ವಿಶ್ವ ಕಿರೀಟಕ್ಕೆ ಇನ್ನೊಂದೆ ಹೆಜ್ಜೆ; ಭಾರತದ 10 ಗೆಲುವಿನ ಸಿಹಿ ಮುತ್ತು ಹೇಗಿತ್ತು? - Vistara News

ಕ್ರಿಕೆಟ್

ವಿಶ್ವ ಕಿರೀಟಕ್ಕೆ ಇನ್ನೊಂದೆ ಹೆಜ್ಜೆ; ಭಾರತದ 10 ಗೆಲುವಿನ ಸಿಹಿ ಮುತ್ತು ಹೇಗಿತ್ತು?

ಈ ಬಾರಿಯ ವಿಶ್ವಕಪ್​ನಲ್ಲಿ ಭಾರತ ತಂಡ ಗೆದ್ದು ಬಂದ ಹಾದಿಯ ಸಂಪೂರ್ಣ ಮಾಹಿತಿಯ ವರದಿಯೊಂದು ಇಲ್ಲಿದೆ.

VISTARANEWS.COM


on

Rohit Sharma acknowledges the fans
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಏಕದಿನ ವಿಶ್ವಕಪ್​ನಲ್ಲಿ ಮೂರನೇ ಬಾರಿ ವಿಶ್ವ ಚಾಂಪಿಯನ್​ ಪಟ್ಟಕೇರಲು ಭಾರತ ತಂಡಕ್ಕೆ ಇನ್ನೊಂದೇ ಹೆಜ್ಜೆ ಬಾಕಿ. ಭಾನುವಾರ ನಡೆಯುವ ಫೈನಲ್​ ಪಂದ್ಯದಲ್ಲಿ 5 ಬಾರಿಯ ಚಾಂಪಿಯನ್​ ಆಸ್ಟ್ರೇಲಿಯಾ ವಿರುದ್ಧ ಪ್ರಶಸ್ತಿಗಾಗಿ ಸೆಣಸಾಡಲಿದೆ. ಆಡಿದ ಎಲ್ಲ 10 ಪಂದ್ಯಗಳನ್ನು ಗೆದ್ದು ಬೀಗಿರುವ ಭಾರತ 12 ವರ್ಷಗಳ ಬಳಿಕ ಮತ್ತೆ ತವರಿನಲ್ಲಿ ವಿಶ್ವಕಪ್ ಎತ್ತಿ ಇತಿಹಾಸ ನಿರ್ಮಿಸಲು ಕಾತರಗೊಂಡಿದೆ. ಟೀಮ್​ ಇಂಡಿಯಾದ ಇದುವರೆಗಿನ 10 ಪಂದ್ಯಗಳ ವಿಜಯದುಂದುಭಿಯ ವರದಿ ಇಲ್ಲಿದೆ.

ಸೆಮಿ ಫೈನಲ್​ನಲ್ಲಿ ನ್ಯೂಜಿಲ್ಯಾಂಡ್​ ವಿರುದ್ಧ ಗೆದ್ದು ಫೈನಲ್​ ಪ್ರವೇಶ

ನಾಲ್ಕು ವರ್ಷಗಳ ಬಳಿಕ ಭಾರತ ಮತ್ತು ನ್ಯೂಜಿಲ್ಯಾಂಡ್​ ತಂಡಗಳು ಸೆಮಿಫೈನಲ್​ನಲ್ಲಿ ಮತ್ತೆ ಮುಖಾಮುಖಿಯಾಗಿತ್ತು. 2019ರಲ್ಲಿ ಭಾರತದ ವಿಶ್ವಕಪ್ ಫೈನಲ್​ಗೆ ಅಡ್ಡಗಾಲಿಟ್ಟಿದ್ದ ನ್ಯೂಜಿಲ್ಯಾಂಡ್​ ಈ ಬಾರಿಯೂ ಇಂತಹದ್ದೇ ಆಘಾತ ನೀಡದಿರಲಿ ಎಂದು ಶತಕ ಕೋಟಿ ಭಾರತೀಯರು ದೇವರಲ್ಲಿ ಪ್ರಾರ್ಥಿಸಿದ್ದರು. ಭಾರತ ಈ ಪಂದ್ಯದಲ್ಲಿ 70 ರನ್​ಗಳ ಗಲುವು ಸಾಧಿಸಿ ಫೈನಲ್ ಫೈನಲ್​ ಪ್ರವೇಶಿಸಿತು. ಅಲ್ಲಿಗೆ ಎಲ್ಲರ ಪ್ರಾರ್ಥನೆಗೆ ಫಲ ಸಿಕ್ಕಿತು. ವಿರಾಟ್ ಕೊಹ್ಲಿ ಅವರು ಶತಕ ಬಾರಿಸುವ ಮೂಲಕ ತಮ್ಮ ರೋಲ್​ ಮಾಡಲ್​ ಸಚಿನ್​ ತೆಂಡೂಲ್ಕರ್​ ಅವರ ಏಕದಿನ ಕ್ರಿಕೆಟ್​ನ 49 ಶತಕದ ದಾಖಲೆಯನ್ನು ಮುರಿದು ಏಕದಿನ ಕ್ರಿಕೆಟ್​ಗೆ ಹೊಸ ಸಾಮ್ರಾಟನಾದರು. ಅಯ್ಯರ್​ ಕೂಡ ಶತಕ ಬಾರಿಸಿ ಪಂದ್ಯದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.

team india


ಶಮಿ 7 ವಿಕೆಟ್​ ಸಾಧನೆ

ಭಾರತದ ಬೃಹತ್​ ಮೊತ್ತವನ್ನು ಬೆನ್ನಟ್ಟಿದ ನ್ಯೂಜಿಲ್ಯಾಂಡ್​ಗೆ ಸೋಲಿನ ಏಟು ನೀಡಿದ್ದು ಮೊಹಮ್ಮದ್​ ಶಮಿ ಅವರು.  9.5 ಓವರ್​ಗಳನ್ನು ಎಸೆದ ಶಮಿ 57 ರನ್ ನೀಡಿ 7 ವಿಕೆಟ್​ ಪಡೆಯುವ ಮೂಲಕ ಭಾರತದ ಗೆಲುವಿಗೆ ಕಾರಣರಾದರು.

ವಾಖೆಂಡೆ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದಿದ್ದ ಈ ಪಂದ್ಯದಲ್ಲಿ ಟಾಸ್​ ಗೆದ್ದು ಮೊದಲು ಬ್ಯಾಟ್​ ಮಾಡಿದ ಭಾರತ ತಂಡ ನಿಗದಿತ 50 ಓವರ್​ಗಳಲ್ಲಿ 397 ರನ್​ಗಳ ಬೃಹತ್​ ಮೊತ್ತ ಪೇರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ನ್ಯೂಜಿಲ್ಯಾಂಡ್​ ತಂಡ 48.5 ಓವರ್​ಗಳ ಮುಕ್ತಾಯಗೊಂಡಾಗ 327 ರನ್ ಬಾರಿಸಿ ಸೋಲೊಪ್ಪಿಕೊಂಡಿತು. ಅಂದ ಹಾಗೆ ಭಾರತ ತಂಡ ಹಾಲಿ ವಿಶ್ವ ಕಪ್​ನಲ್ಲಿ ಯಾವುದೇ ತಂಡಕ್ಕೆ 50 ಓವರ್​ಗಳನ್ನು ಪೂರ್ತಿಯಾಗಿ ಆಡಲು ಬಿಡಲಿಲ್ಲ. ಇದು ಕೂಡ ಭಾರತ ತಂಡದ ಪಾಲಿಗೆ ದಾಖಲೆಯಾಗಿದೆ.

mohammed shami


ಆಸ್ಟ್ರೇಲಿಯಾ ವಿರುದ್ಧ 6 ವಿಕೆಟ್​ ಜಯ

ಭಾರತ ತಂಡ ವಿಶ್ವಕಪ್​ ಅಭಿಯಾನ ಆರಂಭಿಸಿದ್ದು 5 ಬಾರಿಯ ವಿಶ್ವ ಚಾಂಪಿಯನ್​ ಆಸ್ಟ್ರೇಲಿಯಾ ವಿರುದ್ಧ ಆಡುವ ಮೂಲಕ. ಅಕ್ಟೋಬರ್​ 8ರಂದು ಚೆನ್ನೈಯ ಚಿದಂಬರಂ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಆಸ್ಟ್ರೇಲಿಯಾ ಡೇವಿಡ್​ ವಾರ್ನರ್​ ಮತ್ತು ಸ್ಟೀವನ್​ ಸ್ಮಿತ್​ ಅವರ ಬ್ಯಾಟಿಂಗ್​ ನೆರವಿನಿಂದ 49.3 ಓವರ್​ಗಳಲ್ಲಿ 199 ರನ್​ಗೆ ಕುಸಿಯಿತು. ಗುರಿ ಬೆನ್ನಟ್ಟಿದ ಭಾರತ ಕೂಡ ಆರಂಭಿಕ ಆಘಾತ ಎದುರಿಸಿತು. 2 ರನ್​ಗೆ ಮೂರು ವಿಕೆಟ್​ ಕಳೆದುಕೊಂಡು ಸೋಲಿನತ್ತ ಮುಖ ಮಾಡಿತ್ತು. ಈ ವೇಳೆ ಜತೆಯಾದ ವಿರಾಟ್ ಕೊಹ್ಲಿ(85) ಮತ್ತು ಕೆ.ಎಲ್​ ರಾಹುಲ್(ಅಜೇಯ 97)​ ಅಸಾಮಾನ್ಯ ಬ್ಯಾಟಿಂಗ್​ ಪ್ರದರ್ಶನ ತೋರುವ ಮೂಲಕ ತಂಡಕ್ಕ ಸ್ಮರಣೀಯ ಗೆಲುವು ತಂದು ಕೊಟ್ಟರು. ಭಾರತ 41.2 ಓವರ್​ಗಳಲ್ಲಿ 4 ವಿಕೆಟ್​ಗೆ 201 ರನ್​ ಬಾರಿಸಿ ಗೆಲುವಿನ ನಗೆ ಬೀರಿತ್ತು.


ಕಪಿಲ್​ ದೇವ್​ ಅವರಂತೆ ಪಂದ್ಯ ಗೆಲ್ಲಿಸಿದ ರಾಹುಲ್​

ಈ ಪಂದ್ಯದಲ್ಲಿ ಮೊದಲು ಬೌಲಿಂಗ್​ ನಡೆಸಿದ ಭಾರತ ಘಾತಕ ಬೌಲಿಂಗ್​ ನಡೆಸಿ ಕಮಿನ್ಸ್​ ಪಡೆಯನ್ನು 199 ರನ್​ಗೆ ಕಟ್ಟಿ ಹಾಕಿತ್ತು. ಸಣ್ಣ ಮೊತ್ತವನ್ನು ನಮ್ಮ ಅಗ್ರ ಕ್ರಮಾಂಕದ ಬ್ಯಾಟರ್​ಗಳು ಬೆನ್ನಟ್ಟಬಹುದು ಎಂದು ಯೋಚಿಸಿ ರಾಹುಲ್​ ಸ್ನಾನ ಮಾಡಿ ವಿಶ್ರಾಂತಿ ಪಡೆಯವ ಯೋಜನೆಯಲ್ಲಿದ್ದರು. ಆದರೆ ಅವರು ಬಾತ್​ ರೂಮ್​ನಿಂದ ಹೊರ ಬರುತ್ತಿದ್ದಂತೆ 2 ರನ್​ಗೆ ತಂಡದ ಮೂರು ವಿಕೆಟ್​ ಉರುಳಿ ಹೋಗಿತ್ತು. ಸರಿಯಾಗಿ ದೇಹದ ಒದ್ದೆಯನ್ನು ಒರೆಸಿಕೊಳ್ಳದೆ ತರಾತುರಿಯಲ್ಲಿ ಪ್ಯಾಟ್ ಮತ್ತು ಗ್ಲೌಸ್​ ಕಟ್ಟಿಕೊಂಡು ಮೈದಾನಕ್ಕೆ ಓಡಿ ಬಂದು ಅಜೇಯ 97 ರನ್​ಗಳ ಕೊಡುಗೆ ನೀಡಿ ತಂಡಕ್ಕೆ ಗೆಲುವು ದಕ್ಕಿಸಿಕೊಟ್ಟರು. ಅವರು ಬಾತ್​ ರೂಮ್​ನಿಂದ ಓಡಿ ಬಂದ ವಿಚಾರವನ್ನು ಪಂದ್ಯದ ಮುಕ್ತಾಯಕ ಬಳಿಕ ಹೇಳಿದ್ದರು. ಈ ಪಂದ್ಯದಲ್ಲಿ ಜಡೇಜಾ ಮೂರು ವಿಕೆಟ್​ ಕಿತ್ತಿದ್ದರು. 97 ರನ್​ ಗಳಿಸಿದ ರಾಹುಲ್​ ಅವರು ಪಂದ್ಯ ಶ್ರೇಷ್ಠ ಪ್ರಶಸ್ತಿ ಗೆದ್ದಿದ್ದರು.

ಇದನ್ನೂ ಓದಿ World Cup Final: ಭಾರತ-ಆಸೀಸ್​ ​ ಫೈನಲ್​ ಪಂದ್ಯಕ್ಕೆ ಪಾಕ್​ ಕ್ರಿಕೆಟ್​ ಮಂಡಳಿ ಅಧ್ಯಕ್ಷ ಹಾಜರ್​!

ಆಫ್ಘನ್​ ವಿರುದ್ಧ ಅಮೋಘ ಗೆಲುವು

ಟೀಮ್​ ಇಂಡಿಯಾ ಎರಡನೇ ಗೆಲುವು ಸಾಧಿಸಿದ್ದು ಅಫಘಾನಿಸ್ತಾನ ವಿರುದ್ಧ. ದೆಹಲಿಯ ಅರುಣ್​ ಜೇಟ್ಲಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಅಫಘಾನಿಸ್ತಾನ ದಿಟ್ಟ ಬ್ಯಾಟಿಂಗ್​ ನಡೆಸಿ ನಿಗದಿತ 50 ಓವರ್​ಗಳಲ್ಲಿ 8 ವಿಕೆಟ್​ಗೆ 272 ರನ್​ ಬಾರಿಸಿತು. ಸ್ಪರ್ಧಾತ್ಮಕ ಮೊತ್ತವನ್ನು ಬೆನ್ನಟ್ಟಿದ ಭಾರತ ಕೇವಲ 2 ವಿಕೆಟ್​ ನಷ್ಟಕ್ಕೆ 35 ಓವರ್​ಗಳಲ್ಲಿ 273 ರನ್​ ಬಾರಿಸಿ ಗೆಲುವು ಕಂಡಿತು. ನಾಯಕ ರೋಹಿತ್​ ಶರ್ಮ ಅವರು ಸ್ಫೋಟಕ ಬ್ಯಾಟಿಂಗ್​ ನಡೆಸಿ 131 ರನ್​ ಚಚ್ಚಿ ಶತಕ ಸಂಭ್ರಮಿಸಿದ್ದರು. ಈ ಶತಕದೊಂದಿಗೆ ವಿಶ್ವಕಪ್​ನಲ್ಲಿ ಅತಿ ಹೆಚ್ಚು ಶತಕ ಬಾರಿಸಿದ ಆಟಗಾರ ಎನಿಸಿಕೊಂಡಿದ್ದರು. ಸಚಿನ್​ ಅವರ 6 ಶತಕದ ದಾಖಲೆ ಪತನಗೊಂಡಿತು. ಪಂದ್ಯದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ರೋಹಿತ್​ಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಒಲಿಯಿತು. ಜಸ್​ಪ್ರೀತ್​ ಬುಮ್ರಾ 4 ವಿಕೆಟ್​ ಕಬಳಿಸಿದ್ದರು.


ಪಾಕಿಸ್ತಾನಕ್ಕೆ ಮತ್ತೆ ಸೋಲು

ವಿಶ್ವಕಪ್​ನಲ್ಲಿ ಭಾರತ ತಂಡ ಪಾಕಿಸ್ತಾನ ವಿರುದ್ಧ ಅಜೇಯ ಗೆಲುವಿನ ದಾಖಲೆಯನ್ನು ಮತ್ತೆ ಮುಂದುವರಿಸಿತು. ನರೇಂದ್ರ ಮೋದಿ ಕ್ರಿಕೆಟ್​ ಸ್ಡೇಡಿಯಂನಲ್ಲಿ ಅಕ್ಟೋಬರ್​ 14ರಂದು ನಡೆದಿದ್ದ ಈ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಭಾರತ ಬಿಗಿ ಬೌಲಿಂಗ್ ದಾಳಿ ಸಂಘಟಿಸಿತು. ನಾಟಕೀಯ ಕುಸಿತ ಕಂಡ ಪಾಕಿಸ್ತಾನ 42.5 ಓವರ್ ಗಳಲ್ಲಿ 191 ರನ್ ಗಳಿಗೆ ಸರ್ವಪತನ ಕಂಡಿತು. ಗುರಿ ಬೆನ್ನಟ್ಟಿದ ಭಾರತ 30.3 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 192 ರನ್ ಗಳಿಸಿ 7 ವಿಕೆಟ್​ಗಳ ಅಂತರದ ಭರ್ಜರಿ ಗೆಲುವು ತನ್ನದಾಗಿಸಿಕೊಂಡಿತ್ತು. ನಾಯಕ ರೋಹಿತ್ ಶರ್ಮ ಈ ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್​ ನಡೆಸಿ ಗಮನಸೆಳೆದರು. 63 ಎಸೆತಗಳಲ್ಲಿ 86 ರನ್ ಗಳಿಸಿ ನೆರೆದಿದ್ದ ಅಭಿಮಾನಿಗಳಿಗೆ ಬರಪೂರ ರಂಜನೆ ನೀಡಿದರು. ಶ್ರೇಯಸ್​ ಅಯ್ಯರ್(53*)​ ಅಜೇಯ ಅರ್ಧಶತಕ ಬಾರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದ್ದರು. 19 ರನ್​ಗೆ 2 ವಿಕೆಟ್​ ಕಿತ್ತ ಜಸ್​ಪ್ರೀತ್​ ಬುಮ್ರಾ ಅವರು ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು. ಭಾರತ ಈ ಗೆಲುವಿನಿಂದಿಗೆ ಪಾಕ್​ ವಿರುದ್ಧ ಆಡಿದ ಎಲ್ಲ 8 ವಿಶ್ವಕಪ್​ ಪಂದ್ಯವನ್ನು ಗೆದ್ದ ಸಾಧನೆ ಮಾಡಿತು.

ಇದನ್ನೂ ಓದಿ Virat kohli: ಕೊಹ್ಲಿಗೆ 100 ಶತಕಗಳ ಸಚಿನ್ ದಾಖಲೆ ಮುರಿಯಲು ಸಾಧ್ಯವೆ? ಲೆಕ್ಕಾಚಾರ ಹೀಗಿದೆ!

Pakistan Cricket team

ಬಾಂಗ್ಲಾ ವಿರುದ್ಧ 7 ವಿಕೆಟ್​ ಜಯ

ಹ್ಯಾಟ್ರಿಕ್​ ಗೆಲುವು ದಾಖಲಿಸಿದ್ದ ಭಾರತ ತಂಡ ನಾಲ್ಕನೇ ಗೆಲುವು ದಾಖಲಿಸಿದ್ದು ನೆರೆಯ ಬಾಂಗ್ಲಾದೇಶ ವಿರುದ್ಧ. ಪುಣೆಯಲ್ಲಿ ನಡೆದಿದ್ದ ಈ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ನಡೆಸಿದ ಬಾಂಗ್ಲಾದೇಶ ನಿಗದಿತ 50 ಓವರ್​ಗಳಲ್ಲಿ 8 ವಿಕೆಟ್​ಗೆ 256 ರನ್​ ಬಾರಿಸಿ ಸವಾಲೊಡ್ಡಿತು. ಗುರಿ ಬೆನ್ನಟ್ಟಿದ ಭಾರತ ವಿರಾಟ್​ ಕೊಹ್ಲಿಯ(103*) ಅಜೇಯ ಶತಕದ ನೆರವಿನಿಂದ 41.3 ಓವರ್​ಗಳಲ್ಲಿ ಮೂರು ವಿಕೆಟ್​ಗೆ 261 ರನ್​ ಬಾರಿಸಿ ಗೆಲುವು ದಾಖಲಿಸಿತ್ತು. ಶುಭಮನ್​ ಗಿಲ್​ 53 ರನ್​ ಬಾರಿಸಿದ್ದರು. ಬೌಲಿಂಗ್​ನಲ್ಲಿ ಮಿಂಚಿದ ಬುಮ್ರಾ, ಸಿರಾಜ್​ ಮತ್ತು ಜಡೇಜಾ ತಲಾ 2 ವಿಕೆಟ್​ ಉರುಳಿಸಿದ್ದರು. ಶತಕದ ಸಾಧನೆಗಾಗಿ ಕೊಹ್ಲಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಒಲಿದಿತ್ತು.

ind-vs-ban-icc-world-cup-2023


20 ವರ್ಷಗಳ ಬಳಿಕ ಕಿವೀಸ್​ ವಿರುದ್ಧ ಗೆಲುವು

ಭಾರತ ಕಳೆದ 20 ವರ್ಷದಿಂದ ಐಸಿಸಿ ಟೂರ್ನಿಯಲ್ಲಿ ನ್ಯೂಜಿಲ್ಯಾಂಡ್​ ವಿರುದ್ಧ ಸೋಲು ಮಾತ್ರ ಕಂಡಿತ್ತು. ಆದರೆ ಈ ಸೋಲಿನ ಕೊರಗನ್ನು ನೀಗಿಸಿದ್ದು ಈ ಬಾರಿಯ ವಿಶ್ವಕಪ್​ನಲ್ಲಿ. ಧರ್ಮಶಾಲದಲ್ಲಿ ನಡೆದಿದ್ದ ಪಂದ್ಯದಲ್ಲಿ ಭಾರತ ನಾಲ್ಕು ವಿಕೆಟ್​ಗಳ ಗೆಲುವು ಸಾಧಿಸಿ 20 ವರ್ಷಗಳ ಗೆಲುವಿನ ಬರವನ್ನು ನೀಗಿಸಿತು. ಟಾಸ್​ ಸೋತು ಬ್ಯಾಟಿಂಗ್​ ಆಹ್ವಾನ ಪಡೆದ ನ್ಯೂಜಿಲ್ಯಾಂಡ್​ ರಚಿನ್​ ರವೀಂದ್ರ(75) ಅವರ ಅರ್ಧಶತಕ ಮತ್ತು ಡೇರಿಯಲ್​ ಮಿಚೆಲ್(130) ಅವರ ಶತಕದ ಸಾಹಸದಿಂದ 273ರನ್​ಗೆ ಆಲೌಟ್​ ಆಯಿತು. ಜವಾಬಿತ್ತ ಭಾರತಕ್ಕೆ ವಿರಾಟ್ ಕೊಹ್ಲಿ 95 ರನ್ ಹಾಗೂ ರವೀಂದ್ರ ಜಡೇಜಾ ಸಿಡಿಸಿದ ಅಜೇಯ 39 ರನ್ ಬಾರಿಸಿ ಗೆಲುವು ತಂದು ಕೊಟ್ಟರು. ನಾಯಕ ರೋಹಿತ್​ ಶರ್ಮ 46 ರನ್​ ಬಾರಿಸಿದರು. ಘಾತಕ ದಾಳಿ ನಡೆಸಿ 54 ರನ್​ಗೆ 5 ವಿಕೆಟ್​ ಕಿತ್ತ ಮೊಹಮ್ಮದ್​ ಶಮಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು.

ಇದನ್ನೂ ಓದಿ World Cup Final: ಭಾರತ-ಆಸೀಸ್​ ​ ಫೈನಲ್​ ಪಂದ್ಯಕ್ಕೆ ಪಾಕ್​ ಕ್ರಿಕೆಟ್​ ಮಂಡಳಿ ಅಧ್ಯಕ್ಷ ಹಾಜರ್​!

IND vs NZ


ಹಾಲಿ ಚಾಂಪಿಯನ್​ಗೆ ಸೋಲಿನ ಏಟು

ಲಕ್ನೋದ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ ಆಹ್ವಾನ ಪಡೆದ ಭಾರತ ರೋಹಿತ್(87)​ ಮತ್ತು ಸೂರ್ಯಕುಮಾರ್(49)​ ಅವರ ಬ್ಯಾಟಿಂಗ್​ ಸಾಹಸದಿಂದ ನಿಗದಿತ 50 ಓವರ್​ಗಳಲ್ಲಿ​ 9 ವಿಕೆಟ್​ನಷ್ಟಕ್ಕೆ 229 ರನ್ ಗಳಿಸಿತು. ಸಣ್ಣ ಮೊತ್ತಕ್ಕೆ ಭಾರತವನ್ನು ಕಟ್ಟಿಹಾಕಿದ ಜೋಶ್​ನಲ್ಲಿ ಗುರಿ ಬೆನ್ನಟ್ಟಲಾರಂಭಿಸಿದ ಇಂಗ್ಲೆಂಡ್​ ಉತ್ತಮ ಆರಂಭ ಪಡೆದರೂ ಆ ಬಳಿಕ ನಾಟಕೀಯ ಕುಸಿತ ಕಂಡು 34.5 ಓವರ್​ಗಳಲ್ಲಿ 129 ರನ್​ಗೆ ಸರ್ವಪತನ ಕಂಡು ಹೀನಾಯ ಸೋಲು ಕಂಡಿತು. ಘಾತಕ ಬೌಲಿಂಗ್​ ದಾಳಿ ನಡೆಸಿ 22 ರನ್​ ವೆಚ್ಚದಲ್ಲಿ 4 ವಿಕೆಟ್​ ಕಿತ್ತ ಮೊಹಮ್ಮದ್​ ಶಮಿ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಜಸ್​ಪ್ರೀತ್​ ಬುಮ್ರಾ ಮೂರು ವಿಕೆಟ್​ ಪಡೆದಿದ್ದರು. ಭಾರತ ಭರ್ತಿ 100ರನ್​ ಅಂತರದ ಗೆಲುವು ಸಾಧಿಸಿತು.

Mohammed Shami celebrates after castling Jonny Bairstow


ಲಂಕಾ ವಿರುದ್ಧ ಗೆದ್ದು ಸೆಮಿಗೆ ಲಗ್ಗೆಯಿಟ್ಟ ಭಾರತ

ನವೆಂಬರ್​ 2ರಂದು ಮುಂಬಯಿಯ ವಾಂಖೆಡೆ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದಿದ್ದ ಪಂದ್ಯದಲ್ಲಿ ರೋಹಿತ್​ ಶರ್ಮ ಪಡೆ ಶ್ರೀಲಂಕಾ ವಿರುದ್ಧ ದಾಖಲೆಯ 302 ರನ್​ಗಳ ಗೆಲುವು ಸಾಧಿಸಿ ಹಾಲಿ ಆವೃತ್ತಿಯ ವಿಶ್ವಕಪ್ ಟೂರ್ನಿಯಲ್ಲಿ ಮೊದಲ ತಂಡವಾಗಿ ಸೆಮಿಫೈನಲ್​ ಪ್ರವೇಶಿಸಿತ್ತು. ಇತ್ತಂಡಗಳ ನಡುವಣ ಈ ಪಂದ್ಯ ಏಷ್ಯಾಕಪ್ ಫೈನಲ್​ ಪಂದ್ಯದ ಮುಂದುವರಿದ ಪುನರಾವರ್ತನೆಯಾಗಿತ್ತು. ಆ ಪಂದ್ಯದಲ್ಲಿ ಲಂಕಾ ಕಳಪೆ ಪ್ರದರ್ಶನ ತೋರಿ 50 ರನ್​ಗೆ ಆಲೌಟ್​ ಆಗಿತ್ತು. ವಿಶ್ವಕಪ್​ನಲ್ಲಿ 55 ರನ್​ಗೆ ಸರ್ವಪತನ ಕಾಣುವ ಮೂಲಕ 302 ರನ್​ ಅಂತರದ ಸೋಲು ಕಂಡಿತು.

Sri Lanka Cricket


ವಾಂಖೆಡೆ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ ಆಹ್ವಾನ ಪಡೆದ ಭಾರತ, ವಿರಾಟ್​ ಕೊಹ್ಲಿ (88), ಶುಭಮನ್​ ಗಿಲ್(92)​ ಮತ್ತು ಶ್ರೇಯಸ್​ ಅಯ್ಯರ್(82)​ ಅವರು ಬಾರಿಸಿದ ಸೊಗಸಾದ ಅರ್ಧಶತಕದ ನೆರವಿನಿಂದ ನಿಗದಿತ 50 ಓವರ್​ಗಳಲ್ಲಿ 8 ವಿಕೆಟ್​ ನಷ್ಟಕ್ಕೆ 357 ರನ್​ ಗಳಿಸಿತು. ಬೃಹತ್​ ಮೊತ್ತವನ್ನು ಕಂಡು ಆರಂಭದಲ್ಲೇ ಬೆದರಿದ ಲಂಕಾ ನಾಟಕೀಯ ಕುಸಿತ ಕಂಡು 19.4 ಓವರ್​ಗಳಲ್ಲಿ 55 ರನ್​ಗೆ ಆಲೌಟ್​ ಆಗಿ ಹೀನಾಯ ಸೋಲಿಗೆ ತುತ್ತಾಗಿತ್ತು. 18 ರನ್​ಗೆ 5 ವಿಕೆಟ್​ ಕಿತ್ತ ಮೊಹಮ್ಮದ್ ಶಮಿ ಅವರು ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

ದಕ್ಷಿಣ ಆಫ್ರಿಕಾ ವಿರುದ್ಧ ದಾಖಲೆಯ ಮೊತ್ತದ ಗೆಲುವು

ಅಜೇಯ ಗೆಲುವಿನ ನಾಗಲೋಟ ಮುಂದುವರಿಸಿದ್ದ ಭಾರತದ ಈ ಪರಾಕ್ರಮಕ್ಕೆ ದಕ್ಷಿಣ ಆಫ್ರಿಕಾ ಬ್ರೇಕ್​ ಹಾಕಬಹುದು ಎಂದು ನಿರೀಕ್ಷೆ ಮಾಡಲಾಗಿತ್ತು. ಆದರೆ ಈ ನಿರೀಕ್ಷೆ ಹುಸಿಯಾಗಿತು. ಘಾತಕ ಬೌಲಿಂಗ್​ ದಾಳಿ ನಡೆಸಿದ ಭಾರತ 243 ರನ್​ಗಳ ಅಂತರದ ಗೆಲುವು ಸಾಧಿಸಿತು. ಈ ಪಂದ್ಯದಲ್ಲಿ ಟಾಸ್​ ಗೆದ್ದು ಮೊದಲು ಬ್ಯಾಟಿಂಗ್​ ನಡೆಸಿದ ಭಾರತ ವಿರಾಟ್​ ಕೊಹ್ಲಿಯ(101*) ಶತಕ ಮತ್ತು ಶ್ರೇಯಸ್​ ಅಯ್ಯರ್​(77) ಅವರ ಅರ್ಧಶತಕದ ನೆರವಿನಿಂದ ನಿಗದಿತ 50 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 326 ರನ್ ಬಾರಿಸಿತು. ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ಬ್ಯಾಟಿಂಗ್​ ಜೋಶ್​ ಮರೆತು 27.1 ಓವರ್​ಗಳಲ್ಲಿ 83 ರನ್​ ಬಾರಿಸಿ ಸರ್ವಪತನ ಕಂಡಿತು. ಭಾರತ 243 ರನ್​ಗಳ ಭರ್ಜರಿ ಗೆಲುವು ಸಾಧಿಸಿತು. ಭಾರತ ಪರ ಜಡೇಜಾ 5 ವಿಕೆಟ್​ ಕಿತ್ತು ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಉಳಿದಂತೆ ಮೊಹಮ್ಮದ್ ಶಮಿ ಮತ್ತು ಕುಲದೀಪ್​ ಯಾದವ್ ತಲಾ 2 ವಿಕೆಟ್​ ಕಿತ್ತರು.

IND vs SA


ಸಚಿನ್​ ದಾಖಲೆ ಸರಿಗಟ್ಟಿದ ಕೊಹ್ಲಿ

ಇದೇ ಪಂದ್ಯದಲ್ಲಿ ಅಜೇಯ ಶತಕ ಬಾರಿಸಿದ ವಿರಾಟ್​ ಕೊಹ್ಲಿ ಅವರು ಕ್ರಿಕೆಟ್​ ದಿಗ್ಗಜ ಸಚಿನ್​ ತೆಂಡೂಲ್ಕರ್​ ಅವರ ಏಕದಿನ ಕ್ರಿಕೆಟ್​ನ ಸಾರ್ವಕಾಲಿಕ 49 ಶತಕದ ದಾಖಲೆಯನ್ನು ಸರಿಗಟ್ಟಿದ್ದರು. ನಿಧಾನಗತಿ ಬ್ಯಾಟಿಂಗ್​ ನಡೆಸಿದ್ದ ಕೊಹ್ಲಿ 121 ಎಸೆತಗಳಿಂದ ಅಜೇಯ 101 ರನ್​ ಬಾರಿಸಿದ್ದರು. ಅವರ ಈ ಸಾಧನೆಗಾಗಿ ಪಂದ್ಯ ಶ್ರೇಷ್ಠ ಪ್ರಸಶ್ತಿ ನೀಡಿ ಗೌರವಿಸಲಾಗಿತ್ತು.

ಅಂತಿಮ ಲೀಗ್​ ಪಂದ್ಯದಲ್ಲೂ ಗೆದ್ದ ಭಾರತ

ಭಾನುವಾರ ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ ತನ್ನ ನಿರ್ಧಾರಕ್ಕೆ ಪೂರಕವಾಗಿ ಆಡಿತು. ಆರಂಭದಿಂದಲೂ ಕೊನೇ ತನಕ ರನ್​ಗಳನ್ನು ಗಳಿಸುತ್ತಾ ನಿಗದಿತ 50 ಓವರ್​ಗಳಲ್ಲಿ 4 ವಿಕೆಟ್​ ನಷ್ಟಕ್ಕೆ 410 ರನ್ ಬಾರಿಸಿತು. ಪ್ರತಿಯಾಗಿ ಆಡಿದ ಸ್ಕಾಟ್ ಎಡ್ವರ್ಡ್ ನೇತೃತ್ವದ ಡಚ್ಚರ ಪಡೆ 47. 5 ಓವರ್​ಗಳಲ್ಲಿ 250 ರನ್​ಗಳಿಗೆ ಆಲ್​ಔಟ್ ಆಗಿ ಸೋಲೊಪ್ಪಿಕೊಂಡಿತು. ಭಾರತ ಈ ಗೆಲುವಿನೊಂದಿಗೆ ಆಡಿದ ಎಲ್ಲ 9 ಲೀಗ್​ ಪಂದ್ಯಗಳನ್ನು ಗೆದ್ದು ವಿಶ್ವಕಪ್​ನಲ್ಲಿ ದಾಖಲೆ ಬರೆಯಿತು. ಅತ್ಯಧಿಕ ಪಂದ್ಯಗಳನ್ನು ಗೆದ್ದ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು.

ind vs ned icc world cup 2023


ರಾಹುಲ್​ ದಾಖಲೆಯ ಶತಕ

ನೆದರ್ಲೆಂಡ್ಸ್ ವಿರುದ್ಧ ನಡೆದ ಈ ಪಂದ್ಯದಲ್ಲಿ ಕೆ.ಎಲ್ ರಾಹುಲ್ 62 ಎಸೆತಗಳಲ್ಲಿ ಶತಕ ಬಾರಿಸುವ ಮೂಲಕ ವಿಶ್ವಕಪ್​ನಲ್ಲಿ ಅತಿ ವೇಗದ ಶತಕ ಬಾರಿಸಿದ ಭಾರತೀಯ ಬ್ಯಾಟರ್​​ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ವೇಳೆ ಅವರು 2023 ರ (ಹಾಲಿ ಆವೃತ್ತಿಯ) ವಿಶ್ವಕಪ್​ನಲ್ಲಿ ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ 63 ಎಸೆತಗಳಲ್ಲಿ ಶತಕ ಬಾರಿಸಿದ ರೋಹಿತ್ ಶರ್ಮಾ ಅವರ ದಾಖಲೆ ಅವರು ಮುರಿದರು. ಶ್ರೇಯಸ್​ ಅಯ್ಯರ್​ ಅವರು ಅಜೇಯ 128 ರನ್​ ಬಾರಿಸಿ ಚೊಚ್ಚಲ ವಿಶ್ವಕಪ್​ ಶತಕವನ್ನು ದಾಖಲಿಸಿದರು. ಜತೆಗೆ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದರು. ರೋಹಿತ್​(61), ಶುಭಮನ್​ ಗಿಲ್(51) ಮತ್ತು ವಿರಾಟ್​ ಕೊಹ್ಲಿ 51 ರನ್​ ಬಾರಿಸಿದರು. ಬೌಲಿಂಗ್​ನಲ್ಲಿಯೂ ಮಿಂಚಿದ ರೋಹಿತ್​ ಮತ್ತು ವಿರಾಟ್​ ತಲಾ 1 ವಿಕೆಟ್​ ಪಡೆದರು. ಉಳಿದಂತೆ ಕುಲ್​ದೀಪ್​, ಬುಮ್ರಾ, ಸಿರಾಜ್​ ಮತ್ತು ಜಡೇಜಾ ತಲಾ 2 ವಿಕೆಟ್​ ಕಿತ್ತರು. ಶಮಿ ವಿಕೆಟ್​ ಲೆಸ್​ ಎನಿಸಿಕೊಂಡರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Rohit Sharma : ತಲೆ ಪಕ್ಕದಲ್ಲೇ ಟ್ರೋಫಿ ಇಟ್ಟುಕೊಂಡು ನಿದ್ದೆ ಮಾಡಿದ ರೋಹಿತ್ ಶರ್ಮಾ

Rohit Sharma: ಭಾರತ ತಂಡದ ನಾಯಕ ರೋಹಿತ್ ಶರ್ಮಾ ಟೂರ್ನಿಯುದ್ದಕ್ಕೂ ಬ್ಯಾಟಿಂಗ್​ ಮತ್ತು ನಾಯಕನಾಗಿ ತಮ್ಮ ಅತ್ಯುತ್ತಮ ಪ್ರದರ್ಶನವನ್ನು ನೀಡಿದ್ದಾರೆ. ಅದೇ ರೀತಿ ತಂಡವನ್ನು ಪ್ರಶಸ್ತಿ ಗೆಲುವಿನತ್ತ ಕೊಂಡೊಯ್ದರು. ಐಸಿಸಿ ವಿಶ್ವಕಪ್ 2023 ರ ಫೈನಲ್​​ನಲ್ಲಿ ತಂಡವು ಸೋತ ನಂತರ, ರೋಹಿತ್ ಬೇಸರಗೊಂಡಿದ್ದರು. ಈಗ ಕೆಲವೇ ತಿಂಗಳುಗಳ ನಂತರ ಅವರು ಮತ್ತೆ ಕಣ್ಣೀರು ಹಾಕಿದ್ದಾರೆ. ಅದು ಆನಂದ ಭಾಷ್ಪ.

VISTARANEWS.COM


on

Rohit Sharma
Koo

ಬೆಂಗಳೂರು: 2024ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ (T20 World Cup 2024) ಭಾರತ ತಂಡವನ್ನು ಮುನ್ನಡೆಸಿದ ರೋಹಿತ್ ಶರ್ಮಾ (Rohit Sharma) ಚಾಂಪಿಯನ್ ಪಟ್ಟ ಗೆದ್ದ ಮರುದಿನ (ವೆಸ್ಟ್​ ಇಂಡೀಸ್​ನಲ್ಲಿ ಈಗ ಬೆಳಗ್ಗಿನ ಅವಧಿ) ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ. ತಂಡದ ನಾಯಕ ಭಾನುವಾರ ಜೂನ್​ 29ರಂದು ಪಂದ್ಯ ಮುಗಿದು ಕಪ್ ಗೆದ್ದ ಬಳಿಕ ಅದನ್ನು ತಮ್ಮ ಹಾಸಿಗೆಯ ಪಕ್ಕದಲ್ಲಿ ತಲೆ ಬಳಿಯೇ ಟ್ರೋಫಿಯೊಂದಿಗೆ ಇರುವ ಚಿತ್ರವನ್ನು ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಭಾರತ ತಂಡ ಬಾರ್ಬಡೋಸ್​​ನ ಬ್ರಿಜ್​ಟೌನ್ ಕೆನ್ಸಿಂಗ್ಟನ್ ಓವಲ್​​ನಲ್ಲಿ ಶನಿವಾರ (ಜೂನ್ 29) ನಡೆದ ಫೈನಲ್​​ನಲ್ಲಿ ದಕ್ಷಿಣ ಆಫ್ರಿಕಾವನ್ನು 7 ರನ್​ಗಳಿಂದ ಸೋಲಿಸುವ ಕ್ರಿಕೆಟ್ ತಂಡವು ಟಿ 20 ವಿಶ್ವಕಪ್ 2024 ಅನ್ನು ಗೆದ್ದುಕೊಂಡಿತು.

ಭಾರತ ತಂಡದ ನಾಯಕ ರೋಹಿತ್ ಶರ್ಮಾ ಟೂರ್ನಿಯುದ್ದಕ್ಕೂ ಬ್ಯಾಟಿಂಗ್​ ಮತ್ತು ನಾಯಕನಾಗಿ ತಮ್ಮ ಅತ್ಯುತ್ತಮ ಪ್ರದರ್ಶನವನ್ನು ನೀಡಿದ್ದಾರೆ. ಅದೇ ರೀತಿ ತಂಡವನ್ನು ಪ್ರಶಸ್ತಿ ಗೆಲುವಿನತ್ತ ಕೊಂಡೊಯ್ದರು. ಐಸಿಸಿ ವಿಶ್ವಕಪ್ 2023 ರ ಫೈನಲ್​​ನಲ್ಲಿ ತಂಡವು ಸೋತ ನಂತರ, ರೋಹಿತ್ ಬೇಸರಗೊಂಡಿದ್ದರು. ಈಗ ಕೆಲವೇ ತಿಂಗಳುಗಳ ನಂತರ ಅವರು ಮತ್ತೆ ಕಣ್ಣೀರು ಹಾಕಿದ್ದಾರೆ. ಅದು ಆನಂದ ಭಾಷ್ಪ.

2024 ರ ಟಿ 20 ವಿಶ್ವಕಪ್​ನಲ್ಲಿ ಭಾರತವು ರೋಚಕ ಪ್ರದರ್ಶನ ನೀಡಿತ್ತು. ಅವರು ಪಂದ್ಯಾವಳಿಯುದ್ದಕ್ಕೂ ಅಜೇಯರಾಗಿ ಉಳಿದಿದ್ದರು. ಬಳಿಕ ಸೋಲಿನ ದವಡೆಯಿಂದ ಪಾರಾಗಿ ಫೈನಲ್ ಪಂದ್ಯ ಗೆದ್ದಿದ್ದರು. ಅರ್ಶ್​ದೀಪ್​ ಸಿಂಗ್, ಜಸ್ಪ್ರೀತ್ ಬುಮ್ರಾ ಮತ್ತು ಹಾರ್ದಿಕ್ ಪಾಂಡ್ಯ ಅವರಂತಹ ಬೌಲರ್​ಗಳು ಭಾರತದ ಭಾರತದ ನಾಯಕನ ನಂಬಿಕೆ ಉಳಿಸಿದ್ದಾರೆ.

ಗೆಲುವಿನ ನಂತರ ಭಾರತೀಯ ಆಟಗಾರ ಭಾವುಕರಾಗಿದ್ದರು. ನಂತರ ಸಾಮಾಜಿಕ ಮಾಧ್ಯಮ ಪೋಸ್ಟ್​ಗಳಲ್ಲಿ ತಮ್ಮ ಉತ್ಸಾಹವನ್ನು ವ್ಯಕ್ತಪಡಿಸಿದ್ದರು. ಹಾರ್ದಿಕ್ ಪಾಂಡ್ಯ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಮತ್ತು ಇತರರು ಸಂತೋಷದ ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ. ರೋಹಿತ್ ಶರ್ಮಾ ಗೆಲುವಿನ ನಂತರ ಸಾಮಾಜಿಕ ಮಾಧ್ಯಮದಲ್ಲಿ ಏನನ್ನೂ ಪೋಸ್ಟ್ ಮಾಡದ ಕಾರಣ ಮೌನವಾಗಿದ್ದರು. ಅನೇಕರು ನಾಯಕನ ಪೋಸ್ಟ್​​ಗಾಗಿ ಕಾಯುತ್ತಿದ್ದರು. ಈಗ ಅವರು ಟಿ 20 ವಿಶ್ವಕಪ್ 2024 ಗೆದ್ದ ನಂತರ ಅವರು ಗುಡ್ ಮಾರ್ನಿಂಗ್​ ಎಂದು ಹೇಳುವ ಮೂಲಕ ಅಭಿಮಾನಿಗಳಿಗೆ ಖುಷಿ ಪಟ್ಟಿದ್ದಾರೆ.

ಇದನ್ನೂ ಓದಿ: T20 World Cup 2024 : ವಿಶ್ವ ಚಾಂಪಿಯನ್ ಭಾರತ ತಂಡಕ್ಕೆ ಸಿಗಲಿದೆ ಪ್ರಧಾನಿ ಮೋದಿಯ ಭರ್ಜರಿ ಆತಿಥ್ಯ

ರೋಹಿತ್ ಶರ್ಮಾ ಟಿ 20 ವಿಶ್ವಕಪ್ ಟ್ರೋಫಿಯೊಂದಿಗೆ ಹಾಸಿಗೆಯ ಮೇಲೆ ತಮ್ಮ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ. “ಎಲ್ಲರಿಗೂ ನಮಸ್ಕಾರ” ಎಂಬ ಶೀರ್ಷಿಕೆಯೊಂದಿಗೆ ಅವರು ಕಥೆಯನ್ನು ಹಂಚಿಕೊಂಡಿದ್ದಾರೆ.

Continue Reading

ಪ್ರಮುಖ ಸುದ್ದಿ

T20 World Cup 2024 : ವಿಶ್ವ ಚಾಂಪಿಯನ್ ಭಾರತ ತಂಡಕ್ಕೆ ಸಿಗಲಿದೆ ಪ್ರಧಾನಿ ಮೋದಿಯ ಭರ್ಜರಿ ಆತಿಥ್ಯ

T20 World Cup 2024 : ಸಂಜು ಸ್ಯಾಮ್ಸನ್, ಯಶಸ್ವಿ ಜೈಸ್ವಾಲ್ ಮತ್ತು ಶಿವಂ ದುಬೆ ಹೊರತುಪಡಿಸಿ ಹೆಚ್ಚಿನ ಆಟಗಾರರು ಭಾಗವಹಿಸವ ನಿರೀಕ್ಷೆಯಿದೆ. ಸ್ಯಾಮ್ಸನ್, ಜೈಸ್ವಾಲ್ ಮತ್ತು ದುಬೆ ಮುಂಬರುವ ಜಿಂಬಾಬ್ವೆ ವಿರುದ್ಧದ ಟಿ 20 ಐ ಸರಣಿಗೆ ಭಾರತದ ತಂಡದ ಭಾಗವಾಗಿದ್ದಾರೆ. ಭಾರತ-ಜಿಂಬಾಬ್ವೆ ನಡುವಿನ ಸರಣಿ ಜುಲೈ 6ರಿಂದ ಹರಾರೆಯಲ್ಲಿ ಆರಂಭವಾಗಲಿದೆ. ಅವರು ನೇರವಾಗಿ ವಿಂಡೀಸ್​ನಿಂದ ಅಲ್ಲಿಗೆ ತೆರಳಲಿದ್ದಾರೆ.

VISTARANEWS.COM


on

T20 World Cup
Koo

ನವದೆಹಲಿ: ವೆಸ್ಟ್ ಇಂಡೀಸ್​ನಲ್ಲಿ ನಡೆದ ಟಿ 20 ವಿಶ್ವಕಪ್ (T20 World Cup 2024) ಪ್ರಶಸ್ತಿ ಗೆಲುವಿನ ನಂತರ ದೇಶಕ್ಕೆ ಮರಳಲಿರುವ ಚಾಂಪಿಯನ್ ಆಟಗಾರರಿಗೆ ಪ್ರಧಾನಿ ಮೋದಿ ಭರ್ಜರಿ ಆತಿಥ್ಯ ನೀಡುವ ಸಾಧ್ಯತೆಗಳಿವೆ ಎಂಬುದಾಗಿ ವರದಿಯಾಗಿದೆ. ಅವರೆಲ್ಲರೂ ವೆಸ್ಟ್​​ ಇಂಡೀಸ್​ನಿಂದ ಭಾರತಕ್ಕೆ ಬಂದ ಬಳಿಕ ಮೋದಿಯವನ್ನು ಭೇಟಿಯಾಗಿ ಸಂಭ್ರಮ ಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ. ಮೂಲಗಳ ಪ್ರಕಾರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಅಧಿಕಾರಿಗಳು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಟೀಮ್ ಇಂಡಿಯಾ ಆಟಗಾರರ ಸಭೆ ಯೋಜಿಸುತ್ತಿದ್ದಾರೆ. ಆಟಗಾರರ ನಿಯೋಗ ಭಾರತದಲ್ಲಿ ಜತೆಯಾದ ಬಳಿಕ ಈ ಭೇಟಿ ಸಂಭವಿಸಲಿದೆ.

ಈ ಸಂಭ್ರಮ ಕೂಟದಲ್ಲಿ ಸಂಜು ಸ್ಯಾಮ್ಸನ್, ಯಶಸ್ವಿ ಜೈಸ್ವಾಲ್ ಮತ್ತು ಶಿವಂ ದುಬೆ ಹೊರತುಪಡಿಸಿ ಹೆಚ್ಚಿನ ಆಟಗಾರರು ಭಾಗವಹಿಸವ ನಿರೀಕ್ಷೆಯಿದೆ. ಸ್ಯಾಮ್ಸನ್, ಜೈಸ್ವಾಲ್ ಮತ್ತು ದುಬೆ ಮುಂಬರುವ ಜಿಂಬಾಬ್ವೆ ವಿರುದ್ಧದ ಟಿ 20 ಐ ಸರಣಿಗೆ ಭಾರತದ ತಂಡದ ಭಾಗವಾಗಿದ್ದಾರೆ. ಭಾರತ-ಜಿಂಬಾಬ್ವೆ ನಡುವಿನ ಸರಣಿ ಜುಲೈ 6ರಿಂದ ಹರಾರೆಯಲ್ಲಿ ಆರಂಭವಾಗಲಿದೆ. ಅವರು ನೇರವಾಗಿ ವಿಂಡೀಸ್​ನಿಂದ ಅಲ್ಲಿಗೆ ತೆರಳಲಿದ್ದಾರೆ.

ಶನಿವಾರ ನಡೆದ ಟಿ 20 ವಿಶ್ವಕಪ್ ಫೈನಲ್​ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಏಳು ರನ್​ಗಳ ಜಯ ಸಾಧಿಸಿದ ನಂತರ ಪ್ರಧಾನಿ ಮೋದಿ, ಭಾರತದ ಮುಖ್ಯ ಕೋಚ್ ರಾಹುಲ್ ದ್ರಾವಿಡ್, ನಾಯಕ ರೋಹಿತ್ ಶರ್ಮಾ ಮತ್ತು ಅನುಭವಿ ಬ್ಯಾಟರ್​ ವಿರಾಟ್ ಕೊಹ್ಲಿ ಅವರೊಂದಿಗೆ ಮಾತನಾಡಿದ್ದರು. ಅವರೆಲ್ಲರಿಗೂ ದೇಶದ ಜನತೆಯ ಪರವಾಗಿ ಶುಭಾಶಯ ಹೇಳಿದ್ದರು.

ಇದನ್ನೂ ಓದಿ:Virat kohli : ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಕೊಹ್ಲಿ, ರೋಹಿತ್ ದಾಖಲೆಗಳ ಕಂಪ್ಲೀಟ್‌ ಡಿಟೇಲ್ಸ್‌!

ನವದೆಹಲಿ: 2024 ರ ಟಿ 20 ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದ ವೆಸ್ಟ್ ಇಂಡೀಸ್ನಿಂದ ಹಿಂದಿರುಗಿದ ನಂತರ ಭಾರತೀಯ ಕ್ರಿಕೆಟ್ ತಂಡವು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡುವ ಸಾಧ್ಯತೆಯಿದೆ. ಜಿಂಬಾಬ್ವೆ ವಿರುದ್ಧದ ಐದು ಟಿ 20 ಪಂದ್ಯಗಳಿಂದಾಗಿ ಸಂಜು ಸ್ಯಾಮ್ಸನ್, ಯಶಸ್ವಿ ಜೈಸ್ವಾಲ್ ಮತ್ತು ಶಿವಂ ದುಬೆ ಮಾತ್ರ ಅಲಭ್ಯರಾಗಿರುವುದರಿಂದ ಹೆಚ್ಚಿನ ಆಟಗಾರರು ಹಾಜರಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ಅದಕ್ಕಿಂತ ಹಿಂದೆ ಭಾರತ ಕಪ್​ ಗೆದ್ದ ತಕಷಣ ಸೋಷಿಯಲ್ ಮೀಡಿಯಾ ಪ್ಲಾಟ್ಫಾರ್ಮ್ ಎಕ್ಸ್​ನಲ್ಲಿ ಸರಣಿ ಪೋಸ್ಟ್​​ನಲ್ಲಿ ಪಿಎಂ ಮೋದಿ ತಂಡವನ್ನು ಶ್ಲಾಘಿಸಿದ್ದರು.

ಚಾಂಪಿಯನ್ ಭಾರತ ತಂಡಕ್ಕೆ 125 ಕೋಟಿ ರೂ. ಬಹುಮಾನ

ಐಸಿಸಿ ಪುರುಷರ ಟಿ20 ವಿಶ್ವಕಪ್ 2024ರಲ್ಲಿ (T20 World Cup 2024 ) ಚಾಂಪಿಯನ್ ಪಟ್ಟ ಅಲಂಕರಿಸಿದ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಬರೋಬ್ಬರಿ 125 ಕೋಟಿ ರೂಪಾಯಿ ಬಹುಮಾನ ಘೋಷಿಸಿದೆ. ಬಾರ್ಬಡೋಸ್​​ನಲ್ಲಿ ಶನಿವಾರ ನಡೆದ ವಿಶ್ವ ಕಪ್​ನ ಫೈನಲ್​ ಹಣಾಹಣಿಯಲ್ಲಿ ದಕ್ಷಿಣ ಆಫ್ರಿಕಾವನ್ನು 7 ರನ್​ಗಳಿಂದ ಸೋಲಿಸುವ ಮೂಲಕ ಭಾರತೀಯ ಪುರುಷರ ಕ್ರಿಕೆಟ್ ತಂಡವು ಐಸಿಸಿ ಟ್ರೋಫಿಗಾಗಿ 11 ವರ್ಷಗಳ ಕಾಯುವಿಕೆಯನ್ನು ಕೊನೆಗೊಳಿಸಿತು. ಅಲ್ಲದೇ ಎರಡನೇ ಬಾರಿ ಟಿ20 ವಿಶ್ವ ಕಪ್​ ಗೆದ್ದುಕೊಂಡಿತು. 2007ರಲ್ಲಿ ಧೋನಿ ನೇತೃತ್ವದಲ್ಲಿ ಭಾರತ ತಂಡ ಉದ್ಘಾಟನಾ ಆವೃತ್ತಿಯ ವಿಶ್ವ ಕಪ್​ ಗೆದ್ದುಕೊಂಡಿತ್ತು.

Continue Reading

ಪ್ರಮುಖ ಸುದ್ದಿ

T20 World Cup 2024 : ವಿಶ್ವ ಕಪ್​ ಗೆದ್ದ ಭಾರತ ತಂಡಕ್ಕೆ ಬರೋಬ್ಬರಿ 125 ಕೋಟಿ ರೂ. ಬಹುಮಾನ ಘೋಷಿಸಿದ ಬಿಸಿಸಿಐ

T20 World Cup 2024 : ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ವಿಜೇತ ತಂಡಕ್ಕೆ 125 ಕೋಟಿ ರೂ.ಗಳ ಬಹುಮಾನವನ್ನು ಘೋಷಿಸಿದ್ದಾರೆ. ಭಾರತದ ಅತ್ಯುತ್ತಮ ಸಾಧನೆಗೆ ನೀಡಿದ ಕೊಡುಗೆಗಾಗಿ ಆಟಗಾರರು ಮತ್ತು ಎಲ್ಲಾ ಕೋಚಿಂಗ್ ಸಿಬ್ಬಂದಿಯನ್ನು ಅವರು ಅಭಿನಂದಿಸಿದ್ದಾರೆ.

VISTARANEWS.COM


on

T20 World Cup 2024
Koo

ಬೆಂಗಳೂರು: ಐಸಿಸಿ ಪುರುಷರ ಟಿ20 ವಿಶ್ವಕಪ್ 2024ರಲ್ಲಿ (T20 World Cup 2024 ) ಚಾಂಪಿಯನ್ ಪಟ್ಟ ಅಲಂಕರಿಸಿದ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಬರೋಬ್ಬರಿ 125 ಕೋಟಿ ರೂಪಾಯಿ ಬಹುಮಾನ ಘೋಷಿಸಿದೆ. ಬಾರ್ಬಡೋಸ್​​ನಲ್ಲಿ ಶನಿವಾರ ನಡೆದ ವಿಶ್ವ ಕಪ್​ನ ಫೈನಲ್​ ಹಣಾಹಣಿಯಲ್ಲಿ ದಕ್ಷಿಣ ಆಫ್ರಿಕಾವನ್ನು 7 ರನ್​ಗಳಿಂದ ಸೋಲಿಸುವ ಮೂಲಕ ಭಾರತೀಯ ಪುರುಷರ ಕ್ರಿಕೆಟ್ ತಂಡವು ಐಸಿಸಿ ಟ್ರೋಫಿಗಾಗಿ 11 ವರ್ಷಗಳ ಕಾಯುವಿಕೆಯನ್ನು ಕೊನೆಗೊಳಿಸಿತು. ಅಲ್ಲದೇ ಎರಡನೇ ಬಾರಿ ಟಿ20 ವಿಶ್ವ ಕಪ್​ ಗೆದ್ದುಕೊಂಡಿತು. 2007ರಲ್ಲಿ ಧೋನಿ ನೇತೃತ್ವದಲ್ಲಿ ಭಾರತ ತಂಡ ಉದ್ಘಾಟನಾ ಆವೃತ್ತಿಯ ವಿಶ್ವ ಕಪ್​ ಗೆದ್ದುಕೊಂಡಿತ್ತು.

ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ವಿಜೇತ ತಂಡಕ್ಕೆ 125 ಕೋಟಿ ರೂ.ಗಳ ಬಹುಮಾನವನ್ನು ಘೋಷಿಸಿದ್ದಾರೆ. ಭಾರತದ ಅತ್ಯುತ್ತಮ ಸಾಧನೆಗೆ ನೀಡಿದ ಕೊಡುಗೆಗಾಗಿ ಆಟಗಾರರು ಮತ್ತು ಎಲ್ಲಾ ಕೋಚಿಂಗ್ ಸಿಬ್ಬಂದಿಯನ್ನು ಅವರು ಅಭಿನಂದಿಸಿದ್ದಾರೆ.

“ಐಸಿಸಿ ಪುರುಷರ ಟಿ 20 ವಿಶ್ವಕಪ್ 2024 ಅನ್ನು ಗೆದ್ದ ಟೀಮ್ ಇಂಡಿಯಾಕ್ಕೆ 125 ಕೋಟಿ ರೂ.ಗಳ ಬಹುಮಾನದ ಮೊತ್ತವನ್ನು ಘೋಷಿಸಲು ನನಗೆ ಸಂತೋಷವಾಗಿದೆ ಎಂದು ಜಯ್ ಶಾ ತಮ್ಮ ಎಕ್ಸ್ ಪೋಸ್ಟ್ ನಲ್ಲಿ ಬರೆದಿದ್ದಾರೆ. “ತಂಡವು ಪಂದ್ಯಾವಳಿಯುದ್ದಕ್ಕೂ ಅಸಾಧಾರಣ ಪ್ರತಿಭೆ, ದೃಢನಿಶ್ಚಯ ಮತ್ತು ಕ್ರೀಡಾ ಮನೋಭಾವವನ್ನು ಪ್ರದರ್ಶಿಸಿದೆ. ಈ ಅಸಾಧಾರಣ ಸಾಧನೆಗಾಗಿ ಎಲ್ಲಾ ಆಟಗಾರರು, ತರಬೇತುದಾರರು ಮತ್ತು ಸಹಾಯಕ ಸಿಬ್ಬಂದಿಗೆ ಅಭಿನಂದನೆಗಳು ಎಂದು ಅವರು ಬರೆದುಕೊಂಡಿದ್ದಾರೆ.

ಇದು ಭಾರತ ತಂಡಕ್ಕೆ 13 ವರ್ಷಗಳ ಬಳಿಕ ಸಿಕ್ಕ ವಿಶ್ವ ಕಪ್​ ಹಾಗೂ 17 ವರ್ಷಗಳ ಬಳಿಕ ದೊರೆತ ಟಿ20 ವಿಶ್ವ ಕಪ್​. ಭಾರತ ತಂಡ 2007ರ ಉದ್ಘಾಟನಾ ಆವೃತ್ತಿಯ ಟಿ20 ವಿಶ್ವ ಕಪ್​ ಗೆದ್ದಿದ್ದರೆ 2011ರ ಏಕ ದಿನ ವಿಶ್ವ ಕಪ್ ಗೆದ್ದುಕೊಂಡಿತು.

ಇದನ್ನೂ ಓದಿ: Virat kohli : ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಕೊಹ್ಲಿ, ರೋಹಿತ್ ದಾಖಲೆಗಳ ವಿವರ ಇಲ್ಲಿದೆ

ಇಲ್ಲಿನ ಕೆನ್ಸಿಂಗ್ಟನ್ ಓವಲ್ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದ ಭಾರತ ತಂಡ ನಾಯಕ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಅಂತೆಯೇ ನಿಗದಿತ 20 ಓವರ್​ಗಳು ಮುಕ್ತಾಯಗೊಳ್ಳುವಾಗ 7 ವಿಕೆಟ್​ ನಷ್ಟ ಮಾಡಿಕೊಂಡು 176 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ತಂಡ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 8 ವಿಕೆಟ್​ಗೆ 169 ರನ್ ಬಾರಿಸಿ ಸೋಲೊಪ್ಪಿಕೊಂಡಿತ್ತು.

ಅಂದ ಹಾಗೆ ಭಾರತ ತಂಡ ಈ ಬಾರಿಯ ಟ್ರೋಫಿಯನ್ನು ಅಜೇಯವಾಗಿ ಗೆದ್ದಿದೆ. ಟೂರ್ನಿಯುದ್ದಕ್ಕೂ ಪಂದ್ಯಾವಳಿಯುದ್ದಕ್ಕೂ ಎಲ್ಲಾ ಪಂದ್ಯಗಳನ್ನು ಗೆದ್ದು ಟ್ರೋಫಿ ಗೆದ್ದ ಮೊದಲ ತಂಡ ಎಂಬ ಇತಿಹಾಸ ಬರೆದಿದೆ. ಗುಂಪು ಹಂತದಲ್ಲಿ ಭಾರತ ಆಡಿದ ಎಲ್ಲಾ ಮೂರು ಪಂದ್ಯಗಳನ್ನು ಗೆದ್ದು ಅಜೇಯವಾಗಿ ಉಳಿದಿತ್ತು. ಒಂದು ಪಂದ್ಯ ಮಳೆಯಿಂದಾಗಿ ಕೊಚ್ಚಿಹೋಗಿತ್ತು. ಗಯಾನಾದಲ್ಲಿ ನಡೆದ ಸೆಮಿಫೈನಲ್​​ನಲ್ಲಿ ಗೆಲ್ಲುವ ಮೊದಲು ಭಾರತವು ಸೂಪರ್ ಎಂಟರ ಹಂತದ ಎಲ್ಲಾ ಪಂದ್ಯಗಳನ್ನು ಗೆದ್ದಿತ್ತು. ಸೆಮಿಯಲ್ಲಿ ಇಂಗ್ಲೆಂಡ್ ಅನ್ನು 68 ರನ್​ಗಳಿಂದ ಸೋಲಿಸಿತ್ತು.

ಟಿ 20 ವಿಶ್ವಕಪ್ ಫೈನಲ್​​ನಲ್ಲಿ ಆಡಿದ ತಂಡವು ರನ್​ ಗುರಿಯನ್ನು ಗುರಿಯನ್ನು ರಕ್ಷಿಸಿ ಗೆದ್ದಿರುವುದು ಇದು ಮೂರನೇ ಬಾರಿ. 2007ರಲ್ಲಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಭಾರತ ಈ ಸಾಧನೆ ಮಾಡಿದ್ದರೆ, 2012ರಲ್ಲಿ ವೆಸ್ಟ್ ಇಂಡೀಸ್ ಈ ಸಾಧನೆ ಮಾಡಿತ್ತು.

Continue Reading

ಪ್ರಮುಖ ಸುದ್ದಿ

Virat kohli : ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಕೊಹ್ಲಿ, ರೋಹಿತ್ ದಾಖಲೆಗಳ ಕಂಪ್ಲೀಟ್‌ ಡಿಟೇಲ್ಸ್‌!

Virat kohli: ಈ ಇಬ್ಬರು ಶ್ರೇಷ್ಠ ಕ್ರಿಕೆಟ್​ ಆಟಗಾರರ ನಿವೃತ್ತಿಯ ಹಿನ್ನೆಲೆಯಲ್ಲಿ ಅವರು ಟಿ20 ಕ್ರಿಕೆಟ್​ನಲ್ಲಿ ಮಾಡಿರುವ ಸಾಧನೆಗಳ ಕುರಿತ ಸಮಗ್ರ ವಿವರ ಇಲ್ಲಿ ಕೊಡಲಾಗಿದೆ. ಅವರಿಬ್ಬರು ಚುಟುಕು ಮಾದರಿಯಲ್ಲಿ ಮಾಡಿರುವ ರನ್​ಗಳು, ರೆಕಾರ್ಡ್​ಗಳು ಹಾಗೂ ಸೃಷ್ಟಿಸಿರುವ ಹೊಸ ಮಾದರಿಗಳ ಬಗ್ಗೆ ಗಮನ ಹರಿಸೋಣ.

VISTARANEWS.COM


on

Virat kohli
Koo

ಬೆಂಗಳೂರು: ವೆಸ್ಟ್​​ ಇಂಡೀಸ್​​​ನ ಬಾರ್ಬಡೋಸ್​​ನಲ್ಲಿರುವ ಕೆನ್ಸಿಂಗ್ಟನ್ ಓವಲ್​​ನಲ್ಲಿ ಜೂನ್ 29 ರಂದು ನಡೆದ ಟಿ 20 ವಿಶ್ವಕಪ್ 2024 ರ ಫೈನಲ್​​ನಲ್ಲಿ(T20 World Cup Final ) ಭಾರತವು ದಕ್ಷಿಣ ಆಫ್ರಿಕಾವನ್ನು 7 ರನ್​ಗಳಿಂದ ಸೋಲಿಸಿ ವಿಶ್ವ ಕಪ್​ ಗೆದ್ದಿತು. ಈ ಸಂಭ್ರಮದ ನಡುವೆ ವಿರಾಟ್ ಕೊಹ್ಲಿ ಟಿ 20 ಅಂತಾರಾಷ್ಟ್ರೀಯ ಪಂದ್ಯಗಳಿಂದ ನಿವೃತ್ತಿ ಪಡೆದರು. ಸ್ವಲ್ಪ ಹೊತ್ತಿನಲ್ಲಿ ನಾಯಕ ರೋಹಿತ್ ಶರ್ಮಾ ಕೂಡ ಈ ಮಾದರಿಯಲ್ಲಿ ತಮಗಿದು ಕೊನೇ ಪಂದ್ಯ ಎಂದು ಘೋಷಿಸಿದರು. ವಿರಾಟ್​ ಕೊಹ್ಲಿ (Virat Kohli) ಟೂರ್ನಿಯಲ್ಲಿ ಪ್ರದರ್ಶನ ನೀಡಿದ್ದರು. ಆದರೆ, ನಿರ್ಣಾಯಕ ಫೈನಲ್​ನಲ್ಲಿ ಅರ್ಧಶತಕ ಬಾರಿಸಿ ಗೆಲುವಿಗೆ ಕೊಡುಗೆ ಕೊಟ್ಟರು. ಕೊಹ್ಲಿ 59 ಎಸೆತಗಳಲ್ಲಿ 76 ರನ್ ಗಳಿಸಿ ಭಾರತ ಒಟ್ಟು 176 ರನ್ ಗಳಿಸಲು ನೆರವಾದರು. ಇದೇ ವೇಳೆ ರೋಹಿತ್ ಶರ್ಮಾ ಸೂಪರ್​ 8 ಹಾಗೂ ಸೆಮಿ ಫೈನಲ್ ಪಂದ್ಯದಲ್ಲಿ ಮಿಂಚಿದ್ದರು. ಈ ಇಬ್ಬರು ದಿಗ್ಗಜರ ನಿವೃತ್ತಿ ಭಾರತ ತಂಡದ ಬಲ ಕುಗ್ಗಿಸಲಿದೆ. ಆದಾಗ್ಯೂ ಹೊಸ ಪೀಳಿಗೆಗೆ ಅವಕಾಶ ಕೊಡುವುದು ಅನಿವಾರ್ಯ.

ಈ ಇಬ್ಬರು ಶ್ರೇಷ್ಠ ಕ್ರಿಕೆಟ್​ ಆಟಗಾರರ ನಿವೃತ್ತಿಯ ಹಿನ್ನೆಲೆಯಲ್ಲಿ ಅವರು ಟಿ20 ಕ್ರಿಕೆಟ್​ನಲ್ಲಿ ಮಾಡಿರುವ ಸಾಧನೆಗಳ ಕುರಿತ ಸಮಗ್ರ ವಿವರ ಇಲ್ಲಿ ಕೊಡಲಾಗಿದೆ. ಅವರಿಬ್ಬರು ಚುಟುಕು ಮಾದರಿಯಲ್ಲಿ ಮಾಡಿರುವ ರನ್​ಗಳು, ರೆಕಾರ್ಡ್​ಗಳು ಹಾಗೂ ಸೃಷ್ಟಿಸಿರುವ ಹೊಸ ಮಾದರಿಗಳ ಬಗ್ಗೆ ಗಮನ ಹರಿಸೋಣ.

ವಿರಾಟ್ ಕೊಹ್ಲಿ

4188 ರನ್: ಕೊಹ್ಲಿ ಟಿ 20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಒಟ್ಟು 4188 ರನ್ ಗಳಿಸಿದ್ದಾರೆ. ಇದು ರೋಹಿತ್ ಶರ್ಮಾ ಅವರ 4231 ರನ್​ಗಳ ನಂತರ ಎರಡನೇ ಅತಿ ಹೆಚ್ಚು ಸ್ಕೋರ್​. ವಿಶೇಷವೆಂದರೆ, ಕೊಹ್ಲಿ ರೋಹಿತ್​ಗಿಂತ 34 ಕಡಿಮೆ ಇನ್ನಿಂಗ್ಸ್​​ಗಳಲ್ಲಿ ಇಷ್ಟು ಸ್ಕೋರ್ ಮಾಡಿದ್ದಾರೆ. ಕೊಹ್ಲಿ ಮತ್ತು ರೋಹಿತ್ ಇಬ್ಬರೂ ಎಲ್ಲಾ ಮೂರು ಅಂತರರಾಷ್ಟ್ರೀಯ ಕ್ರಿಕೆಟ್​ ಸ್ವರೂಪಗಳಲ್ಲಿ 4000ಕ್ಕಿಂತ ಹೆಚ್ಚು ರನ್ ಗಳಿಸಿದ ಆಟಗಾರ.

48.69 ಸರಾಸರಿ: ಟಿ20ಐನಲ್ಲಿ ಕೊಹ್ಲಿಯ ಸರಾಸರಿ 48.69 ಆಗಿದ್ದು, ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ (48.72ಸರಾಸರಿ) ಅವರ ನಂತರದ ಸ್ಥಾನದಲ್ಲಿದ್ದಾರೆ.

ಪಂದ್ಯಶ್ರೇಷ್ಠ ಪ್ರಶಸ್ತಿ: ಕೊಹ್ಲಿ ಟಿ20ಐ ಮಾದರಿಯಲ್ಲಿ 16 ಪಂದ್ಯಶ್ರೇಷ್ಠ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಇದು ಸೂರ್ಯಕುಮಾರ್ ಯಾದವ್ ಅವರಿಗಿಂತ ಒಂದು ಪ್ರಶಸ್ತಿ ಮುಂದಿದೆ. 2014, 2016ರ ಟಿ20 ವಿಶ್ವಕಪ್ ಸೇರಿದಂತೆ ಆರು ಬಾರಿ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಇದನ್ನೂ ಓದಿ: Jasprit Bumrah : ಮಗನ ಮುಂದೆ ವಿಶ್ವ ಕಪ್​ ಗೆದ್ದಿದ್ದು ದೊಡ್ಡ ಖುಷಿ ಎಂದ ಜಸ್​ಪ್ರಿತ್​ ಬುಮ್ರಾ

ವಿಶ್ವ ಕಪ್​ ರನ್​ಗಳು: ಟಿ 20 ವಿಶ್ವಕಪ್ ಇತಿಹಾಸದಲ್ಲಿ ಕೊಹ್ಲಿ 1292 ರನ್ ಗಳಿಸಿದ್ದಾರೆ. ಇದು ಗರಿಷ್ಠ ರನ್. 2014ರ ಆವೃತ್ತಿಯಲ್ಲಿ 319 ರನ್ ಗಳಿಸುವ ಮೂಲಕ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದರು. 2022ರ ಆವೃತ್ತಿಯಲ್ಲಿ ಅವರು 296 ರನ್​ಗಳ ಸಮೇತ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರು.

ಗರಿಷ್ಠ ಸರಾಸರಿ: ಟಿ 20 ವಿಶ್ವಕಪ್​​ನಲ್ಲಿ ಕೊಹ್ಲಿಯ ಸರಾಸರಿ 58.72. ಪಂದ್ಯಾವಳಿಯಲ್ಲಿ 500ಕ್ಕಿಂತಲೂ ಹೆಚ್ಚು ರನ್ ಗಳಿಸಿದ 34 ಆಟಗಾರರಲ್ಲಿ ಇವರು ಅಗ್ರರು. ಅವರು 33 ಇನ್ನಿಂಗ್ಸ್​​ಗಳಲ್ಲಿ 15 ಬಾರಿ 50+ ರನ್ ಬಾರಿಸಿದ್ದಾರೆ. ರೋಹಿತ್​ 13 ಬಾರಿ 50ಕ್ಕಿಂತ ಹೆಚ್ಚು ಸ್ಕೋರ್​ ಮಾಡಿದ್ದಾರೆ.

ಪಂದ್ಯಶ್ರೇಷ್ಠ ಪ್ರಶಸ್ತಿಗಳು: ಟಿ 20 ವಿಶ್ವಕಪ್ ಇತಿಹಾಸದಲ್ಲಿ ಕೊಹ್ಲಿ 8 ಪಂದ್ಯಶ್ರೇಷ್ಠ ಪ್ರಶಸ್ತಿಗಳನ್ನು ಗೆದ್ದಿದ್ದಾರೆ ಕೊಹ್ಲಿ. ಮಹೇಲಾ ಜಯವರ್ಧನೆ, ಕ್ರಿಸ್ ಗೇಲ್, ಶೇನ್ ವ್ಯಾಟ್ಸನ್ ಮತ್ತು ಆಡಮ್ ಜಂಪಾ ಈ ಪಟ್ಟಿಯಲ್ಲಿ ಐದು ಪ್ರಶಸ್ತಿ ಗೆದ್ದಿದ್ದಾರೆ.

ಎರಡು ವಿಶ್ವ ಕಪ್​ನ ಉತ್ತಮ ಆಟಗಾರ : ಕೊಹ್ಲಿ ಟಿ20 ವಿಶ್ವ ಕಪ್​ನಲ್ಲಿ ಎರಡು ಬಾರಿ ಟೂರ್ನಿಯ ಉತ್ತಮ ಆಟಗಾರ ಪ್ರಶಸ್ತಿ ಪಡೆದಿದ್ದಾರೆ. ಈ ಸಾಧನೆ ಮಾಡಿದ ಏಕೈಕ ಆಟಗಾರ.

67.10 ಸರಾಸರಿ: ವಿರಾಟ್ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಪಂದ್ಯದ ರನ್ ಚೇಸಿಂಗ್​​ನಲ್ಲಿ 67.10 ಸರಾಸರಿ ಹೊಂದಿದ್ದಾರೆ. ಟಿ 20 ಮಾದರಿಯಲ್ಲಿ ಚೇಸಿಂಗ್ ಮಾಡುವಾಗ ಕನಿಷ್ಠ 500 ರನ್ ಗಳಿಸಿದ ಆಟಗಾರರಲ್ಲಿ ಇದು ಗರಿಷ್ಠ. ಸೂರ್ಯಕುಮಾರ್ ಯಾದವ್ ಮಾತ್ರ ರನ್ ಚೇಸಿಂಗ್​​ನಲ್ಲಿ 50+ ಸರಾಸರಿ ಹೊಂದಿದ್ದಾರೆ.

42 ಗೆಲುವು: ಕೊಹ್ಲಿ ಆಡಿದ 52 ಟಿ 20 ಪಂದ್ಯಗಳಲ್ಲಿ ಭಾರತವು 42 ಬಾರಿ ಯಶಸ್ವಿಯಾಗಿ ರನ್​ ಚೇಸ್ ಮಾಡಿದೆ. ಕೊಹ್ಲಿ 18 ಬಾರಿ ರನ್ ಚೇಸಿಂಗ್​ನಲ್ಲಿ ಅಜೇಯರಾಗಿ ಉಳಿದಿದ್ದಾರೆ. ಭಾರತವು ಆ ಎಲ್ಲ ಪಂದ್ಯಗಳನ್ನು ಗೆದ್ದಿದೆ. ಅವರು 48 ಇನ್ನಿಂಗ್ಸ್​ಗಳಲ್ಲಿ 20 ಬಾರಿ ರನ್ ಚೇಸಿಂಗ್​​ನಲ್ಲಿ 50ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ.

ನಾಯಕತ್ವದ ಸಾಧನೆ: ತಂಡದ ನಾಯಕನಾಗಿ ಬ್ಯಾಟಿಂಗ್​ನಲ್ಲಿ 47.57 ಸರಾಸರಿ ಹೊಂದಿದ್ದ ಕೊಹ್ಲಿ ಸರಾಸರಿ ಕನಿಷ್ಠ 1000 ರನ್ ಗಳಿಸಿದ ಯಾವುದೇ ನಾಯಕನಿಗಿಂತ ಗರಿಷ್ಠ ಸಾಧನೆಯಾಗಿದೆ.

ಅಂಡರ್-19 ವಿಶ್ವಕಪ್ (2008), ಏಕದಿನ ವಿಶ್ವಕಪ್ (2011), ಚಾಂಪಿಯನ್ಸ್ ಟ್ರೋಫಿ (2013) ಮತ್ತು ಟಿ 20 ವಿಶ್ವಕಪ್ (2024) ಸೇರಿದಂತೆ ಎಲ್ಲಾ ನಾಲ್ಕು ಪ್ರಮುಖ ಐಸಿಸಿ ವೈಟ್ ಬಾಲ್ ಕ್ರಿಕೆಟ್​​ನ ಎಲ್ಲ ಮಾದರಿಯ ಫೈನಲ್​ ಆಡಿದ ಏಕೈಕ ಆಟಗಾರ.

ರೋಹಿತ್ ಶರ್ಮಾ

ಅತಿ ಹೆಚ್ಚು ಪಂದ್ಯಗಳು: ರೋಹಿತ್ ಶರ್ಮಾ 159 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು ಪಟ್ಟಿಯ ಅಗ್ರಸ್ಥಾನಿ. ಐರ್ಲೆಂಡ್​ನ ಪಾಲ್ ಸ್ಟಿರ್ಲಿಂಗ್ (145) ಮತ್ತು ಜಾರ್ಜ್ ಡಾಕ್ರೆಲ್ (139) ನಂತರದಲ್ಲಿದ್ದಾರೆ. ಭಾರತದ ಮಹಿಳಾ ಟಿ20 ತಂಡದ ನಾಯಕಿ ಹರ್ಮನ್​ಪ್ರೀತ್​ ಕೌರ್ (166) ರೋಹಿತ್​ಗಿಂತ ಮುಂದಿದ್ದಾರೆ.

ಟಿ20ಐನಲ್ಲಿ 111 ಗೆಲುವುಗಳು: ರೋಹಿತ್ ಶರ್ಮಾ ಟಿ20ಐನಲ್ಲಿ 111 ಗೆಲುವುಗಳೊಂದಿಗೆ ಅತಿ ಹೆಚ್ಚು ಗೆಲುವು ಸಾಧಿಸಿದ ದಾಖಲೆ ಹೊಂದಿದ್ದಾರೆ. ಶೋಯೆಬ್ ಮಲಿಕ್ 87 ನಂತರದ ಸ್ಥಾನ ಹೊಂದಿದ್ದಾರೆ.

4231 ರನ್: ರೋಹಿತ್​ ಟಿ20 ಅಂತಾರಾಷ್ಟ್ರೀಯ ಮಾದರಿಯಲ್ಲಿ 4231 ರನ್ ಬಾರಿಸಿದ್ದಾರೆ. ಅವರು ವಿರಾಟ್ ಕೊಹ್ಲಿ (4188) ಅವರಿಗಿಂತ ಸ್ವಲ್ಪ ಮುಂದಿದ್ದಾರೆ.

ಅತಿ ಹೆಚ್ಚು ಶತಕಗಳು: ಟಿ20ಐನಲ್ಲಿ ಅತಿ ಹೆಚ್ಚು ಶತಕಗಳನ್ನು ಬಾರಿಸಿದ ಗ್ಲೆನ್ ಮ್ಯಾಕ್ಸ್ವೆಲ್ (5) ಅವರೊಂದಿಗೆ ಸ್ಥಾನ ಹಂಚಿಕೊಂಡಿದ್ದಾರೆ. ಸೂರ್ಯಕುಮಾರ್ ಯಾದವ್ (4) ನಂತರದ ಸ್ಥಾನದಲ್ಲಿದ್ದಾರೆ. ಕೊಹ್ಲಿ ಮತ್ತು ಬಾಬರ್ ಅಜಮ್ (ತಲಾ 39) ನಂತರ ರೋಹಿತ್​​ 37 ಅರ್ಧಶತಕಗಳನ್ನು ಗಳಿಸಿದ್ದಾರೆ.

ಅತಿ ಹೆಚ್ಚು ಸಿಕ್ಸರ್: ರೋಹಿತ್ ಶರ್ಮಾ ಟಿ20ಐನಲ್ಲಿ 205 ಸಿಕ್ಸರ್​ಗಳನ್ನು ಬಾರಿಸಿದ್ದು, ಮಾರ್ಟಿನ್ ಗಪ್ಟಿಲ್ (173) ಅವರಿಗಿಂತ ಮುಂದಿದ್ದಾರೆ.

ದಾಖಲೆಯ ಜೊತೆಯಾಟ: 2024 ರ ಜನವರಿಯಲ್ಲಿ ಅಫ್ಘಾನಿಸ್ತಾನ ವಿರುದ್ಧ ನಡೆದ ಭಾರತ ಮತ್ತು ಅಫಘಾನಿಸ್ಥಾನ ನಡುವಿನ 3ನೇ ಟಿ 20 ಪಂದ್ಯದಲ್ಲಿ ರೋಹಿತ್ ಮತ್ತು ರಿಂಕು ಸಿಂಗ್ ಐದನೇ ವಿಕೆಟ್​ಗೆ 190 ರನ್​ಗಳ ಜೊತೆಯಾಟ ಆಡಿದ್ದರು.

ನಾಯಕನಾಗಿ 50 ಗೆಲುವುಗಳು: ಟಿ 20 ಪಂದ್ಯಗಳಲ್ಲಿ 50 ಗೆಲುವುಗಳನ್ನು ಸಾಧಿಸಿದ ಮೊದಲ ನಾಯಕ ರೋಹಿತ್, (50 ಗೆಲುವು ಮತ್ತು 12 ಸೋಲು) ಪ್ರಭಾವಶಾಲಿ ಗೆಲುವು-ಸೋಲಿನ ಅನುಪಾತ ಹೊಂದಿದ್ದಾರೆ ಅವರು.

ಅತಿ ಹೆಚ್ಚು ಪಂದ್ಯಗಳು: ಟಿ 20 ವಿಶ್ವಕಪ್​​ನಲ್ಲಿ ಅತಿ ಹೆಚ್ಚು ಪಂದ್ಯಗಳನ್ನು (47) ಆಡಿದ ದಾಖಲೆಯನ್ನು ರೋಹಿತ್ ಹೊಂದಿದ್ದಾರೆ. ಶಕೀಬ್ ಅಲ್ ಹಸನ್ (43) ಅವರನ್ನು ಹಿಂದಿಕ್ಕಿದ್ದಾರೆ.

ಹಿರಿಯ ನಾಯಕ: ಹಾಲಿ ವಿಶ್ವ ಕಪ್​ನ ಕೊನೇ ಪಂದ್ಯಕ್ಕೆ 37 ವರ್ಷ 60 ದಿನಗಳಾಗಿದ್ದ ರೋಹಿತ್​, ​, ಆಸ್ಟ್ರೇಲಿಯಾದ ಆ್ಯರೋನ್ ಫಿಂಚ್ ಅವರನ್ನು ಹಿಂದಿಕ್ಕಿ ವಿಶ್ವ ಕಪ್​ನಲ್ಲಿ ತಂಡವನ್ನು ಮುನ್ನಡೆಸಿದ ಹಿರಿಯ ಆಟಗಾರ ಎನಿಸಿಕೊಂಡಿದ್ದಾರೆ.

ಎರಡು ಬಾರಿ ಟಿ20 ವಿಶ್ವಕಪ್ ಗೆದ್ದ ಏಕೈಕ ಭಾರತೀಯ: ರೋಹಿತ್ ಶರ್ಮಾ ಎರಡು ಬಾರಿ ಟಿ 20 ವಿಶ್ವಕಪ್ ಗೆದ್ದ ಏಕೈಕ ಭಾರತೀಯ ಆಟಗಾರ. 2007ರಲ್ಲೂ ಅವರು ಭಾರತ ತಂಡದಲ್ಲಿ ಆಡಿದ್ದರು.

Continue Reading
Advertisement
Rohit Sharma
ಪ್ರಮುಖ ಸುದ್ದಿ47 mins ago

Rohit Sharma : ತಲೆ ಪಕ್ಕದಲ್ಲೇ ಟ್ರೋಫಿ ಇಟ್ಟುಕೊಂಡು ನಿದ್ದೆ ಮಾಡಿದ ರೋಹಿತ್ ಶರ್ಮಾ

VSK Media Awards 2024
ಬೆಂಗಳೂರು1 hour ago

VSK Media Awards 2024: ಲೋಕಹಿತಕ್ಕಾಗಿ ಪತ್ರಿಕೋದ್ಯಮ ಶ್ರಮಿಸಬೇಕು: ಪ್ರಫುಲ್ಲ ಕೇತ್ಕರ್

NIA Raid
ದೇಶ1 hour ago

NIA Raid: ಹಿಜ್ಬು-ಉತ್‌-ತಹ್ರೀರ್‌ ಉಗ್ರ ಸಂಘಟನೆ ಜೊತೆ ನಂಟು-10 ಕಡೆಗಳಲ್ಲಿ NIA ರೇಡ್‌; ಶಂಕಿತ ಉಗ್ರರು ಅರೆಸ್ಟ್‌

Basavakalyan News
ಬೀದರ್‌2 hours ago

Basavakalyan News: ರಾತ್ರಿ ಮಣ್ಣಲ್ಲಿ ಹೂತಿದ್ದ ಮಗು ಬೆಳಗ್ಗೆ ಜೋಕಾಲಿಯಲ್ಲಿ ಪ್ರತ್ಯಕ್ಷ!

T20 World Cup
ಪ್ರಮುಖ ಸುದ್ದಿ2 hours ago

T20 World Cup 2024 : ವಿಶ್ವ ಚಾಂಪಿಯನ್ ಭಾರತ ತಂಡಕ್ಕೆ ಸಿಗಲಿದೆ ಪ್ರಧಾನಿ ಮೋದಿಯ ಭರ್ಜರಿ ಆತಿಥ್ಯ

Goldman of Bihar
ವೈರಲ್ ನ್ಯೂಸ್2 hours ago

Goldman of Bihar: ಈತ ಬಂಗಾರದ ಮನುಷ್ಯ! ಕೊರಳಲ್ಲಿದೆ 5 ಕೆಜಿ ಚಿನ್ನ! ಬೈಕ್‌ನಲ್ಲೂ ಇದೆ ಬಂಗಾರ!

Lacchi Poojarthi
ಕರ್ನಾಟಕ2 hours ago

Lacchi Poojarthi: ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ತಾಯಿ ನಿಧನ

T20 World Cup 2024
ಪ್ರಮುಖ ಸುದ್ದಿ2 hours ago

T20 World Cup 2024 : ವಿಶ್ವ ಕಪ್​ ಗೆದ್ದ ಭಾರತ ತಂಡಕ್ಕೆ ಬರೋಬ್ಬರಿ 125 ಕೋಟಿ ರೂ. ಬಹುಮಾನ ಘೋಷಿಸಿದ ಬಿಸಿಸಿಐ

Virat kohli
ಪ್ರಮುಖ ಸುದ್ದಿ3 hours ago

Virat kohli : ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಕೊಹ್ಲಿ, ರೋಹಿತ್ ದಾಖಲೆಗಳ ಕಂಪ್ಲೀಟ್‌ ಡಿಟೇಲ್ಸ್‌!

Drown In Water
ದೇಶ3 hours ago

Drown In Water: ಭೀಕರ ದುರಂತ; ನಾಲ್ವರು ಮಕ್ಕಳು ಸೇರಿ ಐವರು ನೀರುಪಾಲು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ5 hours ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು10 hours ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ1 day ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ1 day ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ2 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು3 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ3 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಟ್ರೆಂಡಿಂಗ್‌