ಶಾಲೆಗಳಲ್ಲಿ ಭಗವದ್ಗೀತೆ ಕಲಿಸಲು ಕ್ರಮ; ಸ್ವರ್ಣವಲ್ಲಿಯಲ್ಲಿ ಶಿಕ್ಷಣ ಸಚಿವ ನಾಗೇಶ್‌ ಹೇಳಿಕೆ - Vistara News

ಉತ್ತರ ಕನ್ನಡ

ಶಾಲೆಗಳಲ್ಲಿ ಭಗವದ್ಗೀತೆ ಕಲಿಸಲು ಕ್ರಮ; ಸ್ವರ್ಣವಲ್ಲಿಯಲ್ಲಿ ಶಿಕ್ಷಣ ಸಚಿವ ನಾಗೇಶ್‌ ಹೇಳಿಕೆ

ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದಲ್ಲಿ ಶ್ರೀಮದ್‌ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳವರ 32ನೇ ಚಾತುರ್ಮಾಸ್ಯ ವ್ರತಾಚರಣೆ ಅಂಗವಾಗಿ ಏರ್ಪಡಿಸಲಾಗಿದ್ದ ಸಭಾ ಕಾರ್ಯಕ್ರಮದಲ್ಲಿ ಸಚಿವ ಬಿ ಸಿ ನಾಗೇಶ್‌ ಭಾಗವಹಿಸಿದ್ದರು.

VISTARANEWS.COM


on

swarnavalli mutt
ಸ್ವರ್ಣವಲ್ಲೀ ಶ್ರೀಗಳೊಂದಿಗೆ ಸಚಿವ ಬಿ ಸಿ ನಾಗೇಶ್‌
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿರಸಿ: ಶಾಲೆಗಳಲ್ಲಿ ನೈತಿಕ ಶಿಕ್ಷಣ ಕಲಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಅದರ ನೀಲನಕ್ಷೆ ಸಿದ್ಧವಾಗುತ್ತಿದೆ. ನೈತಿಕ ಶಿಕ್ಷಣ ಪದ್ದತಿಯಲ್ಲಿ ಭಗವದ್ಗೀತೆ ಅಳವಡಿಸಲು ಕ್ರಮವಹಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಹೇಳಿದ್ದಾರೆ.

ತಾಲೂಕಿನ ಸ್ವರ್ಣವಲ್ಲೀ ಮಠದಲ್ಲಿ ನಡೆದ ಗುರು ಪೂರ್ಣಿಮೆ ಹಾಗು ಚಾತುರ್ಮಾಸ್ಯ ವ್ರತಾಚರಣೆಯ ಸಭಾ ಕಾರ್ಯಕ್ರಮದಲ್ಲಿ ಸ್ವರ್ಣವಲ್ಲೀ ಮಠದ ನವೀಕೃತ ಜಾಲತಾಣ ಲೋಕಾರ್ಪಣೆ ಮಾಡಿ ಅವರು ಮಾತನಾಡುತ್ತಿದ್ದರು.

ಮೆಕಾಲೆ ಮನೋಭಾವದ ಶಿಕ್ಷಣ ವ್ಯವಸ್ಥೆಯಿಂದ ದೇಶದೊಳಗೇ ಗೆದ್ದಲು ಬಿದ್ದಿದೆ. ಇದನ್ನು ತೊಲಗಿಸಲು ಹೊಸ ಶಿಕ್ಷಣ ನೀತಿ ಜಾರಿಗೆ ಬರುತ್ತಿದೆ. ಮಾತೃಭಾಷೆಗೆ ಆದ್ಯತೆ ನೀಡುವ ಜತೆ ನಾಡಿನ ಸಂಸ್ಕೃತಿಯ ಪ್ರತೀಕವಾದ ಸಂಸ್ಕೃತ ಭಾಷೆಗೂ ಮಹತ್ವ ನೀಡುವಂತೆ ಕೋರಲಾಗಿದೆ. ಇದರ ಜತೆ ರಾಜ್ಯದಲ್ಲಿ ನೈತಿಕ ಶಿಕ್ಷಣ ವ್ಯವಸ್ಥೆಯನ್ನು ತ್ವರಿತವಾಗಿ ಜಾರಿಗೆ ತರಲು ಸರ್ಕಾರ ಮುಂದಾಗಿದೆ ಎಂದು ಅವರು ಹೇಳಿದರು.

ನೈತಿಕ ಶಿಕ್ಷಣದಲ್ಲಿ ಇರಬೇಕಾದ ವಿಷಯಗಳ ಸಂಗ್ರಹ ನಡೆದಿದೆ. ಅದು ಪೂರ್ಣಗೊಂಡ ನಂತರ ರಾಜ್ಯದ ವಿವಿಧ ಸ್ವಾಮೀಜಿಗಳ ಬಳಿ ಆ ಬಗ್ಗೆ ಚರ್ಚಿಸಿ ವಿಷಯಗಳನ್ನು ಅಂತಿಮಗೊಳಿಸಲಾಗುವುದು. ಸಮಾಜ ಹಾಗೂ ವ್ಯಕ್ತಿ ಯಾವ ಮಾರ್ಗದಲ್ಲಿ ಸಾಗಬೇಕು ಎಂಬುದನ್ನು ತಿಳಿಸಿ ಕೊಡುವುದು ಗುರುಗಳ ಕರ್ತವ್ಯವಾಗಿದೆ. ಆ ರೀತಿ ಧಾರ್ಮಿಕ ವಿಚಾರವಲ್ಲದೆ ಸಮಾಜದಲ್ಲಿ ಕೈಗೊಳ್ಳಬೇಕಾದ ಧನಾತ್ಮಕ ಚಟುವಟಿಕೆಗಳಿಗೆ ಸ್ವರ್ಣವಲ್ಲೀ ಶ್ರೀಗಳು ಪ್ರೇರಣೆಯಾಗಿದ್ದಾರೆ ಎಂದು ಹೇಳಿದರು.

ಸಭಾ ಕಾರ್ಯಕ್ರಮದ ಸಾನ್ನಿಧ್ಯವಹಿಸಿ ಆಶೀರ್ವದಿಸಿದ ಸ್ವರ್ಣವಲ್ಲೀ ಮಠದ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ, ಧರ್ಮದಲ್ಲಿ ಜ್ಞಾನ ವೈರಾಗ್ಯ ಹಾಗೂ ಭಕ್ತಿ ವೈರಾಗ್ಯಕ್ಕೆ ವಿಶೇಷ ಸ್ಥಾನವಿದೆ. ಇವೆರಡೂ ಕೂಡಿದ ಮೇರು ವ್ಯಕ್ತಿತ್ವ ವೇದವ್ಯಾಸರಾಗಿದ್ದಾರೆ. ಅಂಥವರ ಪೂಜೆಯೊಂದಿಗೆ ಅವರು ನಡೆದ ಮಾರ್ಗದಲ್ಲಿ ನಡೆಯಲು ಪ್ರಯತ್ನಿಸುವ ಉದ್ದೇಶದಿಂದ ಚಾತುರ್ಮಾಸ್ಯ ವೃತ ಸಂಕಲ್ಪ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಶಿಕ್ಷಣದಲ್ಲಿ ಎಲ್ಲ ವಿಷಯಗಳೂ ಬೇಕು. ಹಾಗಾದರೆ ಮಾತ್ರ ಸರ್ವತೋಮುಖ ಅಭಿವೃದ್ಧಿ ಸಾಧ್ಯ. ಪ್ರತಿ ಭಾಷೆಗೂ ಅದರದ್ದೇ ಆದ ಇತಿಹಾಸ, ಸಂಸ್ಕೃತಿ ಇದೆ. ಇವೆಲ್ಲ ಭಾಷೆಗಳಿಗೂ ಸಂಸ್ಕೃತ ಮಾತೃ ಭಾಷೆಯಾಗಿದೆ. ಈ ನಿಟ್ಟಿನಲ್ಲಿ ಸಂಸ್ಕೃತ ಭಾಷೆ ವಿಸ್ತಾರವಾಗಬೇಕು ಎಂದರು.

ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಶಂಭುಲಿಂಗ ಹೆಗಡೆ ನಡಗೋಡ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವೈದ್ಯ ನಾಡೋಜ ಕೃಷ್ಣ ಪ್ರಸಾದ ಕೂಡ್ಲ ಅವರನ್ನು ಶ್ರೀಗಳು ಈ ಕಾರ್ಯಕ್ರಮದಲ್ಲಿ ಸನ್ಮಾನಿಸಿದರು. ಇದೇ ವೇಳೆ ಹಿತ್ಲಳ್ಳಿ ಸೂರ್ಯನಾರಾಯಣ ಭಟ್ಟ ಬರೆದ ಗಣೇಶ ಮಾನಸಪೂಜಾ, ಮಹಾಬಲೇಶ್ವರ ಭಟ್ಟ ಬಾಸಲ ಬರೆದ ಸತ್ಯ ವಿನಾಯಕ ವ್ರತ ಹಾಗೂ ಪ್ರೊ.ಎಂ.ಆರ್.ನಾಗರಾಜ ಬರೆದ ಅದ್ವೈತ ನಿಷ್ಠೆ ಹಾಗೂ ಅನುಷ್ಠಾನ ಗ್ರಂಥಗಳನ್ನು ಲೋಕಾರ್ಪಣೆ ಮಾಡಲಾಯಿತು.

ಇದನ್ನೂ ಓದಿ | Chaturmas 2022 | ಯಾವ ಯತಿವರ್ಯರ ಚಾತುರ್ಮಾಸ್ಯ ವ್ರತಾಚರಣೆ ಎಲ್ಲಿ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka Rain : ಒಂದೇ ಮಳೆಗೆ ಬೆಂಗಳೂರಿನ ಹಲವು ಏರಿಯಾಗಳು ಸಣ್ಣ ದ್ವೀಪದಂತಾಗಿದೆ. ಚಿಕ್ಕಮಗಳೂರಿನ ಕಳಸದಲ್ಲೂ ಮಳೆಯು ಅಬ್ಬರಿಸುತ್ತಿದೆ. ಹಲವೆಡೆ ಮಳೆಯಿಂದ ಅವಘಡ ಮುಂದುವರಿದಿದೆ.

VISTARANEWS.COM


on

By

Karnataka Rain
Koo

ಬೆಂಗಳೂರು/ಚಿಕ್ಕಮಗಳೂರು: ಬೆಂಗಳೂರಿನಲ್ಲಿ ಗಂಟೆ ಕಾಲ ಸುರಿದ ಮಳೆಗೆ (Karnataka Rain) ರಸ್ತೆಗಳೆಲ್ಲವೂ ಹೊಳೆಯಂತಾಗಿದೆ. ರಾಜಕಾಲುವೆಯಿಂದ ಯಲಹಂಕ ನಿವಾಸಿಗಳಿಗೆ ನಿತ್ಯ ಸಂಕಷ್ಟ ಎದುರಿಸುವಂತಾಗಿದೆ. ನಿನ್ನೆ ಶನಿವಾರ ರಾತ್ರಿ ಸುರಿದ ಮಳೆಗೆ ಇಡೀ ಏರಿಯಾ ಜಲಾವೃತಗೊಂಡಿದೆ.

karnataka rain

ಯಲಹಂಕದ ನಾರ್ಥ್‌ ಹುಡ್ ಅಪಾರ್ಟ್‌ಮೆಂಟ್ ಸುತ್ತಮುತ್ತ ನೀರು ತುಂಬಿ ಅವಾಂತರವೇ ಸೃಷ್ಟಿಯಾಗಿದೆ. ಕಳೆದ ಒಂದು ವಾರದಿಂದ ರಾಜಕಾಲುವೆಯಿಂದ ನೀರು ಹರಿಯುತ್ತಿದೆ. ಸ್ಟಾರ್ಮ್ ವಾಟರ್ ಡ್ರೇನ್ ಓಪನ್ ಬಿಟ್ಟಿರುವುದರಿಂದ ಈ ಸಮಸ್ಯೆ ಆಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇನ್ನೂ ರಾಜಕಾಲುವೆ ನೀರಿನ ವಾಸನೆಗೆ ನಿವಾಸಿಗಳು ಕಂಗಾಲಾಗಿದ್ದಾರೆ. ಗಬ್ಬು ವಾಸನೆ ತಾಳಲಾರದೇ ಕೆಲ ನಿವಾಸಿಗಳು ಮನೆ ಖಾಲಿ ಮಾಡಿದ್ದಾರೆ. ರಾತ್ರಿಯಿಂದಲೂ ಮೋಟಾರ್‌ ಮೂಲಕ ನೀರು ಹೊರಹಾಕುತ್ತಿದ್ದಾರೆ. ಸುತ್ತಮುತ್ತಲಿನ ಐದಾರು ಅಪಾರ್ಟ್ ಮೆಂಟ್ ನಿವಾಸಿಗಳಿಗೆ ಸಂಕಷ್ಟ ಎದುರಾಗಿದೆ. ವಾರದ ಹಿಂದೆ ಬಿಬಿಎಂಪಿಗೆ ಪತ್ರ ಬರೆದರೂ ಯಾವುದೇ ಪ್ರಯೋಜವಿಲ್ಲ ಎಂದು ಕಿಡಿಕಾರಿದ್ದಾರೆ. ರಾಜಕಾಲುವೆಯಿಂದ ನೀರು ತುಂಬಿ 22 ಮನೆಗಳ ನಿವಾಸಿಗಳು ಪರದಾಡುತ್ತಿದ್ದಾರೆ. ಪಕ್ಕದಲ್ಲಿರುವ ಪುಟ್ಟೇನಹಳ್ಳಿ ಕೆರೆಗೆ ನೀರು ಹರಿಯದೇ ಇರುವುದರಿಂದ ಆ ನೀರು ಕೂಡ ಸೇರುತ್ತಿದೆ. ರಾಜಕಾಲುವೆ, ಮಳೆ ನೀರು ಸೇರಿ ಇಡೀ ಏರಿಯಾ ಕೆರೆಯಂತಾಗಿದೆ.

ಇದನ್ನೂ ಓದಿ: Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ಕಳಸ ತಾಲೂಕಿನಾದ್ಯಂತ ಧಾರಾಕಾರ ಮಳೆ

ಕಾಫಿನಾಡು ಮಲೆನಾಡಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಭಾರೀ ಗಾಳಿ-ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಕಳಸ ತಾಲೂಕಿನಾದ್ಯಂತ ಧಾರಾಕಾರ ಮಳೆಗೆ ಕಳಸ ದೇವಸ್ಥಾನದ ಎತ್ತರದ ಪ್ರದೇಶದಿಂದ ನೀರು ಹರಿಯುತ್ತಿದೆ. ದಕ್ಷಿಣ ಕಾಶಿ ಕಳಸೇಶ್ವರ ಸ್ವಾಮಿ ದೇವಸ್ಥಾನದ ಮೆಟ್ಟಿಲು ಮೇಲಿಂದ ನೀರು ಹರಿಯುತ್ತಿದೆ. ಇತ್ತ ಮೆಟ್ಟಿಲ ಮೇಲೆ ನಿಂತು ಮಳೆ ನೀರಲ್ಲಿ ಮಕ್ಕಳು ಆಟವಾಡುತ್ತಿರುವ ದೃಶ್ಯ ಕಂಡು ಬಂತು. ಗಾಳಿ-ಮಳೆಗೆ ಮರ ಬಿದ್ದು ಗ್ರಾಮೀಣ ಭಾಗದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಕುದುರೆಮುಖ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಭದ್ರಾ ನದಿ ಒಳಹರಿವಿನಲ್ಲಿ ನೀರಿನ ಪ್ರಮಾಣ ಹೆಚ್ಚಳಗೊಂಡಿದೆ.

karnataka rain

ಕೊಪ್ಪಳದಲ್ಲೂ ಮುಂಗಾರು ಪೂರ್ವ ಮಳೆ

ಕೊಪ್ಪಳದಲ್ಲಿ ಭಾನುವಾರ ಮುಂಗಾರು ಪೂರ್ವ ಮಳೆ ಆರಂಭವಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ ಮೂರು ದಿನಗಳಿಂದ ಆಗಾಗ ಮಳೆ ಸುರಿಯುತ್ತಿದೆ. ನಿನ್ನೆ ಶನಿವಾರ ಸಂಜೆ ಸುರಿದಿದ್ದ ಮಳೆಯು ಭಾನುವಾರ ಬೆಳಗಿನವರೆಗೆ ಬಿಡುವು ಕೊಟ್ಟಿತ್ತು. ಮಧ್ಯಾಹ್ನದ ನಂತರ ಧೋ ಎಂದು ಗುಡುಗು ಸಹಿತ ಮಳೆ ಸುರಿಯುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain : ಭಾನುವಾರದ ವೀಕೆಂಡ್‌ ಮೂಡ್‌ನಲ್ಲಿದ್ದವರಿಗೆ ಮಳೆಯು ಮನೆಯಲ್ಲೇ ಕೂರುವಂತೆ ಮಾಡಿದೆ. ಬೆಂಗಳೂರು, ಆನೇಕಲ್‌ ಸೇರಿದಂತೆ ವಿವಿಧೆಡೆ ಮಳೆಯಾಗುತ್ತಿದ್ದು, ವಿಜಯನಗರದಲ್ಲಿ ಸಿಡಿಲು ಬಡಿದು ಎರಡು ಜಾನುವಾರು ಮೃತಪಟ್ಟಿವೆ. ದಾವಣಗೆರೆಯಲ್ಲಿ ಮಳೆಗೆ ಬೆಳೆಯು ಕೊಚ್ಚಿ ಹೋಗಿದೆ.

VISTARANEWS.COM


on

By

Karnataka rain
Koo

ವಿಜಯನಗರ/ಬೆಂಗಳೂರು: ರಾಜ್ಯಾದ್ಯಂತ ಭಾನುವಾರ ಹಲವೆಡೆ ಗುಡುಗು ಸಹಿತ ಮಳೆ (Karnataka Rain) ಅಬ್ಬರಿಸಿದೆ. ವಿಜಯನಗರ ಜಿಲ್ಲೆಯಲ್ಲಿ ಅರ್ಧ ಗಂಟೆಗೂ ಅಧಿಕ ಸಮಯ ಗುಡುಗು, ಸಿಡಿಲು ಸಹಿತ ಮಳೆ ಸುರಿದಿದೆ. ಹೊಸಪೇಟೆ ತಾಲೂಕಿನ ಗಾದಿಗನೂರು ಗ್ರಾಮದಲ್ಲಿ ಸಿಡಿಲು ಬಡಿದು ಎರಡು ಜಾನುವಾರುಗಳು ಮೃತಪಟ್ಟಿವೆ. ಕೋರಿ ಮಲಿಯಪ್ಪ ಎಂಬ ರೈತರಿಗೆ ಸೇರಿದ ಎತ್ತುಗಳನ್ನು ಹೊಲದಲ್ಲಿ ಮರದಡಿ ಕಟ್ಟಿ ಹಾಕಿದ್ದರು. ಈ ವೇಳೆ ಸಿಡಿಲು ಬಡಿದು ಎರಡು ಎತ್ತುಗಳು ಮೃತಪಟ್ಟಿವೆ. ಅಂದಾಜು ಒಂದು ಲಕ್ಷಕ್ಕೂ ಅಧಿಕ ಮೌಲ್ಯದ ಎತ್ತುಗಳು ಸಾವನ್ನಪ್ಪಿದ್ದರಿಂದ ರೈತ ಕೋರಿ ಮಲಿಯಪ್ಪ ಕಂಗಲಾಗಿದ್ದಾರೆ.

ಬೆಂಗಳೂರು, ಆನೇಕಲ್‌ನಲ್ಲಿ ಗುಡುಗು ಸಹಿತ ಮಳೆ

ರಾಜಧಾನಿ ಬೆಂಗಳೂರಿನಲ್ಲಿ ಮಳೆ ಮುಂದುವರಿದಿದೆ. ಸಂಜೆಗೆ ಆವರಿಸುತ್ತಿದ್ದ ಮಳೆ ಭಾನುವಾರ ಬೆಳಗಿನಿಂದಲೇ ಅಬ್ಬರಿಸುತ್ತಿದೆ. ಎಂಎಸ್ ಬಿಲ್ಡಿಂಗ್ , ವಿಧಾನಸೌಧ , ಶಿವಾನಂದ ಸರ್ಕಲ್, ಶಿವಾಜಿನಗರ ಸೇರಿದಂತೆ ಮೆಜೆಸ್ಟಿಕ್‌ ಸುತ್ತಮುತ್ತ ಮಧ್ಯಾಹ್ನ ಶುರುವಾದ ಮಳೆಯು ಸುಮಾರು 1 ಗಂಟೆಗೂ ಹೆಚ್ಚು ಸಮಯ ಆವರಿಸಿತ್ತು. ಆಗಾಗ ಬರುತ್ತಿದ್ದ ಗುಡುಗು ಜನರನ್ನು ಬೆಚ್ಚಿ ಬೀಳಿಸುತ್ತಿತ್ತು. ಕೆ.ಆರ್ ಸರ್ಕಲ್, ಕಬ್ಬನ್ ಪಾರ್ಕ್ ರಸ್ತೆ, ಲಾಲ್ ಬಾಗ್ ರಸ್ತೆ, ರಾಜಾಜಿನಗರ, ರಾಜಕುಮಾರ್ ರಸ್ತೆಯಲ್ಲಿಯೂ ಮಳೆಯಾಗಿದೆ. ಯಲಹಂಕ, ನ್ಯೂ ಟೌನ್, ದೊಡ್ಡಬಳ್ಳಾಪುರ ಮುಖ್ಯರಸ್ತೆ, ಪುಟ್ಟೇನಹಳ್ಳಿ, ಏರ್‌ಪೋರ್ಟ್‌ ರೋಡ್‌ನಲ್ಲಿ ಮಳೆಯಾಗಿದೆ.

ಇತ್ತ ಆನೇಕಲ್ ಭಾಗದಲ್ಲೂ ಧಾರಾಕಾರ ಮಳೆಯಾಗಿತ್ತು. ಭಾನುವಾರ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ನದ ವೇಳೆಗೆ ಆಗಮಿಸಿದ ಮಳೆಯು ಆನೇಕಲ್, ಅತ್ತಿಬೆಲೆ, ಸರ್ಜಾಪುರ ಭಾಗದಲ್ಲಿ ಅಬ್ಬರಿಸಿತ್ತು. ಕಳೆದೊಂದು ವಾರದಿಂದ ನಿರಂತರ ಮಳೆಯಿಂದಾಗಿ ಕೃಷಿ ಚಟುವಟಿಕೆ ಚುರುಕುಗೊಂಡಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ಧಾರವಾಡದಲ್ಲೂ ಮಳೆ

ಪೇಡಾನಗರಿ ಧಾರವಾಡದಲ್ಲೂ ವರುಣನ ಅಬ್ಬರ ಮುಂದುವರಿದಿದೆ. ಮಧ್ಯಾಹ್ನದ ವೇಳೆ ಶುರುವಾದ ಮಳೆಯಿಂದಾಗಿ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಮಳೆಯಿಂದಾಗಿ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ವಿಜಯನಗರದಲ್ಲಿ ಮರಕ್ಕೆ ಬಡಿದ ಸಿಡಿಲು

ವಿಜಯನಗರದಲ್ಲಿ ಗುಡುಗು ಸಿಡಿಲು ಸಮೇತ ಮಳೆಯಾಗುತ್ತಿದ್ದು, ತೆಂಗಿನ ಮರಕ್ಕೆ ಸಿಡಿಲು ಬಡಿದಿದೆ. ಹೊಸಪೇಟೆ ತಾಲೂಕಿನ ಕೆರೆ ತಾಂಡಾ ಗ್ರಾಮದಲ್ಲಿ ಮರಕ್ಕೆ ಸಿಡಿಲು ಬಡಿದಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆ, ಕಮಲಾಪುರ, ಹಂಪಿ ಭಾಗದಲ್ಲಿ ಉತ್ತಮ ಮಳೆಯಾಗಿದೆ. ಇತ್ತ ಹೊಸಪೇಟೆ ಹೃದಯ ಭಾಗದಲ್ಲಿ ರಸ್ತೆ ಮೇಲೆ ನೀರು ನಿಂತು ಅವಾಂತರವೇ ಸೃಷ್ಟಿಯಾಗಿತ್ತು. ನೂರು ಹಾಸಿಗೆ ಆಸ್ಪತ್ರೆ, VNC ಕಾಲೇಜಿಗೆ ಹೋಗುವ ರಸ್ತೆ ಮೇಲೆ ನೀರು ನಿಂತಿತ್ತು. ಕೆಲ ಸಮಯ ವಾಹನಗಳ ಸಂಚಾರ ಅಡಚಣೆ ಉಂಟಾಯಿತು

ಇದನ್ನೂ ಓದಿ: Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ದಾವಣಗೆರೆಯಲ್ಲಿ ನೆಲ ಕಚ್ಚಿದ ಬೆಳೆ

ಶನಿವಾರ ಸುರಿದ ಮಳೆಯಿಂದ ಭತ್ತದ ಬೆಳೆ‌ಯು ನೆಲ ಕಚ್ಚಿದೆ. ದಾವಣಗೆರೆಯ ದೊಡ್ಡಬಾತಿ ಗ್ರಾಮದ ಸುತ್ತಮುತ್ತಲಿನ 20ಕ್ಕೂ ಹೆಚ್ಚು ಎಕರೆ ಭತ್ತದ ಬೆಳೆ ನಾಶವಾಗಿದೆ. ಉಮೇಶ್ ಎಂಬ ಯುವ ರೈತ ಬೆಳೆದಿದ್ದ ಎರಡು ಎಕರೆ ಭತ್ತ ಸಂಪೂರ್ಣ ನಾಶವಾಗಿತ್ತು. ಬರಗಾಲದ ಸಂದರ್ಭದಲ್ಲಿ ಬೋರ್ ವೆಲ್ ನೀರಿನಲ್ಲಿ ಭತ್ತ ಬೆಳೆ ಬೆಳೆದಿದ್ದರು. ಎಕರೆಗೆ 25 ರಿಂದ 30 ಸಾವಿರ ಖರ್ಚು ಮಾಡಿ ಬೆಳೆದಿದ್ದ ಬೆಳೆಯು ರಾತ್ರಿ ಸುರಿದ ಮಳೆಗೆ ಸಂಪೂರ್ಣ ನಾಶವಾಗಿದೆ. ಮಳೆ ಬಾರದೇ ಕಷ್ಟ ಅನುಭವಿಸಿದ ರೈತರಿಗೆ ಈಗ ಮಳೆ ಬಂದು ಗಾಯದ ಮೇಲೆ ಬರೆ ಎಳೆದಂತಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ; ಆರೆಂಜ್‌, ಯೆಲ್ಲೋ ಎಚ್ಚರಿಕೆ

Karnataka Weather Forecast : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಆರೆಂಜ್‌ ಹಾಗೂ ಯೆಲ್ಲೋ ಅಲರ್ಟ್‌ ನೀಡಲಾಗಿದೆ. 50 ಕಿ.ಮೀ ವ್ಯಾಪ್ತಿಯಲ್ಲಿ ಬಿರುಗಾಳಿ ಬೀಸಲಿದ್ದು, ಮರದಡಿ ನಿಲ್ಲದಂತೆ ಎಚ್ಚರಿಕೆ ನೀಡಲಾಗಿದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು ಗಾಳಿಯು ಗಂಟೆಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ (Karnataka Weather Forecast) ಬೀಸಲಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ವ್ಯಾಪ್ತಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 31 ಮತ್ತು 22 ಡಿ.ಸೆ ಇರಲಿದೆ.

ಉತ್ತರ ಒಳನಾಡಿನ ಬಳ್ಳಾರಿ, ವಿಜಯನಗರ, ಹಾವೇರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಹಗುರದಿಂದ ಹಗುರವಾದ ಮಳೆಯಾಗಲಿದೆ.

ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ ಇದ್ದು, ಶಿವಮೊಗ್ಗ ಜಿಲ್ಲೆಯಾದ್ಯಂತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡದಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುತ್ತದೆ.

ಇದನ್ನೂ ಓದಿ: Anjali Murder Case: ನನ್ನ ಮಗ ಮಾಡಿದ್ದು ತಪ್ಪು, ಕೋರ್ಟ್ ಅವನಿಗೆ ಯಾವ ಶಿಕ್ಷೆಯಾದ್ರೂ ಕೊಡಲಿ: ಆರೋಪಿ ಗಿರೀಶ್ ತಾಯಿ

ಆರೆಂಜ್‌, ಯೆಲ್ಲೋ ಅಲರ್ಟ್‌

ಚಿತ್ರದುರ್ಗ, ಹಾಸನ, ಕೊಡಗು ಮತ್ತು ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಭಾರೀ ಮಳೆಯೊಂದಿಗೆ ಗುಡುಗು, ಬಿರುಗಾಳಿಯು ಗಂಟೆಗೆ 30-40 ಕಿ.ಮೀ ಬೀಸಲಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ಶಿವಮೊಗ್ಗದಲ್ಲೂ ವ್ಯಾಪಕ ಮಳೆಯಾಗಲಿದೆ. ಹೀಗಾಗಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Rain News: ಬನವಾಸಿಯಲ್ಲಿ ಆಟವಾಡುತ್ತಿದ್ದ ಬಾಲಕ ಸಿಡಿಲು ಬಡಿದು ಸಾವು; ಚಿಕ್ಕಮಗಳೂರು, ಹಾಸನದಲ್ಲಿ ಮಳೆ ಅವಾಂತರ

Rain News: ಬನವಾಸಿಯ ಜಯಂತಿ ಪ್ರೌಢಶಾಲಾ ಮೈದಾನದಲ್ಲಿ ಗೆಳೆಯರೊಂದಿಗೆ ಆಟವಾಡುತ್ತಿದ್ದಾಗ ಬಿರುಗಾಳಿ ಸಹಿತ ಭಾರಿ ಮಳೆ ಬರುತ್ತಿತ್ತು. ಈ ವೇಳೆ ಸಿಡಿಲು ಬಡಿದಿದ್ದು, ಆಸ್ಪಕ್‌ ಅಲಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಆಸ್ಪಕ್‌ನು ಬನವಾಸಿಯ ಮೀನು ಮಾರುಕಟ್ಟೆ ನಿವಾಸಿಯಾಗಿದ್ದಾನೆ. ಬಾಲಕನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಬನವಾಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇನ್ನು ಚಿಕ್ಕಮಗಳೂರು ಹಾಗೂ ಹಾಸನದಲ್ಲಿಯೂ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ.

VISTARANEWS.COM


on

Rain News Boy dies after being struck by lightning in Banavasi Heavy rains lash Chikkamagaluru and Hassan
ಮೃತ ಆಸ್ಪಕ್ ಅಲಿ
Koo

ಕಾರವಾರ/ಬೆಂಗಳೂರು: ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ (Rain News) ಆಗುತ್ತಿದ್ದು, ಸಾಕಷ್ಟು ಹಾನಿಯನ್ನುಂಟು ಮಾಡಿದೆ. ಇನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿಯಲ್ಲಿ ಬಾಲಕನೊಬ್ಬ ಆಟ ಆಡುತ್ತಿದ್ದಾಗ ಸಿಡಿಲು ಬಡಿದು ಮೃತಪಟ್ಟಿದ್ದಾನೆ. ಇನ್ನು ಚಿಕ್ಕಮಗಳೂರು ಹಾಗೂ ಹಾಸನದಲ್ಲಿಯೂ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಅಲ್ಲದೆ, ಭಾನುವಾರ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಗುಡುಗು – ಸಿಡಿಲು ಸಹಿತ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಹೆಚಿದೆ ಎಂದು ಹವಾಮಾನ ಇಲಾಖೆ ತನ್ನ ಮುನ್ಸೂಚನಾ ವರದಿಯಲ್ಲಿ (Karnataka Weather Forecast Report) ಹೇಳಿದೆ.

ಬನವಾಸಿಯ ಜಯಂತಿ ಪ್ರೌಢಶಾಲಾ ಮೈದಾನದಲ್ಲಿ ಬಾಲಕನೊಬ್ಬ ಆಟವಾಡುವಾಗ ಸಿಡಿಲು ಬಡಿದು ಮೃತಪಟ್ಟಿದ್ದಾನೆ. ಆಸ್ಪಕ್ ಅಲಿ (16) ಮೃತ ದುರ್ದೈವಿ.

ಬನವಾಸಿಯ ಜಯಂತಿ ಪ್ರೌಢಶಾಲಾ ಮೈದಾನದಲ್ಲಿ ಗೆಳೆಯರೊಂದಿಗೆ ಆಟವಾಡುತ್ತಿದ್ದಾಗ ಬಿರುಗಾಳಿ ಸಹಿತ ಭಾರಿ ಮಳೆ ಬರುತ್ತಿತ್ತು. ಈ ವೇಳೆ ಸಿಡಿಲು ಬಡಿದಿದ್ದು, ಆಸ್ಪಕ್‌ ಅಲಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಆಸ್ಪಕ್‌ನು ಬನವಾಸಿಯ ಮೀನು ಮಾರುಕಟ್ಟೆ ನಿವಾಸಿಯಾಗಿದ್ದಾನೆ. ಬಾಲಕನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಬನವಾಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚಿಕ್ಕಮಗಳೂರಲ್ಲೂ ಭಾರಿ ಮಳೆ

ಚಿಕ್ಕಮಗಳೂರಿನಲ್ಲಿ ಮಳೆ (Rain News) ಆರ್ಭಟ ಮುಂದುವರಿದಿದೆ. ರಾತ್ರಿಯಿಡೀ ಜಿಲ್ಲೆಯ ಹಲವೆಡೆ ಭಾರಿ ಮಳೆಯಾಗಿದ್ದು, ಹಳ್ಳ ಕೊಳ್ಳಗಳು ಉಕ್ಕಿ ಹರಿದಿವೆ. ಕಳಸಾ ಪುರ, ಗಾಳಿ ಹಳ್ಳಿ, ಮಾಗಡಿ, ಬೆಳವಾಡಿ, ಲಕ್ಯಾ, ಸಿಂದಿಗೆರೆ ಭಾಗದಲ್ಲಿ ಭಾರಿ ಮಳೆಯಾಗಿದೆ. ರಸ್ತೆ, ಸೇತುವೆ ಮೇಲೆ ನದಿಯಂತೆ ನೀರು ಹರಿದಿದೆ. ಸುತ್ತಮುತ್ತಲಿನ ತೋಟ, ಗದ್ದೆಗಳು ಸಂಪೂರ್ಣ ಜಲಾವೃತಗೊಂಡಿವೆ. ಕೆರೆಗಳು ಸಂಪೂರ್ಣ ತುಂಬುವ ಹಂತ ತಲುಪಿದೆ. ಚಿಕ್ಕಮಗಳೂರು ತಾಲೂಕಿನ ಐತಿಹಾಸಿಕ ಮಾಗಡಿ ದೊಡ್ಡ ಕೆರೆಗೂ ಭಾರಿ ಪ್ರಮಾಣ ನೀರು ಹರಿದಿದೆ.

ಹಾಸನದಲ್ಲಿ ಸುರಿದ ಧಾರಾಕಾರ ಮಳೆ

ಹಾಸನ ನಗರದ ಹಲವೆಡೆ ಬಿಟ್ಟು ಬಿಡದೆ ಧಾರಾಕಾರವಾಗಿ ಮಳೆ ಸುರಿದಿದೆ. ಶನಿವಾರ ಕಳೆದೊಂದು ಗಂಟೆಯಿಂದ ಹಲವೆಡೆ ಮಳೆ ಆರ್ಭಟಿಸಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು. ಭಾರಿ ಮಳೆಗೆ ಹಾಸನ ನಗರದಲ್ಲಿ ಪಾದಚಾರಿಗಳು ವಾಹನ ಸವಾರರು ಪರದಾಡಿದರು. ಚನ್ನರಾಯಪಟ್ಟಣ, ಹೊಳೆನರಸೀಪುರ, ಸಕಲೇಶಪುರ, ಆಲೂರು ಭಾಗಗಳಲ್ಲೂ ಮಳೆಯಾಗಿದೆ.

ತುಮಕೂರಿನಲ್ಲಿ ಗುಡುಗು ಸಹಿತ ಮಳೆ

ಶನಿವಾರ ಸಂಜೆಯಾಗುತ್ತಿದ್ದಂತೆ ತುಮಕೂರಿನಲ್ಲಿ ವರುಣನ ಆರ್ಭಟ ಜೋರಾಗಿತ್ತು. ಗುಡುಗು, ಸಿಡಿಲು, ಬಿರುಗಾಳಿ ಸಹಿತ ಮಳೆಯಾಗಿದೆ. ತುಮಕೂರು ನಗರ, ಗ್ರಾಮಾಂತರ, ಗುಬ್ಬಿ ಸೇರಿದಂತೆ ಜಿಲ್ಲೆಯ ಹಲವೆಡೆ ಭಾರಿ ಮಳೆಯಾಗಿದೆ. ತುಮಕೂರು ನಗರದ ರಸ್ತೆ ಮೇಲೆ ಹಳ್ಳದಂತೆ ಹರಿಯುತ್ತಿರುವ ನೀರಿನಿಂದಾಗಿ ವಾಹನ ಸವಾರರ ಪರದಾಡಬೇಕಾಯಿತು. ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಿದೆ.

ಇದನ್ನೂ ಓದಿ: Koppal Tragedy : ಶೌಚಾಲಯದ ಗೋಡೆ ಕುಸಿದು ಮಹಿಳೆಯರಿಬ್ಬರು ಸಾವು; ಈಜಲು ಹೋದ ಯುವಕ ನೀರುಪಾಲು

ಭಾನುವಾರವೂ ಇರಲಿದೆ ಮಳೆ ಮೋಡಿ

ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಒಂದು ಅಥವಾ ಸ್ಥಳಗಳಲ್ಲಿ ಭಾರೀ ಗಾಳಿಯೊಂದಿಗೆ (40-50 kmph) ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ ಜಿಲ್ಲೆಗಳ ಒಂದು ಅಥವಾ ಸ್ಥಳಗಳಲ್ಲಿ ಮಳೆಯು ಅಬ್ಬರಿಸಲಿದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಜೋರಾದ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗಲಿದೆ.

ಉತ್ತರ ಒಳನಾಡಿನ ಧಾರವಾಡ, ಹಾವೇರಿ ಜಿಲ್ಲೆಗಳ ಕೆಲವೆಡೆ ಬಿರುಗಾಳಿ (30-40 kmph) ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 kmph) ಹಗುರ ಮಳೆಯಾಗುವ ಸಾಧ್ಯತೆಯಿದೆ.

Continue Reading
Advertisement
R Ashok
ರಾಜಕೀಯ20 mins ago

R Ashok: ರಾಜ್ಯದಲ್ಲಿ ಮಳೆಗಿಂತ ಹೆಚ್ಚಾಗಿ ಕೊಲೆಗಳೇ ನಡೆಯುತ್ತಿವೆ: ಆರ್‌.ಅಶೋಕ್‌ ಕಿಡಿ

Thailand Open 2024
ಬ್ಯಾಡ್ಮಿಂಟನ್40 mins ago

Thailand Open 2024: ಥಾಯ್ಲೆಂಡ್‌ ಓಪನ್‌ ಗೆದ್ದ ಭಾರತದ ಚಿರಾಗ್‌-ಸಾತ್ವಿಕ್‌ ಜೋಡಿ

Prajwal Revanna Case
ಕರ್ನಾಟಕ44 mins ago

Prajwal Revanna Case: ಪೆನ್‌ಡ್ರೈವ್‌ ಕೇಸ್‌ಗೆ ಟ್ವಿಸ್ಟ್;‌ ದೇವರಾಜೇಗೌಡ, ಡಿಕೆಶಿ ಆಡಿಯೊ ಬಯಲು, ಇಲ್ಲಿದೆ ಸ್ಫೋಟಕ ಮಾಹಿತಿ

Money Guide
ಮನಿ-ಗೈಡ್53 mins ago

Money Guide: ಪ್ಯಾನ್‌ ಕಾರ್ಡ್‌ ಇಲ್ಲದೆಯೂ ಸಿಬಿಲ್‌ ಸ್ಕೋರ್‌ ಪರಿಶೀಲಿಸಬೇಕೆ? ಈ ಟಿಪ್ಸ್‌ ಫಾಲೋ ಮಾಡಿ

Road Accident
ಕ್ರೈಂ57 mins ago

Road Accident: ಬೆಂಗಳೂರು, ಗದಗದಲ್ಲಿ ಸರಣಿ ಅಪಘಾತ; ಗ್ಯಾಸ್ ಟ್ಯಾಂಕರ್ ಸ್ಫೋಟಕ್ಕೆ ಮನೆಗಳೇ ಭಸ್ಮ

Janhvi Kapoor felt sexualised at the age of 12
ಬಾಲಿವುಡ್1 hour ago

Janhvi Kapoor: 12ನೇ ವಯಸ್ಸಿನಲ್ಲಿಯೇ ಅಶ್ಲೀಲ ವೆಬ್‌ಸೈಟ್‌ನಲ್ಲಿ ನನ್ನ ಫೋಟೊ ಅಪ್‌ಲೋಡ್‌ ಆಗಿತ್ತು ಎಂದ ಶ್ರೀದೇವಿ ಮಗಳು!

Kundapur News
ಕರ್ನಾಟಕ1 hour ago

Kundapur News: ಅನಾರೋಗ್ಯದಿಂದ ತಾಯಿ ಸಾವು, ಶವದ ಜತೆ 4 ದಿನ ಕಳೆದ ಬುದ್ಧಿಮಾಂದ್ಯ ಪುತ್ರಿಯೂ ಮೃತ್ಯು!

RCB vs CSK
ಕ್ರಿಕೆಟ್1 hour ago

RCB vs CSK: ಧೋನಿ ವರ್ತನೆಗೆ ‘ಇಟ್‌ ಹರ್ಟ್ಸ್‌​’ ಎಂದ ಆರ್​ಸಿಬಿ ಅಭಿಮಾನಿಗಳು; ಧೋನಿ ಮಾಡಿದ ತಪ್ಪೇನು?

Congress Manifesto
ದೇಶ1 hour ago

Congress Manifesto: ಕಾಂಗ್ರೆಸ್‌ ಪ್ರಣಾಳಿಕೆ ಬಗ್ಗೆ ಅಪಪ್ರಚಾರ; ವ್ಯಕ್ತಿ ಅರೆಸ್ಟ್‌-ಬಿಜೆಪಿ ಕಿಡಿ

Prajwal Revanna Case
ಕರ್ನಾಟಕ2 hours ago

Prajwal Revanna Case: ಡಿಕೆಶಿ 100 ಕೋಟಿ ರೂ. ಆಫರ್;‌ ಬೆಂಕಿ ಇಲ್ಲದೆ ಹೊಗೆಯಾಡಲ್ಲ ಎಂದ ಆರ್.‌ ಅಶೋಕ್

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ2 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ4 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌