Chitradurga News: ಹೊಳಲ್ಕೆರೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ - Vistara News

ಚಿತ್ರದುರ್ಗ

Chitradurga News: ಹೊಳಲ್ಕೆರೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Chitradurga News: ಹೊಳಲ್ಕೆರೆ ಪಟ್ಟಣದ ಸಂವಿಧಾನಸೌಧದಲ್ಲಿ ಬುಧವಾರ 68 ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.

VISTARANEWS.COM


on

Kannada Rajyotsava celebration at Holalkere
ಹೊಳಲ್ಕೆರೆ ಪಟ್ಟಣದ ಸಂವಿಧಾನಸೌಧದಲ್ಲಿ ಬುಧವಾರ 68 ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಳಲ್ಕೆರೆ: ಭಾರತದ ಭೂಪಟದಲ್ಲಿ ಕರ್ನಾಟಕ (Karnataka) ರಾಜ್ಯಕ್ಕೆ ಅತ್ಯುತ್ತಮವಾದ ಸ್ಥಾನವಿದೆ, ಕನ್ನಡ ನಾಡು, ನುಡಿ, ನೆಲ, ಜಲಕ್ಕೆ ವಿಶಿಷ್ಟತೆಯಿದೆ ಎಂದು ಹೊಳಲ್ಕೆರೆ ಶಾಸಕ ಡಾ. ಎಂ. ಚಂದ್ರಪ್ಪ ತಿಳಿಸಿದರು.

ಪಟ್ಟಣದ ಸಂವಿಧಾನಸೌಧದಲ್ಲಿ ಬುಧವಾರ 68ನೇ ಕನ್ನಡ ರಾಜ್ಯೋತ್ಸವದಲ್ಲಿ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ಅವರು, ಹಿಂದುಳಿದ ಜನಾಂಗದ ಬಗ್ಗೆ ಅಪಾರವಾದ ಕಾಳಜಿಯಿಟ್ಟುಕೊಂಡಿದ್ದ ಧೀಮಂತ ನಾಯಕ, ಹಿಂದುಳಿದ ವರ್ಗಗಳ ಹರಿಕಾರ, ದಿವಂಗತ ಡಿ.ದೇವರಾಜ ಅರಸುರವರು ಮೈಸೂರನ್ನು ಕರ್ನಾಟಕವೆಂದು ನಾಮಕರಣ ಮಾಡಿ ಇಂದಿಗೆ ಐವತ್ತು ವರ್ಷಗಳಾಗಿವೆ ಎಂದು ಹೇಳಿದರು.

ಇದನ್ನೂ ಓದಿ: Money Guide : ನಿವೃತ್ತಿ ಬಳಿಕ ಹಣದ ಚಿಂತೆ; ಈ 10 ಟಿಪ್ಸ್​ ಪಾಲಿಸಿದರೆ ನೋ ಟೆನ್ಷನ್​!

ಕನ್ನಡ ಭಾಷೆಗೆ ಕೇಂದ್ರ ಸರ್ಕಾರ ಶಾಸ್ತ್ರೀಯ ಸ್ಥಾನಮಾನ ನೀಡಿದೆ. ವಿದ್ಯಾರ್ಥಿಗಳು ಶಿಕ್ಷಣವಂತರಾಗುವುದರ ಜೊತೆಗೆ ಬುದ್ಧಿವಂತರಾಗಿ ಗುರು-ಹಿರಿಯರು ತಂದೆ-ತಾಯಿಗಳಿಗೆ ಕೀರ್ತಿ ತರುವಂತಾಗಬೇಕು ಎಂದರು.

ಇದೇ ವೇಳೆ ಎಸ್‌ಎಸ್‌ಎಲ್‌ಸಿ ಮತ್ತು ಪಿ.ಯು.ಸಿ.ಯಲ್ಲಿ ಅತಿ ಹೆಚ್ಚಿನ ಅಂಕಗಳನ್ನು ಗಳಿಸಿರುವ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಇದನ್ನೂ ಓದಿ: Actor Rishi: ರಿಷಿ ಮುಡಿಗೇರಿದ ಒಟಿಟಿ ಅವಾರ್ಡ್!

ಈ ಸಂದರ್ಭದಲ್ಲಿ ತಹಸೀಲ್ದಾರ್ ಬೀಬಿ ಫಾತಿಮ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರವಿಕುಮಾರ್, ಪುರಸಭೆ ಮುಖ್ಯಾಧಿಕಾರಿ ಎ.ವಾಸೀಂ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಶಿವಮೂರ್ತಿ, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಹನುಮಂತಪ್ಪ, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಲೋಕೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀನಿವಾಸ್, ಪುರಸಭೆ ಸದಸ್ಯರುಗಳಾದ ಅಶೋಕ್, ಕೆ.ಸಿ.ರಮೇಶ್, ಪಿ.ಎಂ.ಮುರುಗೇಶ್, ಮಲ್ಲಿಕಾರ್ಜುನಸ್ವಾಮಿ, ವಿಜಯ, ನಾಗರತ್ನ ವೇದಮೂರ್ತಿ, ಸುಧಾ ಬಸವರಾಜ್, ಸೈಯದ್ ಸಜೀಲ್, ಸೈಯದ್ ಮನ್ಸೂರ್ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka Rain : ಒಂದೇ ಮಳೆಗೆ ಬೆಂಗಳೂರಿನ ಹಲವು ಏರಿಯಾಗಳು ಸಣ್ಣ ದ್ವೀಪದಂತಾಗಿದೆ. ಚಿಕ್ಕಮಗಳೂರಿನ ಕಳಸದಲ್ಲೂ ಮಳೆಯು ಅಬ್ಬರಿಸುತ್ತಿದೆ. ಹಲವೆಡೆ ಮಳೆಯಿಂದ ಅವಘಡ ಮುಂದುವರಿದಿದೆ.

VISTARANEWS.COM


on

By

Karnataka Rain
Koo

ಬೆಂಗಳೂರು/ಚಿಕ್ಕಮಗಳೂರು: ಬೆಂಗಳೂರಿನಲ್ಲಿ ಗಂಟೆ ಕಾಲ ಸುರಿದ ಮಳೆಗೆ (Karnataka Rain) ರಸ್ತೆಗಳೆಲ್ಲವೂ ಹೊಳೆಯಂತಾಗಿದೆ. ರಾಜಕಾಲುವೆಯಿಂದ ಯಲಹಂಕ ನಿವಾಸಿಗಳಿಗೆ ನಿತ್ಯ ಸಂಕಷ್ಟ ಎದುರಿಸುವಂತಾಗಿದೆ. ನಿನ್ನೆ ಶನಿವಾರ ರಾತ್ರಿ ಸುರಿದ ಮಳೆಗೆ ಇಡೀ ಏರಿಯಾ ಜಲಾವೃತಗೊಂಡಿದೆ.

karnataka rain

ಯಲಹಂಕದ ನಾರ್ಥ್‌ ಹುಡ್ ಅಪಾರ್ಟ್‌ಮೆಂಟ್ ಸುತ್ತಮುತ್ತ ನೀರು ತುಂಬಿ ಅವಾಂತರವೇ ಸೃಷ್ಟಿಯಾಗಿದೆ. ಕಳೆದ ಒಂದು ವಾರದಿಂದ ರಾಜಕಾಲುವೆಯಿಂದ ನೀರು ಹರಿಯುತ್ತಿದೆ. ಸ್ಟಾರ್ಮ್ ವಾಟರ್ ಡ್ರೇನ್ ಓಪನ್ ಬಿಟ್ಟಿರುವುದರಿಂದ ಈ ಸಮಸ್ಯೆ ಆಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇನ್ನೂ ರಾಜಕಾಲುವೆ ನೀರಿನ ವಾಸನೆಗೆ ನಿವಾಸಿಗಳು ಕಂಗಾಲಾಗಿದ್ದಾರೆ. ಗಬ್ಬು ವಾಸನೆ ತಾಳಲಾರದೇ ಕೆಲ ನಿವಾಸಿಗಳು ಮನೆ ಖಾಲಿ ಮಾಡಿದ್ದಾರೆ. ರಾತ್ರಿಯಿಂದಲೂ ಮೋಟಾರ್‌ ಮೂಲಕ ನೀರು ಹೊರಹಾಕುತ್ತಿದ್ದಾರೆ. ಸುತ್ತಮುತ್ತಲಿನ ಐದಾರು ಅಪಾರ್ಟ್ ಮೆಂಟ್ ನಿವಾಸಿಗಳಿಗೆ ಸಂಕಷ್ಟ ಎದುರಾಗಿದೆ. ವಾರದ ಹಿಂದೆ ಬಿಬಿಎಂಪಿಗೆ ಪತ್ರ ಬರೆದರೂ ಯಾವುದೇ ಪ್ರಯೋಜವಿಲ್ಲ ಎಂದು ಕಿಡಿಕಾರಿದ್ದಾರೆ. ರಾಜಕಾಲುವೆಯಿಂದ ನೀರು ತುಂಬಿ 22 ಮನೆಗಳ ನಿವಾಸಿಗಳು ಪರದಾಡುತ್ತಿದ್ದಾರೆ. ಪಕ್ಕದಲ್ಲಿರುವ ಪುಟ್ಟೇನಹಳ್ಳಿ ಕೆರೆಗೆ ನೀರು ಹರಿಯದೇ ಇರುವುದರಿಂದ ಆ ನೀರು ಕೂಡ ಸೇರುತ್ತಿದೆ. ರಾಜಕಾಲುವೆ, ಮಳೆ ನೀರು ಸೇರಿ ಇಡೀ ಏರಿಯಾ ಕೆರೆಯಂತಾಗಿದೆ.

ಇದನ್ನೂ ಓದಿ: Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ಕಳಸ ತಾಲೂಕಿನಾದ್ಯಂತ ಧಾರಾಕಾರ ಮಳೆ

ಕಾಫಿನಾಡು ಮಲೆನಾಡಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಭಾರೀ ಗಾಳಿ-ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಕಳಸ ತಾಲೂಕಿನಾದ್ಯಂತ ಧಾರಾಕಾರ ಮಳೆಗೆ ಕಳಸ ದೇವಸ್ಥಾನದ ಎತ್ತರದ ಪ್ರದೇಶದಿಂದ ನೀರು ಹರಿಯುತ್ತಿದೆ. ದಕ್ಷಿಣ ಕಾಶಿ ಕಳಸೇಶ್ವರ ಸ್ವಾಮಿ ದೇವಸ್ಥಾನದ ಮೆಟ್ಟಿಲು ಮೇಲಿಂದ ನೀರು ಹರಿಯುತ್ತಿದೆ. ಇತ್ತ ಮೆಟ್ಟಿಲ ಮೇಲೆ ನಿಂತು ಮಳೆ ನೀರಲ್ಲಿ ಮಕ್ಕಳು ಆಟವಾಡುತ್ತಿರುವ ದೃಶ್ಯ ಕಂಡು ಬಂತು. ಗಾಳಿ-ಮಳೆಗೆ ಮರ ಬಿದ್ದು ಗ್ರಾಮೀಣ ಭಾಗದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಕುದುರೆಮುಖ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಭದ್ರಾ ನದಿ ಒಳಹರಿವಿನಲ್ಲಿ ನೀರಿನ ಪ್ರಮಾಣ ಹೆಚ್ಚಳಗೊಂಡಿದೆ.

karnataka rain

ಕೊಪ್ಪಳದಲ್ಲೂ ಮುಂಗಾರು ಪೂರ್ವ ಮಳೆ

ಕೊಪ್ಪಳದಲ್ಲಿ ಭಾನುವಾರ ಮುಂಗಾರು ಪೂರ್ವ ಮಳೆ ಆರಂಭವಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ ಮೂರು ದಿನಗಳಿಂದ ಆಗಾಗ ಮಳೆ ಸುರಿಯುತ್ತಿದೆ. ನಿನ್ನೆ ಶನಿವಾರ ಸಂಜೆ ಸುರಿದಿದ್ದ ಮಳೆಯು ಭಾನುವಾರ ಬೆಳಗಿನವರೆಗೆ ಬಿಡುವು ಕೊಟ್ಟಿತ್ತು. ಮಧ್ಯಾಹ್ನದ ನಂತರ ಧೋ ಎಂದು ಗುಡುಗು ಸಹಿತ ಮಳೆ ಸುರಿಯುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain : ಭಾನುವಾರದ ವೀಕೆಂಡ್‌ ಮೂಡ್‌ನಲ್ಲಿದ್ದವರಿಗೆ ಮಳೆಯು ಮನೆಯಲ್ಲೇ ಕೂರುವಂತೆ ಮಾಡಿದೆ. ಬೆಂಗಳೂರು, ಆನೇಕಲ್‌ ಸೇರಿದಂತೆ ವಿವಿಧೆಡೆ ಮಳೆಯಾಗುತ್ತಿದ್ದು, ವಿಜಯನಗರದಲ್ಲಿ ಸಿಡಿಲು ಬಡಿದು ಎರಡು ಜಾನುವಾರು ಮೃತಪಟ್ಟಿವೆ. ದಾವಣಗೆರೆಯಲ್ಲಿ ಮಳೆಗೆ ಬೆಳೆಯು ಕೊಚ್ಚಿ ಹೋಗಿದೆ.

VISTARANEWS.COM


on

By

Karnataka rain
Koo

ವಿಜಯನಗರ/ಬೆಂಗಳೂರು: ರಾಜ್ಯಾದ್ಯಂತ ಭಾನುವಾರ ಹಲವೆಡೆ ಗುಡುಗು ಸಹಿತ ಮಳೆ (Karnataka Rain) ಅಬ್ಬರಿಸಿದೆ. ವಿಜಯನಗರ ಜಿಲ್ಲೆಯಲ್ಲಿ ಅರ್ಧ ಗಂಟೆಗೂ ಅಧಿಕ ಸಮಯ ಗುಡುಗು, ಸಿಡಿಲು ಸಹಿತ ಮಳೆ ಸುರಿದಿದೆ. ಹೊಸಪೇಟೆ ತಾಲೂಕಿನ ಗಾದಿಗನೂರು ಗ್ರಾಮದಲ್ಲಿ ಸಿಡಿಲು ಬಡಿದು ಎರಡು ಜಾನುವಾರುಗಳು ಮೃತಪಟ್ಟಿವೆ. ಕೋರಿ ಮಲಿಯಪ್ಪ ಎಂಬ ರೈತರಿಗೆ ಸೇರಿದ ಎತ್ತುಗಳನ್ನು ಹೊಲದಲ್ಲಿ ಮರದಡಿ ಕಟ್ಟಿ ಹಾಕಿದ್ದರು. ಈ ವೇಳೆ ಸಿಡಿಲು ಬಡಿದು ಎರಡು ಎತ್ತುಗಳು ಮೃತಪಟ್ಟಿವೆ. ಅಂದಾಜು ಒಂದು ಲಕ್ಷಕ್ಕೂ ಅಧಿಕ ಮೌಲ್ಯದ ಎತ್ತುಗಳು ಸಾವನ್ನಪ್ಪಿದ್ದರಿಂದ ರೈತ ಕೋರಿ ಮಲಿಯಪ್ಪ ಕಂಗಲಾಗಿದ್ದಾರೆ.

ಬೆಂಗಳೂರು, ಆನೇಕಲ್‌ನಲ್ಲಿ ಗುಡುಗು ಸಹಿತ ಮಳೆ

ರಾಜಧಾನಿ ಬೆಂಗಳೂರಿನಲ್ಲಿ ಮಳೆ ಮುಂದುವರಿದಿದೆ. ಸಂಜೆಗೆ ಆವರಿಸುತ್ತಿದ್ದ ಮಳೆ ಭಾನುವಾರ ಬೆಳಗಿನಿಂದಲೇ ಅಬ್ಬರಿಸುತ್ತಿದೆ. ಎಂಎಸ್ ಬಿಲ್ಡಿಂಗ್ , ವಿಧಾನಸೌಧ , ಶಿವಾನಂದ ಸರ್ಕಲ್, ಶಿವಾಜಿನಗರ ಸೇರಿದಂತೆ ಮೆಜೆಸ್ಟಿಕ್‌ ಸುತ್ತಮುತ್ತ ಮಧ್ಯಾಹ್ನ ಶುರುವಾದ ಮಳೆಯು ಸುಮಾರು 1 ಗಂಟೆಗೂ ಹೆಚ್ಚು ಸಮಯ ಆವರಿಸಿತ್ತು. ಆಗಾಗ ಬರುತ್ತಿದ್ದ ಗುಡುಗು ಜನರನ್ನು ಬೆಚ್ಚಿ ಬೀಳಿಸುತ್ತಿತ್ತು. ಕೆ.ಆರ್ ಸರ್ಕಲ್, ಕಬ್ಬನ್ ಪಾರ್ಕ್ ರಸ್ತೆ, ಲಾಲ್ ಬಾಗ್ ರಸ್ತೆ, ರಾಜಾಜಿನಗರ, ರಾಜಕುಮಾರ್ ರಸ್ತೆಯಲ್ಲಿಯೂ ಮಳೆಯಾಗಿದೆ. ಯಲಹಂಕ, ನ್ಯೂ ಟೌನ್, ದೊಡ್ಡಬಳ್ಳಾಪುರ ಮುಖ್ಯರಸ್ತೆ, ಪುಟ್ಟೇನಹಳ್ಳಿ, ಏರ್‌ಪೋರ್ಟ್‌ ರೋಡ್‌ನಲ್ಲಿ ಮಳೆಯಾಗಿದೆ.

ಇತ್ತ ಆನೇಕಲ್ ಭಾಗದಲ್ಲೂ ಧಾರಾಕಾರ ಮಳೆಯಾಗಿತ್ತು. ಭಾನುವಾರ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ನದ ವೇಳೆಗೆ ಆಗಮಿಸಿದ ಮಳೆಯು ಆನೇಕಲ್, ಅತ್ತಿಬೆಲೆ, ಸರ್ಜಾಪುರ ಭಾಗದಲ್ಲಿ ಅಬ್ಬರಿಸಿತ್ತು. ಕಳೆದೊಂದು ವಾರದಿಂದ ನಿರಂತರ ಮಳೆಯಿಂದಾಗಿ ಕೃಷಿ ಚಟುವಟಿಕೆ ಚುರುಕುಗೊಂಡಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ಧಾರವಾಡದಲ್ಲೂ ಮಳೆ

ಪೇಡಾನಗರಿ ಧಾರವಾಡದಲ್ಲೂ ವರುಣನ ಅಬ್ಬರ ಮುಂದುವರಿದಿದೆ. ಮಧ್ಯಾಹ್ನದ ವೇಳೆ ಶುರುವಾದ ಮಳೆಯಿಂದಾಗಿ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಮಳೆಯಿಂದಾಗಿ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ವಿಜಯನಗರದಲ್ಲಿ ಮರಕ್ಕೆ ಬಡಿದ ಸಿಡಿಲು

ವಿಜಯನಗರದಲ್ಲಿ ಗುಡುಗು ಸಿಡಿಲು ಸಮೇತ ಮಳೆಯಾಗುತ್ತಿದ್ದು, ತೆಂಗಿನ ಮರಕ್ಕೆ ಸಿಡಿಲು ಬಡಿದಿದೆ. ಹೊಸಪೇಟೆ ತಾಲೂಕಿನ ಕೆರೆ ತಾಂಡಾ ಗ್ರಾಮದಲ್ಲಿ ಮರಕ್ಕೆ ಸಿಡಿಲು ಬಡಿದಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆ, ಕಮಲಾಪುರ, ಹಂಪಿ ಭಾಗದಲ್ಲಿ ಉತ್ತಮ ಮಳೆಯಾಗಿದೆ. ಇತ್ತ ಹೊಸಪೇಟೆ ಹೃದಯ ಭಾಗದಲ್ಲಿ ರಸ್ತೆ ಮೇಲೆ ನೀರು ನಿಂತು ಅವಾಂತರವೇ ಸೃಷ್ಟಿಯಾಗಿತ್ತು. ನೂರು ಹಾಸಿಗೆ ಆಸ್ಪತ್ರೆ, VNC ಕಾಲೇಜಿಗೆ ಹೋಗುವ ರಸ್ತೆ ಮೇಲೆ ನೀರು ನಿಂತಿತ್ತು. ಕೆಲ ಸಮಯ ವಾಹನಗಳ ಸಂಚಾರ ಅಡಚಣೆ ಉಂಟಾಯಿತು

ಇದನ್ನೂ ಓದಿ: Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ದಾವಣಗೆರೆಯಲ್ಲಿ ನೆಲ ಕಚ್ಚಿದ ಬೆಳೆ

ಶನಿವಾರ ಸುರಿದ ಮಳೆಯಿಂದ ಭತ್ತದ ಬೆಳೆ‌ಯು ನೆಲ ಕಚ್ಚಿದೆ. ದಾವಣಗೆರೆಯ ದೊಡ್ಡಬಾತಿ ಗ್ರಾಮದ ಸುತ್ತಮುತ್ತಲಿನ 20ಕ್ಕೂ ಹೆಚ್ಚು ಎಕರೆ ಭತ್ತದ ಬೆಳೆ ನಾಶವಾಗಿದೆ. ಉಮೇಶ್ ಎಂಬ ಯುವ ರೈತ ಬೆಳೆದಿದ್ದ ಎರಡು ಎಕರೆ ಭತ್ತ ಸಂಪೂರ್ಣ ನಾಶವಾಗಿತ್ತು. ಬರಗಾಲದ ಸಂದರ್ಭದಲ್ಲಿ ಬೋರ್ ವೆಲ್ ನೀರಿನಲ್ಲಿ ಭತ್ತ ಬೆಳೆ ಬೆಳೆದಿದ್ದರು. ಎಕರೆಗೆ 25 ರಿಂದ 30 ಸಾವಿರ ಖರ್ಚು ಮಾಡಿ ಬೆಳೆದಿದ್ದ ಬೆಳೆಯು ರಾತ್ರಿ ಸುರಿದ ಮಳೆಗೆ ಸಂಪೂರ್ಣ ನಾಶವಾಗಿದೆ. ಮಳೆ ಬಾರದೇ ಕಷ್ಟ ಅನುಭವಿಸಿದ ರೈತರಿಗೆ ಈಗ ಮಳೆ ಬಂದು ಗಾಯದ ಮೇಲೆ ಬರೆ ಎಳೆದಂತಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Karnataka Rain : ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ರಾತ್ರಿಯಿಡಿ ಸುರಿದ ಮಳೆಯು ಅವಾಂತರವನ್ನೇ ಸೃಷ್ಟಿ ಮಾಡಿದೆ. ಚಿಕ್ಕಮಗಳೂರಿನಲ್ಲಿ ಮಳೆಗೆ (Rain News) ಕಾಂಪೌಂಡ್‌ ಕುಸಿದು ನಾಲ್ಕು ಬೈಕ್‌ಗಳು ಜಖಂಗೊಂಡಿದೆ. ಇತ್ತ ಶಿವಮೊಗ್ಗದಲ್ಲಿ ಮದುವೆ ಮಂಟಪಕ್ಕೆ ನೀರು ನುಗ್ಗಿ ಅಸ್ತವ್ಯಸ್ತವಾಗಿದೆ.

VISTARANEWS.COM


on

By

Karnataka Rain
Koo

ಚಿಕ್ಕಮಗಳೂರು/ ಶಿವಮೊಗ್ಗ: ಚಿಕ್ಕಮಗಳೂರಲ್ಲಿ ಮಳೆಯು (Karnataka Rain) ಅಬ್ಬರಿಸುತ್ತಿದ್ದು, ಜನರು ತತ್ತರಿಸಿ ಹೋಗಿದ್ದಾರೆ. ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ‌ಬಡಾವಣೆಯಲ್ಲಿ ರಾತ್ರಿ ಇಡಿ ಸುರಿದ ಮಳೆಗೆ (Rain News) ಕಾಂಪೌಂಡ್ ಶಿಥಿಲಾವಸ್ಥೆಗೊಂಡು ಕುಸಿದು ಬಿದ್ದಿದೆ. ಕಾಂಪೌಂಡ್‌ ಪಕ್ಕದಲ್ಲಿ ನಿಲ್ಲಿಸಿದ್ದ ನಾಲ್ಕು ಬೈಕ್‌ಗಳು ನಜ್ಜುಗುಜ್ಜಾಗಿತ್ತು. ಸ್ಥಳೀಯರು ಹಳೆ ಕಾಂಪೌಂಡ್ ತೆರೆವಿಗಾಗಿ ಆಗ್ರಹಿಸಿ, ನಗರಸಭೆ ವಿರುದ್ಧ ಆಕ್ರೋಶ ಹೊರಹಾಕಿದರು.

ಚಿಕ್ಕಮಗಳೂರು ನಗರದ ಉದ್ದೇಬೋರನಹಳ್ಳಿಯಲ್ಲಿ ರಾತ್ರಿಯಿಡೀ ಸುರಿದ ಮಳೆಯಿಂದಾಗಿ ಗೊಬ್ಬರದ ಅಂಗಡಿಗೆ ಮೋರಿ ನೀರು ನುಗ್ಗಿತ್ತು. ಲಕ್ಷಾಂತರ ರೂಪಾಯಿ ರಾಸಾಯನಿಕ ಗೊಬ್ಬರ, ಸಿಮೆಂಟ್ ನಾಶವಾಗಿತ್ತು. ರಾಷ್ಟ್ರೀಯ ಹೆದ್ದಾರಿ ಪಕ್ಕದ ನೀರು ನುಗ್ಗಿ ಗೊಬ್ಬರ ನೀರು ಪಾಲಾಗಿತ್ತು. ಮೋರಿ ಕಾಮಗಾರಿ ಮಾಡದೆ ಅರ್ಧಕ್ಕೆ ಬಿಟ್ಟಿರುವ ಹೆದ್ದಾರಿ ಪ್ರಾಧಿಕಾರ ವಿರುದ್ಧ ಸ್ಥಳೀಯರು ಕಿಡಿಕಾರಿದರು.

ಚಿಕ್ಕಮಗಳೂರು ತಾಲೂಕಿನ ಆಲ್ದೂರು, ಕಂಡರ ಕಸ್ಕೆ ಗ್ರಾಮದಲ್ಲಿ ಭಾರಿ ಮಳೆಗೆ ಮನೆಯ ಮೇಲೆ ಮರ ಬಿದ್ದಿತ್ತು. ಕೂದಲೆಳೆ ಅಂತದಲ್ಲಿ ಮನೆಯಲ್ಲಿದ್ದವರು ಪಾರಾಗಿದ್ದರು. ಮರ ಬಿದ್ದ ಪರಿಣಾಮ ಮನೆಯಲ್ಲಿದ್ದ ಪೀಠೋಪಕರಣಗಳು, ಆಹಾರ ಪದಾರ್ಥ ನಾಶವಾಗಿತ್ತು. ಕಳೆದ ರಾತ್ರಿ ಮಲೆನಾಡು-ಬಯಲು ಸೀಮೆಯಲ್ಲಿ ಭಾರೀ ಮಳೆಯಿಂದಾಗಿ ಗುಡಿಸಲಿಗೆ ಚರಂಡಿ ನೀರು ನುಗ್ಗಿತ್ತು.

ಚಿಕ್ಕಮಗಳೂರು ತಾಲೂಕಿನ ಉದ್ದೇಬೋರನಹಳ್ಳಿಯಲ್ಲಿ ಘಟನೆ ನಡೆದಿದೆ. ಚಿಕ್ಕಮಗಳೂರಿನ ಕಳಸ, ಬಾಳೆಹೊನ್ನೂರು, ಮಾಗುಂಡಿ, ಎನ್‌ಆರ್ ಪುರ, ಕೊಪ್ಪ ಶನಿವಾರ ರಾತ್ರಿಯಿಡೀ ಮಳೆ ಸುರಿದಿದೆ. ಕಳಸ-ಬಾಳೆಹೊನ್ನೂರು ರಸ್ತೆಯಲ್ಲಿ ಮಳೆ ನೀರು ನದಿಯಂತೆ ಹರಿದಿದೆ. ಭಾರಿ ಮಳೆ ಹಿನ್ನೆಲೆ ಹಲವು ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಸ್ಥಗಿತವಾಗಿತ್ತು.

ಇದನ್ನೂ ಓದಿ: Electric shock : ಮಳೆಗೆ ತುಂಡಾಗಿ ಬಿದ್ದ ವಿದ್ಯುತ್ ತಂತಿ; ಶಾಕ್‌ನಿಂದ ವ್ಯಕ್ತಿ ಸ್ಪಾಟ್‌ ಡೆತ್

Karnataka Rain

ಮದುವೆ ಊಟ ಮಾಡುವಾಗಲೇ ನುಗ್ಗಿದ ನೀರು

ಶಿವಮೊಗ್ಗದಲ್ಲೂ ಮಳೆಯು ಅವಾಂತರ ಸೃಷ್ಟಿಸಿತ್ತು. ಕಳೆದ ರಾತ್ರಿ ಸುರಿದ ಮಳೆಯಿಂದ ಮದುವೆ ನಡೆಯುತ್ತಿದ್ದ ಹಾಲ್‌ಗೆ ನೀರು ನುಗ್ಗಿದೆ. ಶಿವಮೊಗ್ಗ ನಗರದ ಗುಡ್ಡೆಕಲ್‌ ದೇವಸ್ಥಾನಕ್ಕೆ ಸೇರಿದ ಸಮುದಾಯ ಭವನದಲ್ಲಿ ಮದುವೆ ಸಮಾರಂಭ ನಡೆಯುತ್ತಿತ್ತು. ಮದುವೆಗೆ ಬಂದ ಬಂಧು-ಮಿತ್ರರು ಊಟ ಮಾಡುವಾಗಲೇ ಊಟದ ಹಾಲ್‌ಗೆ ನೀರು ನುಗ್ಗಿತ್ತು. ಮಳೆಯ ನೀರಿನ ನಡುವೆಯೂ ಬೆಳಗಿನ ಉಪಹಾರ ಸೇವನೆ ಮಾಡಿದರು.

ಚಿತ್ರದುರ್ಗದಲ್ಲೂ ಎಡಬಿಡದೆ ಸುರಿದ ಮಳೆ

ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಹಲವೆಡೆ ವರುಣನ ಆರ್ಭಟ ಜೋರಾಗಿದೆ. ತಡರಾತ್ರಿ ಎಡಬಿಡದೆ ಸುರಿದ ಮಳೆಗೆ ಹಳ್ಳ-ಕೊಳ್ಳಗಳು ತುಂಬಿ ಹರಿದಿತ್ತು. ಒಂದೇ ಮಳೆಗೆ ಚೆಕ್ ಡ್ಯಾಂ, ಕೆರೆ ಕಟ್ಟೆಗಳು ತುಂಬಿದ್ದವು. ಹೊಸದುರ್ಗದ ಕೆಲ್ಲೋಡು ಬಳಿ ವೇದಾವತಿ ನದಿ ತುಂಬಿ ಹರಿದಿದೆ. ಕಡದಿನಕೆರೆ ಗ್ರಾಮದಲ್ಲಿ ಮಳೆಗೆ ರಸ್ತೆಯು ಕೊಚ್ಚಿಹೋಗಿತ್ತು. ಇದರಿಂದಾಗಿ ಕೊರಟಿಕೆರೆ, ಬಾಗಶೆಟ್ಟಿ, ಚೌಳ ಹಿರಿಯೂರು ಸಂಪರ್ಕ ಬಂದ್ ಆಗಿತ್ತು. ಇನ್ನೂ ಮೊಳಕಾಲ್ಮೂರು ತಾಲೂಕಿನ ಮೇಗಳ ಕಣಿವೆಲ್ಲಿ ಜಲಪಾತ ಸೃಷ್ಟಿಯಾಗಿತ್ತು. ಧುಮ್ಮಿಕ್ಕಿ ಹರಿಯುತ್ತಿರುವ ಮಳೆ ನೀರು ಕಂಡು ಜನರು ಸಂತಸಗೊಂಡಿದ್ದರು. ಇತ್ತ ಜಿಲ್ಲೆಯಲ್ಲಿ ಟ್ಯಾಂಕರ್ ನೀರು ಹೊಡೆಯುತ್ತಿದ್ದ ರೈತರ ಪಜೀತಿಯನ್ನು ಮಳೆಯು ತಪ್ಪಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ; ಆರೆಂಜ್‌, ಯೆಲ್ಲೋ ಎಚ್ಚರಿಕೆ

Karnataka Weather Forecast : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಆರೆಂಜ್‌ ಹಾಗೂ ಯೆಲ್ಲೋ ಅಲರ್ಟ್‌ ನೀಡಲಾಗಿದೆ. 50 ಕಿ.ಮೀ ವ್ಯಾಪ್ತಿಯಲ್ಲಿ ಬಿರುಗಾಳಿ ಬೀಸಲಿದ್ದು, ಮರದಡಿ ನಿಲ್ಲದಂತೆ ಎಚ್ಚರಿಕೆ ನೀಡಲಾಗಿದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು ಗಾಳಿಯು ಗಂಟೆಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ (Karnataka Weather Forecast) ಬೀಸಲಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ವ್ಯಾಪ್ತಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 31 ಮತ್ತು 22 ಡಿ.ಸೆ ಇರಲಿದೆ.

ಉತ್ತರ ಒಳನಾಡಿನ ಬಳ್ಳಾರಿ, ವಿಜಯನಗರ, ಹಾವೇರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಹಗುರದಿಂದ ಹಗುರವಾದ ಮಳೆಯಾಗಲಿದೆ.

ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ ಇದ್ದು, ಶಿವಮೊಗ್ಗ ಜಿಲ್ಲೆಯಾದ್ಯಂತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡದಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುತ್ತದೆ.

ಇದನ್ನೂ ಓದಿ: Anjali Murder Case: ನನ್ನ ಮಗ ಮಾಡಿದ್ದು ತಪ್ಪು, ಕೋರ್ಟ್ ಅವನಿಗೆ ಯಾವ ಶಿಕ್ಷೆಯಾದ್ರೂ ಕೊಡಲಿ: ಆರೋಪಿ ಗಿರೀಶ್ ತಾಯಿ

ಆರೆಂಜ್‌, ಯೆಲ್ಲೋ ಅಲರ್ಟ್‌

ಚಿತ್ರದುರ್ಗ, ಹಾಸನ, ಕೊಡಗು ಮತ್ತು ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಭಾರೀ ಮಳೆಯೊಂದಿಗೆ ಗುಡುಗು, ಬಿರುಗಾಳಿಯು ಗಂಟೆಗೆ 30-40 ಕಿ.ಮೀ ಬೀಸಲಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ಶಿವಮೊಗ್ಗದಲ್ಲೂ ವ್ಯಾಪಕ ಮಳೆಯಾಗಲಿದೆ. ಹೀಗಾಗಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Prajwal Revanna Case
ಕರ್ನಾಟಕ7 mins ago

Prajwal Revanna Case: ಡಿಕೆಶಿ 100 ಕೋಟಿ ರೂ. ಆಫರ್;‌ ಬೆಂಕಿ ಇಲ್ಲದೆ ಹೊಗೆಯಾಡಲ್ಲ ಎಂದ ಆರ್.‌ ಅಶೋಕ್

Karnataka Rain
ಮಳೆ10 mins ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

FSSAI alert
ಆರೋಗ್ಯ18 mins ago

FSSAI Warning: ನೀವು ತಿನ್ನುವ ಮಾವಿನ ಹಣ್ಣು ಸುರಕ್ಷಿತವಾಗಿದೆಯೇ?

Kannada New Movie Sambavami Yuge Yuge 4K Motion Poster
ಸಿನಿಮಾ27 mins ago

Kannada New Movie: `ಸಂಭವಾಮಿ ಯುಗೇಯುಗೇ’ ಚಿತ್ರದ ಕ್ಯಾರೆಕ್ಟರ್ ಮೋಷನ್ ಪೋಸ್ಟರ್ ಬಿಡುಗಡೆ

Prajwal Revanna Case
ಕರ್ನಾಟಕ37 mins ago

Prajwal Revanna Case: ಪೆನ್​​ಡ್ರೈವ್ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ; ದೇವರಾಜೇಗೌಡ ತಪ್ಪು ಮಾಹಿತಿ ನೀಡಿದ್ದಾರೆ: ಶಿವರಾಮೇಗೌಡ

Cholera
ಕರ್ನಾಟಕ45 mins ago

Cholera: ಸಿದ್ದರಾಮಯ್ಯ ತವರು ಕ್ಷೇತ್ರದಲ್ಲಿ ಕಾಲರಾ ಅಟ್ಟಹಾಸ; ಕಲುಷಿತ ನೀರು ಕುಡಿದು 114 ಜನಕ್ಕೆ ಕಾಯಿಲೆ!

RCB vs CSK
ಕ್ರೀಡೆ48 mins ago

RCB vs CSK: ಚೆನ್ನೈ ಸೋಲಿಗೆ ಧೋನಿ ಬಾರಿಸಿದ ಔಟ್​ ಆಫ್​ದಿ ಸ್ಟೇಡಿಯಂ ಸಿಕ್ಸರ್​ ಕಾರಣ

Ninagagi Kannada Serial Ritvvikk Mathad Playing Lead In Divya Uruduga
ಕಿರುತೆರೆ49 mins ago

Ninagagi Kannada Serial: ʻನಿನಗಾಗಿʼ ಸೀರಿಯಲ್‌ನಲ್ಲಿ ದಿವ್ಯಾ ಉರುಡುಗ ಜತೆ ‘ಗಿಣಿರಾಮ’ ಧಾರಾವಾಹಿಯ ನಟ ನಟನೆ

British Journalist
ದೇಶ56 mins ago

British Journalist: “ನವ ಭಾರತದ ಬಗ್ಗೆ ಪ್ರಪಂಚಕ್ಕೆ ತಿಳಿಸಬೇಕು”- ಇಂಡಿಯಾಗೆ ಮನಸೋತ ಬ್ರಿಟಿಷ್‌ ಪತ್ರಕರ್ತ

Karnataka rain
ಮಳೆ56 mins ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ10 mins ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ56 mins ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌