Wasim Akram: ಪಾಂಡ್ಯ ಇಲ್ಲದಿದ್ದರೂ ಭಾರತ ಬಲಿಷ್ಠ; ಶಮಿಗೆ ಇನ್ನು ಸ್ಥಾನ ಖಚಿತ ಎಂದ ಪಾಕ್​ ಮಾಜಿ ವೇಗಿ - Vistara News

ಕ್ರಿಕೆಟ್

Wasim Akram: ಪಾಂಡ್ಯ ಇಲ್ಲದಿದ್ದರೂ ಭಾರತ ಬಲಿಷ್ಠ; ಶಮಿಗೆ ಇನ್ನು ಸ್ಥಾನ ಖಚಿತ ಎಂದ ಪಾಕ್​ ಮಾಜಿ ವೇಗಿ

ದುಡುಕಿನ ನಿರ್ಧಾರದಿಂದ ಹಾರ್ದಿಕ್ ಪಾಂಡ್ಯ(hardik pandya) ಅವರು ಭಾನುವಾರ ನಡೆಯುವ ಇಂಗ್ಲೆಂಡ್​ ವಿರುದ್ಧದ ಪಂದ್ಯದಲ್ಲಿ ಆಡಿಸದಂತೆ ವಾಸಿಂ ಅಕ್ರಮ್(Wasim Akram)​ ಅವರು ಬಿಸಿಸಿಐಗೆ ಸಲಹೆ ನೀಡಿದ್ದಾರೆ.

VISTARANEWS.COM


on

wasim akram and hardik pandya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕರಾಚಿ: ವಿಶ್ವಕಪ್​ನಲ್ಲಿ ಭಾರತ ತಂಡ ತೋರುತ್ತಿರುವ ಪ್ರದರ್ಶನದ ಬಗ್ಗೆ ಪಾಕಿಸ್ತಾನ ಕ್ರಿಕೆಟ್​ ತಂಡದ ಮಾಜಿ ಆಟಗಾರ ವಾಸಿಂ ಅಕ್ರಮ್(Wasim Akram)​ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜತೆಗೆ ಹಾರ್ದಿಕ್ ಪಾಂಡ್ಯ(hardik pandya) ಅವರು ಭಾನುವಾರ ನಡೆಯುವ ಇಂಗ್ಲೆಂಡ್​ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯದಂತೆ ಸಲಹೆಯೊಂದನ್ನು ನೀಡಿದ್ದಾರೆ.

ಪಾಕಿಕ್ತಾಸದ ಕ್ರೀಡಾ ಸಂದರ್ಶನದಲ್ಲಿ ಮಾತನಾಡಿದ ವಾಸಿಂ ಅಕ್ರಮ್, “ಪಾಂಡ್ಯ ವಿಚಾರದಲ್ಲಿ ಬಿಸಿಸಿಐ ಎಚ್ಚರಿಕೆ ವಹಿಸುವುದು ಅಗತ್ಯ. ಅವರು ತಂಡದಲ್ಲಿ ಇಲ್ಲದಿದ್ದರೂ ಭಾರತ ಬಲಿಷ್ಠವಾಗಿದೆ. ಒಂದು ವೇಳೆ ಪಾಂಡ್ಯ ಫಿಟ್ ಆದರೆ ಅದು ಒಳ್ಳೆಯದೇ. ಆದರೆ ದುಡುಕಿನ ನಿರ್ಧಾರದಿಂದ ಅವರನ್ನು ಮುಂದಿನ ಪಂದ್ಯದಲ್ಲಿ ಆಡಿಸಿದರೆ ಮತ್ತೆ ಗಾಯಗೊಳ್ಳುವ ಸಾಧ್ಯತೆ ಇದೆ. ಈಗಾಗಲೇ ಭಾರತ 5 ಪಂದ್ಯಗಳನ್ನು ಗೆದ್ದು ಸೆಮಿಫೈನಲ್​ ಸನಿಹ ಬಂದು ನಿಂತಿದೆ. ಇನ್ನೊಂದು ಪಂದ್ಯ ಗೆದ್ದರೆ ಸೆಮಿಫೈನಲ್ ಪ್ರವೇಶಿಸಲಿದೆ. ಭಾರತಕ್ಕೆ ಇನ್ನೊಂದು ಗೆಲುವು ಕಷ್ಟವಲ್ಲ. ಹೀಗಾಗಿ ಪಾಂಡ್ಯ ಅವರಿಗೆ ಕೆಲ ಪಂದ್ಯಗಳಲ್ಲಿ ವಿಶ್ರಾಂತಿ ನೀಡಿದರೆ ಒಲಿತು” ಎಂದು ಹೇಳಿದ್ದಾರೆ.

ಶಮಿಗೆ ಸ್ಥಾನ ಖಚಿತ

ಅನುಭವಿ ವೇಗಿ ಮೊಹಮ್ಮದ್​ ಶಮಿ ಅವರನ್ನು ಇನ್ನು ತಂಡದಿಂದ ಕೈಬಿಡುವುದು ಕಷ್ಟ. ಏಕೆಂದರೆ ಅವರು ಕಳೆದ ಕಿವೀಸ್​ ವಿರುದ್ಧದ ಪಂದ್ಯದಲ್ಲಿ ತಮ್ಮ ಸಾಮರ್ಥ್ಯವನ್ನು ತೋರ್ಪಡಿಸಿದ್ದಾರೆ. ಹೀಗಾಗಿ ಅವರು ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿಯೂ ಆಡುವುದು ಖಚಿತ. ಈ ಹಿಂದೆಯೇ ಶಮಿ ಅವರನ್ನು ಆಡಿಸಬೇಕಿತ್ತು. ಏಕೆಂದರೆ ಸಿರಾಜ್​, ಬುಮ್ರಾ ಮತ್ತು ಶಮಿ ಮೂವರ ಬೌಲಿಂಗ್​ ಕಾಂಬಿನೇಷನ್​ ಎದುರು ಯಾವ ತಂಡಕ್ಕೂ ಗೆಲುವು ಸಾಧಿಸುವುದು ಅಷ್ಟು ಸುಲಭವಲ್ಲ. ಮುಂದಿನ ಪಂದ್ಯಗಳಲ್ಲಿ ಈ ಮೂವರು ಭಾರತ ತಂಡದಲ್ಲಿ ಕಾಣಿಸುವ ವಿಶ್ವಾಸವಿದೆ” ಎಂದು ವಾಸಿಂ ಅಕ್ರಮ್ ಹೇಳಿದರು.

ಪಾಕ್​ ತಂಡವನ್ನು ಲೇವಡಿ ಮಾಡಿದ್ದ ವಾಸಿಂ ಅಕ್ರಮ್

ಪ್ರಸಕ್ತ ಸಾಗುತ್ತಿರುವ ಏಕದಿನ ವಿಶ್ವಕಪ್​ನಲ್ಲಿ ಹ್ಯಾಟ್ರಿಕ್​ ಸೋಲು ಕಂಡು ಟೂರ್ನಿಯಿಂದ ಹೊರಬೀಳುವ ಸ್ಥಿಯಲ್ಲಿರುವ ಪಾಕಿಸ್ತಾನ ತಂಡದ ಪ್ರದರ್ಶನದ ಬಗ್ಗೆ ವಾಸಿಂ ಅಕ್ರಮ್​ ಆಕ್ರೋಶ ವ್ಯಕ್ತಪಡಿಸಿದ್ದರು. ಪಾಕಿಸ್ತಾನ ಸೋಮವಾರ ನಡೆದಿದ್ದ ಪಂದ್ಯದಲ್ಲಿ ದುರ್ಬಲ ಅಫಘಾನಿಸ್ತಾನ ವಿರುದ್ಧ 8 ವಿಕೆಟ್​ಗಳ ಹೀನಾಯ ಸೋಲು ಕಂಡಿತ್ತು. ಈ ಸೋಲಿನ ಬಳಿಕ ವಾಸಿಂ ಅಕ್ರಮ್​ ಅವರು ಬಾಬರ್​ ಪಡೆಗೆ ಮೊದಲು ಮಟನ್(8kg of mutton) ತಿನ್ನುವುದನ್ನು ನಿಲ್ಲಿಸಿ, ದೇಶದ ಬಗ್ಗೆ ಚಿಂತಿಸಿ ಎಂದು ಹೇಳುವ ಮೂಲಕ ತಿವಿದಿದ್ದರು.

ಇದನ್ನೂ ಓದಿ Odi Cricket History: ಏಕದಿನ ಕ್ರಿಕೆಟ್​ನಲ್ಲಿ ಗೆಲುವಿನ ದಾಖಲೆ ಬರೆದ ಆಸ್ಟ್ರೇಲಿಯಾ

ಪಾಕಿಸ್ತಾನದ ಕ್ರಿಕೆಟ್​ ಶೋ ಕಾರ್ಯಕ್ರಮದಲ್ಲಿ ಮಾತನಾಡಿದ ವಾಸಿಂ ಅಕ್ರಮ್, ‘ಅಫ್ಘಾನಿಸ್ತಾನ ವಿರುದ್ಧ ಇದು ಕೆಟ್ಟ ಸೋಲು, ನಿಜಕ್ಕೂ ಇದು ಮುಜುಗರ ತರುವಂತದ್ದು. ಕೇವಲ ಎರಡು ವಿಕೆಟ್ ಕಳೆದುಕೊಂಡು 280 ರನ್ ಗುರಿಯನ್ನು ತಲುಪುವುದು ಸಾಮಾನ್ಯ ವಿಷಯವಲ್ಲ. ಆಟಗಾರರು ಪ್ರತಿದಿನ 8 ಕೆಜಿ ಮಟನ್ ತಿಂದರೆ ಫಿಟ್​ನೆಸ್​ ಹೇಗೆ ಸಾಧ್ಯ” ಎಂದು ಬಾಬರ್​ ಪಡೆಯ ವಿರುದ್ಧ ಅವರು ಕಿಡಿಕಾರಿದ್ದರು.

ಇದನ್ನೂ ಓದಿ AUS vs NED: ದುಬಾರಿ ಮೊತ್ತ ನೀಡಿ ಅನಗತ್ಯ ದಾಖಲೆ ಬರೆದ ಬಾಸ್ ಡಿ ಲೀಡೆ

“ವೃತ್ತಿಪರರಾಗಿ ನೀವು ಪಡೆಯುವ ಹಣಕ್ಕೆ ತಕ್ಕ ಪ್ರದರ್ಶನ ನೀಡುವುದು ಕೂಡ ಪ್ರಮುಖವಾಗಿದೆ. ದೇಶಕ್ಕಾಗಿ ಆಡುವಾಗ ನಿಮ್ಮಲ್ಲಿ ಒಂದು ನಿರ್ದಿಷ್ಟ ಮಾನದಂಡ ಇರಬೇಕು. ಮಿಸ್ಬಾ ಉಲ್​ ಹಕ್​ ಅವರು ಕೋಚ್ ಆಗಿದ್ದ ವೇಳೆ ಫಿಟ್​ನೆಸ್​ ಮಾನದಂಡವನ್ನು ಜಾರಿಗೆ ತಂದಿದ್ದರು. ಆದರೆ ಅವರ ವಿರುದ್ಧವೇ ನೀವು ಇಲ್ಲ ಸಲ್ಲದ ಆರೋಪ ಹೊರಿಸಿ ಅವರನ್ನು ಈ ಹುದ್ದೆಯಿಂದ ಕೆಳಗಿಳಿಸಿದ್ದೀರಿ. ಅವರ ಕಾರ್ಯತಂತ್ರಗಳು ಕೆಲಸ ಮಾಡುತ್ತಿದ್ದವು. ಫೀಲ್ಡಿಂಗ್ ಎನ್ನುವುದು ಫಿಟ್ನೆಸ್‌ಗೆ ಸಂಬಂಧಿಸಿದ್ದು. ನಮ್ಮಲ್ಲಿ ಆ ಕೊರತೆಯಿದೆ” ಎಂದು ಹೇಳಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Virat Kohli’s Phone Wallpaper: ಕೊಹ್ಲಿಯ ಮೊಬೈಲ್​ ​ವಾಲ್​ ಪೇಪರ್​ನಲ್ಲಿರುವ ವ್ಯಕ್ತಿ ಯಾರು? ಇವರ ಹಿನ್ನಲೆ ಏನು?

Virat Kohli’s Phone Wallpaper: ಕೊಹ್ಲಿ ಮಾತ್ರವದಲ್ಲದೆ, ಆ್ಯಪಲ್‌ ಸಿಇಒ ಸ್ಟೀವ್ ಜಾಬ್ಸ್, ಫೇಸ್‌ಬುಕ್‌ ಸಂಸ್ಥಾಪಕ ಮಾರ್ಕ್ ಝುಕರ್‌ಬರ್ಗ್ ಸೇರಿ ಜಗತ್ತಿನಾದ್ಯಂತ ಹಲವು ಪ್ರಸಿದ್ಧ ರಾಜಕಾರಣಿಗಳು, ಸಿನಿಮಾ ತಾರೆಯರು, ಕ್ರೀಡಾಪಟುಗಳು, ಕೈಗಾರಿಕೋದ್ಯಮಿಗಳೆಲ್ಲ ಬಾಬಾ ಭಕ್ತರಾಗಿದ್ದಾರೆ

VISTARANEWS.COM


on

Virat Kohli's Phone Wallpaper
Koo

ಮುಂಬಯಿ: ಭಾರತ ಕ್ರಿಕೆಟ್​ ತಂಡದ ಸ್ಟಾರ್​ ಬ್ಯಾಟರ್​ ವಿರಾಟ್​ ಕೊಹ್ಲಿ(Virat Kohli) ಅವರು ಮೊಬೈಲ್​ನ ಹೋಮ್​ ಸ್ಕ್ರೀನ್​ನಲ್ಲಿರುವ(Virat Kohli’s phone wallpaper) ಫೋಟೊ ಒಂದು ವೈರಲ್​ ಆಗಿದ್ದು, ಈ ಫೋಟೊದಲ್ಲಿರುವ ವ್ಯಕ್ತಿ ಯಾರೆಂದು ತಿಳಿದುಕೊಳ್ಳುವ ಆಸಕ್ತಿ ಮತ್ತು ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.​

ಹೌದು ವಿರಾಟ್​ ಮೊಬೈಲ್​ ವಾಲ್​ ಪೇಪರ್​ನಲ್ಲಿರುವ ಫೋಟೊ ನೀಮ್ ಕರೋಲಿ ಬಾಬಾ ಅವರದ್ದಾಗಿದೆ. ವಿರಾಟ್​ ಕೊಹ್ಲಿ ಅವರು 2 ವರ್ಷಗಳ ಕಾಲ ತಮ್ಮ ಬ್ಯಾಟಿಂಗ್​ ಫಾರ್ಮ್​ ಕಳೆದುಕೊಂಡು ಇನ್ನೇನು ತಮ್ಮ ಕ್ರಿಕೆಟ್​ ವೃತ್ತಿ ಜೀವನ ಕೊನೆಗೊಳ್ಳುತ್ತದೆ ಎನ್ನುವಷ್ಟರಲ್ಲಿ ಕೊಹ್ಲಿ ಅವರನ್ನು ಪತ್ನಿ ಅನುಷ್ಕಾ ಶರ್ಮ ಕರೋಲಿ ಬಾಬಾ ಆಶ್ರಮಕ್ಕೆ ಕರೆದುಕೊಂಡು ಹೋಗಿ ವಿಶೇಷ ಪೂಜೆ ಸಲ್ಲಿಸಿದ್ದರು. ಇದಾಗಿ ಕೊಹ್ಲಿ ಆಡಿದ ಮರು ಪಂದ್ಯದಲ್ಲೇ ಶತಕ ಬಾರಿಸಿ ಸಂಭ್ರಮಿಸಿದ್ದರು. ಈ ಪವಾಡ ನಡೆದಾಗಿನಿಂದಲೂ ಕೊಹ್ಲಿ ಅವರು ಕರೋಲಿ ಬಾಬಾ ಅವರ ಭಕ್ತರಾಗಿದ್ದಾರೆ.

ಕೊಹ್ಲಿ ಮಾತ್ರವದಲ್ಲದೆ, ಆ್ಯಪಲ್‌ ಸಿಇಒ ಸ್ಟೀವ್ ಜಾಬ್ಸ್, ಫೇಸ್‌ಬುಕ್‌ ಸಂಸ್ಥಾಪಕ ಮಾರ್ಕ್ ಝುಕರ್‌ಬರ್ಗ್ ಸೇರಿ ಜಗತ್ತಿನಾದ್ಯಂತ ಹಲವು ಪ್ರಸಿದ್ಧ ರಾಜಕಾರಣಿಗಳು, ಸಿನಿಮಾ ತಾರೆಯರು, ಕ್ರೀಡಾಪಟುಗಳು, ಕೈಗಾರಿಕೋದ್ಯಮಿಗಳೆಲ್ಲ ಬಾಬಾ ಭಕ್ತರಾಗಿದ್ದಾರೆ. ಕೊಹ್ಲಿ ಬಿಡುವು ಸಿಕ್ಕ ವೇಳೆ ಕುಟುಂಬ ಸಮೇತರಾಗಿ ಕರೋಲಿ ಬಾಬಾ ಆಶ್ರಮಕ್ಕೆ ಭೇಟಿ ನೀಡುತ್ತಿರುತ್ತಾರೆ.

ಇದನ್ನೂ ಓದಿ Team India’s Victory Parade: ಟೀಮ್ ಇಂಡಿಯಾದ ವಿಕ್ಟರಿ ಪೆರೇಡ್​ನಲ್ಲಿ ಹಲವು ಅಭಿಮಾನಿಗಳಿಗೆ ಗಾಯ; ಆಸ್ಪತ್ರೆಗೆ ದಾಖಲು

ಯಾರು ಈ ಕರೋಲಿ ಬಾಬಾ?


ಕರೋಲಿ ಬಾಬಾರನ್ನು ಅವರ ಭಕ್ತರು ಭಗವಾನ್ ಹನುಮಂತನ ಅವತಾರವೆಂದೇ ನಂಬುತ್ತಾರೆ. ತಾನೊಬ್ಬ ಸಾಮಾನ್ಯ ವ್ಯಕ್ತಿ ಎಂದು ಸ್ವತಃ ಬಾಬಾ ಹೇಳಿದ್ದರೂ ಕೂಡ ಭಕ್ತರು ಮಾತ್ರ ಅವರನ್ನು ಪೂಜಿಸುವುದು ನಿಲ್ಲಿಸಿಲ್ಲ. ನೀಮ್ ಕರೋಲಿ ಬಾಬಾ ಅವರ ಮೂಲ ಹೆಸರು ಲಕ್ಷ್ಮೀನಾರಾಯಣ ಶರ್ಮಾ. ಬಾಬಾರ ಜೀವನದಲ್ಲಿ ನಡೆದ ಅನೇಕ ಘಟನೆಗಳು ಅವರ ಸಾಮರ್ಥ್ಯ, ಶಕ್ತಿ ಮತ್ತು ದಯೆಯಿಂದ ಅವರನ್ನು ಆಂಜನೇಯನ ಅವತಾರವೆಂದು ಪರಿಗಣಿಸಲಾಗಿದೆ.

ಲಂಡನ್​ಗೆ ತೆರಳಿದ ಕೊಹ್ಲಿ


ಟೀಮ್​ ಇಂಡಿಯಾ ವಿಜಯೋತ್ಸವ ಆಚರಣೆ ಮುಗಿದ ತಕ್ಷಣ ವಿರಾಟ್​ ಕೊಹ್ಲಿ ಅವರು ಲಂಡನ್​ಗೆ ಪ್ರಯಾಣಿಸಿದ್ದಾರೆ. ಪತ್ನಿ ಅನುಷ್ಕಾ ಮತ್ತು ಇಬ್ಬರು ಮಕ್ಕಳು ಲಂಡನ್​ನಲ್ಲಿರುವ ಕಾರಣ ಕುಟುಂಬದ ಜತೆ ಕಾಲ ಕಳೆಯಲು ಕೊಹ್ಲಿ ನೇರವಾಗಿ ಮುಂಬೈನಿಂದ ಲಂಡನ್​ ವಿಮಾನ ಏರಿದ್ದಾರೆ.

ಕುಟುಂಬಕ್ಕೆ ಮೊದಲ ಪ್ರಾಧಾನ್ಯತೆ ನೀಡುವ ಕೊಹ್ಲಿ ಯಾವುದೇ ಪಂದ್ಯ ಇರಲಿ ಇದು ಮುಕ್ತಾಯಗೊಂಡ ತಕ್ಷಣ ಪತ್ನಿಗೆ ವಿಡಿಯೊ ಕಾಲ್​ ಮಾಡಿ ಮಾತನಾಡುತ್ತಾರೆ. ಕೆಲವೊಮ್ಮೆ ಕ್ರಿಕೆಟ್​ ಸರಣಿ ಇದ್ದರೂ ಕೂಡ ಇದರಿಂದ ಹಿಂದೆ ಸರಿದು ಕುಟುಂಬದ ಜತೆ ಕಾಲ ಕಳೆಯುತ್ತಾರೆ. ಟಿ20 ವಿಶ್ವಕಪ್​ ಗೆದ್ದ ಬಳಿಕವೂ ಕೂಡ ಕೊಹ್ಲಿ ಪತ್ನಿಗೆ ಕರೆ ಮಾಡಿ ಮಕ್ಕಳ ಬಗ್ಗೆ ವಿಚಾರಿಸಿದ್ದಾರೆ. ಜತೆಗೆ ಪುಟ್ಟ ಮಗುವಿಗೆ ಫ್ಲೈಯಿಂಗ್ ಕಿಸ್ ನೀಡಿದ ವಿಡಿಯೊ ಕೂಡ ವೈರಲ್​ ಆಗಿತ್ತು.

ಕೊಹ್ಲಿ ಮತ್ತು ಅನುಷ್ಕಾ ಅದೆಷ್ಟೋ ಜನರಿಗೆ ಸ್ಫೂರ್ತಿಯಾಗಿದ್ದಾರೆ. ಈ ಜೋಡಿ ಸೇವಾ (seVVA) ಎಂಬ ಹೆಸರಿನ ಎನ್​ಜಿವೊ ನಡೆಸುತ್ತಿದ್ದು ಈ ಮೂಲಕ ಹಲವರಿಗೆ ಸಹಾಯವನ್ನು ಮಾಡುತ್ತಿದ್ದಾರೆ. ಕೊಹ್ಲಿಯ ಎಲ್ಲ ಏರಿಳಿತದಲ್ಲಿಯೂ ಪತ್ನಿ ಅನುಷ್ಕಾ ಬೆಂಬಲಕ್ಕೆ ನಿಂತು ಅವರಿಗೆ ಸಾದಾ ಪ್ರೋತ್ಸಾಹವನ್ನು ನೀಡುತ್ತಲೇ ಬಂದಿದ್ದಾರೆ. ಕೊಹ್ಲಿ ಕೂಡ ತನ್ನ ಬದುಕಿನಲ್ಲಿ ಅನುಷ್ಕಾ ಮುಖ್ಯ ಪಾತ್ರಹಿಸಿರುದಾಗಿ ಹಿಂದೊಮ್ಮೆ ಸಂದರ್ಶನದಲ್ಲಿ ಹೇಳಿದ್ದರು.

Continue Reading

ಕ್ರೀಡೆ

Rohit Sharma: ವಿಶ್ವಕಪ್​ ಗೆದ್ದು ಬಂದ ರೋಹಿತ್​ಗೆ ಸರ್​ಪ್ರೈಸ್​ ಕೊಟ್ಟ ಬಾಲ್ಯದ ಗೆಳೆಯರು; ವಿಡಿಯೊ ವೈರಲ್​

Rohit Sharma: ಐತಿಹಾಸಿಕ ಗೆಲುವಿನ ಬಳಿಕ ನಾಯಕ ರೋಹಿತ್​ ಶರ್ಮ(Rohit Sharma) ಅವರು ಬಾರ್ಬಡೋಸ್​ ಕ್ರೀಡಾಂಗಣದ ಪಿಚ್​ನಲ್ಲಿನ ಮಣ್ಣನ್ನು ತಿಂದು ಧನ್ಯತಾ ಭಾವ ವ್ಯಕ್ತಪಡಿಸಿದ್ದರು. ಈ ವಿಡಿಯೊ ಕೂಡ ವೈರಲ್​ ಆಗಿತ್ತು.

VISTARANEWS.COM


on

Rohit Sharma
Koo

ಮುಂಬಯಿ: ಟಿ20 ವಿಶ್ವಕಪ್(T20 World Cup 2024)​ ಗೆದ್ದು ತವರಿಗೆ ಮರಳಿದ ಟೀಮ್​ ಇಂಡಿಯಾದ ನಾಯಕ ರೋಹಿತ್​ ಶರ್ಮಗೆ(Rohit Sharma) ತಮ್ಮ ಬಾಲ್ಯದ ಗೆಳೆಯರು(Rohit Sharma’s childhood friends) ವಿಶೇಷವಾಗಿ ವೆಲ್​ಕಮ್​ ಮಾಡಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ. ಗುರುವಾರ  ಮುಂಬೈಯಲ್ಲಿ ಟಿ20 ವಿಶ್ವಕಪ್(T20 World Cup) ಗೆದ್ದ ಭಾರತ ತಂಡದ ಆಟಗಾರರಿಗೆ ಭರ್ಜರಿಯಾಗಿ ಅಭಿನಂದಿಸಲಾಗಿತ್ತು. ಎಲ್ಲ ಕಾರ್ಯಕ್ರಮ ಮುಗಿದ ಬಳಿಕ ರೋಹಿತ್​ ಅವರು ಬಾಲ್ಯದ ಗೆಳೆಯನ್ನು ಭೇಟಿ ಮಾಡಿದರು. ಈ ವೇಳೆ ಗೆಳೆಯರು ಸೆಲ್ಯೂಟ್​ ಹೊಡೆದು, ರೋಹಿತ್​ ಅವರನ್ನು ಭುಜದ ಮೇಲೆ ಹೊತ್ತುಕೊಂಡು ಸಂಭ್ರಮಿಸಿದರು. ಈ ವೇಳೆ​ ಟೀಮ್​ ಇಂಡಿಯಾ ಆಟಗಾರ, ರೋಹಿತ್​ ಅವರ ಆಪ್ತರಾಗಿರುವ ತಿಲಕ್​ ವರ್ಮಾ ಕೂಡ ಜತೆಗಿದ್ದರು. ಇವರು ಕೂಡ ಸೆಲ್ಯೂಟ್​ ಹೊಡೆದು ರೋಹಿತ್​ಗೆ ಗೌರವಿಸಿದ್ದಾರೆ.

ಬಾರ್ಬಡೋಸ್‌ನಿಂದ ಬುಧವಾರ ಬೆಳಿಗ್ಗೆ ಪ್ರಯಾಣ ಆರಂಭಿಸಿದ್ದ ಭಾರತ ತಂಡವು ಗುರುವಾರ ಬೆಳಗ್ಗೆ ನವದೆಹಲಿಗೆ ಬಂದಿಳಿದಿತ್ತು. ಪ್ರಧಾನಿ ನರೇಂದ್ರ ಮೋದಿಯವರ ಆತಿಥ್ಯ ಸ್ವೀಕರಿಸಿದ ನಂತರ ಮಧ್ಯಾಹ್ನ 3.42ಕ್ಕೆ ಮುಂಬೈಗೆ ಪ್ರಯಾಣ ಬೆಳೆಸಿತ್ತು. ಸಂಜೆ ಐದು ಗಂಟೆಯ ನಂತರ ವಿಮಾನವು ಮುಂಬೈ ವಿಮಾನ ನಿಲ್ದಾಣಕ್ಕೆ ಬಂದಿಳಿದಿತ್ತು. ಸಾಗರೋಪಾದಿಯಲ್ಲಿ ಸೇರಿದ್ದ ಅಭಿಮಾನಿಗಳ ಗುಂಪಿನಲ್ಲಿ ಆಟಗಾರರು ತೆರೆದ ಬಸ್​ನಲ್ಲಿ ವಿಶ್ವಕಪ್​ ಟ್ರೋಫಿಯೊಂದಿಗೆ ರೋಡ್ ಶೋ ನಡೆಸಿದ್ದರು. ದಕ್ಷಿಣ ಮುಂಬೈನ ಮರೀನ್ ಡ್ರೈವ್‌ ಪ್ರದೇಶ ಸಾವಿರಾರು ಸಂಖ್ಯೆಯಲ್ಲಿ ಕ್ರಿಕೆಟ್ ಅಭಿಮಾನಿಗಳಿಂದ ತುಂಬಿ ಹೋಗಿತ್ತು.

ಇದನ್ನೂ ಓದಿ Team India’s Victory Parade: ಟೀಮ್ ಇಂಡಿಯಾದ ವಿಕ್ಟರಿ ಪೆರೇಡ್​ನಲ್ಲಿ ಹಲವು ಅಭಿಮಾನಿಗಳಿಗೆ ಗಾಯ; ಆಸ್ಪತ್ರೆಗೆ ದಾಖಲು

ಐತಿಹಾಸಿಕ ಗೆಲುವಿನ ಬಳಿಕ ನಾಯಕ ರೋಹಿತ್​ ಶರ್ಮ(Rohit Sharma) ಅವರು ಬಾರ್ಬಡೋಸ್​ ಕ್ರೀಡಾಂಗಣದ ಪಿಚ್​ನಲ್ಲಿನ ಮಣ್ಣನ್ನು ತಿಂದು ಧನ್ಯತಾ ಭಾವ ವ್ಯಕ್ತಪಡಿಸಿದ್ದರು. ‘ಆ ವಿಷಯಗಳನ್ನು ನನ್ನಿಂದ ವಿವರಿಸಲು ಸಾಧ್ಯವಿಲ್ಲ ಎಂದು ಭಾವಿಸುತ್ತೇನೆ. ಏಕೆಂದರೆ, ಯಾವುದನ್ನೂ ನಾನು ಸ್ಕ್ರಿಪ್ಟ್ ಮಾಡಿಲ್ಲ. ನಾನು ಮೈದಾನಕ್ಕೆ ಇಳಿದಾಗ ಆ ಕ್ಷಣವನ್ನು ಅನುಭವಿಸುತ್ತಿದ್ದೆ. ಗೆಲುವು ತಂದು ಕೊಟ್ಟ ಈ ಪಿಚ್​ನ ಋಣವನ್ನು ಮರೆಯಲು ಸಾಧ್ಯವಿಲ್ಲ. ನನ್ನ ಜೀವನದುದ್ದಕ್ಕೂ ಈ ಪಿಚ್​ನ ಮಣ್ಣಿನ ನೆನಪನ್ನು ಇಟ್ಟು ಕೊಳ್ಳುವ ಸಲುವಾಗಿ ನಾನು ಪಿಚ್​ನ ಮಣ್ಣು ತಿಂದೆ” ಎಂದು ಹೇಳಿದ್ದರು.

ವಿದಾಯ ಹೇಳಿದ ರೋಹಿತ್​


ನಾಯಕನಾಗಿ ಮತ್ತು ಆಟಗಾರನಾಗಿ 2 ಟಿ20 ವಿಶ್ವಕಪ್​ ಗೆದ್ದ ರೋಹಿತ್​ ಗೆಲುವಿನ ಬಳಿಕ ಟಿ20 ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದರು. ಈ ಮೂಲಕ ಸ್ಮರಣೀಯ ವಿದಾಯ ಪಡೆದರು. ಪಂದ್ಯದ ಬಳಿಕ ಮಾತನಾಡಿದ ರೋಹಿತ್​, “ಇದು ನನ್ನ ಕೊನೆಯ ಅಂತಾರಾಷ್ಟ್ರೀಯ ಟಿ20 ಪಂದ್ಯ. ಚುಟುಕು ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಲು ಇದಕ್ಕಿಂತ ಸಕಾಲ ಇನ್ನೊಂದಿಲ್ಲ. ನಾನು ಮೊದಲು ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ್ದೇ ಟಿ20 ಆಡುವ ಮೂಲಕ. ನಾಕಯನಾಗಿ ನಾನು ಕಪ್ ಗೆಲ್ಲಬೇಕೆಂದು ಬಯಸಿದ್ದೆ. ಇದು ಸಾಕಾರಗೊಂಡಿದೆ” ಎಂದು ಹೇಳುವ ಮೂಲಕ ವಿದಾಯ ಹೇಳಿದರು. ಟಿ20ಯಲ್ಲಿ 159 ಪಂದ್ಯಗಳನ್ನು ಆಡಿರುವ ರೋಹಿತ್‌, 4231 ರನ್‌ ಗಳಿಸಿದ್ದು, 5 ಶತಕ ಹಾಗೂ 37 ಅರ್ಧಶತಕಗಳನ್ನು ಬಾರಿಸಿದ್ದಾರೆ.

Continue Reading

ಕ್ರಿಕೆಟ್

Team India’s Victory Parade: ಟೀಮ್ ಇಂಡಿಯಾದ ವಿಕ್ಟರಿ ಪೆರೇಡ್​ನಲ್ಲಿ ಹಲವು ಅಭಿಮಾನಿಗಳಿಗೆ ಗಾಯ; ಆಸ್ಪತ್ರೆಗೆ ದಾಖಲು

Team India’s Victory Parade:ಕಿಕ್ಕಿರಿದು ಸೇರಿದ್ದ ಅಭಿಮಾನಿಗಳ ನೂಕು ನುಗ್ಗಲಿನಲ್ಲಿ ಹಲವರ ಚಪ್ಪಲಿಗಳು ಕಿತ್ತು ಹೋಗಿದೆ. ಶುಕ್ರವಾರ ಬೆಳಗ್ಗೆ ಮರೀನ್ ಡ್ರೈವ್‌ ಪ್ರೇಶದಲ್ಲಿ ಚಪ್ಪಲಿಗಳ ರಾಶಿಯೇ ಕಂಡು ಬಂದಿದೆ. ಸಾವಿರಾರು ಚಪ್ಪಳಿಗಳು ಬೀದಿಯಲ್ಲೇ ಅನಾಥವಾಗಿ ಬಿದ್ದಿದೆ.

VISTARANEWS.COM


on

Team India's Victory Parade
Koo

ಮುಂಬಯಿ: ಟಿ20 ವಿಶ್ವಕಪ್(T20 World Cup) ಗೆದ್ದ ಭಾರತ ಕ್ರಿಕೆಟ್ ತಂಡದ ಆಟಗಾರರಿಗೆ ನಿನ್ನೆ(ಗುರುವಾರ) ಮುಂಬೈಯಲ್ಲಿ ಭರ್ಜರಿಯಾಗಿ ಅಭಿನಂದಿಸಲಾಗಿತ್ತು. ತಂಡದ ಈ ವಿಜಯೋತ್ಸವದ(Team India’s Victory Parade) ವೇಳೆ ಭಾರಿ ಸಂಖ್ಯೆಯಲ್ಲಿ ಸೇರಿದ್ದ ಅಭಿಮಾನಿಗಳ ಪೈಕಿ ಕೆಲವರಿಗೆ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಪ್ರಕರಣಗಳು ಇದೀಗ ವರದಿಯಾಗಿವೆ. ಸದ್ಯದ ಮಾಹಿತಿ ಪ್ರಕಾರ 11 ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಸಾಗರೋಪಾದಿಯಲ್ಲಿ ಸೇರಿದ್ದ ಅಭಿಮಾನಿಗಳ ಗುಂಪಿನಲ್ಲಿ ಮಹಿಳೆಯೊಬ್ಬರು ಉಸಿರಾಟ ಸಮಸ್ಯೆಗೆ ಸಿಲುಕಿ ಬಳಿಕ ಪೊಲೀಸ್​ ಅಧಿಕಾರಿಯೊಬ್ಬರು ಮಹಿಳೆಯನ್ನು ತಮ್ಮ ಹೆಗಲ ಮೇಲೆ ಹೊತ್ತು ಸಾಗಿದ ದೃಶ್ಯ ಕೂಡ ವೈರಲ್​ ಆಗಿದೆ. ಒಟ್ಟು 9 ಮಂದಿ ಉಸಿರಾಟದ ಸಮಸ್ಯೆಗೆ ಸಿಲುಕಿ ಇಲ್ಲಿನ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವರದಿ ತಿಳಿಸಿದೆ.

17 ವರ್ಷಗಳ ಬಳಿಕ 2ನೇ ಬಾರಿಗೆ ಟಿ-20 ವಿಶ್ವಕಪ್ ಗೆದ್ದ ಭಾರತ ತಂಡದ ವಿಜಯೋತ್ಸವವನ್ನು ಗುರುವಾರ ಮುಂಬೈನಲ್ಲಿ ಏರ್ಪಡಿಸಲಾಗಿತ್ತು. ದಕ್ಷಿಣ ಮುಂಬೈನ ಮರೀನ್ ಡ್ರೈವ್‌ ಪ್ರದೇಶ ಸಾವಿರಾರು ಸಂಖ್ಯೆಯಲ್ಲಿ ಕ್ರಿಕೆಟ್ ಅಭಿಮಾನಿಗಳಿಂದ ತುಂಬಿ ಹೋಗಿತ್ತು.

ಕಿಕ್ಕಿರಿದು ಸೇರಿದ್ದ ಅಭಿಮಾನಿಗಳ ನೂಕು ನುಗ್ಗಲಿನಲ್ಲಿ ಹಲವರ ಚಪ್ಪಲಿಗಳು ಕಿತ್ತು ಹೋಗಿದೆ. ಶುಕ್ರವಾರ ಬೆಳಗ್ಗೆ ಮರೀನ್ ಡ್ರೈವ್‌ ಪ್ರೇಶದಲ್ಲಿ ಚಪ್ಪಲಿಗಳ ರಾಶಿಯೇ ಕಂಡು ಬಂದಿದೆ. ಸಾವಿರಾರು ಚಪ್ಪಳಿಗಳು ಬೀದಿಯಲ್ಲೇ ಅನಾಥವಾಗಿ ಬಿದ್ದಿದೆ.

ಬಾರ್ಬಡೋಸ್‌ನಿಂದ ಬುಧವಾರ ಬೆಳಿಗ್ಗೆ ಪ್ರಯಾಣ ಆರಂಭಿಸಿದ್ದ ಭಾರತ ತಂಡವು ಗುರುವಾರ ಬೆಳಗ್ಗೆ ನವದೆಹಲಿಗೆ ಬಂದಿಳಿದಿತ್ತು. ಪ್ರಧಾನಿ ನರೇಂದ್ರ ಮೋದಿಯವರ ಆತಿಥ್ಯ ಸ್ವೀಕರಿಸಿದ ನಂತರ ಮಧ್ಯಾಹ್ನ 3.42ಕ್ಕೆ ಮುಂಬೈಗೆ ಪ್ರಯಾಣ ಬೆಳೆಸಿತ್ತು. ಸಂಜೆ ಐದು ಗಂಟೆಯ ನಂತರ ವಿಮಾನವು ಮುಂಬೈ ವಿಮಾನ ನಿಲ್ದಾಣಕ್ಕೆ ಬಂದಿಳಿದಿತ್ತು. ಆಟಗಾರರು ಬಂದೊಡನೆಯೇ ಕ್ರಿಕೆಟ್‌ ಪ್ರೇಮಿಗಳ ಜಯಘೋಷ ಮೊಳಗಿತು. ಅಭಿಮಾನಿಗಳ ಅಬ್ಬರಕ್ಕೆ ಅರಬ್ಬಿ ಸಮುದ್ರ ಕೂಡ ಒಂದು ಕ್ಷಣ ಸ್ಥಬ್ಧವಾಗಿತ್ತು. ವಿಶೇಷ ವಿನ್ಯಾಸದ ತೆರೆದ ವಾಹನದಲ್ಲಿ ವಿಶ್ವಕಪ್‌ ಟ್ರೋಫಿ ಹಿಡಿದು ನಾಯಕ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ, ಬೂಮ್ರಾ, ಪಾಂಡ್ಯ, ಕೋಚ್‌ ರಾಹುಲ್‌ ದ್ರಾವಿಡ್‌ ಸೇರಿದಂತೆ ಎಲ್ಲ ಆಟಗಾರರು ವಿಜಯಯಾತ್ರೆಯ ಮೆರವಣಿಗೆಯಲ್ಲಿ ಭಾಗಿಯಾಗಿ ಸಂಭ್ರಮಿಸಿದರು. ಸಾವಿರಾರು ಅಭಿಮಾನಿಗಳು ಘೋಷಣೆ ಕೂಗಿ ಅಭಿನಂದನೆಗಳನ್ನು ಸಲ್ಲಿಸಿದರು.

ಇದನ್ನೂ ಓದಿ Team India: ವಿಶ್ವಕಪ್ ಟ್ರೋಫಿ ಮೇಲೆ ಕಾಲಿಡುವುದು ನಮ್ಮ ಸಂಸ್ಕೃತಿಯಲ್ಲ ಎಂದು ತೋರಿಸಿಕೊಟ್ಟ ಟೀಮ್ ಇಂಡಿಯಾ​ ಕ್ರಿಕೆಟಿಗರು

ಜೂನ್ 29ರಂದು ಬಾರ್ಬಾಡೋಸ್‌ನಲ್ಲಿ ನಡೆದಿದ್ದ ಟೂರ್ನಿಯ ಫೈನಲ್‌ನಲ್ಲಿ ಭಾರತ ತಂಡವು ದಕ್ಷಿಣ ಆಫ್ರಿಕಾ ಎದುರು ಜಯಿಸಿತ್ತು. ಆದರೆ ಕೆರೀಬಿಯನ್ ದ್ವೀಪದಲ್ಲಿ ಚಂಡಮಾರುತ ಬೀಸಿದ್ದ ಕಾರಣ ವಿಮಾನಯಾನ ಸೌಲಭ್ಯ ರದ್ದಾಗಿತ್ತು. ಆದ್ದರಿಂದ ಬುಧವಾರದವರೆಗೂ ತಂಡವು ಬಾರ್ಬಾಡೋಸ್‌ನಲ್ಲಿಯೇ ಉಳಿದಿತ್ತು.

ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ವತಿಯಿಂದ ಚಾಂಪಿಯನ್‌ ಭಾರತ ತಂಡಕ್ಕೆ ಘೋಷಿಸಿದ್ದ 125 ಕೋಟಿ ರೂಪಾಯಿ ಮೊತ್ತದ ಚೆಕ್‌ ಅನ್ನು ಬಿಸಿಸಿಐ ಅಧ್ಯಕ್ಷ ರೋಜರ್‌ ಬಿನ್ನಿ, ಉಪಾಧ್ಯಕ್ಷ ರಾಜೀವ್‌ ಶುಕ್ಲಾ, ಕಾರ್ಯದರ್ಶಿ ಜಯ್‌ ಶಾ ಹಸ್ತಾಂತರಿಸಿದರು.

Continue Reading

ಕ್ರೀಡೆ

IND vs ZIM: ನಾಳೆಯಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ; ಯುವ ಪಡೆಗೆ ಸ್ಫೂರ್ತಿಯಾಗಲಿ ಟಿ20 ವಿಶ್ವಕಪ್​ ಗೆಲುವು

IND vs ZIM:ಜಿಂಬಾಬ್ವೆ ವಿರುದ್ಧ ಭಾರತ ಅಜೇಯವಲ್ಲ. 2 ಸೋಲು ಕೂಡ ಕಂಡಿದೆ. ಅನುಭವಿ ಆಲ್​ರೌಂಡರ್​ ಹಾಗೂ ನಾಯಕನಾಗಿರುವ ಸಿಕಂದರ್​ ರಾಜಾ ಬ್ಯಾಟಿಂಗ್​ ಮತ್ತು ಬೌಲಿಂಗ್​ನಲ್ಲಿ ಉತ್ತಮ ಫಾರ್ಮ್​ನಲ್ಲಿದ್ದಾರೆ. ಹೀಗಾಗಿ ಯಂಗ್​ ಟೀಮ್​ ಇಂಡಿಯಾ ಆಟಗಾರರ ಎಚ್ಚರಿಕೆಯಿಂದ ಆಡಬೇಕು.

VISTARANEWS.COM


on

IND vs ZIM
Koo

ಹರಾರೆ: ಇದುವರೆಗೂ ಟಿ20 ವಿಶ್ವಕಪ್​ ಗೆಲುವಿನ ಗುಂಗಿನಲ್ಲಿದ್ದ ಭಾರತೀಯ ಕ್ರಿಕೆಟ್​ ಅಭಿಮಾನಿಗಳು ಇನ್ನು ನಾಳೆಯಿಂದ(ಶನಿವಾರ) ಆರಂಭಗೊಳ್ಳುವ ಜಿಂಬಾಬ್ವೆ ಮತ್ತು ಭಾರತ(IND vs ZIM) ನಡುವಣ ಟಿ20(
Zimbabwe vs India) ಸರಣಿಯತ್ತ ಗಮನ ಹರಿಸಲಿದ್ದಾರೆ. ಹರಾರೆಯಲ್ಲಿ ಇತ್ತಂಡಗಳ ಮೊದಲ ಪಂದ್ಯ ನಡೆಯಲಿದೆ. ಯುವ ಪಡೆಯನ್ನೇ ನೆಚ್ಚಿಕೊಂಡಿರುವ ಶುಭಮನ್​ ಗಿಲ್(shubman gill)​ ಸಾರಥ್ಯದ ಟೀಮ್​ ಇಂಡಿಯಾ ಹೇಗೆ ಪ್ರದರ್ಶನ ತೋರಲಿದೆ ಎನ್ನುವುದು ಈ ಸೆರಣಿಯ ಕೌತುಕ.

ಈಗಾಗಲೇ ಹಿರಿಯ ಆಟಗಾರರಾದ ರೋಹಿತ್​ ಶರ್ಮ, ವಿರಾಟ್​ ಕೊಹ್ಲಿ ಮತ್ತು ರವೀಂದ್ರ ಜಡೇಜಾ ಟಿ20 ಕ್ರಿಕೆಟ್​ಗೆ ಗುಡ್​ ಬೈ ಹೇಳಿದ್ದಾರೆ. ಮುಂದಿನ ವರ್ಷ ಐಸಿಸಿ ಚಾಂಪಿಯನ್ಸ್​ ಟ್ರೋಫಿ ಕೂಡ ನಡೆಯಲಿದೆ. ಇದು ಟಿ20 ಸ್ವರೂಪದಲ್ಲಿಯೇ ನಡೆಯಲಿದೆ. ಜತೆಗೆ 2026ರಲ್ಲಿ ಟಿ20 ವಿಶ್ವಕಪ್​ ಕೂಡ ನಡೆಯಲಿದೆ. ಈ ಟೂರ್ನಿಗೆ ತಂಡವನ್ನು ರಚಿಸಲು ಬಿಸಿಸಿಐ ಸಿದ್ಧತೆ ಆರಂಭಿಸಿದೆ. ಇದೀಗ ಜಿಂಬಾಬ್ವೆ ವಿರುದ್ಧದ ಸರಣಿಯಲ್ಲಿ ಸಿಕ್ಕ ಅವಕಾಶವನ್ನು ಯುವ ಆಟಗಾರರು ಸರಿಯಾಗಿ ಬಳಸಿಕೊಂಡರೆ ಭಾರತ ಸೀನಿಯರ್​ ತಂಡದಲ್ಲಿ ಆಡುವ ಅವಕಾಶ ಪಡೆಯಬಹುದು. ಹೀಗಾಗಿ ಎಲ್ಲ ಆಟಗಾರರು ಶ್ರೇಷ್ಠ ಪ್ರದರ್ಶನ ತೋರಬೇಕು.

ರೋಹಿತ್​ ನಿವೃತ್ತಿಯಿಂದ ತೆರವಾದ ಟಿ20 ತಂಡದ ನಾಯಕತ್ವಕ್ಕೆ ಈಗಾಗಲೇ ಹಾರ್ದಿಕ್​ ಹೆಸರು ಕೇಳಿ ಬಂದಿದೆ. ಜಿಂಬಾಬ್ವೆ ಸರಣಿಯಲ್ಲಿ ತಂಡ ಮುನ್ನಡೆಸುತ್ತಿರುವ ಶುಭಮನ್​ ಗಿಲ್​ ಈ ಸರಣಿಯಲ್ಲಿ ಯಶಸ್ವಿಯಾದರೆ ಮುಂದಿನ ದಿನದಲ್ಲಿ ನಾಯಕನಾಗುವ ಸಾಧ್ಯತೆಯೂ ಇದೆ. ಈ ಬಾರಿಯ ಐಪಿಎಲ್​ನಲ್ಲಿ ಸನ್​ರೈಸರ್ಸ್​ ಹೈದರಾಬಾದ್​ ಪರ ವಿಸ್ಫೋಟಕ ಬ್ಯಾಟಿಂಗ್​ ಮೂಲಕ ಸಿಕ್ಸರ್​ಗಳ ಮಳೆಯನ್ನೇ ಸುರಿಸಿದ್ದ ಎಡಗೈ ಬ್ಯಾಟರ್​ ಅಭಿಷೇಕ್​ ಶರ್ಮ ಬ್ಯಾಟಿಂಗ್​ ಪ್ರದರ್ಶನದ ಮೇಕೆಯೂ ಬಹಳ ನಿರೀಕ್ಷೆ ಇದೆ. ಒಟ್ಟಾರೆ ಈ ಸರಣಿಯಲ್ಲಿ ಆಟಗಾರರು ತೋರುವ ಪ್ರದರ್ಶನದಲ್ಲಿ ಅವರ ಮುಂದಿನ ಕ್ರಿಕೆಟ್​ ಭವಿಷ್ಯ ಅಡಗಿದೆ ಎನ್ನಲಡ್ಡಿಯಿಲ್ಲ.

ಇದನ್ನೂ ಓದಿ Team India: ವಿಶ್ವಕಪ್ ಟ್ರೋಫಿ ಮೇಲೆ ಕಾಲಿಡುವುದು ನಮ್ಮ ಸಂಸ್ಕೃತಿಯಲ್ಲ ಎಂದು ತೋರಿಸಿಕೊಟ್ಟ ಟೀಮ್ ಇಂಡಿಯಾ​ ಕ್ರಿಕೆಟಿಗರು

ಜಿಂಬಾಬ್ವೆ ಕೂಡ ಬಲಿಷ್ಠ


ಜಿಂಬಾಬ್ವೆ ವಿರುದ್ಧ ಭಾರತ ಅಜೇಯವಲ್ಲ. 2 ಸೋಲು ಕೂಡ ಕಂಡಿದೆ. ಅನುಭವಿ ಆಲ್​ರೌಂಡರ್​ ಹಾಗೂ ನಾಯಕನಾಗಿರುವ ಸಿಕಂದರ್​ ರಾಜಾ ಬ್ಯಾಟಿಂಗ್​ ಮತ್ತು ಬೌಲಿಂಗ್​ನಲ್ಲಿ ಉತ್ತಮ ಫಾರ್ಮ್​ನಲ್ಲಿದ್ದಾರೆ. ಜತೆಗೆ ತಂಡದ ನೂತನ ಕೋಚ್​ ಆಗಿರುವ ಜಸ್ಟಿನ್‌ ಸ್ಯಾಮ್ಸನ್‌ ಅವರ ಮಾರ್ಗದರ್ಶನ ಕೂಡ ತಂಡಕ್ಕೆ ನೆರವಾಗಬಹುದು. ಹೀಗಾಗಿ ಭಾರತ ಎಚ್ಚರಿಕೆಯಿಂದ ಆಡಬೇಕು.

ಮುಖಾಮುಖಿ


ಭಾರತ ಮತ್ತು ಜಿಂಬಾಬ್ವೆ ಇದುವರೆಗೆ ಒಟ್ಟು 8 ಟಿ20 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಭಾರತ 6 ಪಂದ್ಯ ಗೆದ್ದಿದ್ದರೆ, ಜಿಂಬಾಬ್ವೆ 2 ಪಂದ್ಯ ಗೆದ್ದಿದೆ. ಕೊನೆಯ ಬಾರಿ ಇತ್ತಂಡಗಳು ಆಡಿದ್ದು 2022ರಲ್ಲಿ. ಆಸ್ಟ್ರೇಲಿಯಾದಲ್ಲಿ ನಡೆದಿದ್ದ ಟಿ20 ವಿಶ್ವಕಪ್​ ಟೂರ್ನಿಯಲ್ಲಿ. ಈ ಪಂದ್ಯವನ್ನು ಭಾರತ 71 ರನ್​ ಅಂತರದಿಂದ ಗೆದ್ದು ಬೀಗಿತ್ತು.

ಭಾರತ ತಂಡ

ಶುಭಮನ್ ಗಿಲ್ (ನಾಯಕ), ಋತುರಾಜ್ ಗಾಯಕ್ವಾಡ್, ಅಭಿಷೇಕ್ ಶರ್ಮಾ, ರಿಂಕು ಸಿಂಗ್, ಧ್ರುವ್ ಜುರೆಲ್ (ವೀಕಿ), ರಿಯಾನ್ ಪರಾಗ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅವೇಶ್ ಖಾನ್, ಖಲೀಲ್ ಅಹ್ಮದ್, ಮುಖೇಶ್ ಕುಮಾರ್, ತುಷಾರ್ ದೇಶಪಾಂಡೆ, ಸಾಯಿ ಸುದರ್ಶನ್, ಜಿತೇಶ್ ಶರ್ಮಾ (ವೀಕಿ) , ಹರ್ಷಿತ್ ರಾಣಾ.

ವೇಳಾಪಟ್ಟಿ

1ನೇ ಟಿ20: ಜುಲೈ 6, ಹರಾರೆ, ಸಂಜೆ 4.30

2ನೇ ಟಿ20: ಜುಲೈ 7, ಹರಾರೆ, ಸಂಜೆ 4.30

3ನೇ T20: ಜುಲೈ 10, ಹರಾರೆ, ಸಂಜೆ 4.30

4ನೇ T20: ಜುಲೈ 13, ಹರಾರೆ, ಸಂಜೆ 4.30

5 ನೇ T20: ಜುಲೈ 14, ಹರಾರೆ, ಸಂಜೆ 4.30

Continue Reading
Advertisement
Georgina Rodriguez
ಕ್ರೀಡೆ15 mins ago

Georgina Rodriguez : ಬಿಕಿನಿ ದಿನದಂದು ಬಗೆಬಗೆಯ ಬಿಕಿನಿಗಳಲ್ಲಿ ಮೈಮಾಟ ತೋರಿಸಿದ ಕ್ರಿಸ್ಟಿಯಾನೊ ರೊನಾಲ್ಡೊ ಪ್ರೇಯಸಿ ಜಾರ್ಜಿಯಾ ರೋಡ್ರಿಗಸ್​

Stock Market
ವಾಣಿಜ್ಯ20 mins ago

Stock Market: 1 ಲಕ್ಷ ಪಾಯಿಂಟ್‌ ಮೈಲಿಗಲ್ಲಿನತ್ತ ಸೆನ್ಸೆಕ್ಸ್‌; ಅಂಕಿ-ಅಂಶ ಹೇಳೋದೇನು?

Virat Kohli's Phone Wallpaper
ಕ್ರೀಡೆ20 mins ago

Virat Kohli’s Phone Wallpaper: ಕೊಹ್ಲಿಯ ಮೊಬೈಲ್​ ​ವಾಲ್​ ಪೇಪರ್​ನಲ್ಲಿರುವ ವ್ಯಕ್ತಿ ಯಾರು? ಇವರ ಹಿನ್ನಲೆ ಏನು?

natana Tarangini 20th anniversary celebration on July 6 and 7 in Bengaluru
ಕರ್ನಾಟಕ29 mins ago

Bengaluru News: ಬೆಂಗಳೂರಿನಲ್ಲಿ ಜು. 6,7ರಂದು ʼನಟನ ತರಂಗಿಣಿʼ 20ನೇ ವರ್ಷೋತ್ಸವ

HDFC Life certified as one of Indias Best Companies to Work For in 2024
ಬೆಂಗಳೂರು31 mins ago

HDFC Life: ‘ಕೆಲಸ ಮಾಡಲು ಅತ್ಯುತ್ತಮವಾಗಿರುವ ಭಾರತದ ಕಂಪನಿ’ಗಳಲ್ಲಿ ಒಂದಾದ ಎಚ್‌ಡಿಎಫ್‌ಸಿ ಲೈಫ್

Baby Death
Latest35 mins ago

Baby Death: ಹೋಮ್‌ ವರ್ಕ್‌ ಮಾಡುತ್ತಿದ್ದ ಬಾಲಕಿಗೆ ಸಾವಾಗಿ ಕಾಡಿದ ಪೆನ್‌!

Medical negligence
ದಾವಣಗೆರೆ37 mins ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

Prajwal Revanna Case
ಕರ್ನಾಟಕ43 mins ago

Prajwal Revanna Case: ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಿಚಾರಣೆ 2 ವಾರ ಮುಂದೂಡಿಕೆ

kumble sridhara rao
ಶ್ರದ್ಧಾಂಜಲಿ46 mins ago

Kumble Sridhara Rao: ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ನಿಧನ

Kung Fu Panda 4 OTT Jio cinema july 15th onwards
ಒಟಿಟಿ47 mins ago

Kung Fu Panda 4 OTT: ಪುಟಾಣಿಗಳ ಫೇವರಿಟ್‌ ʻಕುಂಗ್ ಫು ಪಾಂಡಾ 4 ಸಿನಿಮಾʼ ಒಟಿಟಿಗೆ; ಕನ್ನಡ ಭಾಷೆಯಲ್ಲೂ ಲಭ್ಯ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka rain
ಮಳೆ2 hours ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Elephant attack in Hassan and Chikmagalur
ಹಾಸನ4 hours ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು5 hours ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು6 hours ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ10 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ22 hours ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ23 hours ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

wild animal attack
ಬೆಂಗಳೂರು ಗ್ರಾಮಾಂತರ1 day ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ1 day ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ1 day ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

ಟ್ರೆಂಡಿಂಗ್‌