ಮದುವೆ ವೇಳೆ ಸಿಕ್ಕಿದ ಉಡುಗೊರೆ, ಇದು ಒರಿಜಿನಲ್‌ ಅಲ್ಲ ಎಂದು ಹೇಳಿಕೆ ನೀಡಿದ್ದಾರೆ.

ಇದೀಗ ಅರಣ್ಯಾಧಿಕಾರಿಗಳು ದರ್ಶನ್‌, ರಾಕ್‌ ಲೈನ್‌ ವೆಂಕಟೇಶ್‌, ಜಗ್ಗೇಶ್‌, ನಿಖಿಲ್‌ ಕುಮಾರಸ್ವಾಮಿ ಅವರಿಗೆ ನೋಟಿಸ್‌ ಜಾರಿ ಮಾಡಿದ್ದು, ನೋಟಿಸ್‌ನಲ್ಲಿ ಅವರ ಬಳಿ ಇರುವ ಹುಲಿಯ ಉಗುರಿನ ಪೆಂಡೆಂಟ್‌ ಬಗ್ಗೆ ಮಾಹಿತಿ ನೀಡುವಂತೆ ಕೋರಲಾಗಿದೆ.

ನೋಟಿಸ್‌ ನೋಡಿದ ಕೂಡಲೇ ತಮ್ಮಲ್ಲಿರುವ ಪೆಂಡೆಂಟ್‌ಗಳ ಸಹಿತ ವಿಚಾರಣೆಗೆ ಬರುವಂತೆ ತಿಳಿಸಿರುವ ನೋಟಿಸ್‌, ಅದಕ್ಕೆ ಸಂಬಂಧಿಸಿ ಇರುವ ಎಲ್ಲ ದಾಖಲೆಗಳನ್ನು ತರುವಂತೆ ಸೂಚಿಸಲಾಗಿದೆ.

ನಿಜವೆಂದರೆ ವನ್ಯ ಜೀವಿ ಕಾಯಿದೆಯನ್ನು ಉಲ್ಲಂಘಿಸಿ ಯಾವುದೇ ಪ್ರಾಣಿಗಳ ಉಗುರು, ಚರ್ಮ ಮೊದಲಾದವುಗಳನ್ನು ಯಾರಾದರೂ ಹೊಂದಿದ್ದರೆ ಅವರನ್ನು ಬಂಧಿಸುವುದಕ್ಕೆ ಮೊದಲು ನೋಟಿಸ್‌ ನೀಡಿ ಅವರಿಂದ ವಿವರಣೆ ಪಡೆದು, ವಿಚಾರಣೆ ನಡೆಸಿ ಬಳಿಕ ಅಗತ್ಯವಿದ್ದರೆ ಮಾತ್ರ ಬಂಧಿಸಬಹುದು ಎಂದು ಕಾನೂನು ಹೇಳುತ್ತದೆ. ವರ್ತೂರು ಸಂತೋಷ್‌ ಪ್ರಕರಣದಲ್ಲಿ ಈ ಪ್ರಕ್ರಿಯೆಯನ್ನು ಪಾಲಿಸದೆ ಇರುವುದು ಅರಣ್ಯಾಧಿಕಾರಿಗಳಿಗೆ ಹಿನ್ನಡೆಯಾಗುವ ಸಾಧ್ಯತೆ ಇದೆ. ಹೀಗಾಗಿ ಸೆಲೆಬ್ರಿಟಿಗಳ ವಿಷಯದಲ್ಲಿ ಭಾರಿ ಎಚ್ಚರಿಕೆಯ ಹೆಜ್ಜೆಯನ್ನು ಇಡಲು ಅರಣ್ಯ ಇಲಾಖೆ ಮುಂದಾಗಿದೆ.

ಮುಂದೇನಾಗಬಹುದು?

ನೋಟಿಸ್‌ ಪಡೆದವರು ಅದರಲ್ಲಿ ಉಲ್ಲೇಖಿಸಿರುವ ಅಂಶಗಳನ್ನು ಆಧರಿಸಿ ಮಾಹಿತಿಗಳನ್ನು ನೀಡಬೇಕಾಗುತ್ತದೆ. ವಿಚಾರಣೆಯನ್ನೂ ಎದುರಿಸಬೇಕಾಗುತ್ತದೆ. ದಾಖಲೆಗಳು ಸರಿ ಇದ್ದರೆ ಪ್ರಕರಣ ಮುಕ್ತಾಯಗೊಳ್ಳುತ್ತದೆ. ಒಂದೊಮ್ಮೆ ಕೆಲವರು ಹೇಳುವಂತೆ ತಮ್ಮ ಕೈಯಲ್ಲಿರುವುದು ಅಸಲಿ ಹುಲಿಯ ಉಗುರಲ್ಲ. ಕೃತಕ ಎಂದು ಹೇಳಿದರೆ ಅದನ್ನು ಪ್ರೂವ್‌ ಮಾಡಬೇಕಾಗುತ್ತದೆ ಎಂದು ಹೇಳಲಾಗಿದೆ.

ಯಾವುದೂ ಪ್ರೂವ್‌ ಆಗದೆ ಇದ್ದರೆ ಮುಂದೆ ಕಾನೂನು ಹೋರಾಟ ನಡೆಯುತ್ತದೆ. ಬಂಧನಕ್ಕೂ ಅವಕಾಶವಿದೆ. ತಪ್ಪಿತಸ್ಥರು ಎಂದು ಪ್ರೂವ್‌ ಆದರೆ ಮೂರರಿಂದ ಏಳು ವರ್ಷದವರೆಗೆ ಶಿಕ್ಷೆ ವಿಧಿಸಬಹುದು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Rachel Movie: ಮಲಯಾಳಿ ನಟಿ ಹನಿ ರೋಸ್ ನಾಯಕಿಯಾಗಿ ನಟಿಸಿರುವ ‘ರೆಚೆಲ್’ ಚಿತ್ರದ ಟೀಸರ್ ರಿಲೀಸ್‌

Rachel Movie: ಮಲಯಾಳಿ ನಟಿ ಹನಿ ರೋಸ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ರೆಚೆಲ್’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಮೂಲ ಮಲಯಾಳಂನಲ್ಲಿ ನಿರ್ಮಾಣವಾಗಿರುವ ಈ ಸಿನಿಮಾ ಕನ್ನಡದಲ್ಲೂ ರಿಲೀಸ್‌ ಆಗಲಿದೆ. ಚಿತ್ರವು ಹಿಂಸಾಚಾರ ಮತ್ತು ರಕ್ತಪಾತದ ಕಥೆಯಾಗಿರುತ್ತದೆ ಎಂದು ಟೀಸರ್ ಸುಳಿವು ನೀಡುತ್ತದೆ. ಎಬ್ರಿಡ್ ಶೈನ್ ಸಹ ನಿರ್ಮಾಣದ ಜತೆಗೆ ಮತ್ತು ಬರಹಗಾರರಾಗಿರುವ ಈ ಚಿತ್ರವನ್ನು ಆನಂದಿನಿ ಬಾಲಾ ನಿರ್ದೇಶಿಸಿದ್ದಾರೆ. ಹನಿ ರೋಸ್ ಈ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದಾರೆ.

VISTARANEWS.COM


on

Malayali actress Honey Rose starring Rachel movie Teaser release
Koo

ಬೆಂಗಳೂರು: ಮಲಯಾಳಿ ನಟಿ ಹನಿ ರೋಸ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ರೆಚೆಲ್’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಮೂಲ ಮಲಯಾಳಂನಲ್ಲಿ ನಿರ್ಮಾಣವಾಗಿರುವ ಈ ಸಿನಿಮಾ ಕನ್ನಡದಲ್ಲೂ ರಿಲೀಸ್‌ ಆಗಲಿದೆ. ಚಿತ್ರವು ಹಿಂಸಾಚಾರ ಮತ್ತು ರಕ್ತಪಾತದ ಕಥೆಯಾಗಿರುತ್ತದೆ ಎಂದು ಟೀಸರ್ ಸುಳಿವು ನೀಡುತ್ತದೆ.

ಎಬ್ರಿಡ್ ಶೈನ್ ಸಹ ನಿರ್ಮಾಣದ ಜತೆಗೆ ಮತ್ತು ಬರಹಗಾರರಾಗಿರುವ ಈ ಚಿತ್ರವನ್ನು ಆನಂದಿನಿ ಬಾಲಾ ನಿರ್ದೇಶಿಸಿದ್ದಾರೆ. ಹನಿ ರೋಸ್ ಈ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದಾರೆ.

ಚಿತ್ರದಲ್ಲಿ ಬಾಬು ರಾಜ್, ಕಲಾಭವನ್ ಶಾಜೋನ್, ರೋಷನ್ ಬಶೀರ್, ಚಂದು ಸಲೀಂಕುಮಾರ್, ರಾಧಿಕಾ ರಾಧಾಕೃಷ್ಣನ್, ಜಾಫರ್ ಇಡುಕ್ಕಿ, ವಿನೀತ್ ತಟ್ಟಿಲ್, ಜೋಜಿ, ದಿನೇಶ್ ಪ್ರಭಾಕರ್, ಪಾಲಿ ವಲ್ಸನ್, ವಂದಿತಾ ಮನೋಹರನ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರವು ಮಲಯಾಳಂ, ತಮಿಳು, ತೆಲುಗು, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

ಇದನ್ನೂ ಓದಿ: Union Budget 2024: ಬಜೆಟ್‌ನಲ್ಲಿ ಆದಾಯ ತೆರಿಗೆ ವಿನಾಯಿತಿ ಮಿತಿ 5 ಲಕ್ಷ ರೂ.ಗೆ ಏರಿಕೆ? ಇಲ್ಲಿದೆ ಮಹತ್ವದ ಅಪ್‌ಡೇಟ್

ಈ ಚಿತ್ರವನ್ನು ಬಾದುಶಾ ಪ್ರೊಡಕ್ಷನ್ಸ್ ಬ್ಯಾನರ್‌ನಡಿಯಲ್ಲಿ ಬಾದುಶಾ ಎನ್‌ಎಂ, ರಾಜನ್ ಚಿರಾಯಿಲ್ ಮತ್ತು ಎಬ್ರಿಡ್ ಶೈನ್ ನಿರ್ಮಿಸಿದ್ದಾರೆ. ಕಥೆಯನ್ನು ರಾಹುಲ್ ಮನಪ್ಪಟ್ಟು ಬರೆದಿದ್ದು, ಚಿತ್ರಕಥೆಯನ್ನು ರಾಹುಲ್ ಮನಪ್ಪಟ್ಟು ಮತ್ತು ಎಬ್ರಿಡ್ ಶೈನ್ ಮಾಡಿದ್ದಾರೆ. ಸಹ ನಿರ್ಮಾಪಕ – ಹನ್ನನ್ ಮರಮುತ್ತಮ್, ಛಾಯಾಗ್ರಹಣ – ಸ್ವರೂಪ್ ಫಿಲಿಪ್, ಸಂಗೀತ ಮತ್ತು ಬಿಜಿಎಂ – ಇಶಾನ್ ಛಾಬ್ರಾ, ಸಂಕಲನ – ಮನೋಜ್, ನಿರ್ಮಾಣ ವಿನ್ಯಾಸಕ – ಸುಜಿತ್ ರಾಘವ್, ಧ್ವನಿ ಮಿಶ್ರಣ – ರಾಜಕೃಷ್ಣನ್ ಎಂ ಆರ್, ಧ್ವನಿ ವಿನ್ಯಾಸ – ಶ್ರೀ ಶಂಕರ್, ಕಾರ್ಯನಿರ್ವಾಹಕ ನಿರ್ಮಾಪಕರು – ಮಂಜು ಬಾದುಷಾ, ಶೆಮಿ ಬಶೀರ್, ಶೈಮಾ ಮುಹಮ್ಮದ್ ಬಶೀರ್ ಅವರದ್ದು.

Continue Reading

ಕರ್ನಾಟಕ

Kannada New Movie: ಜೂ.21ಕ್ಕೆ ‘ಸಂಭವಾಮಿ ಯುಗೇ ಯುಗೇ’ ಚಿತ್ರ ರಿಲೀಸ್‌

Kannada New Movie: ರಾಜಲಕ್ಷ್ಮೀ ಎಂಟರ್‌ಟೈನ್ಮೆಂಟ್ ಸಂಸ್ಥೆಯಡಿ, ಪ್ರತಿಭಾ ಅವರು ನಿರ್ಮಿಸಿರುವ, ಚೇತನ್‍ ಚಂದ್ರಶೇಖರ್ ಶೆಟ್ಟಿ ಕಥೆ, ಚಿತ್ರಕಥೆ, ಬರೆದು ನಿರ್ದೇಶನ ಮಾಡಿರುವ ‘ಸಂಭವಾಮಿ ಯುಗೇ ಯುಗೇʼ ಚಿತ್ರವು ಇದೇ ಜೂನ್‍ 21 ರಂದು ಶುಕ್ರವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

VISTARANEWS.COM


on

Sambhavami Yuge Yuge movie release on June 21
Koo

ಬೆಂಗಳೂರು: ರಾಜಲಕ್ಷ್ಮೀ ಎಂಟರ್‌ಟೈನ್ಮೆಂಟ್ ಸಂಸ್ಥೆಯಡಿ ಪ್ರತಿಭಾ ಅವರು ನಿರ್ಮಿಸಿರುವ, ಚೇತನ್‍ ಚಂದ್ರಶೇಖರ್ ಶೆಟ್ಟಿ ಕಥೆ, ಚಿತ್ರಕಥೆ, ಬರೆದು ನಿರ್ದೇಶನ ಮಾಡಿರುವ ‘ಸಂಭವಾಮಿ ಯುಗೇ ಯುಗೇ’ ಚಿತ್ರವು (Kannada New Movie) ಇದೇ ಜೂನ್‍ 21 ರಂದು ಶುಕ್ರವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಈ ಚಿತ್ರಕ್ಕೆ ಚೇತನ್‍ ಚಂದ್ರಶೇಖರ್ ಶೆಟ್ಟಿ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಇದಕ್ಕೂ ಮುನ್ನ ಕೆಲವು ಚಿತ್ರಗಳಿಗೆ ಸಹಾಯಕ ನಿರ್ದೇಶಕರಾಗಿದ್ದ ಚೇತನ್‍ ಅವರಿಗೆ ಇದು ಮೊದಲ ಸ್ವತಂತ್ರ ಪ್ರಯತ್ನ.

ಇದೊಂದು ಗ್ರಾಮೀಣ ಸೊಗಡಿನ ಕಮರ್ಷಿಯಲ್‍ ಥ್ರಿಲ್ಲರ್ ಚಿತ್ರವಾಗಿದ್ದು, ಮಂಡ್ಯ, ಚನ್ನಪಟ್ಟಣ, ರಾಮನಗರ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಈ ಹಿಂದೆ ‘1975’ ಎಂಬ ಚಿತ್ರದಲ್ಲಿ ನಟಿಸಿದ್ದ ಜಯ್‍ ಶೆಟ್ಟಿ, ಈ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಅವರಿಗೆ ಬಿಜಾಪುರ ಮೂಲದ ನಿಶಾ ರಜಪೂತ್‍ ನಾಯಕಿಯಾಗಿ ಅಭಿನಯಿಸಿದ್ದಾರೆ.

ಇದನ್ನೂ ಓದಿ: Bengaluru News: ಎಲ್ಲ ಕಾಮಗಾರಿಗಳಿಗೂ ಟೆಂಡರ್‌; ಸಿದ್ದರಾಮಯ್ಯ ಸೂಚನೆ

ಹಳ್ಳಿ ಹುಡುಗರು ಓದಿ, ಪಟ್ಟಣಕ್ಕೆ ಹೋಗಿ ನೆಲೆಸುತ್ತಾರೆ. ಇದರಿಂದ ಮುಂದಿನ ತಲೆಮಾರಿನ ಕಥೆ ಏನು? ಹಳ್ಳಿ ಉಳಿಯುವುದು ಹೇಗೆ? ಎಂಬ ವಿಷಯಗಳು ‘ಸಂಭವಾಮಿ ಯುಗೇ ಯುಗೇ’ ಚಿತ್ರದ ಕಥಾವಸ್ತು. ಯುವಕರು ಹಳ್ಳಿಯಲ್ಲೇ ನೆಲಸಬೇಕು ಮತ್ತು ಹಾಗೆ ನೆಲೆಸಬೇಕು ಎಂದರೆ ಹಳ್ಳಿಯಲ್ಲಿ ಒಂದಿಷ್ಟು ಕೆಲಸ ಆಗಬೇಕು ಎಂದು ನಾಯಕ ಮುಂದಾಗುತ್ತಾನೆ. ಈ ನಿಟ್ಟಿನಲ್ಲಿ ಏನೆಲ್ಲಾ ಸಮಸ್ಯೆಗಳನ್ನು ಎದುರಿಸುತ್ತಾನೆ ಎನ್ನುವುದು ಚಿತ್ರದ ಕಥೆ. ಇವತ್ತಿನ ತಲೆಮಾರಿನವರಿಗೆ ಕನೆಕ್ಟ್ ಆಗುವ ಹಲವು ಅಂಶಗಳು ಈ ಚಿತ್ರದಲ್ಲಿವೆ ಎನ್ನುತ್ತಾರೆ ನಿರ್ದೇಶಕ ಚೇತನ್‍ ಚಂದ್ರಶೇಖರ್ ಶೆಟ್ಟಿ.

ಚಿತ್ರದ ಕುರಿತು ನಾಯಕ ನಟ ಜಯ್‍ ಶೆಟ್ಟಿ ಮಾತನಾಡಿ, ‘ಇದೊಂದು ಕೃಷಿ ಮತ್ತು ರೈತರ ಸಿನಿಮಾ. ತನಗೆ ಆಶ್ರಯ ಕೊಟ್ಟ ಊರಿಗೆ ಏನಾದರೂ ಮಾಡಬೇಕು ಎಂದು ನಾಯಕ ಮುಂದಾಗುತ್ತಾನೆ. ಆ ಹಳ್ಳಿಯ ಪಂಚಾಯ್ತಿ ಅಧ್ಯಕ್ಷನಾಗುತ್ತಾನೆ. ಮುಂದೇನು ಎಂಬುದು ಚಿತ್ರದ ಕಥೆ. ನಾನು ಹೊಸಬನಾದರೂ ನನ್ನ ಮೇಲೆ ನಂಬಿಕೆ ಇಟ್ಟು, ಚಿತ್ರದಲ್ಲಿ ಅವಕಾಶ ಕೊಟ್ಟ ನಿರ್ಮಾಪಕರಿಗೆ ಧನ್ಯವಾದಗಳು ಎಂದು ತಿಳಿಸಿದ್ದಾರೆ.

ʼಸಂಭವಾಮಿ ಯುಗೇ ಯಗೇʼ ಚಿತ್ರದಲ್ಲಿ ಜಯ್ ಶೆಟ್ಟಿ ಮತ್ತು ನಿಶಾ ರಜಪೂತ್ ಜತೆಗೆ ಪ್ರಮೋದ್ ಶೆಟ್ಟಿ, ಸುಧಾರಾಣಿ, ಭವ್ಯ, ಅಶೋಕ್ ಕುಮಾರ್, ಮಧುರ ಗೌಡ, ಅಭಯ್ ಪುನೀತ್, ಬಲ ರಾಜವಾಡಿ, ಅಶ್ವಿನ್ ಹಾಸನ್ ಮುಂತಾದವರು ಅಭಿನಯಿಸಿದ್ದಾರೆ.

ಇದನ್ನೂ ಓದಿ: Fortis Hospital: 32 ವರ್ಷದ ಮಹಿಳೆಗೆ ಯಶಸ್ವಿ ಕಿಡ್ನಿ ಕಸಿ

ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ಪೂರಣ್‍ ಶೆಟ್ಟಿಗಾರ್ ಸಂಗೀತ ಸಂಯೋಜಿಸಿದ್ದಾರೆ. ಪ್ರಾಂಕ್ರಿನ್ ರಾಖಿ ಅವರ ಹಿನ್ನೆಲೆ ಸಂಗೀತ, ರಾಜು ಹೆಮ್ಮಿಗೆಪುರ ಛಾಯಾಗ್ರಹಣ, ನರಸಿಂಹ ಅವರ ಸಾಹಸ ನಿರ್ದೇಶನ, ಗೀತಾ ಮಾಸ್ಟರ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

Continue Reading

ಪ್ರಮುಖ ಸುದ್ದಿ

Kodi Mutt Swamiji: ದೇಶದಲ್ಲಿ ಶುಭಕ್ಕಿಂತ ಅಶುಭಗಳೇ ಹೆಚ್ಚು, ರಾಜ್ಯದಲ್ಲಿ ಅತಿವೃಷ್ಟಿ: ಕೋಡಿಮಠ ಶ್ರೀ ಭವಿಷ್ಯ!

Kodi Mutt Swamiji: ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರಕ್ಕೆ ಯಾವುದೇ ಆಪತ್ತು ಇರುವುದಿಲ್ಲ. ಶ್ರಾವಣದಲ್ಲಿ ನಾನು ಮತ್ತೊಮ್ಮೆ ಸ್ಫೋಟಕ ಭವಿಷ್ಯ ಹೇಳುತ್ತೇನೆ ಎಂದು ಕೋಡಿಮಠ ಶ್ರೀಗಳು ತಿಳಿಸಿದ್ದಾರೆ.

VISTARANEWS.COM


on

Kodi Mutt Swamiji
Koo

ಚಿಕ್ಕಬಳ್ಳಾಪುರ: ಈಗ ದೇಶದಲ್ಲಿ ಕ್ರೋಧಿ ನಾಮ ಸಂವತ್ಸರ ಇದೆ. ಶುಭಗಳಿಗಿಂತ ಅಶುಭಗಳೇ ಹೆಚ್ಚಾಗಿ ನಡೆಯುತ್ತವೆ. ದೇಶದಲ್ಲಿ ಜಲಕಂಟಕ, ಅಗ್ನಿಕಂಟಕ, ವಾಯು ಕಂಟಕಗಳು ಹೆಚ್ಚಾಗಲಿವೆ. ರಾಜ್ಯದಲ್ಲಿ ಈ ಬಾರಿ ಅತಿವೃಷ್ಟಿ ಸಾಧ್ಯತೆ ಇದೆ ಎಂದು ಕೋಡಿಮಠ ಶ್ರೀಗಳು (Kodi Mutt Swamiji) ಭವಿಷ್ಯ ನುಡಿದಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಗುರುಗಳು ಶಿಷ್ಯರಾಗುತ್ತಾರೆ, ಶಿಷ್ಯರು ಗುರುಗಳಾಗುತ್ತಾರೆ. ಹೆಣ್ಣು ಮಕ್ಕಳ ಪ್ರಾಬಲ್ಯ ಹೆಚ್ಚಾಗಲಿದೆ. ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರಕ್ಕೆ ಯಾವುದೇ ಆಪತ್ತು ಇರುವುದಿಲ್ಲ. ಶ್ರಾವಣದಲ್ಲಿ ನಾನು ಮತ್ತೊಮ್ಮೆ ಸ್ಫೋಟಕ ಭವಿಷ್ಯ ಹೇಳುತ್ತೇನೆ. ಕೇಂದ್ರ ಸರ್ಕಾರ ಹಾಗೂ ಮೋದಿ ಅವರ ಬಗ್ಗೆ ಶ್ರಾವಣದಲ್ಲಿ ಮಾತನಾಡುತ್ತೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Actor Darshan: ದರ್ಶನ್ ಮನೆ ಒತ್ತುವರಿ ತೆರವಿಗೆ ಸರ್ಕಾರ ಗ್ರೀನ್‌ ಸಿಗ್ನಲ್‌; ಬುಲ್ಡೋಜರ್‌ ರೆಡಿ ಮಾಡುತ್ತಿದೆ ಬಿಬಿಎಂಪಿ

ದರ್ಶನ್ ಹಾಗೂ ಉಮಾಪತಿ ನಡುವಿನ ವಿವಾದ ಬಗ್ಗೆ ಪ್ರತಿಕ್ರಿಯಿಸಿ, ಕೋಪ ಕಡಿಮೆ ಮಾಡಿಕೊಳ್ಳಬೇಕು, ತಂದೆ-ತಾಯಿ ಮಾತು ಕೇಳಬೇಕು. ಆ ರೀತಿ ನಡೆದುಕೊಂಡಿದ್ದರಿಂದ ಈಗ ಒಳ್ಳೆಯ ಸ್ಥಾನಮಾನದಲ್ಲಿ ಇದ್ದೇನೆ. ದರ್ಶನ್ ವಿರುದ್ಧ ಗಲಾಟೆ ನಡೆದಾಗ ನಾನು ಕೋಪ ಮಾಡಿಕೊಳ್ಳಲಿಲ್ಲ. ಕೋಪದ ಕೈಗೆ ಬುದ್ಧಿ ಕೊಟ್ಟರೆ ಈ ರೀತಿಯ ಅವಘಡಗಳು ಸಂಭವಿಸುತ್ತವೆ ಎಂದು ಉಮಾಪತಿಯೇ ಹೇಳಿದ್ದಾರೆ. ಕರೆಯದೆ ಬರುವವನು ಕೋಪ, ಬರೆಯದೆ ಓದುವವನು ಕಣ್ಣು, ಬರಿಗಾಲಲ್ಲಿ ನಡೆಯುವವನು ಮನಸ್ಸು ಎಂದು ಇಬ್ಬರ ನಡುವಿನ ಗಲಾಟೆ ಬಗ್ಗೆ ಮಾರ್ಮಿಕವಾಗಿ ಹೇಳಿದ್ದಾರೆ.

Continue Reading

ಕರ್ನಾಟಕ

Vijayapura News: ಗುಂಡಿಗೆ ಬಿದ್ದು ಮೂವರ ಸಾವು; ಬಾಲಕಿಯನ್ನು ರಕ್ಷಿಸಲು ಹೋದವರೂ ನೀರುಪಾಲು

Vijayapura News: ಗುಂಡಿಗೆ ಬಿದ್ದ ಬಾಲಕಿಯನ್ನು ರಕ್ಷಿಸಲು ಹೋಗಿ ಇನ್ನಿಬ್ಬರು ಕೂಡ ಪ್ರಾಣ ಕಳೆದುಕೊಂಡಿದ್ದಾರೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹಡಲಗೇರಿ ಗ್ರಾಮದಲ್ಲಿ ದುರ್ಘಟನೆ ನಡೆದಿದೆ.

VISTARANEWS.COM


on

Vijayapura News
Koo

ವಿಜಯಪುರ: ಜಮೀನಿನಲ್ಲಿ ನೀರು ತುಂಬಿದ್ದ ಆಳವಾದ ಗುಂಡಿಗೆ ಬಿದ್ದು ಮೂವರು ಮೃತಪಟ್ಟಿರುವ ಘಟನೆ ಜಿಲ್ಲೆಯ (Vijayapura News) ಮುದ್ದೇಬಿಹಾಳ ತಾಲೂಕಿನ ಹಡಲಗೇರಿ ಗ್ರಾಮದಲ್ಲಿ ನಡೆದಿದೆ. ಗುಂಡಿಗೆ ಬಿದ್ದ ಬಾಲಕಿಯನ್ನು ರಕ್ಷಿಸಲು ಹೋಗಿ ಇನ್ನಿಬ್ಬರು ಕೂಡ ಪ್ರಾಣ ಕಳೆದುಕೊಂಡಿದ್ದಾರೆ.

ನೀಲಮ್ಮ ಖಿಲಾರಹಟ್ಟಿ (16), ಮುತ್ತಪ್ಪ ಖಿಲಾರಹಟ್ಟಿ (24) ಹಾಗೂ ಶಿವು ಯಾಳವಾರ (25) ಮೃತರು. ಹಡಲಗೇರಿ ಗ್ರಾಮದ ಚಿನ್ನಪ್ಪ ತಳವಾರ ಎಂಬುವವರ ಜಮೀನಿನಲ್ಲಿ ಎಮ್ಮೆ ಮೇಯಿಸಲು ಬಾಲಕಿ ನೀಲಮ್ಮ ಹೋಗಿದ್ದಳು. ಈ ವೇಳೆ ಎಮ್ಮೆಗೆ ನೀರು ಕುಡಿಸಲು ಗುಂಡಿ ಬಳಿ ಬಂದಾಗ ಕಾಲು ಜಾರಿ ನೀರಿಗೆ ಬಿದ್ದಿದ್ದಾಳೆ. ಇದನ್ನು ಕಂಡು ಆಕೆಯನ್ನು ರಕ್ಷಣೆ ಮಾಡಲು ಬಂದ ಸಂಬಂಧಿಕ ಮುತ್ತಪ್ಪ ಖಿಲಾರಹಟ್ಟಿ ನೀರಿನಲ್ಲಿ ಸಿಲುಕಿದ್ದಾನೆ. ಅವರಿಬ್ಬರೂ ಹೊರ ಬರಲಾರದೇ ಪರದಾಡುತ್ತಿದ್ದಾಗ ಅವರನ್ನು ಕಾಪಾಡಲು ಹೋದ ಶಿವು ಯಾಳವಾರ ಕೂಡ ನೀರು ಪಾಲಾಗಿದ್ದಾನೆ.

ಸ್ಥಳಕ್ಕೆ ಮುದ್ದೇಬಿಹಾಳ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ, ಮೂವರ ಶವಗಳನ್ನು ಹೊರ ತೆಗೆದಿದ್ದಾರೆ. ಸ್ಥಳದಲ್ಲಿ ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ | Self Harming: ತಿಪಟೂರಿನಲ್ಲಿ ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ

ಮೀನು ಹಿಡಿಯಲು ಹೋದಾಗ ವಿದ್ಯುತ್‌ ಪ್ರವಹಿಸಿ ಬಾಲಕರಿಬ್ಬರು ಮೃತ್ಯು; ಕುಟುಂಬಸ್ಥರ ಆಕ್ರಂದನ

ವಿಜಯಪುರ: ಮೀನು ಹಿಡಿಯಲು ಹೋದ ಬಾಲಕರಿಬ್ಬರು ಕರೆಂಟ್‌ ಶಾಕ್‌ನಿಂದ (Electric shock) ಮೃತಪಟ್ಟಿದ್ದಾರೆ. ರೋಹಿತ್ ಅನೀಲ್ ಚವ್ಹಾಣ್ (8), ವಿಜಯ ಪಿಂಟು ಚವ್ಹಾಣ್ (16) ಮೃತ ದುರ್ದೈವಿಗಳು.

ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಈ ಇಬ್ಬರು ಬಾಲಕರು ದುರ್ಮರಣ ಹೊಂದಿದ್ದಾರೆ. ವಿಜಯಪುರ ಜಿಲ್ಲೆಯ ದ್ಯಾಬೇರಿ ಗ್ರಾಮದಲ್ಲಿ ಘಟನೆ ನಡೆದಿದೆ. ವಿದ್ಯುತ್ ತಂತಿ ಕಟ್ ಆಗಿ ನೀರಿನಲ್ಲಿ ಬಿದ್ದಿತ್ತು. ಇದರ ಅರಿವು ಇರದ ಬಾಲಕರಿಬ್ಬರು ಮೀನು ಹಿಡಿಯಲು ಹೋಗಿದ್ದಾರೆ.

ಇದನ್ನೂ ಓದಿ | Kolar news : ಬ್ಲಾಸ್ಟಿಂಗ್‌ ವೇಳೆ ಉರುಳಿ ಬಿದ್ದ ಬಂಡೆಕಲ್ಲು, ಟ್ರ್ಯಾಕ್ಟರ್‌-ಹಿಟಾಚಿ ಅಪ್ಪಚ್ಚಿ; ಮೂವರು ಕಾರ್ಮಿಕರು ನಾಪತ್ತೆ

ಈ ವೇಳೆ ಒಮ್ಮೆಲೆ ಇಬ್ಬರು ಮಕ್ಕಳಿಗೆ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರ ಮೃತದೇಹಗಳನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಬಾಲಕರ ಮೃತದೇಹವನ್ನು ತಬ್ಬಿಕೊಂಡು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಹೆಸ್ಕಾಂ ಅಧಿಕಾರಿಗಳ ವಿರುದ್ಧ ಪೋಷಕರು ಆಕ್ರೋಶ ಹೊರಹಾಕಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Continue Reading
Advertisement
Malayali actress Honey Rose starring Rachel movie Teaser release
ಕರ್ನಾಟಕ19 seconds ago

Rachel Movie: ಮಲಯಾಳಿ ನಟಿ ಹನಿ ರೋಸ್ ನಾಯಕಿಯಾಗಿ ನಟಿಸಿರುವ ‘ರೆಚೆಲ್’ ಚಿತ್ರದ ಟೀಸರ್ ರಿಲೀಸ್‌

IPS Officer
ದೇಶ20 seconds ago

IPS Officer: ಕ್ಯಾನ್ಸರ್‌ನಿಂದ ಪತ್ನಿ ಸಾವಿನ ಸುದ್ದಿ ತಿಳಿದ ಕೆಲವೇ ನಿಮಿಷದಲ್ಲಿ ಐಪಿಎಸ್‌ ಅಧಿಕಾರಿ ಆತ್ಮಹತ್ಯೆ!

Sambhavami Yuge Yuge movie release on June 21
ಕರ್ನಾಟಕ2 mins ago

Kannada New Movie: ಜೂ.21ಕ್ಕೆ ‘ಸಂಭವಾಮಿ ಯುಗೇ ಯುಗೇ’ ಚಿತ್ರ ರಿಲೀಸ್‌

Kodi Mutt Swamiji
ಪ್ರಮುಖ ಸುದ್ದಿ19 mins ago

Kodi Mutt Swamiji: ದೇಶದಲ್ಲಿ ಶುಭಕ್ಕಿಂತ ಅಶುಭಗಳೇ ಹೆಚ್ಚು, ರಾಜ್ಯದಲ್ಲಿ ಅತಿವೃಷ್ಟಿ: ಕೋಡಿಮಠ ಶ್ರೀ ಭವಿಷ್ಯ!

Vijayapura News
ಕರ್ನಾಟಕ47 mins ago

Vijayapura News: ಗುಂಡಿಗೆ ಬಿದ್ದು ಮೂವರ ಸಾವು; ಬಾಲಕಿಯನ್ನು ರಕ್ಷಿಸಲು ಹೋದವರೂ ನೀರುಪಾಲು

Pakistan Begger
Latest59 mins ago

Pakistan Begger: ಪಾಕಿಸ್ತಾನವೇ ಒಂದು ಭಿಕ್ಷುಕ ದೇಶ! ಆದರೆ ಅಲ್ಲಿಯ ಈ ಭಿಕ್ಷುಕ ಎಷ್ಟು ಶ್ರೀಮಂತ ನೋಡಿ!

Union Budget 2024
ದೇಶ1 hour ago

Union Budget 2024: ಬಜೆಟ್‌ನಲ್ಲಿ ಆದಾಯ ತೆರಿಗೆ ವಿನಾಯಿತಿ ಮಿತಿ 5 ಲಕ್ಷ ರೂ.ಗೆ ಏರಿಕೆ? ಇಲ್ಲಿದೆ ಮಹತ್ವದ ಅಪ್‌ಡೇಟ್

Wild boar hunting in Hebbatti village Arrest of two accused
ಉತ್ತರ ಕನ್ನಡ1 hour ago

Banavasi News: ಹೆಬ್ಬತ್ತಿ ಗ್ರಾಮದಲ್ಲಿ ಕಾಡುಹಂದಿ ಬೇಟೆ; ಇಬ್ಬರ ಬಂಧನ

a successful kidney transplanted for 32 year old woman at Fortis Hospital
ಕರ್ನಾಟಕ1 hour ago

Fortis Hospital: 32 ವರ್ಷದ ಮಹಿಳೆಗೆ ಯಶಸ್ವಿ ಕಿಡ್ನಿ ಕಸಿ

Saved Goats
ದೇಶ1 hour ago

Bakrid: ಬಕ್ರೀದ್ ವೇಳೆ ಜೈನರು ಮುಸ್ಲಿಮರ ವೇಷ ಧರಿಸಿ 124 ಮೇಕೆ ಖರೀದಿಸಿದರು! ಉದ್ದೇಶ ಹೃದಯಸ್ಪರ್ಶಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು1 day ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 day ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ2 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ2 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ2 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ3 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ4 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ4 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌