Dina Bhavishya : ಈ ರಾಶಿಯವರಿಗೆ ಕೂಡಿಬರಲಿದೆ ಕಂಕಣ ಭಾಗ್ಯ! - Vistara News

ಪ್ರಮುಖ ಸುದ್ದಿ

Dina Bhavishya : ಈ ರಾಶಿಯವರಿಗೆ ಕೂಡಿಬರಲಿದೆ ಕಂಕಣ ಭಾಗ್ಯ!

Dina Bhavishya : ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಯುಜ ಮಾಸ, ಕೃಷ್ಣ ಪಕ್ಷದ ದಶಮಿ (ಅಹೋರಾತ್ರಿ) ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina bhavishya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂದ್ರನು ಮಂಗಳವಾರವೂ ಕನ್ಯಾ ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ಮಿಥುನ, ಸಿಂಹ, ತುಲಾ, ವೃಶ್ಚಿಕ, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯವರಿಗೆ ಅತಿಯಾದ ಸಂಶಯಾತ್ಮಕ ಸ್ವಭಾವ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ ಇದೆ. ವೃಷಭ ರಾಶಿಯವರಿಗೆ ಕೈಗೆ ಬಂದ ತುತ್ತು ಬಾಯಿಗೆ ಬರುವ ಮುನ್ನ ನಿಮ್ಮ ಕೋಪದಿಂದ ಹದಗೆಡಲಿದೆ. ತಾಳ್ಮೆಯಿಂದ ವರ್ತಿಸಿ. ಕನ್ಯಾ ರಾಶಿಯವರು ಪಾಲುದಾರಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (7-11-2023)

ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಯುಜ ಮಾಸ, ಕೃಷ್ಣ ಪಕ್ಷ
ತಿಥಿ: ದಶಮಿ (ಅಹೋರಾತ್ರಿ) ವಾರ: ಮಂಗಳವಾರ
ನಕ್ಷತ್ರ: ಮಘಾ 16:22 ಯೋಗ: ಬ್ರಹ್ಮ 15:18
ಕರಣ: ವಣಿಜ 19:07 ಅಮೃತ ಕಾಲ: ಮಧ್ಯಾಹ್ನ 1: 42ರಿಂದ 3:30ರವರೆಗೆ
ದಿನದ ವಿಶೇಷ: ಸಂತ ತುಕಾರಾಂರ ಪುಣ್ಯ ದಿನ

ಸೂರ್ಯೋದಯ : 06:15  ಸೂರ್ಯಾಸ್ತ : 05:51

ರಾಹುಕಾಲ : ಮಧ್ಯಾಹ್ನ 3 ರಿಂದ 4.30
ಗುಳಿಕಕಾಲ: ಮಧ್ಯಾಹ್ನ 12 ರಿಂದ 1.30
ಯಮಗಂಡಕಾಲ: ಬೆಳಗ್ಗೆ 10.30 ರಿಂದ 12.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಆರೋಗ್ಯದಲ್ಲಿ ಪ್ರಗತಿ ಇರಲಿದೆ. ವ್ಯಾಪಾರ ವ್ಯವಹಾರದಲ್ಲಿ ಲಾಭ ಇರಲಿದೆ. ಅತಿಯಾದ ಸಂಶಯಾತ್ಮಕ ಸ್ವಭಾವ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ ಇದೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5

Horoscope Today

ವೃಷಭ: ಕೈಗೆ ಬಂದ ತುತ್ತು ಬಾಯಿಗೆ ಬರುವ ಮುನ್ನ ನಿಮ್ಮ ಕೋಪದಿಂದ ಹದಗೆಡಲಿದೆ. ತಾಳ್ಮೆಯಿಂದ ವರ್ತಿಸಿ. ಕೆಲಸ ಕಾರ್ಯಗಳಲ್ಲಿ ನಿಧಾನಗತಿ ಇರಲಿದೆ. ಕುಟುಂಬದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮಿಥುನ: ಆಪ್ತ ವ್ಯಕ್ತಿಗಳಿಂದ ಸಲಹೆ ಸಿಗಲಿದೆ. ಆರ್ಥಿವಾಗಿ ಬಲ ಸಿಗಲಿದೆ. ದ್ವಿಸ್ವಭಾವದರಾದ ನೀವು ಆಂತರಿಕ ಭಯದಿಂದ ಬಳಲುತ್ತಿರುವ ಹಾಗೆ ಭಾಸವಾಗುವುದು. ಆರೋಗ್ಯದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಕಟಕ: ಹಾಸ್ಯ ಪ್ರಜ್ಞೆಯಿಂದ ಕಾರ್ಯವನ್ನು ಸಾಧಿಸಿಕೊಳ್ಳುವಿರಿ. ಹೊಸ ವ್ಯವಹಾರದಲ್ಲಿ ತೊಡಗುವಿರಿ. ಆತುರದ ತೀರ್ಮಾನಗಳು ಬೇಡ. ಕುಟುಂಬದ ಸದಸ್ಯರೊಂದಿಗೆ ಚರ್ಚೆ ನಡೆಸುವಿರಿ. ಸಂಗಾತಿಯ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಸಿಂಹ: ಅತಿಯಾದ ವ್ಯಾಮೋಹ ದುಃಖಕ್ಕೆ ಕಾರಣವಾಗಬಹುದು. ಇಂದು ನಿಮ್ಮ ಕೆಲಸದ ಸ್ಥಳದಲ್ಲಿ ಪ್ರೀತಿ ಮೇಲುಗೈ ಸಾಧಿಸುತ್ತದೆ. ನಿಮ್ಮ ಶಕ್ತಿ ಮತ್ತು ನಿಮ್ಮ ಮುಂದಿನ ಯೋಜನೆಗಳನ್ನು ಮರು ನಿರ್ಣಯಿಸುವ ಸಮಯವಿದು. ಆರೋಗ್ಯದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಕನ್ಯಾ: ಆರೋಗ್ಯದ ಕಡೆಗೆ ಗಮನ ಹರಿಸಬೇಕು. ಅತಿಥಿಗಳ ಆಗಮನ ಸಂತಸ ತರುವುದು. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ. ಪಾಲುದಾರಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆಪ್ತರ ಮಾತುಗಳು ಪರಿಣಾಮ ಬೀರುವ ಸಾಧ್ಯತೆ ಇದೆ. ಹಣಕಾಸಿನ ವ್ಯವಹಾರದಲ್ಲಿ ಕುಂಠಿತವಾಗಲಿದೆ. ಕುಟುಂಬ ಸದಸ್ಯರ ಆರೋಗ್ಯದಲ್ಲಿ ವ್ಯತ್ಯಾಸ ಆಗಬಹುದು. ಧೃತಿಗೆಡದೆ ಕಾರ್ಯದಲ್ಲಿ ಮುನ್ನುಗ್ಗಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ವೃಶ್ಚಿಕ: ಆಹಾರ ಕ್ರಮದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ. ಅನಗತ್ಯ ಖರ್ಚುಗಳು ಹೆಚ್ಚಾಗುವ ಸಾಧ್ಯತೆ ಇದೆ. ನಿಮ್ಮ ಉದಾರ ವರ್ತನೆಯನ್ನು ಬಳಸಿ ಕೊಂಡು ಬೇರೆಯವರು ದುರುಪಯೋಗ ಮಾಡಿಕೊಳ್ಳುವ ಸಾಧ್ಯತೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 6

Horoscope Today

ಧನಸ್ಸು: ದೈಹಿಕ ಆಯಾಸವಾಗುವುದು. ಅತಿಯಾದ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ವ್ಯಕ್ತಿಗಳನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಕೆಲಸಕಾರ್ಯಗಳಲ್ಲಿ ನಿಧಾನಗತಿ ಇರಲಿದೆ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 3

Horoscope Today

ಮಕರ: ಆರೋಗ್ಯದ ದೃಷ್ಟಿಯಿಂದ ಉತ್ತಮವಾದ ದಿನ. ಎಂದಿಗಿಂತ ಇಂದು ಉತ್ಸಾಹದಿಂದ ಇರುವಿರಿ. ಉದ್ಯೋಗದ ಸ್ಥಳದಲ್ಲಿ ಪ್ರಸಂಶೆ ಸಿಗಲಿದೆ. ಪ್ರೀತಿ ಅಂಕುರವಾಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಕುಂಭ: ಭರವಸೆಯು ನಿಮ್ಮ ಕೆಲಸದಲ್ಲಿ ಸಹಾಯ ಮಾಡುವುದು. ಕುಟುಂಬದ ಸದಸ್ಯರ ಬೆಂಬಲ ದೊರೆಯಲಿದೆ. ವ್ಯಾಪಾರ-ವ್ಯವಹಾರದಲ್ಲಿ ಸಕಾರಾತ್ಮಕ ಬದಲಾವಣೆಗಳು ಕಂಡು ಬರುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಮೀನ: ಪ್ರೀತಿ, ಭರವಸೆ, ನಂಬಿಕೆ, ಸಹಾನುಭೂತಿ, ಆಶಾವಾದ ಮತ್ತು ನಿಷ್ಠೆಗಳಂಥ ಧನಾತ್ಮಕ ಭಾವನೆಗಳನ್ನು ಗ್ರಹಿಸಲು ಮನಸ್ಸು ಪ್ರೋತ್ಸಾಹಿಸುವುದು. ಕಾರ್ಯದಲ್ಲಿ ಪ್ರಗತಿ ಇರಲಿದೆ. ಹಿರಿಯರ ಆಶೀರ್ವಾದ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Prajwal Revanna Case: ಪೆನ್ ಡ್ರೈವ್ ಹಂಚಿಕೆ ಪ್ರಕರಣದ ಆರೋಪಿ ಕಾರ್ತಿಕ್ ಗೌಡ ಬಂಧನ

Prajwal Revanna Case: ಅಶ್ಲೀಲ ವಿಡಿಯೊಗಳಿದ್ದ ಪೆನ್‌ಡ್ರೈವ್‌ ಅನ್ನು ವಕೀಲ ದೇವರಾಜೇಗೌಡಗೆ ನೀಡಿದ ಆರೋಪದಲ್ಲಿ ಪ್ರಜ್ವಲ್‌ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ್ ಗೌಡನನ್ನು ಬಂಧಿಸಲಾಗಿದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಹಾಸನದ ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣರ ಮಾಜಿ ಕಾರು ಚಾಲಕ ಹಾಗೂ ಆರೋಪಿ ಕಾರ್ತಿಕ್‌ ಗೌಡ ಕೊನೆಗೂ ಸಿಕ್ಕಿಬಿದ್ದಿದ್ದಾನೆ. ಅಶ್ಲೀಲ ವಿಡಿಯೊಗಳಿದ್ದ ಪೆನ್‌ಡ್ರೈವ್‌ ಅನ್ನು ವಕೀಲ ದೇವರಾಜೇಗೌಡಗೆ ನೀಡಿದ ಆರೋಪದಲ್ಲಿ ಕಾರ್ತಿಕ್ ಗೌಡನನ್ನು ಮೈಸೂರು-ಹಾಸನ ಗಡಿಭಾಗದಲ್ಲಿ ಬಂಧಿಸಲಾಗಿದೆ. ಅಲ್ಲಿಂದ ವಿಚಾರಣೆಗಾಗಿ ಬೆಂಗಳೂರಿಗೆ ಕರೆತರಲಾಗುತ್ತಿದೆ.

ಪೆನ್‌ಡ್ರೈವ್‌ ಹಂಚಿಕೆ ಆರೋಪದಲ್ಲಿ ಏಪ್ರಿಲ್ 23ರಂದು ಹಾಸನ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿತ್ತು. ಕಾರ್ತಿಕ್‌ ಗೌಡ, ಪುಟ್ಟಿ ಅಲಿಯಾಸ್ ಪುಟ್ಟರಾಜ್, ನವೀನ್ ಗೌಡ ಹಾಗೂ ಚೇತನ್ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು. ಈ ಪೈಕಿ ನವೀನ್‌ ಗೌಡ ಹಾಗೂ ಚೇತನ್‌ನನ್ನು ಇತ್ತೀಚೆಗೆ ಎಸ್‌ಐಟಿ ಬಂಧಿಸಿತ್ತು. ಇದೀಗ ಕಾರ್ತಿಕ್‌ ಗೌಡನನ್ನು ಬಂಧಿಸಲಾಗಿದೆ.

ಇತ್ತೀಚೆಗೆ ಕಾರ್ತಿಕ್ ಗೌಡ ಅಜ್ಞಾತ ಸ್ಥಳದಲ್ಲಿದ್ದುಕೊಂಡು ವಿಡಿಯೊ ಮಾಡಿ, ಅಶ್ಲೀಲ ವಿಡಿಯೊ ಲೀಕ್ ಪ್ರಕರಣದ ಬಗ್ಗೆ ಸ್ಪಷ್ಟನೆ ನೀಡಿದ್ದ. ನಾನು ಹದಿನೈದು ವರ್ಷದಿಂದ ಪ್ರಜ್ವಲ್‌ ರೇವಣ್ಣ ಹಾಗೂ ಅವರ ಫ್ಯಾಮಿಲಿಗೆ ಕಾರು ಡ್ರೈವರ್ ಆಗಿ ಕೆಲಸ ಮಾಡಿದ್ದೇನೆ. ಒಂದು ವರ್ಷದಿಂದ ಕೆಲಸವನ್ನು ಬಿಟ್ಟಿದ್ದೇನೆ. ನನ್ನ ಜಮೀನು ಬರೆಸಿಕೊಂಡು ನನ್ನ ಪತ್ನಿ ಮೇಲೆ ಹಲ್ಲೆ ಮಾಡಿದರು. ಹಿಂಸೆ ಕೊಟ್ಟರು. ಆದ್ದರಿಂದ ಅವರ ಮನೆಯಿಂದ ಹೊರಬಂದೆ. ಆ ಸಮಯದಲ್ಲಿ ದೇವರಾಜೇಗೌಡ ಇವರ ಫ್ಯಾಮಿಲಿ ವಿರುದ್ಧ ಹೋರಾಟ ಮಾಡುತ್ತಿದ್ದರು. ಯಾರಿಂದಲೂ ನ್ಯಾಯ ಸಿಗಲ್ಲ ಅಂತ ದೇವರಾಜೇಗೌಡ ಬಳಿ ಹೋದೆ. ಯಾವುದೇ ಅಶ್ಲೀಲ ವಿಡಿಯೊ ರಿಲೀಸ್ ಮಾಡಬಾರದು ಎಂದು ಅಂದು ನನ್ನ ವಿರುದ್ಧ ಪ್ರಜ್ವಲ್‌ ರೇವಣ್ಣ ಸ್ಟೇ ತಂದಿದ್ದರು. ನಿನ್ನ ಬಳಿ ಇರುವ ವಿಡಿಯೊ, ಫೋಟೊಗಳನ್ನು ಕೊಡು. ನಾನು ಯಾರಿಗೂ ತೋರಿಸುವುದಿಲ್ಲ ಎಂದು ದೇವರಾಜೇಗೌಡ ಕೇಳಿದ್ದರು. ಅವರನ್ನು ನಂಬಿ ನನ್ನ ಬಳಿಯಿದ್ದ ವಿಡಿಯೊದ ಒಂದು ಕಾಪಿ ಕೊಟ್ಟೆ. ಅವರು ಅದನ್ನು ಸ್ವಾರ್ಥಕ್ಕೆ ಉಪಯೋಗಿಸಿಕೊಂಡರೋ ಏನೋ ಎಂಬುದು ಗೊತ್ತಿಲ್ಲ ಎಂದು ಹೇಳಿದ್ದ.

ಇದನ್ನೂ ಓದಿ | Valmiki Corporation Scam: ಸಾಕ್ಷ್ಯ ನಾಶ ಆರೋಪ; ಮೇ 24ರಂದು ನಾನು ಕಚೇರಿಗೆ ಹೋಗಿಯೇ ಇಲ್ಲ ಎಂದ ಸಚಿವ ಶರಣ ಪ್ರಕಾಶ್ ಪಾಟೀಲ್

ದೇವರಾಜೇಗೌಡರನ್ನು ಬಿಟ್ಟರೆ ಬೇರೆ ಯಾರಿಗೂ ನಾನು ವಿಡಿಯೊವನ್ನು ಕೊಟ್ಟಿಲ್ಲ. ಕಾಂಗ್ರೆಸ್‌ನವರಿಗಂತೂ ನಾನು ವಿಡಿಯೊ ಕೊಟ್ಟಿಲ್ಲ. ಕಾಂಗ್ರೆಸ್‌ನವರ ಮೇಲೆ ನಂಬಿಕೆ ಇಲ್ಲದೆ ದೇವರಾಜೇಗೌಡರ ಹತ್ತಿರ ಕೊಟ್ಟಿದ್ದೆ. ಪೆನ್‌ ಡ್ರೈವ್ ಅನ್ನು ಯಾರು ಹಂಚಿದರೋ ಗೊತ್ತಿಲ್ಲ ಎಂದು ಕಾರ್ತಿಕ್‌ ಹೇಳಿದ್ದ. ನಂತರ ವಕೀಲ ದೇವರಾಜೇಗೌಡರನ್ನು ಎಸ್‌ಐಟಿ ಬಂಧಿಸಿತ್ತು. ಇದೀಗ ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌ ಗೌಡನನ್ನು ಬಂಧಿಸಲಾಗಿದೆ.

ಪರಾರಿಯಾಗಲು ಸಹಾಯ; ಪ್ರಜ್ವಲ್ ರೇವಣ್ಣ ಗರ್ಲ್ ಫ್ರೆಂಡ್‌ಗೆ ಎಸ್‌ಐಟಿ ನೊಟೀಸ್!

Prajwal Revanna Case

ಬೆಂಗಳೂರು: ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿದೇಶದಲ್ಲಿ ತಲೆ ಮರೆಸಿಕೊಳ್ಳಲು ಹಣ ಸಹಾಯ ಮಾಡಿದ ಆರೋಪದಡಿ ಪ್ರಜ್ವಲ್‌ ಗರ್ಲ್ ಫ್ರೆಂಡ್‌ಗೆ ಎಸ್‌ಐಟಿ ನೊಟೀಸ್ ನೀಡಿದೆ. ಸಹಾಯ ಮಾಡುವ ಜತೆಗೆ ಇಲ್ಲಿನ ವಿದ್ಯಾಮಾನಗಳನ್ನು ಗರ್ಲ್ ಫ್ರೆಂಡ್ ಅಪ್ ಡೇಟ್ ಮಾಡುತ್ತಿದ್ದಳು ಎನ್ನಲಾಗಿದೆ. ಹೀಗಾಗಿ ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್‌ ಗರ್ಲ್ ಫ್ರೆಂಡ್‌ಗೆ ನೋಟಿಸ್‌ ಜಾರಿ ಮಾಡಲಾಗಿದೆ.

ಹಲವು ಬಾರಿ ನೋಟಿಸ್ ನೀಡಿದ್ದರೂ ಪ್ರಜ್ವಲ್‌ ರೇವಣ್ಣ ವಿಚಾರಣೆಗೆ ಬಂದಿರಲಿಲ್ಲ. ಆರ್ಥಿಕವಾಗಿ ಕಟ್ಟಿ ಹಾಕಲು ಅವರ ಬ್ಯಾಂಕ್ ಅಕೌಂಟ್‌ಗಳನ್ನು ಸೀಜ್‌ ಮಾಡಲು ಎಸ್ಐಟಿ ಮುಂದಾಗಿತ್ತು. ತನಿಖೆ ವೇಳೆ ಪ್ರಜ್ವಲ್‌ಗೆ ಹಣ ವರ್ಗಾವಣೆ ಮಾಡಿದ ಅಕೌಂಟ್‌ಗಳ ಮೇಲೆಯೂ ನಿಗಾ ಇಡಲಾಗಿತ್ತು. ಆದರೆ ಪ್ರಜ್ವಲ್‌ಗೆ ಗರ್ಲ್ ಫ್ರೆಂಡ್ ಹಣ ಸಹಾಯ ಮಾಡಿರುವುದು, ಆಶ್ರಯ ಕಲ್ಪಿಸಿರುವ ಬಗ್ಗೆ ಮಹತ್ವದ ಸಾಕ್ಷ್ಯ ಲಭ್ಯವಾಗಿದ್ದರಿಂದ ನೋಟಿಸ್‌ ನೀಡಲಾಗಿದೆ.

ಇದನ್ನೂ ಓದಿ | Bhavani Revanna: ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರಾದ ಭವಾನಿ ರೇವಣ್ಣ ಹೇಳಿದ್ದೇನು?

ಹೊಳೆನರಸೀಪುರದ ನಿವಾಸದಲ್ಲಿ ಸ್ಥಳ ಮಹಜರು

ಹಾಸನ: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸ್ಥಳ ಮಹಜರು ನಡೆಸಲು ಪ್ರಜ್ವಲ್‌ ರೇವಣ್ಣ ಅವರನ್ನು ಹೊಳೆನರಸೀಪುರದ ಚೆನ್ನಾಂಬಿಕಾ ನಿವಾಸಕ್ಕೆ ಎಸ್‌ಐಟಿ ಅಧಿಕಾರಿಗಳು ಕರೆದೊಯ್ದಿದ್ದಾರೆ. ಇದಕ್ಕಾಗಿ ಮನೆ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಕ್ಯಾಮೆರಾಗಳಿಗೂ ಕಾಣದಂತೆ ಪ್ರಜ್ವಲ್‌ ರೇವಣ್ಣ ಅವರನ್ನು ಕರೆದೊಯ್ಯಲಾಗಿದೆ.

ನಾನು ಯಾರನ್ನೂ ಕರೆದುಕೊಂಡು ಬರಲು ಹೇಳಿಲ್ಲ: ಭವಾನಿ

ಕೆ.ಆರ್‌.ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ. ನಾನು ಸಂತ್ರಸ್ತೆಯನ್ನು ಕರೆದುಕೊಂಡು ಬರಲು ಹೇಳಿಲ್ಲ ಎಂದು ಭವಾನಿ ರೇವಣ್ಣ ಹೇಳಿದ್ದಾರೆ. ಶುಕ್ರವಾರ ನಾಲ್ಕು ಗಂಟೆಗಳ ಕಾಲ ಭವಾನಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ವಿಚಾರಣೆ ನಡೆಸಿದ್ದು, ಪುನಃ ವಿಚಾರಣೆಗೆ ಕರೆದಾಗ ಬರುವಂತೆ ಸೂಚಿಸಲಾಗಿದೆ. ಇಂದು ಮತ್ತೆ ಭವಾನಿ ರೇವಣ್ಣ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.

ಮಗನ ರಕ್ಷಣೆಗೆ ಯತ್ನಿಸಿ ಇಕ್ಕಟ್ಟಿಗೆ ಸಿಲುಕಿದ ತಾಯಿ

ಮಗ ಪ್ರಜ್ವಲ್‌ ರೇವಣ್ಣ ರಕ್ಷಣೆಗೆ ಯತ್ನಿಸಿ ತಾಯಿ ಭವಾನಿ ರೇವಣ್ಣ ಇಕ್ಕಟ್ಟಿಗೆ ಸಿಲುಕಿದ್ದಾರೆ. ಸಿಐಡಿಯ ಎಸ್ಐಟಿ ಕಚೇರಿಯಲ್ಲಿ ತಾಯಿ-ಮಗನ ವಿಚಾರಣೆ ತೀವ್ರಗೊಂಡಿದೆ. ಎಷ್ಟೇ ವಿಚಾರಣೆ ನಡೆಸಿದರೂ ಇಬ್ಬರೂ ಸೂಕ್ತ ಉತ್ತರ ನೀಡುತ್ತಿಲ್ಲ. ಒಂದೇ ಕಡೆ ಇದ್ದರೂ ತಾಯಿ-ಮಗನ ಭೇಟಿ ಅವಕಾಶ ನೀಡಿಲ್ಲ.

ಇದನ್ನೂ ಓದಿ | Prajwal Revanna Case: ರೇವಣ್ಣ ಎಫ್ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಜೂನ್‌ 14ಕ್ಕೆ ಮುಂದೂಡಿಕೆ

ಇಬ್ಬರನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಿ ಎಸ್ಐಟಿ ಅಧಿಕಾರಿಗಳು ಹೇಳಿಕೆ ದಾಖಲಿಸಿದ್ದಾರೆ. ಒಂದೂವರೆ ತಿಂಗಳಿನಿಂದ ಮಗನ ಮುಖ ತಾಯಿ ನೋಡಿಲ್ಲ. ನೆನ್ನೆ ಎಸ್ಐಟಿ ಕಚೇರಿಗೆ ಬಂದರೂ ಮಗನ ಮುಖ ನೋಡಲಾಗದ ಪರಿಸ್ಥಿತಿ ಇತ್ತು. ಹೀಗಾಗಿ ವಿಚಾರಣೆ ಮುಗಿಸಿ ಭವಾನಿ ರೇವಣ್ಣ‌ ವಾಪಸ್ ಆಗಿದ್ದರು.

Continue Reading

ಕ್ರೀಡೆ

IND vs PAK: ಪಾಕ್​ ವಿರುದ್ಧ ಈ ಬಾರಿಯೂ ಮರುಕಳಿಸಲಿ ಕೊಹ್ಲಿಯ ಬ್ಯಾಟಿಂಗ್​ ಗತವೈಭವ

IND vs PAK: ಭಾರತ ತಂಡ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧ ಅಜೇಯ ದಾಖಲೆ ಹೊಂದಿದೆ. ಆದರೆ, ಟಿ20 ವಿಶ್ವಕಪ್​ನಲ್ಲಿ ಭಾರತ ಅಜೇಯವಲ್ಲ. ಒಟ್ಟು 7 ಬಾರಿ ಇತ್ತಂಡಗಳು ಟಿ20 ವಿಶ್ವಕಪ್​ನಲ್ಲಿ ಮುಖಾಮುಖಿಯಾಗಿವೆ. ಈ ಪೈಕಿ ಭಾರತ 6 ಪಂದ್ಯ ಗೆದ್ದರೆ, ಪಾಕಿಸ್ತಾನ ಒಂದು ಪಂದ್ಯ ಗೆದ್ದಿದೆ.

VISTARANEWS.COM


on

IND vs PAK
Koo

ನ್ಯೂಯಾರ್ಕ್​: ಯಾವುದೇ ಐಸಿಸಿ ಕೂಟದಲ್ಲಿಯೂ ಭಾರತ-ಪಾಕಿಸ್ತಾನ(IND vs PAK) ಪಂದ್ಯಕ್ಕೆ ಇರುವಂತಹ ಕ್ರೇಜ್‌ ಉಳಿದ ಯಾವ ಪಂದ್ಯಕ್ಕೂ ಕಾಣಸಿಗದು. ನಿರೀಕ್ಷೆಗೂ ಮೀರಿದ ಕ್ರೇಜ್‌ ಕಂಡುಬರುತ್ತದೆ. ಕಳೆದ 2022ರಲ್ಲಿ ಮೆಲ್ಬೋರ್ನ್​ನಲ್ಲಿ(IND vs PAK 2022 T20 World Cup) ನಡೆದಿದ್ದ ಟಿ20 ವಿಶ್ವಕಪ್​ನ ಸೂಪರ್ 12 ಹಂತದ ಸೂಪರ್‌ ಥ್ರಿಲ್ಲಿಂಗ್‌ ಪಂದ್ಯದಲ್ಲಿ ವಿರಾಟ್​ ಕೊಹ್ಲಿಯ ಅಸಾಮಾನ್ಯ ಬ್ಯಾಟಿಂಗ್​ ಮೂಲಕ ಭಾರತಕ್ಕೆ ಗೆಲುವು ತಂದುಕೊಟ್ಟಿದ್ದರು. ಕೊಹ್ಲಿಯ ಬ್ಯಾಟಿಂಗ್​ ಆರ್ಭಟ ಕಂಡು ಪಾಕ್ ಅಕ್ಷರಶಃ ನಲುಗಿ ಹೋಗಿತ್ತು. ​ಕೊಹ್ಲಿಯ(Virat Kohli) ಅಂದಿನ ಬ್ಯಾಟಿಂಗ್​ ಗತವೈಭವ ಮತ್ತೆ ಮರುಕಳಿಸಲಿ ಎನ್ನುವುದು ಭಾರತೀಯ ಅಭಿಮಾನಗಳ ಆಶಯ. ಭಾರತ ಮತ್ತು ಪಾಕ್​ ನಡುವಣ ಪಂದ್ಯ ನಾಳೆ(ಭಾನುವಾರ) ನಡೆಯಲಿದೆ.

ಅಂದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಪಾಕಿಸ್ತಾನ(India vs Pakistan) ಶಾನ್​ ಮಸೂದ್​ ಮತ್ತು ಇಫ್ತಿಕಾರ್​ ಅಹ್ಮದ್​ ಬಾರಿಸಿದ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್​ಗೆ 159 ರನ್​ ಬಾರಿಸಿತ್ತು. ಈ ಮೊತ್ತವನ್ನು ಬೆನ್ನಟ್ಟಿದ ಭಾರತ 10 ರನ್​ ಗಳಿಸುವಷ್ಟರಲ್ಲಿ ರೋಹಿತ್​ ಶರ್ಮ(4) ಮತ್ತು ಕೆ.ಎಲ್​ ರಾಹುಲ್(4)​ ವಿಕೆಟ್​ ಕಳೆದುಕೊಂಡಿತು. ಆ ಬಳಿಕ ಬಂದ ಸೂರ್ಯಕುಮಾರ್​(15) ಮತ್ತು ಅಕ್ಷರ್​ ಪಟೇಲ್​(2) ಕೂಡ ನಿರಾಸೆ ಮೂಡಿಸಿದರು.

ಆರಂಭಿಕ ಆಘಾತ ಅನುಭವಿಸಿ ಸೋಲಿನತ್ತ ಮುಖಮಾಡಿದ್ದ ಭಾರತಕ್ಕೆ ಆಸರೆಯಾದದ್ದು ವಿರಾಟ್‌ ಕೊಹ್ಲಿ. ಒಂದೆಡೆ ವಿಕೆಟ್​ ಬೀಳುತ್ತಿದ್ದರೂ ಕೂಡ ತಂಡದ ಗೆಲುವಿಗಾಗಿ ಪಣ ತೊಟ್ಟಿದ್ದ ಕೊಹ್ಲಿ 53 ಎಸೆತದಲ್ಲಿ ಅಜೇಯ 82 ರನ್‌ ಬಾರಿಸಿ ಭಾರತಕ್ಕೆ ಗೆಲುವು ತಂದುಕೊಟ್ಟರು. ಹಾರ್ದಿಕ್​ ಪಾಂಡ್ಯ ಮಧ್ಯಮ ಕ್ರಮಾಂಕದಲ್ಲಿ 40 ರನ್​ ಬಾರಿಸಿ ಕೊಹ್ಲಿಗೆ ಉತ್ತಮ ಸಾಥ್​ ನೀಡಿದ್ದು ಕೂಡ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿತು.

ಇದನ್ನೂ ಓದಿ IND vs PAK: ಇಂಡೋ-ಪಾಕ್ ಟಿ20 ವಿಶ್ವಕಪ್​ ಕೌತುಕ; ಹೇಗಿದೆ ಇತ್ತಂಡಗಳ ದಾಖಲೆ? 

ಅಂತಿಮ ಒಂದು ಎಸೆತಕ್ಕೆ 2 ರನ್​ ಬೇಕಿದ್ದಾಗ ಕ್ರೀಸ್​ನಲ್ಲಿದ್ದ ಅಶ್ವಿನ್​ ಅವರು ಮೊಹಮ್ಮದ್​ ನವಾಜ್ ಅವರ​ ಲೆಗ್​ಸೈಡ್​ ಎಸೆತವನ್ನು ಅಷ್ಟೇ ಸೊಗಸಾಗಿ ವೈಡ್​ ಬಿಟ್ಟರು. ಪಂದ್ಯ ಟೈಗೊಂಡಿತು. ಕೊನೆಯ ಎಸೆತದಲ್ಲಿ ಸಿಂಗಲ್​ ತೆಗೆದು ಭಾರತದ ಗೆಲುವು ಸಾರಿದರು. ಕೊಹ್ಲಿಯ ಅಸಾಮಾನ್ಯ ಬ್ಯಾಟಿಂಗ್​ ಇನ್ನಿಂಗ್ಸ್ ಕಂಡ ನಾಯಕ ರೋಹಿತ್ ಶರ್ಮಾ ಓಡಿ ಬಂದು ಕೊಹ್ಲಿಯನ್ನು ತನ್ನ ಹೆಗಲ ಮೇಲೆ ಹೊತ್ತುಕೊಂಡು ಸಂಭ್ರಮಾಚರಣೆ ಮಾಡಿದ್ದರು.

ಭಾರತ ತಂಡ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧ ಅಜೇಯ ದಾಖಲೆ ಹೊಂದಿದೆ. ಆದರೆ, ಟಿ20 ವಿಶ್ವಕಪ್​ನಲ್ಲಿ ಭಾರತ ಅಜೇಯವಲ್ಲ. ಒಟ್ಟು 7 ಬಾರಿ ಇತ್ತಂಡಗಳು ಟಿ20 ವಿಶ್ವಕಪ್​ನಲ್ಲಿ ಮುಖಾಮುಖಿಯಾಗಿವೆ. ಈ ಪೈಕಿ ಭಾರತ 6 ಪಂದ್ಯ ಗೆದ್ದರೆ, ಪಾಕಿಸ್ತಾನ ಒಂದು ಪಂದ್ಯ ಗೆದ್ದಿದೆ. ಭಾರತಕ್ಕೆ ಸೋಲು ಎದುರಾದದ್ದು 2021ರಲ್ಲಿ ದುಬೈನಲ್ಲಿ ನಡೆದಿದ್ದ ಟೂರ್ನಿಯಲ್ಲಿ. ವಿರಾಟ್​ ಕೊಹ್ಲಿ ಸಾರಥ್ಯದ ಟೀಮ್​ ಇಂಡಿಯಾ 10 ವಿಕೆಟ್​ಗಳ ಹೀನಾಯ ಸೋಲು ಕಂಡಿತ್ತು.

ಒಟ್ಟಾರೆಯಾಗಿ ಉಭಯ ತಂಡಗಳು ಇದುವರೆಗೆ ಟಿ20 ಮಾದರಿಯಲ್ಲಿ 12 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ಭಾರತ ಗರಿಷ್ಠ 9 ಪಂದ್ಯಗಳಲ್ಲಿ ಗೆದ್ದು ಬೀಗಿದೆ. ಪಾಕಿಸ್ತಾನ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಈ ಲೆಕ್ಕಾಚಾರದಲ್ಲಿ ಭಾರತ ಬಲಿಷ್ಠವಾಗಿದ್ದರೂ ಕೂಡ ಪಾಕ್​ ಸವಾಲನ್ನು ಅಷ್ಟು ಹಗುರವಾಗಿ ಕಡೆಗಣಿಸುವಂತಿಲ್ಲ.

Continue Reading

ಪ್ರಮುಖ ಸುದ್ದಿ

Rahul Gandhi: ರಾಹುಲ್‌ ಗಾಂಧಿಯೇ ಪ್ರತಿಪಕ್ಷ ನಾಯಕ; ಕಾಂಗ್ರೆಸ್‌ ಮಹತ್ವದ ತೀರ್ಮಾನ

Rahul Gandhi: ರಾಹುಲ್‌ ಗಾಂಧಿ ಅವರು ಸಿಡಬ್ಲ್ಯೂಸಿ ನಿರ್ಣಯವನ್ನು ಅಂಗೀಕರಿಸಿದರೆ, ಅವರೇ ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕರಾಗಲಿದ್ದಾರೆ. ನರೇಂದ್ರ ಮೋದಿ ಅವರ ಮೂರನೇ ಅವಧಿಯ ಸರ್ಕಾರಕ್ಕೆ ಆ ಮೂಲಕ ರಾಹುಲ್‌ ಗಾಂಧಿ ಅವರು ಸೆಡ್ಡು ಹೊಡೆಯಲಿದ್ದಾರೆ.ನೀವೇ ಪ್ರತಿಪಕ್ಷ ನಾಯಕರಾಗಿ ಅಧಿಕಾರ ವಹಿಸಿಕೊಳ್ಳಿ ಎಂಬುದಾಗಿ ಕಾಂಗ್ರೆಸ್‌ ನಾಯಕರು ರಾಹುಲ್‌ ಗಾಂಧಿ ಅವರಿಗೆ ಮನವಿ ಮಾಡಲಿದ್ದಾರೆ ಎಂದು ಸಿಡಬ್ಲ್ಯೂಸಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.

VISTARANEWS.COM


on

Rahul Gandhi
Koo

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ (NDA) ಮೈತ್ರಿಕೂಟವು ಬಹುಮತ ಸಾಧಿಸಿದೆ. ನರೇಂದ್ರ ಮೋದಿ (Narendra Modi) ಅವರು ಭಾನುವಾರ (ಜೂನ್‌ 9) ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ದೆಹಲಿಯಲ್ಲಿ ಇದಕ್ಕಾಗಿ ಸಕಲ ಸಿದ್ಧತೆ ನಡೆಯುತ್ತಿವೆ. ಇದರ ಬೆನ್ನಲ್ಲೇ, ಲೋಕಸಭೆಯಲ್ಲಿ ನರೇಂದ್ರ ಮೋದಿ ಅವರಿಗೆ ಸೆಡ್ಡು ಹೊಡೆಯಲು ಕಾಂಗ್ರೆಸ್‌ ಸಜ್ಜಾಗಿದ್ದು, ಪ್ರತಿಪಕ್ಷ ನಾಯಕನನ್ನಾಗಿ ರಾಹುಲ್‌ ಗಾಂಧಿ (Rahul Gandhi) ಅವರನ್ನು ನೇಮಿಸಲು ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ (CWC) ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ.

“ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕನನ್ನಾಗಿ ರಾಹುಲ್‌ ಗಾಂಧಿ ಅವರನ್ನು ನೇಮಕ ಮಾಡುವ ದಿಸೆಯಲ್ಲಿ ಸಿಡಬ್ಲ್ಯೂಸಿಯು ಅವಿರೋಧವಾಗಿ ನಿರ್ಣಯ ತೆಗೆದುಕೊಂಡಿದೆ. ಸಂಸತ್‌ನಲ್ಲಿ ಪ್ರತಿಪಕ್ಷದ ನಾಯಕತ್ವ ವಹಿಸಲು ರಾಹುಲ್‌ ಗಾಂಧಿ ಅವರೇ ಸಮರ್ಥ ನಾಯಕರಾಗಿದ್ದಾರೆ. ನೀವೇ ಪ್ರತಿಪಕ್ಷ ನಾಯಕರಾಗಿ ಅಧಿಕಾರ ವಹಿಸಿಕೊಳ್ಳಿ ಎಂಬುದಾಗಿ ಕಾಂಗ್ರೆಸ್‌ ನಾಯಕರು ರಾಹುಲ್‌ ಗಾಂಧಿ ಅವರಿಗೆ ಮನವಿ ಮಾಡಲಿದ್ದಾರೆ” ಎಂಬುದಾಗಿ ಕಾಂಗ್ರೆಸ್‌ ನಾಯಕ ಕೆ.ಸಿ.ವೇಣುಗೋಪಾಲ್‌ ಅವರು ಮಾಹಿತಿ ನೀಡಿದ್ದಾರೆ.

ನಿರ್ಣಯದಲ್ಲಿ ಏನಿದೆ?

“ಎಐಸಿಸಿ ಮಾಜಿ ಅಧ್ಯಕ್ಷರಾದ ರಾಹುಲ್‌ ಗಾಂಧಿ ಅವರು ಭಾರತ್‌ ಜೋಡೋ ಯಾತ್ರೆ ಹಾಗೂ ಭಾರತ್ ಜೋಡೋ ನ್ಯಾಯ ಯಾತ್ರೆ ಮೂಲಕ ಹೊಸ ಅಲೆ ಸೃಷ್ಟಿಸಿದ್ದಾರೆ. ಎರಡೂ ಯಾತ್ರೆಗಳ ಮೂಲಕ ಜನರಲ್ಲಿ ಅವರು ಭರವಸೆ ಮೂಡಿಸಿದ್ದಾರೆ. ದೇಶದ ರಾಜಕೀಯ ನೋಟವನ್ನೇ ಬದಲಿಸಲು ರಾಹುಲ್‌ ಗಾಂಧಿ ಯಾತ್ರೆಗಳ ಪಾತ್ರ ನಿರ್ಣಾಯಕವಾಗಿದೆ. ಇದರಿಂದ ಕಾಂಗ್ರೆಸ್‌ನ ಲಕ್ಷಾಂತರ ಕಾರ್ಯಕರ್ತರು ಹಾಗೂ ಕೋಟ್ಯಂತರ ಮತದಾರರ ಮೇಲೆ ಸಕಾರಾತ್ಮಕ ಪರಿಣಾಮ ಬೀರಿದೆ” ಎಂಬುದಾಗಿ ಕಾಂಗ್ರೆಸ್‌ ನಿರ್ಣಯದಲ್ಲಿ ಉಲ್ಲೇಖಿಸಿದೆ.

ರಾಹುಲ್‌ ಗಾಂಧಿ ಅವರು ಸಿಡಬ್ಲ್ಯೂಸಿ ನಿರ್ಣಯವನ್ನು ಅಂಗೀಕರಿಸಿದರೆ, ಅವರೇ ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕರಾಗಲಿದ್ದಾರೆ. ನರೇಂದ್ರ ಮೋದಿ ಅವರ ಮೂರನೇ ಅವಧಿಯ ಸರ್ಕಾರಕ್ಕೆ ಆ ಮೂಲಕ ರಾಹುಲ್‌ ಗಾಂಧಿ ಅವರು ಸೆಡ್ಡು ಹೊಡೆಯಲಿದ್ದಾರೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ 99 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಇಂಡಿಯಾ ಒಕ್ಕೂಟವು ಒಟ್ಟು 234 ಕ್ಷೇತ್ರಗಳಲ್ಲಿ ಜಯಿಸಿದೆ. ಇದರಿಂದಾಗಿ ಬಲಿಷ್ಠ ಪ್ರತಿಪಕ್ಷವಾಗಿ ಇರಲು ಕಾಂಗ್ರೆಸ್‌ ತೀರ್ಮಾನಿಸಿದೆ.

ಇದನ್ನೂ ಓದಿ: Rahul Gandhi: ರಾಯ್‌ ಬರೇಲಿ V/S ವಯನಾಡ್‌-ರಾಹುಲ್‌ ಆಯ್ಕೆ ಯಾವುದು?

Continue Reading

ಪ್ರಮುಖ ಸುದ್ದಿ

NEET 2024: ನೀಟ್‌ ಅಕ್ರಮ; 1,500 ವಿದ್ಯಾರ್ಥಿಗಳ ಪತ್ರಿಕೆ ಮರು ಮೌಲ್ಯಮಾಪನಕ್ಕೆ ಸಮಿತಿ ರಚಿಸಿದ ಕೇಂದ್ರ!

NEET 2024: ದೇಶಾದ್ಯಂತ 571 ನಗರಗಳಲ್ಲಿ ಹಾಗೂ ಹೊರಗಿನ 14 ನಗರಗಳು ಸೇರಿದಂತೆ 4750 ವಿವಿಧ ಕೇಂದ್ರಗಳಲ್ಲಿ 05 ಮೇ 2024 ರಂದು ನೀಟ್‌ ಯುಜಿ ಪರೀಕ್ಷೆಯನ್ನು ನಡೆಸಲಾಗಿತ್ತು. ಪರೀಕ್ಷೆಯನ್ನು 13 ಭಾಷೆಗಳಲ್ಲಿ (ಅಸ್ಸಾಮಿ, ಬಂಗಾಳಿ, ಇಂಗ್ಲಿಷ್, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು, ಮತ್ತು ಉರ್ದು) ನಡೆಸಲಾಗಿತ್ತು. ನೀಟ್‌ ಪರೀಕ್ಷೆಗೆ 24,06,079 ಅಭ್ಯರ್ಥಿಗಳ ನೋಂದಾಯಿಸಿಕೊಂಡಿದ್ದರು. ಜೂನ್‌ 4ರಂದು ಪರೀಕ್ಷೆಯ ಫಲಿತಾಂಶ ಪ್ರಕಟವಾಗಿತ್ತು. ಇದಾದ ಬಳಿಕ ಅಕ್ರಮದ ಆರೋಪ ಕೇಳಿಬಂದಿತ್ತು.

VISTARANEWS.COM


on

NEET 2024
Koo

ನವದೆಹಲಿ: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET 2024) ಫಲಿತಾಂಶ ಪ್ರಕಟವಾಗಿದ್ದು, ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳು ಕೇಳಿಬಂದಿವೆ. ಇದರ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು (Central Government) ಗ್ರೇಸ್‌ ಮಾರ್ಕ್ಸ್‌ (NEET Grace Marks) ಪಡೆದ 1,500 ವಿದ್ಯಾರ್ಥಿಗಳ ಫಲಿತಾಂಶವನ್ನು ಮರು ಮೌಲ್ಯಮಾಪನ ಮಾಡಲು ಸಮಿತಿಯೊಂದನ್ನು ರಚಿಸಿದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಶನಿವಾರ ಮಾಹಿತಿ ನೀಡಿದೆ.

“ನೀಟ್‌ ಬರೆದ ಅಭ್ಯರ್ಥಿಗಳಿಗೆ ರ‍್ಯಾಂಕ್‌ ನೀಡುವ ಮಾನದಂಡಕ್ಕೆ ಗ್ರೇಸ್‌ ಮಾರ್ಕ್ಸ್‌ ನೀಡಿರುವುದರಿಂದ ಯಾವುದೇ ಪರಿಣಾಮ ಉಂಟಾಗಿಲ್ಲ. ಆದರೂ, ಗ್ರೇಸ್‌ ಮಾರ್ಕ್ಸ್‌ ಪಡೆದವರ ಉತ್ತರ ಪತ್ರಿಕೆಗಳನ್ನು ಮತ್ತೆ ಮೌಲ್ಯಮಾಪನ ಮಾಡಲಾಗುತ್ತದೆ. ಕೇಂದ್ರ ಶಿಕ್ಷಣ ಸಚಿವಾಲಯವು ಈ ಕುರಿತು ಸಮಿತಿಯೊಂದನ್ನು ರಚಿಸಿದೆ. ಮರು ಮೌಲ್ಯಮಾಪನದಿಂದ ವಿದ್ಯಾರ್ಥಿಗಳು ಕೋರ್ಸ್‌ಗಳಿಗೆ ಪ್ರವೇಶಾತಿ ಪಡೆಯಲು ಯಾವುದೇ ಪರಿಣಾಮ ಉಂಟಾಗುವುದಿಲ್ಲ” ಎಂಬುದಾಗಿ ಎನ್‌ಟಿಎ ಮಹಾ ನಿರ್ದೇಶಕ ಸುಬೋಧ್‌ ಸಿಂಗ್‌ ಮಾಹಿತಿ ನೀಡಿದ್ದಾರೆ. ಹಾಗೆಯೇ, ಪರೀಕ್ಷೆಯಲ್ಲಿ ಅಕ್ರಮ ನಡೆದಿಲ್ಲ, ಪ್ರಶ್ನೆಪತ್ರಿಕೆಗಳ ಸೋರಿಕೆಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಏನಿದು ಪ್ರಕರಣ?

ನೀಟ್‌ ಪರೀಕ್ಷೆಯಲ್ಲಿ ರ‍್ಯಾಂಕ್‌ ಪಡೆದ 67 ವಿದ್ಯಾರ್ಥಿಗಳಲ್ಲಿ 44 ವಿದ್ಯಾರ್ಥಿಗಳು ಗ್ರೇಸ್‌ ಮಾರ್ಕ್ಸ್‌ ಆಧಾರದ ಮೇಲೆ ಟಾಪರ್‌ಗಳಾಗಿದ್ದಾರೆ. ಇನ್ನು, ಹರಿಯಾಣದಲ್ಲಿ ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ಆರು ವಿದ್ಯಾರ್ಥಿಗಳು ಜಂಟಿಯಾಗಿ ಟಾಪ್‌ ಸ್ಥಾನ ಪಡೆದಿದ್ದಾರೆ. ಇದರಿಂದಾಗಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ, ಪ್ರಶ್ನೆಪತ್ರಿಕೆ ಸೋರಿಕೆ ಮಾಡಲಾಗಿದೆ ಎಂಬುದಾಗಿ ಕೆಲವು ಪೋಷಕರು ಆರೋಪ ಮಾಡಿದ್ದಾರೆ. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ನೀಟ್‌ ಅಕ್ರಮದ ಕುರಿತು ತನಿಖೆಗೆ ಆಗ್ರಹಿಸಿದ್ದರು.

ದೇಶಾದ್ಯಂತ 571 ನಗರಗಳಲ್ಲಿ ಹಾಗೂ ಹೊರಗಿನ 14 ನಗರಗಳು ಸೇರಿದಂತೆ 4750 ವಿವಿಧ ಕೇಂದ್ರಗಳಲ್ಲಿ 05 ಮೇ 2024 ರಂದು ನೀಟ್‌ ಯುಜಿ ಪರೀಕ್ಷೆಯನ್ನು ನಡೆಸಲಾಗಿತ್ತು. ಪರೀಕ್ಷೆಯನ್ನು 13 ಭಾಷೆಗಳಲ್ಲಿ (ಅಸ್ಸಾಮಿ, ಬಂಗಾಳಿ, ಇಂಗ್ಲಿಷ್, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು, ಮತ್ತು ಉರ್ದು) ನಡೆಸಲಾಗಿತ್ತು. ನೀಟ್‌ ಪರೀಕ್ಷೆಗೆ 24,06,079 ಅಭ್ಯರ್ಥಿಗಳ ನೋಂದಾಯಿಸಿಕೊಂಡಿದ್ದರು. ಅದರಲ್ಲಿ 23,33,297 ಪರೀಕ್ಷೆ ಹಾಜರಾಗಿದ್ದು, 72782 ಗೈರು ಹಾಜರಾಗಿದ್ದರು. ಇದರಲ್ಲಿ ಬಾಲಕರು 10,29,154 ಹಾಗೂ ಬಾಲಕಿಯರು 13,76,831, ತೃತೀಯ ಲಿಂಗಿಗಳು 18 ಮಂದಿ ಪರೀಕ್ಷೆಯನ್ನು ಬರೆದಿದ್ದರು.

ಇದನ್ನೂ ಓದಿ: NEET UG 2024: ನೀಟ್‌ನಲ್ಲಿ ಹೆಚ್ಚು ಅಂಕ ಗಳಿಸಲು ಏನು ಮಾಡಬೇಕು? ಈ ಟಾಪರ್‌ ಹೇಳೋದು ಕೇಳಿ

Continue Reading
Advertisement
Rohit Sharma Injury
ಕ್ರೀಡೆ8 mins ago

Rohit Sharma Injury: ಪಾಕ್​ ಪಂದ್ಯಕ್ಕೂ ಮುನ್ನ ಭಾರತಕ್ಕೆ ಆತಂಕ; ಅಭ್ಯಾಸದ ವೇಳೆ ರೋಹಿತ್​ಗೆ ಗಾಯ

Niveditha Gowda Demand For Divorce Alimony
ಸ್ಯಾಂಡಲ್ ವುಡ್16 mins ago

Niveditha Gowda: ಜೀವನಾಂಶಕ್ಕೆ ಬೇಡಿಕೆ ಇಟ್ಟಿದ್ರಾ ನಿವೇದಿತಾ ಗೌಡ?

Kangana Ranaut
ದೇಶ23 mins ago

Kangana Ranaut: ಕಾರಣ ಇದ್ದರೆ ಕೊಲೆ, ಅತ್ಯಾಚಾರ ಮಾಡಬಹುದೆ? ; ವಿರೋಧಿಗಳ ವಿರುದ್ಧ ಗುಡುಗಿದ ಕಂಗನಾ

Bengaluru murder
ಬೆಂಗಳೂರು33 mins ago

Bengaluru Murder : ನಾಪತ್ತೆಯಾದವನು ಅಕ್ರಮ ಸಂಬಂಧಕ್ಕೆ ಬಲಿ; ಶವವನ್ನು ತುಂಡು ತುಂಡಾಗಿ ಕತ್ತರಿಸಿ ಮೋರಿಗೆ ಬಿಸಾಡಿದ ಹಂತಕ!

Prajwal Revanna Case
ಕರ್ನಾಟಕ43 mins ago

Prajwal Revanna Case: ಪೆನ್ ಡ್ರೈವ್ ಹಂಚಿಕೆ ಪ್ರಕರಣದ ಆರೋಪಿ ಕಾರ್ತಿಕ್ ಗೌಡ ಬಂಧನ

IND vs PAK
ಕ್ರೀಡೆ46 mins ago

IND vs PAK: ಪಾಕ್​ ವಿರುದ್ಧ ಈ ಬಾರಿಯೂ ಮರುಕಳಿಸಲಿ ಕೊಹ್ಲಿಯ ಬ್ಯಾಟಿಂಗ್​ ಗತವೈಭವ

Rahul Gandhi
ಪ್ರಮುಖ ಸುದ್ದಿ52 mins ago

Rahul Gandhi: ರಾಹುಲ್‌ ಗಾಂಧಿಯೇ ಪ್ರತಿಪಕ್ಷ ನಾಯಕ; ಕಾಂಗ್ರೆಸ್‌ ಮಹತ್ವದ ತೀರ್ಮಾನ

Narendra Modi
ದೇಶ1 hour ago

Elon Musk: ಹ್ಯಾಟ್ರಿಕ್‌ ಸರದಾರ ನರೇಂದ್ರ ಮೋದಿಗೆ ಎಲಾನ್‌ ಮಸ್ಕ್ ಅಭಿನಂದನೆ

Nikhil Kumaraswamy will stay on Kannada Film industry
ಸ್ಯಾಂಡಲ್ ವುಡ್1 hour ago

Nikhil Kumaraswamy: ಚಿತ್ರರಂಗದಿಂದ ಸ್ವಲ್ಪ ವಿರಾಮ ತೆಗೆದುಕೊಂಡಿದ್ದೇನೆ ಅಷ್ಟೇ ಎಂದ ನಿಖಿಲ್ ಕುಮಾರಸ್ವಾಮಿ

Nitish Kumar
Lok Sabha Election 20241 hour ago

Nitish Kumar: ಇಂಡಿ ಒಕ್ಕೂಟದ ಸಂಚಾಲಕ ಹುದ್ದೆ ನೀಡಲು ನಿರಾಕರಿಸಿದ್ದ ನಿತೀಶ್ ಕುಮಾರ್‌ಗೆ ಈಗ ಪ್ರಧಾನಿಯ ಆಫರ್!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ22 hours ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ23 hours ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ4 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ5 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ5 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌