Karnataka Politics : ಬಿಜೆಪಿಯವರು ಹೇಳಿದ ಕೂಡಲೇ ಸರ್ಕಾರ ಬಿದ್ದು ಹೋಗಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ - Vistara News

ಕರ್ನಾಟಕ

Karnataka Politics : ಬಿಜೆಪಿಯವರು ಹೇಳಿದ ಕೂಡಲೇ ಸರ್ಕಾರ ಬಿದ್ದು ಹೋಗಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Karnataka Politics : ಕಾಂಗ್ರೆಸ್‌ನಲ್ಲಿ ಒಳಜಗಳ ಪ್ರಾರಂಭವಾಗಿದೆ. ಮುಖ್ಯಮಂತ್ರಿ ಹುದ್ದೆಗಾಗಿ ಕಾದಾಟಗಳು ನಡೆಯುತ್ತಿದ್ದು, ಸರ್ಕಾರ ಶೀಘ್ರದಲ್ಲಿ ಪತನ ಆಗುತ್ತದೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಈ ಸರ್ಕಾರ ಸುಭದ್ರವಾಗಿದ್ದು, ಬಿದ್ದು ಹೋಗಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

VISTARANEWS.COM


on

CM Siddaramaiah attack on BJP Leaders
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಿಜೆಪಿಯವರು (BJP Karnataka) ಹೇಳಿದ ಕೂಡಲೇ ಸರ್ಕಾರ ಬಿದ್ದು ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಹೇಳಿದ್ದಾರೆ. ಈ ಮೂಲಕ ರಾಜ್ಯ ರಾಜಕೀಯದಲ್ಲಿ (Karnataka Politics) ಭಾರಿ ಸ್ಥಿತ್ಯಂತರ ಆಗಲಿದೆ. ಸರ್ಕಾರ ಪತನ ಆಗಲಿದೆ ಎಂಬ ಊಹಾಪೋಹದ ಸುದ್ದಿಗಳಿಗೆ ಬ್ರೇಕ್‌ ಹಾಕುವ ಪ್ರಯತ್ನ ಮಾಡಿದರು.

ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ನಮ್ಮ ಸರ್ಕಾರ (Congress Government) ಧೃಢವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: Job News: IREL 88 ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಅವಕಾಶ

ಸಿಎಂ ಹುದ್ದೆಗಾಗಿ ಸಮುದಾಯಗಳ ವಾರ್‌

ರಾಜ್ಯದಲ್ಲಿ ನಡೆಯುತ್ತಿರುವ ಸಿಎಂ ಗದ್ದುಗೆ ಪೈಪೋಟಿಗೆ (Chief Minister fight) ಮತ್ತೊಂದು ಸಮುದಾಯ ಎಂಟ್ರಿ ಕೊಟ್ಟಿದೆ. ದಲಿತ, ಒಕ್ಕಲಿಗ, ಲಿಂಗಾಯತ ಸಿಎಂ ಕೂಗಿನ ಬೆನ್ನಲ್ಲೇ ಈಗ ನಾಯಕ ಸಮುದಾಯದಿಂದಲೂ (Nayaka community) ಬೇಡಿಕೆ ಕೇಳಿಬಂದಿದೆ. ಈಗ ಬೇಡಿಕೆ ಮಂಡಿಸಿರುವುದು ವಾಲ್ಮೀಕಿ ಸಮುದಾಯ (Congress politics). ಅಂದರೆ ಹಿರಿಯ ನಾಯಕ ಸತೀಶ್‌ ಜಾರಕಿಹೊಳಿ (Satish Jarakiholi) ಅವರ ಪರವಾಗಿ ಈ ಬ್ಯಾಟಿಂಗ್‌ ನಡೆದಿದೆ.

ರಾಜ್ಯದಲ್ಲಿ ಎರಡೂವರೆ ವರ್ಷಗಳ ಬಳಿಕ ಸಿದ್ದರಾಮಯ್ಯಅವರು ಸೀಟು ಬಿಟ್ಟುಕೊಡಬೇಕಾಗುತ್ತದೆ. ಡಿ.ಕೆ. ಶಿವಕುಮಾರ್‌ (DK Shivakumar) ಅವರು ಎರಡನೇ ಭಾಗದಲ್ಲಿ ಸಿಎಂ ಆಗುತ್ತಾರೆ ಎಂದು ಅವರ ಆಪ್ತರು ಸುದ್ದಿ ಹಬ್ಬಿಸುತ್ತಿರುವ ಹಿನ್ನೆಲೆಯಲ್ಲಿ ಭಾರಿ ರಾಜಕೀಯ ಚಟುವಟಿಕೆಗಳು ನಡೆಯುತ್ತಿವೆ.

ಈಗಾಗಲೇ ಲಿಂಗಾಯತರು ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹರು ಎಂದು ಶಾಮನೂರು ಶಿವಶಂಕರಪ್ಪ ಅವರು ಹೇಳಿದ್ದರೆ, ದಲಿತರಿಗೆ ಅವಕಾಶ ಕೊಡಿ ಎಂಬ ಬೇಡಿಕೆ ಇಟ್ಟಿದ್ದಾರೆ ಜಿ. ಪರಮೇಶ್ವರ್‌. ಅದರ ನಡುವೆ ನಾಯಕ ಸಮುದಾಯಕ್ಕೆ ಬೇಕು ಎಂದು ಕೇಳಿದ್ದು ಸತೀಶ್‌ ಜಾರಕಿಹೊಳಿ ಅವರ ಪರಮಾಪ್ತರಾಗಿರುವ ಯಾದಗಿರಿ ಜಿಲ್ಲೆಯ ಸುರಪುರ ಶಾಸಕ ರಾಜಾ ವೆಂಕಟಪಪ್ಪ ನಾಯಕ ಅವರು.

ರಾಜಾ ವೆಂಕಟಪ್ಪ ನಾಯಕ ಹೇಳಿದ್ದೇನು?

ಸುರಪುರದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿಯ ವೇಳೆ ಸಭೆಯನ್ನು ಉದ್ದೇಶಿಸಿ ಮಾತನಾಡುವಾಗ ಅವರು ನಾಯಕ ಸಮುದಾಯಕ್ಕೆ ಸಿಎಂ ಗಾದಿ ಬೇಕು ಎಂಬಂತೆ ಬೇಡಿಕೆ ಇಟ್ಟಿದ್ದಾರೆ.

ಸತೀಶ್‌ ಜಾರಕಿಹೊಳಿ ಮಾತ್ರವಲ್ಲ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೂ ಆಪ್ತರಾಗಿರುವ ಅವರು, ಸರ್ಕಾರ ಚೇಂಜ್ ಮಾಡುವ ಶಕ್ತಿ ನಮ್ಮ ಸಮಾಜದ ಲೀಡರ್‌ಗಳಿಗೆ ಇದೆ ಎಂದು ಹೇಳಿದ್ದಾರೆ.

ʻʻಸರ್ಕಾರ ಚೇಂಜ್ ಮಾಡುವ ಶಕ್ತಿ ನಮ್ಮ ಸಮಾಜದ ಲೀಡರ್‌ಗಳಿಗೆ ಇದೆ. ಆ ರಾಜಕೀಯ ಶಕ್ತಿಯನ್ನು ಗಟ್ಟಿಗೊಳಿಸುವ ಪ್ರಯತ್ನ ಮಾಡ್ತಿದ್ದೇವೆʼʼ ಎಂದು ನೆರೆದವರ ಚಪ್ಪಾಳೆಗಳ ನಡುವೆ ವೆಂಕಟಪ್ಪ ನಾಯಕ ಹೇಳಿದರು. ಹಾಗಂತ ಅವರು ಸತೀಶ್‌ ಜಾರಕಿಹೊಳಿ ಅವರ ಹೆಸರನ್ನೇನೂ ಹೇಳಿಲ್ಲ. ಆದರೆ, ಅವರು ಹೇಳಿದ್ದು ಸತೀಶ್‌ ಜಾರಕಿಹೊಳಿ ಅವರನ್ನು ದೃಷ್ಟಿಯಲ್ಲಿಟ್ಟುಕೊಂಡೇ ಎನ್ನುವುದು ಬಹುತೇಕರ ಅಭಿಪ್ರಾಯ.

ರಾಜಾ ವೆಂಕಟಪ್ಪ ನಾಯಕ ಹೇಳಿಕೆಗೆ ಯಾಕೆ ಇಷ್ಟು ಮಹತ್ವ?

ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಗಾದಿಗಾಗಿ ಭಾರಿ ಹೋರಾಟವೇ ನಡೆಯುತ್ತಿದೆ. ಎರಡೂವರೆ ವರ್ಷದ ಬಳಿಕ ಸಿದ್ದರಾಮಯ್ಯ ಅವರು ಪಟ್ಟ ಬಿಟ್ಟು ಕೊಡುವ ರೀತಿಯಲ್ಲಿ ಹೈಕಮಾಂಡ್‌ನಲ್ಲಿ ಮಾತುಕತೆ ಆಗಿದೆ ಎನ್ನುವುದು ಡಿ.ಕೆ. ಶಿವಕುಮಾರ್‌ ಆಪ್ತರ ಅಭಿಪ್ರಾಯ. ಆದರೆ, ಸಿದ್ದರಾಮಯ್ಯ ಆಪ್ತರು ಮಾತ್ರ ಐದು ವರ್ಷವೂ ಸಿದ್ದರಾಮಯ್ಯ ಅವರೇ ಸಿಎಂ ಎಂದು ಬಹಿರಂಗವಾಗಿಯೇ ಹೇಳುತ್ತಿದ್ದಾರೆ.

ಹೀಗೆ ಡಿ.ಕೆ.ಶಿವಕುಮಾರ್‌ ಬಣದವರು ಮುಖ್ಯಮಂತ್ರಿ ಹುದ್ದೆಗೆ ತಮ್ಮ ಹಕ್ಕು ಮಂಡನೆ ಮಾಡಿದಾಗಲೆಲ್ಲ ಹೊಸ ಹೊಸ ವರಸೆಗಳು ಹುಟ್ಟಿಕೊಂಡಿವೆ. ಡಿ.ಕೆ. ಶಿವಕುಮಾರ್‌ ಹೊರತುಪಡಿಸಿ ಇನ್ನೂ ಮೂವರು ಡಿಸಿಎಂಗಳನ್ನು ಮಾಡಬೇಕು ಎಂಬ ಸಚಿವ ಕೆ.ಎನ್‌. ರಾಜಣ್ಣ ಅವರ ಹೇಳಿಕೆಯ ಹಿಂದೆಯೂ ಇದೇ ತಂತ್ರವಿದೆ ಎನ್ನಲಾಗಿದೆ.

ಮೂರು ದಿನದ ಹಿಂದೆ ಡಿ.ಕೆ. ಶಿವಕುಮಾರ್‌ ಆಪ್ತ ಶಾಸಕ ಮಂಡ್ಯದ ರವಿ ಗಣಿಗ ಅವರು ಡಿ.ಕೆ. ಶಿವಕುಮಾರ್‌ ಎರಡೂವರೆ ವರ್ಷದ ಬಳಿಕ ಸಿಎಂ ಆಗುತ್ತಾರೆ ಎಂಬ ಹೇಳಿಕೆಯನ್ನು ನೀಡಿದ್ದರು. ಅದೇ ದಿನ ರಾತ್ರಿ ಡಾ.ಜಿ ಪರಮೇಶ್ವರ್‌ ಅವರ ನಿವಾಸದಲ್ಲಿ ಭೋಜನ ಕೂಟ ಏರ್ಪಾಡಾಗಿತ್ತು. ಅದರಲ್ಲಿ ಸಿದ್ದರಾಮಯ್ಯ ಬಣದ ಪ್ರಮುಖ ನಾಯಕರೆಲ್ಲ ಭಾಗಿಯಾಗಿದ್ದರು. ಈ ಸಭೆಯಿಂದ ಡಾ. ಜಿ ಪರಮೇಶ್ವರ್‌ ಅವರು ತಾನೂ ಸಿಎಂ ಹುದ್ದೆ ಆಕಾಂಕ್ಷಿ ಎಂಬ ಸಂದೇಶ ಹೊರಬಿತ್ತು. ಒಂದು ವೇಳೆ ಸಿಎಂ ಬದಲಾವಣೆ ಆಗುವುದಿದ್ದರೆ ನನ್ನ ಹೆಸರೂ ಪರಿಗಣಿಸಿ ಎಂದು ಸ್ವತಃ ಪರಮೇಶ್ವರ್‌ ಅವರು ಸಿದ್ದರಾಮಯ್ಯ ಅವರ ಮುಂದೆ ಬೇಡಿಕೆ ಮಂಡಿಸಿದರು ಎಂದು ಹೇಳಲಾಗುತ್ತಿದೆ.

ಬದಲಾವಣೆ ಮಾಡದಿರಲು ಈ ಸಂದೇಶ

ಅದಾಗಿ ಎರಡೇ ದಿನದಲ್ಲಿ ನಾಯಕ ಸಮುದಾಯದಿಂದ ಮುಖ್ಯಮಂತ್ರಿ ಪಟ್ಟದ ಬೇಡಿಕೆ ಕೇಳಿಬಂದಿದೆ. ಅಂದರೆ, ಇದೆಲ್ಲವೂ ಒಂದು ವೇಳೆ ಸಿದ್ದರಾಮಯ್ಯ ಅವರನ್ನು ಬದಲಾಯಿಸುವುದಿದ್ದರೆ ತಮ್ಮನ್ನು ಪರಿಗಣಿಸಿ ಎಂಬ ಆಗ್ರಹ ರೂಪದಲ್ಲಿದೆ. ಅಂದರೆ ಒಟ್ಟಾರೆಯಾಗಿ ಸಿದ್ದರಾಮಯ್ಯ ಅವರನ್ನೇ ಉಳಿಸಿಕೊಳ್ಳಬೇಕು ಎಂಬ ಪ್ರಧಾನ ಬೇಡಿಕೆಯನ್ನು ಈ ಮೂಲಕ ಮಂಡಿಸಲಾಗುತ್ತಿದೆ. ಬದಲಾಯಿಸಲು ಪ್ರಯತ್ನಿಸಿದರೆ ತೊಂದರೆಯಾಗಬಹುದು ಎಂಬ ಸಂದೇಶದ ರವಾನೆಯಾಗಿಯೂ ಇದು ಕಾಣುತ್ತಿದೆ.

ಇದನ್ನೂ ಓದಿ: Indira Gandhi : ಇಂದಿರಾ ಗಾಂಧಿಯಂಥ ಜನಪರ-ಜನಪ್ರಿಯ ಪ್ರಧಾನಿ ಮತ್ತೊಬ್ಬರು ಬಂದಿಲ್ಲ: ಸಿಎಂ ಸಿದ್ದರಾಮಯ್ಯ

ಸರ್ಕಾರ ಸುಭದ್ರ

ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನಲ್ಲಿ ಆಂತರಿಕ ಜಗಳ ಹೆಚ್ಚಾಗಿ ರಾಜ್ಯ ಸರ್ಕಾರ ಬೀಳುತ್ತದೆ ಎಂದು ಬಿಜೆಪಿಯ ಹಲವು ನಾಯಕರು ಹೇಳುತ್ತಾ ಬಂದಿದ್ದಾರೆ. ಇದರ ಬಗ್ಗೆ ಈಗ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು, ಅಂತಹ ಯಾವುದೇ ರೀತಿಯ ಬೆಳವಣಿಗೆ ಇಲ್ಲ. ಈ ಸರ್ಕಾರ ಸದೃಢವಾಗಿದೆ ಎಂದು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ದಕ್ಷಿಣ ಕನ್ನಡ

Missing case : ಮಾಜಿ ಶಾಸಕ‌ ಮೊಯ್ದೀನ್ ಬಾವಾರ ಸಹೋದರ ಮಿಸ್ಸಿಂಗ್‌; ಸೇತುವೆ ಬಳಿ ಡ್ಯಾಮೇಜ್‌ ಸ್ಥಿತಿಯಲ್ಲಿ ಕಾರು ಪತ್ತೆ

Missing case : ಮಾಜಿ ಶಾಸಕ‌ ಮೊಯ್ದೀನ್ ಬಾವಾರ ಸಹೋದರ ಮಿಸ್ಸಿಂಗ್‌ ಆಗಿತ್ತು. ಕೂಳೂರು ಸೇತುವೆ ಬಳಿ ಡ್ಯಾಮೇಜ್‌ ಸ್ಥಿತಿಯಲ್ಲಿ ಅವರ ಕಾರು ಪತ್ತೆಯಾಗಿದೆ.

VISTARANEWS.COM


on

By

Missing case
Koo

ಮಂಗಳೂರು: ಮಾಜಿ ಶಾಸಕ ಮೊಯ್ದೀನ್ ಬಾವಾ ಸಹೋದರ ಮುಮ್ತಾಜ್ ಅಲಿ (52) ಎಂಬುವವರು ಮಂಗಳೂರು ಹೊರವಲಯದ ಕೂಳೂರು ಬ್ರಿಡ್ಜ್‌ನಲ್ಲಿ ಕಾರು ನಿಲ್ಲಿಸಿ ನಾಪತ್ತೆ ಆಗಿದ್ದಾರೆ. ಮನೆಯವರಿಗೆ ಸಾಯುತ್ತೇನೆ ಅಂತಾ ಹೇಳಿ ಮುಮ್ತಾಜ್ ಅಲಿ ಹೋಗಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಮಾಜಿ ಶಾಸಕ ಮೊಯಿದ್ದೀನ್ ಬಾವ ಸೇರಿದಂತೆ ಕುಟುಂಬಸ್ಥರು ಭೇಟಿ ನೀಡಿದ್ದಾರೆ. ನದಿಯಲ್ಲಿ ಎಸ್ ಡಿ ಆರ್ ಎಫ್,ಎನ್ ಡಿ ಆರ್ ಎಫ್,ಅಗ್ನಿಶಾಮಕದಳದಿಂದ ಹುಡುಕಾಟ ನಡೆಸುತ್ತಿದ್ದಾರೆ.

ಬೆಳಗಿನ ಜಾವ ಮೂರು ಗಂಟೆಗೆ ಮನೆಯಿಂದ ಹೊರಟ್ಟಿದ್ದ ಮುಮ್ತಾಜ್ ಆಲಿ, ಬೆಳಗ್ಗೆ 5 ಗಂಟೆಗೆ ಕೂಳೂರು ಸೇತುವೆ ಮೇಲೆ ಡ್ಯಾಮೇಜ್‌ ಆದ ಸ್ಥಿತಿಯಲ್ಲಿ ಬಿಎಂಡಬ್ಲ್ಯೂ ಕಾರು ಪತ್ತೆಯಾಗಿದೆ. ವಿವಿಧ ಉದ್ಯಮ ಮತ್ತು ಮಸೀದಿ ಕಮಿಟಿಗಳಲ್ಲಿ ಮಮ್ತಾಜ್ ಆಲಿ ತೊಡಗಿಸಿಕೊಂಡಿದ್ದರು. ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಹಿಳೆಯಿಂದ ಬ್ಲ್ಯಾಕ್‌ಮೇಲ್‌?

ಮುಮ್ತಾಜ್ ಆಲಿ ಮಿಸ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮದುವೆ ಆಗುವಂತೆ ಮಹಿಳೆಯಿಂದ ನಿರಂತರ ಬ್ಲ್ಯಾಕ್‌ ಮೇಲ್ ಬಂದಿತ್ತು ಎನ್ನಲಾಗಿದೆ. ಅದಕ್ಕೆ ಸುರತ್ಕಲ್‌ನ ನಾಲ್ವರು ಸಹಕಾರ ನೀಡಿದ್ದರು. ಮಸೀದಿ ಕಮಿಟಿ ವಿಚಾರದಲ್ಲಿ ಆ ನಾಲ್ವರಿಗೂ ಮುಮ್ತಾಜ್ ಅಲಿಗೂ ಜಟಾಪಟಿ ಇತ್ತು. ಇದರಿಂದ ಆ ಮಹಿಳೆಯ ಹಿಂದೆ ನಿಂತ ಆ ನಾಲ್ವರು, ಮುಮ್ತಾಜ್ ಅಲಿಯ ವಿಡಿಯೋ ಇಟ್ಟುಕೊಂಡು ಮಹಿಳೆ ಮತ್ತು ಆ ನಾಲ್ವರಿಂದ‌ ಬ್ಲ್ಯಾಕ್‌ ಮೇಲ್ ನಡೆದಿದೆ ಎನ್ನಲಾಗಿದೆ. ಇದರಿಂದ ಬೇಸತ್ತು ಆತ್ಮಹತ್ಯೆಗೆ ಮುಂದಾದರಾ ಎಂಬ ಅನುಮಾನ ಮೂಡಿದೆ.

Continue Reading

ಬೆಂಗಳೂರು

Drugs Mafia : ಫಾರಿನ್ ಪೋಸ್ಟ್ ಆಫೀಸ್‌ನಲ್ಲಿ 626 ಮಾದಕ ವಸ್ತುಗಳ ಪಾರ್ಸಲ್‌ಗಳು ಪತ್ತೆ!

Drugs mafia : ಮಾದಕ ವಸ್ತುಗಳಿರುವ 626 ಪಾರ್ಸಲ್‌ಗಳು ಪತ್ತೆಯಾಗಿದ್ದು, ಪೋಸ್ಟ್‌ ಆಫೀಸ್‌ ಸಿಬ್ಬಂದಿ ಈ ಡ್ರಗ್ ಮಾಫಿಯಾದಲ್ಲಿ ಭಾಗಿಯಾಗಿದ್ದಾರಾ ಎಂಬ ಶಂಕೆ ಮೂಡಿದೆ.

VISTARANEWS.COM


on

By

Drugs mafia
Koo

ಬೆಂಗಳೂರು: ಡ್ರಗ್ ಮಾಫಿಯಾ (Drugs Mafia) ಪೋಸ್ಟ್ ಆಫೀಸಿಗೂ ತಟ್ಟಿದ್ದು ಇತ್ತೀಚೆಗಲ್ಲ. ಈ ಹಿಂದೆ ಕೂಡ ಫಾರೀನ್ ಪೋಸ್ಟ್ ಆಫೀಸ್ ಮೇಲೆ ದಾಳಿ ಮಾಡಿದ ಸಂಧರ್ಭದಲ್ಲಿ ಡ್ರಗ್ಸ್‌ಗಳು ಸಿಕ್ಕಿದ್ದವು. ಈಗ ಮತ್ತೊಮ್ಮೆ ದಾಳಿ ವೇಳೆ ಅಪಾರ ಪ್ರಮಾಣದ ಡ್ರಗ್ಸ್ ಪತ್ತೆಯಾಗಿದೆ.

ಚಾಮರಾಜಪೇಟೆ ಫಾರೀನ್ ಪೋಸ್ಟ್ ಆಫೀಸ್‌ನಲ್ಲಿ ಡ್ರಗ್ಸ್‌ ಮಾಫಿಯಾ ನಡೆದಿದೆ. ವಿದೇಶದಿಂದ ಬರುವ ಪಾರ್ಸಲ್‌ಗಳಲ್ಲಿ ಡ್ರಗ್ಸ್‌ಗಳು ಬರುತ್ತಿದೆ. ದುಬಾರಿ ಬೆಲೆಯ ಎಂಡಿಎಂಎ, ಬ್ರೌನ್ ಶುಗರ್, ಕೊಕೇನ್ ಸೇರಿದಂತೆ ಹಲವು ಮಾದರಿಯ ಡ್ರಗ್ ಪತ್ತೆಯಾಗಿವೆ.

ಬೇರೆಯದೆ ವಸ್ತುಗಳ ಹೆಸರಿನಲ್ಲಿ ವಿದೇಶದಿಂದ ಬರುತ್ತಿರುವ ಪಾರ್ಸಲ್ ಇದಾಗಿದೆ. ಅಪರಿಚಿತ ವಿಳಾಸವಿರುವ ಈ ಮಾದಕ ವಸ್ತುಗಳನ್ನು ಪಡೆದು , ಸಂಬಂಧಪಟ್ಟಂತಹ ಡ್ರಗ್ ಪೆಡ್ಲರ್‌ಗಳಿಗೆ ರವಾನೆ ಮಾಡಲಾಗುತ್ತದೆ. ಇಂತಹ ಪ್ಯೂರ್ ಡ್ರಗ್ಸ್‌ಗಳಿಗೆ ಬ್ಲಾಕ್ ಮಾರ್ಕೆಟ್‌ನಲ್ಲಿ ಭಾರಿ ಬೇಡಿಕೆ ಇದೆ. ಹೀಗಾಗಿ ವಿದೇಶದಿಂದ ಬರುವ ಪ್ಯೂರ್ ಡ್ರಗ್ಸ್‌ಗಳನ್ನು ಪಡೆದು ಅದರಿಂದ ಮತ್ತಷ್ಟು ಡ್ರಗ್‌ಗಳನ್ನು ಮಾಡಬಹುದಾಗಿದೆ.

ಇದನ್ನೂ ಓದಿ: Drugs Mafia: ಥೈಲ್ಯಾಂಡ್ ಟು ದುಬೈ ಡ್ರಗ್‌ ಮಾಫಿಯಾಗೆ ಇಂಡಿಯಾನೆ ಮೈನ್ ಲಿಂಕ್; 3 ಕೋಟಿ ಮೌಲ್ಯದ ಗಾಂಜಾ ವಶ

ಅಂದರೆ ಒಂದು ಗ್ರಾಂ ಪ್ಯೂರ್ ಡ್ರಗ್‌ನಿಂದ ಹತ್ತು ಗ್ರಾಂನಷ್ಟು ಡ್ರಗ್‌ಗಳನ್ನು ತಯಾರಿಸಬಹುದು. ಹೀಗಾಗಿ ಇಂತಹ ಪ್ಯೂರ್ ಸಿಂಥಟಿಕ್ ಡ್ರಗ್‌ಗಳನ್ನು ವಿದೇಶದಲ್ಲಿ ಸಿಗುವ ಹಿನ್ನೆಲೆಯಲ್ಲಿ ಅದನ್ನು ತರಿಸಿಕೊಳ್ಳಲು ಫಾರಿನ್ ಪೋಸ್ಟ್ ಆಫೀಸ್‌ಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ. ಇನ್ನು ಈ ಹಿಂದೆ ಕೂಡ ಡ್ರಗ್ ವಿಚಾರವಾಗಿ ದಾಳಿ ನಡೆಸಿದಾಗಲು ಅಪಾರ ಪ್ರಮಾಣದ ಮಾದಕ ವಸ್ತುಗಳು ಪತ್ತೆಯಾಗಿದ್ದವು. ಸದ್ಯ ಈ ಸಲವು ಕೂಡ ಅಪಾರ ಪ್ರಮಾಣದಲ್ಲಿ ಡ್ರಗ್ ಪತ್ತೆಯಾಗಿದೆ.

ಇದರ ಮಾಹಿತಿ ಬಂದ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ಅಕ್ಟೋಬರ್ ಒಂದನೇ ತಾರೀಖು ಫಾರಿನ್ ಪೋಸ್ಟ್ ಆಫೀಸ್‌ಗೆ ದಾಳಿ ನಡೆಸಿದಾಗ, ಸುಮಾರು 626 ಸಿಂಥಟಿಕ್ ಡ್ರಗ್ ಪಾರ್ಸಲ್‌ಗಳು ಸಿಕ್ಕಿದೆ. 2018ರಂದು ದಾಳಿ ನಡೆಸಿದಾಗ ಡ್ರಗ್ ಸಿಕ್ಕಿತ್ತು. ಹೀಗಾಗಿ ಅಂದಿನಿಂದ ಇಂದಿನವರೆಗೆ ಪೊಲೀಸರು ತಮ್ಮ ಮೇಲೆ ಕಣ್ಣೀಟ್ಟಿರುತ್ತಾರೆಂಬ ಕಾರಣಕ್ಕೆ ಪಾರ್ಸಲ್‌ಗಳನ್ನು ಪಡೆಯಲು ಯಾರು ಬಂದಿಲ್ಲ ಎನ್ನಲಾಗಿದೆ. ಹೀಗಾಗಿ ಅನೇಕ ಪಾರ್ಸಲ್‌ಗಳು ಪೋಸ್ಟ್ ಆಫೀಸ್‌ನಲ್ಲೆ ಬಿದ್ದಿದೆ.

ಮಾದಕ ವಸ್ತುಗಳ ವಿರುದ್ಧ ಸಮರ ಸಾರಿರುವ ನಗರ ಪೊಲೀಸರು , ಮಾಹಿತಿ ಬಂದ ಕಡೆ ದಾಳಿ ನಡೆಸುತ್ತಲೆ ಇದ್ದಾರೆ. ಅದೇ ರೀತಿ ಫಾರೀನ್ ಪೋಸ್ಟ್ ಮೇಲೆ ಕೂಡ ದಾಳಿ ನಡೆಸಲಾಗಿದೆ. ಸದ್ಯ ಯಾವ ಹೆಸರಿಗೆ ಪಾರ್ಸಲ್‌ಗಳು ಬಂದಿದೆ ಎಂಬುದನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ವಿಜಯನಗರ

Karnataka Rain : ವಿಜಯನಗರದಲ್ಲಿ ಸಿಡಿಲು ಬಡಿದು ರೈತರಿಬ್ಬರು ಸಾವು

Karnataka Rain : ವಿಜಯನಗರದಲ್ಲಿ ಸಿಡಿಲು ಬಡಿದು ರೈತರಿಬ್ಬರು ಮೃತಪಟ್ಟಿದ್ದಾರೆ. ಚಿಕ್ಕಮಗಳೂರಿನಲ್ಲಿ ಟಿಟಿ ಡ್ರೈವರ್‌ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

VISTARANEWS.COM


on

By

karnataka rain
ಸಾಂದರ್ಭಿಕ ಚಿತ್ರ
Koo

ವಿಜಯನಗರ: ಸಿಡಿಲು ಬಡಿದು ಇಬ್ಬರು ರೈತರು ಮೃತಪಟ್ಟಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನ ಹಳ್ಳಿ ತಾಲೂಕಿನ ದಶಮಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಬಣಕಾರ್ ನಾರಪ್ಪ (58), ಬಣಕಾರ್ ಪ್ರಶಾಂತ್ (40) ಮೃತ ದುರ್ದೈವಿ. ಹಗರಿಬೊಮ್ಮನಹಳ್ಳಿ ತಹಸೀಲ್ದಾರ್ ಕವಿತಾ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೊಲದಲ್ಲಿ ಕೆಲಸ ಮಾಡುವ ವೇಳೆ ಸಿಡಿಲು ಬಡಿದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಗರಿಬೊಮ್ಮನ ಹಳ್ಳಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

ಟಿಟಿ ಡ್ರೈವರ್‌ ಚಿಕ್ಕಮಗಳೂರಿನಲ್ಲಿ ಹೃದಯಾಘಾತದಿಂದ ಸಾವು

ಚಿಕ್ಕಮಗಳೂರಿನಲ್ಲಿ ಟಿಟಿ ಡ್ರೈವರ್‌ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬೆಂಗಳೂರಿನ ಟಿಟಿ ಡ್ರೈವರ್ ಚಿಕ್ಕಮಗಳೂರಿಗೆ ಪ್ರವಾಸಿಗರನ್ನು ಕರೆತಂದಾಗ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವಿನಾಶ್ (25) ಮೃತ ದುರ್ದೈವಿ. ಬೆಂಗಳೂರಿನ ಸೋಮನಹಳ್ಳಿ ಮೂಲದ ಅವಿನಾಶ್ ಮೂರು ವರ್ಷದ ಹಿಂದೆ ಮದುವೆಯಾಗಿದ್ದು, 2 ವರ್ಷದ ಮಗು ಇದೆ. ಪ್ರವಾಸಿಗರನ್ನು ಹೋಂ ಸ್ಟೇ ಬಳಿ ಬಿಟ್ಟು ಬಂದ ಬಳಿಕ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ಕೂಡಲೇ ಆಸ್ಪತ್ರೆಗೆ ಸೇರಿಸಲು ಪ್ರಯತ್ನಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕೆರೆಯಂತಾದ ಕ್ರೀಡಾಂಗಣ

ರಾತ್ರಿ ಸುರಿದ ಮಳೆಗೆ ಕ್ರೀಡಾಂಗಣ ಜಲಾವೃತವಾಗಿದೆ. ಬೆಂಗಳೂರು ಹೊರವಲಯದ ಆನೇಕಲ್ ಪಟ್ಟಣದಲ್ಲಿನ ತಾಲೂಕು ಮಟ್ಟದ ಕ್ರೀಡಾಂಗಣವು ಕೆರೆಯಂತೆ ಭಾಸವಾಗುತ್ತಿದೆ. ಪ್ರತಿಬಾರಿ ಮಳೆ ಬಂದಾಗ ಕ್ರೀಡಾಂಗಣ ಜಲಾವೃತಗೊಳ್ಳುತ್ತದೆ. ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿದ್ದ ಕ್ರೀಡಾಂಗಣವು ಕ್ರೀಡಾ ಇಲಾಖೆ ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಅವ್ಯವಸ್ಥೆ ಆಗಿದೆ. ಸರಿಯಾದ ನಿರ್ವಹಣೆ ಇಲ್ಲದೆ ಕ್ರೀಡಾಂಗಣ ಹಾಳಾಗಿದೆ.

ಕೆಸರು ಗದ್ದೆಯಾದ ರಸ್ತೆ

ರಾತ್ರಿ ಸುರಿದ ಭಾರಿ ಮಳೆಗೆ ರಸ್ತೆಯು ಕೆಸರು ಗದ್ದೆಯಾಗಿದೆ. ಹದಗೆಟ್ಟ ರಸ್ತೆಯಲ್ಲಿ ಸಂಚರಿಸಲಾಗದೆ ನಿವಾಸಿಗಳು ಪರದಾಡುತ್ತಿದ್ದಾರೆ. ಆನೇಕಲ್‌ನ ಚಂದಾಪುರ ಪುರಸಭೆ ವಾರ್ಡ್ ನಂಬರ್ 20ರಲ್ಲಿ ಘಟನೆ ನಡೆದಿದೆ. ಹೆಡ್ ಮಾಸ್ಟರ್ ಲೇಔಟ್‌ಗೆ ಸಂಪರ್ಕ್ ಕಲ್ಪಿಸುವ ರಸ್ತೆ ಇದಾಗಿದೆ. ಮಳೆ ಬಂದಾಗ ರಸ್ತೆ ಜಲಾವೃತಗೊಂಡು ಸಂಪೂರ್ಣ ಕೆಸರುಮಯವಾಗಿದೆ. ನಿತ್ಯ ಓಡಾಡುವ ಜನರಿಗೆ ಈ ರಸ್ತೆಯಲ್ಲಿ ಸಂಚರಿಸುವುದೆ ನರಕಯಾತನೆ ಆಗಿದೆ. ಮಳೆ ಬಂದಾಗ ಕೆಸರು ಗದ್ದೆ, ಬಿಸಿಲಿನ ಸಮಯದಲ್ಲಿ ಧೂಳಿನ ಸಮಸ್ಯೆ ಎದುರಾಗಿದೆ. ರಸ್ತೆಯಲ್ಲಿ ಹಳ್ಳಗುಂಡಿಗಳು ಕಾಣದೆ ಬಿದ್ದು ನಿವಾಸಿಗಳು ಆಸ್ಪತ್ರೆ ಪಾಲಾಗುತ್ತಿದ್ದಾರೆ. ಚಂದಾಪುರ ಪುರಸಭೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮೈಸೂರು

Murder Case : ಮೈಸೂರಿನಲ್ಲಿ ಬಾವಿ ಪತ್ನಿಯನ್ನು ಕೊಂದು‌ ನೇಣು ಹಾಕಿದ ದುರುಳ!

Murder Case : ಮೈಸೂರಿನಲ್ಲಿ ಬಾವಿ ಪತ್ನಿಯನ್ನು ಕೊಂದು‌ ನೇಣು ಹಾಕಿರುವ ಆರೋಪ ಕೇಳಿ ಬಂದಿದೆ. ಆರೋಪಿ ಪೊಲೀಸರಿಗೆ ಶರಣಾಗಿದ್ದಾನೆ.

VISTARANEWS.COM


on

By

Murder case
Koo

ಮೈಸೂರು: ಬಾವಿ ಪತ್ನಿಯನ್ನು ಕೊಂದು‌ ನೇಣು ಹಾಕಿರುವ (Murder Case) ಆರೋಪವೊಂದು ಕೇಳಿ ಬಂದಿದೆ. ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಹಿರೇಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಕವಿತಾ (20) ಕೊಲೆಯಾದ ದುರ್ದೈವಿ. ನಿರಂಜನ ಅಲಿಯಾಸ್ ಜಗ್ಗ ಎಂಬಾತನ ಮೇಲೆ ಕೊಲೆ ಆರೋಪವಿದೆ.

ಪುಟ್ಟಮಲ್ಲಪ್ಪ ಹಾಗೂ ಶಿವನಂಜಮ್ಮ ದಂಪತಿ ಪುತ್ರಿ ಕವಿತಾಳಿಗೆ ಇದೇ ಅಕ್ಟೋಬರ್ 21ಕ್ಕೆ ನಿರಂಜನ ಜತೆಗೆ ಮದುವೆ ದಿನಾಂಕ ನಿಶ್ಚಯವಾಗಿತ್ತು. ಕವಿತಾ ಪೋಷಕರು ಜಮೀನಿಗೆ ಹೋದಾಗ ನಿರಂಜನ ಮನೆಗೆ ಬಂದಿದ್ದ. ಈ ವೇಳೆ ಕವಿತಾ ಜತೆಗೆ ಜಗಳ ಮಾಡಿ ಕೊಲೆ ಮಾಡಿ ನೇಣು ಹಾಕಿ ಪರಾರಿ ಆಗಿದ್ದಾನೆ. ಮನೆಯ ಹೆಂಚು ತೆಗೆದು ಓಡಿ‌ ಹೋಗುವಾಗ ಗ್ರಾಮಸ್ಥರಿಂದ ತಡೆಯುವ ಯತ್ನ ನಡೆದಿದೆ.

murder case
murder case

ಎಚ್.ಡಿ.ಕೋಟೆ ಅಂತರಸಂತೆ ಠಾಣೆಗೆ ತೆರಳಿ ಪೊಲೀಸರಿಗೆ ಆರೋಪಿ ಶರಣಾಗಿದ್ದಾನೆ. ನಾನು ಕೊಲೆ‌ ಮಾಡಿಲ್ಲ. ಜನರು ಹೊಡೆದು ಸಾಯಿಸಿ ಬಿಡುತ್ತಾರೆ ಎಂದು ಓಡಿ ಹೋದೆ ಅಷ್ಟೇ ಎಂದು ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ. ಆದರೆ ಕವಿತಾ ಆತ್ಮಹತ್ಯೆ ಮಾಡಿಕೊಂಡಳಾ ಅಥವಾ ಕೊಲೆ ಆಗಿದ್ಯಾ ? ಆಗಿದ್ದರೆ ಯಾಕಾಗಿ ಎಂಬ ಪ್ರಶ್ನೆ ಪೊಲೀಸರ ತನಿಖೆಯಿಂದ ತಿಳಿಯಬೇಕಿದೆ.

ಹಾಸನದಲ್ಲಿ ಶಿಕ್ಷಕ ಆತ್ಮಹತ್ಯೆ

ಲಾಡ್ಜ್‌ನಲ್ಲಿ ನೇಣು ಬಿಗಿದುಕೊಂಡು ಶಿಕ್ಷಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಂಗಸ್ವಾಮಿ (57) ಆತ್ಮಹತ್ಯೆಗೆ ಶರಣಾದವರು. ಹಾಸನ ನಗರದ ಬಿ.ಎಂ.ರಸ್ತೆಯಲ್ಲಿರುವ ಗೋಕುಲ್‌ ಲಾಡ್ಜ್‌ನಲ್ಲಿ ಘಟನೆ ನಡದಿದೆ. ನಿನ್ನೆ ಗೋಕುಲ್‌ ಲಾಡ್ಜ್‌ನಲ್ಲಿ ರೂಂ ಪಡೆದು ಉಳಿದುಕೊಂಡಿದ್ದರು. ರಂಗಸ್ವಾಮಿ ಬೇಲೂರು ತಾಲೂಕಿನ, ತೊಳಲು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದರು. ನಿವೃತ್ತಿಯಾಗಲು ಮೂರು ವರ್ಷ ಬಾಕಿಯಿತ್ತು. ಶಿಕ್ಷಕ ರಂಗಸ್ವಾಮಿ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೆ.ಆರ್.ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Missing case
ದಕ್ಷಿಣ ಕನ್ನಡ1 ಗಂಟೆ ago

Missing case : ಮಾಜಿ ಶಾಸಕ‌ ಮೊಯ್ದೀನ್ ಬಾವಾರ ಸಹೋದರ ಮಿಸ್ಸಿಂಗ್‌; ಸೇತುವೆ ಬಳಿ ಡ್ಯಾಮೇಜ್‌ ಸ್ಥಿತಿಯಲ್ಲಿ ಕಾರು ಪತ್ತೆ

Drugs mafia
ಬೆಂಗಳೂರು3 ಗಂಟೆಗಳು ago

Drugs Mafia : ಫಾರಿನ್ ಪೋಸ್ಟ್ ಆಫೀಸ್‌ನಲ್ಲಿ 626 ಮಾದಕ ವಸ್ತುಗಳ ಪಾರ್ಸಲ್‌ಗಳು ಪತ್ತೆ!

karnataka rain
ವಿಜಯನಗರ4 ಗಂಟೆಗಳು ago

Karnataka Rain : ವಿಜಯನಗರದಲ್ಲಿ ಸಿಡಿಲು ಬಡಿದು ರೈತರಿಬ್ಬರು ಸಾವು

Murder case
ಮೈಸೂರು5 ಗಂಟೆಗಳು ago

Murder Case : ಮೈಸೂರಿನಲ್ಲಿ ಬಾವಿ ಪತ್ನಿಯನ್ನು ಕೊಂದು‌ ನೇಣು ಹಾಕಿದ ದುರುಳ!

Drowned in water
ಉತ್ತರ ಕನ್ನಡ6 ಗಂಟೆಗಳು ago

Drowned in Water : ಸಮುದ್ರದ ಅಲೆಗೆ ಸಿಲುಕಿ ವಿದ್ಯಾರ್ಥಿ ಸಾವು; ಹಿಟ್‌ ಆ್ಯಂಡ್‌ ರನ್‌ಗೆ ತಮಿಳುನಾಡು ಮೂಲದ ವಿದ್ಯಾರ್ಥಿ ಬಲಿ

karnataka rain
ಮಳೆ6 ಗಂಟೆಗಳು ago

Karnataka Rain : ಸತತ ಮಳೆಗೆ ಮನೆಯ ಗೋಡೆ ಕುಸಿದು ವೃದ್ಧ ಸಾವು

murder case
ಚಿಕ್ಕೋಡಿ7 ಗಂಟೆಗಳು ago

Murder Case : ವಿಕೋಪಕ್ಕೆ ತಿರುಗಿದ ಅಣ್ಣ-ತಮ್ಮಂದಿರ ಗಲಾಟೆ; ಓರ್ವನ ಕೊಲೆಯಲ್ಲಿ ಅಂತ್ಯ

Lovers Death
ಕೋಲಾರ7 ಗಂಟೆಗಳು ago

Lovers Death : ವಿಷ ಸೇವಿಸಿ ಪ್ರೇಮಿಗಳು ಆತ್ಮಹತ್ಯೆಗೆ ಯತ್ನ; ಅಪ್ರಾಪ್ತೆ ಸಾವು, ಹುಡುಗ ಗಂಭೀರ

Karnataka Rain
ಮಳೆ8 ಗಂಟೆಗಳು ago

karnataka Rain : ಬೆಂಗಳೂರಿನಲ್ಲಿ ಮಳೆ ಬಂದೋಯ್ತು, ಯಡವಟ್ಟು ಆಯ್ತು; ಜನರಿಗೆ ತಲೆ ಕೆಟ್ಟು ಹೋಯಿತು

Dina Bhvishya
ಭವಿಷ್ಯ9 ಗಂಟೆಗಳು ago

Dina Bhavishya : ಅತಿರೇಕದಲ್ಲಿ ಮಾತನಾಡುವ ಮುನ್ನ ಈ ರಾಶಿಯವರು ಯೋಚಿಸಿ

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ3 ದಿನಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್1 ತಿಂಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 ತಿಂಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌