ಪಾಕಿಸ್ತಾನ ವಿರುದ್ಧ ಧರಿಸಿದ್ದ ಕೊಹ್ಲಿಯ ಗ್ಲೌಸ್ ಭಾರಿ ಮೊತ್ತಕ್ಕೆ ಹರಾಜು! - Vistara News

ಕ್ರಿಕೆಟ್

ಪಾಕಿಸ್ತಾನ ವಿರುದ್ಧ ಧರಿಸಿದ್ದ ಕೊಹ್ಲಿಯ ಗ್ಲೌಸ್ ಭಾರಿ ಮೊತ್ತಕ್ಕೆ ಹರಾಜು!

2022ರ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಪಾಕಿಸ್ತಾನ(IND vs PAK) ವಿರುದ್ಧದ ಪಂದ್ಯದಲ್ಲಿ ವಿರಾಟ್​ ಕೊಹ್ಲಿ(virat kohli) ಅವರು ಧರಿಸಿದ್ದ ಕೈಗವಸು (ಗ್ಲೌಸ್)ಗಳು ಭಾರಿ ಮೊತ್ತಕ್ಕೆ ಹರಾಜು ಮಾಡಲಾಗಿದೆ.

VISTARANEWS.COM


on

virat kohli
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೆಲ್ಬೋರ್ನ್​: ಕಳೆದ ವರ್ಷ ಆಸ್ಟ್ರೇಲಿಯಾ ಆತಿಥ್ಯದಲ್ಲಿ ನಡೆದಿದ್ದ 2022ರ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಪಾಕಿಸ್ತಾನ(IND vs PAK) ವಿರುದ್ಧದ ಪಂದ್ಯದಲ್ಲಿ ವಿರಾಟ್​ ಕೊಹ್ಲಿ(virat kohli) ಅವರು ಧರಿಸಿದ್ದ ಕೈಗವಸು (ಗ್ಲೌಸ್)ಗಳು ಭಾರಿ ಮೊತ್ತಕ್ಕೆ ಹರಾಜು ಮಾಡಲಾಗಿದೆ. ಕಳೆದ ತಿಂಗಳು ಸಿಡ್ನಿಯಲ್ಲಿ ನಡೆದ ಚಾಪೆಲ್ ಫೌಂಡೇಶನ್‌ನ(The Chappell Foundation) ಆರನೇ ವಾರ್ಷಿಕ ಭೋಜನಕೂಟದಲ್ಲಿ ಕೊಹ್ಲಿಯ ಗ್ಲೌಸ್​ಗ​ಳನ್ನು ಹರಾಜಿಗೆ ಇಡಲಾಗಿತ್ತು. ಇದೀಗ ಹಾರ್ವ್ ಕ್ಲೆರ್ ಅಂತಿಮವಾಗಿ 5,750 ಯುಎಸ್ ಡಾಲರ್ (3.2 ಲಕ್ಷ ರೂ) ಮೌಲ್ಯದ ಬಿಡ್ ಸಲ್ಲಿಸಿ ಈ ಗ್ಲೌಸ್​ ತನ್ನದಾಗಿಸಿಕೊಂಡಿದೆ.

ಚಾಪೆಲ್ ಪ್ರತಿಷ್ಠಾನವು ಆಸ್ಟ್ರೇಲಿಯಾದಲ್ಲಿ ನಿರಾಶ್ರಿತ ಯುವಕರಿಗೆ ಹಣವನ್ನು ಸಂಗ್ರಹಿಸುವ ಕಾರ್ಯವನ್ನು ಮಾಡುತ್ತಿದೆ. ಈ ಫೌಂಡೇಶನನ್ನು ಗ್ರೆಗ್ ಚಾಪೆಲ್ ಮತ್ತು ಆಸ್ಟ್ರೇಲಿಯಾದ ಉದ್ಯಮಿ ದರ್ಶಕ್ ಮೆಹ್ತಾ ಅವರು ಸ್ಥಾಪಿಸಿದ್ದಾರೆ. ಆಸ್ಟ್ರೇಲಿಯಾದಲ್ಲಿ ನಿರಾಶ್ರಿತ ಯುವಕರಿಗೆ ಆಶ್ರಯ, ಆರೈಕೆ, ಶಿಕ್ಷಣ, ತರಬೇತಿ ಮತ್ತು ಉತ್ತಮ ಭವಿಷ್ಯವನ್ನು ಒದಗಿಸುವುದು ಇದರ ಮುಖ್ಯ ಗುರಿಯಾಗಿದೆ.

ಚಾಪೆಲ್ ಫೌಂಡೇಶನ್ 2017ರಿಂದ ಈವರೆಗೆ 5 ಮಿಲಿಯನ್‌ ಡಾಲರ್‌ಗಿಂತಲೂ ಹೆಚ್ಚಿನ ಹಣವನ್ನು ಸಂಗ್ರಹಿಸಿದೆ. ಮಾಜಿ ಆಸ್ಟ್ರೇಲಿಯಾದ ಕ್ರಿಕೆಟಿಗರಾದ ಬ್ರೆಟ್ ಲೀ, ಮೈಕೆಲ್ ಬೆವನ್, ಪೀಟರ್ ನೆವಿಲ್, ಫಿಲ್ ಎಮೆರಿ, ಜಿಯೋಫ್ ಲಾಸನ್, ಗ್ರೆಗ್ ಡೈಯರ್, ಟ್ರೆವರ್ ಮತ್ತು ಇಯಾನ್ ಚಾಪೆಲ್ ಅವರು ವಾರ್ಷಿಕ ಡಿನ್ನರ್‌ಗಾಗಿ ಸಿಡ್ನಿ ಕ್ರಿಕೆಟ್ ಗ್ರೌಂಡ್ ನಲ್ಲಿ ಉಪಸ್ಥಿತರಿದ್ದರು.

ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್‌ನಲ್ಲಿ ನಡೆದಿದ್ದ ಟಿ20 ವಿಶ್ವಕಪ್‌ನ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರು ಅಜೇಯ 82 ರನ್ ಬಾರಿಸಿ ಭಾರತ ತಂಡಕ್ಕೆ ಸ್ಮರಣೀಯ ಗೆಲುವು ತಂದು ಕೊಟ್ಟಿದ್ದರು. ಈ ವೇಳೆ ಅಕ್ಷರಶಃ ಗದ್ಗದಿತರಾದ ಕೊಹ್ಲಿ, ತನ್ನ ಕಣ್ಣಾಲಿಗಳಲ್ಲಿ ಆನಂದಬಾಷ್ಪ ತುಂಬಿಕೊಂಡು ಆಕಾಶದತ್ತ ಮುಖಮಾಡಿ ತಮ್ಮದೇ ಶೈಲಿಯಲ್ಲಿ ಸಂಭ್ರಮಾಚರಣೆ ಮಾಡಿದ್ದರು.

ಇದನ್ನೂ ಓದಿ Virat And Rohit: ಕುಚಿಕು ಗೆಳೆಯರಾದ ರೋಹಿತ್​-ವಿರಾಟ್​ ಸಂಭ್ರಮಾಚರಣೆಗೆ ಅಭಿಮಾನಿಗಳು ಫಿದಾ

ಅಂತಿಮ ಎರಡು ಓವರ್‌ನಲ್ಲಿ 31 ರನ್‌ ಸವಾಲು

18 ಓವರ್‌ ಮುಕ್ತಾಯಕ್ಕೆ ಭಾರತ ತಂಡ 4 ವಿಕೆಟ್‌ಗೆ 129 ರನ್‌ ಗಳಿಸಿತ್ತು. ಉಳಿದ 2 ಓವರ್‌ಗಳಲ್ಲಿ ಗೆಲುವಿಗೆ 31 ರನ್‌ ಗಳಿಸುವ ಸವಾಲು ಭಾರತದ ಮುಂದಿತ್ತು. ಅದಾಗಲೇ ಸ್ಲೋ ಬೌಲಿಂಗ್‌ ಮೂಲಕ ಉತ್ತಮ ಸ್ಪೆಲ್‌ ನಡೆಸಿ ಯಶಸ್ಸು ಕಂಡ ಹ್ಯಾರಿಸ್‌ ರವೂಫ್‌ ಬೌಲಿಂಗ್‌ ನಡೆಸಲು ಮುಂದಾದರು. ಮೊದಲ ಎರಡು ಎಸೆತದಲ್ಲಿ ಸಿಂಗಲ್ಸ್‌ ರನ್‌ ದಾಖಲಾಯಿತು. ಮೂರನೇ ಎಸೆತ ಡಾಟ್‌ ಬಾಲ್.‌ ಮುಂದಿನ ಎಸೆತದಲ್ಲಿ ಪಾಂಡ್ಯ ಒಂದು ರನ್‌ ಗಳಿಸಿದರು. ಈ ವೇಳೆ ಭಾರತದ ಗೆಲುವಿಗೆ 8 ಎಸೆತದಲ್ಲಿ 28 ರನ್‌ ಗಳಿಸಬೇಕಿತ್ತು. ಸ್ಟ್ರೈಕ್‌ನಲ್ಲಿದ್ದ ಕೊಹ್ಲಿ, ರವೂಫವವ ಅವರ 5ನೇ ಮತ್ತು ಅಂತಿಮ ಎಸೆತವನ್ನು ಸಿಕ್ಸರ್‌ಗೆ ಅಟ್ಟಿ ಗೆಲುವಿನ ಭರವಸೆ ಮೂಡಿಸಿದರು. ಅಂತಿಮ ಓವರ್‌ನಲ್ಲಿ 16 ರನ್‌ ಗಳಿಸಬೇಕಿತ್ತು.

ಮೊಹಮ್ಮದ್‌ ನವಾಜ್‌ ತಮ್ಮ ಸ್ಪೆಲ್‌ನ ಮೊದಲ ಮೂರು ಓವರ್‌ನಲ್ಲಿ 29 ರನ್‌ ಬಿಟ್ಟುಕೊಟ್ಟಿದ್ದರು. ಆದರೂ ನಾಯಕ ಬಾಬರ್‌ ಅಜಂ ಇವರ ಮೇಲೆ ನಂಬಿಕೆ ಇರಿಸಿ ಚೆಂಡು ಕೈಗೆ ನೀಡಿದರು. ಅದರಂತೆ ತಾನೆಸೆದ ಮೊದಲ ಎಸೆತದಲ್ಲೇ ಡೇಂಜರಸ್‌ ಪಾಂಡ್ಯ ವಿಕೆಟ್‌ ಕಿತ್ತರು. ಮುಂದಿನ ಎಸೆತದಲ್ಲಿ ದಿನೇಶ್‌ ಕಾರ್ತಿಕ್‌ ಒಂದು ರನ್‌ ಗಳಿಸಿದರು. ಮೂರನೇ ಎಸೆತದಲ್ಲಿ ಕೊಹ್ಲಿ ಎರಡು ರನ್‌ ಗಳಿಸಿದರು. ಮೂರನೇ ಎಸೆತದಲ್ಲಿ ನೋಬಾಲ್‌ಗೆ ಸಿಕ್ಸರ್‌ ಬಡಿದಟ್ಟಿದ ಕೊಹ್ಲಿ ಗೆಲುವನ್ನು ಭಾರತದ ಕಡೆಗೆ ತಿರುಗಿಸಿದರು. ಮುಂದಿನ ಎಸೆತ ವೈಡ್‌ ಆಗಿತ್ತು. ಫ್ರೀಹಿಟ್‌ ಎಸೆದಲ್ಲಿ ಕೊಹ್ಲಿ ಬೌಲ್ಡ್‌ ಆದರೂ ಮೂರು ರನ್‌ ಕಲೆಹಾಕಿದರು. ಆದರೆ 5ನೇ ಎಸೆತದಲ್ಲಿ ದಿನೇಶ್‌ ಕಾರ್ತಿಕ್‌ ಸ್ಟಂಪ್ಡ್‌ ಆಗುವ ಮೂಲಕ ಪಂದ್ಯವನ್ನು ಮತ್ತಷ್ಟು ರೋಚಕತೆಗೆ ಕೊಂಡೊಯ್ಯುವಂತೆ ಮಾಡಿದರು.

ಅಂತಿಮವಾಗಿ ಒಂದು ಎಸೆತದಲ್ಲಿ ಭಾರತಕ್ಕೆ ಎರಡು ರನ್‌ ಗಳಿಸುವ ಸವಾಲು ಎದುರಾಯಿತು. ಈ ವೇಳೆ ಅನುಭವಿ ಆಟಗಾರ ಆರ್‌.ಅಶ್ವಿನ್‌ ಕ್ರೀಸ್‌ಗೆ ಬಂದರು. ಅಂತಿಮ ಎಸೆತವನ್ನು ವೈಡ್‌ಲೈನ್‌ನಲ್ಲಿ ಎಸೆದು ಅಶ್ವಿನ್‌ ಅವರನ್ನು ವಂಚಿಸುವ ಯತ್ನದಲ್ಲಿ ನವಾಜ್‌ ವಿಫಲರಾದರು. ಕೊನೆಗೆ ಒಂದು ಎಸೆತದಲ್ಲಿ ಒಂದು ರನ್‌ ಗಳಿಸುವ ಸವಾಲು ಭಾರತಕ್ಕೆ ಲಭಿಸಿತು. ಪಂದ್ಯ ವೀಕ್ಷಿಸುತ್ತಿದ್ದ ಎಲ್ಲ ಅಭಿಮಾನಿಗಳು ಎಂದು ಕ್ಷಣ ಉಸಿರುಗಟ್ಟಿದ ಸ್ಥಿತಿಯಲ್ಲಿದ್ದರು. ಆದರೆ ಅಶ್ವಿನ್‌ ಈ ಎಸೆತವನ್ನು ಸಿಂಗಲ್‌ ತೆಗೆದು ಭಾರತಕ್ಕೆ ಗೆಲುವು ತಂದು ಕೊಟ್ಟರು. ಇಲ್ಲಿಗೆ ಪಾಕ್‌ ಗೆಲುವಿನ ಕನಸ್ಸನ್ನು ನವಾಜ್‌ ಮತ್ತು ರವೂಫ್‌ ಕಸಿದುಕೊಂಡು ವಿಲನ್‌ಗಳಾಗಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

David Wiese Retirement: ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ಡೇವಿಡ್ ವೈಸ್

David Wiese Retirement: ಡೇವಿಡ್ ವೈಸ್ ಅವರು ತಮ್ಮ ಕ್ರಿಕೆಟ್​ ವೃತ್ತಿ ಜೀವನ ಆರಂಭಿಸಿದ್ದು ದಕ್ಷಿಣ ಆಫ್ರಿಕಾ ತಂಡದ ಪರ ಆಡುವ ಮೂಲಕ. 2021ರಲ್ಲಿ ನಮೀಬಿಯಾ ತಂಡ ಸೇರಿದ್ದರು. ಒಟ್ಟು 5 ವರ್ಷಗಳ ಕಾಲ ನಮೀಬಿಯಾ ತಂಡವನ್ನು ಪ್ರತಿನಿಧಿಸಿದ್ದಾರೆ. 2021ರ ಟಿ20 ವಿಶ್ವಕಪ್‌ನಲ್ಲಿ ಆಡುವ ಮೂಲಕ ನಮೀಬಿಯಾ ತಂಡದ ಪರ ಪಾದಾರ್ಪಣೆ ಮಾಡಿದ್ದರು.

VISTARANEWS.COM


on

David Wiese Retirement
Koo

ನ್ಯೂಯಾರ್ಕ್​: ನಮೀಬಿಯಾ(Namibia allrounder David Wiese) ತಂಡದ ಅನುಭವಿ ಆಟಗಾರ ಡೇವಿಡ್ ವೈಸ್(David Wiese) ಅವರು ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ(David Wiese Retirement) ಹೇಳಿದ್ದಾರೆ. ಶನಿವಾರ ರಾತ್ರಿ ನಡೆದ ಇಂಗ್ಲೆಂಡ್​ ವಿರುದ್ಧದ ಟಿ20 ವಿಶ್ವಕಪ್​ನ ಅಂತಿಮ ಲೀಗ್​ ಪಂದ್ಯದಲ್ಲಿ ಆಡಿದ ಬಳಿಕ ಡೇವಿಡ್ ವೈಸ್ ತಮ್ಮ ನಿವೃತ್ತಿ ಘೋಷಿಸಿದರು.

ಡೇವಿಡ್ ವೈಸ್ ಅವರು ತಮ್ಮ ಕ್ರಿಕೆಟ್​ ವೃತ್ತಿ ಜೀವನ ಆರಂಭಿಸಿದ್ದು ದಕ್ಷಿಣ ಆಫ್ರಿಕಾ ತಂಡದ ಪರ ಆಡುವ ಮೂಲಕ. 2021ರಲ್ಲಿ ನಮೀಬಿಯಾ ತಂಡ ಸೇರಿದ್ದರು. ಒಟ್ಟು 5 ವರ್ಷಗಳ ಕಾಲ ನಮೀಬಿಯಾ ತಂಡವನ್ನು ಪ್ರತಿನಿಧಿಸಿದ್ದಾರೆ. 2021ರ ಟಿ20 ವಿಶ್ವಕಪ್‌ನಲ್ಲಿ ಆಡುವ ಮೂಲಕ ನಮೀಬಿಯಾ ತಂಡದ ಪರ ಪಾದಾರ್ಪಣೆ ಮಾಡಿದ್ದರು.

ಆಲ್​ರೌಂಡರ್​ ಆಗಿರುವ ವೈಸ್​ ಅವರು ನಮೀಬಿಯಾ ಪರ 34 ಟಿ20 ಪಂದ್ಯಗಳನ್ನು ಆಡಿ 532 ರನ್ ಗಳಿಸಿದ್ದಾರೆ. ಬೌಲಿಂಗ್​ನಲ್ಲಿಯೂ ಉತ್ತಮ ಪ್ರದರ್ಶನ ತೋರಿರುವ ಅವರು 35 ವಿಕೆಟ್​ ಕಿತ್ತಿದ್ದಾರೆ. ಒಂಬತ್ತು ಏಕದಿನ ಪಂದ್ಯಗಳನ್ನು ಆಡಿ 228 ರನ್ ಗಳಿಸಿದ್ದಾರೆ. ಆರು ವಿಕೆಟ್​ ಪಡೆದಿದ್ದಾರೆ. ದಕ್ಷಿಣ ಆಫ್ರಿಕಾ ಮತ್ತು ನಮೀಬಿಯಾ ತಂಡದ ಪರ ಆಡಿ ಒಟ್ಟಾರೆಯಾಗಿ, ಅವರು 54 ಟಿ20 ಮತ್ತು 15 ಏಕದಿನ ಪಂದ್ಯಗಳನ್ನು ಆಡಿದ್ದಾರೆ.

ಇದನ್ನೂ ಓದಿ SCO vs AUS: ಆಸೀಸ್​ಗೆ 5 ವಿಕೆಟ್​ ಗೆಲುವು; ಸೂಪರ್​-8ಗೆ ಲಗ್ಗೆಯಿಟ್ಟ ಇಂಗ್ಲೆಂಡ್​

“ನನಗೆ ಈಗ 39 ವರ್ಷ, ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಇನ್ನು ಮುಂದುವರಿಯಲು ಇದು ಸೂಕ್ತ ಸಯಯವಲ್ಲ ಎಂದು ತಿಳಿದಿದೆ. ಹೀಗಾಗಿ ನಾನು ಕ್ರಿಕೆಟ್​ನಿಂದ ನಿವೃತ್ತಿಯಾಗುತ್ತಿದ್ದೇನೆ. 2 ದೇಶಗಳನ್ನು ಪ್ರತಿನಿಧಿಸಲು ನನಗೆ ಅವಕಾಶ ಮಾಡಿಕೊಟ್ಟ ಎಲ್ಲ ಸಿಬ್ಬಂದಿ ಮತ್ತು ಸಹ ಆಟಗಾರರಿಗೆ ಧನ್ಯವಾದಗಳು” ಎಂದು ವೈಸ್ ಹೇಳಿದರು.

ಪಂದ್ಯ ಗೆದ್ದ ಇಂಗ್ಲೆಂಡ್​


ಶನಿವಾರ ರಾತ್ರಿ ನಡೆದ ಮಳೆ ಪೀಡಿತ ಪಂದ್ಯದಲ್ಲಿ ಇಂಗ್ಲೆಂಡ್​ ತಂಡ ನಮೀಬಿಯಾ ವಿರುದ್ಧ ಡಕ್​ವರ್ತ್​ ಲೂಯಿಸ್​ ನಿಯಮದನ್ವಯ 41 ರನ್​ ಅಂತರದಿಂದ ಗೆದ್ದು ಬೀಗಿದೆ. ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 10 ಓವರ್ ಗಳಲ್ಲಿ 122 ರನ್ ಗಳಿಸಿದರೆ, ನಮೀಬಿಯಾ ತಂಡವು 84 ರನ್ ಮಾತ್ರ ಗಳಿಸಿ ಸೋಲು ಕಂಡಿತು. ಇಂದು ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಸ್ಕಾಟ್ಲೆಂಡ್​ ವಿರುದ್ಧ 5 ವಿಕೆಟ್​ ಅಂತರದ ಗೆಲುವು ಸಾಧಿಸಿದ ಪರಿಣಾಮ ಇಂಗ್ಲೆಂಡ್​ ಸೂಪರ್​-8 ಹಂತಕ್ಕೇರಿತು.

Continue Reading

ಕ್ರೀಡೆ

SCO vs AUS: ಆಸೀಸ್​ಗೆ 5 ವಿಕೆಟ್​ ಗೆಲುವು; ಸೂಪರ್​-8ಗೆ ಲಗ್ಗೆಯಿಟ್ಟ ಇಂಗ್ಲೆಂಡ್​

SCO vs AUS: ಆಸ್ಟ್ರೇಲಿಯಾದ ಈ ಗೆಲುವಿನಿಂದಾಗಿ ಹಾಲಿ ಚಾಂಪಿಯನ್​ ಇಂಗ್ಲೆಂಡ್​ ತಂಡ ಸೂಪರ್​-8ಗೆ ಪ್ರವೇಶ ಪಡೆಯುವಂತಾಯಿತು. ಸ್ಕಾಟ್ಲೆಂಡ್​ ಮತ್ತು ಇಂಗ್ಲೆಂಡ್​ ‘ಬಿ’ ಗುಂಪಿನಲ್ಲಿ ತಲಾ 5 ಅಂಕ ಪಡೆದಿದ್ದರೂ ಕೂಡ ರನ್​ ರೇಟ್​ ಆಧಾರದಲ್ಲಿ ಇಂಗ್ಲೆಂಡ್​ ಮುಂದಿದ್ದ ಕಾರಣ ಈ ಲಾಭ ಜಾಸ್​ ಬಟ್ಲರ್​ ಪಡೆಗೆ ಲಭಿಸಿತು.

VISTARANEWS.COM


on

SCO vs AUS
Koo

ಗ್ರಾಸ್‌ ಐಲೆಟ್‌ (ಸೇಂಟ್‌ ಲೂಸಿಯಾ): ಸೂಪರ್​-8 ಪ್ರವೇಶಕ್ಕೆ ಗೆಲ್ಲಲೇ ಬೇಕಿದ್ದ ಪಂದ್ಯದಲ್ಲಿ ಸ್ಕಾಟ್ಲೆಂಡ್(SCO vs AUS)​ ತಂಡ ಆಸ್ಟ್ರೇಲಿಯಾ ವಿರುದ್ಧ 5 ವಿಕೆಟ್​ ಅಂತರದ ಸೋಲು ಕಾಣುವ ಮೂಲಕ ಟೂರ್ನಿಯಿಂದ ಹೊರಬಿದ್ದಿದೆ. ಆಸ್ಟ್ರೇಲಿಯಾದ ಈ ಗೆಲುವಿನಿಂದಾಗಿ ಹಾಲಿ ಚಾಂಪಿಯನ್​ ಇಂಗ್ಲೆಂಡ್​ ತಂಡ ಸೂಪರ್​-8ಗೆ ಪ್ರವೇಶ ಪಡೆಯುವಂತಾಯಿತು. ಸ್ಕಾಟ್ಲೆಂಡ್​ ಮತ್ತು ಇಂಗ್ಲೆಂಡ್​ ‘ಬಿ’ ಗುಂಪಿನಲ್ಲಿ ತಲಾ 5 ಅಂಕ ಪಡೆದಿದ್ದರೂ ಕೂಡ ರನ್​ ರೇಟ್​ ಆಧಾರದಲ್ಲಿ ಇಂಗ್ಲೆಂಡ್​ ಮುಂದಿದ್ದ ಕಾರಣ ಈ ಲಾಭ ಜಾಸ್​ ಬಟ್ಲರ್​ ಪಡೆಗೆ ಲಭಿಸಿತು.

ಇಲ್ಲಿನ ಸೇಂಟ್‌ ಲೂಸಿಯಾದ ಡ್ಯಾರೆನ್​ ಶಮಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಸ್ಕಾಟ್ಲೆಂಡ್​ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ಗೆ 180 ರನ್​ಗಳ ಬೃಹತ್​ ಮೊತ್ತ ಪೇರಿಸಿತು. ಈ ದೊಡ್ಡ ಮೊತ್ತವನ್ನು ಬೆನ್ನಟ್ಟಿದ ಆಸ್ಟ್ರೇಲಿಯಾ 19.4 ಓವರ್​ಗಳಲ್ಲಿ 5 ವಿಕೆಟ್​ಗೆ 186 ರನ್​ ಬಾರಿಸಿ ಗೆಲುವು ದಾಖಲಿಸಿತು. ಆಸೀಸ್​ ಬ್ಯಾಟಿಂಗ್​ ಸರದಿಯಲ್ಲಿ ಆರಂಭಿಕ ಆಟಗಾರ ಟ್ರಾವಿಸ್​ ಹೆಡ್​(68) ಮತ್ತು ಮಧ್ಯಮ ಕ್ರಮಾಂಕದ ಬ್ಯಾಟರ್​ ಮಾರ್ಕಸ್​ ಸ್ಟೋಯಿನಿಸ್​(59) ಅರ್ಧಶತಕ ಬಾರಿಸಿ ಮಿಂಚಿದರು. ಉಳಿದಂತೆ ಟಿಮ್​ ಡೇವಿಡ್​ ಅಜೇಯ 24 ರನ್​ ಬಾರಿಸಿದರು. ಡೇವಿಡ್​ ವಾರ್ನರ್​(1) ಮತ್ತು ನಾಯಕ ಮಿಚೆಲ್​ ಮಾರ್ಷ್(8) ಮತ್ತೆ ವಿಫಲರಾದರು.​

ಪಂದ್ಯದ ತಿರುವು


17 ಓವರ್​ ತನಕ ಪಂದ್ಯ ಸ್ಕಾಟ್ಲೆಂಡ್ ತಂಡದ ಪರ ಇತ್ತು. ಆದರೆ 18ನೇ ಓವರ್​ನಲ್ಲಿ ಪಂದ್ಯದ ಚಿತ್ರಣವೇ ಬದಲಾಯಿತು. ಬ್ರಾಡ್ ವೀಲ್ ಓವರ್​ನಲ್ಲಿ ಕ್ಯಾಮರೂನ್​ ಗ್ರೀನ್​ ಹ್ಯಾಟ್ರಿಕ್​ ಬೌಂಡರಿ ಬಾರಿಸಿ ಒಟ್ಟು 13 ರನ್​ ಕಸಿದರು. ಇದಕ್ಕೂ ಮುನ್ನ 2 ಓವರ್​ ನಡೆಸಿ ಒಂದು ಮೇಡನ್​ ಸಹಿತ ವಿಕೆಟ್ ಕಿತ್ತಿದ್ದ ಬ್ರಾಡ್ ವೀಲ್ ಈ ಓವರ್​ನಲ್ಲಿ ದುಬಾರಿಯಾದರು. ಇದು ಸ್ಕಾಟ್ಲೆಂಡ್​ ತಂಡದ ಸೋಲಿಗೆ ಪ್ರಮುಖ ಕಾರಣವಾಯಿತು. ಒಂದೊಮ್ಮೆ ಈ ಓವರ್​ ಕಂಟ್ರೋಲ್​ ಆಗುತ್ತಿದ್ದರೆ ಸ್ಕಾಟ್ಲೆಂಡ್​ಗೆ ಗೆಲುವಿನ ಅವಕಾಶ ಇರುತ್ತಿತ್ತು.

ಇದನ್ನೂ ಓದಿ T20 World Cup 2024 Super 8: ಸೂಪರ್​-8 ಪಂದ್ಯಗಳ ವೇಳಾಪಟ್ಟಿ ಪ್ರಕಟ; ಭಾರತಕ್ಕೆ ಆಫ್ಘಾನ್​ ಮೊದಲ ಎದುರಾಳಿ

ಮೊದಲು ಬ್ಯಾಟಿಂಗ್​ ನಡೆಸಿದ ಸ್ಕಾಟ್ಲೆಂಡ್​ ಬಿರುಸಿನ ಆಟಕ್ಕೆ ಒತ್ತು ನೀಡಿ ದೊಡ್ಡ ಮೊತ್ತವನ್ನು ಕಲೆಹಾಕಿತು. ಆರಂಭಿಕ ಆಟಗಾರ ಜಾರ್ಜ್ ಮುನ್ಸಿ ಆರಂಭದಿಂದಲೇ ಆಸೀಸ್​ ಬೌಲರ್​ಗಳ ಮೇಲೆರಗಿ ಮೂರು ಸಿಕ್ಸರ್ ಮತ್ತು 2 ಸಿಕ್ಸರ್​ ನೆರವಿನಿಂದ 35 ರನ್​ ಬಾರಿಸಿ ತಂಡಕ್ಕೆ ಉತ್ತಮ ಆರಂಭ ಒದಗಿಸಿದರು. ಈ ವಿಕೆಟ್​ ಪತನದ ಬಳಿಕ ಬಂದ ಬ್ರಾಂಡನ್ ಮೆಕ್‌ಮುಲ್ಲೆನ್ ಕೂಡ ಆಕ್ರಮಣಕಾರಿ ಬ್ಯಾಟಿಂಗ್​ ನಡೆಸಿ ಗಮನಸೆಳೆದರು. ಕೇವಲ 34 ಎಸೆತಗಳಿಂದ 60 ರನ್​ ಬಾರಿಸಿ ಅರ್ಧಶತಕ ಪೂರ್ತಿಗೊಳಿಸಿದರು. ಇವರ ಈ ಸೊಗಸಾದ ಬ್ಯಾಟಿಂಗ್​ ವೇಳೆ ಬರೋಬ್ಬರಿ 6 ಸಿಕ್ಸರ್​ ಮತ್ತು 2 ಬೌಂಡರಿ ಸಿಡಿಯಿತು. ಇವರಿಗೆ ಮತ್ತೊಂದು ತುದಿಯಲ್ಲಿ ನಾಯಕ ರಿಚಿ ಬೆರಿಂಗ್ಟನ್ ಕೂಡ ಉತ್ತಮ ಸಾಥ್​ ನೀಡಿದರು. ಬೆರಿಂಗ್ಟನ್ 31 ಎಸೆತಗಳಿಂದ 42 ರನ್​ ಬಾರಿಸಿ ಅಜೇಯರಾಗಿ ಉಳಿದರು. ಆದರೆ ಪಂದ್ಯ ಸೋತ ಕಾರಣ ಇವರ ಬ್ಯಾಟಿಂಗ್​ ಸಾಹಸ ವ್ಯರ್ಥಗೊಂಡಿತು. ಆಸೀಸ್​ ಪರ ಗ್ಲೆನ್​ ಮ್ಯಾಕ್ಸ್​ವೆಲ್​ 44 ರನ್​ ವೆಚ್ಚದಲ್ಲಿ 2 ವಿಕೆಟ್​ ಕಿತ್ತರು.

Continue Reading

ಕ್ರೀಡೆ

INDW vs SAW: ಶುಭಾರಂಭದ ನಿರೀಕ್ಷೆಯಲ್ಲಿ ಹರ್ಮನ್​ಪ್ರೀತ್​ ಬಳಗ; ಇಂದು ಮೊದಲ ಏಕದಿನ

INDW vs SAW: ಗಾಯದಿಂದ ವಿಶ್ರಾಂತಿ ಪಡೆದಿದ್ದ ಅನುಭವಿ ಆಟಗಾರ್ತಿ ಜೆಮಿಮಾ ರಾಡ್ರಿಗಸ್ ಈ ಸರಣಿ ಮೂಲಕ ಮತ್ತೆ ತಂಡಕ್ಕೆ ಕಮ್​ಬ್ಯಾಕ್​ ಮಾಡಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಇವರು ತಂಡಕ್ಕೆ ಆಸರೆಯಾಗಬಲ್ಲರು.

VISTARANEWS.COM


on

INDW vs SAW
Koo

ಬೆಂಗಳೂರು: ಆತಿಥೇಯ ಭಾರತ ಮತ್ತು ಪ್ರವಾಸಿ ದಕ್ಷಿಣ ಆಫ್ರಿಕಾ(INDW vs SAW) ಮಹಿಳಾ ಕ್ರಿಕೆಟ್​​ ಸರಣಿಗೆ ಇಂದು(ಭಾನುವಾರ) ಚಾಲನೆ ಸಿಗಲಿದೆ. ಏಕದಿನ ಪಂದ್ಯ ಆಡುವ ಮೂಲಕ ಸರಣಿ ಆರಂಭವಾಗಲಿದೆ. ಮೊದಲ ಏಕದಿನ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಪಂದ್ಯ ಮಧ್ಯಾಹ್ನ 1.30ಕ್ಕೆ ಆರಂಭಗೊಳ್ಳಲಿದೆ. ಪಂದ್ಯಕ್ಕೆ ಮಳೆ ಭೀತಿ ಕೂಡ ಎದುರಾಗಿದೆ.

ಹರ್ಮನ್‌ಪ್ರೀತ್‌ ಕೌರ್‌ ನೇತೃತ್ವದ ಭಾರತ ತಂಡ ವರ್ಷಾರಂಭದಲ್ಲಿ ಆಸ್ಟ್ರೇಲಿಯಾ ಎದುರಿನ ಏಕದಿನ ಹಾಗೂ ಟಿ20 ಸರಣಿಯಲ್ಲಿ ಕಳಪೆ ಪ್ರದರ್ಶನ ತೋರುವ ಮೂಲಕ ಸೋಲು ಕಂಡಿತ್ತು. ಇದೇ ವರ್ಷ ಟಿ20 ವಿಶ್ವಕಪ್​ ಟೂರ್ನಿಯೂ ಇರುವ ಕಾರಣ ಭಾರತ ಈ ಸರಣಿಯಲ್ಲಿ ಉತ್ತಮ ಪ್ರದರ್ಶನ ತೋರಬೇಕಿದೆ. ಜತೆಗೆ ಯುವ ಆಟಗಾರ್ತಿಯರು ಸಿಕ್ಕ ಅವಕಾಶವನ್ನು ಸರಿಯಾಗಿ ಸದುಪಯೋಗಪಡಿಸಿಕೊಳ್ಳಬೇಕಿದೆ.

ಉಪನಾಯಕಿ ಸ್ಮೃತಿ ಮಂಧನಾ-ಶಫಾಲಿ ವರ್ಮ ಜೋಡಿ ಕಳೆದ ಕೆಲ ವರ್ಷಗಳಿಂದ ನಿರೀಕ್ಷಿತ ಆರಂಭ ಒದಗಿಸುತ್ತಿಲ್ಲ. ದೇಶೀಯ ಕ್ರಿಕೆಟ್​ ಟೂರ್ನಿಯಲ್ಲಿ ಅತ್ಯುತ್ತಮ ಬ್ಯಾಟಿಂಗ್​ ಪ್ರದರ್ಶನ ತೋರುತ್ತಿದ್ದ ಅಗ್ರ ಕ್ರಮಾಂಕದ ಬ್ಯಾಟರ್ ಪ್ರಿಯಾ ಪೂನಿಯಾ ಏಕದಿನ ಮತ್ತು ಟೆಸ್ಟ್‌ ತಂಡಕ್ಕೆ ಮರಳಿದ್ದಾರೆ. ಇವರಿಗೆ ಇಂದಿನ ಪಂದ್ಯದಲ್ಲಿ ಸ್ಥಾನ ಸಿಗುವುದು ಅನುಮಾನ. ಶಫಾಲಿ ಬ್ಯಾಟಿಂಗ್​ ವೈಫಲ್ಯ ಕಂಡರೆ ಮುಂದಿನ ಪಂದ್ಯದಲ್ಲಿ ಇವರು ಬೆಂಚ್​ ಕಾಯಬೇಕಾದೀತು. ಆಗ ಇವರ ಸ್ಥಾನದಲ್ಲಿ ಪ್ರಿಯಾ ಆಡಬಹುದು.

ಗಾಯದಿಂದ ವಿಶ್ರಾಂತಿ ಪಡೆದಿದ್ದ ಅನುಭವಿ ಆಟಗಾರ್ತಿ ಜೆಮಿಮಾ ರಾಡ್ರಿಗಸ್ ಈ ಸರಣಿ ಮೂಲಕ ಮತ್ತೆ ತಂಡಕ್ಕೆ ಕಮ್​ಬ್ಯಾಕ್​ ಮಾಡಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಇವರು ತಂಡಕ್ಕೆ ಆಸರೆಯಾಗಬಲ್ಲರು. ನಾಯಕಿ ಹರ್ಮನ್​ಪ್ರೀತ್​ ತಮ್ಮ ಬ್ಯಾಟಿಂಗ್​ ವೈಫಲ್ಯದಿಂದ ಹೊರಬರಬೇಕಿದೆ. ಇತ್ತೀಚೆಗೆ ಆಡಿದ ಎಲ್ಲ ಸರಣಿಯಲ್ಲೂ ಅವರು ರನ್​ ಬರ ಎದುರಿಸಿದ್ದರು. ಕರ್ನಾಟಕದ ಶ್ರೇಯಾಂಕಾ ಪಾಟೀಲ್‌ ಮೇಲೆ ಭಾರೀ ಭರವಸೆ ಇಡಲಾಗಿದೆ. ಅವರಿಗೆ ಇದು ತವರಿನ ಮೈದಾನವೂ ಹೌದು.

ಇದನ್ನೂ ಓದಿ INDW vs SAW: ಏಕದಿನ ಸರಣಿಗೆ ಅಭ್ಯಾಸ ಆರಂಭಿಸಿದ ಭಾರತ ಮಹಿಳಾ ತಂಡ; ಕನ್ನಡದಲ್ಲೇ ತಂಡದ ಸಿದ್ಧತೆ ವಿವರಿಸಿದ ಶ್ರೇಯಾಂಕಾ

ಕೆಲ ದಿನಗಳ ಹಿಂದೆ ಪಂದ್ಯ ಸಿದ್ಧತೆ ಬಗ್ಗೆ ಕನ್ನಡದಲ್ಲೇ ಮಾತನಾಡಿದ್ದ ಶ್ರೇಯಾಂಕ, ‘ಎಲ್ಲರಿಗೂ ನಮಸ್ಕಾರ, ನಾವು ಬೆಂಗಳೂರಿನಲ್ಲಿದ್ದೇವೆ. ಇಲ್ಲಿನ ವಾತಾವರಣ ತುಂಬಾ ಹಿತ ನೀಡಿದೆ. ಮೊದಲ ಅಭ್ಯಾಸ ಅವಧಿಯನ್ನು ಅತ್ಯಂತ ಯಶಸ್ವಿಯಾಗಿ ಮುಗಿಸಿದ್ದೇವೆ. ಎಲ್ಲರು ತುಂಬಾ ಎನರ್ಜಿಯಿಂದ ಅಭ್ಯಾಸ ನಡೆಸಿದೆವು. ಬಲಿಷ್ಠ ದಕ್ಷಿಣ ಆಫ್ರಿಕಾ ವಿರುದ್ಧ ಆಡಲು ಕಾತರಗೊಂಡಿದ್ದೇವೆ. ಇಲ್ಲಿ ನಡೆದ ಡಬ್ಲ್ಯುಪಿಎಲ್​ ಪಂದ್ಯಾವಳಿಯ ವೇಳೆ ಪ್ರೇಕ್ಷಕರು ದೊಡ್ಡ ಸಂಖ್ಯೆಯಲ್ಲಿ ಬಂದು ಸ್ಟೇಡಿಯಂ ತುಂಬಿ ಹೋಗಿತ್ತು. ಇದೀಗ ಏಕದಿನ ಸರಣಿಗೂ ಅದೇ ರೀತಿ ಸ್ಟೇಡಿಯಂಗೆ ಬಂದು ಟೀಮ್​ ಇಂಡಿಯಾಕ್ಕೆ ಸಪೋರ್ಟ್​ ಮಾಡಿ’ ಎಂದು ಕೇಳಿಕೊಂಡಿದ್ದರು.

ದಕ್ಷಿಣ ಆಫ್ರಿಕಾ ತಂಡದ ನಾಯಕಿ ಲಾರಾ ವೋಲ್ವಾರ್ಟ್‌ ಅಮೋಘ ಫಾರ್ಮ್ ನಲ್ಲಿದ್ದಾರೆ. ಕಳೆದ 5 ಇನ್ನಿಂಗ್ಸ್‌ಗಳಲ್ಲಿ ಮೂರು ಶತಕ ಬಾರಿಸಿದ ಸಾಧನೆ ಮಾಡಿದ್ದರು. ಹೀಗಾಗಿ ಇವರನ್ನು ಹೆಚ್ಚು ಹೊತ್ತು ಕ್ರೀಸ್​ನಲ್ಲಿ ಇರದಂತೆ ಭಾರತೀಯ ಬೌಲರ್​ಗಳು ನೋಡಿಕೊಳ್ಳಬೇಕು. ಮರಿಜಾನ್‌ ಕಾಪ್‌, ಅಯಬೊಂಗಾ ಖಾಕಾ, ನಾಡಿನ್‌ ಡಿ ಕ್ಲರ್ಕ್‌ ಕೂಡ ಉತ್ತಮ ಫಾರ್ಮ್​ನಲ್ಲಿದ್ದಾರೆ. ಈ ಬಾರಿಯ ಡಬ್ಲ್ಯುಪಿಎಲ್​ ಟೂರ್ನಿಯಲ್ಲೂ ಇವರೆಲ್ಲ ಶ್ರೇಷ್ಠ ಪ್ರದರ್ಶನ ತೋರಿದ್ದರು. ಬೆಂಗಳೂರಿನಲ್ಲಿ ಆಡಿದ ಅನುಭವ ಕೂಡ ಇವರಿಗಿದೆ. ಹೀಗಾಗಿ ಇವರಿಗೆ ಇಲ್ಲಿನ ಪಿಚ್​ಗೆ ಹೊಂದಿಕೊಳ್ಳಲು ಅಷ್ಟು ಕಷ್ಟವಾಗದು. ಒಟ್ಟಾರೆ ಪಂದ್ಯವನ್ನು ಜಿದ್ದಾಜಿದ್ದಿನಿಂದ ನಿರೀಕ್ಷಿಸಬಹುದು.

Continue Reading

T20 ವಿಶ್ವಕಪ್

T20 World Cup 2024: ಭಾರತ-ಕೆನಡಾ ಪಂದ್ಯ ಮಳೆಯಿಂದ ರದ್ದು; ಅಗ್ರಸ್ಥಾನಿಯಾಗಿ ರೋಹಿತ್‌ ಪಡೆ ಸೂಪರ್‌ 8ಕ್ಕೆ ಎಂಟ್ರಿ

T20 World Cup 2024: ಕಳೆದ ಹಲವು ದಿನಗಳಿಂದ ಲಾಡರ್‌ಹಿಲ್‌ನಲ್ಲಿ ಭಾರಿ ಮಳೆಯಾಗುತ್ತಿದ್ದು, ಶುಕ್ರವಾರ ನಡೆಯಬೇಕಿದ್ದ ಎರಡೂ ಪಂದ್ಯಗಳು ರದ್ದಾಗಿದ್ದವು. ಭಾರತ ಹಾಗೂ ಕೆನಡಾ ಪಂದ್ಯಕ್ಕೂ ಮಳೆಯ ಭೀತಿ ಇತ್ತು. ಹವಾಮಾನ ಇಲಾಖೆಯೂ ಎಚ್ಚರಿಕೆ ನೀಡಿತ್ತು. ಅದರಂತೆ, ಕೊನೆಗೆ ಟಾಸ್‌ ಕೂಡ ನಡೆಯದೆ ಪಂದ್ಯವನ್ನು ರದ್ದುಗೊಳಿಸಿ, ಅಂಕಗಳನ್ನು ಸಮನಾಗಿ ಹಂಚಿಕೆ ಮಾಡಲಾಗಿದೆ.

VISTARANEWS.COM


on

T20 World Cup 2024
Koo

ಲಾಡರ್‌ಹಿಲ್‌ (ಯುಎಸ್‌ಎ): ಅಮೆರಿಕದಲ್ಲಿ ನಡೆಯುತ್ತಿರುವ ಟಿ-20 ವಿಶ್ವಕಪ್‌ (T20 World Cup 2024) ಟೂರ್ನಿಯ ಗ್ರೂಪ್‌ ಹಂತದ ಭಾರತ ಹಾಗೂ ಕೆನಡಾ ನಡುವಿನ (India vs Canada Match) ಪಂದ್ಯವು ಒಂದೂ ಎಸೆತ ಕಾಣದೆ ರದ್ದಾಗಿದೆ. ಭಾರಿ ಮಳೆಯಿಂದಾಗಿ ಶನಿವಾರ (ಜೂನ್‌ 15) ಲಾಡರ್‌ಹಿಲ್‌ನಲ್ಲಿರುವ ಮೈದಾನದಲ್ಲಿ ನಡೆಯಬೇಕಿದ್ದ ಪಂದ್ಯವು ರದ್ದಾಯಿತು. ಇದರಿಂದಾಗಿ ಎರಡೂ ತಂಡಗಳಿಗೆ ತಲಾ ಒಂದು ಅಂಕ ಹಂಚಿಕೆ ಮಾಡಲಾಯಿತು. ಗ್ರೂಪ್‌ ಹಂತದಲ್ಲಿ ಒಂದೂ ಪಂದ್ಯ ಸೋಲದ ಭಾರತ ತಂಡವು 7 ಅಂಕಗಳೊಂದಿಗೆ ಪಾಯಿಂಟ್‌ ಪಟ್ಟಿಯಲ್ಲಿ ಅಗ್ರಸ್ಥಾನಿಯಾಗಿ ಸೂಪರ್‌ 8 ಹಂತಕ್ಕೆ ಪ್ರವೇಶ ಪಡೆದಿದೆ.

ಕಳೆದ ಹಲವು ದಿನಗಳಿಂದ ಲಾಡರ್‌ಹಿಲ್‌ನಲ್ಲಿ ಭಾರಿ ಮಳೆಯಾಗುತ್ತಿದ್ದು, ಶುಕ್ರವಾರ ನಡೆಯಬೇಕಿದ್ದ ಎರಡೂ ಪಂದ್ಯಗಳು ರದ್ದಾಗಿದ್ದವು. ಭಾರತ ಹಾಗೂ ಕೆನಡಾ ಪಂದ್ಯಕ್ಕೂ ಮಳೆಯ ಭೀತಿ ಇತ್ತು. ಹವಾಮಾನ ಇಲಾಖೆಯೂ ಎಚ್ಚರಿಕೆ ನೀಡಿತ್ತು. ಅದರಂತೆ, ಕೊನೆಗೆ ಟಾಸ್‌ ಕೂಡ ನಡೆಯದೆ ಪಂದ್ಯವನ್ನು ರದ್ದುಗೊಳಿಸಿ, ಅಂಕಗಳನ್ನು ಸಮನಾಗಿ ಹಂಚಿಕೆ ಮಾಡಲಾಗಿದೆ. ಇದರೊಂದಿಗೆ ಭಾರತ ಹಾಗೂ ಅಮೆರಿಕ ತಂಡವು ಸೂಪರ್‌ 8 ಪ್ರವೇಶಿಸಿವೆ. ಭಾನುವಾರ ಐರ್ಲೆಂಡ್‌ ಹಾಗೂ ಪಾಕಿಸ್ತಾನ ತಂಡಗಳು ಗ್ರೂಪ್‌ ಹಂತದ ಹಾಗೂ ಟೂರ್ನಿಯ ಕೊನೆಯ ಪಂದ್ಯವನ್ನು ಆಡಲಿವೆ.

ಭಾರತ ಹಾಗೂ ಕೆನಡಾ ಪಂದ್ಯವನ್ನು ಆಡಲಿಸಲು ಪ್ರಯತ್ನ ಮಾಡಲಾಯಿತು. ಹಲವು ಬಾರಿ ಪಿಚ್‌ ಹಾಗೂ ಮೈದಾನವನ್ನು ಪರಿಶೀಲನೆ ನಡೆಸಲಾಯಿತು. ಕೊನೆಗೆ ಐದು ಓವರ್‌ಗಳ ಪಂದ್ಯವನ್ನಾದರೂ ಆಡಿಸಲು ಪ್ರಯತ್ನಿಸಲಾಯಿತು. ಆದರೆ, ಮಳೆ ಕಡಿಮೆಯಾದರೂ ಮೈದಾನದಲ್ಲಿ ತೇವಾಂಶ ರದ್ದಿರುವ ಕಾರಣ ಪಂದ್ಯವನ್ನು ರದ್ದುಗೊಳಿಸಲಾಯಿತು. ಸೂಪರ್‌ 8ರಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಒಂದೇ ಗ್ರೂಪ್‌ನಲ್ಲಿವೆ. ಜೂನ್‌ 19ರಿಂದ ಸೂಪರ್‌ 8 ಪಂದ್ಯಗಳು ಆರಂಭವಾಗಲಿವೆ. ಸೂಪರ್‌ 8 ಪಂದ್ಯಗಳು ವೆಸ್ಟ್‌ ಇಂಡೀಸ್‌ನಲ್ಲಿ ನಡೆಯಲಿವೆ.

ಉತ್ತಮ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ವಿಭಾಗವನ್ನು ಹೊಂದಿದ್ದರೂ ಸಂಘಟಿತ ಪ್ರದರ್ಶನ ನೀಡುವಲ್ಲಿ ವಿಫಲವಾಗುವ ಜತೆಗೆ ಅದೃಷ್ಟದಾಟದಲ್ಲೂ ಹಿನ್ನಡೆ ಅನುಭವಿಸಿದ ಪಾಕಿಸ್ತಾನ ಕ್ರಿಕೆಟ್‌ ತಂಡವು ಅಮೆರಿಕ ಹಾಗೂ ವೆಸ್ಟ್‌ ಇಂಡೀಸ್‌ನಲ್ಲಿ ನಡೆಯುತ್ತಿರುವ ಟಿ-20 ವಿಶ್ವಕಪ್‌ ಟೂರ್ನಿಯಿಂದಲೇ ಹೊರಬಿದ್ದಿದೆ. ಸೂಪರ್‌ 8ರ ರೇಸ್‌ನಲ್ಲಿ ಹಿನ್ನಡೆ ಅನುಭವಿಸಿದ ಬಾಬರ್‌ ಅಜಂನೇತೃತ್ವದ ತಂಡವು ಟೂರ್ನಿಯಿಂದ ಹೊರಬಿದ್ದಿದ್ದು, ಪಾಕ್‌ ಕ್ರಿಕೆಟ್‌ ಅಭಿಮಾನಿಗಳು ತಂಡದ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: T20 World Cup 2024: ಟಿ-20 ವಿಶ್ವಕಪ್‌ನಿಂದ ಪಾಕಿಸ್ತಾನ ಔಟ್;‌ ಸೂಪರ್‌ 8ಕ್ಕೆ ಲಗ್ಗೆ ಇಟ್ಟ ಅಮೆರಿಕ

Continue Reading
Advertisement
Electric shock
ಚಿಕ್ಕಮಗಳೂರು6 mins ago

Electric shock : ವಸತಿ ಶಾಲೆ ಆವರಣದಲ್ಲಿ ಕರೆಂಟ್‌ ಶಾಕ್‌ನಿಂದ ಬಾಲಕ ಸಾವು; 8 ಮಂದಿ ಅಮಾನತು

Grand Prix 2024 Competition
ಕ್ರೀಡೆ9 mins ago

Grand Prix 2024 Competition: ಬೆಳ್ಳಿ ಪದಕ ಗೆದ್ದ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್

Actor Darshan case pavithra Gowda manager Arrest
ಸ್ಯಾಂಡಲ್ ವುಡ್26 mins ago

Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣ; ಪವಿತ್ರಾ ಗೌಡ ಮ್ಯಾನೇಜರ್ ಅರೆಸ್ಟ್‌

Gold Rate Today
ಚಿನ್ನದ ದರ32 mins ago

Gold Rate Today: ವೀಕೆಂಡ್‌ನಲ್ಲಿ ಚಿನ್ನ ಖರೀದಿಸುವವರಿಗೆ ಗುಡ್‌ ನ್ಯೂಸ್;‌ ಇಂದು ಏರಿಕೆಯಾಗದ ಬೆಲೆ

Tata Motors SUV Tata Nexon 7th Anniversary Benefit up to Rs 1 lakh for customers
ವಾಣಿಜ್ಯ44 mins ago

Tata Motors: ಎಸ್‌ಯುವಿ ಟಾಟಾ ನೆಕ್ಸಾನ್‌ನ 7ನೇ ವಾರ್ಷಿಕೋತ್ಸವ; ಗ್ರಾಹಕರಿಗೆ 1 ಲಕ್ಷ ರೂ.ವರೆಗೆ ಉಳಿತಾಯ!

murder case
ಚಿಕ್ಕಬಳ್ಳಾಪುರ46 mins ago

Murder Case : ಚಿಕ್ಕಬಳ್ಳಾಪುರದಲ್ಲಿ ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಬರ್ಬರ ಹತ್ಯೆ

David Wiese Retirement
ಕ್ರೀಡೆ1 hour ago

David Wiese Retirement: ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ಡೇವಿಡ್ ವೈಸ್

Money Guide
ಮನಿ-ಗೈಡ್1 hour ago

Money Guide: ಹಿರಿಯ ನಾಗರಿಕರಿಗಾಗಿ ಅತ್ಯಾಕರ್ಷಕ ಉಳಿತಾಯ ಯೋಜನೆ

PMAY
ವಾಣಿಜ್ಯ1 hour ago

PMAY: ಸ್ವಂತ ಮನೆ ಹೊಂದುವ ನಿಮ್ಮ ಕನಸು ಪ್ರಧಾನ್ ಮಂತ್ರಿ ಆವಾಸ್ ಯೋಜನೆ ಮೂಲಕ ನನಸು; ಹೀಗೆ ಅಪ್ಲೈ ಮಾಡಿ

Bahaddur movie is re released on June 21
ಕರ್ನಾಟಕ1 hour ago

Bahaddur Movie: ಹತ್ತು ವರ್ಷಗಳ ನಂತರ ಬೆಳ್ಳಿತೆರೆಯ ಮೇಲೆ ಮತ್ತೆ “ಬಹದ್ದೂರ್”!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಯಾದಗಿರಿ22 hours ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ2 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ2 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ5 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ5 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ5 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ5 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

ಟ್ರೆಂಡಿಂಗ್‌