Delhi Earthquake: ದೆಹಲಿ ಸೇರಿ ಹಲವೆಡೆ ಭಾರಿ ಭೂಕಂಪ; ನಿದ್ದೆ ಬಿಟ್ಟು ಕುಳಿತ ಜನ - Vistara News

ದೇಶ

Delhi Earthquake: ದೆಹಲಿ ಸೇರಿ ಹಲವೆಡೆ ಭಾರಿ ಭೂಕಂಪ; ನಿದ್ದೆ ಬಿಟ್ಟು ಕುಳಿತ ಜನ

Delhi Earthquake: ದೆಹಲಿ ಹಾಗೂ ರಾಷ್ಟ್ರ ರಾಜಧಾನಿ ವ್ಯಾಪ್ತಿಯ ಹಲವೆಡೆ ಶುಕ್ರವಾರ ರಾತ್ರಿ ಭಾರಿ ಪ್ರಮಾಣದಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪದ ಹಿನ್ನೆಲೆಯಲ್ಲಿ ಜನ ಮನೆಯಿಂದ ಹೊರಗೆ ಓಡಿಬಂದರು ಎಂದು ತಿಳಿದುಬಂದಿದೆ.

VISTARANEWS.COM


on

Earthquake
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ದೆಹಲಿಗೆ ಹೊಂದಿಕೊಂಡಂತಿರುವ ಹಲವು ನಗರಗಳಲ್ಲಿ ಶುಕ್ರವಾರ r ರಾತ್ರಿ (ನವೆಂಬರ್‌ 3) ಪ್ರಬಲ ಭೂಕಂಪ (Delhi Earthquake) ಸಂಭವಿಸಿದೆ. ನೇಪಾಳದಲ್ಲಿ ಭಾರಿ ಪ್ರಮಾಣದ ಭೂಕಂಪ (Earthquake In Nepal) ಸಂಭವಿಸಿದ ಕಾರಣ ದೆಹಲಿಯಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ತಿಳಿದುಬಂದಿದೆ.

“ನೇಪಾಳದಲ್ಲಿ ಶುಕ್ರವಾರ ರಾತ್ರಿ 11.32ರ ಸುಮಾರಿಗೆ ನೇಪಾಳದಲ್ಲಿ ಭಾರಿ ಭೂಕಂಪ ಸಂಭವಿಸಿದ್ದು, ರಿಕ್ಟರ್‌ ಮಾಪನದಲ್ಲಿ 6.4 ತೀವ್ರತೆ ದಾಖಲಾಗಿದೆ. ಇದರಿಂದಾಗಿ ದೆಹಲಿ ಹಾಗೂ ಸುತ್ತಮುತ್ತಲಿನ ನಗರಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ” ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರವು ಮಾಹಿತಿ ನೀಡಿದೆ. ಕೆಲ ತಿಂಗಳಷ್ಟೇ ದೆಹಲಿ ಸೇರಿ ಸುತ್ತಮುತ್ತಲಿನ ನಗರಗಳಲ್ಲಿ ಭೂಕಂಪ ಸಂಭವಿಸಿತ್ತು.

ಭೂಮಿ ಕಂಪಿಸಿದ ಅನುಭವವಾಗುತ್ತಲೇ ದೆಹಲಿ ಹಾಗೂ ಸುತ್ತಮುತ್ತಲಿನ ನಗರಗಳ ಜನ ಮನೆಯಿಂದ ಹೊರಗೆ ಬಂದರು. ಮನೆಯಲ್ಲಿರುವ ಫ್ಯಾನ್‌ ಸೇರಿ ಹಲವು ವಸ್ತುಗಳು ಅಲುಗಾಡುತ್ತಲೇ ಜನ ಆತಂಕ್ಕೀಡಾದರು. ಹಲವೆಡೆ ಇನ್ನೂ ಒಂದಷ್ಟು ಜನ ಮನೆಯೊಳಗೆ ಹೋಗಲು ಭಯಪಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದಾಗ್ಯೂ, ಭೂಕಂಪದಿಂದ ಯಾವುದೇ ಆಸ್ತಿ ಪಾಸ್ತಿಗೆ ಹಾನಿಯುಂಟಾಗಿಲ್ಲ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Afghan Earthquake: ಅಫಘಾನಿಸ್ತಾನದಲ್ಲಿ ಸರಣಿ ಭೂಕಂಪ, ಮೃತರ ಸಂಖ್ಯೆ 2000ಕ್ಕೆ ಏರಿಕೆ

ಕಳೆದ ತಿಂಗಳು ಅಫಘಾನಿಸ್ತಾನದ ಹೆರಾತ್‌ನಲ್ಲಿ ಸಂಭವಿಸಿದ ಸರಣಿ ಭೂಕಂಪದಲ್ಲಿ 2 ಸಾವಿರಕ್ಕೂ ಅಧಿಕ ಜನ ಮೃತಪಟ್ಟಿದ್ದಾರೆ. ಹೆರಾತ್ ನಗರ ಮಾತ್ರವಲ್ಲದೇ, ಪಶ್ಚಿಮ ಅಫಘಾನಿಸ್ತಾನದ ಗ್ರಾಮೀಣ ಪ್ರದೇಶದಲ್ಲೂ ಭೂಕಂಪದ ತೀವ್ರತೆ ಹೆಚ್ಚಾಗಿದ್ದು, ಸಾಕಷ್ಟು ಸಾವು ನೋವು ಸಂಭವಿಸಿತ್ತು. ತಾಲಿಬಾನ್ (Taliban Administration) ಆಡಳಿತದ ಹಿನ್ನೆಲೆಯಲ್ಲಿ ಈಗಾಗಲೇ ಸಾಕಷ್ಟು ಮಾನವೀಯ ಬಿಕ್ಕಟ್ಟು ಎದುರಿಸುತ್ತಿರುವ ಅಫಘಾನಿಸ್ತಾನಕ್ಕೆ ಈ ಭೂಕಂಪವು ಭಾರೀ ಹೊಡೆತ ನೀಡಿತ್ತು.

ಹೆರಾತ್ ಪ್ರಾಂತ್ಯದಲ್ಲಿ 12 ಹಳ್ಳಿಗಳು ಸಂಪೂರ್ಣ ಅಥವಾ ಭಾಗಶಃ ನಾಶವಾಗಿದ್ದವು. 600 ಮನೆಗಳು ನೆಲಸಮವಾಗಿದ್ದವು. ಇದರಿಂದಾಗಿ ಸುಮಾರು 4200 ಜನರು ಭೂಕಂಪಪೀಡಿತರಾಗಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿತ್ತು. ಮೊದಲನೇ ಭೂಕಂಪ ಸಂಭವಿಸಿದಾಗಲೇ ಎಲ್ಲ ಮನೆಗಳು ಕುಸಿದು ಬಿದ್ದವು ಎಂದು 42 ವರ್ಷದ ಬಶೀರ್ ಅಹ್ಮದ್ ಅವರು ತಿಳಿಸಿದ್ದರು. ಮನೆಗಳ ಒಳಗೆ ಇದ್ದವರೆಲ್ಲರೂ ನೆಲಸಮಾಧಿಯಾಗಿದ್ದರು. ಕೆಲವು ಕುಟುಂಬಗಳು ಕಾಣೆಯಾಗಿವೆ ಎಂದು ಪ್ರತ್ಯಕ್ಷದರ್ಶಿ ತಿಳಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Kangana Ranaut : ರೈತ ವಿರೋಧಿ ಹೇಳಿಕೆ ನೀಡಿದ್ದಕ್ಕೆ ಕೋಪ;​ ನಟಿ, ಸಂಸದೆ ಕಂಗನಾ ರಣಾವತ್​ಗೆ ಏರ್​ಪೋರ್ಟ್​ ಭದ್ರತಾ ಸಿಬ್ಬಂದಿಯಿಂದಲೇ ಕಪಾಳಮೋಕ್ಷ

Kangana Ranaut :ಕಂಗನಾ ರಣಾವತ್​ ಈ ಬಗ್ಗೆ ದೂರು ನೀಡಿದ್ದು, ಮಹಿಳಾ ಅಧಿಕಾರಿಯನ್ನು ಕೆಲಸದಿಂದ ತೆಗೆದುಹಾಕಬೇಕು ಮತ್ತು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಕಂಗನಾ ಅವರಿಗೆ ಹೊಡೆದ ಮಹಿಳೆಯನ್ನು ಕುಲ್ವಿಂದರ್ ಕೌರ್ ಎಂದು ಹೆಸರಿಸಲಾಗಿದೆ. ಚುನಾವಣೆಯಲ್ಲಿ ಗೆದ್ದ ನಂತರ ಬಿಜೆಪಿ ಸಭೆಯಲ್ಲಿ ಭಾಗವಹಿಸಲು ಕಂಗನಾ ರಣಾವತ್​ ವಿಮಾನದ ಮೂಲಕ ದೆಹಲಿಗೆ ಹೊರಟಿದ್ದರು. .

VISTARANEWS.COM


on

Kangana Ranaut
Koo

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಹಿಮಾಚಲ ಪ್ರದೇಶದ ಮಂಡಿಯಿಂದ ಗೆದ್ದು ಸಂಸದರಾಗಿ ಆಯ್ಕೆಯಾಗಿದ್ದ ನಟಿ ಕಂಗನಾ ರಣಾವತ್ (Kangana Ranaut )​​ ಅವರಿಗೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಸಿಐಎಸ್ಎಫ್ ಮಹಿಳಾ ಸಿಬ್ಬಂದಿಯೊಬ್ಬರು ಕಪಾಳಮೋಕ್ಷ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ, ಭದ್ರತಾ ತಪಾಸಣೆಯ ಸಮಯದಲ್ಲಿ ನಟ-ರಾಜಕಾರಣಿ ತನ್ನ ಫೋನ್ ಅನ್ನು ಟ್ರೇಯಲ್ಲಿ ಇಡಲು ನಿರಾಕರಿಸಿದ್ದರು. ಅಲ್ಲದೆ ಆ ಬಳಿಕ ಭದ್ರತಾ ಸಿಬ್ಬಂದಿಯನ್ನು ತಳ್ಳಿದ್ದರು. ಇದರಿಂದ ಕೋಪಗೊಂಡ ಅವರು ಮುಖದ ಮೇಲೆ ಹೊಡೆದಿದ್ದಾರೆ ಎನ್ನಲಾಗಿದೆ. ಆದರೆ ಇನ್ನೊಂದು ಮೂಲಗಳ ಪ್ರಕಾರ ನಟಿ ಈ ಹಿಂದೆ ರೈತ ಸಂಘಟನೆಗಳು ಡೆಲ್ಲಿಯಲ್ಲಿ ಪ್ರತಿಭಟನೆ ನಡೆಸುವಾಗ ಅವರ ವಿರುದ್ಧ ಹೇಳಿಕೆ ನೀಡಿದ್ದರು. ಈ ಕೋಪ ಕುಟುಂಬಕ್ಕೆ ಸೇರಿದ್ದ ಭದ್ರತಾ ಸಿಬ್ಬಂದಿಗೆ ಇತ್ತು. ಏರ್​ಪೋರ್ಟ್​ನಲ್ಲಿ ಅವರು ಎದುರಾದಾಗ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಕಂಗನಾ ರಣಾವತ್​ ಈ ಬಗ್ಗೆ ದೂರು ನೀಡಿದ್ದು, ಮಹಿಳಾ ಅಧಿಕಾರಿಯನ್ನು ಕೆಲಸದಿಂದ ತೆಗೆದುಹಾಕಬೇಕು ಮತ್ತು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಕಂಗನಾ ಅವರಿಗೆ ಹೊಡೆದ ಮಹಿಳೆಯನ್ನು ಕುಲ್ವಿಂದರ್ ಕೌರ್ ಎಂದು ಹೆಸರಿಸಲಾಗಿದೆ. ಚುನಾವಣೆಯಲ್ಲಿ ಗೆದ್ದ ನಂತರ ಬಿಜೆಪಿ ಸಭೆಯಲ್ಲಿ ಭಾಗವಹಿಸಲು ಕಂಗನಾ ರಣಾವತ್​ ವಿಮಾನದ ಮೂಲಕ ದೆಹಲಿಗೆ ಹೊರಟಿದ್ದರು.

ಇದನ್ನೂ ಓದಿ: Prajwal Revanna : ಪ್ರಜ್ವಲ್​ ರೇವಣ್ಣ ಮತ್ತೆ ನಾಲ್ಕು ದಿನ ಎಸ್​​ಐಟಿ ಕಸ್ಟಡಿಗೆ

ಕಂಗನಾ ಅವರು ಗುರುವಾರ ಮಧ್ಯಾಹ್ನ 3.30ಕ್ಕೆ ಏರ್​ಪೋರ್ಟ್​ಗೆ ಬಂದಿದ್ದರು. ಕಂಗನಾ ರಣಾವತ್​ ವಿಮಾನ ನಿಲ್ದಾಣದ ಭದ್ರತಾ ತಪಾಸಣೆಗಾಗಿ ಬರುತ್ತಿದ್ದಾಗ ಕುಲ್ವಿಂದರ್ ಕೌರ್​ ಕೈ ಎತ್ತಿದರು. ಕಂಗನಾ ಕೂಡ ಈ ಬಗ್ಗೆ ದೂರು ದಾಖಲಿಸಿದ್ದಾರೆ.

ಕಂಗನಾಗೆ ಕಪಾಳಮೋಕ್ಷ ಮಾಡಿದ ಸಿಐಎಸ್ಎಫ್ ಸಿಬ್ಬಂದಿ ರೈತರ ಚಳವಳಿ ಕುರಿತು ನೀಡಿದ್ದ ಹೇಳಿಕೆಯಿಂದ ನನಗೆ ನೋವಾಗಿತ್ತು ಎಂದು ವಿಚಾರಣೆ ವೇಳೆ ಹೇಳಿದ್ದಾರೆ. ಅವರನ್ನು ಪ್ರಸ್ತುತ, ವಿಮಾನ ನಿಲ್ದಾಣದಲ್ಲಿರುವ ಕಮಾಂಡೆಂಟ್ ಕೋಣೆಯಲ್ಲಿ ಕುಳಿತಿರಿಸಲಾಗಿದೆ. ಕಂಗನಾ ದೆಹಲಿಗೆ ತೆರಳಿದ್ದಾರೆ.

ಕಂಗನಾ ರನೌತ್ ಹಿಮಾಚಲ ಪ್ರದೇಶದ ಮಂಡಿಯಿಂದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಸ್ಪರ್ಧಿಸಿದ್ದರು. ನಟಿಯ ಮುಂದೆ ಕಾಂಗ್ರೆಸ್ ಪಕ್ಷದ ನಾಯಕ ವಿಕ್ರಮಾದಿತ್ಯ ಸಿಂಗ್ ಇದ್ದರು. ಕಂಗನಾ ಅವರನ್ನು 74,755 ಮತಗಳಿಂದ ಸೋಲಿಸಿದರು.

ನೇರಳೆ ಬಣ್ಣದ ಸೀರೆಯುಟ್ಟು ದೆಹಲಿಗೆ ಹೊರಟ ಕಂಗನಾ ರಣಾವತ್!

ಬೆಂಗಳೂರು: ಕಂಗನಾ ರಣಾವತ್ (Kangana Ranaut) ಅವರು ರಾಜಕೀಯದಲ್ಲಿ ಹೊಸ ಪ್ರಯಾಣವನ್ನು ಪ್ರಾರಂಭಿಸಲು ಸಿದ್ಧರಾಗಿದ್ದಾರೆ. ನಾಲ್ಕು ಬಾರಿ ರಾಷ್ಟ್ರ ಪ್ರಶಸ್ತಿ ಪಡೆದ ನಟಿ ಇದೀಗ ಬಣ್ಣದ ಲೋಕಕ್ಕೆ ಬೈಬೈ ಹೇಳುತ್ತಿದ್ದಾರೆ ಎಂದು ವರದಿಯಾಗಿದೆ. ಕಂಗನಾ ತನ್ನ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ದೆಹಲಿಗೆ ಹೊರಡುವ ಮೊದಲು ತಾಯಿ ಆಶಾ ರಣಾವತ್‌ ಅವರಿಂದ ಆಶೀರ್ವಾದ ಪಡೆದು ಹೋಗುತ್ತಿರುವ ಫೋಟೊಗಳನ್ನು ಹಂಚಿಕೊಂಡಿದ್ದಾರೆ. ನೇರಳೆ-ಗುಲಾಬಿ ಬಣ್ಣದ ಸೀರೆಯನ್ನು ಧರಿಸಿ ಮಿಂಚಿದ್ದಾರೆ.

ಮೊದಲ ಚಿತ್ರಕ್ಕೆ “ದೆಹಲಿ ಕರೆಯುತ್ತಿದೆ” ಎಂದು ಶೀರ್ಷಿಕೆ ನೀಡಿದ್ದಾರೆ. ಎರಡನೇ ಫೋಟೋದಲ್ಲಿ ತಾಯಿ ಆಶಾ ಅವರನ್ನು ತಬ್ಬಿಕೊಳ್ಳುತ್ತಿರುವುದನ್ನು ಕಾಣಬಹುದು. ಮೂರನೇ ಫೋಟೊದಲ್ಲಿ ಸೆಲ್ಫಿ ತೆಗೆದುಕೊಂಡು, “ಸಂಸತ್ತಿಗೆ ಹೋಗುವ ದಾರಿಯಲ್ಲಿʼʼ ಎಂದು ಬರೆದುಕೊಂಡಿದ್ದಾರೆ. ಕಂಗನಾ ರಣಾವತ್ ಬಾಲಿವುಡ್ ತೊರೆಯಲು ನಿರ್ಧಾರ ಮಾಡಿದ್ದರೆ, ಇಂದಿರಾ ಗಾಂಧಿಯವರ ಜೀವನಾಧಾರಿತ ‘ಎಮರ್ಜೆನ್ಸಿ’ ಸಿನಿಮಾ ಕಂಗನಾ ಅವರ ಕೊನೆಯ ಚಿತ್ರವಾಗಲಿದೆ. ಈ ಸಿನಿಮಾ ಹಲವು ದಿನಗಳಿಂದ ಚರ್ಚೆಯಲ್ಲಿದೆ. ರಿಲೀಸ್‌ಗೆ ಸಮಯ ಸಿಗುತ್ತಿಲ್ಲ. ಈಗ ರಾಜಕೀಯದ ಗದ್ದಲದಲ್ಲಿ ಕಂಗನಾ ಸಿನಿಮಾ ಯಾವಾಗ ರಿಲೀಸ್ ಆಗಲಿದೆ ಎಂದು ಫ್ಯಾನ್ಸ್‌ಗೆ ಕುತೂಹಲ ಹೆಚ್ಚಿದೆ.

ಕಂಗನಾ ಬಾಲಿವುಡ್ ತೊರೆಯಲು ನಿರ್ಧರಿಸಿದರೆ, ಅಭಿಮಾನಿಗಳು ಖಂಡಿತವಾಗಿಯೂ ಅವರನ್ನು ಬೆಳ್ಳಿತೆರೆಯಲ್ಲಿ ಮಿಸ್ ಮಾಡಿಕೊಳ್ಳುತ್ತಾರೆ. ಕಂಗನಾ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ವಿಭಿನ್ನ ಪಾತ್ರಗಳ ಮೂಲಕ ತೆರೆ ಮೇಲೆ ಬರುವ ಕಂಗನಾ ಸಿನಿಮಾಗಾಗಿಯೇ ಕಾಯುವ ಫ್ಯಾನ್ಸ್ ಕೂಡ ಇದ್ದಾರೆ.

Continue Reading

ದೇಶ

Agnipath Scheme: ಸರ್ಕಾರ ರಚನೆಗೂ ಮುನ್ನ ನಿತೀಶ್‌ ಕುಮಾರ್‌ ಬಿಗ್‌ ಡಿಮ್ಯಾಂಡ್‌! ಬಿಜೆಪಿಗೆ ʼಅಗ್ನಿʼ ಪರೀಕ್ಷೆ ಗ್ಯಾರಂಟಿ!

Agnipath Scheme: ಜೆಡಿಯು ನಾಯಕ ಕೆ.ಸಿ. ತ್ಯಾಗಿ ಪ್ರತಿಕ್ರಿಯಿಸಿದ್ದು, ನಿತೀಶ್ ಕುಮಾರ್ ಅವರ ಜೆಡಿಯು ಸೇನೆಗೆ ಅಗ್ನಿಪಥ್ ನೇಮಕಾತಿ ಯೋಜನೆಯನ್ನು ಮರುಪರಿಶೀಲಿಸುವಂತೆ ಮಿತ್ರ ಪಕ್ಷ ಬಿಜೆಪಿಗೆ ಒತ್ತಾಯಿಸುತ್ತಾರೆ. ಜನರಿಗೆ ಅಗ್ನಿಪಥ ಯೋಜನೆ ವಿರುದ್ಧ ಅಸಮಾಧಾನವಿದ್ದು, ಚುನಾವಣೆ ಸಂದರ್ಭದಲ್ಲಿ ಅದು ಗೋಚರಿಸುತ್ತಿತ್ತು ಎಂದು ಹೇಳಿದ್ದಾರೆ. ನಾವು ಈ ಬಗ್ಗೆ ಮಿತ್ರ ಪಕ್ಷಗಳ ಜೊತೆ ಜಿದ್ದಾಜಿದ್ದಿಗೆ ಬೀಳುವುದಿಲ್ಲ. ಅಗ್ನಿಪಥ್ ಯೋಜನೆ ಪರಿಚಯಿಸಿದಾಗ, ಸಶಸ್ತ್ರ ಪಡೆಗಳ ದೊಡ್ಡ ವರ್ಗದಲ್ಲಿ ಅಸಮಾಧಾನವಿತ್ತು. ಅವರ ಕುಟುಂಬಗಳು ಚುನಾವಣೆಯ ಸಮಯದಲ್ಲಿ ಪ್ರತಿಭಟನೆ ನಡೆಸಿದ್ದರು. ಆದ್ದರಿಂದ, ಈ ಬಗ್ಗೆ ಚರ್ಚಿಸುವ ಅಗತ್ಯವಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

VISTARANEWS.COM


on

Agnipath scheme
Koo

ನವದೆಹಲಿ: ಮೂರನೇ ಬಾರಿ ಅಧಿಕಾರಕ್ಕೆ ಬರುತ್ತಿರುವ ಬಿಜೆಪಿ(BJP) ನೇತೃತ್ವದ ಎನ್‌ಡಿಎ(NDA) ಸರ್ಕಾರಕ್ಕೆ ಈ ಬಾರಿ ಸಾಗಲಿರುವ ಹಾದಿ ಹೂವಿನ ಹಾಸಿಗೆಯಂತಿಲ್ಲ. ಈ ಬಾರಿ ಮಿತ್ರಗಳ ನೆರವಿನ ಜೊತೆಗೇ ಹೆಜ್ಜೆ ಹಾಕಬೇಕಾಗಿರುವ ಕಾರಣ ಮಿತ್ರ ಪಕ್ಷಗಳಿಂದ ಭಾರೀ ಅಗ್ನಿ ಪರೀಕ್ಷೆ ಎದುರಿಸಬೇಕಾದ ಸ್ಥಿತಿ ಇದೆ. ಚುನಾವಣೆಗೂ ಮುನ್ನ ಬಿಜೆಪಿ ಸರ್ಕಾರ ಹಾಕಿಕೊಂಡಿದ್ದ ಕೆಲವೊಂದು ಯೋಜನೆಗಳ ಜಾರಿಗೆ ಮಿತ್ರ ಪಕ್ಷಗಳೇ ಅಡ್ಡಿಯಾಗುವ ಸಾಧ್ಯತೆ ದಟ್ಟವಾಗಿದೆ. ಅದರಲ್ಲೂ ಜೆಡಿಯು ಏನು ಬೇಡಿಕೆ ಇಡುತ್ತದೋ ಎಂಬ ಚಿಂತೆ ಬಿಜೆಪಿಗೆ ಇದ್ದೇ ಇದೆ. ಅದಕ್ಕೆ ಪೂರಕ ಎಂಬಂತೆ ಕೇಂದ್ರದ ಮಹತ್ವದ ಅಗ್ನಿಪಥ ಯೋಜನೆ(Agnipath Scheme)ಯನ್ನು ಮರುಪರಿಶೀಲಿಸುವಂತೆ ಜೆಡಿಯು ಬೇಡಿಕೆ ಇಟ್ಟಿದೆ.

ಈ ಬಗ್ಗೆ ಜೆಡಿಯು ನಾಯಕ ಕೆ.ಸಿ. ತ್ಯಾಗಿ ಪ್ರತಿಕ್ರಿಯಿಸಿದ್ದು, ನಿತೀಶ್ ಕುಮಾರ್ ಅವರ ಜೆಡಿಯು ಸೇನೆಗೆ ಅಗ್ನಿಪಥ್ ನೇಮಕಾತಿ ಯೋಜನೆಯನ್ನು ಮರುಪರಿಶೀಲಿಸುವಂತೆ ಮಿತ್ರ ಪಕ್ಷ ಬಿಜೆಪಿಗೆ ಒತ್ತಾಯಿಸುತ್ತಾರೆ. ಜನರಿಗೆ ಅಗ್ನಿಪಥ ಯೋಜನೆ ವಿರುದ್ಧ ಅಸಮಾಧಾನವಿದ್ದು, ಚುನಾವಣೆ ಸಂದರ್ಭದಲ್ಲಿ ಅದು ಗೋಚರಿಸುತ್ತಿತ್ತು ಎಂದು ಹೇಳಿದ್ದಾರೆ. ನಾವು ಈ ಬಗ್ಗೆ ಮಿತ್ರ ಪಕ್ಷಗಳ ಜೊತೆ ಜಿದ್ದಾಜಿದ್ದಿಗೆ ಬೀಳುವುದಿಲ್ಲ. ಅಗ್ನಿಪಥ್ ಯೋಜನೆ ಪರಿಚಯಿಸಿದಾಗ, ಸಶಸ್ತ್ರ ಪಡೆಗಳ ದೊಡ್ಡ ವರ್ಗದಲ್ಲಿ ಅಸಮಾಧಾನವಿತ್ತು. ಅವರ ಕುಟುಂಬಗಳು ಚುನಾವಣೆಯ ಸಮಯದಲ್ಲಿ ಪ್ರತಿಭಟನೆ ನಡೆಸಿದ್ದರು. ಆದ್ದರಿಂದ, ಈ ಬಗ್ಗೆ ಚರ್ಚಿಸುವ ಅಗತ್ಯವಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸಶಸ್ತ್ರ ಪಡೆಗಳ ರಕ್ಷಣಾ ಪಿಂಚಣಿ ಬಿಲ್ ಅನ್ನು ಕಡಿಮೆ ಮಾಡಲು ಕೇಂದ್ರವು 2022 ರಲ್ಲಿ ಅಗ್ನಿಪಥ್ ಯೋಜನೆಯನ್ನು ಅನಾವರಣಗೊಳಿಸಿತ್ತು. ಯೋಜನೆಯಡಿಯಲ್ಲಿ, ನಾಲ್ಕು ವರ್ಷಗಳ ಅಲ್ಪಾವಧಿಯ ಒಪ್ಪಂದದ ಮೇಲೆ ಸೇನೆ, ನೌಕಾಪಡೆ ಮತ್ತು ವಾಯುಪಡೆಗಳಲ್ಲಿ ಸಿಬ್ಬಂದಿಯನ್ನು ನೇಮಿಸಿಕೊಳ್ಳಲಾಗುತ್ತದೆ. ಒಟ್ಟು ವಾರ್ಷಿಕ ನೇಮಕಾತಿಗಳಲ್ಲಿ, 25% ಮಾತ್ರ ಶಾಶ್ವತ ಆಯೋಗದ ಅಡಿಯಲ್ಲಿ ಇನ್ನೂ 15 ವರ್ಷಗಳವರೆಗೆ ಮುಂದುವರೆಯಲು ಅನುಮತಿಸಲಾಗಿದೆ. ಈ ಯೋಜನೆಯು ಬಿಹಾರ ಮತ್ತು ಉತ್ತರ ಪ್ರದೇಶದಲ್ಲಿ ಭಾರೀ ಪ್ರತಿಭಟನೆಗಳನ್ನು ಹುಟ್ಟುಹಾಕಿತು.

ಜಾತಿ ಆಧಾರಿತ ಜನಗಣತಿ ಕುರಿತು ಮಾತನಾಡಿದ ಕೆ.ಸಿ.ತ್ಯಾಗಿ, ದೇಶದ ಯಾವ ಪಕ್ಷವೂ ಜಾತಿ ಆಧಾರಿತ ಜನಗಣತಿಯನ್ನು ತಿರಸ್ಕರಿಸಿಲ್ಲ. ಜಾತಿ ಆಧಾರಿತ ಜನಗಣತಿ ಇಂದಿನ ಅಗತ್ಯವಾಗಿದೆ. ನಾವು ಅದನ್ನು ಮುಂದಕ್ಕೆ ಕೊಂಡೊಯ್ಯುತ್ತೇವೆ. ಯಾವುದೇ ಪೂರ್ವ ಷರತ್ತುಗಳಿಲ್ಲ. ಬೇಷರತ್ ಬೆಂಬಲವಿದೆ. ಆದರೆ ಬಿಹಾರಕ್ಕೆ ವಿಶೇಷ ಸ್ಥಾನಮಾನ ಸಿಗಬೇಕು ಎಂಬುದು ನಮ್ಮ ಮನಸ್ಸಲ್ಲಿದೆ ಎಂದರು.

ಒನ್ ನೇಷನ್ ಒನ್ ಪೋಲ್, ಏಕರೂಪ ಕಾನೂನು

ಏಕರೂಪ ನಾಗರಿಕ ಸಂಹಿತೆ ಬಗ್ಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ, ಬಿಹಾರ ಮುಖ್ಯಮಂತ್ರಿಗಳು ಕಾನೂನು ಆಯೋಗದ ಮುಖ್ಯಸ್ಥರಿಗೆ ಪತ್ರ ಬರೆದಿದ್ದಾರೆ. ನಾವು ಅದನ್ನು ವಿರೋಧಿಸುವುದಿಲ್ಲ ಆದರೆ ಎಲ್ಲಾ ಮಿತ್ರಪಕ್ಷಗಳೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು. ಪಕ್ಷವು ಬಿಜೆಪಿಯ ‘ಒಂದು ರಾಷ್ಟ್ರ ಒಂದು ಚುನಾವಣೆ’ ನೀತಿಯ ಪರವಾಗಿದೆ ಎಂದು ತ್ಯಾಗಿ ಹೇಳಿದ್ದಾರೆ.

ಇದನ್ನೂ ಓದಿ: Love jihad : ಬಿಹಾರದ ಹಿಂದೂ ಯುವತಿಯನ್ನು ಉತ್ತರಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ ಆರಿಫ್; ಲವ್​ ಜಿಹಾದ್ ಆರೋಪ

“ಏಕರೂಪ ನಾಗರಿಕ ಸಂಹಿತೆಯ ಬಗ್ಗೆ ನಮ್ಮ ನಿಲುವು ಇಂದಿಗೂ ಒಂದೇ ಆಗಿರುತ್ತದೆ. ಈ ವಿಷಯದ ಬಗ್ಗೆ ಎಲ್ಲಾ ಪಾಲುದಾರರನ್ನು ಕರೆದೊಯ್ದು ಅವರ ಅಭಿಪ್ರಾಯಗಳನ್ನು ಅರ್ಥಮಾಡಿಕೊಳ್ಳುವ ಅವಶ್ಯಕತೆಯಿದೆ. ನಿತೀಶ್ ಕುಮಾರ್ ಯುಸಿಸಿ ಕುರಿತು ಕಾನೂನು ಆಯೋಗದ ಅಧ್ಯಕ್ಷರಿಗೆ ಪತ್ರ ಬರೆದು ಹೇಳಿದರು. ನಾವು ಅದನ್ನು ವಿರೋಧಿಸುವುದಿಲ್ಲ, ಆದರೆ ಅದರ ಬಗ್ಗೆ ವ್ಯಾಪಕವಾದ ಚರ್ಚೆಯ ಅಗತ್ಯವಿದೆ, ಎಲ್ಲಾ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಏಕೀಕೃತ ನಿರ್ಧಾರವನ್ನು ತೆಗೆದುಕೊಳ್ಳಬೇಕು, ”ಎಂದು ತ್ಯಾಗಿ ಹೇಳಿದರು.

Continue Reading

ಪ್ರಮುಖ ಸುದ್ದಿ

Love jihad : ಬಿಹಾರದ ಹಿಂದೂ ಯುವತಿಯನ್ನು ಉತ್ತರಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ ಆರಿಫ್; ಲವ್​ ಜಿಹಾದ್ ಆರೋಪ

Love jihad : ಬರೇಲಿಯ ಬಹೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜೂನ್ 4 ರಂದು ಈ ಘಟನೆ ಬೆಳಕಿಗೆ ಬಂದಿದೆ. ಸುನ್ನಿನಗರ ನಿವಾಸಿಯಾಗಿರು ಆರಿಫ್​ ವಿರುದ್ಧ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಆರೋಪಿ ಹಾಗೂ ಆತನ ತಮ್ಮ ಯುವತಿ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

VISTARANEWS.COM


on

Love Jihad
Koo

ಬೆಂಗಳೂರು: ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಮಸ್ಲಿಂ ಯುವಕನೊಬ್ಬ ಹಿಂದೂ ಯುವತಿಯೊಬ್ಬಳನ್ನು ಅತ್ಯಾಚಾರ ಮಾಡಿ ಇಸ್ಲಾಂಗೆ ಮತಾಂತರ ಮಾಡಲು ಯತ್ನಿಸಿದ್ದಾನೆ (Love jihad ) ಎಂಬ ಆರೋಪ ಕೇಳಿ ಬಂದಿದೆ. ಬಿಹಾರದ ಹಿಂದೂ ಹುಡುಗಿಯನ್ನು ದೆಲ್ಲಿಯಿಂದ ಕರೆದುಕೊಂಡು ಬಂದ ಮೊಹಮ್ಮದ್ ಆರಿಫ್ ತನ್ನನ್ನು ಪ್ರೇಮ ಬಲೆಗೆ ತಳ್ಳಿ ನಂತರ ಇಸ್ಲಾಂಗೆ ಮತಾಂತರಗೊಳ್ಳುವಂತೆ ಒತ್ತಾಯಿಸಿದ್ದಾನೆ ಎಂದು ಆರೋಪಿಸಲಾಗಿದೆ. ಆರಿಫ್​ನ ಕೃತ್ಯಕ್ಕೆ ಆರಿಫ್ ಸಹೋದರ ಮೊಹಮ್ಮದ್ ತಾಲಿಬ್ ಸಹಕಾರ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಯುವತಿಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಲಾಗಿದೆ ಎಂದು ಹಿಂದೂ ಸಂಘಟನೆಗಳು ಆರೋಪಿಸಿವೆ. ಈ ಬಗ್ಗೆ ಸ್ಥಳೀಯ ವೆಬ್​ಸೈಟ್​ಗಳು ವರದಿ ಮಾಡಿವೆ.

ಬರೇಲಿಯ ಬಹೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜೂನ್ 4 ರಂದು ಈ ಘಟನೆ ಬೆಳಕಿಗೆ ಬಂದಿದೆ. ಸುನ್ನಿನಗರ ನಿವಾಸಿಯಾಗಿರು ಆರಿಫ್​ ವಿರುದ್ಧ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಆರೋಪಿ ಹಾಗೂ ಆತನ ತಮ್ಮ ಯುವತಿ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಸಂತ್ರಸ್ತೆ ತನ್ನ ದೂರಿನಲ್ಲಿ ತಾನು ಮೂಲತಃ ಬಿಹಾರದ ನವಾಡಾ ಪ್ರದೇಶದವಳು ಎಂದು ಹೇಳಿಕೊಂಡಿದ್ದಾಳೆ. ಆಕೆ ದೆಹಲಿಯಲ್ಲಿ ಕೆಲಸ ಮಾಡುತ್ತಿದ್ದಳು. ಅಲ್ಲಿ ಬರೇಲಿ ನಿವಾಸಿ ಮೊಹಮ್ಮದ್ ಆರಿಫ್ ನನ್ನು ಭೇಟಿಯಾಗಿದ್ದಳು. ಸ್ವಲ್ಪ ಸಮಯದ ನಂತರ, ಆರಿಫ್ ತನ್ನನ್ನು ಪ್ರೀತಿಯ ಬಲೆಗೆ ಸಿಲುಕಿಸಿ ಬಹೇರಿಯಲ್ಲಿರುವ ತನ್ನ ನಿವಾಸಕ್ಕೆ ಕರೆದುಕೊಂಡು ಹೋಗಿದ್ದ. ಈ ಸಮಯದಲ್ಲಿ, ಅವಳ ಮೇಲೆ ಅನೇಕ ಬಾರಿ ಅತ್ಯಾಚಾರ ಎಸಗಿದ್ದ. ಸುಮಾರು ಒಂದು ವರ್ಷದಿಂದ ಇಸ್ಲಾಂಗೆ ಮತಾಂತರಗೊಳ್ಳುವಂತೆ ಸಂತ್ರಸ್ತೆಯ ಮೇಲೆ ಒತ್ತಡ ಹೇರಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಹೆಸರು ಬದಲಾವಣೆ

ಆರೋಪಿ ಆರಿಫ್ ಯುವತಿಯನ್ನು ಇಸ್ಲಾಂಗೆ ಮತಾಂತರಿಸಿದ್ದ. ಆಕೆಗೆ ಸನಾ ಎಂದು ಮರುನಾಮಕರಣ ಮಾಡಿದ್ದ. ಇದಾದ ಬಳಿಕ ಆರಿಫ್​ನ ಸಹೋದರನೂ ಆಕೆಗೆ ಕಿರುಕುಳ ನೀಡಲು ಆರಂಭಿಸಿದ್ದ, ರಾತ್ರಿ ಕೊಠಡಿಗೆ ನುಗ್ಗಿ ಅತ್ಯಾಚಾರ ಮಾಡಿದ್ದ. ಹೆದರಿದ ಆಕೆ ದೂರು ನೀಡಿದ್ದಾಳೆ.

ಇದನ್ನೂ ಓದಿ: Sonu Nigam: ಅಯೋಧ್ಯೆ ಜನರಿಗೆ ಛೀಮಾರಿ ಹಾಕಿದ್ರಾ ಸೋನು ನಿಗಮ್?

ಸಂತ್ರಸ್ತೆ ದೂರು ನೀಡುವುದಾಗಿ ಹೇಳಿದಾಗ ಆರಿಫ್​ನ ತಮ್ಮ ತಾಲಿಬ್ “ನೀವು ಹೇಗಾದರೂ ಬಿಹಾರದವರು. ಯಾರಿಗಾದರೂ ಹೇಳಿದರೆ, ನಾನು ಕೊಲ್ಲುತ್ತೇನೆ ಎಂದು ಬೆದರಿಸಿದ್ದ. ಯವತಿ ಈ ಬಗ್ಗೆ ತನ್ನ ಆರಿಫ್​ನ ಬಳಿ ಹೇಳಿದ್ದಳು. ಆದರೆ ಆತ ಸಹೋದರನನ್ನೇ ಬೆಂಬಲಿಸಿದ್ದ.

ಆರಿಫ್, ಆತನ ಸಹೋದರ ತಾಲಿಬ್ ಮತ್ತು ಆತನ ತಂದೆ ಸಬೀರ್​ ಸೇರಿಕೊಂಡು ಯುವತಿ ಮೇಲೆ ಹಲ್ಲೆ ನಡೆಸಿದ್ದರು. ಈ ಬಗ್ಗೆ ಯಾರಿಗಾದರೂ ದೂರು ನೀಡಿದರೆ, ನಾವು ನಿಮ್ಮನ್ನು ಸುಟ್ಟುಹಾಕುತ್ತೇವೆ. ಎಂದು ಬೆದರಿಸಿದ್ದ. ತನ್ನ ಮೇಲೆ ಆಗುತ್ತಿರುವ ದೌರ್ಜನ್ಯದಿಂದ ಬೆದರಿದ ಯವತಿ ದೂರು ನೀಡಿದ್ದಾಳೆ. ಬಳಿಕ ಹಿಂದೂ ಸಂಘಟನೆಗಳು ಆಕೆಯ ನೆರವಿಗೆ ಬಂದಿದೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಒತ್ತಾಯಿಸದ್ದಾರೆ.

Continue Reading

ದೇಶ

Election Results 2024: ರಾಮನೂರಿನಲ್ಲೇ ಬಿಜೆಪಿ ಹಿನ್ನಡೆ; ಹೀನಾಯ ಸೋಲಿಗೆ ಕಾರಣ ಏನು?

Election Results 2024:ಅಯೋಧ್ಯೆಯನ್ನು ಒಳಗೊಂಡಿರುವ ಫೈಜಾಬಾದ್ ಲೋಕಸಭಾ ಕ್ಷೇತ್ರದಲ್ಲಿ (Faizabad Election Result) ಎಸ್‌ಪಿ (SP) ಅಭ್ಯರ್ಥಿಯ ಮುಂದೆ ಬಿಜೆಪಿ (BJP) ಅಭ್ಯರ್ಥಿ ಸೋತಿದ್ದಾರೆ. ಅಯೋಧ್ಯೆಯನ್ನು ಒಳಗೊಂಡ ಫೈಜಾಬಾದ್‌ ಕ್ಷೇತ್ರದಲ್ಲಿ ಸಮಾಜವಾದಿ ಪಾರ್ಟಿ ಅಭ್ಯರ್ಥಿ ಅವಧೇಶ್ ಪ್ರಸಾದ್ ಮುಂದೆ ಬಿಜೆಪಿ ಅಭ್ಯರ್ಥಿ ಲಲ್ಲು ಸಿಂಗ್ ಸೋತಿದ್ದಾರೆ. ಫೈಜಾಬಾದ್‌ನಿಂದ ಮೂರು ಬಾರಿ ಸಂಸದರಾಗಿರುವ ಸಿಂಗ್ ಅವರ ಈ ಸಲದ ಸೋಲು ಅಚ್ಚರಿದಾಯಕವಾಗಿದೆ.

VISTARANEWS.COM


on

Election Results 2024
Koo

ನವದೆಹಲಿ: ಉತ್ತರಪ್ರದೇಶ(Uttar Pradesh)ದಲ್ಲಿ ಈ ಬಾರಿ ಡಬಲ್‌ ಎಂಜಿನ್‌ ಸರ್ಕಾರವಾಗಲೀ, ಅಯೋಧ್ಯೆ(Ayodhya) ರಾಮ ಮಂದಿರವಾಗಲಿ ಬಿಜೆಪಿ(BJP)ಗೆ ವರವಾಗಿಲ್ಲ. ಇಡೀ ಸುಮಾರು 60ಕ್ಕಿಂತ ಹೆಚ್ಚಿನ ಸ್ಥಾನದ ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ಕನಸಿಗೆ ಈ ಬಾರಿ ತನ್ನೀರೆರಚಿದಂತಾಗಿದ್ದು, ಕೇವಲ 33 ಸ್ಥಾನಗಳಿಗೆ ತೃಪ್ತಿ ಪಟ್ಟುಕೊಳ್ಳಬೇಕಾಯಿತು(Election Results 2024). ಇದರಿಂದ ಬಿಜೆಪಿಗೆ ಬಹಳ ಮುಖಭಂಗ ಎದುರಿಸುವಂತಾಗಿದೆ. ಅದರಲ್ಲೂ ಈ ಬಾರಿ ಶ್ರೀರಾಮನ ಮಂದಿರ ನಿರ್ಮಾಣಗೊಂಡು ಇಡೀ ಜಗತ್ತನ್ನೇ ಸೆಳೆದಿದ್ದ ಅಯೋಧ್ಯೆಯಲ್ಲೇ ಬಿಜೆಪಿ ಹಿನ್ನಡೆ ಅನುಭವಿಸಿರುವುದು ಪಕ್ಷಕ್ಕೆ ದೇಶ-ವಿದೇಶದಲ್ಲೂ ಮುಖಭಂಗ ಎದುರಿಸುವಂತಾಗಿದೆ. ಹಾಗಿದ್ದರೆ ಅಯೋಧ್ಯೆಯಲ್ಲೇ ಬಿಜೆಪಿಗೆ ಇಷ್ಟು ದೊಡ್ಡ ಮಟ್ಟದಲ್ಲಿ ಹಿನ್ನಡೆ ಅನುಭವಿಸಲು ಕಾರಣ ಏನು?

ಅಯೋಧ್ಯೆಯನ್ನು ಒಳಗೊಂಡಿರುವ ಫೈಜಾಬಾದ್ ಲೋಕಸಭಾ ಕ್ಷೇತ್ರದಲ್ಲಿ (Faizabad Election Result) ಎಸ್‌ಪಿ (SP) ಅಭ್ಯರ್ಥಿಯ ಮುಂದೆ ಬಿಜೆಪಿ (BJP) ಅಭ್ಯರ್ಥಿ ಸೋತಿದ್ದಾರೆ. ಅಯೋಧ್ಯೆಯನ್ನು ಒಳಗೊಂಡ ಫೈಜಾಬಾದ್‌ ಕ್ಷೇತ್ರದಲ್ಲಿ ಸಮಾಜವಾದಿ ಪಾರ್ಟಿ ಅಭ್ಯರ್ಥಿ ಅವಧೇಶ್ ಪ್ರಸಾದ್ ಮುಂದೆ ಬಿಜೆಪಿ ಅಭ್ಯರ್ಥಿ ಲಲ್ಲು ಸಿಂಗ್ ಸೋತಿದ್ದಾರೆ. ಫೈಜಾಬಾದ್‌ನಿಂದ ಮೂರು ಬಾರಿ ಸಂಸದರಾಗಿರುವ ಸಿಂಗ್ ಅವರ ಈ ಸಲದ ಸೋಲು ಅಚ್ಚರಿದಾಯಕವಾಗಿದೆ. ಸಮಾಜವಾದಿ ಪಕ್ಷದ ಅಭ್ಯರ್ಥಿಗಿಂತ 10,000ಕ್ಕೂ ಅಧಿಕ ಮತಗಳ ಅಂತರದಿಂದ ಸಿಂಗ್‌ ಹಿಂದುಳಿದರು. ಫೈಜಾಬಾದ್ ಜಿಲ್ಲೆಯನ್ನು 2018ರಲ್ಲಿ ಅಧಿಕೃತವಾಗಿ ಅಯೋಧ್ಯೆ ಎಂದು ಮರುನಾಮಕರಣ ಮಾಡಲಾಯಿತು. ಆದಾಗ್ಯೂ, ಲೋಕಸಭಾ ಸ್ಥಾನವನ್ನು ಇನ್ನೂ ಫೈಜಾಬಾದ್ ಎಂದು ಕರೆಯಲಾಗುತ್ತದೆ.

ಅಯೋಧ್ಯೆಯಲ್ಲಿ ಬಿಜೆಪಿ ಸೋಲಿಗೆ ಕಾರಣವಾದ ಅಂಶಗಳಾವುದು?

ಬಿಜೆಪಿ ಈ ಬಾರಿ ಹಿಂದುಳಿದ ವರ್ಗ ಮತ್ತು ದಲಿತ ವರ್ಗದಿಂದ ಅಂತರ ಕಾಯ್ದುಕೊಂಡು ಬಂದಿರುವುದು ಕೂಡ ಎಸ್‌ಪಿಗೆ ಲಾಭದಾಯಕವಾಗಿತ್ತು. ಅದೂ ಅಲ್ಲದೇ ಮಂದಿರ ನಿರ್ಮಾಣಕ್ಕೆಂದು ಜನರ ಭೂಮಿಯನ್ನು ಪಡೆದಿದ್ದು, ಅದರ ಪರಿಹಾರ ಹಣ ಇನ್ನೂ ಒದಗಿಸಿಲ್ಲ ಎಂಬುದನ್ನು ಸರಿಯಾದ ರೀರಿಯಲ್ಲಿ ಜನರಿಗೆ ಮನದಟ್ಟು ಮಾಡುವಲ್ಲಿ ಅಖಿಲೇಶ್‌ ಯಾದವ್‌ ಬಣ ಯಶಸ್ವಿ ಆಗಿತ್ತು. ಅದೂ ಅಲ್ಲದೇ ರಾಜ್ಯ ಮತ್ತು ಕೇಂದ್ರ ಬಿಜೆಪಿ ನಡುವಿನ ಬಿಕ್ಕಟ್ಟನ್ನು ಜನರಿಗೆ ಎತ್ತಿ ತೋರಿಸಲಾಯಿತು. ಇವೆಲ್ಲಾ ಕಾರಣಗಳಿಂದಾಗಿ ಬಿಜೆಪಿ ಮೇಲಿನ ಒಲುವು ಜನರಿಗೆ ಕಡಿಮೆ ಆಯಿತು.

ಬಿಜೆಪಿಯ ‘400 ಪಾರ್’ ಘೋಷಣೆ ಹೇಗೆ ಹಿನ್ನಡೆಯಾಯಿತು?

ಚುನಾವಣೆ ಆರಂಭಕ್ಕೂ ಮುನ್ನ ಬಿಜೆಪಿ ಈ ಬಾರಿ ʼ400 ಪಾರ್ʼ ಘೋಷಣೆ ಕೂಗುತ್ತಲೇ ಬಂದಿದೆ. ಇದೆ ವಿಚಾರವನ್ನು ಎತ್ತಿಕೊಂಡ ಸಮಾಜವಾದಿ ಪಕ್ಷ ಬಿಜೆಪಿ ಒಂದು ವೇಳೆ 400ಕ್ಕೂ ಅಧಿಕ ಸ್ಥಾನಗಳನ್ನು ಗಳಿಸಿದರೆ ಸಂವಿಧಾನವನ್ನೇ ಬದಲಿಸಿ ಬಿಡುತ್ತದೆ. ಆ ಮೂಲಕ ದಲಿತರು, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ಮೀಸಲಾತಿಯನ್ನು ಸಂಪೂರ್ಣವಾಗಿ ತೆಗೆದು ಹಾಕುತ್ತದೆ ಎಂದು ಪ್ರಚಾರ ಕಾರ್ಯಕ್ರಮದಲ್ಲಿ ಒತ್ತಿ ಒತ್ತಿ ಹೇಳಿತ್ತು.

ದಲ್ಲದೆ, ಸಮಾಜವಾದಿ ಪಕ್ಷದ ಮತಬ್ಯಾಂಕ್ ಪರವಾಗಿ ಪ್ರಬಲವಾದ ಜಾತಿ ಸಮೀಕರಣವನ್ನು ಹೊಂದಿರುವ ಸ್ಥಾನಗಳಲ್ಲಿ ಫೈಜಾಬಾದ್ ಕೂಡ ಒಂದಾಗಿದೆ. ಅಲ್ಲದೆ, ಸಮಾಜವಾದಿ ಪಕ್ಷಕ್ಕೆ ಕೆಲಸ ಮಾಡಿದಂತೆ ತೋರುತ್ತಿರುವುದು ಬಿಜೆಪಿಯು ಬ್ರೂಟ್ ಬಹುಮತವನ್ನು ಪಡೆದರೆ ಸಂವಿಧಾನವನ್ನು ಬದಲಾಯಿಸುವ ನಿರೂಪಣೆಯಾಗಿದೆ. ಸಮಾಜವಾದಿ ಪಕ್ಷದ ಆರೋಪಕ್ಕೆ ಸರಿಯಾದ ಸಷ್ಟನೆ ಕೊಡುವಲ್ಲಿ ಸೋತ ಬಿಜೆಪಿ ಜನರ ವಿಶ್ವಾಸವನ್ನೇ ಕಳೆದುಕೊಂಡಿತು.

ಫೈಜಾಬಾದ್‌ನಲ್ಲಿನ ಜಾತಿ ಸಮೀಕರಣವೇ ಬಿಜೆಪಿ ಸೋಲಿಗೆ ಪ್ರಮುಖ ಕಾರಣ ಎಂದು ಪರಿಗಣಿಸಲಾಗಿದೆ. ಅಯೋಧ್ಯೆಯು ಅತಿ ಹೆಚ್ಚು OBC ಮತದಾರರನ್ನು ಹೊಂದಿದೆ, ಕುರ್ಮಿಗಳು ಮತ್ತು ಯಾದವ ಸಮುದಾಯವೇ ಬಲಿಷ್ಟವಾಗಿದೆ. ಒಬಿಸಿಗಳು 22% ಮತದಾರರು ಮತ್ತು ದಲಿತರು 21% ರಷ್ಟಿದ್ದಾರೆ. ದಲಿತರ ಪೈಕಿ ಪಾಸಿ ಸಮುದಾಯದವರು ಗರಿಷ್ಠ ಮತದಾರರನ್ನು ಹೊಂದಿದ್ದಾರೆ. ವಿಜೇತ ಅಭ್ಯರ್ಥಿ ಅವಧೇಶ್ ಪ್ರಸಾದ್ ಪಾಸಿ ಸಮುದಾಯಕ್ಕೆ ಸೇರಿದವರು.

ಇದನ್ನೂ ಓದಿ: Valmiki Corporation Scam: ಸಚಿವ ನಾಗೇಂದ್ರ ಇಂದೇ ರಾಜೀನಾಮೆ: ಖಚಿತಪಡಿಸಿದ ಡಿಸಿಎಂ ಡಿಕೆಶಿ

Continue Reading
Advertisement
Karnataka weather Forecast
ಮಳೆ1 min ago

Karnataka Weather : ಭಾರಿ ಮಳೆಗೆ ಶ್ರೀನಿವಾಸಪುರದ ರೈಲ್ವೆ ಅಂಡರ್‌ ಪಾಸ್‌ ಜಲಾವೃತ; ಇನ್ನೈದು ದಿನ ಭಾರಿ ವರ್ಷಧಾರೆ

Kangana Ranaut
ಪ್ರಮುಖ ಸುದ್ದಿ9 mins ago

Kangana Ranaut : ರೈತ ವಿರೋಧಿ ಹೇಳಿಕೆ ನೀಡಿದ್ದಕ್ಕೆ ಕೋಪ;​ ನಟಿ, ಸಂಸದೆ ಕಂಗನಾ ರಣಾವತ್​ಗೆ ಏರ್​ಪೋರ್ಟ್​ ಭದ್ರತಾ ಸಿಬ್ಬಂದಿಯಿಂದಲೇ ಕಪಾಳಮೋಕ್ಷ

ಕರ್ನಾಟಕ25 mins ago

Valmiki Corporation Scam: ರಾಜೀನಾಮೆ ಸ್ವಯಂಪ್ರೇರಿತ, ಯಾರ ಒತ್ತಡಕ್ಕೂ ಮಣಿದಿಲ್ಲ: ಬಿ.ನಾಗೇಂದ್ರ

Parachute Pants Fashion
ಫ್ಯಾಷನ್30 mins ago

Parachute Pants Fashion: ಪ್ಯಾರಾಶೂಟ್‌ ಪ್ಯಾಂಟ್ಸ್; ಟೀನೇಜ್‌ ಹುಡುಗಿಯರ ಹೊಸ ಟ್ರೆಂಡ್‌!

Actress Hema:
ಪ್ರಮುಖ ಸುದ್ದಿ30 mins ago

Actress Hema: ರೇವ್ ಪಾರ್ಟಿಯಲ್ಲಿ ಡ್ರಗ್ಸ್​ ಸೇವಿಸಿದ ಪ್ರಕರಣ; ನಟಿ ಹೇಮಾಗೆ ಮತ್ತೆ ನ್ಯಾಯಾಂಗ ಬಂಧನ

Money Guide
ಮನಿ-ಗೈಡ್49 mins ago

Money Guide: ಈ ಯೋಜನೆಯಲ್ಲಿ ಪ್ರತಿ ತಿಂಗಳು 3,475 ರೂ. ಹೂಡಿಕೆ ಮಾಡಿ 1 ಲಕ್ಷ ರೂ. ಮಾಸಿಕ ಪಿಂಚಣಿ ಪಡೆಯಿರಿ

Kangana Ranaut leaves for Delhi in pretty purple saree
ಬಾಲಿವುಡ್55 mins ago

Kangana Ranaut: ನೇರಳೆ ಬಣ್ಣದ ಸೀರೆಯುಟ್ಟು ದೆಹಲಿಗೆ ಹೊರಟ ಕಂಗನಾ ರಣಾವತ್!

Uric Acid
ಆರೋಗ್ಯ60 mins ago

Uric Acid: ಆರೋಗ್ಯ ಹದಗೆಡಿಸುವ ಯೂರಿಕ್ ಆಮ್ಲವನ್ನು ನಿಯಂತ್ರಿಸುವ ನೈಸರ್ಗಿಕ ವಿಧಾನಗಳಿವು

IND vs PAK T20 Match
ಕ್ರಿಕೆಟ್1 hour ago

IND vs PAK T20 Match: 10 ಸೆಕೆಂಡ್‌ ಜಾಹೀರಾತಿಗೆ ಕನಿಷ್ಠ 50 ಲಕ್ಷ ನಿಗದಿ!

ಪ್ರಮುಖ ಸುದ್ದಿ1 hour ago

MLC Election: ವಿಧಾನ ಪರಿಷತ್ ಚುನಾವಣೆ; ಯತೀಂದ್ರ, ಸಿ.ಟಿ.ರವಿ ಸೇರಿ 11 ಅಭ್ಯರ್ಥಿಗಳ ಅವಿರೋಧ ಆಯ್ಕೆ, ಯಾವ ಪಕ್ಷಕ್ಕೆ ಎಷ್ಟು ಸ್ಥಾನ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ5 hours ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ2 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ3 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ3 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು5 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

ಟ್ರೆಂಡಿಂಗ್‌