ವಿಸ್ತಾರ ಸಂಪಾದಕೀಯ: ವಾಯುನೆಲೆ ಮೇಲಿನ ದಾಳಿ ಪಾಕ್‌ಗೆ ಎಚ್ಚರಿಕೆ ಗಂಟೆಯಾಗಲಿ - Vistara News

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ವಾಯುನೆಲೆ ಮೇಲಿನ ದಾಳಿ ಪಾಕ್‌ಗೆ ಎಚ್ಚರಿಕೆ ಗಂಟೆಯಾಗಲಿ

ಒಂದು ದೇಶ ಜಾತ್ಯತೀತ, ಮುಕ್ತ ಸಾಂವಿಧಾನಿಕ ಆಡಳಿತವನ್ನು ಅಪ್ಪಿಕೊಂಡು ಮುನ್ನಡೆಯುತ್ತಾ ಇಂದು ಜಗತ್ತಿನಲ್ಲೇ ನಾಲ್ಕನೇ ದೊಡ್ಡ ಆರ್ಥಿಕ ಶಕ್ತಿಯಾಗಿ ಬೆಳೆದು ನಿಂತಿದೆ. ಇನ್ನೊಂದು ದೇಶ ಇಸ್ಲಾಮಿಕ್ ಆಡಳಿತವನ್ನು ಅಪ್ಪಿಕೊಂಡು, ಮತಾಂಧತೆಗೆ ಅಡಿಯಾಳಾಗಿ ಮುನ್ನಡೆದು ಇಂದು ಭಿಕ್ಷಾಪಾತ್ರೆ ಹಿಡಿಯುವಂತಾಗಿದೆ.

VISTARANEWS.COM


on

pak airbase
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪಾಕಿಸ್ತಾನದ ಕೇಂದ್ರ ಭಾಗದ ಪಂಜಾಬ್‌ನ ಮಿಯಾನ್‌ವಾಲಿಯಲ್ಲಿರುವ ವಾಯು ಪಡೆಯ ನೆಲೆ ಮೇಲೆ ಭಯೋತ್ಪಾದನಾ ದಾಳಿ ನಡೆದಿದೆ. ಹಲವು ಆತ್ಮಾಹುತಿ ಬಾಂಬ್ ದಾಳಿಕೋರರು ಶನಿವಾರ ವಾಯು ನೆಲೆಗೆ ನುಗ್ಗಿದ್ದಾರೆ. ಇದಕ್ಕೆ ಪ್ರತಿಯಾಗಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನ ವಾಯು ಪಡೆ (ಪಿಎಎಫ್) ತಿಳಿಸಿದೆ. ಭಾರಿ ಶಸ್ತ್ರಸಜ್ಜಿತರಾದ ಐದರಿಂದ ಆರು ಮಂದಿ ಜನರ ಗುಂಪು ಶನಿವಾರ ಮುಂಜಾನೆ ತೀವ್ರ ಸ್ವರೂಪದ ದಾಳಿ ಆರಂಭಿಸಿದೆ. ಇದರಿಂದ ಎರಡೂ ಕಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಘಟನೆಯನ್ನು ಖಚಿತಪಡಿಸಿರುವ ಪಿಎಎಫ್, ಉಗ್ರರು ವಾಯು ನೆಲೆ ಪ್ರವೇಶಿಸುವುದಕ್ಕೂ ಮುನ್ನವೇ ಅವರ ಪ್ರಯತ್ನವನ್ನು ವಿಫಲಗೊಳಿಸಲಾಗಿದೆ ಎಂದು ಹೇಳಿದೆ. ಈ ದಾಳಿಯ ಹೊಣೆಯನ್ನು ಪಾಕ್ ಮೂಲದ ಉಗ್ರ ಸಂಘಟನೆ ತೆಹ್ರೀಕ್ ಇ ಜಿಹಾದ್ ಪಾಕಿಸ್ತಾನ್ ಹೊತ್ತುಕೊಂಡಿದೆ. ಈ ಸಂಘಟನೆ ಬಲೂಚಿಸ್ತಾನದಲ್ಲಿ ಭಯೋತ್ಪಾದನಾ ಕೃತ್ಯಗಳಲ್ಲಿ ತೊಡಗಿದೆ.

ಸಂಘಟನೆಗಳ ಹೆಸರು ಬೇರೆ ಬೇರೆ ಇರಬಹುದು. ಆದರೆ ವಿಶ್ವಾದ್ಯಂತ ಭಯೋತ್ಪಾದನಾ ಕೃತ್ಯಗಳಲ್ಲಿ ತೊಡಗಿರುವ ಸಂಘಟನೆಗಳಲ್ಲಿ ಹೆಚ್ಚಿನವು ಪಾಕ್ ಮೂಲದವುಗಳು ಎಂಬುದರಲ್ಲಿ ಸಂಶಯವಿಲ್ಲ. ಅದು ಅಫಘಾನಿಸ್ತಾನ ಇರಬಹುದು, ಕಾಶ್ಮೀರ ಇರಬಹುದು. ಹೆಸರು ಬೇರೆಯಾದರೂ ಇವೆಲ್ಲವುಗಳ ಸ್ವರೂಪ ಒಂದೇ. ಕಾರ್ಯವೈಖರಿ ಒಂದೇ. ಇವರನ್ನು ತರಬೇತು ಮಾಡುವ ಕೇಂದ್ರಗಳಿರುವುದೂ ಪಾಕ್‌ನಲ್ಲಿ. ತರಬೇತಿದಾರರೂ ಪಾಕ್‌ನ ಐಎಸ್‌ಐ ಹಾಗೂ ಮಿಲಿಟರಿ. ಮನುಕುಲಕ್ಕೆ ಇವುಗಳು ಒಡ್ಡಿರುವ ಆತಂಕವೂ ಏಕರೂಪದ್ದು. ವಿಚಿತ್ರ ಹಾಗೂ ವಿಪರ್ಯಾಸ ಎಂದರೆ ಇದೀಗ ಆ ಉಗ್ರರು ತಮ್ಮ ಜನ್ಮದಾತರ ವಿರುದ್ಧವೇ ತಿರುಗಿಬಿದ್ದಿರುವುದು. ಭಸ್ಮಾಸುರನ ಉರಿಹಸ್ತದ ವರದಂತಾಗಿದೆ ಭಯೋತ್ಪಾದಕರ ಜನ್ಮ.

ಇದನ್ನೂ ಓದಿ | ವಿಸ್ತಾರ ಸಂಪಾದಕೀಯ: ಝಿಕಾ ವೈರಸ್‌ ಬಗ್ಗೆ ಆತಂಕ ಬೇಡ, ಎಚ್ಚರ ಇರಲಿ

ಒಂದೇ ದಿನ ಸ್ವತಂತ್ರಗೊಂಡ ಎರಡು ದೇಶಗಳ ವಿಭಿನ್ನ ಬೆಳವಣಿಗೆಯ ಪಥಗಳನ್ನು ಗಮನಿಸಿ ಇಡೀ ಜಗತ್ತು ಬುದ್ಧಿ ಕಲಿಯಬಹುದಾಗಿದೆ. ಒಂದು ದೇಶ ಜಾತ್ಯತೀತ, ಮುಕ್ತ ಸಾಂವಿಧಾನಿಕ ಆಡಳಿತವನ್ನು ಅಪ್ಪಿಕೊಂಡು ಮುನ್ನಡೆಯುತ್ತಾ ಇಂದು ಜಗತ್ತಿನಲ್ಲೇ ನಾಲ್ಕನೇ ದೊಡ್ಡ ಆರ್ಥಿಕ ಶಕ್ತಿಯಾಗಿ ಬೆಳೆದು ನಿಂತಿದೆ. ಇನ್ನೊಂದು ದೇಶ ಇಸ್ಲಾಮಿಕ್ ಆಡಳಿತವನ್ನು ಅಪ್ಪಿಕೊಂಡು, ಮತಾಂಧತೆಗೆ ಅಡಿಯಾಳಾಗಿ ಮುನ್ನಡೆದು ಇಂದು ಭಿಕ್ಷಾಪಾತ್ರೆ ಹಿಡಿಯುವಂತಾಗಿದೆ. ಅದರ ಆಪ್ತ ದೇಶವಾದ ಚೀನಾವೇ ಅದರ ಕೈಬಿಟ್ಟಿದೆ. ಅಂತಾರಾಷ್ಟ್ರೀಯ ಹಣಕಾಸು ನಿಧಿಯು ಪಾಕ್ ದೇಶವನ್ನು ಬೂದಾ ಪಟ್ಟಿಯಲ್ಲಿ ಸೇರಿಸಿದೆ. ಉಗ್ರರಿಗೆ ಹಣಕಾಸು ನೆರವು ಮುಂದುವರಿಸುತ್ತಿರುವವರೆಗೂ ಅದಕ್ಕೆ ಆ ಪಟ್ಟಿಯಿಂದ ಬಿಡುಗಡೆಯಿಲ್ಲ. ಇತ್ತೀಚೆಗೆ ಲಕ್ಷಾಂತರ ಅಫಘಾನಿಸ್ತಾನದ ನಿರಾಶ್ರಿತರನ್ನು ಹೊರಗಟ್ಟಿರುವ ಪಾಕ್, ಆ ಮೂಲಕ ತಾನೇ ಸೃಷ್ಟಿಸಿರುವ ಭಸ್ಮಾಸುರನನ್ನು ಸಾಕಲು ತಾನೇ ಒಲ್ಲೆ ಎಂದಿದೆ. ಇದೆಲ್ಲವೂ ದುಷ್ಪರಿಣಾಮ ಬೀರುವುದು ತನ್ನ ದೇಶದ ಮುಗ್ಧ ನಾಗರಿಕರ ಮೇಲೆ ಎಂಬುದನ್ನು ಇನ್ನಾದರೂ ಪಾಕ್ ಅರಿತುಕೊಳ್ಳುವುದು ಒಳ್ಳೆಯದು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Davanagere News: ದಾವಣಗೆರೆಯಲ್ಲಿ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್‌ಗಿರಿ; ನಾಲ್ವರ ಬಂಧನ

Davanagere News: ಹರಿಹರದ ಕಾಳಿದಾಸ ನಗರದಲ್ಲಿ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಹಲ್ಲೆಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಲ್ಲೆ ಮಾಡಿದವರು ಹಾಗೂ ಹಲ್ಲೆಗೊಳಗಾದ ಯುವಕ ಒಂದೇ ಕೋಮಿಗೆ ಸೇರಿದವರಾಗಿದ್ದಾರೆ. ಹಲ್ಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ, ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.

VISTARANEWS.COM


on

Karnataka police
Koo

ದಾವಣಗೆರೆ: ಜಿಲ್ಲೆಯ ಹರಿಹರದಲ್ಲಿ ಮುಸ್ಲಿಂ ಯುವಕನ ಮೇಲೆಯೇ ಹಲವು ಮುಸ್ಲಿಂ ಯುವಕರು ನೈತಿಕ ಪೊಲೀಸ್‌ಗಿರಿ (Moral Policing) ನಡೆಸಿ, ಹಲ್ಲೆ ಮಾಡಿದ ಪ್ರಕರಣವನ್ನು (Davanagere News) ಪೊಲೀಸರು ಭೇದಿಸಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಮೇ 31ರಂದು ದಾವಣಗೆರೆ ಜಿಲ್ಲೆಯ ಹರಿಹರ ನಗರದ ಬೆಂಕಿ ನಗರದ ಮದರಸಾ ಬಳಿಯ ಖಾಲಿ‌ ಕೊಠಡಿಯಲ್ಲಿ ಹಲ್ಲೆ ನಡೆಸಲಾಗಿತ್ತು. ಈಗ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.

ಹರಿಹರದ ಕಾಳಿದಾಸ ನಗರದ ನಿವಾಸಿ ಮಹಮ್ಮದ್ ಅಲಿ (26) ಮೇಲೆ ಏಳು ಯುವಕರು ಹಲ್ಲೆ ನಡೆಸಿದ್ದರು. ಆಸೀಫ್, ಗೌಸ್, ತೌಫಿಕ್, ಸಯ್ಯದ್, ದಾದು, ಚೋಟು, ಫಿರೋಜ್‌ ಎಂಬುವರು ಹಲ್ಲೆ ನಡೆಸಿದ್ದರು. ಹಲ್ಲೆ ಮಾಡಿದ ಏಳು ಜನರಲ್ಲಿ ನಾಲ್ವರನ್ನು ಹರಿಹರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಳಿದವರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ ಎಂಬುದಾಗಿ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ ಮಾಹಿತಿ ನೀಡಿದ್ದಾರೆ.

ಖಾಲಿ ಕೊಠಡಿಯಲ್ಲಿ ಯುವಕನ ಮೇಲೆ ಆರೋಪಿಗಳು ನಿರಂತರವಾಗಿ ಚಿತ್ರಹಿಂಸೆ ನೀಡಿದ್ದರು. ಸಾಮಾಜಿಕ‌ ಜಾಲತಾಣಗಳಲ್ಲಿ ಹಲ್ಲೆಯ ವಿಡಿಯೊ ವೈರಲ್‌ ಆಗಿತ್ತು. ಯುವಕನನ್ನು ಒಬ್ಬ ಹಿಡಿದುಕೊಂಡು, ಇನ್ನೊಬ್ಬ ಹಲ್ಲೆ ನಡೆಸಿದ್ದ. ದೊಣ್ಣೆಯಿಂದ ಯುವಕನ ಮೇಲೆ ಹಲ್ಲೆ ಮಾಡಲಾಗಿದ್ದು, ಈ ಬಗ್ಗೆ ‌ಪೊಲೀಸರಿಗೆ ಯಾವುದೇ ದೂರು ನೀಡಿಲ್ಲ. ಆದರೆ, ಹಲ್ಲೆಯ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದ ಕಾರಣ ಕ್ರಮ ತೆಗೆದುಕೊಳ್ಳುವಂತೆ ಜನ ಆಗ್ರಹಿಸಿದ್ದರು.

ಅಪರಿಚಿತ ವಾಹನ ಡಿಕ್ಕಿಯಾಗಿ ಪೊಲೀಸ್‌ ಪೇದೆಗೆ ಗಂಭೀರ ಗಾಯ

ಯಾದಗಿರಿ: ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಪೊಲೀಸ್‌ ಕಾನ್‌ಸ್ಟೇಬಲ್‌ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಹಾಪುರ-ಯಾದಗಿರಿ ಮಾರ್ಗ ಮಧ್ಯೆ ನಡೆದಿದೆ. ಯಾದಗಿರಿ ಸಂಚಾರ ಪೊಲೀಸ್ ಠಾಣೆಯ ಪೇದೆ ಹಜರತ್ ಅಲಿ ಗಾಯಾಳು. ದೋರನಹಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದಿರುವ ಅಪಘಾತ ನಡೆದಿದ್ದು, ಗಂಭೀರ ಗಾಯಗೊಂಡಿರುವ ಪೇದೆಯನ್ನು ಕಲಬುರಗಿ ಯುನೈಟೆಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: Assault Case : ಅರೆ ಬೆತ್ತಲಾಗಿ ಯುವಕನಿಗೆ ನಡು ರಸ್ತೆಯಲ್ಲೆ ಹಿಗ್ಗಾಮುಗ್ಗಾ ಥಳಿತ; ಹಲ್ಲೆಕೋರರು ಅರೆಸ್ಟ್‌

Continue Reading

ಪ್ರಮುಖ ಸುದ್ದಿ

French Open Final 2024: 4ನೇ​ ಫ್ರೆಂಚ್‌ ಓಪನ್‌ ಟ್ರೋಫಿ ಗೆದ್ದ ಇಗಾ ಸ್ವಿಯಾಟೆಕ್‌

French Open Final 2024: ಶನಿವಾರ ನಡೆದ ಈ ಫೈನಲ್​ ಪಂದ್ಯದಲ್ಲಿ ಸ್ವಿಯಾಟೆಕ್​ ಅವರ ಆಕ್ರಮಣಕಾರಿ ಆಟದ ಮುಂದೆ ಪಾವೊಲಿನಿ ಸಂಪೂರ್ಣವಾಗಿ ಮಂಕಾದರು. ಯಾವ ಹಂತದಲ್ಲಿಯೂ ಕೂಡ ಪೈಪೋಟಿ ನೀಡಲು ಇವರಿಂದ ಸಾಧ್ಯವಾಗಲಿಲ್ಲ. ಹೀಗಾಗಿ 6-2, 6-1 ನೇರ ಸೆಟ್​ಗಳ ಹೀನಾಯ ಸೋಲು ಕಂಡರು. ಕೇವಲ 68 ನಿಮಿಷದಲ್ಲಿ ಈ ಪಂದ್ಯ ಮುಕ್ತಾಯ ಕಂಡಿತು.

VISTARANEWS.COM


on

French Open Final 2024
Koo

ಪ್ಯಾರಿಸ್‌: ಪೋಲೆಂಡ್‌ನ‌ ಇಗಾ ಸ್ವಿಯಾಟೆಕ್‌(Iga Swiatek) ಅವರು ಫ್ರೆಂಚ್‌ ಓಪನ್‌(French Open Final 2024) ಟೂರ್ನಿಯಲ್ಲಿ ತಮ್ಮ ಪ್ರಶಸ್ತಿಯನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇಂದು(ಶನಿವಾರ) ನಡೆದ ಮಹಿಳಾ ಸಿಂಗಲ್ಸ್​ ವಿಭಾಗದ ಫೈನಲ್​ ಪಂದ್ಯದಲ್ಲಿ ಜಾಸ್ಮಿನ್​ ಪಾವೊಲಿನಿ(Jasmine Paolini) ವಿರುದ್ಧ ಅಧಿಕಾರಯು ಗೆಲುವು ಸಾಧಿಸಿ ಮತ್ತೊಮ್ಮೆ ಚಾಂಪಿಯನ್​ ಆಗಿ ಹೊರಹೊಮ್ಮಿದ್ದಾರೆ. ಈ ಮೂಲಕ ಆವೇ ಅಂಗಣದ ಕೂಟದಲ್ಲಿ 4ನೇ ಹಾಗೂ ಹ್ಯಾಟ್ರಿಕ್​ ಪ್ರಶಸ್ತಿ ಗೆದ್ದ ಸಾಧನೆ ಮಾಡಿದರು. ಒಟ್ಟಾರೆಯಾಗಿ ಇದು ಸ್ವಿಯಾಟೆಕ್​ಗೆ 5ನೇ ಗ್ರ್ಯಾನ್‌ ಸ್ಲಾಮ್‌ ಕಿರೀಟ. ಒಂದು ಟ್ರೋಫಿ ಯುಎಸ್​ ಓಪನ್​ನಲ್ಲಿ ಒಲಿದಿತ್ತು.

ಶನಿವಾರ ನಡೆದ ಈ ಫೈನಲ್​ ಪಂದ್ಯದಲ್ಲಿ ಸ್ವಿಯಾಟೆಕ್​ ಅವರ ಆಕ್ರಮಣಕಾರಿ ಆಟದ ಮುಂದೆ ಪಾವೊಲಿನಿ ಸಂಪೂರ್ಣವಾಗಿ ಮಂಕಾದರು. ಯಾವ ಹಂತದಲ್ಲಿಯೂ ಕೂಡ ಪೈಪೋಟಿ ನೀಡಲು ಇವರಿಂದ ಸಾಧ್ಯವಾಗಲಿಲ್ಲ. ಹೀಗಾಗಿ 6-2, 6-1 ನೇರ ಸೆಟ್​ಗಳ ಹೀನಾಯ ಸೋಲು ಕಂಡರು. ಕೇವಲ 68 ನಿಮಿಷದಲ್ಲಿ ಈ ಪಂದ್ಯ ಮುಕ್ತಾಯ ಕಂಡಿತು.

ಸ್ವಿಯಾಟೆಕ್‌ ರೋಲ್ಯಾಂಡ್​ ಗ್ಯಾರಸ್​ನಲ್ಲಿ ಸತತ 21 ಪಂದ್ಯಗಳ ಅಜೇಯ ಓಟ ಮುಂದುವರಿಸಿ ಪಾರಮ್ಯ ಮೆರದರು. 28 ವರ್ಷದ ಪಾವೊಲಿನಿ ಇದೇ ಮೊದಲ ಬಾರಿಗೆ ಗ್ರಾಂಡ್​ ಸ್ಲಾಂ ಟೂರ್ನಿಯ ಫೈನಲ್​ ಪ್ರವೇಶಿಸಿ ಚೊಚ್ಚಲ ಪ್ರಶಸ್ತಿ ಎತ್ತಿ ಹಿಡಿಯಿವ ನಿರೀಕ್ಷೆಯಲ್ಲಿದ್ದರು. ಆದರೆ ಇದಕ್ಕೆ ಸ್ವಿಯಾಟೆಕ್​ ಅನವು ಮಾಡಿಕೊಳ್ಳಲಿಲ್ಲ.

ಸ್ವಿಯಾಟೆಕ್ ಮೂರು ವರ್ಷಗಳ ಕಾಲ ಪಂದ್ಯಾವಳಿಯನ್ನು ಗೆದ್ದ ಮೂರನೇ ಆಟಗಾರ್ತಿ ಎನಿಸಿಕೊಂಡರು. ಇದಕ್ಕೂ ಮುನ್ನ ಹೆನಿನ್, 2005-07ರಲ್ಲಿ ಕೊನೆಯದಾಗಿ ಈ ಸಾಧನೆ ಮಾಡಿದ್ದರು. ಮೋನಿಕಾ ಸೆಲೆಸ್ 1990 ರ ದಶಕದ ಆರಂಭದಲ್ಲಿ ಈ ಸಾಧನೆಯನ್ನು ಮಾಡಿದ್ದರು.

ಇದನ್ನೂ ಓದಿ IND vs PAK: ಭಾರತ-ಪಾಕ್​ ಹೈವೋಲ್ಟೇಜ್​ ಪಂದ್ಯದ ಹವಾಮಾನ ವರದಿ, ಆಡುವ ಬಳಗ ಹೇಗಿದೆ?

ಅಲ್ಕರಾಜ್‌-ಜ್ವರೇವ್ ಫೈನಲ್​ ಫೈಟ್​​


ನಾಳೆ ನಡೆಯುವ ಪುರುಷರ ಸಿಂಗಲ್ಸ್​ ಫೈನಲ್​ ಪಂದ್ಯದಲ್ಲಿ ವಿಶ್ವದ ಮೂರನೇ ಶ್ರೇಯಾಂಕಿತ ಕಾರ್ಲೋಸ್‌ ಅಲ್ಕರಾಜ್‌ ಮತ್ತು ನಾಲ್ಕನೇ ಶ್ರೇಯಾಂಕಿತ ಜರ್ಮನಿಯ ಅಲೆಕ್ಸಾಂಡರ್‌ ಜ್ವೆರೇವ್‌ ಪ್ರಶಸ್ತಿಗಾಗಿ ಕಾದಾಟ ನಡೆಸಲಿದ್ದಾರೆ.

ಅಲ್ಕರಾಜ್​ಗೆ ಇದು ಚೊಚ್ಚಲ ಫ್ರೆಂಚ್​ ಓಪನ್​ ಫೈನಲ್​ ಪಂದ್ಯವಾಗಿದೆ. 14 ಬಾರಿಯ ಚಾಂಪಿಯನ್​ ರಫೆಲ್​ ನಡಾಲ್​ ಮತ್ತು ಸರ್ಬಿಯಾದ ನೊವಾಕ್​ ಜೋಕೊವಿಕ್​ ಗಾಯದಿಂದಾಗಿ ಟೂರ್ನಿಯನ್ನು ಅರ್ಧಕ್ಕೆ ಮೊಟಕುಗೊಳಿಸಿದ ಬಳಿಕ ಅಲ್ಕರಾಜ್ ಪ್ರಶಸ್ತಿ ಗೆಲ್ಲುವ ಫೇವರಿಟ್​ ಎನಿಸಿಕೊಂಡಿದ್ದರು. ಇದೀಗ ನಾಳೆ ನಡೆಯುವ ಫೈನಲ್​ನಲ್ಲಿ ಚೊಚ್ಚಲ ಪ್ರಶಸ್ತಿ ಎತ್ತಿ ಹಿಡಿಯಲಿದ್ದಾರಾ ಎಂದು ಕಾದು ನೋಡಬೇಕಿದೆ.

ಶುಕ್ರವಾರ ನಡೆದಿದ್ದ ಸೆಮಿಫೈನಲ್​ ಪಂದ್ಯದಲ್ಲಿ ಅಲ್ಕರಾಜ್ ಐದು ಸೆಟ್​ಗಳ 4 ಗಂಟೆಗಳ ಕಾಲ ನಡೆದ ತೀವ್ರ ಪೈಪೋಟಿಯ ಪಂದ್ಯದಲ್ಲಿ ಆಸ್ಟ್ರೇಲಿಯನ್​ ಚಾಂಪಿಯನ್​ ಇಟಲಿಯ ಜನ್ನಕ್​ ಸಿನ್ನರ್​ ಅವರನ್ನು 2-6, 6-3,3-6,6-4, 6-3 ಸೇಟ್​ಗಳ ಗೆಲುವು ಸಾಧಿಸಿದ್ದರು.

Continue Reading

ಕರ್ನಾಟಕ

Govt Employees: ಪ್ರತಿ ಸೋಮವಾರ ಕೇಂದ್ರ ಕಚೇರಿಗಳಿಗೆ ಅಧಿಕಾರಿ, ನೌಕರರ ಹಾಜರು ಕಡ್ಡಾಯ: ರಾಜ್ಯ ಸರ್ಕಾರ ಆದೇಶ

Govt Employees: ರೈತರಿಗೆ ಅನುಕೂಲವಾಗಲು ರಾಜ್ಯ ಸರ್ಕಾರ ಈ ಆದೇಶ ಹೊರಡಿಸಿದೆ. ಅಧಿಕಾರಿ, ನೌಕರರು ಪ್ರತಿ ಸೋಮವಾರಗಳಂದು ತಮ್ಮ ತಮ್ಮ ಕೇಂದ್ರ ಸ್ಥಾನದ ಕಚೇರಿಗಳಲ್ಲಿ ಹಾಜರಿದ್ದು, ಕರ್ತವ್ಯ ನಿರ್ವಹಿಸಬೇಕು ಎಂದು ಸೂಚಿಸಲಾಗಿದೆ.

VISTARANEWS.COM


on

Govt Employees
Koo

ಬೆಂಗಳೂರು: ಪ್ರತಿಯೊಂದು ಇಲಾಖೆಯ ಅಧಿಕಾರಿ, ನೌಕರರು (Govt Employees) ಪ್ರತಿ ಸೋಮವಾರಗಳಂದು ತಮ್ಮ ತಮ್ಮ ಕೇಂದ್ರ ಸ್ಥಾನದ ಕಚೇರಿಗಳಲ್ಲಿ ಹಾಜರಿದ್ದು, ಕಚೇರಿಗಳಿಗೆ ಆಗಮಿಸುವ ಜನರಿಗೆ ಸರ್ಕಾರಿ ಸೇವೆಗಳನ್ನು ಒದಗಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಸೂಚನೆಯಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವಿಮಲಾಕ್ಷಿ. ಬಿ ಅವರು ಎಲ್ಲಾ ಸರ್ಕಾರಿ ಇಲಾಖೆಗಳಿಗೆ ಆದೇಶ ಹೊರಡಿಸಿದ್ದಾರೆ.

ಕರ್ನಾಟಕವು ಕೃಷಿ ಪ್ರಧಾನವಾದ ರಾಜ್ಯವಾಗಿದ್ದು, ಸಾಮಾನ್ಯವಾಗಿ ಕೃಷಿಕರು ಸೋಮವಾರದ ದಿನದಂದು ತುಸುಮಟ್ಟಿಗೆ ಕೃಷಿ ಚಟುವಟಿಕೆಗಳಿಗೆ ಬಿಡುವು ನೀಡಿ, ಸಂತೆ, ಪೇಟೆ ಕೆಲಸಗಳು ಹಾಗೂ ಕಚೇರಿಗಳಿಗೆ ತಮ್ಮ ಕೆಲಸಗಳಿಗಾಗಿ ಹೋಗುವುದು ಹಿಂದಿನಿಂದ ನಡೆದುಕೊಂಡು ಬಂದ ವಾಡಿಕೆಯಾಗಿದೆ.

ಈ ಹಿಂದೆ, ಪ್ರತಿ ಸೋಮವಾರಗಳಂದು ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳಾದಿಯಾಗಿ ಎಲ್ಲರೂ ತಮ್ಮ ತಮ್ಮ ಕೇಂದ್ರಸ್ಥಾನದ ಕಚೇರಿಗಳಲ್ಲಿದ್ದು, ಜನರ ಕೆಲಸಗಳನ್ನು ಮಾಡುತ್ತಿದ್ದರು. ಆದರೆ, ಕೃಷಿಯೇತರ ಹಿನ್ನೆಲೆಯಿಂದ ಅಧಿಕಾರಿಗಳು, ನೌಕರರು ಸರ್ಕಾರಿ ಸೇವೆಗೆ ಬರುವ ಪ್ರಮಾಣ ಹೆಚ್ಚಿದ ಮೇಲೆ ಈ ಪದ್ಧತಿಯಲ್ಲಿ ಸ್ವಲ್ಪ ಮಟ್ಟಿಗೆ ಏರು ಪೇರಾಗಿದೆ. ಆದ್ದರಿಂದ, ಪ್ರತಿಯೊಂದು ಇಲಾಖೆಯ ಅಧಿಕಾರಿ, ನೌಕರರು ಪ್ರತಿ ಸೋಮವಾರಗಳಂದು ತಮ್ಮ ತಮ್ಮ ಕೇಂದ್ರಸ್ಥಾನದ ಕಚೇರಿಗಳಲ್ಲಿ ಹಾಜರಿದ್ದು, ಕರ್ತವ್ಯ ನಿರ್ವಹಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಎಂಎಲ್‌ಸಿ ಅಡಗೂರು ಎಚ್.ವಿಶ್ವನಾಥ್ ಮನವಿ ಕೋರಿದ್ದರು. ಈ ಬಗ್ಗೆ ಸಕಾರಾತ್ಮಕವಾಗಿ ಸಿಎಂ ಸಿದ್ದರಾಮಯ್ಯ ಸ್ಪಂದಿಸಿ, ಅಗತ್ಯ ಕ್ರಮವಹಿಸಲು ಸೂಚನೆ ನೀಡಿದ್ದಾರೆ.

ಸಾರಿಗೆ ನಿಗಮಕ್ಕೂ ಅನ್ವಯ

ಪ್ರತಿ ಸೋಮವಾರಗಳಂದು ಪ್ರತಿಯೊಂದು ಇಲಾಖೆಯ ಅಧಿಕಾರಿ, ನೌಕರರು ತಮ್ಮ ಕೇಂದ್ರ ಸ್ಥಾನದ ಕಚೇರಿಗಳಲ್ಲಿ ಹಾಜರಿದ್ದು, ಕರ್ತವ್ಯ ನಿರ್ವಹಿಸಬೇಕು ಎಂಬ ರಾಜ್ಯ ಸರ್ಕಾರ ಸೂಚನೆಯು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಕ್ಕೂ ಅನ್ವಯವಾಗಿದೆ. ನಿಗಮ ವ್ಯಾಪ್ತಿಯ ಎಲ್ಲಾ ಕಚೇರಿಗಳಲ್ಲಿ ತುರ್ತು ಕಾರ್ಯಗಳನ್ನು ಹೊರತುಪಡಿಸಿ. ಪ್ರತಿ ಸೋಮವಾರಗಳಂದು ತಮ್ಮ ಕೇಂದ್ರ ಸ್ಥಾನದ ಕಚೇರಿಗಳಲ್ಲಿ ಹಾಜರಿದ್ದು, ಸೇವೆ ಒದಗಿಸಬೇಕು ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ಸುತ್ತೋಲೆ ಹೊರಡಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Kisan Samman Nidhi: ರೈತರಿಗೆ ಗುಡ್‌ ನ್ಯೂಸ್;‌ ಕಿಸಾನ್‌ ಸಮ್ಮಾನ್‌ ನಿಧಿ 2 ಸಾವಿರ ರೂ. ಹೆಚ್ಚಳ, ಇನ್ನು ಸಿಗೋದು 8 ಸಾವಿರ ರೂ.!

Kisan Samman Nidhi: ರಾಜಸ್ಥಾನ ವಿಧಾನಸಭೆಗೆ ಚುನಾವಣೆ ನಡೆದ ವೇಳೆ ಬಿಜೆಪಿಯು ಪ್ರಣಾಳಿಕೆ ಬಿಡುಗಡೆ ಮಾಡಿತ್ತು. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಕಿಸಾನ್‌ ಸಮ್ಮಾನ್‌ ನಿಧಿಯ ಮೊತ್ತವನ್ನು ಹೆಚ್ಚಿಸುವುದಾಗಿ ಭರವಸೆ ನೀಡಿತ್ತು. ಅದರಂತೆ, ರಾಜ್ಯ ಸರ್ಕಾರವೀಗ ಕಿಸಾನ್‌ ಸಮ್ಮಾನ್‌ ನಿಧಿಯನ್ನು ಹೆಚ್ಚಿಸಿದೆ. ಈ ಕುರಿತು ಮುಖ್ಯಮಂತ್ರಿ ಭಜನ್‌ಲಾಲ್‌ ಶರ್ಮಾ ಅವರು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮೂಲಕ ಮಾಹಿತಿ ನೀಡಿದ್ದಾರೆ.

VISTARANEWS.COM


on

Kisan Samman Nidhi
Koo

ಜೈಪುರ: ರಾಜಸ್ಥಾನದ ರೈತರಿಗೆ (Rajasthan Farmers) ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಕೇಂದ್ರ ಸರ್ಕಾರದ ಪಿಎಂ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆ (PM Kisan Samman Nidhi Scheme) ಅಡಿಯಲ್ಲಿ ವಾರ್ಷಿಕವಾಗಿ ರೈತರಿಗೆ ನೀಡುವ 6 ಸಾವಿರ ರೂಪಾಯಿಯನ್ನು ರಾಜ್ಯ ಸರ್ಕಾರವು 8 ಸಾವಿರ ರೂ.ಗೆ ಏರಿಕೆ ಮಾಡಿದೆ. ಕಿಸಾನ್‌ ಸಮ್ಮಾನ್‌ ನಿಧಿಗೆ ರಾಜ್ಯ ಸರ್ಕಾರವೂ 2 ಸಾವಿರ ರೂ. ಸೇರಿಸಿರುವ ಕಾರಣ ರಾಜ್ಯದ ರೈತರು ವರ್ಷಕ್ಕೆ 8 ಸಾವಿರ ರೂ. ಪಡೆಯಲಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಭಜನ್‌ಲಾಲ್‌ ಶರ್ಮಾ (Bhajanlal Sharma) ಘೋಷಣೆ ಮಾಡಿದ್ದಾರೆ.

“ಅನ್ನದಾತರ ಕಲ್ಯಾಣವೇ ನಮ್ಮ ಸರ್ಕಾರದ ಧ್ಯೇಯವಾಗಿದ್ದು, ರಾಜ್ಯ ಸರ್ಕಾರವು ಪಿಎಂ ಕಿಸಾನ್‌ ಸಮ್ಮಾನ್‌ ನಿಧಿಯ ಮೊತ್ತವನ್ನು 2 ಸಾವಿರ ರೂ. ಹೆಚ್ಚಿಸಿದೆ. ರೈತರ ಖಾತೆಗೆ ವಾರ್ಷಿಕ 6 ಸಾವಿರ ರೂ. ಬದಲು ಇನ್ನು 8 ಸಾವಿರ ರೂ. ಜಮೆಯಾಗಲಿದೆ” ಎಂದು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಭಜನ್‌ಲಾಲ್‌ ಶರ್ಮಾ ಪೋಸ್ಟ್‌ ಮಾಡಿದ್ದಾರೆ. ಕಳೆದ ನವೆಂಬರ್‌ನಲ್ಲಿ ರಾಜಸ್ಥಾನ ವಿಧಾನಸಭೆಗೆ ಚುನಾವಣೆ ನಡೆದ ವೇಳೆ ಬಿಜೆಪಿಯು ಪ್ರಣಾಳಿಕೆ ಬಿಡುಗಡೆ ಮಾಡಿತ್ತು. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಕಿಸಾನ್‌ ಸಮ್ಮಾನ್‌ ನಿಧಿಯ ಮೊತ್ತವನ್ನು ಹೆಚ್ಚಿಸುವುದಾಗಿ ಭರವಸೆ ನೀಡಿತ್ತು. ಅದರಂತೆ, ರಾಜ್ಯ ಸರ್ಕಾರವೀಗ ಕಿಸಾನ್‌ ಸಮ್ಮಾನ್‌ ನಿಧಿಯನ್ನು ಹೆಚ್ಚಿಸಿದೆ.

ಅಷ್ಟೇ ಅಲ್ಲ, ರಾಜಸ್ಥಾನದಲ್ಲಿ ಕಳೆದ ಐದು ವರ್ಷದಲ್ಲಿ ನಡೆದ ನೇಮಕಾತಿಗಳ ಕುರಿತು ತನಿಖೆಗೂ ಮುಖ್ಯಮಂತ್ರಿ ಆದೇಶಿಸಿದ್ದಾರೆ. ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಕುರಿತು ಕಾಂಗ್ರೆಸ್‌ ನಾಯಕ ಸಚಿನ್‌ ಪೈಲಟ್‌ ಅವರು ಅಸಮಾಧಾನ ವ್ಯಕ್ತಪಡಿಸಿದ್ದರು. ನೇಮಕಾತಿ ಅಕ್ರಮ, ಭ್ರಷ್ಟಾಚಾರದ ಕುರಿತು ತನಿಖೆಯಾಗಬೇಕು ಎಂದು ಆಗ ಅಸ್ತಿತ್ವದಲ್ಲಿದ್ದ ತಮ್ಮದೇ ಸರ್ಕಾರಕ್ಕೆ ಆಗ್ರಹಿಸಿದ್ದರು.

3 ಕಂತುಗಳಲ್ಲಿ ಕೇಂದ್ರ ಸರ್ಕಾರ ಪಾವತಿ

ಪಿಎಂ-ಕಿಸಾನ್ ಸಮ್ಮಾನ್‌ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಎಪ್ರಿಲ್-ಜುಲೈ, ಆಗಸ್ಟ್-ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ ಈ ಯೋಜನೆ ನೆರವಾಗುತ್ತಿದೆ. ಕೇಂದ್ರ ಸರ್ಕಾರವು 17ನೇ ಕಂತಿನ ಹಣವನ್ನು ಬಿಡುಗಡೆ ಮಾಡಬೇಕಿದ್ದು, ಇದುವರೆಗೆ ದಿನಾಂಕ ನಿಗದಿ ಮಾಡಿಲ್ಲ.

ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸುವ ವಿಧಾನ

ಅಧಿಕೃತ ವೆಬ್‌ಸೈಟ್‌ www.pmkisan.gov.inಗೆ ಭೇಟಿ ನೀಡಿ.
ಆಗ ತೆರೆದುಕೊಳ್ಳುವ ಪುಟದಲ್ಲಿನ ‘Beneficiary list’ ಆಯ್ಕೆಯ ಮೇಲೆ ಕ್ಲಿಕ್‌ ಮಾಡಿ.
ನಿಮ್ಮ ರಾಜ್ಯ, ಜಿಲ್ಲೆ, ಉಪಜಿಲ್ಲೆ, ಬ್ಲಾಕ್‌ ಮತ್ತು ಗ್ರಾಮವನ್ನು ಆಯ್ಕೆ ಮಾಡಿ.
‘Get report’ ಆಯ್ಕೆಯನ್ನು ಸೆಲೆಕ್ಟ್‌ ಮಾಡಿ.
ಹೆಚ್ಚಿನ ಮಾಹಿತಿಗೆ ಹೆಲ್ಪ್‌ಲೈನ್‌ ನಂಬರ್‌ 155261 ಮತ್ತು 011-24300606 ಅನ್ನು ಸಂಪರ್ಕಿಸಿ.

ಇದನ್ನೂ ಓದಿ: Money Guide: ಕಿಸಾನ್‌ ಸಮ್ಮಾನ್‌ ನಿಧಿಯ 17ನೇ ಕಂತು ಬಿಡುಗಡೆಗೆ ದಿನಗಣನೆ; ನಗದು ಜಮೆ ಯಾವಾಗ?

Continue Reading
Advertisement
NED vs RSA
T20 ವಿಶ್ವಕಪ್3 hours ago

NED vs RSA: ಹೋರಾಡಿ ಸೋತ ನೆದರ್ಲೆಂಡ್ಸ್​; ಹರಿಣ ಪಡೆಗೆ ಪ್ರಯಾಸದ ಗೆಲುವು

Karnataka police
ಕರ್ನಾಟಕ5 hours ago

Davanagere News: ದಾವಣಗೆರೆಯಲ್ಲಿ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್‌ಗಿರಿ; ನಾಲ್ವರ ಬಂಧನ

French Open Final 2024
ಪ್ರಮುಖ ಸುದ್ದಿ5 hours ago

French Open Final 2024: 4ನೇ​ ಫ್ರೆಂಚ್‌ ಓಪನ್‌ ಟ್ರೋಫಿ ಗೆದ್ದ ಇಗಾ ಸ್ವಿಯಾಟೆಕ್‌

Govt Employees
ಕರ್ನಾಟಕ5 hours ago

Govt Employees: ಪ್ರತಿ ಸೋಮವಾರ ಕೇಂದ್ರ ಕಚೇರಿಗಳಿಗೆ ಅಧಿಕಾರಿ, ನೌಕರರ ಹಾಜರು ಕಡ್ಡಾಯ: ರಾಜ್ಯ ಸರ್ಕಾರ ಆದೇಶ

Kisan Samman Nidhi
ಪ್ರಮುಖ ಸುದ್ದಿ6 hours ago

Kisan Samman Nidhi: ರೈತರಿಗೆ ಗುಡ್‌ ನ್ಯೂಸ್;‌ ಕಿಸಾನ್‌ ಸಮ್ಮಾನ್‌ ನಿಧಿ 2 ಸಾವಿರ ರೂ. ಹೆಚ್ಚಳ, ಇನ್ನು ಸಿಗೋದು 8 ಸಾವಿರ ರೂ.!

IND vs PAK
ಕ್ರೀಡೆ6 hours ago

IND vs PAK: ಭಾರತ-ಪಾಕ್​ ಹೈವೋಲ್ಟೇಜ್​ ಪಂದ್ಯದ ಹವಾಮಾನ ವರದಿ, ಆಡುವ ಬಳಗ ಹೇಗಿದೆ?

World Environment Day Celebration at Kittur Rani Chennamma Residential School
ದಾವಣಗೆರೆ6 hours ago

Davanagere News: ತರಗನಹಳ್ಳಿಯ ಚನ್ನಮ್ಮ ವಸತಿ ಶಾಲೆಯಲ್ಲಿ ಪರಿಸರ ದಿನಾಚರಣೆ

Physical Abuse
ಕರ್ನಾಟಕ6 hours ago

Physical Abuse: 34 ವರ್ಷದ ವಿಚ್ಛೇದಿತ ಮಹಿಳೆ ಜತೆ 25ರ ಯುವಕನ ಲವ್ವಿ ಡವ್ವಿ; ಗರ್ಭಿಣಿ ಮಾಡಿ ಪರಾರಿ!

World Environment Day Celebration at Kamaruru Government higher Primary School
ಶಿವಮೊಗ್ಗ6 hours ago

World Environment Day: ಚಂದ್ರಗುತ್ತಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ

Youth Congress National General Secretary Raksha Ramaiah latest statement
ಚಿಕ್ಕಬಳ್ಳಾಪುರ6 hours ago

Raksha Ramaiah: ಚಿಕ್ಕಬಳ್ಳಾಪುರದಲ್ಲಿ ನಾನಾ ಕಾರಣಗಳಿಂದ ಮತಗಳನ್ನು ಗೆಲುವಾಗಿ ಪರಿವರ್ತಿಸಲು ಸಾಧ್ಯವಾಗಿಲ್ಲ: ರಕ್ಷಾ ರಾಮಯ್ಯ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ1 day ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ1 day ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ5 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ5 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ5 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ7 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌