ಅಪಘಾತದಲ್ಲಿ ತಂದೆ-ತಾಯಿ ಸಾವು, ಅನಾಥ ಹೆಣ್ಣು ಮಕ್ಕಳಿಗೆ ಪೊಲೀಸರ ನೆರವು - Vistara News

ಬೆಂಗಳೂರು

ಅಪಘಾತದಲ್ಲಿ ತಂದೆ-ತಾಯಿ ಸಾವು, ಅನಾಥ ಹೆಣ್ಣು ಮಕ್ಕಳಿಗೆ ಪೊಲೀಸರ ನೆರವು

ಬಿಲ್ ಕಟ್ಟಿ ಮೃತದೇಹ ಪಡೆದುಕೊಳ್ಳುವಂತೆ ಖಾಸಗಿ ಆಸ್ಪತ್ರೆಯವರು ಹೇಳಿದ್ದರು. ಈ ವೇಳೆ ಬ್ಯಾಟಯಪುರ ಸಂಚಾರ ಪೊಲೀಸರು ಮಧ್ಯಪ್ರವೇಶಿಸಿ ನೆರವು ನೀಡಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ತಂದೆ-ತಾಯಿಯನ್ನು ಕಳೆದುಕೊಂಡು ಅನಾಥರಾಗಿದ್ದ ಹೆಣ್ಣು ಮಕ್ಕಳ ನೆರವಿಗೆ ನಿಂತ ಟ್ರಾಫಿಕ್ ವಿಭಾಗದ ಡಿಸಿಪಿ ಮತ್ತು ಇನ್ಸ್‌ಪೆಕ್ಟರ್ ಇತರರಿಗೆ ಮಾದರಿಯಾಗಿದ್ದಾರೆ.

ನಾಗರಬಾವಿ ಸರ್ಕಲ್ ಬಳಿ ಜು. 9ರಂದು ಬೈಕ್‍ನಲ್ಲಿ ಹೋಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ವಿಜಯಕಲಾ ಎಂಬ ಮಹಿಳೆ ಮೃತಪಟ್ಟಿದರು. ಗುರುವಾರ ಅವರ ಪತಿ ಯೋಗೇಂದ್ರ ಕೂಡ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅಪ್ಪ-ಅಮ್ಮನನ್ನು ಕಳೆದುಕೊಂಡು ಕಂಗಾಲಾಗಿದ್ದ ಇಬ್ಬರು ಹೆಣ್ಣು ಮಕ್ಕಳಿಗೆ ಬ್ಯಾಟರಾಯನಪುರ ಮಹಿಳಾ ಇನ್ಸ್ ಪೆಕ್ಟರ್ ರೂಪಾ ಹಡಗಲಿ ನೆರವಾಗಿದ್ದಾರೆ.

ಯೋಗೇಂದ್ರರನ್ನು ನಾಗರಬಾವಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ 5 ಲಕ್ಷ 72 ಸಾವಿರ ರೂ. ಬಿಲ್ ಆಗಿತ್ತು. ಆದರೆ ಪೊಷಕರನ್ನ ಕಳೆದುಕೊಂಡು ಅನಾಥರಾಗಿದ್ದ ಹೆಣ್ಣು ಮಕ್ಕಳಿಬ್ಬರು ಈ ಬಿಲ್‌ ಕಟ್ಟಲು ಸಾಧ್ಯ ಇರಲಿಲ್ಲ. ಸಂಬಂಧಿಕರ ಬಳಿಯೂ ಅಷ್ಟು ಹಣವಿಲ್ಲದೆ ಪರದಾಡುತ್ತಿದ್ದರು.

ಈ ವೇಳೆ ಪಶ್ಚಿಮ ಸಂಚಾರ ವಿಭಾಗ ಡಿಸಿಪಿ ಕುಲ್‌ದೀಪ್ ಜೈನ್ ಅವರು ಬ್ಯಾಟಯಪುರ ಸಂಚಾರ ಇನ್ಸ್ ಪೆಕ್ಟರ್ ರೂಪ ಹಡಗಲಿಗೆ ಈ ಬಗ್ಗೆ ತಿಳಿಸಿ ನೆರವು ನೀಡುವಂತೆ ಸೂಚಿಸಿದ್ದರು. ರೂಪ ಅವರು ಆಸ್ಪತ್ರೆಗೆ ಭೇಟಿ ನೀಡಿ, ಆಸ್ಪತ್ರೆ ಆಡಳಿತ ಮಂಡಳಿ ಜತೆ ಮಾತನಾಡಿ ಬಿಲ್ ಮೊತ್ತ ಕ್ಲಿಯರ್‌ ಮಾಡಿದ್ದಾರೆ. ರೂಪ ಅವರ ಕೆಲಸಕ್ಕೆ ಪ್ರಶಂಸೆ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ| ಸಾವಿನಲ್ಲೂ ಒಂದಾದ ವೃದ್ಧ ದಂಪತಿ, ಪತಿಯನ್ನೇ ಅನುಸರಿಸಿದ ಪತ್ನಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Petrol Diesel Price: ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಖಂಡಿಸಿ ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

Petrol Diesel Price: ರಾಜ್ಯದಲ್ಲಿ ಬೆಲೆ ಏರಿಕೆಯನ್ನು ಅಸ್ತ್ರ ಮಾಡಿಕೊಂಡು ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಸರ್ಕಾರಕ್ಕೆ ಈಗ ಬೆಲೆ ಏರಿಕೆಯೇ ಸಂಕಷ್ಟ ತಂದಿದೆ. ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಖಂಡಿಸಿ ಜೂನ್‌ 17ರಂದು ರಾಜ್ಯವ್ಯಾಪಿ ಪ್ರತಿಭಟನೆಗೆ ಬಿಜೆಪಿ ಮುಂದಾಗಿದೆ.

VISTARANEWS.COM


on

Petrol Diesel Price
Koo

ಬೆಂಗಳೂರು: ಪೆಟ್ರೋಲ್, ಡೀಸೆಲ್ ದರ ಹೆಚ್ಚಳ (Petrol Diesel Price) ಖಂಡಿಸಿ ಜೂನ್‌ 17ರಂದು ಬೆಂಗಳೂರು ಸೇರಿ ರಾಜ್ಯಾದ್ಯಂತ ಪ್ರತಿಭಟನೆ (BJP Protest) ನಡೆಸಲು ಬಿಜೆಪಿ ತೀರ್ಮಾನಿಸಿದೆ. ನಗರದ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ,‌ ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.

ಕಾಂಗ್ರೆಸ್ ಸರ್ಕಾರ ಜನವಿರೋಧಿ ನೀತಿಗಳನ್ನು ಜಾರಿ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸುತ್ತಿತ್ತು. ಆದರೆ, ಇದೀಗ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ (Petrol, Diesel Price Hike) ಮೂಲಕ ವಿಪಕ್ಷಗಳ ಕೈಗೆ ರಾಜ್ಯ ಸರ್ಕಾರ ಅಸ್ತ್ರ ಕೊಟ್ಟಿದೆ. ರಾಜ್ಯದಲ್ಲಿ ಬೆಲೆ ಏರಿಕೆಯನ್ನು ಅಸ್ತ್ರ ಮಾಡಿಕೊಂಡು ಅಧಿಕಾರಕ್ಕೆ ಬಂದ ಕೈ ಸರ್ಕಾರಕ್ಕೆ ಈಗ ಬೆಲೆ ಏರಿಕೆಯೇ ಸಂಕಷ್ಟ ತಂದಿದೆ.

ಪೆಟ್ರೋಲ್ ಬೆಲೆ 3 ರೂಪಾಯಿ, ಡೀಸೆಲ್‌ ಬೆಲೆ ಮೂರೂವರೆ ರೂಪಾಯಿ ಏರಿಕೆ ಮಾಡಿರುವುದಕ್ಕೆ ಆಕ್ರೋಶ ಹೊರಹಾಕಿರುವ ಬಿಜೆಪಿ ನಾಯಕರು, ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಬೆಲೆ ಏರಿಕೆಯನ್ನು ಸದನದ ಒಳಗೂ ಮತ್ತು ಹೊರಗೆ ಸರ್ಕಾರದ ವಿರುದ್ಧ ಪ್ರಮುಖ ಅಸ್ತ್ರ ಮಾಡಿಕೊಳ್ಳಲು ಬಿಜೆಪಿ ಮುಂದಾಗಿದ್ದು, ಹೋರಾಟದ ಮೂಲಕ ಸರ್ಕಾರದ ವಿರುದ್ಧ ಜನಾಭಿಪ್ರಾಯ ಮೂಡಿಸಲು ಪ್ಲ್ಯಾನ್ ಮಾಡಿದೆ.

ಇದನ್ನೂ ಓದಿ | Petrol Diesel Price: ಪೆಟ್ರೋಲ್ ದರ ಹೆಚ್ಚಳ ಆದೇಶ‌ ವಾಪಸ್ ಪಡೆಯದಿದ್ದರೆ ಉಗ್ರ ಪ್ರತಿಭಟನೆ: ವಿಜಯೇಂದ್ರ ಎಚ್ಚರಿಕೆ

ಕಾಂಗ್ರೆಸ್‌ ಸರ್ಕಾರ ಬೆಲೆ ಏರಿಕೆ‌ ಭಾಗ್ಯ ನೀಡಿದೆ: ಅಶೋಕ್

ಬೆಲೆ ಏರಿಕೆ ಖಂಡಿಸಿ ವಿಪಕ್ಷ ನಾಯಕ ಆರ್‌.ಅಶೋಕ್‌ ಅವರು ಭಾನುವಾರ ಸುದ್ದಿಗೋಷ್ಠಿ ನಡೆಸಿದರು. ಪೆಟ್ರೋಲ್ ದರ ಹೆಚ್ಚಳವಾದಾಗ ಕಾಂಗ್ರೆಸ್‌ನಿಂದ ಪ್ರತಿಭಟನೆ ಮಾಡಲಾಗಿತ್ತು ಎಂದು ಹೇಳಿದ ಅವರು, ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರು ಬೈಕ್ ಶವಯಾತ್ರೆ ಮಾಡಿದ್ದ ಫೋಟೊ ರಿಲೀಸ್ ಮಾಡಿದರು. ಇದೇ ವೇಳೆ ಸಿದ್ದರಾಮಯ್ಯ ಟ್ವೀಟ್ ಅನ್ನು ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಬಿಡುಗಡೆ ಮಾಡಿದರು.

ನಾವು ಅಧಿಕಾರಕ್ಕೆ ಬಂದರೆ ಗೊಬ್ಬರ ಬೆಲೆ, ಗ್ಯಾಸ್, ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಮಾಡುವುದಾಗಿ ಹೇಳಿದ್ದ ಸಿದ್ದರಾಮಯ್ಯ ಅವರ ವೀಡಿಯೊವನ್ನು ಬಿಡುಗಡೆ ಮಾಡಿ ಕಿಡಿ ಕಾರಿದ ಅಶೋಕ್‌ ಅವರು, ಕಾಂಗ್ರೆಸ್ ಸರ್ಕಾರ ಬಂದ ಒಂದು ವರ್ಷದಲ್ಲಿ ಎಲ್ಲಾ ಬೆಲೆ ಏರಿಕೆ‌ ಭಾಗ್ಯ ನೀಡಿದೆ. ಹಾಲು, ಆಲ್ಕೋಹಾಲ್, ಸ್ಟ್ಯಾಂಪ್ ಡ್ಯೂಟಿ, ಗೈಡೆನ್ಸ್ ವ್ಯಾಲ್ಯೂ, ಆಸ್ತಿ ತೆರಿಗೆ, ಎಲೆಕ್ಟ್ರಿಕ್‌ ಬಿಲ್ ಜಾಸ್ತಿ ಮಾಡಿದ್ದಾರೆ. ವರ್ಷಕ್ಕೆ ಮೂರು ಸಾವಿರ ಕೋಟಿ ಹೆಚ್ಚುವರಿ ತೆರಿಗೆ ಸಂಗ್ರಹಕ್ಕೆ ರಾಜ್ಯಾ ಸರ್ಕಾರ ದರೋಡೆಗೆ ಮುಂದಾಗಿದೆ. ಬಿಜೆಪಿ ಅವಧಿಯಲ್ಲಿ ಒಂದು ರೂಪಾಯಿ ದರ ಹೆಚ್ಚಳ ಆಗಿದ್ದಕ್ಕೆ ಬೈಕ್ ಶವಯಾತ್ರೆ ಮಾಡಿದ್ದರು. ಈಗ ದರ ಹೆಚ್ಚಳ ಮಾಡಿರುವ ಸಿದ್ದರಾಮಯ್ಯ ಅವರೇ ನಿಮಗೆ ಮಾನ ಮರ್ಯಾದೆ ಇದೆಯಾ ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ. ಮತದಾರ ಪ್ರಭುಗಳು ಮತದಾನ ಮಾಡಿಲ್ಲ ಅಂತ ದ್ವೇಷ ಮಾಡುತ್ತಿದ್ದಾರೆ. ಈ ಹಿಂದೆ ನಮ್ಮ‌ ಸರ್ಕಾರ ದರ ಹೆಚ್ಚಳ‌ ಆದಾಗ ತೆರಿಗೆ ಕಡಿಮೆ ಮಾಡಿತ್ತು. ನೀವೂ ಕೂಡ ದರ ಕಡಿಮೆ ಮಾಡಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ | Mallikarjun Kharge: ಶೀಘ್ರವೇ ಮೋದಿ ಸರ್ಕಾರ ಪತನ; ಭವಿಷ್ಯ ನುಡಿದ ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದ ಆರ್ಥಿಕ ಪರಿಸ್ಥಿತಿ ಪಾತಾಳಕ್ಕೆ ಹೋಗಿದೆ. ಬಿಡಿಎ ಕಮರ್ಷಿಯಲ್ ಕಾಂಪ್ಲೆಕ್ಸ್ ಮೂಲಕ ಆದಾಯ ಬರಲು‌ ಕಾಂಪ್ಲೆಕ್ಸ್ ಕಟ್ಟಿದರು. ಅದನ್ನೂ ಮಾರಾಟ ಮಾಡಲು ಹೊರಟಿದ್ದಾರೆ. ಕಮುಷನ್ ಹೊಡೆಯಲು ದುಡ್ಡಿಲ್ಲ. ಬಿಬಿಎಂಪಿಗೆ ನಾಲ್ಕು ಸಾವಿರ ಕೋಟಿ ಸಾಲ ಮಾಡುತ್ತಿದ್ದಾರೆ. ಕಾರ್ಪೊರೇಷನ್ ಬಿಲ್ಡಿಂಗ್, ಯುಟಿಲಿಟಿ ಬಿಲ್ಡಿಂಗ್, ವಾರ್ಡ್ ಆಫಿಸ್ ಅಡ ಇಡಲು ನೀಲಿ ನಕ್ಷೆ ತಯಾರು ಮಾಡುತ್ತಿದ್ದಾರೆ. ವರ್ಲ್ಡ್ ಬ್ಯಾಂಕ್ ಅಥವಾ ನ್ಯಾಷನಲ್ ಬ್ಯಾಂಕಿಗೆ ಅಡ ಇಡಲು ಮುಂದಾಗಿದ್ದಾರೆ ಎಂದು ಆರೋಪಿಸಿದರು.

Continue Reading

ಕರ್ನಾಟಕ

R Ashok:‌ ದುಡ್ಡಿಗಾಗಿ ಕಾರ್ಪೊರೇಷನ್‌, ಯುಟಿಲಿಟಿ ಬಿಲ್ಡಿಂಗ್‌ ಅಡ ಇಡಲು ಸಿದ್ದರಾಮಯ್ಯ ಪ್ಲಾನ್; ಅಶೋಕ್‌ ಆರೋಪ

R Ashok: ಸಿದ್ದರಾಮಯ್ಯ ಅವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ನಿರೀಕ್ಷಿತ ಫಲಿತಾಂಶ ಬಂದಿಲ್ಲ ಎಂದು ರಾಜ್ಯದ ಜನರ ಮೇಲೆ ದ್ವೇಷ ಕಾರುತ್ತಿದ್ದಾರೆ. ಇದೇ ಕಾರಣಕ್ಕಾಗಿ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಏರಿಕೆ ಮಾಡಿದ್ದಾರೆ. ಬಿಜೆಪಿ ಸರ್ಕಾರ ಇದ್ದಾಗ ನಾವು ತೆರಿಗೆ ಕಡಿಮೆ ಮಾಡಿದ್ದೆವು. ನಮ್ಮ ತೆರಿಗೆ, ನಮ್ಮ ಹಕ್ಕು ಎಂದೆಲ್ಲ ಹಾರಾಡಿದ ಕಾಂಗ್ರೆಸ್‌ ಈಗ ಬೆಲೆಯೇರಿಕೆ ಮಾಡಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್‌ ಟೀಕಿಸಿದ್ದಾರೆ.

VISTARANEWS.COM


on

R Ashok
Koo

ಬೆಂಗಳೂರು: ರಾಜ್ಯದಲ್ಲಿ ಒಂದು ಲೀಟರ್‌ ಪೆಟ್ರೋಲ್‌ಗೆ 3 ರೂ. ಹಾಗೂ ಡೀಸೆಲ್‌ಗೆ 3.5 ರೂ. ಏರಿಕೆ (Petrol Diesel Price Hike) ಮಾಡಿ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರದ (Karnataka Government) ವಿರುದ್ಧ ಬಿಜೆಪಿಯು ಬೆಲೆಯೇರಿಕೆ ಅಸ್ತ್ರ ಪ್ರಯೋಗಿಸುತ್ತಿದೆ. ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲಿನ ಮಾರಾಟ ತೆರಿಗೆ ಹೆಚ್ಚಿಸಿದ ರಾಜ್ಯ ಸರ್ಕಾರದ ವಿರುದ್ಧ ಸೋಮವಾರ (ಜೂನ್‌ 17) ಬೆಂಗಳೂರು ಸೇರಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ಮಾಡಲು ಮುಂದಾಗಿದೆ. ಪ್ರತಿಭಟನೆ ಕುರಿತು ಸುದ್ದಿಗೋಷ್ಠಿ ನಡೆಸಿದ ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ (R Ashok), ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ರಾಜ್ಯ ಸರ್ಕಾರವು ದಿವಾಳಿಯಾಗಿದ್ದು, ಸಿದ್ದರಾಮಯ್ಯ ಅವರು ವಿಫಲರಾಗಿದ್ದಾರೆ. ಪೆಟ್ರೋಲ್‌ ಬೆಲೆಯೇರಿಕೆ ಮಾಡಿರುವ ರಾಜ್ಯ ಸರ್ಕಾರವು, ಹಣಕ್ಕಾಗಿ ಕಾರ್ಪೊರೇಷನ್‌ ಹಾಗೂ ಯುಟಿಲಿಟಿ ಬಿಲ್ಡಿಂಗ್‌ಅನ್ನು ಅಡಮಾನ ಇಡಲು ಸಜ್ಜಾಗಿದೆ” ಎಂದು ಆರೋಪಿಸಿದರು.

“ಸಿದ್ದರಾಮಯ್ಯ ಅವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ನಿರೀಕ್ಷಿತ ಫಲಿತಾಂಶ ಬಂದಿಲ್ಲ ಎಂದು ರಾಜ್ಯದ ಜನರ ಮೇಲೆ ದ್ವೇಷ ಕಾರುತ್ತಿದ್ದಾರೆ. ಇದೇ ಕಾರಣಕ್ಕಾಗಿ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಏರಿಕೆ ಮಾಡಿದ್ದಾರೆ. ಬಿಜೆಪಿ ಸರ್ಕಾರ ಇದ್ದಾಗ ನಾವು ತೆರಿಗೆ ಕಡಿಮೆ ಮಾಡಿದ್ದೆವು. ನಮ್ಮ ತೆರಿಗೆ, ನಮ್ಮ ಹಕ್ಕು ಎಂದೆಲ್ಲ ಹಾರಾಡಿದ ಕಾಂಗ್ರೆಸ್‌ ಈಗ ಬೆಲೆಯೇರಿಕೆ ಮಾಡಿದೆ. ಕರ್ನಾಟಕದ ಆರ್ಥಿಕ ಸ್ಥಿತಿ ಪಾತಾಳಕ್ಕೆ ಹೋಗಿರುವ ಕಾರಣ ಸಿದ್ದರಾಮಯ್ಯ ಅವರು ಜನರಿಗೆ ಬೆಲೆಯೇರಿಕೆಯ ಬರೆ ಎಳೆಯಲು ಮುಂದಾಗಿದ್ದಾರೆ” ಎಂಬುದಾಗಿ ಆರ್.‌ ಅಶೋಕ್‌ ಅಸಮಾಧಾನ ವ್ಯಕ್ತಪಡಿಸಿದರು.

ಸಂಬಳ ಕೊಡಲೂ ದುಡ್ಡಿಲ್ಲ

“ಮುಂದಿನ ತಿಂಗಳು ಸರ್ಕಾರಿ ನೌಕರರಿಗೆ ಸಂಬಳ ಕೊಡಲೂ ಸರ್ಕಾರದ ಬಳಿ ದುಡ್ಡಿಲ್ಲ ಎಂಬ ಕಾರಣಕ್ಕಾಗಿ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಏರಿಕೆ ಮಾಡಲಾಗಿದೆ. ಆದಾಯ ಬರುವಂತಾಗಲಿ ಎಂದು ಬಿಡಿಎ ಕಮರ್ಷಿಯಲ್‌ ಕಾಂಪ್ಲೆಕ್ಸ್‌ ಕಟ್ಟಿಸಲಾಯಿತು. ಆದರೆ, ಸಿದ್ದರಾಮಯ್ಯ ಅವರು ಅದನ್ನು ಮಾರಾಟ ಮಾಡಲು ಮುಂದಾಗಿದ್ದಾರೆ. ಕಾಂಗ್ರೆಸ್‌ನವರಿಗೆ ಕಮಿಷನ್‌ ಹೊಡೆಯಲು ಆಗುತ್ತಿಲ್ಲ. ಬಿಬಿಎಂಪಿಗೆ 4 ಸಾವಿರ ಕೋಟಿ ರೂ. ಸಾಲ ಮಾಡಿದ್ದಾರೆ. ಕಾರ್ಪೊರೇಷನ್‌ ಬಿಲ್ಡಿಂಗ್‌, ಯುಟಿಲಿಟಿ ಬಿಲ್ಡಿಂಗ್‌, ವಾರ್ಡ್‌ ಆಫೀಸ್‌ಗಳನ್ನು ಕೂಡ ಅಡ ಇಡಲು ಇವರು ನೀಲಿನಕ್ಷೆ ತಯಾರಿಸಿದ್ದಾರೆ. ವಿಶ್ವಬ್ಯಾಂಕ್‌ ಅಥವಾ ನ್ಯಾಷನಲ್‌ ಬ್ಯಾಂಕ್‌ಗೆ ಅಡ ಇಡಲು ಯೋಜನೆ ರೂಪಿಸುತ್ತಿದ್ದಾರೆ” ಎಂದು ಪ್ರತಿಪಕ್ಷ ನಾಯಕ ಆರೋಪಿಸಿದರು.

ನಾಳೆ ಸರ್ಕಾರದ ವಿರುದ್ಧ ಪ್ರತಿಭಟನೆ

“ಬೆಲೆಯೇರಿಕೆ ಮೂಲಕ ರಾಜ್ಯದ ಜನರ ದುಡಿಮೆಯ ಹಣವನ್ನು ಕೊಳ್ಳೆ ಹೊಡೆಯಲು ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ಧ ಸೋಮವಾರ (ಜೂನ್‌ 17) ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಗತ್ತದೆ. ನನ್ನ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಬೆಳಗ್ಗೆ 11.30ಕ್ಕೆ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸುತ್ತೇವೆ” ಎಂದು ತಿಳಿಸಿದರು.

ಇದನ್ನೂ ಓದಿ: Petrol Diesel Price: ಪೆಟ್ರೋಲ್ ದರ ಹೆಚ್ಚಳ ಆದೇಶ‌ ವಾಪಸ್ ಪಡೆಯದಿದ್ದರೆ ಉಗ್ರ ಪ್ರತಿಭಟನೆ: ವಿಜಯೇಂದ್ರ ಎಚ್ಚರಿಕೆ

Continue Reading

ಚಿನ್ನದ ದರ

Gold Rate Today: ವೀಕೆಂಡ್‌ನಲ್ಲಿ ಚಿನ್ನ ಖರೀದಿಸುವವರಿಗೆ ಗುಡ್‌ ನ್ಯೂಸ್;‌ ಇಂದು ಏರಿಕೆಯಾಗದ ಬೆಲೆ

Gold Rate Today: ಶನಿವಾರ ಒಂದೇ ದಿನ ಗ್ರಾಂ ಚಿನ್ನದ ಬೆಲೆಯು 67 ರೂಪಾಯಿ ಜಾಸ್ತಿಯಾಗಿದ್ದು ಗ್ರಾಹಕರಲ್ಲಿ ಆತಂಕ ಮೂಡಿಸಿತ್ತು. ಭಾನುವಾರ ಇನ್ನಷ್ಟು ಏರಿಕೆಯಾಗುವ ಭೀತಿ ಇತ್ತು. ಕಳೆದ 10 ದಿನಗಳಲ್ಲಿ ಚಿನ್ನದ ಬೆಲೆಯು ನಾಲ್ಕು ಬಾರಿ ಏರಿಕೆ ಕಂಡರೆ, ಎರಡು ಬಾರಿ ಮಾತ್ರ ಇಳಿಕೆ ಕಂಡಿತ್ತು. ಭಾನುವಾರ ಬೆಳ್ಳಿಯ ಬೆಲೆಯಲ್ಲೂ ಯಾವುದೇ ವ್ಯತ್ಯಾಸ ಆಗಿಲ್ಲ. ಬೆಂಗಳೂರಿನಲ್ಲಿ ಇಂದು ಒಂದು ಗ್ರಾಂ ಬೆಳ್ಳಿಯ ಬೆಲೆಯು 90.30 ರೂ. ಇದೆ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಶನಿವಾರ (ಜೂನ್‌ 15) ಏರಿಕೆ ಕಂಡಿದ್ದ ಚಿನ್ನದ ಬೆಲೆಯು ಭಾನುವಾರ (ಜೂನ್‌ 16) ಯಥಾಸ್ಥಿತಿ ಕಾಯ್ದುಕೊಂಡಿರುವುದು ಗ್ರಾಹಕರಿಗೆ ತುಸು ರಿಲೀಫ್‌ ತಂದಿದೆ. ಬೆಂಗಳೂರಿನಲ್ಲಿ ಇಂದು (Gold Rate Today) 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು 6,650 ರೂ. ಇದ್ದರೆ, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು 7,255 ರೂ. ಇದೆ. ಚಿನ್ನದ ಬೆಲೆ ಏರಿಕೆ ಕಾಣದ ಹಿನ್ನೆಲೆಯಲ್ಲಿ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಭಾನುವಾರ ಚಿನ್ನ ಖರೀದಿಗೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

ಶನಿವಾರ ಒಂದೇ ದಿನ ಗ್ರಾಂ ಚಿನ್ನದ ಬೆಲೆಯು 67 ರೂಪಾಯಿ ಜಾಸ್ತಿಯಾಗಿದ್ದು ಗ್ರಾಹಕರಲ್ಲಿ ಆತಂಕ ಮೂಡಿಸಿತ್ತು. ಭಾನುವಾರ ಇನ್ನಷ್ಟು ಏರಿಕೆಯಾಗುವ ಭೀತಿ ಇತ್ತು. ಕಳೆದ 10 ದಿನಗಳಲ್ಲಿ ಚಿನ್ನದ ಬೆಲೆಯು ನಾಲ್ಕು ಬಾರಿ ಏರಿಕೆ ಕಂಡರೆ, ಎರಡು ಬಾರಿ ಮಾತ್ರ ಇಳಿಕೆ ಕಂಡಿತ್ತು. ಇನ್ನು ನಾಲ್ಕು ಬಾರಿ ಚಿನ್ನದ ಬೆಲೆಯಲ್ಲಿ ಯಾವುದೇ ವ್ಯತ್ಯಾಸ ಆಗಿರಲಿಲ್ಲ. ಭಾನುವಾರ ಬೆಳ್ಳಿಯ ಬೆಲೆಯಲ್ಲೂ ಯಾವುದೇ ವ್ಯತ್ಯಾಸ ಆಗಿಲ್ಲ. ಬೆಂಗಳೂರಿನಲ್ಲಿ ಇಂದು ಒಂದು ಗ್ರಾಂ ಬೆಳ್ಳಿಯ ಬೆಲೆಯು 90.30 ರೂ. ಇದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,665 ₹ 7,270
ಮುಂಬೈ₹ 6,650 ₹ 7,255
ಬೆಂಗಳೂರು₹ 6,650₹ 7,255
ಚೆನ್ನೈ₹ 6,705 ₹ 7,315

ಚಿನ್ನದ ದರದ ಮೇಲೆ ಪರಿಣಾಮ ಬೀರುವ ಅಂಶಗಳು

ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.

ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

Gold Rate Today

ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.

ಇದನ್ನೂ ಓದಿ: Gold Heist: ಜ್ಯುವೆಲರಿ ಶಾಪ್‌ಗೆ ನುಗ್ಗಿ ಚಿನ್ನ ಕದ್ದ 20 ಕಳ್ಳರು; ಸಿನಿಮಾ ಸ್ಟೈಲಲ್ಲೇ ದರೋಡೆ ಮಾಡಿದ ವಿಡಿಯೊ ಇಲ್ಲಿದೆ!

Continue Reading

ಕರ್ನಾಟಕ

Bahaddur Movie: ಹತ್ತು ವರ್ಷಗಳ ನಂತರ ಬೆಳ್ಳಿತೆರೆಯ ಮೇಲೆ ಮತ್ತೆ “ಬಹದ್ದೂರ್”!

Bahaddur Movie: ಆರ್.ಎಸ್. ಪ್ರೊಡಕ್ಷನ್ಸ್ ಲಾಂಛನದಲ್ಲಿ ಆರ್. ಶ್ರೀನಿವಾಸ್ ಹಾಗೂ ಕೆ.ಪಿ.ಶ್ರೀಕಾಂತ್ ನಿರ್ಮಿಸಿರುವ, ಚೇತನ್ ಕುಮಾರ್ ನಿರ್ದೇಶನದ ಹಾಗೂ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಾಯಕ ಹಾಗೂ ರಾಧಿಕಾ‌ ಪಂಡಿತ್ ನಾಯಕಿಯಾಗಿ ನಟಿಸಿದ್ದ ಸೂಪರ್ ಹಿಟ್ “ಬಹದ್ದೂರ್” ಚಿತ್ರ, ಈಗ 10 ವರ್ಷಗಳ ನಂತರ ಜೂನ್ 21 ರಂದು ಈ ಚಿತ್ರ ಮರು ಬಿಡುಗಡೆಯಾಗುತ್ತಿದೆ.

VISTARANEWS.COM


on

Bahaddur movie is re released on June 21
Koo

ಬೆಂಗಳೂರು: ಆರ್.ಎಸ್. ಪ್ರೊಡಕ್ಷನ್ಸ್ ಲಾಂಛನದಲ್ಲಿ ಆರ್. ಶ್ರೀನಿವಾಸ್ ಹಾಗೂ ಕೆ.ಪಿ. ಶ್ರೀಕಾಂತ್ ನಿರ್ಮಿಸಿರುವ, ಚೇತನ್ ಕುಮಾರ್ ನಿರ್ದೇಶನದ ಹಾಗೂ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಾಯಕ ಹಾಗೂ ರಾಧಿಕಾ‌ ಪಂಡಿತ್ ನಾಯಕಿಯಾಗಿ ನಟಿಸಿದ್ದ ಸೂಪರ್ ಹಿಟ್ “ಬಹದ್ದೂರ್” ಚಿತ್ರ 2014 ರಲ್ಲಿ ಬಿಡುಗಡೆಯಾಗಿ ಭರ್ಜರಿ ಯಶಸ್ಸು ಕಂಡಿತ್ತು. ಈಗ ಹತ್ತು ವರ್ಷಗಳ ನಂತರ ಜೂನ್ 21 ರಂದು ಈ ಚಿತ್ರ (Bahaddur Movie) ಮರು ಬಿಡುಗಡೆಯಾಗುತ್ತಿದ್ದು, ಗೋಕುಲ್ ಫಿಲಂಸ್ ಅವರು ಅದ್ದೂರಿಯಾಗಿ ಅನೇಕ ಚಿತ್ರಮಂದಿರಗಳಲ್ಲಿ ಚಿತ್ರವನ್ನು ರೀ ರಿಲೀಸ್ ಮಾಡುತ್ತಿದ್ದಾರೆ.

“ಬಹದ್ದೂರ್” ಚಿತ್ರಕ್ಕೆ ಪುನೀತ್ ರಾಜಕುಮಾರ್ ಅವರು ಧ್ವನಿ ನೀಡಿದ್ದರು.‌ ಪುನೀತ್ ಅವರು ತಮ್ಮ ಅಭಿನಯದ ಚಿತ್ರವನ್ನು ಹೊರತುಪಡಿಸಿ ಧ್ವನಿ ನೀಡಿದ ಮೊದಲ ಚಿತ್ರ “ಬಹದ್ದೂರ್”. ಚಿತ್ರದ ಮೊದಲ ಸನ್ನಿವೇಶಕ್ಕೆ ರವಿಚಂದ್ರನ್ ಅವರು ಕ್ಲ್ಯಾಪ್ ಮಾಡಿ ಹಾರೈಸಿದ್ದರು.

ಇದನ್ನೂ ಓದಿ: Job Alert: ಗುಡ್‌ನ್ಯೂಸ್‌: ಬ್ಯಾಂಕ್‌ ಆಫ್‌ ಬರೋಡಾದಲ್ಲಿದೆ 627 ಹುದ್ದೆ; ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

ಪುನೀತ್ ರಾಜಕುಮಾರ್ ಅವರೇ ಕ್ಯಾಮೆರಾ ಚಾಲನೆ ಮಾಡಿ ಶುಭ ಕೋರಿದ್ದರು. ವಿ.ಹರಿಕೃಷ್ಣ ಅವರ ಸಂಗೀತದಲ್ಲಿ ಮೂಡಿಬಂದ ಹಾಡುಗಳು ಇಂದಿಗೂ‌ ಜನಪ್ರಿಯ. “ಬಹದ್ದೂರ್ ” ಬಿಡುಗಡೆಯಾದ ಹತ್ತು ವರ್ಷಗಳಲ್ಲಿ ನೂರಾರೂ ಸಲ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಿದೆ.

ಇದನ್ನೂ ಓದಿ: T20 World Cup 2024 Super 8: ಸೂಪರ್​-8 ಪಂದ್ಯಗಳ ವೇಳಾಪಟ್ಟಿ ಪ್ರಕಟ; ಭಾರತಕ್ಕೆ ಆಫ್ಘಾನ್​ ಮೊದಲ ಎದುರಾಳಿ

ಈ ಚಿತ್ರ ಪ್ರಸಾರವಾದಗಲೆಲ್ಲ ಉತ್ತಮ ಟಿ.ಆರ್.ಪಿ ಬರುತ್ತಿರುವುದು ವಿಶೇಷ. ಧ್ರುವ ಸರ್ಜಾ ಹಾಗೂ ರಾಧಿಕಾ ಪಂಡಿತ್ ಅವರ ಅದ್ಭುತ ಅಭಿನಯ ಈ ಚಿತ್ರದ ಹೈಲೆಟ್. ಇದು ಧ್ರುವ ಸರ್ಜಾ ಅಭಿನಯದ ಎರಡನೇ ಚಿತ್ರ. ಹತ್ತು ವರ್ಷಗಳ ಮೇಲೆ ಈ ಚಿತ್ರ ಮರು ಬಿಡುಗಡೆಯಾಗುತ್ತಿರುವುದು ಸಂತೋಷವಾಗಿದೆ ಎನ್ನುತ್ತಾರೆ ನಿರ್ದೇಶಕ ಚೇತನ್ ಕುಮಾರ್.

Continue Reading
Advertisement
Job Alert
ಉದ್ಯೋಗ25 mins ago

Job Alert: ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್‌ನಲ್ಲಿದೆ 164 ಹುದ್ದೆ; ಆನ್‌ಲೈನ್‌ ಮೂಲಕ ಅಪ್ಲೈ ಮಾಡಿ

murder case in Bengaluru rural
ಬೆಂಗಳೂರು ಗ್ರಾಮಾಂತರ25 mins ago

Murder case : ತಾಯಿಗೆ ಚಿತ್ರಹಿಂಸೆ ನೀಡುತ್ತಿದ್ದ ಬಾಯ್‌ಫ್ರೆಂಡ್‌ನನ್ನು ಕೊಂದು ಮುಗಿಸಿದ ಮಗ

V Cinemas multiplex inauguration by dolly dhanjay Ramesh arvind
ಸ್ಯಾಂಡಲ್ ವುಡ್25 mins ago

V Cinemas: ರಮೇಶ್ ಅರವಿಂದ್ – ಡಾಲಿ ಧನಂಜಯರಿಂದ ‘ವಿ ಸಿನಿಮಾಸ್’ ಮಲ್ಟಿಪ್ಲೆಕ್ಸ್ ಉದ್ಘಾಟನೆ

Petrol Diesel Price
ರಾಜಕೀಯ39 mins ago

Petrol Diesel Price: ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಖಂಡಿಸಿ ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

Team India Coach
ಕ್ರೀಡೆ52 mins ago

Team India Coach: ಭಾರತ ತಂಡದ ಕೋಚ್​ ಆಗಿ ಗಂಭೀರ್​ ಆಯ್ಕೆ; ಶೀಘ್ರದಲ್ಲೇ ಅಧಿಕೃತ ಘೋಷಣೆ

murder Case
ಬೆಂಗಳೂರು ಗ್ರಾಮಾಂತರ58 mins ago

Murder Case : ಓವರ್‌ ಟೇಕ್‌ ವಿಷ್ಯಕ್ಕೆ ಯುವಕನ ಕೊಚ್ಚಿ ಕೊಂದ ದುಷ್ಕರ್ಮಿಗಳು; ಮಗನ ಶವ ಕಂಡು ತಂದೆ ಕಣ್ಣೀರು

R Ashok
ಕರ್ನಾಟಕ1 hour ago

R Ashok:‌ ದುಡ್ಡಿಗಾಗಿ ಕಾರ್ಪೊರೇಷನ್‌, ಯುಟಿಲಿಟಿ ಬಿಲ್ಡಿಂಗ್‌ ಅಡ ಇಡಲು ಸಿದ್ದರಾಮಯ್ಯ ಪ್ಲಾನ್; ಅಶೋಕ್‌ ಆರೋಪ

Viral News
ವೈರಲ್ ನ್ಯೂಸ್1 hour ago

Viral News: ಮಾನವನ ಬೆರಳಾಯ್ತು, ಇದೀಗ ಐಸ್‌ಕ್ರೀಂನಲ್ಲಿ ಹುಳ ಪತ್ತೆ; ಇನ್ನು ಈ ಕಣ್ಣಲ್ಲಿ ಏನೇನು ನೋಡಬೇಕಪ್ಪ ಎಂದ ನೆಟ್ಟಿಗರು

Chandan Shetty Students Party Video Song Vidyarthi Vidyarthiniyare Movie
ಸ್ಯಾಂಡಲ್ ವುಡ್2 hours ago

Chandan Shetty: ಡಿವೋರ್ಸ್‌ ಬೆನ್ನಲ್ಲೇ ಗುಡ್‌ ನ್ಯೂಸ್‌ ಕೊಟ್ಟ ಚಂದನ್‌ ಶೆಟ್ಟಿ!

Vijayanagara News
ವಿಜಯನಗರ2 hours ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Vijayanagara News
ವಿಜಯನಗರ2 hours ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ24 hours ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ2 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ2 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ5 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ5 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ5 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

ಟ್ರೆಂಡಿಂಗ್‌