Tiger 3 box office collection: ಮೂರೇ ದಿನಕ್ಕೆ 150 ಕೋಟಿ ರೂ. ಸನಿಹದತ್ತ ಟೈಗರ್‌!  - Vistara News

ಬಾಲಿವುಡ್

Tiger 3 box office collection: ಮೂರೇ ದಿನಕ್ಕೆ 150 ಕೋಟಿ ರೂ. ಸನಿಹದತ್ತ ಟೈಗರ್‌! 

Tiger 3 box office collection: ಮನೀಷ್‌ ಶರ್ಮಾ ನಿರ್ದೇಶನದ ಈ ಆ್ಯಕ್ಷನ್​ ಥ್ರಿಲ್ಲರ್‌ ಸಿನಿಮಾಗೆ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಕೇವಲ ಮೂರೇ ದಿನದಲ್ಲಿ 150 ಕೋಟಿ ರೂ. ಸನಿಹದಲ್ಲಿದೆ ಟೈಗರ್‌ 3.

VISTARANEWS.COM


on

Tiger 3
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸಲ್ಮಾನ್ ಖಾನ್ ಮತ್ತು ಕತ್ರಿನಾ ಕೈಫ್ ಅಭಿನಯದ ದೀಪಾವಳಿ ಬಿಡುಗಡೆಯಾದ ‘ಟೈಗರ್ 3’ ಚಿತ್ರಮಂದಿರಗಳಲ್ಲಿ (Tiger 3 box office collection) ಭಾರಿ ಓಪನಿಂಗ್ ಕಂಡಿದೆ. ಮನೀಶ್ ಶರ್ಮಾ ಅವರ ನಿರ್ದೇಶನದ ಈ ಸ್ಪೈ-ಥ್ರಿಲ್ಲರ್ ಭಾರತದಲ್ಲಿ ಬಾಕ್ಸ್ ಆಫೀಸ್‌ನಲ್ಲಿ ಸಖತ್‌ ಕಲೆಕ್ಷನ್‌ ಮಾಡಿದೆ. ಮೂರು ದಿನಗಳಲ್ಲಿ ‘ಟೈಗರ್ 3’ ಭಾರತದಲ್ಲಿ ಒಟ್ಟು 146 ಕೋಟಿ ರೂ. ಕಲೆಕ್ಷನ್‌ ಮಾಡಿದ್ದು. ಇಂದು (ನವೆಂಬರ್ 15) 150-ಕೋಟಿ ರೂ. ಗಡಿ ದಾಟಲಿದೆ ಎಂದು ವರದಿಯಾಗಿದೆ.

ಮೊದಲ ದಿನವೇ ಬಾಕ್ಸ್‌ ಆಫೀಸ್‌ನಲ್ಲಿ ಅಬ್ಬರಿಸಿದ್ದ ಈ ಚಿತ್ರ ಭಾರತದಲ್ಲಿಯೇ 44.50 ಕೋಟಿ ರೂ. ಗಳಿಸಿತ್ತು. ಎರಡನೇ ದಿನ ದೇಶಿಯ ಗಲ್ಲಾ ಪಟ್ಟಿಗೆಯಲ್ಲಿ 100 ಕೋಟಿ ರೂ. ಮೈಲಿಗಲ್ಲನ್ನು ದಾಟಿತ್ತು.

ಮೊದಲ ದಿನ ಸಲ್ಮಾನ್‌ ಖಾನ್‌ ವೃತ್ತಿ ಜೀವನದಲ್ಲೇ ಅತಿ ದೊಡ್ಡ ಓಪನಿಂಗ್‌ ಪಡೆದುಕೊಂಡಿದ್ದ ʼಟೈಗರ್‌ 3ʼ ಚಿತ್ರ ನವೆಂಬರ್‌ 13ರಂದು ಅಂದರೆ ಎರಡನೇ ದಿನ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಸುಮಾರು 57.50 ಕೋಟಿ ರೂ. ಸಂಗ್ರಹಿಸಿತ್ತು. ಆ ಮೂಲಕ ಎರಡನೇ ದಿನಗಳಲ್ಲಿ ಸುಮಾರು 102 ಕೋಟಿ ರೂ. ಗಳಿಸಿದಂತಾಗಿತ್ತು. ಮನೀಷ್‌ ಶರ್ಮಾ ನಿರ್ದೇಶನದ ಈ ಆ್ಯಕ್ಷನ್​ ಥ್ರಿಲ್ಲರ್‌ನಲ್ಲಿ ನಾಯಕಿಯಾಗಿ ಕತ್ರಿನಾ ಕೈಫ್‌ ಕಾಣಿಸಿಕೊಂಡಿದ್ದು, ಇಮ್ರಾನ್‌ ಹಶ್ಮಿ ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದಾರೆ. ದೀಪಾವಳಿಯ ಸಾಲು ಸಾಲು ರಜೆಯ ಜತೆಗೆ ಬೇರೆ ಯಾವುದೇ ದೊಡ್ಡ ಸಿನಿಮಾ ಈ ವಾರ ತೆರೆಗೆ ಬಾರದೇ ಇರುವುದು ʼಟೈಗರ್‌ 3′ ನಾಗಾಲೋಟಕ್ಕೆ ಶಕ್ತಿ ತುಂಬಿದೆ.

ತಮ್ಮ ಯಶ್‌ ರಾಜ್‌ ಫಿಲಂಸ್‌ ಮೂಲಕ ಆದಿತ್ಯ ಚೋಪ್ರಾ ನಿರ್ಮಿಸಿರುವ ಈ ಚಿತ್ರದ ಬಜೆಟ್‌ ಬರೋಬ್ಬರಿ 300 ಕೋಟಿ ರೂ. ಯಶ್‌ ರಾಜ್‌ ಫಿಲಂಸ್‌ನ ಅತಿ ದುಬಾರಿ ಚಿತ್ರ ಇದು ಎನ್ನುವುದು ಕೂಡ ವಿಶೇಷ. ಸೂಪರ್‌ ಸ್ಟಾರ್‌ಗಳಾದ ಶಾರುಖ್‌ ಖಾನ್‌ ಮತ್ತು ಹೃತಿಕ್‌ ರೋಷನ್‌ ಅತಿಥಿ ಪಾತ್ರದಲ್ಲಿ ಮೋಡಿ ಮಾಡಿದ್ದಾರೆ. ಯಶ್‌ ರಾಜ್‌ ಫಿಲಂಸ್‌ನ 5ನೇ ಸ್ಪೈ ಸೀರಿಸ್‌ನ ಚಿತ್ರ ಇದಾಗಿದೆ. ಈ ಹಿಂದೆ ‘ಏಕ್‌ ಥಾ ಟೈಗರ್‌’, ‘ಟೈಗರ್‌ ಜಿಂದಾ ಹೈ’, ‘ವಾರ್‌’, ‘ಪಠಾಣ್‌’ ಚಿತ್ರಗಳನ್ನು ವೈಆರ್‌ಎಫ್‌ ಸ್ಪೈ ಯೂನಿವರ್ಸ್‌ನಲ್ಲಿ ನಿರ್ಮಿಸಲಾಗಿತ್ತು. ಅಲ್ಲದೆ ಟೈಗರ್‌ ಸೀರಿಸ್‌ನ ಮೂರು ಚಿತ್ರಗಳಲ್ಲಿಯೂ ಸಲ್ಮಾನ್‌ ಖಾನ್‌-ಕತ್ರಿನಾ ಕೈಫ್‌ ಜೋಡಿ ಮೋಡಿ ಮಾಡಿದೆ. ಜತೆಗೆ ʼಟೈಗರ್​ 3’ ಸಿನಿಮಾದಲ್ಲಿ ಸಲ್ಮಾನ್​ ಖಾನ್​ ಜತೆ ಕತ್ರಿನಾ ಕೈಫ್​ ಕೂಡ ಆ್ಯಕ್ಷನ್​ ಮೆರೆದಿದ್ದಾರೆ. ವರದಿಯ ಪ್ರಕಾರ ಅಮೆಜಾನ್ ಪ್ರೈಮ್ ವಿಡಿಯೊ ʼಟೈಗರ್ 3ʼ ಡಿಜಿಟಲ್ ಹಕ್ಕುಗಳನ್ನು ದಾಖಲೆಯ ಮೊತ್ತಕ್ಕೆ ಪಡೆದುಕೊಂಡಿದೆಯಂತೆ. ಬರೋಬ್ಬರಿ 200 ಕೋಟಿ ರೂ.ಗೆ ಈ ಒಪ್ಪಂದ ನಡೆದಿದೆ ಎನ್ನಲಾಗಿದೆ.

ಇದನ್ನೂ ಓದಿ: Tiger 3: ಕುವೈತ್, ಕತಾರ್‌ನಲ್ಲಿ ಟೈಗರ್‌ 3 ಬ್ಯಾನ್‌ ! ಏನು ಕಾರಣ?

ಈ ವರ್ಷ ಬಾಲಿವುಡ್‌ ಚೇತರಿಕೆಯ ಹಾದಿಯಲ್ಲಿದೆ. ಈ ಹಿಂದೆ ತೆರೆಕಂಡ ಶಾರುಖ್‌ ಖಾನ್‌-ದೀಪಿಕಾ ಪಡುಕೋಣೆ ಅಭಿನಯದ ʼಪಠಾಣ್‌ʼ ಚಿತ್ರ ಬಾಕ್ಸ್‌ ಆಪೀಸ್‌ನಲ್ಲಿ ಸಾವಿರಾರು ಕೋಟಿ ರೂ. ಗಳಿಕೆ ಕಂಡಿತ್ತು. ಬಳಿಕ ಸನ್ನಿ ಡಿಯೋಲ್‌ ಅಭಿನಯ್‌ ʼಗದರ್‌ 2ʼ, ಶಾರುಖ್‌ ಖಾನ್‌-ನಯನತಾರಾ ನಟಿಸಿದ ʼಜವಾನ್‌ʼ ಕೂಡ ಸಾವಿರ ಕೋಟಿ ರೂ. ಮೀರಿದ ಕಲೆಕ್ಷನ್‌ ದಾಖಲಿಸಿದೆ. ಸದ್ಯ ʼಟೈಗರ್‌ 3ʼ ಕೂಡ ಅದೇ ಹಾದಿ ಹಿಡಿಯುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Kangana Ranaut: ಸಂಸತ್ತಿನ ಹೊರಗೆ ಕೈ ಕುಲುಕಿ ಸಂತಸದ ಕ್ಷಣ ಹಂಚಿಕೊಂಡ ಚಿರಾಗ್ ಪಾಸ್ವಾನ್-ಕಂಗನಾ!

Kangana Ranaut: ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಮತ್ತು ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರು ಈ ಮುಂಚೆ ಒಟ್ಟಿಗೆ ತೆರೆ ಹಂಚಿಕೊಂಡಿದ್ದರು. 2011 ರಲ್ಲಿ, ಇಬ್ಬರು ಮಿಲೇ ನಾ ಮಿಲೇ ಹಮ್ ಚಿತ್ರದಲ್ಲಿ ನಟಿಸಿದ್ದರು. ಅಷ್ಟಾಗಿ ಸಿನಿಮಾ ಯಶಸ್ಸು ಕಂಡಿಲ್ಲ. ಆ ಬಳಿಕ ಕ್ರಮೇಣ ಚಿರಾಗ್ ಪಾಸ್ವಾನ್ ರಾಜಕೀಯಕ್ಕೆ ಎಂಟ್ರಿ ಕೊಟ್ಟರು. ಇದೀಗ ಮತ್ತೆ ಚಿರಾಗ್ ಪಾಸ್ವಾನ್ ಮತ್ತು ಬಿಜೆಪಿ ಸಂಸದೆ ಕಂಗನಾ ರಣಾವತ್ ಒಟ್ಟಿಗೆ ಕಂಡಿದ್ದಾರೆ.

VISTARANEWS.COM


on

Kangana Ranaut Chirag Paswan In Parliament
Koo

ಬೆಂಗಳೂರು: ಈ ಬಾರಿ ಆಡಳಿತ ರೂಢ ಎನ್‌ಡಿಎ ಮತ್ತು ಪ್ರತಿಪಕ್ಷಗಳ ಇಂಡಿ ಬಣದ ನಡುವೆ (Kangana Ranaut) ಒಮ್ಮತ ಮೂಡದ ಹಿನ್ನೆಲೆಯಲ್ಲಿ (Chirag Paswan In Parliament) ಹಲವು ದಶಕಗಳ ಬಳಿಕ ಚುನಾವಣೆ ನಡೆಸಲಾಯಿತು. ಇದೀಗ ಎರಡನೇ ಬಾರಿ ಲೋಕಸಭೆ ಸ್ಪೀಕರ್‌ ಆಗಿ ಓಂ ಬಿರ್ಲಾ  ಆಯ್ಕೆಯಾದರು. ಈ ವೇಳೆ ಗಮನ ಸೆಳೆದಿದ್ದು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಮತ್ತು ಬಿಜೆಪಿ ಸಂಸದೆ ಕಂಗನಾ ರಣಾವತ್ . ಸಂಸತ್ ಭವನದ ಹೊರಗೆ ಚುನಾವಣಾ ಫಲಿತಾಂಶಗಳು ಪ್ರಕಟವಾದ ತಕ್ಷಣ ಪಾಸ್ವಾನ್ ಹಾಗೂ ಕಂಗನಾ ಒಬ್ಬರಿಗೊಬ್ಬರು ಕೈ ಕುಲುಕಿ ಮಾತನಾಡಿದ್ದಾರೆ. ಇವರಿಬ್ಬರ ಸಂತೋಷದ ಕ್ಷಣ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಮತ್ತು ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರು ಈ ಮುಂಚೆ ಒಟ್ಟಿಗೆ ತೆರೆ ಹಂಚಿಕೊಂಡಿದ್ದರು. 2011 ರಲ್ಲಿ, ಇಬ್ಬರು ಮಿಲೇ ನಾ ಮಿಲೇ ಹಮ್ ಚಿತ್ರದಲ್ಲಿ ನಟಿಸಿದ್ದರು. ಅಷ್ಟಾಗಿ ಸಿನಿಮಾ ಯಶಸ್ಸು ಕಂಡಿಲ್ಲ. ಆ ಬಳಿಕ ಕ್ರಮೇಣ ಚಿರಾಗ್ ಪಾಸ್ವಾನ್ ರಾಜಕೀಯಕ್ಕೆ ಎಂಟ್ರಿ ಕೊಟ್ಟರು. ಇದೀಗ ಮತ್ತೆ ಚಿರಾಗ್ ಪಾಸ್ವಾನ್ ಮತ್ತು ಬಿಜೆಪಿ ಸಂಸದೆ ಕಂಗನಾ ರಣಾವತ್ ಒಟ್ಟಿಗೆ ಕಂಡಿದ್ದಾರೆ.

ಅನೇಕ ಚಲನಚಿತ್ರಗಳು ಮತ್ತು ಹಲವಾರು ಚುನಾವಣೆಗಳ ನಂತರ, ಇಬ್ಬರೂ ಮತ್ತೆ ಸಹೋದ್ಯೋಗಿಗಳಾಗಿದ್ದಾರೆ, ಚಲನಚಿತ್ರ ಸೆಟ್‌ನಲ್ಲಿ ಅಲ್ಲ ಆದರೆ ಸಂಸತ್ತಿನಲ್ಲಿ.

ಇದನ್ನೂ ಓದಿ: Vinay Gowda: ʻಡೆವಿಲ್ʼ ಸಿನಿಮಾದಲ್ಲಿ ನಾನೇ ವಿಲನ್, ಪ್ರಾಜೆಕ್ಟ್‌ ಏನಾಗುತ್ತೋ ಗೊತ್ತಿಲ್ಲ ಎಂದ ʻಬಿಗ್ ಬಾಸ್ʼ ಆನೆ ವಿನಯ್ ಗೌಡ!

18ನೇ ಲೋಕಸಭೆಯ ಸ್ಪೀಕರ್‌ ಆಗಿ ಎನ್‌ಡಿಎಯಿಂದ ಕಣಕ್ಕಿಳಿದ ಬಿಜೆಪಿ ಸಂಸದ ಓಂ ಬಿರ್ಲಾ (Om Birla) ಅವರು ಆಯ್ಕೆಯಾಗಿದ್ದಾರೆ (Lok Sabha Speaker). ಸಾಮಾನ್ಯವಾಗಿ ಅವಿರೋಧವಾಗಿ ಸ್ಪೀಕರ್‌ ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆದರೆ ಈ ಬಾರಿ ಆಡಳಿತ ರೂಢ ಎನ್‌ಡಿಎ ಮತ್ತು ಪ್ರತಿಪಕ್ಷಗಳ ಇಂಡಿ ಬಣದ ನಡುವೆ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಹಲವು ದಶಕಗಳ ಬಳಿಕ ಚುನಾವಣೆ ನಡೆಸಲಾಯಿತು. ಇದೀಗ ಎರಡನೇ ಬಾರಿ ಲೋಕಸಭೆ ಸ್ಪೀಕರ್‌ ಆಗಿ ಆಯ್ಕೆ ಆಗಿರುವ ಓಂ ಬಿರ್ಲಾ ಅವರಿಗೆ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಎಲ್ಲಾ ಸಂಸತ್‌ ಸದಸ್ಯರು ಪಕ್ಷಾತೀತ ಅಭಿನಂದನೆ ಸಲ್ಲಿಸಿದರು.

ವಿಪ್‌ ಜಾರಿ

ಆರಂಭದಲ್ಲಿ ಎನ್‌ಡಿಎ ಪ್ರತಿಪಕ್ಷಗಳ ಮನವೊಲಿಸಲು ಯತ್ನಿಸಿತ್ತು. ಓಂ ಬಿರ್ಲಾ ಅವರನ್ನು ಬೆಂಬಲಿಸಲು ಒಪ್ಪಿಗೆ ಸೂಚಿಸಿದ್ದ ಇಂಡಿ ಬಣ ಡೆಪ್ಯುಟಿ ಸ್ಪೀಕರ್ ತಮಗೆ ಸಿಗಬೇಕೆಂಬ ಷರತ್ತು ವಿಧಿಸಿತ್ತು. ಆದರೆ ಇದಕ್ಕೆ ಎನ್‌ಡಿಎ ಒಪ್ಪಿಗೆ ಸೂಚಿಸದ ಹಿನ್ನೆಲೆಯಲ್ಲಿ ಮಾತುಕತೆ ಮುರಿದು ಬಿದ್ದು ಕೊನೆಯ ಕ್ಷಣದಲ್ಲಿ ಕೊಂಡಿಕುನಾಲ್ ಸುರೇಶ್ ಮಂಗಳವಾರ ನಾಮಪತ್ರ ಸಲ್ಲಿಸಿದ್ದರು. ಬಿಜೆಪಿ ಮತ್ತು ಕಾಂಗ್ರೆಸ್‌ ಎಲ್ಲ ಸದಸ್ಯರಿಗೆ ಹಾಜರಾಗುವಂತೆ ಮಂಗಳವಾರ ವಿಪ್‌ ಜಾರಿ ಮಾಡಿದ್ದವು.

Continue Reading

ಟಾಲಿವುಡ್

Rashmika Mandanna: ರಶ್ಮಿಕಾ ಇದೀಗ ಟಾಲಿವುಡ್‌ಗೆ ಬೈ ಬೈ; ಬಾಲಿವುಡ್‌ನಲ್ಲಿಯೇ ಬಿಡಾರ!

Rashmika Mandanna: ಇತ್ತ ರಶ್ಮಿಕಾ ಮಂದಣ್ಣ ಪುಷ್ಪ 02 ಚಿತ್ರದ ಬಾಕಿ ಕೆಲಸ ಮುಗಿಸಿ, ಸಿಕಂದರ್ ಚಿತ್ರದ ಚಿತ್ರೀಕರಣಕ್ಕೆ ತೆರಳಲಿದ್ದಾರೆ. ಮತ್ತೊಂದೆಡೆ, ರಶ್ಮಿಕಾ ಅವರು ಪುಷ್ಪ 2 ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದ್ದಾರೆ. ಡಿಸೆಂಬರ್ 6 ರಂದು ಸಿನಿಮಾ ಬಿಡುಗಡೆಯಾಗಲಿದೆ.

VISTARANEWS.COM


on

Rashmika Mandanna Ayushmann Khurrana Team Up For Horror Comedy
Koo

ಬೆಂಗಳೂರು: ನ್ಯಾಶನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ (Rashmika Mandanna) ಬಾಲಿವುಡ್‌ನಲ್ಲಿ ಮಿಂಚುತ್ತಿದ್ದಾರೆ. ಹಿಂದಿಯಲ್ಲಿ ಈಗಾಗಲೇ ಗುಡ್ ಬೈ, ಮಿಶನ್ ಮಜ್ನು, ಛಾವಾ ಚಿತ್ರಗಳನ್ನು ಮಾಡಿರುವ ರಶ್ಮಿಕಾ, ಸಲ್ಮಾನ್ ಖಾನ್ ಜತೆ ಕೂಡ ತೆರೆ ಹಂಚಿಕೊಳ್ಳುತ್ತಿದ್ದಾರೆ. ಸಲ್ಮಾನ್ ಅಭಿನಯದ `ಸಿಕಂದರ್’ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಇದರ ನಡುವೆ ರಶ್ಮಿಕಾ ಮಂದಣ್ಣ ಮತ್ತೊಂದು ಹಿಂದಿ ಚಿತ್ರಕ್ಕೆ ಗ್ನೀನ್ ಸಿಗ್ನಲ್ ನೀಡಿದ್ದಾರೆ, ಬಾಲಿವುಡ್‌ನ ಪ್ರತಿಭಾವಂತ ಹೀರೋ ಆಯುಷ್ಮಾನ್ ಖುರಾನಾಗೆ ನಾಯಕಿಯಾಗಿದ್ದಾರೆ ಎಂದು ವರದಿಯಾಗಿದೆ. ಆಯುಷ್ಮಾನ್ ಖುರಾನ ಮತ್ತು ರಶ್ಮಿಕಾ ಅಭಿನಯಿಸಲಿರುವ ಈ ಚಿತ್ರಕ್ಕೆ ʻವ್ಯಾಂಪೈರ್ಸ್‌ ಆಫ್ ವಿಜಯ್ ನಗರʼ ಎಂದು ಹೆಸರಿಡಲಾಗಿದೆ.

ʻಸ್ತ್ರೀʼ. ʻಬೇಡಿಯಾʼ.. ʻಮುಂಜ್ಯಾʼನಂತಹ ಹಾರರ್ ಕಾಮಿಡಿ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ದಿನೇಶ್ ವಿಜನ್ ಆಯುಷ್ಮಾನ್ ಕುರಾನಾ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಈ ಚಿತ್ರಕ್ಕೆ ಬಂಡವಾಳ ಹೂಡಲಿದ್ದಾರೆ.

ಈ ವರ್ಷದ ನವೆಂಬರ್‌ನಿಂದ ಚಿತ್ರ ಆರಂಭವಾಗಲಿದೆ ಎಂದು ಮೂಲಗಳು ತಿಳಿಸಿವೆ. “ಇದು ಆಯುಷ್ಮಾನ್ ಖುರಾನಾ ಮತ್ತು ರಶ್ಮಿಕಾ ಮಂದಣ್ಣ ಒಟ್ಟಿಗೆ ತೆರೆ ಹಂಚಿಕೊಳ್ಳುತ್ತಿರುವ ಮೊದಲ ಸಿನಿಮಾ. ಪ್ರಸ್ತುತ ಸಿನಿಮಾ ಸ್ಕ್ರಿಪ್ಟ್ ಆಗುತ್ತಿದೆ. ಶೀಘ್ರದಲ್ಲೇ ಪ್ರೀ-ಪ್ರೊಡಕ್ಷನ್ ಹಂತ ಮುಗಲಿದೆʼ ಎಂದು ವರದಿಯಾಗಿದೆ.

ಇದನ್ನೂ ಓದಿ: Vinay Gowda: ʻಡೆವಿಲ್ʼ ಸಿನಿಮಾದಲ್ಲಿ ನಾನೇ ವಿಲನ್, ಪ್ರಾಜೆಕ್ಟ್‌ ಏನಾಗುತ್ತೋ ಗೊತ್ತಿಲ್ಲ ಎಂದ ʻಬಿಗ್ ಬಾಸ್ʼ ಆನೆ ವಿನಯ್ ಗೌಡ!

ಆದಿತ್ಯ ಸತ್ಪೋದರ್ ಈ ಚಿತ್ರವನ್ನು ನಿರ್ದೇಶಿಸಲಿದ್ದಾರೆ. ಸದ್ಯಕ್ಕೆ ದಿನೇಶ್ ವಿಜನ್ ತಮ್ಮ ಸ್ತ್ರೀ 2 ಚಿತ್ರದ ಬಿಡುಗಡೆಯ ಕೆಲಸದಲ್ಲಿದ್ದಾರೆ. ಇತ್ತ ರಶ್ಮಿಕಾ ಮಂದಣ್ಣ ಪುಷ್ಪ 02 ಚಿತ್ರದ ಬಾಕಿ ಕೆಲಸ ಮುಗಿಸಿ, ಸಿಕಂದರ್ ಚಿತ್ರದ ಚಿತ್ರೀಕರಣಕ್ಕೆ ತೆರಳಲಿದ್ದಾರೆ.ಆಯುಷ್ಮಾನ್ ಖುರಾನಾ ಸದ್ಯಕ್ಕೆ ಕರಣ್ ಜೋಹರ್ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಇನ್ನೂ ಆಯುಷ್ಮಾನ್ ಕೈಯಲ್ಲಿ ʻಬಾರ್ಡರ್ʼ ಚಿತ್ರದ ಸಿಕ್ವೆಲ್ ಕೂಡ ಇದೆ. ಮತ್ತೊಂದೆಡೆ, ರಶ್ಮಿಕಾ ಅವರು ಪುಷ್ಪ 2 ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದ್ದಾರೆ. ಡಿಸೆಂಬರ್ 6 ರಂದು ಸಿನಿಮಾ ಬಿಡುಗಡೆಯಾಗಲಿದೆ.

ʻಸಿಖಂದರ್’ ಸಿನಿಮಾ ಆಕ್ಷನ್ ಥ್ರಿಲ್ಲರ್ ಚಿತ್ರವಾಗಿರಲಿದೆ. 400 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿನಿಮಾ ಸಿದ್ಧವಾಗುತ್ತಿದೆ ಎಂದು ವರದಿಯಾಗಿದೆ. ಸಲ್ಮಾನ್ ಖಾನ್ ಕೊನೆಯದಾಗಿ ‘ಟೈಗರ್ 3’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.ತಮಿಳು, ತೆಲುಗಿನಲ್ಲಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಎಆರ್ ಮುರುಗದಾಸ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರವನ್ನು ಸಾಜಿದ್ ನಾಡಿಯಾವಾಲ ನಿರ್ಮಾಣ ಮಾಡುತ್ತಿದ್ದು, ದೊಡ್ಡ ಬಜೆಟ್​ನಲ್ಲಿ ಸಿದ್ಧವಾಗುತ್ತಿದೆ. ಮುರುಗದಾಸ್ ಅವರು ಈ ಮೊದಲು ‘ಗಜಿನಿ’, ‘ಸ್ಟಾಲಿನ್’, ‘ಸೆವೆಂತ್ ಸೆನ್ಸ್’, ‘ತುಪ್ಪಾಕಿ’, ‘ಸ್ಪೈಡರ್’ ಸೇರಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ಕೊಟ್ಟಿದ್ದರು. ಮುರುಗದಾಸ್ ಅವರು ಆಮಿರ್ ಖಾನ್ ನಟಿಸಿದ್ದ ‘ಗಜಿನಿ’ ಚಿತ್ರವನ್ನು ಅವರೇ ನಿರ್ದೇಶನ ಮಾಡಿದ್ದರು.

Continue Reading

Latest

Parineethi Chopra: ಏಳುಮಲ್ಲಿಗೆ ತೂಕದ ಚೆಲುವೆ ಪರಿಣಿತಿ ಚೋಪ್ರಾ ಸಿಕ್ಕಾಪಟ್ಟೆ ದಪ್ಪಗಾಗಿದ್ದು ಯಾಕೆ?

Parineethi Chopra: ಸಿನಿಮಾಕ್ಕಾಗಿ ನಟ-ನಟಿಯರು ತಮ್ಮ ದೇಹತೂಕವನ್ನು ಹೆಚ್ಚು ಕಡಿಮೆ ಮಾಡಿಕೊಳ್ಳುವುದು ಸಾಮಾನ್ಯ. ಕೆಲವೊಮ್ಮ ಇದರಿಂದ ಅವರು ಸಿಕ್ಕಾಪಟ್ಟೆ ಟ್ರೋಲ್ಗೆ ಒಳಗಾಗುತ್ತಾರೆ. ಏಳು ಮಲ್ಲಿಗೆ ತೂಕದಂತಿರುವ ನಟಿಯರು ಸಡನ್ನಾಗಿ ಊದಿಕೊಂಡಾಗ ಜನರ ಬಾಯಿಗೆ ತುತ್ತಾಗುತ್ತಾರೆ. ಪರಿಣಿತಿ ಚೋಪ್ರಾ ಕೂಡ ಈ ಸಮಸ್ಯೆ ಎದುರಿಸಿದ್ದಾರೆ. ಇಮ್ತಿಯಾಜ್ ಅಲಿ ಅವರ ಚಿತ್ರ ‘ಅಮರ್ ಸಿಂಗ್ ಚಮ್ಕಿಲಾ’ ಚಿತ್ರದಲ್ಲಿ ನಟಿಸಿದ ಬಾಲಿವುಡ್ ನಟಿ ಪರಿಣಿತಿ ಚೋಪ್ರಾ(Parineethi Chopra) ಅವರು ತಮ್ಮ ತೂಕ ಹೆಚ್ಚಳದಿಂದ ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್ ಆಗಿದ್ದರು. ಈ ಚಿತ್ರಕ್ಕಾಗಿ ಅವರು 16 ಕೆಜಿ ತೂಕ ಹೆಚ್ಚಿಸಿಕೊಂಡಿದ್ದಾರಂತೆ.

VISTARANEWS.COM


on

Parineethi Chopra
Koo

ಮುಂಬೈ : ಇತ್ತೀಚೆಗೆ ನೆಟ್ ಫ್ಲಿಕ್ಸ್ ನಲ್ಲಿ ಬಿಡುಗಡೆಯಾದ ಇಮ್ತಿಯಾಜ್ ಅಲಿ ಅವರ ಚಿತ್ರ ‘ಅಮರ್ ಸಿಂಗ್ ಚಮ್ಕಿಲಾ’ ಚಿತ್ರದಲ್ಲಿ ನಟಿಸಿದ ಬಾಲಿವುಡ್ ನಟಿ ಪರಿಣಿತಿ ಚೋಪ್ರಾ(Parineethi Chopra) ಅವರು ತಮ್ಮ ತೂಕ ಹೆಚ್ಚಳದಿಂದ ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್ ಆಗಿದ್ದರು. ಇದೀಗ ಅವರು ತಮ್ಮ ತೂಕ ಹೆಚ್ಚಳಕ್ಕೆ ಸಂಬಂಧಪಟ್ಟ ವಿಚಾರವನ್ನು ಬಹಿರಂಗಪಡಿಸಿದ್ದಾರೆ.

ನಟಿ ನಟಿ ಪರಿಣಿತಿ ಚೋಪ್ರಾ ಅವರು ಚಿತ್ರದ ಯಶಸ್ಸಿನ ನಂತರ ಸುದ್ದಿ ಮಾಧ್ಯಮವೊಂದರಲ್ಲಿ ಸಂದರ್ಶನ ನೀಡಿದ್ದು, ಅದರಲ್ಲಿ ಅವರು ಸಿನಿಮಾ ತಾರೆಯರು ಸಿನಿಮಾದ ಪಾತ್ರಕ್ಕಾಗಿ ತೂಕ ಹೆಚ್ಚು-ಕಡಿಮೆ ಮಾಡಿಕೊಳ್ಳುವುದಾಗಿ ತಿಳಿಸಿ ಹೇಳಿದ್ದಾರೆ. ಅವರು ‘ಅಮರ್ ಸಿಂಗ್ ಚಮ್ಕಿಲಾ’ ಚಿತ್ರದಲ್ಲಿ ಅಮರ್ ಜೋತ್ ಕೌರ್ ಪಾತ್ರದಲ್ಲಿ ನಟಿಸಿದ್ದು, ಇದರಲ್ಲಿ ಅವರು ದಪ್ಪವಾಗಿ ಕಾಣಿಸುತ್ತಿದ್ದರು. ಆದರೆ ಈ ಚಿತ್ರಕ್ಕಾಗಿ ಅವರು 16 ಕೆಜಿ ತೂಕ ಹೆಚ್ಚಿಸಿಕೊಂಡಿದ್ದಾರಂತೆ.

‘ಅಮರ್ ಸಿಂಗ್ ಚಮ್ಕಿಲಾ’ ಚಿತ್ರದ ಯಶಸ್ಸಿನ ನಂತರ ನಟಿ 15 ದಿನಗಳ ವಿರಾಮ ತೆಗೆದುಕೊಂಡು ತಮ್ಮ ಪತಿ ರಾಜಕಾರಣಿ ರಾಘವ್ ಚಡ್ಡಾ ಅವರೊಂದಿಗೆ ಸಮಯ ಕಳೆದಿದ್ದಾರಂತೆ. ಇದೀಗ ಮತ್ತೆ ತಮ್ಮ ನಟನಾ ಕ್ಷೇತ್ರಕ್ಕೆ ಹಿಂತಿರುಗಿದ ನಟಿ ಉತ್ತಮ ಚಿತ್ರಗಳನ್ನು ನೀಡುವ ಯೋಜನೆಯಲ್ಲಿದ್ದಾರಂತೆ. ಆದರೆ ತನ್ನಿಂದ ಅಭಿಮಾನಿಗಳು ಇನ್ನು ಉತ್ತಮವಾದ ಅಭಿನಯವನ್ನು ಬಯಸುತ್ತಿದ್ದಾರೆ. ಹಾಗಾಗಿ ತಾನು ಇನ್ನೂ ಹೆಚ್ಚು ಕಲಿಯಬೇಕಿದೆ ಎಂಬುದಾಗಿ ತಿಳಿಸಿದ್ದಾರೆ.

ಅಲ್ಲದೇ ‘ ಚಮ್ಕಿಲಾ’ ಚಿತ್ರಕ್ಕಾಗಿ ಅವರು 100 ಪ್ರತಿಶತದಷ್ಟು ಕೆಲಸ ಮಾಡಿದ್ದಾರೆ ಎಂಬುದನ್ನು ತಿಳಿಸಿದ್ದಾರೆ. ಈ ಚಿತ್ರಕ್ಕಾಗಿ ನಟಿ ತಾವು16 ಕೆಜಿ ಹೆಚ್ಚಿಸಿದ್ದು, ಇಂತಹ ಕೆಲಸ ಮಾಡಲು ಒಂದು ಎರಡು ನಟಿಯರು ಬಿಟ್ಟರೆ ಬೇರೆ ಯಾರು ಮಾಡಲು ಸಿದ್ಧರಿರುವುದಿಲ್ಲ ಎಂಬುದಾಗಿ ತಿಳಿಸಿದ್ದಾರೆ. ಹಾಗೇ ಈ ಚಿತ್ರಕ್ಕಾಗಿ ಅವರು 2 ವರ್ಷಗಳಿಂದ ಬೇರೆ ಯಾವ ಕೆಲಸ ಮಾಡಲಿಲ್ಲ. ಸೆಟ್ ನಲ್ಲಿ ಲೈವ್ ಆಗಿ ಹಾಡುವುದು, ಧ್ವನಿ ನೀಡುವಂತಹ ಕೆಲಸ ಮಾಡಿದ್ದು, ಈ ಕೆಲಸವನ್ನು ಹೆಚ್ಚಿನ ಸಿನಿಮಾ ತಾರೆಯರು ಸ್ಟುಡಿಯೊದಲ್ಲಿ ಮಾಡುತ್ತಾರೆ. ಈ ರೀತಿ ರಿಸ್ಕ್ ಯಾರು ತೆಗೆದುಕೊಳ್ಳುವುದಿಲ್ಲ ಎಂದು ಅವರು ಹೇಳಿದ್ದಾರೆ. ಅಲ್ಲದೇ ಕೆಲಸಗಳನ್ನು ಮಾಡುವುದರಿಂದ ಇದು ನಮಗೆ ಹೆಚ್ಚು ಪ್ರೇರಣೆ ನೀಡುತ್ತದೆ ಮತ್ತು ಚಿತ್ರತಂಡ ನಮ್ಮನ್ನು ಸ್ವೀಕರಿಸುತ್ತಾರೆ ಎಂದು ಅವರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಸೋನಾಕ್ಷಿ ಸಿನ್ಹಾಗೆ ದುಬಾರಿ ಗಿಫ್ಟ್‌ ನೀಡಿದ ಪತಿ ಜಹೀರ್ ಇಕ್ಬಾಲ್!

ಇಮ್ತಿಯಾಜ್ ಅಲಿ ನಿರ್ದೇಶನದ ‘ಅಮರ್ ಸಿಂಗ್ ಚಮ್ಕಿಲಾ’ ಚಿತ್ರವು ಪಂಜಾಬಿ ಗಾಯಕ ಅಮರ್ ಸಿಂಗ್ ಚಮ್ಕಿಲಾ ಅವರ ದಂತಕಥೆಯನ್ನು ಆಧರಿಸಿದೆ. ಅವರ ಹಾಡುಗಳಲ್ಲಿನ ಸಾಹಿತ್ಯದಿಂದ ಅವರನ್ನು ಹಾಡುಹಗಲಿನಲ್ಲಿಯೇ ಗುಂಡಿಕ್ಕಿ ಕೊಲ್ಲಲಾಯಿತು. ಅವರ ಜೊತೆ ಅವರ ಪತ್ನಿ ಅಮರ್ ಜೋತ್ ಅವರನ್ನು ಕೂಡ ಕೊಲ್ಲಲಾಗುತ್ತದೆ. ಈ ಚಿತ್ರದಲ್ಲಿ ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಅವರು ಅಮರ್ ಜೋತ್ ಪಾತ್ರದಲ್ಲಿ ನಟಿಸಿದರೆ, ದಿಲ್ಜಿತ್ ದೋಸಾಂಜ್ ಅಮರ್ ಸಿಂಗ್ ಚಮ್ಕಿಲಾ ಪಾತ್ರ ಮಾಡಿದ್ದಾರೆ. ಈ ಚಿತ್ರ ಸೂಪರ್ ಹಿಟ್ ಆಗಿ ಹೊರಹೊಮ್ಮಿದ್ದು, ಪ್ರೇಕ್ಷಕರ ಮೆಚ್ಚುಗೆ ಗಳಿಸಿದೆ.

Continue Reading

Latest

Sonakshi Sinha: ಸೋನಾಕ್ಷಿ ಸಿನ್ಹಾಗೆ ದುಬಾರಿ ಗಿಫ್ಟ್‌ ನೀಡಿದ ಪತಿ ಜಹೀರ್ ಇಕ್ಬಾಲ್!

Sonakshi Sinha: ಮನದನ್ನೆಯ ಮನವೊಲಿಸಲು ಉಡುಗೊರೆ ನೀಡುವುದನ್ನು ನಾವು ನೋಡಿರುತ್ತೇವೆ. ಈಗ ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ ಮುಖದಲ್ಲಿ ಕೂಡ ಈ ಗಿಫ್ಟ್ ಪಡೆದ ಖುಷಿ ಕಾಣಿಸುತ್ತಿದೆ. ಬಾಲಿವುಡ್‌ನ ಜನಪ್ರಿಯ ನಟಿ ಸೋನಾಕ್ಷಿ ಸಿನ್ಹಾ ಅವರು ತಮ್ಮ ಬಹುಕಾಲದ ಗೆಳೆಯ ಜಹೀರ್ ಇಕ್ಬಾಲ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಸಮಯದಲ್ಲಿ ಜಹೀರ್ ಇಕ್ಬಾಲ್ ಪತ್ನಿಗೆ ಐಷಾರಾಮಿ BMW i7 ಕಾರ್ ಉಡುಗೊರೆ ನೀಡಿದ್ದಾರೆ.ಈ ಕಾರಿನಲ್ಲಿಯೇ ಕುಳಿತು ಪತಿ-ಪತ್ನಿಯರು ಆರತಕ್ಷತೆಗೆ ಆಗಮಿಸಿದ್ದಾರಂತೆ.

VISTARANEWS.COM


on

Sonakshi Sinha
Koo

ಮುಂಬೈ: ಬಾಲಿವುಡ್‌ನ ಜನಪ್ರಿಯ ನಟಿ ಸೋನಾಕ್ಷಿ ಸಿನ್ಹಾ (Sonakshi Sinha) ಕೊನೆಗೂ ಬಹುಕಾಲದ ಗೆಳೆಯ ಜಹೀರ್ ಇಕ್ಬಾಲ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.  ಇದೀಗ, ವಿವಾಹ ಸಂದರ್ಭದಲ್ಲಿ ಫೋಟೋಗಳು ಮತ್ತು ವೀಡಿಯೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಒಂದು ಕ್ಲಿಪ್‌ನಲ್ಲಿ, ಸಿನ್ಹಾ ಅವರು ಐಷಾರಾಮಿ BMW i7 ಕಾರಿನೊಳಗೆ ಕುಳಿತಿರುವುದು ಕಂಡುಬಂದಿದೆ. ಇದನ್ನು ಪತಿ ಇಕ್ಬಾಲ್ ಉಡುಗೊರೆಯಾಗಿ ನೀಡಿದ್ದಾರೆ ಎಂದು ಹೇಳಲಾಗಿದೆ.

ಬ್ಯಾಟರಿ ಚಾಲಿತ ಐಷಾರಾಮಿ ಸೆಡಾನ್ i7 ಆರಂಭಿಕ ಬೆಲೆ ರೂ 2.03 ಕೋಟಿ(ಎಕ್ಸ್ ಶೋ ರೂಮ್‌ ಬೆಲೆ)ಯಷ್ಟಿದೆ. ಆದರೆ ಟಾಪ್ ಮಾಡೆಲ್ ರೂ 2.50 ಕೋಟಿ (ಎಕ್ಸ್ ಶೋ ರೂಂ)ವರೆಗೆ ಇದೆಯಂತೆ.  ಆದರೆ ದಬಾಂಗ್‌ ನಟಿಗೆ ಪತಿ ಯಾವ ಮಾದರಿಯನ್ನು ಉಡುಗೊರೆಯಾಗಿ ನೀಡಿದ್ದಾರೆ ಎಂಬುದು ಇನ್ನೂ ದೃಢಪಟ್ಟಿಲ್ಲ.

ವೀಡಿಯೊದಲ್ಲಿ, ಸಿನ್ಹಾ ಬಿಳಿ ಬಣ್ಣದ EVಯಲ್ಲಿ ತನ್ನ ಜೀವನ ಸಂಗಾತಿಯೊಂದಿಗೆ ರೈಡ್ ಗೆ ಹೊರಡುವ ಆನಂದದ ಕ್ಷಣಗಳನ್ನು ಕಾಣಬಹುದು.  ಮುಂಬೈನ ಬಾಸ್ಟಿಯನ್‌ನಲ್ಲಿ ಅವರು ಆರತಕ್ಷತೆಗೆ ಆಗಮಿಸುತ್ತಿದ್ದ ಸಮಯದಲ್ಲಿ ಕ್ಲಿಪ್ ಅನ್ನು ರೆಕಾರ್ಡ್ ಮಾಡಲಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಸೋನಾಕ್ಷಿ ಸಿನ್ಹಾ ಮದುವೆ ಲವ್ ಜಿಹಾದ್?; ಶತ್ರುಘ್ನ ಸಿನ್ಹಾ ಹೇಳಿದ್ದೇನು?

ಅತ್ಯಾಧುನಿಕ ವಿನ್ಯಾಸದ ಕಾರ್ ಇದಾಗಿದ್ದು,  ಕಂಪನಿಯ ಸಿಗ್ನೇಚರ್ ಶೈಲಿಯ ಪ್ರಕಾಶಿತ ಕಿಡ್ನಿ-ಆಕಾರದ ಗ್ರಿಲ್ ಹಾಗು LED ಹೆಡ್‌ಲೈಟ್ ಸೆಟಪ್ ಗಳನ್ನು ಮುಂಭಾಗದಲ್ಲಿ ಹೊಂದಿದೆ. DRL ಗಳ ಪ್ರಭಾವಶಾಲಿ ಸೆಟ್‌ನೊಂದಿಗೆ ಜೋಡಿಸಲಾಗಿದೆ. ಪ್ರಸ್ತುತ ಮಾರಾಟದಲ್ಲಿರುವ G70 ಪೀಳಿಗೆಯ 7-ಸರಣಿಯಂತೆಯೇ EV ವಿನ್ಯಾಸವನ್ನು ಹಂಚಿಕೊಳ್ಳುತ್ತದೆ.

Continue Reading
Advertisement
IND vs ENG Semi Final
ಕ್ರೀಡೆ1 hour ago

IND vs ENG Semi Final: ಇಂಗ್ಲೆಂಡ್​ ಮಣಿಸಿ 10 ವರ್ಷಗಳ ಬಳಿಕ ಫೈನಲ್​ ಪ್ರವೇಶಿಸಿದ ಭಾರತ

Abhyas Trial
ದೇಶ3 hours ago

Abhyas Trial: ದೇಶದ ಕ್ಷಿಪಣಿ ವ್ಯವಸ್ಥೆಗೆ ಬಲ ತುಂಬುವ ‘ಅಭ್ಯಾಸ್’‌ ಪ್ರಯೋಗಾರ್ಥ ಪರೀಕ್ಷೆ ಯಶಸ್ವಿ

Congress Protest
ಕರ್ನಾಟಕ3 hours ago

ಹಾಲು, ಪೆಟ್ರೋಲ್‌ ಬೆಲೆ ಏರಿಸಿ, ಎಸಿ ಬಸ್‌ನಲ್ಲಿ ಪ್ರತಿಭಟನೆಗೆ ಹೊರಟ ಕಾಂಗ್ರೆಸ್‌ ಹಣದ ಮೂಲ ಏನು? ಬಿಜೆಪಿ ಪ್ರಶ್ನೆ

NEET Aspirant
ದೇಶ4 hours ago

NEET Aspirant: ನೀಟ್‌ ಅಕ್ರಮ ಬಯಲಾದ ಬೆನ್ನಲ್ಲೇ 17 ವರ್ಷದ NEET ಅಭ್ಯರ್ಥಿ ಆತ್ಮಹತ್ಯೆ; ಸಾವಿಗೆ ಯಾರು ಹೊಣೆ?

Tata Motors has taken the lead in the SUV market with Nexon Punch
ಕರ್ನಾಟಕ4 hours ago

Tata Motors: ನೆಕ್ಸಾನ್, ಪಂಚ್‌ ಮೂಲಕ ಎಸ್‌ಯುವಿ ಮಾರುಕಟ್ಟೆಯಲ್ಲಿ ಮುನ್ನಡೆ ಸಾಧಿಸಿದ ಟಾಟಾ ಮೋಟಾರ್ಸ್

Rohit Sharma
ಕ್ರೀಡೆ4 hours ago

Rohit Sharma: ಟಿ20 ವಿಶ್ವಕಪ್​ ಟೂರ್ನಿಯಲ್ಲಿ ವಿಶ್ವ ದಾಖಲೆ ಬರೆದ ಹಿಟ್​ಮ್ಯಾನ್ ರೋಹಿತ್

virat kohli
ಕ್ರೀಡೆ5 hours ago

Virat Kohli: ಮೊದಲ ಬಾರಿಗೆ ಸೆಮಿಫೈನಲ್​ನಲ್ಲಿ ಸಿಂಗಲ್​ ಡಿಜಿಟ್​ಗೆ ಔಟ್​ ಆದ​ ಕೊಹ್ಲಿ; ಸಮಾಧಾನಪಡಿಸಿದ ಕೋಚ್​

DCM DK Shivakumar latest statement about CM change issue
ಪ್ರಮುಖ ಸುದ್ದಿ5 hours ago

DK Shivakumar: ಸಿಎಂ ಬದಲಾವಣೆ; ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದ ಡಿ.ಕೆ. ಶಿವಕುಮಾರ್

roopantara Movie First Look Poster released
ಕರ್ನಾಟಕ5 hours ago

Kannada New Movie: ‘ರೂಪಾಂತರ’ಗೊಂಡ ರಾಜ್ ಬಿ. ಶೆಟ್ಟಿ! ಮತ್ತೊಂದು ವಿಭಿನ್ನ ಚಿತ್ರ

Hosur Airport
ಪ್ರಮುಖ ಸುದ್ದಿ5 hours ago

Hosur Airport: ಬೆಂಗಳೂರಿನಿಂದ ಕೇವಲ 40 ಕಿ.ಮೀ ದೂರದ ಹೊಸೂರಿನಲ್ಲಿ ಹೊಸ ಏರ್‌ಪೋರ್ಟ್‌!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ8 hours ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ9 hours ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು11 hours ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ15 hours ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ3 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ6 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ7 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು2 weeks ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು2 weeks ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

ಟ್ರೆಂಡಿಂಗ್‌