Congress politics : ಸಿಎಂ ಸಮರಕ್ಕೆ ಪರಂ ಎಂಟ್ರಿ; ಭೋಜನ ಹೆಸರಲ್ಲಿ ಡಿಕೆಶಿಗೆ ಸಿದ್ದರಾಮಯ್ಯ ಚೆಕ್‌ಮೇಟ್‌! - Vistara News

ಕರ್ನಾಟಕ

Congress politics : ಸಿಎಂ ಸಮರಕ್ಕೆ ಪರಂ ಎಂಟ್ರಿ; ಭೋಜನ ಹೆಸರಲ್ಲಿ ಡಿಕೆಶಿಗೆ ಸಿದ್ದರಾಮಯ್ಯ ಚೆಕ್‌ಮೇಟ್‌!

Congress politics : ಸಿಎಂ ಹುದ್ದೆಗೆ ಡಿ.ಕೆ. ಶಿವಕುಮಾರ್‌ ಅವರು ಮಂಡಿಸುತ್ತಿರುವ ಪಟ್ಟಿಗೆ ಪ್ರತಿಯಾಗಿ ಜಿ. ಪರಮೇಶ್ವರ್‌ ಅವರನ್ನು ದಾಳವಾಗಿ ಬಳಸಿದರಾ ಸಿಎಂ ಸಿದ್ದರಾಮಯ್ಯ? ಭೋಜನ ಕೂಟದ ರಹಸ್ಯವೇನು?

VISTARANEWS.COM


on

Siddaramaiah DK Shivakumar G Parameshwar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಅಧಿಕಾರ ಹಂಚಿಕೆ (power Sharing) ರಾಜಕೀಯ ಜೋರಾಗಿ ನಡೆಯುತ್ತಿದೆ. ಸಿಎಂ ಸಿದ್ದರಾಮಯ್ಯ (CM Siddaramaiah) ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar) ಪರಸ್ಪರ ಚೆನ್ನಾಗಿಯೇ ಇದ್ದರೂ ಒಳಗೊಳಗೆ ತಂತ್ರಗಳನ್ನು ಹೆಣೆಯುತ್ತಲೇ ಇದ್ದಾರೆ. ಡಿ.ಕೆ. ಶಿವಕುಮಾರ್‌ ಅವರು ಎರಡೂವರೆ ವರ್ಷದ ನಂತರ ಸಿಎಂ ಆಗೋದು ಹೇಗೆ ಎಂದು ಪ್ಲ್ಯಾನ್‌ ಮಾಡುತ್ತಿದ್ದರೆ ಸಿದ್ದರಾಮಯ್ಯ ಅವರು ಐದು ವರ್ಷವೂ ಅಧಿಕಾರ ಉಳಿಸಿಕೊಳ್ಳೋದು ಹೇಗೆ ಎಂದು ತಂತ್ರ ಹೆಣೆಯುತ್ತಿದ್ದಾರೆ. ಶುಕ್ರವಾರ ರಾತ್ರಿ ಗೃಹ ಸಚಿವ ಜಿ. ಪರಮೇಶ್ವರ್‌ ಅವರ ಮನೆಯಲ್ಲಿ ಭೋಜನ ಕೂಟವೊಂದು ನಡೆದಿದ್ದು, ಈ ಮೂಲಕ ಪರಮ್‌ ಅವರನ್ನು ಸಿಎಂ ಗಾದಿ (Chief Minister post) ಚದುರಂಗದಾಟದಲ್ಲಿ ಚೆಕ್‌ಮೇಟ್‌ ಆಗಿ ಬಳಸುವ ಆಟ ಶುರುವಾದಂತೆ (Congress Politics) ಕಾಣುತ್ತಿದೆ.

ಸಿದ್ದರಾಮಯ್ಯ ಅವರು ಮುಂದಿನ ಐದು ವರ್ಷ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಅವರ ಆಪ್ತ ಬಳಗದಲ್ಲಿರುವ ಡಾ.ಎಚ್‌.ಸಿ ಮಹದೇವಪ್ಪ, ಕೆ.ಎನ್‌. ರಾಜಣ್ಣ, ಸತೀಶ್‌ ಜಾರಕಿಹೊಳಿ ಮೊದಲಾದ ಪ್ರಭಾವಿಗಳು ಆಗಾಗ ಹೇಳುತ್ತಲೇ ಇರುತ್ತಾರೆ. ಕೆಲವು ಶಾಸಕರೂ ಧ್ವನಿ ಸೇರಿಸುತ್ತಾರೆ. ಇದರ ನಡುವೆ ಡಿ.ಕೆ ಶಿವಕುಮಾರ್‌ ಅವರ ಆಪ್ತ ಬಳಗಕ್ಕೆ ಸೇರಿದ ಕೆಲವು ಶಾಸಕರು ಎರಡೂವರೆ ವರ್ಷದ ಬಳಿಕ ಅಧಿಕಾರ ಹಂಚಿಕೆ ಸೂತ್ರ ಜಾರಿಗೆ ಬರಲಿದೆ ಎಂಬುದನ್ನು ಗಟ್ಟಿ ಧ್ವನಿಯಲ್ಲಿ ಹೇಳುತ್ತಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಅವರ ಆಕ್ಟಿವ್‌ ಆದಂತೆ ಕಾಣುತ್ತಿದೆ. ಡಿ.ಕೆ. ಶಿವಕುಮಾರ್‌ ಅವರ ಪರವಾಗಿ ಧ್ವನಿ ಇನ್ನಷ್ಟು ಗಟ್ಟಿಯಾಗುವುದಕ್ಕೆ ಮೊದಲೇ ಅದನ್ನು ತಡೆಯಬೇಕು ಎನ್ನುವ ಉದ್ದೇಶ ಅವರಿಗೆ ಇರುವಂತೆ ಕಾಣುತ್ತಿದೆ. ಪರಮೇಶ್ವರ್‌ ಅವರ ಮನೆಯಲ್ಲಿ ನಡೆದ ಭೋಜನ ಕೂಟ ಈ ನಿಟ್ಟಿನಲ್ಲಿ ಪ್ರಾಮುಖ್ಯತೆ ಪಡೆದಿದೆ.

ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಅವರು ಶುಕ್ರವಾರ ತಮ್ಮ ನಿವಾಸದಲ್ಲಿ ಭೋಜನ ಕೂಟ ಏರ್ಪಡಿಸಿದ್ದರು. ಇದರಲ್ಲಿ ಸಿದ್ದರಾಮಯ್ಯ, ಡಾ. ಎಚ್.ಸಿ. ಮಹದೇವಪ್ಪ, ಸತೀಶ್‌ ಜಾರಕಿಹೊಳಿ ಮತ್ತು ಇತರ ಕೆಲವು ಸಿದ್ದರಾಮಯ್ಯ ಆಪ್ತರು ಭಾಗಿಯಾಗಿದ್ದರು.

ನಿಜವೆಂದರೆ ಸಿದ್ದರಾಮಯ್ಯ ಮತ್ತು ಡಾ. ಜಿ. ಪರಮೇಶ್ವರ್‌ ಅವರ ನಡುವೆ ಕಳೆದ 10 ವರ್ಷಗಳಿಂದ ಸಂಬಂಧ ಅಷ್ಟೇನೂ ಚೆನ್ನಾಗಿರಲಿಲ್ಲ. 2013ರ ಚುನಾವಣೆಯಲ್ಲಿ ಕೊರಟಗೆರೆ ಕ್ಷೇತ್ರದಲ್ಲಿ ಪರಮೇಶ್ವರ್‌ ಅವರನ್ನು ಸಿದ್ದರಾಮಯ್ಯ ಅವರೇ ಸೋಲಿಸಿದರು ಎಂಬ ಆರೋಪವಿದೆ. ಗೆದ್ದರೆ ಸಿಎಂ ಹುದ್ದೆಗೆ ಪ್ರತಿಸ್ಪರ್ಧಿಯಾಗುತ್ತಾರೆ ಎಂಬ ಕಾರಣಕ್ಕಾಗಿ ಈ ತಂತ್ರ ಮಾಡಿದರು ಎಂದು ಹೇಳಲಾಗುತ್ತಿತ್ತು.

ಈ ಬಾರಿಯೂ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ ನಡುವೆ ಜಟಾಪಟಿ ಜೋರಾದರೆ ತಮಗೆ ಅವಕಾಶ ಸಿಗಬಹುದು ಎಂದು ಕಾಯುತ್ತಿದ್ದ ನಾಯಕರಲ್ಲಿ ಜಿ ಪರಮೇಶ್ವರ್‌ ಕೂಡಾ ಒಬ್ಬರಾಗಿದ್ದರು. ಸಿಎಂ ಹುದ್ದೆ ಸಿಗದಿದ್ದರೆ ಡಿಸಿಎಂ ಆದರೂ ಬೇಕು ಎಂದು ಹಕ್ಕು ಕೂಡಾ ಮಂಡಿಸಿದ್ದರು.

ಭೋಜನ ಕೂಟ ಏರ್ಪಡಿಸಿದ ಜಿ ಪರಮೇಶ್ವರ್‌

ಹೀಗೆ ಎರಡೂ ಬಣಗಳಿಂದ ದೂರವಿದ್ದು ತಾನೇ ಸಿಎಂ ಆಗಬೇಕು ಎಂದು ಕನಸು ಕಾಣುತ್ತಿದ್ದ ಜಿ. ಪರಮೇಶ್ವರ್‌ ಅವರು ಶುಕ್ರವಾರ ಏಕಾಏಕಿಯಾಗಿ ಭೋಜನ ಕೂಟ ಏರ್ಪಡಿಸಿದ್ದು, ಅದಕ್ಕೆ ಡಿ.ಕೆ. ಶಿವಕುಮಾರ್‌ ಅವರನ್ನು ಆಹ್ವಾನಿಸದೆ ಕೇವಲ ಸಿದ್ದರಾಮಯ್ಯ ಟೀಮನ್ನು ಆಹ್ವಾನ ಮಾಡಿದ್ದು ಭಾರಿ ಚರ್ಚೆಗೆ ಗ್ರಾಸವಾಗಿದೆ.

ಡಿ.ಕೆ. ಶಿವಕುಮಾರ್‌ ಅವರ ಬಣ ಎರಡೂವರೆ ವರ್ಷದ ಬಳಿ ಸಿಎಂ ಹುದ್ದೆಗೆ ಬೇಡಿಕೆ ಮಂಡಿಸುತ್ತಿರುವ ಹಿನ್ನೆಲೆಯಲ್ಲಿ ಅವರಿಗೆ ಚೆಕ್‌ ಮೇಟ್‌ ಇಡುವುದಕ್ಕಾಗಿ ಜಿ. ಪರಮೇಶ್ವರ್‌ ಅವರನ್ನು ಬಳಸಿಕೊಂಡರೇ ಎನ್ನುವ ಪ್ರಶ್ನೆ ಕೇಳಿಬಂದಿದೆ.

ಈ ಭೋಜನ ಕೂಟದ ಸಂದರ್ಭದಲ್ಲಿ ಅಧಿಕಾರ ಹಂಚಿಕೆಯ ವಿಚಾರವೂ ಚರ್ಚೆಗೆ ಬಂದಿದೆ ಎನ್ನಲಾಗಿದೆ. ಸತೀಶ್‌ ಜಾರಕಿಹೊಳಿ ಅವರು ಇದನ್ನು ಒಪ್ಪಿಕೊಂಡಿದ್ದಾರೆ.

ಈ ನಡುವೆ ಜಿ. ಪರಮೇಶ್ವರ್‌ ಅವರು ಒಂದೊಮ್ಮೆ 50:50 ಅಧಿಕಾರ ಹಂಚಿಕೆಯ ಸೂತ್ರ ಇದೆ ಎಂದಾದರೆ ತಮ್ಮ ಹೆಸರನ್ನೂ ಪರಿಗಣಿಸಬೇಕು ಎಂಬ ಬೇಡಿಕೆ ಇಟ್ಟಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ. ಅಂದರೆ, ಸಿದ್ದರಾಮಯ್ಯ ಅವರು ಸೀಟು ಬಿಟ್ಟುಕೊಡಬೇಕಾದ ಪರಿಸ್ಥಿತಿ ನಿರ್ಮಾಣಗೊಂಡರೆ ತಾನು ಕೂಡಾ ಸಿಎಂ ಕುರ್ಚಿಯ ಆಕಾಂಕ್ಷಿ ಎಂಬ ಸಂದೇಶವನ್ನು ಅವರು ರವಾನಿಸಿದ್ದಾರೆ.

ತಾನು ಆಕಾಂಕ್ಷಿ ಎಂಬ ಮಾತನ್ನು ಜಿ. ಪರಮೇಶ್ವರ್‌ ಅವರು ಹೇಳಿದ್ದಾರೆ ಎಂದು ಹೇಳಲಾಗುತ್ತಿದ್ದರೂ ಅದರ ಹಿಂದೆ ವರ್ಕ್‌ ಆಗಿರುವುದು ಸಿದ್ದರಾಮಯ್ಯ ಮೈಂಡ್‌ ಎನ್ನಲಾಗುತ್ತಿದೆ.

ಏನಿದು ಪರಮೇಶ್ವರ್‌ ಎಂಟ್ರಿ ಪ್ರಸಂಗ?

ಒಂದು ವೇಳೆ, ಎರಡೂವರೆ ವರ್ಷದ ಬಳಿಕ ಅಧಿಕಾರ ಹಂಚಿಕೆಗೆ ಡಿ.ಕೆ. ಶಿವಕುಮಾರ್‌ ಬಣ ಪಟ್ಟು ಹಿಡಿದರೆ ಆಗ ನೀವು ಮಾತ್ರವಲ್ಲ, ಇನ್ನೂ ಹಲವರು ಆಕಾಂಕ್ಷಿಗಳಿದ್ದಾರೆ ಎಂಬ ಸಂದೇಶವನ್ನು ರವಾನಿಸಲಾಗಿದೆ. ಆಗ ದಲಿತ ಮುಖ್ಯಮಂತ್ರಿ ಮೊದಲಾದ ವಿಚಾರಗಳನ್ನು ಎತ್ತಿ ಡಿ.ಕೆ. ಬಾಯಿ ಮುಚ್ಚಿಸಬಹುದು ಎನ್ನುವುದು ಸಿದ್ದರಾಮಯ್ಯ ಲೆಕ್ಕಾಚಾರ ಎನ್ನಲಾಗಿದೆ. ನನ್ನನ್ನು ಮುಟ್ಟಲು ಬಂದರೆ ನಾನು ಬೇರೆ ರೀತಿಯಲ್ಲಿ ಕೆಡವಬಲ್ಲೆ ಎಂಬ ಚೆಕ್‌ಮೇಟ್‌ ತಂತ್ರವನ್ನು ಸಿದ್ದರಾಮಯ್ಯ ಬಳಸುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: DK Shivakumar : ಅಧಿಕಾರ ಹಂಚಿಕೆ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ಡಿಕೆಶಿ ವಾರ್ನಿಂಗ್‌

ಸಿಎಂ ಕುರ್ಚಿ ಖಾಲಿ ಇಲ್ಲ ಎಂದ ಎಚ್.ಸಿ. ಮಹದೇವಪ್ಪ

ಭೋಜನ ಕೂಟದಲ್ಲಿ ಭಾಗವಹಿಸಿದ ಸಿದ್ದರಾಮಯ್ಯ ಆಪ್ತ ಡಾ.ಎಚ್‌.ಸಿ, ಮಹದೇವಪ್ಪ ಅವರು, ʻʻಐದು ವರ್ಷಗಳ ಕಾಲ ಸಿದ್ದರಾಮಯ್ಯ ಸಿಎಂ ಆಗಿ ಇರ್ತಾರೆ. ಸಿಎಂ ಕುರ್ಚಿ ಖಾಲಿ ಇಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ಊಟಕ್ಕೆ ಕರೆದಿದ್ದರು.. ಹೋಗಿದ್ದೆವು. ಮಾತನಾಡಿಕೊಂಡು ಊಟ ಮಾಡಿದೆವು ಅಷ್ಟೆ ಎಂದು ಹಾರಿಕೆಯ ಮಾತು ಆಡಿರುವ ಅವರು, ಪಕ್ಕದಲ್ಲೇ ಇರೋ ಡಿಕೆಶಿ ಅವರನ್ನು ಯಾಕೆ ಕರೆದಿಲ್ಲ ಎಂದು ಪರಮೇಶ್ವರ್‌ ಅವರನ್ನೇ ಕೇಳಬೇಕು ಎಂದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Nikhil Kumaraswamy: ಪ್ರಜ್ವಲ್‌ ಎಸ್‌ಐಟಿ ಮುಂದೆ ಹಾಜರಾಗಿ ತನಿಖೆ ಎದುರಿಸುವುದೇ ಸೂಕ್ತ: ನಿಖಿಲ್‌ ಕುಮಾರಸ್ವಾಮಿ

Nikhil Kumaraswamy: ಸಂತ್ರಸ್ತೆ ಹೆಣ್ಣು ಮಕ್ಕಳ ಮುಖವನ್ನು ಬ್ಲರ್ ಮಾಡಿಯೂ ತೋರಿಸಿಲ್ಲ. ರಾಜಕಾರಣಕ್ಕಾಗಿ ಈ ರೀತಿ ಮಾಡುವುದು ಎಷ್ಟು ಸರಿ? ಇಡೀ ರಾಜ್ಯದ ಜನಕ್ಕೆ ಈ ರೀತಿಯ ತೋರಿಸಿದ್ದು ಯಾರು? ಅವರ ಬಗ್ಗೆ ಯಾಕೆ ತನಿಖೆ ಆಗುತ್ತಿಲ್ಲ? ಇದರಲ್ಲಿ ಯಾರ ಪಾತ್ರ ಇದೆಯೋ , ರಾಜ್ಯ ಸರ್ಕಾರದ ಜವಾಬ್ದಾರಿ ಇದೆ. ಇದು ಇವತ್ತು ರಾಷ್ಟ್ರದ ಮಟ್ಟದಲ್ಲಿ ಸುದ್ದಿ ಆಗಿದೆ. ಇದಕ್ಕೆ ಉತ್ತರ ಸಿಗಬೇಕು. ತನಿಖೆ ಪಾರದರ್ಶಕವಾಗಿ ಆಗಬೇಕು ಅಲ್ವಾ‌? ಎಂದು ನಿಖಿಲ್‌ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

VISTARANEWS.COM


on

Prajwal should appear before SIT and face probe says Nikhil Kumaraswamy
Koo

ಬೆಂಗಳೂರು: ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ಅವರು ಎಸ್ಐಟಿ ಮುಂದೆ ಹಾಜರಾಗಿ ತನಿಖೆ ಎದುರಿಸಬೇಕು ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ (Nikhil Kumaraswamy) ಅಭಿಪ್ರಾಯಪಟ್ಟಿದ್ದಾರೆ.

ಈ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿದ ನಿಖಿಲ್‌ ಕುಮಾರಸ್ವಾಮಿ, ಸಂತ್ರಸ್ತೆ ಹೆಣ್ಣು ಮಕ್ಕಳ ಮುಖವನ್ನು ಬ್ಲರ್ ಮಾಡಿಯೂ ತೋರಿಸಿಲ್ಲ. ರಾಜಕಾರಣಕ್ಕಾಗಿ ಈ ರೀತಿ ಮಾಡುವುದು ಎಷ್ಟು ಸರಿ? ಇಡೀ ರಾಜ್ಯದ ಜನಕ್ಕೆ ಈ ರೀತಿಯ ತೋರಿಸಿದ್ದು ಯಾರು? ಅವರ ಬಗ್ಗೆ ಯಾಕೆ ತನಿಖೆ ಆಗುತ್ತಿಲ್ಲ? ಇದರಲ್ಲಿ ಯಾರ ಪಾತ್ರ ಇದೆಯೋ , ರಾಜ್ಯ ಸರ್ಕಾರದ ಜವಾಬ್ದಾರಿ ಇದೆ. ಇದು ಇವತ್ತು ರಾಷ್ಟ್ರದ ಮಟ್ಟದಲ್ಲಿ ಸುದ್ದಿ ಆಗಿದೆ. ಇದಕ್ಕೆ ಉತ್ತರ ಸಿಗಬೇಕು. ತನಿಖೆ ಪಾರದರ್ಶಕವಾಗಿ ಆಗಬೇಕು ಅಲ್ವಾ‌? ಎಂದು ನಿಖಿಲ್‌ ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ ಹಿನ್ನೆಲೆಯಲ್ಲಿ ತಲೆ ಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಎಸ್ಐಟಿ ತನಿಖೆ ಎದುರಿಸುವುದು ಸೂಕ್ತ. ಘಟ‌ನೆ ಆದ ದಿನವೇ ಎಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ. ಉಪ್ಪು ತಿಂದವರು ನೀರು ಕುಡಿಯಬೇಕು ಅಂತ. ಎಸ್‌ಐಟಿ ತನಿಖೆ ಮಾಡುತ್ತಲಿದೆ. ಹೀಗಾಗಿ ಸಂಸದರು ಎಸ್ಐಟಿ ಮುಂದೆ ಹಾಜರಾಗಿ ತನಿಖೆ ಎದುರಿಸಬೇಕು. ಇದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ. ಪ್ರಜ್ವಲ್‌ ನನ್ನ ಜತೆಯಂತೂ ಸಂಪರ್ಕದಲ್ಲಿಲ್ಲ ಎಂದು ನಿಖಿಲ್‌ ಹೇಳಿದರು.

ದೇವೇಗೌಡ ಆತ್ಮಹತ್ಯೆ ಹೇಳಿಕೆ; ಶಿವರಾಮೇಗೌಡ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕೆಂಡ

ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ಎಸಗಿದ್ದಾರೆ ಎನ್ನಲಾದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇಗೌಡ (Devaraje Gowda) ಹಾಗೂ ಮಾಜಿ ಸಂಸದ ಎಲ್‌.ಆರ್. ಶಿವರಾಮೇಗೌಡ (LR Shivarame Gowda) ಅವರ ಮಧ್ಯೆ ನಡೆದಿದೆ ಎನ್ನಲಾದ ದೂರವಾಣಿ ಸಂಭಾಷಣೆಯ ಆಡಿಯೊ ಈಗ ಎಲ್ಲಡೆ ವೈರಲ್‌ ಆಗಿದೆ. ಅಲ್ಲಿ ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್.ಡಿ. ದೇವೇಗೌಡ (HD Dewegowda) ಅವರ ಬಗ್ಗೆ ಲಘುವಾಗಿ ಮಾತನಾಡಿದ್ದ ಹೇಳಿಕೆಗೆ ವ್ಯಾಪಕ ಟೀಕೆಗಳು ಕೇಳಿ ಬರುತ್ತಿವೆ. ಇದನ್ನು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ (Nikhil Kumaraswamy) ಖಂಡಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ನಿಖಿಲ್‌ ಕುಮಾರಸ್ವಾಮಿ, ನಿನ್ನೆ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಅವರ ಆಡಿಯೊವನ್ನು ನಾನು ಕೇಳಿದೆ. ದೇವೇಗೌಡರ ಬಗ್ಗೆ ಈ ರೀತಿ ಲಘುವಾಗಿ ಮಾತನಾಡಬಾರದು. ರಾಜಕಾರಣ ಬೇರೆಯೊಬ್ಬರ ಸಾವು ಬಯಸುವುದು ಅವರ ಸಂಸ್ಕೃತಿಯನ್ನು ತೋರುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಾವಿನ ಹೆಸರಲ್ಲಿ ರಾಜಕೀಯ ಮಾಡೋದು ಸರಿಯಲ್ಲ

ಇಡೀ ರಾಜ್ಯದ ಜನ ಶಿವರಾಮೇಗೌಡರ ಆಡಿಯೊವನ್ನು ಕೇಳಿದ್ದಾರೆ. ದೇಶದ ಮಾಜಿ ಪ್ರಧಾನಿಗಳು, ಕೆಂಪುಕೋಟೆ ಮೇಲೆ ಬಾವುಟ ಹಾರಿಸಿದ ಕನ್ನಡದ ಹೆಮ್ಮೆಯ ಮಾಜಿ ಪ್ರಧಾನಿಗಳ ವಿರುದ್ಧ ಇಂಥ ಹೇಳಿಕೆಯನ್ನು ಕೊಡಬಾರದಿತ್ತು. ಅವರ ಸಂಸ್ಕೃತಿ, ಮನಸ್ಥಿತಿ ಹೇಗಿದೆ ಅ‌ನ್ನೋದನ್ನು ಅರ್ಥ ಮಾಡಿಕೊಳ್ಳಬೇಕು. ರಾಜಕೀಯವನ್ನು ಮಾಡಿ ಯಾರು ಬೇಡ ಎಂದು ಹೇಳುತ್ತಾರೆ? ಆದರೆ, ಇನ್ನೊಬ್ಬರ ಸಾವಿನ ಹೆಸರಲ್ಲಿ ರಾಜಕೀಯ ಮಾಡೋದು ಸರಿಯಲ್ಲ ಎಂದು ನಿಖಿಲ್‌ ಕುಮಾರಸ್ವಾಮಿ ಹೇಳಿದರು.

ನಮ್ಮ ಬಳಿ ಅಡ್ಜೆಸ್ಟ್‌ಮೆಂಟ್‌ ಸಂಸ್ಕೃತಿ ಇಲ್ಲ

ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಮಗನ ಭವಿಷ್ಯದ ಬಗ್ಗೆ ಯೋಚನೆ ಮಾಡಿ ಹೀಗೆ ಮಾಡಿದ್ದಾರೆ ಎಂದು ಶಿವರಾಮೇಗೌಡ ಅವರು ಹೇಳಿರುವ ಮಾತುಗಳು ಆಡಿಯೊದಲ್ಲಿ ದಾಖಲಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ನಿಖಿಲ್‌ ಕುಮಾರಸ್ವಾಮಿ, ಚುನಾವಣೆಗಳಲ್ಲಿ ಅಡ್ಜಸ್ಟ್‌ಮೆಂಟ್‌ ಕೆಲವು ಸಲ ಆಗುತ್ತದೆ. ಅದು ಹೊರಗೂ ಬರುತ್ತದೆ. ಆದರೆ, ನನ್ನ ಬಗ್ಗೆ ನಮ್ಮ ತಂದೆ ಎಂದೂ ಹೀಗೆ ಯೋಚನೆ ಮಾಡಿಲ್ಲ. ನಮ್ಮ ತಂದೆ ರಾಜ್ಯದ, ಜನರ ಬಗ್ಗೆ ಯೋಚನೆ ಮಾಡ್ತಾರೆ. ಬಹಳ ಜನ ಅಡ್ಜೆಸ್ಟ್‌ಮೆಂಟ್‌ ಮಾಡಿಕೊಂಡು ಇವತ್ತು ಬಹಳ ಒಳ್ಳೇ ಸ್ಥಾನದಲ್ಲಿ ಇದ್ದಾರೆ. ಆದರೆ, ನಮ್ಮ ಬಳಿ ಆ ರೀತಿ ಯಾವ ಅಡ್ಜೆಸ್ಟ್‌ಮೆಂಟ್‌ ಸಂಸ್ಕೃತಿ ಇಲ್ಲ ಎಂದು ಹೇಳಿದರು.

ಶಿವರಾಮೇಗೌಡ ಮಾತನಾಡಿರುವ ಪ್ರತಿ ವಿಚಾರದಲ್ಲಿಯೂ ರಾಜ್ಯ ಸರ್ಕಾರದ ಕೈವಾಡ ಇದೆ ಎಂಬುದು ಗೊತ್ತಾಗುತ್ತದೆ. ಅವರೂ ಕೂಡಾ ಸರ್ಕಾರದ ಪ್ರಮುಖ ವ್ಯಕ್ತಿಯೊಬ್ಬರ ಹೆಸರು ಹೇಳಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ವಿರುದ್ಧ ಪರೋಕ್ಷವಾಗಿ ಆರೋಪ ಮಾಡಿದರು.

ಎಚ್.ಡಿ. ಕುಮಾರಸ್ವಾಮಿ ಅವರಿಗೆ ಮಗನ ಭವಿಷ್ಯದ ಚಿಂತೆ ಅಂತಾರೆ. ಎರಡು ಚುನಾವಣೆಯನ್ನು ನಾನು ಎದುರಿಸಿದ್ದೇನೆ. ಕೆಲವೊಮ್ಮೆ ಕೆಲವು ಸಂದರ್ಭದಲ್ಲಿ ಅಡ್ಜೆಸ್ಟ್‌ಮೆಂಟ್‌ ಒಳಗೆ ಹೊರಗೆ ಆಗುತ್ತದೆ. ಆದರೆ, ನಮ್ಮ ವಿಚಾರದಲ್ಲಿ ಹೀಗೆ ಆಗಲಿಲ್ಲ. ನನ್ನ ವಿಷಯದಲ್ಲಿ ದೊಡ್ಡ ಮಟ್ಟದಲ್ಲಿ ಕೂರಿಸಬೇಕು ಅನ್ನೋ ಚಿಂತನೆ ಕುಮಾರಣ್ಣರಿಗೆ ಇಲ್ಲ. ಅವರಿಗೆ ರಾಜ್ಯದ ಜನತೆ ಬಗ್ಗೆ ಇದ್ದ ಕಮಿಟ್ಮೆಂಟ್, ಬದ್ಧತೆ ಹಿನ್ನೆಲೆಯಲ್ಲಿ ಅವರು ಯಾವುದೇ ರೀತಿಯ ಯೋಚನೆಯನ್ನು ಮಾಡಲಿಲ್ಲ. ನಾನು ಸೋತ ಬಳಿಕವೂ ರಾಮನಗರ, ಮಂಡ್ಯದಲ್ಲಿ ಓಡಾಡುತ್ತಿದ್ದೇನೆ. ಅನೇಕ ರಾಜಕಾರಣಿ ಮಕ್ಕಳು ಅಡ್ಜೆಸ್ಟ್‌ಮೆಂಟ್‌ ಮೂಲಕ ಉತ್ತಮ ಸ್ಥಾನಗಳಲ್ಲಿದ್ದಾರೆ. ನನಗೆ ಹಾಗೇ ಆಗಿಲ್ಲ. ನಾನು ಒಬ್ಬನೇ ಓಡಾಡುತ್ತಿದ್ದೇನೆ ಎಂದು ನಿಖಿಲ್‌ ಕುಮಾರಸ್ವಾಮಿ ಹೇಳಿದರು.

ಇದನ್ನೂ ಓದಿ: CM Siddaramaiah: ಸರ್ಕಾರಕ್ಕೆ ಒಂದು ವರ್ಷ; ಹಲವು ಕನಸು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ! ಮಾಧ್ಯಮ ಸಂವಾದದ ಲೈವ್‌ ಇಲ್ಲಿದೆ

ನೂರು ಕೋಟಿ ರೂಪಾಯಿ ಆಫರ್ ವಿಚಾರವೂ ತನಿಖೆ ಆಗಬೇಕು

ಶಿವರಾಮೇಗೌಡ ಒಬ್ಬ ಸರ್ಕಾರದ ವ್ಯಕ್ತಿಯ ಹೆಸರನ್ನು ಉಲ್ಲೇಖಿಸುತ್ತಾರೆ. ಹಾಸನದ ಸಂಸದರ ವಿಡಿಯೊ ರಿಲೀಸ್ ಆದ ಬಳಿಕ ಸಂತ್ರಸ್ತೆ ಮುಖವನ್ನು ಬ್ಲರ್ ಮಾಡಲಿಲ್ಲ. ಸಂಸದರ ಮೇಲೆ ಆರೋಪ ಕೇಳಿಬಂದಿದೆ. ಆರೋಪಿ ಅದನ್ನು ಎದುರಿಸಲಿ. ಆದರೆ, ಸಂತ್ರಸ್ತೆಯರ ವಿಡಿಯೊ ಬಿಡುಗಡೆ ಮಾಡಿ ಮಾನ ಹರಾಜು ಮಾಡೋದು ಯಾಕೆ? ವಿಡಿಯೊ ರಿಲೀಸ್ ಮಾಡಿದವರ ಬಗ್ಗೆ ಕ್ರಮ ಯಾಕೆ ಆಗುತ್ತಿಲ್ಲ. ನೂರು ಕೋಟಿ ರೂಪಾಯಿ ಆಫರ್ ವಿಚಾರವೂ ತನಿಖೆ ಆಗಬೇಕು ಎಂದು ನಿಖಿಲ್‌ ಕುಮಾರಸ್ವಾಮಿ ಆಗ್ರಹಿಸಿದರು.

Continue Reading

ಮಳೆ

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain : ರಾಜ್ಯದಲ್ಲಿ ಮಳೆ ಅವಾಂತರ ಮುಂದುವರಿದಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆಯನ್ನು ನೀಡಲಾಗಿದೆ.

VISTARANEWS.COM


on

By

Karnataka Rain
ಭಾರಿ ಮಳೆಗೆ ಕೊಚ್ಚಿ ಹೋದ ಬೆಳೆಗಳು
Koo

ಮಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಸಮುದ್ರ ತೀರದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಸಮುದ್ರಕ್ಕಿಳಿಯದಂತೆ ಮಂಗಳೂರಿನ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ದಕ್ಷಿಣ ಕನ್ನಡದಲ್ಲಿ 115 .5 ಮಿಮಿ ನಿಂದ 204 .5 ಮಿಮಿ ಮಳೆಯಾಗುವ (Karnataka Rain) ಸಾಧ್ಯತೆ ಇದ್ದು, ಎರಡು ದಿನಕ್ಕೆ ಆರೆಂಜ್ ಅಲರ್ಟ್ ನೀಡಲಾಗಿದೆ.

ಕರಾವಳಿಯುದ್ದಕ್ಕೂ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರಿಕೆಗೆ ತೆರಳದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಈಗಾಗಲೇ ಸಮುದ್ರಕ್ಕೆ ತೆರಳಿದ ಮೀನುಗಾರಿಕಾ ಬೋಟ್‌ಗಳಿಗೆ ತಕ್ಷಣ ದಡಕ್ಕೆ ಬರುವಂತೆ ಸೂಚನೆಯನ್ನು ನೀಡಲಾಗಿದೆ. ಗಂಟೆಗೆ 45 ಕಿ.ಮೀ ನಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ದಾವಣಗೆರೆಯಲ್ಲಿ ನಿಯಂತ್ರಣ ತಪ್ಪಿ ಕೊಚ್ಚಿಹೋದ ಕಾರು

ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ಭರ್ಜರಿ ಮಳೆಯಾಗುತ್ತಿದೆ. ಭಾನುವಾರ ರಾತ್ರಿ ಸುರಿದ ಮಳೆಯಿಂದಾಗಿ ಜಗಳೂರಿನ ಕಾನನಕಟ್ಟೆ ಗ್ರಾಮದ ಸೇತುವೆ ಮೇಲೆ ನೀರು ಹರಿದಿದೆ. ಹರಿಯುತ್ತಿರುವ ನೀರಿನಲ್ಲೇ ಕಾರು ಚಲಾಯಿಸುವಾಗ ಚಾಲಕ‌ನ ನಿಯಂತ್ರಣ ತಪ್ಪಿ ಕಾರು ಕೊಚ್ಚಿಹೋಗಿದೆ. ಕೂಡಲೇ ಸ್ಥಳೀಯರಿಂದ ಕಾರು ಚಾಲಕ ಹಾಗೂ ಪ್ರಯಾಣಿಕರನ್ನು ರಕ್ಷಣೆ ಮಾಡಲಾಗಿದೆ. ಜತೆಗೆ ಕೊಚ್ಚಿ ಹೋದ ಕಾರನ್ನು ದಡಕ್ಕೆ ಎಳೆದು ತಂದಿದ್ದಾರೆ. ಜಗಳೂರಿನ ದೊಡ್ಡ ಬೊಮ್ಮನಹಳ್ಳಿ, ಸೇರಿದಂತೆ ಹಲವು ಕಡೆ ಚೆಕ್ ಡ್ಯಾಂಗಳು ತುಂಬಿ ಹರಿಯುತ್ತಿವೆ.

karnataka rain

ಶಿವಮೊಗ್ಗದಲ್ಲಿ ಮನೆ ಮೇಲೆ ಬಿದ್ದ ಅರಳಿ ಮರ

ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ಶಿವಮೊಗ್ಗದ ಸೊರಬ ಪಟ್ಟಣದಲ್ಲಿ ಮನೆ ಮೇಲೆ ಬೃಹತ್ ಅರಳಿ ಮರ, ತೆಂಗಿನ ಮರ ಬಿದ್ದು ಹಾನಿಯಾಗಿದೆ. ಭಾಗ್ಯ ಎಂಬುವರಿಗೆ ಸೇರಿದ ಮನೆ ಸಂಪೂರ್ಣ ದ್ವಂಸವಾಗಿದ್ದು,ಭಾಗ್ಯ ಅವರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮನೆ ಮೇಲೆ ಬೃಹತ್ ಮರ ಬಿದ್ದ ಪರಿಣಾಮ ಮನೆಯಲ್ಲಿದ್ದ ಗೃಹಪಯೋಗಿ ವಸ್ತುಗಳು ಹಾನಿಯಾಗಿವೆ. ಸ್ಥಳಕ್ಕೆ ತಹಸೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸೂಕ್ತ ಪರಿಹಾರ ನೀಡುವಂತೆ ಮನೆ ಮಾಲೀಕರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: Rain news: ಚಾರ್ಮಾಡಿ ಘಾಟಿಯಲ್ಲಿ ಮಳೆಗೆ ಸಿಲುಕಿಕೊಂಡ ನೂರಾರು ಪ್ರಯಾಣಿಕರು

ಕೋಲಾರದಲ್ಲಿ ಮಳೆಗೆ ಬೆಳೆಗಳು ನೀರುಪಾಲು

ಕೋಲಾರದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಲ್ಲಸಂದ್ರ ಗ್ರಾಮದಲ್ಲಿ ಬೆಳೆಗಳು ನೀರುಪಾಲಾಗಿದೆ. ಕೋಲಾರ ತಾಲೂಕಿನ ನರಸಾಪುರ ಹೋಬಳಿಯ ಮಲ್ಲಸಂದ್ರ ಗ್ರಾಮದಲ್ಲಿ ನಿನ್ನೆ ಭಾನುವಾರ ಸಂಜೆ ಸುರಿದ ಮಳೆಗೆ ಬೆಳೆಗಳು ಜಲಾವೃತಗೊಂಡಿದೆ. ಮಳೆಯ ನೀರಿನಲ್ಲಿ ಸೌತೆಕಾಯಿ, ಬೀನ್ಸ್, ಹೂ ಬೆಳೆಗಳು ಕೊಚ್ಚಿಹೋಗಿವೆ. ಅವೈಜ್ಞಾನಿಕ ಲೇಔಟ್ ನಿರ್ಮಾಣ ಮಾಡಿರುವುದೇ ಇದಕ್ಕೆಲ್ಲ ಕಾರಣ ಎಂದು ರೈತರು ಆರೋಪಿಸಿದ್ದಾರೆ. ದೊಂಬರಹಳ್ಳಿ ಗ್ರಾಮದ ವ್ಯಾಪ್ತಿಯಲ್ಲಿರುವ ಲೇಔಟ್‌ನಲ್ಲಿ ಮಳೆಯ ನೀರು ಹರಿಯಲು ಯಾವುದೇ ಕಾಲುವೆ ಮಾಡಿಲ್ಲ. ಇದರಿಂದ ಮಳೆ ಬಿದ್ದಾಗಲೆಲ್ಲಾ ಲೇಔಟ್‌ನಿಂದ ಹರಿದು ಬರುವ ನೀರು ತೋಟಗಳಿಗೆ ನುಗ್ಗುತ್ತಿದೆ ಎಂದು ಕಿಡಿಕಾರಿದ್ದಾರೆ.

ಚಿಕ್ಕಮಗಳೂರಿನ ಮಳೆ ಅಬ್ಬರಕ್ಕೆ ಕುಸಿದ ಮನೆ

ಚಿಕ್ಕಮಗಳೂರಿನಲ್ಲಿ ಭಾನುವಾರ ರಾತ್ರಿ ಸುರಿದ ಗಾಳಿ-ಮಳೆಗೆ ಮನೆ ಕುಸಿದಿದೆ. ಎನ್.ಆರ್.ಪುರ ತಾಲೂಕಿನ ಕರ್ಕೇಶ್ವರ ಗ್ರಾಮದಲ್ಲಿ ಘಟನೆ ನಡೆದಿದೆ. ಗುಲಾಬಿ ಎಂಬಾಕೆಯ ಮನೆ ಕುಸಿದಿದೆ. ಒಂಟಿ ಮಹಿಳೆಯಾಗಿರುವ ಗುಲಾಬಿ, ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದು, ಗಾಳಿ-ಮಳೆಗೆ ಇದ್ದವೊಂದು ಮನೆಯೂ ನೆಲಸಮವಾಗಿದೆ ಎಂದು ಕಂಗಲಾಗಿದ್ದಾರೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳೀಯರಿಂದ ನಿರ್ಗತಿಕ ಮಹಿಳೆಗೆ ಸಹಾಯ ಮಾಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಶ್ರದ್ಧಾಂಜಲಿ

ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತ ಕವಿ ಲಕ್ಕೂರು ಆನಂದ ನಿಧನ, ಅನುಮಾನಾಸ್ಪದ ಸಾವು ಕೇಸು

ಲಕ್ಕೂರು ಆನಂದ ಅವರ ಶವ ಆಳಂದ‌ ತಾಲೂಕಿನ‌ ಕಡಗಂಚಿ ಬಳಿ ಅನುಮಾನಾಸ್ಪದವಾಗಿ ಪತ್ತೆಯಾಗಿದೆ. ಕಲಬುರಗಿ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಇವರು ಪಿಎಚ್‌ಡಿ ಮಾಡುತ್ತಿದ್ದರು. ಸ್ಥಳಕ್ಕೆ ನರೋಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

VISTARANEWS.COM


on

ಲಕ್ಕೂರು ಆನಂದ lakkuru Anand
Koo

ಕಲಬುರಗಿ: ಪ್ರತಿಭಾವಂತ ಕವಿ, ಕೇಂದ್ರ ಸಾಹಿತ್ಯ ಅಕಾಡೆಮಿ (Central Sahitya Akademy) ಯುವ ಪ್ರಶಸ್ತಿ ಪುರಸ್ಕೃತ ಸಾಹಿತಿ ಲಕ್ಕೂರು ಆನಂದ (Lakkuru Ananda) ಅವರು ಮೇ 20ರಂದು ನಿಧನ (Death news) ಹೊಂದಿದ್ದಾರೆ. ಪೊಲೀಸರು ಇದೊಂದು ಅನುಮಾನಾಸ್ಪದ ಸಾವು (UDR Case) ಎಂದು ‌ದೂರು ದಾಖಲಿಸಿಕೊಂಡಿದ್ದಾರೆ.

44 ವರ್ಷ ಪ್ರಾಯದ ಲಕ್ಕೂರು ಸಿ. ಆನಂದ ಮೂಲತಃ ಕೋಲಾರ ಜಿಲ್ಲೆಯ ಲಕ್ಕೂರಿನವರು. ದಲಿತ- ಬಂಡಾಯ ಕವಿ, ಸಂಶೋಧಕ, ವಿಮರ್ಶಕ, ಸಂಘಟನಾಕಾರ, ಅನುವಾದಕಾರ ಆಗಿದ್ದರು. ಕೆಂಗೇರಿ ಶೇಷಾದ್ರಿಪುರಂ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಆನಂದ ಅವರು ಇದುವರೆಗೆ ಐದು ಕವನ ಸಂಕಲನ, ಐದು ಅನುವಾದಿತ ಕೃತಿಗಳು ಹಾಗೂ ಒಂದು ಸಂಶೋಧನಾ ಗ್ರಂಥವನ್ನು ಹೊರತಂದಿದ್ದಾರೆ. ಮಾತಂಗ ಮಾದಿಗರ ಸಂಸ್ಕೃತಿಯ ಬಗ್ಗೆ ಅವರು ಆಳವಾದ ಅಧ್ಯಯನ ನಡೆಸಿದ್ದಾರೆ.

ಇತ್ತೀಚೆಗೆ ತೆಲುಗು ಭಾಷೆಯಿಂದ ರಾಣಿ ಶಿವ ಶಂಕರ ಶರ್ಮರ ‘ಕೊನೆಯ ಬ್ರಾಹ್ಮಣ’ ಕೃತಿಯನ್ನು ಕನ್ನಡಕ್ಕೆ ಅನುವಾದಿಸಿ ಪ್ರಕಟಿಸಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪ್ರಶಸ್ತಿ, ಆಂಧ್ರದ ಶ್ರೀ ಶ್ರೀ ಕಾವ್ಯ, ದೆಹಲಿಯ ದಲಿತ ಸಾಹಿತ್ಯ ಪರಿಷತ್ತು ಪ್ರಶಸ್ತಿ, ದು ನಿಂ ಬೆಳಗಲಿ ಪ್ರಶಸ್ತಿ, ವಿಭಾ ಸಾಹಿತ್ಯ ಪ್ರಶಸ್ತಿ, ಕಡೆಂಗೋಡ್ಲು ಶಂಕರಭಟ್ಟ ಪ್ರಶಸ್ತಿ, ಡಾ ತಿಪ್ಪೇರುದ್ರ ಸ್ವಾಮಿ ಪ್ರಶಸ್ತಿ ಆನಂದರಿಗೆ ಸಂದಿದೆ.

ಊರಿಂದ ಊರಿಗೆ, ಇಪ್ಪತ್ತರ ಕಲ್ಲಿನ ಮೇಲೆ, ಬಟವಾಡೆಯಾಗದ ರಸೀತಿ, ಇತಿ ನಿನ್ನ ವಿಧೇಯನು, ಉರಿವ ಏಕಾಂತ ದೀಪ ಇವರ ಕವನ ಸಂಕಲನಗಳು. ಸ್ಮೃತಿ ಕಿಣಾನ್ತಂ, ಕೊನೆ ಬ್ರಾಹ್ಮಣ, ಆಕಾಶ ದೇವರ, ನಗ್ನ ಮುನಿಯ ಸಮಗ್ರ ಕಥೆಗಳು, ಅರುದ್ರ ಇವರ ಅನುವಾದಿತ ಕೃತಿಗಳು.

ಆನಂದ್ ಅವರ ಶವ ಆಳಂದ‌ ತಾಲೂಕಿನ‌ ಕಡಗಂಚಿ ಬಳಿ ಅನುಮಾನಾಸ್ಪದವಾಗಿ ಪತ್ತೆಯಾಗಿದೆ. ಕಲಬುರಗಿ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಇವರು ಪಿಎಚ್‌ಡಿ ಮಾಡುತ್ತಿದ್ದರು. ಸ್ಥಳಕ್ಕೆ ನರೋಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Raghunandan Kamath: ʼನ್ಯಾಚುರಲ್ಸ್‌ʼ ಖ್ಯಾತಿಯ ʼಐಸ್‌ಕ್ರೀಂ ಮ್ಯಾನ್‌ʼ ರಘುನಂದನ ಕಾಮತ್‌ ಇನ್ನಿಲ್ಲ

Continue Reading

ರಾಜಕೀಯ

Prajwal Revanna Case: ಶಿವರಾಮೇಗೌಡರ ದೇವೇಗೌಡ ಆತ್ಮಹತ್ಯೆ ಹೇಳಿಕೆ; ನಿಖಿಲ್‌ ಕುಮಾರಸ್ವಾಮಿ ಕೆಂಡ

Prajwal Revanna Case: ಇಡೀ ರಾಜ್ಯದ ಜನ ಶಿವರಾಮೇಗೌಡರ ಆಡಿಯೊವನ್ನು ಕೇಳಿದ್ದಾರೆ. ದೇಶದ ಮಾಜಿ ಪ್ರಧಾನಿಗಳು, ಕೆಂಪುಕೋಟೆ ಮೇಲೆ ಬಾವುಟ ಹಾರಿಸಿದ ಕನ್ನಡದ ಹೆಮ್ಮೆಯ ಮಾಜಿ ಪ್ರಧಾನಿಗಳ ವಿರುದ್ಧ ಇಂಥ ಹೇಳಿಕೆಯನ್ನು ಕೊಡಬಾರದಿತ್ತು. ಅವರ ಸಂಸ್ಕೃತಿ, ಮನಸ್ಥಿತಿ ಹೇಗಿದೆ ಅ‌ನ್ನೋದನ್ನು ಅರ್ಥ ಮಾಡಿಕೊಳ್ಳಬೇಕು. ರಾಜಕೀಯವನ್ನು ಮಾಡಿ ಯಾರು ಬೇಡ ಎಂದು ಹೇಳುತ್ತಾರೆ? ಆದರೆ, ಇನ್ನೊಬ್ಬರ ಸಾವಿನ ಹೆಸರಲ್ಲಿ ರಾಜಕೀಯ ಮಾಡೋದು ಸರಿಯಲ್ಲದ ಎಂದು ನಿಖಿಲ್‌ ಕುಮಾರಸ್ವಾಮಿ ಹೇಳಿದ್ದಾರೆ.

VISTARANEWS.COM


on

Prajwal Revanna Case Shivarame Gowdas Deve Gowda suicide statement says Nikhil Kumaraswamy
Koo

ಬೆಂಗಳೂರು: ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ಎಸಗಿದ್ದಾರೆ ಎನ್ನಲಾದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇಗೌಡ (Devaraje Gowda) ಹಾಗೂ ಮಾಜಿ ಸಂಸದ ಎಲ್‌.ಆರ್. ಶಿವರಾಮೇಗೌಡ (LR Shivarame Gowda) ಅವರ ಮಧ್ಯೆ ನಡೆದಿದೆ ಎನ್ನಲಾದ ದೂರವಾಣಿ ಸಂಭಾಷಣೆಯ ಆಡಿಯೊ ಈಗ ಎಲ್ಲಡೆ ವೈರಲ್‌ ಆಗಿದೆ. ಅಲ್ಲಿ ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್.ಡಿ. ದೇವೇಗೌಡ (HD Dewegowda) ಅವರ ಬಗ್ಗೆ ಲಘುವಾಗಿ ಮಾತನಾಡಿದ್ದ ಹೇಳಿಕೆಗೆ ವ್ಯಾಪಕ ಟೀಕೆಗಳು ಕೇಳಿ ಬರುತ್ತಿವೆ. ಇದನ್ನು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ (Nikhil Kumaraswamy) ಖಂಡಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ನಿಖಿಲ್‌ ಕುಮಾರಸ್ವಾಮಿ, ನಿನ್ನೆ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಅವರ ಆಡಿಯೊವನ್ನು ನಾನು ಕೇಳಿದೆ. ದೇವೇಗೌಡರ ಬಗ್ಗೆ ಈ ರೀತಿ ಲಘುವಾಗಿ ಮಾತನಾಡಬಾರದು. ರಾಜಕಾರಣ ಬೇರೆಯೊಬ್ಬರ ಸಾವು ಬಯಸುವುದು ಅವರ ಸಂಸ್ಕೃತಿಯನ್ನು ತೋರುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಾವಿನ ಹೆಸರಲ್ಲಿ ರಾಜಕೀಯ ಮಾಡೋದು ಸರಿಯಲ್ಲ

ಇಡೀ ರಾಜ್ಯದ ಜನ ಶಿವರಾಮೇಗೌಡರ ಆಡಿಯೊವನ್ನು ಕೇಳಿದ್ದಾರೆ. ದೇಶದ ಮಾಜಿ ಪ್ರಧಾನಿಗಳು, ಕೆಂಪುಕೋಟೆ ಮೇಲೆ ಬಾವುಟ ಹಾರಿಸಿದ ಕನ್ನಡದ ಹೆಮ್ಮೆಯ ಮಾಜಿ ಪ್ರಧಾನಿಗಳ ವಿರುದ್ಧ ಇಂಥ ಹೇಳಿಕೆಯನ್ನು ಕೊಡಬಾರದಿತ್ತು. ಅವರ ಸಂಸ್ಕೃತಿ, ಮನಸ್ಥಿತಿ ಹೇಗಿದೆ ಅ‌ನ್ನೋದನ್ನು ಅರ್ಥ ಮಾಡಿಕೊಳ್ಳಬೇಕು. ರಾಜಕೀಯವನ್ನು ಮಾಡಿ ಯಾರು ಬೇಡ ಎಂದು ಹೇಳುತ್ತಾರೆ? ಆದರೆ, ಇನ್ನೊಬ್ಬರ ಸಾವಿನ ಹೆಸರಲ್ಲಿ ರಾಜಕೀಯ ಮಾಡೋದು ಸರಿಯಲ್ಲ ಎಂದು ನಿಖಿಲ್‌ ಕುಮಾರಸ್ವಾಮಿ ಹೇಳಿದರು.

ನಮ್ಮ ಬಳಿ ಅಡ್ಜೆಸ್ಟ್‌ಮೆಂಟ್‌ ಸಂಸ್ಕೃತಿ ಇಲ್ಲ

ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಮಗನ ಭವಿಷ್ಯದ ಬಗ್ಗೆ ಯೋಚನೆ ಮಾಡಿ ಹೀಗೆ ಮಾಡಿದ್ದಾರೆ ಎಂದು ಶಿವರಾಮೇಗೌಡ ಅವರು ಹೇಳಿರುವ ಮಾತುಗಳು ಆಡಿಯೊದಲ್ಲಿ ದಾಖಲಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ನಿಖಿಲ್‌ ಕುಮಾರಸ್ವಾಮಿ, ಚುನಾವಣೆಗಳಲ್ಲಿ ಅಡ್ಜಸ್ಟ್‌ಮೆಂಟ್‌ ಕೆಲವು ಸಲ ಆಗುತ್ತದೆ. ಅದು ಹೊರಗೂ ಬರುತ್ತದೆ. ಆದರೆ, ನನ್ನ ಬಗ್ಗೆ ನಮ್ಮ ತಂದೆ ಎಂದೂ ಹೀಗೆ ಯೋಚನೆ ಮಾಡಿಲ್ಲ. ನಮ್ಮ ತಂದೆ ರಾಜ್ಯದ, ಜನರ ಬಗ್ಗೆ ಯೋಚನೆ ಮಾಡ್ತಾರೆ. ಬಹಳ ಜನ ಅಡ್ಜೆಸ್ಟ್‌ಮೆಂಟ್‌ ಮಾಡಿಕೊಂಡು ಇವತ್ತು ಬಹಳ ಒಳ್ಳೇ ಸ್ಥಾನದಲ್ಲಿ ಇದ್ದಾರೆ. ಆದರೆ, ನಮ್ಮ ಬಳಿ ಆ ರೀತಿ ಯಾವ ಅಡ್ಜೆಸ್ಟ್‌ಮೆಂಟ್‌ ಸಂಸ್ಕೃತಿ ಇಲ್ಲ ಎಂದು ಹೇಳಿದರು.

ಶಿವರಾಮೇಗೌಡ ಮಾತನಾಡಿರುವ ಪ್ರತಿ ವಿಚಾರದಲ್ಲಿಯೂ ರಾಜ್ಯ ಸರ್ಕಾರದ ಕೈವಾಡ ಇದೆ ಎಂಬುದು ಗೊತ್ತಾಗುತ್ತದೆ. ಅವರೂ ಕೂಡಾ ಸರ್ಕಾರದ ಪ್ರಮುಖ ವ್ಯಕ್ತಿಯೊಬ್ಬರ ಹೆಸರು ಹೇಳಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ವಿರುದ್ಧ ಪರೋಕ್ಷವಾಗಿ ಆರೋಪ ಮಾಡಿದರು.

ಎಚ್.ಡಿ. ಕುಮಾರಸ್ವಾಮಿ ಅವರಿಗೆ ಮಗನ ಭವಿಷ್ಯದ ಚಿಂತೆ ಅಂತಾರೆ. ಎರಡು ಚುನಾವಣೆಯನ್ನು ನಾನು ಎದುರಿಸಿದ್ದೇನೆ. ಕೆಲವೊಮ್ಮೆ ಕೆಲವು ಸಂದರ್ಭದಲ್ಲಿ ಅಡ್ಜೆಸ್ಟ್‌ಮೆಂಟ್‌ ಒಳಗೆ ಹೊರಗೆ ಆಗುತ್ತದೆ. ಆದರೆ, ನಮ್ಮ ವಿಚಾರದಲ್ಲಿ ಹೀಗೆ ಆಗಲಿಲ್ಲ. ನನ್ನ ವಿಷಯದಲ್ಲಿ ದೊಡ್ಡ ಮಟ್ಟದಲ್ಲಿ ಕೂರಿಸಬೇಕು ಅನ್ನೋ ಚಿಂತನೆ ಕುಮಾರಣ್ಣರಿಗೆ ಇಲ್ಲ. ಅವರಿಗೆ ರಾಜ್ಯದ ಜನತೆ ಬಗ್ಗೆ ಇದ್ದ ಕಮಿಟ್ಮೆಂಟ್, ಬದ್ಧತೆ ಹಿನ್ನೆಲೆಯಲ್ಲಿ ಅವರು ಯಾವುದೇ ರೀತಿಯ ಯೋಚನೆಯನ್ನು ಮಾಡಲಿಲ್ಲ. ನಾನು ಸೋತ ಬಳಿಕವೂ ರಾಮನಗರ, ಮಂಡ್ಯದಲ್ಲಿ ಓಡಾಡುತ್ತಿದ್ದೇನೆ. ಅನೇಕ ರಾಜಕಾರಣಿ ಮಕ್ಕಳು ಅಡ್ಜೆಸ್ಟ್‌ಮೆಂಟ್‌ ಮೂಲಕ ಉತ್ತಮ ಸ್ಥಾನಗಳಲ್ಲಿದ್ದಾರೆ. ನನಗೆ ಹಾಗೇ ಆಗಿಲ್ಲ. ನಾನು ಒಬ್ಬನೇ ಓಡಾಡುತ್ತಿದ್ದೇನೆ ಎಂದು ನಿಖಿಲ್‌ ಕುಮಾರಸ್ವಾಮಿ ಹೇಳಿದರು.

ಇದನ್ನೂ ಓದಿ: CM Siddaramaiah: ಸರ್ಕಾರಕ್ಕೆ ಒಂದು ವರ್ಷ; ಹಲವು ಕನಸು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ! ಮಾಧ್ಯಮ ಸಂವಾದದ ಲೈವ್‌ ಇಲ್ಲಿದೆ

ನೂರು ಕೋಟಿ ರೂಪಾಯಿ ಆಫರ್ ವಿಚಾರವೂ ತನಿಖೆ ಆಗಬೇಕು

ಶಿವರಾಮೇಗೌಡ ಒಬ್ಬ ಸರ್ಕಾರದ ವ್ಯಕ್ತಿಯ ಹೆಸರನ್ನು ಉಲ್ಲೇಖಿಸುತ್ತಾರೆ. ಹಾಸನದ ಸಂಸದರ ವಿಡಿಯೊ ರಿಲೀಸ್ ಆದ ಬಳಿಕ ಸಂತ್ರಸ್ತೆ ಮುಖವನ್ನು ಬ್ಲರ್ ಮಾಡಲಿಲ್ಲ. ಸಂಸದರ ಮೇಲೆ ಆರೋಪ ಕೇಳಿಬಂದಿದೆ. ಆರೋಪಿ ಅದನ್ನು ಎದುರಿಸಲಿ. ಆದರೆ, ಸಂತ್ರಸ್ತೆಯರ ವಿಡಿಯೊ ಬಿಡುಗಡೆ ಮಾಡಿ ಮಾನ ಹರಾಜು ಮಾಡೋದು ಯಾಕೆ? ವಿಡಿಯೊ ರಿಲೀಸ್ ಮಾಡಿದವರ ಬಗ್ಗೆ ಕ್ರಮ ಯಾಕೆ ಆಗುತ್ತಿಲ್ಲ. ನೂರು ಕೋಟಿ ರೂಪಾಯಿ ಆಫರ್ ವಿಚಾರವೂ ತನಿಖೆ ಆಗಬೇಕು ಎಂದು ನಿಖಿಲ್‌ ಕುಮಾರಸ್ವಾಮಿ ಆಗ್ರಹಿಸಿದರು.

Continue Reading
Advertisement
Kannada New Movie Hondisi Bareyiri in youtube
ಸಿನಿಮಾ4 mins ago

Kannada New Movie: ಯೂಟ್ಯೂಬ್‌ನಲ್ಲಿ ಉಚಿತವಾಗಿ ನೋಡಬಹುದು ʻಹೊಂದಿಸಿ ಬರೆಯಿರಿʼ; ಆದರೆ ಇರಲಿದೆ ಬ್ಯಾಂಕ್ ಡಿಟೇಲ್ಸ್‌!

Prajwal should appear before SIT and face probe says Nikhil Kumaraswamy
ಕರ್ನಾಟಕ12 mins ago

Nikhil Kumaraswamy: ಪ್ರಜ್ವಲ್‌ ಎಸ್‌ಐಟಿ ಮುಂದೆ ಹಾಜರಾಗಿ ತನಿಖೆ ಎದುರಿಸುವುದೇ ಸೂಕ್ತ: ನಿಖಿಲ್‌ ಕುಮಾರಸ್ವಾಮಿ

Karnataka Rain
ಮಳೆ15 mins ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Survival Story
ವಿದೇಶ26 mins ago

Survival Story: ಆ 17 ದಿನಗಳು…ಥೈಲ್ಯಾಂಡ್‌ನ ಥಾಮ್ ಲುವಾಂಗ್ ಗುಹೆಯಲ್ಲಿ ಸಿಕ್ಕಿಬಿದ್ದ 13 ಮಂದಿಯ ರಕ್ಷಣೆಯ ರೋಚಕ ಕಹಾನಿ

Lok Sabha Election 2024
ದೇಶ27 mins ago

Lok Sabha Election 2024: ರ್‍ಯಾಲಿಯಲ್ಲಿ ಕಾಲ್ತುಳಿತದ ಸ್ಥಿತಿ ನಿರ್ಮಾಣ; ಭಾಷಣ ಮಾಡದೇ ವೇದಿಕೆಯಿಂದ ತೆರಳಿದ ರಾಹುಲ್‌, ಅಖಿಲೇಶ್‌

ಲಕ್ಕೂರು ಆನಂದ lakkuru Anand
ಶ್ರದ್ಧಾಂಜಲಿ49 mins ago

ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತ ಕವಿ ಲಕ್ಕೂರು ಆನಂದ ನಿಧನ, ಅನುಮಾನಾಸ್ಪದ ಸಾವು ಕೇಸು

Prajwal Revanna Case Shivarame Gowdas Deve Gowda suicide statement says Nikhil Kumaraswamy
ರಾಜಕೀಯ53 mins ago

Prajwal Revanna Case: ಶಿವರಾಮೇಗೌಡರ ದೇವೇಗೌಡ ಆತ್ಮಹತ್ಯೆ ಹೇಳಿಕೆ; ನಿಖಿಲ್‌ ಕುಮಾರಸ್ವಾಮಿ ಕೆಂಡ

murder case in Belgavi
ಬೆಳಗಾವಿ1 hour ago

Baby Death : ಮಲತಾಯಿಯ ಕ್ರೌರ್ಯಕ್ಕೆ ಬಲಿಯಾಯ್ತಾ 3 ವರ್ಷದ ಕಂದಮ್ಮ?

rave party telugu actress hema
ಕ್ರೈಂ1 hour ago

‌Rave Party: ʼರೇವ್‌ ಪಾರ್ಟಿಯಲ್ಲಿ ನಾನಿಲ್ಲʼ ಎಂದು ವಿಡಿಯೋ ಮಾಡಿದ ತೆಲುಗು ನಟಿ; ಐವರ ಬಂಧನ

Payal Rajput Accuses Rakshana Producers Of Not Clearing Her Dues
ಟಾಲಿವುಡ್1 hour ago

Payal Rajput: ನಿರ್ಮಾಪಕನ ವಿರುದ್ಧ ‘ಹೆಡ್‌ಬುಷ್’ ನಟಿಯ ಗಂಭೀರ ಆರೋಪ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ15 mins ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ22 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ23 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ1 day ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌