Drama Juniors 5: ವೀಕ್ಷಕರಿಗೆ ರಸದೌತಣ ಬಡಿಸಲು ಮತ್ತೆ ಬರ್ತಿದ್ದಾರೆ ಡ್ರಾಮಾ ಜೂನಿಯರ್ಸ್! - Vistara News

ಕಿರುತೆರೆ

Drama Juniors 5: ವೀಕ್ಷಕರಿಗೆ ರಸದೌತಣ ಬಡಿಸಲು ಮತ್ತೆ ಬರ್ತಿದ್ದಾರೆ ಡ್ರಾಮಾ ಜೂನಿಯರ್ಸ್!

Drama Juniors 5: ಜಡ್ಜ್‌ಗಳಾಗಿ ಹಿರಿಯ ನಟಿ ಲಕ್ಷ್ಮಿ, ವಿ. ರವಿಚಂದ್ರನ್ ಜತೆಗೆ ರಚಿತಾ ರಾಮ್ ಕೂಡ ‘ಡ್ರಾಮಾ ಜೂನಿಯರ್ಸ್’ನಲ್ಲಿ ಇರಲಿದ್ದಾರೆ. ಇದೇ ನವೆಂಬರ್ 18ರಿಂದ ಡ್ರಾಮಾ ‌ಜೂನಿಯರ್ಸ್-5 (Drama Juniors 5) ಶನಿ-ಭಾನು ರಾತ್ರಿ 9ಕ್ಕೆ ಪ್ರಸಾರವಾಗಲಿದೆ.

VISTARANEWS.COM


on

Drama Juniors 5 Promo
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ (Drama Juniors 5) ಈಗಾಗಲೇ ಸಾಕಷ್ಟು ಹೊಸ ಧಾರಾವಾಹಿಗಳು, ರಿಯಾಲಿಟಿ ಶೋಗಳು ಪ್ರಸಾರ ಕಾಣುತ್ತಿದೆ. ಅದೇ ರೀತಿ ಡ್ರಾಮಾ ‌ಜೂನಿಯರ್ಸ್ ಪ್ರಸಾರ ಯಾವಾಗ ಎಂದು ಪ್ರೇಕ್ಷಕರು ಕಮೆಂಟ್‌ ಮೂಲಕ ಪ್ರಶ್ನಿಸುತ್ತಲೇ ಇದ್ದರು. ಆದರೀಗ ವಾಹಿನಿ ನೋಡುಗರಿಗೆ ಗುಡ್‌ ನ್ಯೂಸ್‌ ಕೊಟ್ಟಿದೆ. ಹೌದು ಇದೇ ಇದೇ ನವೆಂಬರ್ 18ರಿಂದ ಡ್ರಾಮಾ ‌ಜೂನಿಯರ್ಸ್-5 (Drama Juniors 5) ಶನಿ-ಭಾನು ರಾತ್ರಿ 9ಕ್ಕೆ ಪ್ರಸಾರವಾಗಲಿದೆ.

ಪುಟಾಣಿ ಪ್ರತಿಭೆಗಳು ತುಂಬಿರೋ ಬಸ್ಸು ಈಗಾಗಲೇ ಹೊರಿಟಿದೆ. ಡ್ರಾಮಾ ಜೂನಿಯರ್ಸೇ ಇವರ ಕೇರ್ ಆಫ್ ಅಡ್ರೆಸ್ಸು. ನಿಮ್ಮ ಮುಂದೆ ಇದೇ ನವೆಂಬರ್ 18ರಿಂದ ಎಂದು ಜೀ ವಾಹಿನಿ ಪ್ರೋಮೊ ಹಂಚಿಕೊಂಡಿದೆ. ಎಂದಿನಂತೆ ಜಡ್ಜ್‌ಗಳಾಗಿ ಹಿರಿಯ ನಟಿ ಲಕ್ಷ್ಮಿ, ವಿ. ರವಿಚಂದ್ರನ್ ಜತೆಗೆ ರಚಿತಾ ರಾಮ್ ಕೂಡ ‘ಡ್ರಾಮಾ ಜೂನಿಯರ್ಸ್’ನಲ್ಲಿ ಇರಲಿದ್ದಾರೆ.

ಇದನ್ನೂ ಓದಿ: Yathindra Siddaramaiah : ಯತೀಂದ್ರ‌ ವರ್ಗಾವಣೆ ದಂಧೆ; ಮಾನ – ಮರ್ಯಾದೆ ಇದ್ದರೆ ಸಿಎಂ ರಾಜೀನಾಮೆ ಕೊಡಲಿ ಎಂದ ಎಚ್‌ಡಿಕೆ

ಮಾಸ್ಟರ್ ಆನಂದ್ ನಿರೂಪಣೆಯಲ್ಲಿ ‘ಡ್ರಾಮಾ ಜೂನಿಯರ್ಸ್’ ಸೀಸನ್ 5 ಪ್ರಾರಂಭವಾಗಲಿದೆ. ಜೀ ಕನ್ನಡದ ಜನಪ್ರಿಯ ಶೋ ಡ್ರಾಮಾ ಜೂನಿಯರ್ ಇನ್ನೆರಡು ದಿನಗಳಲ್ಲಿ ಎಲ್ಲರನ್ನು ರಂಜಿಸಲು ಬರುತ್ತಿದೆ. ಈಗಾಗಲೇ 4 ಸೀಸನ್ ಮುಗಿಸಿ ಈಗ ಐದನೇ ಸೀಸನ್‌ಗೆ ಕಾಲಿಟ್ಟಿದೆ. ಹಲವಾರು ದಿನಗಳಿಂದ ಕಾಯುತ್ತಿದ್ದ ವೀಕ್ಷಕರ ಕಣ್ಣಿಗೆ ರಸದೌತಣವನ್ನು ಉಣಬಡಿಸಲು ಡ್ರಾಮಾ ಜೂನಿಯರ್ಸ್ ಬರುತ್ತಿದ್ದಾರೆ. ಪ್ರೇಕ್ಷಕರು ಕೂಡ ಮಕ್ಕಳ ಟ್ಯಾಲೆಂಟ್‌ ನೋಡೋದೇ ಒಂದು ಹಬ್ಬ.. ಡ್ರಾಮಾ ಜೂನಿಯರ್ಸ್‌ನ ಎಲ್ಲ ಪುಟಾಣಿಗಳಿಗೆ ಶುಭವಾಗಲಿ ಎಂದು ಕಮೆಂಟ್‌ ಮಾಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಿರುತೆರೆ

Kannada Serials TRP: ಟಾಪ್‌ 5ನಲ್ಲಿ ‘ಭಾಗ್ಯಲಕ್ಷ್ಮೀ’; ‘ಪುಟ್ಟಕ್ಕನ ಮಕ್ಕಳು’ ನಂಬರ್‌ 1!

Kannada Serials TRP: ಉಮಾಶ್ರೀ, ಸಂಜನಾ ಬುರ್ಲಿ, ಧನುಷ್ ಎನ್​ಎಸ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ. ದೇ ಆಗಸ್ಟ್ 12ರಿಂದ ಆರಂಭ ಆಗಲಿದೆ. ಈ ಧಾರಾವಾಹಿ ಸಂಜೆ 7:30ಕ್ಕೆ ಪ್ರಸಾರ ಕಾಣಲಿದೆ. ಇದೇ ಸಮಯದಲ್ಲಿ ಈಗ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಪ್ರಸಾರ ಕಾಣುತ್ತಿದೆ. ಹೀಗಾಗಿ, ಈ ಧಾರಾವಾಹಿಯ ಸಮಯ ಬದಲಾಗಲಿದೆ.

VISTARANEWS.COM


on

Kannada Serials TRP TOP 5 bhagyalakshmi puttakkana makkalu number 1
Koo

ಬೆಂಗಳೂರು: 30ನೇ ವಾರದ ಟಿಆರ್​ಪಿ ಹೊರ ಬಿದ್ದಿದೆ. ಈ ಪೈಕಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೊದಲ ಸ್ಥಾನ ಕಾಪಾಡಿಕೊಂಡು ಬಂದಿದೆ. ಈ ಮೊದಲಿಗಿಂತಲೂ ‘ಸೀತಾ ರಾಮ’ ಧಾರಾವಾಹಿಗೆ ಹೆಚ್ಚಿನ ಟಿಆರ್​ಪಿ ಸಿಕ್ಕಿದೆ ಎನ್ನುವುದು ವಿಶೇಷ.ಈ ಧಾರಾವಾಹಿಯ ಸಮಯದಲ್ಲಿ ಬದಲಾವಣೆ ಆಗೋ ಸಾಧ್ಯತೆ ಇದೆ.

‘ಪುಟ್ಟಕ್ಕನ ಮಕ್ಕಳು’

ಈ ವಾರ ʼಪುಟ್ಟಕ್ಕನ ಮಕ್ಕಳುʼ ಧಾರಾವಾಹಿ ಮೊದಲ ಸ್ಥಾನ ಪಡೆದುಕೊಂಡಿದೆ. ಉಮಾಶ್ರೀ, ಸಂಜನಾ ಬುರ್ಲಿ ಮೊದಲಾದವರ ನಟನೆ ಗಮನ ಸೆಳೆದಿದೆ. ಹೀಗಾಗಿ ಈ ಕಥೆ ಹಲವು ಟ್ವಿಸ್ಟ್ ಪಡೆದು ಸಾಗುತ್ತಿರುವುದರಿಂದ ಪ್ರೇಕ್ಷಕರು ಕೂಡ ಧಾರಾವಾಹಿಯನ್ನು ಮೆಚ್ಚಿಕೊಳ್ಳುತ್ತಿದ್ದಾರೆ. ಈ ಮೊದಲು ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಎರಡಂಕಿಯ ಟಿಆರ್​ಪಿ ಪಡೆದಿತ್ತು. ಈಗಲೂ ಧಾರಾವಾಹಿಗೆ ಮತ್ತೆ ಅದೇ ರೀತಿಯ ಬೇಡಿಕೆ ಸೃಷ್ಟಿ ಆಗಿದೆ. ಈ ಧಾರಾವಾಹಿಗೆ ಹಲವು ಟ್ವಿಸ್ಟ್​ಗಳು ಸಿಕ್ಕಿರುವುದರಿಂದ ಧಾರಾವಾಹಿಯನ್ನು ಜನರು ಹೆಚ್ಚೆಚ್ಚು ವೀಕ್ಷಿಸುತ್ತಿದ್ದಾರೆ. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ (puttakkana makkalu Serial) ಶುರುವಾಗಿ ಎರಡು ವರ್ಷಗಳು ಸಂದಿವೆ. ಉಮಾಶ್ರೀ, ಸಂಜನಾ ಬುರ್ಲಿ, ಧನುಷ್ ಎನ್​ಎಸ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ. ದೇ ಆಗಸ್ಟ್ 12ರಿಂದ ಆರಂಭ ಆಗಲಿದೆ. ಈ ಧಾರಾವಾಹಿ ಸಂಜೆ 7:30ಕ್ಕೆ ಪ್ರಸಾರ ಕಾಣಲಿದೆ. ಇದೇ ಸಮಯದಲ್ಲಿ ಈಗ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಪ್ರಸಾರ ಕಾಣುತ್ತಿದೆ. ಹೀಗಾಗಿ, ಈ ಧಾರಾವಾಹಿಯ ಸಮಯ ಬದಲಾಗಲಿದೆ.

ಇದನ್ನೂ ಓದಿ: Kannada Serials TRP: ಟಾಪ್‌ 3ಯಲ್ಲಿ ʻಲಕ್ಷ್ಮೀ ನಿವಾಸʼ: ಐದನೇ ಸ್ಥಾನದಲ್ಲಿ ʻಲಕ್ಷ್ಮೀ ಬಾರಮ್ಮʻ ಧಾರಾವಾಹಿ

‘ಲಕ್ಷ್ಮೀ ನಿವಾಸ’

ಎರಡನೇ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ಈ ಧಾರಾವಾಹಿ ಕೂಡ ಜನ ಮೆಚ್ಚುಗೆ ಪಡೆದಿದೆ. ವಿಶೇಷ ಎಂದರೆ ನಗರ ಭಾಗದ ಟಿಆರ್​ಪಿಯಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯ ಟಿಆರ್​ಪಿಯನ್ನು ಹಿಂದಿಕ್ಕಿದೆ. ಮೂರನೇ ಸ್ಥಾನದಲ್ಲಿ ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿ ಇದೆ. ಈ ಧಾರಾವಾಹಿ ಉತ್ತಮ ಟಿಆರ್​ಪಿ ಪಡೆಯುತ್ತಿದೆ.

ಶ್ರಾವಣಿ ಸುಬ್ರಮಣ್ಯ

ಕೆಲವು ದಿನಗಳ ಹಿಂದೆಯಷ್ಟೇ ಜೀ ಕನ್ನಡ ಧಾರಾವಾಹಿಯಲ್ಲಿ ಶ್ರಾವಣಿ ಸುಬ್ರಮಣ್ಯ ಪ್ರಸಾರ ಕಾಣುತ್ತಿದೆ. ಎರಡನೇ ಸ್ಥಾನದಲ್ಲಿ ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿ ಇದೆ. ಈ ಧಾರಾವಾಹಿಯನ್ನು ಜನರು ಮೆಚ್ಚಿಕೊಂಡಿದ್ದಾರೆ. ಸೀತಾ ರಾಮ ಧಾರಾವಾಹಿ ಹಿಂದಿಕ್ಕಿ ಮುಂದೆ ಸಾಗುತ್ತಿದೆ. ಈ ಮೊದಲು ಪ್ರಸಾರ ಕಾಣುತ್ತಿದ್ದ ಬೇಡಿಕೆಯ ಧಾರಾವಾಹಿಗಳ ಟಿಆರ್​ಪಿಯನ್ನು ಈ ಧಾರಾವಾಹಿ ಹಿಂದಿಕ್ಕಿದೆ. ಮನೆಯಲ್ಲಿ ಸಿರಿವಂತಿಕೆಯ ತುಂಬಿದ್ದರೂ ಅಪ್ಪನ ಪ್ರೀತಿಗಾಗಿ ಹಾತೊರೆಯುವ ಮಗಳು ಒಂದೆಡೆಯಾದರೆ ಮನೆಯಲ್ಲಿ ಬಡತನವಿದ್ದರೂ ಪ್ರೀತಿಯಲ್ಲಿ ಶ್ರೀಮಂತರಾಗಿರುವ ಮಧ್ಯಮ ವರ್ಗದ ಕುಟುಂಬದ ಕಥೆಯ ಜತೆ ಎರಡು ಹೃದಯಗಳ ಕಥೆಯನ್ನು ಶ್ರಾವಣಿ ಸುಬ್ರಹ್ಮಣ್ಯ ಮೂಲಕ ಚಾನೆಲ್‌ ಪ್ರೇಕ್ಷಕರ ಮುಂದಿಟ್ಟಿದೆ. ಹಿರಿಯ ಕಲಾವಿದರಾದ ಮೋಹನ್‌ ಮತ್ತು ಬಾಲರಾಜ್‌ , ಕಿರುತೆರೆಯ ಖ್ಯಾತ ಕಲಾವಿದೆಯೆರಾದ ಅಪೂರ್ವ ಮತ್ತು ಸ್ನೇಹ ಇವರು ಜೊತೆ ಯುವ ಕಲಾವಿದರು ಈ ಧಾರಾವಾಹಿಯಲ್ಲಿ ಕಾಣಿಸಿಕೊಂಡಿದ್ದಾರೆ.

‘ಸೀತಾ ರಾಮ’ ಧಾರಾವಾಹಿ

ನಾಲ್ಕನೇ ಸ್ಥಾನದಲ್ಲಿ ‘ಸೀತಾ ರಾಮ’ ಧಾರಾವಾಹಿ ಇದೆ. ಈಗಾಗಲೇ ಸೀತಾ ಹಾಗೂ ರಾಮ್ ಮದುವೆ ನೆರವೇರಿದೆ. ಈ ಕಾರಣಕ್ಕೆ ಧಾರಾವಾಹಿ ಒಳ್ಳೆಯ ಟಿಆರ್​ಪಿ ಪಡೆದು ಮುನ್ನುಗ್ಗುತ್ತಿದೆ. ಈ ಧಾರಾವಾಹಿಯಲ್ಲಿ ಗಗನ್ ಚಿನ್ನಪ್ಪ ಹಾಗೂ ವೈಷ್ಣವಿ ಗೌಡ ನಟಿಸಿದ್ದಾರೆ.

ʻಭಾಗ್ಯಲಕ್ಷ್ಮೀ’

ಐದನೇ ಸ್ಥಾನದಲ್ಲಿ ‘ಭಾಗ್ಯಲಕ್ಷ್ಮೀ’ ಧಾರಾವಾಹಿ ಇದೆ. ಕಲರ್ಸ್ ಕನ್ನಡದ ಧಾರಾವಾಹಿಗಳ ಪೈಕಿ ಸ್ಥಾನ ಪಡೆದ ಏಕೈಕ ಧಾರಾವಾಹಿ ಇದಾಗಿದೆ.

Continue Reading

ಸಿನಿಮಾ

Actor Jaggesh: ಕನ್ನಡ ಚಿತ್ರರಂಗದ ಈಗಿನ ಸ್ಥಿತಿಗತಿ ಕಂಡು ಕಣ್ಣೀರಿಟ್ಟ ನವರಸ ನಾಯಕ ಜಗ್ಗೇಶ್‌!

Actor Jaggesh: ಇದೀಗ ನಟ ಜಗ್ಗೇಶ್ ಅವರು ಕನ್ನಡ ಚಿತ್ರರಂಗದ ಪ್ರಸ್ತುತ ದಿನಗಳ ಬಗ್ಗೆ ಕಣ್ಣೀರು ಹಾಕಿದ್ದಾರೆ. ಜೀ ಕನ್ನಡ ವಾಹಿನಿಯ ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋನ ಜಡ್ಜ್ ಆಗಿರುವ ಜಗ್ಗೇಶ್, ಕಾರ್ಯಕ್ರಮದಲ್ಲಿ ಕನ್ನಡ ಚಿತ್ರರಂಗದ ಈಗಿನ ಪರಿಸ್ಥಿತಿಯ ಬಗ್ಗೆ ಮಾತನಾಡುತ್ತಲೇ ಕಣ್ಣೀರಿಟ್ಟರು.

VISTARANEWS.COM


on

Actor Jaggesh tears after seeing the current state of Kannada film industry
Koo

ಬೆಂಗಳೂರು: ನವರಸ ನಾಯಕ ಜಗ್ಗೇಶ್‌ (Actor Jaggesh) `ರಂಗನಾಯಕ’ ಸಿನಿಮಾ ಕೆಲ ತಿಂಗಳ ಹಿಂದೆ ಬಿಡುಗಡೆ ಆಗಿತ್ತು. ಸಿನಿಮಾದ ಬಗ್ಗೆ ಬಹಳ ನಿರೀಕ್ಷೆಗಳಿದ್ದವು ಆದರೆ ಸಿನಿಮಾ ಉತ್ತಮ ಪ್ರದರ್ಶನ ಕಾಣಲಿಲ್ಲ. ಬಳಿಕ ನಟ ಜಗ್ಗೇಶ್, ಸಿನಿಮಾ ಬಗ್ಗೆ ಕ್ಷಮೆ ಸಹ ಕೇಳಿದ್ದರು. ಇದೀಗ ನಟ ಜಗ್ಗೇಶ್ ಅವರು ಕನ್ನಡ ಚಿತ್ರರಂಗದ ಪ್ರಸ್ತುತ ದಿನಗಳ ಬಗ್ಗೆ ಕಣ್ಣೀರು ಹಾಕಿದ್ದಾರೆ. ಜೀ ಕನ್ನಡ ವಾಹಿನಿಯ ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋನ ಜಡ್ಜ್ ಆಗಿರುವ ಜಗ್ಗೇಶ್, ಕಾರ್ಯಕ್ರಮದಲ್ಲಿ ಕನ್ನಡ ಚಿತ್ರರಂಗದ ಈಗಿನ ಪರಿಸ್ಥಿತಿಯ ಬಗ್ಗೆ ಮಾತನಾಡುತ್ತಲೇ ಕಣ್ಣೀರಿಟ್ಟರು.

ʻʻಎಲ್ಲರೂ ಒಳ್ಳೆಯ ಸಿನಿಮಾಗಳನ್ನೇ ಮಾಡುತ್ತಿದ್ದಾರೆ. ಯಾರೂ ಕೆಟ್ಟ ಸಿನಿಮಾ ಮಾಡಬೇಕು ಎಂದುಕೊಂಡು ಬರುವುದಿಲ್ಲ. ಪೇಪರ್‌ಗೆ ಒಂದು ಜಾಹೀರಾತು ನೀಡುತ್ತಾರೆ. ಎಲ್ಲ ಮಾಡುತ್ತಾರೆ. ಆದರೆ ಚಿತ್ರಮಂದಿರಗಳಲ್ಲಿ ಜನರೇ ಇಲ್ಲ ಅಂದಾಗ ಕನ್ನಡ ಚಿತ್ರರಂಗವೇ ಹೀಗಾ? ಎಂದರೆ ಖಂಡಿತ ಇಲ್ಲ. ಏನಾಗುತ್ತಿದೆ ಚಿತ್ರರಂಗಕ್ಕೆ ಅರ್ಥವಾಗುತ್ತಿಲ್ಲ. ಹೀಗೆ ಆದರೆ ಹೇಗೆ ಸಿನಿಮಾ ಮಾಡಬೇಕು ಅರ್ಥವಾಗುತ್ತಿಲ್ಲ’ ಎಂದಿದ್ದಾರೆ.

ʻʻಅಕ್ಷಯ್‌ ಕುಮಾರ್‌ ಕೋಟ್ಯಂತರ ಹಣವನ್ನು ಹಾಕುತ್ತಿದ್ದಾರೆ. ಕೋಟ್ಯಂತರ ರೂಪಾಯಿ ನಷ್ಟವಾಗಿದೆ. ಅವರಂತೂ ಡಿಸಾಸ್ಟರ್ ಆಗಿಬಿಟ್ಟಿದ್ದಾರೆ. ಇಡೀ ಭಾರತದಲ್ಲಿ ಸಿನಿಮಾ ಎಂಬುದು ಸತ್ತು ಹೋಗುತ್ತಿದೆ. ಈಗೆಲ್ಲ ಹೇಗೆ ಆಗಿಬಿಟ್ಟಿದೆಯೆಂದರೆ ಯಾರು 200 ಕೋಟಿ ರೂಪಾಯಿ ಹಾಕಿ ಸಿನಿಮಾ ಮಾಡುತ್ತಾರೋ ಅದಷ್ಟೆ ಸಿನಿಮಾ ಎಂಬಂತೆ ಆಗಿಬಿಟ್ಟಿದೆ. ಯಾರು ಒಂದೊಳ್ಳೆ ಕತೆ ಮಾಡಿ, ಸಣ್ಣ ಸಿನಿಮಾ ಮಾಡುತ್ತಾರೋ ಅದು ಸಿನಿಮಾ ಅಲ್ಲ ಎಂಬಂತೆ ಆಗಿಬಿಟ್ಟಿದೆ ಪರಿಸ್ಥಿತಿ. ಹೀಗಾದರೆ ಉಳಿದವರು ಬದುಕುವುದು ಹೇಗೆ’ ಎಂದು ಜಗ್ಗೇಶ್ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: Kannada New Movie: `ನೈಸ್ ರೋಡ್’ ಸಿನಿಮಾಗೆ ನೋಟಿಸ್ ; ಅಷ್ಟಕ್ಕೂ ಆಗಿದ್ದೇನು?

ʻʻನನ್ನ ಅಣ್ಣತಮ್ಮಂದಿರು, ಒಡಹುಟ್ಟಿದ್ದವರು ಸಿನಿಮಾ ರಿಲೀಸ್‌ ಆಗುವಾಗ ಇದು ದರಿದ್ರು ಸಿನಿಮಾ, ವೇಸ್ಟ್‌ ಎಂದು ಶ್ರಮ ಹಾಕಿ ಇನ್ನೊಬ್ಬರ ಶ್ರಮವನ್ನು ಹಾಳು ಮಾಡುತ್ತಾರೆ. ಅದನ್ನ ನೋಡಿ ಜನರು ಬರುವರಿದ್ದಾರೆ. ಎಲ್ಲರೂ ಚೆನ್ನಾಗಿರಲಿ. ಯಾರಿಗೂ ಕೆಟ್ಟದ್ದನ್ನು ಬಯಸೋದು ಬೇಡ. ಬೇಜಾರಾಗಿ ಸಮಯವೇ ಹೋಗುತ್ತಿಲ್ಲ ಎಂದು ಯುಟ್ಯೂಬ್‌ನಲ್ಲಿ ಒಂದು ಸೀನ್‌ ನೋಡಿದರೂ ಅದುವೇ ಸಿನಿಮಾ. ನಾನು ಭಾವುಕನಾದೆ ಯಾಕೆ ಅಂದರೆ ನನ್ನ ಅಣು, ನನ್ನ ಬದುಕು, ನನ್ನ ಕನಸು, ನನ್ನ ಬಟ್ಟೆ, ಊಟ ಸಿನಿಮಾ ಕೊಟ್ಟಿದೆ. ಹಾಗಾಗಿ ನಾನು ಸಿನಿಮಾವನ್ನು ತಾಯಿ ತರ ಪ್ರೀತಿಸುತ್ತೇನೆʼʼಎಂದು ಕಣ್ಣೀರಿಟ್ಟರು.

Continue Reading

ಕಿರುತೆರೆ

Sathya serial kannada: ಶೀಘ್ರದಲ್ಲೇ ಅಂತ್ಯ ಹಾಡಲಿದೆಯಂತೆ ʻಸತ್ಯʼ ಧಾರಾವಾಹಿ; ಬರ್ತಿದೆ ಹೊಸ ಸೀರಿಯಲ್‌!

Sathya serial kannada: ಸತ್ಯ ಧಾರಾವಾಹಿಯಲ್ಲಿ  ಸತ್ಯ ಪೊಲೀಸ್ ಅಧಿಕಾರಿಯಾಗಿ ಒಂದಲ್ಲ ಒಂದು ಕೇಸ್‌ಗಳನ್ನು ಪರಿಹಾರ ಮಾಡುತ್ತಾಳೆ. , ಕಾರ್ತಿಕ್‌ನನ್ನು ಮದುವೆಯಾಗಬೇಕಿದ್ದ ಸತ್ಯಾಳ ಅಕ್ಕ ದಿವ್ಯಾ ಮದುವೆ ದಿನ ಬೇರೊಬ್ಬನ ಜತೆ ಓಡಿ ಹೋದ ಕಾರಣ, ತಾನೇ ಮದುವೆಯಾಗುವಂತಹ ಸ್ಥಿತಿ ನಿರ್ಮಾಣ ಆಗಿ, ಕೊನೆಗೆ ಮದುವೆಯಾಗಿ, ಗಂಡ, ಅತ್ತೆ ಹಾಗೂ ಮನೆಯವರೆಲ್ಲರ ತಾತ್ಸಾರಕ್ಕೆ ಗುರಿಯಾಗಿ ಎಲ್ಲವನ್ನೂ ಎದುರಿಸಿ, ಒಳ್ಳೆಯ ಗೃಹಿಣಿಯಾಗಿ ಬಾಳುತ್ತಾಳೆ. ಇದೀಗ ಸತ್ಯ ಗರ್ಭಿಣಿ.

VISTARANEWS.COM


on

Sathya serial kannada end soon A new serial has arrived
Koo

ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಸತ್ಯ ಧಾರಾವಾಹಿ ಇನ್ನೇನು ಕೊನೆಯಾಗಲಿದೆ ಎನ್ನುವ ಸುದ್ದಿ ಬಂದಿದೆ.

ಈಗಾಗಲೇ ‘ಅಣ್ಣಯ್ಯ’ ಧಾರಾವಾಹಿಯ ಪ್ರೋಮೋ ರಿಲೀಸ್ ಆಗಲಿದ್ದು, ಆದಷ್ಟು ಬೇಗ ಹೊಸ ಧಾರಾವಾಹಿ ಪ್ರಸಾರ ಆಗಲಿದೆ. ‘ಸತ್ಯ’ ಧಾರಾವಾಹಿಯು ಅಂತ್ಯ ಆಗಲಿದೆ ಎನ್ನಲಾಗಿದೆ.

2020 ಡಿಸೆಂಬರ್‌ನಿಂದ ಈ ಧಾರಾವಾಹಿ ಪ್ರಸಾರ ಆಗುತ್ತಿದ್ದು, ಆರಂಭದ ವಾರಗಳಲ್ಲಿ ಈ ಧಾರಾವಾಹಿ ಟಾಪ್ 5 ಸ್ಥಾನದಲ್ಲಿತ್ತು. ಇತ್ತೀಚೆಗೆ ಈ ಧಾರಾವಾಹಿಯ ಟಿಆರ್‌ಪಿ ಕಡಿಮೆ ಆಗಿತ್ತು.

ಇದನ್ನೂ ಓದಿ: Kannada New Movie: ಭಾರಿ ಮೊತ್ತಕ್ಕೆ ಮಾರಾಟವಾಯ್ತು ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಸಿನಿಮಾ ಆಡಿಯೊ ಹಕ್ಕು

 ಗೌತಮಿ ಜಾದವ್ ಅಥವಾ ಸಾಗರ್ ಬಿಳಿ ಗೌಡ ಬಿಗ್‌ಬಾಸ್‌ಗೆ ತೆರಳಲಿದ್ದಾರೆ ಹಾಗಾಗಿ ಸೀರಿಯಲ್ ಕಥೆ ಮುಗಿಸಲಿದ್ದಾರೆ ಎಂದು ಸಹ ಹೇಳಿದ್ದಾರೆ. ಆದರೆ ಯಾವುದೂ ಅಧಿಕೃತವಾಗಿ ಹೇಳಿಕೆ ಬಂದಿಲ್ಲ. 

ಸತ್ಯ ಧಾರಾವಾಹಿಯಲ್ಲಿ  ಸತ್ಯ ಪೊಲೀಸ್ ಅಧಿಕಾರಿಯಾಗಿ ಒಂದಲ್ಲ ಒಂದು ಕೇಸ್‌ಗಳನ್ನು ಪರಿಹಾರ ಮಾಡುತ್ತಾಳೆ. , ಕಾರ್ತಿಕ್‌ನನ್ನು ಮದುವೆಯಾಗಬೇಕಿದ್ದ ಸತ್ಯಾಳ ಅಕ್ಕ ದಿವ್ಯಾ ಮದುವೆ ದಿನ ಬೇರೊಬ್ಬನ ಜತೆ ಓಡಿ ಹೋದ ಕಾರಣ, ತಾನೇ ಮದುವೆಯಾಗುವಂತಹ ಸ್ಥಿತಿ ನಿರ್ಮಾಣ ಆಗಿ, ಕೊನೆಗೆ ಮದುವೆಯಾಗಿ, ಗಂಡ, ಅತ್ತೆ ಹಾಗೂ ಮನೆಯವರೆಲ್ಲರ ತಾತ್ಸಾರಕ್ಕೆ ಗುರಿಯಾಗಿ ಎಲ್ಲವನ್ನೂ ಎದುರಿಸಿ, ಒಳ್ಳೆಯ ಗೃಹಿಣಿಯಾಗಿ ಬಾಳುತ್ತಾಳೆ. ಇದೀಗ ಸತ್ಯ ಗರ್ಭಿಣಿ.

 ‘ಸಿಂಧುರಾ’ ಧಾರಾವಾಹಿಯ ಅಧಿಕೃತ ರಿಮೇಕ್ ಇದಾಗಿದೆ. ಇನ್ನು ಈ ಧಾರಾವಾಹಿಯು ಆ ನಂತರದಲ್ಲಿ 6 ಭಾಷೆಗಳಲ್ಲಿ ರಿಮೇಕ್ ಆಗಿದೆ. 

ಗೌತಮಿ ಜಾಧವ್, ಸಾಗರ್ ಬಿಳಿಗೌಡ, ರಶ್ಮಿ, ಶಾಲಿನಿ, ಮಾಲತಿ ಸರ್‌ದೇಶಪಾಂಡೆ, ಪ್ರಿಯಾಂಕಾ ಶಿವಣ್ಣ, ಗಿರಿಜಾ ಲೋಕೇಶ್, ಶ್ರೀನಿವಾಸ್ ಪ್ರಭು ಮುಂತಾದವರು ಈ ಧಾರಾವಾಹಿಯಲ್ಲಿ ನಟಿಸಿದ್ದಾರೆ. ಸ್ವಪ್ನಾ ಕೃಷ್ಣ ಅವರು ಈ ಧಾರಾವಾಹಿಯ ನಿರ್ದೇಶನ, ನಿರ್ಮಾಣ ಮಾಡಿದ್ದಾರೆ.  ಸತ್ಯಾಗೆ ಮಗುವಾಗುವ ಮೂಲಕ ಸೀರಿಯಲ್‌ಗೆ ಹ್ಯಾಪಿ ಎಂಡಿಂಗ್ ಕೊಡುತ್ತಾರೆ ಎಂದು ವರದಿಯಾಗಿದೆ.

Continue Reading

ಸ್ಯಾಂಡಲ್ ವುಡ್

Actor Darshan: ರೇಣುಕಾಸ್ವಾಮಿ ಕುಟುಂಬಕ್ಕೆ ಹಣ ಸಹಾಯ ಮಾಡಿ, ದರ್ಶನ್‌ ಪರವಾಗಿ ವಾದ ಮಾಡಿದ ನಟ ಗಣೇಶ್ ರಾವ್!

Actor Darshan: ‘ಕೆಂಡಸಂಪಿಗೆ’ ಧಾರಾವಾಹಿಯಲ್ಲಿ ರಾಜಕಾರಣಿ ಶಂಕರೇಗೌಡ ಪಾತ್ರದಲ್ಲಿ ನಟ ಗಣೇಶ್ ರಾವ್ ರೇಣುಕಾಸ್ವಾಮಿ ಅವರ ಮನೆಗೆ ಭೇಟಿ ನೀಡಿ ದರ್ಶನ್ ಪರವಾಗಿ ಮಾತನಾಡಿದರು. ಜತೆಗೆ ರೇಣುಕಾಸ್ವಾಮಿ ಕುಟುಂಬಕ್ಕೆ ಗಣೇಶ್ ರಾವ್ ಹಣ ಸಹಾಯ ಮಾಡಿದರು.ಮೃತ ರೇಣುಕಾಸ್ವಾಮಿ ಅವರ ಮನೆಗೆ ನಟ ಗಣೇಶ್ ರಾವ್ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ರೇಣುಕಾಸ್ವಾಮಿ ಅವರ ಮನೆಗೆ ಭೇಟಿ ನೀಡಿದ ನಟ ಗಣೇಶ್ ರಾವ್‌, ರೇಣುಕಾಸ್ವಾಮಿ ಅವರ ಕುಟುಂಬಸ್ಥರ ಮುಂದೆಯೇ ದರ್ಶನ್ ಪರವಾಗಿ ಮಾತನಾಡಿದರು.

VISTARANEWS.COM


on

Actor Darshan Ganesh Rao Visits Renukaswamy Family and spport In Chitradurga
Koo

ಬೆಂಗಳೂರುಚಾಲೆಂಜಿಂಗ್ ಸ್ಟಾರ್‌ ದರ್ಶನ್ (Actor Darshan) ಜೈಲು ಸೇರಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಕೇಸ್‌ನಲ್ಲಿ ದರ್ಶನ್‌ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇನ್ನು ಹಲವು ನಾಯಕರು, ಸೆಲೆಬ್ರಿಟಿಗಳು ರೇಣುಕಾ ಸ್ವಾಮಿ ಕುಟುಂಬಕ್ಕೆ ಸಹಾಯವನ್ನು ಮಾಡಿದ್ದಾರೆ. ನಿನ್ನೆಯಷ್ಟೇ ವಿನೋದ್‌ ರಾಜ್‌ ಅವರು ಚಿತ್ರದುರ್ಗಕ್ಕೆ ಹೋಗಿ ಸಂತ್ರಸ್ತ ರೇಣುಕಾ ಸ್ವಾಮಿ ಕುಟುಂಬವನ್ನು ಭೇಟಿ ಮಾಡಿ ಸಾಂತ್ವಾನ ಹೇಳುವ ಜತೆಗೆ 1 ಲಕ್ಷ ರೂಪಾಯಿ ಹಣ ಸಹಾಯವನ್ನು ಸಹ ಮಾಡಿದ್ದರು. ಇದೀಗ   ‘ಕೆಂಡಸಂಪಿಗೆ’ ಧಾರಾವಾಹಿಯಲ್ಲಿ ರಾಜಕಾರಣಿ ಶಂಕರೇಗೌಡ ಪಾತ್ರದಲ್ಲಿ ನಟ ಗಣೇಶ್ ರಾವ್ (Ganesh Rao) ರೇಣುಕಾಸ್ವಾಮಿ ಅವರ ಮನೆಗೆ ಭೇಟಿ ನೀಡಿ ದರ್ಶನ್ ಪರವಾಗಿ ಮಾತನಾಡಿದರು. ಜತೆಗೆ ರೇಣುಕಾಸ್ವಾಮಿ ಕುಟುಂಬಕ್ಕೆ ಗಣೇಶ್ ರಾವ್ ಹಣ ಸಹಾಯ ಮಾಡಿದರು.

ಮೃತ ರೇಣುಕಾಸ್ವಾಮಿ ಅವರ ಮನೆಗೆ ನಟ ಗಣೇಶ್ ರಾವ್ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ರೇಣುಕಾಸ್ವಾಮಿ ಅವರ ಮನೆಗೆ ಭೇಟಿ ನೀಡಿದ ನಟ ಗಣೇಶ್ ರಾವ್‌, ರೇಣುಕಾಸ್ವಾಮಿ ಅವರ ಕುಟುಂಬಸ್ಥರ ಮುಂದೆಯೇ ದರ್ಶನ್ ಪರವಾಗಿ ಮಾತನಾಡಿದರು.

ಗಣೇಶ್ ರಾವ್ ಮಾತನಾಡಿ ʻʻನಾವು ಯಾರನ್ನೂ ಸಮರ್ಥಿಸಿಕೊಳ್ಳುತ್ತಿಲ್ಲ. ದರ್ಶನ್‌ ಜತೆ ನಾವು 13 ಸಿನಿಮಾಗಳನ್ನು ಮಾಡಿದ್ದೇವೆ. ಆ ಮನುಷ್ಯ ಅಷ್ಟು ಕ್ರೂರಿ ಅಲ್ಲ. ಸೆಲೆಬ್ರಿಟಿ ಆದ ಕಾರಣ ಹೆಸರು ಮುನ್ನಲೆಗೆ ಬರುತ್ತಿದೆ. ನನಗೆ ಆತ್ಮ ಸಾಕ್ಷಿ ಹೇಳುತ್ತ ಇದೆ. ದರ್ಶನ್‌ ಅವರು ಆ ಮಟ್ಟಕ್ಕೆ ಇಳಿಯಲು ಸಾಧ್ಯವಿಲ್ಲ. ಅವರ ಜತೆ ಇದ್ದ ಸಂಗಡಿಗರು ಹೀಗೆ ಮಾಡಿದ್ದರಿಂದ ಅಪವಾಧ ಅವರ ಮೇಲೆ ಹೀಗೆ ಬಂದಿದೆ. ಇಲ್ಲಿ ಬಿಂಬಿಸುತ್ತಿರುವುದು ದರ್ಶನ್‌ ಅವರನ್ನು. ನ್ಯಾಯಾಲಕ್ಕೆ ಮುಂಚೆನೆ ಅವರನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಿ ಬಿಟ್ಟಿದ್ದಾರೆ. ತಪ್ಪು ಮಾಡಿದರೆ ಶಿಕ್ಷೆ ಅನುಭವಿಸಲಿ. ಆದರೆ ತಪ್ಪು ಮಾಡದೇನೇ ಅಪವಾಧ ಹೊರಿಸುವುದು ಸರಿಯಲ್ಲ. ಕೆಲವರು ಅವರೇ ಕಣ್ಣಾರೆ ನೋಡಿರೋ ತರ ಮಾತನಾಡುತ್ತಾರೆ. ಈ ದುರ್ಘಟನೆ ನಡೆಯಬಾರದಿತ್ತು. ರೇಣುಕಾಸ್ವಾಮಿ ಮನೆಯವರು ನೋವು ಅನುಭವಿಸುತ್ತಿದ್ದಾರೆ. ಅವರಿಗೆ ದುಃಖ ಭರಿಸುವ ಶಕ್ತಿಯನ್ನ ದೇವರು ಕೊಡಲಿ. ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ. ನ್ಯಾಯಾಲಯದ ಮೇಲೆ ನಂಬಿಕೆ ಇದೆ. ಮಾನವೀಯತೆ ದೃಷ್ಟಿಯಿಂದ ನೊಂದಿರುವ ಕುಟುಂಬಕ್ಕೆ ಸಾಂತ್ವನ ಹೇಳಲು ಬಂದಿದ್ವಿʼʼ ಎಂದರು.

ಇದನ್ನೂ ಓದಿ: Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ

ಇದಕ್ಕೂ ಮುಂಚೆ ಮುಂಚೆ ಚಿತ್ರದುರ್ಗಕ್ಕೆ ತೆರಳಿದ ನಟ ವಿನೋದ್ ರಾಜ್ ಮಾತನಾಡಿ, ‘ಮನೆಗೆ ಆಧಾರ ಸ್ತಂಭವಾದ ಮಗನನ್ನು ಕಳೆದುಕೊಂಡಿದ್ದಾರೆ. ಕುಟುಂಬ ಪರಿತಪಿಸುತ್ತಿರುವ ಸ್ಥಿತಿ ಕಂಡು ಕರಳುಕಿತ್ತು ಬರುತ್ತಿದೆ. ಜೀವನದಲ್ಲಿ ಮನುಷ್ಯ ಹೇಗೆ ಬಾಳಬೇಕು, ಹೇಗೆ ನಡೆದುಕೊಳ್ಳಬೇಕು, ಯಾವ ದಿಕ್ಕಿನಲ್ಲಿ ಮಾನವೀಯತೆ, ಮನುಷತ್ವ ಸಾಗುತ್ತಿದೆ, ಮನುಷ್ಯತ್ವ ಇದೆಯಾ ಎನ್ನುವುದು ನಮ್ಮನ್ನೇ ಮುಟ್ಟಿಕೊಂಡು ನೋಡುವಂತಹ ಕಾಲ ಬಂದಿದೆ. ಜೀವನ ಇಡೀ ಸಂಪದಾನೆ, ಹೆಸರು ಮಾಡುವುದು ಅಲ್ಲವೇ ಅಲ್ಲ. ಜೀವನ ಇಡಿ ಜೀವಗಳ ಬಗ್ಗೆ ಕಾಳಜಿ ತೆಗೆದುಕೊಂಡು ಬದುಕಬೇಕು. ಪ್ರತಿಯೊಬ್ಬರ ಜೀವನದಲ್ಲೂ ಜೀವಗಳಿವೆ. ಜೀವರಾಶಿಗಳನ್ನ ಭಗವಂತ ತಂದೆ ತಾಯಿ ರೂಪದಲ್ಲಿ ಸೃಷ್ಟಿ ಮಾಡಿರುತ್ತಾನೆ. ಅವರೂ ಕೂಡ ಚೆನ್ನಾಗಿ ಇರಬೇಕು ಎಂದು ಬೆಳೆಸುತ್ತಾರೆ. ಎಲ್ಲೋ ಒಂದು ಅತಾಚುರ್ಯ, ಕೆಟ್ಟದ್ದು ನಡೆಯುತ್ತೆ. ಕೆಟ್ಟದ್ದು ಜಾಸ್ತಿ ಆದಾಗ ಇಂತಹ ಪರಿಸ್ಥಿತಿ ಬರುತ್ತದೆ. ಆದರೆ ಇದು ಹೆಚ್ಚಾಗಬಾರದು. ಸಮಾಜದಲ್ಲಿ ಉನ್ನತವಾದ ಸ್ಥಾನ ಎತ್ತರದ ಮಟ್ಟದಲ್ಲಿರುವವರು ವಿವೇಕ ಮರೆಯಬಾರದು, ಅಚಾತುರ್ಯ‌ ನಡೆಯುತ್ತವೆ, ಮುಂದಿನ ತಲೆಮಾರುಗಳು ಹೀಗೆ ಆಗದಂತೆ ಎಚ್ಚರವಹಿಸಬೇಕು, ಮಾಧ್ಯಮ ತಿದ್ದಿಬುದ್ದಿ ಹೇಳಿದಂತೆ ಅನುಸರಿಸಿಕೊಂಡು ಸಾಗಬೇಕು’ ಎಂದು ವಿನೋದ್ ರಾಜ್​ಕುಮಾರ್ ಹೇಳಿದ್ದರು. .

Continue Reading
Advertisement
Rahul Gandhi
ದೇಶ2 hours ago

Rahul Gandhi: ರಾಹುಲ್‌ ಗಾಂಧಿ ಹೊಲಿದ ಚಪ್ಪಲಿಗೆ 10 ಲಕ್ಷ ರೂ. ಆಫರ್;‌ ಆದರೂ ಮಾರದ ಚಮ್ಮಾರ!

Kupwara Encounter
ದೇಶ2 hours ago

ಕಾಶ್ಮೀರದಲ್ಲಿ ಮುಂಬೈ ದಾಳಿ ರೂವಾರಿ ಹಫೀಜ್‌ ಸಯೀದ್‌ ಆಪ್ತನ ಹತ್ಯೆ; ಈತ ಪಾಕ್‌ ಕಮಾಂಡೋ ಕೂಡ ಹೌದು!

PV Sindhu
ಪ್ರಮುಖ ಸುದ್ದಿ2 hours ago

PV Sindhu : ಪಿವಿ ಸಿಂಧು ಹ್ಯಾಟ್ರಿಕ್​ ಒಲಿಂಪಿಕ್ಸ್​ ಪದಕದ ಕನಸು ಭಗ್ನ, 16ನೇ ಸುತ್ತಿನಲ್ಲಿ ಸೋಲು

Prajwal Revanna
ಕರ್ನಾಟಕ2 hours ago

Prajwal Revanna: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಅಸಲಿ; ಎಫ್‌ಎಸ್‌ಎಲ್‌ ವರದಿ ಬಹಿರಂಗ, ಎಸ್‌ಐಟಿ ತನಿಖೆಗೆ ಬಲ!

MS Dhoni
ಪ್ರಮುಖ ಸುದ್ದಿ3 hours ago

MS Dhoni : ಧೋನಿಯನ್ನು ತಂಡದಲ್ಲಿ ಉಳಿಸಿಕೊಳ್ಳಲು ನಿಯಮವನ್ನೇ ಬದಲಾಯಿಸಲು ಕೋರಿದ ಚೆನ್ನೈ ಸೂಪರ್ ಕಿಂಗ್ಸ್​

Kabini dam not cracked no need to worry says DCM DK Shivakumar
ಕರ್ನಾಟಕ3 hours ago

Kabini Dam: ಕಬಿನಿ ಅಣೆಕಟ್ಟು ಬಿರುಕು ಬಿಟ್ಟಿಲ್ಲ, ಆತಂಕ ಬೇಡ; ಡಿ.ಕೆ.ಶಿವಕುಮಾರ್ ಸ್ಪಷ್ಟನೆ

Blood Cancer
ಆರೋಗ್ಯ4 hours ago

Blood Cancer: ಕ್ರಿಕೆಟಿಗ ಅಂಶುಮಾನ್ ಗಾಯಕ್ವಾಡ್‌ರನ್ನು ಬಲಿ ಪಡೆದ ರಕ್ತದ ಕ್ಯಾನ್ಸರ್‌ಗೆ ಏನು ಕಾರಣ? ಇದರ ಲಕ್ಷಣಗಳೇನು?

Kerala Floods
ಪ್ರಮುಖ ಸುದ್ದಿ4 hours ago

Kerala Floods : ಬಾನೆಟ್​ ಎತ್ತರಕ್ಕೆ ತುಂಬಿದ್ದ ಪ್ರವಾಹದ ನೀರಿನಲ್ಲಿ ಸಾಗಿ ಕುಟುಂಬವೊಂದನ್ನು ರಕ್ಷಿಸಿದ ಮಹೀಂದ್ರಾ ಬೊಲೆರೊ! video ಇದೆ

DK Shivakumar
ಕರ್ನಾಟಕ4 hours ago

DK Shivakumar: ಬಿಜೆಪಿ ಪಾದಯಾತ್ರೆಗೆ ಕಾಂಗ್ರೆಸ್‌ ಪ್ರಶ್ನೆಗಳ ಸವಾಲು, ಹೆಜ್ಜೆಗೆ ಒಂದು ಪ್ರಶ್ನೆ ಎಂದ ಡಿಕೆಶಿ

Paris Olympics 202
ಪ್ರಮುಖ ಸುದ್ದಿ4 hours ago

Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಆಗಸ್ಟ್​​ 2ರಂದು ಭಾರತದ ಅಥ್ಲೀಟ್​ಗಳ ಸ್ಪರ್ಧೆಯ ವಿವರ ಇಲ್ಲಿದೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ12 hours ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ13 hours ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ13 hours ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ2 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ3 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ3 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ3 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ4 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ4 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌