ಜನಸಂಖ್ಯಾ ವಿವಾದ: ಪ್ರಾಣಿ, ಮನುಷ್ಯರ ನಡುವಿನ ವ್ಯತ್ಯಾಸ ತಿಳಿಸಿದ ಮೋಹನ್‌ ಭಾಗವತ್‌ - Vistara News

ದೇಶ

ಜನಸಂಖ್ಯಾ ವಿವಾದ: ಪ್ರಾಣಿ, ಮನುಷ್ಯರ ನಡುವಿನ ವ್ಯತ್ಯಾಸ ತಿಳಿಸಿದ ಮೋಹನ್‌ ಭಾಗವತ್‌

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ಜನಸಂಖ್ಯಾ ನಿಯಂತ್ರಣದ ಬಗ್ಗೆ ನೇರವಾಗಿ ಏನನ್ನೂ ಹೇಳದೆ ಇದ್ದರೂ, ಕಾಡಿನ ಕಾನೂನು ಮತ್ತು ನಾಡಿನ ನಿಯಮಗಳ ನಡುವಿನ ವ್ಯತ್ಯಾಸ ತಿಳಿಸಿದರು.

VISTARANEWS.COM


on

India is not authoritative nation like America, Russia and China, Says RSS
ಮೋಹನ್‌ ಭಾಗವತ್‌
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ನವ ದೆಹಲಿ: ಸದ್ಯ ವಿಶ್ವದಲ್ಲಿ ಜನಸಂಖ್ಯೆಯಲ್ಲಿ ಚೀನಾ ಮೊದಲ ಸ್ಥಾನದಲ್ಲಿದ್ದರೆ, ಭಾರತ ಎರಡನೇ ಸ್ಥಾನದಲ್ಲಿದೆ. ಆದರೆ 2023ರ ಹೊತ್ತಿಗೆ ಚೀನಾವನ್ನು ಭಾರತ ಹಿಂದಿಕ್ಕಲಿದೆ ಎಂದು ವಿಶ್ವಸಂಸ್ಥೆ ಇತ್ತೀಚೆಗೆ ವರದಿ ನೀಡಿದೆ. ಅದರ ಬೆನ್ನಲ್ಲೇ ವಿಶ್ವ ಜನಸಂಖ್ಯಾ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದ್ದ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಮಾತನಾಡಿ, “ಜನಸಂಖ್ಯೆ ನಿಯಂತ್ರಣಕ್ಕಾಗಿ ಇರುವ ಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಅದರ ಜತೆಗೆ ಜನಸಂಖ್ಯೆ ಅಸಮತೋಲನ ಆಗದಂತೆಯೂ ನೋಡಿಕೊಳ್ಳಬೇಕು. ಸಮಾಜದಲ್ಲಿ ಯಾವುದೇ ಒಂದು ವರ್ಗದ ಜನರ ಸಂಖ್ಯೆ ಹೆಚ್ಚಾಗಬಾರದು. ಜಾತಿ, ಧರ್ಮ, ಪ್ರದೇಶ, ಭಾಷೆಯನ್ನೂ ಮೀರಿ ಜನಸಂಖ್ಯೆ ಬೆಳೆಯುತ್ತಿದೆ. ಇದನ್ನು ಒಟ್ಟಾರೆಯಾಗಿ ಸ್ಥಿರಗೊಳಿಸಲು ನಾವೆಲ್ಲ ಒಟ್ಟಾಗಿ ಕೆಲಸ ಮಾಡಬೇಕು ಎಂದು ಹೇಳಿದ್ದರು.

ಯೋಗಿ ಆದಿತ್ಯನಾಥ್‌ ಅವರ ಹೇಳಿಕೆಯನ್ನು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್‌ ಓವೈಸಿ, ಬಹುಜನ ಸಮಾಜ ಪಾರ್ಟಿ ಮಾಯಾವತಿ ಮತ್ತಿತರರು ಖಂಡಿಸಿದ್ದರು. ಅದರ ಬೆನ್ನಲ್ಲೇ ಈಗ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ಯೋಗಿ ಆದಿತ್ಯನಾಥ್‌ ಮಾತುಗಳನ್ನು ಬೆಂಬಲಿಸಿದ್ದಾರೆ. ಹ್ಯೂಮನ್‌ ಎಕ್ಸಲೆನ್ಸ್‌ನ ಶ್ರೀ ಸತ್ಯ ಸಾಯಿ ಯೂನಿರ್ವಸಿಟಿಯ ಮೊದಲ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, ನೇರವಾಗಿ ಜನಸಂಖ್ಯಾ ನಿಯಂತ್ರಣದ ಬಗ್ಗೆ ಏನೂ ಹೇಳದೆ ಇದ್ದರೂ, ಪ್ರಾಣಿಗಳಿಗೂ -ಮನುಷ್ಯರಿಗೂ ಇರುವ ವ್ಯತ್ಯಾಸವನ್ನು ತಿಳಿಸುವ ಮೂಲಕ, ತಮ್ಮ ಬೆಂಬಲ ಜನಸಂಖ್ಯೆ ನಿಯಂತ್ರಣಕ್ಕೆ ಎಂದು ಹೇಳಿದ್ದಾರೆ.

“ಈ ಭೂಮಿ ಮೇಲೆ ಪ್ರಾಣಿಗಳೂ ಜೀವಿಸಿವೆ. ಮನುಷ್ಯರೂ ಇದ್ದಾರೆ. ಬುದ್ಧಿಯೊಂದು ಇಲ್ಲದೆ ಇದ್ದಿದ್ದರೆ ಮನುಷ್ಯ ಈ ಭೂಮಿ ಮೇಲಿನ ಅತ್ಯಂತ ದುರ್ಬಲ ಜೀವಿ ಎನ್ನಿಸಿಕೊಳ್ಳುತ್ತಿದ್ದ. ಅರಿವಿನ ಸಾಮರ್ಥ್ಯವೆಂಬುದು ಅವನನ್ನು ಉತ್ತಮನನ್ನಾಗಿ ಮಾಡಿದೆ. ಪ್ರಾಣಿಗಳು ತಿನ್ನುತ್ತವೆ. ಕುಡಿಯುತ್ತವೆ, ತಮ್ಮ ತಳಿಯ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುತ್ತವೆ. ಯಾರು ಬಲಿಷ್ಠರೋ ಅವರು ಅಪಾಯಗಳಿಂದ ಪಾರಾಗುತ್ತಾರೆ- ಉಳಿಯುತ್ತಾರೆ ಎಂಬುದು ಕಾಡಿನ ಕಾನೂನು. ಆದರೆ ನಾಡಿನಲ್ಲಿ ಈ ನಿಯಮ ಇರಬಾರದು. ಬುದ್ಧಿಯಿರುವ, ಅರಿವಿರುವ ಮನುಷ್ಯರು ಬದುಕುವ ಕ್ರಮ ಹೀಗಿರಬಾರದು. ಬಲಿಷ್ಠರು ದುರ್ಬಲರಿಗೆ ಜೀವಿಸಲು ಸಹಾಯ ಮಾಡಬೇಕು. ಸಮರ್ಥರು ಅಶಕ್ತರನ್ನು ಜತೆಗೇ ಕರೆದುಕೊಂಡು ಹೋಗಬೇಕು. ಒಟ್ಟಾರೆ ಈ ಜಗತ್ತಿನ ಉಳಿವಿಗೆ ಮನುಷ್ಯರು ತಮ್ಮ ಸ್ವ ಕಸುವನ್ನು ಬಳಸಬೇಕು. ಇದು ಮಾನವ ಶ್ರೇಷ್ಠತೆ ಎನ್ನಿಸಿಕೊಳ್ಳುತ್ತದೆʼ ಎಂದು ಮೋಹನ್‌ ಭಾಗವತ್‌ ಹೇಳಿದ್ದಾರೆ.

ಇದನ್ನೂ ಓದಿ: ವಿಸ್ತಾರ Fact Check: ಮೋಹನ್‌ ಭಾಗವತ್‌ ಜತೆ ದ್ರೌಪದಿ ಮುರ್ಮು?; ಫೋಟೊ ಹಿಂದಿನ ಸತ್ಯವೇನು?

ಅಂದರೆ, ಮನುಷ್ಯರ ಜೀವನವೂ ಕೇವಲ ತಿನ್ನು-ಉಣ್ಣು, ಜನಸಂಖ್ಯೆ ಜಾಸ್ತಿ ಮಾಡುವುದರಲ್ಲೇ ಕಳೆದುಹೋಗಬಾರದು. ಅದರಾಚೆಗೆ ತಮ್ಮ ಬದುಕಿನ ಅರ್ಥವೇನು? ಹೇಗಿರಬೇಕು ಎಂಬುದನ್ನೆಲ್ಲ ಅರಿತು ಅದರಂತೆ ಜೀವಿಸಬೇಕು ಎಂದಿದ್ದಾರೆ. ಬಹುಸಂಖ್ಯಾತ- ಅಲ್ಪಸಂಖ್ಯಾತ ಪರಿಕಲ್ಪನೆಯ ಸೂಕ್ಷ್ಮತೆಗಳನ್ನು ತಮ್ಮ ಈ ಮಾತುಗಳಲ್ಲಿ ತಿಳಿಸಿದ್ದಾರೆ. ಯಾವುದೇ ಸಮುದಾಯಕ್ಕೆ ತಾವು ಬಹುಸಂಖ್ಯಾತರಾಗಬೇಕು ಎಂಬುದೇ ಧ್ಯೇಯವಾಗಬಾರದು. ಬಹುಸಂಖ್ಯಾತರಿದ್ದೇವೆ ಎಂಬ ಮಾತ್ರಕ್ಕೆ ಅಲ್ಪ ಸಂಖ್ಯಾತರಿಗೆ ಜೀವಿಸಲು ತೊಂದರೆ ಕೊಡಬಾರದು ಎಂದು ಮೋಹನ್‌ ಭಾಗವತ್‌ ಹೀಗೆ ಪ್ರಾಣಿ-ಮನುಷ್ಯನ ಉದಾಹರಣೆಯೊಂದಿಗೆ ವಿವರಿಸಿದ್ದಾರೆ ಎಂದು ಅವರ ಮಾತುಗಳನ್ನು ವಿಶ್ಲೇಷಿಸಲಾಗುತ್ತಿದೆ.

ಇದನ್ನೂ ಓದಿ: ರಾಜಕೀಯದಿಂದ ಆರ್‌ಎಸ್‌ಎಸ್‌ ದೂರ, ಸಂಘಕ್ಕೆ ರಾಜಕೀಯ ಹೊಂದುವುದಿಲ್ಲ: ಡಾ. ಮೋಹನ್‌ ಭಾಗವತ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ

VISTARANEWS.COM


on

ದೇಶದ ಜನತೆಯ ಗಮನ ಸೆಳೆದಿರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ನಾಳೆ (ಮೇ.4) ಹೊರಬೀಳಲಿದೆ. ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ ಹಾಗೂ ಪುದುಚೇರಿ ವಿಧಾನಸಭಾ ಕ್ಷೇತ್ರಗಳ ಮತಎಣಿಕೆ ನಾಳೆ (ಮೇ.4) ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಲಿದ್ದು, ಬಹುತೇಕ ಮಧ್ಯಾಹ್ನ 2 ಗಂಟೆಯೊಳಗೆ ಸ್ಪಷ್ಟ ಚಿತ್ರಣ ಹೊರಬೀಳುವ ಸಾಧ್ಯತೆ ಇದೆ.

ಯಾರಿಗೆ ಪಶ್ಚಿಮ ಬಂಗಾಳ?
ಪಶ್ಚಿಮ ಬಂಗಾಳದಲ್ಲಿ ಈ ಬಾರಿ ತೃಣಮೂಲ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ನಡೆದಿದ್ದು, ಯಾರಿಗೆ ವಿಜಯಲಕ್ಷ್ಮಿ ಒಲಿಯಲಿದ್ದಾಳೆ ಎಂಬುದು ನಾಳೆ ಮತಎಣಿಕೆಯ ನಂತರ ಗೊತ್ತಾಗಲಿದೆ. ರಾಜ್ಯದಲ್ಲಿ ನಾಲ್ಕನೇ ಬಾರಿ ಅಧಿಕಾರ ಹಿಡಿಯಲು ಮುಂದಾಗಿರುವ ಟಿಎಂಸಿಗೆ ಈ ಚುನಾವಣೆ “ಮಾಡು ಇಲ್ಲವೇ ಮಡಿ” ಎಂಬಂತಾಗಿದೆ. ಪಶ್ಚಿಮ ಬಂಗಾಳದಲ್ಲಿ ಕಮಲ ಅರಳಿಸಲೇಬೇಕೆಂದು ಪಣತೊಟ್ಟಿದ್ದ ಬಿಜೆಪಿ ನಾಯಕರು ಈ ಚುನಾವಣೆಯನ್ನು ಪ್ರತಿಷ್ಠೆಯನ್ನಾಗಿ ತೆಗೆದುಕೊಂಡಿದ್ದರು. ಈ ಬಾರಿ ಪಶ್ಚಿಮ ಬಂಗಾಳದ ಇತಿಹಾಸದಲ್ಲೇ ಮೊದಲ ಬಾರಿಗೆ ದಾಖಲೆಯ ಮತದಾನ ನಡೆದಿರುವುದು ಫಲಿತಾಂಶದ ಪರಿಣಾಮ ಬೀರಿರುವ ಸಾಧ್ಯತೆಯಿದೆ. ಪಶ್ಚಿಮ ಬಂಗಾಳದಲ್ಲಿ ಒಟ್ಟು 294 ವಿಧಾನಸಭಾ ಕ್ಷೇತ್ರಗಳಿದ್ದು, ಸರ್ಕಾರ ರಚನೆಗೆ ಯಾವುದೇ ಪಕ್ಷ 148 ಸ್ಥಾನಗಳನ್ನು ಪಡೆಯಬೇಕು. ಬಹುತೇಕ ಮತದಾನೋತ್ತರ ಸಮೀಕ್ಷೆಗಳು ಈ ಬಾರಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸ್ಪಷ್ಟ ಜನಾದೇಶ ಪಡೆದು ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿವೆ.

ದ್ರಾವಿಡ ಕೋಟೆಯ ಅಧಿಪತಿ ಯಾರು..?
ತಮಿಳುನಾಡು ವಿಧಾನಸಭೆಗೆ ನಡೆದ ಚುನಾವಣೆ ದೇಶಾದ್ಯಂತ ಭಾರಿ ಕುತೂಹಲವನ್ನೇ ಮೂಡಿಸಿದೆ. ಇದುವರೆಗೆ ಡಿಎಂಕೆ ಮತ್ತು ಎಐಎಡಿಎಂಕೆ ನಡುವೆ ನೇರ ಸ್ಪರ್ಧೆ ಇರುತ್ತಿತ್ತು. ಈ ಬಾರಿ ಚಿತ್ರನಟ ವಿಜಯ್‌ ಅವರ ಟಿವಿಕೆ ಪಕ್ಷ ಕಣದಲ್ಲಿದ್ದು, ಯಾರಿಗೆ ದ್ರಾವಿಡ ಕೋಟೆ ಒಲಿಯಲಿದೆ ಎನ್ನುವ ಪ್ರಶ್ನೆಗೆ ನಾಳೆಯ ಫಲಿತಾಂಶದ ಮೂಲಕ ಉತ್ತರ ಸಿಗಲಿದೆ. ಕೆಲವು ಮತದಾನೋತ್ತರ ಸಮೀಕ್ಷೆಗಳು ಆಡಳಿತಾರೂಢ ಡಿಎಂಕೆ ಪುನಃ ಅಧಿಕಾರಕ್ಕೆ ಬರುವ ಸಾಧ್ಯತೆ ಇದೆ ಎಂದು ಹೇಳಿವೆ. ಇದರ ನಡುವೆ ಆಶ್ಚರ್ಯ ಎಂಬಂತೆ ಕೆಲವು ಸಮೀಕ್ಷೆಗಳು ವಿಜಯ್‌ ನೇತೃತ್ವದ ಟಿವಿಕೆ ಬಹುಮತ ಪಡೆಯಲಿದೆ ಎಂದಿವೆ. ವಿಜಯ್‌ ಕಿಂಗ್‌ಮೇಕರ್‌ ಆಗುವ ಸಾಧ್ಯತೆಯ ಬಗ್ಗೆಯೂ ಕೆಲ ಸಮೀಕ್ಷೆಗಳು ಸುಳಿವು ನೀಡಿವೆ. ತಮಿಳುನಾಡಿನಲ್ಲಿ ಒಟ್ಟು 234 ವಿಧಾನಸಭಾ ಕ್ಷೇತ್ರಗಳಿದ್ದು, ಬಹುಮತ ಪಡೆಯಲು 148 ಸ್ಥಾನಗಳ ಅಗತ್ಯವಿದೆ.

ಕೇರಳದಲ್ಲಿ ಜಯ ಯಾರಿಗೆ?
ದೇವರ ನಾಡು ಎಂದೇ ಕರೆಯಲ್ಪಡುವ ಕೇರಳದಲ್ಲಿ ಈ ಬಾರಿ ಅಧಿಕಾರ ಯಾರ ಪಾಲಾಗಲಿದೆ ಎಂಬ ಕುತೂಹಲಕ್ಕೆ ನಾಳೆ ತೆರೆಬೀಳಲಿದೆ. ಸತತ ಮೂರನೇ ಬಾರಿಗೆ ಅಧಿಕಾರಕ್ಕೇರಲು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ನೇತೃತ್ವದ ಎಲ್‌ಡಿಎಫ್‌ ಪ್ರಯತ್ನ ನಡೆಸಿದ್ರೆ, ಕಾಂಗ್ರೆಸ್ ನೇತೃತ್ವದ ಯುಡಿಎಫ್ ಸಹ ಈ ಬಾರಿಯ ಚುನಾವಣೆಯಲ್ಲಿ ತೀವ್ರ ಸ್ಪರ್ಧೆ ನೀಡಿದೆ. ಮತದಾನೋತ್ತರ ಸಮೀಕ್ಷೆಗಳ ಪ್ರಕಾರ ಯುಡಿಎಫ್‌ ಜಯಭೇರಿ ಸಾಧಿಸುವ ಸಾಧ್ಯತೆ ಕಂಡುಬಂದಿದೆ. ಕೇರಳದಲ್ಲಿ ಒಟ್ಟು 140 ಸ್ಥಾನಗಳಿದ್ದು, ಸರಳ ಬಹುಮತಕ್ಕೆ 71 ಸ್ಥಾನಗಳ ಅಗತ್ಯವಿದೆ.

ಹ್ಯಾಟ್ರಿಕ್ ಗೆಲುವು ಸಾಧಿಸುತ್ತಾ ಬಿಜೆಪಿ?
ಈಶಾನ್ಯ ರಾಜ್ಯ ಅಸ್ಸಾಂನಲ್ಲಿ ಮತ್ತೊಮ್ಮೆ ಬಿಜೆಪಿ ನೇತೃತ್ವದ ಎನ್‌ಡಿಎ ಅಧಿಕಾರಕ್ಕೆ ಬರುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ಮತದಾನೋತ್ತರ ಸಮೀಕ್ಷೆಗಳು ತಿಳಿಸಿವೆ. ಅಸ್ಸಾಂನ 126 ವಿಧಾನಸಭಾ ಕ್ಷೇತ್ರಗಳ ಪೈಕಿ ಸರಳ ಬಹುಮತಕ್ಕೆ 64 ಸ್ಥಾನಗಳು ಬೇಕು. ಸತತ ಎರಡು ಬಾರಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಈ ಬಾರಿ ಗೆಲುವು ಸಾಧಿಸಿದರೆ ಹ್ಯಾಟ್ರಿಕ್ ಗೆಲುವಿನ ಸಾಧನೆ ಮಾಡಲಿದೆ.

ಪುದುಚೇರಿ ಯಾರಿಗೆ?
ಪುದುಚೇರಿ ವಿಧಾನಸಭೆ ಚುನಾವಣಾ ಮತದಾನೋತ್ತರ ಸಮೀಕ್ಷೆಗಳ ಪ್ರಕಾರ ಪುನಃ ಬಿಜೆಪಿ ನೇತೃತ್ವದ ಎನ್‌ಡಿಎ ಅಧಿಕಾರಕ್ಕೆ ಬರಬಹುದೆಂದು ಅಂದಾಜಿಸಲಾಗಿದೆ. ರಾಜ್ಯದ ಒಟ್ಟು 30 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ನೇತೃತ್ವದ ಎನ್‌ಡಿಎ 15ರಿಂದ 20 ಸ್ಥಾನಗಳನ್ನು ಪಡೆದು ಎರಡನೇ ಬಾರಿಗೆ ಅಧಿಕಾರ ಗದ್ದುಗೆ ಹಿಡಿಯಬಹುದೆಂದು ಹೇಳಲಾಗುತ್ತಿದೆ.

Continue Reading

Latest

ಜನಪ್ರಿಯತೆಯಲ್ಲಿ ಪ್ರಧಾನಿ ಮೋದಿ ಈಗಲೂ ನಂ.1

VISTARANEWS.COM


on

ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿ ಪ್ರಚಂಡ ಜಯಭೇರಿ ಸಾಧ್ಯತೆ, ಪಶ್ಚಿಮ ಬಂಗಾಳದಲ್ಲಿ ದೀದಿಗೆ ಸಮಬಲದ ಟಕ್ಕರ್‌, ತಮಿಳುನಾಡು-ಕೇರಳಂನಲ್ಲಿ ವೋಟ್‌ ಶೇರ್‌ ಹೆಚ್ಚಳ – ಪಂಚ ರಾಜ್ಯಗಳ ಎಕ್ಸಿಟ್‌ ಪೋಲ್‌ನಲ್ಲಿ ಬಿಜೆಪಿ ಕುರಿತ ಈ ಸಮೀಕ್ಷೆ ನಿಜವಾದರೆ ಅದು ಮತ್ತೊಮ್ಮೆ ಮೋದಿ ಮ್ಯಾಜಿಕ್‌ ಎಂದೇ ಹೇಳಬಹುದು.
ಪಂಚ ರಾಜ್ಯಗಳ ಚುನಾವಣಾ ಸನ್ನಿವೇಶವೇ ಮೋದಿ ನೇತೃತ್ವದ ಬಿಜೆಪಿಗೆ ಒಂದು ಸವಾಲಾಗಿತ್ತು. ಮಧ್ಯಪ್ರಾಚ್ಯ ಯುದ್ಧದ ಪರಿಣಾಮಗಳು ಪ್ರಧಾನಿ ಮೋದಿಯವರಿಗೆ ಅತಿದೊಡ್ಡ ಸವಾಲು ಸೃಷ್ಟಿಸಿತ್ತು. ಏಕಾಏಕಿ ಎಲ್‌ಪಿಜಿ ಪೂರೈಕೆಯಲ್ಲಿ ವ್ಯತ್ಯಯ, ಹೊಟೇಲು-ಇತರ ಉದ್ಯಮಗಳಿಗೆ ಕಮರ್ಶಿಯಲ್‌ ಗ್ಯಾಸ್‌ ಪೂರೈಕೆ ಬುಡಮೇಲು, ಬೆಲೆ ಏರಿಕೆ, ರೂಪಾಯಿ ಮೌಲ್ಯ ಕುಸಿತ. ಇವೆಲ್ಲಾ ಚುನಾವಣೆಯ ಮುಖ್ಯ ವಿಷಯಗಳಾಗಿದ್ದವು. ಹರಿಯಾಣ, ಮಹಾರಾಷ್ಟ್ರ, ದೆಹಲಿ, ಬಿಹಾರ ಗೆಲುವಿನ ನಂತರ ಅಸ್ಸಾಂ, ಪುದುಚೇರಿ, ಮುಖ್ಯವಾಗಿ ಪಶ್ಚಿಮ ಬಂಗಾಳವನ್ನು ಗೆಲ್ಲಲ್ಲೇ ಬೇಕಾದ ಹಠಕ್ಕೆ ಬಿಜೆಪಿ ಬಿದ್ದಿತ್ತು. ಈ ಗೆಲುವಿಗೆ ಬಿಜೆಪಿ ಅವಲಂಬಿಸಿದ್ದು ಪ್ರಧಾನಿ ಮೋದಿಯವರ ಜನಪ್ರಿಯತೆಯನ್ನು. ಸಂಕಷ್ಟದ ಕಾಲದಲ್ಲಿ ಮೋದಿ ಸರ್ಕಾರ ನಿರ್ವಹಿಸಿದ ರೀತಿ ಜನ ಮೆಚ್ಚುಗೆಗೆ ಪಾತ್ರವಾಗಿತ್ತು. ಗೃಹ ಬಳಕೆ ಗ್ಯಾಸ್‌ ಪೂರೈಕೆ ವ್ಯತ್ಯಯವಾಗಲು ಮೋದಿ ಸರ್ಕಾರ ಬಿಡಲಿಲ್ಲ. ಬಹುತೇಕ ದೇಶಗಳು ಪೆಟ್ರೋಲ್‌, ಡೀಸೆಲ್‌ ಬೆಲೆ ಶೇಕಡಾ 20ರಿಂದ 30 ರಷ್ಟು ಏರಿಕೆ ಮಾಡಿದರೂ, ಮೋದಿ ಸರ್ಕಾರ ಸಾಧಾರಣ ಪೆಟ್ರೋಲ್‌ ಡೀಸೆಲ್‌ ಬೆಲೆ ಏರಿಸಲಿಲ್ಲ. ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ನೇರ ಜನರ ಮೇಲೆ ಬೀಳಲು ಮೋದಿ ಸರ್ಕಾರ ಬಿಡಲಿಲ್ಲ.
ಪ.ಬಂಗಾಳ ಗೆದ್ದರೆ ಅತಿ ದೊಡ್ಡ ಸಾಧನೆ:
ದೀದಿ ನಾಡನ್ನು ಗೆಲ್ಲಲು ಬಿಜೆಪಿ ಕಳೆದ 15 ವರ್ಷಗಳಿಂದ ಶಕ್ತಿ ಮೀರಿ ಶ್ರಮಿಸುತ್ತಿದೆ. ಈ ಸಲ, ದೀದಿ ನಾಡಲ್ಲಿ ಮೋದಿ ಹವಾ ಸೃಷ್ಟಿಯಾಗಿದೆ ಎಂದೇ ಎಕ್ಸಿಟ್‌ ಪೋಲ್‌ಗಳು ಹೇಳುತ್ತಿವೆ. ಬಂಗಾಳವನ್ನು ಗೆದ್ದರೆ ಬಿಜೆಪಿಯ ದಿಗ್ವಿಜಯದ ಪಟ್ಟಿಯಲ್ಲೊಂದು ಮೈಲಿಗಲ್ಲು. ಮೋದಿ ಜನಪ್ರಿಯತೆ ಕಡಿಮೆಯಾಗಿಲ್ಲ, ಬದಲಿಗೆ ಇನ್ನಷ್ಟು ಗಟ್ಟಿಯಾಗುತ್ತಿದೆ ಎನ್ನುವುದರ ಸೂಚಕ.
ಇನ್ನು ಪುದುಚೇರಿ, ತಮಿಳುನಾಡು, ಕೇರಳಂನಲ್ಲೂ ಮೋದಿ ಜನಪ್ರಿಯತೆ ಇನ್ನಷ್ಟು ಹೆಚ್ಚಾಗಿರೋದು ಎಕ್ಸಿಟ್‌ ಪೋಲ್‌ ದತ್ತಾಂಶಗಳು ಹೇಳುತ್ತಿವೆ. ತಮಿಳುನಾಡು, ಕೇರಳಂನಲ್ಲಿ ಹೆಚ್ಚು ಸ್ಥಾನ ಗೆಲ್ಲುವ ಸಾಧ್ಯತೆಗಳು ಇಲ್ಲದೇ ಹೋದರೂ ಕೂಡಾ, ಬಿಜೆಪಿಯ ಮತ ಪ್ರಮಾಣ ಏರಿಕೆಯಾಗಿದೆ ಎನ್ನುತ್ತಿವೆ ಸಮೀಕ್ಷೆಗಳು.
ಹಾಗೇ ನೋಡಿದರೆ, ಜಾಗತಿಕ ಮಟ್ಟದಲ್ಲಿ ಮೋದಿ ಅತಿ ಜನಪ್ರಿಯ ವ್ಯಕ್ತಿ. ಮಾರ್ಚ್‌ 2026ರ ಅವಧಿಯಲ್ಲಿ ಮೋದಿ ಅಪ್ರೂವಲ್‌ ರೇಟ್‌ ಶೇ 70ರಷ್ಟಿತ್ತು. ವಿಶ್ವದ ಜನಪ್ರಿಯ ನಾಯಕರ ಸಾಲಿನಲ್ಲಿ ಪ್ರಧಾನಿ ಮೋದಿಯೇ ಮೊದಲಿಗರಾಗಿದ್ದಾರೆ.

Continue Reading

Latest

ಮತಯಂತ್ರದಲ್ಲಿ ಬಿಜೆಪಿ ಚಿಹ್ನೆಗೆ ಟೇಪ್‌? ಚುನಾವಣಾ ಅಕ್ರಮ ಆರೋಪಿಸಿ ಕೇಸರಿ ಪಡೆ ಆಕ್ರೋಶ

VISTARANEWS.COM


on

ಮತಯಂತ್ರದಲ್ಲಿ ಬಿಜೆಪಿ ಚಿಹ್ನೆಗೆ ಟೇಪ್‌? ಚುನಾವಣಾ ಅಕ್ರಮ ಆರೋಪಿಸಿ ಕೇಸರಿ ಪಡೆ ಆಕ್ರೋಶ

ಪಶ್ಚಿಮ ಬಂಗಾಳದ ಫಾಲ್ಟಾ ವಿಧಾನಸಭಾ ಕ್ಷೇತ್ರದಲ್ಲಿ ಮತದಾನದ ವೇಳೆ ದೊಡ್ಡ ವಿವಾದ ಸೃಷ್ಟಿಯಾಗಿದೆ. ಹಲವಾರು ಮತಗಟ್ಟೆಗಳಲ್ಲಿ ಎಲೆಕ್ಟ್ರಾನಿಕ್ ಮತಯಂತ್ರದ (EVM) ಮೇಲಿರುವ ಬಿಜೆಪಿಯ ‘ಕಮಲ’ ಚಿಹ್ನೆಯ ಬಟನ್ ಅನ್ನು ಟೇಪ್‌ನಿಂದ ಮುಚ್ಚಲಾಗಿದೆ ಎಂದು ಬಿಜೆಪಿ ಮುಖಂಡ ಅಮಿತ್ ಮಾಳವೀಯ ವಿಡಿಯೋ ಸಹಿತ ಆರೋಪಿಸಿದ್ದಾರೆ. ಇದರಿಂದ ಮತದಾರರಿಗೆ ತೊಂದರೆಯಾಗಿದ್ದು, ಅಂತಹ ಮತಗಟ್ಟೆಗಳಲ್ಲಿ ಕೂಡಲೇ ಮರುಮತದಾನ ನಡೆಸಬೇಕು ಎಂದು ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಈ ಘಟನೆಯ ಬೆನ್ನಲ್ಲೇ ನಿರ್ಲಕ್ಷ್ಯ ತೋರಿದ ಐವರು ಪೊಲೀಸ್ ಅಧಿಕಾರಿಗಳನ್ನು ಆಯೋಗ ಅಮಾನತುಗೊಳಿಸಿದೆ.

ಇದೇ ವೇಳೆ, ಚುನಾವಣಾ ಅಧಿಕಾರಿ ಅಜಯ್ ಪಾಲ್ ಶರ್ಮಾ ಮತ್ತು ಟಿಎಂಸಿ ಅಭ್ಯರ್ಥಿ ಜಹಾಂಗೀರ್ ಖಾನ್ ನಡುವೆ ಭಾರಿ ಮಾತಿನ ಚಕಮಕಿ ನಡೆದಿದೆ. “ಮತದಾರರಿಗೆ ಬೆದರಿಕೆ ಹಾಕಿದರೆ ಅಳಬೇಡಿ, ಕಠಿಣ ಕ್ರಮ ಜರುಗಿಸುತ್ತೇವೆ” ಎಂದು ಅಧಿಕಾರಿ ಎಚ್ಚರಿಕೆ ನೀಡಿದರೆ, “ನೀವು ಸಿಂಗಮ್ ಆದರೆ ನಾನು ಪುಷ್ಪ, ಯಾವುದಕ್ಕೂ ಬಗ್ಗಲ್ಲ” ಎಂದು ಅಭ್ಯರ್ಥಿ ಸವಾಲು ಹಾಕಿದ್ದಾರೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಅಳಿಯ ಅಭಿಷೇಕ್ ಬ್ಯಾನರ್ಜಿ ಅವರ ಭದ್ರಕೋಟೆಯಾದ ಈ ಕ್ಷೇತ್ರದಲ್ಲಿ ಇಂತಹ ಅಕ್ರಮದ ಆರೋಪ ಕೇಳಿಬಂದಿರುವುದು ಭಾರಿ ಸಂಚಲನ ಮೂಡಿಸಿದೆ.

Continue Reading

Latest

ಹಣ ಪಡೆಯಲು ಬ್ಯಾಂಕಿಗೆ ಸಹೋದರಿಯ ಅಸ್ಥಿಪಂಜರವನ್ನೇ ತಂದ ವ್ಯಕ್ತಿ!

VISTARANEWS.COM


on

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ ಮಾನವೀಯತೆ ಮರೆತ ಬ್ಯಾಂಕ್ ಸಿಬ್ಬಂದಿಯ ನಡೆಗೆ ಇಡೀ ದೇಶವೇ ಮರುಗುವಂತಾಗಿದೆ. ಮೃತ ಸಹೋದರಿಯ ಹೆಸರಿನಲ್ಲಿದ್ದ ಠೇವಣಿ ಹಣವನ್ನು ಹಿಂಪಡೆಯಲು ಹೋದ ಜೀತು ಮುಂಡಾ ಎಂಬ ಅನಕ್ಷರಸ್ಥ ಬುಡಕಟ್ಟು ವ್ಯಕ್ತಿಗೆ, ಬ್ಯಾಂಕ್ ಸಿಬ್ಬಂದಿ ಪದೇ ಪದೇ “ಖಾತೆದಾರಳನ್ನು ಕರೆತನ್ನಿ” ಎಂದು ಕಿರುಕುಳ ನೀಡಿದ್ದಾರೆ. ಆಕೆ ನಿಧನಳಾಗಿದ್ದಾಳೆ ಎಂದು ಹೇಳಿದರೂ ಕೇಳದ ಸಿಬ್ಬಂದಿಯ ವರ್ತನೆಯಿಂದ ಹತಾಶರಾದ ಜೀತು, ಸಾವಿನ ಪುರಾವೆ ತೋರಿಸಲು ಸಮಾಧಿಯನ್ನು ಅಗೆದು ಸಹೋದರಿಯ ಅಸ್ಥಿಪಂಜರವನ್ನೇ ಬ್ಯಾಂಕಿಗೆ ಹೊತ್ತು ತಂದಿದ್ದಾರೆ.

ಈ ವಿಚಿತ್ರ ಮತ್ತು ಆಘಾತಕಾರಿ ಘಟನೆಯಿಂದ ಎಚ್ಚೆತ್ತ ಪೊಲೀಸರು ಹಾಗೂ ಸ್ಥಳೀಯ ಆಡಳಿತವು ಕೂಡಲೇ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಜೀತು ಮುಂಡಾ ಅವರ ಸಹೋದರಿಯ ಖಾತೆಯಲ್ಲಿದ್ದ ನಾಮಿನಿ ಕೂಡ ಈಗಾಗಲೇ ಮೃತಪಟ್ಟಿದ್ದು, ಕಾನೂನಿನ ಪ್ರಕಾರ ಜೀತು ಅವರೇ ಈ ಹಣಕ್ಕೆ ಏಕೈಕ ಹಕ್ಕುದಾರರಾಗಿದ್ದಾರೆ. ಬ್ಯಾಂಕ್ ಅಧಿಕಾರಿಗಳು ಮೃತ ವ್ಯಕ್ತಿಯ ಖಾತೆಯಿಂದ ಹಣ ಹಿಂಪಡೆಯುವ ಸರಳ ನಿಯಮಗಳನ್ನು ವಿವರಿಸುವಲ್ಲಿ ವಿಫಲರಾಗಿ, ಒಬ್ಬ ಅಮಾಯಕ ವ್ಯಕ್ತಿಯನ್ನು ಇಂತಹ ದಾರುಣ ಸ್ಥಿತಿಗೆ ತಳ್ಳಿದ್ದು ನಿಜಕ್ಕೂ ದುರದೃಷ್ಟಕರ.

ಸದ್ಯ ಪೊಲೀಸರ ಸಮ್ಮುಖದಲ್ಲಿ ಅಸ್ಥಿಪಂಜರವನ್ನು ಮರು ಅಂತ್ಯಕ್ರಿಯೆ ಮಾಡಲಾಗಿದ್ದು, ಜೀತು ಮುಂಡಾ ಅವರಿಗೆ ಬರಬೇಕಾದ ಹಣವನ್ನು ಶೀಘ್ರವಾಗಿ ವಿತರಿಸುವಂತೆ ಜಿಲ್ಲಾಡಳಿತವು ಬ್ಯಾಂಕ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ. ಈ ಘಟನೆಯು ಸರ್ಕಾರಿ ಮತ್ತು ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಸಾಮಾನ್ಯ ಜನರಿಗೆ, ಅದರಲ್ಲೂ ವಿಶೇಷವಾಗಿ ಅನಕ್ಷರಸ್ಥರಿಗೆ ಸಿಗಬೇಕಾದ ಕನಿಷ್ಠ ಗೌರವ ಮತ್ತು ಮಾರ್ಗದರ್ಶನದ ಕೊರತೆಯನ್ನು ಎತ್ತಿ ತೋರಿಸಿದೆ.

Continue Reading
Advertisement
Latest38 minutes ago

ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ

Latest1 hour ago

ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ

Latest2 hours ago

‘ಟಾಕ್ಸಿಕ್’ ಸಿನಿಮಾದಲ್ಲಿ ಬೋಲ್ಡ್ ದೃಶ್ಯಕ್ಕೆ ಕತ್ತರಿ ಹಾಕಿ ಕಿಯಾರಾ ಅಡ್ವಾಣಿ ಮನವಿ?

Latest1 day ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಬಾಂಗ್ಲಾದೇಶಕ್ಕೆ ಏಕೆ ಟೆನ್ಶನ್‌?

Latest1 day ago

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

Latest2 days ago

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

Latest3 days ago

ಜನಪ್ರಿಯತೆಯಲ್ಲಿ ಪ್ರಧಾನಿ ಮೋದಿ ಈಗಲೂ ನಂ.1

Latest3 days ago

ಕುರ್ಚಿ ಕದನಕ್ಕೆ ಹೊಸ ಟ್ವಿಸ್ಟ್ : ದಲಿತ ಸಿಎಂ ಕೂಗು ಜೋರು

Latest3 days ago

ಟಿವಿಕೆ-ಎನ್‌ಡಿಎ ಮೈತ್ರಿ?, ತಮಿಳುನಾಡಿನಲ್ಲಿ ಸಂಚಲನ, ಸ್ಟಾಲಿನ್‌ ಸಭೆ

Latest3 days ago

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌