ಪಾಕಿಸ್ತಾನಕ್ಕೆ ಎಂಥಾ ಸ್ಥಿತಿ ಬಂತು ನೋಡಿ! ಉಕ್ರೇನ್‌ಗೆ ಶಸ್ತ್ರಾಸ್ತ್ರ ಮಾರಿ ಹಣ ಗಳಿಸಿದ ನೆರೆ ರಾಷ್ಟ್ರ - Vistara News

ಪ್ರಮುಖ ಸುದ್ದಿ

ಪಾಕಿಸ್ತಾನಕ್ಕೆ ಎಂಥಾ ಸ್ಥಿತಿ ಬಂತು ನೋಡಿ! ಉಕ್ರೇನ್‌ಗೆ ಶಸ್ತ್ರಾಸ್ತ್ರ ಮಾರಿ ಹಣ ಗಳಿಸಿದ ನೆರೆ ರಾಷ್ಟ್ರ

Pakistan: ಆರ್ಥಿಕವಾಗಿ ದಿವಾಳಿಯಾಗುತ್ತಿರುವ ಪಾಕಿಸ್ತಾನವು ಉಕ್ರೇನ್‌ಗೆ ಶಸ್ತ್ರಾಸ್ತ್ರಗಳನ್ನು ಮಾರಾಟ ಮಾಡುವ ಮೂಲಕ ಹಣ ಗಳಿಸಿದೆ ಎಂದು ಆರೋಪಿಸಲಾಗಿದೆ. ಆದರೆ, ಈ ಆರೋಪವನ್ನು ಪಾಕಿಸ್ತಾನ ತಳ್ಳಿ ಹಾಕಿದೆ.

VISTARANEWS.COM


on

Pakistan Sold Weapons To Ukraine Says Media Reports
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಸ್ಲಾಮಾಬಾದ್/ಲಂಡನ್: ಆರ್ಥಿಕವಾಗಿ ದಿವಾಳಿಯಾಗುತ್ತಿರುವ ಪಾಕಿಸ್ತಾನ(Cash-Strapped Pakistan), ಆದಾಯಕ್ಕೆ ಹೊಸ ಹೊಸ ಮಾರ್ಗಗಳನ್ನು ಹುಡುಕುತ್ತಿದೆ. ರಷ್ಯಾದೊಂದಿಗೆ (Russia) ಸೇನಾ ಕಾರ್ಯಾಚರಣೆಯಲ್ಲಿ ನಿರತವಾಗಿರುವ ಉಕ್ರೇನ್‌ಗೆ (Ukraine) ಪಾಕಿಸ್ತಾನವು ತನ್ನ ಶಸ್ತ್ರಾಸ್ತ್ರಗಳನ್ನು (Sale of Weapons) ಮಾರಾಟ ಮಾಡಿ, 36.4 ಕೋಟಿ ಡಾಲರ್ ಹಣವನ್ನು ಗಳಿಸಿದೆ ಎಂದು ಮಾಧ್ಯಮಗಳ ವರದಿ ಮಾಡಿದೆ(Media reports). ಆದರೆ, ಈ ವರದಿಯನ್ನು ಪಾಕಿಸ್ತಾನವು ತಳ್ಳಿ ಹಾಕಿದೆ.

ಬ್ರಿಟಿಷ್ ಮಿಲಿಟರಿ ಸರಕು ಸಾಗಣೆ ವಿಮಾನವು ರಾವಲ್ಪಿಂಡಿಯ ಪಾಕಿಸ್ತಾನದ ವಾಯುನೆಲೆ ನೂರ್ ಖಾನ್‌ನಿಂದ ಸೈಪ್ರಸ್‌ನ ಬ್ರಿಟಿಷ್ ಸೇನಾ ನೆಲೆ ಅಕ್ರೋತಿರಿ ಮತ್ತು ನಂತರ ರೊಮೇನಿಯಾಕ್ಕೆ ಒಟ್ಟು ಐದು ಬಾರಿ ಯುದ್ಧ ಪೀಡಿತ ದೇಶಕ್ಕೆ ಶಸ್ತ್ರಾಸ್ತ್ರಗಳನ್ನು ಪೂರೈಸಲು ಹಾರಾಟ ನಡೆಸಿದೆ ಎಂದು ಬಿಬಿಸಿ ಉರ್ದು ಸೋಮವಾರ ವರದಿ ಮಾಡಿದೆ. ಆದಾಗ್ಯೂ, ರೊಮೇನಿಯಾದ ನೆರೆಯ ರಾಷ್ಟ್ರವಾದ ಉಕ್ರೇನ್‌ಗೆ ತಾನು ಯಾವುದೇ ಮದ್ದುಗುಂಡುಗಳನ್ನು ಒದಗಿಸಿಲ್ಲ ಎಂದು ಇಸ್ಲಾಮಾಬಾದ್ ಸತತವಾಗಿ ನಿರಾಕರಿಸಿದೆ.

ಅಮೆರಿಕನ್ ಫೆಡರಲ್ ಪ್ರೊಕ್ಯೂರ್‌ಮೆಂಟ್ ಡೇಟಾ ಸಿಸ್ಟಮ್‌ನಿಂದ ಒಪ್ಪಂದದ ವಿವರಗಳನ್ನು ಉಲ್ಲೇಖಿಸಿ, 155 ಎಂಎಂ ಶೆಲ್‌ಗಳ ಮಾರಾಟಕ್ಕಾಗಿ ಪಾಕಿಸ್ತಾನವು “ಗ್ಲೋಬಲ್ ಮಿಲಿಟರಿ” ಮತ್ತು “ನಾರ್ಥ್ರಾಪ್ ಗ್ರುಮನ್” ಎಂಬ ಅಮೆರಿಕನ್ ಕಂಪನಿಗಳೊಂದಿಗೆ ಎರಡು ಒಪ್ಪಂದಗಳಿಗೆ ಸಹಿ ಹಾಕಿದೆ ಎಂದು ಬಿಬಿಸಿ ವರದಿ ಮಾಡಿದೆ. ಉಕ್ರೇನ್‌ಗೆ ಶಸ್ತ್ರಾಸ್ತ್ರಗಳನ್ನು ಒದಗಿಸುವ ಈ ಒಪ್ಪಂದಗಳಿಗೆ 2022 ಆಗಸ್ಟ್ 17ರಂದು ಸಹಿ ಮಾಡಲಾಗಿದೆ ಮತ್ತು ನಿರ್ದಿಷ್ಟವಾಗಿ 155 ಎಂಎಂ ಶೆಲ್‌ಗಳ ಖರೀದಿಗೆ ಲಿಂಕ್ ಮಾಡಲಾಗಿದೆ.

ಇಸ್ಲಾಮಾಬಾದ್‌ನಲ್ಲಿರುವ ವಿದೇಶಾಂಗ ಕಚೇರಿಯು ಉಕ್ರೇನ್‌ಗೆ ಯಾವುದೇ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ ಮಾರಾಟವನ್ನು ನಿರಾಕರಿಸಿದೆ. ಪಾಕಿಸ್ತಾನವು ಉಭಯ ದೇಶಗಳ ನಡುವಿನ ವಿವಾದದಲ್ಲಿ “ಕಟ್ಟುನಿಟ್ಟಾದ ತಟಸ್ಥ” ನೀತಿಯನ್ನು ಉಳಿಸಿಕೊಂಡಿದೆ ಮತ್ತು ಆ ಸಂದರ್ಭದಲ್ಲಿ ಅವರಿಗೆ ಯಾವುದೇ ಶಸ್ತ್ರಾಸ್ತ್ರ ಅಥವಾ ಮದ್ದುಗುಂಡುಗಳನ್ನು ಮಾರಾಟ ಮಾಡಿಲ್ಲ ಎಂದು ಸ್ಪಷ್ಟಪಡಿಸಿದೆ.

ಕಳೆದ ವರ್ಷ ಏಪ್ರಿಲ್‌ನಲ್ಲಿ ಅವಿಶ್ವಾಸ ಮತದ ಮೂಲಕ ಇಮ್ರಾನ್ ಖಾನ್ ನೇತೃತ್ವದ ಸರ್ಕಾರವನ್ನು ಪದಚ್ಯುತಗೊಳಿಸಿದ ಬಹು ಪಕ್ಷಗಳ ಒಕ್ಕೂಟವಾದ ಪಾಕಿಸ್ತಾನ್ ಡೆಮಾಕ್ರಟಿಕ್ ಮೂವ್‌ಮೆಂಟ್ (ಪಿಡಿಎಂ) ಆಡಳಿತದ ಅವಧಿಯಲ್ಲಿ ಈ ಆಪಾದಿತ ಒಪ್ಪಂದಗಳು ನಡೆದಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಅಂದಿನ ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಕಮರ್ ಜಾವೇದ್ ಬಾಜ್ವಾ ಅವರು ಪಾಕಿಸ್ತಾನ-ಇಂಗ್ಲೆಂಡ್ ನಡುವಿನ ಸಂಬಂಧಗಳನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ ಪ್ರತಿಜ್ಞೆ ಮಾಡಿದ್ದರು.

2022ರ ಆಗಸ್ಟ್‌ನಲ್ಲಿ ಈ ಒಪ್ಪಂದಗಳಿಗೆ ಸಹಿ ಹಾಕಿದಾಗ, ಉಕ್ರೇನ್ ಬಿಕ್ಕಟ್ಟು ಪಾಕಿಸ್ತಾನದಲ್ಲಿ ರಾಜಕೀಯ ಚರ್ಚೆಯ ಒಂದು ಭಾಗವಾಗಿತ್ತು. ವಿಶೇಷವಾಗಿ ಕ್ರಿಕೆಟಿಗ-ರಾಜಕಾರಣಿ ಖಾನ್ ಅವರು ಫೆಬ್ರವರಿ 24 ರಂದು ರಷ್ಯಾಕ್ಕೆ ಭೇಟಿ ನೀಡಿದಾಗ, ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಉಕ್ರೇನ್ ಆಕ್ರಮಣಕ್ಕೆ ಆದೇಶಿಸಿದ್ದರು. ಇದಾದ ಕೆಲವು ತಿಂಗಳ ಬಳಿಕ ಅಂದಿನ ಸೇನಾ ಮುಖ್ಯಸ್ಥ ಬಾಜ್ವಾ ಅವರು ಸಾರ್ವಜನಿಕವಾಗಿ ಖಾನ್ ಅವರಿಂದ ಅಂತರ ಕಾಯ್ದುಕೊಂಡರು ಮಾತ್ರವಲ್ಲದೇ, ಕೂಡಲೇ ರಷ್ಯಾ ತನ್ನ ದಾಳಿಯನ್ನು ನಿಲ್ಲಿಸಬೇಕೆಂದು ಒತ್ತಾಯಿಸಿದರು.

ಈ ಮಧ್ಯೆ ಪಾಕಿಸ್ತಾನದ ಮೂಲಕ ಶಸ್ತ್ರಾಸ್ತ್ರ ಖರೀದಿಯ ಒಪ್ಪಂದವನ್ನು ಯುದ್ಧನಿರತ ಉಕ್ರೇನ ಕೂಡ ತಳ್ಳಿ ಹಾಕಿದೆ.

ಈ ಸುದ್ದಿಯನ್ನೂ ಓದಿ: ಪಾಕಿಸ್ತಾನದ ಕರಾಚಿಯಲ್ಲಿ ಬೀಡುಬಿಟ್ಟ ಚೀನಿ ಜಲಾಂತರ್ಗಾಮಿ, ಯುದ್ಧ ಹಡಗು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Petrol Diesel Price: ನೆರೆ ರಾಜ್ಯಗಳಿಗಿಂತ ಕರ್ನಾಟಕದಲ್ಲೇ ಪೆಟ್ರೋಲ್, ಡಿಸೇಲ್ ಬೆಲೆ ಕಡಿಮೆ: ಸಿಎಂ ಸಮರ್ಥನೆ

Petrol Diesel Price: ವ್ಯಾಟ್ ಹೆಚ್ಚಳದ ನಂತರ ದಕ್ಷಿಣ ಭಾರತದ ರಾಜ್ಯಗಳಿಗಿಂತ ಕರ್ನಾಟಕದಲ್ಲೇ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಇದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

VISTARANEWS.COM


on

Petrol Diesel Price
Koo

ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯನ್ನು (Petrol Diesel Price) ಸಿಎಂ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ವ್ಯಾಟ್ ಹೆಚ್ಚಳದ ನಂತರ ದಕ್ಷಿಣ ಭಾರತದ ರಾಜ್ಯಗಳಿಗಿಂತ ಕರ್ನಾಟಕದಲ್ಲೇ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಆರ್ಥಿಕವಾಗಿ ಬಲಿಷ್ಠವಾಗಿರುವ ಮಹಾರಾಷ್ಟ್ರಕ್ಕಿಂತಲ್ಲೂ ನಮ್ಮ ರಾಜ್ಯದಲ್ಲಿ ಕಡಿಮೆ ದರವಿದೆ. ಗುಜರಾತ್ ಮತ್ತು ಮಧ್ಯಪ್ರವೇಶಕ್ಕಿಂತಲ್ಲೂ ನಮ್ಮಲ್ಲೇ ಕಡಿಮೆ. ಅಗಿನ ಡಬಲ್ ಎಂಜಿನ್ ಬಿಜೆಪಿ ಸರ್ಕಾರ ನಮ್ಮ ರಾಜ್ಯದ ಸಂಪನ್ಮೂಲಗಳನ್ನ ಬೇರೆ ರಾಜ್ಯಕ್ಕೆ ನೀಡಿತ್ತು. ರಾಜ್ಯ ಬಿಜೆಪಿ ಸರ್ಕಾರ ವ್ಯಾಟ್ ಕಡಿಮೆ ಮಾಡಿದ್ದರೂ, ಕೇಂದ್ರ ಸರ್ಕಾರ ಪದೇ ಪದೇ ವ್ಯಾಟ್ ಹೆಚ್ಚಳ (Price Hike) ಮಾಡಿತ್ತು. ಇದರಿಂದ ಕರ್ನಾಟಕದ ಆದಾಯ ಕುಂಠಿತವಾಗಿತ್ತು. ಈ ಮೂಲಕ ಕೇಂದ್ರ ಸರ್ಕಾರ ಕನ್ನಡಿಗರನ್ನು ವಂಚಿಸಿ ಹೆಚ್ಚು ತೆರಿಗೆ ಸಂಗ್ರಹ ಮಾಡಿತ್ತು ಎಂದು ಆರೋಪಿಸಿದ್ದಾರೆ.

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರೋದಕ್ಕೂ ಮುಂಚೆ ಪೆಟ್ರೋಲ್ ಮತ್ತು ಡೀಸೆಲ್‌ಗೆ ತಲಾ 9.48 ರೂಪಾಯಿ ಮತ್ತು 3.56 ರೂಪಾಯಿ ತೆರಿಗೆ ಇತ್ತು. ಬಿಜೆಪಿ ಅವಧಿಯಲ್ಲಿ ದಾಖಲೆಯ ತೆರಿಗೆ ಹೆಚ್ಚಳವಾಗಿ ಪೆಟ್ರೋಲ್‌ಗೆ 32.98 ರೂ., ಡೀಸೆಲ್‌ಗೆ 31.83 ರೂ. ಹೆಚ್ಚಳವಾಗಿತ್ತು. 2021-22 ರಲ್ಲಿ ಅಬಕಾರಿ ತೆರಿಗೆಯನ್ನು ಪೆಟ್ರೋಲ್ ಮೇಲೆ 13 ರೂಪಾಯಿ ಮತ್ತು ಡಿಸೇಲ್ ಮೇಲೆ 16 ಕಡಿಮೆ ಮಾಡಲಾಗಿತ್ತು. ಸದ್ಯ ಪೆಟ್ರೋಲ್ ಮೇಲಿನ ಕೇಂದ್ರ ತೆರಿಗೆ 19.9 ರೂ., ಡೀಸೆಲ್ ಮೇಲೆ 18.8 ರೂಪಾಯಿ ಇದೆ. ಇದನ್ನು ಕೇಂದ್ರ ಸರ್ಕಾರ ಜನರ ಒಳಿತಿಗೊಸ್ಕರ ಕಡಿಮೆ ಮಾಡಬೇಕು ಎಂದು ಆಗ್ರಹಿಸುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ | Petrol Diesel Price: ಜನರಿಗೆ ಸಿದ್ದರಾಮಯ್ಯ ಸರ್ಕಾರ ಶಾಕ್; ಪೆಟ್ರೋಲ್‌, ಡೀಸೆಲ್‌ ಬೆಲೆ 3 ರೂ. ಏರಿಕೆ

ರಾಜ್ಯದ ವ್ಯಾಟ್ ಹೆಚ್ಚಳದಿಂದ ಜನರ ಸೇವೆಗಳು, ಅಭಿವೃದ್ಧಿ ಕೆಲಸಗಳಿಗೆ ಹೆಚ್ಚು ಹಣ ನೀಡಲಿದ್ದೇವೆ. ನಾವು ಸಮತೋಲಿತ ಮತ್ತು ಜವಾಬ್ದಾರಿಯುತ ಆಡಳಿತ ನೀಡಲು ಬದ್ಧರಾಗಿದ್ದೇವೆ ಎಂದು ತೈಲ ಬೆಲೆ ಏರಿಕೆಯನ್ನು ಸಿಎಂ ಸಿದ್ದರಾಮಯ್ಯ ಸಮರ್ಥನೆ ಮಾಡಿಕೊಂಡಿದ್ದಾರೆ.

ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಖಂಡಿಸಿ ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಬೆಂಗಳೂರು: ಪೆಟ್ರೋಲ್, ಡೀಸೆಲ್ ದರ ಹೆಚ್ಚಳ (Petrol Diesel Price) ಖಂಡಿಸಿ ಜೂನ್‌ 17ರಂದು ಬೆಂಗಳೂರು ಸೇರಿ ರಾಜ್ಯಾದ್ಯಂತ ಪ್ರತಿಭಟನೆ (BJP Protest) ನಡೆಸಲು ಬಿಜೆಪಿ ತೀರ್ಮಾನಿಸಿದೆ. ನಗರದ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ,‌ ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.

ಕಾಂಗ್ರೆಸ್ ಸರ್ಕಾರ ಜನವಿರೋಧಿ ನೀತಿಗಳನ್ನು ಜಾರಿ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸುತ್ತಿತ್ತು. ಆದರೆ, ಇದೀಗ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ (Petrol, Diesel Price Hike) ಮೂಲಕ ವಿಪಕ್ಷಗಳ ಕೈಗೆ ರಾಜ್ಯ ಸರ್ಕಾರ ಅಸ್ತ್ರ ಕೊಟ್ಟಿದೆ. ರಾಜ್ಯದಲ್ಲಿ ಬೆಲೆ ಏರಿಕೆಯನ್ನು ಅಸ್ತ್ರ ಮಾಡಿಕೊಂಡು ಅಧಿಕಾರಕ್ಕೆ ಬಂದ ಕೈ ಸರ್ಕಾರಕ್ಕೆ ಈಗ ಬೆಲೆ ಏರಿಕೆಯೇ ಸಂಕಷ್ಟ ತಂದಿದೆ.

ಇದನ್ನೂ ಓದಿ | Petrol Diesel Price: ಪೆಟ್ರೋಲ್ ದರ ಹೆಚ್ಚಳ ಆದೇಶ‌ ವಾಪಸ್ ಪಡೆಯದಿದ್ದರೆ ಉಗ್ರ ಪ್ರತಿಭಟನೆ: ವಿಜಯೇಂದ್ರ ಎಚ್ಚರಿಕೆ

ಪೆಟ್ರೋಲ್ ಬೆಲೆ 3 ರೂಪಾಯಿ, ಡೀಸೆಲ್‌ ಬೆಲೆ ಮೂರೂವರೆ ರೂಪಾಯಿ ಏರಿಕೆ ಮಾಡಿರುವುದಕ್ಕೆ ಆಕ್ರೋಶ ಹೊರಹಾಕಿರುವ ಬಿಜೆಪಿ ನಾಯಕರು, ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಬೆಲೆ ಏರಿಕೆಯನ್ನು ಸದನದ ಒಳಗೂ ಮತ್ತು ಹೊರಗೆ ಸರ್ಕಾರದ ವಿರುದ್ಧ ಪ್ರಮುಖ ಅಸ್ತ್ರ ಮಾಡಿಕೊಳ್ಳಲು ಬಿಜೆಪಿ ಮುಂದಾಗಿದ್ದು, ಹೋರಾಟದ ಮೂಲಕ ಸರ್ಕಾರದ ವಿರುದ್ಧ ಜನಾಭಿಪ್ರಾಯ ಮೂಡಿಸಲು ಪ್ಲ್ಯಾನ್ ಮಾಡಿದೆ.

Continue Reading

ದೇಶ

EVM Row: ಮೊಬೈಲ್‌ ಬಳಸಿ ಇವಿಎಂ ಅನ್‌ಲಾಕ್‌ ಮಾಡಿದ ಸಂಸದನ ಸಂಬಂಧಿ; ಎಲ್ಲಿ ನಡೆಯಿತು ಮೋಸ?

EVM Row: ಜೂನ್‌ 4ರಂದು ಮುಂಬೈ ವಾಯವ್ಯ ಲೋಕಸಭೆ ಕ್ಷೇತ್ರದ ಗೋರೆಗಾಂವ್‌ ಪ್ರದೇಶದ ಕೇಂದ್ರವೊಂದರಲ್ಲಿ ಮತಎಣಿಕೆ ಮಾಡಲಾಗುತ್ತಿತ್ತು. ಇದೇ ಕ್ಷೇತ್ರದ ಶಿವಸೇನೆ (ಏಕನಾಥ್‌ ಶಿಂಧೆ) ಸಂಸದ ರವೀಂದ್ರ ವೈಕರ್‌ ಅವರ ಬಾವ ಮಂಗೇಶ್ ಪಂಡಿಲ್ಕರ್‌ ಅವರು ಮತಎಣಿಕೆ ಕೇಂದ್ರಕ್ಕೆ ತೆರಳಿದ್ದಾರೆ. ಮತಎಣಿಕೆ ಕೇಂದ್ರದಲ್ಲಿ ಮಂಗೇಶ್‌ ಪಂಡಿಲ್ಕರ್‌ ಅವರು ತಮ್ಮ ಮೊಬೈಲ್‌ಅನ್ನು ಬಳಸಿಯೇ ಇವಿಎಂ ಅನ್‌ಲಾಕ್‌ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗೇಶ್‌ ಪಂಡಿಲ್ಕರ್‌ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

VISTARANEWS.COM


on

EVM Row
Koo

ಮುಂಬೈ: ದೇಶದಲ್ಲಿ ಲೋಕಸಭೆ ಚುನಾವಣೆ (Lok Sabha Election 2024) ಮುಗಿದ ಬೆನ್ನಲ್ಲೇ ವಿದ್ಯುನ್ಮಾನ ಮತಯಂತ್ರಗಳ ದಕ್ಷತೆ ಕುರಿತು ಚರ್ಚೆ ಶುರುವಾಗಿದೆ. ಇವಿಎಂಗಳ ಬಳಕೆಯೇ ಬೇಡ ಎಂದು ಎಲಾನ್‌ ಮಸ್ಕ್‌ (Elon Musk) ಹೇಳಿದ್ದಾರೆ. ಇದರ ಬೆನ್ನಲ್ಲೇ, “ಭಾರತದಲ್ಲಿ ಇವಿಎಂಗಳನ್ನು ಪರಿಶೀಲನೆ ಮಾಡಲು ಯಾರಿಗೂ ಆಗುವುದಿಲ್ಲ” ಎಂಬುದಾಗಿ ರಾಹುಲ್‌ ಗಾಂಧಿ ಮಸ್ಕ್‌ ಅವರ ಮಾತನ್ನೇ ಅನುಮೋದಿಸಿದ್ದಾರೆ. ಇದರ ಬೆನ್ನಲ್ಲೇ, ಮೊಬೈಲ್‌ ಬಳಸಿ ಇವಿಎಂಅನ್ನು ಅನ್‌ಲಾಕ್‌ ಮಾಡಿದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಶಿವಸೇನೆ ಸಂಸದ ರವೀಂದ್ರ ವೈಕರ್‌ (Ravindra Waikar) ಅವರ ಬಾವ ಮಂಗೇಶ್‌ ಪಂಡಿಲ್ಕರ್‌ ಅವರ ವಿರುದ್ಧ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಅಷ್ಟೇ ಅಲ್ಲ, ಇದು ಇವಿಎಂ ತಿರುಚಲಾಗುತ್ತದೆ ಎಂಬ ಆರೋಪಕ್ಕೆ ಪುಷ್ಟಿಯನ್ನೂ ನೀಡಿದಂತಾಗಿದೆ.

ಜೂನ್‌ 4ರಂದು ಮುಂಬೈ ವಾಯವ್ಯ ಲೋಕಸಭೆ ಕ್ಷೇತ್ರದ ಗೋರೆಗಾಂವ್‌ ಪ್ರದೇಶದ ಕೇಂದ್ರವೊಂದರಲ್ಲಿ ಮತಎಣಿಕೆ ಮಾಡಲಾಗುತ್ತಿತ್ತು. ಇದೇ ಕ್ಷೇತ್ರದ ಶಿವಸೇನೆ (ಏಕನಾಥ್‌ ಶಿಂಧೆ) ಸಂಸದ ರವೀಂದ್ರ ವೈಕರ್‌ ಅವರ ಬಾವ ಮಂಗೇಶ್ ಪಂಡಿಲ್ಕರ್‌ ಅವರು ಮತಎಣಿಕೆ ಕೇಂದ್ರಕ್ಕೆ ತೆರಳಿದ್ದಾರೆ. ಮತಎಣಿಕೆ ಕೇಂದ್ರದಲ್ಲಿ ಮಂಗೇಶ್‌ ಪಂಡಿಲ್ಕರ್‌ ಅವರು ತಮ್ಮ ಮೊಬೈಲ್‌ಅನ್ನು ಬಳಸಿಯೇ ಇವಿಎಂ ಅನ್‌ಲಾಕ್‌ ಮಾಡಿದ್ದಾರೆ. ತಮ್ಮ ಮೊಬೈಲ್‌ಗೆ ಒಟಿಪಿ ಜನರೇಟ್‌ ಮಾಡಿಕೊಂಡು ಅನ್‌ಲಾಕ್‌ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

‌ಲೋಕಸಭೆ ಚುನಾವಣೆಯಲ್ಲಿ ರವೀಂದ್ರ ವೈಕರ್‌ ಅವರು ಶಿವಸೇನೆಯ (ಉದ್ಧವ್‌ ಠಾಕ್ರೆ ಬಣ) ಅಭ್ಯರ್ಥಿ ಅಮೋಲ್‌ ಗಜಾನನ ಕೀರ್ತಿಕಾರ್ ಅವರ ವಿರುದ್ಧ ಕೇವಲ 48 ಮತಗಳ ಅಂತರದಿದ್ದ ಗೆದ್ದಿದ್ದಾರೆ. ರವೀಂದ್ರ ವೈಕರ್‌ ಅವರ ಸಂಬಂಧಿಯು ಇವಿಎಂ ತಿರುಚಿದ್ದಾರೆ ಎಂಬ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಉದ್ಧವ್‌ ಠಾಕ್ರೆ ಬಣದ ಶಿವಸೇನೆಯು ಮರು ಎಣಿಕೆಗಾಗಿ ಚುನಾವಣಾ ಆಯೋಗಕ್ಕೆ ಮನವಿ ಮಾಡಲಿದೆ ಎಂದು ಮೂಲಗಳು ತಿಳಿಸಿವೆ.

“ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ಬಳಸಿ ಇವಿಎಂಗಳನ್ನು ಹ್ಯಾಕ್‌ ಮಾಡಬಹುದು” ಎಂದು ಟೆಸ್ಲಾ ಸಿಇಒ ಎಲಾನ್‌ ಮಸ್ಕ್‌ ಹೇಳಿರುವ ಬೆನ್ನಲ್ಲೇ ರಾಹುಲ್‌ ಗಾಂಧಿ ಅವರು ಇವಿಎಂ ಬಗ್ಗೆ ಪೋಸ್ಟ್‌ ಮಾಡಿದ್ದಾರೆ. “ಭಾರತದಲ್ಲಿ ಇವಿಎಂಗಳು ಎಂದರೆ ಬ್ಲ್ಯಾಕ್‌ ಬಾಕ್ಸ್‌ (ಯಾರಿಗೂ ಗೊತ್ತಾಗದ, ಒಬ್ಬರಿಗೆ ಮಾತ್ರ ಆಕ್ಸೆಸ್‌ ಇರುವ ಎಲೆಕ್ಟ್ರಾನಿಕ್‌ ಡಿವೈಸ್)‌ ಇದ್ದಂತೆ. ಅವುಗಳನ್ನು ಯಾರೂ ಪರಿಶೀಲನೆ ಮಾಡಲು, ತಪಾಸಣೆ ಮಾಡಲು ಸಾಧ್ಯವಿಲ್ಲ. ಭಾರತದ ಚುನಾವಣೆ ಪಾರದರ್ಶಕತೆ ಕುರಿತು ಗಂಭೀರವಾದ ಆತಂಕಗಳು ವ್ಯಕ್ತವಾಗುತ್ತಿವೆ. ಸಂಸ್ಥೆಗಳು ವಿಶ್ವಾಸ ಕಳೆದುಕೊಂಡರೆ ಪ್ರಜಾಪ್ರಭುತ್ವ ವ್ಯವಸ್ಥೆಯೇ ಒಂದು ನಾಟಕೀಯ ಸ್ವರೂಪ ಪಡೆಯುತ್ತದೆ” ಎಂಬುದಾಗಿ ರಾಹುಲ್‌ ಗಾಂಧಿ ಹೇಳಿದ್ದಾರೆ.

ಲೋಕಸಭೆ ಚುನಾವಣೆ ಹೊತ್ತಿನಲ್ಲೂ ಭಾರತದಲ್ಲಿ ವಿದ್ಯುನ್ಮಾನ ಮತಯಂತ್ರಗಳ ದಕ್ಷತೆ ಬಗ್ಗೆ ಅನುಮಾನಗಳು ವ್ಯಕ್ತವಾಗಿದ್ದವು. ಇವಿಎಂಗಳಲ್ಲಿ ದಾಖಲಾದ ಮತಗಳನ್ನು ಹಾಗೂ ವಿವಿಪ್ಯಾಟ್‌ನಲ್ಲಿ ದಾಖಲಾದ ಮತಗಳನ್ನು ಶೇ.100ರಷ್ಟು ತಾಳೆ ಹಾಕಬೇಕು ಎಂಬುದಾಗಿ ನಿರ್ದೇಶನ ನೀಡಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸ್ಲಲಿಸಲಾಗಿತ್ತು. ಆದರೆ, ನ್ಯಾಯಾಲಯವು ಅರ್ಜಿಗಳನ್ನು ತಳ್ಳಿಹಾಕಿತ್ತು. ಇನ್ನು, ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ. ಇದರ ಮಧ್ಯೆಯೇ, ಎಲಾನ್‌ ಮಸ್ಕ್‌ ಅವರು ಇವಿಎಂಗಳನ್ನು ಹ್ಯಾಕ್‌ ಮಾಡಬಹುದು ಎಂದು ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ: Rahul Gandhi: ಕಾಂಗ್ರೆಸ್‌ ಹೆಚ್ಚು ಕ್ಷೇತ್ರ ಗೆದ್ದರೂ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಹುಲ್‌ ಗಾಂಧಿ !

Continue Reading

ಕ್ರೀಡೆ

Rishabh Pant: ಯೂಟ್ಯೂಬ್ ಸಿಲ್ವರ್ ಪ್ಲೇ ಬಟನ್ ಪಡೆದ ರಿಷಭ್​ ಪಂತ್​; ಗಳಿಕೆಯ ಹಣ ದಾನಕ್ಕೆ ಮೀಸಲು

Rishabh Pant: ಐಪಿಎಲ್​ ಸಂದರ್ಭದಲ್ಲಿ ಪಂತ್​ ಅವರು ಈ ಯುಟ್ಯೂಬ್(YouTube) ಚಾನೆಲ್​ ಅನ್ನು ಪ್ರಾರಂಭಿಸಿದ್ದರು. ಈ ವಿಚಾರವನ್ನು ಅವರು ವಿಡಿಯೊ ಮೂಲಕ ಟ್ವೀಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದ್ದರು. ಜತೆಗೆ ತಮ್ಮ ಈ ಚಾನೆಲ್​ಗೆ ಬೆಂಬಲ ಸೂಚಿಸುವಂತೆ ಕೇಳಿಕೊಂಡಿದ್ದರು. ಇದೀಗ ಕೇವಲ ಒಂದೇ ತಿಂಗಳಿನಲ್ಲಿ ಇವರ ಚಾನೆಲ್​ 1 ಲಕ್ಷ ಸಬ್​ಸ್ಕ್ರೈಬ್ ಕಂಡಿದೆ.

VISTARANEWS.COM


on

Rishabh Pant
Koo

ಮುಂಬಯಿ: ಟೀಮ್​ ಇಂಡಿಯಾದ ಕ್ರಿಕೆಟಿಗ ರಿಷಭ್​ ಪಂತ್​(Rishabh Pant) ಅವರು ಕ್ರಿಕೆಟ್​ ಜತೆಗೆ ಯೂಟ್ಯೂಬ್​ ಚಾನೆಲ್(Rishabh Pant YouTube channel)​ ಒಂದನ್ನು ನಡೆಸುತ್ತಿದ್ದಾರೆ. 1 ಲಕ್ಷ ಸಬ್​ಸ್ಕ್ರೈಬ್ ಆದ ನಿಟ್ಟಿನಲ್ಲಿ ಯುಟ್ಯೂಬ್ ಕಡೆಯಿಂದ ಅವರಿಗೆ ಸಿಲ್ವರ್ ಪ್ಲೇ ಬಟನ್(Silver Play Button) ಸಿಕ್ಕಿದೆ. ಈ ಸಂತಸದ ವಿಚಾರವನ್ನು ಸ್ವತಃ ಪಂತ್​ ಟ್ವೀಟ್​ ಮೂಲಕ ತಿಳಿಸಿದ್ದಾರೆ. ಈ ಚಾನೆಲ್​ನಿಂದ ಬರುವ ಹಣವನ್ನು ಅಸಹಾಯಕರಿಗೆ ದಾನ ಮಾಡುವುದಾಗಿ ಅವರು ತಿಳಿಸಿದ್ದಾರೆ.

ಐಪಿಎಲ್​ ಸಂದರ್ಭದಲ್ಲಿ ಪಂತ್​ ಅವರು ಈ ಯುಟ್ಯೂಬ್(YouTube) ಚಾನೆಲ್​ ಅನ್ನು ಪ್ರಾರಂಭಿಸಿದ್ದರು. ಈ ವಿಚಾರವನ್ನು ಅವರು ವಿಡಿಯೊ ಮೂಲಕ ಟ್ವೀಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದ್ದರು. ಜತೆಗೆ ತಮ್ಮ ಈ ಚಾನೆಲ್​ಗೆ ಬೆಂಬಲ ಸೂಚಿಸುವಂತೆ ಕೇಳಿಕೊಂಡಿದ್ದರು. ಇದೀಗ ಕೇವಲ ಒಂದೇ ತಿಂಗಳಿನಲ್ಲಿ ಇವರ ಚಾನೆಲ್​ 1 ಲಕ್ಷ ಸಬ್​ಸ್ಕ್ರೈಬ್ ಕಂಡಿದೆ.


ಪಂತ್​ ಅವರು ಸದ್ಯ ಸಾಗುತ್ತಿರುವ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ತೋರುತ್ತಿದ್ದಾರೆ. ಪಾಕ್​ ವಿರುದ್ಧದ ಪಂದ್ಯದಲ್ಲಿ ಏಕಾಂಗಿ ಬ್ಯಾಟಿಂಗ್​ ಹೋರಾಟ ನಡೆಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇವರು ಆ ಪಂದ್ಯದಲ್ಲಿ ನಿಂತು ಆಡದೇ ಇದ್ದಿದ್ದರೆ ಭಾರತ 100 ಗಡಿ ಕೂಡ ದಾಟುವುದು ಕೂಡ ಕಷ್ಟವಾಗಿರುತ್ತಿತ್ತು.

2022ರ ಡಿಸೆಂಬರ್​ 30ರಂದು(rishabh pant accident date) ರಿಷಭ್​ ಪಂತ್ ಅವರು ಚಲಾಯಿಸಿಕೊಂಡು ಹೋಗುತ್ತಿದ್ದ ಕಾರು ಡಿವೈಡರ್​ಗೆ ಡಿಕ್ಕಿ(rishabh pant accident) ಹೊಡೆದಿತ್ತು. ಈ ಭೀಕರ ಅಪಘಾತದಲ್ಲಿ ಅವರ ಕಾರು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿತ್ತು. ಆದರೆ, ಪಂತ್​ ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದರು.

ರಿಷಭ್​ ಪಂತ್​ ಅವರ ಗಂಭೀರ ಗಾಯವನ್ನು ಕಂಡ ಅನೇಕರು ಪಂತ್​ ಕ್ರಿಕೆಟ್​ ಬಾಳ್ವೆ ಇನ್ನು ಮಂದೆ ಕಷ್ಟ, ಒಂದೊಮ್ಮೆ ಅವರು ಕ್ರಿಕೆಟ್​ಗೆ ಮರಳಬೇಕಾದರೂ ಹಲವು ವರ್ಷ ಬೇಕಾದಿತು ಹೀಗೆ ಹಲವು ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದರು. ಆದರೆ ಪಂತ್​ ತಮ್ಮ ನಂಬಿಕೆ ಮತ್ತು ಕ್ರಿಕೆಟ್​ಗೆ ಮರಳುವ ದೃಢ ಸಂಕಲ್ಪದಿಂದ ಕಠಿಣ ವ್ಯಾಯಾಮ ನಡೆಸಿ ಕೇವಲ 14 ತಿಂಗಳಲ್ಲಿ ಸಂಪೂರ್ಣ ಫಿಟ್​ ಆಗಿ ಈ ಬಾರಿಯ ಐಪಿಎಲ್​ ಟೂರ್ನಿ ಆಡುವ ಮೂಲಕ ಮತ್ತೆ ಕ್ರಿಕೆಟ್​ ಕಮ್​ಬ್ಯಾಕ್​ ಮಾಡಿದ್ದರು.

ಇದನ್ನೂ ಓದಿ Rishabh Pant : ಸಂಜು ಸ್ಯಾಮ್ಸನ್​ ಜತೆಗಿನ ಒಳ ಜಗಳದ ಬಗ್ಗೆ ಸ್ಪಷ್ಟನೆ ನೀಡಿದ ರಿಷಭ್ ಪಂತ್​

ಸುಟ್ಟ ಗಾಯಗಳು ಹಾಗೂ ಮಂಡಿಗೆ ಗಾಯಗೊಂಡಿಗೆ ರಿಷಭ್​ ಪಂತ್​ಗೆ ಆರಂಭದಲ್ಲಿ ಡೆಹ್ರಾಡೂನ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಮುಂಬಯಿಯ ಕೋಕಿಲಾ ಬೆನ್ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಪಂತ್​ ದುಬೈಯಲ್ಲಿ ಕ್ರಿಸ್​ಮಸ್​ ಪಾರ್ಟಿಯಲ್ಲಿ ಮುಗಿಸಿ ಮರಳಿ ಭಾರತಕ್ಕೆ ಬಂದು ತಾಯಿಗೆ ಹೊಸ ವರ್ಷದ ಸರ್​ಪ್ರೈಸ್​ ನೀಡಲೆಂದು ದೆಹಲಿಯಿಂದ ಡೆಹ್ರಾಡೂನ್​ಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿತ್ತು. 

ಹರಿಯಾಣ ರಾಜ್ಯ ಸಾರಿಗೆ ನಿಗಮದ ಚಾಲಕ ಸುಶೀಲ್ ಕುಮಾರ್ ಮತ್ತು ಕಂಡಕ್ಟರ್ ಪರಮ್‌ಜೀತ್ ಅಪಘಾತಕ್ಕೀಡಾಗಿ ನೋವಿನಿಂದ ನರಳುತ್ತಿದ್ದ ಕ್ರಿಕೆಟಿಗ ರಿಷಭ್​ ಪಂತ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಪಾಣ ಉಳಿಸುವಂತೆ ಮಾಡಿದ್ದರು. ರಸ್ತೆ ವಿಭಜಕಕ್ಕೆ ಕಾರೊಂದು ಡಿಕ್ಕಿ ಹೊಡೆದದ್ದನ್ನು ನೋಡಿದ ಸುಶೀಲ್ ಕುಮಾರ್ ಕುಮಾರ್​ ಮತ್ತು ಪರಮ್‌ಜೀತ್ ತಕ್ಷಣ ಬಸ್​ ನಿಲ್ಲಿಸಿ ಪಂತ್​ ಅವರಿಗೆ ಆರೈಕೆ ಮಾಡಿದ್ದರು.

Continue Reading

ದೇಶ

Rahul Gandhi: ಕಾಂಗ್ರೆಸ್‌ ಹೆಚ್ಚು ಕ್ಷೇತ್ರ ಗೆದ್ದರೂ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಹುಲ್‌ ಗಾಂಧಿ !

Rahul Gandhi: ಹ್ಯಾಕರ್‌ಗಳು ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ಅನ್ನು ಬಳಸಿಕೊಂಡು ಚುನಾವಣೆ ಮತಯಂತ್ರಗಳನ್ನು ಹ್ಯಾಕ್‌ ಮಾಡಬಹುದು. ಹಾಗಾಗಿ, ಇವಿಎಂಗಳನ್ನು ಚುನಾವಣೆಯಲ್ಲಿ ಬಳಸಬಾರದು ಎಂದು ಟೆಸ್ಲಾ ಕಂಪನಿ ಸಿಇಒ ಎಲಾನ್‌ ಮಸ್ಕ್‌ ಹೇಳಿದ್ದಾರೆ. ಇದು ಈಗ ಅಮೆರಿಕದಲ್ಲಿ ಭಾರಿ ಸಂಚಲನ ಮೂಡಿಸಿದೆ. ಎಲಾನ್‌ ಮಸ್ಕ್‌ ಹೇಳಿಕೆ ಕುರಿತು ಪರ ಹಾಗೂ ವಿರೋಧ ಚರ್ಚೆಗಳು ಶುರುವಾಗಿವೆ. ಎಲಾನ್‌ ಮಸ್ಕ್‌ ಅವರ ಆರೋಪಗಳಿಗೆ ರಾಹುಲ್‌ ಗಾಂಧಿ ಅವರೂ ಪ್ರತಿಕ್ರಿಯಿಸಿದ್ದು, ಭಾರತದ ಇವಿಎಂಗಳ ಕುರಿತು ಅನುಮಾನವನ್ನೂ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Rahul Gandhi
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಮುಗಿದು, ಫಲಿತಾಂಶವೂ ಪ್ರಕಟವಾಗಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಬಹುಮತ ಸಾಧಿಸಿ, ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಕಳೆದ ಚುನಾವಣೆಯಲ್ಲಿ 52 ಕ್ಷೇತ್ರ ಗೆದ್ದಿದ್ದ ಕಾಂಗ್ರೆಸ್‌ ಈಗ 99 ಕ್ಷೇತ್ರಗಳಲ್ಲಿ ಗೆದ್ದಿದೆ. ಪ್ರತಿಪಕ್ಷಗಳ ಇಂಡಿಯಾ ಒಕ್ಕೂಟವೂ (INDIA Bloc) 234 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ, ಬಿಜೆಪಿಯೊಂದಕ್ಕೇ ಬಹುಮತ ಬರುವುದನ್ನು ತಪ್ಪಿಸಿವೆ. ಇಷ್ಟೆಲ್ಲ ಆದರೂ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ಮತ್ತೆ ಚುನಾವಣೆ ಮತಯಂತ್ರಗಳ ಕುರಿತು ಅನುಮಾನ ವ್ಯಕ್ತಪಡಿಸಿದ್ದಾರೆ.

“ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ಬಳಸಿ ಇವಿಎಂಗಳನ್ನು ಹ್ಯಾಕ್‌ ಮಾಡಬಹುದು” ಎಂದು ಟೆಸ್ಲಾ ಸಿಇಒ ಎಲಾನ್‌ ಮಸ್ಕ್‌ ಹೇಳಿರುವ ಬೆನ್ನಲ್ಲೇ ರಾಹುಲ್‌ ಗಾಂಧಿ ಅವರು ಇವಿಎಂ ಬಗ್ಗೆ ಪೋಸ್ಟ್‌ ಮಾಡಿದ್ದಾರೆ. “ಭಾರತದಲ್ಲಿ ಇವಿಎಂಗಳು ಎಂದರೆ ಬ್ಲ್ಯಾಕ್‌ ಬಾಕ್ಸ್‌ (ಯಾರಿಗೂ ಗೊತ್ತಾಗದ, ಒಬ್ಬರಿಗೆ ಮಾತ್ರ ಆಕ್ಸೆಸ್‌ ಇರುವ ಎಲೆಕ್ಟ್ರಾನಿಕ್‌ ಡಿವೈಸ್)‌ ಇದ್ದಂತೆ. ಅವುಗಳನ್ನು ಯಾರೂ ಪರಿಶೀಲನೆ ಮಾಡಲು, ತಪಾಸಣೆ ಮಾಡಲು ಸಾಧ್ಯವಿಲ್ಲ. ಭಾರತದ ಚುನಾವಣೆ ಪಾರದರ್ಶಕತೆ ಕುರಿತು ಗಂಭೀರವಾದ ಆತಂಕಗಳು ವ್ಯಕ್ತವಾಗುತ್ತಿವೆ. ಸಂಸ್ಥೆಗಳು ವಿಶ್ವಾಸ ಕಳೆದುಕೊಂಡರೆ ಪ್ರಜಾಪ್ರಭುತ್ವ ವ್ಯವಸ್ಥೆಯೇ ಒಂದು ನಾಟಕೀಯ ಸ್ವರೂಪ ಪಡೆಯುತ್ತದೆ” ಎಂಬುದಾಗಿ ರಾಹುಲ್‌ ಗಾಂಧಿ ಹೇಳಿದ್ದಾರೆ.

ಎಲಾನ್‌ ಮಸ್ಕ್‌ ಹೇಳಿದ್ದಿಷ್ಟು…

ಅಮೆರಿಕದ ಚುನಾವಣೆಯಲ್ಲಿ ಬಳಸುವ ಇವಿಎಂಗಳ ಬಗ್ಗೆ ಅವರು ಅನುಮಾನ ವ್ಯಕ್ತಪಡಿಸಿದ್ದಾರೆ. “ಅಮೆರಿಕದಲ್ಲಿ ನಾವು ಎಲೆಕ್ಟ್ರಾನಿಕ್‌ ವೋಟಿಂಗ್‌ ಮಷೀನ್‌ಗಳ ಬಳಕೆಯನ್ನು ನಿಲ್ಲಿಸಬೇಕು. ಹ್ಯಾಕರ್‌ಗಳು ಅಥವಾ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ತಂತ್ರಜ್ಞಾನವನ್ನು ಬಳಕೆ ಮಾಡುವ ಮೂಲಕ ಇವಿಎಂಗಳನ್ನು ಹ್ಯಾಕ್‌ ಮಾಡುವ ಸಾಧ್ಯತೆ ಇದೆ. ಇದು ಸಣ್ಣ ಸಂಗತಿಯಾದರೂ, ದೊಡ್ಡ ಸಮಸ್ಯೆಯಾಗಿದೆ” ಎಂದು ಎಲಾನ್‌ ಮಸ್ಕ್‌ ಎಕ್ಸ್‌ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ. ಇದು ಅಮೆರಿಕದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ರಾಜೀವ್‌ ಚಂದ್ರಶೇಖರ್‌ ತಿರುಗೇಟು

ಎಲಾನ್‌ ಮಸ್ಕ್‌ ಮಾಡಿರುವ ಆರೋಪಕ್ಕೆ ಬಿಜೆಪಿ ನಾಯಕ, ಕೇಂದ್ರದ ಮಾಜಿ ಸಚಿವ ರಾಜೀವ್‌ ಚಂದ್ರಶೇಖರ್‌ ಅವರು ತಿರುಗೇಟು ನೀಡಿದ್ದಾರೆ. “ಸುರಕ್ಷಿತವಾಗಿರುವ ಡಿಜಿಟಲ್‌ ಹಾರ್ಡ್‌ವೇರ್‌ಅನ್ನು ಯಾರೂ ತಯಾರಿಸಲು ಆಗುವುದಿಲ್ಲ ರೀತಿಯಲ್ಲಿ ನೀವು ಇವಿಎಂ ಕುರಿತು ಸಾಮಾನ್ಯವಾದ ಹೇಳಿಕೆ ನೀಡಿದ್ದೀರಿ. ಇವಿಎಂಗೆ ಇಂಟರ್‌ನೆಟ್‌, ಬ್ಲ್ಯೂಟ್‌, ವೈಫೈ ಸಂಪರ್ಕ ಕೂಡ ಇಲ್ಲ. ಕಾರ್ಖಾನೆಯಲ್ಲಿ ತಯಾರಾದ ಇವಿಎಂಗಳನ್ನು, ಯಾವುದೇ ಕನೆಕ್ಟಿವಿಲ್ಲದ ಇವಿಎಂಗಳನ್ನು ಹ್ಯಾಕ್‌ ಮಾಡಲು ಆಗುವುದಿಲ್ಲ. ಭಾರತದಲ್ಲಿ ಇದು ಸಾಬೀತಾಗಿದೆ. ನಾವು ಈ ಕುರಿತು ಒಂದು ಟ್ಯುಟೋರಿಯಲ್‌ ತೆರೆಯೋಣ” ಎಂದು ಟಾಂಟ್‌ ನೀಡಿದ್ದಾರೆ.

ಲೋಕಸಭೆ ಚುನಾವಣೆ ಹೊತ್ತಿನಲ್ಲೂ ಭಾರತದಲ್ಲಿ ವಿದ್ಯುನ್ಮಾನ ಮತಯಂತ್ರಗಳ ದಕ್ಷತೆ ಬಗ್ಗೆ ಅನುಮಾನಗಳು ವ್ಯಕ್ತವಾಗಿದ್ದವು. ಇವಿಎಂಗಳಲ್ಲಿ ದಾಖಲಾದ ಮತಗಳನ್ನು ಹಾಗೂ ವಿವಿಪ್ಯಾಟ್‌ನಲ್ಲಿ ದಾಖಲಾದ ಮತಗಳನ್ನು ಶೇ.100ರಷ್ಟು ತಾಳೆ ಹಾಕಬೇಕು ಎಂಬುದಾಗಿ ನಿರ್ದೇಶನ ನೀಡಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸ್ಲಲಿಸಲಾಗಿತ್ತು. ಆದರೆ, ನ್ಯಾಯಾಲಯವು ಅರ್ಜಿಗಳನ್ನು ತಳ್ಳಿಹಾಕಿತ್ತು. ಇನ್ನು, ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ. ಇದರ ಮಧ್ಯೆಯೇ, ಎಲಾನ್‌ ಮಸ್ಕ್‌ ಅವರು ಇವಿಎಂಗಳನ್ನು ಹ್ಯಾಕ್‌ ಮಾಡಬಹುದು ಎಂದು ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ: Rahul Gandhi : ಮಹಾತ್ಮ ರಾಹುಲ್​, ಕುತಂತ್ರಿ ಗಾಂಧೀಜಿ; ಚರ್ಚೆಗೆ ಗ್ರಾಸವಾಯ್ತು​ ಕಾಂಗ್ರೆಸ್​ ನಾಯಕನ ಹೇಳಿಕೆ

Continue Reading
Advertisement
Renukaswamy murder case The location of the accused is complete
ಸಿನಿಮಾ4 mins ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Petrol Diesel Price
ಕರ್ನಾಟಕ43 mins ago

Petrol Diesel Price: ಚುನಾವಣೆ ಸೋಲಿನ ಸೇಡು ತೀರಿಸಿಕೊಳ್ಳಲು ತೈಲ ದರ ಏರಿಸಿದ ಕಾಂಗ್ರೆಸ್ ಸರ್ಕಾರ: ಆರ್‌. ಅಶೋಕ್‌ ಕಿಡಿ

Renuka swamy murder
ಚಿತ್ರದುರ್ಗ1 hour ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Road Accident
ಕರ್ನಾಟಕ1 hour ago

Road Accident: ಸುಂಟಿಕೊಪ್ಪ‌ ಬಳಿ ಖಾಸಗಿ ಬಸ್- ಸ್ಕೂಟರ್ ಡಿಕ್ಕಿಯಾಗಿ ಸವಾರ ಸಾವು

Kannada New Movie Chowkidar pruthvi ambaar
ಸಿನಿಮಾ1 hour ago

Kannada New Movie: ಪೃಥ್ವಿ ಅಂಬಾರ್ ಈಗ ‘ಚೌಕಿದಾರ್’: ರಥಾವರ ಡೈರೆಕ್ಟರ್ ಚಂದ್ರಶೇಖರ್ ಬಂಡಿಯಪ್ಪ ಹೊಸ ಹೆಜ್ಜೆ!

Patna Boat Accident
ದೇಶ1 hour ago

Patna Boat Accident: ಗಂಗಾ ನದಿಯಲ್ಲಿ ದೋಣಿ ಮುಳುಗಿ 6 ಮಂದಿ ನಾಪತ್ತೆ

Sachin Tendulkar
ಕ್ರೀಡೆ2 hours ago

Sachin Tendulkar: ವಿಶ್ವ ಅಪ್ಪಂದಿರ ದಿನದಂದು ವಿಶೇಷ ಫೋಟೊ ಹಂಚಿಕೊಂಡು ಭಾವುಕರಾದ ಸಚಿನ್​ ತೆಂಡೂಲ್ಕರ್​

Petrol Diesel Price
ಪ್ರಮುಖ ಸುದ್ದಿ2 hours ago

Petrol Diesel Price: ನೆರೆ ರಾಜ್ಯಗಳಿಗಿಂತ ಕರ್ನಾಟಕದಲ್ಲೇ ಪೆಟ್ರೋಲ್, ಡಿಸೇಲ್ ಬೆಲೆ ಕಡಿಮೆ: ಸಿಎಂ ಸಮರ್ಥನೆ

Child Marriage
ವಿದೇಶ2 hours ago

12ರ ಹರೆಯದ ಮಗಳನ್ನು 5 ಲಕ್ಷ ರೂ.ಗೆ ಮಾರಿ 72 ವರ್ಷದ ವೃದ್ಧನೊಂದಿಗೆ ಮದುವೆ ಮಾಡಿಸಲು ಮುಂದಾದ ಪಾಪಿ ತಂದೆ!

EVM Row
ದೇಶ2 hours ago

EVM Row: ಮೊಬೈಲ್‌ ಬಳಸಿ ಇವಿಎಂ ಅನ್‌ಲಾಕ್‌ ಮಾಡಿದ ಸಂಸದನ ಸಂಬಂಧಿ; ಎಲ್ಲಿ ನಡೆಯಿತು ಮೋಸ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Renukaswamy murder case The location of the accused is complete
ಸಿನಿಮಾ4 mins ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 hour ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ6 hours ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 day ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ2 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ2 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ5 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

ಟ್ರೆಂಡಿಂಗ್‌