Israel Palestine War: ಲೆಬನಾನ್‌ ಉಗ್ರರ ಮೇಲೆ ಇಸ್ರೇಲ್‌ ದಾಳಿ; ಗಾಜಾದಲ್ಲಿ 11,000 ದಾಟಿದ ಸಾವಿನ ಸಂಖ್ಯೆ - Vistara News

ವಿದೇಶ

Israel Palestine War: ಲೆಬನಾನ್‌ ಉಗ್ರರ ಮೇಲೆ ಇಸ್ರೇಲ್‌ ದಾಳಿ; ಗಾಜಾದಲ್ಲಿ 11,000 ದಾಟಿದ ಸಾವಿನ ಸಂಖ್ಯೆ

ಲೆಬನಾನ್‌ನಲ್ಲಿರುವ ಹಿಜ್ಬುಲ್ಲಾ ಉಗ್ರರು (Hezbollah terrorists) ದಾಳಿ ನಡೆಸಿದ್ದು, ಪ್ರತಿಕ್ರಿಯೆಯಾಗಿ ಇಸ್ರೇಲ್ ರಕ್ಷಣಾ ಪಡೆಗಳು ದಕ್ಷಿಣ ಲೆಬನಾನ್‌ನ ಹಲವಾರು ನೆಲೆಗಳ ಮೇಲೆ ದಾಳಿ ನಡೆಸಿದವು.

VISTARANEWS.COM


on

Israel Tanks Near Gaza
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಟೆಲ್‌ ಅವಿವ್‌: ಪಕ್ಕದ ದೇಶ ಲೆಬನಾನ್‌ನಲ್ಲಿರುವ ಹಿಜ್ಬುಲ್ಲಾ ಉಗ್ರ ನೆಲೆಗಳ ಮೇಲೆ ಇಸ್ರೇಲ್‌ ವಾಯುಪಡೆ (israel air force) ಶುಕ್ರವಾರ ದಾಳಿ (Israel Palestine War) ನಡೆಸಿದೆ. ಜೊತೆಗೆ ಗಾಜಾದ (Gaza strip) ಹಲವು ಉಗ್ರ ಕೇಂದ್ರಗಳು, ಸುರಂಗಗಳನ್ನು ಗುರಿಯಾಗಿಟ್ಟುಕೊಂಡು ದಾಳಿ ನಡೆಸಿದೆ.

ಶುಕ್ರವಾರ ಉತ್ತರ ಇಸ್ರೇಲ್‌ನಲ್ಲಿ ಸೈನಿಕರ ಮೇಲೆ ಪ್ಯಾಲೆಸ್ತೀನ್‌ ಕಡೆಯಿಂದ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳು ನಡೆದವು. ಇವುಗಳನ್ನು ಲೆಬನಾನ್‌ನಲ್ಲಿರುವ ಹಿಜ್ಬುಲ್ಲಾ ಉಗ್ರರು (Hezbollah terrorists) ನಡೆಸಿದ್ದು, ಪ್ರತಿಕ್ರಿಯೆಯಾಗಿ ಇಸ್ರೇಲ್ ರಕ್ಷಣಾ ಪಡೆಗಳು ದಕ್ಷಿಣ ಲೆಬನಾನ್‌ನ ಹಲವಾರು ನೆಲೆಗಳ ಮೇಲೆ ದಾಳಿ ನಡೆಸಿದವು. ಇಸ್ರೇಲಿ ಮಿಲಿಟರಿಯ ಪ್ರಕಾರ, ಲೆಬನಾನ್‌ನಿಂದ ಉಡಾವಣೆಯಾದ ಆಂಟಿ-ಟ್ಯಾಂಕ್-ಗೈಡೆಡ್ ಕ್ಷಿಪಣಿ ಮೆನಾರಾದ ಉತ್ತರ ಸಮುದಾಯದ ಬಳಿಯ ಸೇನಾ ಪೋಸ್ಟ್‌ಗೆ ಅಪ್ಪಳಿಸಿತು. ಹಿಜ್ಬುಲ್ಲಾದ ಕ್ಷಿಪಣಿ ಮತ್ತು ಡ್ರೋನ್ ದಾಳಿಯಲ್ಲಿ ನಾಲ್ವರು ಇಸ್ರೇಲಿ ಸೈನಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಈ ಮಧ್ಯೆ, ಇಸ್ರೇಲ್‌ನ ವಿದೇಶಾಂಗ ಸಚಿವಾಲಯದ ವಕ್ತಾರರು ದಕ್ಷಿಣ ಇಸ್ರೇಲ್‌ನಲ್ಲಿ ಅಕ್ಟೋಬರ್ 7ರಂದು ಹಮಾಸ್ ದಾಳಿಯಿಂದ ಸತ್ತವರ ಸಂಖ್ಯೆಯನ್ನು ಹಿಂದಿನ ಅಂದಾಜು 1,400ರಿಂದ ಸುಮಾರು 1,200ಕ್ಕೆ ಪರಿಷ್ಕರಿಸಲಾಗಿದೆ ಎಂದಿದ್ದಾರೆ. ಗಾಜಾದಲ್ಲಿ ಇಸ್ರೇಲ್‌ ದಾಳಿಯಿಂದ ಸತ್ತವರು ಹಾಗೂ ಸಂತ್ರಸ್ತರ ಸಂಖ್ಯೆ ಏರುತ್ತಿದ್ದು, ಹಮಾಸ್‌ ಉಗ್ರರು ಹಾಗೂ ಅವರಿಂದ ಒತ್ತೆಯಾಳುಗಳಾದ ಇಸ್ರೇಲ್‌ ನಾಗರಿಕರಿಗಾಗಿ ಹುಡುಕಾಟ ನಡೆದಿದೆ.

ಗಾಜಾದಲ್ಲಿ ಇಸ್ರೇಲಿ ಪಡೆಗಳು ಮತ್ತು ಹಮಾಸ್ ಭಯೋತ್ಪಾದಕರ ನಡುವೆ ಕ್ಷಿಪಣಿ- ರಾಕೆಟ್‌ ದಾಳಿ ಹಾಗೂ ಭೂಮಿಯ ಮೇಲಿನ ಹೋರಾಟ ತೀವ್ರವಾಗಿ ನಡೆದಿದೆ. ಗಾಜಾ ನಗರದಲ್ಲಿ ಗಾಯಗೊಂಡ ಪ್ಯಾಲೆಸ್ತೀನ್‌ ನಾಗರಿರು ಇರುವ ಕಿಕ್ಕಿರಿದ ಆಸ್ಪತ್ರೆಗಳ ಬಳಿಯೂ ಶನಿವಾರ ಹೋರಾಟ ನಡೆದಿದೆ. ಸ್ಫೋಟಗಳು ಮತ್ತು ಗುಂಡಿನ ದಾಳಿಗಳು ನಡೆದಿವೆ. ಅಲ್ ಶಿಫಾ ಆಸ್ಪತ್ರೆ ಹಾಗೂ ಅಲ್-ಬುರಾಕ್ ಶಾಲೆಯ ಬಳಿ ನಡೆದ ಇಸ್ರೇಲಿ ದಾಳಿಯಲ್ಲಿ ಕನಿಷ್ಠ 25 ಜನರು ಸಾವನ್ನಪ್ಪಿದ್ದಾರೆ. ಅಲ್ಲಿ ಮನೆಗಳು ನಾಶವಾದ ಜನರು ಆಶ್ರಯ ಪಡೆದಿದ್ದರು.

ಶುಕ್ರವಾರ ಮುಂಜಾನೆ ಗಾಜಾದ ಅತಿದೊಡ್ಡ ಆಸ್ಪತ್ರೆಯಾದ ಅಲ್ ಶಿಫಾ ಅಂಗಳದಲ್ಲಿ ಕ್ಷಿಪಣಿಗಳು ದಾಳಿ ಮಾಡಿದವು. ಪ್ಯಾಲೆಸ್ತೀನ್‌ ಉಗ್ರಗಾಮಿಗಳು ಉಡಾವಣೆ ಮಾಡಿದ ಕ್ಷಿಪಣಿಗಳು ತಪ್ಪಾಗಿ ಶಿಫಾಗೆ ಅಪ್ಪಳಿಸಿತು ಎಂದು ಇಸ್ರೇಲ್ ಮಿಲಿಟರಿ ನಂತರ ಹೇಳಿದೆ. ಆಸ್ಪತ್ರೆಗಳು ಉತ್ತರ ಗಾಜಾದಲ್ಲಿವೆ. ಅಲ್ಲಿ ಕಳೆದ ತಿಂಗಳು ದಾಳಿ ಮಾಡಿದ ಹಮಾಸ್ ಭಯೋತ್ಪಾದಕರು ಕೇಂದ್ರೀಕೃತರಾಗಿದ್ದಾರೆ. ದಕ್ಷಿಣದಿಂದ ಸ್ಥಳಾಂತರಗೊಂಡ ರೋಗಿಗಳು ಮತ್ತು ವೈದ್ಯರಿಂದ ಈ ಪ್ರದೇಶ ತುಂಬಿದೆ.

ದಕ್ಷಿಣ ಇಸ್ರೇಲ್‌ನಲ್ಲಿ ಅಕ್ಟೋಬರ್ 7ರಂದು ನಡೆದ ಹಮಾಸ್‌ನ ದಾಳಿಗೆ ಪ್ರತೀಕಾರವಾಗಿ ಐದು ವಾರಗಳಿಂದ ಇಸ್ರೇಲ್ ಗಾಜಾದ ಮೇಲೆ ಬಾಂಬ್ ದಾಳಿ‌ ನಡೆಸುತ್ತಿದೆ. ಇಲ್ಲಿ ಕೊಲ್ಲಲ್ಪಟ್ಟ ಪ್ಯಾಲೆಸ್ತೀನಿಯನ್ನರ ಸಂಖ್ಯೆ 11,000 ದಾಟಿದೆ. ಇಸ್ರೇಲ್ ಸಂಯಮ‌ ತೋರುವಂತೆ ಅನೇಕ ಜಾಗತಿಕ ನಾಯಕರು ಕರೆ ನೀಡಿದ್ದಾರೆ. ಪ್ರಮುಖ ಮಿತ್ರರಾಷ್ಟ್ರವಾದ ಯುನೈಟೆಡ್ ಸ್ಟೇಟ್ಸ್ ಕೂಡ ಒತ್ತಡ ಹಾಕಿದೆ.

ಇದನ್ನೂ ಓದಿ: Israel Palestine War: ಗಾಜಾ ನಗರದ ‘ಹೃದಯ’ ಪ್ರವೇಶಿಸಿದ ಇಸ್ರೇಲ್‌; ಮಸಣದಂತಾದ ಸಿಟಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Pervez Musharraf: ಭಾರತ ವಿರೋಧಿ ಪರ್ವೇಜ್‌ ಮುಷರ‍್ರಫ್‌ಗೆ ಕೇರಳ ಬ್ಯಾಂಕ್‌ ಗೌರವ; ಭುಗಿಲೆದ್ದ ವಿವಾದ

Pervez Musharraf: ಕಾರ್ಗಿಲ್‌ ಯುದ್ಧದ ವಿಜಯಕ್ಕೆ 25 ವರ್ಷ ತುಂಬಿದ ಹಿನ್ನೆಲೆಯಲ್ಲಿ ಬಾಂಕ್‌ ಆಫ್‌ ಇಂಡಿಯಾದ ಉದ್ಯೋಗಿಗಳ ಒಕ್ಕೂಟವು ಜುಲೈ 27ರಂದು ಆಲಪ್ಪುಳದಲ್ಲಿ ಕಾರ್ಯಕ್ರಮ ಆಯೋಜಿಸಿತ್ತು. ಇದೇ ವೇಳೆ, ರಾಜ್ಯ ಸಮಾವೇಶವೂ ನಡೆದಿದೆ. ಸಮಾವೇಶದಲ್ಲಿ ಹಲವು ಮಹನೀಯರಿಗೆ ಗೌರವ ಸಲ್ಲಿಸುವ ಪಟ್ಟಿಯಲ್ಲಿ ಪರ್ವೇಜ್‌ ಮುಷರ‍್ರಫ್‌ ಹೆಸರು ಕೂಡ ಸೇರಿದೆ. ಇದು ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ.

VISTARANEWS.COM


on

Pervez Musharraf
Koo

ತಿರುವನಂತಪುರಂ: ಭಾರತ ವಿರೋಧಿಯಾಗಿದ್ದ, 1999ರಲ್ಲಿ ಕಾರ್ಗಿಲ್‌ ಯುದ್ಧಕ್ಕೆ ಕಾರಣನಾದ, ಜಮ್ಮು-ಕಾಶ್ಮೀರಕ್ಕೆ ಉಗ್ರರನ್ನು ಛೂ ಬಿಟ್ಟು ಅಶಾಂತಿಗೆ ಕಾರಣನಾದ ಪಾಕಿಸ್ತಾನದ (Pakistan) ಮಾಜಿ ಅಧ್ಯಕ್ಷ ಪರ್ವೇಜ್‌ ಮುಷರ‍್ರಫ್‌ಗೆ (Pervez Musharraf) ಕೇರಳದ ಬ್ಯಾಂಕ್‌ ಆಫ್‌ ಇಂಡಿಯಾ (BOI) ನೌಕರರ ಒಕ್ಕೂಟದಲ್ಲಿ ಗೌರವ ನಮನ ಸಲ್ಲಿಸಲು ತೀರ್ಮಾನಿಸಿದ್ದು ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ. ಜುಲೈ 27ರಂದು ಕೇರಳದ ಆಲಪ್ಪಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪರ್ವೇಜ್‌ ಮುಷರ‍್ರಫ್‌ಗೆ ಗೌರವ ಸಲ್ಲಿಸಲು ಕಾರ್ಯಕ್ರಮಕ್ಕೂ ಮೊದಲೇ ತೀರ್ಮಾನಿಸಿತ್ತು ಎಂದು ತಿಳಿದುಬಂದಿದೆ.

ಕಾರ್ಗಿಲ್‌ ಯುದ್ಧದ ವಿಜಯಕ್ಕೆ 25 ವರ್ಷ ತುಂಬಿದ ಹಿನ್ನೆಲೆಯಲ್ಲಿ ಬಾಂಕ್‌ ಆಫ್‌ ಇಂಡಿಯಾದ ಉದ್ಯೋಗಿಗಳ ಒಕ್ಕೂಟವು ಜುಲೈ 27ರಂದು ಆಲಪ್ಪುಳದಲ್ಲಿ ಕಾರ್ಯಕ್ರಮ ಆಯೋಜಿಸಿತ್ತು. ಇದೇ ವೇಳೆ, ರಾಜ್ಯ ಸಮಾವೇಶವೂ ನಡೆದಿದೆ. ಸಮಾವೇಶದಲ್ಲಿ ಹಲವು ಮಹನೀಯರಿಗೆ ಗೌರವ ಸಲ್ಲಿಸುವ ಪಟ್ಟಿಯಲ್ಲಿ ಪರ್ವೇಜ್‌ ಮುಷರ‍್ರಫ್‌ ಹೆಸರು ಕೂಡ ಸೇರಿಸಿತ್ತು. ಇದರಿಂದಾಗಿ ಬ್ಯಾಂಕ್‌ ಆಫ್‌ ಇಂಡಿಯಾದ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿದೆ. ಬ್ಯಾಂಕ್‌ಗಳ ಎದುರು ಜನ ಪ್ರತಿಭಟನೆ ನಡೆಸಿದ್ದಾರೆ. ಇದಾದ ನಂತರ, ಒಕ್ಕೂಟವು ಗೌರವಕ್ಕೆ ಪಾತ್ರರಾಗುವವರ ಪಟ್ಟಿಯಿಂದ ಪರ್ವೇಜ್‌ ಮುಷರ‍್ರಫ್‌ ಹೆಸರು ತೆಗೆದಿದ್ದಾರೆ ಎಂದು ತಿಳಿದುಬಂದಿದೆ.

ಪಾಲಿ ಜಾರ್ಜ್‌ ನಗರದಲ್ಲಿ ಬ್ಯಾಂಕ್‌ ಆಫ್‌ ಇಂಡಿಯಾದ 23ನೇ ರಾಜ್ಯ ಸಮಾವೇಶ ನಡೆದಿದೆ. ಕಾಂಗ್ರೆಸ್‌ ಸಂಸದ ಕೆ.ಸಿ.ವೇಣುಗೋಪಾಲ್‌ ಅವರು ಸಮಾವೇಶವನ್ನು ಉದ್ಘಾಟಿಸಿದರು. ಇದೇ ವೇಳೆ, ಕಾರ್ಗಿಲ್‌ ಯುದ್ಧದ ವಿಜಯ, ಯೋಧರ ತ್ಯಾಗ, ಬಲಿದಾನವನ್ನು ಸ್ಮರಿಸಲಾಯಿತು. ಅಲ್ಲದೆ, ನಟರು, ಗಾಯಕರು, ನೃತ್ಯಪಟುಗಳು, ಕ್ರೀಡಾಪಟುಗಳು, ಹೋರಾಟಗಾರರು ಸೇರಿ ಹಲವು ಸಾಧಕರನ್ನು ಸನ್ಮಾನಿಸಲಾಯಿತು.

ಪರ್ವೇಜ್‌ ಮುಷರ‍್ರಫ್‌ಗೆ ಗೌರವ ಸಲ್ಲಿಸಲು ಮುಂದಾಗಿದ್ದ ಬ್ಯಾಂಕ್‌ ಆಫ್‌ ಇಂಡಿಯಾದ ವಿರುದ್ಧ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಬ್ಯಾಂಕ್‌ ಎದುರು ಪ್ರತಿಭಟನೆ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಬ್ಯಾಂಕ್‌ ಆಫ್‌ ಇಂಡಿಯಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ದೇಶದ್ರೋಹದ ಕೃತ್ಯ ಎಂದೆಲ್ಲ ಜನ ಟೀಕಿಸಿದ್ದಾರೆ. ರಾಜ್ಯ ಬಿಜೆಪಿ ಘಟಕದ ನಾಯಕರು ಕೂಡ ಇದನ್ನು ಖಂಡಿಸಿದ್ದಾರೆ.

ಇದನ್ನೂ ಓದಿ: Narendra Modi: ಮೋದಿ ಎಚ್ಚರಿಕೆಗೆ ಪಾಕಿಸ್ತಾನ ಥಂಡಾ; ಗಡಿಯಲ್ಲಿ ಹೆಚ್ಚುವರಿ ಸೈನಿಕರ ನಿಯೋಜನೆ!

Continue Reading

ದೇಶ

Infiltration: ಭಾರತಕ್ಕೆ ನುಗ್ಗುವುದು ಹೇಗೆ ಎಂದು ವಿಡಿಯೊ ಮಾಡಿದ ಬಾಂಗ್ಲಾ ವ್ಯಕ್ತಿ; ದೀದಿ ಆಹ್ವಾನದ ಬೆನ್ನಲ್ಲೇ ವಿಡಿಯೊ ವೈರಲ್‌

Infiltration: “ಬಾಂಗ್ಲಾದೇಶದ ನಿರಾಶ್ರಿತರು ಪಶ್ಚಿಮ ಬಂಗಾಳಕ್ಕೆ ಬಂದರೆ ಆಶ್ರಯ ನೀಡುತ್ತೇವೆ” ಎಂಬುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಹೇಳಿಕೆ ನೀಡಿದ ಬೆನ್ನಲ್ಲೇ, ಬಾಂಗ್ಲಾದ ವ್ಲಾಗರ್‌ ಒಬ್ಬ, ಹೇಗೆ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಬಹುದು ಎಂಬುದರ ವಿಡಿಯೊ ಪೋಸ್ಟ್‌ ಮಾಡಿದೆ. ಇದರಿಂದಾಗಿ, ಗಡಿಯಲ್ಲಿ ಈಗ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

VISTARANEWS.COM


on

Infiltration
Koo

ಢಾಕಾ: ಬಾಂಗ್ಲಾದೇಶದಲ್ಲಿ (Bangladesh) ಅರಾಜಕತೆ, ನಾಗರಿಕ ದಂಗೆ ಭುಗಿಲೆದ್ದಿದೆ. ವಿವಾದಿತ ಮೀಸಲಾತಿ ವಿರುದ್ಧ ಜನ ಹಿಂಸಾಚಾರದಲ್ಲಿ ತೊಡಗಿದ್ದು, 200ಕ್ಕೂ ಅಧಿಕ ಮಂದಿ ಮೃತಪಟ್ಟು, ಸಾವಿರಾರು ಜನ ಗಾಯಗೊಂಡಿದ್ದಾರೆ. ಇದರ ಬೆನ್ನಲ್ಲೇ, ಬಾಂಗ್ಲಾದೇಶದ ವ್ಲಾಗರ್‌ (Vlogger) ಒಬ್ಬ, ಭಾರತಕ್ಕೆ ಹೇಗೆ ಅಕ್ರಮವಾಗಿ ನುಗ್ಗಬಹುದು (Infiltration) ಎಂಬುದನ್ನು ತೋರಿಸುವ ವಿಡಯೊವನ್ನು ಹರಿಬಿಟ್ಟಿದ್ದಾನೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ. ಅದರಲ್ಲೂ, “ಬಾಂಗ್ಲಾದೇಶದ ನಿರಾಶ್ರಿತರು ಪಶ್ಚಿಮ ಬಂಗಾಳಕ್ಕೆ ಬಂದರೆ ಆಶ್ರಯ ನೀಡುತ್ತೇವೆ” ಎಂಬುದಾಗಿ ಮಮತಾ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ (Mamata Banerjee) ಅವರು ಹೇಳಿಕೆ ನೀಡಿದ ಬೆನ್ನಲ್ಲೇ ವಿಡಿಯೊ ಹರಿದಾಡುತ್ತಿರುವುದು ಭಾರಿ ಚರ್ಚೆಗೆ ಕಾರಣವಾಗಿದೆ.

ಬಾಂಗ್ಲಾದೇಶದ ಗಡಿಗೆ ತೆರಳಿದ ವ್ಲಾಗರ್‌ ಒಬ್ಬನು, ಅಕ್ರಮವಾಗಿ ಹೇಗೆ ಭಾರತವನ್ನು ಪ್ರವೇಶಿಸಬಹುದು, ನುಸುಳಬಹುದು ಎಂಬುದನ್ನು ವಿಡಿಯೊ ಸಮೇತ ಪೋಸ್ಟ್‌ ಮಾಡಿದ್ದಾನೆ. ಕಾಲುವೆಯ ಪುಟ್ಟದಾದ ಪೈಪ್‌ಗಳ ಮೂಲಕ ಬಾಂಗ್ಲಾದೇಶದ ಗಡಿಯಿಂದ ಭಾರತದ ಗಡಿಯೊಳಗೆ ನುಗ್ಗಬಹುದು, ಆ ಮೂಲಕ ಸುಲಭವಾಗಿ ಭಾರತದಲ್ಲಿ ಅಕ್ರಮವಾಗಿ ನೆಲೆಸಬಹುದು ಎಂಬುದನ್ನು ಕೆಲ ಸ್ನೇಹಿತರೊಂದಿಗೆ ಆತ ಪ್ರಾತ್ಯಕ್ಷಿಕೆ ತೋರಿಸಿದ್ದಾನೆ. ಇದು ಈಗ ಗಡಿಯಲ್ಲಿ ಭಾರಿ ಆತಂಕ ಸೃಷ್ಟಿಸಿದೆ. ಆದಾಗ್ಯೂ, ಭಾರತ-ಬಾಂಗ್ಲಾ ಗಡಿಯಲ್ಲಿ ಸೈನಿಕರು ಕಟ್ಟೆಚ್ಚರ ವಹಿಸಿದ್ದಾರೆ ಎಂದು ತಿಳಿದುಬಂದಿದೆ.

ಬಾಂಗ್ಲಾದಲ್ಲಿ ನಿಲ್ಲದ ಗಲಭೆ

ಸರ್ಕಾರಿ ಉದ್ಯೋಗಗಳಲ್ಲಿನ ಮೀಸಲಾತಿ ವ್ಯವಸ್ಥೆಯಲ್ಲಿ ಸುಧಾರಣೆಗೆ ಒತ್ತಾಯಿಸಿ ಬಾಂಗ್ಲಾದೇಶ ದಲ್ಲಿ ಹಲವು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆ ಹಿಂಸಾಸ್ವರೂಪ ಪಡೆದಿರುವ ಮಧ್ಯೆಯೇ ಅಲ್ಲಿನ ಸರ್ವೋಚ್ಚ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಕೋಲಾಹಲಕ್ಕೆ ಕಾರಣವಾದ ಬಾಂಗ್ಲಾ ವಿಮೋಚನೆ ಹೋರಾಟದಲ್ಲಿ ಭಾಗಿಯಾಗಿದ್ದವರ ಕುಟುಂಬದವರಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ. 30ರಷ್ಟು ಮೀಸಲಾತಿ ನೀಡುವ ನಿಯಮವನ್ನು ಕೋರ್ಟ್‌ ಹಿಂತೆಗೆದುಕೊಂಡಿದೆ. ಆದರೆ ಸಂಪೂರ್ಣ ರದ್ದುಗೊಳಿಸಲಿಲ್ಲ. ಶೇ. 30ರಷ್ಟಿದ್ದ ಮೀಸಲಾತಿಯನ್ನು ಶೇ. 5ಕ್ಕೆ ಇಳಿಸಲಾಗಿದೆ. ಹಾಗಾಗಿ, ಬಾಂಗ್ಲಾದೇಶದಲ್ಲಿ ಗಲಭೆ ನಿಂತಿಲ್ಲ. ಇದರಿಂದಾಗಿ ಭಾರತದ ಗಡಿಯಲ್ಲೂ ಆತಂಕದ ವಾತಾವರಣ ನಿರ್ಮಾಣವಾದಂತಾಗಿದೆ.

ಮಮತಾ ಬ್ಯಾನರ್ಜಿ ಹೇಳಿದ್ದೇನು?

ಜುಲೈ 21ರಂದು ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್‌ ನಡೆಸಿದ ಮೆಗಾ ರ‍್ಯಾಲಿಯಲ್ಲಿ ಮಾತನಾಡಿದ್ದ ಮಮತಾ ಬ್ಯಾನರ್ಜಿ, “ಹಿಂಸಾಚಾರ ಪೀಡಿತ ಬಾಂಗ್ಲಾದೇಶದ ಜನರು ನಮ್ಮ ಬಾಗಿಲನ್ನು ತಟ್ಟಿದರೆ ಸರ್ಕಾರ ಅವರಿಗೆ ಆಶ್ರಯ ನೀಡುತ್ತದೆ” ಎಂದಿದ್ದರು. ಪಶ್ಚಿಮ ಬಂಗಾಳದಲ್ಲಿ ಈಗಾಗಲೇ ಬಾಂಗ್ಲಾದೇಶದ ಅಕ್ರಮ ವಲಸೆಗಾರರಿಗೆ ಮಮತಾ ಬ್ಯಾನರ್ಜಿ ಆಶ್ರಯ ನೀಡಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿರುವ ಹೊತ್ತಿನಲ್ಲೇ ಅವರು ಬಾಂಗ್ಲಾ ವಲಸಿಗರಿಗೆ ಆಶ್ರಯ ನೀಡುತ್ತೇನೆ ಎಂಬುದಾಗಿ ನೀಡಿದ ಹೇಳಿಕೆ ವಿರುದ್ಧ ಭಾರಿ ಟೀಕೆಗಳು ವ್ಯಕ್ತವಾಗಿದ್ದವು.

ಇದನ್ನೂ ಓದಿ: Mamata Banerjee: ಮಾತನಾಡಲು 5 ನಿಮಿಷ ಮಾತ್ರ ಅವಕಾಶ ನೀಡಿದರು: ನೀತಿ ಆಯೋಗದ ಸಭೆಯಿಂದ ಹೊರ ಬಂದ ಮಮತಾ ಬ್ಯಾನರ್ಜಿ ಕಿಡಿ

Continue Reading

ದೇಶ

ಪಾಕ್‌ಗೆ ಮೋದಿ ಎಚ್ಚರಿಕೆ ಬೆನ್ನಲ್ಲೇ ಗಡಿಯಲ್ಲಿ 2 ಸಾವಿರ ಹೆಚ್ಚುವರಿ ಸೈನಿಕರ ನಿಯೋಜಿಸಿದ ಕೇಂದ್ರ; ಏನಿದರ ಮರ್ಮ?

ಜಮ್ಮು-ಕಾಶ್ಮೀರದ ಗಡಿಯಲ್ಲಿ ಹೆಚ್ಚುವರಿಯಾಗಿ 2 ಸಾವಿರ ಗಡಿ ಭದ್ರತಾ ಪಡೆಯ (BSF) ಸಿಬ್ಬಂದಿಯನ್ನು ನಿಯೋಜಿಸಲು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಪಾಕಿಸ್ತಾನಕ್ಕೆ ಮೋದಿ ಎಚ್ಚರಿಕೆಯ ಬೆನ್ನಲ್ಲೇ ಕೇಂದ್ರ ಸರ್ಕಾರ ಇಂತಹದ್ದೊಂದು ಕ್ರಮ ತೆಗೆದುಕೊಂಡಿದೆ.

VISTARANEWS.COM


on

Indian Army
Koo

ನವದೆಹಲಿ: ಭಯೋತ್ಪಾದನೆಯನ್ನು ನಿಗ್ರಹಿಸುವ ಬದಲು, ಉಗ್ರರಿಗೆ ಆಶ್ರಯ ನಡುತ್ತಿರುವ ಪಾಕಿಸ್ತಾನಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕಾರ್ಗಿಲ್‌ ವಿಜಯ ದಿವಸದಂದೇ (Kargil Vijay Diwas 2024) (ಜುಲೈ 26) ಎಚ್ಚರಿಕೆ ನೀಡಿದ್ದಾರೆ. ಇನ್ನು, ಜಮ್ಮು-ಕಾಶ್ಮೀರ ಗಡಿಯಲ್ಲಿ ಇತ್ತೀಚೆಗೆ ಉಗ್ರರ ದಾಳಿ ಜಾಸ್ತಿಯಾಗಿದ್ದು, ಸೈನಿಕರು, ವಲಸಿಗರನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ, ಜಮ್ಮು-ಕಾಶ್ಮೀರ (Jammu Kashmir Border) ಗಡಿಯಲ್ಲಿ ಹೆಚ್ಚುವರಿಯಾಗಿ 2 ಸಾವಿರ ಸೈನಿಕರನ್ನು ನಿಯೋಜಿಸಲು ಕೇಂದ್ರ ಸರ್ಕಾರ (Central Government) ಆದೇಶ ನೀಡಿದೆ ಎಂದು ತಿಳಿದುಬಂದಿದೆ.

ಜಮ್ಮು-ಕಾಶ್ಮೀರದ ಗಡಿಯಲ್ಲಿ ಹೆಚ್ಚುವರಿಯಾಗಿ 2 ಸಾವಿರ ಗಡಿ ಭದ್ರತಾ ಪಡೆಯ (BSF) ಸಿಬ್ಬಂದಿಯನ್ನು ನಿಯೋಜಿಸಲು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಇತ್ತೀಚೆಗೆ, ಗಡಿಯಲ್ಲಿ ಉಗ್ರರ ಉಪಟಳ, ಒಳನುಸುಳುವಿಕೆ, ದಾಳಿ, ಶಸ್ತ್ರಾಸ್ತ್ರ ಸಾಗಣೆ ಸೇರಿ ಹಲವು ಕೃತ್ಯಗಳು ಹೆಚ್ಚಾಗಿರುವ ಕಾರಣ ಹೆಚ್ಚಿನ ಭದ್ರತೆಗಾಗಿ ಬಿಎಸ್‌ಎಫ್‌ ಯೋಧರನ್ನು ನಿಯೋಜಿಸಲು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ ಎಂಬುದಾಗಿ ಮೂಲಗಳು ತಿಳಿಸಿವೆ.

ಪಾಕ್‌ನಿಂದಲೂ ಹೆಚ್ಚುವರಿ ಸೈನಿಕರ ನಿಯೋಜನೆ

ಮೋದಿ ಎಚ್ಚರಿಕೆ ಬೆನ್ನಲ್ಲೇ ಪಾಕಿಸ್ತಾನವು ಗಡಿಯಲ್ಲಿ ಎರಡು ಹೆಚ್ಚುವರಿ ಬ್ರಿಗೇಡ್‌ಗಳು, 3 ಪಿಒಕೆ ಬ್ರಿಗೇಡ್‌ ಹಾಗೂ 2 ಹೆಚ್ಚುವರಿ ಪಿಒಕೆ ಬ್ರಿಗೇಡ್‌ಗಳನ್ನು ಹೆಚ್ಚುವರಿಯಾಗಿ ನಿಯೋಜಿಸಿದೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಪಾಕಿಸ್ತಾನ ಸೈನಿಕರು ಭಾರತದೊಳಗೆ ಉಗ್ರರನ್ನು ನುಸುಳಿಸಲು ಮಾರ್ಗದರ್ಶನ, ನೆರವು ನೀಡುತ್ತಿದೆ ಎಂಬ ಚಿತ್ರಗಳು ಲಭ್ಯವಾದ ಬೆನ್ನಲ್ಲೇ ಮೋದಿ ಎಚ್ಚರಿಕೆ ನೀಡಿದ್ದರು. ಇದಾದ ಕೆಲ ಹೊತ್ತಿನಲ್ಲೇ ಪಾಕಿಸ್ತಾನ ಸೈನಿಕರು ಗಡಿಯಲ್ಲಿ ನಿಯೋಜನೆಗೊಂಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಮೋದಿ ಎಚ್ಚರಿಕೆ ಏನಾಗಿತ್ತು?

ಕಾರ್ಗಿಲ್‌ ವಿಜಯ ದಿವಸ(Kargil Vijay Diwas 2024)ಕ್ಕೆ ಜುಲೈ 26ಕ್ಕೆ 25ವರ್ಷ ಸಂದಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಡ್ರಾಸ್‌ನಲ್ಲಿರುವ ಕಾರ್ಗಿಲ್‌ ಯುದ್ಧ ಸ್ಮಾರಕಕ್ಕೆ ಭೇಟಿ ಕೊಟ್ಟು ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದರು. ಇದೇ ವೇಳೆ ಮಾತನಾಡಿದ ಅವರು, ಕಳೆದ ಯುದ್ಧಗಳಲ್ಲಿ ಸೋಲುಂಡಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ ಭಯೋತ್ಪಾದನೆಗೆ ಉತ್ತೇಜನ ನೀಡುತ್ತಿದೆ. ಇದುವರೆಗೆ ಪಾಕಿಸ್ತಾನ ತನ್ನ ತಪ್ಪಿನ ಪಾಠ ಕಲಿತಿಲ್ಲ ಎಂದು ಗುಡುಗಿದ್ದರು.

ಭಯೋತ್ಪಾದನೆ ಮೂಲಕ ಭಾರತವನ್ನು ಗೆಲ್ಲುವ ಪಾಕಿಸ್ತಾನದ ಉದ್ದೇಶ ಎಂದಿಗೂ ಯಶಸ್ವಿ ಆಗುವುದಿಲ್ಲ ಎಂದು ಖಡಕ್‌ ವಾರ್ನಿಂಗ್‌ ಕೊಟ್ಟಿದ್ದಾರೆ. ಇನ್ನು ಇದೇ ವೇಳ ಅಗ್ನಿಪಥ್‌ ಯೋಜನೆ ಬಗ್ಗೆ ಪ್ರತಿಕ್ರಿಯಿಸಿದ್ದು, ಸೇನೆಯ ಈ ಸುಧಾರಣೆಯಲ್ಲೂ ಕೆಲವರು ತಮ್ಮ ವೈಯಕ್ತಿಕ ಲಾಭಕ್ಕಾಗಿ ಸುಳ್ಳಿನ ರಾಜಕಾರಣ ಮಾಡುತ್ತಿದ್ದಾರೆ ಎಂದು ಅವರು ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಭಾರತದ ವಿರುದ್ಧ ಪಾಕಿಸ್ತಾನವು ಇದುವರೆಗೆ ನಾಲ್ಕು ಯುದ್ಧಗಳಲ್ಲಿ ಹೀನಾಯವಾಗಿ ಸೋಲನುಭವಿಸಿದೆ. ಅದರಲ್ಲೂ, ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಉರಿ ದಾಳಿಗೆ ಪ್ರತಿಯಾಗಿ ಸರ್ಜಿಕಲ್‌ ಸ್ಟ್ರೈಕ್‌, ಪುಲ್ವಾಮಾ ಉಗ್ರರ ದಾಳಿಗೆ ಪ್ರತಿಯಾಗಿ ಬಾಲಾಕೋಟ್‌ ದಾಳಿ ನಡೆಸಿದೆ. ಹಾಗೆಯೇ, ಪಾಕಿಸ್ತಾನವು ಉಗ್ರ ಪೋಷಣೆಯ ರಾಷ್ಟ್ರವಾಗಿದೆ ಎಂಬುದಾಗಿ ಜಾಗತಿಕ ವೇದಿಕೆಯಲ್ಲಿ ಭಾರತವು ಪ್ರತಿಪಾದಿಸಿದೆ.

ಇದನ್ನೂ ಓದಿ: Kargil Vijay Diwas 2024: ಕಾರ್ಗಿಲ್‌ ಯುದ್ಧಭೂಮಿಗೆ ಅಂದೇ ಕಾಲಿಟ್ಟಿದ್ರು ಮೋದಿ- ಹಳೆಯ ಫೊಟೋ ವೈರಲ್‌

Continue Reading

ದೇಶ

Narendra Modi: ರಷ್ಯಾ ಬಳಿಕ ಮುಂದಿನ ತಿಂಗಳು ಯುದ್ಧ ಪೀಡಿತ ಉಕ್ರೇನ್‌ಗೆ ಪ್ರಧಾನಿ ಮೋದಿ ಭೇಟಿ

Narendra Modi: ರಷ್ಯಾ 2022ರಲ್ಲಿ ಉಕ್ರೇನ್ ಮೇಲೆ ಆಕ್ರಮಣ ಮಾಡಿದ ನಂತರ (Russia-Ukraine War) ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಆಗಸ್ಟ್‌ನಲ್ಲಿ ಉಕ್ರೇನ್ ರಾಜಧಾನಿ ಕೀವ್​ಗೆ ಪ್ರಯಾಣಿಸಲಿದ್ದಾರೆ. ಮೋದಿ ಅವರು ಇತ್ತೀಚೆಗೆ ರಷ್ಯಾಕ್ಕೆ ಭೇಟಿ ನೀಡಿ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರೊಂದಿಗೆ ಮಾತಿಕತೆ ನಡೆಸಿದ್ದರು. ಅದಾಗಿ ಕೆಲವೇ ದಿನಗಳಲ್ಲಿ ಉಕ್ರೇನ್‌ ಪ್ರವಾಸ ಕೈಗೊಂಡಿರುವುದು ಕುತೂಹಲ ಮೂಡಿಸಿದೆ.

VISTARANEWS.COM


on

Narendra Modi
Koo

ನವದೆಹಲಿ: ರಷ್ಯಾ 2022ರಲ್ಲಿ ಉಕ್ರೇನ್ ಮೇಲೆ ಆಕ್ರಮಣ ಮಾಡಿದ ನಂತರ (Russia-Ukraine War) ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಸ್ಟ್‌ನಲ್ಲಿ ಉಕ್ರೇನ್ ರಾಜಧಾನಿ ಕೀವ್​ಗೆ ಪ್ರಯಾಣಿಸಲಿದ್ದಾರೆ. ಇಟಲಿಯಲ್ಲಿ ಜೂನ್‌ನಲ್ಲಿ ನಡೆದ ಜಿ 7 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್​ ಝೆಲೆನ್ಸ್ಕಿ (Volodymyr Zelensky) ಭೇಟಿಯಾಗಿದ್ದರು. ಇದೀಗ ಎರಡು ತಿಂಗಳ ಅಂತರದಲ್ಲಿ ಈ ನಾಯಕರು ಮತ್ತೊಮ್ಮೆ ಭೇಟಿಯಾಗಲಿದ್ದಾರೆ.

ಮೋದಿ ಅವರು ಆಗಸ್ಟ್ 23ರಂದು ಉಕ್ರೇನ್‌ಗೆ ಭೇಟಿ ನೀಡುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. ಮೋದಿ ಅವರು ಇತ್ತೀಚೆಗೆ ರಷ್ಯಾಕ್ಕೆ ಭೇಟಿ ನೀಡಿ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರೊಂದಿಗೆ ಮಾತಿಕತೆ ನಡೆಸಿದ್ದರು. ಅದಾಗಿ ಕೆಲವೇ ದಿನಗಳಲ್ಲಿ ಉಕ್ರೇನ್‌ ಪ್ರವಾಸ ಕೈಗೊಂಡಿರುವುದು ಕುತೂಹಲ ಮೂಡಿಸಿದೆ.

ಲೋಕಸಭಾ ಚುನಾವಣೆಯ ನಂತರ ಮೋದಿ ಮೂರನೇ ಅವಧಿಗೆ ಪ್ರದಾನಿಯಾಗಿ ಆಯ್ಕೆಯಾದ ದಿನದಂದು ಝೆಲೆನ್ಸ್ಕಿ ಕರೆ ಮಾಡಿ ಅಭಿನಂದಿಸಿದ್ದರು ಮತ್ತು ಯುದ್ಧ ಪೀಡಿತ ದೇಶಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿದ್ದರು. ಅದಕ್ಕೂ ಮೊದಲು ಮಾರ್ಚ್‌ನಲ್ಲಿ ಅಧ್ಯಕ್ಷ ಝೆಲೆನ್ಸ್ಕಿ ಅವರೊಂದಿಗಿನ ದೂರವಾಣಿ ಮೂಲಕ ಮಾತನಾಡಿದ್ದ ಮೋದಿ ಅವರು ಭಾರತ-ಉಕ್ರೇನ್ ಸಂಬಂಧಬನ್ನು ಇನ್ನಷ್ಟು ಬಲಪಡಿಸುವ ಮಾರ್ಗಗಳ ಬಗ್ಗೆ ಚರ್ಚೆ ನಡೆಸಿದ್ದರು. ರಷ್ಯಾ-ಉಕ್ರೇನ್‌ ಸಂಘರ್ಷದ ಪರಿಹಾರಕ್ಕಾಗಿ ಮಾತುಕತೆ ನಡೆಸುವಂತೆ ಕರೆ ನೀಡಿದ್ದರು.

ಎರಡು ಯುದ್ಧ ನಿಲ್ಲಿಸಲು ಭಾರತವು ತನ್ನ ಶಕ್ತಿಮೀರಿ ಕೆಲಸ ಮಾಡುವುದನ್ನು ಮುಂದುವರಿಸಲಿದೆ ಎಂದು ಪ್ರಧಾನಿ ಮೋದಿ ಪುನರುಚ್ಚರಿಸಿದ್ದಾರೆ. ಅದಕ್ಕೆ ಪೂರಕವಾಗಿ ಯುದ್ಧ ಪ್ರಾರಂಭವಾದಾಗಿನಿಂದ ಭಾರತವು ಇದನ್ನು ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಮಾತ್ರ ಪರಿಹರಿಸಬಹುದು ಎಂದು ತಿಳಿಸಿದೆ.

ರಷ್ಯಾ ಭೇಟಿ

ಈ ತಿಂಗಳ ಆರಂಭದಲ್ಲಿ ರಷ್ಯಾಕ್ಕೆ ಎರಡು ದಿನಗಳ ಭೇಟಿ ನೀಡಿದ್ದ ಮೋದಿ ಪರಮಾಣು ಶಕ್ತಿ ಮತ್ತು ಹಡಗು ನಿರ್ಮಾಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಹಕಾರವನ್ನು ಹೆಚ್ಚಿಸುವ ಬಗ್ಗೆ ಮಾತುಕತೆ ನಡೆಸಿದ್ದರು. ರಷ್ಯಾ ಮತ್ತು ಭಾರತದ ನಡುವಿನ ಸಹಕಾರಕ್ಕಾಗಿ ಸ್ಪಷ್ಟ ಚೌಕಟ್ಟನ್ನು ನಿರ್ಮಿಸುವಲ್ಲಿ ಮೋದಿಯವರ ಕೊಡುಗೆಯನ್ನು ರಷ್ಯಾ ಅಧ್ಯಕ್ಷ ಪುಟಿನ್ ಶ್ಲಾಘಿಸಿದ್ದರು.

ಇದೇ ವೇಳೆ ಮೋದಿ ಅವರಿಗೆ 2019ರಲ್ಲಿ ಘೋಷಿಸಲಾಗಿದ್ದ ರಷ್ಯಾದ ಅತ್ಯುನ್ನತ ನಾಗರಿಕ ಗೌರವ ‘ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೊಸ್ಟಲ್ ದಿ ಫಸ್ಟ್ ಕಾಲ್’ ಪ್ರಶಸ್ತಿಯನ್ನು ಮಾಸ್ಕೋ ಕ್ರೆಮ್ಲಿನ್‌ನ ಸೇಂಟ್ ಕ್ಯಾಥರೀನ್ ಹಾಲ್ ನಲ್ಲಿ ಸಾಂಪ್ರದಾಯಿಕವಾಗಿ ಪ್ರದಾನ ಮಾಡಲಾಗಿತ್ತು. ವಿಶೇಷ ಕಾರ್ಯಕ್ರಮದಲ್ಲಿ ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಈ ಅತಿದೊಡ್ಡ ನಾಗರಿಕ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದರು. ರಷ್ಯಾ ಮತ್ತು ಭಾರತದ ನಡುವಿನ ವಿಶೇಷ ಕಾರ್ಯತಂತ್ರದ ಪಾಲುದಾರಿಕೆ ಮತ್ತು ಉಭಯ ದೇಶಗಳ ನಡುವಿನ ಸ್ನೇಹಪರ ಸಂಬಂಧಗಳ ಅಭಿವೃದ್ಧಿಗೆ ನೀಡಿದ ಕೊಡುಗೆಗಾಗಿ ಈ ಗೌರವವನ್ನು ಭಾರತದ ಪ್ರಧಾನಿಗೆ ನೀಡಲಾಯಿತು ಎಂದು ರಷ್ಯಾ ಹೇಳಿತ್ತು.

ಇದನ್ನೂ ಓದಿ: PM Modi Russia Visit : ಭಾರತ-ರಷ್ಯಾ ಇಂಧನ ಪಾಲುದಾರಿಕೆಯನ್ನು ಶ್ಲಾಘಿಸಿದ ಪ್ರಧಾನಿ ಮೋದಿ

Continue Reading
Advertisement
Delhi Floods
ಪ್ರಮುಖ ಸುದ್ದಿ2 hours ago

Delhi Floods: ದೆಹಲಿಯಲ್ಲಿ ಭಾರಿ ಮಳೆ; ಕೋಚಿಂಗ್‌ ಸೆಂಟರ್‌ಗೆ ನೀರು ನುಗ್ಗಿ ಇಬ್ಬರು ವಿದ್ಯಾರ್ಥಿನಿಯರ ಸಾವು!

Paris Olympics 2024
ಕ್ರೀಡೆ2 hours ago

Paris Olympics 2024 : ಭಾರತಕ್ಕೆ ಒಲಿಂಪಿಕ್ ಕ್ರೀಡಾಕೂಟ ತರುವ ದಿನ ದೂರವಿಲ್ಲ; ಇಂಡಿಯಾ ಹೌಸ್ ಉದ್ಘಾಟನೆಯಲ್ಲಿ ನೀತಾ ಅಂಬಾನಿ

Pervez Musharraf
ದೇಶ2 hours ago

Pervez Musharraf: ಭಾರತ ವಿರೋಧಿ ಪರ್ವೇಜ್‌ ಮುಷರ‍್ರಫ್‌ಗೆ ಕೇರಳ ಬ್ಯಾಂಕ್‌ ಗೌರವ; ಭುಗಿಲೆದ್ದ ವಿವಾದ

Paris Olympics 2024
ಪ್ರಮುಖ ಸುದ್ದಿ2 hours ago

Paris Olympics 2024 : ಷಟ್ಲರ್​ಗಳ ಪರಾಕ್ರಮ ಆರಂಭ; ಸಿಂಗಲ್ಸ್​ನಲ್ಲಿ ಲಕ್ಷ್ಯ ಸೇನ್​, ಡಬಲ್ಸ್​ನಲ್ಲಿ ಸಾತ್ವಿಕ್​- ಚಿರಾಗ್ ಜೋಡಿಗೆ ಗೆಲುವು

Paris Olympics 2024
ಪ್ರಮುಖ ಸುದ್ದಿ3 hours ago

Paris Olympics 2024 : ಭಾರತ ಹಾಕಿ ತಂಡದ ಶುಭಾರಂಭ; ನ್ಯೂಜಿಲ್ಯಾಂಡ್ ವಿರುದ್ಧ 3-2 ಗೋಲ್​ಗಳ ಗೆಲುವು

Tihar Jail
ದೇಶ3 hours ago

Tihar Jail: ತಿಹಾರ ಜೈಲಿನ 125 ಕೈದಿಗಳಿಗೆ ಎಚ್‌ಐವಿ ಪಾಸಿಟಿವ್‌; ಇವರು ‘ಬೇಲಿ’ ಹಾರಿದ್ದು ಎಲ್ಲಿ?

IND vs SL
ಪ್ರಮುಖ ಸುದ್ದಿ3 hours ago

IND vs SL : ಶ್ರೀಲಂಕಾ ವಿರುದ್ಧ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತಕ್ಕೆ 43 ರನ್​ ಭರ್ಜರಿ ಜಯ

Rishabh Pant
ಪ್ರಮುಖ ಸುದ್ದಿ3 hours ago

Rishabh Pant : ಧೋನಿಯಂತೆ ಭರ್ಜರಿ ಹೆಲಿಕಾಪ್ಟರ್​ ಶಾಟ್​​ ಮೂಲಕ ಸಿಕ್ಸರ್ ಬಾರಿಸಿದ ರಿಷಭ್ ಪಂತ್​

Puneeth Kerehalli
ಕರ್ನಾಟಕ4 hours ago

Puneeth Kerehalli: ಪುನೀತ್‌ ಕೆರೆಹಳ್ಳಿಗೆ ನ್ಯಾಯಾಂಗ ಬಂಧನ; 14 ದಿನ ಪರಪ್ಪನ ಅಗ್ರಹಾರವೇ ಗತಿ!

Mumbai Girl
ದೇಶ4 hours ago

ಬಾರೆ ಸಖಿ ಎಂದು 20 ವರ್ಷದ ಯುವತಿಯನ್ನು ಕರೆದುಕೊಂಡು ಹೋದ, ಕೊಂದು ಪೊದೆಯಲ್ಲಿ ಬಿಸಾಡಿದ; ಕೃತ್ಯಕ್ಕೆ ಕಾರಣವೇನು?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ7 hours ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ12 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ13 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ1 day ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ1 day ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ1 day ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ1 day ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್3 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ3 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

ಟ್ರೆಂಡಿಂಗ್‌